Tag: puttanna kanagal

  • ಪುಟ್ಟಣ್ಣ ಕಣಗಲ್ ಜಯಂತಿಯನ್ನು ನಿರ್ದೇಶಕರ ದಿನವಾಗಿ ಆಚರಣೆ

    ಪುಟ್ಟಣ್ಣ ಕಣಗಲ್ ಜಯಂತಿಯನ್ನು ನಿರ್ದೇಶಕರ ದಿನವಾಗಿ ಆಚರಣೆ

    ನ್ನಡ ಚಿತ್ರರಂಗ ಕಂಡ ಅದ್ಭುತ ನಿರ್ದೇಶಕ ಪುಟ್ಟಣ್ಣ ಕಣಗಲ್ ಜನ್ಮದಿನದ ಪ್ರಯುಕ್ತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪುಟ್ಟಣ್ಣ ಕಣಗಲ್ ಜಯಂತಿಯನ್ನು ಆಚರಣೆ ಮಾಡಿತು. ಇದೇ ವೇಳೆ ಪುಟ್ಟಣ್ಣ ಕಣಗಲ್ ಜನ್ಮದಿನವನ್ನು ‘ನಿರ್ದೇಶಕರ ದಿನ’ ಎಂದು ಆಚರಿಸಲು ವಾಣಿಜ್ಯ ಮಂಡಳಿ ನಿರ್ಧರಿಸಿರೋದಾಗಿ ಘೋಷಿಸಲಾಯಿತು.

    ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ ಹರೀಶ್ ಮಾತನಾಡಿ ತೆಲುಗು ಚಿತ್ರರಂಗದಲ್ಲೂ ‘ನಿರ್ದೇಶಕರ ದಿನ’ ಎಂದಿದೆ. ನಮ್ಮಲ್ಲೂ ಪ್ರತಿ ವರ್ಷ ಡಿಸೆಂಬರ್ 1ರ ಪುಟ್ಟಣ್ಣ ಕಣಗಲ್ ಜನ್ಮದಿನವನ್ನು ‘ನಿರ್ದೇಶಕರ ದಿನ’ವನ್ನಾಗಿ ಆಚರಣೆ ಮಾಡೋಣ ಎಂದು ಪದಾಧಿಕಾರಿಗಳೆಲ್ಲರೂ ಸೇರಿ ಚರ್ಚೆ ಮಾಡಿ ನಿರ್ಧಾರ ಮಾಡಿಕೊಂಡಿದ್ದೇವೆ. ಈಗಿನವರ ಜೊತೆಗೆ ಮುಂದಿನ ಪೀಳಿಗೆಗೂ ಅವರ ಸಿನಿಮಾಗಳ ಬಗ್ಗೆ, ನಿರ್ದೇಶನದ ಬಗ್ಗೆ ತಿಳಿಸಿಕೊಡುವಂತಹ ಕೆಲಸ ಇದರಿಂದಾಗಬೇಕು. ಆ ದೃಷ್ಟಿಯಿಂದ ಅವರ ಜನ್ಮದಿನವಾದ ಡಿಸೆಂಬರ್ 1ನ್ನು ‘ನಿರ್ದೇಶಕರ ದಿನ’ವನ್ನಾಗಿ ಆಚರಣೆ ಮಾಡಲು ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದ್ರು. ಇದನ್ನೂ ಓದಿ: ತಮಿಳಿನತ್ತ ಹೊಂಬಾಳೆ ಫಿಲ್ಮ್ಸ್:ಕೀರ್ತಿ ಸುರೇಶ್ ನಟನೆಯ `ರಘುತಥಾ’ ಚಿತ್ರ ನಿರ್ಮಾಣಕ್ಕೆ ಸಾಥ್

    ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಚಿನ್ನೇಗೌಡ ಮಾತನಾಡಿ ಇತ್ತೀಚೆಗೆ ವಾಣಿಜ್ಯ ಮಂಡಳಿ ಕೆಲವು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬರುತ್ತಿದೆ. ಈ ತರಹದ ಬೆಳವಣಿಗೆ ಆಗಬೇಕು. ಪುಟ್ಟಣ್ಣ ಕಣಗಲ್ ಜಯಂತಿಯನ್ನು ನಿರ್ದೇಶಕರ ದಿನ ಎಂದು ಆಚರಣೆ ಮಾಡಲು ನಿರ್ಧಾರ ಮಾಡಿದ್ದು ಬಹಳ ಒಳ್ಳೆಯ ಕೆಲಸ. ಈ ಮೂಲಕ ಚಿತ್ರರಂಗದಲ್ಲಿ ಏನಾಗಿತ್ತು, ಯಾರ್ಯಾರು ಇದ್ರು ಎಂಬುದು ಮುಂದಿನ ಪೀಳಿಗೆಗೆ ತಿಳಿಯಬೇಕು ಈ ನಿಟ್ಟಿನಲ್ಲಿ ವಾಣಿಜ್ಯ ಮಂಡಳಿ ಇಟ್ಟಿರುವ ಈ ಹೆಜ್ಜೆ ಅಭಿನಂದನಾರ್ಹ ಎಂದು ತಿಳಿಸಿದ್ರು. ಜೊತೆಗೆ ಪುಟ್ಟಣ್ಣ ಕಣಗಲ್ ಅವರೊಂದಿಗಿನ ಹಳೆಯ ದಿನಗಳನ್ನು ಇದೇ ಸಮಯದಲ್ಲಿ ಹಂಚಿಕೊಂಡ್ರು.

