Tag: r ashok

  • ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ: ಆರ್.ಅಶೋಕ್

    ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ: ಆರ್.ಅಶೋಕ್

    – ಮಾ.7 ರ ಬಜೆಟ್ ಮಂಡನೆ ದಿನ ಪಾದಯಾತ್ರೆ, ಪ್ರತಿಭಟನೆ

    ಬೆಂಗಳೂರು: ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಧಿವೇಶನದ ಮೊದಲ ದಿನ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ತಿಳಿಸಿದರು.

    ಬೆಂಗಳೂರಿನಲ್ಲಿಂದು ಮಾತಾಡಿದ ಅಶೋಕ್, ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿದೆ. ಒಂದು ಕಡೆ ಅಪಮಾನ ಮಾಡಿದರೆ, ಮತ್ತೊಂದು ಕಡೆ ಅವರಿಂದಲೇ ಸರ್ಕಾರಕ್ಕೆ ಮೆಚ್ಚುಗೆ ಹೇಳುವ ಮಾತನ್ನು ಆಡಿಸಲಾಗುತ್ತಿದೆ. ಇದನ್ನು ವಿರೋಧಿಸಿ ಬಿಜೆಪಿಯಿಂದ ಮಾ.3 ರಂದು ಪ್ರತಿಭಟಿಸಲಾಗುವುದು‌ ಎಂದರು.

    ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಕಾಂಗ್ರೆಸ್ ಶಾಸಕರೇ ಈ ಮಾತನ್ನು ಹೇಳುತ್ತಿದ್ದಾರೆ. ಇದರ ಜೊತೆಗೆ ಹಣ ಇಲ್ಲದೆ ಒಂದು ಲಕ್ಷ ಕೋಟಿ ರೂ. ಸಾಲ ಮಾಡಲಾಗುತ್ತಿದೆ. ಜನರ ಮೇಲೆ ತೆರಿಗೆ ಹೊರೆ ಹೇರಲಾಗುತ್ತಿದೆ. ಇದನ್ನು ಖಂಡಿಸಿ ಮಾ.7 ರಂದು ಶಾಸಕರ ಭವನದಿಂದ ವಿಧಾನಸೌಧಕ್ಕೆ ಪಾದಯಾತ್ರೆ ಹಾಗೂ ಪ್ರತಿಭಟನೆ ಮಾಡಲಾಗುವುದು ಎಂದು ಅಶೋಕ್ ತಿಳಿಸಿದರು.

    ಸಿಎಂ ಸಿದ್ದರಾಮಯ್ಯನವರ ಸರ್ಕಾರ ದಲಿತರ ಹಣವನ್ನು ಗ್ಯಾರಂಟಿಗೆ ಬಳಸಿದೆ. ದಲಿತರ ಹಣವನ್ನು ದಲಿತರಿಗೆ ಸಂಬಂಧಿಸಿದ ಯೋಜನೆಗಳಿಗೆ ಮಾತ್ರ ಬಳಸಬೇಕು. ಚುನಾವಣೆ ಸಮಯದಲ್ಲಿ ಎಲ್ಲರಿಗೂ ಫ್ರೀ ಎಂದು ಹೇಳಿ, ಈಗ ದಲಿತರ ಹಣ ಬಳಸಲಾಗುತ್ತಿದೆ. ಬಿಜೆಪಿಯ 40% ಕಮಿಷನ್ ಹಣ ಉಳಿಸಿ ಗ್ಯಾರಂಟಿಗೆ ಬಳಸಲಾಗುವುದು ಎನ್ನಲಾಗಿತ್ತು. ಈಗ ಗುತ್ತಿಗೆದಾರರೇ ಕಾಂಗ್ರೆಸ್ ಸರ್ಕಾರದ ಕಮಿಶನ್ ಬಗ್ಗೆ ಹೇಳಿದ್ದಾರೆ ಎಂದರು.

    ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಗ್ಗಿ ಬಗ್ಗಿ ನಡೆಯಬೇಕೆಂದು ಹೇಳಿದ್ದರು. ಆ ಚಾಳಿಯನ್ನೇ ಮುಂದುವರಿಸಿ, ಸಿನಿಮಾ ಕಲಾವಿದರಿಗೆ ನೆಟ್ ಬೋಲ್ಟ್ ಟೈಟ್ ಮಾಡುತ್ತೇನೆ ಎಂದಿದ್ದಾರೆ. ಮೊದಲು ಸಚಿವ ರಾಜಣ್ಣ ಸೇರಿದಂತೆ ಇವರಿಗೆ ವಿರೋಧ ಮಾಡುತ್ತಿರುವವರಿಗೆ ನೆಟ್ ಬೋಲ್ಟ್ ಸರಿ ಮಾಡಲಿ. ಇವರು ಯಾವುದೇ ಕಲಾವಿದರನ್ನು ಆಹ್ವಾನಿಸಿಲ್ಲ. ಕಲಾವಿದರಿಗೆ ಧಮ್ಕಿ ಹಾಕುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಕಲಾವಿದರು ಕಾಂಗ್ರೆಸ್ ಪಕ್ಷದ ಗುಲಾಮರಲ್ಲ. ಇವರ ಆಶೀರ್ವಾದ ಪಡೆದು ಸಿನಿಮಾಗಳು ಯಶಸ್ವಿಯಾಗುತ್ತಿಲ್ಲ ಎಂದು ಹೇಳಿದರು.

    ಧಮ್ಕಿ ಹಾಕುವುದು, ಗೂಂಡಾಗಿರಿ ಮಾಡುವುದು ಪ್ರಜಾಪ್ರಭುತ್ವದಲ್ಲಿ ನಡೆಯುವುದಿಲ್ಲ. ಸಿನಿಮಾ ರಂಗಕ್ಕೆ ಬಿಜೆಪಿ ಸರ್ಕಾರ ಸಾಕಷ್ಟು ನೆರವು ನೀಡಿತ್ತು. ಇಂದು ಅಂಬರೀಶ್ ಅವರು ಇದ್ದಿದ್ದರೆ ಸರಿಯಾಗಿ ಉತ್ತರ ನೀಡುತ್ತಿದ್ದರು‌. ಸಿನಿಮಾ ರಂಗದವರು ಈ ಹೇಳಿಕೆಯನ್ನು ಖಂಡಿಸಬೇಕು. ಇದು ಕಲಾವಿದರಿಗೆ ಮಾಡುವ ಅಪಮಾನ. ಡಿ.ಕೆ.ಶಿವಕುಮಾರ್ ಕ್ಷಮೆ ಕೇಳಲಿ ಎಂದು ಆಗ್ರಹಿಸಿದರು‌.

    ಪ್ರಧಾನಿ ನರೇಂದ್ರ ಮೋದಿಯವರು, ಶರದ್ ಪವಾರ್, ದೇವೇಗೌಡ ಸೇರಿದಂತೆ ಎಲ್ಲರಿಗೂ ಅಪಾರ ಗೌರವ ನೀಡುತ್ತಾರೆ‌. ಅವರು ಗೌರವ ನೀಡುವುದರಲ್ಲಿ ಮಾದರಿ‌. ಡಿ.ಕೆ.ಶಿವಕುಮಾರ್ ಅವರು ಧಮ್ಕಿ ಹಾಕುವುದರಲ್ಲಿ ಮಾದರಿ‌ಯಾಗಿದ್ದಾರೆ ಎಂದರು.

  • ವಿವಿಗಳಿಂದ ಲಾಭವಿಲ್ಲ ಎಂದಿದೆ ಕಾಂಗ್ರೆಸ್ ಸರ್ಕಾರ.. ಶಿಕ್ಷಣವೆಂದರೆ ವ್ಯಾಪಾರವಲ್ಲ: ಅಶೋಕ್ ಕಿಡಿ

    ವಿವಿಗಳಿಂದ ಲಾಭವಿಲ್ಲ ಎಂದಿದೆ ಕಾಂಗ್ರೆಸ್ ಸರ್ಕಾರ.. ಶಿಕ್ಷಣವೆಂದರೆ ವ್ಯಾಪಾರವಲ್ಲ: ಅಶೋಕ್ ಕಿಡಿ

    -ನೀರಿಗಾಗಿ ಹೋರಾಡುವಂತೆ ವಿದ್ಯೆಗಾಗಿ ಹೋರಾಟ ಎಂದ ವಿಪಕ್ಷ ನಾಯಕ

    ಬೆಂಗಳೂರು: ವಿಶ್ವವಿದ್ಯಾಲಯಗಳಿಂದ ಲಾಭ ಬರುತ್ತಿಲ್ಲ ಎಂಬ ಕಾರಣಕ್ಕೆ ಅವುಗಳನ್ನು ಮುಚ್ಚಲಾಗಿದೆ ಎಂದಿರುವ ಕಾಂಗ್ರೆಸ್ ಸರ್ಕಾರ ಭಿಕ್ಷೆ ಬೇಡುವ ಸ್ಥಿತಿಗೆ ಬಂದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ಆಕ್ರೋಶ ವ್ಯಕ್ತಪಡಿಸಿದರು.

