Tag: punjab

  • ಪಂಜಾಬ್ ನಿಯೋಜಿತ ಸಿಎಂ ಭಗವಂತ್ ಮಾನ್ ನಟ ಹಾಗೂ ಕಾಮಿಡಿ ಕಲಾವಿದ

    ಪಂಜಾಬ್ ನಿಯೋಜಿತ ಸಿಎಂ ಭಗವಂತ್ ಮಾನ್ ನಟ ಹಾಗೂ ಕಾಮಿಡಿ ಕಲಾವಿದ

    ಪಂಚರಾಜ್ಯಗಳ ಚುನಾವಣೆಯ ಫಲಿತಾಂಶ ಕೆಲ ಕಡೆ ಅಚ್ಚರಿ ಮೂಡಿಸಿದ್ದರೆ, ಕೆಲ ರಾಜ್ಯಗಳಲ್ಲಿ ನಿರೀಕ್ಷಿತ ಫಲದಂತಿದೆ. ಫಲಿತಾಂಶ ಪೂರ್ವ ಬಂದ ಸಮೀಕ್ಷೆಗಳು ಬಹುತೇಕ ಖಚಿತವಾಗಿವೆ. ಅದರಂತೆ ಪಂಜಾಬ್ ನಲ್ಲಿ ಆಮ್ ಆದ್ಮಿ ಪಾರ್ಟಿಯೇ ಅತೀ ಹೆಚ್ಚು ಅಂತರದಿಂದ ಗೆಲುವು ಸಾಧಿಸಿ, ಅಧಿಕಾರ ಚುಕ್ಕಾಣೆ ಹಿಡಿಯಲು ದಿನಗಣನೆ ಶುರುವಾಗಿದೆ. ಇದನ್ನೂ ಓದಿ : ಕಿಕ್ ಏರಿಸಲು ಹೊರಟಿದ್ದ ಸಮಂತಾಗೆ ‘ನೋ ನೋ’ ಅಂದ ಟ್ರೋಲಿಗರು

    ಚುನಾವಣೆ ಮುನ್ನವೇ ಪಂಜಾಬ್ ನ ಸಿಎಂ ಅಭ್ಯರ್ಥಿ ಭಗವಂತ್ ಮಾನ್ ಎಂದು ಕೇಜ್ರಿವಾಲಾ ಘೋಷಣೆ ಮಾಡಿದ್ದರು. ಅವರ ಮೇಲಿನ ನಂಬಿಕೆ ಸುಳ್ಳಾಗಿಲ್ಲ. ನಿರೀಕ್ಷೆಗಿಂತ ಹೆಚ್ಚೆ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಹಾಗಾಗಿ ಭಗವಂತ್ ಮಾನ್ ಮುಂದಿನ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತ.  ಹಾಗಾದರೆ, ಯಾರು ಈ ಭಗವಂತ್ ಖಾನ್? ಇದನ್ನೂ ಓದಿ : ಮೆಗಾಸ್ಟಾರ್ ಚಿರಂಜೀವಿ ಹೊಸ ಚಿತ್ರದಲ್ಲಿ ಕಮಲ್ ಹಾಸನ್ ಪುತ್ರಿ ಶ್ರುತಿ

    ಸಿನಿಮಾ ಮತ್ತು ಮ್ಯೂಸಿಕ್ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು ಭಗವಂತ್. ತೊಂಬತ್ತರ ದಶಕದಿಂದಲೂ ಅವರು ಕಾಮಿಡಿ ಶೋಗಳನ್ನು ಮಾಡುತ್ತಲೇ, ಸಾವಿರಾರು ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿದ್ದಾರೆ. ಈ ವೇಳೆಯಲ್ಲಿ ಭಗವಂತ್ ಜತೆ ಕಾಣಿಸಿಕೊಳ್ಳುತ್ತಿದ್ದ ಮತ್ತೊಂದು ಹೆಸರು ಖ್ಯಾತ ಕಾಮಿಡಿಯನ್ ಜಗ್ತರ್ ಜಗ್ಗಿ ಅವರದ್ದು. ಭಗವಂತ್ ಮತ್ತು ಜಗ್ತರ್ ಜಗ್ಗಿ ಕಾಮಿಡಿ ಇದ್ದರೆ ಸಾಕು, ನಗೆಹಬ್ಬ ಗ್ಯಾರಂಟಿ ಆಗಿರುತ್ತಿತ್ತು. ಈ ಜೋಡಿ ಕೇವಲ ನಮ್ಮ ದೇಶದಲ್ಲಿ ಮಾತ್ರವಲ್ಲ  ಅಮೆರಿಕಾ, ಇಂಗ್ಲೆಂಡ್, ಅರಬ್ ದೇಶಗಳು, ಕೆನಡಾ ಸೇರಿದಂತೆ ವಿದೇಶಗಳಲ್ಲೂ ಇವರು ಸಾಕಷ್ಟು ಕಾಮಿಡಿ ಶೋಗಳನ್ನು ನೀಡಿದ್ದಾರೆ. ಇದನ್ನೂ ಓದಿ : ಇಂದು ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವರ್ಣರಂಜಿತ ತೆರೆ

    ಕಾಮಿಡಿ ಶೋಗಳು ಮಾತ್ರವಲ್ಲ, ತೊಂಬತ್ತರ ದಶಕದಲ್ಲಿ ಭಗವಂತ್ ಸಿನಿಮಾ ಕ್ಷೇತ್ರಕ್ಕೂ ಕಾಲಿಟ್ಟರು. ಈವರೆಗೂ ಸುಮಾರ 15ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಸಮಾಜ ಸೇವೆಯತ್ತ ಒಲವು ಹೆಚ್ಚಾಗಿದ್ದರಿಂದ ಸಿನಿಮಾ ರಂಗದಿಂದ ದೂರವಾಗಿ ಲೋಕ್ ಲೆಹರ್ ಫೌಂಡೇಷನ್ ಎಂಬ ಎನ್.ಜಿ.ಓ ಸಂಸ್ಥೆಯನ್ನು ಸ್ಥಾಪಿಸಿ ವಿಶೇಷ ಚೇತನ ಮಕ್ಕಳ ಬಾಳಿಗೆ ಬೆಳಕಾದವರು. ಇದನ್ನೂ ಓದಿ : ಮಾ.13ಕ್ಕೆ ಅರಮನೆ ಮೈದಾನದಲ್ಲಿ ಜೇಮ್ಸ್ ಪ್ರೀ ಇವೆಂಟ್, ಹೊಸಪೇಟೆಯಲ್ಲಿ ಸಕ್ಸಸ್ ಸಂಭ್ರಮ

