Tag: question paper

  • ಇಂಡಿಯಾ- ಪಾಕ್ ಗಡಿ ಸೀಮಾ ಹೈದರ್, ಉದ್ದ 5 ಅಡಿ 6 ಇಂಚು-  ಉತ್ತರ ಪತ್ರಿಕೆ ಫುಲ್ ವೈರಲ್

    ಇಂಡಿಯಾ- ಪಾಕ್ ಗಡಿ ಸೀಮಾ ಹೈದರ್, ಉದ್ದ 5 ಅಡಿ 6 ಇಂಚು- ಉತ್ತರ ಪತ್ರಿಕೆ ಫುಲ್ ವೈರಲ್

    ಜೈಪುರ: ಕೆಲ ತಿಂಗಳ ಹಿಂದೆ ಸೀಮಾ ಹೈದರ್ (Seema Haider) ಎನ್ನುವ ಹೆಸರು ಭಾರೀ ಸುದ್ದಿಯಲ್ಲಿತ್ತು. ತನ್ನ ಪ್ರೇಮಿ ಸಚಿನ್‍ಗಾಗಿ ಪಾಕಿಸ್ತಾನದಿಂದ (Pakistan) ಭಾರತಕ್ಕೆ ಬಂದಿರುವ ಸೀಮಾ ಹೈದರ್ ಸಾಕಷ್ಟು ಗಮನ ಸೆಳೆದಿದ್ದಳು. ಆದರೆ ಈ ಬಾರಿ ಅವರಿಬ್ಬರ ಪ್ರಕರಣ ಅಲ್ಲ ಬದಲಾಗಿ ಸೆಕೆಂಡ್ ಪಿಯುಸಿಯ ಪ್ರಶ್ನೆ ಪತ್ರಿಕೆಯಿಂದಾಗಿ ಸುದ್ದಿಯಾಗಿದ್ದಾಳೆ.

    ಹೌದು. 12ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಉತ್ತರ ಪತ್ರಿಕೆಯಲ್ಲಿ ಬರೆದಿರುವ ಕುತೂಹಲಕಾರಿ ವಿಚಾರವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ (Social Media) ಸಖತ್ ವೈರಲ್ ಆಗುತ್ತಿದೆ. ರಾಜಸ್ಥಾನದ (Rajasthan) ಧೋಲ್ಪುರ್ ಜಿಲ್ಲೆಯ ಬಸೇರಿಯಲ್ಲಿರುವ ಬಗ್ತಾರ್ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಉತ್ತರ ಪತ್ರಿಕೆಯಾಗಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದೇನೆ ಭಾರತದಲ್ಲೇ ಇರಲು ಅವಕಾಶ ಕೊಡಿ – ರಾಷ್ಟ್ರಪತಿಗೆ ಸೀಮಾ ಹೈದರ್‌ ಪತ್ರ

    ಪ್ರಶ್ನೆ- ಉತ್ತರ ಏನು..?: ರಾಜ್ಯಶಾಸ್ತ್ರ ಪ್ರಶ್ನೆ ಪತ್ರಿಕೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿ ಮತ್ತು ಅದರ ಉದ್ದದ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ವಿದ್ಯಾರ್ಥಿ ನೀಡಿರುವ ಉತ್ತರ ಎಲ್ಲರ ಗಮನಸೆಳೆದಿದೆ. ಅಲ್ಲದೆ ವಿದ್ಯಾರ್ಥಿಯ ಉತ್ತರ ಪತ್ರಿಕೆಯನ್ನು ನೋಡಿದ ಶಿಕ್ಷಕರೇ ಒಂದು ಬಾರಿ ದಂಗಾಗಿ ಹೋಗಿದ್ದಾರಂತೆ. ಭಾರತ ಮತ್ತು ಪಾಕಿಸ್ತಾನದ ಗಡಿ ಸೀಮಾ ಹೈದರ್, ಉದ್ದ 5 ಅಡಿ 6 ಇಂಚು ಎಂದು ವಿದ್ಯಾರ್ಥಿ ಉತ್ತರ ಪತ್ರಿಕೆಯಲ್ಲಿ ಬರೆದಿದ್ದಾನೆ. ಸದ್ಯ ಈ ಉತ್ತರ ಪತ್ರಿಕೆ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಟ್ರೆಂಡಿಂಗ್ ಆಗಿದೆ.

    ಪಾಕಿಸ್ತಾನಿ ಪ್ರಜೆಯಾಗಿರುವ ಸೀಮಾ ಹೈದರ್ ಕಳೆದ ತಿಂಗಳಷ್ಟೇ ಭಾರತೀಯ ಪತಿ ಸಚಿನ್ ಜೊತೆ ತನ್ನ ಮೊದಲ ‘ಕರ್ವಾ ಚೌತ್’ ಅನ್ನು ಆಚರಿಸಿ ಸುದ್ದಿಯಲ್ಲಿದ್ದಳು. ಈ ಹಿಂದೆ ಸೀಮಾ ಅವರು ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಭಾರತದ ಧ್ವಜಾರೋಹಣ ಮಾಡಿ ಸುದ್ದಿ ಮಾಡಿದ್ದಳು.

    ಪಾಕಿಸ್ತಾನದ ಸಿಂಧ್ ಪ್ರ್ಯಾಂತದ ನಿವಾಸಿಯಾಗಿರುವ ಸೀಮಾ ಹೈದರ್ ನೇಪಾಳದ ಮೂಲಕ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿ ತಾನು ತನ್ನ ಧರ್ಮವನ್ನು ಪರಿವರ್ತಿಸಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ಸದ್ಯ ಈಕೆ ಸನಾತನ ಧರ್ಮವನ್ನು ಅನುಸರಿಸುತ್ತಿದ್ದಾಳೆ. ಅಲ್ಲದೇ ಈಕೆ ತನ್ನ ಮಕ್ಕಳ ಹೆಸರನ್ನೂ ಬದಲಾಯಿಸಿದ್ದಾಳೆ. ಪಾಕಿಸ್ತಾನಿ ಪ್ರಜೆ ತನ್ನ ಗೆಳೆಯ ಸಚಿನ್ ಮೀನಾ ಜೊತೆ ಗ್ರೇಟರ್ ನೋಯ್ಡಾದಲ್ಲಿ ಇರಲು ಮೇ ತಿಂಗಳಲ್ಲಿ ಅಕ್ರಮವಾಗಿ ಭಾರತಕ್ಕೆ ಬಂದ ನಂತರ ಸುದ್ದಿ ಮಾಡಿದಳು.

