Tag: puri jagannadh

  • ಪುರಿ ಜಗನ್ನಾಥ್ ನಿರ್ದೇಶನದ ಚಿತ್ರಕ್ಕೆ ಸಂಯುಕ್ತ ಮೆನನ್ ಎಂಟ್ರಿ

    ಪುರಿ ಜಗನ್ನಾಥ್ ನಿರ್ದೇಶನದ ಚಿತ್ರಕ್ಕೆ ಸಂಯುಕ್ತ ಮೆನನ್ ಎಂಟ್ರಿ

    ಡ್ಯಾಶಿಂಗ್ ಡೈರೆಕ್ಟರ್ ಪುರಿ ಜಗನ್ನಾಥ್ ಹಾಗೂ ವಿಜಯ್ ಸೇತುಪತಿ ಅವರ ಬಹುನಿರೀಕ್ಷಿತ ಸಿನಿಮಾದಿಂದ ಮತ್ತೊಂದು ಅಪ್‌ಡೇಟ್ ಸಿಕ್ಕಿದೆ. ಈಗಾಗಲೇ ತಾರಾ ಬಳಗದ ಮೂಲಕ ಸುದ್ದಿಯಾಗಿರುವ ಚಿತ್ರಕ್ಕೀಗ ಪ್ರತಿಭಾನ್ವಿತ ನಟಿ ಸಂಯುಕ್ತ ಮೆನನ್ (Samyuktha Menon) ಎಂಟ್ರಿ ಕೊಟ್ಟಿದ್ದಾರೆ.

    ಪುರಿ ಕನೆಕ್ಟ್ ಬ್ಯಾನರ್ ಅಡಿಯಲ್ಲಿ ಪುರಿ ಜಗನ್ನಾಥ್ (Puri Jagannadh) ಮತ್ತು ಚಾರ್ಮಿ ಕೌರ್ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಟಬು, ದುನಿಯಾ ವಿಜಯ್ (Duniya Vijay) ನಟಿಸುವುದು ಖಚಿತವಾಗಿದೆ. ಇದೀಗ ನಟಿ ಸಂಯುಕ್ತ ಮೆನನ್ ಅವರನ್ನು ಚಿತ್ರತಂಡ ಸ್ವಾಗತಿಸಿದೆ. ಇದನ್ನೂ ಓದಿ: ಕನ್ನಡಿಗರಿಗೆ ಅಪಮಾನ ಪ್ರಕರಣ – ಹೇಳಿಕೆ ಕೊಡಲು ಪೊಲೀಸರನ್ನು ಸತಾಯಿಸುತ್ತಿರುವ ಸೋನು ನಿಗಮ್

    ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಈ ಸಿನಿಮಾದಲ್ಲಿ ಸಂಯುಕ್ತ ನಾಯಕಿ ಪಾತ್ರವನ್ನು ಪೋಷಣೆ ಮಾಡುತ್ತಿಲ್ಲ. ಬದಲಾಗಿ ಪ್ರಮುಖ ಪಾತ್ರವೊಂದಲ್ಲಿ ಅಭಿನಯಿಸಲಿದ್ದಾರೆ. ಕಥೆ ಮತ್ತು ಅವರ ಪಾತ್ರದಿಂದ ರೋಮಾಂಚನಗೊಂಡಿರುವ ಸಂಯುಕ್ತ ಚಿತ್ರೀಕರಣವನ್ನು ಪ್ರಾರಂಭಿಸಲು ಉತ್ಸುಕರಾಗಿದ್ದಾರೆ. ಇದನ್ನೂ ಓದಿ: ಇಷ್ಟ ಇಲ್ಲದಿದ್ರೆ ಸಿನಿಮಾ ನೋಡಬೇಡಿ: ಕರ್ನಾಟಕದಲ್ಲಿ ‘ಥಗ್‌ ಲೈಫ್‌’ ಸಿನಿಮಾ ರಿಲೀಸ್‌ಗೆ ಸುಪ್ರೀಂ ಸೂಚನೆ

