Tag: punjab

  • ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಉಚಿತ ಶಿಕ್ಷಣ, ಆರೋಗ್ಯ ಸೌಲಭ್ಯ: ಚರಣ್‍ಜಿತ್ ಸಿಂಗ್ ಚನ್ನಿ

    ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಉಚಿತ ಶಿಕ್ಷಣ, ಆರೋಗ್ಯ ಸೌಲಭ್ಯ: ಚರಣ್‍ಜಿತ್ ಸಿಂಗ್ ಚನ್ನಿ

    ಚಂಡೀಗಢ: ರಾಜ್ಯದಲ್ಲಿ ಚುನಾವಣೆಗೆ ಇನ್ನೇನು ಎರಡು ದಿನಗಳಷ್ಟೇ ಬಾಕಿ ಇದೆ. ಈ ನಡುವೆ ಪಂಜಾಬ್‍ನಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಎಲ್ಲರಿಗೂ ಉಚಿತ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದಾಗಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಭರವಸೆ ನೀಡಿದ್ದಾರೆ.

    ಇದೇ ಫೆಬ್ರವರಿ 20 ರಂದು ಪಂಜಾಬ್ ವಿಧಾನಸಭೆ ಚುನಾವಣೆಗೆ ಇದ್ದು, ರೂಪನಗರದಲ್ಲಿ ರ್‍ಯಾಲಿ ನಡೆಸಿ ಇಂದು ಮಾತನಾಡಿದ ಅವರು, ನಾವು ರಾಜ್ಯದಲ್ಲಿ ಉಚಿತ ಶಿಕ್ಷಣ, ಆರೋಗ್ಯ ಸೌಲಭ್ಯಗಳನ್ನು ಒದಗಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಲಾಲೂ ಪ್ರಸಾದ್ ಯಾದವ್ ಕಿರುಕುಳ ಎದುರಿಸುತ್ತಿದ್ದಾರೆ: ಬಿಜೆಪಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

    ಈ ವಾರದ ಆರಂಭದಲ್ಲಿ ಶಿಕ್ಷಣ ಮತ್ತು ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉಚಿತವಾಗಿ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪಂಜಾಬ್ ಜನತೆಗೆ 1 ಲಕ್ಷ ಉದ್ಯೋಗ, ಆರು ತಿಂಗಳಲ್ಲಿ ಬಡವರಿಗೆ ವಸತಿ ಕಲ್ಪಿಸುವ ಮತ್ತು ಸಣ್ಣ ಉದ್ಯಮಿಗಳಿಗೂ ತೆರಿಗೆ ರಿಯಾಯಿತಿ ನೀಡುತ್ತೇವೆ ಎಂದು ಭರವಸೆ ನೀಡಿದ್ದರು.

    ಅಟ್ಟ-ದಾಲ್ (ಹಿಟ್ಟು-ಮಸೂರ) ಹೊಟ್ಟೆಯನ್ನು ಮಾತ್ರ ತುಂಬುತ್ತದೆ. ಆದರೆ ಪಂಜಾಬಿನ ಅಭಿವೃದ್ಧಿಗೆ ಶಿಕ್ಷಣ ಬಹಳ ಮುಖ್ಯ. ಖಾಸಗಿ ಸಂಸ್ಥೆಗಳಲ್ಲಿ ಓದುವುದು ತುಂಬಾ ದುಬಾರಿಯಾಗಿದೆ. ನಮ್ಮ ಪೋಷಕರು ತುಂಬಾ ಕಷ್ಟಪಟ್ಟು ಕೆಲಸ ಮಾಡಿದ್ದರಿಂದ ನಾವು ವಿದ್ಯಾವಂತರಾಗಿದ್ದೇವೆ. ಹಾಗಾಗಿ ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣವನ್ನು ಒದಗಿಸಲು ನಾವು ನಿರ್ಧರಿಸಿದ್ದೇವೆ. ಚಮಕೌರ್ ಸಾಹಿಬ್‍ನಲ್ಲಿ 500 ಕೋಟಿ ರೂಪಾಯಿ ವೆಚ್ಚದಲ್ಲಿ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

    ಚುನಾವಣಾ ಆಯೋಗದ ಹಿಂದಿನ ಘೋಷಣೆಯಂತೆ ಫೆಬ್ರವರಿ 20 ರಂದು ಪಂಜಾಬ್‍ನಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ ಮತ್ತು ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ಬಹುಕೋಟಿ ಮೇವು ಹಗರಣ, ಲಾಲೂ ಪ್ರಸಾದ್ ಯಾದವ್‌ ದೋಷಿ – CBI ಕೋರ್ಟ್‌

  • ಆಪ್ ನಾಯಕರನ್ನು ಹೊರಹಾಕಿ ಎಂಬ ಹೇಳಿಕೆಯನ್ನು ತಿರುಚಲಾಗಿದೆ: ಚನ್ನಿ ಸ್ಪಷ್ಟನೆ

    ಆಪ್ ನಾಯಕರನ್ನು ಹೊರಹಾಕಿ ಎಂಬ ಹೇಳಿಕೆಯನ್ನು ತಿರುಚಲಾಗಿದೆ: ಚನ್ನಿ ಸ್ಪಷ್ಟನೆ

    ಚಂಡೀಗಢ: ಉತ್ತರಪ್ರದೇಶ ಹಾಗೂ ಬಿಹಾರದ ಜನರನ್ನು ಪಂಜಾಬ್‍ನಿಂದ ಹೊರಹಾಕಿ ಎಂಬ ವಿವಾದಾತ್ಮಕ ಹೇಳಿಕೆಗೆ ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಸ್ಪಷ್ಟನೆ ನೀಡಿದ್ದು, ತಮ್ಮ ಹೇಳಿಕೆಯನ್ನು ತಿರುಚಲಾಗಿದೆ ಎಂದು ಕಿಡಿಕಾರಿದರು.

