Tag: r ashok

  • ಹಣಬಲ, ಅಧಿಕಾರ ಬಲದಿಂದ ಕಾಂಗ್ರೆಸ್ ಮುಂದೆ ಇದೆ – ಆರ್.ಅಶೋಕ್

    ಹಣಬಲ, ಅಧಿಕಾರ ಬಲದಿಂದ ಕಾಂಗ್ರೆಸ್ ಮುಂದೆ ಇದೆ – ಆರ್.ಅಶೋಕ್

    ಬೆಂಗಳೂರು: ಉಪುಚುನಾವಣೆಯಲ್ಲಿ (ByElection) ಹಣಬಲ, ಅಧಿಕಾರ ಬಲದಿಂದ ಕಾಂಗ್ರೆಸ್ ಮುಂದೆ ಇದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಕಿಡಿಕಾರಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಕ್ಷೇತ್ರದಲ್ಲಿ ಪ್ರಾರಂಭದಲ್ಲಿ ಫೈಟ್ ಇತ್ತು. ಅದರೆ ಈಗಿನ ಟ್ರೆಂಡ್ ಸಮಾಧಾನಕಾರ ಇಲ್ಲ. ಹಣಬಲ, ಅಧಿಕಾರ ಬಲದಿಂದ ಕಾಂಗ್ರೆಸ್ (Congress) ಮುಂದೆ ಇದೆ. ಶಿಗ್ಗಾಂವಿಯಲ್ಲಿ ಗೆಲ್ಲುತ್ತೇವೆ ಎಂದುಕೊಂಡಿದ್ದೆವು. ಆದರೆ ಹಿನ್ನಡೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಇದನ್ನೂ ಓದಿ: ಸ್ಟೈಲೀಶ್ ಆದ ಸಂಜನಾ ಬುರ್ಲಿ ಲುಕ್‌ಗೆ ಪಡ್ಡೆಹುಡುಗರು ಫಿದಾ

    ರಾಜ್ಯದ ಉಪಚುನಾವಣೆಯಲ್ಲಿ ಬಿಜೆಪಿಗೆ (BJP) ಹಿನ್ನಡೆ ವಿಚಾರವಾಗಿ ಮಾತನಾಡಿ, ಈ ಫಲಿತಾಂಶ ನಮಗೆ ಸಮಾಧಾನ ತಂದಿಲ್ಲ. ಜೆಡಿಎಸ್, ನಮ್ಮ ಕಾರ್ಯಕರ್ತರು ಒಟ್ಟಿಗೆ ಕೆಲಸ ಮಾಡಿದ್ದಾರೆ. ಆಡಳಿತ ಪಕ್ಷ ಕಾಂಗ್ರೆಸ್ ಇದ್ದರಿಂದ ಮೇಲುಗೈ ಸಾಧಿಸಿದ್ದಾರೆ. ಈ ಹಿಂದೆ ನಾವು ಉಪಚುನಾವಣೆಯಲ್ಲಿ ಗೆದ್ದಿದ್ದೆವು. ಶಿಗ್ಗಾಂವಿಯಲ್ಲಿ ಮುಸ್ಲಿಂ ವೋಟ್‌ಗಳು ಕಾಂಗ್ರೆಸ್‌ಗೆ ವರದಾನವಾಗಿದೆ. ಬೊಮ್ಮಾಯಿ ಅವರು ಮಗ ಭರತ್‌ನನ್ನು ನಿಲ್ಲಿಸಲ್ಲ ಎಂದು ಹೇಳಿದ್ದರು. ಆದರೆ ಪಕ್ಷದ ಕೇಂದ್ರ ನಾಯಕರ ಒತ್ತಾಯದ ಮೇಲೆ ಮಗನನ್ನ ನಿಲ್ಲಿಸಿದ್ದರು ಎಂದು ತಿಳಿಸಿದರು.

    ಮಹಾರಾಷ್ಟ್ರ, ಜಾರ್ಖಂಡ್ ಫಲಿತಾಂಶ ವಿಚಾರವಾಗಿ ಮಾತನಾಡಿ, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದು ಬೊಬ್ಬೆ ಹೊಡೆಯುತ್ತಿದ್ದರು. ಅಲ್ಲಿನ ಜನ ಕಾಂಗ್ರೆಸ್‌ನ್ನು ತಿರಸ್ಕಾರ ಮಾಡಿದ್ದಾರೆ. ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ಸರ್ಕಾರವಿಲ್ಲ. ಸದ್ಯ ಬಿಜೆಪಿಗೆ ಮೇಲಗೈ ಸಿಗುತ್ತಿಲ್ಲ. ಮೋದಿಯವರ ಹವಾ ಎಲ್ಲ ಕಡೆಯಿದೆ ಎಂದರು.ಇದನ್ನೂ ಓದಿ: 3 ಸೀಟು ಗೆಲ್ಲುವ ಹಗಲುಗನಸು ಕಾಣುತ್ತಿದ್ದ ಬಿಜೆಪಿಗೆ ಜನರು ಇದೀಗ ಉತ್ತರ ಕೊಟ್ಟಿದ್ದಾರೆ – ಎಂ.ಬಿ ಪಾಟೀಲ್

  • ವಕ್ಫ್ ಮಂಡಳಿ ರದ್ದಾಗಬೇಕು, ಪಹಣಿಯಲ್ಲಿ ಹೆಸರು ತೆಗೆಸಿಹಾಕಬೇಕು – ಆರ್.ಅಶೋಕ್ ಆಗ್ರಹ

    ವಕ್ಫ್ ಮಂಡಳಿ ರದ್ದಾಗಬೇಕು, ಪಹಣಿಯಲ್ಲಿ ಹೆಸರು ತೆಗೆಸಿಹಾಕಬೇಕು – ಆರ್.ಅಶೋಕ್ ಆಗ್ರಹ

    ಬೆಂಗಳೂರು: ವಕ್ಫ್ ಮಂಡಳಿ (Waqf Board) ರದ್ದಾಗಬೇಕು, ರೈತರ ಜಮೀನಿನ ಪಹಣಿಯಲ್ಲಿ ಬರೆದ ವಕ್ಫ್ ಹೆಸರು ತೆಗೆಸಿಹಾಕಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ಆಗ್ರಹಿಸಿದರು.

