ರಾಮ್ ಲಲ್ಲಾ ಮೂರ್ತಿ (Ram Lalla)ಮಾಡುವ ಮೂಲಕ ಜಗತ್ ಪ್ರಸಿದ್ಧಿ ಪಡೆದಿರುವ ಮೈಸೂರಿನ ಅರುಣ್ ಯೋಗಿರಾಜ್ (Arun Yogiraj)ಗೂ ಸಿನಿಮಾ ರಂಗಕ್ಕೂ ನಂಟಿದೆ. ಮೈಸೂರಿನ ವಿಷ್ಣುವರ್ಧನ್ (Vishnuvardhan) ಸ್ಮಾರಕದಲ್ಲಿ ತಲೆಯೆತ್ತಿ ನಿಂತಿರುವ ಡಾ.ವಿಷ್ಣುವರ್ಧನ್ ಅವರ ಪುತ್ಥಳಿಯನ್ನು (Putthali) ತಯಾರು ಮಾಡಿದ್ದು ಇದೇ ಅರುಣ್ ಯೋಗಿರಾಜ್.
ಅರುಣ್ ಯೋಗಿರಾಜ್ ಸ್ಥಳೀಯ ಮಟ್ಟದಲ್ಲಿ ಶಿಲ್ಪಿಕಾರರಾಗಿ ಗುರುತಿಸಿಕೊಂಡಿದ್ದರೂ, ಡಾ.ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ನಿರ್ಮಾಣ ಮಾಡುವ ಮೂಲಕ ಸಿನಿಮಾ ರಂಗಕ್ಕೂ ಪರಿಚಿತ ಆದರು. ಅದರಲ್ಲೂ ಸ್ಮಾರಕದ ಉದ್ಘಾಟನೆ ದಿನದಂದು ವಿಷ್ಣುವರ್ಧನ್ ಪುತ್ಥಳಿ ಹಾಗೂ ಭಾರತಿ ವಿಷ್ಣುವರ್ಧನ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದರು.
ಇದೀಗ ಅರುಣ್ ಯೋಗಿರಾಜ್ ನ್ಯಾಷಿನಲ್ ಸ್ಟಾರ್ ಆಗಿ ಬದಲಾಗಿದ್ದಾರೆ. ಇವರದ್ದೇ ಕಲ್ಪನೆಯಲ್ಲಿ ತಯಾರಾದ ರಾಮ್ ಲಲ್ಲಾ ಮೂರ್ತಿಯು ಆಯ್ಕೆಯಾದ ನಂತರ ಅರುಣ್ ಸಖತ್ ಫೇಮಸ್ ಆಗಿದ್ದಾರೆ. ಇವರ ಕಲ್ಪನೆಯಲ್ಲಿ ಅರಳಿದ ಪ್ರತಿಮೆಗಳು ಇದೀ ಒಂದೊಂದೇ ಬೆಳಕಿಗೆ ಬರುತ್ತಿವೆ.
ನಿನ್ನೆಯಷ್ಟೇ ಅರುಣ್ ಯೋಗಿರಾಜ್ ಬೆಂಗಳೂರಿಗೆ ಬಂದಿಳಿದ್ದಾರೆ. ಜೊತೆಗೆ ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್.ಆರ್. ರಂಗನಾಥ್ ಅವರ ಜೊತೆ ಎಕ್ಸ್ ಕ್ಲ್ಯೂಸಿವ್ ಆಗಿ ಸಂದರ್ಶನಕ್ಕೆ ಕೂತಿದ್ದಾರೆ. ಸಾಕಷ್ಟು ವಿಚಾರಗಳನ್ನೂ ಅವರು ಹಂಚಿಕೊಂಡಿದ್ದಾರೆ.
