Tag: Puri Jagannath Temple

  • ದೇವಸ್ಥಾನವನ್ನು ಸ್ಫೋಟಿಸುತ್ತೇವೆ – ಪುರಿ ದೇಗುಲದ ಗೋಡೆ ಮೇಲೆ ಬರಹ

    ದೇವಸ್ಥಾನವನ್ನು ಸ್ಫೋಟಿಸುತ್ತೇವೆ – ಪುರಿ ದೇಗುಲದ ಗೋಡೆ ಮೇಲೆ ಬರಹ

    ಭುವನೇಶ್ವರ: ಐತಿಹಾಸಿಕ ಪುರಿ ಜಗನ್ನಾಥ ದೇವಾಲಯದ (Puri Jagannath Temple) ಗೋಡೆಯ ಮೇಲೆ ದೇವಾಲಯವನ್ನು ಸ್ಫೋಟಿಸುವುದಾಗಿ ಭಯೋತ್ಪಾದಕ ದಾಳಿಯ ಬೆದರಿಕೆ ಬರಹ (Threatening Graffiti) ಪತ್ತೆಯಾಗಿದೆ.

    ದೇವಸ್ಥಾನದ ಪರಿಕ್ರಮ ಮಾರ್ಗದುದ್ದಕ್ಕೂ ಇರುವ ಬುಧಿ ಮಾ ದೇವಾಲಯದ ಗೋಡೆಗಳ ಮೇಲೆ ಭಯೋತ್ಪಾದಕ ದಾಳಿಯ ಬೆದರಿಕೆ ಸಂದೇಶ ಪತ್ತೆಯಾಗಿದೆ. ದೇವಾಲಯದ ಒಂದು ಗೋಡೆಯ ಮೇಲೆ ಭಯೋತ್ಪಾದಕರು ದೇವಾಲಯದ ಮೇಲೆ ದಾಳಿ ಮಾಡಿ ನಾಶಪಡಿಸುತ್ತಾರೆ ಎಂದು ಬರೆದಿದ್ದಾರೆ. ಇದನ್ನೂ ಓದಿ: ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಮಿನಿಮಮ್ ಬ್ಯಾಲನ್ಸ್ ಮೊತ್ತ ಇಳಿಸಿದ ICICI ಬ್ಯಾಂಕ್‌

    ಇನ್ನೊಂದು ಗೋಡೆಯ ಮೇಲೆ ಫೋನ್ ನಂಬರ್‌ಗಳನ್ನು ಬರೆದು, ಈ ಸಂಖ್ಯೆಗಳನ್ನು ಸಂಪರ್ಕಿಸದಿದ್ದರೆ ಗಲಭೆಗಳು ನಡೆಯುತ್ತವೆ ಎಂಬ ಎಚ್ಚರಿಕೆ ನೀಡಿದ್ದಾರೆ. ಸದ್ಯ ಸ್ಥಳಕ್ಕೆ ಪುರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

    ಅಲ್ಲದೇ ಬೆದರಿಕೆ ಬರಹದ ಹಿಂದಿರುವವರ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ. ಸದ್ಯ ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದು, ಭದ್ರತಾ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ.

  • ಪುರಿಯ ಜಗನ್ನಾಥ ದೇವಸ್ಥಾನದ ಮೇಲೆ ಡ್ರೋನ್ ಹಾರಾಟ – ದೇವಾಲಯದ ಸುತ್ತ ಪೊಲೀಸ್ ಬಿಗಿಭದ್ರತೆ

    ಪುರಿಯ ಜಗನ್ನಾಥ ದೇವಸ್ಥಾನದ ಮೇಲೆ ಡ್ರೋನ್ ಹಾರಾಟ – ದೇವಾಲಯದ ಸುತ್ತ ಪೊಲೀಸ್ ಬಿಗಿಭದ್ರತೆ

    ಭುವನೇಶ್ವರ: ಪುರಿಯ ಜಗನ್ನಾಥ ದೇವಾಲಯದ (Puri Jagannath Temple) ಮೇಲೆ ಇಂದು ಡ್ರೋನ್ (Drone) ಹಾರಾಟ ನಡೆಸಿದ್ದು, ಈ ಹಿನ್ನೆಲೆ ತನಿಖೆಗಾಗಿ ತಂಡವನ್ನು ರಚಿಸಿದೆ.