    ಮಂಡ್ಯದಲ್ಲಿ (Mandya) ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಶಿಕ್ಷಣದಲ್ಲಿ ಹಿಂದುಳಿದಿದೆ. ಇದಕ್ಕಾಗಿ ಬಿಜೆಪಿ ಸರ್ಕಾರ ಹೊಸ 9 ವಿಶ್ವವಿದ್ಯಾಲಯಗಳನ್ನು ನೀಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಅದನ್ನು ಕಿತ್ತುಕೊಂಡಿದೆ. ವಿವಿಗಳನ್ನು ಮುಚ್ಚಲು ರೂಪಿಸಿದ ವರದಿಯಲ್ಲಿ ವಿವಿಗಳು ಲಾಭದಾಯಕವಾಗಿಲ್ಲ ಎಂದು ಉಲ್ಲೇಖಿಸಲಾಗಿದೆ. ಶಿಕ್ಷಣ ಸಂಸ್ಥೆಗಳಿಂದಲೂ ಆದಾಯ ಬರಬೇಕು ಎಂಬುದು ಸರ್ಕಾರದ ಉದ್ದೇಶ ಏಕೆಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಭಿಕ್ಷೆ ಬೇಡುತ್ತಿದ್ದಾರೆ. ಈ ಬಾರಿ 1 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ. ಹಿಂದಿನ ಎಲ್ಲ ಮುಖ್ಯಮಂತ್ರಿಗಳಿಗೆ ಹೋಲಿಸಿದರೆ ಸಿದ್ದರಾಮಯ್ಯ ಅವರೇ ಅತ್ಯಧಿಕ ಸಾಲ ಮಾಡಿದ್ದಾರೆ ಎಂದು ದೂರಿದರು.ಇದನ್ನೂ ಓದಿ: ಅಮಲಾ ಪೌಲ್ ಪ್ಯಾಂಟ್‌ಲೆಸ್ ಫೋಟೋಶೂಟ್ ನೋಡಿ ಕಾಲೆಳೆದ ನೆಟ್ಟಿಗರು

    ಜಿಲ್ಲೆಗೆ ಒಂದು ವಿಶ್ವವಿದ್ಯಾಲಯವಿದ್ದರೆ ಆ ಜಿಲ್ಲೆ ಶಿಕ್ಷಣದಲ್ಲಿ ಸ್ವಾವಲಂಬಿಯಾಗುತ್ತದೆ:
    ಶಿಕ್ಷಣ ಎಂದರೆ ವ್ಯಾಪಾರವಲ್ಲ, ಅದು ನಮ್ಮ ದೇಶದ ಆಸ್ತಿ. ಮುಚ್ಚಿರುವ ಬಾರ್‌ಗಳನ್ನು ತೆರೆದು, ವಿವಿಗಳನ್ನು ಮುಚ್ಚಲಾಗುತ್ತಿದೆ. ಎಲ್ಲ ವಿವಿಗಳನ್ನು ನಡೆಸಲು 252 ಕೋಟಿ ರೂ. ಇದ್ದರೆ ಸಾಕು. ಉಚಿತವಾಗಿ 2 ಸಾವಿರ ರೂ. ನೀಡಿ ವಿವಿಗಳನ್ನು ಮುಚ್ಚುತ್ತೇವೆ ಎಂದರೆ ಗ್ಯಾರಂಟಿಗೆ ಬೆಲೆ ಇರುವುದಿಲ್ಲ. ಬಿಜೆಪಿ ಸರ್ಕಾರ ವಿಶ್ವವಿದ್ಯಾಲಯಗಳನ್ನು ರೂಪಿಸಿದಾಗ ಹೊಸ ಹುದ್ದೆಗಳನ್ನು ಸೃಷ್ಟಿ ಮಾಡಿರಲಿಲ್ಲ. ಇರುವ ಸಿಬ್ಬಂದಿಯನ್ನೇ ನೇಮಕ ಮಾಡಲಾಗಿತ್ತು. ವಿಶ್ವವಿದ್ಯಾಲಯ ಮುಚ್ಚುವುದರಿಂದ ಲಾಭವಾಗುತ್ತದೆಯೋ? ನಷ್ಟವಾಗುತ್ತದೆಯೋ? ಎಂಬುದು ಬೇಕಿಲ್ಲ. ಇದರಿಂದ ಮಕ್ಕಳಿಗೆ ಏನು ತೊಂದರೆಯಾಗುತ್ತದೆ? ಎಂಬ ಬಗ್ಗೆ ಸರ್ಕಾರ ಸ್ಪಷ್ಟಪಡಿಸಲಿ. ನೀರಿಗಾಗಿ ಹೋರಾಟ ಮಾಡುವಂತೆಯೇ, ವಿದ್ಯೆಗಾಗಿ ಮಂಡ್ಯದ ಜನರು ಹೋರಾಟ ಮಾಡಲಿದ್ದಾರೆ. ಸರ್ಕಾರದ ಬಳಿ ಹಣವಿಲ್ಲವೆಂದರೆ ಅದನ್ನು ನೇರವಾಗಿ ಹೇಳಲಿ. ನಾವೆಲ್ಲರೂ ಹಣ ಸಂಗ್ರಹಿಸಿ ವಿಶ್ವವಿದ್ಯಾಲಯ ನಡೆಸುತ್ತೇವೆ ಎಂದರು.

    ಪಾಪರ್ ಸರ್ಕಾರ
    ಗ್ಯಾರಂಟಿಗಳಿಂದಾಗಿ ಪಾಪರ್ ಆಗಿರುವ ಸರ್ಕಾರ, ವಿವಿಗಳನ್ನು ಮುಚ್ಚಿದೆ. ಮಂಡ್ಯ, ಚಾಮರಾಜನಗರ ಮೊದಲಾದ ಜಿಲ್ಲೆಗಳು ಶಿಕ್ಷಣದಲ್ಲಿ ಮೇಲಕ್ಕೆ ಬರಬೇಕೆಂದು ವಿವಿಗಳನ್ನು ಆರಂಭಿಸಲಾಗಿತ್ತು. ಈಗ ವಿವಿಗಳನ್ನು ಮುಚ್ಚಿ ಅದೇ ಸ್ಥಳದಲ್ಲಿ ಬಾರ್‌ಗಳನ್ನು ಆರಂಭಿಸಬಹುದು. ಸರ್ಕಾರದ ಉದ್ದೇಶ ವಿದ್ಯೆ ನೀಡುವುದೋ ಅಥವಾ ಮದ್ಯ ಹಂಚುವುದೋ ಎಂದು ತಿಳಿಸಬೇಕು ಎಂದು ಹೇಳಿದರು.

    ಸರ್ಕಾರ ಪಾಪರ್ ಆಗಿರುವುದಕ್ಕೆ ಇದಕ್ಕಿಂತ ಹೆಚ್ಚಿನ ಸಾಕ್ಷಿ ಬೇಡ. ವಿಶ್ವವಿದ್ಯಾಲಯ ಆರಂಭಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಅನುದಾನ ನೀಡಲಾಗುತ್ತದೆ. ಈಗ ರಾಜ್ಯದ ಪಾಲಿನ ಅನುದಾನ ನೀಡಲು ಇವರಿಗೆ ಸಾಧ್ಯವಾಗುತ್ತಿಲ್ಲ. ಹಿಂದಿನ ಬಿಜೆಪಿ ಸರ್ಕಾರ ಅನುದಾನ ನೀಡಿಲ್ಲವೆಂದಾದರೆ ಹೊಸ ಕಟ್ಟಡಗಳು ಎಲ್ಲಿಂದ ಬಂತು? ಮೂಲಸೌಕರ್ಯ ನೀಡಿಯೇ ವಿವಿಗಳನ್ನು ಆರಂಭಿಸಲಾಗಿತ್ತು. ಆದರೆ ಅದನ್ನು ಮುಂದುವರಿಸಲು ಈಗಿನ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತಿ ಸದನದಲ್ಲಿ ಈ ಕುರಿತು ಹೋರಾಟ ಮಾಡಲಾಗುವುದು ಎಂದರು.ಇದನ್ನೂ ಓದಿ: ಕೋಲ್ಕತ್ತಾ| ತಂದೆ, ಮಗಳು ನೇಣಿಗೆ ಶರಣು – ಮಗಳ ಅನಾರೋಗ್ಯಕ್ಕೆ ಬೇಸತ್ತು ಆತ್ಮಹತ್ಯೆ ಶಂಕೆ

