ಬೆಂಗಳೂರು: ಸಿಎಂ ಕುರ್ಚಿಗಾಗಿ ಹನಿಟ್ರ‍್ಯಾಪ್ (Honeytrap) ಯತ್ನ ನಡೆದಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ (R Ashok) ಗಂಭೀರ ಆರೋಪ ಮಾಡಿದ್ದಾರೆ.
ವಿಧಾನಸಭಾ ಕಲಾಪ ಮುಂದೂಡಿದ ಬಳಿಕ ಹೊರಗಡೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜಣ್ಣ (Rajanna) ಸಾಮಾನ್ಯ ವ್ಯಕ್ತಿಯಲ್ಲ. ಅವರು ಸರ್ಕಾರದ ಮಂತ್ರಿಯಾಗಿದ್ದಾರೆ. ಅವರೇ ಸದನದಲ್ಲಿ ಆರೋಪ ಮಾಡಿದ್ದಾರೆ. ಈ ಸರ್ಕಾರದಲ್ಲಿ ದಲಿತ ಮಂತ್ರಿಗಳಿಗೆ ರಕ್ಷಣೆ ಇಲ್ಲ ಎಂದು ಕಿಡಿಕಾರಿದರು.
ರಾಜಣ್ಣ ಅವರೇ ಸದನದಲ್ಲಿ 48 ಜನರ ಮೇಲೆ ಹನಿಟ್ರ‍್ಯಾಪ್ ಆಗಿದೆ ಅಂದಿದ್ದಾರೆ. ಈ ಆರೋಪಕ್ಕೆ ಸಿಎಂ ಸರಿಯಾಗಿ ಉತ್ತರ ನೀಡಿಲ್ಲ. ಇದು ಗಂಭೀರ ಪ್ರಕರಣ, ಎಲ್ಲ ಶಾಸಕರ, ಸದನದ, ರಾಜ್ಯದ ಗೌರವದ ಪ್ರಶ್ನೆ. ಸಿಬಿಐ ಅಥವಾ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಹನಿಟ್ರ‍್ಯಾಪ್ ವಿಚಾರ ಸದನದಲ್ಲಿ ಪ್ರಸ್ತಾಪ ಆಗಿದ್ದು ಒಂದು ಗ್ಯಾಂಗ್ ಮಾಡಿದೆ ಎಂದು ಹೇಳಿದ್ದಾರೆ. ಏನಿದು ಕಳ್ಳಾಟ ನಡೆಯುತ್ತಿದ್ಯಾ? ರಾಜಣ್ಣ ಹೇಳಿಕೆ ಸದನದ ಆಸ್ತಿ ಎಂದರು.
ಬೆಂಗಳೂರು: ಅಧಿಕಾರಕ್ಕಾಗಿ ಹೈಕಮಾಂಡ್ ನಾಯಕರ ಬಳಿ ಚಮಚಾಗಿರಿ, ಗುಲಾಮಗಿರಿ ಮಾಡುತ್ತಿರುವವರಿಗೆ ಸ್ವಾಭಿಮಾನಿ ಮಂಡ್ಯದ (Mandya) ಜನರ ಬಗ್ಗೆ ಮಾತನಾಡುವ ಯೋಗ್ಯತೆಯೂ ಇಲ್ಲ, ಅರ್ಹತೆಯೂ ಇಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಡಿ.ಕೆ ಶಿವಕುಮಾರ್ ಅವರ ಮಂಡ್ಯದ ಛತ್ರಿಗಳ ಆಟ ನಿಲ್ಲಿಸಿ ಎಂಬ ಹೇಳಿಕೆ ವಿಚಾರವಾಗಿ ಅವರು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ. ಮಂಡ್ಯ ಎಂದರೆ ಇಂಡಿಯಾ ಎನ್ನುವ ಮಾತಿದೆ. ಮಂಡ್ಯದ ಜನತೆಯ ಸ್ವಾಭಿಮಾನಕ್ಕೆ ಧಕ್ಕೆ ತರುವ ಮಾತಾಡಿದರೆ ಅಡ್ರೆಸ್ ಇಲ್ಲದಂತಾಗುತ್ತೀರಿ, ಹುಷಾರ್ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಛತ್ರಿಗಳು ಎಂದ ಡಿಕೆಶಿ ವಿರುದ್ಧ ಸಿಡಿದೆದ್ದ ಮಂಡ್ಯದ ಜನ!
ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾ.17ರಂದು ನಡೆದ ಯೂತ್ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಡಿಕೆಶಿ ಮಾತನಾಡಿದ್ದರು. ಈ ವೇಳೆ ಮಂಡ್ಯದವ್ರು ಛತ್ರಿಗಳು ಎಂಬ ಪದವನ್ನು ಅವರು ಬಳಸಿದ್ದರು.
