Tag: Queen

  • ಸುಮಲತಾಗೆ ‘ಬ್ಯೂಟಿ ಕ್ವೀನ್’ ಕಿರೀಟ ಹಾಕಿದ್ದರು ಜಮುನಾ

    ಸುಮಲತಾಗೆ ‘ಬ್ಯೂಟಿ ಕ್ವೀನ್’ ಕಿರೀಟ ಹಾಕಿದ್ದರು ಜಮುನಾ

    ಭಾರತೀಯ ಸಿನಿಮಾ ರಂಗದ ಹಿರಿಯ ನಟಿ ಜಮುನಾ (Jamuna) ನಿಧನದ ಹಿನ್ನೆಲೆಯಲ್ಲಿ ಅವರ ಜೊತೆಗಿನ ಒಡನಾಟವನ್ನು ಹಂಚಿಕೊಂಡಿದ್ದಾರೆ ನಟಿ ಸುಮಲತಾ ಅಂಬರೀಶ್ (Sumalatha Ambarish). 43 ವರ್ಷಗಳ ಹಿಂದಿನ ಘಟನೆಯನ್ನು ನೆನಪಿಸಿಕೊಂಡಿರುವ ಅವರು ತಮ್ಮ 15ನೇ ವಯಸ್ಸಿನಲ್ಲಿ ‘ಬ್ಯೂಟಿ ಕ್ವೀನ್’ ಕಿರೀಟ ಧರಿಸಿದಾಗ, ಅದನ್ನು ಜಮುನಾ ಅವರೇ ಹಾಕಿದ್ದರು ಮತ್ತು ತಮಗೆ ಉತ್ತಮ ಭವಿಷ್ಯವಿದೆ ಎಂದು ನುಡಿದಿದ್ದರು ಎನ್ನುವುದನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ಫೇಸ್ ಬುಕ್ ನಲ್ಲಿ ಸಂತಾಪಗಳನ್ನು ಹಂಚಿಕೊಂಡಿರುವ ಸುಮಲತಾ ಅಂಬರೀಶ್, ‘ಬಹುಭಾಷಾ ನಟಿ ಜಮುನಾ ಅವರು ಅಗಲಿದ ಸುದ್ದಿ ಅತೀವ ದುಃಖವನ್ನು ತಂದಿದೆ. ಕನ್ನಡವೂ ಸೇರಿದಂತೆ ಅವರು ಹಲವು ಭಾಷೆಗಳಲ್ಲಿ ನಟಿಸಿದ ಮೇರುತಾರೆ. ನಟಿಯಾಗಿ, ರಾಜಕಾರಣಿಯಾಗಿ ಅವರು ಈ ನೆಲಕ್ಕೆ ಕೊಟ್ಟಿರುವ ಕೊಡುವೆ ಅಪಾರ. ತಾಯಿಗುಣದ ಜಮುನಾ ಅವರ ನಿಧನಕ್ಕೆ ನನ್ನ ಸಂತಾಪಗಳು. ಅವರ ಸಿನಿಮಾ ಮತ್ತು ಸಮಾಜಮುಖಿ ಕೆಲಸಗಳು ಯಾವತ್ತಿಗೂ ಜೀವಂತ. ಜಮುನಾ ಅವರ ಜೊತೆ ನನಗೆ ತೀರಾ ಆತ್ಮೀಯ ಬಾಂಧವ್ಯವಿತ್ತು. 43 ವರ್ಷಗಳ ಹಿಂದೆ ಆಗ ನನಗೆ 15 ವರ್ಷ. ಅವರು ನನಗೆ ಬ್ಯೂಟಿ ಕ್ವೀನ್ ಕಿರೀಟ ತೊಡಿಸಿ ಹಾರೈಸಿದ್ದರು. ನಿನಗೆ ಒಳ್ಳೆಯ ಭವಿಷ್ಯವಿದೆ ಎಂದು ನನ್ನ ಜೀವನದ ಬಗ್ಗೆ ಭವಿಷ್ಯ ನುಡಿದ ಮೊದಲ ನಟಿ ಅವರಾಗಿದ್ದರು’ ಎಂದು ಬರೆದುಕೊಂಡಿದ್ದಾರೆ.

