Tag: punjab

  • ಪಂಜಾಬ್‍ನಲ್ಲಿ AAP ಅಧಿಕಾರಕ್ಕೆ ಬಂದ್ರೆ ಜನರ ಸಲಹೆ ಮೇರೆಗೆ ಬಜೆಟ್: ಅರವಿಂದ್ ಕೇಜ್ರಿವಾಲ್

    ಪಂಜಾಬ್‍ನಲ್ಲಿ AAP ಅಧಿಕಾರಕ್ಕೆ ಬಂದ್ರೆ ಜನರ ಸಲಹೆ ಮೇರೆಗೆ ಬಜೆಟ್: ಅರವಿಂದ್ ಕೇಜ್ರಿವಾಲ್

    ನವದೆಹಲಿ: ಪಂಜಾಬ್‍ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಜನ ಸಾಮಾನ್ಯರ ಸಲಹೆಗಳನ್ನು ಸ್ವೀಕರಿಸಿ ನಂತರ ರಾಜ್ಯದ ಬಜೆಟ್ ಸಿದ್ಧಪಡಿಸಲಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

    ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಉತ್ತಮ ಪರಿಹಾರ ನೀಡಲಾಗುತ್ತದೆ. ಉದಾಹರಣೆಗೆ ದೆಹಲಿಯಲ್ಲಿ ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಪಡೆದು ತಮ್ಮ ಸರ್ಕಾರ ಬಜೆಟ್ ಸಿದ್ಧಪಡಿಸುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರಾಖಂಡ ಚುನಾವಣೆ: ರಾಮನಗರದಿಂದ ಮಾಜಿ ಸಿಎಂ ಹರೀಶ್ ರಾವತ್ ಕಣಕ್ಕೆ

    ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವು ಈ ವರ್ಷದ 2022-23ರ ಬಜೆಟ್‍ಗಾಗಿ ಚರ್ಚೆಯನ್ನು ಪ್ರಾರಂಭಿಸಿದೆ. ಈ ನಿಟ್ಟಿನಲ್ಲಿ ಜನಸಾಮಾನ್ಯರು ಮತ್ತು ಉದ್ಯಮಿಗಳಿಂದ ಸಲಹೆಗಳನ್ನು ಪಡೆಯಲಾಗುತ್ತಿದೆ. ಹಾಗಾಗಿ ಪಂಜಾಬ್‍ನಲ್ಲೂ ಇದೇ ರೀತಿಯಲ್ಲಿ ಬಜೆಟ್ ಸಿದ್ಧಪಡಿಸುತ್ತೇವೆ ಎಂದು ಹೇಳಿದ್ದಾರೆ.

    ಪಂಜಾಬ್‍ನಲ್ಲಿ ಬಜೆಟ್ ಸಿದ್ಧಪಡಿಸುವ ಮುನ್ನ ಸಾಮಾನ್ಯ ಜನರು, ಅದರಲ್ಲಿಯೂ ವಿಶೇಷವಾಗಿ ವ್ಯಾಪಾರಿಗಳು, ರೈತರು, ಕೂಲಿ ಕಾರ್ಮಿಕರು, ಮಹಿಳೆಯರು, ಯುವಕರು ಮತ್ತು ಉದ್ಯೋಗಿಗಳು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳ ಅಭಿಪ್ರಾಯಗಳನ್ನು ಪಡೆಯಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಳ್ಳನೆಂದು ಆಟೋ ಚಾಲಕನನ್ನು ಹೊಡೆದು ಕೊಂದ್ರು

    ರಾಜ್ಯದ ನಿರ್ಲಕ್ಷಿತ ಮತ್ತು ವಂಚಿತ ವರ್ಗಗಳು ತಮ್ಮ ಸಮಸ್ಯೆಗಳು ಮತ್ತು ಸಲಹೆಗಳನ್ನು ನೇರವಾಗಿ ಸರ್ಕಾರಕ್ಕೆ ತಿಳಿಸಬಹುದು ಮತ್ತು ಸರ್ಕಾರ ಅವರ ಅಭಿಪ್ರಾಯಗಳನ್ನು ಬಜೆಟ್ ಮತ್ತು ಸರ್ಕಾರಿ ಯೋಜನೆಗಳಲ್ಲಿ ಸೇರಿಸಲಿದೆ ಎಂದಿದ್ದಾರೆ.

  • ಸಮಾಜ ಸೇವೆ ನಮ್ಮ ರಕ್ತದಲ್ಲಿಯೇ ಇದೆ: ಸೋನು ಸೂದ್

    ಸಮಾಜ ಸೇವೆ ನಮ್ಮ ರಕ್ತದಲ್ಲಿಯೇ ಇದೆ: ಸೋನು ಸೂದ್

    ಮುಂಬೈ: ಸಮಾಜ ಸೇವೆ ನಮ್ಮ ರಕ್ತದಲ್ಲಿಯೇ ಇದೆ. ನನ್ನ ಸಹೋದರಿ ಕಾಂಗ್ರೆಸ್‍ನಿಂದ ಟಿಕೆಟ್ ಪಡೆದು, ಸ್ಪರ್ಧೆ ಮಾಡಲಿದ್ದಾರೆ ಎಂದು ಬಾಲಿವುಡ್ ನಟ ಸೋನು ಸಹೋದರಿಯ ಕುರಿತಾಗಿ ಮೆಚ್ಚುಗೆಯ ಮಾತನಾಡಿದ್ದಾರೆ.


