Tag: puttur

  • ಪುತ್ತೂರಿಗೆ ಮೆಡಿಕಲ್ ಕಾಲೇಜು: ಬಜೆಟ್‌ನಲ್ಲಿ ವೈದ್ಯಕೀಯ, ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕ ಕೊಡುಗೆಗಳೇನು?

    ಪುತ್ತೂರಿಗೆ ಮೆಡಿಕಲ್ ಕಾಲೇಜು: ಬಜೆಟ್‌ನಲ್ಲಿ ವೈದ್ಯಕೀಯ, ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕ ಕೊಡುಗೆಗಳೇನು?

    ಬೆಂಗಳೂರು: ದಾಖಲೆಯ ಬಜೆಟ್ ಮಂಡಿಸಿದ 16 ನೇ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಶಿಕ್ಷಣ ಹಾಗೂ ವೈದ್ಯಕೀಯ ಕ್ಷೇತ್ರಕ್ಕೆ ಅನೇಕ ಕೊಡುಗೆಯನ್ನು ನೀಡಿದ್ದಾರೆ. ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪನೆ ಹಾಗೂ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಕ್ರಮವಹಿಸಲಾಗುವುದು. ಚಿತ್ರದುರ್ಗದ ಮೊಳಕಾಲ್ಮೂರಿನಲ್ಲಿ 200 ಹಾಗೂ ಕೊಡಗಿಗೆ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು ಸ್ಥಾಪನೆ ಬಗ್ಗೆ ಘೋಷಿಸಿದ್ದಾರೆ.

    ವೈದ್ಯಕ್ಷೀಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಏನೆಲ್ಲಾ ಸಿಕ್ಕಿವೆ?
    ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ 200 ಹಾಸಿಗೆ ಹಾಗೂ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು. ಮೈಸೂರು ಜಿಲ್ಲೆಯ ತಗಡೂರು ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ. ಇದನ್ನೂ ಓದಿ: ಚಿತ್ರರಂಗ ಕೇಳಿದ್ದೆಲ್ಲಾ ಸಿಎಂ ಕೊಡುತ್ತಲೇ ಬಂದಿದ್ದಾರೆ: ನರಸಿಂಹಲು

    ಹೆಚ್ಚಿನ ದುರಸ್ತಿ ಅಗತ್ಯವಿರುವ ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳನ್ನು 183 ಕೋಟಿ ರೂ. ವೆಚ್ಚದಲ್ಲಿ ಹಂತ ಹಂತವಾಗಿ ದುರಸ್ತಿಗೊಳಿಸಲಾಗುವುದು. ಕಲ್ಯಾಣ ಕರ್ನಾಟಕ ಸಂಪೂರ್ಣ ಆರೋಗ್ಯ ಅಭಿವೃದ್ಧಿ ಯೋಜನೆಯಡಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಸೂಚ್ಯಂಕವನ್ನು ವೃದ್ಧಿಸಲು ಒಟ್ಟು 873 ಕೋಟಿ ರೂ. ವೆಚ್ಚದಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ವಿವಿಧ ಕಾರ್ಯಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು. ಇದನ್ನೂ ಓದಿ: ಹಾಲಿನ ದರ 5 ರೂ. ಹೆಚ್ಚಳಕ್ಕೆ ಚಿಂತನೆ: ಭೀಮಾನಾಯ್ಕ್

    ಶಿಕ್ಷಣ ಕ್ಷೇತ್ರ:
    ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಿದೆ. ಏಷಿಯನ್ ಡೆವಲಪ್‌ಮೆಂಟ್ ಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು. ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ, ಬಾಳೆಹಣ್ಣನ್ನು ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ. ಇದನ್ನೂ ಓದಿ: ಮೈಸೂರಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣಕ್ಕೆ 500 ಕೋಟಿ ಮೀಸಲು – ತವರು ಜಿಲ್ಲೆಗೆ ಸಿಎಂ ಭರ್ಜರಿ ಗಿಫ್ಟ್

    ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ 2,000 ರೂ. ಹೆಚ್ಚಿಸಲಾಗುವುದು. ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1,000 ರೂ. ಹೆಚ್ಚಿಸಲಾಗುವುದು. ಇದನ್ನೂ ಓದಿ: ಸರ್ಕಾರಿ ಗುತ್ತಿಗೆ, ಖರೀದಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ – ಇದು ಹಣಕಾಸು ತಜ್ಞರ ಒಡೆದಾಳುವ ಆರ್ಥಿಕತೆ: ಸುನಿಲ್‌ ಕುಮಾರ್‌ ಕಿಡಿ

    ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಖಾಲಿಯಿರುವ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು. ರಾಜ್ಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಸಂಸ್ಥೆಗಳು ಹಾಗೂ ಪದವಿ ಕಾಲೇಜುಗಳಿಗೆ ಒಟ್ಟಾರೆ 275 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು. ಇದನ್ನೂ ಓದಿ: ಪತ್ರಕರ್ತರಿಗೆ ‘ಮಾಧ್ಯಮ ಸಂಜೀವಿನಿ’ ಯೋಜನೆ – 5 ಲಕ್ಷ ರೂ. ನಗದು ರಹಿತ ಚಿಕಿತ್ಸೆ

    ಹೊಸದಾಗಿ ಪ್ರಾರಂಭಿಸಲಾದ ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಿಗೆ 10 ಕೋಟಿ ರೂ. ವೆಚ್ಚದಲ್ಲಿ ಪೀಠೋಪಕರಣಗಳು, ಉಪಕರಣಗಳು, ಕಂಪ್ಯೂಟರ್‌ಗಳು ಹಾಗೂ ಪುಸ್ತಕಗಳನ್ನು ಒದಗಿಸಲಾಗುವುದು. ಕೆಕೆಆರ್‌ಡಿಬಿ ವತಿಯಿಂದ 23,000 ವಿದ್ಯಾರ್ಥಿಗಳಿಗೆ ವಿಶೇಷ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು. ಪ್ರೊ. ನಂಜುಂಡ ಸ್ವಾಮಿ ಸಂಶೋಧನಾ ಪೀಠವನ್ನು ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾರಂಭಿಸಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಿದ್ದಾರೆ.

  • ಬೆಂಗಳೂರು| ನೇಣು ಬಿಗಿದುಕೊಂಡು ನವವಿವಾಹಿತೆ ಆತ್ಮಹತ್ಯೆ

    ಬೆಂಗಳೂರು| ನೇಣು ಬಿಗಿದುಕೊಂಡು ನವವಿವಾಹಿತೆ ಆತ್ಮಹತ್ಯೆ

    ಬೆಂಗಳೂರು/ಮಂಗಳೂರು: ನವವಿವಾಹಿತ ಮಹಿಳೆ (Newly Married Woman) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ (Bengaluru) ಜಾಲಹಳ್ಳಿಯಲ್ಲಿ ನಡೆದಿದೆ.

    ಪೂಜಾಶ್ರೀ (23) ನೇಣಿಗೆ ಶರಣಾದ ಮಹಿಳೆ. ಪೂಜಾಶ್ರೀ ಪುತ್ತೂರಿನ (Puttur) ಕಾಣಿಯೂರು (Kaniyur) ಗ್ರಾಮದ ಬಾಕಿಮಾರು ನಿವಾಸಿಯಾಗಿದ್ದು, ಬೆಳ್ತಂಗಡಿಯ ಪಡಂಗಡಿ ಬರಾಯ ನಿವಾಸಿ ಪ್ರಕಾಶ್ ಎಂಬವರನ್ನು 10 ತಿಂಗಳ ಹಿಂದೆ ವಿವಾಹವಾಗಿದ್ದರು. ಕೆಲಸ ಅರಸುವ ಸಲುವಾಗಿ ಕಳೆದ ಎರಡು ತಿಂಗಳ ಹಿಂದೆ ಪೂಜಾಶ್ರೀಯನ್ನು ಪತಿ ಪ್ರಕಾಶ್ ಬೆಂಗಳೂರಿನಲ್ಲಿರೋ ತನ್ನ ಸಂಬಂಧಿಕರ ಮನೆಗೆ ಕಳುಹಿಸಿಕೊಟ್ಟಿದ್ದರು. ಇದನ್ನೂ ಓದಿ: ಕಾನೂನು ಸುವ್ಯವಸ್ಥೆ ಹಾಳಾಗಿಲ್ಲ, ಆರ್ಥಿಕ ಶಿಸ್ತು ಉತ್ತಮ – ಸರ್ಕಾರಕ್ಕೆ ರಾಜ್ಯಪಾಲರಿಂದ ಬಹುಪರಾಕ್