    ನಿರ್ದೇಶಕರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಎನ್. ಆರ್. ನಂಜುಡೇಗೌಡ ಮಾತನಾಡಿ ಪುಟ್ಟಣ್ಣ ಕಣಗಲ್ ಜನ್ಮದಿನವನ್ನು ನಿರ್ದೇಶಕರ ದಿನವನ್ನಾಗಿ ಆಚರಣೆ ಮಾಡಬೇಕು ಎಂದು ಘೋಷಣೆ ಆಗಿದ್ದು ಬಹಳ ಖುಷಿಯ ಸಂಗತಿ ಎಂದು ವಾಣಿಜ್ಯ ಮಂಡಳಿಯ ನಿರ್ಧಾರಕ್ಕೆ ಧನ್ಯವಾದ ತಿಳಿಸಿದ್ರು. ನಿರ್ದೇಶಕರ ಸಂಘದ ಅಧ್ಯಕ್ಷನಾಗಿ ಈಗ ತಾನೇ ನಮ್ಮ ಕೆಲಸ ಆರಂಭಿಸಿದ್ದೇವೆ. ನಮ್ಮೆಲ್ಲರನ್ನು ಕರೆದು ಸನ್ಮಾನ ಮಾಡಿದ್ದು ತುಂಬಾ ಖುಷಿಯ ಸಂಗತಿ. ನಾವು ಮಾಡಬೇಕಾದ ಕೆಲಸ ತುಂಬಾ ಇದೆ ಅನ್ನೋ ಜವಾಬ್ದಾರಿಯನ್ನು ಈ ಸನ್ಮಾನ ನೀಡಿದೆ. ಮುಂದಿನ ದಿನಗಳಲ್ಲಿ ನಿರ್ದೇಶಕರಿಗೆ ಗೌರವ ತಂದು ಕೊಡುವ ಕೆಲಸವನ್ನು ನಮ್ಮ ಸಂಘ ಮಾಡಲಿದೆ. ಹಲವು ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳೋದಾಗಿ ತಿಳಿಸಿದ್ರು.

    ಇದೇ ವೇಳೆ ನೂತನವಾಗಿ ಆಯ್ಕೆಯಾದ ನಿರ್ದೇಶಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರಿಗೆ ಸನ್ಮಾನ ಮಾಡಲಾಯಿತು.ಕಾರ್ಯಕ್ರಮದಲ್ಲಿ ಕೆ.ಸಿ. ಎನ್ ಕುಮಾರ್, ಕಾರ್ಯದರ್ಶಿ ಎಲ್‌. ಸಿ. ಕುಶಾಲ್,  ಖಜಾಂಚಿ ಟಿ.ಪಿ.ಸಿದ್ದರಾಜು, ಉಪಾಧ್ಯಕ್ಷ ರಾದ ಶಿಲ್ಪಾ ಶ್ರೀನಿವಾಸ್ ಭಾಗಿಯಾಗಿ ಪುಟ್ಟಣ್ಣ ಕಣಗಲ್ ಬಗ್ಗೆ ಹಲವು ವಿಚಾರಗಳನ್ನು ಹಂಚಿಕೊಂಡ್ರು.

    Live Tv
    [brid partner=56869869 player=32851 video=960834 autoplay=true]

  • ಖ್ಯಾತ ಚಿತ್ರಸಾಹಿತಿ, ಪುಟ್ಟಣ್ಣ ಕಣಗಾಲ್ ಅಣ್ಣನ ಮಗ ಪುರುಷೋತ್ತಮ ಕಣಗಾಲ್ ನಿಧನ.

    ಖ್ಯಾತ ಚಿತ್ರಸಾಹಿತಿ, ಪುಟ್ಟಣ್ಣ ಕಣಗಾಲ್ ಅಣ್ಣನ ಮಗ ಪುರುಷೋತ್ತಮ ಕಣಗಾಲ್ ನಿಧನ.

    ನ್ನಡದ ಹೆಸರಾಂತ ನಿರ್ದೇಶಕ ದಿ.ಪುಟ್ಟಣ್ಣ ಕಣಗಾಲ್ ಅವರ ಸಹೋದರನ ಮಗ, ಚಿತ್ರ ಸಾಹಿತಿ ಪುರುಷತ್ತೋಮ್ ಕಣಗಾಲ್ ಅವರು ನಿನ್ನೆ ಅಮೇರಿಕಾದ ತಮ್ಮ ಮಗಳ ನಿವಾಸದಲ್ಲಿ ನಿಧನರಾಗಿದ್ದಾರೆ. ಪುರುಷೋತ್ತಮ ಕಣಗಾಲ್ ಅವರಿಗೆ 69 ವರ್ಷ ವಯಸ್ಸಾಗಿತ್ತು. ಒಬ್ಬ ಮಗ ಹಾಗೂ ಒಬ್ಬ ಮಗಳನ್ನು ಅಗಲಿದ್ದಾರೆ.

    ಪುರುಷೋತ್ತಮ ಕಣಗಾಲ್, ಹೆಸರಾಂತ ಸಾಹಿತಿ ಕಣಗಾಲ್ ಪ್ರಭಾಕರ ಶಾಸ್ತ್ರಿ ಅವರ ಪುತ್ರ. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಅಣ್ಣನ ಮಗ.‌ ಪುರುಷೋತ್ತಮ ಕಣಗಾಲ್ ಅವರು ಕನ್ನಡದ ಸಾಕಷ್ಟು ಚಿತ್ರಗಳಿಗೆ ಗೀತತಚನೆ ಮಾಡಿದ್ದಾರೆ.  ಕಣಗಾಲ್ ನೃತ್ಯಾಲಯ ಹಾಗೂ ಪುಟ್ಟಣ್ಣ ಕಣಗಾಲ್ ಟ್ರಸ್ಟ್ ನ ಮುಖ್ಯಸ್ಥರಾಗಿ ಪುರುಷೋತ್ತಮ ಕಣಗಾಲ್ ಕಾರ್ಯ ನಿರ್ವಹಿಸಿದ್ದರು.