    ಫ್ರೀಡಂ ಪಾರ್ಕ್‌ನಲ್ಲಿ (Freedom Park) ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿಶ್ವವಿಖ್ಯಾತ ಇಂಜಿನಿಯರ್ ಸರ್ ಎಂ.ವಿಶ್ವೇಶ್ವರಯ್ಯನವರು ಓದಿದ ಶಾಲೆಯ ಆವರಣವನ್ನು ವಕ್ಫ್ ಮಂಡಳಿ ಕಬಳಿಸಿದೆ. ಕೇಂದ್ರದಲ್ಲಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ವಕ್ಫ್ ಮಂಡಳಿಗೆ ನ್ಯಾಯಾಂಗದ ಅಧಿಕಾರ ನೀಡಿದೆ. ಇದನ್ನು ಬಳಸಿಕೊಂಡು ವಕ್ಫ್ ಮಂಡಳಿ ರೈತರ ಜಮೀನು ನುಂಗುತ್ತಿದೆ. ಕಾಂಗ್ರೆಸ್ ಅಧಿಕಾರ ಪಡೆಯುವ ರಾಜ್ಯಗಳಲ್ಲಿ ಮಿನಿ ಪಾಕಿಸ್ತಾನ ನಿರ್ಮಿಸುತ್ತಿದೆ. ವಿಧಾನಸೌಧ, ಲಾಲ್‌ಬಾಗ್ ಕೂಡ ನಮ್ಮದು ಎಂದು ಇವರು ಹೇಳುತ್ತಾರೆ ಎಂದು ದೂರಿದರು.ಇದನ್ನೂ ಓದಿ: ಬೌಲರ್‌ಗಳ ಆಟದಲ್ಲಿ ಮೊದಲ ದಿನವೇ 17 ವಿಕೆಟ್‌ ಪತನ – ಭಾರತಕ್ಕೆ 83 ರನ್‌ಗಳ ಮುನ್ನಡೆ

    ಬೌರಿಂಗ್ ಆಸ್ಪತ್ರೆಯದ್ದು 2 ಎಕರೆ ಜಮೀನು ಇದ್ದು, ಅದನ್ನು ಕೂಡ ವಕ್ಫ್ ಮಂಡಳಿ ಕಬಳಿಕೆ ಮಾಡಿತ್ತು. ನಾನು ಸಚಿವನಾಗಿದ್ದಾಗ ಅದರ ದಾಖಲೆಗಳನ್ನು ತರಿಸಿ ನೋಡಿದರೆ ಯಾವುದೋ ಹಳೆಯ ದಾಖಲೆಗಳನ್ನು ತಂದರು. ಬಳಿಕ ಹೋರಾಟ ಮಾಡಿ ಆಸ್ತಿ ಉಳಿಸಿದೆ. ವಕ್ಫ್ ಮಂಡಳಿ ತಿಮಿಂಗಿಲದಂತೆ ಬಡವರ ಜಮೀನು ನುಂಗುತ್ತಿದೆ. ರೈತರು ಕಂಗಾಲಾಗಿ ತಮ್ಮ ಆಸ್ತಿಗಳ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ ಎಂದರು.

    ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ಮುಸ್ಲಿಮರಿಗೆ ಎರಡು ಕೊಂಬು ಬಂದಿದೆ. ಸಿದ್ದರಾಮಯ್ಯ ಎಂದರೆ ಅಹಿಂದ ನಾಯಕ ಅಲ್ಲ. ಅವರೀಗ ಮುಸ್ಲಿಮರ ಚಾಂಪಿಯನ್ ಆಗಲು ಮುಂದಾಗಿದ್ದಾರೆ. ಲವ್ ಜಿಹಾದ್, ಲ್ಯಾಂಡ್ ಜಿಹಾದ್ ಬಳಿಕ ರೇಷನ್ ಕಾರ್ಡ್ ಜಿಹಾದ್ ಆರಂಭಿಸಿದ್ದಾರೆ. 45 ವರ್ಷದಿಂದ ರೇಷನ್ ಕಾರ್ಡ್ ಹೊಂದಿದ್ದ ವೃದ್ಧೆಯೊಬ್ಬರು ಈಗ ಕಾರ್ಡ್ ಕಳೆದುಕೊಂಡಿದ್ದಾರೆ. ಆದರೆ ಸರ್ಕಾರ ಮರಳಿ ಅರ್ಜಿ ಹಾಕಿ ಎನ್ನುತ್ತಿದೆ. ಸರ್ಕಾರ ತಪ್ಪು ಮಾಡಿದರೆ, ಜನರು ಲಂಚ ಕೊಟ್ಟು ರೇಷನ್ ಕಾರ್ಡ್ ಮಾಡಿಸಿಕೊಳ್ಳಬೇಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಜಯನಗರ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿ ಇಲ್ಲ. ಅದಕ್ಕಾಗಿ ಪ್ರತಿಯೊಂದಕ್ಕೂ ಶುಲ್ಕ ಏರಿಕೆ ಮಾಡಲಾಗಿದೆ. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಸಿಎಂ ಸಿದ್ದರಾಮಯ್ಯ ತೆರಿಗೆ ವಿಧಿಸದ ವಸ್ತುಗಳೇ ಇಲ್ಲ. ಹರಿಯುವ ನದಿಗೂ ತೆರಿಗೆ ವಿಧಿಸಿದ್ದಾರೆ. ಇನ್ನು ಗಾಳಿಗೂ ತೆರಿಗೆ ವಿಧಿಸಬಹುದು ಎಂದರು.

    ಸಿಎಂ ಸಿದ್ದರಾಮಯ್ಯ (CM Siddaramaiah) ಬಡವರ ಪರ ಎಂದು ಹೇಳಿಕೊಳ್ಳುತ್ತಾರೆ. ಹಾಲು ಹಾಗೂ ಆಲ್ಕೋಹಾಲ್ ದರ ಏರಿಕೆ, ಮುದ್ರಾಂಕ ಶುಲ್ಕ ಏರಿಕೆ, ಅನ್ನ ಪಡೆಯುವವರಿಗೆ ಕನ್ನ, ಔಷಧಿಗೆ ಕನ್ನ ಮೊದಲಾದ ಕ್ರಮಗಳ ಮೂಲಕ ಸಿಎಂ ಸಿದ್ದರಾಮಯ್ಯನವರು ಕನ್ನರಾಮಯ್ಯ ಎಂದು ಹೆಸರಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

    ತಿದ್ದುಪಡಿ ಮಸೂದೆ ಬರಲಿದೆ
    ಮಂತ್ರಾಲಯ, ವಿಧಾನಸೌಧ, ವಿಶ್ವೇಶ್ವರಯ್ಯನವರ ಶಾಲೆ, ಬಡವರ ಭೂಮಿ ಉಳಿಯಲು ಸೂಪರ್‌ಮ್ಯಾನ್ ಆಗಿ ಪ್ರಧಾನಿ ನರೇಂದ್ರ ಮೋದಿ ಬರಲಿದ್ದಾರೆ. ಅವರು ತರಲಿರುವ ತಿದ್ದುಪಡಿ ಮಸೂದೆಯಿಂದ ಎಲ್ಲವೂ ನಿಯಂತ್ರಣಕ್ಕೆ ಬರಲಿದೆ. ಅಲ್ಲಿಯವರೆಗೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಇರುತ್ತಾರೋ ಇಲ್ಲವೋ ಗೊತ್ತಿಲ್ಲ ಎಂದರು.ಇದನ್ನೂ ಓದಿ: ಜಿಪಂ ಸದಸ್ಯೆ ಅತ್ಯಾಚಾರ ಕೇಸ್ – ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

