Tag: Pushpa Arunkumar

  • ಕೊತ್ತಲವಾಡಿ ನಿರ್ದೇಶಕರ ಜೊತೆಗೆ ಪುಷ್ಪಮ್ಮ ಮತ್ತೊಂದು ಸಿನಿಮಾ

    ಕೊತ್ತಲವಾಡಿ ನಿರ್ದೇಶಕರ ಜೊತೆಗೆ ಪುಷ್ಪಮ್ಮ ಮತ್ತೊಂದು ಸಿನಿಮಾ

    ಕೊತ್ತಲವಾಡಿ (Kottavaldi) ಸಿನಿಮಾ ನಿರ್ಮಾಣ ಮಾಡುವ ಮೂಲಕ ಗಾಂಧಿನಗರಕ್ಕೆ ಪಾದಾರ್ಪಣೆ ಮಾಡಿದ್ದ ಯಶ್ (Yash) ತಾಯಿ ನಿರ್ಮಾಪಕಿ ಪುಷ್ಪ ಅರುಣ್‌ಕುಮಾರ್ (Pushpa Arunkumar) ಮತ್ತೊಂದು ಸಿನಿಮಾವನ್ನ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ತಮ್ಮ ಮೊದಲ ಸಿನಿಮಾ ಕೊತ್ತಲವಾಡಿ ಕಳೆದ ಆಗಸ್ಟ್‌ನಲ್ಲಿ ತೆರೆಕಂಡಿತ್ತು. ಬಳಿಕ ಅನುಷ್ಕಾ ಶೆಟ್ಟಿ (Anushka Shetty) ನಟನೆಯ ಘಾಟಿ ತೆಲುಗು ಸಿನಿಮಾವನ್ನು ಕರ್ನಾಟಕದಲ್ಲಿ ವಿತರಣೆ ಮಾಡಿದ್ದರು.

    ನಿರ್ಮಾಪಕಿ ಪುಷ್ಪಾ ಅರುಣ್‌ಕುಮಾರ್ ತಮ್ಮ ಕೊತ್ತಲವಾಡಿ ಸಿನಿಮಾ ರಿಲೀಸ್ ವೇಳೆ ಹಲವಾರು ಸಮಸ್ಯೆಗಳನ್ನ ಎದುರಿಸಿದ್ದರು. ಅಂದು ಎದುರಿಸಿದ ಸಮಸ್ಯೆಗಳೇ ಅವರು ಸಿನಿಮಾ ವಿತರಣೆ ಮಾಡಲು ಮುಂದಾಗುವಂತೆ ಮಾಡಿತ್ತು. ಇದೀಗ ಆ ಸಿನಿಮಾ ಹೇಳಿಕೊಳ್ಳುವ ಮಟ್ಟಿಗೆ ಯಶಸ್ಸು ಕಾಣದಿದ್ದರೂ ಛಲಬಿಡದೇ ಮತ್ತೊಂದು ಸಿನಿಮಾವನ್ನ ಅನೌನ್ಸ್ ಮಾಡಿದ್ದಾರೆ. ಅಂದಹಾಗೆ ಕೊತ್ತಲವಾಡಿ ಸಿನಿಮಾದ ನಿರ್ದೇಶಕರಾದ ಶ್ರೀರಾಜ್ ಜೊತೆ ಚಿತ್ರವನ್ನ ಮಾಡುವುದಾಗಿ ಮಾಹಿತಿ ಹೊರಬಿದ್ದಿದೆ. ಇದನ್ನೂ ಓದಿ: ವಿಯೆಟ್ನಾಂ ಬೀದಿಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ನಿವೇದಿತಾ ರೀಲ್ಸ್ ರಾಣಿ ಕಂಬನಿಗೆ ಕಾರಣವೇನು?

     

    ವಿಜಯ ದಶಮಿಯ ಹಬ್ಬದ ಶುಭ ದಿನದಂದು ಶುಭ ಸುದ್ದಿಯನ್ನ ಕೊಟ್ಟಿದ್ದಾರೆ ಯಶ್ ತಾಯಿ. ಮೊದಲ ಸಿನಿಮಾಗಿಂತಲೂ ವಿಭಿನ್ನವಾದ ಕಥೆಯನ್ನ ಈ ಬಾರಿ ನಿರ್ಮಾಣ ಮಾಡಲಿದ್ದಾರಂತೆ ಪುಷ್ಪಮ್ಮ. ಈ ಸಿನಿಮಾದ ಟೈಟಲ್ ಏನು? ಸಿನಿಮಾದ ಪಾತ್ರವರ್ಗದಲ್ಲಿ ಯಾರೆಲ್ಲ ಇರಲಿದ್ದಾರೆ ಎನ್ನುವ ಬಗ್ಗೆ ಮಾಹಿತಿಯನ್ನ ಸದ್ಯದಲ್ಲೇ ಹಂಚಿಕೊಳ್ಳಲಿದ್ದಾರಂತೆ. ಇದನ್ನೂ ಓದಿ:  ಕಾಂತಾರ ದೃಶ್ಯ ವೈಭೋಗ ಕಣ್ತುಂಬಿಕೊಂಡ ಪ್ರೇಕ್ಷಕರು ಹೇಳಿದ್ದೇನು?