  • ಪುಟ್ಟಣ್ಣ ಕಣಗಾಲ್ ಮಗ ರಾಮು ಕಣಗಾಲ್ ಕೊರೊನಾಗೆ ಬಲಿ

    ಪುಟ್ಟಣ್ಣ ಕಣಗಾಲ್ ಮಗ ರಾಮು ಕಣಗಾಲ್ ಕೊರೊನಾಗೆ ಬಲಿ

    ಬೆಂಗಳೂರು: ಚಂದನವನದ ಹಿರಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಪುತ್ರ ರಾಮು ಕಣಗಾಲ್ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ.

    ಕೆಲ ದಿನಗಳ ಹಿಂದೆ ಅನಾರೋಗ್ಯ ಹಿನ್ನೆಲೆ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾಗ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ರಾಮು ಕಣಗಾಲ್ ಆರೋಗ್ಯ ಕಳೆದ ಐದು ದಿನಗಳಿಂದ ಗಂಭೀರವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ರಾಮು ಕಣಗಾಲ್ ನಿಧನರಾಗಿದ್ದಾರೆ.

    ಚೆನ್ನೈನಲ್ಲಿ ವಿದ್ಯಾಭ್ಯಾಸ ಪಡೆದಿದ್ದ ರಾಮು ಅವರು ಬೆಂಗಳೂರಿನಲ್ಲಿ ವಾಸವಾಗಿದ್ದರು. ಬೆಂಗಳೂರಿನಲ್ಲಿ ಕಣಗಾಲ್ ನೃತ್ಯಾಲಯ ಹೆಸರಿನಲ್ಲಿ ನಾಟ್ಯಶಾಲೆ ನಡೆಸುತ್ತಿದ್ದರು. ಕೆಲ ವರ್ಷಗಳ ಹಿಂದೆ ಸಂದರ್ಶನದಲ್ಲಿ ಹಲವು ವೈಯಕ್ತಿಕ ವಿಷಯಗಳನ್ನು ಹಂಚಿಕೊಂಡಿದ್ದರು. ತಂದೆ ಹಾಕಿಕೊಟ್ಟ ಮಾರ್ಗದಲ್ಲಿ ಬದುಕು ಕಟ್ಟಿಕೊಂಡಿದ್ದೇವೆ. ಪುಟ್ಟಣ್ಣ ಹೆಸರಿನಲ್ಲಿ ನೀಡುವ ಪ್ರಶಸ್ತಿ ನೀಡುವ ಸಮಾರಂಭಕ್ಕೆ ಸೌಜನ್ಯಕ್ಕೂ ನಮ್ಮ ಕುಟುಂಬಕ್ಕೆ ಆಹ್ವಾನ ನೀಡಲ್ಲ ಎಂದು ಚಿತ್ರರಂಗದ ಬಗ್ಗೆ ಅಸಮಾಧಾನ ಹೊರ ಹಾಕಿದ್ದರು.

  • ಕಥಾಸಂಗಮ: ಟ್ರೇಲರ್ ಪ್ರಭೆಯಲ್ಲಿ ಮಹಾ ಗೆಲುವಿನ ಮುನ್ಸೂಚನೆ!

    ಕಥಾಸಂಗಮ: ಟ್ರೇಲರ್ ಪ್ರಭೆಯಲ್ಲಿ ಮಹಾ ಗೆಲುವಿನ ಮುನ್ಸೂಚನೆ!

    ನ್ನಡದ ಪ್ರೇಕ್ಷಕರು ವೈವಿಧ್ಯತೆ ಬಯಸುವ ಮನಸ್ಥಿತಿ ಹೊಂದಿರುವವರು. ಈ ಕಾರಣದಿಂದಲೇ ಇಲ್ಲಿ ಹೊಸ ಆಲೋಚನೆ, ಪ್ರಯೋಗಗಳ ಚಿತ್ರಗಳು ಸೋಲುವುದಿಲ್ಲ. ಅದೆಂಥಾ ಸವಾಲುಗಳೆದುರಾದ ಘಳಿಗೆಯಲ್ಲಿಯೂ ಪ್ರೇಕ್ಷಕರು ಅಂಥಾ ಸಿನಿಮಾಗಳನ್ನು ಕೈ ಬಿಡುವುದಿಲ್ಲ. ಬಹುಶಃ ಪ್ರೇಕ್ಷಕರ್ಯಾರೂ ನಿರೀಕ್ಷೆ ಮಾಡಿರದ ರೀತಿಯಲ್ಲಿ ಮೂಡಿ ಬಂದು ತೆರೆಗಾಣಲು ಸಜ್ಜುಗೊಂಡಿರೋ ಕಥಾ ಸಂಗಮ ಚಿತ್ರ ರೂಪುಗೊಂಡಿದ್ದರ ಹಿಂದೆಯೂ ಪ್ರೇಕ್ಷಕರ ಔದಾರ್ಯವಿದೆ. ಇಂಥಾ ಸೂಕ್ಷ್ಮಗಳನ್ನು ಖಚಿತವಾಗಿಯೇ ಅರ್ಥ ಮಾಡಿಕೊಂಡಿರುವ ರಿಷಬ್ ಶೆಟ್ಟಿ ವರ್ಷಗಳ ಹಿಂದೆಯೇ ಕಥಾ ಸಂಗಮವೆಂಬ ಕನಸಿಗೆ ಕಾವು ಕೊಟ್ಟಿದ್ದರು. ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಈ ಸಿನಿಮಾ ಟ್ರೇಲರ್‍ಗೆ ಸಿಕ್ಕಿರೋ ಅಭೂತಪೂರ್ವ ಬೆಂಬಲವೇ ಮಹಾ ಗೆಲುವೊಂದರ ಮುನ್ಸೂಚನೆಯಂತೆ ಕಾಣಿಸುತ್ತಿದೆ. ಇದರ ಬೆನ್ನಲ್ಲಿಯೇ ಹೊರ ಬಿದ್ದಿರುವ ಪೂರಕ ಮಾಹಿತಿಗಳು ಕಥಾ ಸಂಗಮದತ್ತ ಮತ್ತಷ್ಟು ಪ್ರೇಕ್ಷಕರು ಆಕರ್ಷಿತರಾಗುವಂತಿವೆ.