ಕಾರ್ಯಕ್ರಮದಲ್ಲಿ ಡಿಸಿಎಂ ಮಾತನಾಡುತ್ತಿದ್ದಾಗ ಜನ ಫಲಕ ಹಾಗೂ ಭಾವುಟಗಳನ್ನು ಪ್ರದರ್ಶಿಸಿದ್ದರು. ಈ ವೇಳೆ ಸಿಟ್ಟಾದ ಅವರು, ಅದೆಲ್ಲ ಕೆಳಗಿಳಿಸಿ, ನಿಮ್ಮ ಮಂಡ್ಯದವ್ರ ಛತ್ರಿಗಳ ಆಟ ನಿಲ್ಲಿಸಿ ಎಂದು ಗದರಿಸಿದ್ದರು. ಈ ಹೇಳಿಕೆಗೆ ಜಿಲ್ಲೆಯಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಜಿಲ್ಲೆ ಜನರಿಗೆ ಡಿಕೆಶಿ ಅವಮಾನ ಮಾಡಿದ್ದಾರೆ. ಮಂಡ್ಯ ಜನರ ಭಿಕ್ಷೆಯಿಂದ ಕಾಂಗ್ರೆಸ್ ಅಧಿಕಾರ ಸಿಕ್ಕಿದೆ. 7 ರಲ್ಲಿ 5 ಕ್ಷೇತ್ರಗಳು ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನ ಡಿಕೆಶಿ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಅಧಿಕಾರಕ್ಕಾಗಿ ಮಂಡ್ಯ ಜನರ ಬಳಿ ಬಂದು ಪೆನ್ನು, ಪೇಪರ್ ಕೊಡಿ ಎಂದು ಅಂಗಲಾಚಿದ್ದು ಮರೆತು ಹೋಯ್ತಾ ಡಿಸಿಎಂ ಅವರೇ? ಮಂಡ್ಯದವರು ಸಿಎಂ ಆಗಿದ್ದಾಗ ಅವರ ಕಾಲಿಗೆ ಬಿದ್ದು ಬೆಳೆದವರು ನೀವು. ಇಂತಹ ದುರಹಂಕಾರಿಗೆ ಸರಿಯಾದ ಬುದ್ಧಿ ಕಲಿಸಬೇಕು. ಅವರು ಕ್ಷಮೆ ಕೇಳಬೇಕು ಎಂದು ಜನ ಆಗ್ರಹಿಸಿದ್ದಾರೆ.
ನವದೆಹಲಿ: ವಿಧಾನಸಭಾ ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧದ ಜಮೀನು ಅಕ್ರಮ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮಾಣಪತ್ರ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಪ್ರಕರಣ ಸಂಬಂಧ ತನಿಖೆ ನಡೆಸಲು ಹೈಕೋರ್ಟ್ 2018 ರಲ್ಲಿ ಆದೇಶ ನೀಡಿತ್ತು. ಎಫ್‌ಐಆರ್ ರದ್ದು ಕೋರಿ ಅಶೋಕ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಅಶೋಕ್, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅಫಿಡವಿಟ್ ಸಲ್ಲಿಸುವಂತೆ ಲೋಕಾಯುಕ್ತಗೆ ಸೂಚನೆ ನೀಡಿದೆ.
ಆ ಸಂದರ್ಭದಲ್ಲಿ ಬಗರ್‌ಹುಕುಂ ಮಂಜೂರಾತಿ ಸಮಿತಿಗೆ ಅಶೋಕ್ ಅಧ್ಯಕ್ಷರಾಗಿದ್ದರು. ಬೆಂಗಳೂರು ಉತ್ತರ ತಾಲ್ಲೂಕು ಸಮಿತಿ ಅಧ್ಯಕ್ಷರಾಗಿದ್ದರು. ಸೋಮನಹಳ್ಳಿಯಲ್ಲಿ 8 ಎಕರೆ ಭೂಮಿ ಅಕ್ರಮ ಹಂಚಿಕೆ ಮಾಡಿದ್ದ ಆರೋಪ ಅವರ ಮೇಲಿತ್ತು. ಪ್ರಕರಣದ ವಿಚಾರಣೆಯನ್ನು ಏ.22 ಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿದೆ.
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕಾಂಗ್ರೆಸ್ ಸರ್ಕಾರ ಆರೋಪಿಗಳನ್ನು ಬಂಧಿಸುವ ಕೆಲಸ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆಯ ಮೇಲೆ ಸಚಿವರು ಅಥವಾ ಮುಖ್ಯಮಂತ್ರಿಗೆ ಸ್ವಲ್ಪವೂ ಹಿಡಿತವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಆಕ್ರೋಶ ವ್ಯಕ್ತಪಡಿಸಿದರು.
ವಿಧಾನಸಭೆಯಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಮಾತನಾಡಿದ ಅವರು, ನಾವೆಲ್ಲರೂ ತಲೆ ತಗ್ಗಿಸುವಂತಹ ಘಟನೆ ರಾಮನಗರದಲ್ಲಿ ನಡೆದಿದೆ. ಬಿಡದಿಯ ಟೊಯೋಟಾ ಕಂಪನಿಯ ಶೌಚಾಲಯದ ಗೋಡೆಯ ಮೇಲೆ ಪಾಕಿಸ್ತಾನ ಜಿಂದಾಬಾದ್ ಎಂದು ಬರೆಯಲಾಗಿದೆ. ಜೊತೆಗೆ ಕನ್ನಡಿಗರ ಬಗ್ಗೆ ಅವಾಚ್ಯವಾಗಿ ನಿಂದಿಸಿ ಬರೆಯಲಾಗಿದೆ. ಇಂತಹ ಕಿಡಿಗೇಡಿಗಳಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತಿದೆ. ಇದು ಬಹಳ ಪ್ರತಿಷ್ಠಿತ ಕಂಪನಿಯಾಗಿದ್ದು, ಎಲ್ಲ ಕಡೆ ಸಿಸಿಟಿವಿ ಕ್ಯಾಮೆರಾ ಇದೆ. ಆದರೂ ಅದನ್ನು ಪರಿಶೀಲಿಸಿ ತಪ್ಪಿತಸ್ಥರನ್ನು ಬಂಧಿಸುವ ಕೆಲಸವನ್ನು ಪೊಲೀಸರು ಇನ್ನೂ ಮಾಡಿಲ್ಲ ಎಂದರು.ಇದನ್ನೂ ಓದಿ: ‘ಪುಷ್ಪ 2’ ನಿರ್ದೇಶಕನ ಜೊತೆ ಶಾರುಖ್ ಖಾನ್ ಸಿನಿಮಾ
ಸ್ವಾತಿ ಲವ್ ಜಿಹಾದ್:
ಹಾವೇರಿ ಜಿಲ್ಲೆಯಲ್ಲಿ ಹೋರಿ ಹಬ್ಬದ ಸ್ನೇಹ ಲವ್ ಜಿಹಾದ್‌ನಲ್ಲಿ ಅಂತ್ಯವಾಗಿದೆ. ಹಾವೇರಿ ಜಿಲ್ಲೆಯ ಯುವತಿ ಸ್ವಾತಿಯನ್ನು ಲವ್ ಜಿಹಾದ್ ಬಲೆಗೆ ಬೀಳಿಸಲಾಗಿತ್ತು. ನಂತರ ಕಿಡಿಗೇಡಿ ಯುವಕರು ಮದುವೆಯ ಪ್ರಸ್ತಾಪ ಮಾಡಿ ಆಕೆಯನ್ನು ನಂಬಿಸಿದ್ದರು. ಬಳಿಕ ಆಕೆಯನ್ನು ಪಾಳು ಬಿದ್ದ ಶಾಲೆಗೆ ಕರೆದುಕೊಂಡು ಹೋಗಿ ಕೇಸರಿ ಟವೆಲ್‌ನಲ್ಲಿ ಸಾಯಿಸಿದ್ದಾರೆ. ಎಫ್‌ಐಆರ್ ಆದ ಬಳಿಕವೂ ತಾಯಿಗೆ ಮಾಹಿತಿ ನೀಡದೆ ಪ್ರಕರಣವನ್ನು ಪೊಲೀಸರು ಮುಚ್ಚಿಹಾಕಿದ್ದಾರೆ. ಈ ಲವ್ ಜಿಹಾದ್ ಪ್ರಕರಣದಲ್ಲಿ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ. ನೇಹಾ ಲವ್ ಜಿಹಾದ್ ಘಟನೆಯಾದಾಗಲೇ ಸರ್ಕಾರ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕಿತ್ತು. ಲವ್ ಜಿಹಾದ್ ನಡೆಯುತ್ತಿದ್ದರೂ ಅದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ದೂರಿದರು.
ಸ್ವಾತಿ ಕುಟುಂಬದ ಸ್ಥಿತಿ ಚೆನ್ನಾಗಿಲ್ಲ. ಅವರ ತಂದೆ ವಿದ್ಯುತ್ ಶಾಕ್ ತಗುಲಿ ತೀರಿಕೊಂಡಿದ್ದರು. ಸ್ವಾತಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಈಗ ಅವರ ಕುಟುಂಬ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದೆ ಎಂದರು.
ಹಂಪಿ ಗ್ಯಾಂಗ್ ರೇಪ್ ಪ್ರಕರಣ:
ಹಂಪಿಯಲ್ಲಿ ವಿದೇಶಿ ಮಹಿಳೆಯ ಮೇಲಿನ ಅತ್ಯಾಚಾರ ದೊಡ್ಡ ಸುದ್ದಿಯಾಗಿದೆ. ಮೂರು ಯುವಕರು ಒಡಿಶಾ ಮೂಲದ ಒಬ್ಬನನ್ನು ಸಾಯಿಸಿ, ಇಸ್ರೇಲ್ ಮಹಿಳೆ ಹಾಗೂ ಹೋಮ್‌ಸ್ಟೇ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದಾರೆ. ಶೇ.60ಕ್ಕೂ ಅಧಿಕ ಪ್ರವಾಸಿಗರು ಇಸ್ರೇಲ್‌ನಿಂದ ರಾಜ್ಯಕ್ಕೆ ಬರುತ್ತಾರೆ. ಇಲ್ಲಿ ಸುರಕ್ಷತೆ ಇರುವ ಕಾರಣಕ್ಕೆ ವಿದೇಶಿಯರು ಭೇಟಿ ನೀಡುತ್ತಾರೆ. ಈ ಘಟನೆಯಿಂದಾಗಿ ಪ್ರವಾಸಿಗರು ಬರುತ್ತಿಲ್ಲ. ಇದರಿಂದಾಗಿ ಹಂಪಿಗೆ ಕೆಟ್ಟ ಹೆಸರು ಬರುವುದರ ಜೊತೆಗೆ, ಆರ್ಥಿಕತೆ ಕುಸಿದಿದೆ. ಇಷ್ಟೆಲ್ಲ ಆದ ನಂತರವೂ, ವಿದೇಶಿಯರು ನಮ್ಮನ್ನು ಹೊಗಳಿದ್ದಾರೆ ಎಂದು ರಾಜ್ಯಪಾಲರ ಭಾಷಣದಲ್ಲಿ ಹೇಳಿದ್ದಾರೆ ಎಂದರು.
