Tag: punjab

  • ಇದು ಸೇಡಿನ ರಾಜಕಾರಣ: ಬಿಜೆಪಿ ಮುಖಂಡನ ಬಂಧನಕ್ಕೆ ನವಜೋತ್‌ ಸಿಧು ಕಿಡಿ

    ಇದು ಸೇಡಿನ ರಾಜಕಾರಣ: ಬಿಜೆಪಿ ಮುಖಂಡನ ಬಂಧನಕ್ಕೆ ನವಜೋತ್‌ ಸಿಧು ಕಿಡಿ

    ಚಂಡೀಗಢ: ಬಿಜೆಪಿ ಮುಖಂಡನನ್ನು ದೆಹಲಿಯಲ್ಲಿ ಪಂಜಾಬ್‌ ಪೊಲೀಸರು ಬಂಧಿಸಿರುವುದರ ವಿರುದ್ಧ ಕಾಂಗ್ರೆಸ್‌ ನಾಯಕ ನವಜೋತ್‌ ಸಿಂಗ್‌ ಸಿಧು ಕಿಡಿಕಾರಿದ್ದಾರೆ. ಇದು ಸೇಡಿನ ರಾಜಕಾರಣ ಎಂದು ಎಎಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಪಂಜಾಬ್‌ ಪೊಲೀಸರು ಬಿಜೆಪಿ ಮುಖಂಡ ತಜೀಂದರ್‌ ಪಾಲ್‌ ಸಿಂಗ್‌ ಬಗ್ಗಾ ಅವರನ್ನು ದೆಹಲಿಯಲ್ಲಿ ಬಂಧಿಸಿದ್ದಾರೆ. ಇದಕ್ಕೆ ಕಾಂಗ್ರೆಸ್‌ ನಾಯಕ ಸಿಧು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ನಾಯಕನನ್ನು ದೆಹಲಿ ಪೊಲೀಸರಿಗೆ ಮಾತ್ರ ಹಸ್ತಾಂತರಿಸುತ್ತೇವೆ: ಹರಿಯಾಣ ಗೃಹ ಸಚಿವ

    ಈ ಕುರಿತು ಟ್ವೀಟ್‌ ಮಾಡಿರುವ ಸಿಧು, ತಜೀಂದರ್ ಬಗ್ಗಾ ಬೇರೆ ಪಕ್ಷದವರಾಗಿರಬಹುದು, ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರಬಹುದು. ಆದರೆ ಅರವಿಂದ್ ಕೇಜ್ರಿವಾಲ್ ಮತ್ತು ಭಗವಂತ್‌ ಮಾನ್ ಅವರು ಸೇಡಿನ ರಾಜಕೀಯ ಮಾಡುತ್ತಿದ್ದಾರೆ. ವೈಯಕ್ತಿಕ ಕಾರಣಗಳಿಗಾಗಿ ಪಂಜಾಬ್‌ ಪೊಲೀಸರನ್ನು ಬಳಸಿಕೊಳ್ಳುವುದು ಮಹಾಪಾಪ. ಪಂಜಾಬ್ ಪೋಲೀಸರನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುವುದನ್ನು ನಿಲ್ಲಿಸಿ ಎಂದು ಟ್ವೀಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕೆಲವರು ಮನೆಗೆ ಬಂದು ನನ್ನ ಮಗನನ್ನು ಕರೆದುಕೊಂಡು ಹೋಗಿದ್ದಾರೆ ಎಂದು ಬಗ್ಗಾ ಅವರ ತಂದೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ದೂರನ್ನು ಆಧರಿಸಿ ದೆಹಲಿ ಪೊಲೀಸರು ಕಿಡ್ನಾಪ್‌ ಕೇಸ್‌ ದಾಖಲಿಸಿದ್ದರು. ಇದನ್ನೂ ಓದಿ: ಕೇಜ್ರಿವಾಲ್ ವಿರುದ್ಧ ಟೀಕೆ- ಪೊಲೀಸರಿಂದ ದೆಹಲಿ ಬಿಜೆಪಿ ಮುಖಂಡ ಅರೆಸ್ಟ್

    Bhagwant Mann

    ಬಗ್ಗಾ ಅವರನ್ನು ಪಂಜಾಬ್‌ಗೆ ಕರೆತರಲಾಗುತ್ತಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪಂಜಾಬ್ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದ ಬಗ್ಗಾರನ್ನು ದೆಹಲಿಯಿಂದ ಮೊಹಾಲಿಗೆ ಕರೆತರುತ್ತಿದ್ದ ವಾಹನಗಳನ್ನು ಹರಿಯಾಣದ ಕುರುಕ್ಷೇತ್ರದಲ್ಲಿ ತಡೆಹಿಡಿಯಲಾಗಿದೆ.

  • ಕೇಜ್ರಿವಾಲ್ ವಿರುದ್ಧ ಟೀಕೆ- ಪೊಲೀಸರಿಂದ ದೆಹಲಿ ಬಿಜೆಪಿ ಮುಖಂಡ ಅರೆಸ್ಟ್

    ಕೇಜ್ರಿವಾಲ್ ವಿರುದ್ಧ ಟೀಕೆ- ಪೊಲೀಸರಿಂದ ದೆಹಲಿ ಬಿಜೆಪಿ ಮುಖಂಡ ಅರೆಸ್ಟ್

    ನವದೆಹಲಿ: ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಪಂಜಾಬ್‍ನ ಪೊಲೀಸರು ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರನ್ನು ದೆಹಲಿಯಲ್ಲಿ ಬಂಧಿಸಿದ್ದಾರೆ.