    ಕನ್ನಡದಲ್ಲಿ ಭೂಕೈಲಾಸ, ಸಾಕ್ಷಾತ್ಕಾರ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಬಹುಭಾಷಾ ನಟಿ ಜಮುನಾ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. 86ರ ವಯಸ್ಸಿನ ಹಿರಿಯ ನಟಿ ಹೈದರಾಬಾದ್ ನಲ್ಲಿ ನೆಲೆಸಿದ್ದರು. ವಯೋಸಹಜ ಕಾಯಿಲೆಗಳು ಅವರನ್ನು ಹೈರಾಣು ಮಾಡಿದ್ದವು. ಚಿಕಿತ್ಸೆ ಫಲಕಾರಿಯಾಗದೇ ಹೈದರಾಬಾದ್ ನಿವಾಸದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ನಟ ಭಯಂಕರ: ಮೊದಲು ಟ್ರೈಲರ್ ನೋಡಿ, ಆನಂತರ ಸಿನಿಮಾ ನೋಡ್ಬೇಕೋ ಬೇಡ್ವೊ ಡಿಸೈಡ್ ಮಾಡಿ

    1953ರಲ್ಲಿ ತೆರೆಕಂಡ ಪುಟ್ಟಿಲ್ಲು ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪ್ರವೇಶ ಮಾಡಿದವರು ಜಮುನಾ.  ಆನಂತರ ತೆಲುಗು, ತಮಿಳು, ಹಿಂದಿ, ಕನ್ನಡ ಹೀಗೆ ನಾನಾ ಭಾಷೆಯ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ದಕ್ಷಿಣದ ಅಷ್ಟೂ ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು. ಕನ್ನಡದಲ್ಲಿ ಡಾ.ರಾಜ್ ಕುಮಾರ್ ಜೊತೆ ಭೂ ಕೈಲಾಸ ಮತ್ತು ಸಾಕ್ಷಾತ್ಕಾರ ಸಿನಿಮಾಗಳಲ್ಲೂ ಇವರು ನಟಿಸಿದ್ದಾರೆ.

    ರಂಗಭೂಮಿ ಹಿನ್ನೆಲೆಯಿಂದ ಬಂದಿದ್ದ ಜಮುನಾ, ಎನ್.ಟಿ.ಆರ್. ಜಗ್ಗಯ್ಯ ಸೇರಿದಂತೆ ಆ ಕಾಲದ ಸೂಪರ್ ಸ್ಟಾರ್ ಗಳ ಜೊತೆ ನಟಿಸಿದ್ದಾರೆ. 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಹೆಗ್ಗಳಿಕೆ ಇವರದ್ದು. ದೊಂಗ ರಾಮುಟು, ಗುಂಡಮ್ಮ ಕಥ, ತೆನಾಲಿ ರಾಮಕೃಷ್ಣ ಹೀಗೆ ಇವರ ನಟನೆಯ ಸೂಪರ್ ಹಿಟ್ ಚಿತ್ರಗಳು. ಪುಟ್ಟಣ್ಣ ಕಣಗಾಲ್ ನಿರ್ದೇಶನ ಚಿತ್ರಗಳಲ್ಲೂ ಇವರು ನಟಿಸಿದ್ದಾರೆ.

    ಸಿನಿಮಾಗಳಲ್ಲಿ ಮಾತ್ರವಲ್ಲ ರಾಜಕಾರಣದಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಜಮುನಾ, 1980ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದ ಅವರು 1989ರಲ್ಲಿ ರಾಜಮಂಡ್ರಿಗೆ ಎಂಪಿ ಆಗಿ ಆಯ್ಕೆಯಾದರು. 1990ರಲ್ಲಿ ಜನತಾ ಪಕ್ಷದ ಪರವಾಗಿಯೂ ಅವರು ಕೆಲಸ ಮಾಡಿದರು. ಸಿನಿಮಾ ಮತ್ತು ರಾಜಕಾರಣ ಎರಡರಲ್ಲೂ ಯಶಸ್ಸಿ ಕಂಡ ಹಿರಿಯ ಜೀವವಿದು. ನಟಿಯ ಅಗಲಿಕೆಗೆ ಚಿತ್ರೋದ್ಯಮ ಕಂಬಿನಿ ಮಿಡಿದಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜಪಾನ್ ನಲ್ಲಿ ಕುತ್ಕೊಂಡು ತನಗೀಗ 40 ವರ್ಷ ಎಂದು ಘೋಷಿಸಿಕೊಂಡ ರಮ್ಯಾ

    ಜಪಾನ್ ನಲ್ಲಿ ಕುತ್ಕೊಂಡು ತನಗೀಗ 40 ವರ್ಷ ಎಂದು ಘೋಷಿಸಿಕೊಂಡ ರಮ್ಯಾ

    ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಇಂದು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಬಾರಿ ಅವರು ಜಪಾನ್ ಗೆ ಹಾರಿದ್ದು, ಅಲ್ಲಿಂದಲೇ ವಯಸ್ಸಿನ ಮೇಘ ಸಂದೇಶವನ್ನೂ ಕಳುಹಿಸಿದ್ದಾರೆ. ಇವತ್ತು ತಮಗೀಗ 40 ವರ್ಷ ತುಂಬಿದ್ದು, ನಲವತ್ತರ ಕ್ಲಬ್ ನ ಸದಸ್ಯೆಯಾಗಿ ಬಡ್ತಿ ಪಡೆದಿದ್ದಾರೆ. ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಸ್ವತಃ ರಮ್ಯಾ ಅವರೇ ಹಂಚಿಕೊಂಡಿದ್ದಾರೆ.

