Tag: puttur

  • ಪ್ರವೀಣ್ ಕುಮಾರ್ ನೆಟ್ಟಾರು ಕೊಲೆ ಪ್ರಕರಣ- ಮತ್ತೊಬ್ಬ ಆರೋಪಿಯ ಬಂಧನ

    ಪ್ರವೀಣ್ ಕುಮಾರ್ ನೆಟ್ಟಾರು ಕೊಲೆ ಪ್ರಕರಣ- ಮತ್ತೊಬ್ಬ ಆರೋಪಿಯ ಬಂಧನ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಯುವಮೋರ್ಚಾ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಂಗಳವಾರ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

    ಹತ್ಯೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್(33)ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 7 ಆರೊಪಿಗಳನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಎಸ್‌ಪಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ.

    ಏನಿದು ಪ್ರಕರಣ?
    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪ ಪರುವಾಜೆ ಕ್ರಾಸ್ ಬಳಿ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಕೋಳಿ ಮಾಂಸದಂಗಡಿ ಹೊಂದಿದ್ದ ಪ್ರವಿಣ್ ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಪ್ರವೀಣ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಗಟ್ಟಿಯಾಯ್ತು ಡಿಕೆ, ಸಿದ್ದು ಜೋಡಿ- ಪರಸ್ಪರ ಟೋಪಿ ಹಾಕಿಕೊಂಡ ನಾಯಕರು

    ಪ್ರವಿಣ್ ಅವರನ್ನು ತಕ್ಷಣವೇ ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಕುತ್ತಿಗೆಯ ಭಾಗಕ್ಕೆ ತೀವ್ರವಾಗಿ ಏಟು ಬಿದ್ದಿದ್ದರಿಂದ ಅವರು ಮೃತಪಟ್ಟಿದ್ದರು. ಈ ಘಟನೆ ನಡೆದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೆ ಬಿಜೆಪಿ ಕಾರ್ಯಕರ್ತರೇ ಸರ್ಕಾರದ ವಿರುದ್ಧ ತಿರುಗಿ ಬಿದ್ದರು. ಈ ಬೆನ್ನಲ್ಲೇ ಸರ್ಕಾರ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಿತ್ತು. ಸದ್ಯ ಈವರೆಗೆ 7 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಯಾರೂ ಯಾಕೆ ನನ್ನ ಅರ್ಥ ಮಾಡಿಕೊಳ್ಳುತ್ತಿಲ್ಲ- ನೋವನ್ನು ಅಕ್ಷರ ರೂಪಕ್ಕಿಳಿಸಿದ ಚಂದನಾ ಹೇಳಿದ್ದೇನು..?

    Live Tv
    [brid partner=56869869 player=32851 video=960834 autoplay=true]

  • 5 ಕ್ಕಿಂತ ಹೆಚ್ಚು ಜನ ನಿಲ್ಲದಂತೆ ಆದೇಶ- ನಾಳೆ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿ

    5 ಕ್ಕಿಂತ ಹೆಚ್ಚು ಜನ ನಿಲ್ಲದಂತೆ ಆದೇಶ- ನಾಳೆ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯತಾಲೂಕಿನ ಬೆಳ್ಳಾರೆಯಲ್ಲಿ ಬಿ.ಜೆ.ಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಈಗಾಗಲೇ ಮೂರು ತಾಲೂಕುಗಳನ್ನು ಬಂದ್ ಮಾಡಲಾಗಿದೆ. ಅಲ್ಲದೆ 5 ಮಂದಿಗಿಂತ ಹೆಚ್ಚು ಜನ ಒಂದೇ ಕಡೆ ಸೇರಬಾರದಂತೆ ಆದೇಶ ಹೊರಡಿಸಲಾಗಿದೆ. ಜೊತೆಗೆ ನಾಳೆ ಮಧ್ಯರಾತ್ರಿವರೆಗೆ ನಿಷೇಧಾಜ್ಷೆ ಜಾರಿಗೊಳಿಸಲಾಗಿದೆ.

    ಕೊಲೆ ಪ್ರಕರಣ ಸಂಬಂಧ ಉದ್ವಿಗ್ನ ಸ್ಥಿತಿ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಪುತ್ತೂರು ಉಪವಿಭಾಗಾಧಿಕಾರಿ ಗಿರೀಶ್ ನಂದನ್ ಹೊರಡಿಸಿದ್ದಾರೆ. ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಿದ್ದಾರೆ. ಘರ್ಷಣೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಇರಲಿದೆ. 5ಕ್ಕಿಂತ ಹೆಚ್ಚು ಜನ ಗುಂಪು ಸೇರದಂತೆ ಆದೇಶದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಮೋದಿ, ಯೋಗಿ ಮಾದರಿಯಲ್ಲಿ ಇವರಿಗೆ ಗಟ್ಸ್ ಇಲ್ಲ: ಪ್ರವೀಣ್ ಹತ್ಯೆಗೆ ಮುತಾಲಿಕ್ ಕಿಡಿ

    ಏನಿದು ಪ್ರಕರಣ?
    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು(31), ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‍ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದಾರೆ.