    ಮೊದಲ ಹಂತದ ಚಿತ್ರೀಕರಣವನ್ನು ಚಿತ್ರತಂಡ ಹೈದರಾಬಾದ್ ಹಾಗೂ ಚೆನ್ನೈನಲ್ಲಿ ಮಾಡಲು ಸಿದ್ಧವಾಗಿದ್ದು, ಜೂನ್ ಕೊನೆಯ ವಾರದಲ್ಲಿ ರೆಗ್ಯೂಲರ್ ಚಿತ್ರೀಕರಣ ಪ್ರಾರಂಭವಾಗಲಿದೆ. ಇದನ್ನೂ ಓದಿ: KRS ಬಳಿ ಅಮ್ಯೂಸ್‌ಮೆಂಟ್‌ ಪಾರ್ಕ್‌ ನಿರ್ಮಾಣಕ್ಕೆ ಮಾಜಿ ಸಂಸದೆ ಸುಮಲತಾ ವಿರೋಧ

    ಈ ಪ್ಯಾನ್ ಇಂಡಿಯಾ ಸಿನಿಮಾವು ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಸದ್ಯ ಘಟಾನುಘಟಿ ಕಲಾವಿದರ ಎಂಟ್ರಿಯಿಂದಾಗಿ ಪಾತ್ರವರ್ಗದ ತೂಕ ಹೆಚ್ಚುತ್ತಿದೆ.

  • ಪುರಿ ಜಗನ್ನಾಥ್, ವಿಜಯ್‌ ಸೇತುಪತಿ ಸಿನಿಮಾಗೆ ದುನಿಯಾ ವಿಜಯ್‌ ಎಂಟ್ರಿ

    ಪುರಿ ಜಗನ್ನಾಥ್, ವಿಜಯ್‌ ಸೇತುಪತಿ ಸಿನಿಮಾಗೆ ದುನಿಯಾ ವಿಜಯ್‌ ಎಂಟ್ರಿ

    ನಿರ್ದೇಶಕ ಪುರಿ ಜಗನ್ನಾಥ್‌ (Puri Jagannadh) ಹಾಗೂ ವಿಜಯ್‌ ಸೇತುಪತಿ (Vijay Sethupathi) ಕಾಂಬಿನೇಷನ್‌ ಸಿನಿಮಾ ಈಗಾಗಲೇ ತಾರಾಬಳಗದ ಮೂಲಕ ಕುತೂಹಲ ಹೆಚ್ಚಿಸಿದೆ. ಬಾಲಿವುಡ್‌ ನಟಿ ಟಬು ಇತ್ತೀಚೆಗಷ್ಟೇ ಚಿತ್ರತಂಡ ಸೇರಿಕೊಂಡ ಬೆನ್ನಲ್ಲೇ ಕನ್ನಡದ ನಟ ದುನಿಯಾ ವಿಜಯ್‌ (Duniya Vijay) ಅವರು ಪುರಿ ಜಗನ್ನಾಥ್‌ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ. ಇದನ್ನೂ ಓದಿ:ಬೀಚ್ ಬಳಿ ನಟಿ ತೃಪ್ತಿ ದಿಮ್ರಿ ಹಾಟ್ ಪೋಸ್‌

    ‘ವೀರ ಸಿಂಹ ರೆಡ್ಡಿ’ ಬಳಿಕ ವಿಜಯ್‌ ನಟಿಸಲಿರುವ ಎರಡನೇ ತೆಲುಗು ಸಿನಿಮಾ ಇದಾಗಿದೆ. ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ದುನಿಯಾ ವಿಜಯ್‌ ಅಭಿನಯಸಲಿದ್ದು, ಅವರನ್ನು ತಮ್ಮ ತಂಡಕ್ಕೆ ಪುರಿ ಜಗನ್ನಾಥ್‌ ಹಾಗೂ ನಿರ್ಮಾಪಕಿ ಚಾರ್ಮಿ ಬರ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ನಿರ್ಮಾಪಕಿಯಾದ ರಾಕಿಂಗ್ ಸ್ಟಾರ್ ಯಶ್ ತಾಯಿ

     

    View this post on Instagram

     

    A post shared by Puri Connects (@puriconnects)

    ಪುರಿ ಜಗನ್ನಾಥ್‌ ಬರೆದು ನಿರ್ದೇಶಿಸುತ್ತಿರುವ ಈ ಪ್ರಾಜೆಕ್ಟ್‌ ಪುರಿ ಕನೆಕ್ಟ್‌ ಬ್ಯಾನರ್‌ ನಡಿ ಮೂಡಿ ಬರಲಿದೆ. ಪುರಿ ಜಗನ್ನಾಥ್‌ ಹಾಗೂ ಚಾರ್ಮಿ ಕೌರ್‌ ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ. ಜೂನ್‌ನಿಂದ ಚಿತ್ರತಂಡ ಶೂಟಿಂಗ್‌ ಅಖಾಡಕ್ಕೆ ಇಳಿಯಲಿದೆ.

