Tag: Punya smarane

  • ನಟ ವಿಷ್ಣುವರ್ಧನ್ ಪುಣ್ಯ ಸ್ಮರಣೆಗೆ ಸಿದ್ಧತೆ

    ನಟ ವಿಷ್ಣುವರ್ಧನ್ ಪುಣ್ಯ ಸ್ಮರಣೆಗೆ ಸಿದ್ಧತೆ

    ನ್ನಡದ ಹೆಸರಾಂತ ನಟ ವಿಷ್ಣುವರ್ಧನ್ (Vishnuvardhan) ಅವರ ಪುಣ್ಯ ಸ್ಮರಣೆ (Punya Smarane) ಕಾರ್ಯಕ್ರಮ ಮೈಸೂರು ಮತ್ತು ಬೆಂಗಳೂರಿನಲ್ಲಿ ನಡೆಯಲಿದೆ. ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣು ಸಮಾಧಿ ಬಳಿ ಅಭಿಮಾನಿಗಳು ಅನ್ನದಾನ, ರಕ್ತದಾನ ಶಿಬಿರವನ್ನು ಆಯೋಜಿಸುವ ಮೂಲಕ ವಿಷ್ಣುವನ್ನು ಸ್ಮರಿಸಲಿದ್ದಾರೆ.

    ಅಭಿಮಾನ ಸ್ಟುಡಿಯೋದ (Abhimana Studio) ಮಾಲೀಕರಿಗೆ ಮತ್ತು ವಿಷ್ಣು ಅಭಿಮಾನಿಗಳ ಮಧ್ಯ ವಿವಾದ ಭುಗಿಲೆದ್ದಿದೆ. ವಿಷ್ಣು ಸಮಾಧಿಯನ್ನು ತೆಗೆದು ಹಾಕುವ ಕೆಲಸಕ್ಕೆ ಬಾಲಣ್ಣ ಮಕ್ಕಳು ಮಾಡುತ್ತಿದ್ದಾರೆ ಎಂದು ವಿಷ್ಣು ಅಭಿಮಾನಿಗಳು ಆರೋಪ ಮಾಡಿದ್ದರು. ಹತ್ತು ಗುಂಟೆ ಜಮೀನು ಕೊಡುತ್ತಿಲ್ಲ ಎಂದು ಹೋರಾಟ ಮಾಡಿದ್ದರು. ಈ ಬಾರಿ ಇದಕ್ಕೆಲ್ಲ ತೆರೆ ಬೀಳಲಿದೆ ಎಂದೇ ಅಂದಾಜಿಸಲಾಗಿತ್ತು. ಇನ್ನೂ ಈ ಸಮಸ್ಯೆ ಬಗೆ ಹರಿದಂತೆ ಕಾಣುತ್ತಿಲ್ಲ.

     

    ಹಾಗಂತ ವಿಷ್ಣು ಸಮಾಧಿಯನ್ನು ಪೂಜೆ ಮಾಡಲು ನಾಳೆ ಬಾಲಣ್ಣನ ಮಕ್ಕಳು ಅವಕಾಶ ಕೊಡುವುದಿಲ್ಲವಾ? ಎನ್ನುವ ಪ್ರಶ್ನೆ ಉದ್ಭವಿಸಿದೆ. ಈ ಕುರಿತಂತೆ ಡಾ.ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅವರು ಫೇಸ್ ಬುಕ್ ಲೈವ್ ಗೆ ಬಂದು, ಎಂದಿನಂತೆ ಪೂಜೆ ಮಾಡಬಹುದು. ಸಾವಿರ ಸಾವಿರ ಸಂಖ್ಯೆಯಲ್ಲಿ ಅಭಿಮಾನಿಗಳು ಬನ್ನಿ ಎಂದು ಕರೆ ನೀಡಿದ್ದಾರೆ. ಬೆಳಗ್ಗೆಯಿಂದಲೇ ಪೂಜಾ ಕಾರ್ಯಗಳು ನಡೆಯಲಿವೆ ಎಂದು ಹೇಳಿದ್ದಾರೆ.

