Tag: purple line

  • ಭಾನುವಾರ ನೇರಳೆ ಮಾರ್ಗದ ಮೆಟ್ರೋದಲ್ಲಿ 3 ಗಂಟೆಗಳ ಕಾಲ ಸಂಚಾರ ರದ್ದು – ಎಲ್ಲೆಲ್ಲಿ ಸ್ಥಗಿತ?

    ಭಾನುವಾರ ನೇರಳೆ ಮಾರ್ಗದ ಮೆಟ್ರೋದಲ್ಲಿ 3 ಗಂಟೆಗಳ ಕಾಲ ಸಂಚಾರ ರದ್ದು – ಎಲ್ಲೆಲ್ಲಿ ಸ್ಥಗಿತ?

    ಬೆಂಗಳೂರು: ಮಾ 9ರ ಭಾನುವಾರದಂದು ನಮ್ಮ ಮೆಟ್ರೋದ (Namma Metro) ನೇರಳೆ ಮಾರ್ಗದಲ್ಲಿ (Purple Line) 3 ಗಂಟೆಗಳ ಕಾಲ ಭಾಗಶಃ ಸಂಚಾರ ರದ್ದಾಗಲಿದೆ ಎಂದು ಬಿಎಂಆರ್‌ಸಿಎಲ್ (BMRCL) ತಿಳಿಸಿದೆ.ಇದನ್ನೂ ಓದಿ: ಬೆಂಗಳೂರಿನ 2ನೇ ಏರ್‌ಪೋರ್ಟ್‌ ಎಲ್ಲಿ ನಿರ್ಮಾಣ ಆಗುತ್ತೆ? – 3 ಜಾಗ ಫೈನಲ್‌, ಕೇಂದ್ರಕ್ಕೆ ರವಾನೆ

    ನೇರಳೆ ಮಾರ್ಗದಲ್ಲಿ ಮೆಟ್ರೋ ಹಳಿಯ ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಭಾನುವಾರ ಬೆಳಿಗ್ಗೆ 7 ಗಂಟೆಯಿಂದ 10 ಗಂಟೆಯವರೆಗೆ ಮಾಗಡಿ ರೋಡ್ ಹಾಗೂ ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ. ಈ ಅವಧಿಯಲ್ಲಿ ಕಬ್ಬನ್ ಪಾರ್ಕ್, ಡಾ.ಬಿ.ಆರ್ ಅಂಬೇಡ್ಕರ್ ನಿಲ್ದಾಣ ವಿಧಾನಸೌಧ, ಸರ್ ಎಂ.ವಿಶ್ವೇಶ್ವರಯ್ಯ ನಿಲ್ದಾಣ ಸೆಂಟ್ರಲ್ ಕಾಲೇಜು, ಮೆಜೆಸ್ಟಿಕ್ ಹಾಗೂ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ನಿಲ್ದಾಣಗಳಲ್ಲಿ ಮೆಟ್ರೋ ಸಂಚಾರವಿರುವುದಿಲ್ಲ ಎಂದು ಮಾಹಿತಿ ನೀಡಿದೆ.

    ಇದರ ಹೊರತಾಗಿ ಚಲ್ಲಘಟ್ಟದಿಂದ ಮಾಗಡಿ ರೋಡ್ ಹಾಗೂ ಎಂಜಿ ರಸ್ತೆಯಿಂದ ವೈಟ್ ಫೀಲ್ಡ್‌ವರೆಗೆ ಎಂದಿನಂತೆ ಮೆಟ್ರೋ ಸಂಚಾರ ಇರಲಿದ್ದು, ಬೆಳಿಗ್ಗೆ 7 ಗಂಟೆಗೆ ಮೆಟ್ರೋ ಆರಂಭವಾಗಲಿದೆ. ಜೊತೆಗೆ ಭಾನುವಾರದಂದು ನೇರಳೆ ಮಾರ್ಗದಲ್ಲಿ ಕ್ಯೂಆರ್ ಟಿಕೆಟ್‌ಗಳ ಖರೀದಿಗೆ ಅವಕಾಶವಿರುವುದಿಲ್ಲ. ಇನ್ನೂ ನಮ್ಮ ಮೆಟ್ರೋದ ಹಸಿರು ಮಾರ್ಗದಲ್ಲಿ ರೇಷ್ಮೆ ಸಂಸ್ಥೆಯಿಂದ ಮಾದಾವರ ನಡುವೆ ಬೆಳಿಗ್ಗೆ 7 ಗಂಟೆಗೆ ಮೆಟ್ರೋ ಸಂಚಾರ ಆರಂಭವಾಗಲಿದೆ.ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬಜೆಟ್‌ನಲ್ಲಿ ಒತ್ತು ನೀಡಲಾಗಿದೆ – ಈಶ್ವರ ಖಂಡ್ರೆ

  • ಭಾರೀ ಮಳೆಗೆ ಟ್ರ್ಯಾಕ್‌ಗೆ ಬಿದ್ದ ಮರ: ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

    ಭಾರೀ ಮಳೆಗೆ ಟ್ರ್ಯಾಕ್‌ಗೆ ಬಿದ್ದ ಮರ: ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

    – ಮರ ತೆರವು ಬಳಿಕ ಮೆಟ್ರೋ ಸಂಚಾರ ಮತ್ತೆ ಆರಂಭ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಟ್ರ್ಯಾಕ್‌ಗೆ ಮರ ಉರುಳಿ, ನೇರಳ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲು (Namma Metro) ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಸಿಬ್ಬಂದಿ ಮರ ತೆರವುಗೊಳಿಸಿದ ಬಳಿಕ ಮೆಟ್ರೋ ಸಂಚಾರ ಮತ್ತೆ ಆರಂಭವಾಯಿತು.