    ಭಗಮಂತ್ ಮಾನ್ ಹುಟ್ಟಿದ್ದು ಪಂಜಾಬ್ ನ ಸಂಗ್ರುರ್ ಜಿಲ್ಲೆಯ ಸತೋಜ್ ಗ್ರಾಮದಲ್ಲಿ. ಹರ್ಪಾಲ್ ಕೌರ್ ಮ್ತು ಮಹಿಂದರ್ ಸಿಂಗ್ ದಂಪತಿಯ ಪುತ್ರ ಇವರು. 17 ಅಕ್ಟೋಬರ್ 1973ರಲ್ಲಿ ಹುಟ್ಟಿರುವ ಭಗವಂತ್, ನಗುತ್ತಲೇ ಭೂಮಿಗೆ ಬಂದರು ಎನ್ನುವ ಮಾತೂ ಜನಜನಿತ. ಇದನ್ನೂ ಓದಿ : ಬೆಂಗಳೂರಿನಿಂದ ಗಡಿಭಾಗಕ್ಕೆ ಆರ್.ಆರ್.ಆರ್ ಅದ್ಧೂರಿ ಕಾರ್ಯಕ್ರಮ ಶಿಫ್ಟ್

    ಕಾಲೇಜು ಶಿಕ್ಷಣ ಮುಗಿಯುತ್ತಿದ್ದಂತೆಯೇ ಕಾಮಿಡಿ ಕ್ಷೇತ್ರಕ್ಕೆ ಕಾಲಿಟ್ಟರು. ಅಲ್ಲಿಂದ ಸಮಾಜ ಸೇವೆಯತ್ತ ಮುಖ ಮಾಡಿದರು. ಅವರು ಮಾಡಿದ ಸಮಾಜ ಸೇವೆಯೇ ಇಂದು ಅವರನ್ನು ಮುಖ್ಯಮಂತ್ರಿ ಸ್ಥಾನದವರೆಗೂ ಕರೆದುಕೊಂಡು ಬಂದಿದೆ.

  • ಭಗವಂತ್ ಮಾನ್ ಭರ್ಜರಿ ಜಯ- ಭಗತ್ ಸಿಂಗ್ ಹುಟ್ಟೂರಲ್ಲಿ ಪ್ರಮಾಣ ವಚನ

    ಭಗವಂತ್ ಮಾನ್ ಭರ್ಜರಿ ಜಯ- ಭಗತ್ ಸಿಂಗ್ ಹುಟ್ಟೂರಲ್ಲಿ ಪ್ರಮಾಣ ವಚನ

    ಚಂಡೀಗಢ: ಪಂಜಾಬ್‍ನ ಎಎಪಿಯ ಸಿಎಂ ಅಭ್ಯರ್ಥಿಯಾಗಿರುವ ಭಗವಂತ್ ಮಾನ್ 58,206 ಮತದ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

    ಪಂಜಾಬ್‍ನ ವಿಧಾನಸಭೆ ಚುನಾವಣೆಯಲ್ಲಿ ಆಪ್ ಪಕ್ಷ ಸ್ಪಷ್ಟ ಬಹುಮತ ಗಳಿಸಿದ್ದು, ಪಂಜಾಬ್‍ನಲ್ಲಿ ಅಧಿಕಾರ ಹಿಡಿಯಲು ಎಲ್ಲಾ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಭಗವಂತ್ ಮಾನ್ ದುರಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಇವರ ವಿರುದ್ಧ ಸ್ಪರ್ಧಿಸಿದ್ದ ಕಾಂಗ್ರೆಸ್‍ನ ದಲ್ವಿರ್‍ಸಿಂಗ್ ಗೋಲ್ಡಿ 24,306 ಮತಗಳಿಸಿದ್ದು, ಭಗವಂತ್ ಮಾನ್‍ಗೆ 82,023 ಮತಗಳನ್ನು ಗಳಿಸಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ.

    ಈ ಬಗ್ಗೆ ಮಾತನಾಡಿದ ಅವರು, ತಮ್ಮ ಪ್ರಮಾಣವಚನ ಸ್ವೀಕಾರ ಸಮಾರಂಭವು ರಾಜಭವನದಲ್ಲಿ ನಡೆಯುವುದಿಲ್ಲ. ಬದಲಿಗೆ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪೂರ್ವಜರ ಗ್ರಾಮವಾದ ನವಾನ್‍ಶಹರರ ಜಿಲ್ಲೆಯ ಖಟ್ಕರ್ಕಲನ್‍ನಲ್ಲಿ ನಡೆಸಲಾಗುವುದು. ದಿನಾಂಕವನ್ನು ನಂತರದಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಉತ್ತರಾಖಂಡ್‌ನಲ್ಲಿ ಬಿಜೆಪಿ ಗೆದ್ದಿದ್ದು ಹೇಗೆ?

    ಯಾವುದೇ ಸರ್ಕಾರಿ ಕಚೇರಿಯಲ್ಲಿ ಮುಖ್ಯಮಂತ್ರಿಯವರ ಚಿತ್ರವಿರುವುದಿಲ್ಲ, ಬದಲಿಗೆ ಭಗತ್ ಸಿಂಗ್ ಮತ್ತು ಬಿಆರ್ ಅಂಬೇಡ್ಕರ್ ಅವರ ಚಿತ್ರಗಳು ಇರುತ್ತವೆ ಎಂದು ಘೋಷಿಸಿದರು.