    ಇಂದು (ಜ.05) ಮುಂಜಾನೆ 4:10ರ ಸುಮಾರಿಗೆ ದೇವಸ್ಥಾನದ ಮೇಲೆ ಡ್ರೋನ್ ಹಾರಾಟ ನಡೆಸಿದ್ದು, ಸುಮಾರು ಅರ್ಧಗಂಟೆಗಳ ಕಾಲ ಹಾರಾಡಿದೆ. ಇದರಿಂದ ಭಯದ ವಾತಾವರಣ ಸೃಷ್ಟಿಯಾಗಿದ್ದು, ದೇವಾಲಯದ ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ.ಇದನ್ನೂ ಓದಿ: ಮಗಳ ಜೊತೆಗಿನ ಮುದ್ದಾದ ವಿಡಿಯೋ ಹಂಚಿಕೊಂಡ ಮಿಲನಾ ನಾಗರಾಜ್‌

    ಈ ಕುರಿತು ಕಾನೂನು ಸಚಿವ ಪೃಥ್ವಿರಾಜ್ ಹರಿಚಂದನ್ ಮಾತನಾಡಿ, ದೇವಸ್ಥಾನದ ಮೇಲೆ ಡ್ರೋನ್ ಹಾರಿಸುವುದು ಕಾನೂನುಬಾಹಿರ ಮತ್ತು ಸ್ವೀಕಾರಾರ್ಹವಲ್ಲ, ಭದ್ರತೆಯನ್ನು ಉಲ್ಲಂಘಿಸಿದ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಂಬಂಧಪಟ್ಟ ವ್ಯಕ್ತಿಯನ್ನು ಪತ್ತೆ ಹಚ್ಚಿ, ಡ್ರೋನ್ ಅನ್ನು ವಶಪಡಿಸಿಕೊಳ್ಳಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಪುರಿ ಎಸ್ಪಿ ತಂಡಗಳನ್ನು ರಚಿಸಿ, ತನಿಖೆಯನ್ನು ಪ್ರಾರಂಭಿಸಿದ್ದಾರೆ ಎಂದರು.

    ದೇವಾಲಯವು ಡ್ರೋನ್ ಹಾರಾಟ ನಿಷೇಧ ವಲಯವಾಗಿರುವುದರಿಂದ ಸದ್ಯ ಭದ್ರತೆಯನ್ನು ಹೆಚ್ಚಿಸಿದೆ. ಭವಿಷ್ಯದಲ್ಲಿ ಇಂತಹ ಘಟನೆ ನಡೆಯದಂತೆ ನೋಡಿಕೊಳ್ಳಲು ದೇವಸ್ಥಾನದ ಸುತ್ತಲಿನ ನಾಲ್ಕು ಕಾವಲು ಗೋಪುರಗಳಲ್ಲಿ 24 ಗಂಟೆಯೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲು ಸರ್ಕಾರ ಯೋಜಿಸುತ್ತಿದೆ ಎಂದು ಹೇಳಿದರು.

    ಸದ್ಯ ಯಾರೋ ಒಬ್ಬ ವ್ಲಾಗರ್ ಡ್ರೋನ್ ಅನ್ನು ದೇವಸ್ಥಾನದ ಮೇಲೆ ಹಾರಿಸಿರಬಹುದು ಎಂದು ಶಂಕಿಸಲಾಗಿದೆ. ಆದರೆ ತನಿಖೆ ನಡೆಸಿ, ಅದರ ಹಿಂದಿನ ಉದ್ದೇಶ ತಿಳಿದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಚುನಾವಣೆಯಲ್ಲಿ ಗೆದ್ದರೆ ಪ್ರಿಯಾಂಕ ಕೆನ್ನೆಯಂತೆ ನಯವಾದ ರಸ್ತೆಗಳನ್ನು ನಿರ್ಮಿಸುತ್ತೇನೆ: ಬಿಜೆಪಿ ಅಭ್ಯರ್ಥಿ ವಿವಾದಾತ್ಮಕ ಹೇಳಿಕೆ