     

  • ಮಂಡ್ಯ ವಿವಿ ವಿಲೀನಗೊಳಿಸುವ ಸರ್ಕಾರದ ನಿರ್ಧಾರಕ್ಕೆ ವಿರೋಧ – ಬಿಜೆಪಿ, ಜೆಡಿಎಸ್ ಪ್ರತಿಭಟನೆ

    ಮಂಡ್ಯ ವಿವಿ ವಿಲೀನಗೊಳಿಸುವ ಸರ್ಕಾರದ ನಿರ್ಧಾರಕ್ಕೆ ವಿರೋಧ – ಬಿಜೆಪಿ, ಜೆಡಿಎಸ್ ಪ್ರತಿಭಟನೆ

    – ಆರ್.ಅಶೋಕ್, ಅಶ್ವತ್ ನಾರಾಯಣ್ ಸಾಥ್

    ಮಂಡ್ಯ: ಇಲ್ಲಿನ ವಿವಿ ವಿಲೀನಗೊಳಿಸುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಬಿಜೆಪಿ (BJP) ಹಾಗೂ ಜೆಡಿಎಸ್ (JDS) ಪಕ್ಷಗಳು ಜಂಟಿಯಾಗಿ ಮಂಡ್ಯ ಡಿಸಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿತು.

    ಮೈಸೂರು ವಿವಿಯೊಂದಿಗೆ ವಿಲೀನಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಸರ್ಕಾರದ ನಿರ್ಧಾರ ಮಂಡ್ಯ ಅಸ್ಮಿತೆಗೆ ಧಕ್ಕೆ ತಂದಿದೆ. ಬಿಜೆಪಿ ಸರ್ಕಾರದ ಕೊಠಡಿ ಕಿತ್ತುಕೊಳ್ಳಲು ಕಾಂಗ್ರೆಸ್ ಸಂಚು ನಡೆಸಿದೆ. ಸಾವಿರಾರು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ಅಲ್ಲದೇ ವಿವಿ ವಿಲೀನಗೊಳಿಸುವ ನಿರ್ಧಾರ ಕೈಬಿಡುವಂತೆ ಆಗ್ರಹಿಸಿದರು. ಇದನ್ನೂ ಓದಿ: ಚಾಮರಾಜನಗರದಲ್ಲಿ ಭೀಕರ ಅಪಘಾತ – ಐವರು ಮಾದಪ್ಪ ಭಕ್ತರ ದುರ್ಮರಣ

    ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಅಶ್ವತ್ ನಾರಾಯಣ್, ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ ಸೇರಿ ಭಾಗಿಯಾಗಿದ್ದರು. ಇದನ್ನೂ ಓದಿ: ಬದರಿನಾಥದಲ್ಲಿ ಹಿಮಪಾತ, 47 ಕಾರ್ಮಿಕರ ರಕ್ಷಣೆ – ಮೂವರ ಸ್ಥಿತಿ ಗಂಭೀರ, ಮೋದಿಯಿಂದ ಅಗತ್ಯ ನೆರವಿನ ಭರವಸೆ

  • ಬೆಂಗಳೂರು ಅಭಿವೃದ್ಧಿಗೆ 8 ಸಾವಿರ ಕೋಟಿ ಕೊಡಲು ಸಿಎಂಗೆ ಬಿಜೆಪಿ ನಿಯೋಗ ಮನವಿ

    ಬೆಂಗಳೂರು ಅಭಿವೃದ್ಧಿಗೆ 8 ಸಾವಿರ ಕೋಟಿ ಕೊಡಲು ಸಿಎಂಗೆ ಬಿಜೆಪಿ ನಿಯೋಗ ಮನವಿ

    ಬೆಂಗಳೂರು: ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರನ್ನ ಬಿಜೆಪಿ ನಿಯೋಗ ಇಂದು ಭೇಟಿ ಮಾಡಿ ಮನವಿ ಸಲ್ಲಿಸಿತು.

    ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಅಶೋಕ್ ನೇತೃತ್ವದಲ್ಲಿ ಬಿಜೆಪಿ ಬೆಂಗಳೂರು ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಜನಪ್ರತಿನಿಧಿಗಳು ಒಳಗೊಂಡ ನಿಯೋಗ ಸಿಎಂ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿತು.

    ಬೆಂಗಳೂರು ಅಭಿವೃದ್ಧಿಗೆ 6-8 ಸಾವಿರ ಕೋಟಿ ಅನುದಾನವನ್ನು ಈ ಬಜೆಟ್‌‌ನಲ್ಲಿ ಘೋಷಣೆ ಮಾಡಬೇಕು. ಬಿಜೆಪಿ ಶಾಸಕರಿಗೆ ಯಾವುದೇ ತಾರತಮ್ಯ ಮಾಡದೇ ಅನುದಾನ ಬಿಡುಗಡೆ ಮಾಡಬೇಕು. ಪ್ರತಿ ಕ್ಷೇತ್ರಕ್ಕೆ 120-150 ಕೋಟಿ ಅನುದಾನ ಬಿಡುಗಡೆ ಮಾಡಬೇಕು ಅಂತ ನಿಯೋಗ ಸಿಎಂಗೆ ಮನವಿ ಮಾಡಿತು. ಇದೇ ವೇಳೆ, ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಸಬೇಕು ಅಂತ ಸಿಎಂಗೆ ಒತ್ತಡ ಹಾಕಲಾಯ್ತು. ಮೆಟ್ರೋ ಟಿಕೆಟ್ ದರ ಏರಿಕೆ ವಿರುದ್ದವೂ ಸಿಎಂಗೆ ಮನವಿ ಮಾಡಿದ ನಿಯೋಗ ಹೊಸದಾಗಿ ಫೇರ್ ಫಿಕ್ಸ್ ಸಮಿತಿ ರಚನೆ ಮಾಡುವಂತೆ ಸಿಎಂಗೆ ಮನವಿ ಮಾಡಿದರು.

    ಸಿಎಂ ಭೇಟಿ ಬಳಿಕ ಮಾತನಾಡಿದ ರಾಜ್ಯಾಧ್ಯಕ್ಷ ವಿಜಯೇಂದ್ರ, ಬೆಂಗಳೂರು ಅಭಿವೃದ್ಧಿಗೆ 6-8 ಸಾವಿರ ಕೋಟಿ ಕೊಡುವಂತೆ ಮನವಿ ಮಾಡಿದ್ದೇವೆ. ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಯಾವುದೇ ತಾರತಮ್ಯ ಮಾಡದೇ ಬಿಜೆಪಿ ಅವಧಿಯಲ್ಲಿ ಕಾಂಗ್ರೆಸ್ ಶಾಸಕರಿಗೆ ಕೊಟ್ಟಂತೆ ಅನುದಾನ ನೀಡಬೇಕು ಅಂತ ಮನವಿ ಮಾಡಿರೋದಾಗಿ ತಿಳಿಸಿದರು. ಇದೇ ವೇಳೆ ಗ್ರೇಟರ್ ಬೆಂಗಳೂರು ಮತ್ತು ಟನಲ್ ರೋಡ್‌ಗೆ ವಿರೋಧ ಇದ್ದು, ಸದನದಲ್ಲಿ ಈ ಬಗ್ಗೆ ಚರ್ಚೆ ಮಾಡೋದಾಗಿ ತಿಳಿಸಿದರು.

    ವಿಪಕ್ಷ ನಾಯಕ ಅಶೋಕ್ ಮಾತನಾಡಿ, ಎರಡು ವರ್ಷಗಳಲ್ಲಿ ಬೆಂಗಳೂರು ಅಭಿವೃದ್ಧಿ ಕುಂಠಿತವಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿ ಕ್ಷೇತ್ರಕ್ಕೆ 120-150 ಕೋಟಿ ಅನುದಾನ ಕೊಡಬೇಕು ಅಂತ ಮನವಿ ಮಾಡಿದ್ದೇವೆ ಎಂದರು.