  • ಸತತ ಸಿನಿಮಾಗಳ ಸೋಲಿನ ನಡುವೆಯೂ ಸ್ಟಾರ್‌ ನಟನಿಗೆ ಪುರಿ ಜಗನ್ನಾಥ್ ಆ್ಯಕ್ಷನ್ ಕಟ್

    ಸತತ ಸಿನಿಮಾಗಳ ಸೋಲಿನ ನಡುವೆಯೂ ಸ್ಟಾರ್‌ ನಟನಿಗೆ ಪುರಿ ಜಗನ್ನಾಥ್ ಆ್ಯಕ್ಷನ್ ಕಟ್

    ತೆಲುಗು ನಿರ್ದೇಶಕ ಪುರಿ ಜಗನ್ನಾಥ್ (Puri Jagannadh) ಇತ್ತೀಚೆಗೆ ನಿರ್ದೇಶಿಸಿದ ಸಿನಿಮಾಗಳು ಥಿಯೇಟರ್‌ನಲ್ಲಿ ಮಕಾಡೆ ಮಲಗಿವೆ. ಹೀಗಿದ್ದರೂ ಸ್ಟಾರ್ ನಟನಿಗೆ ನಿರ್ದೇಶನ ಮಾಡುವ ಅವಕಾಶವನ್ನು ಪುರಿ ಜಗನ್ನಾಥ್ ಗಿಟ್ಟಿಸಿಕೊಂಡಿದ್ದಾರೆ. ಇದನ್ನೂ ಓದಿ:ಅಪ್ಪು ಕಂದ ಒಂದ್ಸಲ ಬಂದು ನನ್ನ ನೋಡ್ಕೊಂದು ಹೋಗು: ಪುನೀತ್ ಬಗ್ಗೆ ಸೋದರತ್ತೆ ಮಾತು

    ಒಂದು ಕಾಲದಲ್ಲಿ ಸಾಕಷ್ಟು ಹಿಟ್ ಸಿನಿಮಾಗಳನ್ನು ಕೊಟ್ಟಿರುವ ನಿರ್ದೇಶಕ. ಪುನೀತ್ ನಟನೆಯ ‘ಅಪ್ಪು’ ಸಿನಿಮಾಗೂ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದರು. ಇಷ್ಟೇಲ್ಲಾ ಟ್ಯಾಲೆಂಟೆಡ್ ನಿರ್ದೇಶಕನಾಗಿದ್ದರೂ ಅವರಿಗೆ ಅದೃಷ್ಟ ಕೈ ಕೊಟ್ಟಿದೆ. ಲೈಗರ್, ಡಬಲ್ ಇಸ್ಮಾರ್ಟ್ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಸೋತಿದೆ. ಹೀಗಿದ್ದರೂ ಅವರೊಂದಿಗೆ ಕೆಲಸ ಮಾಡಲು ಸ್ಟಾರ್ ನಟ ವಿಜಯ್ ಸೇತುಪತಿ (Vijay Sethupathi) ಮುಂದಾಗಿದ್ದಾರೆ. ‌

    ಸ್ಟಾರ್ ನಟರು ಪುರಿ ಜಗನ್ನಾಥ್ ಜೊತೆ ಕೆಲಸ ಮಾಡಲು ಹಿಂದೇಟು ಹಾಕ್ತಿದ್ದಾರೆ. ಹೀಗಿರುವಾಗ ವಿಜಯ್ ಸೇತುಪತಿ ಅವರು ಪುರಿ ಜಗನ್ನಾಥ್ ಬರೆದ ಕಥೆಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ವಿಜಯ್ ಮ್ಯಾನರಿಸಂ, ಆ್ಯಟಿಟ್ಯೂಡ್‌ಗೆ ತಕ್ಕಂತೆ ಸಿನಿಮಾ ಕಥೆ ಸಿದ್ಧವಾಗಿದ್ದು, ಈ ಬಾರಿ ಗೆಲ್ಲುವ ಭರವಸೆಯಲ್ಲಿದ್ದಾರೆ ನಿರ್ದೇಶಕ.