    ಅಧಿಕಾರ ವಹಿಸಿಕೊಂಡ ನಂತರ ಅವರ ಮೊದಲ ವ್ಯವಹಾರದ ಆದೇಶವೆಂದರೆ ಶಾಲೆಗಳು, ಆರೋಗ್ಯ, ಉದ್ಯಮ, ಕೃಷಿಯನ್ನು ಲಾಭದಾಯಕವಾಗಿಸುವುದಾಗಿದೆ. ಜೊತೆಗೆ ಮಹಿಳೆಯರ ಸುರಕ್ಷತೆ ಮತ್ತು ಕ್ರೀಡಾ ಮೂಲಸೌಕರ್ಯಗಳನ್ನು ಸುಧಾರಿಸುವುದಾಗಿದೆ ಎಂದ ಅವರು, ಒಂದು ತಿಂಗಳೊಳಗೆ ಪಂಜಾಬ್‍ನಲ್ಲಿ ಬದಲಾವಣೆಯನ್ನು ಕಾಣುತ್ತೀರಿ ಎಂದು ಭರವಸೆ ನೀಡಿದರು. ಇದನ್ನೂ ಓದಿ: ನಾನು ಆತಂಕವಾದಿಯಲ್ಲ ಎಂದು ಮತದಾರರು ಸಾಬೀತು ಮಾಡಿದ್ದಾರೆ: ಕೇಜ್ರಿವಾಲ್

    ಆಮ್ ಆದ್ಮಿ ಪಕ್ಷವು ಪಂಜಾಬ್‍ನಲ್ಲಿ 117 ವಿಧಾನಸಭಾ ಸ್ಥಾನಗಳ ಪೈಕಿ 91 ರಲ್ಲಿ ಮುನ್ನಡೆ ಸಾಧಿಸುವ ಮೂಲಕ ಕ್ಲೀನ್ ಸ್ವೀಪ್ ಮಾಡಿದೆ.

  • ಹುಟ್ಟೂರಿನಿಂದ ಸ್ಪರ್ಧೆ ಮಾಡಿದ್ದ ಸೋನು ಸೂದ್ ಸಹೋದರಿ ಮಾಳವಿಕಾ ಸೂದ್ ಸೋಲು

    ಹುಟ್ಟೂರಿನಿಂದ ಸ್ಪರ್ಧೆ ಮಾಡಿದ್ದ ಸೋನು ಸೂದ್ ಸಹೋದರಿ ಮಾಳವಿಕಾ ಸೂದ್ ಸೋಲು

    ನವದೆಹಲಿ: ಕಾಂಗ್ರೆಸ್‍ನಿಂದ ಸ್ಪರ್ಧೆ ಮಾಡಿದ್ದ ಸೋನು ಸೂದ್ ಸಹೋದರಿ ಮಾಳವಿಕಾ ಸೂದ್ ಅವರು ಪಂಜಾಬ್ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದಾರೆ.

    ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹಿನ್ನಡೆಯನ್ನು ಅನುಭವಿಸುತ್ತಿದೆ. ಮಾಳವಿಕಾ ಸೂದ್ ತಮ್ಮ ಹುಟ್ಟೂರಾದ ಪಂಜಾಬ್‍ನ ಮೊಗಾದಲ್ಲಿ ಮೊಗಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದರು. ಮಾಳವಿಕಾ ಸೂದ್, ಎಎಪಿಯ ಅಮನ್‍ದೀಪ್ ಕೌರ್ ವಿರುದ್ಧ ಸೋಲನ್ನು ಅನುಭವಿಸಿದ್ದಾರೆ. ಸೂದ್ ಚಾರಿಟಿ ಫೌಂಡೇಶನ್‍ನೊಂದಿಗೆ ಮಾಳವಿಕಾ ಸೂದ್ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ, ಆದರೆ ಮತದಾರ ಇವರ ಕೈ ಹಿಡಿದಿಲ್ಲ. ಇದನ್ನೂ ಓದಿ: ಹುಟ್ಟೂರಿಗೆ ನೆರವಾದ ಸೋನು ಸೂದ್-1,000 ವಿದ್ಯಾರ್ಥಿನಿಯರಿಗೆ ಸೈಕಲ್ ವಿತರಣೆ

    ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ಬಡಜನರಿಗೆ ಸೋನು ಸೂದ್ ಅವರು ಅಪಾರ ನೆರವು ಒದಗಿಸುವ ಮೂಲಕ ನಿಜಜೀವನದಲ್ಲೂ ಹೀರೋ ಎನಿಸಿಕೊಂಡಿದ್ದರು. ಸಹೋದರಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾರಣ ಸಹೋದರಿ ಪರವಾಗಿ ಅಬ್ಬರದ ಪ್ರಚಾರವನ್ನು ಮಾಡಿದ್ದರು. ಆದರೆ ಇದು ಯಾವುದು ಸೋನು ಅವರ ಸಹೋದರಿಗೆ ಫಲಸಿಕ್ಕಿಲ್ಲ. ಇದನ್ನೂ ಓದಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ಗೆ ಸೋಲು

  • ಆಪ್‍ಗೆ ಅಭಿನಂದನೆ ಕೋರಿದ ನವಜೋತ್ ಸಿಂಗ್ ಸಿಧು

    ಆಪ್‍ಗೆ ಅಭಿನಂದನೆ ಕೋರಿದ ನವಜೋತ್ ಸಿಂಗ್ ಸಿಧು

    ಚಂಡೀಗಢ: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಿದ್ದು, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರು ಶುಭಕೋರಿದ್ದಾರೆ.

    ಈ ಕುರಿತಂತೆ ನವಜೋತ್ ಸಿಂಗ್ ಸಿಧು ಅವರು, ಜನರ ಧ್ವನಿ ದೇವರ ಧ್ವನಿ. ಪಂಜಾಬ್ ಜನತೆಯ ಆದೇಶವನ್ನು ವಿನಮ್ರವಾಗಿ ಸ್ವೀಕರಿಸಿ. ಆಪ್‍ಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ:  ಪಂಜಾಬ್‍ನಲ್ಲಿ ಎಎಪಿ ಮುನ್ನಡೆ – ಭಗವಂತ್ ಮಾನ್ ಮನೆಯಲ್ಲಿ ಸಂಭ್ರಮಾಚರಣೆ ಶುರು

    ಪಂಜಾಬ್‍ನಲ್ಲಿ ಕಾಂಗ್ರೆಸ್ ಸೋತಿದ್ದು, ಈ ಮಧ್ಯೆ ಅಮೃತಸರ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿದ್ದು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಆಪ್‍ನಿಂದ ಸರ್ಧಿಸಿದ್ದ ಜೀವನ್ ಜ್ಯೋತ್ ಕೌರ್ ಮುನ್ನಡೆಯಲ್ಲಿದ್ದರೆ, ಶಿರೋಮಣಿ ಅಕಾಲಿ ದಳದ ಬಿಕ್ರಾಂ ಸಿಂಗ್ ಎರಡನೇ ಸ್ಥಾನ ಪಡೆದಿದ್ದಾರೆ ಮತ್ತು ಮೂರನೇ ಸ್ಥಾನದಲ್ಲಿ ನವಜೋತ್ ಸಿಂಗ್ ಸಿಧು ಇದ್ದಾರೆ. ಇದನ್ನೂ ಓದಿ:  ಪಂಜಾಬ್‌ನಲ್ಲಿ AAP ಗೆದ್ದಿದ್ದು ಹೇಗೆ?