    ಎರಡು ದಿನಗಳಿಂದ ಬೆಂಗಳೂರಿನಲ್ಲಿ ವರುಣ ಅಬ್ಬರಿಸುತ್ತಿದ್ದು, ಮಳೆಯ ಪರಿಣಾಮ ನಮ್ಮ ಮೆಟ್ರೋ ರೈಲಿನ ನೇರಳೆ ಬಣ್ಣದ (Purple Line Metro) ಮಾರ್ಗದಲ್ಲಿ ಮರವೊಂದು ಟ್ರ್ಯಾಕ್‌ಗೆ ಉರುಳಿ, ಎಸ್‌ವಿ ರೋಡ್ ಹಾಗೂ ಇಂದಿರಾನಗರ ನಡುವೆ ಮೆಟ್ರೋ ಸಂಚಾರ ಸ್ಥಗಿತಗೊಂಡು ವ್ಯತ್ಯಯ ಉಂಟಾಗಿತ್ತು.ಇದನ್ನೂ ಓದಿ:

    ಬುಧವಾರ ಬೆಳಗ್ಗೆ 6:05ರಿಂದ 8 ಗಂಟೆಯವರೆಗೆ ಮೆಟ್ರೋ ಸಂಚಾರ ಸ್ಥಗಿತಗೊಂಡಿತ್ತು. ಬಿಎಂಆರ್‌ಸಿಎಲ್ (BMRCL) ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಮರವನ್ನು ತೆರವುಗೊಳಿಸಿದರು. ಈ ವೇಳೆ ಇಂದಿರಾನಗರ -ಚಲಘಟ್ಟ ಹಾಗೂ ಬೈಯಪ್ಪನಹಳ್ಳಿ – ವೈಟ್‌ಫೀಲ್ಡ್ ನಿಲ್ದಾಣದವರೆಗೆ ಮೆಟ್ರೋ ಸುಗಮ ಸಂಚಾರಗೊಂಡಿದ್ದು, ಈ ಎರಡು ಮೆಟ್ರೋ ನಿಲ್ದಾಣಗಳ ಮಧ್ಯೆ ರೈಲು ಸಂಚಾರ ಸ್ಥಗಿತಗೊಂಡಿತ್ತು.

    ಮೆಟ್ರೋ ಸಂಚಾರ ಪುನರಾರಂಭ:
    ಬುಧವಾರ ಬೆಳಗ್ಗೆ 6:05 ಸ್ಥಗಿತಗೊಂಡ ಮೆಟ್ರೋ, ಮರವು ತೆರವುಗೊಳಿಸಿದ ಬಳಿಕ 8 ಗಂಟೆಗೆ ಮತ್ತೆ ಪುನರಾರಂಭಗೊಂಡಿದೆ. ಇದೀಗ ಎಂದಿನಂತೆ ಮೆಟ್ರೋ ರೈಲು ಸಂಚಾರ ಆರಂಭಗೊಂಡಿದೆ.ಇದನ್ನೂ ಓದಿ:

  • ಆಟವಾಡುತ್ತಾ ಮೆಟ್ರೋ ಹಳಿಗೆ ಬಿದ್ದ ಮಗು – ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಪಾರು

    ಆಟವಾಡುತ್ತಾ ಮೆಟ್ರೋ ಹಳಿಗೆ ಬಿದ್ದ ಮಗು – ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಪಾರು

    ಬೆಂಗಳೂರು: ನಮ್ಮ ಮೆಟ್ರೋ (Namma Metro) ನೇರಳೆ ಮಾರ್ಗದಲ್ಲಿರುವ (Purple Line) ಬೈಯಪ್ಪನಹಳ್ಳಿ ನಿಲ್ದಾಣದಲ್ಲಿ (Baiyappanahalli Metro Station) ಗುರುವಾರ ರಾತ್ರಿ ಸಂಭವಿಸಬಹುದ ಭಾರೀ ಅನಾಹುತವೊಂದು ತಪ್ಪಿದೆ.

    ರಾತ್ರಿ 9 ಗಂಟೆ ಸುಮಾರಿಗೆ ತಾಯಿಯೊಂದಿಗೆ ಪ್ಲಾಟ್‌ಫಾಂನಲ್ಲಿ ಆಟವಾಡುತ್ತಿದ್ದ 4 ವರ್ಷದ ಬಾಲಕ ಇದ್ದಕ್ಕಿದ್ದಂತೆ ಟ್ರ್ಯಾಕ್‌ ಮೇಲೆ ಜಿಗಿದಿದ್ದಾನೆ. ಕೂಡಲೇ ಮೆಟ್ರೋ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಅದೃಷ್ಟವಶಾತ್ ಅಪಾಯದಿಂದ ಬಾಲಕ ಪಾರಾಗಿದ್ದಾನೆ. ಇದನ್ನೂ ಓದಿ: MUDA Scam | ಸರ್ಕಾರ Vs ರಾಜಭವನ – ರಾಜ್ಯಪಾಲರ ಮುಂದಿರುವ ಆಯ್ಕೆಗಳೇನು?