    ಸಂಬಂಧಿಕರ ಮನೆಯಲ್ಲೇ ಇದ್ದ ಪೂಜಾಶ್ರೀ ಅಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೂಜಾಶ್ರೀ ಆತ್ಮಹತ್ಯೆ ಬಗ್ಗೆ ಆಕೆಯ ಹೆತ್ತವರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಬೆಂಗಳೂರಿನ ಜಾಲಹಳ್ಳಿ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪುಟಿನ್‌ಗಿಂತ ಅಕ್ರಮ ವಲಸೆಯೇ ಬಹುದೊಡ್ಡ ಸಮಸ್ಯೆ: ಡೊನಾಲ್ಡ್ ಟ್ರಂಪ್

  • ಪುತ್ತೂರು: ಕ್ರಿಕೆಟ್ ಆಡುತ್ತಿದ್ದಾಗ ಜಾರಿ ಬಿದ್ದ ಕಾಂಗ್ರೆಸ್ ಶಾಸಕ

    ಪುತ್ತೂರು: ಕ್ರಿಕೆಟ್ ಆಡುತ್ತಿದ್ದಾಗ ಜಾರಿ ಬಿದ್ದ ಕಾಂಗ್ರೆಸ್ ಶಾಸಕ

    ಮಂಗಳೂರು: ಕ್ರಿಕೆಟ್ ಆಡುತ್ತಿದ್ದಾಗ ಪುತ್ತೂರು (Puttur) ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ (Ashok Kumar Rai) ಜಾರಿ ಬಿದ್ದಿರುವ ಘಟನೆ ನಡೆದಿದೆ.

    ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದ ವೇಳೆ ಈ ಘಟನೆ ನಡೆದಿದೆ. ಬಂಟರ ಸಂಘದ ವತಿಯಿಂದ ಕ್ರೀಡಾಕೂಟ ಆಯೋಜಿಸಲಾಗಿತ್ತು.

    ಕ್ರೀಡಾಕೂಟದಲ್ಲಿ ಶಾಸಕ ಅಶೋಕ್ ಕುಮಾರ್ ಅವರು ಭಾಗಿಯಾಗಿದ್ದರು. ಆಟವಾಡುತ್ತಿದ್ದಾಗ ಕ್ರೀಸ್ ಮುಟ್ಟಲು ಓಡುತ್ತಿದ್ದ ವೇಳೆ ಜಾರಿ ಬಿದ್ದಿದ್ದಾರೆ.

    ಬಿದ್ದ ಶಾಸಕರನ್ನು ಸಹ ಆಟಗಾರರು ಮೇಲೆತ್ತಿದ್ದಾರೆ.

  • ಪುತ್ತೂರು| ನಿದ್ದೆ ಮಂಪರಿನಲ್ಲಿ ಕಂದಕಕ್ಕೆ ಬಿದ್ದ ಕಾರು – ಮೂವರು ಸ್ಥಳದಲ್ಲೇ ಸಾವು

    ಪುತ್ತೂರು| ನಿದ್ದೆ ಮಂಪರಿನಲ್ಲಿ ಕಂದಕಕ್ಕೆ ಬಿದ್ದ ಕಾರು – ಮೂವರು ಸ್ಥಳದಲ್ಲೇ ಸಾವು

    ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಬಿದ್ದು ಮೂವರು ಸ್ಥಳದಲ್ಲೇ ದಾರುಣ ಸಾವಿಗೀಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

    ಪುತ್ತೂರಿನ ಪರ್ಲಡ್ಕದ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದು ತಂದೆ, ಮಗ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಸುಳ್ಯದಿಂದ ಪುತ್ತೂರಿಗೆ ಕಾರಿನಲ್ಲಿ ಆಗಮಿಸುತ್ತಿದ್ದ ವೇಳೆ ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ್ ಹಾಗೂ ಅವರ ಮಗ ಚಿದಾನಂದ್, ಪಕ್ಕದ ಮನೆಯ ರಮೇಶ್ ನಾಯ್ಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಲವ್ ಪ್ರಪೋಸ್ ನಿರಾಕರಿಸಿದ್ದಕ್ಕೆ ಪುತ್ತೂರಿನಲ್ಲಿ ಅನ್ಯಕೋಮಿನ ವಿದ್ಯಾರ್ಥಿನಿಗೆ ಅಪ್ರಾಪ್ತನಿಂದ ಚಾಕು ಇರಿತ

