Tag: punjab

  • ಪಂಜಾಬ್‍ ಮಾಜಿ ಸಿಎಂ ಚರಂಜಿತ್ ಸಿಂಗ್ ಚನ್ನಿಗೆ ಇಡಿ ಸಂಕಷ್ಟ

    ಪಂಜಾಬ್‍ ಮಾಜಿ ಸಿಎಂ ಚರಂಜಿತ್ ಸಿಂಗ್ ಚನ್ನಿಗೆ ಇಡಿ ಸಂಕಷ್ಟ

    ನವದೆಹಲಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಎರಡು ಕ್ಷೇತ್ರಗಳಿಂದ ಸೋಲು ಕಂಡಿದ್ದ ಮಾಜಿ ಸಿಎಂ ಚರಂಜಿತ್ ಸಿಂಗ್ ಚನ್ನಿಗೆ ಈಗ ಇಡಿ ಸಂಕಷ್ಟ ಶುರುವಾಗಿದೆ. ಅಕ್ರಮ ಮರುಳು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ವಿಚಾರಣೆ ನಡೆಸಲಾಗಿದೆ.

    2018ರಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದರು. ವಿಚಾರಣೆಗೆ ಬುಲಾವ್ ನೀಡಿದ ಹಿನ್ನೆಲೆ ಇಂದು ಚನ್ನಿ ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಇದನ್ನೂ ಓದಿ: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಳ್ಳಲಾಗಿದೆ: ಶಂಕರ್ ಪಾಟೀಲ್ 

    ಚನ್ನಿ ವಿಚಾರಣೆಗೆ ಹಾಜರಾಗುತ್ತಿದ್ದಂತೆ ಪಂಜಾಬ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ನವಜೀತ್ ಸಿಂಗ್ ಸಿಧು ಟ್ವೀಟ್ ಮಾಡಿದ್ದು, ನನ್ನ ಹೋರಾಟ ಪಂಜಾಬ್‍ಗಾಗಿಯೇ ಹೊರತು ಮರಳಿಗಾಗಿ ಅಲ್ಲ. ಭೂ, ಮರಳು ಮತ್ತು ಮದ್ಯದ ಮಾಫಿಯಾವನ್ನು ನಡೆಸುತ್ತಿದ್ದವರು ಖಜಾನೆಯನ್ನು ಲೂಟಿ ಮಾಡುವ ಮೂಲಕ ಸ್ವಾರ್ಥ ಹಿತಾಸಕ್ತಿಗಳನ್ನು ಹಿಡೆರಿಸಿಕೊಂಡರು. ಅದಕ್ಕೆ ಪಂಜಾಬ್‍ನಲ್ಲಿ ಅವಕಾಶ ನೀಡಿದರು. ಈಗಿನ ಆರ್ಥಿಕ ಸನ್ನಿವೇಶದಲ್ಲಿ ಅದು ಪಂಜಾಬ್ ಅಥವಾ ಮಾಫಿಯಾ ಹೋರಾಟ ಮುಂದುವರಿಯುತ್ತದೆ ಎಂದು ಕುಟುಕಿದರು.

    ED grills Shiv Sena MLA Pratap Sarnaik's son Vihang for five hours in Tops Group case - Cities News

    ವಿಧಾನಸಭೆ ಚುನಾವಣೆಗೂ ಮುನ್ನ ಚನ್ನಿ ಸಹೋದರಳಿಯ ಭೂಪಿಂದರ್ ಸಿಂಗ್ ಹನಿ ಅವರನ್ನು ವಿಚಾರಣೆ ನಡೆಸಿ ಬಂಧಿಸಲಾಗಿತ್ತು. ಹನಿಯಿಂದ ಹತ್ತು ಕೋಟಿ ರೂ. ವಶಪಡಿಸಿಕೊಳ್ಳಲಾಗಿತ್ತು. ಚರಂಜಿತ್ ಸಿಂಗ್ ಚನ್ನಿ ಅವರಿಗೆ ಸಂಬಂಧಿಸಿದ್ದು ಎನ್ನಲಾಗುತ್ತಿದೆ. ಈ ಹಿನ್ನೆಲೆ ಈಗ ಚನ್ನಿ ವಿಚಾರಣೆ ಆರಂಭಗೊಂಡಿದ್ದು, ಇಂದು ಹಲವು ಗಂಟೆಗಳ ವಿಚಾರಣೆ ನಡೆದಿದೆ. ಮತ್ತೊಮ್ಮೆ ಸಮನ್ಸ್ ನೀಡುವ ಸಾಧ್ಯತೆಗಳಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: 2 ವರ್ಷಗಳ ನಂತರ ಕೋವಿಡ್ ಮುಕ್ತ ‘ಬಿಹು’ ನಡೆಸಲು ಸಜ್ಜಾದ ಅಸ್ಸಾಂ

  • ಜಲಿಯನ್ ವಾಲಾಬಾಗ್ ಹತ್ಯಾಕಾಂಡದಲ್ಲಿ ಹುತಾತ್ಮರಾದವರ ತ್ಯಾಗ ಮುಂದಿನ ಪೀಳಿಗೆಗೆ ಪ್ರೇರಣೆ: ಮೋದಿ

    ಜಲಿಯನ್ ವಾಲಾಬಾಗ್ ಹತ್ಯಾಕಾಂಡದಲ್ಲಿ ಹುತಾತ್ಮರಾದವರ ತ್ಯಾಗ ಮುಂದಿನ ಪೀಳಿಗೆಗೆ ಪ್ರೇರಣೆ: ಮೋದಿ

    ನವದೆಹಲಿ: ಜಲಿಯನ್ ವಾಲಾಬಾಗ್ ಹತ್ಯಾಕಾಂಡದಲ್ಲಿ ಹುತಾತ್ಮರಾದವರ ಅಪ್ರತಿಮ ಧೈರ್ಯ ಮತ್ತು ತ್ಯಾಗ ಮುಂದಿನ ಪೀಳಿಗೆಗೆ ಪ್ರೇರಣೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