    ಮಧ್ಯಾಹ್ನ 1 ಗಂಟೆಯ ಟ್ರೆಂಡ್ ಪ್ರಕಾರ ಆಪ್ 91, ಕಾಂಗ್ರೆಸ್ 17, ಶಿರೋಮಣಿ ಅಖಾಲಿ ದಳ 06, ಬಿಜೆಪಿ 2, ಇತರರು 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಈಗಾಗಲೇ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರ ಮನೆಯಲ್ಲಿ ಸಂಭ್ರಮಾಚರಣೆ ಪ್ರಾರಂಭವಾಗಿದೆ. ಇದನ್ನೂ ಓದಿ: ಪಂಜಾಬ್ ಫಲಿತಾಂಶ: 3ನೇ ಸ್ಥಾನಕ್ಕೆ ಕುಸಿದ ಸಿಧು

  • ಪಂಜಾಬ್‍ನಲ್ಲಿ ಎಎಪಿ ಮುನ್ನಡೆ – ಭಗವಂತ್ ಮಾನ್ ಮನೆಯಲ್ಲಿ ಸಂಭ್ರಮಾಚರಣೆ ಶುರು

    ಪಂಜಾಬ್‍ನಲ್ಲಿ ಎಎಪಿ ಮುನ್ನಡೆ – ಭಗವಂತ್ ಮಾನ್ ಮನೆಯಲ್ಲಿ ಸಂಭ್ರಮಾಚರಣೆ ಶುರು

    ಚಂಡೀಗಢ: ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರ ಮನೆಯಲ್ಲಿ ಸಂಭ್ರಮಾಚರಣೆ ಪ್ರಾರಂಭವಾಗಿದೆ. ಪಂಜಾಬ್ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಪಕ್ಷವು ಮುನ್ನಡೆ ಸಾಧಿಸುತ್ತಿದೆ.

    ಭಗವಂತ್ ಮಾನ್ ಅವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಧುರಿ ಕ್ಷೇತ್ರದಿಂದ ಮುನ್ನಡೆ ಸಾಧಿಸಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ದಲ್ವಿರ್ ಸಿಂಗ್ ಗೋಲ್ಡಿ ಅವರಿಗಿಂತ ಮುಂದಿದ್ದಾರೆ. ಇದೀಗ ಸಂಗ್ರೂರ್‍ನಲ್ಲಿರುವ ಭಗವಂತ್ ಮಾನ್ ಅವರ ನಿವಾಸದಲ್ಲಿ ಎಎಪಿ ಕಾರ್ಯಕರ್ತರು ನೃತ್ಯ ಮಾಡುವ ಮೂಲಕ ಪಕ್ಷದ ಮುನ್ನಡೆಯನ್ನು ಸಂಭ್ರಮಿಸುತ್ತಿದ್ದಾರೆ. ಇದನ್ನೂ ಓದಿ:  ಪಂಜಾಬ್‌ನಲ್ಲಿ AAP ಗೆದ್ದಿದ್ದು ಹೇಗೆ?

    ಈ ಮುನ್ನ ಎಎಪಿಯ ರಾಜ್ಯ ಘಟಕದ ಮುಖ್ಯಸ್ಥ ಭಗವಂತ್ ಮಾನ್ ಅವರು, ರಾಜ್ಯದಲ್ಲಿ ತಮ್ಮ ಪಕ್ಷವು ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಗಿ ಭದ್ರತೆಯ ನಡುವೆ ಇಂದು ಬೆಳಗ್ಗೆಯಿಂದ ಪಂಜಾಬ್‍ನ 117 ವಿಧಾನಸಭಾ ಕ್ಷೇತ್ರಗಳಲ್ಲಿ ಮತ ಎಣಿಕೆ ಆರಂಭವಾಗಿದೆ. 66 ಸ್ಥಳಗಳಲ್ಲಿ 117 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದ್ದು, 93 ಮಹಿಳೆಯರು ಮತ್ತು ಇಬ್ಬರು ತೃತೀಯಲಿಂಗಿಗಳು ಸೇರಿದಂತೆ ಒಟ್ಟು 1,304 ಅಭ್ಯರ್ಥಿಗಳು ಕಣಕ್ಕಿಳಿದ್ದಿದ್ದರು. ಇದನ್ನೂ ಓದಿ: ಪಂಜಾಬ್ ಫಲಿತಾಂಶ: 3ನೇ ಸ್ಥಾನಕ್ಕೆ ಕುಸಿದ ಸಿಧು

  • ಆಮ್ ಆದ್ಮಿ ಪಕ್ಷಕ್ಕೆ ಯಾವ ಸಿದ್ಧಾಂತ, ದಿಕ್ಕಿಲ್ಲ, ಸ್ಪಷ್ಟತೆಯೂ ಇಲ್ಲ: ಸಚಿವ ಅಶ್ವಥ್ ನಾರಾಯಣ

    ಆಮ್ ಆದ್ಮಿ ಪಕ್ಷಕ್ಕೆ ಯಾವ ಸಿದ್ಧಾಂತ, ದಿಕ್ಕಿಲ್ಲ, ಸ್ಪಷ್ಟತೆಯೂ ಇಲ್ಲ: ಸಚಿವ ಅಶ್ವಥ್ ನಾರಾಯಣ

    ಧಾರವಾಡ: ಆಮ್ ಆದ್ಮಿ ಪಕ್ಷಕ್ಕೆ ಯಾವ ಸಿದ್ಧಾಂತ, ದಿಕ್ಕಿಲ್ಲ, ಸ್ಪಷ್ಟತೆಯೂ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಹೇಳಿದರು.