    ಲವ್ ಪ್ರಪೋಸ್ ನಿರಾಕರಿಸಿದ್ದಕ್ಕೆ ಪುತ್ತೂರಿನಲ್ಲಿ ಅನ್ಯಕೋಮಿನ ವಿದ್ಯಾರ್ಥಿನಿಗೆ ಅಪ್ರಾಪ್ತನಿಂದ ಚಾಕು ಇರಿತ

    ಮಂಗಳೂರು: ಪ್ರೇಮ ನಿವೇದನೆ (Love Proposal) ನಿರಾಕರಣೆ ಹಿನ್ನೆಲೆ ಅನ್ಯಕೋಮಿನ ಅಪ್ರಾಪ್ತೆ ವಿದ್ಯಾರ್ಥಿನಿ (Student) ಕೈಗೆ ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚಾಕುವಿನಿಂದ (Stab) ಇರಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು (Puttur) ತಾಲೂಕಿನಲ್ಲಿ ನಡೆದಿದೆ.

    ಹಿಂದೂ ವಿದ್ಯಾರ್ಥಿ ಚಾಕುವಿನಿಂದ ವಿದ್ಯಾರ್ಥಿನಿಯ ಕೈಗೆ ಇರಿದಿದ್ದಾನೆ ಎಂದು ಆರೋಪಿಸಲಾಗಿದೆ. ಸದ್ಯ ಆರೋಪಿ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಕೂಡ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿನಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಮಂತ್ರಾಲಯದಲ್ಲಿ ರಾಯರ 353ನೇ ಆರಾಧನಾ ಮಹೋತ್ಸವ – ಎಲ್ಲೆಡೆ ಪೂರ್ವಾರಾಧನೆ ಸಂಭ್ರಮ

    ಬುಕ್‌ಸ್ಟಾಲ್‌ನಿಂದ ವಾಪಸ್ ಆಗುತ್ತಿದ್ದ ವಿದ್ಯಾರ್ಥಿನಿಯನ್ನು ಹಿಂಬಾಲಿಸಿಕೊಂಡು ಬಂದ ವಿದ್ಯಾರ್ಥಿ, ನಿನ್ನನ್ನು ಪ್ರೀತಿಸುವುದಾಗಿ ಹೇಳಿದ್ದಾನೆ. ಈ ವೇಳೆ ವಿದ್ಯಾರ್ಥಿನಿ ಅದನ್ನು ನಿರಾಕರಿಸಿದ್ದಾಳೆ. ಆಗ ಆತ ಕೈಗೆ ಚಾಕುವಿನಿಂದ ಇರಿದಿರುವುದಾಗಿ ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಇಷ್ಟು ಮಾತ್ರವಲ್ಲದೇ ಆಸ್ಪತ್ರೆಯಲ್ಲಿ ಹೆಸರು ಬದಲಾಯಿಸಿ ಹೇಳುವಂತೆ ಶಿಕ್ಷಕಿ ಒತ್ತಡ ಹೇರಿದ್ದರು. ಕೈಗೆ ಗಾಜು ತಾಗಿ ಗಾಯವಾಗಿದೆ ಎಂದು ಹೇಳಲು ಒತ್ತಾಯಿಸಿದ್ದಾರೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ.  ಇದನ್ನೂ ಓದಿ: ವೈದ್ಯಕೀಯ ವೃತ್ತಿಪರರ ರಕ್ಷಣೆಗೆ ಟಾಸ್ಕ್ ಫೋರ್ಸ್ ರಚಿಸಿದ ಸುಪ್ರೀಂ ಕೋರ್ಟ್

    ಘಟನೆ ಹಿನ್ನೆಲೆ ಆಸ್ಪತ್ರೆಯ ಮುಂದೆ ಜನ ಸೇರಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸದ್ಯ ಆಸ್ಪತ್ರೆ ಬಳಿ ಜಮಾಯಿಸಿದ್ದ ಜನರನ್ನು ಪೋಲೀಸರು ಆಸ್ಪತ್ರೆಯಿಂದ ಹೊರಗೆ ಕಳುಹಿಸಿದ್ದಾರೆ. ಕೈಗೆ ಗಾಜು ತಾಗಿದೆ ಎಂದು ಕಾಲೇಜು ಪ್ರಾಂಶುಪಾಲರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿರುವುದಾಗಿ ಆರೋಪಿಸಲಾಗಿದೆ. ಈ ಕುರಿತು ಪುತ್ತೂರು ನಗರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಸರ್ಕಾರಿ ಶಾಲೆಯಿಂದ ಹಾಲಿನ ಪುಡಿ ಮನೆಗೆ – ಮೈಸೂರಿನಲ್ಲಿ ಸಿಕ್ಕಿಬಿದ್ದ ಮುಖ್ಯ ಶಿಕ್ಷಕ