  • ಜ.31ಕ್ಕೆ ಸಿದ್ದಗಂಗಾ ಶ್ರೀಗಳ ಪುಣ್ಯಸ್ಮರಣೆ ಕಾರ್ಯಕ್ರಮ

    ಜ.31ಕ್ಕೆ ಸಿದ್ದಗಂಗಾ ಶ್ರೀಗಳ ಪುಣ್ಯಸ್ಮರಣೆ ಕಾರ್ಯಕ್ರಮ

    ತುಮಕೂರು: ನಡೆದಾಡುವ ದೇವರು, ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯಸ್ಮರಣಾ ಕಾರ್ಯಕ್ರಮವನ್ನು ಜನವರಿ 31ರಂದು ಬೆಳಗ್ಗೆ ನಡೆಸಲಾಗುತ್ತದೆ ಎಂದು ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದಲಿಂಗ ಸ್ವಾಮೀಜಿಗಳು, ಪೂಜ್ಯರ ಆಧ್ಯಾತ್ಮದ ಶಕ್ತಿಯಿಂದಲೇ ಸಕಲ ಕಾರ್ಯಗಳು ಸುಗಮವಾಗಿ ನಡೆದಿದೆ. ಪುಣ್ಯಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದ ಶಿವರಾತ್ರಿ ದೇಶಿಕೇಂದ್ರ ಶ್ರೀಗಳು ವಹಿಸಲಿದ್ದಾರೆ. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದ ಸ್ವಾಮೀಜಿ, ಸಿರಿಗೆರೆ ತರಬಾಳು ಸಂಸ್ಥಾನಮಠದ ಶಿವಮೂರ್ತಿ ಶಿವಾಚಾರ್ಯ ಶ್ರೀಗಳು, ಆರ್ಟ್ ಆಫ್ ಲಿವಿಂಗ್‍ನ ಶ್ರೀ ರವಿಶಂಕರ್ ಗುರೂಜಿ, ಕನಕಪುರದ ಮುಮ್ಮಡಿ ನಿರ್ವಾಣಮಹಾಸ್ವಾಮೀಜಿ ದಿವ್ಯಸಾನಿಧ್ಯ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

    ಈ ಕಾರ್ಯಕ್ರಮವನ್ನು ಸಿಎಂ ಕುಮಾರಸ್ವಾಮಿ ಅವರು ಉದ್ಘಾಟಿಸಲಿದ್ದಾರೆ. ಎಲ್ಲ ಸಚಿವರು, ಶಾಸಕರು, ಸಂಸದರು, ಗಣ್ಯರು, ಮುಖಂಡರಿಗೆ ಆಮಂತ್ರಣ ನೀಡಲಾಗಿದೆ ಎಂದ ಶ್ರೀಗಳು, ಮಠ ಯಾವುದೇ ಜಾತಿ ಧರ್ಮಗಳಿಗೆ ಸೀಮಿತವಲ್ಲ ಎಂದು ಹೇಳಿದರು.

    ಸಿದ್ದಗಂಗಾ ಶ್ರೀಗಳು ರೂಪಿಸಿದ್ದ ಕೆಲ ಯೋಜನೆಗಳು ಹಾಗೇ ಉಳಿದುಕೊಂಡಿವೆ. ಹೀಗಾಗಿ ಅವುಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಹೆಚ್ಚು ಗಮನ ನೀಡಲಾಗುವುದು. ಮಠದ ಆವರಣದಲ್ಲಿ ಶಿವಕುಮಾರ ಶ್ರೀಗಳ ಕಂಚಿನ ಪ್ರತಿಮೆ ನಿರ್ಮಾಣ, ದಾಸೋಹ ಭವನ, ಇನ್ನೀತರೆ ಕೆಲಸಗಳ ಬಗ್ಗೆ ಗಮನ ಹರಿಸಲಾಗುವುದು. ಗುರುಕಾರಣ್ಯ ಕಾರ್ಯ ಪರಂಪರೆ ಮುಂದುವರಿಸಲಾಗುತ್ತದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv