Tag: Putturu

  • ಉಡುಪಿ | ಮನೆಗೆ ನುಗ್ಗಿ ಮಲಗಿದ್ದ ವ್ಯಕ್ತಿಯನ್ನು ತಲ್ವಾರ್‌ನಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು

    ಉಡುಪಿ | ಮನೆಗೆ ನುಗ್ಗಿ ಮಲಗಿದ್ದ ವ್ಯಕ್ತಿಯನ್ನು ತಲ್ವಾರ್‌ನಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು

    ಉಡುಪಿ: ಹೆಂಡತಿ ಮಗುವಿನ ಜೊತೆ ಮನೆಯಲ್ಲಿ ಮಲಗಿದ್ದ ವ್ಯಕ್ತಿಯನ್ನು ಮೂವರು ದುಷ್ಕರ್ಮಿಗಳು ತಲ್ವಾರ್‌ನಿಂದ ಕೊಚ್ಚಿ ಕೊಂದ ಘಟನೆ ಪುತ್ತೂರಿನಲ್ಲಿ (Putturu) ನಡೆದಿದೆ.

    ಹತ್ಯೆಯಾದ ವ್ಯಕ್ತಿಯನ್ನು ವಿನಯ್ ದೇವಾಡಿಗ (35) ಎಂದು ಗುರುತಿಸಲಾಗಿದೆ. ವಿನಯ್ ಮನೆ ರಾತ್ರಿ ವೇಳೆ ಮೂವರು ದುಷ್ಕರ್ಮಿಗಳು ಬಂದಿದ್ದರು. ಈ ವೇಳೆ, ಸ್ನೇಹಿತರಿರಬಹುದು ಎಂದು ಮನೆಯವರು ಒಳಗೆ ಬಿಟ್ಟಿದ್ದಾರೆ. ಬಳಿಕ ಮೂವರು ಹೆಂಡತಿ ಮತ್ತು ಮಗುವಿನ ಜೊತೆ ಮಲಗಿದ್ದ ವಿನಯ್ ಮೇಲೆ ತಲ್ವಾರ್‍ನಿಂದ ದಾಳಿ ನಡೆಸಿ ಹತ್ಯೆಗೈದಿದ್ದಾರೆ. ದಾಳಿ ವೇಳೆ ತಡೆಯಲು ಹೋದ ಪತ್ನಿಗೆ ಸಹ ಗಾಯವಾಗಿದೆ. ಇದನ್ನೂ ಓದಿ: Delhi | ಈಜು ತರಬೇತಿಗೆ ಹೋಗಿದ್ದ ವೇಳೆ ಇಬ್ಬರು ಬಾಲಕಿಯರ ಮೇಲೆ ಗ್ಯಾಂಗ್ ರೇಪ್

    ಉಡುಪಿ (Udupi) ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಯುಪಿ| ಅಂಗವಿಕಲ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌; 24 ಗಂಟೆಯೊಳಗೆ ಆರೋಪಿಗಳ ಕಾಲಿಗೆ ಗುಂಡೇಟು

  • ಪುತ್ತೂರಿನ ಕಾಲೇಜಲ್ಲಿ ವಿದ್ಯಾರ್ಥಿಯಿಂದ ದೈವನರ್ತನ – ದೈವಾರಾಧಕರ ಆಕ್ರೋಶ

    ಪುತ್ತೂರಿನ ಕಾಲೇಜಲ್ಲಿ ವಿದ್ಯಾರ್ಥಿಯಿಂದ ದೈವನರ್ತನ – ದೈವಾರಾಧಕರ ಆಕ್ರೋಶ

    ಮಂಗಳೂರು: ಪುತ್ತೂರಿನ (Puttur) ಖಾಸಗಿ ಕಾಲೇಜೊಂದರಲ್ಲಿ ದಶಮಾನೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯೊಬ್ಬ ದೈವನರ್ತನ (Daiva Narthana) ಮಾಡಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.

    ವೇದಿಕೆ ಮೇಲೆ ವಿದ್ಯಾರ್ಥಿಯೊಬ್ಬ ಜುಮಾದಿ ದೈವದ ವೇಷ ಧರಿಸಿ ನರ್ತನ ಮಾಡಿದ್ದಾನೆ. ಇದು ದೈವಾರಾಧಕರ ಅಸಮಾಧಾನಕ್ಕೆ ಕಾರಣವಾಗಿದೆ. ದೈವನರ್ತನದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ದೈವಕ್ಕೆ ಅಪಮಾನ ಮಾಡಲಾಗಿದೆ ಎಂದು ಕಾಲೇಜಿನ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

    ಸಿನಿಮಾಗಳಿಂದ ಯುವಕರು ಪ್ರೇರಣೆ ಪಡೆದು ಇಂತಹ ಕಾರ್ಯಕ್ಕೆ ಮುಂದಾಗಿದ್ದಾರೆ. ಇದು ಸರಿಯಾದ ನಡೆಯಲ್ಲ. ಈ ಹಿಂದೆ ಸಹ ಇಂತಹ ಘಟನೆಗಳು ನಡೆದಾಗ ಎಚ್ಚರಿಕೆ ನೀಡಲಾಗಿತ್ತು. ಆದರೂ ಸಹ ದೈವಗಳಿಗೆ ಅಪಮಾನ ಮಾಡುವುದು ಮುಂದುವರಿದಿದೆ. ಕಾಲೇಜಿನ ವಿರುದ್ಧ ದೂರು ಕೊಡುತ್ತೇವೆ ಎಂದು ದೈವಾರಾಧಕರು ಎಚ್ಚರಿಕೆ ನೀಡಿದ್ದಾರೆ.

    ಸಿನಿಮಾ (Cinema) ಮತ್ತು ನಾಟಕಗಳಲ್ಲಿ (Drama) ದೈವಾರಾಧನೆಗೆ ಅಪಮಾನ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವಂತೆ ಇಲ್ಲಿನ ದೈವಾರಾಧಕರು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ (Dakshina Kannada DC) ಮನವಿ ಸಲ್ಲಿಸಿದ್ದರು. ಮುಂದೆ ಸಿನಿಮಾಗಳಲ್ಲಿ ದೈವಾರಾಧನೆ ಪ್ರದರ್ಶನ ಆದ್ರೆ ನಮ್ಮ ಹೋರಾಟದ ಸ್ವರೂಪ ತೀವ್ರಗೊಳ್ಳುತ್ತದೆ. ದೈವಾರಾಧನೆಯು ಯಾವುದೇ ನಾಟಕ, ಸಿನಿಮಾ, ಧಾರವಾಹಿ, ಯಕ್ಷಗಾನದಲ್ಲೂ ಪ್ರದರ್ಶನ ಆಗಬಾರದು ಎಂದು ಆಗ್ರಹಿಸಿದ್ದರು. ಅದರ ಬೆನ್ನಲ್ಲೇ ಕಾಲೇಜಿನಲ್ಲಿ ದೈವನರ್ತನ ಪ್ರದರ್ಶನ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ.

  • ಫೆ.11ಕ್ಕೆ ಪುತ್ತೂರಿಗೆ ಅಮಿತ್‌ ಶಾ – ಯಾವ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ?

    ಫೆ.11ಕ್ಕೆ ಪುತ್ತೂರಿಗೆ ಅಮಿತ್‌ ಶಾ – ಯಾವ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ?

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಬೆಂಗಳೂರು, ತುಮಕೂರಿಗೆ ಬಂದು ಹೋದ ಬೆನ್ನಲ್ಲೇ ಕೇಂದ್ರ ಸಹಕಾರಿ ಸಚಿವ ಅಮಿತ್‌ ಶಾ (Amit Shah) ರಾಜ್ಯ ಪ್ರವೇಶಕ್ಕೆ ಮುಹೂರ್ತ ನಿಗದಿಯಾಗಿದೆ.

    ಫೆಬ್ರವರಿ 11ರಂದು ಅಮಿತ್‌ ಶಾ ಅವರ ಒಂದು ದಿನದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು (Putturu) ತಾಲೂಕಿನ ಪ್ರವಾಸದ ಪಟ್ಟಿ ಪ್ರಕಟವಾಗಿದೆ. ಕಣ್ಣೂರು ವಿಮಾನ ನಿಲ್ದಾಣದಿಂದ ಬಿಎಸ್‌ಎಫ್‌ ಹೆಲಿಕಾಪ್ಟರ್‌ ಮೂಲಕ ಮಧ್ಯಾಹ್ನ 2:45 ಈಶ್ವರಮಂಗಲಕ್ಕೆ ಆಗಮಿಸಲಿದ್ದಾರೆ. ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ, ತುಮಕೂರಲ್ಲಿ‌ ಮೋದಿ ಹವಾ; ಬಯಲು ಸೀಮೆಯಲ್ಲಿ 12+ ಸೀಟ್ ಗೆಲ್ಲಲು ಬಿಜೆಪಿ ಟಾರ್ಗೆಟ್

    ರಸ್ತೆಯ ಮಾರ್ಗದ ಮೂಲಕ ಹನುಮಗಿರಿ ದೇವಸ್ಥಾನಕ್ಕೆ ಆಗಮಿಸಲಿರುವ ಇವರು ನಂತರ ಪುತ್ತೂರಿಗೆ ಹೆಲಿಕಾಪ್ಟರ್‌ ಮೂಲಕ ತೆರಳಲಿದ್ದಾರೆ. ಸಂಜೆ ಪ್ರತಿಷ್ಠಿತ ಕ್ಯಾಂಪ್ಕೋ (CAMPCO) ಸಂಸ್ಥೆಯ ಸುವರ್ಣ ಮಹೋತ್ಸವದ ಸಮಾರಂಭದಲ್ಲಿ ಭಾಗವಹಿಸಿ ಭಾಷಣ ಮಾಡಲಿದ್ದಾರೆ. ಈ ಸಹಕಾರಿ ಸಮಾವೇಶವು ತೆಂಕಿಲದ ವಿವೇಕಾನಂದ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ನಡೆಯಲಿದೆ.

    ಸಂಜೆ 5 ಗಂಟೆ ಕಾರ್ಯಕ್ರಮ ಮುಗಿಸಿಕೊಂಡು ರಸ್ತೆ ಮಾರ್ಗದ ಮೂಲಕ ಕ್ಯಾಂಪ್ಕೋ ಫ್ಯಾಕ್ಟರಿಗೆ ಭೇಟಿ ನೀಡಲಿದ್ದಾರೆ. ಇದಾದ ಬಳಿಕ ಪುತ್ತೂರಿಗೆ ಆಗಮಿಸಿ ಹೆಲಿಕಾಪ್ಟರ್‌ ಮೂಲಕ ಮಂಗಳೂರಿಗೆ ಬಂದು ರಾತ್ರಿ ವಿಮಾನದ ಮೂಲಕ ತೆರಳಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಭಿನ್ನಮತೀಯ ಜೋಡಿ ಪತ್ತೆ, ಇಬ್ಬರ ಬಂಧನ – ಉಪ್ಪಿನಂಗಡಿಯಲ್ಲಿ ಬಿಜೆಪಿ ಶಾಸಕರಿದ್ದ ಬಸ್‌ಗೆ ತಡೆ, ಮುತ್ತಿಗೆ

    ಭಿನ್ನಮತೀಯ ಜೋಡಿ ಪತ್ತೆ, ಇಬ್ಬರ ಬಂಧನ – ಉಪ್ಪಿನಂಗಡಿಯಲ್ಲಿ ಬಿಜೆಪಿ ಶಾಸಕರಿದ್ದ ಬಸ್‌ಗೆ ತಡೆ, ಮುತ್ತಿಗೆ

    ಮಂಗಳೂರು: ಭಿನ್ನಮತೀಯ ಜೋಡಿ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಕ್ಕೆ ಹಿಂದೂಪರ ಸಂಘಟನೆಯ ಸದಸ್ಯರು ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರಿಗೆ ಮುತ್ತಿಗೆ ಹಾಕಿದ್ದಾರೆ.

    ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅರಣ್ಯ ಪ್ರದೇಶದಲ್ಲಿ ಭಿನ್ನಮತೀಯ ಜೋಡಿ ಪತ್ತೆಯಾಗಿತ್ತು. ವೀಡಿಯೋ ವೈರಲ್‌ ಆದ ಬೆನ್ನಲ್ಲೇ ಯುವಕ ಹಿಂದೂ ಸಂಘಟನೆಯ ಕಾರ್ಯಕರ್ತರ ವಿರುದ್ಧವೇ ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದ.

    POLICE JEEP

    ಆಟೋ ರಿಕ್ಷಾ ತಡೆದು ನಿಲ್ಲಿಸಿ ಹಲ್ಲೆ ನಡೆಸಿರುವುದಾಗಿ ಯುವಕ ದೂರಿನಲ್ಲಿ ಆರೋಪಿಸಿದ್ದ. ಈ ದೂರಿನ ಆಧಾರದ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಪೊಲೀಸರು ಹಿಂದೂಪರ ಸಂಘಟನೆಯ ಇಬ್ಬರು ಸದಸ್ಯರನ್ನು ಪೊಲೀಸರು ಬಂಧಿಸಿದ್ದರು. ಇದನ್ನೂ ಓದಿ: ನಮ್ಮ ತ್ಯಾಗಕ್ಕೆ ಬೆಲೆ ಸಿಗಲಿದೆ, ನಾನು ಕ್ಯಾಬಿನೆಟ್ ಸೇರಲಿದ್ದೇನೆ: ಆರ್.ಶಂಕರ್

    ಬಂಧನವನ್ನು ಖಂಡಿಸಿ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಮಂಗಳವಾರ ರಾತ್ರಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಸಂಜೀವ ಮಠಂದೂರು ಅವರಿದ್ದ ಬಸ್ಸನ್ನು ಉಪ್ಪಿನಂಗಡಿಯಲ್ಲಿ ತಡೆದಿದ್ದಾರೆ. ಸಂಜೀವ ಮಠಂದೂರಿಗೆ ಮುತ್ತಿಗೆ ಹಾಕಿದ ಕಾರ್ಯರ್ತರು ಬಂಧನ ಮಾಡಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಮದ್ಯದ ಅಮಲಿನಲ್ಲಿ ಸ್ಕೈವಾಕ್‍ನಿಂದ ಜಿಗಿದ ವ್ಯಕ್ತಿ – ಸೊಂಟಕ್ಕೆ ಗಂಭೀರ ಪೆಟ್ಟು

  • ಪುತ್ತೂರಿನಲ್ಲಿ ಪೈಶಾಚಿಕ ಕೃತ್ಯ – ಮಗನಿಂದಲೇ ತಾಯಿಯ ಮೇಲೆ ರೇಪ್‌

    ಮಂಗಳೂರು: ಮಗನೇ ತಾಯಿಯ ಮೇಲೆಯೇ ಅತ್ಯಾಚಾರ ಎಸಗಿದ ಪೈಶಾಚಿಕ ಘಟನೆಯೊಂದು ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ನಡೆದಿದೆ.

    ಜಯರಾಮ ರೈ (35) ಬಂಧಿತ ಆರೋಪಿ. ಮಗನ ಕೃತ್ಯದಿಂದ ಶಾಕ್‌ಗೆ ಒಳಗಾದ 58 ವರ್ಷದ ತಾಯಿ ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ತಾಯಿ ಮತ್ತು ಮಗ ಒಂದೇ ಮನೆಯಲ್ಲಿ ವಾಸಿಸುತ್ತಿದ್ದು, ಜ.12ರ ತಡರಾತ್ರಿ ಹಾಗೂ ಮರುದಿನ ಬೆಳಗ್ಗೆ ಎರಡು ಬಾರಿ ತಾಯಿಯ ತೀವ್ರ ವಿರೋಧದ ನಡುವೆಯೂ ಅಮಾನುಷವಾಗಿ ಪ್ರಾಣಿಯಂತೆ ಎರಗಿ ಅತ್ಯಾಚಾರ ಎಸಗಿದ್ದಾನೆ. ಇದನ್ನೂ ಓದಿ: ಗಾಳಿಪಟ ಹಾರಿಸುವಾಗ ಬಿದ್ದು ಒಂದೇ ದಿನ 63ಕ್ಕೂ ಹೆಚ್ಚು ಮಂದಿಗೆ ಗಾಯ

    ಸಂತ್ರಸ್ತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದು, ಜಯರಾಮ ರೈ ವಿರುದ್ಧ ಐಪಿಸಿ ಸೆಕ್ಷನ್ 376(2)(ಎನ್​​) ಮತ್ತು 506 ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

    ಈ ಕೃತ್ಯ ನಡೆದ ರಾತ್ರಿ ಊಟ ಮಾಡಿ ಆರೋಪಿ ತನ್ನ ಕೋಣೆಯಲ್ಲಿ ಮಲಗಿದ್ದ. ನಸುಕಿನ ಜಾವ 3 ಗಂಟೆಗೆ ತಾಯಿ ಮಲಗಿದ್ದ ಕೋಣೆಗೆ ತೆರಳಿ ಆರೋಪಿ ಅತ್ಯಾಚಾರ ಎಸಗಿದ್ದಾನೆ. ತಾಯಿ ಕಿರುಚಿ ಪ್ರತಿರೋಧ ತೋರಿದ್ದಾರೆ. ಆದರೆ ಆರೋಪಿ ಬಾಯಿಗೆ ಬಟ್ಟೆ ಒತ್ತಿ, ಬೊಬ್ಬೆ ಹಾಕದಂತೆ ಬೆದರಿಕೆ ಹಾಕಿದ್ದಾನೆ. ಅತ್ಯಾಚಾರದ ಬಳಿಕ ವಿಚಾರವನ್ನು ಬಹಿರಂಗ ಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಸಿದ್ದಾನೆ. ಇದನ್ನೂ ಓದಿ: ಒಳ ಉಡುಪು, ಗುಪ್ತಾಂಗದಲ್ಲಿ ಚಿನ್ನ ಕಳ್ಳಸಾಗಣೆ ಮಾಡ್ತಿದ್ದ ಮೂವರು ಮಹಿಳೆಯರು ಅರೆಸ್ಟ್