    ಈ ಟ್ರೇಲರ್‌ನಲ್ಲಿ ಏಳೂ ಕಥೆಗಳ ಝಲಕ್ಕುಗಳನ್ನು ಜಾಹೀರು ಮಾಡುತ್ತಲೇ ಪಾತ್ರಗಳ ಪರಿಚಯವನ್ನೂ ಮಾಡಿಸಲಾಗಿದೆ. ಅದರಲ್ಲಿ ಎಂಥವರೂ ಆಹ್ಲಾದಗೊಳ್ಳುವಂಥಾ ತಾಜಾ ತಾಜ ಸನ್ನಿವೇಶಗಳು, ನಿಗೂಢ ಕಥೆಗಳ ಮುನ್ಸೂಚನೆಗಳೆಲ್ಲ ಗೋಚರಿಸುತ್ತಾ ಲಕ್ಷ ಲಕ್ಷ ವೀಕ್ಷಣೆಯೊಂದಿಗೆ ಟ್ರೆಂಡಿಂಗ್‍ನಲ್ಲಿದೆ. ಶ್ರೀದೇವಿ ಎಂಟರ್‍ಪ್ರೈಸಸ್ ಬ್ಯಾನರಿನಡಿಯಲ್ಲಿ ಹೆಚ್.ಕೆ ಪ್ರಕಾಶ್, ಪ್ರದೀಪ್ ಎನ್ ಆರ್ ಮತ್ತು ರಿಷಬ್ ಶೆಟ್ಟಿ ನಿರ್ಮಾಣ ಮಾಡಿರುವ ಕಥಾ ಸಂಗಮ ಅಪರೂಪದ ಕಥೆಗಳ ಮಹಾ ಸಂಗಮವಾಗಿದೆ ಎಂಬ ಸ್ಪಷ್ಟ ಸೂಚನೆಯನ್ನು ಪ್ರತೀ ಪ್ರೇಕ್ಷಕರಿಗೂ ಮನವರಿಕೆ ಮಾಡಿ ಕೊಡುವಲ್ಲಿ ಈ ಟ್ರೇಲರ್ ಗೆದ್ದಿದ್ದಾರೆ. ಈ ಚಿತ್ರ ಡಿಸೆಂಬರ್ 6ರಂದು ಬಿಡುಗಡೆಗೊಳ್ಳಲಿದೆ.

    ಸಾಮಾನ್ಯವಾಗಿ ಒಂದು ಸಿನಿಮಾದಲ್ಲಿ ಒಂದು ಕಥೆಯನ್ನು ಎಲ್ಲಿಯೂ ಸಿಕ್ಕಾಗದಂತೆ ನಿರೂಪಿಸೋದೇ ಕಷ್ಟದ ಸಂಗತಿ. ಅಂಥಾದ್ದರಲ್ಲಿ ಏಳು ಕಥೆಗಳ ಸೂತ್ರ ಹಿಡಿದು ಎಲ್ಲಿಯೂ ಗೊಂದಲ ಉಂಟಾಗದಂತೆ ರೂಪಿಸೋದೊಂದು ಸಾಹಸ. ನಿರ್ದೇಶಕ ರಿಷಬ್ ಶೆಟ್ಟಿ ಏಳು ಮಂದಿ ಪ್ರತಿಭಾನ್ವಿತ ಯುವ ನಿರ್ದೇಶಕರ ಬೆಂಬಲದೊಂದಿಗೆ ಅದನ್ನು ಸಾಧ್ಯವಾಗಿಸಿದ್ದಾರೆ. ಈ ಸಿನಿಮಾ ಕನ್ನಡ ಚಿತ್ರರಂಗದಲ್ಲಿಯೇ ದಾಖಲೆ ಸೃಷ್ಟಿಸುವಂತಿದೆ ಎಂಬ ನಂಬಿಕೆಯಂತೂ ಎಲ್ಲೆಡೆ ವ್ಯಾಪಿಸಿಕೊಳ್ಳುತ್ತಿದೆ. ರಿಷಬ್ ಶೆಟ್ಟಿ ಯಾವ ಚಿತ್ರ ಮಾಡಿದರೂ ಅಲ್ಲೊಂದು ಹೊಸತನ ಇರುತ್ತದೆ. ಆದರೆ ಈ ಬಾರಿ ಹೊಸತನವೇ ಕಥಾ ಸಂಗಮವಾಗಿ ಮೈದಾಳಿದೆ. ಚೆಂದದ ಏಳು ಕಥೆ, ಚಿತ್ರವಿಚಿತ್ರವಾದ ಪಾತ್ರಗಳನ್ನು ಒಡಲಲ್ಲಿಟ್ಟುಕೊಂಡಿರೋ ಈ ಚಿತ್ರ ವಾರದೊಪ್ಪತ್ತಿನಲ್ಲಿಯೇ ತೆರೆಗಾಣಲಿದೆ.