    ಆಮ್ ಆದ್ಮಿ ಪಕ್ಷದ ನಾಯಕರಾದ ದುರ್ಗೇಶ್ ಪಾಠಕ್, ಸಂಜಯ್ ಸಿಂಗ್ ಮತ್ತು ಅರವಿಂದ್ ಕೇಜ್ರಿವಾಲ್ ಅವರನ್ನು ಗುರಿಪಡಿಸಿ ಈ ಹೇಳಿಕೆಯನ್ನು ನೀಡಿದ್ದೇನೆ. ಆದರೆ ನಿನ್ನೆಯಿಂದ ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಪಂಜಾಬ್‍ನ ಪ್ರಗತಿಗಾಗಿ ತಮ್ಮ ರಕ್ತ ಮತ್ತು ಬೆವರು ಸುರಿಸಿರುವವರ ಜೊತೆಗೆ ನಾವು ಪ್ರೀತಿಯ ಬಾಂಧವ್ಯವನ್ನು ಹೊಂದಿದ್ದೇವೆ ಎಂದರು.

    ಪ್ರಿಯಾಂಕಾ ಗಾಂಧಿ ಪಂಜಾಬಿನ ಸೊಸೆ. ಉತ್ತರ ಪ್ರದೇಶ, ಬಿಹಾರ, ದೆಹಲಿ ಜನರು ಇಲ್ಲಿ ಬಂದು ಆಳಲು ಸಾಧ್ಯವಿಲ್ಲ. ನಾವು ಉತ್ತರಪ್ರದೇಶ ಜನರಿಂದ ಪಂಜಾಬ್‍ನ ದಾರಿ ತಪ್ಪಿಸಲು ಬಿಡುವುದಿಲ್ಲ ಎಂದು ನಿನ್ನೆ ನಡೆದ ಪ್ರಚಾರದ ಸಂದರ್ಭದಲ್ಲಿ ಹೇಳಿದ್ದರು. ಪಕ್ಕದಲ್ಲಿದ್ದ ಪ್ರಿಯಾಂಕಾ ಗಾಂಧಿ ಚಪ್ಪಾಳೆ ತಟ್ಟಿ ಮುಗುಳ್ನಕ್ಕಿದ್ದರು. ಇದನ್ನೂ ಓದಿ: ಮತಕ್ಕಾಗಿ ಕಾಂಗ್ರೆಸ್, ಪಂಜಾಬ್ ಸಿಎಂ ದೇಶವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ: ಯೋಗಿ ಆದಿತ್ಯನಾಥ್

    ಈ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಪ್ರಧಾನಿ ಮೋದಿ, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸೇರಿದಂತೆ ಬಿಜೆಪಿ ನಾಯಕರು ಟೀಕೆ ಮಾಡಿದ್ದರು. ಜೊತೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಕಿಡಿಕಾರಿದ್ದರು. ಇದನ್ನೂ ಓದಿ: ಪಂಜಾಬ್‍ನಲ್ಲಿ ಬಿಹಾರದ ಜನತೆ ಎಷ್ಟಿದ್ದಾರೆ ಎನ್ನುವುದು ಕಾಂಗ್ರೆಸ್‍ಗೆ ತಿಳಿದಿದೆಯೇ: ನಿತೀಶ್ ಕುಮಾರ್ ಕಿಡಿ