    ದೆಹಲಿ ಮುಖ್ಯಮಂತ್ರಿ ಅವರಿಗೆ ಜೀವ ಬೆದರಿಕೆ ಹಾಕದ್ದ ಹಿನ್ನೆಲೆಯಲ್ಲಿ ಆಪ್ ನಾಯಕ ಸನ್ನಿಸಿಂಗ್ ಅವರು ತಜೀಂದರ್ ಪಾಲ್ ಸಿಂಗ್ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿ ವದಂತಿಗಳನ್ನು ಹರಡುತ್ತಿದ್ದಾರೆ. ಧಾರ್ಮಿಕ ಮತ್ತು ಕೋಮು ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪಿಸಿ ಸೈಬರ್‍ಸೆಲ್‍ನಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿಯನ್ನು ಬಂಧಿಸಿದ್ದಾರೆ.

    ಘಟನೆ ಏನು?:
    ಈ ಹಿಂದೆ ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಸುಳ್ಳು ಚಿತ್ರ ಎಂದು ಲೇವಡಿ ಮಾಡಿದ್ದರು. ಇದನ್ನೂ ಓದಿ: 47 ಲಕ್ಷ ಜನರ ಸಾವಿಗೆ ಕೇಂದ್ರ ಸರ್ಕಾರವೇ ಹೊಣೆ: ದಿನೇಶ್ ಗುಂಡೂರಾವ್

    ಈ ಹೇಳಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ತಜೀಂದರ್ ಪಾಲ್ ಅವರು, ಸ್ವಾತಂತ್ರ್ಯದ ನಂತರ ಭಾರತದ ಇತಿಹಾಸದಲ್ಲಿ ನಡೆದ ಅತಿದೊಡ್ಡ ನರಮೇಧವನ್ನು ದೆಹಲಿ ವಿಧಾನಸಭೆಯಲ್ಲಿ ಲೇವಡಿ ಮಾಡಲಾಗಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಕಾಶ್ಮೀರಿ ಪಂಡಿತರ ನರಮೇಧದ ಕಥೆ ದಿ ಕಾಶ್ಮೀರ ಫೈಲ್ಸ್ ಸಿನಿಮಾವನ್ನು ಟೀಕಿಸಿದ್ದಾರೆ. ಇದರಿಂದಾಗಿ 100 ಕೋಟಿ ಹಿಂದೂಗಳಿಗೆ ಅವಮಾನವಾಗಿದೆ.

    ಈ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಕ್ಷಮೆ ಕೇಳಬೇಕು. ಅವರು ಕ್ಷಮೆ ಕೇಳದಿದ್ದರೆ ಭಾರತೀಯ ಜನತಾ ಯುವ ಮೋರ್ಚಾ ಕಾರ್ಯಕರ್ತರು ಅವರನ್ನು ಬದುಕಲು ಬಿಡುವುದಿಲ್ಲ. ಅವರು ಕ್ಷಮೆ ಕೇಳುವವರೆಗೆ ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ ಎಂದು ಹೇಳಿದ್ದರು. ಇದನ್ನೂ ಓದಿ: 2,500 ಕೋಟಿ ಕೊಡಿ ನಿಮ್ಮನ್ನೂ ಸಿಎಂ ಮಾಡ್ತೀವಿ ಅಂದ್ರು: ಬಾಂಬ್ ಸಿಡಿಸಿದ ಯತ್ನಾಳ್

    ಈ ಹಿನ್ನೆಲೆಯಲ್ಲಿ ದೂರು ದಾಖಲಿಸಿಕೊಂಡ ಪಂಜಾಬ್ ಪೊಲೀಸರು ದೆಹಲಿಯಲ್ಲಿದ್ದ ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಅವರನ್ನು ಬಂಧಿಸಿದ್ದಾರೆ. ಮೂಲಗಳ ಪ್ರಕಾರ 10-12 ಕಾರುಗಳಲ್ಲಿ 50 ಪೊಲೀಸರು ತಾಜೀಂದರ್ ಬಗ್ಗಾ ಅವರನ್ನು ಬಂಧಿಸಲು ದೆಹಲಿಯಲ್ಲಿರುವ ಅವರ ನಿವಾಸಕ್ಕೆ ಬಂದಿದ್ದರು.

  • ಪಟಿಯಾಲ ಸಂಘರ್ಷ – ಸಂಚುಕೋರ ಅರೆಸ್ಟ್

    ಪಟಿಯಾಲ ಸಂಘರ್ಷ – ಸಂಚುಕೋರ ಅರೆಸ್ಟ್

    ಚಂಡೀಗಢ: ಪಂಜಾಬ್‌ನ ಪಟಿಯಾಲದಲ್ಲಿ ಶುಕ್ರವಾರ ನಡೆದ ಘರ್ಷಣೆಯಲ್ಲಿ ಭಾಗಿಯಾಗಿದ್ದ ಪ್ರಮುಖ ಆರೋಪಿ ಹಾಗೂ ಸಂಚುಕೋರ ಬರ್ಜಿಂದರ್ ಸಿಂಗ್ ಪರ್ವಾನಾನನ್ನು ಮೊಹಾಲಿಯಲ್ಲಿ ಪೊಲೀಸರು ಭಾನುವಾರ ಬೆಳಗ್ಗೆ ಬಂಧಿಸಿದ್ದಾರೆ.