    ಪಂಚ ರಾಜ್ಯ ಚುನಾವಣೆಯ ಮತ ಏಣಿಕೆಯಲ್ಲಿ ಪಂಜಾಬ್‍ನಲ್ಲಿ ಆಮ್ ಆದ್ಮಿ ಮುನ್ನಡೆ ಸಾಧಿಸಿದ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಮ್ ಆದ್ಮಿ ದೆಹಲಿಯಂತಹ ಸಿಟಿಯಲ್ಲಿ ರಾಜಕೀಯ ಮಾಡಿದೆ. ಅದು ಕೂಡಾ ನಮ್ಮ ರಾಜಧಾನಿ ಬೆಂಗಳೂರಿನಂತಹ ಸಿಟಿ ಇದ್ದ ಹಾಗೇ ಎಂದು ಹೇಳಿದರು.

    ಉಚಿತ ವಿದ್ಯುತ್, ಶಾಲೆ, ಮೌಲಾ ಕ್ಲಿನ್ ಮಾಡಿದ್ದೇವೆ ಎಂದು ಆಪ್ ನವರು ಹೇಳುತ್ತಾರೆ. ಅದೆಲ್ಲವೂ ನಗರ ಪ್ರದೇಶದಲ್ಲಿ ನಡೆದಿರುವುದು. ಪಂಜಾಬ್‍ದಂತಹ ರಾಜ್ಯದಲ್ಲಿ ಅವರಿಗೆ ಪ್ರಾರಂಭ ಅಷ್ಟೇ. ಸರ್ಕಾರ ಬಂದರೂ ಅದು ಒಂದೇ ಸರ್ಕಾರದಲ್ಲಿ ಕೊನೆಯಾಗುತ್ತದೆ. ಪ್ರಾರಂಭವೇ ಅವರಿಗೆ ಕೊನೆ ಆಗುತ್ತದೆ ಎಂದರು.

    ಆಮ್ ಆದ್ಮಿ ಅಂತ ಪಕ್ಷಗಳು ಅಲ್ಲಿ ನೆಲ ಊರಲು ಸಾಧ್ಯವಿಲ್ಲ. ಇಂತಹ ಪಕ್ಷಗಳು ಬರುತ್ತವೆ, ಹೋಗುತ್ತವೆ, ಆ ಪಕ್ಷಕ್ಕೆ ಮಾನ್ಯತೆ ಕೊಡುವ ಅವಶ್ಯಕತೆ ಇಲ್ಲ. ಈ ಪಕ್ಷಕ್ಕೆ ಭವಿಷ್ಯವಿಲ್ಲ, ಯಾವ ಸಿದ್ಧಾಂತ, ದಿಕ್ಕಿಲ್ಲ, ಸ್ಪಷ್ಟತೆಯೂ ಇಲ್ಲ, ಸಣ್ಣ ಮಟ್ಟದಲ್ಲಿ ನಗರದ ಪ್ರದೇಶದಲ್ಲಿ ಕೆಲಸ ಮಾಡಿದೆಯಷ್ಟೇ ಎಂದು ವ್ಯಂಗ್ಯವಾಡಿದರು.

  • ನಾನು ಸಿಎಂ ಆದ್ರೆ ಅಧಿಕಾರ ನನ್ನ ತಲೆಗೆ ಏರುವುದಿಲ್ಲ: ಭಗವಂತ್ ಮಾನ್

    ನಾನು ಸಿಎಂ ಆದ್ರೆ ಅಧಿಕಾರ ನನ್ನ ತಲೆಗೆ ಏರುವುದಿಲ್ಲ: ಭಗವಂತ್ ಮಾನ್

    ಚಂಡೀಗಢ: ಸಿಎಂ ಎಂದರೆ ಸಾಮಾನ್ಯ ಮನುಷ್ಯ ಎಂದು ಹೇಳುತ್ತಾರೆ. ನಾನು ಉನ್ನತ ಹುದ್ದೆಯನ್ನು ಪಡೆದರೂ ಸಾಮಾನ್ಯ ಮನುಷ್ಯನಾಗಿರುತ್ತೇನೆ ಎಂದು ಆಮ್ ಆದ್ಮಿ ಪಕ್ಷದ (AAP) ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರು ತಿಳಿಸಿದ್ದಾರೆ.

    ಬುಧವಾರ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಮುಖ್ಯಮಂತ್ರಿಯಾದರೆ ಅಧಿಕಾರ ನನ್ನ ತಲೆಗೆ ಏರುವುದಿಲ್ಲ. ಖ್ಯಾತಿ ಯಾವಾಗಲೂ ನನ್ನ ಜೀವನದ ಭಾಗವಾಗಿದೆ. ಯಾವಾಗಲೂ ನಾನು ಜನರ ಮಧ್ಯೆ ಹೋಗಿ ಅವರಿಗಾಗಿ ಕೆಲಸ ಮಾಡುತ್ತೇನೆ. ಮುಖ್ಯಮಂತ್ರಿಯಾದರೆ ರಾಜಕೀಯ ನನ್ನ ತಲೆ ಕೆಡಿಸಿಕೊಳ್ಳುತ್ತದೆ ಎಂದು ನನಗೆ ಅನಿಸುವುದಿಲ್ಲ. ನನಗೆ ಯಾವುದು ಸಹ ಹೊಸದಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೇಶಾದ್ಯಂತ ಸುದ್ದಿಯಾಗಿದ್ದ ಹತ್ರಾಸ್‌, ಲಖೀಂಪುರದಲ್ಲಿ ಬಿಜೆಪಿಗೆ ಮುನ್ನಡೆ