    ಸಮಾಜ ಸೇವೆ ನಮ್ಮ ರಕ್ತದಲ್ಲಿಯೇ ಇದೆ. ನನ್ನ ಸಹೋದರಿ ಕಾಂಗ್ರೆಸ್‍ನಿಂದ ಟಿಕೆಟ್ ಪಡೆದು ಸ್ಪರ್ಧೆ ಮಾಡಲಿದ್ದಾರೆ. ಮೋಗಾ ಜಿಲ್ಲೆಯ ಸಹೋದರಿ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಸಕಷ್ಟು ಅದ್ಭುತ ಕೆಲಸ ಮಾಡಿದ್ದಾಳೆ ಎಂದು ಸಹೋದರಿಯ ಸಮಾಜ ಸೇವೆಯನ್ನು ಹಾಡಿ ಹೋಗಳಿದ್ದಾರೆ. ಇದನ್ನೂ ಓದಿ: 2047ರ ಮೊದಲು ನವ ಭಾರತವನ್ನು ನಿರ್ಮಿಸುವ ಗುರಿ ಹೊಂದಿದ್ದೇವೆ: ಮೋದಿ

    ತನ್ನ ಶಕ್ತಿಯನ್ನಯ ಮೀರಿ ಸಮಾಜ ಸೇವೆ ಮಾಡಿದ್ದಾರೆ. ಸಾವಿರಾರು ಮಂದಿಗೆ ಕೊರೊನಾ ಲಸಿಕೆ ಕೊಡಿಸಿದ್ದಾಳೆ. ಈಗ ತನ್ನ ಸಹೋದರಿಯನ್ನು ಜನರೇ ರಾಜಕೀಯಕ್ಕೆ ಬರುವಂತೆ ಕರೆಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಬಿಜೆಪಿ ತನ್ನ ಅನುಕೂಲಕ್ಕಾಗಿ ಹಿಂದುತ್ವವನ್ನು ಬಳಸಿಕೊಳ್ಳುತ್ತಿದೆ: ಉದ್ಧವ್ ಠಾಕ್ರೆ

    ನಮ್ಮ ತಾಯಿ ಶಿಕ್ಷಕಿಯಾಗಿದ್ದು, ಜೀವನದುದ್ದಕ್ಕೂ ಮಕ್ಕಳಿಗೆ ಶಿಕ್ಷಣ ನೀಡಿದ್ದಾರೆ. ತಂದೆ ಕೂಡ ಸಮಾಜ ಸೇವಕರಾಗಿದ್ದರು. ಮೊಗಾದಲ್ಲಿ ನಿರ್ಮಾಣಗೊಂಡಿರುವ ಅನೇಕ ಶಾಲೆಗಳು, ಕಾಲೇಜ್​​ಗಳು ಮತ್ತು ಧರ್ಮಶಾಲೆಗಳು ನಮ್ಮ ಜಮೀನಿನಲ್ಲೇ ಇವೆ ಎಂದು ತಿಳಿಸಿದ್ದಾರೆ.

    ಸೋನು ಸೂದ್ ಅವರ ಸಹೋದರಿ ಮಾಳವಿಕಾ ರಾಜಕೀಯಕ್ಕೆ ಪ್ರವೇಶ ಮಾಡಿದ್ದಾರೆ. ಈಗಾಗಲೇ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸಮ್ಮಖದಲ್ಲೇ ಮಾಳವಿಕಾ ಕೈ ಪಾಳಯ ಸೇರಿದ್ದಾರೆ.

    2022ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಮೋಗಾದಿಂದ ಸ್ಪರ್ಧೆ ಮಾಡಲಿದ್ದಾರೆ. ಈಗ ತನ್ನ ಸಹೋದರಿ ಪರ ಸೋನು ಸೂದ್ ನಿಂತಿದ್ದಾರೆ.

  • ಪಂಜಾಬ್‌ ಹಾಲಿ ಸಿಎಂ ವಿರುದ್ಧ ಆಪ್‌ ಸಿಎಂ ಅಭ್ಯರ್ಥಿಯಿಂದ ಓಪನ್ ಚಾಲೆಂಜ್

    ಪಂಜಾಬ್‌ ಹಾಲಿ ಸಿಎಂ ವಿರುದ್ಧ ಆಪ್‌ ಸಿಎಂ ಅಭ್ಯರ್ಥಿಯಿಂದ ಓಪನ್ ಚಾಲೆಂಜ್

    ಚಂಡೀಗಢ: ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರು ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರನ್ನು ತಮ್ಮ ವಿರುದ್ಧ ಧುರಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸವಾಲು ಹಾಕಿದ್ದಾರೆ.