    ಆರೋಪಿ ಬರ್ಜಿಂದರ್ ಸಿಂಗ್‌ನನ್ನು ಮುಂಬೈನಿಂದ ವಿಮಾನದ ಮೂಲಕ ಮೊಹಾಲಿ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 7:20ಕ್ಕೆ ಕರೆತರಲಾಗಿತ್ತು. ಇನ್‌ಸ್ಪೆಕ್ಟರ್ ಶಮೀಂದರ್ ಸಿಂಗ್ ನೇತೃತ್ವದ ಕೇಂದ್ರೀಯ ಗುಪ್ತಚರ ಸಂಸ್ಥೆ(ಸಿಐಎ) ಪಟಿಯಾಲ ತಂಡ ಮೊಹಾಲಿ ವಿಮಾನ ನಿಲ್ದಾಣದಲ್ಲಿ ಬರ್ಜಿಂದರ್‌ನನ್ನು ಬಂಧಿಸಿದ್ದಾರೆ.  ಇದನ್ನೂ ಓದಿ: ಏಕರೂಪ ನಾಗರಿಕ ಸಂಹಿತೆ ದೇಶದಲ್ಲಿ ಅಗತ್ಯವಿಲ್ಲ: ಓವೈಸಿ

    ಶುಕ್ರವಾರ ಪಟಿಯಾಲದ ಕಾಳೀ ದೇವಿ ಮಂದಿರದ ಮುಂಭಾಗ ಶಿವಸೇನೆ ಹಾಗೂ ಖಲಿಸ್ತಾನಿ ಬೆಂಬಲಿಗರ ನಡುವೆ ಘರ್ಷಣೆ ನಡೆದಿತ್ತು. ಹಿಂಸಾಚಾರದ ವೇಳೆ ಇಬ್ಬರು ಪೊಲೀಸರು ಸೇರಿದಂತೆ ನಾಲ್ವರು ಗಾಯಗೊಂಡಿದ್ದರು.

    PUNJAB PATIALA (2)

    ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಎಫ್‌ಐಆರ್‌ಗಳನ್ನು ದಾಖಲಿಸಿದ್ದು, 4 ಆರೋಪಿಗಳನ್ನು ಬಂಧಿಸಿದ್ದಾರೆ. ಹರೀಶ್ ಸಿಂಗ್ಲಾ, ಕುಲ್ದೀಪ್ ಸಿಂಗ್, ದಲ್ಜಿತ್ ಸಿಂಗ್ ಹಾಗೂ ಬರ್ಜಿಂದರ್ ಸಿಂಗ್ ಪರ್ವಾನಾ ಬಂಧಿತ ಆರೋಪಿಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪತಿ ಇನ್ನೊಬ್ಬಳನ್ನು ಮನೆಗೆ ಕರೆತರಲು ಯಾವ ಮುಸ್ಲಿಂ ಮಹಿಳೆಯೂ ಬಯಸಲ್ಲ: ಅಸ್ಸಾಂ ಸಿಎಂ

     

  • ಪಂಜಾಬ್‍ನ ಪಾಕ್ ಗಡಿಯಲ್ಲಿ ‘ಮೇಡ್ ಇನ್ ಚೀನಾ’ ಡ್ರೋನ್ ಹೊಡೆದುರುಳಿಸಿದ ಬಿಎಸ್‍ಎಫ್

    ಪಂಜಾಬ್‍ನ ಪಾಕ್ ಗಡಿಯಲ್ಲಿ ‘ಮೇಡ್ ಇನ್ ಚೀನಾ’ ಡ್ರೋನ್ ಹೊಡೆದುರುಳಿಸಿದ ಬಿಎಸ್‍ಎಫ್

    ಚಂಡೀಗಢ: ಅಮೃತಸರ ಸೆಕ್ಟರ್‌ನ ಅಜ್ನಾಲಾ ಉಪವಿಭಾಗದ ಅಡಿಯಲ್ಲಿ ಬರುವ ಧನೋ ಕಲಾನ್ ಗ್ರಾಮದ ಬಳಿಯ ಪ್ರದೇಶದಲ್ಲಿ ಭಾರತ-ಪಾಕಿಸ್ತಾನ ಗಡಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‍ಎಫ್) ಶುಕ್ರವಾರ ಚೀನಾ ನಿರ್ಮಿತ ಡ್ರೋನ್ ಅನ್ನು ಹೊಡೆದುರುಳಿಸಿದೆ.

    ಬಿಎಸ್‍ಎಫ್ ಪತ್ರಿಕಾ ಪ್ರಕಟಣೆಯ ಪ್ರಕಾರ, ಕರ್ತವ್ಯದಲ್ಲಿದ್ದ ಸಿಬ್ಬಂದಿ ಶುಕ್ರವಾರ ಮುಂಜಾನೆ 1.15 ರ ಸುಮಾರಿಗೆ ಪಾಕಿಸ್ತಾನದ ಕಡೆಯಿಂದ ಭಾರತದ ಭೂಪ್ರದೇಶವನ್ನು ಪ್ರವೇಶಿಸುವ ಶಂಕಿತ ಡ್ರೋನ್‍ನ ಶಬ್ದವನ್ನು ಕೇಳಿ ಯೋಧರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಇದನ್ನೂ ಓದಿ: ಹಿಂದಿ ಬದಲು ಸಂಸ್ಕೃತ ರಾಷ್ಟ್ರ ಭಾಷೆಯಾಗಲಿ: ಕಂಗನಾ ರಣಾವತ್