ಕನ್ನಡದ ಮೇರುನಟ ಡಾ. ವಿಷ್ಣುವರ್ಧನ್ ಅವರ ಪುತ್ಥಳಿಗಳು ರಾಜ್ಯಾದ್ಯಂತ ತಲೆಯೆತ್ತಿವೆ. ವಿಷ್ಣು ಅಭಿಮಾನಿಗಳು ರಾಜ್ಯದ ನಾನಾ ಕಡೆ ಅವರ ಪುತ್ಥಳಿಯನ್ನು (Putthali) ಪ್ರತಿಷ್ಠಾಪಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ (Bangalore) ಕರುನಾಡ ತಿಲಕ ಡಾ.ವಿಷ್ಣು ಕನ್ನಡ ಅಭಿಮಾನಿಗಳ ಸಂಘದ ವತಿಯಿಂದ ಗಿರಿನಗರ ಹಿರಣ್ಣನ ಗುಟ್ಟೆ ಸರ್ಕಲ್ ನಲ್ಲಿ ಡಾ.ವಿಷ್ಣು ಸೇನಾ ಸಮಿತಿ ರಾಜ್ಯಾಧ್ಯಕ್ಷರಾದ ವೀರಕಪುತ್ರ ಶ್ರೀನಿವಾಸ್ (Veerakaputra Srinivas) ಅವರ ಉಪಸ್ಥಿತಿಯಲ್ಲಿ ಶಾಸಕ ಎಂ ಕೃಷ್ಣಪ್ಪ (M. Krishnappa) ಅಮೃತ ಹಸ್ತದಿಂದ ಪುತ್ಥಳಿ ಅನಾವರಣವಾಯಿತು
ವಿಶೇಷ ಏನಂದ್ರೆ ಇದು ವೀರಕಪುತ್ರ ಶ್ರೀನಿವಾಸ್ ಅವರು ವೈಯಕ್ತಿಕವಾಗಿ ಡಾ.ವಿಷ್ಣುವರ್ಧನ್ ಅವರ ಪುತ್ಥಳಿಯನ್ನು ಕೊಡುಗೆಯಾಗಿ ನೀಡುತ್ತಿರುವ 52 ನೇ ಪುತ್ಥಳಿ ಆಗಿರುವುದು ವಿಶೇಷ. ವಿಷ್ಣು ಅವರ ಹೆಸರಿನಲ್ಲಿ ಸಾಕಷ್ಟು ಕೆಲಸಗಳನ್ನು ಮಾಡುತ್ತಾ ಬಂದಿರುವ ವೀರಕಪುತ್ರ ಶ್ರೀನಿವಾಸ್ ಸಾಕಷ್ಟು ಕಡೆ ಪುತ್ಥಳಿಯನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಮೂಲಕ ಅಭಿಮಾನ ಮೆರೆದಿದ್ದಾರೆ. ಇದನ್ನೂ ಓದಿ:‘ಕಬಾಲಿ’ ನಿರ್ಮಾಪಕ ಅರೆಸ್ಟ್ ಬೆನ್ನಲ್ಲೇ ಡ್ರಗ್ಸ್ ಪ್ರಕರಣದಲ್ಲಿ ನಟಿ ಅಶು ರೆಡ್ಡಿ ಹೆಸರು
ಮೊನ್ನೆಯಷ್ಟೇ ವಿಷ್ಣುವರ್ಧನ್ (Dr. Vishnuvardhan) ಹೆಸರಿನಲ್ಲಿ ದಾಖಲೆ (Record) ಯೊಂದು ಸೃಷ್ಟಿಯಾಗಿತ್ತು. ವೀರಕಪುತ್ರ ಶ್ರೀನಿವಾಸ್ ಮತ್ತು ವಿಷ್ಣು ಸೇನಾನಿಗಳು ವಿಷ್ಣುವರ್ಧನ್ ಹುಟ್ಟು ಹಬ್ಬದಂದು ಕಟೌಟ್ ಜಾತ್ರೆ ಮಾಡಿದ್ದರು. ನೆಚ್ಚಿನ ನಟನ 52 ಕಟೌಟ್‌ಗಳನ್ನು ಅಂದು ಬೆಂಗಳೂರಿನ ಬಾಲಣ್ಣ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಅವರ ಸ್ಮಾರಕದ ಮುಂದೆ ನಿಲ್ಲಿಸಿದ್ದರು. ಇದನ್ನು ಪರಿಗಣಿಸಿ ಏಷ್ಯಾ ಬುಕ್ ಮತ್ತು ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಅದು ದಾಖಲಾಗಿತ್ತು.