    ಈಗಾಗಲೇ ಪ್ರವೀಣ್ ಮೃತದೇಹವನ್ನು ಪುತ್ತೂರಿನಿಂದ ಮೆರವಣಿಗೆ ಮೂಲಕ ಅವರ ಸ್ವಗ್ರಹ ಕರೆದೊಯ್ಯಲಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನದ ಬಳಿಕ ಬಿಲ್ಲವ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ. ಇತ್ತ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

    Live Tv
    [brid partner=56869869 player=32851 video=960834 autoplay=true]

  • ಕೊಲೆಗಡುಕರ ದಸ್ತಗಿರಿ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ: ಬೊಮ್ಮಾಯಿ

    ಕೊಲೆಗಡುಕರ ದಸ್ತಗಿರಿ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ: ಬೊಮ್ಮಾಯಿ

    ಬೆಂಗಳೂರು: ರಾಜ್ಯದಲ್ಲಿ ಒಬ್ಬ ಅಮಾಯಕನ ಕೊಲೆಯಾದಾಗ ಆಕ್ರೋಶ ಇರುತ್ತೆ. ಕೇರಳ ಗಡಿ ದಾಟಿ ಕೊಲೆಗಾರರ ಹಿಡಿಯಲು ಹೋಂ ಮಿನಿಸ್ಟರ್, ಪೊಲೀಸರಿಗೆ ಸೂಚನೆ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೂ ಇಲ್ಲದಿರುವಾಗ ಕೊಲೆ ನಡೆದಿದೆ. ಹಿಂದಿನಿಂದ ಬಂದು ಕೊಲೆ ಮಾಡಿದ್ದಾರೆ. ಕೊಲೆಗಡುಕರ ದಸ್ತಗಿರಿ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಇದು ಒಂದು ವ್ಯವಸ್ಥಿತ ಸಂಚು. ಕ್ಷೋಬೆ ಉಂಟು ಮಾಡುವ ವರ್ಗದಿಂದ ಕೊಲೆ ಮಾಡಲಾಗಿದೆ. ಆ ವರ್ಗವನ್ನು ಸದೆ ಬಡಿಯುವ ಕೆಲಸ ಮಾಡ್ತೇವೆ ಎಂದು ಸಿಎಂ ಹೇಳಿದರು. ಇದನ್ನೂ ಓದಿ: ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ – ಮೂರು ತಾಲೂಕು ಬಂದ್‌ಗೆ ಕರೆ

    ಜನರಲ್ಲಿ ಆಕ್ರೋಶ ಇದೆ. ಜನರಿಗೆ ಶಾಂತಿ ಕಾಪಾಡಲು ಮನವಿ ಮಾಡಿಕೊಳ್ಳುತ್ತೇವೆ. ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಕಾರುತ್ತಿಲ್ಲ. ಆ ಘಟನೆ ನಡೆಯಬಾರದಿತ್ತು ಅಂತ ಆಕ್ರೋಶ ಅವರದ್ದು ಎಂದು ಹೇಳುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗ್ತಿರುವ ಆಕ್ರೋಶಕ್ಕೆ ಸಿಎಂ ಸ್ಪಷ್ಟನೆ ನಿಡಿದರು.

    ಏನಿದು ಪ್ರಕರಣ?: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು(31), ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‍ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜಾರ್ಖಂಡ್ ಮೂಲದ ಮೂವರು ಸೋಂಕಿತರು ಮಡಿಕೇರಿಯಿಂದ ಪರಾರಿ

    ಜಾರ್ಖಂಡ್ ಮೂಲದ ಮೂವರು ಸೋಂಕಿತರು ಮಡಿಕೇರಿಯಿಂದ ಪರಾರಿ

    – ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ಮಡಿಕೇರಿ: ಕೊಡಗಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಏರುತ್ತಿದ್ದರೆ, ಬಹುತೇಕ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗುತ್ತಿದೆ. ಮಡಿಕೇರಿಯ ರೆಡ್ಡಿ ಬಿಲ್ಡಿಂಗ್ ನಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಮಾಡುತ್ತಿದ್ದ ಜಾರ್ಖಂಡ್ ಮೂಲದ 150 ಕಾರ್ಮಿಕರ ಪೈಕಿ 57 ಕಾರ್ಮಿಕರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಈ 57 ಸೋಂಕಿತರ ಪೈಕಿ ಮೂವರು ಸೋಂಕಿತರು ಐಸೋಲೇಷನ್ ಸ್ಥಳದಿಂದ ಪರಾರಿಯಾಗಿದ್ದಾರೆ.