    ನಾನು ಚಮಕೌರ್ ಸಾಹಿಬ್ (ಚರಂಜಿತ್ ಚನ್ನಿ ಕ್ಷೇತ್ರ) ಕ್ಷೇತ್ರದಿಂದ ಸ್ಪರ್ಧಿಸಲು ಸಾಧ್ಯವಿಲ್ಲ. ಆದರೆ ಅವರು ಧುರಿಯಿಂದ ಸ್ಪರ್ಧಿಸಬಹುದು, ನಾನು ಅವರನ್ನು ಸ್ವಾಗತಿಸುತ್ತೇನೆ ಎಂದು ಭಗವಂತ್ ಮಾನ್ ಹೇಳಿದ್ದಾರೆ. ಭಗವಂತ್ ಮಾನ್ ಅವರು ಪಂಜಾಬ್ ಚುನಾವಣೆಯಲ್ಲಿ ಧುರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಭಗವಂತ್ ಮಾನ್ ಸಂಸದರಾಗಿರುವ ಸಂಗ್ರೂರ್ ಜಿಲ್ಲೆಯಲ್ಲಿ ಈ ಕ್ಷೇತ್ರವಿದೆ. ಇದನ್ನೂ ಓದಿ: ಪ್ರಿಯತಮೆ ಕೈಕೊಟ್ಟಿದ್ದಕ್ಕೆ ಆಕೆಯ ಸಹೋದರನನ್ನೇ ಕಿಡ್ನಾಪ್ ಮಾಡಿದ ಭೂಪ

    ಜನವರಿ 18 ರಂದು ಫೋನ್ ಮೂಲಕ ನಡೆಸಿದ ಸಮೀಕ್ಷೆಯಲ್ಲಿ ಶೇಕಡಾ 93 ಕ್ಕಿಂತಲೂ ಹೆಚ್ಚು ಮಂದಿ ಅವರಿಗೆ ಮತ ಚಲಾಯಿಸಿ ಅವರನ್ನು ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲಾಯಿತು. ಧುರಿ ಕ್ಷೇತ್ರದಲ್ಲಿ ಪ್ರಸ್ತುತ ಕಾಂಗ್ರೆಸ್‍ನ ದಲ್ವೀರ್ ಸಿಂಗ್ ಖಂಗುರಾ ಶಾಸಕರಾಗಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್

  • ಚರಣ್‍ಜಿತ್ ಸಿಂಗ್ ಚನ್ನಿ ಅಪ್ರಾಮಾಣಿಕ ವ್ಯಕ್ತಿ: ಅರವಿಂದ್ ಕೇಜ್ರಿವಾಲ್

    ಚರಣ್‍ಜಿತ್ ಸಿಂಗ್ ಚನ್ನಿ ಅಪ್ರಾಮಾಣಿಕ ವ್ಯಕ್ತಿ: ಅರವಿಂದ್ ಕೇಜ್ರಿವಾಲ್

    ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಸಾಮಾನ್ಯ ವ್ಯಕ್ತಿಯಲ್ಲ. ಒಬ್ಬ ಅಪ್ರಾಮಾಣಿಕ ವ್ಯಕ್ತಿ ಎಂದು ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

    ಅಕ್ರಮ ಮರಳು ದಂಧೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಇತ್ತೀಚೆಗಷ್ಟೇ ಚರಣ್‍ಜಿತ್ ಸಿಂಗ್ ಚನ್ನಿ ಅವರ ಸೋದರಳಿಯನ ಮನೆ ಸೇರಿದಂತೆ 10 ರಿಂದ 12 ಕಡೆ ದಾಳಿ ನಡೆಸಿದ್ದರು. ಇದನ್ನೂ ಓದಿ: ಲಡಾಖ್‌ನಲ್ಲಿ ಚೀನಾದಿಂದ ಪ್ಯಾಂಗ್ಯಾಂಗ್‌ ಸೇತುವೆ ನಿರ್ಮಾಣ – ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

    ಈ ಕುರಿತಂತೆ ಫಿರೋಜ್‍ಪುರದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಸೇಡು ತೀರಿಸಿಕೊಳ್ಳುವ ಸಲುವಾಗಿ ಈ ದಾಳಿ ನಡೆಸಲಾಗಿದೆ. ಕಳೆದ ವರ್ಷ ಮುಖ್ಯಮಂತ್ರಿಯಾಗಿ ಬೆಳೆಯುತ್ತಿದ್ದ ಸಾಮಾನ್ಯ ವ್ಯಕ್ತಿಯ ಹೆಸರಿಗೆ ಕಳಂಕ ತರಲು ಪ್ರಯತ್ನಿಸಿದ್ದಾರೆ ಎಂದರು. ಇದನ್ನೂ ಓದಿ: ಬಾಲಕಿಯನ್ನು ಎಳೆದೊಯ್ದು ಮನೆ ಮುಂದೆಯೇ ಅತ್ಯಾಚಾರ ಮಾಡ್ದ

    ಬುಧವಾರ ಚನ್ನಿ ಸಾಮಾನ್ಯ ವ್ಯಕ್ತಿಯಲ್ಲ. ಒಬ್ಬ ಅಪ್ರಾಮಾಣಿಕ ವ್ಯಕ್ತಿ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. ಮರಳು ಗಣಿಗಾರಿಕೆ ವಿಚಾರವಾಗಿ ಮುಖ್ಯಮಂತ್ರಿ ಸಂಬಂಧಿಯೊಬ್ಬರ ಮನೆಯ ಮೇಲೆ ದಾಳಿ ನಡೆಸಿರುವುದು ದುಃಖಕರ ವಿಚಾರವಾಗಿದೆ. ಚನ್ನಿಯ ವಿಧಾನಸಭಾ ಕ್ಷೇತ್ರ ಚಮಕೌರ್ ಸಾಹಿಬ್‍ನಲ್ಲಿ ಅಕ್ರಮ ಮರಳು ಗಣಿಗಾರಿಕೆ ಹೇಗೆ ನಡೆಯುತ್ತಿದೆ ಎಂಬುದನ್ನು ತಮ್ಮ ಪಕ್ಷದ ನಾಯಕರು ಈ ಹಿಂದೆಯೇ ಬಹಿರಂಗಪಡಿಸಿದ್ದರು.