    ರಮ್ಯಾ ಅವರಿಗೆ ಡಾಲಿ ಧನಂಜಯ್, ನಿರ್ಮಾಪಕ ಕಾರ್ತಿಕ್ ಗೌಡ ಸೇರಿದಂತೆ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರು ಶುಭಾಶಯ ಕೋರಿದ್ದಾರೆ. ಬಹುತೇಕ ಸಂದೇಶಗಳಿಗೆ ಅವರು ಪ್ರತಿಕ್ರಿಯೆ ಕೂಡ ನೀಡಿದ್ದಾರೆ.  ಈ ಹುಟ್ಟು ಹಬ್ಬಕ್ಕೆ ರಮ್ಯಾ ಅವರಿಗೆ ಡಬಲ್ ಧಮಾಕಾ. ಒಂದು ಕಡೆ ಅವರ ನಿರ್ಮಾಣ ಸಂಸ್ಥೆಯಿಂದ ಬರುತ್ತಿರುವ ಸಿನಿಮಾ ಶೂಟಿಂಗ್ ಮುಗಿಸಿದೆ. ಮತ್ತೊಂದು ಕಡೆ ಇನ್ನಷ್ಟೇ ಅವರ ನಟನೆಯ ಉತ್ತರ ಕಾಂಡ ಚಿತ್ರ ಶೂಟಿಂಗ್ ಆಗಬೇಕಿದೆ. ಹಾಗಾಗಿ ರಮ್ಯಾ ಅವರಿಗೆ ಈ ಹುಟ್ಟು ಹಬ್ಬ ವಿಶೇಷವಾಗಿದೆ. ಇದನ್ನೂ ಓದಿ: ಮಾಜಿ ಸಿಎಂ ಸಿದ್ದರಾಮಯ್ಯ ಬಯೋಪಿಕ್‌ನಲ್ಲಿ ತಮಿಳು ನಟ ವಿಜಯ್ ಸೇತುಪತಿ

    ರಮ್ಯಾ ಅವರ ಹುಟ್ಟು ಹಬ್ಬಕ್ಕೆ ಅವರ ಸಿನಿಮಾದ ಪೋಸ್ಟರ್ ಅಥವಾ ಉತ್ತರಕಾಂಡ ಸಿನಿಮಾದ ಫಸ್ಟ್ ಲುಕ್ ಏನಾದರೂ ರಿಲೀಸ್ ಆಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ರಮ್ಯಾ ಅವರು ಈ ದೇಶದಲ್ಲೇ ಇರದೇ ಇರುವ ಕಾರಣಕ್ಕಾಗಿ ಬಹುಶಃ ಬಿಡುಗಡೆ ಪ್ಲ್ಯಾನ್ ಮಾಡಿಲ್ಲ ಎಂದು ಹೇಳಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಎಲಿಜಬೆತ್-II ಅಂತ್ಯಕ್ರಿಯೆ ಹಿನ್ನೆಲೆ ಬ್ರಿಟನ್‍ಗೆ ತೆರಳಿದ ದ್ರೌಪದಿ ಮುರ್ಮು

    ಎಲಿಜಬೆತ್-II ಅಂತ್ಯಕ್ರಿಯೆ ಹಿನ್ನೆಲೆ ಬ್ರಿಟನ್‍ಗೆ ತೆರಳಿದ ದ್ರೌಪದಿ ಮುರ್ಮು

    ಲಂಡನ್: ಸೆಪ್ಟೆಂಬರ್ 19 ರಂದು ನಡೆಯಲಿರುವ ಬ್ರಿಟನ್ ರಾಣಿ ಎಲಿಜಬೆತ್-II (Elizabeth II) ಅಂತ್ಯಕ್ರಿಯೆಯಲ್ಲಿ (Funeral) ಭಾಗವಹಿಸಲು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು (Indian President Draupadi Murmu) ಇಂಗ್ಲೆಂಡ್‍ಗೆ ತೆರಳಿದ್ದಾರೆ.