  • ಗುಜರಾತ್‌ನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ್ರೆ 10 ವರ್ಷ ಜೈಲು, 1 ಕೋಟಿ ದಂಡ – ಮಸೂದೆ ಪಾಸ್‌

    ಗುಜರಾತ್‌ನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ್ರೆ 10 ವರ್ಷ ಜೈಲು, 1 ಕೋಟಿ ದಂಡ – ಮಸೂದೆ ಪಾಸ್‌

    ಗಾಂಧಿನಗರ:  ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಕಠಿಣ ಶಿಕ್ಷೆ ವಿಧಿಸುವ ಮಸೂದೆಯನ್ನು ಗುಜರಾತ್‌ ವಿಧಾನಸಭೆ (Gujarat Assembly) ಗುರುವಾರ ಅಂಗೀಕರಿಸಿದೆ.

    ಗೃಹಖಾತೆ ಸಚಿವ ಹರ್ಷ್ ಸಂಘವಿ ಗುಜರಾತ್ ಸಾರ್ವಜನಿಕ ಪರೀಕ್ಷೆ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ)-2023 ಮಸೂದೆಯನ್ನು  ಮಂಡಿಸಿದ್ದರು.  ಸರ್ಕಾರಿ ನೇಮಕಾತಿ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ (Leaking Question Papers) ಮಾಡುವ ಸಂಘಟಿತ ಅಪರಾಧಗಳಲ್ಲಿ ತೊಡಗಿಸಿಕೊಂಡಿದ್ದರೆ ಗರಿಷ್ಟ 10 ವರ್ಷಗಳ ಜೈಲುಶಿಕ್ಷೆ ಹಾಗೂ 1 ಕೋಟಿ ರೂ. ದಂಡ ವಿಧಿಸಲು ಅವಕಾಶವಿದೆ.

    ಅಪರಾಧಿಗಳು ಅನ್ಯಾಯವಾಗಿ ಗಳಿಸಿದ ಹಣವನ್ನು ವಸೂಲಿ ಮಾಡಲು ಅವರ ಆಸ್ತಿಯನ್ನು ಹರಾಜು ಹಾಕಲು ಈ ಮಸೂದೆಯಲ್ಲಿ ಅವಕಾಶವಿದೆ. ಇದನ್ನೂ ಓದಿ: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ದ್ವಿಚಕ್ರ ವಾಹನ ಸಿಕ್ಕಿಬಿದ್ರೆ 5 ಸಾವಿರ ದಂಡ

    ಕಳೆದೆರಡು ವರ್ಷಗಳಲ್ಲಿ ಗುಜರಾತ್‍ನಲ್ಲಿ ವಿವಿಧ ಸರ್ಕಾರಿ ಹುದ್ದೆಗಳ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಕಳೆದ ವರ್ಷ ಪ್ರಶ್ನೆಪತ್ರಿಕೆ ಸೋರಿಕೆ ದಂಧೆಯಲ್ಲಿ ತೊಡಗಿಕೊಂಡಿರುವ ಅಂತರಾಜ್ಯ ಗ್ಯಾಂಗ್ ಒಂದನ್ನು ಪೊಲೀಸರು ಭೇದಿಸಿ ಹಲವಾರು ಸದಸ್ಯರನ್ನು ಜೈಲಿಗೆ ಕಳುಹಿಸಿದ್ದರು.

    ವಿಧಾನಸಭೆ ಚುನಾವಣೆಗೂ ಮುನ್ನ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ಎತ್ತಿದ ಹಲವಾರು ಪ್ರಮುಖ ವಿಷಯಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ದಂಧೆಯೂ ಪ್ರಮುಖವಾಗಿತ್ತು.

    ಪ್ರಶ್ನೆಪತ್ರಿಕೆ ಸೋರಿಕೆ ದಂಧೆಯಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳನ್ನು ಮೂರು ವರ್ಷಗಳ ಕಾಲ ಡಿಬಾರ್ ಮಾಡುವ ಅವಕಾಶವೂ ಈ ಮಸೂದೆಯಲ್ಲಿದೆ. ಪರೀಕ್ಷೆಯನ್ನು ನಡೆಸುವ ಪರೀಕ್ಷಕರು ಈ ದಂಧೆಯಲ್ಲಿ ಭಾಗಿಯಾಗಿರುವುದು ಕಂಡುಬಂದಲ್ಲಿ ಜೈಲುಶಿಕ್ಷೆ ಹಾಗೂ ದಂಡವನ್ನು ಪಾವತಿಸಬೇಕಾಗುತ್ತದೆ.

    ಈ ಮಸೂದೆಯಲ್ಲಿ ಹಲವಾರು ದೋಷಗಳಿವೆ ಎಂದು ಗುಜರಾತಿನ ಕಾಂಗ್ರೆಸ್ ನಾಯಕ ಅರ್ಜುನ್ ಮೋದ್ವಾಡಿಯಾ ಆರೋಪಿಸಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಾಶ್ಮೀರ ಪ್ರತ್ಯೇಕ ದೇಶ – ಶಾಲಾ ಪ್ರಶ್ನೆ ಪತ್ರಿಕೆಯಲ್ಲಿ ಉಲ್ಲೇಖಿಸಿದ್ದಕ್ಕೆ ವಿವಾದ

    ಕಾಶ್ಮೀರ ಪ್ರತ್ಯೇಕ ದೇಶ – ಶಾಲಾ ಪ್ರಶ್ನೆ ಪತ್ರಿಕೆಯಲ್ಲಿ ಉಲ್ಲೇಖಿಸಿದ್ದಕ್ಕೆ ವಿವಾದ

    ಪಾಟ್ನಾ: 7ನೇ ತರಗತಿಯ ಪರೀಕ್ಷೆಯಲ್ಲಿ (Exam) ಕಾಶ್ಮೀರವನ್ನು (Kashmir) ಪ್ರತ್ಯೇಕ ದೇಶ ಎಂದು ಉಲ್ಲೇಖಿಸಿ, ಪ್ರಶ್ನೆಯನ್ನು (Question) ಕೇಳಿರುವ ಪತ್ರಿಕೆಯೊಂದು ಬೆಳಕಿಗೆ ಬಂದಿದೆ. ಈ ವಿಚಾರವಾಗಿ ವಿವಾದ ಉಂಟಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ವರದಿಗಳ ಪ್ರಕಾರ ಪ್ರಶ್ನೆಯನ್ನು ಬಿಹಾರ ರಾಜ್ಯದ ಅರಾರಿಯಾ, ಕಿಶನ್‌ಗಂಜ್ ಮತ್ತು ಕತಿಹಾರ್‌ನಲ್ಲಿನ 7ನೇ ತರಗತಿಯ ವಿದ್ಯಾರ್ಥಿಗಳ ಮುಂದೆ ಇಡಲಾಗಿದೆ. ಇದೊಂದು ಗಂಭೀರವಾದ ವಿಚಾರವಾಗಿದ್ದು, ಪ್ರಶ್ನೆ ಪತ್ರಿಕೆ (Question Paper) ತಯಾರಿಯಲ್ಲಿ ಉನ್ನತ ಅಧಿಕಾರಿಗಳು ಶಾಮೀಲಾಗಿದ್ದರೂ ತನಿಖೆ ನಡೆಸಲಾಗುವುದು ಎಂದು ಬಿಹಾರದ ಶಿಕ್ಷಣ ಸಚಿವ ಚಂದ್ರಶೇಖರ್ ಸಿಂಗ್ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆಗೆ ಮೋದಿ ವಿಶ್