    ಜ.13ರಂದು ಬೆಳಗ್ಗೆ ನಾನು ಅಡುಗೆ ಕೋಣೆಯಲ್ಲಿದ್ದ ಸಂದರ್ಭದಲ್ಲಿ ಅಲ್ಲಿಗೆ ಬಂದ ಪುತ್ರ ಬಲವಂತದಿಂದ ನನ್ನನ್ನು ಮನೆಯ ಹಾಲ್‌ಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ತಾಯಿ ಆರೋಪಿಸಿದ್ದಾರೆ. ಆರೋಪಿಗೆ ಮದುವೆಯಾಗಿದ್ದು, ಸೀಮಂತ ಮುಗಿಸಿರುವ ಪತ್ನಿ ತನ್ನ ತವರು ಮನೆಯಲ್ಲಿ ವಾಸಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

  • ಸೋಂಕಿನಿಂದ ಮೃತಪಟ್ಟ ಮಹಿಳೆಯ ಅಂತ್ಯಸಂಸ್ಕಾರ ನೆರವೇರಿಸಿದ ಪುತ್ತೂರು ಶಾಸಕ

    ಸೋಂಕಿನಿಂದ ಮೃತಪಟ್ಟ ಮಹಿಳೆಯ ಅಂತ್ಯಸಂಸ್ಕಾರ ನೆರವೇರಿಸಿದ ಪುತ್ತೂರು ಶಾಸಕ

    ಮಂಗಳೂರು: ಕೋವಿಡ್ 19 ಸೋಂಕಿನಿಂದ ಮೃತಪಟ್ಟ ಮಹಿಳೆಯ ಅಂತ್ಯ ಸಂಸ್ಕಾರವನ್ನು ಪುತ್ತೂರಿನ ಶಾಸಕ ಸಂಜೀವ ಮಠಂದೂರು ನೆರವೇರಿಸಿದ್ದಾರೆ.

    ಸಮಾಜಮುಖಿ ಚಿಂತನೆಯೊಂದಿಗೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕ್ರೀಯಾಶೀಲ ಶಾಸಕರಾಗಿ ಕೆಲಸ ಮಾಡುತ್ತಿರುವ ಸಂಜೀವ ಮಠಂದೂರು, ತಮ್ಮ ವಾರ್ ರೂಮ್ ಸೇವೆಯ ಮೂಲಕ ಜನರಿಗೆ ನೆರವಾಗುವ ಕೆಲಸ ಮಾಡುತ್ತಿದ್ದಾರೆ.

    ಇದು ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿರುವ ನಡುವೆಯೇ, ಕೋವಿಡ್‍ನಿಂದ ಮೃತಪಟ್ಟ ಮಹಿಳೆಯೊಬ್ಬರ ಮೃತ ದೇಹದ ಅಂತ್ಯ ಸಂಸ್ಕಾರವನ್ನು ಸ್ವತಃ ತಾನೇ ಮುಂಚೂಣಿಯಲ್ಲಿ ನಿಂತು ಮಾಡಿದ್ದಾರೆ. ಇದನ್ನೂ ಓದಿ : ಕೊರೊನಾ ಜಾಗೃತಿ – ಪವರ್ ಸ್ಟಾರ್ ಹೇಳಿದ 5 ಸೂತ್ರಗಳ್ಯಾವುದು ಗೊತ್ತಾ?

    ಚಿಕ್ಕಪುತ್ತೂರು ಮಡಿವಾಳ ಕಟ್ಟೆ ಸ್ಮಶಾನದಲ್ಲಿ ವಾರ್ ರೂಮ್ ಸದಸ್ಯರು ಮತ್ತು ಮೃತರ ಸಂಬಂಧಿಕರೊಂದಿಗೆ ಮೃತದೇಹದ ಅಂತ್ಯಸಂಸ್ಕಾರ ವನ್ನು ನೆರವೇರಿಸಿದರು. ಈ ಮೂಲಕ ಕೋವಿಡ್‍ನಿಂದ ಮೃತಪಟ್ಟವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಶಾಸಕರಲ್ಲಿ ಜಿಲ್ಲೆಯಲ್ಲೇ ಪ್ರಥಮ ಶಾಸಕರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

  • ಯಕ್ಷರಂಗದ ಸಿಡಿಲಮರಿ ಶ್ರೀಧರ ಭಂಡಾರಿ ವಿಧಿವಶ

    ಯಕ್ಷರಂಗದ ಸಿಡಿಲಮರಿ ಶ್ರೀಧರ ಭಂಡಾರಿ ವಿಧಿವಶ

    ಮಂಗಳೂರು: ತೆಂಕುತಿಟ್ಟು ಯಕ್ಷಗಾನದಲ್ಲಿ ಸಿಡಿಲಮರಿ ಎಂದೇ ಖ್ಯಾತಿ ಪಡೆದಿದ್ದ ಧರ್ಮಸ್ಥಳ ಮೇಳದ ಹಿರಿಯ ಕಲಾವಿದ ಡಾ. ಶ್ರೀಧರ ಭಂಡಾರಿ (73) ವಿಧಿವಶರಾಗಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಬನ್ನೂರು ನಿವಾಸಿಯಾಗಿದ್ದ ಶ್ರೀಧರ ಭಂಡಾರಿ ಒಂದು ವರ್ಷದ ಹಿಂದೆ ಅನಾರೋಗ್ಯಕ್ಕೀಡಾಗಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಇಂದು ಮುಂಜಾನೆ ಶ್ರೀಧರ ಭಂಡಾರಿ ನಿಧನರಾಗಿದ್ದು, ಮೃತರು ಪತ್ನಿ ಉಷಾ ಭಂಡಾರಿ, ಪುತ್ರಿಯರಾದ ಕೋಕಿಲಾ, ಶಾಂತನಾ, ಪುತ್ರರಾದ ಡಾ ಅನಿಲ, ದೇವಿ ಪ್ರಕಾಶ್ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

    ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಜನರಾಗಿದ್ದ ಶ್ರೀಧರ ಭಂಡಾರಿ ಧರ್ಮಸ್ಥಳ ಮೇಳದ ಹಿರಿಯ ಯಕ್ಷಗಾನ ಕಲಾವಿದರಾಗಿದ್ದರು. ಪುಂಡುವೇಷದ ಗಂಡುಗಲಿ, ಧೀಂಗಿಣ ವೀರ ಎಂದೇ ಪ್ರಸಿದ್ಧಿ ಪಡೆದಿದ್ದರು.

    ಪುಂಡು ವೇಷಗಳಿಗೆ ಹೆಸರು ಪಡೆದಿದ್ದ ಇವರಿಗೆ ರಂಗಸ್ಥಳದಲ್ಲಿ ಚುರುಕಿನ, ವೇಗದ ನಡೆಯಿಂದ ಅವರಿಗೆ ಸಿಡಿಲಮರಿ ಎಂಬ ಬಿರುದು ಒಲಿದಿತ್ತು. ಒಂದೇ ಬಾರಿಗೆ 200ರಿಂದ 250ರಷ್ಟು ಧೀಂಗಿಣ ಹಾಕುತ್ತಿದ್ದ ಶ್ರೀಧರ ಭಂಡಾರಿ ಅವರು ಬಭ್ರುವಾಹನ, ಅಶ್ವತ್ಥಾಮ, ಕುಶ, ಭಾರ್ಗವ ಮುಂತಾದ ಪಾತ್ರಗಳಲ್ಲಿ ಸೈ ಎನಿಸಿಕೊಂಡಿದ್ದರು.

    ತಮ್ಮ 62ನೇ ವಯಸ್ಸಿನಲ್ಲಿ ಖಾಸಗಿ ಸುದ್ದಿವಾಹಿನಿಯ ‘ಶಭಾಶ್ ಇಂಡಿಯಾ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರೀಧರ ಭಂಡಾರಿಯವರು 3 ನಿಮಿಷಗಳಲ್ಲಿ 148 ಧೀಂಗಿಣಗಳನ್ನು ಹೊಡೆದಿದ್ದರು. ಕಲಾ ಸೇವೆಗಾಗಿ ಅಮೇರಿಕಾದ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಶ್ರೀಧರ ಭಂಡಾರಿ ಅವರನ್ನು ಗೌರವಿಸಿತ್ತು.

    ಅಜ್ಜನಿಂದ ಪ್ರಭಾವಿತರಾಗಿ ಯಕ್ಷಗಾನದತ್ತ ಆಕರ್ಷಿತರಾಗಿದ್ದ ಇವರು ಕುರಿಯ ವಿಠಲ ಶಾಸ್ತ್ರಿ ಅವರಿಂದ ಶಾಸ್ತ್ರಬದ್ಧವಾಗಿ ಯಕ್ಷಗಾನ ಅಭ್ಯಾಸ ಮಾಡಿದ್ದರು. ಸುಬ್ರಹ್ಮಣ್ಯ ಮೇಳ, ಬಾಳಂಬೆಟ್ಟು ಮೇಳ, ಪುತ್ತೂರು ಮೇಳಗಳಲ್ಲಿ ಸೇವೆ ಸಲ್ಲಿಸಿದ ಶ್ರೀಧರ ಭಂಡಾರಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವೇರ ಮೇಳದಲ್ಲಿ ಸುದೀರ್ಘ 45 ವರ್ಷಗಳ ಕಾಲ ಪ್ರಮುಖ ವೇಷಧಾರಿಯಾಗಿ ಕಲಾ ಸೇವೆಗೈದಿದ್ದರು.

  • ನನಸಾಯ್ತು 30 ವರ್ಷಗಳ ಅರಣ್ಯದ ಕನಸು – 10 ಎಕರೆಯಲ್ಲಿ ತಲೆಯೆತ್ತಿದೆ ಸಮೃದ್ಧ ಕಾಡು

    ನನಸಾಯ್ತು 30 ವರ್ಷಗಳ ಅರಣ್ಯದ ಕನಸು – 10 ಎಕರೆಯಲ್ಲಿ ತಲೆಯೆತ್ತಿದೆ ಸಮೃದ್ಧ ಕಾಡು

    -ಸರ್ಕಾರವನ್ನೇ ನಾಚಿಸಿದ ಪುತ್ತೂರಿನ ಸದಾಶಿವ ಮರಿಕೆ

    ಮಂಗಳೂರು: ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ.

    ಪರಿಸರದ ಬಗ್ಗೆ ಅತಿಯಾದ ಕಾಳಜಿ ಇರುವ ಸದಾಶಿವ ಮರಿಕೆ ತಮ್ಮಿಂದ ಏನಾದರೂ ಈ ಪ್ರಕೃತಿಗೆ ಅಳಿಲು ಸೇವೆ ಮಾಡಬೇಕೆಂದು ಕಳೆದ 30 ವರ್ಷಗಳ ಹಿಂದೆ ಕಂಡಿದ್ದ ಕನಸನ್ನು ಇದೀಗ ನನಸಾಗಿಸಿದ್ದಾರೆ. ನಾಶವಾಗುತ್ತಿರುವ ಪರಿಸರವನ್ನು ಉಳಿಸಬೇಕು, ಜೊತೆಗೆ ಪ್ರಾಣಿ ಪಕ್ಷಿಗಳಿಗೆ ಅದರಿಂದ ಸಹಕಾರಿ ಆಗಬೇಕೆಂದುಕೊಂಡ ಸದಾಶಿವರವರು ಅದಕ್ಕಾಗಿ ದಟ್ಟ ಅರಣ್ಯವನ್ನು ಮಾಡಬೇಕೆಂದು ಪಣ ತೊಟ್ಟಿದ್ದರು. ಅದರಂತೆ ತಮ್ಮ ಪೂರ್ವಜರಿಂದ ಬಂದಿರುವ ಒಟ್ಟು 25 ಎಕರೆ ಜಮೀನಿನ ಪೈಕಿ ಕೃಷಿ ರಹಿತ ಹತ್ತು ಎಕರೆ ಬರಡು ಭೂಮಿಯಲ್ಲಿ ಕಾಡು ಬೆಳೆಸಬೇಕೆಂದು ನಿರ್ಧರಿಸಿದ್ದರು. ಅದಕ್ಕಾಗಿ ಕಾಡಿನಲ್ಲಿರುವ ವಿವಿಧ ತಳಿಯ ಮರಗಳ ಗಿಡಗಳನ್ನು ತಂದು ಗುಡ್ಡದ ಉದ್ದಕ್ಕೂ ನೆಟ್ಟಿದ್ದರು.

    30 ವರ್ಷಗಳ ಸತತ ಪರಿಶ್ರಮದ ಬಳಿಕ ಗಿಡಗಳು ಮರವಾಗಿ ಬೆಳೆದಿದ್ದು ಇದೀಗ ದಟ್ಟ ಅರಣ್ಯವಾಗಿದೆ. ತಮ್ಮ ಸ್ವಂತ ಜಮೀನಿನಲ್ಲೇ ಅರಣ್ಯ ಇಲಾಖೆ ಹಾಗೂ ಸರ್ಕಾರವನ್ನು ನಾಚಿಸುವಂತಹ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇದರಿಂದಾಗಿ ಒಂದೆಡೆ ಸಮೃದ್ಧ ಕಾಡು, ಅದರಿಂದಾಗಿ ಜಮೀನಿನಲ್ಲಿ ನೀರಿನ ಉತ್ಪತ್ತಿಯೂ ಆಗಿದೆ. ಇದೀಗ ತಾವೇ ಬೆಳೆಸಿದ ದಟ್ಟ ಅರಣ್ಯದಲ್ಲಿ ಪ್ರತಿದಿನ ಒಂದು ಸುತ್ತು ಹೊಡೆಯುವ ಸದಾಶಿವರವರು ಅರಣ್ಯದಿಂದ ತೃಪ್ತಿ ಕಂಡಿದ್ದಾರೆ. ಕಾಡಿನಲ್ಲಿ ಹಕ್ಕಿಗಳ ಇಂಚರ, ಚಿಲಿಪಿಲಿಯ ನಾದ ಕೇಳುತ್ತಾರೆ. ಭೂಮಿಯಲ್ಲಿ ಕಾಡು, ಹಸಿರು ಇಲ್ಲದೇ ಇದ್ದರೆ ಮನುಷ್ಯನ ಉಳಿವು ಸಾಧ್ಯವಿಲ್ಲ ಎಂಬುವುದು ಸದಾಶಿವ ಅವರ ಮಾತು.

    ಆರಂಭದಲ್ಲಿ ಜಮೀನಿನ ಮಧ್ಯೆ ಇದ್ದ ಕೆರೆಯಿಂದಲೇ ಗಿಡಗಳಿಗೆ ನೀರುಣಿಸುತ್ತಿದ್ದರು. ಬೇಸಿಗೆಯಲ್ಲಿ ನೀರು ಪೂರೈಸುವುದು ಕಷ್ಟವೂ ಆಗಿತ್ತು. ಆದರೆ ಕಾಡು ಬೆಳೆದಂತೆ ಜಮೀನಿನಲ್ಲಿ ನೀರಿನ ಸಮಸ್ಯೆಯೂ ಇಲ್ಲದಾಗಿದೆ. ಕಾಡಿನ ಮಧ್ಯೆ ಬಿದ್ದ ಮಳೆ ನೀರು ಅಲ್ಲಿಯೇ ಇಂಗುವಂತೆ ಇಂಗು ಗುಂಡಿಗಳನ್ನು ನಿರ್ಮಿಸಿದ್ದಾರೆ. ಈಗ ಒಂದೆಡೆ ಸಮೃದ್ಧ ಕಾಡು, ಇನ್ನೊಂದೆಡೆ ಯಾವ ಬರಗಾಲ ಬಂದರೂ ಕಡಿಮೆಯಾಗದಷ್ಟು ಯಥೇಚ್ಛ ನೀರು ಜಮೀನಿನಲ್ಲಿ ಸೃಷ್ಟಿಯಾಗಿದ್ದು ಕೃಷಿ ಬದುಕಿನಲ್ಲಿ ಸಂತೃಪ್ತಿ ಕಂಡಿದ್ದಾರೆ. ಇವರ ದಟ್ಟ ಕಾಡಿನಿಂದಾಗಿ ಅಕ್ಕಪಕ್ಕದ ಜಮೀನುಗಳಲ್ಲಿಯೂ ಅಂತರ್ಜಲ ಮಟ್ಟ ಹೆಚ್ಚಾಗಿದೆ.

    ಕಾಡು ಕಡಿದು ನಾಶ ಮಾಡುವ ಸರ್ಕಾರ, ತಮ್ಮ ಜಮೀನುಗಳಲ್ಲಿ ಬೆಳೆದು ನಿಂತ ಮರಗಳನ್ನು ಕಡಿದು ಮಾರಾಟ ಮಾಡೋ ಜನಸಾಮಾನ್ಯರ ಮಧ್ಯೆ ಸದಾಶಿವ ಮರಿಕೆ ತಮ್ಮದೇ ಜಾಗದಲ್ಲಿ ದಟ್ಟಾರಣ್ಯವನ್ನೇ ಬೆಳೆಸಿ ಗಮನ ಸೆಳೆದಿದ್ದಾರೆ.

  • ಕಡಲ ನಗರಿಯಲ್ಲಿ ಚುನಾವಣೆಯ ನಗಾರಿ- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲೆಕ್ಷನ್ ಅಖಾಡ ಹೇಗಿದೆ?

    ಕಡಲ ನಗರಿಯಲ್ಲಿ ಚುನಾವಣೆಯ ನಗಾರಿ- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲೆಕ್ಷನ್ ಅಖಾಡ ಹೇಗಿದೆ?

    ಚುನಾವಣಾ ದಂಗಲ್ ನಲ್ಲಿ ಈಗ ಎಲ್ಲರ ಚಿತ್ತ ಕರಾವಳಿ ಕರ್ನಾಟಕದತ್ತ. ದಕ್ಷಿಣ ಕೆನರಾದಲ್ಲಿ ರಾಜಕಾರಣಕ್ಕೆ ಧರ್ಮದ ಹೊದಿಕೆ ಮುಚ್ಚಿ ಅದೆಷ್ಟೋ ಕಾಲವೇ ಆಯ್ತು. ಬುದ್ಧಿವಂತರ ಜಿಲ್ಲೆಯಲ್ಲಿ ಅಭಿವೃದ್ಧಿ ಹಾಗೂ ಇತರೆ ವಿಷಯಗಳು ರಾಜಕೀಯದ ವಿಷಯದಲ್ಲಂತೂ ನಗಣ್ಯ. ಚುನಾವಣೆಯ ಹೊಸ್ತಿಲಲ್ಲಿ ತಲೆ ಎತ್ತಿದ ಕೋಮುಗಲಭೆ,ಹತ್ಯೆ ವಿಚಾರಗಳು ಈ ಬಾರಿ ನಿರ್ಣಾಯಕ ಅಂತಾ ಅನಿಸಿದ್ರೂ ಮತದಾರನ ಮನದಾಳವನ್ನುಅರಿತವರಾರು..?

    ಸಾಮರಸ್ಯ ಜೀವನವೇ ತುಳುನಾಡಿನ ಅಂದ-ಚಂದ..
    ಅಂದ ಹಾಗೆ, 1948ನೇ ಇಸವಿಗೂ ಮೊದಲು ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡಗಳೆರಡನ್ನೂ ಒಟ್ಟಾಗಿ ಬ್ರಿಟೀಷರು ಕೆನರಾ ಅಂತಾ ಕರೀತಿದ್ರು. ದಕ್ಷಿಣ ಕೆನರಾ ಮದ್ರಾಸ್ ಪ್ರೆಸಿಡೆನ್ಸಿ ವ್ಯಾಪ್ತಿಗೆ ಒಳಪಟ್ಟಿತ್ತು. ಪೌರಾಣಿಕ ಕಥೆಗಳ ಮೂಲಗಳ ಪ್ರಕಾರ ದಕ್ಷಿಣ ಕನ್ನಡವನ್ನ ಪರಶುರಾಮ ಸೃಷ್ಟಿಸಿದ ಅನ್ನೋ ನಂಬಿಕೆ ಇದೆ. ಬೆಂಗಳೂರಿನ ನಂತರ ಅತ್ಯಂತ ವೇಗದಲ್ಲಿ ಅಭಿವೃದ್ಧಿ ಹೊಂದುತ್ತಿರೋ ನಗರ ದಕ್ಷಿಣ ಕನ್ನಡ. ತುಳು ಪ್ರಮುಖ ಭಾಷೆಯಾಗಿದ್ರೂ ಕನ್ನಡ, ಹವ್ಯಕ, ಕನ್ನಡ, ಮಲಯಾಳಂ, ಕುಂದಾಪುರ ಕನ್ನಡ, ಕೊಂಕಣಿ, ಬ್ಯಾರಿ ಭಾಷೆ ಮಾತನಾಡುವ ಜನರ ಸಾಮರಸ್ಯ ಸಂಗಮ.

    ಇಲ್ಲಿನ ಕಲ್ಲು ಕಲ್ಲು ಹೇಳುತ್ತೆ ಕ್ಷೇತ್ರ ಮಹಿಮೆಯನ್ನ..!
    ಧರ್ಮಸ್ಥಳದ ಶ್ರೀ ಮಂಜುನಾಥ ಕ್ಷೇತ್ರ, ಕದ್ರಿ ಮಂಜುನಾಥೇಶ್ವರ ದೇಗುಲ, ಕುಕ್ಕೆ ಸುಬ್ರಹ್ಮಣ್ಯ, ಕಾರ್ಕಳದ ಗೋಮಟೇಶ್ವರ ಬೆಟ್ಟ ಮತ್ತು ಚತುರ್ಮುಖ ಬಸದಿ, ಮೂಡಬಿದಿರೆಯ ಸಾವಿರ ಕಂಬದ ಬಸದಿ, ಅತ್ತೂರು ಸೇಂಟ್ ಲಾರೆನ್ಸ್ ಚರ್ಚ್, ಪುತ್ತೂರಿನ ಮಹಾಲಿಂಗೇಶ್ವರ ಮತ್ತು ದರ್ಗಾ ಶರೀಫ್ ಮಾಡನ್ನೂರು ಹೀಗೆ ಅನೇಕ ಧಾರ್ಮಿಕ ಪ್ರೇಕ್ಷಣೀಯ ಸ್ಥಳಗಳಿವೆ. ಒಂದರ್ಥದಲ್ಲಿ ದಕ್ಷಿಣ ಕನ್ನಡ ಧಾರ್ಮಿಕ ನೆಲೆಬೀಡು. ಇಂತಿಪ್ಪ ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ಚುನಾವಣೆಯಿಂದಾಗಿ ಮತ್ತಷ್ಟು ಕಲರ್ ಫುಲ್ ಆಗಿದೆ.

    ಕಣ್ಣುಗಳೆರಡು ಸಾಲದು ಕಡಲನಗರಿಯನ್ನ ತುಂಬಿಕೊಳ್ಳಲು..!
    ಕಣ್ಣು ಹಾಯಿಸಿದಷ್ಟೂ ದೂರ, ಆಕಾಶ ಭೂಮಿಗಳ ಸಮಾಗಮದಂತೆ ಕಾಣುವ ನಯನ ಮನೋಹರ ಕಡಲ ತಡಿಗಳೇ ದಕ್ಷಿಣ ಕನ್ನಡದ ಜಿಲ್ಲೆಯ ಪ್ರಮುಖ ಆಕರ್ಷಣೆ. ಪಣಂಬೂರು ಬೀಚ್, ತಣ್ಣೀರು ಬಾವಿ ಬೀಚ್, ಪಿಲಿಕುಳ, ಕುಮಾರ ಪರ್ವತ, ಜಮಾಲಾಬಾದ್ ಕೋಟೆ ಹೀಗೆ ಸಾಕಷ್ಟು ತಾಣಗಳು ಪ್ರವಾಸಿಗರ ಹಾಟ್ ಫೇವರೇಟ್.

    ಚೆಂಡೆ ಪೆಟ್ಟಿಗೆ ಕುಣಿಯೋ ವಿಶಿಷ್ಟ ಗಂಡು ಕಲೆ ಯಕ್ಷಗಾನ
    ಯಕ್ಷಗಾನ ಕರಾವಳಿಯ ಗಂಡು ಕಲೆ ಅಂತಾನೇ ಪ್ರಸಿದ್ಧ. ಹಿಂದೆಲ್ಲಾ ಈ ಕಲೆ ದೊಂದಿ ಬೆಳಕಿನ ನಡುವೆ ಆಡಿಸ್ತಾ ಇದ್ರು. ಭಾಗವತಿಕೆ, ಮದ್ದಳೆ, ಚೆಂಡೆ, ಚಕ್ರತಾಳ, ಹಿಮ್ಮೇಳದಲ್ಲಿ ಹಾರ್ಮೋನಿಯಂ ಹೀಗೆ ಅವ್ರದ್ದೇ ಚೌಕಟ್ಟಿನಲ್ಲಿ ರಂಗ ಸ್ಥಳದಲ್ಲಿ ಕೂತ್ರೆ ಮುಮ್ಮೇಳದಲ್ಲಿ ಆಯಾ ಪಾತ್ರಧಾರಿಗಳು ಬಂದು ಪ್ರಸಂಗಕ್ಕೆ ತಕ್ಕ ಹಾಗೆ, ಅಭಿನಯಿಸ್ತಾರೆ. ಪೌರಾಣಿಕ ಕಥೆಗಳನ್ನು ಯಕ್ಷರಂಗದ ಮೇಲೆ ತಂದು ಜನರನ್ನ ರಂಜಿಸ್ತಾರೆ. ಯಕ್ಷಗಾನ ಕೇವಲ ಕಲೆ ಅನ್ನೋದಕ್ಕಿಂತ ಹೆಚ್ಚಾಗಿ ಅದು ಸಂಸ್ಕೃತಿಯ ಭಾಗವಾಗಿ ಕರಾವಳಿಯ ಜನರ ಜೀವನಾಡಿಯಾಗಿದೆ.