    ಈ ವಿಚಾರ ಬಹಿರಂಗಗೊಂಡಾಗ ಚನ್ನಿ ಅವರು, ಯಾವುದೇ ಕ್ರಮ ಕೈಗೊಳ್ಳಲಿಲ್ಲ ಮತ್ತು ಅದನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದರು. ಆಗಲೇ ಸಿಎಂ ಮತ್ತು ಅವರ ಕುಟುಂಬದವರು ಅಕ್ರಮ ಮರಳು ದಂಧೆಯಲ್ಲಿ ತೊಡಗಿರುವುದು ಸ್ಪಷ್ಟವಾಗಿತ್ತು. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವ ಕುಟುಂಬದಿಂದ ಪಂಜಾಬ್ ಭವಿಷ್ಯದಲ್ಲಿ ಏನನ್ನು ನಿರೀಕ್ಷಿಸಲಾಗುತ್ತದೆ? ಎಂದು ಪ್ರಶ್ನಿಸಿದರು.

    ಫೆಬ್ರವರಿ 20 ರಂದು ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆ ಇದ್ದು, ಈ ಚುನಾವಣೆಗೂ ಮುನ್ನವೇ ಇಡಿ ದಾಳಿಗಳು ಚನ್ನಿ ಅವರ ಸೋದರಳಿಯನಿಗೆ ಸಂಬಂಧಿಸಿದ ಮನೆಯ ಮೇಲೆ ದಾಳಿ ನಡೆಸಿ 8 ಕೋಟಿ ರೂಪಾಯಿ ಸೇರಿದಂತೆ ಸುಮಾರು 10 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ.

  • ಪಂಜಾಬ್ ಸಿಎಂ ಸಂಬಂಧಿಯಿಂದ 10 ಕೋಟಿ ರೂ. ನಗದು ವಶ

    ಪಂಜಾಬ್ ಸಿಎಂ ಸಂಬಂಧಿಯಿಂದ 10 ಕೋಟಿ ರೂ. ನಗದು ವಶ

    ಚಂಡೀಗಡ: ಜಾರಿ ನಿರ್ದೇಶನಾಲಯವು(ಇಡಿ) ಪಂಜಾಬ್‍ನಲ್ಲಿ ಅಕ್ರಮ ಮರಳುಗಾರಿಕೆ ವಿರುದ್ಧ ನಡೆಸಿದ ದಾಳಿಯಲ್ಲಿ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಸಂಬಂಧಿಯೊಬ್ಬರಿಂದ 10 ಕೋಟಿ ರೂ. ನಗದು ವಶಪಡಿಸಿಕೊಂಡಿದೆ.

    ನೀವೇಶನದಿಂದ 8 ಕೋಟಿ ಸೇರಿದಂತೆ ಸುಮಾರು 10 ಕೋಟಿ ರೂ. ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳವಾರ ರಾಜ್ಯದ 12 ಸ್ಥಳಗಳಲ್ಲಿ ದಾಳಿ ನಡೆಸಲಾಗಿದ್ದು, ತನಿಖೆಯು ಇಂದು ಮುಂಜಾನೆ ಪೂರ್ಣಗೊಂಡಿದೆ. ಸಂಸ್ಥೆಯ ಹಲವಾರು ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿವೆ. ಇದನ್ನೂ ಓದಿ: ಬೆಳಗ್ಗೆ 3-4 ಗಂಟೆಯವರೆಗೆ ನನ್ನ ಮಕ್ಕಳ ಹೋಮ್ ವರ್ಕ್ ಮಾಡಿಸುತ್ತಿದ್ದೆ: ಪ್ರಿಯಾಂಕಾ ಗಾಂಧಿ

    ಕಾರ್ಯಾಚರಣೆ ವೇಳೆ ಸರಿ ಸುಮಾರು 10 ಕೋಟಿ ರೂಪಾಯಿಯನ್ನು ವಶಪಡಿಸಿಕೊಳ್ಳಲಾಗಿದೆ. ಚರಣ್‍ಜಿತ್ ಸಿಂಗ್ ಅವರ ಸೋದರಳಿಯನಾದ ಭೂಪಿಂದರ್ ಸಿಂಗ್ ಅಲಿಯಾಸ್ ಹನಿಗೆ ಸಂಬಂಧಿಸಿದ ಮನೆಯಲ್ಲಿ 8 ಕೋಟಿ ರೂ. ನಗದು ಪತ್ತೆಯಾಗಿದೆ. ಇದನ್ನೂ ಓದಿ: ಅಕ್ರಮವಾಗಿ ಒತ್ತುವರಿಯಾಗಿದ್ದ ಜಾಗ ಶಾಲೆಗೆ ವಾಪಸ್ – ತಹಶೀಲ್ದಾರ್‌ಗೆ ಗ್ರಾಮಸ್ಥರಿಂದ ಅಭಿನಂದನೆ

    ಸಂದೀಪ್ ಕುಮಾರ್ ಎಂಬ ಮತ್ತೋರ್ವ ವ್ಯಕ್ತಿಗೆ ಸಂಬಂಧಿಸಿದ ನಿವೇಶನವು ಕೂಡಾ ದಾಳಿಗೊಳಗಾಗಿದ್ದು, 8 ಕೋಟಿ ರೂ. ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಒಟ್ಟು 12 ಪ್ರದೇಶಗಳ ಮೇಲೆ ಇಡಿ ಅಧಿಕಾರಿಗಳು ದಾಳಿಮಾಡಿದ್ದಾರೆ.