     

  • ವಕ್ಫ್‌ ಬೋರ್ಡ್‌ ರಾಕ್ಷಸನನ್ನ ಮೋದಿ ಸಂಹಾರ ಮಾಡ್ತಾರೆ: ಆರ್.‌ ಅಶೋಕ್‌

    ವಕ್ಫ್‌ ಬೋರ್ಡ್‌ ರಾಕ್ಷಸನನ್ನ ಮೋದಿ ಸಂಹಾರ ಮಾಡ್ತಾರೆ: ಆರ್.‌ ಅಶೋಕ್‌

    – ಸರ್ಕಾರ ಹಿಂದೂಗಳನ್ನ 2ನೇ ದರ್ಜೆಯ ಪ್ರಜೆಗಳನ್ನಾಗಿ ಕಾಣ್ತಿದೆ ಎಂದ ಸುಧಾಕರ್‌

    ಚಿಕ್ಕಬಳ್ಳಾಪುರ: ಮುಂದಿನ ಸಂಸತ್‌ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ವಕ್ಫ್‌ ಬೋರ್ಡ್‌ ಎಂಬ ರಾಕ್ಷಸನನ್ನ ಸಂಹಾರ ಮಾಡ್ತಾರೆ ಎಂದು ವಿಪಕ್ಷ ನಾಯಕ ಆರ್.‌ ಅಶೋಕ್‌ (R. Ashok) ಗುಡುಗಿದರು.

    ನಗರದಲ್ಲಿ ವಕ್ಫ್‌ ಬೋರ್ಡ್‌ನಿಂದ (Waqf Board) ಶಾಲೆ, ದೇವಸ್ಥಾನ ಆಸ್ತಿ ಅತಿಕ್ರಮಣ ಖಂಡಿಸಿ ಚಿಕ್ಕಬಳ್ಳಾಪುರ ಬಿಜೆಪಿ ಘಟಕ ಬೃಹತ್‌ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಆರ್‌. ಅಶೋಕ್‌, ವಕ್ಫ್‌ ಬೋರ್ಡ್ ಎಂಬುದು ತಿಮಿಂಗಲ, ಪಿಶಾಚಿ, ಕೊಳ್ಳಿ ದೆವ್ವ, ರಾಕ್ಷಸ ಇದ್ದ ಹಾಗೆ. ಈ ವಕ್ಫ್‌ ಬೋರ್ಡ್‌ ಎಂಬ ರಾಕ್ಷಸನನ್ನು ಪ್ರಧಾನಿ ಮೋದಿ ಸಂಹಾರ ಮಾಡ್ತಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: PublicTV Explainer: ಆಗಸದಲ್ಲೂ ಹಾರುತ್ತೆ, ನೀರಲ್ಲೂ ಲ್ಯಾಂಡ್‌ ಆಗುತ್ತೆ; ಏನಿದು ಸೀ ಪ್ಲೇನ್? – ಕರ್ನಾಟಕಕ್ಕೂ ಜಲ ವಿಮಾನ ಬರುತ್ತಾ?

    ವಕ್ಫ್‌ ಕೊಳ್ಳಿ ದೆವ್ವ ಇದ್ದ ಹಾಗೆ, ಅವರು ಕಾಲಿಟ್ಟ ಜಾಗವೆಲ್ಲ ಅವರದ್ದೇ ಅಂತಾರೆ. ಇಂತಹ ಬೋರ್ಡ್‌ ಇರಬೇಕಾ? ಖಂಡಿತಾ ವಜಾ ಆಗಬೇಕು. ಹಿಂದೂ, ಬೌದ್ಧರು, ಕ್ರೈಸ್ತರಿಗಿಲ್ಲದ ವಿಶೇಷ ಸ್ಥಾನಮಾನ ಇವರಿಗೆ ಯಾಕೆ? ಅಂಬೇಡ್ಕರ್ ಸಂವಿಧಾನ ಇವರಿಗೆ ಅನ್ವಯ ಆಗಲ್ವಾ? ಇದು ಕಾಂಗ್ರೆಸ್ ಮನೆಹಾಳು ಬುದ್ದಿ ಹಾಗಾಗಿ ಅಧಿವೇಶನದಲ್ಲಿ ನಾವು ಸಹ ವಕ್ಫ್‌ ಬೋರ್ಡ್ ವಜಾ ಮಾಡಬೇಕು ಅಂತ ಹೋರಾಟ ಮಾಡ್ತೇವೆ ಎಂದು ಗುಡುಗಿದರು. ಇದನ್ನೂ ಓದಿ: ಸರ್ಕಾರದ ಬೊಕ್ಕಸ ಖಾಲಿ ಮಾಡಿರೋದೆ ಸಿದ್ದರಾಮಯ್ಯ ಸಾಧನೆ – ಸಿಎಂ ವಿರುದ್ಧ ಜೆಡಿಎಸ್ ಕಿಡಿ

    ವಕ್ಫ್‌ ಬೋರ್ಡ್‌ಗೆ ತಿಮಿಂಗಲ ಬೋರ್ಡ್ ಅಂತ ಹೆಸರಿಡಬೇಕು. ತಿಮಿಂಗಲದ ಕೆಲಸ ಎಲ್ಲವನ್ನೂ ನುಂಗಿ ಹಾಕೋದು. ಅದೇ ರೀತಿ ವಕ್ಫ್‌ ಬೋರ್ಡ್ ಸಹ ರೈತರ ಎಲ್ಲರ ಜಮೀನು ನುಂಗಿ ಹಾಕುತ್ತಿದೆ. ಹಾಗಾಗಿ ಅಧಿವೇಶನದ ಸಮಯದಲ್ಲಿ ಜನ ಬೀದಿಗಿಳಿದು ಹೋರಾಟ ಮಾಡಿ, ಸಂಸತ್ ಅಧಿವೇಶನದಲ್ಲಿ ವಕ್ಫ್‌ ಬೋರ್ಡ್‌ ರಾಕ್ಷಸನನ್ನ ಮೋದಿ ಸಂಹಾರ ಮಾಡ್ತಾರೆ ಎಂದು ನುಡಿದರು.