    24 ವರ್ಷದ ಇಬ್ಬರು ಮತ್ತು 19 ವರ್ಷದ ಒಬ್ಬ ಯುವಕ ಪರಾರಿಯಾಗಿದ್ದಾನೆ. 57 ಕಾರ್ಮಿಕರಿಗೆ ಮೊನ್ನೆಯಷ್ಟೇ ಕೋವಿಡ್ ಸೋಂಕು ದೃಢಪಟ್ಟಿತ್ತು. ಈ 57 ಸೋಂಕಿತರ ಪೈಕಿ ಮೂವರು ಸೋಂಕಿತರು ಮತ್ತು ಏಳು ಪ್ರಾಥಮಿಕ ಸಂಪರ್ಕಿತರು ತಡರಾತ್ರಿ ಐಸೋಲೇಷನ್ ಸ್ಥಳದಿಂದಲೇ ಕಾಲ್ಕಿತ್ತಿದ್ದಾರೆ. ಇದನ್ನೂ ಓದಿ: ಚೀನಾದಿಂದ ಅರುಣಾಚಲ ಪ್ರದೇಶದ ಹುಡುಗನ ಅಪಹರಣ – ಪ್ರಧಾನಿ ವಿರುದ್ಧ ರಾಗಾ ಕಿಡಿ

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಡಿಕೇರಿ ಟಿಎಚ್‍ಒ ಚೇತನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉಳಿದ ಸೋಂಕಿತರೆಲ್ಲರೂ ಅದೇ ಕಟ್ಟಡದಲ್ಲಿ ಐಸೋಲೇಷನ್ ಆಗಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದೆ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

    ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ವೆಂಕಟೇಶ್, ಸೋಂಕಿತರು ಮತ್ತು ಪ್ರಾಥಮಿಕ ಸಂಪರ್ಕಿತರನ್ನು ಸರಿಯಾಗಿ ನೋಡಿಕೊಳ್ಳುವಂತೆ ಕಟ್ಟಡದ ಮಾಲೀಕರಿಗೆ ತಿಳಿಸಲಾಗಿತ್ತು. ಆದರೆ ತಡರಾತ್ರಿ ಮೂವರು ಸೋಂಕಿತರು ಮತ್ತು ಏಳು ಪ್ರಾಥಮಿಕ ಸಂಪರ್ಕಿತರು ಪರಾರಿಯಾಗಿದ್ದಾರೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಚರಣ್‍ಜಿತ್ ಸಿಂಗ್ ಚನ್ನಿ ಅಪ್ರಾಮಾಣಿಕ ವ್ಯಕ್ತಿ: ಅರವಿಂದ್ ಕೇಜ್ರಿವಾಲ್

    ಪರಾರಿಯಾಗಿರುವ ಸೋಂಕಿತರು ಮತ್ತು ಸೋಂಕಿತರನ್ನು ಸರಿಯಾಗಿ ರಕ್ಷಣೆ ಮಾಡದ ಕಟ್ಟಡ ಮಾಲೀಕನ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲಾಗುವುದು. ಪೊಲೀಸರು ಸೋಂಕಿತರು ಮತ್ತು ಪ್ರಾಥಮಿಕ ಸೋಂಕಿತರನ್ನು ಪತ್ತೆಹಚ್ಚಲಿದ್ದಾರೆ ಎಂದಿದ್ದಾರೆ. ಪರಾರಿಯಾಗಿರುವ ಸೋಂಕಿತರಲ್ಲಿ ಒಬ್ಬ ಪುತ್ತೂರಿನಲ್ಲಿರುವ ಮಾಹಿತಿ ದೊರೆತ್ತಿದ್ದು, ಉಳಿದವರ ಸುಳಿವು ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ.

  • ಹೊಸ ಬಟ್ಟೆ ಧರಿಸಿ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು!

    ಹೊಸ ಬಟ್ಟೆ ಧರಿಸಿ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು!