    ದಾಳಿಯ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಚನ್ನಿ ಅವರು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಂಬಂಧಿಕರ ಮೇಲೆ ಬಂಗಾಳದ ವಿಧಾನಸಭಾ ಚುನಾವಣೆ ವೇಳೆ ಈ ದಾಳಿ ನಡೆಸಲಾಗಿತ್ತು. ಅದೇ ಮಾದರಿಯಲ್ಲಿ ನಮ್ಮ ರಾಜ್ಯದಲ್ಲಿಯೂ ದಾಳಿ ನಡೆಸಿದ್ದಾರೆ. ಇದು ರಾಜಕೀಯ ಕುತಂತ್ರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

  • Punjab Election- ಎಎಪಿ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್

    Punjab Election- ಎಎಪಿ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್

    ನವದೆಹಲಿ: ಎಎಪಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಭಗವಂತ್ ಮಾನ್ ಅವರನ್ನು ಘೋಷಿಸಿದೆ.

    ಫೆಬ್ರವರಿಯಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷ ಇಂದು ಭಗವಂತ್ ಮಾನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದೆ. ಪಂಜಾಬ್ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷವು ಪಂಜಾಬ್‍ನ ಜನರು ತಮ್ಮ ಆದ್ಯತೆಯ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಸೂಚಿಸಲು ದೂರವಾಣಿ ಮಾರ್ಗಗಳನ್ನು ತೆರೆದಿತ್ತು. ಈ ಎಲ್ಲಾ ಕರೆಗಳನ್ನು ಆಲಿಸಿದ ನಂತರ ಎಎಪಿ ಈ ನಿರ್ಧಾರವನ್ನು ಪ್ರಕಟಿಸಿದೆ. ಇದನ್ನೂ ಓದಿ: 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ವ್ಯಾಕ್ಸಿನೇಷನ್ ಯಾವಾಗ?

    ಫೆಬ್ರವರಿಯಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆಗೆ ಯಾವ ಪಕ್ಷದಿಂದ, ಯಾರು ಮುಖ್ಯಮಂತ್ರಿ ಅಭ್ಯರ್ಥಿ ಆಗಲಿದ್ದಾರೆ ಎಂಬ ಬಗ್ಗೆ ಭಾರೀ ಚರ್ಚೆ ನಡೆಯುತ್ತಿತ್ತು. ಹಲವಾರು ಬಾರಿ ಶೀಘ್ರದಲ್ಲೇ ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುವುದು ಎಂದು ಹೇಳಿದ್ದ ಎಎಪಿ ಈಗ ಕೊನೆಗೂ ಇಂದು ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಿದೆ.

    ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ವಾಟ್ಸಪ್, ಫೋನ್ ಮಾಡುವಂತೆ ಸೂಚನೆ ನೀಡಲಾಗಿತ್ತು. ಶೇ. 93 ಕ್ಕಿಂತ ಹೆಚ್ಚು ಮತವನ್ನು ಭಗವಂತ್ ಮಾನ್ ಪಡೆದುಕೊಂಡಿದ್ದಾರೆ. 3 ರಷ್ಟು ಮತ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರ ಹೆಸರಲ್ಲಿವೆ ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

    ಪಂಜಾಬ್ ಚುನಾವಣೆಯಲ್ಲಿ ಆಪ್ ಗೆಲ್ಲುವುದು ಸ್ಪಷ್ಟವಾಗಿದೆ. ಒಂದು ರೀತಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾದ ವ್ಯಕ್ತಿ ಪಂಜಾಬ್‍ನ ಮುಖ್ಯಮಂತ್ರಿ ಆಗುತ್ತಾರೆ. ಭಗವಂತ್ ಮಾನ್ ಅವರು ಪಂಜಾಬ್‍ನ ಸಂಗ್ರೂರ್ ಕ್ಷೇತ್ರದಿಂದ 2 ಬಾರಿ ಸಂಸದರಾಗಿ ಚುನಾಯಿತರಾಗಿದ್ದಾರೆ ಎಂದಿದ್ದಾರೆ.