    ಮಗು ಬಿದ್ದ ಕೂಡಲೇ ಮೆಟ್ರೋ ಟ್ರ‍್ಯಾಕ್‌ನ ವಿದ್ಯುತ್‌ ಸಂಚಾರವನ್ನು ಸ್ಥಗಿತಗೊಳಿಸಿ ರಕ್ಷಣೆ ಮಾಡಲಾಗಿತ್ತು. ಮಗುವಿಗೆ ಸಣ್ಣ ಪುಟ್ಟ ತರಚಿದ ಗಾಯವಾಗಿದ್ದು, ಯಾವುದೇ ಸಮಸ್ಯೆಯಾಗಿಲ್ಲ. ಮೆಟ್ರೋ ಸಿಬ್ಬಂದಿ ಜೊತೆಗೆ ಮಗುವನ್ನು ಸ್ಥಳೀಯ ಆಸ್ಪತ್ರೆ ಕಳುಹಿಸಲಾಗಿದೆ. ಇದನ್ನೂ ಓದಿ: ಸೈನಿಕರಿಗೆ ಸೆಲ್ಯೂಟ್‌: ಕೇವಲ 16 ಗಂಟೆಯಲ್ಲಿ 24 ಟನ್‌ ಸಾಮರ್ಥ್ಯದ 190 ಅಡಿ ಉದ್ದದ ಸೇತುವೆ ರೆಡಿ!

    ವಿದ್ಯುತ್‌ ಸಂಪರ್ಕ ಸ್ಥಗಿತಗೊಳಿಸಿದ ಪರಿಣಾಮ 8 ನಿಮಿಷ ಮೆಟ್ರೋ ಸಂಚಾರ ವ್ಯತ್ಯಯವಾಗಿತ್ತು. ರಾತ್ರಿ 9 ಗಂಟೆ 8 ನಿಮಿಷದಿಂದ 9 ಗಂಟೆ 16 ನಿಮಿಷದ ವರೆಗೆ ಮೆಟ್ರೋ ಸಂಚಾರವನ್ನು ಬಂದ್‌ ಮಾಡಲಾಗಿತ್ತು. ಇದರಿಂದಾಗಿ 2 ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ನಂತರ ಎಂದಿನಂತೆ ಮೆಟ್ರೋ ಸಂಚಾರ ಆರಂಭವಾಗಿತ್ತು.

     

  • Bengaluru: ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನ – ಪ್ರಾಣಾಪಾಯದಿಂದ ವ್ಯಕ್ತಿ ಪಾರು!

    Bengaluru: ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನ – ಪ್ರಾಣಾಪಾಯದಿಂದ ವ್ಯಕ್ತಿ ಪಾರು!

    ಬೆಂಗಳೂರು: ಇಲ್ಲಿನ ಹೊಸಹಳ್ಳಿ ಮೆಟ್ರೋ ರೈಲು ನಿಲ್ದಾಣದಲ್ಲಿ (Hosahalli Metro Stations) ಪ್ರಯಾಣಿಕನೊಬ್ಬ ಹಳಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

    ಸುಮಾರು ರಾತ್ರಿ 8.56 ಗಂಟೆ ಸಮಯದಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಪ್ರಯಾಣಿಕನ ತಲೆಗೆ ಗಂಭೀರ ಪೆಟ್ಟಾಗಿದ್ದು, ಕೂಡಲೇ ಮುಂದಿನ ಚಿಕಿತ್ಸೆಗೆ ಆಸ್ಪತ್ರೆಗೆ (Hospital) ಕರೆದೊಯ್ಯಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ಅಪಘಾತ ಸಂಭವಿಸಿದ ಕೂಡಲೇ ರಾತ್ರಿ 8:56 ಗಂಟೆಗೆ ರೈಲುಗಳು ಶಾರ್ಟ್ ಲೂಪ್ ಸರ್ವಿಸ್ ಚಲ್ಲಘಟ್ಟದಿಂದ ಮೈಸೂರು ರಸ್ತೆ ವರೆಗೆ ಹಾಗೂ ನಾಡಪ್ರಭು ಕೆಂಪೇಗೌಡ ಸ್ಟೇಟ್‌ನಿಂದ ವೈಟ್ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳ ನಡುವೆ ವಾಣಿಜ್ಯ ಸೇವೆಯನ್ನು ನಡೆಸಲಾಯಿತು. ರಾತ್ರಿ 9.30 ಗಂಟೆಯಿಂದ ಸಂಪೂರ್ಣ ನೇರಳೆ ಮಾರ್ಗದಲ್ಲಿ ಎಂದಿನಂತೆ ರೈಲು ಸೇವೆ ಪುನರ್ ಆರಂಭಿಸಲಾಗಿದೆ ಎಂದು ಮೆಟ್ರೋ ಸಿಬ್ಬಂದಿ ತಿಳಿಸಿದ್ದಾರೆ.