    ಮಂಗಳೂರು: ಹೊಸ ಬಟ್ಟೆ ಧರಿಸಿ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

    ಮೃತರನ್ನು ಸುಬ್ರಹ್ಮಣ್ಯ ಭಟ್ (84) ಹಾಗೂ ಶಾರದಾ (76) ಎಂದು ಗುರುತಿಸಲಾಗಿದೆ. ಈ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಪಾದಕರಿಯ ಎಂಬಲ್ಲಿ ನಡೆದಿದೆ.

    ವೃದ್ಧರು ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣವೇನು ಎಂದು ತಿಳಿದುಬಂದಿಲ್ಲ. ಆದರೆ ಇಬ್ಬರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಹೊಸ ಬಟ್ಟೆಯನ್ನು ಧರಿಸಿದ್ದಾರೆ. ದಂಪತಿ ಈ ರೀತಿ ಹೊಸ ಬಟ್ಟೆ ಧರಿಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪ್ರವಾಹದ ನಡುವೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ- ಪಾತ್ರೆಯಲ್ಲಿ ಕುಳಿತು ಮಂಟಪಕ್ಕೆ ತೆರಳಿದ್ರು!

  • ವೈದ್ಯರ ಬಳಿ ತೆರಳ್ತಿದ್ದ ತಾಯಿ, ಮಗು ಬಸ್ಸಿನಡಿ ಸಿಲುಕಿ ದುರ್ಮರಣ

    ವೈದ್ಯರ ಬಳಿ ತೆರಳ್ತಿದ್ದ ತಾಯಿ, ಮಗು ಬಸ್ಸಿನಡಿ ಸಿಲುಕಿ ದುರ್ಮರಣ

    ಮಂಗಳೂರು: ಬಸ್ಸಿನಡಿ ಬಿದ್ದು ತಾಯಿ, ಮಗು ದುರ್ಮರಣಕ್ಕೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲುಖಿನ ಉಪ್ಪಿನಂಗಡಿ ಬಳಿ ನಡೆದಿದೆ.

    ಮೃತರನ್ನು ದುರ್ದೈವಿಗಳನ್ನು ಶಾಹಿದಾ (25) ಹಾಗೂ ಆಕೆಯ 1 ವರ್ಷದ ಪುತ್ರ ಶಾಹೀಲ್ ಎಂದು ಗುರುತಿಸಲಾಗಿದೆ. KSRTC ಬಸ್ಸೊಂದು ಅತೀ ವೇಗವಾಗಿ ಬಸ್ ನಿಲ್ದಾಣಕ್ಕೆ ಬಂದಿದೆ. ಈ ವೇಳೆ ಶಾಹಿದಾ ಹಾಗೂ ಆಕೆಯ ಪುತ್ರ ಬಸ್ಸಿನ ಚಕ್ರದಡಿ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

    ಬೆಳ್ತಂಗಡಿ ತಾಲೂಕಿನ ಶಿರ್ಲಾಲು ನಿವಾಸಿಯಾಗಿರುವ ಶಾಹಿದಾ, ಗೇರುಕಟ್ಟೆಯಲ್ಲಿರುವ ತನ್ನ ತಾಯಿ ಮನೆಗೆ ಬಂದಿದ್ದರು. ಇಂದು ಬೆಳಗ್ಗೆ ತನ್ನ ಮಗನೊಂದಿಗೆ ಪುತ್ತೂರಿನಲ್ಲಿರುವ ವೈದ್ಯರ ಬಳಿ ತೆರಳುತ್ತಿದ್ದರು. ಹೀಗಾಗಿ ಬಸ್ ನಿಲ್ದಾಣಕ್ಕೆ ಬಂದಿದ್ದ ಸಂದರ್ಭದಲ್ಲಿ ಶಾಹಿದಾ ಹಾಗೂ ಆಕೆಯ ಪುತ್ರನ ತಲೆ ಮೇಲೆ ಬಸ್ ಹರಿದಿದ್ದರಿಂದ ಇಬ್ಬರ ದಾರುಣ ಸಾವಾಗಿದೆ. ಇದನ್ನೂ ಓದಿ: ಮಕ್ಕಳಿಗೆ ಲಸಿಕೆ ಭಾಗ್ಯ- 2 ರಿಂದ 18 ವರ್ಷದವರಿಗೆ ಕೋವ್ಯಾಕ್ಸಿನ್ ನೀಡಲು ಅನುಮತಿ

    ಘಟನೆ ಸಂಬಂಧ ಉಪ್ಪಿನಗಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ದಕ್ಷಿಣ ಕನ್ನಡದ ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್‍ಡಿಪಿಐ ಕಾರ್ಯಕರ್ತರಿಂದ ತಡೆ: ಪ್ರಕರಣ ದಾಖಲು