  • ಯಶ್ ತಾಯಿ ನಿರ್ಮಾಣದ ʻಕೊತ್ತಲವಾಡಿʼ ಸಿನಿಮಾದ ಟೈಟಲ್ ಟ್ರ್ಯಾಕ್ ರಿಲೀಸ್

    ಯಶ್ ತಾಯಿ ನಿರ್ಮಾಣದ ʻಕೊತ್ತಲವಾಡಿʼ ಸಿನಿಮಾದ ಟೈಟಲ್ ಟ್ರ್ಯಾಕ್ ರಿಲೀಸ್

    ಯಶ್ (Yash) ತಾಯಿ ಪುಷ್ಪಾ ಅರುಣ್ ಕುಮಾರ್ (Pushpa Arunkumar) ನಿರ್ಮಾಣದ ಚೊಚ್ಚಲ ಚಿತ್ರ ಕೊತ್ತಲವಾಡಿ ಸಿನಿಮಾದ ಟೀಸರ್‌ ಪ್ರೇಕ್ಷಕ ವಲಯದಿಂದ ಭರಪೂರ ಮೆಚ್ಚುಗೆ ಪಡೆದುಕೊಂಡಿದೆ. ಇದೀಗ ಚಿತ್ರತಂಡ ಕೊತ್ತಲವಾಡಿ ಟೈಟಲ್ ಟ್ರ್ಯಾಕ್ (Kothalavadi Title Track) ಅನಾವರಣ ಮಾಡಿದೆ.

    ಕಿನ್ನಾಲ್ ರಾಜ್ ಸಾಹಿತ್ಯ ಬರೆದಿರುವ ಗೀತೆಗೆ ವ್ಯಾಸರಾಜ್ ಸೋಸಲೆ ಕಂಠ ಕುಣಿಸಿದ್ದಾರೆ. ವಿಕಾಸ್ ವಸಿಷ್ಠ ಸಂಗೀತ ಹಾಡಿನ ತೂಕ ಹೆಚ್ಚಿಸಿದೆ. ನಾಯಕನ ಶೌರ್ಯವನ್ನು ವರ್ಣಿಸುವ ಹಾಡು ಸಖತ್ ಪವರ್ ಫುಲ್ ಆಗಿ ಮೂಡಿ ಬಂದಿದೆ. ಇದನ್ನೂ ಓದಿ: ದರ್ಶನ್‌ಗೆ ಮಾದರಿಯಾದ ಸಂಜು ಬಸಯ್ಯ – ಪತ್ನಿಗೆ ಅಶ್ಲೀಲ ಮೆಸೇಜ್ ಕಳಿಸಿದವನಿಗೆ ಬುದ್ಧಿ ಹೇಳಿದ ನಟ

    ಪುಷ್ಪ ಅರುಣ್ ಕುಮಾರ್ ತಮ್ಮದೇ PA ಪ್ರೊಡಕ್ಷನ್ (PA Productions) ನಡಿ ಕೊತ್ತಲವಾಡಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಚಿತ್ರಕ್ಕೆ ಯುವ ಪ್ರತಿಭೆ ಶ್ರೀರಾಜ್ ಆಕ್ಷನ್ ಕಟ್ ಹೇಳಿದ್ದು, ಪೃಥ್ವಿ ಅಂಬರ್ (Pruthvi Ambaar) ನಾಯಕನಾಗಿ ಹಾಗೂ ಕಿರುತೆರೆ ನಟಿ ಕಾವ್ಯಾ ಶೈವ ನಾಯಕಿಯಾಗಿ ನಟಿಸುತ್ತಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ ಅವರಂತಹ ಅನುಭವಿ ತಾರಾಬಳಗ ಚಿತ್ರದಲ್ಲಿದೆ. ಇಲ್ಲಿಯವರೆಗೂ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೃಥ್ವಿ ‘ಕೊತ್ತಲವಾಡಿ’ ಚಿತ್ರದಲ್ಲಿ ಕಂಪ್ಲೀಟ್ ಮಾಸ್ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಕಿರುತೆರೆ ನಟಿ ಶ್ರುತಿಗೆ ಮನೆಯಲ್ಲೇ ಚಾಕು ಇರಿದು ಕೊಲೆಗೆ ಯತ್ನ, ಪತಿ ಅರೆಸ್ಟ್‌