    1919ರ ಜಲಿಯನ್ ವಾಲಾಬಾಗ್ ಹತ್ಯಾಕಾಂಡದಲ್ಲಿ ಹುತಾತ್ಮರಾದವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ವಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: 1919ರಲ್ಲಿ ಜಲಿಯನ್ ವಾಲಾಬಾಗ್‍ನಲ್ಲಿ ಹುತಾತ್ಮರಾದವರಿಗೆ ಗೌರವ ನಮನ ಸಲ್ಲಿಸುತ್ತೇನೆ. ಅವರ ಅಪ್ರತಿಮ ಧೈರ್ಯ ಮತ್ತು ತ್ಯಾಗ ಮುಂದಿನ ಪೀಳಿಗೆಯನ್ನು ಪ್ರೇರೆಪಿಸುತ್ತದೆ. ಕಳೆದ ವರ್ಷ ಜಲಿಯನ್ ವಾಲಾಬಾಗ್ ಸ್ಮಾರಕದ ನವೀಕೃತ ಸಂಕೀರ್ಣದ ಉದ್ಘಾಟನಾ ಸಮಾರಂಭದ ಭಾಷಣವನ್ನು ಹಂಚಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದರು.

    1919ರಲ್ಲಿ ರೌಲಟ್ ಕಾಯಿದೆಯ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ನೂರಾರು ಭಾರತೀಯರನ್ನು ಬ್ರಿಟಿಷ್ ಪಡೆಗಳು ಗುಂಡಿಕ್ಕಿ ಕೊಂದುಹಾಕಿದ್ದವು. ಇದು ಭಾರತದ ಬ್ರಿಟಿಷರು ಮಾಡಿದ ಆಕ್ರಮಣದಲ್ಲಿ ಅತ್ಯಂತ ಕ್ರೂರ ಘಟನೆಗಳಲ್ಲಿ ಒಂದಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಮುಖಾಮುಖಿ ಭೇಟಿಯಾದ ನಂತರವಷ್ಟೇ ಈಶ್ವರಪ್ಪ ರಾಜೀನಾಮೆ ನಿರ್ಧಾರ: ಬೊಮ್ಮಾಯಿ

    ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಟ್ವೀಟ್ ಮಾಡಿ, ಶ್ರದ್ಧಾಂಜಲಿ ಸಲ್ಲಿಸಿದರು. ಭಾರತದ ಇತಿಹಾಸದಲ್ಲಿ ಜಲಿಯನ್ ವಾಲಾಬಾಗ್ ಒಂದು ರಕ್ತಸಿಕ್ತ ಹತ್ಯಾಕಾಂಡವಾಗಿದೆ. ನಮ್ಮ ಮಹಾನ್ ಹುತಾತ್ಮರು ಮಾಡಿದ ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ. ಈ ಸ್ವಾತಂತ್ರ್ಯವನ್ನು ನೀಡಿದ ಈ ಹುತಾತ್ಮರಿಗೆ ನಾವು ನಮ್ಮ ಜೀವನದುದ್ದಕ್ಕೂ ಋಣಿಯಾಗಿರುತ್ತೇವೆ. ಕ್ರಾಂತಿ ಚಿರಾಯುವಾಗಲಿ ಎಂದರು. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಈಶ್ವರಪ್ಪ ರಾಜೀನಾಮೆ ಕೊಡಬಾರದು: ಸಚಿವ ನಿರಾಣಿ

  • ಕಾಶ್ಮೀರಿ ಪಂಡಿತರ ಪುನರ್ವಸತಿಗಾಗಿ ನಿವೇಶನ ಹಂಚಿಕೆ ಪರಿಶೀಲಿಸಿ: ಹೈಕೋರ್ಟ್ ಆದೇಶ

    ಕಾಶ್ಮೀರಿ ಪಂಡಿತರ ಪುನರ್ವಸತಿಗಾಗಿ ನಿವೇಶನ ಹಂಚಿಕೆ ಪರಿಶೀಲಿಸಿ: ಹೈಕೋರ್ಟ್ ಆದೇಶ

    ಚಂಡೀಗಢ: 90ರ ದಶಕದಲ್ಲಿ ಭಯೋತ್ಪಾದಕರಿಂದಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ನೆಲೆ ಕಳೆದುಕೊಂಡ ಕಾಶ್ಮೀರಿ ಪಂಡಿತರಿಗೆ ಪುನರ್ವಸತಿಗಾಗಿ ನಿವೇಶನ ಹಂಚಿಕೆ ಪರಿಶೀಲಿಸುವಂತೆ ಹರಿಯಾಣ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

    1947ರಲ್ಲಿ ಪಾಕಿಸ್ತಾನದಿಂದ ಸ್ಥಳಾಂತರಗೊಂಡ ವ್ಯಕ್ತಿಗಳಿಗೆ ಭಾರತದ ಸರ್ಕಾರ ಪಂಜಾಬ್‌ನ ವಿವಿಧ ಜಿಲ್ಲೆಗಳಲ್ಲಿ ಪುನರ್ವಸತಿ ಕಲ್ಪಿಸಿದ್ದು, ಪ್ರಸ್ತುತ ಪ್ರಕರಣದಲ್ಲಿ ಇದೇ ವಿಧಾನ ಅಳವಡಿಸಿಕೊಳ್ಳಬಹುದು ಎಂದು ನ್ಯಾಯಮೂರ್ತಿಗಳಾದ ಅಮೋಲ್ ರತ್ತನ್ ಸಿಂಗ್ ಮತ್ತು ಲಲಿತ್ ಬಾತ್ರಾ ಅವರಿದ್ದ ಪೀಠ ಸಲಹೆ ನೀಡಿದೆ. ಇದನ್ನೂ ಓದಿ: ದಂಪತಿ ಒಟ್ಟಿಗೆ ಮಲಗುವಂತಿಲ್ಲ, ಹಗ್‌-ಕಿಸ್‌ ಮಾಡುವಂತಿಲ್ಲ; ಕೊರೊನಾ ಟಫ್‌ ರೂಲ್ಸ್‌