    ಪ್ರಶ್ನೆ ಪತ್ರಿಕೆಯಲ್ಲೇನಿದೆ?
    ಈ ದೇಶಗಳ ಜನರನ್ನು ಏನೆಂದು ಕರೆಯುತ್ತಾರೆ ಎಂಬ ಪ್ರಶ್ನೆಯನ್ನು ಪತ್ರಿಕೆಯಲ್ಲಿ ನೀಡಲಾಗಿದೆ. ಅದರ ಕೆಳಗೆ ಚೀನಾ, ನೇಪಾಳ, ಇಂಗ್ಲೆಂಡ್, ಕಾಶ್ಮೀರ ಹಾಗೂ ಭಾರತದ ಜನರನ್ನು ಏನೆಂದು ಕರೆಯುತ್ತಾರೆ ಎಂಬ ಬಿಟ್ಟ ಸ್ಥಳದ ರೂಪದಲ್ಲಿ ಪ್ರಶ್ನೆಗಳನ್ನು ನೀಡಲಾಗಿದೆ. ಉದಾಹರಣೆಗೆ ಚೀನಾದ ಜನರನ್ನು ಚೀನೀಯರು (Chinese) ಎಂಬಂತೆ ಉತ್ತರಿಸಬೇಕು. ಆದರೆ ಕಾಶ್ಮೀರವನ್ನು ದೇಶಗಳ ಸಾಲಿನಲ್ಲಿ ನೀಡಿರುವುದಕ್ಕೆ ವಿವಾದ ಭುಗಿಲೆದ್ದಿದೆ. ಇದನ್ನೂ ಓದಿ: ಡಿಕೆಶಿ ಸ್ವಕ್ಷೇತ್ರದಲ್ಲಿ ಏಸುಕ್ರಿಸ್ತನ ಜಪ- ರೇಷನ್ ಕಾರ್ಡ್‍ನಲ್ಲಿ ಏಸುಕ್ರಿಸ್ತನ ಫೋಟೋ ಮುದ್ರಣ

    ಈ ಬಗ್ಗೆ ಸ್ಪಷ್ಟನೆ ಕೊಟ್ಟ ಮುಖ್ಯ ಶಿಕ್ಷಕ ಎಸ್‌ಕೆ ದಾಸ್, ಕಾಶ್ಮೀರದ ಜನರನ್ನು ಏನೆಂದು ಕರೆಯಬೇಕು? ಎಂಬ ಪ್ರಶ್ನೆಯನ್ನು ಕೇಳಬೇಕಿತ್ತು. ಆದರೆ ತಪ್ಪಾಗಿ ಕಾಶ್ಮೀರ ದೇಶದ ಜನರನ್ನು ಏನೆಂದು ಕರೆಯುತ್ತಾರೆ? ಎಂದು ಕೇಳಲಾಗಿದೆ. ಇದು ಮಾನವ ದೋಷ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗುಲ್ಬರ್ಗಾ ವಿವಿ ಬಿಕಾಂ 5ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ಲೀಕ್ – ಪರೀಕ್ಷೆ ಮುಂದೂಡಿಕೆ

    ಗುಲ್ಬರ್ಗಾ ವಿವಿ ಬಿಕಾಂ 5ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ಲೀಕ್ – ಪರೀಕ್ಷೆ ಮುಂದೂಡಿಕೆ

    ರಾಯಚೂರು: ಗುಲ್ಬರ್ಗಾ ವಿಶ್ವವಿದ್ಯಾಲಯದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ಇಂದು ನಡೆಯಬೇಕಿದ್ದ ವಾಣಿಜ್ಯ ಶಾಸ್ತ್ರದ 5ನೇ ಸೆಮಿಸ್ಟರ್‌ನ ಪರೀಕ್ಷೆ ರದ್ದಾಗಿದೆ.

    ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪಬ್ಲಿಕ್ ಟಿವಿಗೆ ಜೊತೆಗೆ ಮಾತನಾಡಿದ ವಿವಿ ರಿಜಿಸ್ಟ್ರಾರ್ ಡಾ.ಮೇಧಾವಿನಿ ಕಟ್ಟಿ ಅವರು, ಇಂದು ಮಧ್ಯಾಹ್ನ 2 ಗಂಟೆಗೆ ನಡೆಯಬೇಕಿದ್ದ ಮ್ಯಾನೆಜ್‍ಮೆಂಟ್ ಅಕೌಂಟಿಂಗ್ ವಿಷಯದ ಪರೀಕ್ಷೆ ಪ್ರಶ್ನೆ ಪತ್ರಿಕೆ ಬೆಳಗ್ಗೆಯೇ ಸೋರಿಕೆಯಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಸೈಬರ್ ಪೊಲೀಸ್ ಠಾಣೆಗೆ ದೂರು ಕೊಡಲು ವಿವಿ ಮುಂದಾಗಿದೆ. ಪರೀಕ್ಷೆ ರದ್ದುಗೊಳಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಇಡಿ ಚಾರ್ಜ್‌ಶೀಟ್‌ ಸಲ್ಲಿಕೆಗೆ ನಾವು ಹೆದರುವುದಿಲ್ಲ: ಡಿ.ಕೆ.ಸುರೇಶ್

    EXAM

    ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಆರೋಪಗಳಿದ್ದು, ಬೀದರ್‌ನ ಲ್ಲೂ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಅನುಮಾನಗಳಿವೆ. ಬೆಳಗ್ಗೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಹರಿದಾಡುತ್ತಿತ್ತು. ಇದರಿಂದ ಬಿಕಾಂ ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿತ್ತು. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಆರೋಪ – ಡಿಕೆಶಿ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಕೆ

  • SSLC ಪ್ರಶ್ನೆ ಪತ್ರಿಕೆ ಸೋರಿಕೆ: ಖಾಸಗಿ ಶಾಲೆಯ ಕ್ಲರ್ಕ್ ಬಂಧನ

    SSLC ಪ್ರಶ್ನೆ ಪತ್ರಿಕೆ ಸೋರಿಕೆ: ಖಾಸಗಿ ಶಾಲೆಯ ಕ್ಲರ್ಕ್ ಬಂಧನ

    ರಾಮನಗರ: ಎಸ್ಸೆಸ್ಸೆಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಮಾಗಡಿಯ ಖಾಸಗಿ ಶಾಲೆಯ ಕ್ಲರ್ಕ್‌ನನ್ನು ಬಂಧಿಸಿದ್ದಾರೆ.