    ಖಾಸಗಿ ವಿಮಾನದಲ್ಲಿ ಇಂಗ್ಲೆಂಡ್‍ಗೆ ತೆರಳಿದ್ದ ದ್ರೌಪದಿ ಮುರ್ಮು ಇಂದು ಮುಂಜಾನೆ ಲಂಡನ್‍ಗೆ ಬಂದಿಳಿದಿದ್ದು, ಭಾರತದ ಪರವಾಗಿ ರಾಜಮನೆತನಕ್ಕೆ ಸಂತಾಪ ಸೂಚಿಸಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ದ್ರೌಪದಿ ಮುರ್ಮು ಲಂಡನ್‍ನಲ್ಲಿ ರಾಣಿ ಎಲಿಜಬೆತ್-II ಅವರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದೇನೆ ಎಂದು ಪೋಸ್ಟ್ ಹಾಕಿಕೊಂಡಿದ್ದಾರೆ. ರಾಷ್ಟ್ರಪತಿ ಹುದ್ದೆ ಅಲಂಕರಿಸಿದ ಬಳಿಕ ದ್ರೌಪದಿ ಮುರ್ಮು ಕೈಗೊಳ್ಳುತ್ತಿರುವ ಮೊದಲ ವಿದೇಶಿ ಪ್ರವಾಸ ಇದಾಗಿದೆ. ಇದನ್ನೂ ಓದಿ: ಎಲಿಜಬೆತ್ ಅಂತಿಮ ದರ್ಶನಕ್ಕೆ ಚೀನಾ ನಿಯೋಗಕ್ಕಿಲ್ಲ ಅನುಮತಿ

    ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಬರುವ ಎಲ್ಲ ದೇಶಗಳ ಗಣ್ಯರು ಸರ್ಕಾರಿ ವಿಮಾನದ ಬದಲಾಗಿ ಖಾಸಗಿ ವಿಮಾನದಲ್ಲಿ ಬರಲು ಬ್ರಿಟನ್ ಅರಮನೆ ಮನವಿ ಮಾಡಿಕೊಂಡಿತ್ತು. ಹೀಗಾಗಿ ದ್ರೌಪದಿ ಮುರ್ಮು ಅವರು ಖಾಸಗಿ ವಿಮಾನದಲ್ಲಿ ಇಂಗ್ಲೆಂಡ್‍ಗೆ ತೆರಳಿದ್ದರು. ಇದನ್ನೂ ಓದಿ: ವಿಮ್ಸ್ ದುರಂತ: ಇಂದು ಸಚಿವ ಸುಧಾಕರ್ ಭೇಟಿ – ಕರೆಂಟ್ ಸಮಸ್ಯೆಯಿಂದ ಸಾವಾಗಿಲ್ಲ ಎಂದ ಶ್ರೀರಾಮುಲು

    ಸೆಪ್ಟೆಂಬರ್ 8 ರಂದು ಎಲಿಜಬೆತ್-II ವಯೋಸಹಜ ಕಾಯಿಲೆಯಿಂದಾಗಿ ಸ್ಕಾಟ್ಲೆಂಡ್ ಅರಮನೆಯಲ್ಲಿ ಕೊನೆಯುಸಿರೆಳೆದಿದ್ದರು. 96 ವರ್ಷದ ರಾಣಿ ಕಳೆದ ವರ್ಷ ಅಕ್ಟೋಬರ್‌ನಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. 1923ರಿಂದ ಬ್ರಿಟನ್ ರಾಣಿಯಾಗಿದ್ದರು. ರಾಣಿ ನಿಧನದ ಬಳಿಕ ಗಣ್ಯರು ಸಂತಾಪ ಸೂಚಿಸಿದ್ದರು. ರಾಣಿಯ ಗೌರವಾರ್ಥವಾಗಿ ಭಾರತವು ಸೆಪ್ಟೆಂಬರ್ 11 ರಂದು ರಾಷ್ಟ್ರೀಯ ಶೋಕಾಚರಣೆಯ ದಿನವನ್ನಾಗಿ ಘೋಷಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಎರಡೆರಡು ಸಿನಿಮಾಗಳ ಮೂಲಕ ಕಮ್ ಬ್ಯಾಕ್ ಆಗಿ ಕುತೂಹಲ ಮೂಡಿಸಿದ ರಮ್ಯಾ

    ಎರಡೆರಡು ಸಿನಿಮಾಗಳ ಮೂಲಕ ಕಮ್ ಬ್ಯಾಕ್ ಆಗಿ ಕುತೂಹಲ ಮೂಡಿಸಿದ ರಮ್ಯಾ

    ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಮತ್ತೆ ಸಿನಿಮಾ ರಂಗಕ್ಕೆ ಬಂದಾಯ್ತು. ಹಲವು ವರ್ಷಗಳಿಂದ ನಡೆಯುತ್ತಿದ್ದ ಈ ಚರ್ಚೆಗೆ ನಿರ್ಮಾಪಕಿಯಾಗುವ ಮೂಲಕ ವಾಪಸ್ಸಾಗಿ ಫುಲ್ ಸ್ಟಾಪ್ ಇಟ್ಟಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆಯನ್ನು ಹುಟ್ಟು ಹಾಕಿರುವ ರಮ್ಯಾ, ಆ ಸಂಸ್ಥೆಗೆ ಆಪಲ್ ಬಾಕ್ಸ್ ಸ್ಟುಡಿಯೋಸ್ ಎಂದು ಹೆಸರಿಟ್ಟಿ‍ದ್ದಾರೆ. ಗಣೇಶ ಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಸುದ್ದಿಯನ್ನೇ ಕೊಟ್ಟಿದ್ದಾರೆ.

    ಗಣೇಶ ಹಬಕ್ಕೆ ಸಿಹಿ ಸುದ್ದಿ ಕೊಡುವುದಾಗಿ ನಿನ್ನೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದ ರಮ್ಯಾ, ಯಾವೆಲ್ಲ ಸುದ್ದಿಗಳನ್ನು ಕೊಡಬಹುದು ಎಂದು ಅಭಿಮಾನಿಗಳು ಕಾಯುತ್ತಿದ್ದರು. ಬಹುಶಃ ನಟಿಯಾಗಿ ಚಿತ್ರರಂಗಕ್ಕೆ ರೀ ಎಂಟ್ರಿ ಕೊಡಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಆಪಲ್ ಬಾಕ್ಸ್ ಕೊಡುವ ಮೂಲಕ ಸಿಹಿ ಸಿಹಿ ಹಣ್ಣುಗಳನ್ನೇ ನೀಡಿದ್ದಾರೆ. ಇದನ್ನೂ ಓದಿ:ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ‘ಗಂಡುಮಗ’ ಎಂದು ಹಾಡಿ ಹೊಗಳಿದ ಜಗ್ಗೇಶ್

    RAMYA

    ನಿರ್ಮಾಣ ಸಂಸ್ಥೆಯ ಆಳ ಅಗಲವನ್ನು ಅರ್ಥ ಮಾಡಿಕೊಂಡಿರುವ ರಮ್ಯಾ, ಸಂಸ್ಥೆಯ ಕುರಿತಾದ ಮಾಹಿತಿಯನ್ನು ಕೆಆರ್.ಜಿ ಸೇರಿದಂತೆ ಹಲವರಿಂದ ಪಡೆದಿದ್ದಾರೆ. ಕೆ.ಆರ್.ಜಿ ಸ್ಟುಡಿಯೋ ಸಹಕಾರದಲ್ಲೇ ತಮ್ಮ ಸಂಸ್ಥೆಯನ್ನು ಕಟ್ಟುವ ಕನಸು ಕಂಡಿದ್ದಾರೆ. ಹೀಗಾಗಿ ಏಕಕಾಲಕ್ಕೆ ಎರಡು ಸಿನಿಮಾಗಳನ್ನು ಮಾಡುತ್ತಿರುವುದಾಗಿಯೂ ಅವರು ಘೋಷಣೆ ಮಾಡಿದ್ದಾರೆ. ಆಪಲ್ ಬಾಕ್ಸ್ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ಮೊದಲ ಬಾರಿಗೆ ಯಾರಿಗೆ ಅವಕಾಶ ಸಿಗುತ್ತದೆ ಎಂದು ಕಾದು ನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಲೈವ್ ಬಂದಿದ್ದೇ ಬಂದಿದ್ದು ರಮ್ಯಾ ಫುಲ್ ಟ್ರೋಲ್..!

    ಲೈವ್ ಬಂದಿದ್ದೇ ಬಂದಿದ್ದು ರಮ್ಯಾ ಫುಲ್ ಟ್ರೋಲ್..!

    – ಕ್ವೀನ್ ಬ್ಯೂಟಿಗೆ ಅಭಿಮಾನಿಗಳು ಕ್ಲೀನ್ ಬೋಲ್ಡ್

    ಬೆಂಗಳೂರು: ಸ್ಯಾಂಡಲ್‍ವುಡ್ ಕ್ವೀನ್, ಮೋಹಕ ನಟಿ ರಮ್ಯಾ ಅವರು ಹಲವು ವರ್ಷಗಳ ಬಳಿಕ ಲೈವ್ ಬಂದು ಎಲ್ಲರ ಅಚ್ಚರಿಗೆ ಕಾರಣರಾಗಿದ್ದಾರೆ. ಅಲ್ಲದೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಬರೀ ರಮ್ಯಾರದ್ದೇ ಹವಾ ಎನ್ನುವಂತಾಗಿದೆ.