  • ಚರಣ್​ಜಿತ್ ಸಿಂಗ್ ಚೆನ್ನಿ ಸಂಬಂಧಿ ಮನೆಯ ಮೇಲೆ ಇಡಿ ದಾಳಿ

    ಚರಣ್​ಜಿತ್ ಸಿಂಗ್ ಚೆನ್ನಿ ಸಂಬಂಧಿ ಮನೆಯ ಮೇಲೆ ಇಡಿ ದಾಳಿ

    ಚಂಡೀಗಢ: ಅಕ್ರಮ ಮರಳು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚೆನ್ನಿ ಅವರ ಸಂಬಂಧಿಕರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಅಕ್ರಮ ಮರಳು ದಂಧೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಭೂಪಿಂದರ್ ಸಿಂಗ್ ಹನಿ ಚರಣ್​ಜಿತ್ ಸಿಂಗ್ ಚೆನ್ನಿ ಸೋದರಳಿಯ ಆಗಿದ್ದಾರೆ. ಸದ್ಯ ಮೊಹಾಲಿ ಸೇರಿದಂತೆ ಪಂಜಾಬ್‍ನಲ್ಲಿ 10 ರಿಂದ 12 ಕಡೆ ಜಾರಿ ನಿರ್ದೇಶನಾಲಯವು ದಾಳಿ ನಡೆಸಿದೆ. ಇನ್ನೇನೂ ಚುನಾವಣೆ ಸಮೀಪವಿರುವ ಸಂದರ್ಭದಲ್ಲಿ ನಡೆಸಿರುವ ಈ ದಾಳಿ ಇದೀಗ ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಇದನ್ನೂ ಓದಿ:  ಟೆಲಿಪ್ರೊಂಪ್ಟರ್ ಕೂಡ ಇಷ್ಟೊಂದು ಸುಳ್ಳುಗಳನ್ನು ಹೇಳಲು ಸಾಧ್ಯವಿಲ್ಲ – ಮೋದಿ ವಿರುದ್ಧ ರಾಹುಲ್ ವ್ಯಂಗ್ಯ

    ಸೋಮವಾರವಷ್ಟೇ ಪಂಜಾಬ್ ವಿಧಾನ ಸಭಾ ಚುನಾವಣೆಯ ದಿನಾಂಕವನ್ನು ಮುಂದೂಡಲಾಯಿತು. ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಒಟ್ಟಾಗಿ ಚುನಾವಣಾ ದಿನಾಂಕವನ್ನು ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದವು. ಈ ಹಿನ್ನೆಲೆಯಲ್ಲಿ ಆಯೋಗ ದಿನಾಂಕವನ್ನು 6 ದಿನ ಮುಂದಕ್ಕೆ ಹಾಕಿದೆ. ಫೆಬ್ರವರಿ 14 ರಂದು ವಿಧಾನಸಭಾ ಚುನಾವಣೆ ನಡೆಯಬೇಕಿತ್ತು. ಇದೀಗ ಈ ಚುನಾವಣೆಯನ್ನು ಆಯೋಗವು ಫೆ.20ಕ್ಕೆ ಮುಂದೂಡಿದೆ. ಹೀಗಾಗಿ ಫೆಬ್ರವರಿ 20 ರಂದು ಮೊದಲನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಇದನ್ನೂ ಓದಿ: ಪರಿಸ್ಥಿತಿ ಕಾದು ನೋಡಬೇಕು, ಕರ್ಫ್ಯೂ, ಲಾಕ್‍ಡೌನ್ ಹೇರಬಾರದು: ಸಿ.ಟಿ ರವಿ

  • ಪಂಜಾಬ್ ಚುನಾವಣಾ ದಿನಾಂಕ ಮುಂದೂಡಿಕೆ- ಫೆ.20ರಂದು ಮತದಾನ

    ಪಂಜಾಬ್ ಚುನಾವಣಾ ದಿನಾಂಕ ಮುಂದೂಡಿಕೆ- ಫೆ.20ರಂದು ಮತದಾನ

    ನವದೆಹಲಿ: ರಾಜಕೀಯ ಪಕ್ಷಗಳ ಮನವಿಯ ಮೇರೆಗೆ ಪಂಜಾಬ್ ಚುನಾವಣಾ ದಿನಾಂಕವನ್ನು ಮುಂದೂಡಲಾಗಿದೆ.

    ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಒಟ್ಟಾಗಿ ಚುನಾವಣಾ ದಿನಾಂಕವನ್ನು ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದವು. ಈ ಹಿನ್ನೆಲೆಯಲ್ಲಿ ಆಯೋಗ ದಿನಾಂಕವನ್ನು 6 ದಿನ ಮುಂದಕ್ಕೆ ಹಾಕಿದೆ.

    ಫೆಬ್ರವರಿ 14 ರಂದು ವಿಧಾನಸಭಾ ಚುನಾವಣೆ ನಡೆಯಬೇಕಿತ್ತು. ಇದೀಗ ಈ ಚುನಾವಣೆಯನ್ನು ಆಯೋಗವು ಫೆ.20ಕ್ಕೆ ಮುಂದೂಡಿದೆ. ಹೀಗಾಗಿ ಫೆಬ್ರವರಿ 20 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಇದನ್ನೂ ಓದಿ: ಮಾನ್ಯ ಡಿಕೆಶಿ ಅವರೇ, ನಿಮ್ಮ ಆರೋಗ್ಯ ಹೇಗಿದೆ?: ಬಿಜೆಪಿ

    ಬರುವ ತಿಂಗಳು ಚುನಾವಣೆ ಇರುವ ಹಿನ್ನೆಲೆಯಲ್ಲಿ ಹಲವು ರಾಜಕೀಯ ಪಕ್ಷಗಳು ಇಂದು ಬೆಳಗ್ಗೆ ಸಭೆ ಕರೆದಿದ್ದವು. ಈ ವೇಳೆ ಚುನಾವಣಾ ದಿನಾಂಕ ಮುಂದೂಡುವಂತೆ ಒಮ್ಮತದ ಅಭಿಪ್ರಾಯ ಪಡೆದು ಅದನ್ನು ಆಯೋಗದ ಮುಂದಿಡಲಾಗಿತ್ತು. ಈ ಹಿನ್ನೆಲೆಯಲ್ಲಿ ಆಯೋಗ ಚುನಾವಣಾ ದಿನಾಂಕವನ್ನು ಮುಂದಕ್ಕೆ ಹಾಕಿದ್ದು, ಫಲಿತಾಂಶ ಮಾರ್ಚ್ 10ರಂದು ಪ್ರಕಟವಾಗಲಿದೆ.