  • ಡಿಕೆಶಿಗೆ ಕರಿಬೆಕ್ಕುಗಳ ಕಾಟ, ಕರ್ನಾಟಕದಲ್ಲಿ ಡಿಕೆಶಿ ಕೂಡ ಒಬ್ಬ ಏಕನಾಥ್ ಶಿಂಧೆ : ಆರ್.ಅಶೋಕ್

    ಡಿಕೆಶಿಗೆ ಕರಿಬೆಕ್ಕುಗಳ ಕಾಟ, ಕರ್ನಾಟಕದಲ್ಲಿ ಡಿಕೆಶಿ ಕೂಡ ಒಬ್ಬ ಏಕನಾಥ್ ಶಿಂಧೆ : ಆರ್.ಅಶೋಕ್

    – ಮೊದಲು ಡಿಕೆಶಿನಾ ಕಾಂಗ್ರೆಸ್ ಹೊರಗೆ ಹಾಕಲಿ, ಆಮೇಲೆ ನೋಡೋಣ – ವಿಪಕ್ಷ ನಾಯಕ

    ಬೆಂಗಳೂರು: ಕರ್ನಾಟಕದಲ್ಲಿ ಏಕನಾಥ್ ಶಿಂಧೆ ರೀತಿ ಬಹಳ ಜನರಿದ್ದಾರೆ. ಅವರಲ್ಲಿ ಡಿಕೆಶಿಯವರು (DK Shivakumar) ಕೂಡ ಒಬ್ಬರು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R Ashok) ಹೇಳಿದರು.

    ವಿಧಾನಸೌಧದಲ್ಲಿ ಮಾತನಾಡಿದ ಅವರು, ನನ್ನಲ್ಲಿರುವ ಟ್ಯಾಲೆಂಟ್ ಉಪಯೋಗ ಮಾಡಿಕೊಳ್ಳಿ ಮತ್ತು ಸಿಎಂ ಪದವಿಯನ್ನು ಒದ್ದು ಕಿತ್ತುಕೊಳ್ಳುತ್ತೀನಿ ಎಂದು ಡಿಕೆಶಿ ಹೇಳಿದ್ದಾರೆ. ಇನ್ನೂ ಖರ್ಗೆ ಕುಂಭಮೇಳಕ್ಕೆ ಹೋಗಬಾರದು ಎಂದು ಹೇಳಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಕುಂಭಮೇಳಕ್ಕೆ ಹೋಗಿಲ್ಲ. ಆದರೆ ಡಿಕೆಶಿ ಕುಟುಂಬ ಸಮೇತ ಕುಂಭಮೇಳಕ್ಕೆ ಹೋಗಿ ಕುಟುಂಬ ಸಮೇತ ಮುಳುಗಿ ಬಂದಿದ್ದಾರೆ. ಹೀಗಾಗಿ ಇದೆಲ್ಲವೂ ನವೆಂಬರ್ 16ರ ಮುಹೂರ್ತದ ಸಂಕೇತ ಎಂದರು.ಇದನ್ನೂ ಓದಿ: ಸರ್ಕಾರ ʻಗ್ಯಾರಂಟಿʼಗಳಿಗೆ ಹಣ ಹಾಕಲು ಒಂದು ದಿನಾಂಕ ನಿಗದಿ ಮಾಡಬೇಕು – ನಿಖಿಲ್ ಕುಮಾರಸ್ವಾಮಿ

    ಡಿಕೆಶಿ ಅವರು ಕುಂಭಮೇಳಕ್ಕೆ ಹೋಗಿದ್ದು, ಶಿವರಾತ್ರಿ ದಿನ ಇಶಾ ಫೌಂಡೇಶನ್‌ಗೆ ಹೋಗಿದ್ದು ಅವರ ವೈಯುಕ್ತಿಕ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಕರಿಬೆಕ್ಕಿನ ಕಾಟ ಜಾಸ್ತಿ ಆಗಿದೆ. ಡಿಕೆಶಿ ಎಲ್ಲಿ ಹೋದರೂ ಕರಿಬೆಕ್ಕಿನ ಕಾಟ ಇದೆ. ಇಷ್ಟು ದಿನ ರಾಜ್ಯದಲ್ಲಿ ಇದ್ದವು, ಈಗ ರಾಷ್ಟ್ರಮಟ್ಟದಲ್ಲಿ ಡಿಕೆಶಿ ಹೋಗುವ ಕಡೆ ಕರಿಬೆಕ್ಕುಗಳು ಓಡಾಡ್ತಿವೆ. ಇದು ಒಳ್ಳೆಯದಕ್ಕೋ? ಕೆಟ್ಟದ್ದಕ್ಕೋ? ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.

    ಧರ್ಮದ ವಿಚಾರವಾಗಿ ನಮ್ಮ ಪಕ್ಷದ ನಾಯಕರು ಹೋಗುವುದು ಸಾಮಾನ್ಯ. ಇಶಾ ಫೌಂಡೇಶನ್ ಕಾರ್ಯಕ್ರಮಕ್ಕೆ ಈ ಹಿಂದೆ ಪ್ರಧಾನಿ ಕೂಡ ಹೋಗಿದ್ದಾರೆ. ಈಗ ಅಮಿತ್ ಶಾ ಅವರು ಹೋಗಿದ್ದಾರೆ. ಡಿಕೆಶಿ ಯಾಕೆ ಹೋಗಿದ್ದು ಎಂದು ಕಾಂಗ್ರೆಸ್ ಪಕ್ಷದಲ್ಲಿ ಆಕ್ಷೇಪ ಶುರುವಾಗಿದೆ. ಪ್ರಧಾನಿಯನ್ನು ಡಿಕೆಶಿಯವರು ಭೇಟಿ ಮಾಡಿ ಬಂದಿದ್ದರು. ಈಗ ಇಶಾ ಫೌಂಡೇಶನ್ ಕಾರ್ಯಕ್ರಮಕ್ಕೆ ಹೋಗಿ ಬಂದಿದ್ದಾರೆ ಎಂದು ಹೇಳಿದರು.

    ಡಿಕೆ ಶಿವಕುಮಾರ್ ಅವರನ್ನ ಕಾಂಗ್ರೆಸ್ ಪಕ್ಷ ಹೊರಗೆ ಹಾಕಲಿ. ಆಮೇಲೆ ನಾವು ಏನು ಮಾಡ್ಬೇಕು ನೋಡೋಣ. ನವೆಂಬರ್ ಡೆಡ್‌ಲೈನ್ ಬಗ್ಗೆ ನಾನು ಹೇಳಿದ್ದೆ. ಡಿಕೆಶಿಗೆ ಜ್ಯೋತಿಷ್ಯ ಹೇಳಲ್ಲ. ಆದರೆ ಸತ್ಯಸಂಗತಿ ಹೇಳಿದ್ದೀನಿ, ನವೆಂಬರ್ ಜ್ಯೋತಿಷ್ಯ ಸುಳ್ಳಾದ್ರೆ ಈ ಎಲ್ಲ ನಾಟಕ ಏಕೆ ಆಡ್ತಿದ್ದಾರೆ. ನಾಯಕತ್ವದ ವಿಚಾರದಲ್ಲಿ, ಸಿದ್ದರಾಮಯ್ಯ ವೀಕ್ ಸಿಎಂ, ಅವರನ್ನು ಯಾವ ರಾಜ್ಯದಲ್ಲೂ ಮೂಸಿ ನೋಡಲ್ಲ, ಸಿದ್ದರಾಮಯ್ಯ ಮಾಸ್ ಲೀಡರ್ ಅಲ್ಲ, ನಾನೇ ಮಾಸ್ ಲೀಡರ್ ಎಂದು ಡಿಕೆಶಿ ಸಂದೇಶ ಕೊಟ್ಟಿದ್ದಾರೆ ಎಂದು ಕೆಣಕಿದರು.ಇದನ್ನೂ ಓದಿ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಡಿಕೆಶಿ ತೆಲಂಗಾಣಕ್ಕೆ ನೀರು ಬಿಟ್ಟಿದ್ದಾರೆ: ಆರ್.ಅಶೋಕ್ ಕಿಡಿ

  • ಬೇಲಿಯೇ ಎದ್ದು ಹೊಲ ಮೇಯ್ದಂತೆ ಡಿಕೆಶಿ ತೆಲಂಗಾಣಕ್ಕೆ ನೀರು ಬಿಟ್ಟಿದ್ದಾರೆ: ಆರ್.ಅಶೋಕ್ ಕಿಡಿ

    ಬೇಲಿಯೇ ಎದ್ದು ಹೊಲ ಮೇಯ್ದಂತೆ ಡಿಕೆಶಿ ತೆಲಂಗಾಣಕ್ಕೆ ನೀರು ಬಿಟ್ಟಿದ್ದಾರೆ: ಆರ್.ಅಶೋಕ್ ಕಿಡಿ

    ಬೆಂಗಳೂರು: ಆಲಮಟ್ಟಿ ಜಲಾಶಯದಿಂದ (Almatti Dam) ತೆಲಂಗಾಣಕ್ಕೆ (Telangana) ರಾಜ್ಯ ಸರ್ಕಾರ ನೀರು ಬಿಟ್ಟಿದೆ. ನೆಲದ ಜಲದ ವಿಚಾರ ಬಂದಾಗ ಕರ್ನಾಟಕದ ಜನತೆಗೆ ಕಾಂಗ್ರೆಸ್‌(Congress)  ದ್ರೋಹ ಬಗೆದಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R.Ashok) ಕಿಡಿಕಾರಿದ್ದಾರೆ.

    ವಿಧಾನಸೌಧದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ತೆಲಂಗಾಣ ಕಾಂಗ್ರೆಸ್ ಸರ್ಕಾರವನ್ನು ತೃಪ್ತಿಪಡಿಸಲು ಸ್ವಾರ್ಥಕ್ಕಾಗಿ ಡಿಕೆಶಿ (D.K Shivakumar) ನೀರು ಬಿಟ್ಟಿದ್ದಾರೆ. ಕರ್ನಾಟಕದಲ್ಲಿ ಬರದ ಛಾಯೆ ಶುರುವಾಗಿದೆ. ಬರಗಾಲ ಇದೆ ಅಂತಾ ಪ್ರಿಯಾಂಕ್ ಖರ್ಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಭೆ ಮಾಡ್ತಾರೆ. ಆದರೆ ಬೇಲಿಯೇ ಎದ್ದು ಹೊಲ ಮೇಯ್ದಂತೆ ಡಿಕೆಶಿ ನೀರು ಬಿಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕಾಂಗೋದಲ್ಲಿ ನಿಗೂಢ `ಅಳುವ ರೋಗ’ಕ್ಕೆ 50ಕ್ಕೂ ಹೆಚ್ಚು ಮಂದಿ ಬಲಿ – 400 ಮಂದಿಗೆ ಸೋಂಕು

    ನೀರು ಬಿಟ್ಟ ವಿಚಾರವನ್ನು ಎಂ.ಬಿ ಪಾಟೀಲ್ ಅವರ ಬಳಿ ಕೇಳಿದ್ರೆ ನನಗೆ ಮಾಹಿತಿಯೇ ಇಲ್ಲ ಎನ್ನುತ್ತಾರೆ. ಹೆಚ್ಚು ನೀರಿದ್ದು, ಅದನ್ನು ಬಿಟ್ಟರೆ ಏನು ತಪ್ಪು ಎಂದು ಡಿಕೆಶಿ ಹೇಳ್ತಾರೆ. ನೀರಿನ ವಿಚಾರವಾಗಿ ಅವರ ಸ್ನೇಹಿತರಾದ ತಮಿಳುನಾಡಿನವರನ್ನು ಡಿಕೆಶಿ ಕೇಳಲಿ. ಬರಗಾಲದಲ್ಲಿ ರಾಜ್ಯದ ಜನರಿಗೆ ಅಪಾಯವಾದರೆ ಕಾಂಗ್ರೆಸ್ ಸರ್ಕಾರವೇ ಹೊಣೆ ಎಂದು ಎಚ್ಚರಿಸಿದ್ದಾರೆ.

    ಇ-ಖಾತಾದ ವಿಚಾರವಾಗಿ ಪ್ರತಿಕ್ರಿಯಿಸಿ, ಅದರಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಒಂದು ಇ ಖಾತಾಗೆ 12 ಸಾವಿರ ರೂ. ಕೊಡಬೇಕಾಗಿದೆ. ಬೆಂಗಳೂರು ಪಾರ್ಕ್‌ಗಳಲ್ಲಿ ನಂಬರ್ ಹಾಕಲಾಗಿದೆ. ಇದು ಏಜೆಂಟ್‌ಗಳ ಕಾರುಬಾರು. ಇವರ ಮೇಲೆ ಕ್ರಮ ಏಕಿಲ್ಲ ಎಂದು ಪ್ರಶ್ನಿಸಿದ್ದಾರೆ.

    ರಾಜ್ಯದ ಜನರ ಮೇಲೆ ಸರ್ಕಾರ ಎಲ್ಲಾ ತೆರಿಗೆ ಹಾಕ್ತಿದೆ. ಇಡೀ ರಾಜ್ಯದ ಜನ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಇದು ಭಿಕ್ಷುಕ ಸರ್ಕಾರ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಉಡುಪಿ| ಕೆನರಾ ಬ್ಯಾಂಕ್ ಎಟಿಎಂ ಕಳ್ಳತನಕ್ಕೆ ಯತ್ನ ಕೇಸ್ – ಇಬ್ಬರ ಬಂಧನ

  • ಬಿಜೆಪಿ ರಾಜ್ಯಾಧ್ಯಕ್ಷರನ್ನ ಭೇಟಿಯಾದ ಪ್ರತಾಪ್‌ ಸಿಂಹ – ಕುತೂಹಲ ಮೂಡಿಸಿದ ವಿಜಯೇಂದ್ರ ಭೇಟಿ

    ಬಿಜೆಪಿ ರಾಜ್ಯಾಧ್ಯಕ್ಷರನ್ನ ಭೇಟಿಯಾದ ಪ್ರತಾಪ್‌ ಸಿಂಹ – ಕುತೂಹಲ ಮೂಡಿಸಿದ ವಿಜಯೇಂದ್ರ ಭೇಟಿ

    ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ (Pratap Simha) ಅವರಿಂದು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra), ವಿಪಕ್ಷ ನಾಯಕ ಆರ್‌.ಅಶೋಕ್‌ ಇತರ ನಾಯಕರನ್ನ ಭೇಟಿಯಾಗಿದ್ದಾರೆ. ವಿಜಯೇಂದ್ರ ಪಕ್ಕದಲ್ಲೇ ಕುಳಿತು ಕಾಫಿ ಕುಡಿದು, ಕೆಲಕಾಲ ಮಾತುಕತೆ ನಡೆಸಿದ್ದಾರೆ. ಈಗಾಗಲೇ ರೆಬಲ್‌ ಟೀಂ ನಲ್ಲಿ ಗುರುತಿಸಿಕೊಂಡಿರುವ ಪ್ರತಾಪ್‌ ಸಿಂಹ ಅವರು ವಿಜಯೇಂದ್ರ ಅವರನ್ನ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.

    ಭೇಟಿಯಾಗಿದ್ದು ಏಕೆ?
    ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ (Mysuru Udayagiri Police Station) ಮೇಲೆ ಉದ್ರಿಕ್ತರಿಂದ ಕಲ್ಲು ತೂರಾಟ ನಡೆಸಿದ ಘಟನೆ ಖಂಡಿಸಿ ಪ್ರತಿಭಟನೆ ನಡೆಸಲು ಅವಕಾಶ ಕೋರಿದ್ದರು. ʻಮೈಸೂರು ಚಲೋʼ ಹೋರಾಟ ನಡೆಸಲು ಮೈಸೂರಿಗೆ ಆಗಮಿಸಿದ್ದರು. ಈ ವೇಳೆ ಖಾಸಗಿ ಹೋಟೆಲ್‌ನಲ್ಲಿ ಮಾಜಿ ಸಂಸದ ಪ್ರತಾಪ್‌ ಸಿಂಹ ಭೇಟಿಯಾಗಿದ್ದಾರೆ. ಕೆಲಕಾಲ ವಿಜಯೇಂದ್ರ ಪಕ್ಕದಲ್ಲೇ ಕುಳಿತು ಮಾತುಕತೆ ನಡೆಸಿದ್ದಾರೆ.

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ (FIR) ಸಂಬಂಧ ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: ಬೊಜ್ಜು ವಿರುದ್ಧ ಅಭಿಯಾನ – ಒಮರ್ ಅಬ್ದುಲ್ಲಾ, ಆನಂದ್ ಮಹೀಂದ್ರಾ ಸೇರಿ 10 ಗಣ್ಯರ ನಾಮ ನಿರ್ದೇಶನ ಮಾಡಿದ ಮೋದಿ

    ಪುಂಡ ಮುಸ್ಲಿಮರು (Muslims) ಸಾವಿರಾರು ಸಂಖ್ಯೆಯಲ್ಲಿ ಸೇರಿ ಪೊಲೀಸರ ಮೇಲೆ ಆಕ್ರಮಣ ಮಾಡಿದ್ರು. ಈ ಘಟನೆ ನಡೆದ ಬೆನ್ನಲ್ಲೇ ಪೊಲೀಸ್ ಠಾಣೆಗೆ ಭೇಟಿ ನೀಡಿ ಪೊಲೀಸರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದೆವು. ಇದು ಪ್ರಚೋದನಕಾರಿಯಾ? ಸಿದ್ದರಾಮಯ್ಯ ಸರ್ಕಾರ ಬಂದ ನಂತರ ನನ್ನ ಮೇಲೆ ಹಲವು ಎಫ್‌ಐಆರ್‌ ಮಾಡಿದ್ದಾರೆ. ಈಗ ಉದಯಗಿರಿ ಠಾಣೆಯಲ್ಲಿ ಆಗಿದೆ. ಈ ರೀತಿ ಸಾಲು ಸಾಲು ಎಫ್‌ಐಆರ್‌ ಹಾಕಿ ಆತ್ಮಸ್ಥೈರ್ಯ ಕುಗ್ಗಿಸಬೇಕು, ಮನೆಯಿಂದ ಹೊರಬರಬಾರದು ಅನ್ನೋ ಉದ್ದೇಶದಿಂದ ಮಾಡ್ತಾ ಇದ್ದಾರೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಮಹಾ ಕುಂಭಮೇಳ: ತ್ರಿವೇಣಿಯಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಪುಣ್ಯಸ್ನಾನ