  • ಕಣಗಾಲರ ಹಾದಿಯಲ್ಲೊಂದು ಕನಸಿನಂಥಾ `ಕಥಾ ಸಂಗಮ’!

    ಕಣಗಾಲರ ಹಾದಿಯಲ್ಲೊಂದು ಕನಸಿನಂಥಾ `ಕಥಾ ಸಂಗಮ’!

    ನ್ನಡ ಚಿತ್ರರಂಗವನ್ನು ತಮ್ಮ ವಿಭಿನ್ನ ಆಲೋಚನೆಗಳ ಮೂಲಕವೇ ಬೆಳಗಿದ ಮೇರು ನಿರ್ದೇಶಕ ಪುಟ್ಟಣ್ಣ ಕಣಗಾಲ್. ಚಿತ್ರರಂಗ ಒಂದೇ ಬಿಂದುವಿನ ಸುತ್ತ ಗಿರಕಿ ಹೊಡೆಯುತ್ತಿದ್ದ ಕಾಲದಲ್ಲಿಯೇ ಹೊಸ ಸಾಧ್ಯತೆಗಳ ಬ್ರಹ್ಮಾಂಡವನ್ನೇ ಬಿಚ್ಚಿಟ್ಟವರು ಪುಟ್ಟಣ್ಣ ಕಣಗಾಲ್. ಇದರೊಂದಿಗೆ ಪರಭಾಷಾ ಚಿತ್ರರಂಗದ ಮಂದಿಯೇ ಬೆರಗಾಗುವಂತಹ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಕಣಗಾಲರ ಪ್ರಯೋಗಶೀಲತೆಗೆ ಕಥಾ ಸಂಗಮ ಕಿರೀಟವಿದ್ದಂತೆ. ಇದೀಗ ಈಗಿನ ತಲೆಮಾರಿನ ಕ್ರಿಯಾಶೀಲ ನಿರ್ದೇಶಕ ರಿಷಬ್ ಶೆಟ್ಟಿ ಆ ಕಿರೀಟಕ್ಕೆ ಮತ್ತೊಂದು ಗರಿ ಮೂಡಿಸುವಂತಹ ಪ್ರಯತ್ನ ಮಾಡಿದ್ದಾರೆ. ಅದರ ಫಲವಾಗಿ ರೂಪುಗೊಂಡಂತಿರುವ ಹೊಸ `ಕಥಾ ಸಂಗಮ’ ಡಿಸೆಂಬರ್ 6ರಂದು ಬಿಡುಗಡೆಯಾಗುತ್ತಿದೆ.

    ಶ್ರೀದೇವಿ ಎಂಟರ್ ಪ್ರೈಸಸ್ ಬ್ಯಾನರಿನಡಿಯಲ್ಲಿ ಹೆಚ್.ಕೆ ಪ್ರಕಾಶ್, ಪ್ರದೀಪ್ ಎನ್ ಆರ್ ಮತ್ತು ರಿಷಬ್ ಶೆಟ್ಟಿ ನಿರ್ಮಾಣ ಮಾಡಿರುವ ಕಥಾ ಸಂಗಮವೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಅಷ್ಟಕ್ಕೂ ರಿಷಬ್ ಶೆಟ್ಟಿ ಒಂದು ಸಿನಿಮಾ ನಿರ್ದೇಶನಕ್ಕಿಳಿದರೆಂದರೆ ಅಲ್ಲೇನೋ ಹೊಸತನ ಇದ್ದೇ ಇರುತ್ತದೆ ಎಂಬ ನಂಬಿಕೆ ಪ್ರೇಕ್ಷಕರಲ್ಲಿದೆ. ಸರ್ಕಾರಿ ಪ್ರಾಥಮಿಕ ಶಾಲೆ ಕಾಸರಗೋಡು ಎಂಬ ಚಿತ್ರವನ್ನವರು ರೂಪಿಸಿದ್ದ ರೀತಿಯೇ ಅವರೆಂತಹ ಭಿನ್ನ ನಿರ್ದೇಶಕ ಎಂಬುದಕ್ಕೆ ಸ್ಪಷ್ಟ ಸಾಕ್ಷಿ. ಈ ಕಥಾ ಸಂಗಮದಲ್ಲಂತೂ ಅವರು ಕನ್ನಡ ಚಿತ್ರರಂಗದ ಘನತೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವಂತಹ ಪ್ರಯತ್ನ ಮಾಡಿದ್ದಾರೆ. ಎಪ್ಪತ್ತರ ದಶಕದಲ್ಲಿ ಪುಟ್ಟಣ್ಣ ಕಣಗಾಲ್ ನಿರ್ದೇಶನ ಮಾಡಿದ್ದ ಚಿತ್ರದಲ್ಲಿ ನಾಲ್ಕು ಕಥೆಗಳನ್ನು ಹೇಳಿದ್ದರು. ರಿಷಬ್ ಶೆಟ್ಟರು ಈ ಕಥಾ ಸಂಗಮದಲ್ಲಿ ಏಳು ಕಥೆಗಳನ್ನು ಹೇಳಿದ್ದಾರೆ. ಇಲ್ಲಿ ಏಳು ಜನ ನಿರ್ದೇಶಕರು, ಏಳು ಮಂದಿ ಛಾಯಾಗ್ರಾಹಕರು ಮತ್ತು ಏಳು ಜನ ಸಂಗೀತ ನಿರ್ದೇಶಕರು ಸೇರಿ ಈ ಸಿನಿಮಾವನ್ನು ನಿರ್ವಹಿಸಿದ್ದಾರೆ. ರಿಷಬ್ ಶೆಟ್ಟಿ ಅದರ ಸೂತ್ರ ಹಿಡಿದು ಮುನ್ನಡೆಸಿದ್ದಾರೆ. ಈ ಸಿನಿಮಾಗೀಗ ಸೆನ್ಸಾರ್ ಮಂಡಳಿ ಕಡೆಯಿಂದ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ.