    ಈ ವೇಳೆ ‘ಡಿಜೆಐ ಮ್ಯಾಟ್ರಿಸ್-300’ ಮಾದರಿಯ ‘ಮೇಡ್ ಇನ್ ಚೀನಾ’ ಡ್ರೋನ್ ಅನ್ನು ಅಂತಿಮವಾಗಿ 6:15 ರ ಸುಮಾರಿಗೆ ಬಿಎಸ್‍ಎಫ್ ಸಿಬ್ಬಂದಿ ಹೊಡೆದುರುಳಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯನ್ನು ಭೇಟಿಯಾದ ಶರದ್ ಪವಾರ್

    ಈ ಹಿಂದೆ 2021ರ ಡಿಸೆಂಬರ್ 18ರಂದು ಪಂಜಾಬ್‍ನ ಫಿರೋಜ್‍ಪುರ್ ವಲಯದ ವಾನ್ ಗಡಿಯಲ್ಲಿ ರಾತ್ರಿ 11:10ರ ವೇಳೆಗೆ ಕಪ್ಪು ಬಣ್ಣದ ಡ್ರೋನ್ ಹಾರಾಟ ನಡೆದಿತ್ತು. ಗಡಿ ಭಾಗದ 150 ಮೀಟರ್ ದೂರದಲ್ಲಿ ಇದರ ಚಲನ ವಲನವನ್ನು ಗುರುತಿಸಿದ ಸಿಬ್ಬಂದಿ ಅದನ್ನು ಹೊಡೆದುರುಳಿಸಿದ್ದರು. ಈ ವರ್ಷ ಪಂಜಾಬ್‍ನ ಗುರುದಾಸ್‍ಪುರ ಹಂತದ ಪಂಜ್‍ಗ್ರೇನ್ ಪ್ರದೇಶದಲ್ಲಿ ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಲಾಗಿತ್ತು. ಈ ಡ್ರೋನ್ ಮೂಲಕ ಮಾದಕ ದ್ರವ್ಯ ಹಾಗೂ ಕಳ್ಳ ಶಸ್ತ್ರಾಸ್ತ್ರ ಸಾಗಾಣೆ ನಡೆದಿತ್ತು. ಬಳಿಕ ಮಾರ್ಚ್ 8ರಂದು ಪಂಜಾಬ್‍ನ ಫಿರೋಜ್‍ಪುರ್ ವಲಯದಲ್ಲಿ ಪಾಕಿಸ್ತಾನದ ಕಡೆಯಿಂದ ಬಂದ ಡ್ರೋನ್ ಅನ್ನು ಬಿಎಸ್‍ಎಫ್ ಹೊಡೆದುರುಳಿಸಿತ್ತು.

  • ಪಟಿಯಾಲದ ಕಾಳಿ ದೇವಿ ಮುಂಭಾಗ ಹಿಂಸಾಚಾರ – 2 ಮಂದಿಗೆ ಗಾಯ

    ಪಟಿಯಾಲದ ಕಾಳಿ ದೇವಿ ಮುಂಭಾಗ ಹಿಂಸಾಚಾರ – 2 ಮಂದಿಗೆ ಗಾಯ

    ಚಂಡೀಗಢ: ದೇಶಾದ್ಯಂತ ಧಾರ್ಮಿಕ ವಿಚಾರವಾಗಿ ಎಲ್ಲೆಡೆ ಹಿಂಸಾಚಾರ ವರದಿಗಳು ಆಗುತ್ತಲೇ ಇವೆ. ಇದೀಗ ಪಂಜಾಬ್‌ನ ಪಟಿಯಾಲದಲ್ಲೂ ಹಿಂಸಾಚಾರ ವರದಿಯಾಗಿದೆ.

    ಶುಕ್ರವಾರ ಪಂಜಾಬ್‌ನ ಪಟಿಯಾಲದಲ್ಲಿ ಕಾಳೀ ದೇವಿ ದೇವಾಲಯದ ಮುಂಭಾಗದಲ್ಲಿ ಹಿಂಸಾಚಾರ ವರದಿಯಾಗಿದೆ. ಘಟನೆ ವೇಳೆ ಒಂದು ಗುಂಪು ಖಾಲಿಸ್ತಾನ್ ವಿರೋಧಿ ಪ್ರತಿಭಟನೆ ನಡೆಸಿದ್ದು, ಈ ವೇಳೆ ಸಂಘರ್ಷ ನಡೆದಿದೆ.

    ಹಿಂಸಾಚಾರದ ವೇಳೆ ಇಬ್ಬರಿಗೆ ಗಾಯಗಳಾಗಿವೆ. ಈ ವೇಳೆ ಪಟಿಯಾಲದ ಕೆಲವು ಭಾಗಗಳಲ್ಲೂ ಉದ್ವಿಗ್ನತೆ ವರದಿಯಾಗಿದ್ದು, ಹಲವೆಡೆ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

    ಘರ್ಷಣೆಯ ಸಂದರ್ಭದಲ್ಲಿ ನೆರೆದಿದ್ದ ಒಂದು ಗುಂಪು ಮಹಾರಾಷ್ಟ್ರದ ಶಿವಸೇನೆಯದ್ದು ಎಂಬುದು ತಿಳಿದುಬಂದಿದೆ. ಇಲ್ಲಿ ಮೆರವಣಿಗೆಗೆ ಯಾವುದೇ ಅನುಮತಿ ಇಲ್ಲದ ಕಾರಣ ಶಿವಸೇನೆ ಮುಖ್ಯಸ್ಥ ಹರೀಶ್ ಸಿಂಗ್ಲಾ ಜೊತೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಪಟಿಯಾಲ ಡಿಎಸ್‌ಪಿ ತಿಳಿಸಿದ್ದಾರೆ. ಇದನ್ನೂ ಓದಿ: ವಿದ್ಯುತ್‌ ಸಮಸ್ಯೆ – ಕಲ್ಲಿದ್ದಲು ಸಾಗಾಟಕ್ಕೆ 650ಕ್ಕೂ ಹೆಚ್ಚು ಪ್ರಯಾಣಿಕ ರೈಲುಗಳ ಸಂಚಾರ ರದ್ದು