    ನನ್ನ ಪಂಜಾಬ್ ಕನಸಿನ ಪಂಜಾಬ್ ಆಗಿದೆ. ಜನರು ಹಳೆಯ ಪಂಜಾಬ್ ಅನ್ನು ಮರಳಿ ಬಯಸುತ್ತಿದ್ದಾರೆ. ನಾವು ಮತ್ತೆ ಹಳೆಯ ಪಂಜಾಬ್ ಆಗಿ ಮಾಡುತ್ತೇವೆ. ಪಂಜಾಬ್ ಅನ್ನು ಪ್ಯಾರಿಸ್, ಲಂಡನ್ ಅಥವಾ ಕ್ಯಾಲಿಫೋರ್ನಿಯಾ ಆಗಿ ಪರಿವರ್ತಿಸುವ ಅಗತ್ಯವಿಲ್ಲ. ಆದರೆ ಇದು ಇತರ ಪಕ್ಷಗಳ ಕನಸಾಗಿದ್ದು, ಇದು ಸಾದ್ಯವಾಗುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶ ಅಂಚೆ ಮತ ಎಣಿಕೆ: ಆರಂಭದಲ್ಲಿ ಬಿಜೆಪಿ ಮುನ್ನಡೆ

    ಕಾಂಗ್ರೆಸ್ ಏನನ್ನೂ ಬಿಟ್ಟಿಲ್ಲ. ಮರಳು ಮಾಫಿಯಾ, ಭೂ ಮಾಫಿಯಾ, ಕೇಬಲ್ ಮಾಫಿಯಾ, ಸಾರಿಗೆ ಮಾಫಿಯಾ, ಅಬಕಾರಿ ಮಾಫಿಯಾ ಹೀಗೆ ಪಂಜಾಬ್ ಹಲವಾರು ಮಾಫಿಯಾಗಳಿಂದ ತುಂಬಿದೆ. ಹಾಗಾಗಿ ನಾನು ಮುಖ್ಯಮಂತ್ರಿಯಾದರೆ ಮೊದಲು ಮಾಫಿಯಾ ಮುಕ್ತ ಪಂಜಾಬ್ ಆಗಿ ಮಾಡುತ್ತೇನೆ ಎಂದು ಹೇಳಿದ್ದಾರೆ.

  • ಪಂಚರಾಜ್ಯ ಚುನಾವಣೆ: ಯೋಗಿ, ಅಖಿಲೇಶ್‌ ಮುನ್ನಡೆ- ಗೋವಾ, ಪಂಜಾಬ್‌ ಸಿಎಂ ಹಿನ್ನಡೆ

    ಪಂಚರಾಜ್ಯ ಚುನಾವಣೆ: ಯೋಗಿ, ಅಖಿಲೇಶ್‌ ಮುನ್ನಡೆ- ಗೋವಾ, ಪಂಜಾಬ್‌ ಸಿಎಂ ಹಿನ್ನಡೆ

    ನವದೆಹಲಿ: ಪಂಚ ರಾಜ್ಯಗಳಾದ ಉತ್ತರ ಪ್ರದೇಶ, ಪಂಜಾಬ್‌, ಉತ್ತರಾಖಂಡ್‌, ಗೋವಾ, ಮಣಿಪುರ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಐದೂ ರಾಜ್ಯಗಳಲ್ಲಿ ಹಲವರು ಪ್ರಮುಖರು ಮುನ್ನಡೆ ಹಾಗೂ ಕೆಲವರು ಹಿನ್ನಡೆ ಅನುಭವಿಸಿದ್ದಾರೆ.

    ಸಾರ್ವತ್ರಿಕ ಚುನಾವಣೆಯ ಭವಿಷ್ಯದ ಮುನ್ನುಡಿ ಎಂದೇ ಬಿಂಬಿತವಾಗಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಗೋರಖ್‌ಪುರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದು, 5 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿಗೆ ಪ್ರಬಲ ಪ್ರತಿಸ್ಪರ್ಧಿಯಾಗಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಕೂಡ ಮುನ್ನಡೆ ಕಾಯ್ದುಕೊಂಡಿದ್ದಾರೆ.

    ಗೋವಾದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಹಾವು-ಏಣಿಯ ಆಟದಂತೆ ಪೈಪೋಟಿ ಮುಂದುವರಿದಿದೆ. ಗೋವಾ ಹಾಲಿ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರು 436 ಮತಗಳ ಹಿನ್ನಡೆ ಅನುಭವಿಸಿದ್ದಾರೆ. ಇಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.

    ಪಂಜಾಬ್‌ನಲ್ಲಿ ಆಂತರಿಕ ಕಲಹದಿಂದಾಗಿ ಕಾಂಗ್ರೆಸ್‌ ತೊರೆದಿದ್ದ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ 1,000 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಕ್ಯಾಪ್ಟನ್‌ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅಧಿಕಾರಕ್ಕೇರಿದ ದಲಿತ ನಾಯಕ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರು ಸ್ಪರ್ಧಿಸಿರುವ ಎರಡೂ ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಅಮೃತಸರ ಪೂರ್ವದಲ್ಲಿ ನವಜೋತ್‌ ಸಿಂಗ್‌ ಸಿಧು ಹಿನ್ನಡೆ ಅನುಭವಿಸಿದ್ದಾರೆ. ಪ್ರಕಾಶ್‌ ಸಿಂಗ್‌ ಬಾದಲ್‌ ಅವರು ಸಹ ಹಿನ್ನಡೆಯಲ್ಲಿದ್ದಾರೆ.

    ಇನ್ನು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಅವರು ಮುನ್ನಡೆ ಕಾಯ್ದುಕೊಂಡಿದ್ದಾರೆ.

  • ಪಂಜಾಬ್‌ ಚುನಾವಣೆ : ಆರಂಭದ ಮತ ಎಣಿಕೆಯಲ್ಲಿ ಆಪ್‌ ಮುನ್ನಡೆ

    ಪಂಜಾಬ್‌ ಚುನಾವಣೆ : ಆರಂಭದ ಮತ ಎಣಿಕೆಯಲ್ಲಿ ಆಪ್‌ ಮುನ್ನಡೆ

    ಲಕ್ನೋ: ಪಂಜಾಬ್‌ ಮತ ಎಣಿಕೆ ಆರಂಭಗೊಂಡಿದ್ದು ಆರಂಭದ ಅಂಚೆ ಮತ ಎಣಿಕೆಯಲ್ಲಿ ಆಪ್‌ ಮುನ್ನಡೆ ಸಾಧಿಸಿದೆ.