    ಬಂಗುಡೆ ಗಸಿ ಜೊತೆ ನೀರು ದೋಸೆ ಸೂಪರ್ರೋ ಸೂಪರ್
    ಆಯಾ ಪ್ರಾಂತ್ಯಗಳಿಗೆ ಅನುಗುಣವಾಗಿ ಭಾಷೆ, ಜನರ ಜೀವನ ಶೈಲಿಯ ಜೊತೆಗೆ ಖಾದ್ಯವೂ ಬದಲಾಗುತ್ತೆ. ಒಮ್ಮೆ ನೀವು ದಕ್ಷಿಣ ಕನ್ನಡ ಜಿಲ್ಲೆಗೆ ಬಂದು ನೀರ್ ದೋಸೆ, ಬಂಗುಡೆ ಗಸಿ, ಪತ್ರೊಡೆ (ಕೆಸುವಿನ ಎಲೆಯಲ್ಲಿ ಮಾಡೋ ಖಾದ್ಯ), ಮಂಗಳೂರು ಶೈಲಿಯ ಚಿಕನ್ ಸುಕ್ಕಾ, ಪುಂಡಿ (ಅಕ್ಕಿಯಲ್ಲಿ ಮಾಡೋ ಖಾದ್ಯ), ಕಣಿಲೆ ಉಪ್ಪಿನಕಾಯಿ, ಉಪ್ಪಡ್ ಪಚ್ಚಿಲ್ ರೊಟ್ಟಿ ಅಥವಾ ಪಲ್ಯ ( ಹಲಸಿನ ಖಾದ್ಯ) ಸವಿದಿಲ್ಲ ಅಂದ್ರೆ ಜೀವನವೇ ವ್ಯರ್ಥ. ಇವಿಷ್ಟು ದಕ್ಷಿಣ ಕನ್ನಡ ಜಿಲ್ಲೆಯ ಬಗೆಗಿನ ವೈವಿಧ್ಯಮಯ ವಿಷಯಗಳಾಗಿದ್ರೆ, ಇಷ್ಟೇ ಕಲರ್ಫುಲ್ಲಾಗಿದೆ ಇಲ್ಲಿನ ರಾಜಕೀಯ ಚಿತ್ರಣ.

    ಬಿರು ಬೇಸಿಗೆಯ ತಾಪ ಹೆಚ್ಚಿಸಲಿದೆ ದಕ್ಕಣ ರಾಜಕಾರಣ..!
    ಸದ್ಯಕ್ಕೆ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭದ್ರವಾಗಿ ಕೂತು ಬಿಟ್ಟಿದೆ. ಹಾಗಾಗಿ ಕಾಂಗ್ರೆಸ್ ಗೆ ದಕ್ಷಿಣ ಕನ್ನಡ ಜಿಲ್ಲೆ ಆಶಾಕಿರಣವಾಗಿರೋದ್ರಲ್ಲಿ ನೋ ಡೌಟ್. 2013ರ ಹೀನಾಯ ಸೋಲಿನಿಂದ ಪಾಠ ಕಲಿತಿರುವ ಬಿಜೆಪಿ ಇಲ್ಲಿ ತನ್ನ ಸಾಮ್ರಾಜ್ಯ ವಿಸ್ತರಣೆಗೆ ಇನ್ನಿಲ್ಲದಂತೆ ಕಸರತ್ತು ನಡೆಸಿದೆ. ಕಾಂಗ್ರೆಸ್ ಬಿಜೆಪಿ ಜಿದ್ದಾಜಿದ್ದಿನ ನಡುವೆ ಜೆಡಿಎಸ್, ಎಸ್ ಡಿಪಿಐ ಸ್ಪರ್ಧೆ ಆಟಕ್ಕುಂಟು ಲೆಕ್ಕಕ್ಕಿಲ್ಲ ಅನ್ನೋ ಪರಿಸ್ಥಿತಿ ಇದೆ.

    ಬಂಟ್ವಾಳದ ಬಂಟ ರಮಾನಾಥ್ ರೈ ನಡೆದದ್ದೇ ಹಾದಿ..!
    ಡಬಲ್ ಹ್ಯಾಟ್ರಿಕ್ ಗೆಲುವು ಕಂಡಿರುವ ರಮಾನಾಥ ರೈ ಸೋಲಿಲ್ಲದ ಸರದಾರನಾಗಿದ್ದಾರೆ. ಕೋಮು ರಾಜಕಾರಣದಿಂದ ಸದಾ ಕುದಿಯುವ ಕಲ್ಲಡ್ಕ, ರಮಾನಾಥ ರೈಯವರಿಗೆ ಸೆರಗಿನಲ್ಲಿಟ್ಟುಕೊಂಡ ಕೆಂಡ. ಹಾಲಿ ಉಸ್ತುವಾರಿ ಸಚಿವರ ವಿರುದ್ಧವೇ ಉರಿದು ಬಿದ್ದಿರುವ ಸಂಘ ಪರಿವಾರ ಹಾಗೂ ಬಿಜೆಪಿಗೆ ರೈ ಮೇನ್ ಟಾರ್ಗೆಟ್. ರಮಾನಾಥ್ ರೈ ವಿರುದ್ಧ ಕಳೆದ ಬಾರಿ ಸೋತಿದ್ದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಈ ಬಾರಿ ಕೂಡಾ ಬಿಜೆಪಿಯ ಹುರಿಯಾಳು. ಆದ್ರೆ, ರಮಾನಾಥ್ ರೈಗೆ ಇರೋ ಪ್ರಭಾವದ ಮುಂದೆ ರಾಜೇಶ್ ನಾಯ್ಕ್ ಗೆಲ್ತಾರಾ ಅನ್ನೋದೇ ಸದ್ಯದ ಪ್ರಶ್ನೆ. ಕಳೆದ ಬಾರಿ ರಮಾನಾಥ ರೈ 81,665 ಮತಗಳನ್ನು ಪಡೆದು ಜಯ ಗಳಿಸಿದ್ರು. ರಾಜೇಶ್ ನಾಯ್ಕ್ 63,815 ಜನ ಓಟ್ ಹಾಕಿದ್ರೆ, ಜೆಡಿಎಸ್‍ನ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ 1,927 ಮತಗಳಿಗೆ ತೃಪ್ತಿ ಪಟ್ಕೋಬೇಕಾಯ್ತು.

    ಮಂಗಳೂರಲ್ಲಿ ಈ ಬಾರಿ ಯಾರ `ಖದರ್’..?
    ಮಂಗಳೂರು ಕ್ಷೇತ್ರದ ಕಾಂಗ್ರೆಸ್ ಪ್ರಭಾವಿ ನಾಯಕ ಯುಟಿ ಖಾದರ್ ಖದರ್ ಜೋರಾಗೇ ಇತ್ತು. ಇಡೀ ದಕ್ಷಿಣ ಕನ್ನಡದಲ್ಲೇ ಕಾಂಗ್ರೆಸ್ ಗೆ ಅತ್ಯಂತ ಸೇಫೆಸ್ಟ್ ಜಾಗ ಅಂದ್ರೆ ಅದು ಮಂಗಳೂರು. ಇಲ್ಲಿ ಅಲ್ಪಸಂಖ್ಯಾತರೇ ನಿರ್ಣಾಯಕರಾಗಿರೋದ್ರಿಂದ ಯುಟಿ ಖಾದರ್ ಸದ್ಯದ ಮಟ್ಟಿಗೆ ಸೇಫ್ ಗೇಮ್ ಆಡ್ತಿದ್ದಾರೆ. ಎರಡೂವರೆ ದಶಕಗಳ ಹಿಂದೆ ಒಮ್ಮೆ ಮಾತ್ರ ಬಿಜೆಪಿ ಗೆಲುವಿನ ರುಚಿ ಕಂಡಿತ್ತು. ಇನ್ನು, ಕಳೆದ ಚುನಾವಣೆಯಲ್ಲಿ ಬಿಜೆಪಿಯ ಚಂದ್ರಹಾಸ್ ಉಳ್ಳಾಲ್ ಎದುರು ಯು.ಟಿ.ಖಾದರ್ 29,111 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ರು. ಕ್ಷೇತ್ರದ ಜನರ ಜೊತೆ ಯುಟಿ ಖಾದರ್ ಕುಟುಂಬದ ಒಡನಾಟ ಸಾಕಷ್ಟು ಹಳೇದು. ಖಾದರ್ ತಂದೆ ಯು.ಟಿ ಫರೀದ್ 1972, 1978, 1999 ಮತ್ತು 2004ರಲ್ಲಿ ಗೆಲುವು ಕಂಡಿದ್ರು. ಬಿಜೆಪಿ ಈಗಾಗ್ಲೇ ತನ್ನ ಕದನ ಕಲಿ ಸಂತೋಷ್ ಕುಮಾರ್ ಬೋಳಿಯಾರ್ ಅಂತಾ ಘೋಷಿಸಿದ್ದು ಚುನಾವಣೆ ಕುತೂಹಲ ಕೆರಳಿಸಿದೆ. ಜಿಲ್ಲಾಪಂಚಾಯತ್, ಗ್ರಾಮ ಪಂಚಾಯತ್ ಗಳಲ್ಲಿ ಕೆಲಸ ಮಾಡಿ ಜನರ ನಡುವೆ ಕೆಲಸ ಮಾಡಿರೋ ಬೋಳಿಯಾರ್ ಅಬ್ಬಕ್ಕನ ನಾಡಲ್ಲಿ ಜಯದ ಕೇಕೆ ಹಾಕ್ತಾರಾ ಅನ್ನೋದಕ್ಕೆ ಕಾಲವೇ ಉತ್ತರ ಹೇಳ್ಬೇಕಿದೆ.