ಡಾ. ವಿಷ್ಣುವರ್ಧನ್ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 50 ವರ್ಷಗಳಾದ ಹಿನ್ನಲೆಯಲ್ಲಿ ಅವರ 50 ಸೇನಾನಿಗಳು ಡಾ. ವಿಷ್ಣು ಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ ಅವರ ನೇತೃತ್ವದಲ್ಲಿ 2022ರ ಸೆಪ್ಟೆಂಬರ್ 18 ರಂದು ಬೆಂಗಳೂರಿನ ಡಾ. ವಿಷ್ಣು ಪುಣ್ಯಭೂಮಿಯಲ್ಲಿ 51 ಬೃಹತ್ ಕಟೌಟ್‌ಗಳನ್ನು ಸ್ಥಾಪಿಸಿ ‘ಕಟೌಟ್ ಜಾತ್ರೆ’ ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಆ ಕಟೌಟ್‌ಗಳಿಗೆ ಬೃಹತ್ ಹಾರಗಳನ್ನು ಸಹ ಹಾಕಿಸಿದ್ದರು. ಪೊಲೀಸ್ ಇಲಾಖೆಯ ಪ್ರಕಾರ ಎರಡೂವರೆ ಲಕ್ಷ ಕನ್ನಡಿಗರು ಈ ಕಟೌಟ್ ಜಾತ್ರೆಯಲ್ಲಿ ಭಾಗವಹಿಸಿದ್ದರು.
ಅಂದೇ ಈ ಕಟೌಟ್ ಜಾತ್ರೆಯನ್ನು ಏಷ್ಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲಿಸಲು ಮನವಿಯನ್ನು ಸಲ್ಲಿಸಲಾಗಿತ್ತು. ಆ ಸಂಸ್ಥೆಯು ನಮ್ಮ ದಾಖಲೆ ಸಂಬಂಧ ಅನೇಕ ಹಂತದ ಪರೀಕ್ಷೆಗಳನ್ನು ನಡೆಸಿದರಲ್ಲದೆ, ಖುದ್ದಾಗಿ ಸ್ಥಳ ಪರಿಶೀಲನೆಯನ್ನು ಸಹ ಮಾಡಿದ್ದರು. ನಂತರ ಕಟೌಟ್ ಜಾತ್ರೆಯು ಏಷ್ಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲೆಯಾಗಿದೆ.
ಪುನೀತ್ ರಾಜ್ ಕುಮಾರ್ (Puneeth), ಇದು ಕನ್ನಡಿಗರ ಹೃದಯದಲ್ಲಿ ಶಾಶ್ವತವಾಗಿ ಉಳಿದುಕೊಳ್ಳುವ ಹೆಸರು. ನಟನೆ , ವ್ಯಕ್ತಿತ್ವ ಮತ್ತು ನಿಸ್ವಾರ್ಥ ಸಮಾಜಮುಖಿ ಸೇವೆಗಳಿಂದ ಜನಮಾನಸದಲ್ಲಿ ಅಚ್ಚಳಿಯದೆ ನೆಲೆಸಿರುವ ಈ ಹಸನ್ಮುಖಿ ನಮ್ಮಲ್ಲೆರನ್ನು ಅಗಲಿ ಇಂದಿಗೆ ಒಂದು ವರ್ಷವೇ ಆಗಿದೆ. ಇಡೀ ಭಾರತೀಯ ಚಿತ್ರರಂಗಕ್ಕೆ ಮರೆಯಲಾಗದಂತ ದುಃಖವಾಗಿ ಪರಿಣಮಿಸಿ ಕಣ್ಣೀರಾಗಿಸಿರುವ ಈ ದೊಡ್ಮನೆ ಕಂದ ಇಂದಿಗೂ ಎಲ್ಲರ ಮನಸಿನಲ್ಲಿ ಮುದ್ದಿನ ಮಗುವಾಗಿದ್ದಾರೆ.