  • ಪುತ್ತೂರಿನಲ್ಲಿ ಬೋರ್‌ವೆಲ್ ಕೊರೆಯುತ್ತಿದ್ದ ಲಾರಿ ಮೇಲೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ

    ಪುತ್ತೂರಿನಲ್ಲಿ ಬೋರ್‌ವೆಲ್ ಕೊರೆಯುತ್ತಿದ್ದ ಲಾರಿ ಮೇಲೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ

    – ಸಣ್ಣ ಸಣ್ಣ ಮಕ್ಕಳು ಕೂಡ ಕಲ್ಲು ತೂರಾಟದಲ್ಲಿ ಭಾಗಿ

    ಮಂಗಳೂರು: ಬೋರ್‌ವೆಲ್ (Borewell) ಕೊರೆಯುತ್ತಿದ್ದ ಲಾರಿ (Lorry) ಮೇಲೆ ಅನ್ಯಕೋಮಿನ ಯುವಕರು ಕಲ್ಲು ತೂರಿದ (Stone Pelting) ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು (Puttur) ತಾಲೂಕಿನ ಪುರುಷರಕಟ್ಟೆ ಬಳಿ ನಡೆದಿದೆ.

    ನೀರಿನ ಫ್ಯಾಕ್ಟರಿಗೆ ಸೇರಿದ ಬೋರ್‌ವೆಲ್‌ಗಳನ್ನು ಫ್ಲಶ್ ಮಾಡುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ನೀರಿನ ಘಟಕದ ಬೋರ್‌ವೆಲ್‌ಗಳನ್ನು ಫ್ಲಶ್ ಮಾಡುವ ಬದಲು ಹೊಸದಾಗಿ ಬೋರ್‌ವೆಲ್ ಕೊರೆಸಲಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಇದನ್ನೂ ಓದಿ: ಈ ಬಾರಿ ಶಾಲಾ ಪಠ್ಯ ಪರಿಷ್ಕರಣೆ ಇಲ್ಲ: ಮಧು ಬಂಗಾರಪ್ಪ ಸ್ಪಷ್ಟನೆ

    ಸಣ್ಣ ಸಣ್ಣ ಮಕ್ಕಳು ಕೂಡ ಕಲ್ಲು ತೂರಾಟದಲ್ಲಿ ಭಾಗಿಯಾಗಿದ್ದಾರೆ. ಇದಕ್ಕೆ ಪ್ರತಿಯಾಗಿ ನೀರಿನ ಘಟಕದವರು ಕೂಡ ಕಲ್ಲು ತೂರಾಟ ಮಾಡಿದ್ದಾರೆ. ಪುತ್ತೂರು ಠಾಣೆಯಲ್ಲಿ ಪರಸ್ಪರ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. ಇದನ್ನೂ ಓದಿ: ಹೆರಿಗೆಗೂ ಮುನ್ನ ಲಿಂಗಪರೀಕ್ಷೆ- ಗರ್ಭಪಾತವಾಗಿ ಮಹಿಳೆ ಸಾವು

  • ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 7 ಮಂದಿಗೆ ಗಾಯ

    ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 7 ಮಂದಿಗೆ ಗಾಯ

    ಮಂಗಳೂರು: ನಿರ್ಮಾಣ ಹಂತದಲ್ಲಿದ್ದ ಸೇತುವೆಯೊಂದು ಕುಸಿದು ಬಿದ್ದು (Bridge Collapse) 7 ಮಂದಿಗೆ ಗಾಯಗಳಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದಲ್ಲಿ ನಡೆದಿದೆ.