  • ಪ್ರತಿಭಟನಾ ನಿರತ ರೈತರನ್ನು ಪ್ರಧಾನಿ ಒಮ್ಮೆಯೂ ಭೇಟಿಯಾಗಿಲ್ಲ: ಪ್ರಿಯಾಂಕಾ ಕಿಡಿ

    ಪ್ರತಿಭಟನಾ ನಿರತ ರೈತರನ್ನು ಪ್ರಧಾನಿ ಒಮ್ಮೆಯೂ ಭೇಟಿಯಾಗಿಲ್ಲ: ಪ್ರಿಯಾಂಕಾ ಕಿಡಿ

    ಚಂಡೀಗಢ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಭಟನಾ ನಿರತ ರೈತರನ್ನು ಒಮ್ಮೆಯೂ ಭೇಟಿಯಾಗಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಪಠಾಣ್‍ಕೋಟ್‍ನಲ್ಲಿ ರ್‍ಯಾಲಿ ನಡೆಸಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನಿನ್ನೆ ಚುನಾವಣಾ ಪ್ರಚಾರಕ್ಕಾಗಿ ಪಠಾಣ್‍ಕೋಟ್‍ಗೆ ಬಂದಿದ್ದರು. ಆದರೆ ಒಂದು ವರ್ಷದಿಂದ ಪ್ರತಿಭಟನೆ ಮಾಡಿದ ರೈತರನ್ನು ಭೇಟಿಯಾಗಿಲ್ಲ. ರೈತರನ್ನು ಭೇಟಿ ಮಾಡಲು ತಮ್ಮ ನಿವಾಸದಿಂದ ಕೇವಲ 5-6 ಕಿಮೀ ಪ್ರಯಾಣಿಸಲು ಅವರಿಗೆ ಸಾಧ್ಯವಾಗಲಿಲ್ಲ. ಯುಎಸ್, ಕೆನಡಾಗೆ ಭೇಟಿ ನೀಡುತ್ತಾರೆ. ವಿಶ್ವಾದ್ಯಂತ ಪ್ರವಾಸ ಮಾಡುತ್ತಾರೆ ಮತ್ತು 16,000 ಕೋಟಿ ಮೌಲ್ಯದ ಎರಡು ಹೆಲಿಕಾಪ್ಟರ್‍ಗಳನ್ನು ತಮಗಾಗಿ ಖರೀದಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಕಬ್ಬು ಬೆಳೆಗಾರರಿಗೆ 14,000 ಕೋಟಿ ರೂ. ಬಾಕಿ ಮೊತ್ತವನ್ನು ಪಾವತಿಸಿಲ್ಲ. ಒಂದು ಬಾರಿಯೂ ಅವರು ಧರಣಿ ನಿರತ ರೈತರನ್ನು ಭೇಟಿಯಾಗಿಲ್ಲ. ಬದಲಿಗೆ ಅವರ ಮಂತ್ರಿಯ ಮಗ ತನ್ನ ವಾಹನದಿಂದ ಆರು ರೈತರನ್ನು ಕೊಂದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದಾರೆ. ಇದನ್ನೂ ಓದಿ: ಚುನಾವಣೆ ಪ್ರಚಾರದ ವೇಳೆ DMK ಅಭ್ಯರ್ಥಿ ಹೃದಯಾಘಾತದಿಂದ ಸಾವು

    ಪಂಜಾಬ್‍ನಲ್ಲಿ ಫೆಬ್ರವರಿ 20 ರಂದು ಮೊದಲ ಹಂತದ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಭಾರತೀಯ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಫಲಿತಾಂಶಗಳನ್ನು ಪ್ರಕಟಿಸಲಾಗುವುದು.  ಇದನ್ನೂ ಓದಿ: ಮತಕ್ಕಾಗಿ ಕಾಂಗ್ರೆಸ್, ಪಂಜಾಬ್ ಸಿಎಂ ದೇಶವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ: ಯೋಗಿ ಆದಿತ್ಯನಾಥ್

  • ವಿಭಜಕ ಮನಸ್ಥಿತಿಯ ಜನರನ್ನು ಪಂಜಾಬ್‍ನಲ್ಲಿ ಆಳಲು ಬಿಡಬೇಡಿ: ಮೋದಿ

    ವಿಭಜಕ ಮನಸ್ಥಿತಿಯ ಜನರನ್ನು ಪಂಜಾಬ್‍ನಲ್ಲಿ ಆಳಲು ಬಿಡಬೇಡಿ: ಮೋದಿ

    ಚಂಡೀಗಢ: ವಿಭಜಕ ಮನಸ್ಥಿತಿಯ ಜನರಿಗೆ ಒಂದು ಕ್ಷಣವೂ ಪಂಜಾಬ್ ಅನ್ನು ಆಳಲು ಬಿಡಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

    ಪಂಜಾಬ್‍ನಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಮಾತನಾಡಿದ ಅವರು, ಉತ್ತರಪ್ರದೇಶ ಹಾಗೂ ಬಿಹಾರದ ಜನರನ್ನು ಪಂಜಾಬ್‍ನಿಂದ ಹೊರಹಾಕಿ ಎಂದ ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರ ಹೇಳಿಕೆಗೆ ದಿಲ್ಲಿಯ ಕುಟುಂಬವು ಚಪ್ಪಾಳೆ ತಟ್ಟಿದ್ದನ್ನು ಇಡೀ ದೇಶವೇ ನೋಡಿದೆ ಎಂದು ವಾಗ್ದಾಳಿ ನಡೆಸಿದರು.

    ಗುರು ಗೋವಿಂದ್ ಸಿಂಗ್ ಹುಟ್ಟಿದ್ದು ಬಿಹಾರದ ಪಾಟ್ನಾ ಸಾಹಿಬ್‍ನಲ್ಲಿ. ಗುರು ಗೋವಿಂದ್ ಸಿಂಗ್ ಅವರನ್ನು ಪಂಜಾಬ್‍ನಿಂದ ಹೊರಹಾಕುತ್ತೀರಾ? ಎಂದ ಅವರು, ನಿನ್ನೆ ಗುರು ರವಿದಾಸ್ ಜನ್ಮ ವಾರ್ಷಿಕೋತ್ಸವಕ್ಕೆ ವಿವಿಧ ರಾಜಕೀಯ ನಾಯಕರು ದೇವಾಲಯಗಳಿಗೆ ಭೇಟಿ ನೀಡುದ್ದಾರೆ. ನಿನ್ನೆ ನಾವು ಸಂತ ರವಿದಾಸ್ ಜಯಂತಿ ಆಚರಿಸಿದ್ದೆವು. ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಜನಿಸಿದ್ದರು. ನೀವು ಸಂತ ರವಿದಾಸ್ ಅವರನ್ನು ಪಂಜಾಬ್‍ನಿಂದ ತೆಗೆದುಹಾಕುತ್ತೀರಾ ಎಂದು ಕಿಡಿಕಾರಿದರು. ಇದನ್ನೂ ಓದಿ: ಮತಕ್ಕಾಗಿ ಕಾಂಗ್ರೆಸ್, ಪಂಜಾಬ್ ಸಿಎಂ ದೇಶವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ: ಯೋಗಿ ಆದಿತ್ಯನಾಥ್