    ಅಂಚೆ ಮತ ಎಣಿಕೆಯಲ್ಲಿ ಮುನ್ನಡೆ ಪಡೆದರೂ ಮಧ್ಯಾಹ್ನದ ವೇಳೆ ಫಲಿತಾಂಶ ಸ್ಪಷ್ಟವಾಗಲಿದೆ. ಚುನಾವಣೋತ್ತರ ಸಮೀಕ್ಷೆಗಳು ಆಪ್‌ ಏಕಾಂಗಿಯಾಗಿ ಸರ್ಕಾರ ರಚಿಸಲಿದೆ ಎಂದು ಎಂದು ಭವಿಷ್ಯ ನುಡಿದಿವೆ.

    ಒಟ್ಟು 117 ಸ್ಥಾನಗಳ ಪೈಕಿ ಬಹುಮತಕ್ಕೆ 59 ಅಗತ್ಯವಿದೆ. 2017ರ ಫಲಿತಾಂಶದಲ್ಲಿ ಕಾಂಗ್ರೆಸ್ 77, ಆಪ್ 20, ಎಸ್‍ಎಡಿ+ ಬಿಜೆಪಿ 18, ಇತರರು 02 ಸ್ಥಾನವನ್ನು ಗೆದ್ದಿದ್ದರು.

  • ಪಂಜಾಬ್‍ನಲ್ಲಿ ಆಪ್‍ಗೆ ಸಿಗುತ್ತಾ ಅಧಿಕಾರ..?- ಉತ್ತರಾಖಂಡ್, ಮಣಿಪುರ ಕತೆಯೇನು..?

    ಪಂಜಾಬ್‍ನಲ್ಲಿ ಆಪ್‍ಗೆ ಸಿಗುತ್ತಾ ಅಧಿಕಾರ..?- ಉತ್ತರಾಖಂಡ್, ಮಣಿಪುರ ಕತೆಯೇನು..?

    ಚಂಡೀಗಢ: ಪಂಜಾಬ್‍ನಲ್ಲಿ ಆಮ್ ಆದ್ಮಿ (Aam Aadmi) ಪಕ್ಷ ಅಧಿಕಾರಕ್ಕೆ ಏರಲಿದೆ, ಕಾಂಗ್ರೆಸ್ (Congress) ಧೂಳೀಪಟವಾಗಲಿದೆ ಎಂದು ಎಲ್ಲಾ ಎಕ್ಸಿಟ್ ಪೋಲ್‍ (Exit Poll) ಗಳು ಹೇಳಿವೆ. ಆದರೆ ಕಾಂಗ್ರೆಸ್ ವಿಶ್ವಾಸ ಕಳೆದುಕೊಂಡಂತೆ ಕಾಣುತ್ತಿಲ್ಲ. 2017ರಲ್ಲಿಯೂ ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದು ಕೂಡ ಎಎಪಿ (AAP) ಬರುತ್ತೆ ಎಂದು. ಆದರೆ ಗೆದ್ದಿದ್ದು ಮಾತ್ರ ಕಾಂಗ್ರೆಸ್ ಆಗಿತ್ತು. ಹೀಗಾಗಿ ಈ ಬಾರಿಯೂ ಅದೇ ಮ್ಯಾಜಿಕ್ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ.

    Exit Poll- ಪಂಜಾಬ್‍ನಲ್ಲಿ ಆಪ್ ಸರ್ಕಾರ 
    ಪೋಲ್ ಆಫ್ ದಿ ಪೋಲ್ಸ್ ಪ್ರಕಾರ ಆಪ್‍ಗೆ ಸ್ಪಷ್ಟ ಬಹುಮತ ಬರುತ್ತದೆ. ಸರ್ವೇ ಪ್ರಕಾರ ಆಪ್- 68, ಕಾಂಗ್ರೆಸ್ 28 ಸ್ಥಾನ ಸಿಗಲಿದ್ದು, ಅಕಾಲಿದಳ 19, ಬಿಜೆಪಿ (BJP)ಗೆ 4 ಸ್ಥಾನ ಸಾಧ್ಯತೆ ಇದೆ. ಕಾಂಗ್ರೆಸ್ ಒಳಜಗಳದಿಂದ ಅಧಿಕಾರ ನಷ್ಟವಾಗಬಹುದು. ಇಲ್ಲಿ ಬಿಜೆಪಿಗೆ ಕ್ಯಾಪ್ಟನ್ ಮೈತ್ರಿ ವರ್ಕೌಟ್ ಆಗಿಲ್ಲ. ಅತಂತ್ರವಾದಲ್ಲಿ ಅಕಾಲಿಗಳ ಜೊತೆ ಆಪ್ ಮೈತ್ರಿ ಸಾಧ್ಯತೆ ಇದೆ. ಇದನ್ನೂ ಓದಿ: ಗುರುವಾರ ಪಂಚರಾಜ್ಯ ಚುನಾವಣಾ ಫಲಿತಾಂಶ- ಯುಪಿಯಲ್ಲಿ ಯಾರಿಗೆ ಒಲಿಯುತ್ತೆ ಅದೃಷ್ಟ..?

    ಒಟ್ಟು ಸ್ಥಾನಗಳು 117, ಬಹುಮತಕ್ಕೆ 59
    ಇಂಡಿಯಾ ಟುಡೇ:
    ಆಪ್‌ 76-90, ಕಾಂಗ್ರೆಸ್‌ 19-31, ಅಕಾಲಿ ದಳ 7-11, ಬಿಜೆಪಿ + 1-4, ಇತರರು 01

    ರಿಪಬ್ಲಿಕ್‌:
    ಆಪ್‌ 62-70, ಕಾಂಗ್ರೆಸ್‌ 23-31, ಅಕಾಲಿ ದಳ 16-24, ಬಿಜೆಪಿ+ 1-3,ಇತರರು 1-3