    ಪಂಜಾಬ್ ನಲ್ಲಿ ಫೆ.16 ರಂದು ಗುರು ರವಿದಾಸ್ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಶೇ.32 ಮತದಾರರಿರುವ ಪರಿಶಿಷ್ಟ ಜಾತಿಯ ಸಮುದಾಯ ಈ ಜನ್ಮದಿನವನ್ನು ವಿಶೇಷ ಆಚರಿಸುತ್ತದೆ. ಇದಕ್ಕಾಗಿ ಅವರು ಫೆಬ್ರವರಿ 10ರಿಂದ 16 ವರೆಗೂ ಉತ್ತರಪ್ರದೇಶದ ವಾರಣಾಸಿಗೆ ತೆರಳುತ್ತಾರೆ. ಫೆಬ್ರವರಿ 14 ರಂದು ಮತದಾನಕ್ಕೆ ದಿನಾಂಕ ನಿಗದಿಯಾಗಿದ್ದು, ಈ ಅವಧಿಯಲ್ಲಿ ಪಂಜಾಬ್‍ನಲ್ಲಿ ಪರಿಶಿಷ್ಠ ಜಾತಿಯ ಜನರು ಅನುಪಸ್ಥಿತಿಯಲ್ಲಿರಲಿದ್ದಾರೆ. ದೊಡ್ಡ ಪ್ರಮಾಣದ ಮತದಾರರ ಅನುಪಸ್ಥಿತಿಯಲ್ಲಿ ಮತದಾನ ನಡೆಸುವುದು ಸೂಕ್ತವಲ್ಲ ಎಂದು ಮುಖ್ಯಮಂತ್ರಿ ಚನ್ನಿ ಅವರು ಆಯೋಗಕ್ಕೆ ಬರೆದ ಪತ್ರದಲ್ಲಿ ತಿಳಿಸಿದ್ದರು.

  • ನಾಳೆ ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿ ಘೋಷಿಸಲಿರುವ ಎಎಪಿ

    ನಾಳೆ ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿ ಘೋಷಿಸಲಿರುವ ಎಎಪಿ

    ನವದೆಹಲಿ: ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ನಾಳೆ ಘೋಷಿಸಲಿದೆ ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

    ಪಂಜಾಬ್‍ನಲ್ಲಿ ಎಎಪಿ ಪಕ್ಷದ ಸಿಎಂ ಅಭ್ಯರ್ಥಿಯಾಗಿ ಭಗವಂತ್ ಮಾನ್ ಅವರ ಹೆಸರನ್ನು ಘೋಷಿಸಬಹುದು ಎಂಬ ಗಾಳಿ ಸುದ್ದಿ ಹರಿದಾಡುತ್ತಿದ್ದು, ಪಂಜಾಬ್ ಚುನಾವಣೆಗೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕು ಎಂದು ಗುರುವಾರ ಅರವಿಂದ್ ಕೇಜ್ರಿವಾಲ್ ಅವರು ಜನರ ಅಭಿಪ್ರಾಯವನ್ನು ಕೇಳಿದ್ದಾರೆ. ಆದರೆ ಈ ಹುದ್ದೆಗೆ ನಾನು ಆಯ್ಕೆ ಮಾಡುವುದು ಭಗವಂತ್ ಮಾನ್ ಎಂದಿದ್ದರು. ಇದನ್ನೂ ಓದಿ: ಒಬಿಸಿ ನಾಯಕರಿಂದ ಬಿಜೆಪಿಗೆ ರಾಜೀನಾಮೆ – ದಲಿತರ ಮನೆಯಲ್ಲಿ ಊಟ ಮಾಡಿದ ಯೋಗಿ

    ಎಎಪಿ ಜನತಾ ಚುನೇಗಿ ಅಪ್ನಾ ಸಿಎಂ ಅಭಿಯಾನವನ್ನು ಪ್ರಾರಂಭಿಸಿದ್ದು, ಜನರ ಪ್ರತಿಕ್ರಿಯೆಯನ್ನು ಪಡೆದ ನಂತರ ಉನ್ನತ ಹುದ್ದೆಗೆ ಅಭ್ಯರ್ಥಿಯ ಹೆಸರನ್ನು ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಅಭಿಯಾನಕ್ಕೆ ಇಲ್ಲಿಯವರೆಗೂ ಇದುವರೆಗೆ 15 ಲಕ್ಷಕ್ಕೂ ಹೆಚ್ಚು ಮಂದಿ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ:  ಪಕ್ಷದಿಂದ ಸಚಿವನ ಉಚ್ಛಾಟಿಸಿದ ಬಿಜೆಪಿ – ಮತ್ತೆ ‘ಕೈ’ ಹಿಡೀತಾರಾ ಹರಕ್ ಸಿಂಗ್ ರಾವತ್?