    ಪಂಜಾಬ್ ಸಿಎಂ ಪ್ರತಿಕ್ರಿಯೆ:
    ಪಟಿಯಾಲದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಪಂಜಾಬ್ ಸಿಎಂ ಭಗವಂತ್ ಮಾನ್, ಪಟಿಯಾಲದಲ್ಲಿ ನಡೆದ ಹಿಂಸಾಚಾರ ಅತ್ಯಂತ ದುರದೃಷ್ಟಕರ. ನಾನು ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಹಾಗೂ ಆ ಪ್ರದೇಶದಲ್ಲಿ ಶಾಂತಿಯನ್ನು ಪುನಃ ಸ್ಥಾಪಿಸಲಾಗಿದೆ. ಘಟನೆ ಬಗ್ಗೆ ನಾವು ಗಂಭೀರವಾಗಿ ಗಮನಿಸುತ್ತಿದ್ದೇವೆ. ರಾಜ್ಯದಲ್ಲಿ ಇಂತಹ ಗೊಂದಲ ಸೃಷ್ಟಿಸಲು ಯಾರಿಗೂ ಅವಕಾಶ ನೀಡುವುದಿಲ್ಲ. ಪಂಜಾಬ್‌ನ ಶಾಂತಿ ಹಾಗೂ ಸೌಹಾರ್ದತೆ ಅತ್ಯಂತ ಮಹತ್ವದ್ದಾಗಿದೆ ಎಂದು ಟ್ವಿಟ್ಟರ್‌ನಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ಮೀಸಲಾತಿ ಅಭ್ಯರ್ಥಿಗಳು ಅಧಿಕ ಅಂಕ ಗಳಿಸಿದ್ರೆ ಸಾಮಾನ್ಯ ವರ್ಗದಡಿ ಪರಿಗಣನೆ: ಸುಪ್ರೀಂ

     

  • ಕಲುಷಿತ ನೀರು ಸೇವಿಸಿ 15 ಮಂದಿ ಅಸ್ವಸ್ಥ

    ಕಲುಷಿತ ನೀರು ಸೇವಿಸಿ 15 ಮಂದಿ ಅಸ್ವಸ್ಥ

    ಚಂಡೀಗಢ: ಕಲುಷಿತ ನೀರು ಸೇವಿಸಿ ಏಳು ಮಕ್ಕಳು ಸೇರಿದಂತೆ 15 ಮಂದಿ ಅಸ್ವಸ್ಥಗೊಂಡಿರುವ ಘಟನೆ ಜಿರಾಕ್‍ಪುರದ ಗಾಜಿಪುರ ಗ್ರಾಮದಲ್ಲಿ ನಡೆದಿದೆ.

    ಇದೀಗ ಏಳು ಮಕ್ಕಳನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರನ್ನು ಮೊಹಾಲಿ, ಪಂಚಕುಲ ಮತ್ತು ಅಂಬಾಲಾದಲ್ಲಿ ದಾಖಲಿಸಲಾಗಿದೆ. ಕುಡಿಯುವ ನೀರು ಒಳಚರಂಡಿ ಮಾರ್ಗಗಳಿಂದ ಕಲುಷಿತಗೊಂಡಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಇದನ್ನೂ ಓದಿ: ಕ್ರೈಸ್ತ ಶಾಲೆಯೊಂದರಲ್ಲಿ ಕ್ರೈಸ್ತ ಧರ್ಮ ಹೇರಿಕೆ ಆರೋಪ – ಪ್ರಮೋದ್ ಮುತಾಲಿಕ್ ಕಿಡಿ

    ಭಾನುವಾರ ನೀರು ಕುಡಿದ ನಂತರ ಮಕ್ಕಳು ವಾಂತಿ ಮತ್ತು ಭೇದಿಯಿಂದ ಬಳಲುತ್ತಿದ್ದಾರೆ ಎಂದು ಗಾಜಿಪುರದ ನಿವಾಸಿ ಅಭಿಷೇಕ್ ಸೈನಿ ತಿಳಿಸಿದ್ದಾರೆ. ಮತ್ತೋರ್ವ ನಿವಾಸಿ ಗುರುದೀಪ್ ಸಿಂಗ್ ಅವರು, ಕಲುಷಿತ ನೀರನ್ನು ಸೇವಿಸಿದ್ದರಿಂದ ಜನರು ಹೊಟ್ಟೆನೋವಿನಿಂದ ಬಳಲುತ್ತಿದ್ದರೆ ಎಂದಿದ್ದಾರೆ.