    ಮೂಡಬಿದರೆಯಲ್ಲಿ ಯಾರಾಗ್ತಾರೆ ಗೆಲ್ಲೋ ಕುದುರೆ..?
    ಜೈನ ಕಾಶಿ ಮೂಡಬಿದಿರೆಯ ರಾಜಕೀಯ ಜಾತಿಯ ಮೇಲೆ ಆಧರಿತವಾಗಿಲ್ಲ. ಮಾಜಿ ಸಚಿವ ಹಾಲಿ ಶಾಸಕರಾಗಿರೋ ಅಭಯಚಂದ್ರ ಜೈನ್ ಗೆ ಪಕ್ಷ ಹಾಗೂ ವೈಯಕ್ತಿಕ ಪ್ರಭಾವವೇ ಪ್ಲಸ್ ಪಾಯಿಂಟ್. 2013ರಲ್ಲಿ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ ಅಭಯ ಚಂದ್ರ ಜೈನ್ 53180 ಮತಗಳನ್ನು ಪಡೆದು ಗೆದ್ದು ಶಾಸಕರಾದ್ರು. ಬಿಜೆಪಿಯ ಉಮಾನಾಥ್ ಕೋಟ್ಯಾನ್ 48630 ಮತಗಳನ್ನು ಪಡೆದು 4550 ಮತಗಳ ಅಂತರದಿಂದ ಸೋತ್ರು. ಇನ್ನುಳಿದಂತೆ ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಅಮರನಾಥ್ ಶೆಟ್ಟಿ 20471 ಮತಗಳನ್ನು ಪಡೆದ್ರು. ಒಂದು ಬಾರಿ ಜೆಡಿಎಸ್ ಇಲ್ಲಿ ಗೆದ್ದಿದ್ದು ಬಿಟ್ರೆ ಕಾಂಗ್ರೆಸ್ ಹಾಗೂ ಬಿಜೆಪಿಗೇ ಇಲ್ಲಿ ಸಾಕಷ್ಟು ಫೈಟ್ ಇದೆ. ಅಂದ ಹಾಗೆ, ಈ ಬಾರಿ ಬಿಜೆಪಿಯಿಂದ ಮತ್ತೆ ಉಮಾನಾಥ್ ಕೋಟ್ಯಾನ್ ಹೆಸ್ರು ಫೈನಲೈಸ್ ಆಗಿದೆ.

    ಚುನಾವಣಾ ಕಾವಿಗೆ ತತ್ತರವಾಯ್ತು ಮಂಗಳೂರು ಉತ್ತರ !
    ಹಾಲಿ ಶಾಸಕ ಮೊಯಿದ್ದೀನ್ ಬಾವಾ ಈ ಬಾರಿ ಕೂಡಾ ಕಾಂಗ್ರೆಸ್ ನಿಂದ ಟಿಕೆಟ್ ಪಡೆದು ಅಂತಿಮ ಹಣಾಹಣಿಯಲ್ಲಿದ್ದಾರೆ. 2013ರ ಚುನಾವಣೆಯಲ್ಲಿ ಬಿಜೆಪಿಯ ಪಾಲೆಮಾರ್ ಅವರನ್ನು ಸೋಲಿಸೋ ಮೂಲಕ ಎಲ್ಲರ ಹುಬ್ಬೇರಿಸಿದ್ರು ಬಾವಾ. ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ಕೃಷ್ಣ ಪಾಲೇಮಾರ್ ಆಸೆಗೆ ತಣ್ಣೀರೆರಚಿದ್ದು ಇದೇ ಮೊಯಿದ್ದೀನ್ ಬಾವಾ. ಈ ಬಾರಿ ಬಿಜೆಪಿ ಕೃಷ್ಣ ಪಾಲೇಮಾರ್ ಗೆ ಟಿಕೆಟ್ ಕೊಡೋ ನಿರೀಕ್ಷೆ ಇತ್ತು. ಆದ್ರೆ,ಎಲ್ಲರಿಗಿಂತ ಮೊದಲೇ ಸಿಪಿಐಎಂನಿಂದ ಮುನೀರ್ ಕಾಟಿಪಳ್ಳ ಕ್ಯಾಂಪೇನ್ ನಲ್ಲಿ ಬ್ಯುಸಿಯಾಗಿದ್ದಾರೆ. ಅತ್ಯಂತ ಸೂಕ್ಷ್ಮ ಪ್ರದೇಶ ಅಂತಾ ಚುನಾವಣಾ ಆಯೋಗ ಈ ಕ್ಷೇತ್ರವನ್ನ ಗುರುತಿಸಿದೆ. ಕಳೆದ ಬಾರಿ ಮೊಯಿದ್ದೀನ್ ಬಾವಾ ಅವರ ಎದುರು 5,373 ಮತಗಳ ಅಂತರದಿಂದ ಪರಾಭವಗೊಂಡಿದ್ದ ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ಈ ಬಾರಿ ಟಿಕೆಟ್ ಆಕಾಂಕ್ಷಿಯಾಗಿದ್ರು. ಆದ್ರೆ, ಬಿಜೆಪಿ ಉತ್ತರವಲಯದ ಅಧ್ಯಕ್ಷ ಡಾ. ಭರತ್ ಶೆಟ್ಟಿ ಅಂತಿಮವಾಗಿ ಟಿಕೆಟನ್ನ ತಮ್ಮದಾಗಿಸಿಕೊಂಡಿದ್ದಾರೆ. ಇಲ್ಲಿ ಜೆಡಿಎಸ್ ಅಷ್ಟೊಂದು ಪ್ರಾಮುಖ್ಯತೆ ಗಳಿಸಿಲ್ಲ.

    ಸುಳ್ಯದ ಬಂಗಾರ ಶಾಸಕ ಅಂಗಾರ
    ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ವಶದಲ್ಲಿರುವ ಏಕೈಕ ಕ್ಷೇತ್ರ ಸುಳ್ಯ. ಎರಡೂವರೆ ದಶಕಗಳಿಂದಲೂ ಇಲ್ಲಿ ಹಾಲಿ ಶಾಸಕ ಎಸ್ ಅಂಗಾರರ ಅಶ್ವಮೇಧ ಕುದುರೆಯನ್ನ ಕಟ್ಟಿ ಹಾಕೋದಕ್ಕೆ ಯಾರಿಂದಲೂ ಸಾಧ್ಯವಾಗಿಲ್ಲ. 2013ರಲ್ಲಿ ದಕ್ಷಿಣ ಕನ್ನಡದ ಎಲ್ಲಾ ಕ್ಷೇತ್ರಗಳನ್ನು ಬಿಜೆಪಿ ಸೋತಿದ್ದಾಗ್ಲೂ ಜಿಲ್ಲೆಯಲ್ಲಿ ಬಿಜೆಪಿಗೆ ಆಸರೆಯಾದ ಏಕೈಕ ಕ್ಷೇತ್ರ ಅಂದ್ರೆ ಅದು ಸುಳ್ಯ. ಆದ್ರೆ, ಮತಗಳು ಕುಸಿತ ಕಂಡಿದ್ರೂ ಅಂಗಾರ ಮಾತ್ರ ಸೋಲೇ ಇಲ್ಲದ ಸರದಾರನಂತೆ ಮುನ್ನುಗ್ಗುತ್ತಿದ್ದಾರೆ. ಕಳೆದ ಬಾರಿ ಕೇವಲ ಒಂದೂವರೆ ಸಾವಿರದಷ್ಟು ಮತಗಳ ಅಂತರದಲ್ಲಿ ಸೋತಿದ್ದ ಡಾ ಬಿ ರಘು ಈ ಬಾರಿಯೂ ಕಾಂಗ್ರೆಸ್ ನಿಂದ ಕಣದಲ್ಲಿದ್ದಾರೆ. ಉಳಿದಂತೆ ಇಲ್ಲಿ ಯಾವ ಪಕ್ಷವೂ ನಿರ್ಣಾಯಕವಲ್ಲ.