    ಹೌದು. ಶುಕ್ರವಾರ ರಾತ್ರಿ ಆರ್ ಜೆ ಒಬ್ಬರು, ರಮ್ಯಾ ಅವರನ್ನು ಇನ್‍ಸ್ಟಾದಲ್ಲಿ ಲೈವ್ ಗೆ ಕೂರಿಸಿದ್ದಾರೆ. ಈ ವೇಳೆ ರಮ್ಯಾ ತಮ್ಮ ಹಲವು ವಿಚಾರಗಳನ್ನು ಅವರೊಂದಿಗೆ ಹಂಚಿಕೊಂಡಿದ್ದಾರೆ. ಮದುವೆ, ಊಟ, ಇಷ್ಟವಾಗಿರುವ ವಸ್ತುಗಳು, ಬ್ಯೂಟಿ ಸೀಕ್ರೆಟ್ ಬಗ್ಗೆ ರಮ್ಯಾ ಅವರು ಲೈವ್ ನಲ್ಲಿ ಮನಬಿಚ್ಚಿ ಮಾತನಾಡಿದ್ದಾರೆ. ನಟಿ ಲೈವ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಆಕೆಗಾಗಿ ಕಾಯುತ್ತಿದ್ದ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಅಲ್ಲದೆ ಲೈವ್ ನಿಂದ ಅವರ ಫೋಟೋಗಳನ್ನು ಕಟ್ ಮಾಡಿಕೊಂಡು ವೈರಲ್ ಮಾಡಿದ್ದಾರೆ. ಇದನ್ನೂ ಓದಿ: ನಾನು ಇನ್ನೂ ಲಸಿಕೆ ಪಡೆದುಕೊಂಡಿಲ್ಲ: ರಮ್ಯಾ

    ಸದ್ಯ ರಮ್ಯಾ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೋಲ್ ಆಗಿದ್ದಾರೆ. ಇಷ್ಟು ದಿನ ಕೆಲವು ಫೋಟೋಗಳನ್ನು ಮಾತ್ರ ಶೇರ್ ಮಾಡಿಕೊಳ್ಳುತ್ತಿದ್ದ ರಮ್ಯಾ, ಎಲ್ಲಿಯೂ ಕಾಣಿಸಿಕೊಳ್ಳುತ್ತಿರಲಿಲ್ಲ. ಹೀಗಾಗಿ ಅಭಿಮಾನಿಗಳಿಗೂ ಅವರನ್ನು ನೋಡುವ ಕುತೂಹಲ ಹೆಚ್ಚಾಗಿತ್ತು. ಇದೀಗ ಏಕಾಏಕಿ ಲೈವ್ ಗೆ ಬಂದು ರಮ್ಯಾ ತಮ್ಮ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ. ಕೊನೆಗೂ ಲೈವ್ ಬಂದು ತಮ್ಮ ದರ್ಶನ ಮಾಡಿಸಿದ್ದರಿಂದ ಅಭಿಮಾನಿಗಳು ನಟಿಯ ಬ್ಯೂಟಿಗೆ ಫಿದಾ ಆಗಿದ್ದಾರೆ. ಹಲವು ವರ್ಷಗಳ ಬಳಿಕ ಕಂಡ ನಟಿಯನ್ನು ಮತ್ತೊಮ್ಮೆ ಚಿತ್ರರಂಗಕ್ಕೆ ಬರುವಂತೆ ಒತ್ತಾಯಿಸಿ ಟ್ರೋಲ್ ಮಾಡಿದ್ದಾರೆ. ಕೇವಲ ಫೋಟೋಗಳು ಮಾತ್ರವಲ್ಲದೆ ಹಾಡುಗಳನ್ನು ಕೂಡ ಎಡಿಟ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟಿದ್ದಾರೆ. ಇದನ್ನೂ ಓದಿ: ನನ್ನ ಮದುವೆಗೆ ಯಾರೂ ಬರಲ್ಲ ಅಂತೆ: ರಮ್ಯಾ

    ‘ಯಾರೇ ಬರಲಿ, ಯಾರೇ ಇರಲಿ, ನಿನ್ನ ರೇಂಜಿಗೆ ಯಾರೂ ಇಲ್ಲ’ ಎಂದು ನಟಿಯ ಬ್ಯೂಟಿಯನ್ನು ಅಭಿಮಾನಿಗಳು ಬಣ್ಣಿಸಿದ್ದಾರೆ. ಅಲ್ಲದೆ ‘ನೀವು ನಮ್ಮ ಆಲ್ ಟೈಂ ಪೇವರೇಟ್.. ಕನ್ನಡ ಚಿತ್ರರಂಗ ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದೆ. ದಯವಿಟ್ಟು ಮತ್ತೆ ನಟಿಸಿ’ ಎಂದು ಒತ್ತಡ ಹಾಕಿದ್ದಾರೆ. ಇನ್ನೂ ‘ಲೈವ್ ಬಂದಿದಕ್ಕೇ ಇಷ್ಟೊಂದು ಹವಾ, ಇನ್ನು ತೆರೆ ಮೇಲೆ ಬಂದ್ರೆ ಹೆಂಗೆ..’ ಎಂದು ಪ್ರಶ್ನಿಸುವ ಮೂಲಕ ಟ್ರೋಲ್ ಮಾಡಿದ್ದಾರೆ. ಇತ್ತ ನಟಿ ಕೂಡ ಮತ್ತೊಮ್ಮೆ ತಮ್ಮ ಇನ್ ಸ್ಟಾ ಖಾತೆಯಲ್ಲಿ ಲೈವ್ ಬಂದು ತಮ್ಮ ಅಭಿಮಾನಿಗಳ ಬಳಿ ಎಲ್ಲರಿಗೂ ಪ್ರತಿಕ್ರಿಯಿಸಲು ಸಾಧ್ಯವಾಗಿಲ್ಲ ಕ್ಷಮಿಸಿ ಎಂದು ಹೇಳುತ್ತಾ ಧನ್ಯವಾದ ಅರ್ಪಿಸಿದ್ದಾರೆ. ಇದನ್ನೂ ಓದಿ: ನಾನು ಈ ಮೂರು ವಸ್ತುಗಳನ್ನು ಮರೆಯುತ್ತೇನೆ: ರಮ್ಯಾ

    ಒಟ್ಟಿನಲ್ಲಿ ಇದ್ದಷ್ಟು ದಿನ ಕನ್ನಡ ಚಿತ್ರರಂಗದಲ್ಲಿ ನಂಬರ್ ಒನ್ ನಟಿಯಾಗಿದ್ದ ರಮ್ಯಾ ಅವರು ಕ್ರಮೇಣ ರಾಜಕಾರಣದತ್ತ ಮುಖ ಮಾಡಿದ್ದರು. ಹೀಗಾಗಿ ಚಿತ್ರರಂಗದಿಂದ ಕೊಂಚ ದೂರವೇ ಉಳಿದಿದ್ದು, ಅಭಿಮಾನಿಗಳು ಅವರನ್ನು ತುಂಬಾನೇ ಮಿಸ್ ಮಾಡಿಕೊಂಡಿದ್ದರು. ತಮ್ಮ ನಟನೆ ಹಾಗೂ ಬ್ಯೂಟಿಯಿಂದಲೇ ಮನೆಮಾತಾಗಿದ್ದ ಅವರನ್ನು ಇದೀಗ ಹಲವು ಸಮಯಗಳ ಬಳಿಕ ಕಂಡ ಅಭಿಮಾನಿಗಳು ಪುಳಕಿತರಾಗಿದ್ದಂತೂ ಸತ್ಯ.

  • ಮಾಸ್ಟರ್ ಹಿರಣ್ಣಯ್ಯ ಬರೆದ ರಂಗ ಗೀತೆ ಈಗ ಚಿತ್ರಗೀತೆ!

    ಮಾಸ್ಟರ್ ಹಿರಣ್ಣಯ್ಯ ಬರೆದ ರಂಗ ಗೀತೆ ಈಗ ಚಿತ್ರಗೀತೆ!

    ಬೆಂಗಳೂರು: ಹಿಂದಿಯಲ್ಲಿ ಕಂಗನಾ ರಣಾವತ್ ನಟಿಸಿ ಸೂಪರ್ ಹಿಟ್ ಆಗಿದ್ದ ಕ್ವೀನ್ ಚಿತ್ರ ಕನ್ನಡದಲ್ಲಿ ‘ಬಟರ್ ಫ್ಲೈ’ ಆಗಿ ಅವತಾರವೆತ್ತುತ್ತಿದೆ. ಯಾವ ಕಥೆಯನ್ನಾದರೂ ಇಲ್ಲಿನ ನೇಟಿವಿಟಿಗೆ ತಕ್ಕುದಾಗಿ ಒಗ್ಗಿಸಿಕೊಳ್ಳುವ ಕಲೆ ಕರಗತ ಮಾಡಿಕೊಂಡಿರೋ ರಮೇಶ್ ಅರವಿಂದ್ ನಿರ್ದೇಶನದಲ್ಲಿ ಈ ಚಿತ್ರ ರೆಡಿಯಾಗುತ್ತಿದೆ.