    ಸದ್ಯ ಮೆಟ್ರೋ ಹಳಿ ಮೇಲೆ ಬಿದ್ದ ವ್ಯಕ್ತಿಯನ್ನು ಬೆಂಗಳೂರು ಬಸವೇಶ್ವರ ನಗರದ ನಿವಾಸಿ ಎಂ.ಸಾಗರ್‌ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಗೋವಿಂದರಾಜನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ನಡುವೆ ಸಾಗರ್‌ ಎಂಬಾತ ಆತ್ಮಹತ್ಯೆಗೆ ಯತ್ನಿಸಿಲ್ಲ, ಸ್ಲಿಪ್‌ ಆಗಿ ಮೆಟ್ರೋ ಹಳಿಗೆ ಬಿದ್ದಿದ್ದಾನೆ ಎಂಬುದಾಗಿ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

  • ಬೆ. 11 ಗಂಟೆಯಿಂದ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆ ಪುನರಾರಂಭ

    ಬೆ. 11 ಗಂಟೆಯಿಂದ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆ ಪುನರಾರಂಭ

    ಬೆಂಗಳೂರು: ನೇರಳೆ ಮಾರ್ಗದಲ್ಲಿ (Purple Line) ಕೆಲಕಾಲ ವ್ಯತ್ಯಯವಾಗಿದ್ದ ಮೆಟ್ರೋ ಸಂಚಾರ ಇಂದು ಬೆಳಗ್ಗೆ 11 ಗಂಟೆಯಿಂದ ಪುನರ್‌ ಆರಂಭವಾಗಿದೆ.

    ಎಂಜಿ ರೋಡ್- ಬೈಯಪ್ಪನಹಳ್ಳಿ ನೇರಳೆ ಮಾರ್ಗದಲ್ಲಿ ಕರೆಂಟ್‌ ಸಮಸ್ಯೆಯಿಂದ ಕೆಲ ಕಾಲ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಜೊತೆಗೆ ಶೀಘ್ರವೇ ಸಮಸ್ಯೆ ಪರಿಹರಿಸುವುದಾಗಿ ಬಿಎಂಆರ್‌ಸಿಎಲ್‌ ಪ್ರಕಟಣೆ ಹೊರಡಿಸಿತ್ತು.

    ಅಂತೆಯೇ ಸಮಸ್ಯೆ ಪರಿಹರಿಸಲಾಗಿದ್ದು, ಎಂಜಿ ರೋಡ್ ಮತ್ತು ಚಲ್ಲಘಟ್ಟ ನಡುವೆ ಬೈಯಪ್ಪನಹಳ್ಳಿ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ) ನಡುವೆ  ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಬೆಳಿಗ್ಗೆ 11.00 ಗಂಟೆಯಿಂದ ರೈಲು ಸೇವೆಗಳು ಎಂದಿನಂತೆ ಪುನರ್ ಆರಂಭಿಸಲಾಗಿದೆ. ಇದನ್ನೂ ಓದಿ: ಕುಸಿದು ಬಿದ್ದು ಮೃತಪಟ್ಟ ದೈವ ನರ್ತಕನ ಮಕ್ಕಳಿಗೆ ದೀಕ್ಷೆ!

    ಕೆಲಕಾಲ ಮೆಟ್ರೋ ಸಂಚಾರ ಕೈಕೊಟ್ಟಿದ್ದರಿಂದ ಪ್ರಯಾಣಿಕರು ಪರದಾಟ ಅನುಭವಿಸಿದರು. ಓಲಾ, ಆಟೋಗಳಲ್ಲಿ ಪ್ರಯಾಣ ಮಾಡಬೇಕಾಯಿತು.

  • ಪ್ರಯಾಣಿಕರಿಗೆ ಗುಡ್‌ನ್ಯೂಸ್- ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭ

    ಪ್ರಯಾಣಿಕರಿಗೆ ಗುಡ್‌ನ್ಯೂಸ್- ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭ

    ಬೆಂಗಳೂರು: ಟ್ರಾಫಿಕ್ ಜಾಮ್ ನಿಂದ ಕಂಗೆಟ್ಟಿರುವ ಬೆಂಗಳೂರಿಗರು ಇಂದಿನಿಂದ ನಿಟ್ಟುಸಿರು ಬಿಡಬಹುದಾಗಿದೆ. ನಮ್ಮ ಮೆಟ್ರೋ (Namma Metro) ರಾಜಧಾನಿ ಮಂದಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ಇಂದಿನಿಂದ ಬಹು ನಿರೀಕ್ಷಿತ ಬೈಯಪ್ಪನಹಳ್ಳಿ (Baiyappanahalli)   ಮತ್ತು ಕೆ ಆರ್ ಪುರ (K.R Pura) ನಡುವಿನ ಹಾಗೂ ಕೆಂಗೇರಿ ಮತ್ತು ಚಲಘಟ್ಟ ನಡುವೆ ಮೆಟ್ರೋ ರೈಲು ಓಡಾಟ ಆರಂಭ ಆಗಿದೆ.