    ಸಿನಿಮಾದ ಹಾಡುಗಳಿಗೆ ವಿಕಾಸ್ ವಸಿಷ್ಠ ಸಂಗೀತ ಸಂಯೋಜಿಸಿದ್ದಾರೆ. ಕಾರ್ತಿಕ್ ಎಸ್. ಛಾಯಾಗ್ರಹಣ ಮಾಡಿದ್ದಾರೆ. ರಾಮಿಸೆಟ್ಟಿ ಪವನ್ ಸಂಕಲನ ಮಾಡಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ವಿ. ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್, ಪ್ರಮೋದ್ ಮರವಂತೆ, ಗೌಸ್ ಪಿರ್ ಸಾಹಿತ್ಯ ಬರೆದಿದ್ದಾರೆ. ಅಭಿನಂದನ್ ಕಶ್ಯಪ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ಇದನ್ನೂ ಓದಿ: ಬಾಹುಬಲಿಗೆ ದಶಕದ ಸಂಭ್ರಮ: ಗುಡ್‌ನ್ಯೂಸ್ ಕೊಟ್ಟ ಜಕ್ಕಣ್ಣ

  • ಯಶ್ ತಾಯಿ ನಿರ್ಮಾಣದ ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್

    ಯಶ್ ತಾಯಿ ನಿರ್ಮಾಣದ ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್

    ಭಾರತೀಯ ಚಿತ್ರರಂಗವನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿರುವವ ಪೈಕಿ ನಟ ರಾಕಿಂಗ್ ಸ್ಟಾರ್ ಯಶ್ (Yash) ಕೂಡ ಒಬ್ಬರು. ಅವರ ತಾಯಿ ಪುಷ್ಪ ಅರುಣ್ ಕುಮಾರ್ (Pushpa Arunkumar) ತಮ್ಮದೇ ಪಿಎ ಪ್ರೊಡಕ್ಷನ್ಸ್ ಸ್ಥಾಪಿಸಿ, ಈ ನಿರ್ಮಾಣ ಸಂಸ್ಥೆಯಡಿ ಕೊತ್ತಲವಾಡಿ (Kothalavadi) ಎಂಬ ಚೊಚ್ಚಲ ಚಿತ್ರ ನಿರ್ಮಿಸಿದ್ದಾರೆ. ಇದೀಗ ಈ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ.

    ಆಗಸ್ಟ್ 1ಕ್ಕೆ ಯಶ್ ತಾಯಿ ಪುಷ್ಪ ಅವರು ನಿರ್ಮಿಸಿರುವ ಚೊಚ್ಚಲ ಚಿತ್ರ ಕೊತ್ತಲವಾಡಿ ಥಿಯೇಟರ್‌ಗೆ ಎಂಟ್ರಿ ಕೊಡಲಿದೆ. ಯುವ ಪ್ರತಿಭೆ ಶ್ರೀರಾಜ್ ಅವರ ನಿರ್ದೇಶನ ಮೊದಲ ಚಿತ್ರ ಇದಾಗಿದ್ದು, ಪೃಥ್ವಿ ಅಂಬರ್ (Pruthvi Ambaar) ನಾಯಕನಾಗಿ ಹಾಗೂ ಕಿರುತೆರೆ ನಟಿ ಕಾವ್ಯಾ ಶೈವ (Kavya Shaiva) ನಾಯಕಿಯಾಗಿ ನಟಿಸುತ್ತಿದ್ದಾರೆ. ಇದನ್ನೂ ಓದಿ: ಟಾಕ್ಸಿಕ್ ನಟಿಗಾಗಿ ಬೆಂಗಳೂರಿನಿಂದ ಮುಂಬೈಗೆ ಲೊಕೇಶನ್ ಶಿಫ್ಟ್ ಮಾಡಿದ ಯಶ್‌

    ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ ಅವರಂತಹ ಅನುಭವಿ ತಾರಾಬಳಗ ಚಿತ್ರದಲ್ಲಿದೆ. ಇಲ್ಲಿಯವರೆಗೂ ಲವ್ವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೃಥ್ವಿ ‘ಕೊತ್ತಲವಾಡಿ’ ಚಿತ್ರದಲ್ಲಿ ಕಂಪ್ಲೀಟ್ ಮಾಸ್ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಕೊತ್ತಲವಾಡಿ ಟೀಸರ್ ಮೂಲಕ ಪ್ರೇಕ್ಷಕರ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಇದನ್ನೂ ಓದಿ: ʻಲಕ್ಷ್ಮೀ ನಿವಾಸʼದಿಂದ ಹೊರನಡೆದ ಶ್ವೇತಾ

    ಸಿನಿಮಾದ ಹಾಡುಗಳಿಗೆ ವಿಕಾಸ್ ವಸಿಷ್ಠ ಸಂಗೀತ ಸಂಯೋಜಿಸಿದ್ದಾರೆ. ಕಾರ್ತಿಕ್ ಎಸ್. ಛಾಯಾಗ್ರಹಣ ಮಾಡಿದ್ದಾರೆ. ರಾಮಿಸೆಟ್ಟಿ ಪವನ್ ಸಂಕಲನ ಮಾಡಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ವಿ. ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್, ಪ್ರಮೋದ್ ಮರವಂತೆ, ಗೌಸ್ ಪಿರ್ ಸಾಹಿತ್ಯ ಬರೆದಿದ್ದಾರೆ. ಅಭಿನಂದನ್ ಕಶ್ಯಪ್ ಹಿನ್ನೆಲೆ ಸಂಗೀತ ನೀಡಿದ್ದಾರೆ.