    ನಿನ್ನೆ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಉತ್ತರಪ್ರದೇಶ, ಬಿಹಾರದ ಜನರನ್ನು ಪಂಜಾಬ್ ಪ್ರವೇಶಿಸಲು ಬಿಡಬೇಡಿ ಎಂದು ಹೇಳಿದ್ದರು. ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ನಗುತ್ತಾ ಚಪ್ಪಾಳೆ ತಟ್ಟಿ ಹೇಳಿಕೆಯನ್ನು ಬೆಂಬಲಿಸಿದ್ದರು. ಇದನ್ನೂ ಓದಿ: ಪಂಜಾಬ್‍ನಲ್ಲಿ ಬಿಹಾರದ ಜನತೆ ಎಷ್ಟಿದ್ದಾರೆ ಎನ್ನುವುದು ಕಾಂಗ್ರೆಸ್‍ಗೆ ತಿಳಿದಿದೆಯೇ: ನಿತೀಶ್ ಕುಮಾರ್ ಕಿಡಿ

    ಪಂಜಾಬ್‍ನಲ್ಲಿ ಫೆಬ್ರವರಿ 20 ರಂದು 117 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಹಾಗೂ ಆಪ್ ಪಕ್ಷಗಳು ಪ್ರಬಲ ಸ್ಪರ್ಧೆಯಲ್ಲಿದೆ.

  • ಭಗವಂತ್ ಮಾನ್ ಒಬ್ಬ ಕುಡುಕ, ಅನಕ್ಷರಸ್ಥ: ಚರಣ್‍ಜಿತ್ ಸಿಂಗ್ ಚನ್ನಿ

    ಭಗವಂತ್ ಮಾನ್ ಒಬ್ಬ ಕುಡುಕ, ಅನಕ್ಷರಸ್ಥ: ಚರಣ್‍ಜಿತ್ ಸಿಂಗ್ ಚನ್ನಿ

    ಚಂಡೀಗಢ: ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಒಬ್ಬ ಕುಡುಕ ಮತ್ತು ಅನಕ್ಷರಸ್ಥ ವ್ಯಕ್ತಿ ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ವಾಗ್ದಾಳಿ ನಡೆಸಿದ್ದಾರೆ.

     

    ಬುಧವಾರ ಬಟಿಂಡಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಗವಂತ್ ಮಾನ್ ಕುಡುಕ ಮತ್ತು ಅನಕ್ಷರಸ್ಥ ವ್ಯಕ್ತಿ. ಅವರು ಮೂರು ವರ್ಷಗಳ ಕಾಲ 12 ನೇ ತರಗತಿಯನ್ನು ಓದಿ ಪಾಸಾಗಿದ್ದಾರೆ. ಅಂತಹ ವ್ಯಕ್ತಿಗೆ ಯಾರಾದರೂ ಪಂಜಾಬ್‍ನ ಅಧಿಕಾರವನ್ನು ಹೇಗೆ ನೀಡಲು ಸಾಧ್ಯ ಎಂದು ಎಎಪಿಯನ್ನು ಪ್ರಶ್ನಿಸಿದ್ದಾರೆ.  ಇದನ್ನೂ ಓದಿ: ಏರ್ ಇಂಡಿಯಾವನ್ನು ವಿಶ್ವ ದರ್ಜೆಯ ವಿಮಾನಯಾನ ಕಂಪನಿಯನ್ನಾಗಿ ನಿರ್ಮಿಸಿ – ಉದ್ಯೋಗಿಗಳ ಜೊತೆ ಚಂದ್ರಶೇಖರ್ ಮಾತು

    ಎಎಪಿ ರಾಷ್ಟ್ರೀಯ ಸಂಚಾಲಕರಾಗಿರುವ ಅರವಿಂದ್ ಕೇಜ್ರಿವಾಲ್ ಪಂಜಾಬ್ ಅನ್ನು ಆತನ ಕೈಗೆ ನೀಡಲು ಹೇಗೆ ನಿರ್ಧರಿಸಿದ್ದಾರೆ? ಎಂದು ಕೇಳಿದ್ದಾರೆ. ಬಟಿಂಡಾ ನಗರ ಕ್ಷೇತ್ರದ ಅಭ್ಯರ್ಥಿ ಮನ್‍ಪ್ರೀತ್ ಸಿಂಗ್ ಬಾದಲ್ ಪರವಾಗಿ ಚರಣ್‍ಜಿತ್ ಸಿಂಗ್ ಚನ್ನಿ ಅವರು ರೋಡ್‍ಶೋ ನಡೆಸಿ ಚುನಾವಣಾ ಪ್ರಚಾರ ನಡೆಸಿದರು. ಫೆಬ್ರವರಿ 20 ರಂದು ಪಂಜಾಬ್‍ನಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತಗಳ ಎಣಿಕೆ ನಡೆಯಲಿದೆ. ಇದನ್ನೂ ಓದಿ: ಫೇಸ್‌ಬುಕ್ ಉದ್ಯೋಗಿಗಳು ಇನ್ನು ಮುಂದೆ ಮೆಟಾಮೇಟ್ಸ್: ಜುಕರ್‌ಬರ್ಗ್