    ಕೇಂದ್ರ ಸರ್ಕಾರದ (Central Govt) ಸೂಚನೆಯಂತೆ ಬೈಯಪ್ಪನಹಳ್ಳಿ ಮತ್ತು ಕೆ ಆರ್ ಪುರ ನಡುವೆ 2.1 ಕಿಲೋ ಮೀಟರ್ ಮಾರ್ಗ ಮತ್ತು ಕೆಂಗೇರಿ ಮತ್ತು ಚಲಘಟ್ಟ ನಡುವೆ 2.05 ಕಿಲೋ ಮೀಟರ್ ಮೆಟ್ರೋ ರೈಲು ಮಾರ್ಗ ಇಂದಿನಿಂದ ಸೇವೆಗೆ ಲಭ್ಯವಾಗಲಿದೆ. ಇದರಿಂದಾಗಿ ಒಟ್ಟು ನೇರಳೆ ಮಾರ್ಗದ (Purple Line) ಉದ್ದ 43.49 ಕಿಲೋ ಮೀಟರ್‍ಗೆ ಹೆಚ್ಚಳವಾಗಿದೆ. ವೈಟ್ ಫೀಲ್ಡ್ (ಕಾಡುಗೋಡಿ)ಯಿಂದ ಚಲಘಟ್ಟ ಸಂಪರ್ಕಿಸುವ ಈ ಮಾರ್ಗದಲ್ಲಿ 37 ಮೆಟ್ರೋ ನಿಲ್ದಾಣಗಳಿವೆ. ಈ ಹೊಸ ಎರಡು ಮಾರ್ಗದಿಂದ ನಮ್ಮ ಮೆಟ್ರೋ ಸಂಪರ್ಕ ರಾಜಧಾನಿಯಲ್ಲಿ ಒಟ್ಟು 73.81 ಕಿಲೋ ಮೀಟರ್ ಗೆ ಏರಿಕೆ ಆಗಿದೆ. ಈ ಎರಡು ಮಾರ್ಗಗಳು ಪ್ರಮುಖವಾಗಿ ಐಟಿ-ಬಿಟಿ ಉದ್ಯಮಿಗಳಿಗೆ ವರದಾನವಾಗಿದ್ದು, ಟ್ರಾಫಿಕ್ ಜಾಮ್ (Traddic Jam) ಸಮಸ್ಯೆಗೆ ಪರಿಹಾರ ನೀಡಲಿವೆ.

    ವೈಟ್‍ಫೀಲ್ಡ್ ನಿಂದ ಪಟ್ಟಂದೂರು ಅಗ್ರಹಾರ ನಿಲ್ದಾಣಕ್ಕೆ 10 ನಿಮಿಷ, ಪಟ್ಟಂದೂರು ಅಗ್ರಹಾರದಿಂದ ಮೈಸೂರು ರಸ್ತೆ ನಿಲ್ದಾಣಕ್ಕೆ 5 ನಿಮಿಷ, ಮೆಜೆಸ್ಟಿಕ್‍ನಿಂದ ಎಂಜಿ ರೋಡ್ ನಿಲ್ದಾಣಕ್ಕೆ 3 ನಿಮಿಷ ಮತ್ತು ಮೈಸೂರು ರಸ್ತೆಯಿಂದ ಚಲಘಟ್ಟಕ್ಕೆ (Challaghatta) 10 ನಿಮಿಷ ಬೇಕಾಗುತ್ತದೆ. ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಗ್ಗೆ 5ಕ್ಕೆ ಮೆಟ್ರೋ ರೈಲು ಆರಂಭವಾದ್ರೇ, ಕೊನೆಯ ರೈಲು ವೈಟ್ ಫಿಲ್ಡ್ ನಿಂದ ರಾತ್ರಿ 10.45ಕ್ಕೆ ಹಾಗೂ ಉಳಿದ ಟರ್ಮಿನಲ್ ನಿಲ್ದಾಣಗಳಿಂದ ರಾತ್ರಿ 11.05ಕ್ಕೆ ಹೊರಡುತ್ತದೆ. ನೇರಳೆ ಮಾರ್ಗದ ಒಟ್ಟು ಪ್ರಯಾಣಕ್ಕೆ 60 ರೂಪಾಯಿ ಪ್ರಯಾಣ ದರವನ್ನು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನಿಗದಿ ಮಾಡಿದೆ.

    ಒಟ್ಟಿನಲ್ಲಿ ಎರಡು ಮಾರ್ಗಗಳ ಉದ್ಘಾಟನೆ ವಿಳಂಬವಾದ ಹಿನ್ನೆಲೆಯಲ್ಲಿ ಭಾನುವಾರ ಕೇಂದ್ರ ಸರ್ಕಾರ ಬಿಎಂಆರ್‍ಸಿಎಲ್‍ಗೆ ಖಡಕ್ ವಾರ್ನ್ ನೀಡಿ, ಇಂದೇ ಪ್ರಯಾಣಿಕರ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸೂಚಿಸಿದೆ. ಈ ಹಿನ್ನಲೆ ಇಂದಿನಿಂದ ಎರಡು ಮಾರ್ಗಗಳು ಪ್ರಯಾಣಿಕರಿಗೆ ಮುಕ್ತವಾಗಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಳೆಯಿಂದ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

    ನಾಳೆಯಿಂದ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

    ಬೆಂಗಳೂರು: ನಾಳೆಯಿಂದ ನೇರಳೆ ಮಾರ್ಗದಲ್ಲಿ (Purple Line) ನಮ್ಮ ಮೆಟ್ರೋ(Namma Metro) ಸಂಚಾರಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬೆಂಗಳೂರಿನ (Bengaluru) ಬಿಜೆಪಿ ಸಂಸದರು ಸ್ವಾಗತ ಕೋರಿದ್ದಾರೆ.

    ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿ ಪ್ರಧಾನಿ ಮೋದಿಯವರಿಗೆ ಸಂಸದರು ಧನ್ಯವಾದ ತಿಳಿಸಿದ್ದಾರೆ. ನಾಳೆ ಚಲ್ಲಘಟ್ಟ-ಕೆಂಗೇರಿ, ಬೈಯಪ್ಪನಹಳ್ಳಿ-ಕೆಆರ್ ಪುರ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭವಾಗಲಿದೆ. ಇದನ್ನೂ ಓದಿ: ಇಸ್ರೇಲ್‌ನಲ್ಲಿ ಹಮಾಸ್ ಉಗ್ರರ ದಾಳಿ – ಅ.14 ರವರೆಗೆ ಏರ್ ಇಂಡಿಯಾ ವಿಮಾನ ರದ್ದು

    ಈ ಕುರಿತು ಸಂಸದರಾದ ಡಿವಿ ಸದಾನಂದ ಗೌಡ, ಪಿಸಿ ಮೋಹನ್, ತೇಜಸ್ವಿ ಸೂರ್ಯ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಬೆಂಗಳೂರು ಜನತೆ ಪರವಾಗಿ ಪ್ರಧಾನಿಯವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ – ಸ್ಥಳಕ್ಕೆ ಸಿಎಂ, ಡಿಸಿಎಂ ಭೇಟಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂದಿನಿಂದ 15 ದಿನ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

    ಇಂದಿನಿಂದ 15 ದಿನ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

    ಬೆಂಗಳೂರು: ನಗರದ ನೇರಳೆ ಮಾರ್ಗದ (Purple Line) ಮೆಟ್ರೋ (Bengaluru Metro) ಸೇವೆಯಲ್ಲಿ ಇಂದಿನಿಂದ 15 ದಿನಗಳವರೆಗೆ ವ್ಯತ್ಯಯವಾಗಲಿದೆ. ಇಂದು ಕೆಂಗೇರಿ ಹಾಗೂ ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ರೈಲುಗಳು ಸಂಚರಿಸುತ್ತಿಲ್ಲ.

    ನೇರಳೆ ಮಾರ್ಗದ ಕೆಂಗೇರಿ ಮತ್ತು ಚಲ್ಲಘಟ್ಟ, ಬೈಯಪ್ಪನಹಳ್ಳಿ ಹಾಗೂ ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳ ನಡುವಿನ ಸಿಗ್ನಲಿಂಗ್ ವ್ಯವಸ್ಥೆಗಳ ಪರೀಕ್ಷೆ ನಡೆಯಲಿರುವ ಕಾರಣ 15 ದಿನಗಳವರೆಗೆ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳಲ್ಲಿ ಮಾತ್ರ ಬೆಳಗ್ಗೆ 5 ರಿಂದ ರಾತ್ರಿ 11 ರವರೆಗೆ ರೈಲು ಸೇವೆ ಲಭ್ಯವಿರಲಿದೆ.

    ಯಾವ ದಿನ, ಯಾವ ಸಮಯ ವ್ಯತ್ಯಯ?
    ಆಗಸ್ಟ್ 17:
    ಕೆಂಗೇರಿ ಮತ್ತು ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ರೈಲು ಸೇವೆ ಲಭ್ಯವಿರುವುದಿಲ್ಲ. ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳಲ್ಲಿ ಮಾತ್ರ ಬೆಳಗ್ಗೆ 5 ರಿಂದ ರಾತ್ರಿ 11 ರವರೆಗೆ ರೈಲು ಸೇವೆ ಲಭ್ಯವಿರಲಿದೆ.

    ಆಗಸ್ಟ್ 23 ಮತ್ತು 24:
    ಕೆಂಗೇರಿ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಬೆಳಗ್ಗೆ 7 ಗಂಟೆಯವರೆಗೆ ಮೆಟ್ರೋ ಸೇವೆ ಇರುವುದಿಲ್ಲ. ಈ ವೇಳೆ ಮೈಸೂರು ರಸ್ತೆ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ. ಬೆಳಗ್ಗೆ 7 ಗಂಟೆ ನಂತರ ಕೆಂಗೇರಿಯಿಂದ ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಎಂದಿನಂತೆ ಮೆಟ್ರೋ ಸೇವೆ ಲಭ್ಯವಿರಲಿದೆ. ಇದನ್ನೂ ಓದಿ: ಬೆಂಗಳೂರಿನಲ್ಲೊಂದು ವಿಚಿತ್ರ ಘಟನೆ- ಬಾಡಿಗೆದಾರನನ್ನ ಗಮನಿಸದೇ ಮನೆ ಸೀಜ್

    ಆಗಸ್ಟ್ 20 ರಿಂದ 29:
    ಬೈಯಪ್ಪನಹಳ್ಳಿ ಟರ್ಮಿನಲ್ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಕೃಷ್ಣರಾಜಪುರ ಮತ್ತು ವೈಟ್‌ಫೀಲ್ (ಕಾಡುಗೋಡಿ) ಮಾರ್ಗಗಳ ನಡುವೆ ಬೆಳಗ್ಗೆ 7 ಗಂಟೆಯವರೆಗೆ ಮೆಟ್ರೋ ಸೇವೆ ಸ್ಥಗಿತವಿರಲಿದೆ. ಈ ಅವಧಿಯಲ್ಲಿ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣದಿಂದ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ.