    ಈ ಮೂಲಕ ಒಂದೇ ಸಿನಿಮಾದಲ್ಲಿ ಏಳು ಸಿನಿಮಾ ನೋಡುವ ಸದಾವಕಾಶ ಪ್ರೇಕ್ಷಕರಿಗೆ ಸಿಕ್ಕಿದೆ. ಕ್ರೈಂ, ಸಸ್ಪೆನ್ಸ್ ಥ್ರಿಲ್ಲರ್ ಸೇರಿದಂತೆ ಹಲವು ಬಗೆಯ ಕಥೆಗಳನ್ನು ಒಂದೇ ಸಿನಿಮಾದಲ್ಲಿ ಕಣ್ತುಂಬಿಕೊಳ್ಳುವ ಅಪರೂಪದ ಕ್ಷಣಗಳು ಹತ್ತಿರವಾಗುತ್ತಿವೆ. ನಿರ್ದೇಶಕ ರಿಷಬ್ ಶೆಟ್ಟಿ ಸದಾ ಸಿನಿಮಾ ಧ್ಯಾನದಲ್ಲಿಯೇ ತಲ್ಲೀನರಾಗಿರುವವರು. ಕಥಾ ಸಂಗಮದಂತಹ ಗುಂಗೀಹುಳ ಅವರ ಮನಸ್ಸು ಹೊಕ್ಕು ಕೆಲಸ ಶುರುವಿಟ್ಟುಕೊಂಡಿದ್ದದ್ದು ವರ್ಷಗಳ ಹಿಂದೆ. ನಂತರ ಪಟ್ಟು ಬಿಡದೇ ಏಳು ಮಂದಿ ಪ್ರತಿಭಾವಂತರನ್ನು ಹುಡುಕಿ, ಚೆಂದದ ಕಥೆಗಳನ್ನು ಆಯ್ಕೆ ಮಾಡಿಕೊಂಡು ಈ ರಿಸ್ಕಿ ಸಾಹಸಕ್ಕೆ ಕೈ ಹಾಕಿದ್ದರು. ಪುಟ್ಟಣ್ಣ ಕಣಗಾಲರ ಸ್ಫೂರ್ತಿಯಿಂದಲೇ ತಯಾರಾದ ಈ ಸಿನಿಮಾವನ್ನು ಅವರಿಗೇ ಅರ್ಪಿಸುವ ಮೂಲಕ ಗೌರವ ತೋರಿಸಲಾಗಿದೆ. ಕಣಗಾಲರ ಕೀರ್ತಿಯನ್ನು ಮತ್ತಷ್ಟು ಮಿರುಗಿಸುವಂತೆಯೇ ಈ ಸಿನಿಮಾ ಮೂಡಿ ಬಂದಿದೆ ಅನ್ನೋದು ಈಗಾಗಲೇ ಸ್ಪಷ್ಟಗೊಂಡಿದೆ.

    ಕಥಾ ಸಂಗಮದ ಮೂಲಕ ಕಿರಣ್ ರಾಜ್ ಕೆ, ಶಶಿಕುಮಾರ್ ಪಿ, ಚಂದ್ರಜಿತ್ ಎಲಿಯಪ್ಪ, ರಾಹುಲ್ ಪಿ.ಕೆ, ಜೈ ಶಂಕರ್, ಕರಣ್ ಅನಂತ್, ಜಮದಗ್ನಿ ಮನೋಜ್ ಎಂಬ ಏಳು ಮಂದಿ ಪ್ರತಿಭಾವಂತ ನಿರ್ದೇಶಕರನ್ನು ರಿಷಬ್ ಚಿತ್ರರಂಗಕ್ಕೆ ಪರಿಚಯಿಸಿದ್ದಾರೆ. ರಿಷಬ್ ಶೆಟ್ಟಿ, ಹರಿಪ್ರಿಯಾ, ರಾಜ್ ಬಿ ಶೆಟ್ಟಿ, ಕಿಶೋರ್ ಕುಮಾರ್, ಪ್ರಮೋದ್ ಶೆಟ್ಟಿ, ಯಜ್ಞಾ ಶೆಟ್ಟಿ, ಪ್ರಕಾಶ್ ಬೆಳವಾಡಿ, ಬಾಲಾಜಿ ಮನೋಹರ್ ಮುಂತಾದವರು ಈ ಏಳೂ ಕಥೆಗಳ ಪ್ರಧಾನ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಏಳೂ ಕಥೆಗಳ ಪ್ರತೀ ಪಾತ್ರಗಳೂ ಅದೆಷ್ಟು ಭಿನ್ನವಾಗಿವೆ ಅನ್ನೋದಕ್ಕೆ ಮೊನ್ನೆ ಬಿಡುಗಡೆಗೊಂಡಿರೋ ಟ್ರೇಲರ್‍ನಲ್ಲಿ ಸಾಕ್ಷಿಗಳಿವೆ. ವಾರದೊಪ್ಪತ್ತಿನಲ್ಲಿಯೇ ಕಥಾ ಸಂಗಮ ಪ್ರೇಕ್ಷಕರೆದುರು ತೆರೆದುಕೊಳ್ಳಲಿದೆ.