    ಇನ್ನೂ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಂಸದ ಡಾ.ಕೆ ಸುಧಾಕರ್‌ (Dr. K.Sudhakar), ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಲ್ಯಾಂಡ್ ಜಿಹಾದ್ ಘೋಷಣೆ ಮಾಡಿದೆ. ರೈತರ ಜಮೀನು ಉಳಿಸುವ ಸಲುವಾಗಿ ಬಿಜೆಪಿ ವತಿಯಿಂದ ಹೋರಾಟ ಮಾಡ್ತಿದ್ದೇವೆ. ಮರಳಿ ರೈತರಿಗೆ ವಾಪಾಸ್ ಕೊಡಿಸುವ ಕ್ರಮ ವಹಿಸುತ್ತಿದ್ದೇವೆ. ಬ್ರಿಟಿಷರು ಹೊಡೆದು ಆಳುತ್ತಿದ್ದರು ಅದನ್ನೇ ಕಾಂಗ್ರೆಸ್ ಸರ್ಕಾರ ಕಲಿತಿದೆ. ಜನರನ್ನ ಹೊಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: 1,000 ದಿನ ಪೂರೈಸಿದ ರಷ್ಯಾ-ಉಕ್ರೇನ್‌ ಯುದ್ಧ; ಪರಮಾಣು ಶಸ್ತ್ರಾಸ್ತ್ರ ಬಳಕೆ ಎಚ್ಚರಿಕೆ ನೀಡಿದ ಪುಟಿನ್‌

    ಹಿಂದೂಗಳನ್ನ 2ನೇ ದರ್ಜೆ ಪ್ರಜೆಗಳನ್ನಾಗಿ ಕಾಣ್ತಿದೆ:
    ಹನುಮ ಧ್ವಜ ಕಟ್ಟಿದರೆ ಇಳಿಸ್ತಾರೆ, ಅಯೋಧ್ಯೆ ರಾಮಮಂದಿರ ಕಟ್ಟಿದ್ರೆ ಹೋಗಲ್ಲ ಅಂತಾರೆ, ಕರ ಸೇವಕರನ್ನ ಬಂಧಿಸ್ತಾರೆ, ವಿನಾಯಕ ಮೆರವಣಿಗೆ ಮಾಡಿದ್ರೆ ಗಣೇಶನನ್ನ ಬಂಧಿಸ್ತಾರೆ. ಡಿಜೆ ಹಾಕೋ ಆಗಿಲ್ಲ ಅಂತ ಆಕ್ರೋಶ ಹೊರ ಹಾಕಿದರು. ಎಸ್ಪಿ, ಡಿವೈಎಸ್ಪಿ, ಎಸ್‌ಐ ಕಾಂಗ್ರೆಸ್‌ನವರ ತರ ಆಳ್ವಿಕೆ ಮಾಡ್ತಿದ್ದಾರೆ. ರೈತರ ಜಮೀನು ವಕ್ಫ್‌ ಆಸ್ತಿ ಆಗ್ತಿದೆ, ದೇವಾಲಯ ಖಬರಸ್ತಾನ್‌ ಆಗ್ತಿದೆ. ಇದಕ್ಕೆ ಪುಷ್ಟಿ ಕೊಡ್ತಿರೋದು ಕಾಂಗ್ರೆಸ್ ಸರ್ಕಾರ. ಹಿಂದೂಗಳ ಮೇಲೆ ವಕ್ಪ್ ಗಧಾಪ್ರಹಾರ ಮಾಡ್ತಿದೆ, ವಕ್ಫ್‌ಗೆ ಸಾವಿರಾರು ಎಕೆರೆಗಳಿವೆ ನೂರಾರು ಕೋಟಿ ಆದಾಯ ಇದೆ. ಆದ್ರೆ ಅವರಿಗೊಂದು ನ್ಯಾಯ ನಮಗೊಂದು ನ್ಯಾಯ ಎಂಬಂತೆ ಹಿಂದೂಗಳನ್ನು 2ನೇ ದರ್ಜೆ ಪ್ರಜೆಗಳನ್ನಾಗಿ ಸರ್ಕಾರ ಕಾಣ್ತಿದೆ ಅಂತ ತೀವ್ರ ವಾಗ್ದಾಳಿ ನಡೆಸಿದರು.

  • Chikkaballapura | ವಿವಾದ ತಾರಕಕ್ಕೆ – ʻವಕ್ಫ್‌ ಜಿಹಾದ್ʼ ಹೆರಸಲ್ಲಿ ನಾಳೆ ಆರ್‌.ಅಶೋಕ್‌ ಪ್ರತಿಭಟನೆ

    Chikkaballapura | ವಿವಾದ ತಾರಕಕ್ಕೆ – ʻವಕ್ಫ್‌ ಜಿಹಾದ್ʼ ಹೆರಸಲ್ಲಿ ನಾಳೆ ಆರ್‌.ಅಶೋಕ್‌ ಪ್ರತಿಭಟನೆ

    ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ರೈತರ (Farmers), ಮಠಮಾನ್ಯಗಳ, ದೇವಾಲಯಗಳ ಆಸ್ತಿ ವಕ್ಫ್‌ಗೆ ಪರಭಾರೆ ಮಾಡಿದ್ದಾರೆ ಎಂದು ಆರೋಪಿಸಿ ಆರೋಪ ಬಿಜೆಪಿ ವತಿಯಿಂದ ನಾಳೆ (ನ.19) ಚಿಕ್ಕಬಳ್ಳಾಪುರದಲ್ಲಿ (Chikkaballapura) ಬೃಹತ್ ಹೋರಾಟ ನಡೆಸಲು ತೀರ್ಮಾನಿಸಲಾಗಿದ್ದು, ವಿಪಕ್ಷನಾಯಕ ಅರ್.ಅಶೋಕ್ (R Ashoka) ಭಾಗಿಯಾಗಲಿದ್ದಾರೆ.

    ಮಂಗಳವಾರ ಬೆಳಗ್ಗೆ 10 ಗಂಟೆಗೆ ಚಿಕ್ಕಬಳ್ಳಾಪುರಕ್ಕೆ ಆಗಮಿಸಲಿರುವ ಅರ್.ಅಶೋಕ್, ಮೊದಲಿಗೆ ಮುದ್ದೇನಹಳ್ಳಿಯ ಸರ್.ಎಂ ವಿಶ್ವೇಶ್ವರಯ್ಯನವರ ಸಮಾಧಿಗೆ ಭೇಟಿ ನೀಡಿ ಪುಷ್ಪನಮನ ಸಲ್ಲಿಸಲಿದ್ದಾರೆ. ನಂತರ ವಿಶ್ವೇಶ್ವರಯ್ಯನವರು ಓದಿದ್ದ ಕಂದವಾರ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಲಿದ್ದಾರೆ. ಇದನ್ನೂ ಓದಿ: DCSನಲ್ಲಿ ಸರ್ವರ್‌ ಸಮಸ್ಯೆ, KSRTC ಬಸ್‌ಗಳಿಗೆ ತಟ್ಟಿದ ಬಿಸಿ – ಮಡಿಕೇರಿಯಲ್ಲಿ ಪ್ರಯಾಣಿಕರು ಹೈರಾಣು

