Tag: Punlic Tv

  • ಹೆಬ್ಬುಲಿ ಬೆಡಗಿಯಿಂದ ಟಾಪ್‍ಲೆಸ್ ಫೋಟೋ ಪೋಸ್ಟ್

    ಹೆಬ್ಬುಲಿ ಬೆಡಗಿಯಿಂದ ಟಾಪ್‍ಲೆಸ್ ಫೋಟೋ ಪೋಸ್ಟ್

    ಚೆನ್ನೈ: ಹೆಬ್ಬುಲಿ ಬೆಡಗಿ ನಟಿ ಅಮಲಾ ಪೌಲ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಟಾಪ್‍ಲೆಸ್ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.

    ನಟಿ ಅಮಲಾ ಸದ್ಯಕ್ಕೆ ಚಿತ್ರದಿಂದ ಬ್ರೇಕ್ ತೆಗೆದುಕೊಂಡಿದ್ದು, ಇಂಡೋನೇಷ್ಯಾದ ಬಾಲಿಯಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಅಲ್ಲದೆ ಅಲ್ಲಿ ಸೆರೆ ಹಿಡಿದ ಫೋಟೋಗಳನ್ನೆಲ್ಲಾ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈಗ ಅವರು ಟಾಪ್‍ಲೆಸ್ ಫೋಟೋ ಹಂಚಿಕೊಂಡಿದ್ದು, ಇದೀಗ ಅದು ವೈರಲ್ ಆಗುತ್ತಿದೆ.

    ಅಮಲಾ ತಮ್ಮ ಇನ್‍ಸ್ಟಾದಲ್ಲಿ ಬಾತ್‍ಟಬ್‍ನಲ್ಲಿ ಅರೆ ನಗ್ನವಾಗಿರುವ ಎರಡು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈಗಾಗಲೇ ಈ ಫೋಟೋ 2 ಲಕ್ಷಕ್ಕೂ ಹೆಚ್ಚು ಲೈಕ್ಸ್ ಪಡೆದುಕೊಂಡಿದೆ. ಜೊತೆಗೆ ಸಾವಿರಾರು ಮಂದಿ ಕಮೆಂಟ್ ಮಾಡುವ ಮೂಲಕ ಹಾಟಾಗಿ ಕಾಣುತ್ತಿದ್ದೀರ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಈ ಹಿಂದೆ ತಮಿಳಿನ ‘ಅದಾಯಿ’ ಚಿತ್ರಕ್ಕಾಗಿ ಅಮಲಾ ಪೌಲ್ ಸಂಪೂರ್ಣ ಬೆತ್ತಲಾಗಿದ್ದರು. ಸಿನಿಮಾಕ್ಕಾಗಿ ಬೆತ್ತಲಾಗಿದ್ದ ಅಮಲಾ ಈಗ ನಿಜಜೀವನದಲ್ಲಿ ಟಾಪ್‍ಲೆಸ್ ಫೋಟೋ ಹಂಚಿಕೊಂಡಿದ್ದಾರೆ. ಫೋಟೋ ನೋಡಿ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

    ಸದ್ಯಕ್ಕೆ ಅಮಲಾ ತಮಿಳಿನಲ್ಲಿ ಎರಡು ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಜೊತೆಗೆ ಹಿಂದಿಯ `ಲಸ್ಟ್ ಸ್ಟೋರಿಸ್’ ರಿಮೇಕ್‍ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

  • ಗುಂಡಿನ ದಾಳಿ, ಇವಿಎಂ ಎಸೆತ, ಬಲವಂತದ ಮತದಾನ – ಇದು ಪಶ್ಚಿಮ ಬಂಗಾಳ ಎಲೆಕ್ಷನ್ ಸ್ಟೈಲ್

    ಗುಂಡಿನ ದಾಳಿ, ಇವಿಎಂ ಎಸೆತ, ಬಲವಂತದ ಮತದಾನ – ಇದು ಪಶ್ಚಿಮ ಬಂಗಾಳ ಎಲೆಕ್ಷನ್ ಸ್ಟೈಲ್

    ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಲೋಕಸಭಾ ಚುನಾವಣೆ ಮತದಾನವು ಇಂದು ನಡೆಯುತ್ತಿದ್ದು, ಅನೇಕ ಕಡೆಗಳಲ್ಲಿ ಗಲಾಟೆ, ಹಲ್ಲೆ ಹಾಗೂ ಬಲವಂತವಾಗಿ ಮತದಾನ ಮಾಡಲಾಗಿದೆ.