    ಪುಣಚ ಗ್ರಾಮದ ಬರೆಂಜ-ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ಈ ಅವಘಡ ಸಂಭವಿಸಿದೆ. ಸೇತುವೆಯ ಕೊನೆಯ ಹಂತದ ಕಾರ್ಯವಾಗಿ ಕಾಂಕ್ರಿಟ್ ಮಿಕ್ಸ್ ಹಾಕುತ್ತಿದ್ದಾಗ ತಳಭಾಗದ ರಾಡ್ ಜಾರಿ ಮೇಲ್ಭಾಗದ ಸಂಪೂರ್ಣ ಕಾಂಕ್ರಿಟ್ ಸ್ಲ್ಯಾಬ್ ಕುಸಿತಗೊಂಡಿದೆ.

    ಸೇತುವೆ ಸಾಮಾಗ್ರಿಯ ಮಧ್ಯೆ ಓರ್ವ ಕಾರ್ಮಿಕ ಸಿಲುಕಿ ಗಂಭೀರ ಗಾಯಗೊಂಡಿದ್ದಾರೆ. ಉಳಿದ ಆರು ಮಂದಿಯನ್ನು ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ (Puttur Government Hospital) ಕರೆದೊಯ್ದು ಚಿಕಿತ್ಸೆ ನಿಡಲಾಗುತ್ತಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದಿನ 3 ದಿನ ಒಣಹವೆ – ಏ.18 ರಿಂದ ವಿವಿಧೆಡೆ ಮಳೆ

  • ಅಪ್ರಾಪ್ತೆಗೆ ಕಿರುಕುಳ; ಅನ್ಯಕೋಮಿನ ಯುವಕ ಅರೆಸ್ಟ್ – ಹಿಂದೂ ಕಾರ್ಯಕರ್ತರಿಂದ ಪೊಲೀಸ್ ಠಾಣೆಗೆ ಮುತ್ತಿಗೆ

    ಅಪ್ರಾಪ್ತೆಗೆ ಕಿರುಕುಳ; ಅನ್ಯಕೋಮಿನ ಯುವಕ ಅರೆಸ್ಟ್ – ಹಿಂದೂ ಕಾರ್ಯಕರ್ತರಿಂದ ಪೊಲೀಸ್ ಠಾಣೆಗೆ ಮುತ್ತಿಗೆ

    ಮಂಗಳೂರು: ಅಪ್ರಾಪ್ತೆಗೆ ಕಿರುಕುಳ (Harrasment) ನೀಡುತ್ತಿದ್ದ ಆರೋಪದ ಮೇಲೆ ಅನ್ಯಕೋಮಿನ ಯುವಕನನ್ನು (Youth) ಪೊಲೀಸರು (Police) ಬಂಧಿಸಿರುವ ಘಟನೆ ಪುತ್ತೂರಿನಲ್ಲಿ  (Puttur) ನಡೆದಿದೆ.

    ಕಡಬ (Kadaba) ಮೂಲದ ಶಾಕೀರ್ ಕಿರುಕುಳ ನೀಡಿದ ಆರೋಪಿ. ಯುವಕನ ವರ್ತನೆಯಿಂದ ಆಕ್ರೋಶಗೊಂಡ ಹಿಂದೂ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ. ಯುವಕನನ್ನು ತಮಗೆ ಒಪ್ಪಿಸುವಂತೆ ಪುತ್ತೂರು ತಾಲೂಕಿನ ನಗರ ಪೊಲೀಸ್ ಠಾಣೆಗೆ ಮುತ್ತಿಗೆಹಾಕಲು ಯತ್ನಿಸಿದ್ದಾರೆ. ಇದನ್ನೂ ಓದಿ: ರಾತ್ರೋರಾತ್ರಿ ಹನುಮ ಧ್ವಜ ತೆರವಿಗೆ ಅಧಿಕಾರಿಗಳ ಎಂಟ್ರಿ – ರೊಚ್ಚಿಗೆದ್ದ ಗ್ರಾಮಸ್ಥರು

    ಪುತ್ತೂರಿನಲ್ಲಿ ನಡೆಯುತ್ತಿದ್ದ ಕಂಬಳ ವೀಕ್ಷಿಸಲು ತೆರಳುತ್ತಿದ ವೇಳೆ ಕಿರುಕುಳ ನೀಡಿದ್ದಾನೆ ಎಂದು ಬಾಲಕಿ ಆರೋಪಿಸಿದ್ದಾಳೆ. ಈ ಹಿನ್ನೆಲೆ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: 6,000 ಕ್ವಿಂಟಾಲ್ ಪಡಿತರ ಅಕ್ಕಿ ಕಳ್ಳತನ ಕೇಸ್ – ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರ ಅರೆಸ್ಟ್