  • ಯುಪಿ, ಬಿಹಾರದ ಜನತೆಗೆ ಪಂಜಾಬ್ ಪ್ರವೇಶಿಸಲು ಬಿಡಬೇಡಿ: ಚನ್ನಿ ವಿರುದ್ಧ ಬಿಜೆಪಿ, ಆಪ್ ಕೆಂಡ

    ಯುಪಿ, ಬಿಹಾರದ ಜನತೆಗೆ ಪಂಜಾಬ್ ಪ್ರವೇಶಿಸಲು ಬಿಡಬೇಡಿ: ಚನ್ನಿ ವಿರುದ್ಧ ಬಿಜೆಪಿ, ಆಪ್ ಕೆಂಡ

    ಚಂಡೀಗಢ: ಉತ್ತರಪ್ರದೇಶ, ಬಿಹಾರದವರನ್ನು ಪಂಜಾಬ್‍ಗೆ ಪ್ರವೇಶಿಸಲು ಬಿಡಬೇಡಿ ಎಂಬ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಹೇಳಿಕೆಗೆ ಬಿಜೆಪಿ ಹಾಗೂ ದೆಹಲಿ ಮುಖ್ಯಮಂತ್ರಿ ಕಿಡಿಕಾರಿದ್ದಾರೆ.

    ಉತ್ತರಪ್ರದೇಶ ಮತ್ತು ಬಿಹಾರದ ಜನರನ್ನು ಪಂಜಾಬ್‍ನ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವಮಾನಿಸಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.

    ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರೂ ಚನ್ನಿ ಹೇಳಿಕೆಯನ್ನು ಟೀಕಿಸಿದ್ದಾರೆ. ಯಾವುದೇ ವ್ಯಕ್ತಿ ಅಥವಾ ಯಾವುದೇ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಕಾಮೆಂಟ್ ಮಾಡುವುದನ್ನು ಖಂಡಿಸುತ್ತೇನೆ. ಪ್ರಿಯಾಂಕಾ ಗಾಂಧಿ ಕೂಡ ಉತ್ತರ ಪ್ರದೇಶಕ್ಕೆ ಸೇರಿದವರು. ಆದ್ದರಿಂದ ಅವರನ್ನು ಬರಲು ಬಿಡಬಾರದು ಎಂದು ವಾಗ್ದಾಳಿ ನಡೆಸಿದರು.

    ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರು ಉತ್ತರಪ್ರದೇಶ, ಬಿಹಾರದ ಜನರನ್ನು ಪಂಜಾಬ್ ಪ್ರವೇಶಿಸಲು ಬಿಡಬೇಡಿ ಎಂದು ಹೇಳಿದ್ದರು. ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ನಗುತ್ತಾ ಚಪ್ಪಾಳೆ ತಟ್ಟಿದ್ದರು. ಇದನ್ನೂ ಓದಿ: NSA ಅಜಿತ್ ದೋವಲ್ ನಿವಾಸಕ್ಕೆ ಅಕ್ರಮ ಪ್ರವೇಶ – ವ್ಯಕ್ತಿ ಬಂಧನ

    ಪಂಜಾಬ್‍ನಲ್ಲಿ ಫೆಬ್ರವರಿ 20 ರಂದು 117 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಪಂಜಾಬ್ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತವಾಗಿ ಚರಣ್‍ಜಿತ್ ಸಿಂಗ್ ಚನ್ನಿಯನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಈಗಾಗಲೇ ಘೋಷಿಸಿದೆ. ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಚನ್ನಿ ಅವರ ನಾಮನಿರ್ದೇಶನದೊಂದಿಗೆ, ಪಂಜಾಬ್‍ನ ದಲಿತ ಮತದಾರರನ್ನು ಗೆಲ್ಲಲು ಕಾಂಗ್ರೆಸ್ ಯೋಚಿಸುತ್ತಿದೆ. ಪಂಜಾಬ್‍ನ ಜನಸಂಖ್ಯೆಯ ಶೇಕಡಾ 32ಕ್ಕಿಂತ ಹೆಚ್ಚು ದಲಿತರು ಇದ್ದಾರೆ. ಪಂಜಾಬ್‍ನಲ್ಲಿ ದಲಿತ ಸಮುದಾಯದಿಂದ ಚನ್ನಿ ಮೊದಲ ಮುಖ್ಯಮಂತ್ರಿಯಾಗಿದ್ದಾರೆ. ಇದನ್ನೂ ಓದಿ: ತಾಜ್ ಮಹಲ್‌ನಲ್ಲಿ ಹನುಮಾನ್ ಚಾಲೀಸಾ – ಪ್ರತಿಭಟನಕಾರರನ್ನು ತಡೆದ ಪೊಲೀಸರು