    ರಾಯ್‍ಗಂಜ್ ಲೋಕಸಭಾ ಕ್ಷೇತ್ರದ ಸಿಪಿಎಂ ಅಭ್ಯರ್ಥಿ ಮೊಹಮ್ಮದ್ ಸಲಿಂ ಅವರು ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಕೆಲ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮೊಹಮ್ಮದ್ ಸಲಿಂ ಅವರು ಕಾಂಗ್ರೆಸ್ ಹಾಲಿ ಸಂಸದೆ ದೀಪಾ ದಾಸ್ಮುನ್ಸಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ದೀಪಾ ಅವರ ಪತಿ ರಂಜನ್ ದುಸ್ಮಾನ್ಸಿ ಅವರು 1999ರಿಂದಲೂ ರಾಯ್‍ಗಂಜ್ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಆದರೆ ಅವರ ಅನಾರೋಗ್ಯದಿಂದಾಗಿ 2014ರ ಲೋಕಸಭಾ ಚುನಾವಣೆಯಲ್ಲಿ ಪತಿ ದೀಪಾ ದಾಸ್ಮುನ್ಸಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

    ಇಸ್ಲಾಂಪುರ್ ಮತಗಟ್ಟೆಯ 100 ಮೀಟರ್ ದೂರದಲ್ಲಿ ತೃಣಮೂಲ ಕಾಂಗ್ರೆಸ್ ಬೆಂಬಲಿಗರು ಸೇರಿದ್ದಾರೆ. ಈ ಮೂಲಕ ತಮ್ಮ ಪಕ್ಷದ ಅಭ್ಯರ್ಥಿಗೆ ಮತ ಹಾಕಬೇಕು ಎಂದು ಮತದಾರರನ್ನು ಹೆದರಿಸುತ್ತಿದ್ದಾರೆ. ಅವರ ಬಳಿಗೆ ಹೋಗುತ್ತಿದ್ದಂತೆ ನನ್ನ ವಾಹನದ ಮೇಲೆ ದಾಳಿ ಮಾಡಿದರು. ಪೊಲೀಸರು ದಾಳಿ ಮಾಡಿದವರ ವಿರುದ್ಧ ಯಾವುದೇ ಕ್ರಮಕೈಗೊಳ್ಳಲಿಲ್ಲ ಎಂದು ಮೊಹಮ್ಮದ್ ಸಲಿಂ ಆರೋಪಿಸಿದ್ದಾರೆ.

    ರಾಯ್‍ಗಂಜ್‍ನಲ್ಲಿ ಟಿಎಂಸಿ ಕಾರ್ಯಕರ್ತರು ಬೂತ್ ಅನ್ನು ತಮ್ಮ ವಶಕ್ಕೆ ಪಡೆಯಲು ಯತ್ನಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಬೂತ್ ಒಳಗೆ ತಮ್ಮ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದಾರೆ. ಬಲವಂತವಾಗಿ ಇವಿಎಂ ರೂಂ ಪ್ರವೇಶಿಸಿ ಮತದಾರರ ಮೇಲೆ ಒತ್ತಡ ಹಾಕಿ ವೋಟ್ ಹಾಕಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ದೂರಿದೆ.

    ಪಶ್ಚಿಮ ಬಂಗಾಳದ ಚೋಪ್ರಾದಲ್ಲಿ ಟಿಎಂಸಿ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ. ಈ ವೇಳೆ ವಿದ್ಯುನ್ಮಾನ ಮತ ಯಂತ್ರ (ಇವಿಎಂ) ಒಡೆದು ಹಾಕಿದ್ದಾರೆ. ಅಷ್ಟೇ ಅಲ್ಲದೆ ಉತ್ತರ ಡಿಗಿರ್ ಪರ್ ಕ್ಷೇತ್ರದಲ್ಲಿ ಮತದಾನದ ಆರಂಭವಾದ ಕೆಲವೇ ಸಮಯದಲ್ಲಿ ಗಲಭೆ ಆರಂಭವಾಗಿದೆ. ಮತದಾನ ಮಾಡದಂತೆ ಗುಂಪೊಂದು ಸಾರ್ವಜನಿಕರಿಗೆ ಒತ್ತಾಯಿಸಿತ್ತು. ಈ ವೇಳೆ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಲಾಠಿ ಪ್ರಹಾರ ಹಾಗೂ ಅಶ್ರುವಾಯು ಪ್ರಯೋಗಿಸಿ ಗುಂಪನ್ನು ಚದುರಿಸಿ, ಪುನಃ ಮತದಾನಕ್ಕೆ ಅವಕಾಶ ಮಾಡಿಕೊಟ್ಟಿತು.