     

  • ಪುಟ್ಟಣ್ಣ ಕಣಗಾಲ್‍ಗೆ ರಂಗನಾಯಕಿಯ ಗೌರವ!

    ಪುಟ್ಟಣ್ಣ ಕಣಗಾಲ್‍ಗೆ ರಂಗನಾಯಕಿಯ ಗೌರವ!

    ಬೆಂಗಳೂರು: ರಂಗನಾಯಕಿ ಎಂಬ ಹೆಸರು ಕೇಳಿದಾಕ್ಷಣವೇ ಕನ್ನಡದ ಪ್ರೇಕ್ಷಕರಿಗೆ ನಿರ್ದೇಶಕ ಪುಟ್ಟಣ್ಣ ಕಣಗಾಲ್ ನೆನಪಾಗುತ್ತಾರೆ. ಆರತಿಯವರ ಮನೋಜ್ಞ ಅಭಿನಯ ನೆನಪಾಗುತ್ತದೆ. ಆ ಕಾಲಕ್ಕೆ ದೊಡ್ಡ ಮಟ್ಟದಲ್ಲಿ ಸಂಚಲನ ಸೃಷ್ಟಿಸಿ ಸೂಪರ್ ಹಿಟ್ ಆಗಿದ್ದ ಈ ಚಿತ್ರ ಈವರೆಗೂ ತನ್ನೆಡೆಗಿನ ಕ್ರೇಜ್ ಆನ್ನು ಹಾಗೆಯೇ ಕಾಯ್ದಿಟ್ಟುಕೊಂಡು ಬಂದಿದೆ. ಇದೀಗ ದಯಾಳ್ ಪದ್ಮನಾಭನ್ ಅದೇ ಶೀರ್ಷಿಕೆಯನ್ನಿಟ್ಟುಕೊಂಡು ನಿರ್ದೇಶನ ಮಾಡಿರೋ ಚಿತ್ರ ಇದೇ ನವೆಂಬರ್ ಎಂಟರಂದು ತೆರೆಗಾಣುತ್ತಿದೆ.

    ಒಂದು ಯಶಸ್ವೀ ಚಿತ್ರದ ಶೀರ್ಷಿಕೆಯಲ್ಲಿಯೆ ಹೊಸಾ ಚಿತ್ರಗಳು ತೆರೆ ಕಾಣೋದೇನು ಹೊಸತಲ್ಲ. ಆದರೆ ಕಥೆ ಪೂರಕವಾಗಿ, ಮೂಲ ಚಿತ್ರದ ಘನತೆಯನ್ನು ಮತ್ತಷ್ಟು ಮಿರುಗಿಸುವಂಥಾ ಕಥೆಗಳು ದೃಷ್ಯ ರೂಪ ಪಡೆಯೋದು ಮಾತ್ರ ಅಪರೂಪದ ಬೆಳವಣಿಗೆ. ಆರಂಭದಲ್ಲಿ ಕಣಗಾಲ್ ನಿರ್ದೇಶನದ ರಂಗನಾಯಕಿ ಎಂಬ ಶೀರ್ಷಿಕೆಯನ್ನು ತಮ್ಮ ಚಿತ್ರಕ್ಕಿಡೋ ಸಂದರ್ಭ ಬಂದಾಗ ಖುದ್ದು ದಯಾಳ್ ಅವರೇ ತಲ್ಲಣಿಸಿದ್ದರಂತೆ. ರಂಗನಾಯಕಿಯ ಹೆಸರಿಗೆ ಕುಂದುಂಟಾಗದಂತೆ ಈ ಸಿನಿಮಾ ನಿರ್ದೇಶನ ಮಾಡಲು ತನ್ನಿಂದ ಸಾಧ್ಯವಾಗುತ್ತದಾ ಎಂದು ಕೇಳಿಕೊಂಡಿದ್ದರಂತೆ.

    ಇದೀಗ ರಂಗನಾಯಕಿ ರೆಡಿಯಾಗಿ ನಿಂತಿದೆ. ದಯಾಳ್ ಕೂಡಾ ನಿರಾಳ ಭಾವದಿಂದಿದ್ದಾರೆ. ಇದು ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರಿಗೆ ಗೌರವ ಸೂಚಿಸುವ ರೀತಿಯಲ್ಲಿ ಮೂಡಿ ಬಂದಿದೆ ಎಂಬ ಸಾರ್ಥಕ ಭಾವ ಅವರಲ್ಲಿದೆ. ಈ ಚಿತ್ರ ಗೋವಾ ಇಂಟರ್ ನ್ಯಾಷನಲ್ ಫಿಲಂ ಫೆಸ್ಟಿವಲ್‍ಗೆ ಆಯ್ಕೆಯಾಗಿರೋದೇ ಒಂದು ಗೌರವದ ವಿಚಾರ. ಅದು ಪುಟ್ಟಣ್ಣ ಕಣಗಾಲ್ ಅವರಂಥಾ ಮೇರು ನಿರ್ದೇಶಕನಿಗೆ ಸಲ್ಲಿಸೋ ಮಹಾ ಗೌರವ ಎಂಬುದರಲ್ಲಿ ಎರಡು ಮಾತಿಲ್ಲ. ಬಿಡುಗಡೆ ಪೂರ್ವದಲ್ಲಿಯೇ ಇಷ್ಟೊಂದು ಮಿಂಚುತ್ತಿರೋ ರಂಗನಾಯಕಿ ಬಿಡುಗಡೆಯ ನಂತರ ದೇಶ ಮಟ್ಟದಲ್ಲಿ ಸದ್ದು ಮಾಡಲಿದೆ ಎಂಬ ನಂಬಿಕೆ ಚಿತ್ರತಂಡದಲ್ಲಿದೆ.