    ಈ ಘಟನೆ ಸಂಬಂಧ ಪ್ರತಿಕ್ರಿಯಿಸಿದ ನೀರು ಸರಬರಾಜು ಇಲಾಖೆಯ ಉಪವಿಭಾಗದ ಇಂಜಿನಿಯರ್ (ಎಸ್‍ಡಿಇ) ಕರಮ್‍ಜೀತ್ ಸಿಂಗ್, ಖಾಸಗಿ ಟೆಲಿಕಾಂ ಕಂಪನಿಯು ಕೆಲವು ದಿನಗಳ ಹಿಂದೆ ತಂತಿಗಳನ್ನು ಹಾಕಲು ಈ ಪ್ರದೇಶವನ್ನು ಅಗೆದು ನೀರಿನ ಪೈಪ್‍ಗಳಿಗೆ ಹಾನಿಗೊಳಿಸಿದೆ. ಇದರ ಪರಿಣಾಮವಾಗಿ ಕುಡಿಯುವ ನೀರಿನಲ್ಲಿ ಕೊಳಚೆ ನೀರು ಮಿಶ್ರಣವಾಗಿದೆ. ಇದೀಗ ಇಲಾಖೆ ಸೋರಿಕೆಯನ್ನು ಮುಚ್ಚಿದೆ ಮತ್ತು ಪೀಡಿತ ಪ್ರದೇಶಗಳಿಗೆ ನೀರಿನ ಪೂರೈಕೆಯನ್ನು ನಿಲ್ಲಿಸಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೋವಿಡ್ 4ನೇ ಅಲೆ: ಸಿಎಂ ನೇತೃತ್ವದಲ್ಲಿ ಇಂದು ಮಹತ್ವದ ಸಭೆ

  • ಕಾಂಗ್ರೆಸ್ ಆಡಳಿತ ಟೀಕಿಸಿದ ಸಿಧು- ಭಗವಂತ್ ಮಾನ್‍ಗೆ ಬೆಂಬಲ

    ಕಾಂಗ್ರೆಸ್ ಆಡಳಿತ ಟೀಕಿಸಿದ ಸಿಧು- ಭಗವಂತ್ ಮಾನ್‍ಗೆ ಬೆಂಬಲ

    ಚಂಡೀಗಢ: ಪಂಜಾಬ್ ಮಾಫಿಯಾ ರಾಜ್ಯವಾಗಿದ್ದರಿಂದ ಕಾಂಗ್ರೆಸ್ ಸೋತಿದೆ. ಅದು ಈಗ ತನ್ನನ್ನು ತಾನು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕಾಗಿದೆ ಎಂದು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಜಾಬಿನ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಪ್ರಾಮಾಣಿಕ ವ್ಯಕ್ತಿಯಾಗಿದ್ದಾರೆ. ಇದರಿಂದಾಗಿ ಮಾಫಿಯಾ ವಿರುದ್ಧ ಆಪ್ ಪಕ್ಷ ಹೋರಾಡಾವುದಾದರೆ ಬೆಂಬಲಿಸುವುದಾಗಿ ಹೇಳಿದರು.

    ಈ ಮೊದಲು ನಾನು ಮಾತನಾಡಲಿಲ್ಲ. ಆದರೆ ಎಲ್ಲರಿಗೂ ಮಾತನಾಡುವ ಹಕ್ಕಿದೆ. ಐದು ವರ್ಷಗಳ ಮಾಫಿಯಾ ರಾಜ್‍ನ ಆಡಳಿತದಿಂದಾಗಿ ಕಾಂಗ್ರೆಸ್ ಸೋತಿದೆ ಎಂದ ಅವರು, ಮಾಫಿಯಾ ವಿರುದ್ಧ ಸದಾ ಹೋರಾಟ ನಡೆಸಿದ್ದೇನೆ. ನನ್ನ ಹೋರಾಟ ಯಾವುದೇ ವ್ಯಕ್ತಿಯ ವಿರುದ್ಧ ಅಲ್ಲ, ಇದು ವ್ಯವಸ್ಥೆಯ ವಿರುದ್ಧವಾಗಿದೆ. ಗೆದ್ದಲುಗಳಂತೆ ರಾಜ್ಯವನ್ನು ತಿನ್ನುತ್ತಿರುವ ಕೆಲವು ವ್ಯಕ್ತಿಗಳ ವಿರುದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಗೃಹ ಸಚಿವ ಆರಗ ಜ್ಞಾನೇಂದ್ರ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ: ಕೆ.ಜಿ ಬೋಪಯ್ಯ

    ಈ ಹೋರಾಟ ಪಂಜಾಬ್‍ನ ಅಸ್ತಿತ್ವಕ್ಕಾಗಿಯೇ ಹೊರತು ಯಾವುದೇ ಹುದ್ದೆಗಾಗಿ ಅಲ್ಲ. ರಾಜಕೀಯವು ವ್ಯಾಪಾರವಾಗಿ ಉಳಿಯುವವರೆಗೂ ಅದನ್ನು ಗೌರವಿಸಲಾಗುವುದಿಲ್ಲ. ಪಂಜಾಬ್ ಮಾಫಿಯಾ ಮುಕ್ತವಾದಾಗ ರಾಜ್ಯವು ಉದಯಿಸುತ್ತದೆ. ಮಾಫಿಯಾ ವಿರುದ್ಧದ ಹೋರಾಟದಲ್ಲಿ ಬೆಂಬಲಿಸುವುದಾಗಿ ತಿಳಿಸಿದರು. ಇದನ್ನೂ ಓದಿ: ನಾಳೆಯಿಂದ ಹಿಜಬ್ ನಾಟಕ ಮಾಡಿದ್ರೆ ಕ್ರಿಮಿನಲ್ ಕೇಸ್: ರಘುಪತಿ ಭಟ್ ಎಚ್ಚರಿಕೆ

  • ಬೀದರ್‌ನ ಗುರುದ್ವಾರಕ್ಕೆ ಪಂಜಾಬ್ ಸಿಎಂ ತಾಯಿ ಭೇಟಿ

    ಬೀದರ್‌ನ ಗುರುದ್ವಾರಕ್ಕೆ ಪಂಜಾಬ್ ಸಿಎಂ ತಾಯಿ ಭೇಟಿ

    ಬೀದರ್: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ತಾಯಿ ಇಂದು ಬೀದರ್‌ನ ಗುರುದ್ವಾರಕ್ಕೆ ಭೇಟಿ ನೀಡಿ ಗುರುನಾನಕ್‍ರ ದರ್ಶನ ಪಡೆದರು.