    ಘಟನೆಯಿಂದ ಆಕ್ರೋಶಗೊಂಡ ಹಿಂದೂ ಕಾರ್ಯಕರ್ತರು ಆರೋಪಿಯನ್ನು ತಮಗೆ ಒಪ್ಪಿಸುವಂತೆ ಠಾಣೆ ಎದುರು ಜಮಾಯಿಸಿ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಸ್ಥಳಕ್ಕಾಗಮಿಸಿದ ಹಿಂದೂ ಮುಖಂಡ ಅರುಣ್ ಪುತ್ತಿಲ ಯುವಕರನ್ನು ಸಮಾಧಾನಪಡಿಸಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿಂದು ಶೋಷಿತ ಸಮುದಾಯಗಳ ಬೃಹತ್ ಸಮಾವೇಶ – 2 ಲಕ್ಷಕ್ಕೂ ಅಧಿಕ ಜನ ಭಾಗಿ ನಿರೀಕ್ಷೆ

    ಸದ್ಯ ಆರೋಪಿ ಶಾರೀಕ್‌ನನ್ನು ಬಂಧಿಸಿರುವ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ನಂತರ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ ಠಾಣೆ ಮುಂದೆ ಸೇರಿದ ಗುಂಪನ್ನು ಚದುರಿಸಿ ಕಳುಹಿಸಿದ್ದಾರೆ. ಇದನ್ನೂ ಓದಿ: ನಿಶ್ಚಿತಾರ್ಥ ಆಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

  • ರನ್ನಿಂಗ್ ರೇಸ್‌ನಲ್ಲಿ ಬಹುಮಾನ ಸಿಗದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

    ರನ್ನಿಂಗ್ ರೇಸ್‌ನಲ್ಲಿ ಬಹುಮಾನ ಸಿಗದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

    ಮಂಗಳೂರು: ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ (National Level Sports Event) ಬಹುಮಾನ (Prize) ಸಿಗದ ವಿಚಾರಕ್ಕೆ ಖಿನ್ನತೆಗೊಳಗಾದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿ (Student) ಕೀಟನಾಶಕ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಸಂಪ್ಯದಲ್ಲಿ (Sampya) ನಡೆದಿದೆ.

    ನಿಶಾ (17) ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಕಳೆದ ಒಂದು ವಾರದ ಹಿಂದೆ ವಿಷ ಸೇವಿಸಿದ್ದಳು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಶಕುಂತಲೆ ಪ್ರೇಮ ಬಯಸಿ ಹೊರಟ ʻದುಷ್ಯಂತʼನ ಬದಕು ಕೊಲೆಯಲ್ಲಿ ಅಂತ್ಯ – ಡೇಟಿಂಗ್‌ ಆ್ಯಪ್‌ ಪ್ರಿಯತಮೆಗೆ ಜೀವಾವಧಿ ಶಿಕ್ಷೆ

    ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ (Bihar) ರಾಷ್ಟ್ರಮಟ್ಟದ ಕ್ರೀಡಾಕೂಟ ನಡೆದಿದ್ದು, ನಿಶಾ ರನ್ನಿಂಗ್ ರೇಸ್‌ನಲ್ಲಿ ಭಾಗವಹಿಸಿದ್ದರು. ಅದರಲ್ಲಿ ಬಹುಮಾನ ಸಿಗದಿದ್ದಕ್ಕೆ ನಿಶಾ ಬೇಸರಗೊಂಡಿದ್ದಾಳೆ. ಬಳಿಕ ಖಿನ್ನತೆಗೊಳಗಾಗಿ ತೋಟಕ್ಕೆ ಸಿಂಪಡಿಸುವ ಕೀಟನಾಶಕವನ್ನು ಸೇವಿಸಿದ್ದು, ತೀವ್ರ ವಾಂತಿ ಬಂದ ಕಾರಣಕ್ಕೆ ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿದ ವಿಚಾರ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಕಳ್ಳರಿಗೆ ಮೆಣಸಿನಕಾಯಿ ತಿನ್ನಲು ಒತ್ತಾಯಿಸಿ ಹಿಗ್ಗಾಮುಗ್ಗ ಥಳಿಸಿದ ಗ್ರಾಮಸ್ಥರು