    ಎಎಪಿ ಪಕ್ಷವು ಮೊಬೈಲ್ ನಂಬರ್‍ವೊಂದನ್ನು ಬಿಡುಗಡೆಗೊಳಿಸಿದ್ದು, ಸೋಮವಾರ ಸಂಜೆ 5 ಗಂಟೆಯವರೆಗೆ ಜನರು ತಮ್ಮ ಧ್ವನಿಯನ್ನು ರೆಕಾರ್ಡ್ ಮಾಡುವ ಮೂಲಕ ಮತ್ತು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕು ಎಂದು ವಾಟ್ಸಾಪ್ ಮೂಲಕ ಸಂದೇಶಗಳನ್ನು ಕಳುಹಿಸಿ ಅಭಿಪ್ರಾಯವನ್ನು ನೀಡಬಹುದು ಎಂದು ತಿಳಿಸಿದ್ದಾರೆ. ಪಂಜಾಬ್ ವಿಧಾನಸಭಾ ಚುನಾವಣೆಯು 117 ಸ್ಥಾನಗಳಿಗೆ ಫೆಬ್ರವರಿ 14 ರಂದು ಮೊದಲನೇ ಹಂತದಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.

  • ಪಂಜಾಬ್ ವಿಧಾನಸಭಾ ಚುನಾವಣೆ ಮುಂದೂಡಿಕೆ ಸಾಧ್ಯತೆ

    ಪಂಜಾಬ್ ವಿಧಾನಸಭಾ ಚುನಾವಣೆ ಮುಂದೂಡಿಕೆ ಸಾಧ್ಯತೆ

    ನವದೆಹಲಿ: ಫೆಬ್ರವರಿ 14ಕ್ಕೆ ನಿಗದಿಯಾಗಿರುವ ಪಂಜಾಬ್ ವಿಧಾನಸಭೆ ಚುನಾವಣೆಯನ್ನು ಮುಂದೂಡುವಂತೆ ಹಲವು ರಾಜಕೀಯ ಪಕ್ಷಗಳು ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಂಡಿವೆ. ಈ ಸಂಬಂಧ ಮುಖ್ಯಮಂತ್ರಿ ಚರಣ್‍ಜಿತ್ ಎಸ್ ಚನ್ನಿ ಅವರು ಚುನಾವಣಾ ಆಯೋಗಕ್ಕೆ ವಿಸ್ತೃತ ಪತ್ರ ಬರೆದಿದ್ದಾರೆ.

    ಪಂಜಾಬ್ ನಲ್ಲಿ ಫೆ.16 ರಂದು ಗುರು ರವಿದಾಸ್ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. 32% ಮತದಾರರಿರುವ ಪರಿಶಿಷ್ಟ ಜಾತಿಯ ಸಮುದಾಯ ಈ ಜನ್ಮದಿನವನ್ನು ವಿಶೇಷ ಆಚರಿಸುತ್ತದೆ. ಇದಕ್ಕಾಗಿ ಅವರು ಫೆಬ್ರವರಿ 10ರಿಂದ 16 ವರೆಗೂ ಉತ್ತರಪ್ರದೇಶದ ವಾರಣಾಸಿಗೆ ತೆರಳುತ್ತಾರೆ.

    ಫೆಬ್ರವರಿ 14 ರಂದು ಮತದಾನಕ್ಕೆ ದಿನಾಂಕ ನಿಗದಿಯಾಗಿದ್ದು ಈ ಅವಧಿಯಲ್ಲಿ ಪಂಜಾಬ್‍ನಲ್ಲಿ ಪರಿಶಿಷ್ಠ ಜಾತಿಯ ಜನರು ಅನುಪಸ್ಥಿತಿಯಲ್ಲಿರಲಿದ್ದಾರೆ. ದೊಡ್ಡ ಪ್ರಮಾಣದ ಮತದಾರರ ಅನುಪಸ್ಥಿತಿಯಲ್ಲಿ ಮತದಾನ ನಡೆಸುವುದು ಸೂಕ್ತವಲ್ಲ ಎಂದು ತಮ್ಮ ಪತ್ರದಲ್ಲಿ ಚನ್ನಿ ಹೇಳಿದ್ದಾರೆ. ಈ ಹಿನ್ನಲೆ ಫೆಬ್ರವರಿ 14 ರಂದು ನಿಗದಿಯಾಗಿರುವ ಮತದಾನದ ದಿನಾಂಕವನ್ನು ಮುಂದೂಡಬೇಕು, ಇದಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಮತ ಕೂಡಾ ಇದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಪಕ್ಷದಿಂದ ಸಚಿವನ ಉಚ್ಛಾಟಿಸಿದ ಬಿಜೆಪಿ – ಮತ್ತೆ ‘ಕೈ’ ಹಿಡೀತಾರಾ ಹರಕ್ ಸಿಂಗ್ ರಾವತ್?

    ಚುನಾವಣೆ ಮುಂದೂಡಿಕೆ ಮನವಿ ಹಿನ್ನೆಲೆ ಇಂದು ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಲಿದ್ದು, ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಚುನಾವಣೆ ಮುಂದೂಡಿಕೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದು, ಮಧ್ಯಾಹ್ನದ ಬಳಿಕ ಅಧಿಕೃತ ಆದೇಶ ಹೊರ ಬರುವ ನಿರೀಕ್ಷೆಗಳಿದೆ. ಇದನ್ನೂ ಓದಿ: ಕಾಂಗ್ರೆಸ್‌ ಟಿಕೆಟ್‌ ನಿರಾಕರಣೆ- ಚನ್ನಿ ಸಹೋದರ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