    ಅಂದಹಾಗೆ ಕಂದವಾರ ಸರ್ಕಾರಿ ಶಾಲೆ ಸಹ ವಕ್ಫ್‌ ಆಸ್ತಿಯಾಗಿತ್ತು. ಪ್ರಕರಣ ವರದಿ ನಂತರ ಜಿಲ್ಲಾಡಳಿತ ವಕ್ಪ್ ಆಸ್ತಿಯಿಂದ (Waqf Property) ಸರ್ಕಾರಿ ಶಾಲೆ ಆಸ್ತಿ ಅಂತ ಬದಲವಾಣೆ ಮಾಡಿದೆ. ಇನ್ನೂ ನಂತರ ಚಿಕ್ಕಬಳ್ಳಾಪುರ ನಗರದಲ್ಲಿ ಸಂಸದ ಸುಧಾಕರ್ ನೇತೃತ್ವದಲ್ಲಿ ನಡೆಯಲಿರುವ ʻವಕ್ಫ್‌ ಜಿಹಾದ್ʼ ಹೆಸರಿನ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಸರ್ಕಾರಿ ನೌಕರರ ಬಿಪಿಎಲ್‌ ಕಾರ್ಡ್‌ ರದ್ದು – ಕಲಬುರಗಿಯಲ್ಲಿ ಹೆಚ್ಚು, ಉಡುಪಿಯಲ್ಲಿ ಅತಿ ಕಡಿಮೆ

    ವಿವಾದಿತ ಸ್ಥಳಕ್ಕೆ ಭೇಟಿ ನೀಡಿದ್ದ ಬಿಜೆಪಿ ಮುಖಂಡರು:
    ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ತಿಮ್ಮಸಂದ್ರ ಗ್ರಾಮದ ವಕ್ಫ್‌ ಆಸ್ತಿ ವಿವಾದಿತ ಜಮೀನಿಗೆ ಮಾಜಿ ಸಂಸದ ಮುನಿಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಭೇಟಿ ನೀಡಿ ರೈತರೊಂದಿಗೆ ಮಾತುಕತೆ ನಡೆಸಿದ್ದರು. ಆದ್ರೆ ವಿವಾದಿತ ಜಾಗಕ್ಕೆ ಬಿಜೆಪಿ ಮುಖಂಡರು ಬರಬಾರದು ಅಂತ ಪೊಲೀಸರು ಭಾರೀ ಭದ್ರತೆ ಕೈಗೊಂಡಿದ್ದರು. ಇದಕ್ಕೂ ಮುನ್ನ ಚಿಂತಾಮಣಿ ನಗರದ ಕನ್ನಂಪಲ್ಲಿ ಆಂಜನೇಯ ಸ್ವಾಮಿ ದೇವಾಲಯದ ಬಳಿ ಜಮಾಯಿಸಿದ್ದ ಬಿಜೆಪಿ ಕಾರ್ಯಕರ್ತರು ಹಾಗೂ ಸಂಸದ ಮುನಿಸ್ವಾಮಿ ವಿವಾದಿತ ಜಾಗಕ್ಕೆ ತೆರಳದಂತೆ ಪೊಲೀಸರು ತಡೆಯೊಡ್ಡಿದರು.

    ಕೊನೆಗೆ ಪೊಲೀಸರ ಭದ್ರತೆಯಲ್ಲಿ ಮಾಜಿ ಸಂಸದ ಮುನಿಸ್ವಾಮಿ ಹಾಗೂ ಬಿಜೆಪಿ ಮುಖಂಡರನ್ನ ಕರೆದೊಯ್ದರು. ಈ ವೇಳೆ ವಿವಾದಿತ ಜಾಗದಲ್ಲಿ ಎಸಿ ಹಾಗೂ ತಹಶಿಲ್ದಾರ್ ವಿರುದ್ಧ ಮಾಜಿ ಸಂಸದ ಮುನಿಸ್ವಾಮಿ ಹರಿಹಾಯ್ದರು. ರೈತರಿಗೆ ಸೇರಿದ ಪೂರ್ವಜರ ಸಮಾಧಿಗಳಿವೆ, ಅರಳಿಕಟ್ಟೆ ಇದೆ. 60 ವರ್ಷಗಳಿಂದ ಉಳುಮೆ ಮಾಡಿಕೊಂಡು ಅನುಭೋಗದಲ್ಲಿದ್ದಾರೆ. ಆದರೂ ಹೇಗೆ ವಕ್ಫ್‌ ಆಸ್ತಿಯಾಯಿತು ಅಂತ ತೀವ್ರ ತರಾಟೆ ತೆಗೆದುಕೊಂಡರು.‌ ತಹಶಿಲ್ದಾರ್ ಸ್ಪಂದಿಸಲಿಲ್ಲ ಅಂತ ಧರಣಿ ಕೂರಲು ಮುಂದಾಗಿ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಚಿಕ್ಕಬಳ್ಳಾಪುರ: ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾದ ಚಿರತೆ ದೃಶ್ಯ!

  • ಸಿದ್ದರಾಮಯ್ಯ ಸುಳ್ಳುರಾಮಯ್ಯ ಎಂದು ಹೆಸರು ಬದಲಾಯಿಸಿಕೊಳ್ಳಲಿ – ಆರ್.ಅಶೋಕ್ ವಾಗ್ದಾಳಿ

    ಸಿದ್ದರಾಮಯ್ಯ ಸುಳ್ಳುರಾಮಯ್ಯ ಎಂದು ಹೆಸರು ಬದಲಾಯಿಸಿಕೊಳ್ಳಲಿ – ಆರ್.ಅಶೋಕ್ ವಾಗ್ದಾಳಿ

    ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಸುಳ್ಳುರಾಮಯ್ಯ ಎಂದು ಹೆಸರು ಬದಲಾಯಿಸಿಕೊಳ್ಳಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ವಾಗ್ದಾಳಿ ನಡೆಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ 40% ಕಮೀಷನ್ ವಿಚಾರವಾಗಿ ಮಾತನಾಡಿದ ಅವರು, ಪ್ರಧಾನಿಯವರಿಂದ ಸಿದ್ದರಾಮಯ್ಯ ಸಾಕ್ಷಿ ಕೇಳ್ತಾರೆ, ಅವರಿಗೆ ನಾಚಿಕೆ ಆಗಬೇಕು. ಸಿದ್ದರಾಮಯ್ಯ, ಡಿಕೆಶಿ, ಅಂಬಿಕಾಪತಿ ಈ ಸುಳ್ಳಿನ ಮಹಲ್ ಕಟ್ಟಿದ್ದರು ಅದು ಈಗ ಕುಸಿದು ಬಿದ್ದಿದೆ. ರಾಜ್ಯದ ಜನತೆಗೆ ಸುಳ್ಳು ಹೇಳಿ, ತಾವು ಸುಳ್ಳುರಾಮಯ್ಯ ಎಂದು ಖುದ್ದು ಸಿಎಂ ಸಾಬೀತು ಪಡಿಸಿದ್ದಾರೆ. ತಪ್ಪು ಮಾಡಿಲ್ಲ ಎಂದು ಸೈಟು ವಾಪಸ್ ಕೊಟ್ಟರು. ಈಗ ಅವರು ಮಾಡಿದ 40% ಕಮೀಷನ್ ಆರೋಪವೂ ಸುಳ್ಳಾಗಿದೆ. ಇನ್ಮುಂದೆ ಸಿದ್ದರಾಮಯ್ಯ ತಮ್ಮ ಹೆಸರನ್ನು ಸುಳ್ಳು ರಾಮಯ್ಯ ಎಂದು ಬದಲಾಯಿಸಿಕೊಳ್ಳಲಿ ಎಂದರು.ಇದನ್ನೂ ಓದಿ: ಹೆಚ್‌ಡಿಕೆ ಬಣ್ಣದ ಬಗ್ಗೆ ಜಮೀರ್ ಮಾತಾಡಿದ್ದು ಸರಿಯಲ್ಲ- ಪ್ರಿಯಾಂಕ್ ಖರ್ಗೆ