    ಆಗಸ್ಟ್ 23 ಮತ್ತು 24:
    ಬೆಳಗ್ಗೆ 5 ರಿಂದ 7 ಗಂಟೆಯವರೆಗೆ ಮೈಸೂರು ರಸ್ತೆ ನಿಲ್ದಾಣದಲ್ಲಿ ರೈಲು ಸೇವೆ ಕೊನೆಗೊಳ್ಳುವುದು. ಇನ್ನುಳಿದ ದಿನಗಳಲ್ಲಿ ರೈಲು ಸೇವೆ ಕೆಂಗೇರಿ ನಿಲ್ದಾಣದವರೆಗೆ ಲಭ್ಯವಿರಲಿದೆ. ಇದನ್ನೂ ಓದಿ: ಕರುನಾಡ ಮಂದಿಗೆ ಮತ್ತೊಂದು ಶಾಕ್- ಬೇಳೆ, ತರಕಾರಿ ಬಳಿಕ ಅಕ್ಕಿ ಬೆಲೆಯೂ ದುಬಾರಿ

    ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜು.10 ರಿಂದ ಆ.09 ರವರೆಗೆ ನೇರಳೆ ಮಾರ್ಗಗಳ ಮೆಟ್ರೋ ಸಂಚಾರ 2 ಗಂಟೆ ಸ್ಥಗಿತ

    ಜು.10 ರಿಂದ ಆ.09 ರವರೆಗೆ ನೇರಳೆ ಮಾರ್ಗಗಳ ಮೆಟ್ರೋ ಸಂಚಾರ 2 ಗಂಟೆ ಸ್ಥಗಿತ

    ಬೆಂಗಳೂರು: ನಮ್ಮ ಮೆಟ್ರೋ ನೇರಳೆ (Purple Line Metro) ಮಾರ್ಗದ ಕೆಲವು ನಿಲ್ದಾಣಗಳಲ್ಲಿ ರೈಲು ಸಂಚಾರ ಸ್ಥಗಿತವಾಗಲಿದೆ.

    ನೇರಳೆ ಮಾರ್ಗದಲ್ಲಿನ ಬೈಯಪ್ಪನಹಳ್ಳಿ ಮತ್ತು ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳನ್ನು ಸಂಪರ್ಕವನ್ನು ಕಲ್ಪಿಸಲು ಸಿಗ್ನಲಿಂಗ್ ಹಾಗೂ ಇತರ ಸಂಬಂಧಿತ ಕಾಮಗಾರಿ ಕೈಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಜುಲೈ 10 ರಿಂದ ಆಗಸ್ಟ್ 09 ರವರೆಗೆ ಬೈಯಪ್ಪನಹಳ್ಳಿ- ಎಸ್.ವಿ. ರಸ್ತೆ ಹಾಗೂ ಕೃಷ್ಣರಾಜಪುರ- ವೈಟ್‍ಫೀಲ್ಡ್ (ಕಾಡುಗೋಡಿ) ಮಾರ್ಗಗಳ ಮೆಟ್ರೋ ರೈಲು ಸಂಚಾರವನ್ನು ಸ್ಥಗಿತ ಮಾಡಲಾಗುತ್ತಿದೆ. ಇದನ್ನೂ ಓದಿ: 5 ಗ್ಯಾರಂಟಿ ಜಾರಿಗೆ ತೆರಿಗೆ ಏರಿಕೆ, 85ಸಾವಿರ ಕೋಟಿ ಸಾಲಕ್ಕೆ ನಿರ್ಧಾರ – ಯಾವ ತೆರಿಗೆ ಎಷ್ಟು ಏರಿಕೆ?

    ಬೆಳಗ್ಗೆ 2 ಗಂಟೆ ಮಾತ್ರ ಸ್ಥಗಿತ: ಬೆಳಗ್ಗೆ 5.00 ಗಂಟೆಯಿಂದ 7.00 ಗಂಟೆವರೆಗೆ ಬೈಯಪ್ಪನಹಳ್ಳಿ ಮತ್ತು ಎಸ್.ವಿ ರಸ್ತೆ ಗೂ ಕೃಷ್ಣರಾಜಪುರ ಮತ್ತು ವೈಟ್‍ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳ ನಡುವೆಯ ಮೆಟ್ರೋ ರೈಲು ಸೇವೆ ಸ್ಥಗಿತಗೊಳಿಸಲಾಗುತ್ತದೆ. ಬೆಳಗ್ಗೆ 7.00 ಗಂಟೆಯ ನಂತರ ಬೈಯಪ್ಪನಹಳ್ಳಿ ಮತ್ತು ಕೆಂಗೇರಿ ಹಾಗೂ ಕೃಷ್ಣರಾಜಪುರ ಮತ್ತು ವೈಟ್‍ಫೀಲ್ಡ್ (ಕಾಡುಗೋಡಿ) ಮೆಟ್ರೋ ನಿಲ್ದಾಣಗಳ ನಡುವೆ ವಾಣಿಜ್ಯ ರೈಲು ಸೇವೆಗಳು ಎಂದಿನಂತೆ ರಾತ್ರಿ 11.00 ಗಂಟೆಯವರೆಗೆ ಲಭ್ಯವಿರುತ್ತವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಮೋ ಪ್ರಯಾಣಕ್ಕೆ ಸಾರಥಿಯಾದ ಮಹಿಳಾ ಲೋಕೋಪೈಲಟ್‌!