ತಲೆ ತಗ್ಗಿಸುವಂತಹ ಅಪರಾಧಗಳು ನಡೆಯುತ್ತಿದ್ದರೂ ಸರ್ಕಾರ ಯಾರನ್ನೂ ಬಂಧಿಸಿಲ್ಲ. ಇದರಿಂದಾಗಿ ಸರ್ಕಾರ ಬದುಕಿದೆಯೇ ಸತ್ತಿದೆಯೇ ಎಂಬ ಪ್ರಶ್ನೆ ಬರುತ್ತಿದೆ. ಹೇಳುವವರು, ಕೇಳುವವರು ಯಾರೂ ಇಲ್ಲದೆ ಗೂಂಡಾ ರಾಜ್ಯ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಸುವ್ಯವಸ್ಥೆ ಸರಿಯಾಗಿದೆ ಎಂದು ಸಮರ್ಥನೆ ಮಾಡಿಕೊಳ್ಳುತ್ತಾರೆ. ಇಂತಹ ಸ್ಥಿತಿಯನ್ನು ಸೃಷ್ಟಿಸಿದ ಸರ್ಕಾರದ ನಡೆಯನ್ನು ಖಂಡಿಸುತ್ತೇನೆ ಎಂದು ಕಿಡಿಕಾರಿದರು.ಇದನ್ನೂ ಓದಿ: ಜಮೀನು ತೆರವು ವಿಚಾರ; ಮಿಕ್ಕಿದ್ದಕ್ಕೆಲ್ಲಾ ದಾಖಲೆ ಇರುತ್ತೆ, ಇದಕ್ಕೆ ಇರಲ್ವಾ? – ಹೆಚ್‌ಡಿಕೆ ವಿರುದ್ಧ ಪ್ರಿಯಾಂಕ್ ಖರ್ಗೆ ವ್ಯಂಗ್ಯ
ಬೆಂಗಳೂರು: ಕೆಪಿಎಸ್‍ಸಿ ಪರೀಕ್ಷೆ (KPSC Exam) ಅವಾಂತರ ಮತ್ತು ಅಕ್ರಮಗಳ ಬಗ್ಗೆ ಕಲಾಪದಲ್ಲಿ ನಡೆದ ಚರ್ಚೆಗೆ ಸಿಎಂ ಸಿದ್ದರಾಮಯ್ಯ (Siddaramaiah) ಉತ್ತರ ನೀಡಿದ್ದಾರೆ.
ಕೆಪಿಎಸ್‍ಸಿಯಲ್ಲಿ ಅನೇಕ ಸಲ ಅವಾಂತರ, ಹಗರಣ ಆಗಿದೆ. ನಾವು ಇದನ್ನ ಅಲ್ಲಗಳೆಯಲ್ಲ. ಅಶೋಕ್ (R.Ashok) ಆರೋಪಕ್ಕೆ ನಮ್ಮ ತಕರಾರಿಲ್ಲ. ಕೆಪಿಎಸ್‍ಸಿ ಸುಧಾರಣೆ ಆಗಬೇಕು. ಇದಕ್ಕೆ ವಿಪಕ್ಷಗಳು ಸಲಹೆ ಕೊಡಲಿ, ಸ್ವೀಕರಿಸ್ತೇವೆ. ಕೆಪಿಎಸ್‍ಸಿ ನಿಯಮಾವಳಿಗಳಲ್ಲಿ ಕೆಲ ಬದಲಾವಣೆ ಮಾಡ್ತಿದ್ದೇವೆ. ಕಾಯ್ದೆಯಲ್ಲಿ ತಿದ್ದುಪಡಿ ತರುತ್ತಿದ್ದೇವೆ ಹೇಳಿದ್ದಾರೆ.
ಕೆಪಿಎಸ್‍ಸಿ ಭಾಷಾಂತರಕಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಕ್ರಮ ತೆಗೆದುಕೊಳ್ಳೋಲಾಗುವುದು. ಭಾಷಾಂತರ ಗೊಂದಲ ತಡೆಗೆ ಮೊದಲು ಕನ್ನಡದಲ್ಲಿ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ನಂತರ ಇಂಗ್ಲೀಷ್‍ಗೆ ಭಾಷಾಂತರ ಮಾಡಲು ಕೆಪಿಎಸ್‍ಸಿಗೆ ಸೂಚನೆ ನೀಡಿದ್ದಾರೆ.
ಈಗ ನಡೆದಿರುವ ಕೆಪಿಎಸ್‌ಸಿ ಪರೀಕ್ಷೆಯನ್ನು ರದ್ದು ಮಾಡಬೇಕು. ಮರು ಪರೀಕ್ಷೆ ನಡೆಸಬೇಕು ಎಂಬ ಬಿಜೆಪಿ ಆಗ್ರಹವನ್ನು ಸಿಎಂ ತಳ್ಳಿ ಹಾಕಿದ್ದರು. ನನಗೆ ಮರುಪರೀಕ್ಷೆಗೆ ಆದೇಶ ನೀಡಲು ಬರಲ್ಲ ಎಂದಿದ್ದಾರೆ.
ಬೆಂಗಳೂರು: ಆಕ್ಸ್‌ಫರ್ಡ್ ವಿವಿಯ (Oxford University) ಬ್ಲಾಗ್‌ನಲ್ಲಿ ಕರ್ನಾಟಕದ (Karnataka) ಅಭಿವೃದ್ಧಿ ಮಾದರಿಯನ್ನು ಶ್ಲಾಘಿಸಲಾಗಿದೆ ಎಂದು ಎಂದು ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖಿಸಲಾಗಿತ್ತು. ಇದರ ಅಸಲಿಯತ್ತನ್ನು ಸದನದಲ್ಲಿ ಆರ್ ಅಶೋಕ್ (R Ashok) ಬಯಲು ಮಾಡಿದ್ದಾರೆ.
ಜೆಹೋಶ್ ಪಾಲ್ ವಿದೇಶಿ ಬ್ಲಾಗ್‌ನಲ್ಲಿ ಈ ಲೇಖನವನ್ನು ಬರೆದಿದ್ದಾರೆ. ಅರ್ಥಶಾಸ್ತ್ರಜ್ಞ ಎಂದು ಹೇಳಿಕೊಳ್ಳುವ ಇವರು ಸಿಎಂ ಸಿದ್ದರಾಮಯ್ಯ(CM Siddaramaiah) ಮತ್ತು ಪ್ರಿಯಾಂಕ್ ಖರ್ಗೆ (Priyank Kharge) ಕಚೇರಿಯಲ್ಲಿ ಕೆಲಸ ಮಾಡಿದ್ದರು. 2018 ರಲ್ಲಿ ಪ್ರಿಯಾಂಕ್ ಖರ್ಗೆಯವರ ಕಚೇರಿಯಲ್ಲಿ ಎರಡು ತಿಂಗಳಲ್ಲಿ ಕೆಲಸ ಮಾಡಿದ್ದ ಜೆಹೋಶ್ ಪಾಲ್ ನಂತರ 2024 ರಲ್ಲಿ ಸಿಎಂ ಕಚೇರಿಯಲ್ಲೂ ಜೆಹೋಶ್ ಪಾಲ್ ಕೆಲಸ ಮಾಡಿದ್ದರು ಎಂದು ತಿಳಿಸಿದರು.