    ಚಿತ್ರೀಕರಣವನ್ನು ಅಂದುಕೊಂಡಂತೆಯೇ ಸುಸೂತ್ರವಾಗಿ ನಡೆಸುತ್ತಿದ್ದರೂ ರಮೇಶ್ ಅವರವಿಂದ್ ಅವರನ್ನು ಭಾರೀ ಚಿಂತೆಗೀಡು ಮಾಡಿದ್ದದ್ದು ವಿಶೇಷವಾದ ಒಂದು ಹಾಡು. ಮೂಲ ಚಿತ್ರ ಕ್ವೀನ್‍ನಲ್ಲಿ ಹಿಂದಿಯ ಹಳೆಯ ಹಾಡೊಂದನ್ನು ವಿಶೇಷವಾಗಿ ಬಳಸಿಕೊಳ್ಳಲಾಗಿತ್ತು. ಆ ಹಾಡು ಸೂಪರ್ ಹಿಟ್ ಆಗಿತ್ತು. ಕನ್ನಡದಲ್ಲಿಯೂ ಕೂಡಾ ಈ ಹಾಡನ್ನು ಅದೇ ರೀತಿ ರೂಪಿಸೋ ಕನಸು ಹೊಂದಿದ್ದ ರಮೇಶ್ ಅವರನ್ನು ಬಹು ದಿನದಿಂದಲೂ ಯಾವ ಗೀತೆಯನ್ನು ಆಯ್ಕೆ ಮಾಡಿಕೊಳ್ಳೋದೆಂಬ ಗೊಂದಲ ಕಾಡುತ್ತಿತ್ತಂತೆ. ಕಡೆಗೂ ಅವರು ಇದಕ್ಕಾಗಿ ಪ್ರಸಿದ್ಧ ರಂಗಗೀತೆಯೊಂದನ್ನು ಆಯ್ಕೆ ಮಾಡಿಕೊಂಡಿದ್ದಾರೆ.

    ಅದು ದೇವದಾಸಿ ನಾಟಕಕ್ಕಾಗಿ ಮಾಸ್ಟರ್ ಹಿರಣ್ಣಯ್ಯನವರು ಬರೆದಿದ್ದ ಪ್ರಸಿದ್ಧ ರಂಗಗೀತೆ. ಸುಖವೀವ ಸುರಪಾನವಿದೇ ಸ್ವರ್ಗಸಮಾನನಂ ಎಂಬ ರಂಗಗೀತೆಯನ್ನು ರಮೇಶ್ ಅರವಿಂದ್ ಈ ಚಿತ್ರಕ್ಕೆ ಹೊಸಾ ಥರದಲ್ಲಿ ಬಳಸಿಕೊಂಡಿದ್ದಾರೆ. ಇದಕ್ಕೆ ಕೇವಲ ಅರ್ಧ ದಿನದಲ್ಲಿಯೇ ಕೊರಿಯೋಗ್ರಫಿ ಮಾಡಿರೋ ಗಣೇಶ್ ಆಚಾರ್ಯ ಚಿತ್ರೀಕರಣ ಮುಗಿಸಿಕೊಟ್ಟಿದ್ದಾರಂತೆ. ಈ ವಿಶೇಷವಾದ ಹಾಡಿಗೆ ಕುಣಿದಿರುವ ಪಾರುಲ್ ಕೂಡಾ ಇದನ್ನೊಂದು ಗ್ರೇಟ್ ಎಕ್ಸ್ ಪೀರಿಯನ್ಸ್ ಅಂತ ಖುಷಿಯಿಂದಲೇ ಹೇಳಿಕೊಂಡಿದ್ದಾರೆ.

    ಸದಾ ಹೊಸತೇನನ್ನೋ ಸೃಷ್ಟಿಸಲು ಹಂಬಲಿಸುವ ರಮೇಶ್ ಅರವಿಂದ್ ಅವರು ತಮ್ಮ ಚಿತ್ರಕ್ಕೆ ರಂಗಗೀತೆಯೊಂದನ್ನು ಆರಿಸಿಕೊಂಡಿರುವುದು ಸಕಾರಾತ್ಮಕ ಬೆಳವಣಿಗೆ.