Tag: Punyathiathi

  • ಸಂಚಾರಿ ವಿಜಯ್ ಮೊದಲ ವರ್ಷದ ಪುಣ್ಯತಿಥಿ : ಹುಟ್ಟೂರಲ್ಲಿ ಹಲವು ಕಾರ್ಯಕ್ರಮಗಳು

    ಸಂಚಾರಿ ವಿಜಯ್ ಮೊದಲ ವರ್ಷದ ಪುಣ್ಯತಿಥಿ : ಹುಟ್ಟೂರಲ್ಲಿ ಹಲವು ಕಾರ್ಯಕ್ರಮಗಳು

    ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ತನ್ನ ಕುಟುಂಬ ಮತ್ತು ಅಸಂಖ್ಯಾತ ಅಭಿಮಾನಿಗಳನ್ನು ಅಗಲಿ ಇಂದಿಗೆ ಒಂದು ವರ್ಷ. ಮೊನ್ನೆಯಷ್ಟೇ ಅವರ ಕುಟುಂಬವು ಪಂಚನಹಳ್ಳಿಯಲ್ಲಿರುವ ವಿಜಯ್ ಸಮಾಧಿ ಸ್ಥಳದಲ್ಲಿ ಪುತ್ಥಳಿ ಸ್ಥಾಪಿಸಿ, ಪೂಜೆ ಸಲ್ಲಿಸಿದ್ದರು. ಇವತ್ತು ಪುಣ್ಯತಿಥಿಯ ದಿನದಂದೂ ವಿಜಯ್ ಸಮಾಧಿಗೆ ಪೂಜೆ ಸಲ್ಲಿಸಲಾಗುತ್ತಿದೆ. ಅಲ್ಲದೇ, ಅಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

    ಇಂದು ಬೆಳಗ್ಗೆ ವಿಜಯ್ ಅವರ ನೆಚ್ಚಿನ ರಂಗಸಂಸ್ಥೆ ಸಂಚಾರಿ ಬಳಗವು ವಿಜಯ್ ಅವರ ಗುರು ಮಂಗಳಾ ಅವರ ನೇತೃತ್ವದಲ್ಲಿ ಪಂಚನಹಳ್ಳಿಯಲ್ಲಿರುವ ವಿಜಯ್ ಅವರ ಸಮಾಧಿ ಬಳಿ ರಂಗಗೀತೆ ನಮನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ವಿಜಯ್ ಇಷ್ಟದ ಹಾಡುಗಳನ್ನು ಹೇಳುವ ಮೂಲಕ ನಮನ ಸಲ್ಲಿಸಲಾಗುತ್ತಿದೆ. ಅಲ್ಲದೇ, ಅಭಿಮಾನಿಗಳು ಕೂಡ ಇಂದು ಪೂಜೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ : ಗಂಡನ ಮನೆಯ ಫೋಟೋ ಹಂಚಿಕೊಂಡ ನಯನತಾರಾ : ಸಂಪ್ರದಾಯ ಪಾಲಿಸಿದ ನಟಿಗೆ ಅಭಿಮಾನಿಗಳ ಹಾರೈಕೆ

    ವಿಜಯ್ ಅವರು ಕಾಣಿಸಿಕೊಂಡ ಕೊನೆಯ ಆಲ್ಬಂ ಮೈಲಾರವನ್ನು ಇಂದು ಬಿಡುಗಡೆ ಮಾಡಲಾಗುತ್ತಿದೆ. ಮೈಲಾರಲಿಂಗೇಶ್ವರ ಕುರಿತಾದ ಭಕ್ತಿ ಪ್ರಧಾನ ಗೀತೆ ಇದಾಗಿದ್ದು, ಈ ವಿಡಿಯೋ ಆಲ್ಬಂನಲ್ಲಿ ವಿಜಯ್ ಕಾಣಿಸಿಕೊಂಡಿದ್ದಾರೆ. ಇಂದು ಅದರ ಲೋಕಾರ್ಪಣೆ ಕೂಡ ಇದೆ. ಈ ಮೂಲಕ ವಿಜಯ್ ಅವರನ್ನು ನೆನಪಿಸಿಕೊಳ್ಳಲಾಗುತ್ತಿದೆ. ಅಲ್ಲದೇ ಸೋಷಿಯಲ್ ಮೀಡಿಯಾದಲ್ಲಿ ವಿಜಯ್ ಗೆಳೆಯರು ಮತ್ತು ಆಪ್ತರು ಕೂಡ ಅವರೊಂದಿಗಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ.