The shameless @INCKarnataka Govt has misused the Hon’ble Governer’s Address to the state legislature by inserting lies and half-truths, in what should have been a report card of the accomplishments of the Govt in the previous year and broad governance agenda for the next year.… pic.twitter.com/gGMSmYo29W
ವಿಶ್ವ ಸಂಸ್ಥೆಯ ಮುಖ್ಯಸ್ಥರೇ ರಾಜ್ಯಕ್ಕೆ ಬಂದು ರಾಜ್ಯದ ಅಭಿವೃದ್ಧಿ ಮಾದರಿ, ಯೋಜನೆಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ ಎಂದು ಆ ಬ್ಲಾಗ್‌ನಲ್ಲಿ ಉಲ್ಲೇಖವಾಗಿದೆ. ಈ ಲೇಖನವನ್ನು 2024 ರ ಮಾರ್ಚ್ 27 ರಂದು ಹ್ಯೂಮನ್ ರೈಟ್ಸ್ ಹಬ್ ಬ್ಲಾಗ್‌ಗೆ ಬರೆಯಲಾಗಿದೆ ಎಂದು ಜೆಹೋಶ್ ಪಾಲ್ ಅವರ ಫೋಟೋವನ್ನು ಅಶೋಕ್ ಸದನದಲ್ಲಿ ಪ್ರದರ್ಶಿಸಿದರು.
ಹೊಗಳುಭಟರಿಂದ ಆ ರೀತಿ ಸಿಎಂ ಬರೆಸಿಕೊಂಡು ಅದನ್ನು ರಾಜ್ಯಪಾಲರ ಭಾಷಣದಲ್ಲಿ ಹೊಗಳಿದ್ದೇ ದೊಡ್ಡ ಅಪಮಾನ ಎಂದು ಅಶೋಕ್ ಕೆಣಕಿದರು.
ಬೆಂಗಳೂರು: ಡಿಕೆ ಶಿವಕುಮಾರ್ (DK Shivakumar) ತಮ್ಮ ಕರ್ಮ ಕಳೆಯಲು ಗಂಗಾಸ್ನಾನ ಮಾಡಿದ್ದಾರೆ ಎಂದು ಆರ್. ಅಶೋಕ್ (R Ashok) ವ್ಯಂಗ್ಯವಾಡಿದರು.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಮಾತನಾಡಿದ ಅವರು, ನಿಮ್ಮ ಡಿಸಿಎಂ ಎಲ್ಲ ಕರ್ಮಗಳು ಕಳೆಯಲಿ ಎಂದು ಗಂಗೆ ಸ್ನಾನ ಮಾಡಿ ಬಂದಿದ್ದಾರೆ. ಮಹದೇವಪ್ಪ ಮಹದೇಶ್ವರ ಬೆಟ್ಟದ ಕಡೆಯವರು, ಶಿವನ ತಲೆ ಮೇಲೆ ಗಂಗೆ ಇದೆ. ಆದರೆ ಈಗ ಕಾಂಗ್ರೆಸ್ ಸರ್ಕಾರದಲ್ಲಿ ಗಂಗೆಯೇ ಇಲ್ಲ ಎಂದರು. ಇದನ್ನೂ ಓದಿ: ಮಿಲನಾ ಬೆಸ್ಟ್ ಮದರ್: ಪತ್ನಿಯನ್ನು ಹೊಗಳಿದ ಡಾರ್ಲಿಂಗ್ ಕೃಷ್ಣ
ಇದೇ ವೇಳೆ ಸುನೀಲ್ ಕುಮಾರ್ ಮಾತನಾಡಿ, ಗಂಗಾ ಕಲ್ಯಾಣ ಯೋಜನೆ ಅನುಷ್ಠಾನ ಆಗುತ್ತಿಲ್ಲ, ಗಂಗಾ ಕಲ್ಯಾಣ ಮುಚ್ಚಿದ್ದೇವೆ ಎಂದು ಘೋಷಣೆ ಮಾಡಿಬಿಡಿ. ಪವಿತ್ರ ಗಂಗೆಯ ಬಗ್ಗೆ ಕಾಂಗ್ರೆಸ್ ಅವರು ಏನೆಲ್ಲ ಮಾತಾಡಿದ್ದಾರೆ ಗೊತ್ತಿದೆ. ಗಂಗೆಯ ವಿಚಾರದಲ್ಲಿ ರಾಜಕೀಯ ಬೇಡ, ಗಂಗಾ ಕಲ್ಯಾಣ ಯೋಜನೆ ಸರಿಯಾಗಿ ಮಾಡಿ ಎಂದು ತಿರುಗೇಟು ಕೊಟ್ಟರು.