    ಟೈಮ್ಸ್‌ ನೌ:
    ಆಪ್‌ 70, ಕಾಂಗ್ರೆಸ್‌ 22, ಅಕಾಲಿ ದಳ 19, ಬಿಜೆಪಿ 05, ಇತರರು 0-1

    ಟುಡೇಸ್ ಚಾಣಕ್ಯ
    ಆಪ್‌ 100, ಕಾಂಗ್ರೆಸ್‌ 10, ಅಕಾಲಿ ದಳ 06, ಬಿಜೆಪಿ 01, ಇತರರು 00

    ಜನ ಕೀ ಬಾತ್‌
    ಆಪ್‌ 72, ಕಾಂಗ್ರೆಸ್‌ 24, ಅಕಾಲಿ ದಳ 15, ಬಿಜೆಪಿ + 05, ಇತರರು 01

    2017ರ ಫಲಿತಾಂಶ:
    ಕಾಂಗ್ರೆಸ್ 77, ಆಪ್ 20, ಎಸ್‍ಎಡಿ+ ಬಿಜೆಪಿ  18, ಇತರರು 02

    ಉತ್ತರಾಖಂಡ್ ಮತ್ತು ಮಣಿಪುರದ ಕತೆ ಏನು ಎಂಬುದನ್ನು ಸಂಕ್ಷಿಪ್ತವಾಗಿ ನೋಡೋದಾದ್ರೆ
    Exit Poll- ಬಿಜೆಪಿಗೆ ‘ಮಣಿ'(60)… ಅತಂತ್ರ ‘ಖಂಡ`!(70)
    ಪೋಲ್ ಆಫ್ ದಿ ಪೋಲ್ಸ್ ಪ್ರಕಾರ ಮಣಿಪುರದಲ್ಲಿ ಬಿಜೆಪಿ ಅಧಿಕಾರಕ್ಕೇರುವ ಸಾಧ್ಯತೆ ಇದೆ. ಬಿಜೆಪಿ- 30, ಕಾಂಗ್ರೆಸ್- 13, ಇತರರಿಗೆ 17 ಸ್ಥಾನಗಳು ಬರಬಹುದು. ಅತಂತ್ರವಾದಲ್ಲಿ ಪ್ರಾದೇಶಿಕ ಪಕ್ಷಗಳ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವ ಸಂಭವವೂ ಇದೆ.

    ಒಟ್ಟು ಸ್ಥಾನಗಳು 70, ಬಹುಮತಕ್ಕೆ 36
    ಇಂಡಿಯಾ ಟುಡೇ
    ಬಿಜೆಪಿ + 41, ಕಾಂಗ್ರೆಸ್‌ 25, ಆಪ್ 0, ಬಿಎಸ್‌ಪಿ 3, ಇತರರು 4

    ರಿಪಬ್ಲಿಕ್‌
    ಬಿಜೆಪಿ+ 35-39, ಕಾಂಗ್ರೆಸ್‌ 28-24, ಆಪ್‌ 0-3, ಬಿಎಸ್‌ಪಿ 0, ಇತರರು 0

    ಟೈಮ್ಸ್‌ ನೌ
    ಬಿಜೆಪಿ+ 37, ಕಾಂಗ್ರೆಸ್‌ 31, ಆಪ್‌ 01, ಬಿಎಸ್‌ಪಿ, ಇತರರು 0

    ಟುಡೇಸ್‌ ಚಾಣಕ್ಯ
    ಬಿಜೆಪಿ 43, ಕಾಂಗ್ರೆಸ್‌ 24, ಇತರರು 3

    ಜನ ಕೀ ಬಾತ್‌
    ಬಿಜೆಪಿ 32 -41, ಕಾಂಗ್ರೆಸ್‌ 27-35, ಆಪ್‌ 0-1, ಇತರರು 0

    ಒಟ್ಟು ಸ್ಥಾನ 70 ಬಹುಮತಕ್ಕೆ 36
    2017ರ ಫಲಿತಾಂಶ ಬಿಜೆಪಿ 57, ಕಾಂಗ್ರೆಸ್ 11, ಇತರರು 2

    ಪೋಲ್ ಆಫ್ ದಿ ಪೋಲ್ಸ್ ಪ್ರಕಾರ ಉತ್ತರಾಖಂಡ (Uttarakhand) ಅತಂತ್ರವಾಗಲಿದೆ. ಸರ್ವೇ ಪ್ರಕಾರ ಬಿಜೆಪಿ 35, ಕಾಂಗ್ರೆಸ್ 32, ಎಎಪಿ 1, ಇತರೆ 2 ಸ್ಥಾನಗಳು ಬರಲಿದೆ. ಸಮೀಕ್ಷೆ ನಿಜವಾದ್ರೆ ಎರಡೂ ಪಕ್ಷಗಳಿಗೂ ಸರ್ಕಾರ ರಚನೆ ಸಮಾನ ಅವಕಾಶ ಇರಲಿದೆ. ಇಲ್ಲಿಯೂ ಕುದುರೆ ವ್ಯಾಪಾರ ಸಾಧ್ಯತೆ, ಕಾಂಗ್ರೆಸ್-ಬಿಜೆಪಿ ರಣತಂತ್ರ ಹೂಡುವ ಸಾಧ್ಯತೆಗಳಿವೆ.

    ಒಟ್ಟು ಸ್ಥಾನಗಳು 60, ಬಹುಮತಕ್ಕೆ 31
    ಇಂಡಿಯಾ ಟುಡೇ
    ಬಿಜೆಪಿ 33-43, ಕಾಂಗ್ರೆಸ್‌ 4-8, ಎನ್‌ಪಿಎಫ್‌ 0, ಎನ್‌ಪಿಪಿ 4-8, ಇತರರು 6-15

    ರಿಪಬ್ಲಿಕ್‌
    ಬಿಜೆಪಿ 27-31, ಕಾಂಗ್ರೆಸ್‌ 11-17, ಎನ್‌ಪಿಎಫ್‌ 6-10, ಎನ್‌ಪಿಪಿ 2-6, ಇತರರು 3-7

    ಟೈಮ್ಸ್‌ ನೌ
    ಬಿಜೆಪಿ 32-38, ಕಾಂಗ್ರೆಸ್‌ 12-17, ಎನ್‌ಪಿಎಫ್‌ 3-5, ಎನ್‌ಪಿಪಿ 2-5, ಇತರರು 0

    ಜನಕೀ ಬಾತ್‌
    ಬಿಜೆಪಿ 23-28, ಕಾಂಗ್ರೆಸ್‌ 14-10, ಎನ್‌ಪಿಎಫ್‌ 8-5, ಎನ್‌ಪಿಪಿ 7-8, ಇತರರು 0

    2017ರ ಫಲಿತಾಂಶ
    ಬಿಜೆಪಿ 21, ಕಾಂಗ್ರೆಸ್ 28, ಇತರರು 11