  • ಚಿರಂಜೀವಿ ಸರ್ಜಾ ಅಗಲಿಕೆಗೆ ಎರಡು ವರ್ಷ : ಕುಟುಂಬದಿಂದ ಇಂದು ವಿಶೇಷ ಪೂಜೆ

    ಚಿರಂಜೀವಿ ಸರ್ಜಾ ಅಗಲಿಕೆಗೆ ಎರಡು ವರ್ಷ : ಕುಟುಂಬದಿಂದ ಇಂದು ವಿಶೇಷ ಪೂಜೆ

    ನ್ನಡದ ಹೆಸರಾಂತ ನಟ ಚಿರಂಜೀವಿ ಸರ್ಜಾ ಅಗಲಿ ಇಂದಿಗೆ ಎರಡು ವರ್ಷ. ನೆಚ್ಚಿನ ನಟನ ಸಮಾಧಿಗೆ ಇಂದು ಅಭಿಮಾನಿಗಳು ಮತ್ತು ಕುಟುಂಬದ ಸದಸ್ಯರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸರ್ಜಾ ಕುಟುಂಬ ಮತ್ತು ಮೇಘನಾ ರಾಜ್ ಕುಟುಂಬ ಹಾಗೂ ಸ್ನೇಹಿತರು ಇಂದು ಫಾರ್ಮ್ ಹೌಸ್ ನಲ್ಲಿ ನಡೆದ ಪೂಜೆಯಲ್ಲಿ ಪಾಲ್ಗೊಂಡಿದ್ದರು.

    ಚಿರು ಆಪ್ತರು ಇಂದು ಸೋಷಿಯಲ್ ಮೀಡಿಯಾಗಳಲ್ಲೂ ನೆಚ್ಚಿನ ಗೆಳೆಯನ ಅಗಲಿಕೆಯ ನೋವನ್ನು ಹಂಚಿಕೊಂಡಿದ್ದಾರೆ. ಪನ್ನಗಾಭರಣ, ಸೃಜನ್ ಲೋಕೇಶ್ ಸೇರಿದಂತೆ ಹಲವರು ಚಿರು ಜೊತೆಗಿನ ಒಡನಾಟವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮೋಹಕತಾರೆ ರಮ್ಯಾ ಅಭಿಮಾನಿಗಳಿಗೆ ಗುಡ್ ನ್ಯೂಸ್

    ಚಿರಂಜೀವಿ ಸರ್ಜಾ ಅವರ ಕೊನೆ ಸಿನಿಮಾ ರಾಜ ಮಾರ್ತಾಂಡ ಇಂದು ಬಿಡುಗಡೆ ಆಗಲಿದೆ ಎಂದು ನಿರೀಕ್ಷೆಯಿತ್ತು. ಆದರೆ, ರಿಲೀಸ್ ಆಗಿಲ್ಲ. ಮುಂದಿನ ದಿನಗಳಲ್ಲಿ ದೊಡ್ಡಮಟ್ಟದಲ್ಲಿ ಈ ಸಿನಿಮಾವನ್ನು ರಿಲೀಸ್ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಚಿರು ಕೊನೆಯ ಸಿನಿಮಾಗೆ ಸಹೋದರ ಧ್ರುವ ಸರ್ಜಾ ಅವರೇ ಡಬ್ ಮಾಡಿದ್ದಾರೆ.