    haryana

    ಭಯೋತ್ಪಾದನೆಯಿಂದಾಗಿ ಕಾಶ್ಮೀರದಲ್ಲಿ ತಮ್ಮ ಪೂರ್ವಜರ ಮನೆಗಳಿಂದ ಸ್ಥಳಾಂತರಗೊಂಡ ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸಲು ಹರಿಯಾಣ ಸರ್ಕಾರ ಇದೇ ದೃಷ್ಟಿಕೋನದಲ್ಲಿ ಸಮಸ್ಯೆ ಪರಿಶೀಲಿಸಬಹುದು ಎಂದು ನ್ಯಾಯಾಲಯ ಹೇಳಿದೆ.

    ನೆಲೆ ಕಳೆದುಕೊಂಡ ಕಾಶ್ಮೀರಿ ಪಂಡಿತರ ವಸತಿಗಾಗಿ ನಿವೇಶನ ಹಂಚಿಕೆ ಸಂಬಂಧ ಸಲ್ಲಿಸಿದ್ದ ಅರ್ಜಿಯಲ್ಲಿ, ಏಪ್ರಿಲ್ 6 ರಂದು ನಡೆಯಲಿರುವ ಲಾ ಡ್ರಾಗೆ (ಚೀಟಿ ಎತ್ತುವಿಕೆ) ತಡೆಯಾಜ್ಞೆ ನೀಡುವಂತೆಯೂ ಕೋರಲಾಗಿತ್ತು. ಆದರೆ ಲಾಟ್ ಡ್ರಾಗೆ ತಡೆ ನೀಡದ ನ್ಯಾಯಾಲಯ ಜಮ್ಮು-ಕಾಶ್ಮೀರದಿಂದ ಸ್ಥಳಾಂತರಗೊಂಡಿರುವ ಎಲ್ಲರನ್ನೂ ಅದರಲ್ಲಿ ಒಳಗೊಳ್ಳಬೇಕು ಎಂದು ಸೂಚಿಸಿದೆ.

  • ಕಬಡ್ಡಿ ಆಟಗಾರ ಧರ್ಮಿಂದರ್ ಸಿಂಗ್ ಮನೆಗೆ ಭೇಟಿ ಕೊಟ್ಟ ನವಜೋತ್ ಸಿಂಗ್ ಸಿಧು

    ಕಬಡ್ಡಿ ಆಟಗಾರ ಧರ್ಮಿಂದರ್ ಸಿಂಗ್ ಮನೆಗೆ ಭೇಟಿ ಕೊಟ್ಟ ನವಜೋತ್ ಸಿಂಗ್ ಸಿಧು

    ಚಂಡೀಗಢ: ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಕಬಡ್ಡಿ ಆಟಗಾರ ಧರ್ಮಿಂದರ್ ಸಿಂಗ್ ಅವರ ಕುಟುಂಬವನ್ನು ಭೇಟಿ ಮಾಡಿ ಮೂರು ದಿನಗಳಲ್ಲಿ ಆರೋಪಿಗಳನ್ನು ಬಂಧಿಸಲು ಪೊಲೀಸರಿಗೆ ಸಾಧ್ಯವಾಗದಿದ್ದರೆ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

    ಧರ್ಮಿಂದರ್ ಸಿಂಗ್ ಅವರ ಮನೆಗೆ ಭೇಟಿ ನೀಡಿದ ಅವರು, ಲೀಸರು ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ, ಆದರೆ ಪೊಲೀಸರು ಮೂರು ದಿನಗಳಲ್ಲಿ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗದಿದ್ದರೆ, ನಾವು ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: 2 ಲಕ್ಷ ದೋಚಲು ಬಂದು 2 ಕೋಟಿ ಕಳ್ಳತನ – ಓನರ್ ಮನೆಗೆ ಐಟಿ, ಇಡಿ, ಎಂಟ್ರಿ ಸಾಧ್ಯತೆ

    ಇದೇ ವೇಳೆ ಧರ್ಮಿಂದರ್ ಸಿಂಗ್ ಅವರ ತಂದೆ, ಪೊಲೀಸರು ಮತ್ತು ಸರ್ಕಾರ ಈ ವಿವಾರದಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ನಾವು ನಂಬಿದ್ದೇವೆ. ಇದೀಗ ಅವರಿಬ್ಬರ ಮಕ್ಕಳನ್ನು ಯಾರು ನೋಡಿಕೊಳ್ಳುತ್ತಾರೆ ಎಂಬ ಚಿಂತೆ ನಮ್ಮನ್ನು ಕಾಡುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಬೆಂಕಿ ಬಿರುಗಾಳಿ ಎಬ್ಬಿಸಿದ ಕಂಗನಾ ಶೋ: ಪತಿ ಜತೆ ಮಲಗಿದವರ ಲಿಸ್ಟ್ ಹೇಳಿದ ನಟಿ ಮಂದರಾ