    ದಕ್ಷಿಣ ಕನ್ನಡದ ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್‍ಡಿಪಿಐ ಕಾರ್ಯಕರ್ತರಿಂದ ತಡೆ: ಪ್ರಕರಣ ದಾಖಲು

    ಮಂಗಳೂರು: ಇಂದು ಪ್ರತಿ ಗ್ರಾಮ ಪಂಚಾಯತ್ ಸೇರಿದಂತೆ ದೇಶದೆಲ್ಲೆಡೆ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಬಕ ಗ್ರಾಮ ಪಂಚಾಯತ್ ನಲ್ಲಿಯೂ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಗುತಿತ್ತು. ಆದರೆ ಈ ಸಂದರ್ಭ ಎಸ್‍ಡಿಪಿಐ ಕಾರ್ಯಕರ್ತರು ಸ್ವಾತಂತ್ರ್ಯ ರಥಕ್ಕೆ ತಡೆಯೊಡ್ಡಿ ಕಿರಿಕ್ ಮಾಡಿದ್ದಾರೆ.

    ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಲು ರೆಡಿಯಾಗಿದ್ದ ಸ್ವಾತಂತ್ರ್ಯ ರಥದಲ್ಲಿ ವೀರ ಸಾವರ್ಕರ್ ಫೋಟೋ ಅಳವಡಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ತಡೆಯೊಡ್ಡಿದ್ದಾರೆ. ಸಾವರ್ಕರ್ ಫೋಟೋ ತೆಗೆದು ಟಿಪ್ಪು ಸುಲ್ತಾನ್ ಫೋಟೋ ಹಾಕುವಂತೆ ಒತ್ತಡ ಹಾಕಿ ಪಂಚಾಯತ್ ವಿರುದ್ಧ ದಿಕ್ಕಾರ ಕೂಗಿದ್ದಾರೆ. ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ ಪರಸ್ಪರ ಕೈ, ಕೈ ಮಿಲಾಯಿಸುವ ಹಂತಕ್ಕೆ ತಲುಪಿದಾಗ ಪುತ್ತೂರು ಪೊಲೀಸರು ಬಂದು ಎಸ್‍ಡಿಪಿಐ ಕಾರ್ಯಕರ್ತರನ್ನು ಚದುರಿಸಿದ್ದಾರೆ.

    ಪ್ರಾರಂಭದಲ್ಲಿ ಪ್ರತಿಭಟನಕಾರರಿಗೆ ಪಂಚಾಯತ್ ಅಧ್ಯಕ್ಷರು, ಪಿಡಿಓ ತಿಳಿ ಹೇಳುವ ಪ್ರಯತ್ನ ನಡೆಸಿದ್ದಾರೆ. ಆದರೆ ಇವರ ಮಾತನ್ನು ಕೇಳದೆ ಎಸ್‍ಡಿಪಿಐ ಕಾರ್ಯಕರ್ತರು ವಾಗ್ವಾದ ಮುಂದುವರಿಸಿದ್ದಾರೆ. ಘಟನಾ ಸ್ಥಳಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಘಟನೆಯ ಬಗ್ಗೆ ತಿಳಿದುಕೊಂಡಿದ್ದಾರೆ. ತಕ್ಷಣ ಕೇಸು ದಾಖಲಿಸಿ ಆರೋಪಿಗಳ ಬಂಧಿಸುವಂತೆ ಪೋಲೀಸರಲ್ಲಿ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಮಾಜಘಾತುಕ ಕೃತ್ಯದ ಹಿಂದೆ ಯಾರೇ ಇದ್ರು ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ: ಕಟೀಲ್

    ಈ ಮತೀಯವಾದಿ ದೇಶದ್ರೋಹಿಗಳನ್ನು ಬಂಧಿಸಿ ಗಡಿಪಾರು ಮಾಡಬೇಕು. ಈ ಮತೀಯವಾದಿಗಳ ಹಿಂದೆ ಭಟ್ಕಳ, ಕಾಸರಗೋಡಿನ ಮತೀಯ ಸಂಘಟನೆಗಳ ಪಿತೂರಿ ಇದೆ. ಕಬಕ ಕಾಶ್ಮೀರ ಆಗೋದನ್ನು ಸಹಿಸಲ್ಲ, ಮಟ್ಟ ಹಾಕುವ ಕೆಲಸ ಆಗಬೇಕು. ಯಾವುದೇ ಸಂಘಟನೆ ಆಗಿದ್ದರೂ ಅವರನ್ನು ಬಂಧಿಸಿ ಸಂಘಟನೆ ನಿಷೇಧಿಸಬೇಕೆಂದು ಸಂಜೀವ ಮಠಂದೂರು ಒತ್ತಾಯಿಸಿದ್ದಾರೆ. ಸರ್ಕಾರದ ಸೂಚನೆ ಮೇರೆಗೆ ದೇಶಭಕ್ತರ ಫೋಟೋಗಳನ್ನು ಪಂಚಾಯತ್ ಅಳವಡಿಸಿತ್ತು.