    ಸಾಲು ಸಾಲು ಸಿನಿಮಾ ಸೋಲಿನಿಂದ ಬಳಲಿರುವ ಪುರಿ ಜಗನ್ನಾಥ್‌ ಕೆರಿಯರ್‌ಗೆ ವಿಜಯ್‌ ಸಿನಿಮಾ ಸಕ್ಸಸ್‌ ಕೊಡುತ್ತಾ? ಎಂದು ಕಾಯಬೇಕಿದೆ.

  • `ಲೈಗರ್’ ಚಿತ್ರದ ಸೋಲಿನ ಬೆನ್ನಲ್ಲೇ ನಿರ್ದೇಶಕ ಪುರಿ ಜಗನ್ನಾಥ್ ಆಪ್ತ ಆತ್ಮಹತ್ಯೆ

    `ಲೈಗರ್’ ಚಿತ್ರದ ಸೋಲಿನ ಬೆನ್ನಲ್ಲೇ ನಿರ್ದೇಶಕ ಪುರಿ ಜಗನ್ನಾಥ್ ಆಪ್ತ ಆತ್ಮಹತ್ಯೆ

    `ಲೈಗರ್’ (Liger Film) ಚಿತ್ರದ ಸೋಲಿನ ಬಳಿಕ ನಿರ್ದೇಶಕ ಪುರಿ ಜಗನ್ನಾಥ್‌ಗೆ (Puri Jagannadh)  ಇದೀಗ ಮತ್ತೆ ಶಾಕಿಂಗ್ ಸುದ್ದಿಯೊಂದು ಎದುರಾಗಿದೆ. ಪುರಿ ಜಗನ್ನಾಥ್ ಅವರ ಆಪ್ತ ಸಾಯಿ ಕುಮಾರ್ ದುರ್ಗಂ ಹೊಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಟಾಲಿವುಡ್ (Tollywood) ಸ್ಟಾರ್ ನಿರ್ದೇಶಕನಾಗಿ ಗುರುತಿಸಿಕೊಂಡ ಪುರಿ ಜಗನ್ನಾಥ್‌ಗೆ ಅದೃಷ್ಟ ಕೈ ಕೊಟ್ಟಿದೆ. `ಲೈಗರ್’ (Liger Film) ಚಿತ್ರದ ಸೋಲಿನ ನಂತರ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ನಿರ್ದೇಶಕ ಪುರಿ ಬಳಿ ಅಸಿಸ್ಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಸಾಯಿ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುರಿ ಅವರ ಬಳಿ ಸಾಕಷ್ಟು ಸಿನಿಮಾಗಳಲ್ಲಿ ಕೆಲಸ ಮಾಡಿ, ಸಾಯಿ ಕುಮಾರ್ ಸೈ ಎನಿಸಿಕೊಂಡಿದ್ದರು.

    ಸಾಯಿಕುಮಾರ್ ಸಾವಿಗೆ ಅವರು ಮಾಡಿಕೊಂಡಿದ್ದ ಸಾಲವೇ ಕಾರಣ ಎನ್ನಲಾಗುತ್ತಿದೆ. ಮಾಡಿರುವ ಸಾಲ ತೀರಿಸಲಾಗದೇ ಅಸಿಸ್ಟೆಂಟ್ ಸಾಯಿ ಸಾವಿಗೆ ಶರಣಾಗಿದ್ದಾರೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಇನ್ನು ಸಹಾಯಕನ ಸಾವಿನ ಸುದ್ದಿ ಕೇಳಿ ಪುರಿ ಜಗನ್ನಾಥ್ ಶಾಕ್ ಆಗಿದ್ದಾರೆ. ಇದನ್ನೂ ಓದಿ:ರಕ್ತದಿಂದ ತನ್ನ ಪೇಂಟಿಂಗ್ ಮಾಡಿದ ಅಭಿಮಾನಿಗೆ ಖಡಕ್ ವಾರ್ನಿಂಗ್ ಕೊಟ್ಟ ಸೋನು ಸೂದ್

    ಇನ್ನು `ಲೈಗರ್’ ನಂತರ ವಿಜಯ್ ದೇವರಕೊಂಡ (Vijay Devarakonda) ಮತ್ತು ಪುರಿ ಜಗನ್ನಾಥ್ ಕಾಂಬಿನೇಷನ್‌ನ  `ಜನಗಣಮನ’ ಹೊಸ ಚಿತ್ರವಾಗಿದ್ದು, ಈ ಸಿನಿಮಾ ಬಜೆಟ್ ಕೊರತೆಯಿಂದ ನಿಂತು ಹೋಗಿದೆ ಎನ್ನಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]