  • ನವಜೋತ್ ಸಿಂಗ್ ಸಿಧು ನನ್ನ ಸಹೋದರನಿದ್ದಂತೆ: ಚರಣ್‍ಜಿತ್ ಸಿಂಗ್ ಚನ್ನಿ

    ನವಜೋತ್ ಸಿಂಗ್ ಸಿಧು ನನ್ನ ಸಹೋದರನಿದ್ದಂತೆ: ಚರಣ್‍ಜಿತ್ ಸಿಂಗ್ ಚನ್ನಿ

    ಚಂಡೀಗಢ: ನವಜೋತ್ ಸಿಂಗ್ ಸಿಧು ಅವರು ತಮ್ಮ ಸಹೋದರನಿದ್ದಂತೆ ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಹೇಳಿದ್ದಾರೆ. ಜೊತೆಗೆ ಕಾಂಗ್ರೆಸ್‍ಗೆ ಪ್ರತಿಯೊಬ್ಬ ಕಾರ್ಯಕರ್ತನೂ ಮುಖ್ಯ ಎಂದು ಹೇಳುವ ಮೂಲಕ ಕಾಂಗ್ರೆಸ್‍ನಲ್ಲಿನ ಆಂತರಿಕ ಅಧಿಕಾರದ ಕಲಹದ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

    ಪಂಜಾಬ್‍ನಲ್ಲಿ ಮಾತನಾಡಿದ ಅವರು, ನವಜೋತ್ ಸಿಂಗ್ ಸಿಧು ನಮ್ಮೊಂದಿಗಿದ್ದಾರೆ. ಸಿಧು ಅವರು ರಾಹುಲ್ ಗಾಂಧಿ ಜೊತೆಯಲ್ಲಿದ್ದಾರೆ. ನಮಲ್ಲಿ ಅನೇಕ ನಾಯಕರಿದ್ದಾರೆ. ಸಿಧು ನನ್ನ ಸಹೋದರ ಮತ್ತು ನಮ್ಮ ಪಕ್ಷದ ಮುಖ್ಯಸ್ಥ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ, ಚೀನಾ ಏಜೆಂಟ್‌ ಆಗಿದ್ದಾರೆ ತೆಲಂಗಾಣ ಸಿಎಂ: ಬಿಜೆಪಿ

    ಈ ತಿಂಗಳ ಆರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಕ್ಷವು ನಡೆಸಿದ ಟೆಲಿ-ವೋಟಿಂಗ್ ಬಳಿಕ ಚರಂಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದರು. ಚನ್ನಿ ಅವರು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರಿಗಿಂತ ಹೆಚ್ಚು ಮತಗಳನ್ನು ಪಡೆದಿದ್ದರು. ಪಂಜಾಬ್‍ನ ಜನಸಂಖ್ಯೆಯಲ್ಲಿ ಶೇಕಡಾ 32 ಕ್ಕಿಂತಲೂ ಹೆಚ್ಚು ಮಂದಿ ದಲಿತರಿದ್ದಾರೆ. ಪಂಜಾಬ್‍ನ ದಲಿತ ಸಮುದಾಯದಿಂದ ಮೊದಲ ಬಾರಿಗೆ ಚನ್ನಿ ಮುಖ್ಯಮಂತ್ರಿಯಾಗಿದ್ದು, ದಲಿತ ಮತದಾರರನ್ನು ಗೆಲ್ಲುವಲ್ಲಿ ಯಶಸ್ವಿಯಾದರು. ಇದನ್ನೂ ಓದಿ: ರಾಹುಲ್ ವಿರುದ್ಧ ಹಿಮಂತ ಬಿಸ್ವಾ ವಿವಾದಾತ್ಮಕ ಹೇಳಿಕೆ – ತೆಲಂಗಾಣ ಕಾಂಗ್ರೆಸ್ ನಾಯಕರಿಂದ ದೂರು

  • ಡ್ರಗ್ ಮುಕ್ತ ಪಂಜಾಬ್‍ಗೆ ಭರವಸೆ ನೀಡಿದ ಅಮಿತ್ ಶಾ

    ಡ್ರಗ್ ಮುಕ್ತ ಪಂಜಾಬ್‍ಗೆ ಭರವಸೆ ನೀಡಿದ ಅಮಿತ್ ಶಾ

    ಚಂಡೀಗಢ: ಪಂಜಾಬ್‍ನಿಂದ ಡ್ರಗ್ಸ್ ನಿರ್ಮೂಲನೆ ಮಾಡುತ್ತೇವೆ. ಡ್ರಗ್ಸ್ ಮುಕ್ತ ಪಂಜಾಬ್ ಮಾಡುವುದೇ ನಮ್ಮ ಗುರಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

    ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಹಾಗೂ ಬಿಜೆಪಿಗೆ ಅವಕಾಶ ನೀಡುವಂತೆ ಜನತೆಯನ್ನು ಒತ್ತಾಯಿಸಿದ ಅಮಿತ್ ಶಾ ಪಂಜಾಬ್ ಅನ್ನು ಡ್ರಗ್ಸ್ ಮುಕ್ತ ಮಾಡುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ರೇಡಿಯೋ ಜನರನ್ನು ಸಂಪರ್ಕಿಸುವ ಅದ್ಭುತ ಮಾಧ್ಯಮ: ನರೇಂದ್ರ ಮೋದಿ

    ಪಂಜಾಬ್‍ನಲ್ಲಿ ಸರ್ಕಾರ ರಚನೆಯಾದ ಮೇಲೆ ರಾಜ್ಯದ 4 ನಗರಗಳಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಶಾಖೆಗಳನ್ನು ಸ್ಥಾಪಿಸುತ್ತೇವೆ. ಮಾದಕ ದ್ರವ್ಯ ತಡೆಗಟ್ಟುವಿಕೆಗೆ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಕಾರ್ಯಪಡೆಯನ್ನು ರಚಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಟಾಟಾ ಸನ್ಸ್ ಗ್ರೂಪ್‌ಗೆ ಎನ್ ಚಂದ್ರಶೇಖರನ್ ಅಧ್ಯಕ್ಷರಾಗಿ ಮರು ನೇಮಕ

    ಫೆಬ್ರವರಿ 20ರಂದು ಪಂಜಾಬ್ ವಿಧಾನಸಭಾ ಚುನಾವಣೆ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. ಪಂಜಾಬ್‍ನಲ್ಲಿ 2017ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 77 ಸ್ಥಾನಗಳನ್ನು ಗೆದ್ದು, ಬಹುಮತ ಗಳಿಸಿ ಅಧಿಕಾರ ಪಡೆದುಕೊಂಡಿತ್ತು.

  • ಪ್ರಧಾನಿಗೆ ಭದ್ರತೆ ನೀಡಲು ಸಾಧ್ಯವಾಗದ ಚನ್ನಿ ಪಂಜಾಬ್‍ನ್ನು ಹೇಗೆ ಕಾಪಾಡಿಕೊಳ್ಳುವರು: ಅಮಿತ್ ಶಾ

    ಪ್ರಧಾನಿಗೆ ಭದ್ರತೆ ನೀಡಲು ಸಾಧ್ಯವಾಗದ ಚನ್ನಿ ಪಂಜಾಬ್‍ನ್ನು ಹೇಗೆ ಕಾಪಾಡಿಕೊಳ್ಳುವರು: ಅಮಿತ್ ಶಾ

    ಚಂಡೀಗಢ: ಫಿರೋಜ್‍ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸರಿಯಾದ ಭದ್ರತೆಯನ್ನು ನೀಡಲಾಗದ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರು ಪಂಜಾಬ್‍ನ್ನು ಹೇಗೆ ರಕ್ಷಣೆ ಮಾಡುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶ್ನಿಸಿದರು.

    ಲುಧಿಯಾದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ಚರಂಜಿತ್ ಚನ್ನಿ ಅವರು ಪಂಜಾಬ್‍ನಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರವನ್ನು ರಚಿಸುವ ಕನಸು ಕಾಣುತ್ತಿದ್ದಾರೆ. ಆದರೆ ಅವರು ದೇಶದ ಪ್ರಧಾನಿಗೆ ಸುರಕ್ಷಿತ ಮಾರ್ಗವನ್ನು ಒದಗಿಸಲು ವಿಫಲವಾದ ಮುಖ್ಯಮಂತ್ರಿ ಎನಿಸಿದ್ದಾರೆ. ಇಂತಹವರು ಪಂಜಾಬ್‍ಗೆ ಭದ್ರತೆಯನ್ನು ಒದಗಿಸಲು ಸಾಧ್ಯವೆ ಎಂದು ಕಿಡಿಕಾರಿದರು.

    ಕಳೆದ ತಿಂಗಳು ಪಂಜಾಬ್‍ನ ಹುಸೇನಿವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕದಿಂದ ಸುಮಾರು 30 ಕಿಮೀ ದೂರದಲ್ಲಿ ಕೆಲವು ಪ್ರತಿಭಟನಾಕಾರರು ರಸ್ತೆ ತಡೆಯಿಂದಾಗಿ 15-20 ನಿಮಿಷಗಳ ಕಾಲ ಫ್ಲೈಓವರ್‌ನಲ್ಲಿ ಪ್ರಧಾನಿ ಮೋದಿ ಅವರ ಬೆಂಗಾವಲು ಪಡೆ ಸಿಲುಕಿಕೊಂಡಿತ್ತು.