    ಬೀದರ್ ನಗರದ ಗುರುನಾನಕ್ ಕಾಲೋನಿಯಲ್ಲಿರುವ ಗುರುದ್ವಾರಕ್ಕೆ ಭಗವಂತ್ ಮಾನ್ ತಾಯಿ ಹರ್ಪಾಲ್ ಕೌರ್ ಭೇಟಿ ನೀಡಿ ಗುರುನಾನಕ್ ಸಾಹೇಬ್‍ರ ಗದ್ದುಗೆಗೆ ನಮಸ್ಕರಿಸಿ ದರ್ಶನ ಪಡೆದರು. ದಕ್ಷಿಣ ಭಾರತದ ಗೋಲ್ಡನ್ ಟೆಂಪಲ್ ಖ್ಯಾತಿ ಗುರುದ್ವಾರಕ್ಕೆ ಭೇಟಿ ನೀಡಿದ ಭಗವಂತ್ ಮಾನ್ ತಾಯಿಗೆ ಆಮ್ ಆದ್ಮಿ ಪಕ್ಷದ ಮುಖಂಡರು ಹಾಗೂ ಕುಟುಂಬಸ್ಥರು ಸಾಥ್ ನೀಡಿದರು. ಇದನ್ನೂ ಓದಿ: ಕಾಂಗ್ರೆಸ್ ಗೊಂದಲದ, ಪಿತೂರಿಯ, ನಾಯಕನಿಲ್ಲದ ಪಕ್ಷ: ಅರುಣ್ ಸಿಂಗ್

    ಮಗ ಪಂಜಾಬ್ ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ತಾಯಿ ಗುರುದ್ವಾರಕ್ಕೆ ಭೇಟಿ ನೀಡಿದ್ದು, ಜೊತೆಗೆ ಗುರುನಾನಕ್ ದೇವ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದಿದ್ದ ಹಳೇ ವಿದ್ಯಾರ್ಥಿ ಕೂಡಾ ಪಂಜಾಬ್ ಸ್ಪೀಕರ್ ಆಗಿದ್ದಾರೆ. ಇದನ್ನೂ ಓದಿ: ಭಿನ್ನಾಭಿಪ್ರಾಯ ಹತ್ತಿಕ್ಕಿ ಸತ್ಯವನ್ನು ಬಂಧಿಸಲು ಸಾಧ್ಯವಿಲ್ಲ: ಮೋದಿಗೆ ರಾಹುಲ್‌ ತಿರುಗೇಟು

  • 5 ಮಕ್ಕಳು ಸೇರಿ ಒಂದೇ ಕುಟುಂಬದ 7 ಮಂದಿ ಸಜೀವ ದಹನ

    5 ಮಕ್ಕಳು ಸೇರಿ ಒಂದೇ ಕುಟುಂಬದ 7 ಮಂದಿ ಸಜೀವ ದಹನ

    ಚಂಡೀಗಢ: ಗುಡಿಸಲಿನಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ 5 ಮಕ್ಕಳು ಸೇರಿ ಒಂದೇ ಕುಟುಂಬದ 7 ಮಂದಿ ಸಜೀವದಹನಗೊಂಡಿರುವ ಘಟನೆ ಪಂಜಾಬ್‌ನ ಲೂದಿಯಾನದಲ್ಲಿ ನಡೆದಿದೆ.

    POLICE

    ಘಟನೆಯ ಕುರಿತು ಮಾಹಿತಿ ನೀಡಿರುವ ಟಿಬ್ಬಾ ಪೊಲೀಸ್ ಠಾಣೆಯ ಸಬ್‌ಇನ್ಸ್ಪೆಕ್ಟರ್ ಬಲದೇವ್ ರಾಜ್, ರಾತ್ರಿ 2 ಗಂಟೆ ಸುಮಾರಿಗೆ ಕುಟುಂಬ ಸದಸ್ಯರೆಲ್ಲರೂ ಗುಡಿಸಲಿನಲ್ಲಿ ಮಲಗಿದ್ದ ವೇಳೆ ಘಟನೆ ಸಂಭವಿಸಿದೆ. ಮೃತರನ್ನು ವಲಸೆ ಕಾರ್ಮಿಕರು ಎಂದು ಗುರುತಿಸಲಾಗಿದ್ದು, ಇವರು ಟಿಬ್ಬಾ ಪುರಸಭೆ ವ್ಯಾಪ್ತಿಯ ಕಸ ವಿಲೇವಾರಿ ಮಾಡುವ ರಸ್ತೆಯಲ್ಲಿ ಮಾರ್ಗದಲ್ಲಿರುವ ಗುಡಿಸಲುಗಳಲ್ಲಿ ವಾಸಿಸುತ್ತಿದ್ದರು ಎಂದು ಹೇಳಿದ್ದಾರೆ.