    ವೈಯಕ್ತಿಕ ದ್ವೇಷದ ಹಿನ್ನೆಲೆ ಪಂಜಾಬಿ ವಿಶ್ವವಿದ್ಯಾಲಯದ ಎದುರು ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಬಳಿಕ ಕಬಡ್ಡಿ ಆಟಗಾರ ಧರ್ಮಿಂದರ್ ಸಿಂಗ್ ಅವರನ್ನು ಪ್ರತಿಸ್ಪರ್ಧಿ ಬಣದ ಗುಂಪು ಗುರಿಯಾಗಿಸಿಕೊಂಡಿದೆ. ವಿರೋಧಿ ಬಣದ ದ್ವೇಷದಿಂದ ಮಂಗಳವಾರ ರಾತ್ರಿ ಧರ್ಮಿಂದರ್ ಸಿಂಗ್ ಅವರಿಗೆ ಗುಂಡು ಹಾರಿಸಿದ್ದು, ಅವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಇನ್ನೂ ಘಟನೆಯ ವೀಡಿಯೋ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

  • ಹಾಲಿನ ದರ ಏರಿಸದೇ ಇದ್ದರೆ ಪಂಜಾಬ್ ರೈತರ ರೀತಿ ಹೋರಾಟ: ಜಿ.ಆರ್. ಭಾಸ್ಕರ್

    ಹಾಲಿನ ದರ ಏರಿಸದೇ ಇದ್ದರೆ ಪಂಜಾಬ್ ರೈತರ ರೀತಿ ಹೋರಾಟ: ಜಿ.ಆರ್. ಭಾಸ್ಕರ್

    ನೆಲಮಂಗಲ: ಹಾಲಿನ ದರ ಏರಿಕೆಗೆ ಪಟ್ಟು ಇಲ್ಲದಿದ್ದಲ್ಲಿ ಪಂಜಾಬ್ ರೀತಿ ಹೋರಾಟದ ಹಾದಿ ತುಳಿಯುವ ದಿನ ಹತ್ತಿರಲ್ಲೆ ಇದೇ ಎಂದು ಬಮೂಲ್ ಶಿಬಿರದ ನಿದೇರ್ಶಕ ಜಿ.ಆರ್. ಭಾಸ್ಕರ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    ಈ ಕುರಿತು ಕಾಸರಘಟ್ಟದಲ್ಲಿ 183ನೇ ತಾಲೂಕಿನ ನೂತನ ಸಂಘಕ್ಕೆ ಚಾಲನೆ ನೀಡಿ ವೇದಿಕೆಯಲ್ಲಿ ಮಾತನಾಡಿದ ಅವರು, ಹೈನುಗಾರಿಕೆ ಅವಲಂಬಿಸಿರುವ ರೈತಾಪಿ ವರ್ಗದವರ ದೈನಂದಿನ ಜೀವನ ಇಂದು ಬಹಳ ಕಷ್ಟವಾಗುತ್ತಿದೆ. ಕಳೆದ ಮೂರು ವರ್ಷಗಳಿಂದ ಹಾಲಿನ ದರ ಹೆಚ್ಚಳವಾಗಿಲ್ಲ. ಇಂದು ಬೇರೆ-ಬೇರೆ ರಾಜ್ಯಗಳಲ್ಲಿ ಹಾಲಿನ ದರ ಹೆಚ್ಚಿದೆ. ನಮ್ಮ ರಾಜ್ಯದಲ್ಲಿ ಮೂರು ವರ್ಷಗಳಿಂದ ದರ ಏರಿಕೆಯಾಗಿಲ್ಲ. ಸರ್ಕಾರ ಕೂಡಲೇ ದರ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.  ಇದನ್ನೂ ಓದಿ: ವಿಎಲ್‍ಸಿ ಮೀಡಿಯಾ ಪ್ಲೇಯರ್ ಬಳಸಿ ಚೀನಾ ಸೈಬರ್ ದಾಳಿ

    ಹಾಲು ಉತ್ಪಾದಕರಿಗೆ ಯಾವುದೇ ಲಾಭಾಂಶ ಉಳಿಯುತ್ತಿಲ್ಲ. ಕಳೆದ ವರ್ಷ 56 ಕೋಟಿ ನಷ್ಟ ಸರಿದೂಗಿಸಿದ್ದೇವೆ. ಕೂಡಲೇ ದರ ಏರಿಕೆ ಮಾಡದಿದ್ದರೆ. ನಮ್ಮ ರಾಜ್ಯದ ರೈತರು ಪಂಜಾಬ್ ರೀತಿ ಹೋರಾಟದ ಹಾದಿ ತುಳಿಯುವ ದಿನ ಹತ್ತಿರದಲ್ಲೇ ಇದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 1,033 ಪಾಸಿಟಿವ್, 43 ಸಾವು

  • ಹಿಮಾಚಲ ಪ್ರದೇಶದಲ್ಲಿ ಭ್ರಷ್ಟಾಚಾರ ಕಿತ್ತೊಗೆಯುವ ಸಮಯ ಬಂದಿದೆ: ಕೇಜ್ರಿವಾಲ್

    ಹಿಮಾಚಲ ಪ್ರದೇಶದಲ್ಲಿ ಭ್ರಷ್ಟಾಚಾರ ಕಿತ್ತೊಗೆಯುವ ಸಮಯ ಬಂದಿದೆ: ಕೇಜ್ರಿವಾಲ್

    ಶಿಮ್ಲಾ(ಹಿಮಾಚಲ ಪ್ರದೇಶ): ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (AAP) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ ಹಿಮಾಚಲ ಪ್ರದೇಶದ ಮಂಡಿಯಲ್ಲಿಂದು `ಮಿಷನ್ ಹಿಮಾಚಲ್’ ರೋಡ್ ಶೋ ನಡೆಸಿದರು.