    ನಾನು ಇವತ್ತಿಗೆ ಪ್ರತಿಪಕ್ಷ ನಾಯಕನಾಗಿ ಒಂದು ವರ್ಷವಾಗಿದೆ. ಹಾಗೇ ಇದೇ ಹೊತ್ತಿನಲ್ಲಿ ನಮ್ಮ ಸರ್ಕಾರದ ಮೇಲಿನ 40% ಕಮೀಷನ್ ಆರೋಪ ಸುಳ್ಳು ಎನ್ನುವುದು ಸಾಬೀತಾಗಿದೆ. ಕಮೀಷನ್ ಆರೋಪ ಮಾಡಿರುವುದು ಕಾಂಗ್ರೆಸ್‌ನ ಟೂಲ್‌ಕಿಟ್‌ನ ಭಾಗವಾಗಿದೆ. ಇದುವರೆಗೆ 40% ಕಮೀಷನ್ ಆರೋಪಕ್ಕೆ ಕಾಂಗೆಸ್‌ನವರು ದಾಖಲೆ ಕೊಟ್ಟಿಲ್ಲ. ಆಧಾರರಹಿತ, ಸುಳ್ಳು ಆರೋಪ ಮಾಡಿದ್ದರು. ನಮ್ಮ ಮೇಲಿನ ಆರೋಪ ಸುಳ್ಳು ಎಂದು ಲೋಕಾಯುಕ್ತ ತನಿಖೆಯಿಂದಲೇ ಗೊತ್ತಾಗಿದೆ. ಈಗಿನ ಕಾಂಗ್ರೆಸ್ ಸರ್ಕಾರ 60% ಕಮೀಷನ್ ಸರ್ಕಾರ ಆಗಿದೆ ಎಂದು ಕಿಡಿಕಾರಿದ್ದಾರೆ.

    ವಾಲ್ಮೀಕಿ ಹಗರಣ ವಿಚಾರ:
    ವಾಲ್ಮೀಕಿ ಹಗರಣದಲ್ಲಿ ಸಾಕ್ಷಿ ಸಿಕ್ಕಿದೆ. ಇಡಿ ಇದನ್ನು ಅನುಮೋದನೆ ಮಾಡಿದೆ. ಬಳ್ಳಾರಿಯಲ್ಲಿ ಯಾರ್ಯಾರಿಗೆ ಹಣ ಹೋಗಿದೆ ಎಂದು ರಿಪೋರ್ಟ್ ಬಂದಿದೆ. ಸಿದ್ದರಾಮಯ್ಯ ತಮ್ಮ ಜೀವನ ತೆರೆದ ಪುಸ್ತಕ ಎಂದಿದ್ದಾರೆ. ತೆರೆದ ಪುಸ್ತಕ ನಾವು ನೋಡಿದರೆ ಕಪ್ಪು ಚುಕ್ಕೆ ಇಡುವುದಕ್ಕೆ ಜಾಗನೇ ಇಲ್ಲ. ಸಿದ್ದರಾಮಯ್ಯ ಅವರ ಕುಟುಂಬ ಲೂಟಿ ಮಾಡುತ್ತಿದೆ. ದಿನ ಒಬ್ಬೊಬ್ಬ ಮಂತ್ರಿ ದರೋಡೆಯ ಪುಸ್ತಕ ತೆರೆಯುತ್ತಿದ್ದಾರೆ. ರಾಜ್ಯದಲ್ಲಿ ಕನ್ನ ಹಾಕುವ ಮಂತ್ರಿಗಳು ಇದ್ದಾರೆ. ನನ್ನ ಮುಟ್ಟಿ ನೋಡಿ, ಕೇಸ್ ಹಾಕಿ ನೋಡಿ, ಸಿಎಂ ಪದವಿಯಿಂದ ಇಳಿಯುವುದಿಲ್ಲ ಎಂದು ಅವರ ಹೈಕಮಾಂಡ್‌ಗೆ ಹೇಳುತ್ತಿದ್ದಾರೆ. ತಪ್ಪು ಮಾಡಿಲ್ಲ ಅಂದ ಮೇಲೆ ಯಾಕೆ ಹೀಗೆ ಹೇಳುತ್ತೀರಾ? 14 ಸೈಟ್‌ಗಳನ್ನು ಯಾಕೆ ವಾಪಸ್ಸು ಕೊಟ್ಟಿದೀರಿ? ಏಕವಚನದಲ್ಲಿ ಮಾತನಾಡುತ್ತಾರೆ, ಕೇಳಿದರೆ ಹಳ್ಳಿಯಿಂದ ಬಂದವನು ಎನ್ನುತ್ತಾರೆ. ನಾನು ಸೈಟ್ ವಾಪಸ್ಸು ಮಾಡಿಲ್ಲ. ನನ್ನ ಹೆಂಡ್ತಿ ನನಗೆ ಗೊತ್ತಿಲ್ಲದೇ ಕೊಟ್ಟಿದ್ದಾರೆ ಎಂದರು. ಅವರು ಅಹಿಂದ ನಾಯಕರಾಗಿಲ್ಲ ಈಗ ಅವರು ಅಲ್ಪಸಂಖ್ಯಾತರ ಚಾಂಪಿಯನ್ ಆಗಿದ್ದಾರೆ. ಮುಸ್ಲಿಮರ ಹೀರೋ ಆಗಲು ಹೊರಟಿದ್ದಾರೆ ಎಂದು ಹೇಳಿದರು.