    ಮೃತಪಟ್ಟವರ ವೈಯಕ್ತಿಕ ವಿವರ ಪತ್ತೆಯಾಗಿಲ್ಲ. ಅಲ್ಲದೆ ಬೆಂಕಿ ಬಿದ್ದಿರುವುಕ್ಕೆ ನಿಖರ ಕಾರಣ ಏನೇಂಬುದೂ ತಿಳಿದಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಟಿಬ್ಬಾ ಠಾಣೆಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

  • ಹಿಂದಿನ ಸರ್ಕಾರಗಳು ಪಂಜಾಬ್ ಮೇಲೆ 3 ಲಕ್ಷ ಕೋಟಿ ಸಾಲ ಹೊರಿಸಿದೆ: ಭಗವಂತ್ ಮಾನ್

    ಹಿಂದಿನ ಸರ್ಕಾರಗಳು ಪಂಜಾಬ್ ಮೇಲೆ 3 ಲಕ್ಷ ಕೋಟಿ ಸಾಲ ಹೊರಿಸಿದೆ: ಭಗವಂತ್ ಮಾನ್

    ಚಂಡೀಗಢ: ಹಿಂದಿನ ಸರ್ಕಾರಗಳು ರಾಜ್ಯವನ್ನು ಸಾಲದ ಸುಳಿಯಲ್ಲಿ ಸಿಲುಕಿಸಿದ್ದು, ಇದೀಗ ಆಮ್ ಆದ್ಮಿ ಪಕ್ಷ ಸರ್ಕಾರವು ಹಣವನ್ನು ಎಲ್ಲಿ ಬಳಸಲಾಗಿದೆ ಎಂದು ವಿಚಾರಣೆ ನಡೆಸಿ ವಸೂಲಿ ಮಾಡುತ್ತೇವೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ.

    ಹಿಂದಿನ ಸರ್ಕಾರಗಳು ಪಂಜಾಬ್ ಮೇಲೆ 3 ಲಕ್ಷ ಕೋಟಿ ಸಾಲವನ್ನು ಹೊರಿಸಿದೆ. ಆದರೆ ಹಣವನ್ನು ಎಲ್ಲಿ ಬಳಸಲಾಗಿದೆ ಎಂದು ನಾವು ತನಿಖೆ ನಡೆಸುತ್ತೇವೆ ಮತ್ತು ವಸೂಲಿ ಮಾಡುತ್ತೇವೆ. ಏಕೆಂದರೆ ಅದು ಜನರ ಹಣ ಎಂದು ಮುಖ್ಯಮಂತ್ರಿ ಅವರನ್ನು ಉಲ್ಲೇಖಿಸಿ ಪಕ್ಷದ ರಾಜ್ಯ ಘಟಕ ಪಂಜಾಬಿಯಲ್ಲಿ ಟ್ವೀಟ್ ಮಾಡಿದೆ.

    ವಿಧಾನಸಭೆ ಚುನಾವಣೆಗೂ ಮುನ್ನ ಪಂಜಾಬ್‍ನ ಆಗಿನ ಕಾಂಗ್ರೆಸ್ ಸರ್ಕಾರವು ರಾಜ್ಯವನ್ನು ಸಾಲದ ಸುಳಿಗೆ ತಳ್ಳುತ್ತಿದೆ ಎಂದು ಎಎಪಿಯ ಹಿರಿಯ ನಾಯಕ ರಾಘವ್ ಚಡ್ಡಾ ಅವರು ಆರೋಪಿಸಿದ್ದರು. ಇದನ್ನೂ ಓದಿ: ಸರ್ಕಾರಿ ವಿರೊಧಿ ಪ್ರತಿಭಟನೆಗಳ ನಡುವೆ ಶ್ರೀಲಂಕಾದಲ್ಲಿ ಹೊಸ ಕ್ಯಾಬಿನೆಟ್

    ಪಂಜಾಬ್‍ನಲ್ಲಿ ಹುಟ್ಟುವ ಪ್ರತಿ ಮಗುವಿನ ತಲೆಯ ಮೇಲೆ 1 ಲಕ್ಷ ಸಾಲವಿದೆ. ಕಾಂಗ್ರೆಸ್ ಮತ್ತು ಬಾದಲ್ ಸರ್ಕಾರಗಳು ಕಳೆದ 50 ವರ್ಷಗಳಲ್ಲಿ ಪಂಜಾಬ್ ಅನ್ನು 3 ಲಕ್ಷ ಕೋಟಿ ಸಾಲಗಾರರನ್ನಾಗಿ ಮಾಡಿದೆ. ಮೂರು ಕೋಟಿ ಜನಸಂಖ್ಯೆಯೊಂದಿಗೆ, ಇಂದು ಪಂಜಾಬ್‍ನಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ 1 ಲಕ್ಷ ಸಾಲವನ್ನು ಹೊಂದಿದ್ದಾನೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಶಾಂತಿಯುತ ಸಹಕಾರ ಸಂಬಂಧಗಳನ್ನು ಬೆಳೆಸೋಣ: ಮೋದಿಗೆ ಷರೀಫ್ ಪತ್ರ

    ಪಂಜಾಬ್‍ನಲ್ಲಿ 117 ಅಸೆಂಬ್ಲಿ ಸ್ಥಾನಗಳಲ್ಲಿ 92 ಸ್ಥಾನಗಳನ್ನು ಗೆಲ್ಲುವ ಮೂಲಕ ಎಎಪಿ ಪಕ್ಷ ಕಾಂಗ್ರೆಸ್‍ನಿಂದ ಅಧಿಕಾರವನ್ನು ಕಸಿದುಕೊಂಡಿತು.