  • ‘ಎಡಕಲ್ಲು ಗುಡ್ಡದ ಮೇಲೆ’ ಬರಲು ರೆಡಿಯಾಗ್ತಿದೆ!

    ‘ಎಡಕಲ್ಲು ಗುಡ್ಡದ ಮೇಲೆ’ ಬರಲು ರೆಡಿಯಾಗ್ತಿದೆ!

    ಬೆಂಗಳೂರು: ಶ್ರೀ ಸಾಯಿಸಿದ್ಧಿ ಪ್ರೊಡಕ್ಷನ್ ಲಾಂಛನದಲ್ಲಿ ಜಿ.ಪಿ.ಪ್ರಕಾಶ್ ಅವರು ನಿರ್ಮಿಸುತ್ತಿರುವ `ಎಡಕಲ್ಲು ಗುಡ್ದದ ಮೇಲೆ` ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯ ರಾಜೇಶ್ ರಾಮನಾಥ್ ಸ್ಟುಡಿಯೋದಲ್ಲಿ ಹಿನ್ನೆಲೆ ಸಂಗೀತ ಅಳವಡಿಸಲಾಗುತ್ತ್ತಿದೆ. ಮೈಸೂರು, ಚಿಕ್ಕಮಗಳೂರು, ಉಡುಪಿ, ಬೆಂಗಳೂರು ಮುಂತಾದ ಕಡೆ ಚಿತ್ರಕ್ಕೆ ನಲವತ್ತೈದು ದಿನಗಳ ಚಿತ್ರೀಕರಣ ನಡೆದಿದೆ.

    ದಿನದ ಹೆಚ್ಚಿನ ಪಾಲು ಉದ್ಯೋಗದಲ್ಲೇ ಕಳೆಯುವ ಅಪ್ಪ-ಅಮ್ಮನ ಪ್ರೀತಿಯಿಂದ ವಂಚಿತಳಾದ ಹೆಣ್ಣು ಮಗಳೊಬ್ಬಳ ಜೀವನದ ಕುರಿತ ಕಥಾ ಹಂದರವುಳ್ಳ ಈ ಚಿತ್ರಕ್ಕೆ ವಿವಿನ್ ಸೂರ್ಯ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇದೊಂದು ಮಹಿಳಾ ಪ್ರಧಾನ ಹಾಗೂ ಕೌಟುಂಬಿಕ ಚಿತ್ರವೆನ್ನುವ ನಿರ್ದೇಶಕರು ಸದ್ಯದಲ್ಲೇ ಚಿತ್ರದ ಪ್ರಥಮ ಪ್ರತಿ ಸಿದ್ಧವಾಗಲಿದೆ ಎಂದು ತಿಳಿಸಿದ್ದಾರೆ.

    ಆಶಿಕ್ ಅರುಣ್ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಶಂಕರ್ ಅವರ ಛಾಯಾಗ್ರಹಣವಿದೆ. ವಿಜಯ್ ಎಂ ಕುಮಾರ್ ಸಂಕಲನ ಹಾಗೂ ಸದಾ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಭಾರತಿ ವಿಷ್ಣುವರ್ಧನ್, ಎಡಕಲ್ಲು ಗುಡ್ಡ ಚಂದ್ರಶೇಖರ್, ಶ್ರೀನಾಥ್, ಸುಮಿತ್ರ, ದತ್ತಣ್ಣ, ಮುಗೂರು ಸುರೇಶ್, ಚಿದಾನಂದ್, ಭವ್ಯಶ್ರೀ ರೈ, ಜ್ಯೋತಿ ರೈ, ವೀಣಾ ಸುಂದರ್, ಲಕ್ಷ್ಮೀ ಸಿದ್ದಯ್ಯ, ಪದ್ಮಜಾರಾವ್, ಸಿಹಿಕಹಿ ಚಂದ್ರು, ರವಿ ಭಟ್, ಉಷಾ ಭಂಡಾರಿ, ಧರ್ಮೇಂದ್ರ, ಸ್ವಾತಿ ಶರ್ಮ, ಪ್ರಗತಿ, ವೈಭವಿ, ಮೇಘನ, ನಕುಲ್ ಮುಂತಾದವರಿದ್ದಾರೆ.

    ಪುಟ್ಟಣ್ಣ ಕಣಗಲ್ ಅವರ ನಿರ್ದೇಶನದ `ಎಡಕಲ್ಲು ಗಡ್ಡದ ಮೇಲೆ` ಚಿತ್ರದಲ್ಲಿ ನಟಿಸಿ, ಇತ್ತೀಚೆಗಷ್ಟೇ ವಿಧಿವಶರಾದ ಎಡಕಲ್ಲು ಗುಡ್ಡ ಚಂದ್ರಶೇಖರ್ ಎಂದೇ ಖ್ಯಾತರಾಗಿದ್ದ ಚಂದ್ರಶೇಖರ್ ಅವರು ಈ ಚಿತ್ರದಲ್ಲಿ ನಟಿಸಿದ್ದು, ಅವರ ನಟನೆಯ ಕೊನೆಯ ಚಿತ್ರದ ಶೀರ್ಷಿಕೆ ಕೂಡ ‘ಎಡಕಲ್ಲು ಗುಡ್ಡದ ಮೇಲೆ’ ಆಗಿರುವುದು ವಿಪರ್ಯಾಸ.