  • ಬೆಂಗಳೂರಿನ ರಸ್ತೆ ಗುಂಡಿಗಳೂ ಸೊನ್ನೆ, ಅಭಿವೃದ್ಧಿಯೂ ಸೊನ್ನೆ: ಆರ್.ಅಶೋಕ್ ಟೀಕೆ

    ಬೆಂಗಳೂರಿನ ರಸ್ತೆ ಗುಂಡಿಗಳೂ ಸೊನ್ನೆ, ಅಭಿವೃದ್ಧಿಯೂ ಸೊನ್ನೆ: ಆರ್.ಅಶೋಕ್ ಟೀಕೆ

    – ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರಕ್ಕೆ ಒತ್ತಾಯಿಸಿದ ವಿಪಕ್ಷ ನಾಯಕ

    ಬೆಂಗಳೂರು: ರಸ್ತೆ ಗುಂಡಿಗಳ ಆಕಾರ ಸೊನ್ನೆಯಾಗಿರುವಂತೆಯೇ ಬೆಂಗಳೂರಿನ (Bengaluru) ಅಭಿವೃದ್ಧಿಯೂ ಸೊನ್ನೆಯೇ ಆಗಿದೆ. ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ (BBMP Election) ನಡೆಸಬೇಕು ಎಂದು ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashok) ಒತ್ತಾಯಿಸಿದರು.

    ಬಿಬಿಎಂಪಿ ಚುನಾವಣೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ಚುನಾವಣೆ ನಡೆಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇವೆ. ಈ ಸಂಬಂಧ ನ್ಯಾಯಾಲಯದಲ್ಲಿ ವಾದ ಮಾಡಲು 15 ತಜ್ಞರ ತಂಡವನ್ನು ರಚಿಸಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನ ಅಭಿವೃದ್ಧಿ ಸೊನ್ನೆಯಾಗಿದೆ. ರಸ್ತೆ ಗುಂಡಿಗಳ ಆಕಾರ ಸೊನ್ನೆಯಾಗಿರುವಂತೆಯೇ ಅಭಿವೃದ್ಧಿಯೂ ಸೊನ್ನೆಯೇ ಆಗಿದೆ. ರಸ್ತೆ ಗುಂಡಿಗಳಿಂದ ಬಿದ್ದು ಗಾಯಕ್ಕೊಳಗಾಗಿ ಜನರು ಆಸ್ಪತ್ರೆ ಸೇರುತ್ತಿದ್ದಾರೆ. ಎಲ್ಲಾ ಕಡೆ ಕಸದ ರಾಶಿ ಕಂಡುಬರುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಭಾರತದತ್ತ ಯುರೋಪಿಯನ್ ರಾಷ್ಟ್ರಗಳ ಹೆಜ್ಜೆ – ತಿಂಗಳಾಂತ್ಯಕ್ಕೆ 27 ರಾಷ್ಟ್ರಗಳ ಆಯುಕ್ತರ ತಂಡ ಭೇಟಿ

    ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಹಿಮಾಲಯದ ಶಿಖರದಂತೆ ನಗರದ ಅಭಿವೃದ್ಧಿಯನ್ನು ಬ್ರ್ಯಾಂಡ್‌ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದರು. ಈಗ ಅವರೇ ಬೆಂಗಳೂರನ್ನು ಉದ್ಧಾರ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದರ ವಿರುದ್ಧ ಹೋರಾಟ ಮಾಡಲು ಸಭೆ ನಡೆಸಲಾಗಿದೆ ಎಂದರು. ಇದನ್ನೂ ಓದಿ: ಮಲೆ ಮಹದೇಶ್ವರ ಕೋಟಿ ಒಡೆಯ – 1.94 ಕೋಟಿ ಕಾಣಿಕೆ ಸಂಗ್ರಹ

    ಸರ್ಕಾರಕ್ಕೆ ಬಿಬಿಎಂಪಿ ಚುನಾವಣೆ ನಡೆಸುವ ಮನಸ್ಸಿಲ್ಲ. ಗ್ರೇಟರ್ ಬೆಂಗಳೂರು ರಚಿಸುತ್ತೇವೆ. ಇನ್ನಷ್ಟು ಪ್ರದೇಶಗಳನ್ನು ಬೆಂಗಳೂರಿಗೆ ಸೇರಿಸುತ್ತೇವೆ ಎಂದು ಹೇಳುತ್ತಿದೆ. ಇರುವ ನಗರವನ್ನೇ ಸುಧಾರಣೆ ಮಾಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಇನ್ನು ಹೊಸ ಪ್ರದೇಶಗಳ ಅಭಿವೃದ್ಧಿ ಹೇಗೆ ಸಾಧ್ಯ. ಬೆಂಗಳೂರನ್ನು ಒಡೆದರೆ ನಾಡಪ್ರಭು ಕೆಂಪೇಗೌಡರಿಗೆ ಅಪಮಾನ ಮಾಡಿದಂತಾಗುತ್ತದೆ. ಕೆಂಪೇಗೌಡರನ್ನು ನಂಬುವ ಜನರ ಮನಸ್ಸಿಗೆ ನೋವಾಗುತ್ತದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ವಿಶ್ವವಿದ್ಯಾಲಯಗಳನ್ನು ಮುಚ್ಚುವುದಕ್ಕೆ ನಾವು ಅವಕಾಶ ಕೊಡುವುದಿಲ್ಲ: ವಿಜಯೇಂದ್ರ

    ಈಗ 198 ವಾರ್ಡ್‌ಗಳಿಗೆ ಚುನಾವಣೆ ನಡೆಸಿದರೆ ಸಾಕು. ರಸ್ತೆ ಮೇಲ್ಭಾಗದಲ್ಲೇ ಸುರಂಗ ನಿರ್ಮಾಣವಾಗುತ್ತಿರುವಾಗ 150 ಅಡಿ ಕೆಳಗೆ ಸುರಂಗ ಕೊರೆಯಲು ಹೊರಟಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗಳಿಂದ ಜನರು ರೊಚ್ಚಿಗೆದ್ದಿದ್ದಾರೆ. ಬೆಂಗಳೂರು ಇಂದು ಸರಿ ಹೋಗಲಿದೆ ಎಂದು ಜನರು ಕಾಯುತ್ತಿದ್ದಾರೆ. ಬೆಂಗಳೂರಿಗೆ ಬೆಂಗಳೂರಿನವರೇ ಆದ ಸಚಿವರಿಲ್ಲ. ಬೇರೆ ಜಿಲ್ಲೆಯ ಸಚಿವರಿಗೆ ನಗರದ ಬಗ್ಗೆ ಆಸಕ್ತಿ ಇಲ್ಲ. ಸರ್ಕಾರದಿಂದಾಗಿ ಬೆಂಗಳೂರು ಅನಾಥವಾಗಿದೆ ಎಂದು ದೂರಿದರು. ಇದನ್ನೂ ಓದಿ: ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯತ್ನಾಳ್ ಸ್ಪರ್ಧೆ ಇಲ್ಲ; ಹೈಕಮಾಂಡ್ ವಾರ್ನ್ ಬಳಿಕ ಭಿನ್ನರ ಶಸ್ತ್ರತ್ಯಾಗ – ಬಿವೈವಿ ಫುಲ್ ಆ್ಯಕ್ಟಿವ್

    ಬೆಂಗಳೂರು ಡಾನ್, ಮಾಫಿಯಾಗಳ ಕೈಗೆ ಸಿಲುಕಿದೆ. ಮೈಸೂರು ಗಲಭೆ, ಬೆಂಗಳೂರಿನ ಬಾಂಬ್ ಬ್ಲಾಸ್ಟ್, ಅತ್ಯಾಚಾರ ಮೊದಲಾದ ಅಪರಾಧಿ ಚಟುವಟಿಕೆಗಳು ರಾಜ್ಯದಲ್ಲಿ ನಡೆಯುತ್ತಿವೆ. ಜನರೇ ಸ್ವತಃ ಆತ್ಮರಕ್ಷಣೆ ಮಾಡಿಕೊಳ್ಳುವ ಸ್ಥಿತಿ ಬಂದಿದೆ. ಕಾಂಗ್ರೆಸ್ ನಾಯಕರು ಇನ್ನೂ ಗ್ಯಾರಂಟಿಗಳ ಗುಂಗಿನಲ್ಲೇ ಇದ್ದಾರೆ. ಕೊಲೆ, ಸುಲಿಗೆ ನಿರಂತರವಾಗಿದ್ದು, ಈ ಸರ್ಕಾರ ತೊಲಗಿದರೆ ಸಾಕು ಎಂದು ಜನರು ಹೇಳುತ್ತಿದ್ದಾರೆ ಎಂದರು. ಇದನ್ನೂ ಓದಿ: ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ಪೋಷಕರಿಗೆ ಬಿತ್ತು 25,000 ರೂ. ದಂಡ