  • ದೇಶ ಸೇವೆಗೆ ಪುತ್ತೂರಿನ ಇಬ್ಬರು ಯುವತಿಯರು ಆಯ್ಕೆ- ಏಪ್ರಿಲ್ 1ರಿಂದ ಕರ್ತವ್ಯಕ್ಕೆ ಹಾಜರು

    ದೇಶ ಸೇವೆಗೆ ಪುತ್ತೂರಿನ ಇಬ್ಬರು ಯುವತಿಯರು ಆಯ್ಕೆ- ಏಪ್ರಿಲ್ 1ರಿಂದ ಕರ್ತವ್ಯಕ್ಕೆ ಹಾಜರು

    – ಬಿ.ವೈ ವಿಜಯೇಂದ್ರ ಅಭಿನಂದನೆ

    ಬೆಂಗಳೂರು/ಮಂಗಳೂರು: ದೇಶ ಸೇವೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ ಇಬ್ಬರು ಯುವತಿಯರು ಆಯ್ಕೆಯಾಗಿದ್ದಾರೆ. ಇದೀಗ ಈ ಯುವತಿಯರಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ವಿಜಯೇಂದ್ರ, ಹೆಣ್ಣು ಅಬಲೆಯಲ್ಲ, ಆಕೆಯ ಸಾಮರ್ಥ್ಯಕ್ಕೆ ತಕ್ಕ ಪ್ರೋತ್ಸಾಹ ಮತ್ತು ಅವಕಾಶ ದೊರೆತಾಗ ಅಸಾಧ್ಯ ಯಾವುದೂ ಇಲ್ಲ. ನಮ್ಮ ದಕ್ಷಿಣ ಕನ್ನಡದ ಪುತ್ತೂರಿನ ಹೆಮ್ಮೆಯ ಪ್ರತಿಭೆಗಳಾದ ಕಾಣಿಯೂರಿನ ಕುಮಾರಿ ಯೋಗಿತಾ ಹಾಗೂ ಬಲ್ನಾಡಿನ ಕುಮಾರಿ ರಮ್ಯಾ ಗಡಿ ಭದ್ರತಾ ಪಡೆಗೆ ಆಯ್ಕೆಯಾಗಿದ್ದು, ಸ್ತ್ರೀಶಕ್ತಿಗೆ ನಿದರ್ಶನವಾಗಿದ್ದಾರೆ. ಸಾಧಕಿಯರಿಗೆ ಅಭಿನಂದನೆಗಳು ಎಂದು ಬರೆದುಕೊಳ್ಳುವ ಮೂಲಕ ಹೆಮ್ಮೆ ವ್ಯಕ್ತಪಡಿಸಿದ್ದಾರೆ.

    ಕಡಬ ತಾಲೂಕು ಕಾಣಿಯೂರಿನ ಯೋಗಿತಾ ಹಾಗೂ ಪುತ್ತೂರು ಹೊರವಲಯ ಬಲ್ನಾಡ್ ಪರಜಾಲ್ ದೇವಸ್ಯದ ರಮ್ಯಾ ಗಡಿ ಭದ್ರತಾ ಪಡೆಗೆ ಆಯ್ಕೆಯಾಗಿದ್ದಾರೆ. ಏಪ್ರಿಲ್ 1 ರಿಂದ ಇಬ್ಬರೂ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.

    ಯೋಗಿತಾ ಅವರು ಕಾಣಿಯೂರು ಗ್ರಾಮದ ಮಲೆಕೆರ್ಚಿ ಮೇದಪ್ಪ ಗೌಡ ಮತ್ತು ದೇವಕಿ ದಂಪತಿಯ ಪುತ್ರಿ. ಇವರು ಬೊಬ್ಬೆಕೇರಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು ನಂತರ ಕಾಣಿಯೂರಿನಲ್ಲಿ ಪ್ರೌಢಶಿಕ್ಷಣ , ನಿಂತಿಕಲ್ ನಲ್ಲಿ ಪಿಯುಸಿ ಮುಗಿಸಿದ್ದಾರೆ. ಬಳಿಕ ಮಂಗಳೂರಿನ ವಿವಿ ಕಾಲೇಜಿನಲ್ಲಿ ಪದವಿ ಪಡೆದು, ಕೊಣಾಜೆಯ ಮಂಗಳೂರು ವಿವಿಯಲ್ಲಿ ಸ್ನಾತಕೋತ್ತರ ಶಿಕ್ಷಣ ಪಡೆದಿದ್ದಾರೆ.