  • 46 ವರ್ಷಗಳ ಬಳಿಕ ತೆರೆದ ಪುರಿ ಜಗನ್ನಾಥ ‘ರತ್ನ ಭಂಡಾರ’ದ ಬಾಗಿಲು

    46 ವರ್ಷಗಳ ಬಳಿಕ ತೆರೆದ ಪುರಿ ಜಗನ್ನಾಥ ‘ರತ್ನ ಭಂಡಾರ’ದ ಬಾಗಿಲು

    ಭುವನೇಶ್ವರ: 46 ವರ್ಷಗಳ ಬಳಿಕ ಪುರಿ ಜಗನ್ನಾಥ ದೇವಾಲಯದ (Puri Jagannath Temple) ರತ್ನ ಭಂಡಾರದ ಬಾಗಿಲು ತೆರೆದಿದೆ. ಇಂದು ಮಧ್ಯಾಹ್ನ 1:28 ರತ್ನ ಭಂಡಾರ ತೆರೆಯಲಾಯಿತು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

    12ನೇ ಶತಮಾನದ ಪುರಿ ಜಗನ್ನಾಥ ದೇವಾಲಯದಲ್ಲಿರುವ ರತ್ನ ಭಂಡಾರವು (Ratna Bhandar) ಆಭರಣಗಳು ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ಒಳಗೊಂಡಿದೆ. ಮೊದಲು ಹೊರ ಖಜಾನೆ ತೆರೆಯಲಾಗಿದೆ. ನಂತರ ಒಳ ಖಜಾನೆ ತೆರೆಯಲಾಗುತ್ತದೆ. ಇದನ್ನೂ ಓದಿ: 46 ವರ್ಷದ ನಂತರ ತೆರೆಯಲಿದೆ ಪುರಿ ಜಗನ್ನಾಥ ದೇಗುಲ ರತ್ನ ಭಂಡಾರದ ಬಾಗಿಲು!

    ಎಲ್ಲವನ್ನೂ ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನದ ಪ್ರಕಾರ ನಡೆಸಲಾಗುತ್ತಿದೆ. ಉನ್ನತ ಮಟ್ಟದ ಸಮಿತಿ ಮತ್ತು ಅದರ ಸದಸ್ಯರು ಹೊರಬಂದ ನಂತರ ವಿವರಗಳನ್ನು ನೀಡುತ್ತಾರೆ ಎಂದು ಪುರಿ ಎಸ್‌ಪಿ ಪಿನಾಕ್ ಮಿಶ್ರಾ ತಿಳಿಸಿದ್ದಾರೆ. ಬೆಲೆಬಾಳುವ ವಸ್ತುಗಳನ್ನು ತಾತ್ಕಾಲಿಕ ಸ್ಟ್ರಾಂಗ್ ರೂಮ್‌ಗೆ ಸ್ಥಳಾಂತರಿಸಲು ವಿಶೇಷ ಪೆಟ್ಟಿಗೆಗಳನ್ನು ದೇವಸ್ಥಾನಕ್ಕೆ ತರಲಾಯಿತು.