    ಪುರುಲಿಯಾ ಜಿಲ್ಲೆಯ ಸೇನಾಬೊನಾ ಗ್ರಾಮದ ಹೊರ ವಲಯದ ಮರದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಲೆ ಮಾಡಿ ಟಿಎಂಸಿ ಕಾರ್ಯರ್ತರು ಈ ಕೃತ್ಯ ಎಸದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಪರಿಶೀಲನೆ ನಡೆಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

  • ಬೆಂಗ್ಳೂರಲ್ಲಿ ಮಾಜಿ ಶಾಸಕರ ಪುತ್ರನ ಅವಾಂತರ- ಡ್ರಂಕ್&ಡ್ರೈವ್ ಪ್ರಶ್ನಿಸಿದ್ದಕ್ಕೆ ಎಂಎಲ್‍ಎ ಅಭ್ಯರ್ಥಿ ಎಂದು ಅವಾಜ್

    ಬೆಂಗ್ಳೂರಲ್ಲಿ ಮಾಜಿ ಶಾಸಕರ ಪುತ್ರನ ಅವಾಂತರ- ಡ್ರಂಕ್&ಡ್ರೈವ್ ಪ್ರಶ್ನಿಸಿದ್ದಕ್ಕೆ ಎಂಎಲ್‍ಎ ಅಭ್ಯರ್ಥಿ ಎಂದು ಅವಾಜ್

    ಬೆಂಗಳೂರು: ಮಧ್ಯರಾತ್ರಿಯಲ್ಲಿ ಮಾಜಿ ಶಾಸಕರ ಪುತ್ರನ ಅವಾಂತರ ನಡೆದಿದೆ. ಕುಡಿದ ಅಮಲಿನಲ್ಲಿ ಮುಂದಿನ ಎಂಎಲ್‍ಎ ಅಭ್ಯರ್ಥಿ ಎಂದು ಪೊಲೀಸರಿಗೆ ಅವಾಜ್ ಹಾಕಿ ಸ್ಟೇಷನ್ ಮೆಟ್ಟಿಲೇರಿದ್ದಾರೆ.

    ಉಡುಪಿ ಮಾಜಿ ಶಾಸಕ ಜಯರಾಮ ಶೆಟ್ಟಿ ಪುತ್ರ ರತನ್ ಶೆಟ್ಟಿ ಮಂಗಳವಾರ ರಾತ್ರಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಮೂತ್ರ ವಿಸರ್ಜನೆ ಮಾಡುತ್ತಿದ್ದರು. ಈ ವೇಳೆ ಅದೇ ರಸ್ತೆಯಲ್ಲಿ ಡಿಡಿ ಚೆಕ್ ಮಾಡುತ್ತಿದ್ದ ಪೊಲೀಸರು ರತನ್ ಶೆಟ್ಟಿ ಇದ್ದ ಕಾರು ಚಾಲಕನನ್ನ ಡ್ರಂಕ್ & ಡ್ರೈವ್ ತಪಾಸಣೆ ನಡೆಸಿದ್ದರು.

    ಈ ವೇಳೆ ರತನ್ ಶೆಟ್ಟಿ ತಾನು ಮುಂದಿನ ಎಂಎಲ್‍ಎ ಅಭ್ಯರ್ಥಿ. ನನ್ನನ್ನೇ ತಡೆಯುತ್ತೀರಾ? ಎಂದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಪೊಲೀಸರು ಹಾಗೂ ರತನ್ ನಡುವೆ ಮಾತಿನ ಚಕಮಕಿಯಾಗಿದೆ. ಪೊಲೀಸರು ರತನ್‍ ರನ್ನ ವಶಕ್ಕೆ ಪಡೆದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.

    ನಂತರ ಕರ್ತವ್ಯ ನಿರತ ಪೊಲೀಸರಿಗೆ ಅಡ್ಡಿಪಡಿಸಿದ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ಇತ್ತ ರತನ್ ಶೆಟ್ಟಿ ಸಹ ಪೊಲೀಸರು ತನ್ನನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಪ್ರತಿದೂರು ದಾಖಲಿಸಿದ್ದಾರೆ. ನಂತರ ರತನ್ ಗೆ ಕುಡಿದ ಅಮಲಿನಲಿನಿಂದ ಆದ ಎಡವಡ್ಡು ಅರಿವಾಗಿದೆ. ಇದೀಗ ಕ್ಷಮಾಪಣೆ ಪತ್ರ ಬರೆದು ಕೊಟ್ಟು ವಾಪಸ್ ಹೋಗಿದ್ದಾರೆ.