    ವಿಚಾರ ತಿಳಿದ ಕೂಡಲೇ ಮನೆಯವರು ಆಕೆಯನ್ನು ಪುತ್ತೂರಿನ (Puttur) ಆಸ್ಪತ್ರೆಗೆ ದಾಖಲಿಸಿದ್ದರು. ಪುತ್ತೂರಿನಿಂದ ಮಂಗಳೂರಿಗೆ (Mangaluru) ಕೊಂಡೊಯ್ಯುವಂತೆ ವೈದ್ಯರು ತಿಳಿಸಿದ್ದರು. ಕಳೆದ ಒಂದುವಾರದಿಂದ ನಿಶಾ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾಳೆ. ಈ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಲಾಗಿದೆ. ಇದನ್ನೂ ಓದಿ: ಮಲಗಿದ್ದಾಗ ತಲೆಗೆ ದೊಣ್ಣೆಯಿಂದ ಹೊಡೆದು ಪತ್ನಿ ಕೊಂದ ಪತಿ

  • ಪುತ್ತೂರಿನಲ್ಲಿ ಪುತ್ತಿಲ ಪರಿವಾರ- ಹಿಂಜಾವೇ ಮುಖಂಡರ ಮಧ್ಯೆ ಸಂಘರ್ಷ

    ಪುತ್ತೂರಿನಲ್ಲಿ ಪುತ್ತಿಲ ಪರಿವಾರ- ಹಿಂಜಾವೇ ಮುಖಂಡರ ಮಧ್ಯೆ ಸಂಘರ್ಷ

    – ಪುತ್ತಿಲ ಪರಿವಾರದವನ ಮೇಲೆ ತಲವಾರ್ ದಾಳಿಗೆ ಯತ್ನ ಆರೋಪ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ (Puttur) ಪುತ್ತಿಲ ಪರಿವಾರ – ಹಿಂದೂ ಜಾಗರಣ ವೇದಿಕೆ ಮುಖಂಡರ ಮಧ್ಯೆ ಸಂಘರ್ಷ ನಡೆದಿದೆ.

    ಪುತ್ತೂರಿನ ಮುಕ್ರಂಪಾಡಿಯಲ್ಲಿರುವ ಪುತ್ತಿಲ ಪರಿವಾರ ಕಚೇರಿಗೆ ಹಿಂದೂ ಜಾಗರಣ ವೇದಿಕೆ ಮುಖಂಡರು ನುಗ್ಗಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

    ಪುತ್ತಿಲ ಪರಿವಾರದ ಮನೀಶ್ ಕುಲಾಲ್ ಮೇಲೆ ಹಿಂಜಾವೇ ದಿನೇಶ್ ಪಂಜಿಗ ತಂಡ ತಲ್ವಾರ್‍ನಲ್ಲಿ ಹಲ್ಲೆ ಮಡಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ದಿನೇಶ್ ಪಂಜಿಗ ಸೇರಿ 8 ಜನರಿದ್ದ ತಂಡದ ಮೇಲೆ ಈ ಆರೋಪ ಕೇಳಿಬಂದಿದೆ. ಸದ್ಯ ತಲ್ವಾರ್ ತೋರಿಸಿದ ದಿನೇಶ್ ಪಂಜಿಗನನ್ನ ಪುತ್ತೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಕೆಇಎ ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್‍ಪಿನ್ ಆರ್‌ಡಿ ಪಾಟೀಲ್ ಅರೆಸ್ಟ್

    ತಲ್ವಾರ್ ಕಾಳಗದ ಹಿಂದೆ ಫೇಸ್ ಬುಕ್ ನಲ್ಲಿ ಹಾಕಿದ ಒಂದು ಪೋಸ್ಟ್ ಕಾರಣ ಎಂಬ ಮಾಹಿತಿ ಸಿಕ್ಕಿದೆ. ಒಟ್ಟಿನಲ್ಲಿ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಹಿಂದೂ ಜಾಗರಣ ವೇದಿಕೆ ಹಾಗೂ ಪುತ್ತಿಲ ಪರಿವಾರದ ಕಾರ್ಯಕರ್ತರು ಪುತ್ತೂರು ಠಾಣೆ ಎದುರು ಜಮಾಯಿಸಿದರು.