    ಬೆಳಗಾವಿ ಅಧಿವೇಶನ ಕರೆಯಲು ಸರ್ಕಾರ ಹೆದರುತ್ತಿದ್ದಾರೆ. ಸಾಕಷ್ಟು ಭ್ರಷ್ಟಾಚಾರ ಮಾಡಿ ಈಗ ಅಧಿವೇಶನ ಕರೆಯಲೂ ಹೆದರುತ್ತಿದ್ದಾರೆ. ಅದಕ್ಕೆ ಅಧಿವೇಶನದ ದಿನಾಂಕ ಸಹ ಪ್ರಕಟ ಮಾಡಲು ಹಿಂಜರಿಯುತ್ತಿದ್ದಾರೆ. ಅಧಿವೇಶನದಲ್ಲಿ ಸರ್ಕಾರದ ಎಲ್ಲ ಲೋಪಗಳ ಬಗ್ಗೆ ಚರ್ಚೆ, ಹೋರಾಟ ಮಾಡುತ್ತೇವೆ. ಈ ಸರ್ಕಾರ ಕಾಣೆಯಾಗಿದೆ, ಕೇವಲ ಗುರುವಾರ ಸಂಪುಟ ಸಭೆಯಲ್ಲಿ ಎಲ್ಲರೂ ಕಾಣಿಸಿಕೊಳುತ್ತಾರೆ. ಇದೊಂದು ಗುರುವಾರ ವೀರರ ಸರ್ಕಾರ. ಗುರುವಾರ ಬಳಿಕ ಎಲ್ಲರೂ ನಾಪತ್ತೆಯಾಗಿ ಹೋಗುತ್ತಾರೆ. ಇದು ಗುರುವಾರದ ಸರ್ಕಾರ. ಕ್ಯಾಬಿನೆಟ್ ದಿನ ಮಾತ್ರ ಈ ಸರ್ಕಾರ ಎದ್ದಿರುತ್ತದೆ. ಬಾಕಿ ದಿನ ಮಲಗಿರುತ್ತದೆ. ಅಬಕಾರಿ ಸಚಿವ ಒಂದೇ ದಿನ 18 ಕೋಟಿ ರೂ. ಲೂಟಿ ಹೊಡೆದು ಮಹಾರಾಷ್ಟ್ರಕ್ಕೆ ಕಳಿಸಿದ್ದಾರೆ. ಕಾಂಗ್ರೆಸ್ ಸಚಿವರು ಸಂಪುಟ ಸಭೆ ಮಾಡುವುದು ಸರ್ಕಾರದ ಬೊಕ್ಕಸಕ್ಕೆ ಹಣ ತರುವುದು ಹೇಗೆ ಎಂಬ ಕಾರಣಕ್ಕಲ್ಲ. ಹೇಗೆ ಲೂಟಿ ಮಾಡಬೇಕು? ಎಷ್ಟು ಕಮಿಷನ್ ತರಬಹುದು? ಎಂದು ಸಭೆ ಮಾಡುತ್ತಾರೆ ಎಂದು ಆರೋಪಿಸಿದರು.

    ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾವಣೆ ವಿಚಾರ: 
    ಬಿಪಿಎಲ್ ಕಾರ್ಡುಗಳನ್ನು (BPL Card) ಸರ್ಕಾರ ರದ್ದು ಮಾಡುತ್ತಿದೆ. ಎಪಿಎಲ್‌ಗೆ ಈಗಾಗಲೇ ಒಂದು ಲಕ್ಷ ಕಾರ್ಡ್‌ಗಳನ್ನು ಪರಿವರ್ತನೆ ಮಾಡಿದ್ದಾರೆ. ಇದು ಸರ್ಕಾರದ ಆರನೇ ಗ್ಯಾರಂಟಿಯಾಗಿದೆ. ಗ್ಯಾರಂಟಿಗಳಿಗೆ ಹಣ ಹೊಂದಿಸಲಾಗದೇ ಈ ಕೆಲಸ ಮಾಡುತ್ತಿದ್ದಾರೆ. ಉಚಿತ ಗ್ಯಾರಂಟಿಗಳಲ್ಲಿ ಪ್ರತೀ ವರ್ಷ 10% ಕಡಿತ ಮಾಡಲು ಅಧಿಕಾರಿಗಳಿಗೆ ಸರ್ಕಾರ ಟಾರ್ಗೆಟ್ ಕೊಟ್ಟಿದೆ. ಉಚಿತ ಗ್ಯಾರಂಟಿ ಕೊಡಲಾಗದೇ ಸರ್ಕಾರ ಆರ್ಥಿಕ ಹೊರೆಯಲ್ಲಿದೆ. ಹಣ ಹೊಂದಿಸಲು ಸರ್ಕಾರಕ್ಕೆ ಆಗುತ್ತಿಲ್ಲ. ಅದಕ್ಕಾಗಿ ಬಿಪಿಎಲ್ ಕಾರ್ಡ್‌ಗೆ ಕತ್ತರಿ ಹಾಕುವ ಮೂಲಕ ಕಾರ್ಡ್ಗಳನ್ನು ರದ್ದು ಮಾಡಿ, ಎಪಿಎಲ್‌ಗೆ (APL Card) ಪರಿವರ್ತನೆ ಮಾಡುತ್ತಿದ್ದಾರೆ ಎಂದರು.ಇದನ್ನೂ ಓದಿ: ವಕ್ಫ್ ಪ್ರಕರಣದಲ್ಲಿ ಶಾಂತಿ ಕದಡಲು ಬಿಡಲ್ಲ: ಪರಮೇಶ್ವರ್ ಎಚ್ಚರಿಕೆ

  • ವಕ್ಫ್ ವಿಚಾರವಾಗಿ ಅಧಿಕಾರಿಗಳ ಪತ್ರ ವ್ಯವಹಾರ – ದಾಖಲೆ ಬಿಡುಗಡೆ ಮಾಡಿದ ಅಶೋಕ್

    ವಕ್ಫ್ ವಿಚಾರವಾಗಿ ಅಧಿಕಾರಿಗಳ ಪತ್ರ ವ್ಯವಹಾರ – ದಾಖಲೆ ಬಿಡುಗಡೆ ಮಾಡಿದ ಅಶೋಕ್

    ಬೆಂಗಳೂರು: ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಂದ ಪ್ರಾದೇಶಿಕ ಆಯುಕ್ತರಿಗೆ ಬರೆದಿರುವ ಪತ್ರವನ್ನ ಬಿಜೆಪಿ (BJP) ಬಿಡುಗಡೆ ಮಾಡಿದೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R Ashok) ಪತ್ರ ಬಿಡುಗಡೆ ಮಾಡಿದ್ದು, ರಾಜ್ಯಮಟ್ಟದ ವಕ್ಫ್ (Waqf) ಆಸ್ತಿಗಳ ಕಾರ್ಯಪಡೆ ಪ್ರಗತಿ ಸಭೆಗಳ ಅನುಪಾಲನಾ ವರದಿ ಕೇಳಿರುವ ಪತ್ರ ಇದಾಗಿದೆ.

