Tag: purvanchal expressway

  • ಇತ್ತೀಚೆಗೆ ನಿರ್ಮಿಸಿದ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯಲ್ಲಿ ಭಾರೀ ಗುಂಡಿ – ನಾಲ್ವರಿಗೆ ಗಾಯ

    ಇತ್ತೀಚೆಗೆ ನಿರ್ಮಿಸಿದ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯಲ್ಲಿ ಭಾರೀ ಗುಂಡಿ – ನಾಲ್ವರಿಗೆ ಗಾಯ

    ಲಕ್ನೋ: ಇತ್ತೀಚೆಗೆ ಹೊಸದಾಗಿ ನಿರ್ಮಿಸಲಾಗಿದ್ದ ಉತ್ತರ ಪ್ರದೇಶದ (Uttar Pradesh) ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯ (Purvanchal Expressway) ಒಂದು ಭಾಗ ಕುಸಿದು ಕಾರು (Car) ಗುಂಡಿಗೆ (Pothole) ಬಿದ್ದು ನಾಲ್ವರು ಗಾಯಗೊಂಡಿದ್ದಾರೆ.

    ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯನ್ನು ಫೆಬ್ರವರಿ-ಮಾರ್ಚ್ ತಿಂಗಳಿನಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮೊದಲು 2021ರ ನವೆಂಬರ್ ತಿಂಗಳಿನಲ್ಲಿ ಉದ್ಘಾಟಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಈ ಎಕ್ಸ್‌ಪ್ರೆಸ್‌ವೇವೇ ಯನ್ನು ಉದ್ಘಾಸಿದ್ದರು.

    ಇದೀಗ ಭಾರೀ ಮಳೆಯ ಹಿನ್ನೆಲೆ ಎಕ್ಸ್‌ಪ್ರೆಸ್‌ವೇಯ ಒಂದು ಭಾಗದಲ್ಲಿ ಕುಸಿತ ಉಂಟಾಗಿದೆ. ಈ ವೇಳೆ ಎಕ್ಸ್‌ಪ್ರೆಸ್‌ವೇಯಲ್ಲಿ ಚಲಿಸುತ್ತಿದ್ದ ಕಾರು ಗುಂಡಿಗೆ ಬಿದ್ದಿದ್ದು, ಅದರಲ್ಲಿದ್ದ ನಾಲ್ವರಿಗೆ ಗಾಯಗಳಾಗಿದೆ. ತಕ್ಷಣವೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಟಿಪ್ಪು ಎಕ್ಸ್‌ಪ್ರೆಸ್ ಇನ್ನುಮುಂದೆ ಒಡೆಯರ್ ಎಕ್ಸ್‌ಪ್ರೆಸ್ – ಶಿವಮೊಗ್ಗಕ್ಕೆ ಕುವೆಂಪು ಎಕ್ಸ್‌ಪ್ರೆಸ್

    ಇದೀಗ ಸಾವಿರಾರು ಕೋಟಿ ರೂ. ಖರ್ಚು ಮಾಡಿ ಇತ್ತೀಚೆಗಷ್ಟೇ ನಿರ್ಮಿಸಲಾಗಿದ್ದ ಎಕ್ಸ್‌ಪ್ರೆಸ್‌ವೇಗೆ ಮಳೆಯನ್ನು ತಡೆದುಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಕಾಂಗ್ರೆಸ್ ಟೀಕಿಸಿದೆ. ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿ, ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ ಕುಸಿದಿದೆ. 15 ಅಡಿಯ ದೊಡ್ಡ ಹೊಂಡಕ್ಕೆ ಕಾರೊಂದು ಬಿದ್ದಿದೆ. ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಸ್ವಲ್ಪವೇ ಮೊದಲು ಮೋದಿಯವರು ಇದನ್ನು ಉದ್ಘಾಟಿಸಿದ್ದರು. ಇದೀಗ ಫಲಿತಾಂಶ ಹೊರಬಿದ್ದಿದೆ ಎಂದು ಕಿಡಿಕಾರಿದೆ. ಇದನ್ನೂ ಓದಿ: ನಾಗ್ಪುರ- ಮುಂಬೈ ಎಕ್ಸ್‌ಪ್ರೆಸ್‌ವೇ ಶೀಘ್ರವೇ ಸಂಚಾರಕ್ಕೆ ಮುಕ್ತ – ವಾಹನಗಳಿಗೆ 120 kmph ವೇಗದ ಮಿತಿ ನಿಗದಿ