    ರಮ್ಯಾ ಅವರು ಪುತ್ತೂರು ಹೊರವಲಯ ಬಲ್ನಾಡಿನ ಪದ್ಮಯ್ಯ ಗೌಡ- ತೇಜವತಿ ದಂಪತಿ ಪುತ್ರಿ. ಇವರು ಪುತ್ತೂರು ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢ ಮತ್ತು ಪಿಯುಸಿ ಶಿಕ್ಷಣ ಮುಗಿಸಿದ್ದಾರೆ. ನಂತರ ವಿವೇಕಾನಂದ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ.

    ಮೊತ್ತಮೊದಲ ಬಾರಿಗೆ ಕಾಣಿಯೂರಿನ ಯುವತಿ ಮಿಲಿಟರಿಗೆ ಆಯ್ಕೆಗೊಂಡಿರುವ ಸಂತಸದಲ್ಲಿ ಕಾಣಿಯೂರಿನ ಜನರಿದ್ದಾರೆ. ಗಡಿ ಭದ್ರತಾ ಪಡೆಯ ಕರ್ತವ್ಯಕ್ಕೆ ತೆರಳುವ ಮೊದಲು ಕಾಣಿಯೂರಿನ ಶಿರಾಡಿ ರಾಜನ್ ದೈವಸ್ಥಾನ ಸಮಿತಿ ಏಲಡ್ಕ, ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಕಾಣಿಯೂರು, ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲ ಕಾಣಿಯೂರು, ಕಣ್ವರ್ಷಿ ಮಹಿಳಾ ಮಂಡಲದ ವತಿಯಿಂದ ಯೋಗಿತಾಳಿಗೆ ಬೀಳ್ಕೊಡುಗೆ ಅಭಿನಂದನಾ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ. ಎಳವೆಯಿಂದಲೇ ಸೇನೆ ಹಾಗೂ ಯೋಧರ ಬಗ್ಗೆ ಅಭಿಮಾನ ಹೊಂದಿದ್ದ ಈ ಯುವತಿಯರು ಇದೀಗ ತಾವೂ ಕೂಡಾ ಸೇನೆಯ ಅಂಗಕ್ಕೆ ಸೇರ್ಪಡೆಗೊಂಡು ಭಾರತ ಮಾತೆಯ ಸೇವೆಗೆ ಸನ್ನದ್ಧರಾಗಿದ್ದಾರೆ.

    ಭಾರತೀಯ ಸೇನೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ, ಬೆಳ್ತಂಗಡಿ ಹಾಗೂ ಪುತ್ತೂರು ಭಾಗದ ಹೆಚ್ಚಿನ ಜನ ಯೋಧರಾಗಿ ಸೇವೆ ಸಲ್ಲಿಸಿದ್ದಾರೆ. ಸೇನೆಯಲ್ಲಿ ಉನ್ನತ ಸ್ಥಾನವನ್ನೂ ಪಡೆದು ನಿವೃತ್ತಿಯಲ್ಲಿರುವ ಹಲವು ಸೇನೆಯ ಯೋಧರೂ ಕೂಡಾ ತಮಗೆ ಸೇನೆಯಲ್ಲಿ ಸೇರಲು ಸ್ಪೂರ್ತಿಯಾಗಿದೆ ಎನ್ನುವುದು ಈ ಯುವತಿಯರ ಅಭಿಪ್ರಾಯವಾಗಿದೆ.

  • ಕಾಲೇಜು ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

    ಕಾಲೇಜು ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

    ಮಂಗಳೂರು: ಕಾಲೇಜು ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಕ್ಕೆ ಬಲಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

    ಮೃತ ದುರ್ದೈವಿಯನ್ನು ಶ್ರೇಯಾ ಪಕ್ಕಳ (16) ಎಂದು ಗುರುತಿಸಲಾಗಿದೆ. ಈಕೆ ಪುತ್ತೂರಿನ ವಿವೇಕಾನಂದ ಕಾಲೇಜಿನ ಪಿಯುಸಿ ವಿಜ್ಞಾನ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿನಿ.

    ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಕುಂಡಾಪು ಪದ್ಮ ಪಕ್ಕಳ ಹಾಗೂ ಉಮಾವತಿ ದಂಪತಿಯ ಎರಡನೇ ಪುತ್ರಿ ಶ್ರೇಯಾ ಎಂದಿನಂತೆ ಓಡಾಡಿಕೊಂಡು ಇದ್ದಳು. ಏಕಾಏಕಿ ಇಂದು ಬೆಳಗ್ಗೆ ಅನಾರೋಗ್ಯ ಕಾಣಿಸಿಕೊಂಡ ಕಾರಣ ಶ್ರೇಯಾಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಶ್ರೇಯಾ ಪಕ್ಕಳ ಮೃತಪಟ್ಟಿದ್ದಾಳೆ.

  • 22ರ ಯುವತಿಗೆ ತುರ್ತು ಶಸ್ತ್ರ ಚಿಕಿತ್ಸೆ- ಅಂಬುಲೆನ್ಸ್‌ಗೆ ದಾರಿ ಕೊಟ್ಟು ಶುಭಕೋರಿದ ಜನ

    22ರ ಯುವತಿಗೆ ತುರ್ತು ಶಸ್ತ್ರ ಚಿಕಿತ್ಸೆ- ಅಂಬುಲೆನ್ಸ್‌ಗೆ ದಾರಿ ಕೊಟ್ಟು ಶುಭಕೋರಿದ ಜನ

    – ಪುತ್ತೂರಿನಿಂದ ಬೆಂಗ್ಳೂವರೆಗೂ ಸಹಕರಿಸಿದ ಸ್ಥಳೀಯರು

    ಚಿಕ್ಕಮಗಳೂರು: ತುರ್ತು ಶಸ್ತ್ರಚಿಕಿತ್ಸೆಗೆಂದು ಬೆಂಗಳೂರಿಗೆ ಕರೆದೊಯ್ಯುವಾಗ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಜನ ಅಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಡ್ರೈವರ್ ಹಾಗೂ ಯುವತಿಗೆ ಶುಭಕೋರಿದ್ದಾರೆ.

    ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಅರೇಹಳ್ಳಿ ಮೂಲದ 22 ವರ್ಷದ ಸುಹಾನ ಶ್ವಾಸಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದಳು. ಯುವತಿಗೆ ತುರ್ತು ಶಸ್ತ್ರ ಚಿಕಿತ್ಸೆಯ ಅಗತ್ಯವಿದ್ದು ಝೀರೋ ಟ್ರಾಫಿಕ್ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

    ಪುತ್ತೂರಿನಿಂದ ಬೆಂಗಳೂರಿಗೆ ಸುಮಾರು 7-8 ಗಂಟೆ ಸಮಯದ ಮಾರ್ಗವನ್ನ 3 ಗಂಟೆ 45 ನಿಮಿಷಕ್ಕೆ ತಲುಪುವ ಸಾಧ್ಯತೆ ಇದೆ. ಸುಹಾನ ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಲಂಗ್ಸ್ ಟ್ರಾನ್ಸ್ ಪ್ಲಾಂಟ್ ತುರ್ತು ಶಸ್ತ್ರ ಚಿಕಿತ್ಸೆಯ ತುರ್ತು ಅಗತ್ಯವಿದ್ದು, ಪುತ್ತೂರಿನಿಂದ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಝೀರೋ ಟ್ರಾಫಿಕ್ ನಲ್ಲಿ ಕೊಂಡೊಯ್ಯಲಾಗಿದೆ.

    ಈ ವೇಳೆ ಅಂಬುಲೆನ್ಸ್ ಗೆ ಪುತ್ತೂರಿನಿಂದ ಬೆಂಗಳೂರಿನವರೆಗೂ ದಾರಿಯುದ್ದಕ್ಕೂ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿದ್ದು, ಸ್ಥಳೀಯರು ಕೂಡ ಸಹಕರಿಸಿದ್ದಾರೆ. ಅಂಬುಲೆನ್ಸ್ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರಕ್ಕೆ ಬರುತ್ತಿದ್ದಂತೆ ಸ್ಥಳೀಯರು ಅಂಬುಲೆನ್ಸ್‍ಗೆ ದಾರಿ ಮಾಡಿಕೊಟ್ಟು ಡ್ರೈವರ್ ಹಾಗೂ ಯುವತಿಗೆ ಶುಭ ಕೋರಿದ್ದಾರೆ. ಸುಮಾರು 390 ಕಿ.ಮೀ. ದೂರದ ಮಾರ್ಗದುದ್ದಕ್ಕೂ ಪೊಲೀಸ್ ಇಲಾಖೆ ಕೂಡ ಝೀರೋ ಟ್ರಾಫಿಕ್‍ಗೆ ಎಲ್ಲಾ ವ್ಯವಸ್ಥೆ ಮಾಡಿದೆ.