    ಮಂಗಳೂರು ದಕ್ಷಿಣದಲ್ಲಿ ರಂಗೇರಿದೆ ರಣಕಣ
    ಮಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿಗೆ ಸರಿಯಾಗೇ ಮಣ್ಣು ಮುಕ್ಕಿಸಿದ್ದ ಕ್ಷೇತ್ರ. ಸತತ ನಾಲ್ಕು ಬಾರಿ ಗೆದ್ದು ಬೀಗಿದ್ದ ಯೋಗೀಶ ಭಟ್ ರಿಗೆ ಕಾಂಗ್ರೆಸ್ ನ ಜೆ ಆರ್ ಲೋಬೋ ಕೊಟ್ಟ ಹೊಡೆತಕ್ಕೆ ಬಿಜೆಪಿ ತತ್ತರಿಸಿ ಹೋಗಿತ್ತು. ಹಾಲಿ ಶಾಸಕ ಲೋಬೋ ಬಗ್ಗೆ ಕ್ಷೇತ್ರದಲ್ಲಿ ಯಾವುದೇ ತಕರಾರಿಲ್ಲ. ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಸ್ಪರ್ಧೆಗೆ ಇದೆ ಅನ್ನೋದು ಬಿಟ್ರೆ ಕಳೆದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಎಸ್.ಪಿ.ಚಂಗಪ್ಪ ಕೇವಲ 1672 ಮತಗಳನ್ನಷ್ಟೇ ಗಳಿಸಿದ್ರು. ಕುತೂಹಲ ಮೂಡಿಸಿದ್ದ ಬಿಜೆಪಿ ಟಿಕೆಟ್ ಪಟ್ಟಿಯಲ್ಲಿ ಅಂತಿಮವಾಗಿ ಉದ್ಯಮಿ ವೇದವ್ಯಾಸ ಕಾಮತ್ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಹಾಗಾಗಿ, ಈ ಬಾರಿ ರಣಕಣ ಮತ್ತಷ್ಟು ಕಾವು ಪಡೆದುಕೊಳ್ಳೋದ್ರಲ್ಲಿ ಯಾವ ಅನುಮಾನಾನೂ ಇಲ್ಲ.

    ಬೆಳ್ತಂಗಡಿಯಲ್ಲಿ ಬಂಗೇರರಿಗೆ ಠಕ್ಕರ್ ಕೊಡೋರು ಯಾರಣ್ಣ..?
    ಬೆಳ್ತಂಗಡಿಯಲ್ಲಿ ಕಳೆದ ಐದು ಅವಧಿಯಿಂದಲೂ ಶಾಸಕರಾಗಿರೋ ವಸಂತ ಬಂಗೇರರಿಗೆ ಠಕ್ಕರ್ ಕೊಡೋರು ಯಾರು ಅನ್ನೋದೇ ಬಿಜೆಪಿಯ ತಲೆ ನೋವು. ಆದ್ರೆ, ಇಲ್ಲಿ ಯಾವತ್ತೂ ಒಂದೇ ಪಕ್ಷ ಹಿಡಿತ ಸಾಧಿಸಿದ ಉದಾಹರಣೆ ಇಲ್ಲ. ಬಿಲ್ಲವ ಹಾಗೂ ಗೌಡರೇ ಚುನಾವಣೆಯಲ್ಲಿ ನಿರ್ಣಾಯಕ. 1983 ಮತ್ತು 1985ರಲ್ಲಿ ವಸಂತ ಬಂಗೇರರು ಬಿಜೆಪಿ ಪಾಳಯದಲ್ಲಿದ್ರು. 2013ರಲ್ಲಿ ಇವ್ರ ಪ್ರಬಲ ಪ್ರತಿಸ್ಫರ್ಧಿ ಅಂತಾ ಬಿಜೆಪಿ ರಂಜನ್ ಗೌಡರನ್ನ ಕಣಕ್ಕಿಳಿಸಿತ್ತು. ಆದ್ರೆ, 16000 ಮತಗಳ ಭಾರೀ ಅಂತರದಲ್ಲಿ ರಂಜನ್ ಸೋಲನ್ನಪ್ಪಿದ್ರು. ಬೆಳ್ತಂಗಡಿ ಕ್ಷೇತ್ರದ ಮೇಲೆ ವಸಂತ ಬಂಗೇರರ ಹಿಡಿತ ಎಷ್ಟಿದೆ ಅನ್ನೋದಕ್ಕೆ ಮೂರು ಬೇರೆ ಬೇರೆ ಪಕ್ಷಗಳಿಂದ ಅವರು 5 ಬಾರಿ ಗೆದ್ದಿದ್ದೇ ಸಾಕ್ಷಿ. ಇನ್ನು ಈ ಬಾರಿಯೂ ರಂಜನ್ ಜಿ. ಗೌಡ ಟಿಕೆಟ್ ಬಯಸಿದ್ರೂ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಹರೀಶ್ ಪೂಂಜ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಸಕ್ಸಸ್ ಆಗಿದ್ದಾರೆ.

    ಪುತ್ತೂರಿನ ಮುತ್ತು ಶಕ್ಕು ಅಕ್ಕನ ತಾಕತ್ತು!
    ಪುತ್ತೂರು ಕ್ಷೇತ್ರದಲ್ಲಿ ಶಕ್ಕು ಅಕ್ಕನದ್ದೇ ದರ್ಬಾರ್ ಜೋರಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ನಲ್ಲಿ ಬಂಡಾಯದ ಸ್ಪೋಟವಾಗಿದೆ. ಉರಿಮಜಲು ರಾಮಭಟ್ ರಿಂದ ರಾಜಕೀಯ ಪಟ್ಟುಗಳನ್ನ ಕಲಿತ ಶಕುಂತಳಾ ಶೆಟ್ಟಿ ನಂತರ ಕಾಂಗ್ರೆಸ್ ಕದ ತಟ್ಟಿದ್ದು ಇತಿಹಾಸ. 20 ವರ್ಷಗಳಿಂದ ಬಿಜೆಪಿ ಭದ್ರ ಕೋಟೆಯಾಗಿತ್ತು ಪುತ್ತೂರು. ಆದ್ರೆ, ಅದೇ ಬಿಜೆಪಿ ಬಿಟ್ಟು ಶಕುಂತಳಾ ಶೆಟ್ಟಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದಾಗ ಛಿದ್ರ ಛಿದ್ರವಾಯ್ತು. ಶಕ್ಕು ಅಕ್ಕನ ಕೈಬಿಡದ ಪುತ್ತೂರಿನ ಜನ 66,345 ಮತಗಳನ್ನು ಧಾರೆ ಎರೆದ್ರು. ಈ ಮೂಲಕ ಬಿಜೆಪಿ ವಿರುದ್ಧ ಟಿಕೆಟ್ ಕೈತಪ್ಪಿದ ಸೇಡು ತೀರಿಸಿಕೊಂಡು ಹೆಣ್ಣು ಮುನಿದರೆ ಮಾರಿ ಅನ್ನೋದನ್ನ ತೋರಿಸಿದ್ರು. ಈ ಬಾರಿಯೂ ಬಿಜೆಪಿಯಿಂದ ಸಂಜೀವ ಮಠಂದೂರು ಕಣಕ್ಕಿಳಿಯೋ ಹುರಿಯಾಳು.

  • ಪುತ್ತೂರಿನಲ್ಲಿ ಮಣ್ಣಿನ ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಸಾವು

    ಪುತ್ತೂರಿನಲ್ಲಿ ಮಣ್ಣಿನ ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಸಾವು

    ಮಂಗಳೂರು: ಇಂದು ಬೆಳಿಗ್ಗೆ ಆರು ಜನ ಕಟ್ಟಡ ಕಾರ್ಮಿಕರ ಮೇಲೆ ಪಕ್ಕದ ಮಣ್ಣಿನ ಗುಡ್ಡೆ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ಪುತ್ತೂರು ನಗರದ ನೆಲ್ಲಿಕಟ್ಟೆ ಬಳಿ ನಡೆದಿದೆ.

    ಕಟ್ಟಡ ಕಾರ್ಮಿಕರು 30 ಅಡಿ ಆಳದಲ್ಲಿ ಕೆಲಸ ಮಾಡುತ್ತಿದ್ದಾಗ ಪಕ್ಕದ ಮಣ್ಣಿನ ಗುಡ್ಡೆ ಕುಸಿದು ನಾಲ್ಕು ಜನ ಮಣ್ಣಿನ ಅಡಿಯಲ್ಲಿ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ಸ್ಥಳೀಯರ ಸಹಕಾರ ಹಾಗೂ ಅಗ್ನಿಶಾಮಕ, ತುರ್ತು ಸೇವೆ ಸಿಬ್ಬಂದಿ ಸಹಾಯದಿಂದ ಮಣ್ಣಿನ ಅಡಿ ಸಿಲಿಕಿದ್ದ ಇಬ್ಬರು ಕಾರ್ಮಿಕರನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಜಲ್ಲಿಗುಡ್ಡೆಯ ಪದ್ಮನಾಭ(35), ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಅಡವಿಬಾವಿ ಗ್ರಾಮದ ಶಿವು ಅಲಿಯಾಸ್ ಶಿವಣ್ಣ(40) ಮೃತಪಟ್ಟವರು. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಮಹಾಂತೇಶ್ ಮತ್ತು ಯಶವಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೆ, ನಿರ್ಲಕ್ಷದಿಂದ ಕಟ್ಟಡ ನಿರ್ಮಾಣ ಮಾಡುತ್ತಿದ್ದ ಪರಿಣಾಮ ಈ ಘಟನೆ ಸಂಭವಿಸಿದೆ.