    ನಮೋ ಪ್ರಯಾಣಕ್ಕೆ ಸಾರಥಿಯಾದ ಮಹಿಳಾ ಲೋಕೋಪೈಲಟ್‌!

    ಬೆಂಗಳೂರು: ವೈಟ್ ಫೀಲ್ಡ್ ಟು ಕೆ ಆರ್ ಪುರಂ (Whitefield-KR Puram Namma Metro) ನೇರಳೆ ಮಾರ್ಗದ ಮೆಟ್ರೋಗೆ ಶನಿವಾರ (ಇಂದು) ಖುದ್ದು ಪ್ರಧಾನಿ ನರೇಂದ್ರ ಮೋದಿ (Narendra Modi) ಚಾಲನೆ ನೀಡಿದರು. ಜೊತೆಗೆ ಮೆಟ್ರೋದಲ್ಲಿ ಪ್ರಧಾನಿ ಮೋದಿಯವರು ಜರ್ನಿ ಮಾಡಿ ಮೆಟ್ರೋ ಸಿಬ್ಬಂದಿ ವಿದ್ಯಾರ್ಥಿಗಳ ಜೊತೆ ಸಂವಾದ ಕೂಡ ಮಾಡಿದ್ರು. ವಿಶೇಷ ಅಂದ್ರೆ ಪ್ರಧಾನಿ ಉದ್ಘಾಟನೆ ಮಾಡಿ ಮೊದಲ ಜರ್ನಿ ಮಾಡಿದ ಮೆಟ್ರೋದ ಸಾರಥ್ಯ ವಹಿಸಿದ್ದು ಮಹಿಳಾ ಲೋಕೋಪೈಲಟ್ ಪ್ರಿಯಾಂಕ (Loco Pilot Priyanka).

    ಹೌದು. 5 ವರ್ಷದಿಂದ ಪೈಲಟ್ ಆಗಿರುವ ಪ್ರಿಯಾಂಕ ಇಂದು ಪ್ರಧಾನಿ ಕುಳಿತಿದ್ದ ಮೆಟ್ರೋ ಸಾರಥಿಯಾಗಿದ್ರು. ದೇಶದ ಸಾರಥ್ಯ ವಹಿಸಿರುವ ಪ್ರಧಾನಿಗೆ ಸಾರಥಿಯಾಗಿದ್ದು ಫುಲ್ ಖುಷಿಯಾಗಿದೆ ಅಂತಾ ಪ್ರಿಯಾಂಕ ಸಂಭ್ರಮ ಪಟ್ಟರು. ಇದನ್ನೂ ಓದಿ: ನಾನು ಕೋಲಾರ ಕೂಡ ಕೇಳಿದ್ದೇನೆ- ಸಿದ್ದರಾಮಯ್ಯ

    ಪ್ರಧಾನಿ ಮೆಟ್ರೋ ಟ್ರೈನ್ ಸಾರಥ್ಯ ವಹಿಸೋದು ಅಂದ್ರೆ ನಿಜವಾಗಲೂ ಸುಲಭದ ಮಾತಲ್ಲ. ಸುರಕ್ಷತೆ ದೃಷ್ಟಿಯಿಂದ ಸವಾಲು ಕೂಡ. ಹೀಗಾಗಿ 15 ದಿನಕ್ಕೂ ಮುನ್ನವೇ ಲೋಕೋಪೈಲೆಟ್‍ಗೆ ಟ್ರೈನಿಂಗ್ ಕೊಡಲಾಗಿತ್ತು. ಜೊತೆಗೆ ಕೌನ್ಸಿಲಿಂಗ್ ಗಳು ನಡೆಯುತ್ತಿತ್ತು. ಇನ್ನೂ ಪ್ರಧಾನಿಯವರನ್ನು ನೇರವಾಗಿ ನೋಡೋಕೆ ಸಾಧ್ಯವಾಗದೇ ಇದ್ದರೂ ಮಾನಿಟರ್ ನಲ್ಲಿ ನೋಡುತ್ತಿದ್ದೆ ಎಂದು ಪ್ರಿಯಾಂಕಾ ಸಂತಸ ವ್ಯಕ್ತಪಡಿಸಿದರು.

    ಒಟ್ಟಿನಲ್ಲಿ ದೆಹಲಿಯ ನಂತ್ರ ಬೆಂಗಳೂರು ಮೆಟ್ರೋ ದೇಶದ ಎರಡನೇ ಅತ್ಯಂತ ದೊಡ್ಡ ಜಾಲವಾಗಿದೆ. ಇದರ ಜೊತೆಗೆ ಬೆಂಗಳೂರಿನಲ್ಲಿ ದೇಶದ ಪ್ರಧಾನಿಯ ಮೊದಲ ಮೆಟ್ರೋ ಜರ್ನಿಯ ಲೋಕೋಪೈಲಟ್ ಆಗಿ ಮಹಿಳೆ ಕಾರ್ಯನಿರ್ವಹಿಸಿದ್ದು ಇನ್ನಷ್ಟು ಹೆಮ್ಮೆಯ ವಿಚಾರವಾಗಿದೆ.