ಜೀ ಕನ್ನಡ ವಾಹಿನಿಯೊಟ್ಟಿಗೆ ವಿಶೇಷ ನಂಟು ಹೊಂದಿದ್ದ ಅಪ್ಪು ಅವರು ಎಲ್ಲಾ ಕಾರ್ಯಕ್ರಮಗಳಿಗೂ ಪ್ರೀತಿಯಿಂದ ಆಗಮಿಸಿ ಬೆಂಬಲ ಸೂಚಿಸುತ್ತಿದ್ದರು ಮತ್ತು ಮನಸಾರೆ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಿದ್ದರು. ಅದಕ್ಕೆ ಸಾಕ್ಷಿ ಎನ್ನುವಂತೆ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ , ಸರಿಗಮಪ ಕಾರ್ಯಕ್ರಮದ ವಿಶೇಷ ಸ್ಪರ್ಧಿಗಳ ಕೋರಿಕೆಯನ್ನು ಈಡೇರಿಸಲು ಖುದ್ದು ಅವರೇ ವೇದಿಕೆಗೆ ಆಗಮಿಸಿ ಅವರ ಬೆನ್ನು ತಟ್ಟಿ ಪ್ರೀತಿಯಿಂದ ಪ್ರೋತ್ಸಾಹ ನೀಡಿದ್ದು ಇತರರಿಗೆ ಮಾದರಿಯಾಗಿತ್ತು. ಇದನ್ನೂ ಓದಿ: ಯಾರ ಹೊಟ್ಟೆಯಲ್ಲಾದ್ರೂ ಮತ್ತೊಮ್ಮೆ ಹುಟ್ಟಿ ಬಾರಪ್ಪ- ವೃದ್ಧೆ ಕಣ್ಣೀರು
ಪುನೀತ್ (Puneeth Rajkumar) ಅವರ ಮೇಲೆ ವಿಶೇಷ ಅಭಿಮಾನ ಹೊಂದಿರುವ ಜೀ ಕನ್ನಡ ವಾಹಿನಿ ಅವರ ಪುಣ್ಯ ಸ್ಮರಣೆಯಂದು ಸಿನಿಮಾ ಮತ್ತು ಧಾರಾವಾಹಿಗಳ ಚಿತ್ರೀಕರಣಗಳಿಗೆಂದೇ ಹೆಸರುವಾಸಿಯಾಗಿರುವ ಅಬ್ಬಯ್ಯ ನಾಯ್ಡು ಸ್ಟುಡಿಯೋ ನಲ್ಲಿ ಪುತ್ಥಳಿಯೊಂದನ್ನು (statue) ಅನಾವರಣಗೊಳಿಸುತ್ತಿದೆ. ಈ ಮೂಲಕ ಹೆಜ್ಜೆ ಹಾಕಿದ ಸ್ಥಳವನ್ನು ನೆನಪುಗಳಿಂದ ಪುಣ್ಯ ಭೂಮಿಯಾಗಿಸುವ ಆಶಯ ಇದಾಗಿದೆ. ಈ ಮೂಲಕ ಮುಂದಿನ ಪೀಳಿಗೆಯ ಪ್ರತಿಭೆಗಳಿಗೆ ಅಪ್ಪು ಅವರ ಆಶೀರ್ವಾದ ಸಿಗಲಿದೆ ಎನ್ನುತ್ತದೆ ಜೀ ವಾಹಿನಿ.
ತನ್ನ ಇಡೀ ಬದುಕನ್ನು ಸಿನಿಮಾಗೆಂದೇ ಮೀಸಲಿಟ್ಟಿದ್ದ ಅಪ್ಪು ಅವರ ವಿಶೇಷ ಪುತ್ಥಳಿ ಹಿರಿತೆರೆ ಮತ್ತು ಕಿರುತೆರೆಗೆ ಜೊತೆಗೆ ಅಪರೂಪದ ಸಂಬಂಧ ಹೊಂದಿರುವಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ಅನಾವರಣಗೊಳಿಸುತ್ತಿರುವ ಜೀ ಕನ್ನಡ ವಾಹಿನಿಯ ಕಾರ್ಯಕ್ಕೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮತ್ತೊಂದು ವಿಶೇಷವೆಂದರೆ , ಅಬ್ಬಯ್ಯ ನಾಯ್ಡು ಸ್ಟುಡಿಯೋ ಜೀ ಕನ್ನಡ ವಾಹಿನಿ ಕಾರ್ಯಕ್ರಮಗಳ ಭಾಗವಾಗಿದೆ. ಈ ಒಂದು ಅಭಿಮಾನದ ಅಪರೂಪದ ಕಾರ್ಯಕ್ಕೆ ಅಪ್ಪು ಅವರ ಅಭಿಮಾನಿಗಳೆಲ್ಲರೂ ಭಾಗಿಯಾಗಬೇಕೆಂದು ವಾಹಿನಿ ಈ ಮೂಲಕ ವಿನಯಪೂರ್ವಕವಾಗಿ ಮನವಿ ಮಾಡಿಕೊಳ್ಳುತ್ತಿದೆ.ಅಷ್ಟೇ ಅಲ್ಲದೆ ವಾಹಿನಿ ಇಡೀ ದಿನವನ್ನು ಅಪ್ಪು ಅವರಿಗೆ ಅರ್ಪಿಸಿ ವಿಶೇಷ ಕಾರ್ಯಕ್ರಮಗಳನ್ನು ಪ್ರಸಾರಮಾಡುತ್ತಿದೆ.
Live Tv
[brid partner=56869869 player=32851 video=960834 autoplay=true]