    ಮಾಗಡಿಯ ಕೆಂಪೇಗೌಡ ಪ್ರೌಢಶಾಲೆಯ ಕ್ಲರ್ಕ್‌ ರಂಗೇಗೌಡ ಬಂಧಿತ ಆರೋಪಿ. ಇತ್ತೀಚೆಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ವಿಜ್ಞಾನ ಪತ್ರಿಕೆಯು ವಾಟ್ಸಪ್‌ ಮೂಲಕ ಸೋರಿಕೆ ಆಗಿತ್ತು. ಬೆಳಗ್ಗೆ 10.30ಕ್ಕೆ ಪರೀಕ್ಷೆ ಆರಂಭವಾಗಿತ್ತು. ಅದೇ ಸಮಯದಲ್ಲಿ ಪ್ರಶ್ನೆ ಪತ್ರಿಕೆಯನ್ನು ಹೆಡ್ ಮಾಸ್ಟರ್ ಹಾಗೂ ಶಿಕ್ಷಕರಿರುವ ಗ್ರೂಪ್‌ನಲ್ಲೇ ಶೇರ್ ಮಾಡಲಾಗಿತ್ತು.

    ಇದಲ್ಲದೇ ಕೆಂಪೇಗೌಡ ಶಾಲೆ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಉತ್ತಮ ಸಾಧನೆಗಳಿಸಿದ್ದು, ಇದೀಗ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ಚರ್ಚೆಗೆ ಗ್ರಾಸವಾಗುತ್ತಿದೆ. ರಂಗೇಗೌಡ ವಾಟ್ಸಪ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದು, ಅಲ್ಲಿನ ಒಬ್ಬ ಟೀಚರ್ ಹಾಗೂ ಸ್ಥಳೀಯ ವರದಿಗಾರರೊಬ್ಬರಿಗೆ ತಿಳಿದಿತ್ತು ಎಂಬ ಮಾಹಿತಿ ದೊರೆತಿದೆ. ಇದನ್ನೂ ಓದಿ: ಮಂಗಳೂರು ದರ್ಗಾ ವಿವಾದ – ಇಂದು ತಾಂಬೂಲ ಪ್ರಶ್ನೆ, ಪೊಲೀಸ್‌ ಬಂದೋಬಸ್ತ್‌

    TET EXAM 2

    ಆದರೆ ಈ ಇಬ್ಬರಿಗೂ ಕ್ಲರ್ಕ್ ರಂಗೇಗೌಡ ಹಣ ನೀಡಿ ಯಾರಿಗೂ ಹೇಳದಂತೆ ತಿಳಿಸಿದ್ದ. ಆದರೆ ಈ ಆರೋಪ ಪರೀಕ್ಷೆ ಮುಗಿದು ತಿಂಗಳು ಕಳೆದ ಬಳಿಕ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾಗಡಿ ಇನ್ಸ್‌ಪೆಕ್ಟರ್ ಕಿವಿಗೆ ಗಾಳಿ ಮಾತು ಬಿದ್ದಿತ್ತು. ಈ ಹಿನ್ನೆಲೆಯಲ್ಲಿ ಸಂದೇಹ ವ್ಯಕ್ತವಾಗಿ ರಂಗೇಗೌಡನನ್ನು ಸೋಮವಾರ ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಮನಗರ ಡಿಡಿಪಿಐ ಮಾಗಡಿಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಅಮೆರಿಕಾದ ಶಾಲೆಯಲ್ಲಿ ಶೂಟೌಟ್-18 ವಿದ್ಯಾರ್ಥಿಗಳು ಸೇರಿ 21 ಮಂದಿ ದುರ್ಮರಣ

  • ಎಸ್‍ಎಸ್‍ಎಲ್‍ಸಿ ಪರೀಕ್ಷೆ – 1 ಗಂಟೆಯಲ್ಲೇ ಪ್ರಶ್ನೆ ಪತ್ರಿಕೆ ವೈರಲ್

    ಎಸ್‍ಎಸ್‍ಎಲ್‍ಸಿ ಪರೀಕ್ಷೆ – 1 ಗಂಟೆಯಲ್ಲೇ ಪ್ರಶ್ನೆ ಪತ್ರಿಕೆ ವೈರಲ್

    ರಾಯಚೂರು: ಇಂದು ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಪರೀಕ್ಷೆ ನಡೆಯುತ್ತಿರುವಾಗಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್‍ನಲ್ಲಿ ವಾಟ್ಸಪ್, ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಪತ್ರಿಕೆ ಹರಿದಾಡುತ್ತಿದೆ. ಆದರೆ ಯಾರಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬುದು ತಿಳಿದುಬಂದಿಲ್ಲ. ಹೀಗಾಗಿ ಈ ಕುರಿತು ಪೊಲೀಸರಿಗೆ ದೂರು ನೀಡುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವೃಷಭೇಂದ್ರಯ್ಯ ಸ್ವಾಮಿ ಹೇಳಿದ್ದಾರೆ. ಇದನ್ನೂ ಓದಿ: ಚಂದ್ರು ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಕೊಟ್ಟ ಜಮೀರ್‌

    ಪ್ರಶ್ನೆ ಪತ್ರಿಕೆಗಳು ಪರೀಕ್ಷೆಗೂ ಮೊದಲೇ ಲೀಕ್ ಆಗಿಲ್ಲ. ಆದರೆ ಪರೀಕ್ಷೆಯ ಆರಂಭವಾದ ಬಳಿಕ ಯಾರೋ ಫೋಟೋ ತೆಗೆದಿರುವ ಸಾಧ್ಯತೆಯಿದೆ. ಇದನ್ನೂ ಓದಿ:  ಗರ್ಲ್‍ಫ್ರೆಂಡ್, ಮಾಜಿ ಪತ್ನಿ ಜೊತೆ ಗೋವಾದಲ್ಲಿ ಪಾರ್ಟಿ ಮಾಡಿದ ಹೃತಿಕ್ ರೋಷನ್