    ಈಚೆಗಷ್ಟೇ ನಡೆದ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ನಂತರ ಆಮ್ ಆದ್ಮಿ ಪಕ್ಷವು ತನ್ನ ಹೆಜ್ಜೆಗುರುತನ್ನು ವಿಸ್ತರಿಸಲು ಬಯಸುತ್ತಿದ್ದು, ಹಿಮಾಚಲ ಪ್ರದೇಶದತ್ತ ಚಿತ್ತ ಹಾಯಿಸಿದೆ. ಇದನ್ನೂ ಓದಿ: ತರಗತಿಯಲ್ಲಿ ಹಿಂದೂ ಪುರಾಣಗಳಲ್ಲಿನ ʼಅತ್ಯಾಚಾರʼ ಉಲ್ಲೇಖಿಸಿ ಪಾಠ- ಮುಸ್ಲಿಂ ವಿವಿಯಿಂದ ಪ್ರಾಧ್ಯಾಪಕ ಸಸ್ಪೆಂಡ್‌

    AAP 01

    ರೋಡ್‌ಶೋ ವೇಳೆ ಮಾತನಾಡಿದ ಕೇಜ್ರಿವಾಲ್, ಮೊದಲು ನಾವು ದೆಹಲಿಯಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡಿದೆವು. ನಂತರ ಪಂಜಾಬ್‌ನಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದೆವು. ಇದೀಗ ಹಿಮಾಚಲ ಪ್ರದೇಶದಿಂದ ಭ್ರಷ್ಟಾಚಾರ ಕಿತ್ತೊಗೆಯುವ ಸಮಯ ಬಂದಿದೆ ಎಂದು ಹೇಳಿದ್ದಾರೆ.

    ಈ ವರ್ಷಾಂತ್ಯದಲ್ಲಿ ಹಿಮಾಚಲ ಪ್ರದೇಶ ಮತ್ತು ಗುಜರಾತ್ ವಿಧಾನಸಭೆಗಳಿಗೆ ಚುನಾವಣೆ ನಡೆಯಲಿದೆ. 117 ಸದಸ್ಯ ಬಲದ ಪಂಜಾಬ್ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎಎಪಿ 92 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇಲ್ಲಿಯೂ ಗೆದ್ದು ಹಿಮಾಚಲ ಪ್ರದೇಶದಿಂದ ಭ್ರಷ್ಟಾಚಾರವನ್ನು ಬೇರುಸಹಿತ ಕಿತ್ತುಹಾಕುತ್ತದೆ ಎಂದು ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ: ಜನಕಲ್ಯಾಣ ಯೋಜನೆ ರೂಪಿಸುವಾಗ ಬಜೆಟ್ ಮಿತಿಯಿರಲಿ: ಸುಪ್ರೀಂಕೋರ್ಟ್

    ನಾವು ಸಾಮಾನ್ಯ ಜನರು, ನಮಗೆ ರಾಜಕೀಯ ಮಾಡುವುದು ಗೊತ್ತಿಲ್ಲ. ಬದಲಾಗಿ, ಜನರಿಗಾಗಿ ಕೆಲಸ ಮಾಡುವುದು, ಶಾಲೆಗಳನ್ನು ನಿರ್ಮಿಸುವುದು ಮತ್ತು ಭ್ರಷ್ಟಾಚಾರ ಕೊನೆಗೊಳಿಸುವುದು ಹೇಗೆ? ಎಂಬುದು ಗೊತ್ತಿದೆ. ಭಗವಂತ್ ಮಾನ್ ಮುಖ್ಯಮಂತ್ರಿಯಾದ ನಂತರ ನಾವು ಪಂಜಾಬ್‌ನಲ್ಲಿ ಕೇವಲ 20 ದಿನಗಳಲ್ಲಿ ಭ್ರಷ್ಟಾಚಾರವನ್ನು ಕೊನೆಗೊಳಿಸಿದ್ದೇವೆ. ಈಗ ಹಿಮಾಚಲ ಪ್ರದೇಶದಲ್ಲೂ ಕ್ರಾಂತಿ ನಡೆಯಬೇಕು ಎಂದು ಕರೆ ನೀಡಿದರು.

     

  • ರಾಜಧಾನಿ ಚಂಡೀಗಢಕ್ಕಾಗಿ ಪಂಜಾಬ್‌, ಹರ್ಯಾಣ ಮಧ್ಯೆ ಗುದ್ದಾಟ

    ರಾಜಧಾನಿ ಚಂಡೀಗಢಕ್ಕಾಗಿ ಪಂಜಾಬ್‌, ಹರ್ಯಾಣ ಮಧ್ಯೆ ಗುದ್ದಾಟ

    ಚಂಡೀಗಢ: ರಾಜಧಾನಿ ಚಂಡೀಗಢ ವಿಚಾರವಾಗಿ ಈಗ ಹರ್ಯಾಣ ಮತ್ತು ಪಂಜಾಬ್‌ ಮಧ್ಯೆ ಗುದ್ದಾಟ ಆರಂಭವಾಗಿದೆ.

    ಚಂಡೀಗಢವನ್ನು ಪಂಜಾಬ್‌ಗೆ ಹಸ್ತಾಂತರಿಸಬೇಕು ಎಂದು ನೂತನ ಆಪ್‌ ಸರ್ಕಾರ ವಿಧಾನಸಭೆಯಲ್ಲಿ ಗೊತ್ತುವಳಿ ಮಂಡಿಸಿದ ಬೆನ್ನಲ್ಲೇ ಹರ್ಯಾಣ ಈಗ ಏ.5 ರಂದು ವಿಶೇಷ ಅಧಿವೇಶನವನ್ನು ಕರೆದಿದೆ.