    ಒರಿಸ್ಸಾ ಹೈಕೋರ್ಟ್‌ನ ನ್ಯಾಯಮೂರ್ತಿ ಬಿಸ್ವನಾಥ್ ರಾತ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಈ ಪ್ರಕ್ರಿಯೆಗೆ ಹಸಿರು ನಿಶಾನೆ ತೋರಿತು. ಸರ್ಕಾರದ ಅನುಮೋದನೆಯನ್ನು ಪಡೆದ ನಂತರ, ದಾಸ್ತಾನುಗಳಿಗೆ ಮಾರ್ಗದರ್ಶನ ನೀಡಲು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳನ್ನು ಸ್ಥಾಪಿಸಲಾಯಿತು. ಜಗನ್ನಾಥ ದೇವಸ್ಥಾನದ ಆಡಳಿತವು ಅದರ ಮುಖ್ಯ ಆಡಳಿತಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆಯನ್ನು ನೋಡಿಕೊಳ್ಳುತ್ತಿದೆ. ಇದನ್ನೂ ಓದಿ: 4 ವರ್ಷಗಳಲ್ಲಿ 8 ಕೋಟಿ ಉದ್ಯೋಗ ಸೃಷ್ಟಿ – ಲೆಕ್ಕಕೊಟ್ಟ ಮೋದಿ ವಿರುದ್ಧ ಖರ್ಗೆ ಕಿಡಿ!

    ಪುರಿ ಜಿಲ್ಲಾಡಳಿತದ ಬಳಿಯಿದ್ದ ನಕಲಿ ಕೀ ಬಳಸಿ ಖಜಾನೆ ತೆರೆಯಲಾಗಿದೆ. ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ, ವೈದ್ಯಕೀಯ ತಂಡ ಮತ್ತು ಉರಗ ತಜ್ಞರ ತಂಡದ ಸದಸ್ಯರು ಸಹ ಸ್ಟ್ಯಾಂಡ್‌ಬೈನಲ್ಲಿ ಇದ್ದರು.

  • ಪುರಿಯ ಜಗನ್ನಾಥ ದೇವಾಲಯದ ಎಲ್ಲಾ 4 ದ್ವಾರಗಳು ಓಪನ್

    ಪುರಿಯ ಜಗನ್ನಾಥ ದೇವಾಲಯದ ಎಲ್ಲಾ 4 ದ್ವಾರಗಳು ಓಪನ್

    – ಒಡಿಶಾ ಬಿಜೆಪಿ ಸರ್ಕಾರದಿಂದ ಭರವಸೆ ಈಡೇರಿಕೆ

    ಭುವನೇಶ್ವರ: ಪುರಿಯ ಜಗನ್ನಾಥ ದೇವಾಲಯದ (Puri Jagannath Temple) ಎಲ್ಲಾ ನಾಲ್ಕು ದ್ವಾರಗಳನ್ನು ಇಂದು (ಜೂ.13) ತೆರೆಯಲಾಗಿದೆ.

    ಚುನಾವಣೆಗೂ ಮುನ್ನ ಬಿಜೆಪಿ (BJP) ಗೆದ್ದರೆ ದೇವಾಲಯದ ಎಲ್ಲಾ ದ್ವಾರಗಳನ್ನು ಭಕ್ತರಿಗಾಗಿ ತೆರೆಯುವುದಾಗಿ ಹೆಳಿತ್ತು. ಇದೀಗ ನೂತನವಾಗಿ ರಚನೆಯಾದ ಬಿಜೆಪಿ ಸರ್ಕಾರ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಯನ್ನು ನೆರವೇರಿಸಿದೆ. ಬೆಳಗ್ಗೆ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ (Mohan Charan Majhi), ಪುರಿ ಸಂಸದ ಸಂಬಿತ್ ಪಾತ್ರ ಸೇರಿದಂತೆ ಬಿಜೆಪಿಯ ನಾಯಕರು ತೆರಳಿ ದೇವಾಲಯದ ದ್ವಾರಗಳನ್ನು ತೆರೆಯುವ ಮಹತ್ವದ ಕ್ಷಣದಲ್ಲಿ ಭಾಗಿಯಾಗಿದ್ದರು.