    ಭರ್ಜರಿ ನಕಲು: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಪರೀಕ್ಷೆಯಲ್ಲಿ ಭರ್ಜರಿ ನಕಲು ಸಹ ನಡೆದಿದೆ. ರಾಯಚೂರು ನಗರದ ಆಶಾಪೂರ ರಸ್ತೆಯ ಮೊರಾರ್ಜಿ ವಸತಿ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಎಲ್ಲಾ ರಿಪೀಟರ್ಸ್ ಪರೀಕ್ಷೆ ಬರೆಯುತ್ತಿದ್ದು ಎಗ್ಗಿಲ್ಲದೆ ನಕಲು ನಡೆದಿದೆ. ವಿದ್ಯಾರ್ಥಿಗಳ ಪೋಷಕರೇ ಹೊರಗಿನಿಂದ ನಕಲು ಮಾಡಿ ಒಳಗಡೆ ಹೋಗಿ ಚೀಟಿ ಕೊಟ್ಟು ಬರುತ್ತಿದ್ದಾರೆ.

    ಪರೀಕ್ಷಾ ಕೇಂದ್ರದಲ್ಲಿದ್ದವರೇ ಬಂದು ಚೀಟಿ ತೆಗೆದುಕೊಂಡು ಹೋಗುತ್ತಿದ್ದರು ಕೇಳುವವರಿಲ್ಲದಂತಾಗಿದೆ. ಕಣ್ಮುಂದೆ ಪರೀಕ್ಷಾ ಅಕ್ರಮ ನಡೆಯುತ್ತಿದ್ದರೂ ಅಧಿಕಾರಿಗಳು ಸುಮ್ಮನಿದ್ದಾರೆ. ಡಿಡಿಪಿಐ ವೃಷಭೇಂದ್ರಯ್ಯ ಸ್ವಾಮಿ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

  • SSLC ಪರೀಕ್ಷೆ ಬಗ್ಗೆ ಭಯ ಬೇಡ – ಎರಡು ದಿನ ಎರಡೇ ಪೇಪರ್

    SSLC ಪರೀಕ್ಷೆ ಬಗ್ಗೆ ಭಯ ಬೇಡ – ಎರಡು ದಿನ ಎರಡೇ ಪೇಪರ್

    ಚಿಕ್ಕಬಳ್ಳಾಪುರ: ಈ ಬಾರಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಾರೆ. ಹಾಗಂತ ವಿದ್ಯಾರ್ಥಿಗಳು ಪರೀಕ್ಷಾ ಪೂರ್ವ ಅಭ್ಯಾಸ ಮಾಡಲು ನಿರ್ಲಕ್ಷ್ಯ ವಹಿಸಬಾರದು. ಕಠಿಣ ಅಭ್ಯಾಸ ಮಾಡಿ ಎಲ್ಲರೂ ‘ಎ+’ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಜ್ಞಾನ ವೃದ್ಧಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾರವರು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದ್ದಾರೆ.

    ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಪೂರ್ವ ಸಿದ್ಧತೆ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಮಾನ್ಯ ಶಿಕ್ಷಣ ಸಚಿವರು ಮತ್ತು ಈ ಬಾರಿ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು 2021ರ ಜುಲೈ 3ನೇ ವಾರದಲ್ಲಿ ನಡೆಸುವುದಾಗಿ ಹೇಳಿದ್ದಾರೆ. ಜಿಲ್ಲೆಯಲ್ಲಿ ಸದರಿ ಪರೀಕ್ಷೆ ನಡೆಸುವ ವಿಧಾನ ಮತ್ತು ನೂತನ ಪರೀಕ್ಷಾ ಪದ್ಧತಿಯಲ್ಲಿನ ಅಂಶಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

    ಜಿಲ್ಲೆಯಲ್ಲಿ ಈ ಬಾರಿ 17,002 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಾರೆ. ಹಾಗಂತ ವಿದ್ಯಾರ್ಥಿಗಳು ಪರೀಕ್ಷಾ ಪೂರ್ವ ಅಭ್ಯಾಸ ಮಾಡಲು ನಿರ್ಲಕ್ಷ್ಯ ವಹಿಸಬಾರದು. ಕಠಿಣ ಅಭ್ಯಾಸ ಮಾಡಿ ಎಲ್ಲರೂ ‘ಎ+’ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಜ್ಞಾನ ವೃದ್ಧಿಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ಪ್ರತಿ ಮಕ್ಕಳ ಅಭ್ಯಾಸ ಕ್ರಮವನ್ನು ಸಂಪರ್ಕ ವ್ಯವಸ್ಥೆ ಇರುವವರಿಗೆ ಆನ್ ಲೈನ್ ಮುಖಾಂತರವೇ ಪರಿಶೀಲಿಸಿ ಬೋಧನೆ ಮಾಡಬೇಕು. ಆನ್ ಲೈನ್ ಸಂಪರ್ಕ ವ್ಯವಸ್ಥೆ ಇಲ್ಲದ ಮಕ್ಕಳಿಗೆ ನೇರವಾಗಿ ಕೋವಿಡ್‍ನ ಸಮುಚಿತ ಮಾರ್ಗದಲ್ಲಿ ಭೇಟಿ ಮಾಡಿ ಬೋಧಿಸುವ ಮೂಲಕ ಶಿಕ್ಷಕರು ಹೆಚ್ಚಿನ ಶ್ರಮವಹಿಸಬೇಕು, ಶಿಕ್ಷಕರ ಕಾರ್ಯವೈಖರಿಯನ್ನು ಅವರ ಮೇಲಧಿಕಾರಿಗಳು ನಿಗಾವಹಿಸಬೇಕು ಎಂದು ತಿಳಿಸಿದ್ದಾರೆ.