ಈ ವೇಳೆ ಮಧ್ಯಪ್ರವೇಶಿಸಿ ಸಚಿವ ಹೆಚ್.ಸಿ.ಮಹದೇವಪ್ಪ ಮಾತನಾಡಿ, ನಾನು ರಾಜಕೀಯ ಮಾಡುವುದಿಲ್ಲ. ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ಹೆಚ್ಚಿನ ಬೇಡಿಕೆಯಿದ್ದು, ಸರ್ಕಾರ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಿದೆ ಎಂದು ಭರವಸೆ ನೀಡಿದರು. ಬಳಿಕ ಸುನೀಲ್ ಕುಮಾರ್ ಪ್ರತಿಕ್ರಿಯಿಸಿ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅನುದಾನ ಕಡಿತ ವಿಚಾರವಾಗಿ, ನನ್ನನ್ನು ಮನವೊಲಿಸುವುದನ್ನ ಬಿಟ್ಟು ಅನುದಾನ ಬಿಡುಗಡೆ ಮಾಡಿ. ಮುಖ್ಯಮಂತ್ರಿಗಳಿಗೆ ಹತ್ತಿರವಾಗಿ ಇರೋದು ನೀವು, ಕಿಚನ್ ಕ್ಯಾಬಿನೆಟ್ ನಿಮ್ಮ ಬಳಿ ಇದೆ. ಹೀಗಿರುವಾಗ ಅನುದಾನ ಇಲ್ಲ ಅಂದರೆ ಹೇಗೆ ಎಂದು ಕಾಲೆಳೆದರು.ಇದನ್ನೂ ಓದಿ: ಅನುಮತಿ ಇಲ್ಲದೇ ಅರಣ್ಯ ಭೂಮಿಯಲ್ಲಿ ಶೂಟಿಂಗ್ ಮಾಡಿದ್ರಾ?: ತರುಣ್ ಸುಧೀರ್ ಸ್ಪಷ್ಟನೆ
ಬೆಂಗಳೂರು: ರಾಜ್ಯಪಾಲರಿಗೆ (Governor) ಅಪಮಾನ ಮಾಡಿರುವ ಕಾಂಗ್ರೆಸ್ ಸರ್ಕಾರ (Congress Government) ಕೊನೆಗೆ ಅವರಿಂದಲೇ ಹೊಗಳಿಸಿಕೊಳ್ಳಬೇಕಾಯಿತು. ರಾಜ್ಯಪಾಲರಿಂದ ಸರ್ಕಾರ ಸುಳ್ಳು ಭಾಷಣ ಮಾಡಿಸಿದೆ ಎಂದು ಬಿಜೆಪಿ ನಾಯಕರು (BJP Leaders) ಟೀಕಿಸಿದರು.
ರಾಜ್ಯಪಾಲರ ಭಾಷಣ ಬಳಿಕ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra), ಈ ಸರ್ಕಾರ್ ನಟ್ ಮತ್ತು ಬೋಲ್ಟ್ ಎರಡೂ ಸಡಿಲ ಆಗಿದೆ ಎಂಬುದು ಸ್ಪಷ್ಟ. ಅಭಿವೃದ್ಧಿ ವಿಷಯದಲ್ಲಿ ಈ ಸರಕಾರದ ನಟ್ ಮತ್ತು ಬೋಲ್ಟ್ ಲೂಸ್ ಆಗಿದೆ. ಇದು ಮಾನ್ಯ ರಾಜ್ಯಪಾಲರ ಭಾಷಣದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಕಿಡಿ ಕಾರಿದರು.
ಒಂದು ಕಡೆ ಹೈನುಗಾರಿಕೆಗೆ ಪ್ರೋತ್ಸಾಹಧನದ ಪ್ರಸ್ತಾಪ ಮಾಡಿದ್ದಾರೆ. ಸಾವಿರಾರು ಕೋಟಿ ಹಳೆಯ ಪ್ರೋತ್ಸಾಹಧನ ಹಾಗೇ ಬಾಕಿ ಉಳಿಸಿಕೊಂಡಿದ್ದಾರೆ. ಪ್ರಾದೇಶಿಕ ಅಸಮಾನತೆ ಹೋಗಲಾಡಿಸಲು 90 ಸಾವಿರ ಕೋಟಿ ರೂ. ಖರ್ಚು ಮಾಡುವುದಾಗಿ ಹೇಳಿದ್ದಾರೆ. ಕಳೆದೆರಡು ವರ್ಷಗಳಲ್ಲಿ ಎಷ್ಟು ಮೀಸಲಿಟ್ಟಿದ್ದಾರೆ? ಎಷ್ಟು ಖರ್ಚಾಗಿದೆ ಎಂದು ಪ್ರಶ್ನಿಸಿದರು.
ರಾಜ್ಯಪಾಲರ ಭಾಷಣ ಕೇಳಿಸಿಕೊಂಡರೆ ರಾಜ್ಯಪಾಲರ ಸಮಯವನ್ನು ಕೂಡ ಈ ಸರ್ಕಾರ ವ್ಯರ್ಥ ಮಾಡಿದೆ. ಅಭಿವೃದ್ಧಿಯ ವೇಗವನ್ನು ಚುರುಕುಗೊಳಿಸುವುದರಲ್ಲಿ ಮತ್ತು ಸರಕಾರದ ಹಣಕಾಸಿನ ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸುವಲ್ಲಿ ಯಶಸ್ವಿಯಾಗಿದೆ ಎಂಬ ಹಸಿಸುಳ್ಳನ್ನು ಈ ಕಾಂಗ್ರೆಸ್ ಸರಕಾರವು ರಾಜ್ಯಪಾಲರ ಬಾಯಲ್ಲಿ ಹೇಳಿಸಿದೆ ಎಂದು ವಿಜಯೇಂದ್ರ ಟೀಕಿಸಿದರು. ಇದನ್ನೂ ಓದಿ: ರಾಮ ಮಂದಿರದ ಮೇಲೆ ಹ್ಯಾಂಡ್ ಗ್ರೆನೇಡ್ ದಾಳಿಗೆ ಸಂಚು – ಶಂಕಿತ ಭಯೋತ್ಪಾದಕ ಅರೆಸ್ಟ್
ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ಅವರು ಮಾತನಾಡಿ, ಕರ್ನಾಟಕದ ಇತಿಹಾಸದಲ್ಲಿ ಅತ್ಯಂತ ಕಳಪೆ ಸಾಧನೆ ಮಾಡಿದ ಸರಕಾರ ಇದೆಂದು ದೂರಿದರು. ಆದರೆ, ಮಾನ್ಯ ಗವರ್ನರ್ ಕೈಯಲ್ಲಿ ತಾವೇನೋ ಚಾಂಪಿಯನ್ ಎಂಬಂತೆ ಹೇಳಿಕೊಂಡಿದ್ದಾರೆ. ಇದಕ್ಕೆ ಕಾಂಗ್ರೆಸ್ ಸರಕಾರಕ್ಕೆ ನಾಚಿಕೆ ಆಗಬೇಕು ಎಂದು ನುಡಿದರು.