    ಮಾಂಝಿ ಅವರು ಬುಧವಾರದ ತಮ್ಮ ಮೊದಲ ಕ್ಯಾಬಿನೆಟ್ ಸಭೆಯಲ್ಲಿ, ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಮುಚ್ಚಲ್ಪಟ್ಟಿರುವ ಪವಿತ್ರ ದೇಗುಲದ ಎಲ್ಲಾ ದ್ವಾರಗಳನ್ನು ಭಕ್ತರಿಗಾಗಿ ಮತ್ತೆ ತೆರೆಯುವ ಪ್ರಸ್ತಾಪವನ್ನು ಅನುಮೋದಿಸಿದರು. ಅಲ್ಲದೇ 12ನೇ ಶತಮಾನದ ಈ ದೇಗುಲದ ಅಭಿವೃದ್ಧಿ ಹಾಗೂ ನಿರ್ವಹಣೆಗಾಗಿ 500 ಕೋಟಿ ರೂ. ಮೌಲ್ಯದ ಕಾರ್ಪಸ್ ನಿಧಿಯನ್ನು ಸ್ಥಾಪಿಸುವುದಾಗಿ ಕ್ಯಾಬಿನೆಟ್ ಘೋಷಿಸಿತು. ಇದನ್ನೂ ಓದಿ: ನೀಟ್‌ ಯುಜಿ ವಿವಾದ – 1563 ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಗ್ರೇಸ್‌ ಅಂಕ ರದ್ದು

    ಪುರಿಯ ಜಗನ್ನಾಥ ದೇವಾಲಯದಲ್ಲಿ ನಾಲ್ಕು ದ್ವಾರಗಳಿವೆ. ಅವುಗಳೆಂದರೆ ಸಿಂಹದ್ವಾರ, ಅಶ್ವದ್ವಾರ, ವ್ಯಾಘ್ರದ್ವಾರ, ಮತ್ತು ಹಸ್ತಿದ್ವಾರ. ಈ ದ್ವಾರಗಳು ದೇವಾಲಯದ ನಾಲ್ಕು ಬದಿಗಳಲ್ಲಿದೆ. ಕೋವಿಡ್ ಹರಡುತ್ತಿದ್ದ ಸಮಯದಲ್ಲಿ ಈ ಬಾಗಿಲುಗಳನ್ನು ಮುಚ್ಚಲಾಗಿತ್ತು. ನಂತರ, ಭಕ್ತರಿಗೆ ಸಿಂಹದ್ವಾರದ ಮೂಲಕ ದೇವಾಲಯಕ್ಕೆ ಪ್ರವೇಶಿಸಲು ಅವಕಾಶ ನೀಡಲಾಗಿತ್ತು. ಇದರಿಂದಾಗಿ ಭಾರೀ ಜನದಟ್ಟಣೆಯಿಂದ ಭಕ್ತರು ಸಂಕಷ್ಟಪಡುವಂತಾಗಿತ್ತು. ಈ ಎಲ್ಲಾ ದ್ವಾರಗಳನ್ನು ತೆರೆಯುವುದು ಬಿಜೆಪಿಯ ದೊಡ್ಡ ಚುನಾವಣಾ ಭರವಸೆಗಳಲ್ಲಿ ಒಂದಾಗಿತ್ತು.

    ಬುಧವಾರ (ಜೂ.12) ಭುವನೇಶ್ವರದಲ್ಲಿ ಒಡಿಶಾದ (Odisha) ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಮಾಝಿ ಪ್ರಮಾಣ ವಚನ ಸ್ವೀಕರಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಭಾಗವಹಿಸಿದ್ದರು. ಇದನ್ನೂ ಓದಿ: ಕೇಂದ್ರ ಸಚಿವರಾಗಿ ಮೊದಲ ಕಡತಕ್ಕೆ ಹೆಚ್‌ಡಿಕೆ ಸಹಿ!