    2 ದಿನಗಳ ಪರೀಕ್ಷೆ ಎರಡೇ ಪೇಪರ್: ಒಂದು ದಿನ ಭಾಷಾ ವಿಷಯಗಳು (ಪ್ರಥಮ ಭಾಷೆ, ದ್ವಿತೀಯ ಭಾಷೆ, ತೃತೀಯ ಭಾಷೆ) ಮತ್ತೊಂದು ದಿನ ಕೋರ್ ವಿಷಯಗಳಲ್ಲಿ ( ಗಣಿತ, ವಿಜ್ಞಾನ, ಸಮಾಜ ವಿಜ್ಞಾನ) ಪರೀಕ್ಷೆ ನಡೆಯಲಿದೆ. ಪ್ರತಿ ವಿಷಯಕ್ಕೆ 40 ಅಂಕಗಳ ಬಹು ಆಯ್ಕೆ ಪ್ರಶ್ನೆಗಳಿದ್ದು, ಭಾಷಾ ವಿಷಯಗಳ ಪ್ರಶ್ನೆ ಪತ್ರಿಕೆಯು ಒಟ್ಟು 120 ಅಂಕಗಳನ್ನು ಒಳಗೊಂಡಿರುತ್ತದೆ. (ಒಂದು ಪ್ರಶ್ನೆಗೆ ಒಂದು ಅಂಕ, ಪರೀಕ್ಷಾ ಅವಧಿ-3 ಗಂಟೆ) ಅದೇ ರೀತಿ ಕೋರ್ ವಿಷಯಗಳಲ್ಲೂ ಪ್ರತಿ ವಿಷಯಕ್ಕೆ 40 ಬಹು ಆಯ್ಕೆ ಪ್ರಶ್ನೆಗಳಿದ್ದು, ಕೋರ್ ವಿಷಯಗಳ ಪ್ರಶ್ನೆ ಪತ್ರಿಕೆಯು ಒಟ್ಟು 120 ಅಂಕಗಳನ್ನು ಒಳಗೊಂಡಿರುತ್ತದೆ. (ಒಂದು ಪ್ರಶ್ನೆಗೆ ಒಂದು ಅಂಕ, ಪರೀಕ್ಷಾ ಅವಧಿ-3 ಗಂಟೆ), ಪ್ರಶ್ನೆ ಪತ್ರಿಕೆಗಳು ಬಹು ಅಂಶ ಮಾದರಿ ಮತ್ತು ಸರಳ ನೇರ ಮಾದರಿ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಪ್ರತಿ ವಿಷಯಕ್ಕೂ ಸಂಬಂಧಿಸಿದಂತೆ ಪ್ರತ್ಯೇಕ ಒ.ಎಂ.ಆರ್. ಶೀಟ್ ಇದ್ದು, ಬೇರೆ ಬೇರೆ ಬಣ್ಣದ ಒ.ಎಂ.ಆರ್.ಗಳಿರುತ್ತದೆ. ಇದನ್ನೂ ಓದಿ:  SSLC ಪರೀಕ್ಷೆ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

    ಒಂದು ಪರೀಕ್ಷಾ ಕೊಠಡಿಯಲ್ಲಿ ಕನಿಷ್ಟ 12 ವಿದ್ಯಾರ್ಥಿಗಳಿರುವಂತೆ ಮತ್ತು ಡೆಸ್ಕ್ ಗಳ 6 ಅಡಿ ಅಂತರವಿರುವಂತೆ ಆಸನ ವ್ಯವಸ್ಥೆ ಮಾಡಲಾಗಿರುತ್ತದೆ. ಹಾಗೂ 1 ಡೆಸ್ಕ್ ಗೆ ಒಬ್ಬವಿದ್ಯಾರ್ಥಿಗೆ ಅವಕಾಶ ಕಲ್ಪಿಸಿ ಕೋವಿಡ್-19ರ ಮಾರ್ಗಸೂಚಿಯಂತೆ ಕ್ರಮ ಕೈಗೊಳ್ಳಲಾಗಿದೆ. ಪ್ರತೀ ಪರೀಕ್ಷಾ ಕೇಂದ್ರದಲ್ಲಿ ಮುನ್ನಚ್ಚರಿಕೆಯ ಕ್ರಮವಾಗಿ ಒಂದು ಕೊಠಡಿಯನ್ನು ಕಾಯ್ದಿರಿಸಿದ್ದು, ಕೋವಿಡ್ ವಿಶೇಷ ಕೊಠಡಿಯನ್ನು ಒಳಗೊಂಡಿರುತ್ತದೆ. ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯ, ಹೆಲ್ಪ್ ಡೆಸ್ಕ್, ಸ್ಯಾನಿಟೈಸರ್, ಥರ್ಮಲ್ ಸ್ಯ್ಕಾನರ್ ಒಳಗೊಂಡಿರುವಂತೆ ಕೋವಿಡ್-19ರ ಎಸ್.ಒ.ಪಿ.ಯಂತೆ ಪರೀಕ್ಷಾ ಸ್ನೇಹಿ ವಾತಾವರಣವಿರುವ ಪರೀಕ್ಷಾ ಕೇಂದ್ರಗಳನ್ನು ಈಗಾಗಲೇ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

    ನೂತನ ಪರೀಕ್ಷಾ ಪದ್ದತಿಯಂತೆ ಪರೀಕ್ಷೆಯು ನಿಶ್ಚಯವಾಗಿ ನಡೆಯಲಿದ್ದು, ಯಾವುದೇ ವಿದ್ಯಾರ್ಥಿಯೂ ಸಹ ಗೈರು ಹಾಜರಾಗದೆ ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕು. ಒ.ಎಂ.ಆರ್. ಶೀಟ್ ನಲ್ಲಿ ತಮ್ಮ ಪ್ರವೇಶ ಪತ್ರದ ಸಂಖ್ಯೆಯನ್ನು ಸರಿಯಾಗಿ ನಮೂದಿಸಬೇಕು. ಕೋವಿಡ್‍ನ ಸಮುಚಿತ ಮಾರ್ಗದಲ್ಲಿ ಎಲ್ಲರೂ ಭಾಗವಹಿಸಿ ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಯಶಸ್ವಿಗೊಳಿಸುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಸಮರ್ಪಕ ಮಾರ್ಗದರ್ಶನ ಮಾಡಿ ಧೈರ್ಯ ತುಂಬುವಂತೆ ಶಿಕ್ಷಕರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೆ.ಎಂ ಜಯರಾಮರೆಡ್ಡಿ ಹಾಗೂ ಎಲ್ಲಾ ತಾಲುಕುಗಳ ಬಿ,ಇ,ಒಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಬೇಡಿ – ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

  • ಪ್ರಶ್ನೆಪತ್ರಿಕೆ ಸೋರಿಕೆ ಕಿಂಗ್‍ಪಿನ್ ಶಿವಕುಮಾರ್ ಕೊರೊನಾಗೆ ಬಲಿ

    ಪ್ರಶ್ನೆಪತ್ರಿಕೆ ಸೋರಿಕೆ ಕಿಂಗ್‍ಪಿನ್ ಶಿವಕುಮಾರ್ ಕೊರೊನಾಗೆ ಬಲಿ

    ತುಮಕೂರು: ಎಸ್.ಎಸ್.ಎಲ್.ಸಿ, ಪಿಯುಸಿ, ಪೊಲೀಸ್ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ್ದ ಕಿಂಗ್ ಪಿನ್ ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾನೆ.

    ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬಿದರೆ ಕಾಗ್ಗೆರೆ ಮೂಲದ ಶಿವಕುಮಾರ್(65) ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರಿಂದ ಕೊರಟಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾನೆ.

    2011ರಲ್ಲಿ ಗುಬ್ಬಿ ಪೊಲೀಸ್ ಠಾಣೆಯಲ್ಲಿ, 2012ರಲ್ಲಿ ತುಮಕೂರಿನ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ದೂರು ದಾಖಲಾಗಿತ್ತು. ಅಲ್ಲೂ ಶಿವಕುಮಾರ್ ಹೆಸರು ಕೇಳಿ ಬಂದಿತ್ತು.

    2013ರಲ್ಲಿ ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿ ದೇವೇಂದ್ರ, ತುಮಕೂರಿನ ಗುಬ್ಬಿ ಮೂಲದ ಮಲ್ಲೇಶ್ ಎಂಬಾತನನ್ನು ತುಮಕೂರು ಪೊಲೀಸರು ಬಂಧಿಸಿದ್ದರು. ಆಗ ವಿಚಾರಣೆ ವೇಳೆ ಕಿಂಗ್‍ಪಿನ್ ಇದೇ ಶಿವಕುಮಾರ್ ಎಂಬ ವಿಷಯ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಈತನನ್ನು ಬಂಧಿಸಿದ್ದರು.

    ಬಿಡುಗಡೆಗೊಂಡಿದ್ದ ಈತ 2016ರಲ್ಲಿ ದ್ವಿತೀಯ ಪಿಯುಸಿ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಹಾಗೂ 2018ರಲ್ಲಿ ಪೊಲೀಸ್ ಪೇದೆ ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲೂ ಈತ ಪೊಲೀಸರ ಅತಿಥಿಯಾಗಿದ್ದನು. ಒಟ್ಟಿನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಶಿವಕುಮಾರ್ ವಿಚಾರಣೆ ಎದುರಿಸುತ್ತಿದ್ದನು.

  • ಎಫ್‌ಡಿಎ ಪ್ರಶ್ನೆ ಪತ್ರಿಕೆ ಲೀಕ್‌ – ಕೆಪಿಎಸ್‌ಸಿಯ ಇಬ್ಬರ ಮೊಬೈಲ್‌ ಸ್ವಿಚ್‌ ಆಫ್‌, ನಾಪತ್ತೆ

    ಎಫ್‌ಡಿಎ ಪ್ರಶ್ನೆ ಪತ್ರಿಕೆ ಲೀಕ್‌ – ಕೆಪಿಎಸ್‌ಸಿಯ ಇಬ್ಬರ ಮೊಬೈಲ್‌ ಸ್ವಿಚ್‌ ಆಫ್‌, ನಾಪತ್ತೆ

    – ಪರೀಕ್ಷೆ ಬರೆಯಬೇಕಿದ್ದ ಅಭ್ಯರ್ಥಿಗಳು ಅರೆಸ್ಟ್‌
    – ಬಂಧಿತರ ಸಂಖ್ಯೆ 14ಕ್ಕೆ ಏರಿಕೆ

    ಬೆಂಗಳೂರು: ಪ್ರಥಮ ದರ್ಜೆ ಸಹಾಯಕ ಪರೀಕ್ಷೆಗಳ(ಎಫ್‌ಡಿಎ) ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ ಬಂಧನಕ್ಕೊಳಗಾದ ಆರೋಪಿಗಳ ವಿಚಾರಣೆಯ ವೇಳೆ ಸ್ಫೋಟಕ ವಿಚಾರಗಳು ಹೊರಬರುತ್ತಿವೆ.

    ಸಿಸಿಬಿ ಪೊಲೀಸರು ಶನಿವಾರ ಈ ಪ್ರಕರಣದ ಸಂಬಂಧ 6 ಮಂದಿಯನ್ನು ಬಂಧಿಸಿದ್ದರು. ನಿನ್ನೆ ರಾತ್ರಿ ಮತ್ತು ಇಂದು ಒಟ್ಟು 8 ಮಂದಿಯನ್ನು ಬಂಧಿಸಿದ್ದು, ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಈ ಪೈಕಿ ಹಲವು ಮಂದಿ ನಾಪತ್ತೆಯಾಗಿದ್ದು, ಅವರ ಬಂಧನಕ್ಕೆ ಬಲೆ ಬೀಸಲಾಗಿದೆ.

    ಬಂಧಿತರಿಂದ ಒಟ್ಟು 36 ಲಕ್ಷ ನಗದು ಹಣವನ್ನು ವಶಕ್ಕೆ ಪಡೆಯಲಾಗಿದ್ದು, ಬಂಧಿತರ ಪೈಕಿ ಕೆಲವರು ಅಭ್ಯರ್ಥಿಗಳಾಗಿರುವುದು ವಿಶೇಷ.

    ಕೆಪಿಎಸ್‌ಸಿಯಿಂದಲೇ ಸೋರಿಕೆ: ಈ ಕೃತ್ಯದ ಹಿಂದೆ ಇಬ್ಬರ ಮೇಲೆ ಸಿಸಿಬಿಗೆ ಬಲವಾದ ಅನುಮಾನವಿದೆ. ಈ ಪ್ರಕರಣ ಬೆಳಕಿಗೆ ಬಂದ ನಂತರ ಎಫ್‌ಡಿಎ ದರ್ಜೆಯ ಇಬ್ಬರು ಅಧಿಕಾರಿಗಳ ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದು ನಾಪತ್ತೆಯಾಗಿದ್ದಾರೆ.  ಬಂಧಿತರು ನೀಡಿದ ಮಾಹಿತಿಯ ಮೇರೆಗೆ ಇಬ್ಬರನ್ನು ವಿಚಾರಣೆ ನಡೆಸಲು ಸಿಸಿಬಿ ಮುಂದಾಗಿತ್ತು. ಆದರೆ ಆರೋಪಿಗಳ ಬಂಧನ ಸುದ್ದಿ ಪ್ರಕಟವಾಗುತ್ತಿದ್ದಂತೆ ಇಬ್ಬರು ನಾಪತ್ತೆಯಾಗಿದ್ದಾರೆ.  ನಾಪತ್ತೆಯಾಗಿರುವ ಈ ಇಬ್ಬರಿಂದಲೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿರಬಹುದು ಎಂಬ ಅನುಮಾನ ಸಿಸಿಬಿಯದ್ದು.