    ಪಂಜಾಬ್‌ ಸರ್ಕಾರದ ನಡೆಯನ್ನು ಖಂಡಿಸಿದ ಹರ್ಯಾಣ ಸಿಎಂ ಮನೋಹರ್‌ ಲಾಲ್‌  ಖಟ್ಟರ್‌, ಆಪ್‌ ರಾಷ್ಟ್ರೀಯ ಸಂಚಾಲಕರಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಪಂಜಾಬ್ ಸಿಎಂ ಭಗವಂತ್ ಮಾನ್ ಅವರು ಹರ್ಯಾಣದ ಜನರಲ್ಲಿ ಕ್ಷಮೆಯಾಚಿಸಬೇಕು. ಪಂಜಾಬ್‌ನಲ್ಲಿ ಆಪ್ಎ‌ ನೇತೃತ್ವದ ಸರ್ಕಾರವು ಮೊದಲು ಸಟ್ಲೇಜ್‌ -ಯಮುನಾ ಲಿಂಕ್ (ಎಸ್‌ವೈಎಲ್) ಕಾಲುವೆಯನ್ನು ನಿರ್ಮಿಸಬೇಕು ಎಂದಿದ್ದಾರೆ. ಇದನ್ನೂ ಓದಿ : ನಾನು ಯಾರ ಕಾಲಿಗೂ ಬಿದ್ದು, ಕೃಪೆ ತೋರಿ ಅಂತ ಕೇಳಿಕೊಂಡಿಲ್ಲ: ಎಂ.ಕೆ.ಸ್ಟಾಲಿನ್

    ಅಷ್ಟೇ ಅಲ್ಲದೇ ಚಂಡೀಗಢವು ಹರ್ಯಾಣ ಮತ್ತು ಪಂಜಾಬ್‌ನ ರಾಜಧಾನಿಯಾಗಿ ಉಳಿಯುತ್ತದೆ ಮತ್ತು ಪಂಜಾಬ್‌ನ ಹಿಂದಿ ಮಾತನಾಡುವ ಪ್ರದೇಶಗಳನ್ನು ಹರ್ಯಾಣಕ್ಕೆ ವರ್ಗಾಯಿಸಬೇಕು ಎಂದು ಹೇಳಿದ್ದಾರೆ.

    ಈಗ ಮುನ್ನೆಲೆಗೆ ಯಾಕೆ?
    ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢದಲ್ಲಿ ಇನ್ನು ಮುಂದೆ ಪಂಜಾಬ್‌ ಕಾನೂನುಗಳ ಬದಲಿಗೆ ಕೇಂದ್ರೀಯ ಸೇವಾ ಕಾಯ್ದೆ (ಕೇಂದ್ರಾಡಳಿತ ಪ್ರದೇಶಗಳಿಗೆ ಮೀಸಲಿರುವ ಕಾನೂನು)ಯ ನಿಯಮಗಳನ್ನು ಅನುಷ್ಠಾನಗೊಳಿಸಲಾಗುತ್ತದೆ ಎಂದು ಕಳೆದ ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಪ್ರಕಟಿಸಿದ್ದರು. ಇದನ್ನೂ ಓದಿ: ಸೌದಿ ಮಿನಿಸ್ಟರ್ ಜೊತೆ ಔತಣ ಸವಿದ ಶಾರೂಖ್, ಸಲ್ಮಾನ್, ಅಕ್ಷಯ್ – ಅಸಲಿ ಕಾರಣವೇನು?

    ಅಮಿತ್‌ ಶಾ ಹೇಳಿಕೆಗೆ ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ ಮತ್ತು ವಿತ್ತ ಸಚಿವ ಹರ್ಪಾಲ್‌ ಸಿಂಗ್‌ ಸೇರಿದಂತೆ ಎಎಪಿ, ಕಾಂಗ್ರೆಸ್‌ ಮತ್ತು ಶಿರೋಮಣಿ ಅಕಾಲಿದಳಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

    ಈ ನಿರ್ಧಾರ ಪಂಜಾಬ್‌ ಮರುಸಂಘಟನೆ ಕಾಯ್ದೆಗೆ ವಿರುದ್ಧವಾಗಿದೆ. ಚಂಡೀಗಢದ ಮೇಲೆ ಪಂಜಾಬಿಗೆ ಇರುವ ಹಕ್ಕುಗಳನ್ನು ಕಸಿದುಕೊಳ್ಳಲು ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಈ ಕ್ರಮಕ್ಕೆ ಮುಂದಾಗಿದೆ ಎಂದು ಮುಖ್ಯಮಂತ್ರಿ ಮಾನ್‌ ಕಿಡಿಕಾರಿ ವಿಧಾನಸಭೆಯಲ್ಲಿ ಗೊತ್ತುವಳಿ ಮಂಡಿಸಿ ಮಂಡಿಸಿ ಕೇಂದ್ರವನ್ನು ಆಗ್ರಹಿಸಿದ್ದರು.

  • ಪಂಜಾಬ್‍ನಲ್ಲಿ ಕಾನೂನು ಸುವ್ಯವಸ್ಥೆ ಅತ್ಯಂತ ಕೆಳಮಟ್ಟದಲ್ಲಿದೆ: ನವಜೋತ್ ಸಿಂಗ್

    ಪಂಜಾಬ್‍ನಲ್ಲಿ ಕಾನೂನು ಸುವ್ಯವಸ್ಥೆ ಅತ್ಯಂತ ಕೆಳಮಟ್ಟದಲ್ಲಿದೆ: ನವಜೋತ್ ಸಿಂಗ್

    ಚಂಡೀಗಢ: ಪಂಜಾಬ್‍ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಅತ್ಯಂತ ಕೆಳಮಟ್ಟದಲ್ಲಿದೆ ಎಂದು ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಕಿಡಿಕಾರಿದರು.

    ಪಂಜಾಬ್‍ನ ಪಟಿಯಾಲಾದ ಸನೌರ್‍ನಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬನನ್ನು ಅಮಾನುಷವಾಗಿ ಆಮ್ ಆದ್ಮಿ ಪಕ್ಷವನ್ನು (ಎಎಪಿ) ಥಳಿಸಿರುವ ವೀಡಿಯೋವನ್ನು ಟ್ವೀಟ್ ಮಾಡಿ, ಎಎಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆಪ್ ಕಾರ್ಯಕರ್ತರ ಇತ್ತೀಚಿನ ಕ್ರಮಗಳು ಭಗತ್ ಸಿಂಗ್ ಅವರ ಸಿದ್ಧಾಂತವನ್ನು ಸೂಚಿಸುವುದಿಲ್ಲ ಎಂದರು.

    ಕೇಜ್ರಿವಾಲ್, ನಿಮ್ಮ ಜೀವಕ್ಕೆ ಅಪಾಯವಿದೆ ಎಂದು ನಿಮ್ಮ ಜನರು ದೆಹಲಿಯಲ್ಲಿ ನ್ಯಾಯಾಲಯಕ್ಕೆ ಹೋಗುತ್ತಿದ್ದಾರೆ. ನೀವು ಪಂಜಾಬಿಗಳ ಪ್ರಾಣದ ಬಗ್ಗೆಯೂ ಚಿಂತಿಸಬೇಕೇ? ದೆಹಲಿಯಲ್ಲಿ ನಡೆದರೆ ಅದನ್ನು ವಿಧ್ವಂಸಕ ಎಂದು ಕರೆಯುತ್ತೀರಿ. ಪಂಜಾಬ್‍ನಲ್ಲಿ ಏನಾಗುತ್ತಿದೆ ನೋಡಿ. ಮತ್ತೊಬ್ಬ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಸನೌರ್‌ನಲ್ಲಿ ಕ್ರೂರವಾಗಿ ಹಲ್ಲೆ ಮಾಡಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಅತ್ಯಂತ ಕೆಳಮಟ್ಟದಲ್ಲಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಪ್ರಧಾನಿ ರಾಜ್ಯದ ಹಕ್ಕುಗಳನ್ನು ದೋಚುತ್ತಿದ್ದಾರೆ: ಭಗವಂತ್ ಮಾನ್

    ಪಂಜಾಬ್‌ನಲ್ಲಿ ಕೊಲೆ, ಕಾರು ಕಳ್ಳತನ, ಸ್ನ್ಯಾಚಿಂಗ್, ಗೂಂಡಾಗಿರಿ ಮಾಡುವ ಮೂಲಕ ಆಪ್ ಕಾರ್ಯಕರ್ತರು ತಮ್ಮ ಸ್ವಾರ್ಥ ಉದ್ದೇಶಗಳನ್ನು ಪೂರೈಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ದೆಹಲಿಯಲ್ಲಿ ರಾಕಿಬಾಯ್ ನೋಡಲು ಮುಗಿಬಿದ್ದ ಅಭಿಮಾನಿಗಳು

  • ಪ್ರಧಾನಿ ರಾಜ್ಯದ ಹಕ್ಕುಗಳನ್ನು ದೋಚುತ್ತಿದ್ದಾರೆ: ಭಗವಂತ್ ಮಾನ್

    ಪ್ರಧಾನಿ ರಾಜ್ಯದ ಹಕ್ಕುಗಳನ್ನು ದೋಚುತ್ತಿದ್ದಾರೆ: ಭಗವಂತ್ ಮಾನ್

    ಚಂಡೀಗಢ: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿನ ಹಕ್ಕುಗಳನ್ನು ದೋಚುತ್ತಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆರೋಪಿಸಿದ್ದಾರೆ.

    ಚಂಡೀಗಢವನ್ನು ತಕ್ಷಣವೇ ಪಂಜಾಬ್‍ಗೆ ವರ್ಗಾಯಿಸುವ ನಿರ್ಣಯವನ್ನು ಅಂಗೀಕರಿಸಿದ ಒಂದು ದಿನದ ಬಳಿಕ ಅಧಿವೇಶನದಲ್ಲಿ ಮಾತನಾಡಿದ ಭಗವಂತ್ ಮಾನ್ ಅವರು, , ಭಾರತವನ್ನು ಮುಕ್ತಗೊಳಿಸಲು ಪಂಜಾಬ್‍ನ ಜನರು ಶೇಕಡಾ 80 ರಷ್ಟು ತ್ಯಾಗ ಮಾಡಿದ್ದಾರೆ. ಆದರೆ ಭಾರತದ ಪ್ರಧಾನಿ ಪಂಜಾಬ್‍ನ ಹಕ್ಕುಗಳನ್ನು ದೋಚುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಬುಲ್ಡೋಜರ್ ಜನರನ್ನು ಹತ್ತಿಕ್ಕಲು ಪ್ರಾರಂಭಿಸಿದೆ: ಅಖಿಲೇಶ್ ಯಾದವ್

    MODi

    ತಮ್ಮ ರಾಜ್ಯಗಳ ಹಕ್ಕುಗಳನ್ನು ರಕ್ಷಿಸಲು ದಕ್ಷಿಣದ ರಾಜ್ಯಗಳ ನಾಯಕರು ಪ್ರದರ್ಶಿಸಿದಂತೆಯೇ ಏಕತೆ ಮತ್ತು ಧನ್ಯತೆಯ ಮನೋಭಾವವನ್ನು ಪ್ರದರ್ಶಿಸಲು ರಾಜ್ಯದ ಎಲ್ಲಾ ಸಂಸದರು ಮತ್ತು ಶಾಸಕರು ಒಂದಾಗಬೇಕು ಎಂದು ಸಲಹೆ ನೀಡಿದ್ದಾರೆ.