    Live Tv
    [brid partner=56869869 player=32851 video=960834 autoplay=true]

  • ಬಸ್‍ಗಳ ನಡುವೆ ಭೀಕರ ಅಪಘಾತ – 8 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

    ಬಸ್‍ಗಳ ನಡುವೆ ಭೀಕರ ಅಪಘಾತ – 8 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

    ಲಕ್ನೋ: ಬಸ್‍ಗಳ ನಡುವೆ ನಡೆದ ಭೀಕರ ಅಪಘಾತಕ್ಕೆ 8 ಮಂದಿ ಸಾವನ್ನಪ್ಪಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ನಡೆದಿದೆ.

    ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್‌ಪ್ರೆಸ್‌ ವೇನಲ್ಲಿ ಚಲಿಸುತ್ತಿದ್ದ ಬಸ್‍ಗಳು ನರೇಂದ್ರಪುರ ಮದ್ರಹಾ ಗ್ರಾಮದ ಬಳಿ ತಲುಪುತಿದ್ದಂತೆ ಅಪಘಾತ ಸಂಭವಿಸಿದೆ. ಎರಡೂ ಬಸ್‍ಗಳು ಬಿಹಾರದ ಸೀತಾಮರ್ಹಿ ಮತ್ತು ಸುಪೌಲ್‍ನಿಂದ ದೆಹಲಿಗೆ ಹೋಗುತ್ತಿದ್ದವು. ಬಸ್‍ಗಳ ನಡುವಿನ ಡಿಕ್ಕಿಯ ರಭಸಕ್ಕೆ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 3 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್‍ಗಳೆರಡು ಸಂಪೂರ್ಣ ಜಖಂ ಗೊಂಡಿದೆ. ಇದನ್ನೂ ಓದಿ: ನಾಯಿಗಳ ಹಾವಳಿಗೆ ಬೆಚ್ಚಿ ಬಿದ್ದ ಕುಂದಾನಗರಿ ಜನ – ಆರು ತಿಂಗಳಲ್ಲಿ 14 ಸಾವಿರ ಮಂದಿಗೆ ನಾಯಿ ಕಡಿತ

    ಲೋನಿ ಕತ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಅಪಘಾತ ಸಂಭವಿಸಿದ್ದು ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ. ಇದನ್ನೂ ಓದಿ: ಗಾಂಜಾ ಸಾಗಾಟ ಎಂದು ತನಿಖೆ ಮಾಡಿದ ಪೊಲೀಸರಿಗೆ ತಿಳಿಯಿತು ಕೊಲೆ ರಹಸ್ಯ

    Live Tv
    [brid partner=56869869 player=32851 video=960834 autoplay=true]

  • ವಾಯುಸೇನೆ ವಿಮಾನದಲ್ಲಿ ಲ್ಯಾಂಡಿಂಗ್ – ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಮೋದಿ

    ವಾಯುಸೇನೆ ವಿಮಾನದಲ್ಲಿ ಲ್ಯಾಂಡಿಂಗ್ – ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಮೋದಿ

    ಲಕ್ನೋ: ಇಲ್ಲಿನ ಕರ್ವಾಲ್ ಖೇರಿಯಲ್ಲಿರುವ ಸುಮಾರು 341 ಕಿ.ಮೀ. ಉದ್ದದ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಉದ್ಘಾಟಿಸಿದ್ದಾರೆ.

    ವಾಯುಸೇನೆಯ ಸಿ-130 ಜೆ ಸೂಪರ್ ಹಕ್ರ್ಯೂಲಸ್ ವಿಮಾನದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಆಗಮಿಸಿದ್ದು, ಈ ವಿಮಾನ ಎಕ್ಸ್‌ಪ್ರೆಸ್‌ವೇಯಲ್ಲಿ ಲ್ಯಾಂಡಿಂಗ್ ಆಗಿತ್ತು. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಾಜ್‍ಕುಮಾರ್ ರಾವ್ – ಫೋಟೋ ವೈರಲ್