    ಇಂದು ಎಫ್‌ಡಿಎ ಪರೀಕ್ಷೆ ನಡೆಯಬೇಕಿತ್ತು. ಆದರೆ ಪರೀಕ್ಷೆ ನಡೆಯುವ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸರ್ಕಾರ ಪರೀಕ್ಷೆಯನ್ನು ಮುಂದೂಡಿದೆ.

  • 1 ಪೇಪರ್‌ಗೆ 10 ಲಕ್ಷ  ಡೀಲ್‌ – ಕೆಪಿಎಸ್‌ಸಿ ಕಚೇರಿಯಿಂದಲೇ ಎಫ್‌ಡಿಎ ಪ್ರಶ್ನೆ ಪತ್ರಿಕೆ ಲೀಕ್‌

    1 ಪೇಪರ್‌ಗೆ 10 ಲಕ್ಷ ಡೀಲ್‌ – ಕೆಪಿಎಸ್‌ಸಿ ಕಚೇರಿಯಿಂದಲೇ ಎಫ್‌ಡಿಎ ಪ್ರಶ್ನೆ ಪತ್ರಿಕೆ ಲೀಕ್‌

    – ಇದು ಬೇಲಿಯೇ ಎದ್ದು ಹೊಲ ಮೇಯ್ದ ಕಥೆ
    – ಶನಿವಾರ ಪ್ರಶ್ನೆ ಪತ್ರಿಕೆ ಲೀಕ್‌

    ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಕಚೇರಿಯಿಂದಲೇ ಪ್ರಥಮ ದರ್ಜೆ ಸಹಾಯಕ ಪರೀಕ್ಷೆಗಳ(ಎಫ್‌ಡಿಎ) ಪ್ರಶ್ನೆ ಪತ್ರಿಕೆ ಸೋರಿಕೆಯಾದ ವಿಚಾರ ಸಿಸಿಬಿಯ ಪ್ರಾಥಮಿಕ ತನಿಖೆಯ ವೇಳೆ ದೃಢಪಟ್ಟಿದೆ.

    ಇಂದು ಎಫ್‌ಡಿಎ ಪರೀಕ್ಷೆ ನಡೆಯಬೇಕಿತ್ತು. ಆದರೆ ಪರೀಕ್ಷೆ ನಡೆಯುವ ಮುನ್ನವೆ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸರ್ಕಾರ ಪರೀಕ್ಷೆಯನ್ನು ಮುಂದೂಡಿದೆ. ಸಿಸಿಬಿ ಪ್ರಕರಣದ ಸಂಬಂಧ  6 ಮಂದಿಯನ್ನು ಬಂಧಿಸಿದೆ.

    ಸದ್ಯಕ್ಕೆ 6 ಮಂದಿ ಬಂಧನಕ್ಕೆ ಒಳಗಾಗಿದ್ದು ಹಲವರು ಪರಾರಿಯಾಗಿದ್ದಾರೆ. ರಾಚಪ್ಪ, ಚಂದ್ರು ಬಂಧಿತ ಪ್ರಮುಖ ಆರೋಪಿಗಳು. ಬಂಧಿತರಿಂದ 24 ಲಕ್ಷ ರೂ. ನಗದು, 3 ವಾಹನಗಳನ್ನು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ.

    ಕೆಪಿಎಸ್‍ಸಿಯಲ್ಲಿ ಕೆಲಸ ಮಾಡುತ್ತಿದ್ದ ಹಿರಿಯ ಅಧಿಕಾರಿಯಿಂದ ಪ್ರಶ್ನೆ ಪತ್ರಿಕೆ ಬಹಿರಂಗವಾಗಿತ್ತು. ಈ ಅಧಿಕಾರಿಗೆ ಕಮರ್ಷಿಯಲ್ ಟ್ಯಾಕ್ಸ್ ಇನ್ಸ್‌ಪೆಕ್ಟರ್‌ ಚಂದ್ರು ಸಾಥ್‌ ನೀಡಿದ್ದ. ಶನಿವಾರ ಸಂಜೆ ಪ್ರಶ್ನೆಪತ್ರಿಕೆಯನ್ನು ಉಲ್ಲಾಳದಲ್ಲಿರುವ ಫ್ಲ್ಯಾಟ್‌ಗೆ ತೆಗೆದುಕೊಂಡು ಹೋಗಿದ್ದ. ಇನ್ಸ್‌ಪೆಕ್ಟರ್‌ ಚಂದ್ರು ಪ್ರಶ್ನೆಪತ್ರಿಕೆಯನ್ನು ರಾಜ್ಯದ ವಿವಿಧೆಡೆ ಇರುವ ಮಧ್ಯವರ್ತಿಗಳಿಗೆ ಹಂಚಿಕೆ ಮಾಡಲು ಸಂಚು ರೂಪಿಸಿದ್ದ. ಪ್ರಾಥಮಿಕ ತನಿಖೆಯ ವೇಳೆ ಕೆಪಿಎಸ್‍ಸಿ ಅಧಿಕಾರಿ ಒಂದು ಪೇಪರ್‌ಗೆ 10 ಲಕ್ಷ ರೂ. ಡೀಲ್‌ ಮಾಡಿದ್ದ ವಿಚಾರ ಬೆಳಕಿಗೆ ಬಂದಿದೆ.

    ಈ ಬಗ್ಗೆ ಮಾಹಿತಿ ನೀಡಿದ್ದ ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ್, ಕೆಪಿಎಸ್‌ಸಿ ನಡೆಸುವ ಎಫ್‌ಡಿಎ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ಬಗ್ಗೆ ಖಚಿತ ಮಾಹಿತಿ ಬಂದಿತ್ತು. ವಿಶೇಷ ತಂಡವೊಂದನ್ನು ರಚಿಸಿ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಶ್ನೆಪತ್ರಿಕೆ ಹಂಚಲು ಬಳಕೆ ಮಾಡುತ್ತಿದ್ದ ಮೂರು ವಾಹನಗಳನ್ನೂ ಜಪ್ತಿ ಮಾಡಲಾಗಿದೆ. ಸೋರಿಕೆ ಎಲ್ಲಿಂದ ಆಯಿತು ಎಂಬುದು ಇನ್ನಷ್ಟೇ ತಿಳಿಯಬೇಕಿದೆ ಎಂದು ಹೇಳಿದ್ದರು.