    ನಮ್ಮಲ್ಲಿ ಏಕೆ ಒಗ್ಗಟ್ಟು ಬರುವುದಿಲ್ಲ ಎಂದು ಆಗಾಗ ಅಂದುಕೊಳ್ಳುತ್ತೇನೆ. ನಾನು ಈ ಬಗ್ಗೆ ದಕ್ಷಿಣ ನಾಯಕರ ಬಳಿ ಕೇಳಿದೆ, ಅದಕ್ಕೆ ಅವರು ತಮ್ಮ ಪಕ್ಷದ ಮಾರ್ಗಗಳು ವಿಭಿನ್ನವಾಗಿವೆ ಎಂದು ಉತ್ತರಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಡುಪಿಯಲ್ಲಿ ಮುಸ್ಲಿಂ ಅಂಗಡಿ ಹೆಸರು ಬದಲಿಸುವಂತೆ ಪಟ್ಟು

  • ಚಂಡೀಗಢವು ಜಂಟಿ ರಾಜಧಾನಿಯಾಗಿಯೇ ಉಳಿಯುತ್ತೆ: ಹರಿಯಾಣ ಸಿಎಂ

    ಚಂಡೀಗಢವು ಜಂಟಿ ರಾಜಧಾನಿಯಾಗಿಯೇ ಉಳಿಯುತ್ತೆ: ಹರಿಯಾಣ ಸಿಎಂ

    ಚಂಡೀಗಢ: ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ಜಂಟಿ ರಾಜಧಾನಿಯಾಗಿಯೇ ಚಂಡೀಗಢ ಉಳಿಯುತ್ತದೆ ಎಂದಯ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಂಡೀಗಢವು ಪಂಜಾಬ್ ಮತ್ತು ಹರಿಯಾಣದ ಜಂಟಿ ರಾಜಧಾನಿಯಾಗಿ ಉಳಿಯುತ್ತದೆ. ಎರಡೂ ರಾಜ್ಯಗಳು ಚಂಡೀಗಢದ ವಿಷಯವನ್ನು ಹೊರತುಪಡಿಸಿ ಚರ್ಚಿಸಲು ಹಲವಾರು ವಿಷಯಗಳನ್ನು ಹೊಂದಿವೆ ಎಂದರು.

    ಕೇಂದ್ರಾಡಳಿತ ಪ್ರದೇಶದ ನೌಕರರಿಗೆ ಕೇಂದ್ರ ಸೇವಾ ನಿಯಮಗಳನ್ನು ಅನ್ವಯಿಸುವಂತೆ ಮಾಡುವ ಕೇಂದ್ರ ಸರ್ಕಾರದ ಕ್ರಮವನ್ನು ಶ್ಲಾಘಿಸಿದ ಅವರು, ಪಂಜಾಬ್ ಸರ್ಕಾರವು ಈ ವಿಷಯದ ಬಗ್ಗೆ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಚಂಡೀಗಢವನ್ನು ಪಂಜಾಬ್‌ಗೆ ವರ್ಗಾಯಿಸಿ: ಪಂಜಾಬ್ ಸಿಎಂ ನಿರ್ಣಯ ಮಂಡನೆ

    ಈ ಹಿಂದೆ, ಚಂಡೀಗಢದ ನೌಕರರು ಕೇಂದ್ರ ಸರ್ಕಾರದ ಪ್ರತಿಯೊಂದು ಆದೇಶಕ್ಕೂ ಪಂಜಾಬ್ ಸರ್ಕಾರವನ್ನು ಅವಲಂಬಿಸಬೇಕಾಗಿತ್ತು. ಅದಕ್ಕಾಗಿ ಕೇಂದ್ರವು ನೌಕರರ ಬೇಡಿಕೆಗಳು ಮತ್ತು ಹಿತಾಸಕ್ತಿಗಳನ್ನು ಪರಿಗಣಿಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಪಂಜಾಬ್ ಸರ್ಕಾರವು ಈ ವಿಷಯದಲ್ಲಿ ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿದೆ, ಈ ಕ್ರಮವು ನೌಕರರಿಗೆ ಅತ್ಯಂತ ಪ್ರಯೋಜನವನ್ನು ನೀಡುತ್ತದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಅಪೌಷ್ಠಿಕತೆ, ಮಧುಮೇಹ ಖಾಯಿಲೆಯಿಂದ ಬಳಲುವವರಿಗೆ ಕ್ಷಯರೋಗದ ಸಾಧ್ಯತೆ ಹೆಚ್ಚು: ಡಾ. ಮಹೇಶ್ ಎಂ.ಜಿ

    ಶುಕ್ರವಾರ ಪಂಜಾಬ್‍ನಲ್ಲಿ ಚಂಡೀಗಢವು ಪಂಜಾಬ್ ಮತ್ತು ಹರಿಯಾಣದ ಜಂಟಿ ರಾಜಧಾನಿಯಾಗಿದೆ. ಚಂಡೀಗಢದ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದ ಸೇವಾ ನಿಯಮಗಳು ಅನ್ವಯಿಸುತ್ತವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಘೋಷಣೆಯಿಂದ ರಾಜಕೀಯ ಗದ್ದಲದ ನಡುವೆ ಒಂದು ದಿನದ ವಿಶೇಷ ಅಧಿವೇಶನ ಕರೆಯಲಾಗಿತ್ತು.

    ಈ ಅಧಿವೇಶನದಲ್ಲಿ ಚಂಡೀಗಢವನ್ನು ತಕ್ಷಣವೇ ಪಂಜಾಬ್‍ಗೆ ವರ್ಗಾಯಿಸುವಂತೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ನಿರ್ಣಯ ಮಂಡಿಸಿದ್ದಾರೆ. ಜೊತೆಗೆ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಒಕ್ಕೂಟ ವ್ಯವಸ್ಥೆಯ ತತ್ವಗಳನ್ನು ಗೌರವಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಗುಡ್ ಬೈ