    ಉದ್ಘಾಟಿಸಿ ನಂತರ ಮಾತನಾಡಿದ ಅವರು, ಯುಪಿ ಸಾಮರ್ಥ್ಯದ ಬಗ್ಗೆ ಅನುಮಾನ ಇರುವವರು ಇಂದು ಸುಲ್ತಾನಪುರಕ್ಕೆ ಬನ್ನಿ. ಮೂರ್ನಾಲ್ಕು ವರ್ಷಗಳ ಹಿಂದೆ ಕೇವಲ ತುಂಡು ಭೂಮಿಯಾಗಿದ್ದ ಜಾಗದಲ್ಲಿ ಈಗ ಅತ್ಯಾಧುನಿಕ ಎಕ್ಸ್‌ಪ್ರೆಸ್‌ವೇ ರೂಪುಗೊಂಡಿದೆ. ಮೂರು ವರ್ಷಗಳ ಹಿಂದೆ ನಾನು ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ ಶಂಕುಸ್ಥಾಪನೆ ನೆರವೇರಿಸಿದ ಸಂದರ್ಭದಲ್ಲಿ, ಮುಂದೊಂದು ದಿನ ನಾನು ಇಲ್ಲಿ ವಿಮಾನದಲ್ಲಿ ಇಳಿಯುತ್ತೇನೆ ಎಂದುಕೊಂಡಿರಲಿಲ್ಲ ಎಂದು ಸ್ಮರಿಸಿದರು.

    ದೇಶದ ಸರ್ವತೋಮುಖ ಅಭಿವೃದ್ಧಿ ಮುಖ್ಯ. ಕೆಲವು ಪ್ರದೇಶಗಳು ಅಭಿವೃದ್ಧಿಯ ಓಟದಲ್ಲಿ ಮುನ್ನಡೆಯುತ್ತಿವೆ. ಇನ್ನೂ ಕೆಲವು ಪ್ರದೇಶಗಳು ದಶಕಗಳಿಂದ ಹಿಂದುಳಿದಿವೆ. ಇದು ಒಳಿತಲ್ಲ. ಅಭಿವೃದ್ಧಿ ನಿಟ್ಟಿನಲ್ಲಿ ನಾವು ಮುನ್ನಡೆಯಬೇಕು ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಹೆಸರಿಗೆ ಮಾತ್ರ ಸರ್ಕಾರಿ ಆಸ್ಪತ್ರೆ- ಚಿಕಿತ್ಸೆ ಕೊಡಲು ವೈದ್ಯರೇ ಇಲ್ಲ

    ಏನಿದರ ವಿಶೇಷ?
    341 ಕಿ.ಮೀ. ಉದ್ದದ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ ಲಖನೌ ಚಂದ್ ಸರಾಯ್ ಗ್ರಾಮದಿಂದ ಆರಂಭವಾಗಿ ರಾಷ್ಟ್ರೀಯ ಹೆದ್ದಾರಿ 31ರ ಗಾಜಿಪುರದ ಹೈದರಿಯಾ ಗ್ರಾಮದಲ್ಲಿ ಕೊನೆಯಾಗುತ್ತದೆ. ಈ ಎಕ್ಸ್‌ಪ್ರೆಸ್‌ವೇ ಪ್ರಸ್ತುತ ಆರು ಪಥಗಳನ್ನು ಹೊಂದಿದೆ.

    ಎಕ್ಸ್‍ಪ್ರೆಸ್‍ವೇ ತುರ್ತು ಸಂದರ್ಭಗಳಲ್ಲಿ ಭಾರತೀಯ ವಾಯು ಪಡೆಯ ಯುದ್ಧ ವಿಮಾನಗಳು ಹಾರಾಟ ಆರಂಭಿಸಲು ಮತ್ತು ಬಂದಿಳಿಯಲು ಸುಲ್ತಾನ್‍ಪುರ ಜಿಲ್ಲೆಯಲ್ಲಿ ನಿರ್ಮಿಸಲಾಗಿರುವ ಏರ್‍ಸ್ಟ್ರಿಪ್ ನೆರವಾಗಲಿದೆ. 3.2 ಕಿ.ಮೀ. ಉದ್ದದದ ಏರ್ ಸ್ಟ್ರಿಪ್ ನಿರ್ಮಿಸಲಾಗಿದೆ. ಈ ಎಕ್ಸ್‌ಪ್ರೆಸ್‌ವೇ ಅನ್ನು 22,500 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.

    2018ರ ಜಲೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದರು. ದಾಖಲೆಯ ಮೂರು ವರ್ಷದಲ್ಲಿ ಈ ಎಕ್ಸ್‌ಪ್ರೆಸ್‌ವೇ ನಿರ್ಮಾಣವಾಗಿರುವುದು ವಿಶೇಷ.