    ಸಿಎಂ ಸಿದ್ದರಾಮಯ್ಯ ಅವರಿಗೆ ಬೆಂಗಳೂರಿನ ಜವಾಬ್ದಾರಿ ವಹಿಸಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ದೇವರ ಮೊರೆ ಹೋಗಿ, ನಗರವನ್ನು ದೇವರಿಗೆ ಅರ್ಪಣೆ ಮಾಡಿದ್ದಾರೆ. ರಾಜಧಾನಿಯನ್ನು ದೇವರೇ ಕಾಪಾಡಬೇಕಿದೆ. ಬೆಂಗಳೂರಿನ ಉಸ್ತುವಾರಿಯನ್ನು ಯಾರಾದರೂ ವಹಿಸಿಕೊಳ್ಳಲಿ. ಆದರೆ ಬೆಂಗಳೂರನ್ನು ಉದ್ಧಾರ ಮಾಡುವವರು, ನಗರದ ಬಗ್ಗೆ ಜ್ಞಾನ ಇರುವವರು ಸಚಿವರಾಗಲಿ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ರೋಹಿಣಿ-ರೂಪಾ ಗಲಾಟೆ ಪ್ರಕರಣ; ಸಿಂಧೂರಿಗೆ ರಿಲೀಫ್ ನೀಡಿದ ಹೈಕೋರ್ಟ್

  • ಮುಡಾ ಕೇಸ್‌ನಲ್ಲಿ ಬಿ ರಿಪೋರ್ಟ್ ಲೋಕಾಯುಕ್ತದಿಂದ ಪೂರ್ವ ನಿಯೋಜಿತ: ಅಶೋಕ್ ಕೆಂಡ

    ಮುಡಾ ಕೇಸ್‌ನಲ್ಲಿ ಬಿ ರಿಪೋರ್ಟ್ ಲೋಕಾಯುಕ್ತದಿಂದ ಪೂರ್ವ ನಿಯೋಜಿತ: ಅಶೋಕ್ ಕೆಂಡ

    – ಪ್ರಮೋಷನ್/ವರ್ಗಾವಣೆಗಾಗಿ ಕ್ಲೀನ್‌ಚಿಟ್

    ಬೆಂಗಳೂರು: ಮುಡಾ ಹಗರಣ (MUDA Scam) ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ಚಿಟ್ ನೀಡಲು ಲೋಕಾಯುಕ್ತ ಮುಂದಾಗಿದೆ. ಪೂರ್ವ ನಿಯೋಜಿತವಾಗಿ ತನಿಖಾ ವರದಿ ರೂಪಿಸಲಾಗಿದೆ. ಆದರೆ ಬಿಜೆಪಿಯಿಂದ (BJP) ಹೋರಾಟ ಮುಂದುವರಿಯಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದವರು ನಡೆಸಿದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆ ಮಾಡಿದೆ. ಜೊತೆಗೆ ಅಧಿವೇಶನದಲ್ಲಿ ಚರ್ಚಿಸಲಾಗಿದೆ. ಈ ಹಗರಣದಲ್ಲಿ ತಪ್ಪಿಲ್ಲ ಎಂದಾದರೆ ಸಿಎಂ ಸಿದ್ದರಾಮಯ್ಯ ನಿವೇಶನಗಳನ್ನು ಯಾಕೆ ಮರಳಿಸಬೇಕಿತ್ತು? ಲೋಕಾಯುಕ್ತ, ಸಿದ್ದರಾಮಯ್ಯ ಅವರಿಗೆ ಕ್ಲೀನ್‌ಚಿಟ್ ನೀಡಲಿದೆ. ಇದರಲ್ಲಿ ಯಾರದ್ದೂ ತಪ್ಪಿಲ್ಲ. ಸ್ವಯಂಚಾಲಿತವಾಗಿ ಭೂ ಪರಿವರ್ತನೆಯಾಗಿದೆ. ಲೇಔಟ್ ಮಾಡಿರುವುದೇ ಸಿಎಂ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲ. ಅವರು ಅಷ್ಟು ಪ್ರಾಮಾಣಿಕರು ಹಾಗೂ ಸಭ್ಯಸ್ತರು. ಇದರಲ್ಲಿ ಅಧಿಕಾರಿಗಳದ್ದೇ ತಪ್ಪು ಎಂದು ಲೋಕಾಯುಕ್ತ ವರದಿಯಲ್ಲಿ ಉಲ್ಲೇಖವಾಗಲಿದೆ. ಈ ಪ್ರಕರಣ ದಾಖಲಾಗುವ ಮುನ್ನವೇ ಲೋಕಾಯುಕ್ತದಲ್ಲಿ ಆಯಕಟ್ಟಿನ ಜಾಗಕ್ಕೆ ನಿರ್ದಿಷ್ಟ ಅಧಿಕಾರಿಗಳು ಬಂದು ಕೂತಿದ್ದಾರೆ. ಇದು ಪೂರ್ವ ನಿಯೋಜಿತವಾಗಿ ತಯಾರಿಸಿದ ವರದಿ ಎಂದು ದೂರಿದರು. ಇದನ್ನೂ ಓದಿ: ಶೋಕಾಸ್ ನೋಟಿಸ್‌ಗೆ ಯತ್ನಾಳ್ ಕೊಟ್ಟ ಉತ್ತರ ಒಪ್ಪದ ಬಿಜೆಪಿ ಶಿಸ್ತು ಸಮಿತಿ

    ಲೋಕಾಯುಕ್ತ ಕ್ಲೀನ್‌ಚಿಟ್ ಕೊಟ್ಟಾಕ್ಷಣ ಅದನ್ನು ಕೋರ್ಟ್ ಸ್ವೀಕರಿಸಬೇಕೆಂದೇನಿಲ್ಲ. ಕೋರ್ಟ್ ಅದನ್ನು ತಿರಸ್ಕರಿಸಿದರೆ ಮತ್ತೆ ತನಿಖೆ ನಡೆಯಲಿದೆ. ನಮಗೆ ನ್ಯಾಯಾಂಗದ ಬಗ್ಗೆ ವಿಶ್ವಾಸವಿದೆ. ನಮಗಿಂತ ಹೆಚ್ಚಾಗಿ ಸಿಎಂ ಕನಸು ಕಟ್ಟಿಕೊಂಡಿರುವ ಕಾಂಗ್ರೆಸ್ ನಾಯಕರಿಗೆ ನಿದ್ರೆ ಹಾರಿಹೋಗಲಿದೆ ಎಂದರು. ಇದನ್ನೂ ಓದಿ: ಕಾರವಾರ | ಭೀಕರ ಅಪಘಾತ – ಒಂದೇ ಕುಟುಂಬದ ಮೂವರು ಸಾವು

    ಕಾಂಗ್ರೆಸ್ ಸರ್ಕಾರದ ಬಳಿ ಗ್ಯಾರಂಟಿಗೆ ಹಣವಿಲ್ಲ ಎಂದಮೇಲೆ ಮತ್ತೆ ಅಭಿವೃದ್ಧಿಗೆ ಎಲ್ಲಿಂದ ಹಣ ಬರಲಿದೆ? ಈ ಬಗ್ಗೆ ಕಾಂಗ್ರೆಸ್ ಶಾಸಕರು ಪ್ರಶ್ನೆ ಮಾಡಿದರೆ ಅವರನ್ನು ಯಾವುದಾದರೂ ಸಮಿತಿ, ನಿಗಮಕ್ಕೆ ಅಧ್ಯಕ್ಷರನ್ನಾಗಿ ಮಾಡಿ ಸುಮ್ಮನಾಗಿಸಲಾಗುತ್ತದೆ. ಇದೇ ಸಿಎಂ ಸಿದ್ದರಾಮಯ್ಯನವರ ಬಳಿ ಇರುವ ಅಸ್ತ್ರ ಎಂದು ಹೇಳಿದರು. ಇದನ್ನೂ ಓದಿ: ಕ್ರಿಕೆಟ್ ಆಡುವಾಗ ಅಲ್ ಅಮೀನ್ ವೈದ್ಯಕೀಯ ಕಾಲೇಜಿನಲ್ಲಿ ರ‍್ಯಾಗಿಂಗ್ ಆರೋಪ