ಒಂದು ರೀತಿಯ ಪಾಪರ್ ಚೀಟಿ ಎತ್ತಿಕೊಂಡ ಈ ಸರಕಾರವು ಕೇವಲ ಸುಳ್ಳುಗಳನ್ನು ಪಟ್ಟಿ ಮಾಡಿ ಗೌರವಾನ್ವಿತ ರಾಜ್ಯಪಾಲರ ಕಡೆಯಿಂದ ಹೇಳಿಸಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಅವರು ಆಕ್ಷೇಪಿಸಿದರು.
– ಖುದ್ದು ಸಿದ್ದರಾಮಯ್ಯನವರೇ ಅಧಿಕಾರ ಬಿಡುವಂತೆ ಡಿಕೆಶಿ ಮಾಡ್ತಾರೆಂದ ವಿಪಕ್ಷ ನಾಯಕ
ಬೆಂಗಳೂರು: ಡಿಕೆಶಿ ಸಿಎಂ ಆಗೋದನ್ನು ಯಾರಿಂದಲೂ ತಪ್ಪಿಸಲು ಆಗಲ್ಲ ಎಂದು ವೀರಪ್ಪ ಮೊಯ್ಲಿ (Veerappa Moily) ಹೇಳಿದಾಗ ಹಾಲಿನ ಮಳೆಯೋ, ಜೇನಿನ ಹೊಳೆಯೋ ಎನ್ನುವಂತ ಖುಷಿ ಡಿಕೆಶಿ ಮೊಗದಲ್ಲಿ ಇತ್ತು ಎಂದು ವಿಪಕ್ಷ ನಾಯಕ ಆರ್ ಅಶೋಕ್ (R Ashok) ಲೇವಡಿ ಮಾಡಿದರು.
ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿಕೆ ಕುರಿತು ಮಾಧ್ಯಮದರೊಂದಿಗೆ ಪ್ರತಿಕ್ರಿಯಿಸಿದ ಅವರು, ನಾನೂ ಕೂಡಾ ಮೊಯ್ಲಿಯವರ ಅಬ್ಬರದ ಭಾಷಣ ನೋಡಿದೆ. ಡಿಕೆಶಿ ಸಿಎಂ ಆಗೋದನ್ನು ಯಾರಿಂದಲೂ ತಪ್ಪಿಸಲು ಆಗಲ್ಲ ಅಂದಿದ್ದಾರೆ. ಆಗ ಡಿಕೆಶಿ ಮೊಗದಲ್ಲಿ ಹಾಲಿನ ಮಳೆಯೋ, ಜೇನಿನ ಹೊಳೆಯೋ ಎನ್ನುವಂತಹ ಖುಷಿ ಇತ್ತು ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ – ಪಶುಸಂಗೋಪನೆ ಇಲಾಖೆಯಿಂದ ಕೋಳಿ ಸೇವನೆಗೆ ಮಾರ್ಗಸೂಚಿ ಪ್ರಕಟ
ಇದು ಸಿದ್ದರಾಮಯ್ಯ ಅವರ ಲಾಸ್ಟ್ ಬಜೆಟ್ ಆಗಬಹುದು. ಲಾಸ್ಟ್ ಆದರೂ ಲೀಸ್ಟ್ ಅಲ್ಲ. ಅತೀ ಹೆಚ್ಚು ಸಾಲಮಾಡಿ ಡಿಕೆಶಿಗೆ ಬಿಟ್ಟು ಹೋಗಬಹುದು. ಸಿದ್ದರಾಮಯ್ಯ ಇರುತ್ತಾರೋ, ಹೋಗುತ್ತಾರೆ ಎನ್ನುವ ಎಪಿಸೋಡ್ ಕಳೆದ 2 ವರ್ಷಗಳಿಂದ ನಡೆಯುತ್ತಲೇ ಇದೆ ಎಂದು ಹೇಳಿದರು. ಇದನ್ನೂ ಓದಿ: ಗ್ಯಾರಂಟಿಗಳಿಂದ ಕಾಂಗ್ರೆಸ್ ಭಿಕ್ಷಾಪಾತ್ರೆ ಹಿಡಿಯುವ ಹಂತಕ್ಕೆ ಬಂದಿದೆ: ಆರ್. ಅಶೋಕ್
ಮೊಯ್ಲಿಯವರು ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ಆಗಿದ್ದವರು. ಅವರಿಗೆ ಪವರ್ ಶೇರ್ ಒಪ್ಪಂದದ ಬಗ್ಗೆ ಗೊತ್ತಿದೆ. ಹಾಗಾಗಿ ಧೈರ್ಯವಾಗಿ ಮೊಯ್ಲಿ ಹಾಗೆ ಹೇಳಿದ್ದಾರೆ. ಆದರೆ ಸಿದ್ದರಾಮಯ್ಯ ನಾನೇ ಸಿಎಂ ಅಂತಿದ್ದಾರೆ. ನಾವು ಮಾತನಾಡಿದರೆ ಜಾತಕ ಹೇಳುತ್ತಾರೆ ಅಂತಾರೆ. ಹಾಗಾದರೆ ಶನಿಬಲ, ಗುರುಬಲ ಯಾಕೆ ಕೇಳುತ್ತಾರೆ. ಕೋಡಿ ಮಠದ ಸ್ವಾಮೀಜಿ ಸಹ ಸಿದ್ದರಾಮಯ್ಯ ಸುಲಭಕ್ಕೆ ಅಧಿಕಾರ ಕೊಡಲ್ಲ ಅಂದಿದ್ದಾರೆ. ನಾನು, ಯಾವಾಗ ಒದ್ದು ಕಿತ್ತುಕೊಳ್ಳುತ್ತೀರಾ ಅಂತ ಹೇಳಿದ್ದಕ್ಕೂ ಕೋಡಿಮಠದ ಸ್ವಾಮೀಜಿ ಹೇಳಿಕೆಗೂ, ಮೊಯ್ಲಿ ಹೇಳಿಕೆಗೂ ತಾಳೆ ಆಯ್ತಲ್ಲ. ಸಿಎಂ ಸ್ಥಾನ ಸಾಕಪ್ಪ ಅಂತ ಖುದ್ದು ಸಿದ್ದರಾಮಯ್ಯ ಅವರೇ ಅಧಿಕಾರ ಬಿಟ್ಟು ಹೋಗುವಂತೆ ಡಿಕೆಶಿ ಮಾಡುತ್ತಾರೆ ಎಂದರು. ಇದನ್ನೂ ಓದಿ: ಗ್ಯಾರಂಟಿ ಎಫೆಕ್ಟ್ – ರಸ್ತೆ ಗುಂಡಿ ಮುಚ್ಚೋಕು ಸರ್ಕಾರದ ಬಳಿ ದುಡ್ಡಿಲ್ಲ: ಹೆಚ್.ಟಿ ಮಂಜು
– ಯಾವ ಮುಖ ಇಟ್ಕೊಂಡು ರಾಜ್ಯಪಾಲರಿಂದ ಸರ್ಕಾರದ ಸಾಧನೆ ಹೇಳಿಸಿಕೊಳ್ತೀರಿ; ವಾಗ್ದಾಳಿ
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ಭಿಕ್ಷಾಪಾತ್ರೆ ಹಿಡಿಯುವ ಹಂತಕ್ಕೆ ಬಂದಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ (R Ashok) ವಾಗ್ದಾಳಿ ನಡೆಸಿದ್ದಾರೆ.
ವಿಧಾನಸಭೆ ಬಜೆಟ್ ಅಧಿವೇಶನದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಪ್ರಜಾಪ್ರಭುತ್ವ ದಮನ ಮಾಡುತ್ತಿದೆ. ಅಂಬೇಡ್ಕರ್ ಸಂವಿಧಾನವನ್ನು ಹೆಚ್ಚು ತಿದ್ದುಪಡಿ ಮಾಡಿದ್ದೇ ಕಾಂಗ್ರೆಸ್. ಈಗ ಸರ್ಕಾರ, ರಾಜ್ಯಪಾಲರ ಹಲವು ಅಧಿಕಾರ ಮೊಟಕು ಮಾಡುತ್ತಿದೆ. ರಾಜ್ಯಪಾಲರಿಗೆ ಕಾಂಗ್ರೆಸ್ ಸರ್ಕಾರ ಅಪಮಾನ ಮಾಡುತ್ತಿದೆ ಎಂದು ದೂರಿದ್ದಾರೆ. ಇದನ್ನೂ ಓದಿ: ಅಮೆರಿಕಕ್ಕೆ ಕೃತಜ್ಞತೆ ಸಲ್ಲಿಸದ ದಿನವೇ ಇಲ್ಲ – ಟ್ರಂಪ್ ಜೊತೆ ವಾಗ್ವಾದದ ಬಳಿಕ ಝಲೆನ್ಸ್ಕಿ ವಿಡಿಯೋ ರಿಲೀಸ್
ಹಲವು ಮಸೂದೆಗಳ ವಿಚಾರದಲ್ಲಿ ರಾಜ್ಯಪಾಲರು ಕೇಳಿರುವುದಕ್ಕೆ ಸ್ಪಷ್ಟನೆ ಕೊಡದೇ ಬೊಬ್ಬೆ ಹಾಕುತ್ತಿದ್ದಾರೆ. ಗ್ಯಾರಂಟಿಗಳಿಂದ ಕಾಂಗ್ರೆಸ್ ಭಿಕ್ಷಾಪಾತ್ರೆ ಹಿಡಿಯುವ ಹಂತಕ್ಕೆ ಬಂದಿದೆ. ಯಾವ ರಾಜ್ಯಪಾಲರಿಗೆ ಅವಹೇಳನ ಮಾಡಿದ್ರೋ ಅದೇ ರಾಜ್ಯಪಾಲರಿಂದ ಇವತ್ತು ಸರ್ಕಾರವನ್ನು ಹೊಗಳಿಸಿಕೊಳ್ಳುತ್ತಿದ್ದಾರೆ. ಇವರಿಗೆ ನಾಚಿಕೆ ಆಗಬೇಕು. ಯಾವ ಮುಖ ಇಟ್ಕೊಂಡು ರಾಜ್ಯಪಾಲರಿಂದ ಸರ್ಕಾರದ ಸಾಧನೆ ಹೇಳಿಸಿಕೊಳ್ತೀರಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಕೇಸ್ – ಸತೀಶ್ ಜಾರಕಿಹೊಳಿ ಆಪ್ತೆ ಅರೆಸ್ಟ್