    ಇದೇ ವೇಳೆ ಪಂಜಾಬ್ ಚುನಾವಣೆಯ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಮೈತ್ರಿ ಸರ್ಕಾರ ರಚನೆಯಾದರೆ ಡ್ರಗ್ಸ್ ಸಮಸ್ಯೆಯನ್ನು ನಿವಾರಿಸಲು ಹೆಚ್ಚಿನ ಮಹತ್ವ ನೀಡುತ್ತದೆ. ಪಂಜಾಬ್‍ನಲ್ಲಿ ಸರ್ಕಾರ ರಚನೆಯಾದ ನಂತರ, ನಾವು ರಾಜ್ಯದ ನಾಲ್ಕು ನಗರಗಳಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಶಾಖೆಗಳನ್ನು ಸ್ಥಾಪಿಸುತ್ತೇವೆ. ಜೊತೆಗೆ ಮಾದಕ ದ್ರವ್ಯ ತಡೆಗೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕಾರ್ಯಪಡೆ ರಚಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮತ್ತೆ ಜಾತಿಗಣತಿ ಒಪ್ಪಿಕೊಳ್ಳುವಂತೆ ಸಿದ್ದರಾಮಯ್ಯ ಒತ್ತಾಯ

    ಫೆಬ್ರವರಿ 20ರಂದು ಪಂಜಾಬ್ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ. ರಾಜ್ಯದಲ್ಲಿ 2017ರ ವಿಧಾನಸಭಾ ಚುನಾವಣೆಯಲ್ಲಿ, ಕಾಂಗ್ರೆಸ್ 77 ಸ್ಥಾನಗಳನ್ನು ಗೆಲ್ಲುವ ಮೂಲಕ ಸಂಪೂರ್ಣ ಬಹುಮತವನ್ನು ಗಳಿಸಿತ್ತು ಮತ್ತು 10 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಎಸ್‍ಎಡಿ-ಬಿಜೆಪಿ ಸರ್ಕಾರವನ್ನು ಸೋಲಿಸಿತ್ತು. ಇದನ್ನೂ ಓದಿ: ಸ್ವಾತಂತ್ರ್ಯ ಪೂರ್ವದಿಂದಲೂ ಹಿಜಬ್‌ ಧರಿಸುತ್ತಿದ್ದಾರೆ: ಜಮೀರ್ ಅಹ್ಮದ್

  • ಚರಣ್‍ಜಿತ್ ಸಿಂಗ್ ಚನ್ನಿ ಶಾಸಕರಾಗಿಯೂ ಆಯ್ಕೆಯಾಗುವುದಿಲ್ಲ: ಅರವಿಂದ ಕೇಜ್ರಿವಾಲ್

    ಚರಣ್‍ಜಿತ್ ಸಿಂಗ್ ಚನ್ನಿ ಶಾಸಕರಾಗಿಯೂ ಆಯ್ಕೆಯಾಗುವುದಿಲ್ಲ: ಅರವಿಂದ ಕೇಜ್ರಿವಾಲ್

    ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರು ಸ್ಪರ್ಧಿಸುತ್ತಿರುವ ಎರಡೂ ಸ್ಥಾನಗಳಲ್ಲಿ ಸೋಲುತ್ತಾರೆ ಮತ್ತು ಇದು ಅವರ ಮತ್ತೊಂದು ಟೆಲಿಪೋಲ್ ಮೂಲಕ ದೃಢೀಕರಿಸಲ್ಪಟ್ಟಿದೆ. ಮೂರು ಬಾರಿ ಪುನರಾವರ್ತನೆಯಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

    ಪಂಜಾಬ್‍ನ ಅಮೃತಸರದ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಕೇಜ್ರಿವಾಲ್ ಅವರು, ಚರಣ್‍ಜಿತ್ ಸಿಂಗ್ ಚನ್ನಿ ಅವರು ಚಮ್ಕೌರ್ ಸಾಹಿಬ್ ಮತ್ತು ಭದೌರ್‌ನಿಂದ ಸ್ಪರ್ಧಿಸುತ್ತಿದ್ದಾರೆ. ನಾವು ಮೂರು ಬಾರಿ ಸಮೀಕ್ಷೆ ನಡೆಸಿದ್ದೇವೆ. ಚನ್ನಿ ಸಾಹೇಬ್ ಎರಡೂ ಸ್ಥಾನಗಳಲ್ಲಿಯೂ ಸೋಲುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ರಾಜರ ವಂಶವನ್ನು ನಾಶ ಮಾಡಲು ಹೋದ ಟಿಪ್ಪು ಸುಲ್ತಾನ್ ಹೆಸರು ರೈಲಿಗೆ ಯಾಕೆ?: ಪ್ರತಾಪ್ ಸಿಂಹ

    ಚಮ್ಕೌರ್‌ನಲ್ಲಿ ಆಮ್ ಆದ್ಮಿ ಪಕ್ಷ ಶೇ.52ರಷ್ಟು ಮತಗಳನ್ನು ಪಡೆಯಲಿದೆ. ಇದು ಭದೌರ್‌ನಲ್ಲಿ ಶೇಕಡಾ 48 ರಷ್ಟು ಮತಗಳನ್ನು ಪಡೆಯುತ್ತದೆ. ಹಾಗಾದರೆ ಚರಣ್‍ಜಿತ್ ಸಿಂಗ್ ಚನ್ನಿ ಶಾಸಕರೇ ಆಗದಿದ್ದರೆ, ಮುಖ್ಯಮಂತ್ರಿ ಹೇಗೆ ಆಗುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಎಎಪಿಗೆ ಅವಕಾಶ ನೀಡಿ, ನಾವು ಕಲ್ಯಾಣ, ಅಭಿವೃದ್ಧಿ ಕೆಲಸ ಮಾಡುತ್ತೇವೆ: ಅರವಿಂದ್ ಕೇಜ್ರಿವಾಲ್