    ಸಿಎಂ ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿ ಎಂದು ನೂರಾರು ಬಾರಿ ಹೇಳಿದ್ದಾರೆ. ಅದೇ ರೀತಿ ಜಾತಿ ವರದಿ ಬಿಡುಗಡೆ ಬಗ್ಗೆಯೂ ಹೇಳಿದ್ದಾರೆ. ವೀರಪ್ಪ ಮೊಯ್ಲಿ ಸುಳ್ಳಿನ ಸರದಾರರಾದರೆ, ಸಿಎಂ ಸಿದ್ದರಾಮಯ್ಯ ಅವರ ತಾತನಂತೆ ಸುಳ್ಳು ಹೇಳುತ್ತಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಹೊಸಕೋಟೆಯಿಂದ ಕುಂಭಮೇಳಕ್ಕೆ ಹೋಗ್ತಿದ್ದಾಗ ಅಪಘಾತ – ಮಹಿಳೆ ಸಾವು

    ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಎರಡು ತಿಂಗಳಿಗೊಮ್ಮೆ ಸಂಬಳ ನೀಡಲಾಗುತ್ತಿದೆ. ಸ್ಕಾಲರ್ ಶಿಪ್ ಸಿಕ್ಕಿಲ್ಲವೆಂದು ವಿದ್ಯಾರ್ಥಿಗಳು ಕೋರ್ಟ್ ಮೊರೆ ಹೋಗಿದ್ದಾರೆ. ಪ್ರತಿ ತಿಂಗಳು ಗ್ಯಾರಂಟಿ ಹಣ ಕೊಡಲು ಕೂಡ ಹಣವಿಲ್ಲ. ಬಜೆಟ್ ಗೂ ಹಣ ಇರುವುದಿಲ್ಲ. ಅಂಗನವಾಡಿ ಕಾರ್ಯಕರ್ತರಿಗೆ ಗೌರವಧನ ಹೆಚ್ಚಳ ಮಾಡಿಲ್ಲ. ಕೇಂದ್ರ ಸರ್ಕಾರ ಅಕ್ಕಿ ಕೊಡಲು ಸಿದ್ಧವಾಗಿದ್ದರೂ ಪಡೆಯಲು ಸರ್ಕಾರ ತಯಾರಿಲ್ಲ. ಸರ್ಕಾರ ದಿವಾಳಿಯಾಗಿರುವುದಕ್ಕೆ ಇದಕ್ಕಿಂತ ಹೆಚ್ಚು ಸಾಕ್ಷಿ ಬೇಡ ಎಂದು ಹರಿಹಾಯ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಎರಡು ಅಂತಸ್ತಿನ ಮನೆ ಕುಸಿತ

  • ಪದವಿ ಪಡೆದರೆ ಯುವನಿಧಿ ಕೊಡ್ಬೇಕು, ಅದಕ್ಕೆ ಸರ್ಕಾರ 8 ವಿವಿಗಳು ಮುಚ್ಚುತ್ತಿದೆ: ಅಶೋಕ್‌

    ಪದವಿ ಪಡೆದರೆ ಯುವನಿಧಿ ಕೊಡ್ಬೇಕು, ಅದಕ್ಕೆ ಸರ್ಕಾರ 8 ವಿವಿಗಳು ಮುಚ್ಚುತ್ತಿದೆ: ಅಶೋಕ್‌

    – ಗ್ಯಾರಂಟಿ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ

    ಬೆಂಗಳೂರು: ಯುವಕರು ಪದವಿ ಪಡೆದರೆ ಯುವನಿಧಿ (Yuva Nidhi) ಕೊಡಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್‌ ಸರ್ಕಾರ (Congress Government) 8 ವಿಶ್ವವಿದ್ಯಾಲಯಗಳನ್ನು (University) ಮುಚ್ಚಲು ಮುಂದಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ (R Ashok) ಕಿಡಿಕಾರಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಭಾರೀ ಖತರ್ನಾಕ್‌ಗಳು. ಮೊದಲು ಮಂಡ್ಯ ವಿವಿ ಮುಚ್ಚುತ್ತಿದ್ದಾರೆ. ಮಂಡ್ಯ ಗಂಡು ನಾಡು. ಅಲ್ಲೇ ವಿವಿಗೆ ಕೊಡಲಿ ಪೆಟ್ಟು ಹಾಕುತ್ತಿದ್ದಾರೆ. ರಾಜ್ಯ ಸರ್ಕಾರ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ ಕೊಡುತ್ತಿದೆ. ಮಾರಿ ಕಣ್ಣು ಹೋರಿ ಮೇಲೆ ಅನ್ನುವಂತೆ ಸಿದ್ದರಾಮಯ್ಯ ಕಣ್ಣು ವಿವಿಗಳ ಮೇಲೆ ಬಿದ್ದಿದೆ. 9 ವಿವಿಗಳನ್ನು ಮುಚ್ಚಲು ಹೊರಟಿರುವ ಸರ್ಕಾರದ ನಿರ್ಧಾರವನ್ನು ಬಿಜೆಪಿ ಬಲವಾಗಿ ವಿರೋಧಿಸುತ್ತದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ಸ್ಥಾಪಿಸಿದ್ದ 9 ವಿಶ್ವವಿದ್ಯಾಲಯಗಳಿಗೆ ಬೀಗ 

    ಕೆಆರ್‌ಎಸ್‌ ಪಕ್ಕ ಅಮ್ಯೂಸ್ಮೆಂಟ್ ಪಾರ್ಕ್ ಮಾಡುತ್ತಾರಂತೆ. ಇದಕ್ಕೆ 1000 ಸಾವಿರ ಕೋಟಿ ರೂ. ಕೊಡುತ್ತಿದ್ದಾರೆ. ಜಲಕ್ರೀಡೆಗೆ ಹಣ ನೀಡುತ್ತಾರೆ ಆದರೆ ವಿಶ್ವವಿದ್ಯಾಲಯ ಮುಚ್ಚಿಸುತ್ತಾರೆ. ಈ ಕಾಂಗ್ರೆಸ್‌ನವರು ಅಪರೂಪದ ಪೀಸ್‌ಗಳು ಎಂದು ವಾಗ್ದಾಳಿ ನಡೆಸಿದರು.

    ಉನ್ನತ ಶಿಕ್ಷಣ ವಲಯದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಉಪನ್ಯಾಸಕರ ನೇಮಕ ಆಗಿಲ್ಲ, ಅತಿಥಿ ಉಪನ್ಯಾಸಕರಿಗೆ ವೇತನ ಇಲ್ಲ. ಶಾಲೆ ಕಾಲೇಜು ಕಟ್ಟಡಗಳ ದುರಸ್ತಿ ಇಲ್ಲ ಪಠ್ಯಪುಸ್ತಕ, ಸಮಸವಸ್ತ್ರ ಕೊಡಲು ಕಾಸಿಲ್ಲ, ಮನಸಿಲ್ಲ. ಕೆಪಿಎಸ್‌ಸಿಯಲ್ಲಿ ತಪ್ಪಿಲ್ಲದೇ ಸರಿಯಾಗಿರುವ ಪ್ರಶ್ನೆ ಪತ್ರಿಕೆ ಕೊಡುವ ಯೋಗ್ಯತೆ ಇಲ್ಲ. ಈಗ ನಾಲ್ಕು ಲಕ್ಷ ಕೋಟಿ ಮೊತ್ತದ ಬಜೆಟ್ ಮಂಡಿಸಲು ಸಿದ್ದರಾಮಯ್ಯ ಹೊರಟಿದ್ದಾರೆ. ಈ ಬಜೆಟ್‌ನಲ್ಲಿ ವಿಶ್ವವಿದ್ಯಾಲಯಗಳಿಗೆ ಕೇವಲ 342 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದರು.

    ವಿವಿ ಮುಚ್ಚುತ್ತೇವೆ ಎನ್ನುವವರು ವೈನ್ ಸ್ಟೋರ್, ಬಾರ್ ಗಳನ್ನು ಮುಚ್ಚಿ ನೊಡೋಣ. ಇದೇ ಕಾಂಗ್ರೆಸ್ ನೀತಿ. ನಮ್ಮ ವಿದ್ಯಾರ್ಥಿಗಳು ಅಧ್ಯಯನಕ್ಕೆ ಪರ ರಾಜ್ಯಕ್ಕೆ ಹೋಗಬೇಕೇ ಎಂದು ಪ್ರಶ್ನಿಸಿ ವಾಗ್ದಾಳಿ ನಡೆಸಿದರು.