  • ಪುರಿ ಜಗನ್ನಾಥ ದೇವಾಲಯಕ್ಕೆ ಭೇಟಿ ನೀಡಿದ ಕಂಗನಾ ರನೌತ್

    ಪುರಿ ಜಗನ್ನಾಥ ದೇವಾಲಯಕ್ಕೆ ಭೇಟಿ ನೀಡಿದ ಕಂಗನಾ ರನೌತ್

    ಮುಂಬೈ: ಬಾಲಿವುಡ್ ನಟಿ ಕಂಗನಾ ರನೌತ್ ಶುಕ್ರವಾರ ಬೆಳಿಗ್ಗೆ ಒಡಿಶಾದ ಪವಿತ್ರ ಪುರಿ ಜಗನ್ನಾಥ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

    ತಮ್ಮ ಮುಂದಿನ ಧಾಕಾಡ್ ಸಿನಿಮಾದ ಚಿತ್ರೀಕರಣದಿಂದ ಕಂಗನಾ ಕೊಂಚ ಬಿಡುವು ಮಾಡಿಕೊಂಡಿದ್ದು, ಶುಕ್ರವಾರ ಮುಂಜಾನೆ 6 ಗಂಟೆಗೆ ದೇವಾಲಯಕ್ಕೆ ಭೇಟಿ ನೀಡಿಲಿರುವ ವಿಚಾರವನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಖಾತೆಯಲ್ಲಿ ತಿಳಿಸಿದ್ದರು.

    ಸದ್ಯ ಇಂದು ದೇವಾಲಯಕ್ಕೆ ಭೇಟಿ ನೀಡಿದ ಅನುಭವ ಕುರಿತು ಕೆಲವೊಂದಷ್ಟು ಫೋಟೋಗಳನ್ನು ಕಂಗನಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ನಟಿ ಕಂಗನಾ, ಬಿಳಿ ಬಟ್ಟೆಯನ್ನು ಧರಿಸಿದ್ದು, ಅದಕ್ಕೆ ಸೂಟ್ ಆಗುವಂತಹ ಚಿನ್ನದ ಒಡವೆಗಳನ್ನು ಧರಿಸಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಅವರ ಕರ್ಲಿ ಹೇರ್‍ನನ್ನು ಬನ್ ಮೂಲಕ ಅಚ್ಚುಕಟ್ಟಾಗಿ ಮೇಲಕ್ಕೆತ್ತಿ ಕಟ್ಟಿದ್ದಾರೆ. ಅವರ ಉಡುಗೆ ತೊಡುಗೆಯೂ ದೇವಾಲಯಕ್ಕೆ ಭೇಟಿ ನೀಡುವವರು ಧರಿಸುವಂತ ಉಡುಗೆಯಂತೆಯೇ ಎದ್ದು ಕಾಣಿಸುತ್ತದೆ.

    ಈ ಕುರಿತ ಫೋಟೋ ಶೇರ್ ಮಾಡಿಕೊಂಡಿರುವ ಕಂಗನಾ, ನಾವು ಯಾವಾಗಲೂ ಕೃಷ್ಣ ರಾಧ, ರುಕ್ಮಿಣಿ ಜೊತೆ ಇರುವುದನ್ನು ನೋಡಿದ್ದೇವೆ. ಆದರೆ ಪುರಿ ಜಗನ್ನಾಥ ದೇವಾಲಯದಲ್ಲಿ ಕೃಷ್ಣನನ್ನು ತನ್ನ ಸಹೋದರ ಬಲರಾಮ ಮತ್ತು ಅರ್ಜುನನ ಪತ್ನಿ ಸುಭದ್ರೆ ಜೊತೆ ಇರಿಸಲಾಗಿದೆ. ಅಲ್ಲದೆ ತನ್ನ ಹೃದಯ ಚಕ್ರದ ಮೂಲಕ ಈ ಸ್ಥಳ ಎಲ್ಲವನ್ನು ಗುಣಪಡಿಸುತ್ತದೆ ಮತ್ತು ಹಿತವಾದ ಅನುಭವ ನೀಡುತ್ತದೆ ಎಂದು ಕ್ಯಾಪ್ಷನ್ ಹಾಕಿಕೊಂಡಿದ್ದಾರೆ.