    ವಕ್ಫ್ ಆಸ್ತಿ ಸಂಬಂಧಿತ 21,767 ಪ್ರಕರಣಗಳ ಬಗ್ಗೆ ಅಗತ್ಯ ಕ್ರಮ ವಹಿಸುವ ಅನುಪಾಲನಾ ವರದಿ ಕೇಳಿ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆಯಲಾಗಿದೆ. ಬೆಂಗಳೂರು, ಮೈಸೂರು ಕಲಬುರಗಿ, ಧಾರವಾಡ ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ನವೆಂಬರ್ 7ರಂದು ಬರೆದಿರುವ ಪತ್ರವನ್ನ ಅಶೋಕ್ ಬಿಡುಗಡೆ ಮಾಡಿದ್ದಾರೆ. ಸರ್ಕಾರ ನೋಟಿಸ್‌ಗಳನ್ನು ವಾಪಸ್ ಪಡೆದ ಬಳಿಕವೂ ಪತ್ರ ಬರೆದಿರುವ ಕಂದಾಯ ಇಲಾಖೆ ನಡೆ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಯೋಗ ಶಿಕ್ಷಕಿ ಕಿಡ್ನ್ಯಾಪ್‌ ಕೇಸ್: ಘಟನೆ ಬಳಿಕ ಟೆಂಪಲ್ ರನ್ ನಡೆಸಿದ್ದ ಆರೋಪಿಗಳು ಅರೆಸ್ಟ್

    ಇದೇ ವೇಳೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಕ್ಫ್ ಬೋರ್ಡ್ ಹಗರಣ ಕ್ಯಾನ್ಸರ್ ರೀತಿ ಹಬ್ಬುತ್ತಿದೆ. ವಕ್ಫ್ ಆಸ್ತಿಗಳ ನೋಟಿಸ್ ವಾಪಸ್‌ಗೆ ಸೂಚಿಸಿದ್ದೇನೆ ಎಂದು ಸಿಎಂ ಹೇಳಿದ್ದರು. ಈಗ ಸರ್ಕಾರಕ್ಕೆ ಏನಾದರೂ ಮಾನ ಮರ್ಯಾದೆ ಇದ್ಯಾ? ಕಂದಾಯ ಇಲಾಖೆ ವಕ್ಫ್ ಕಾರ್ಯಪಡೆ ಸಭೆ ಪ್ರಗತಿ ಸಾಧನೆ ಬಗ್ಗೆ ಪತ್ರ ಕಳುಹಿಸಿದೆ. 21,767 ಪ್ರಕರಣಗಳಲ್ಲಿ ಅಗತ್ಯ ಕ್ರಮವಹಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಎಂದಿದೆ. ವಕ್ಫ್ ಖಾತೆ ಬದಲಾವಣೆ ಬಗ್ಗೆ ಮತ್ತೊಮ್ಮೆ ವರದಿ ಸಲ್ಲಿಸಿ ಎಂದು ಪತ್ರ ಬರೆದಿದ್ದಾರೆ. ಸಿಎಂ ಹೇಳಿದ ಮೇಲೂ ಪತ್ರ ಬರೆದಿದ್ದಾರೆ. ಕಳೆದ ನವೆಂಬರ್ 7 ರಂದು ಈ ಪತ್ರವನ್ನ ಬರೆಯಲಾಗಿದೆ. ಕಂದಾಯ ಇಲಾಖೆ ಪತ್ರ ಹೊರಡಿಸಿದ್ದು ಹೇಗೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಚೀನಾದಿಂದ ಪಿಪಿಇ ಕಿಟ್‌ ತರಿಸಿ ಸಾವಿರಾರು ಕೋಟಿ ಲೂಟಿ – ರಾಮುಲು, ಬಿಎಸ್‌ವೈ ವಿರುದ್ಧ ಸಿಎಂ ಬಾಂಬ್‌

    ಸರ್ಕಾರದ ಯೂಟರ್ನ್ ಇದು. ಮೂರು ಬೈಎಲೆಕ್ಷನ್ ಇದೆ. ಇದು ಪರಿಣಾಮ ಬೀರುತ್ತೆ ಎಂದು ಹೇಳಿ ಈಗ ಮತ್ತೆ ನೋಟಿಸ್ ಕೊಡುತ್ತಾರೆ. ಸಿದ್ದರಾಮಯ್ಯ ಸುಳ್ಳುರಾಮಯ್ಯನವರು. ಏನು ಮಾಡಲ್ಲ ಎಂದು ಮತ್ತೆ ಆದೇಶ ಹೊರಡಿಸುತ್ತಾರೆ. ಇದು ತುಘಲಕ್ ಸರ್ಕಾರ ಎಂದು ಹರಿಹಾಯ್ದರು. ಇದನ್ನೂ ಓದಿ: ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ‘ಲಕ್ಕಿ’ ಕಾರ್ ಸಮಾಧಿ – ಅಂತ್ಯಸಂಸ್ಕಾರಕ್ಕೆ 4 ಲಕ್ಷ ಖರ್ಚು, 1,500 ಮಂದಿ ಭಾಗಿ

  • ಬೆಂಗಳೂರು ನಗರ ನಿಮ್ಮ ಜಹಗೀರು ಅಂದುಕೊಂಡಿದ್ದೀರಾ? – ಡಿಕೆಶಿ ವಿರುದ್ಧ ಆರ್.ಅಶೋಕ್ ವಾಗ್ದಾಳಿ

    ಬೆಂಗಳೂರು ನಗರ ನಿಮ್ಮ ಜಹಗೀರು ಅಂದುಕೊಂಡಿದ್ದೀರಾ? – ಡಿಕೆಶಿ ವಿರುದ್ಧ ಆರ್.ಅಶೋಕ್ ವಾಗ್ದಾಳಿ

    ಬೆಂಗಳೂರು: ಜಯನಗರ ಕ್ಷೇತ್ರದ ಅನುದಾನ ವಿಚಾರದಲ್ಲಿ ಬಿಜೆಪಿ ಶಾಸಕನ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ವಿಪಕ್ಷ ನಾಯಕ ಆರ್.ಅಶೋಕ್ ತರಾಟೆಗೆ ತೆಗೆದುಕೊಂಡಿದ್ದಾರೆ.

    ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಅಶೋಕ್, ಅನುದಾನ ಬೇಕಾದರೆ ನನ್ನ ಬಳಿ ತಗ್ಗಿ ಬಗ್ಗಿ ನಡೆಯಬೇಕು ಎಂಬುದು ಡಿಸಿಎಂ ಸಾಹೇಬರ ಲೇಟೆಸ್ಟ್ ನುಡಿಮುತ್ತುಗಳು. ಸನ್ಮಾನ್ಯ ಡಿಕೆ ಶಿವಕುಮಾರ್ ಅವರೇ, ನಿಮ್ಮ ಬಳಿ ತಗ್ಗಿ-ಬಗ್ಗಿ ಇರಬೇಕು ಅನ್ನುವುದಕ್ಕೆ ಬೆಂಗಳೂರು ನಗರವನ್ನು ನಿಮ್ಮ ಜಹಗೀರು ಅಂದುಕೊಡಿದ್ದೀರಾ ಎಂದು ವಾಗ್ದಾಳಿ ನಡೆಸಿದ್ದಾರೆ.

    ಅಧಿಕಾರ ಎನ್ನುವುದು ಮತದಾರರು ಕೊಟ್ಟಿರುವ ಭಿಕ್ಷೆ. ಸಂವಿಧಾನ ಕೊಟ್ಟಿರುವ ಜವಾಬ್ದಾರಿಯೇ ಹೊರತು ಪಾಳೆಗಾರಿಕೆ ಅಲ್ಲ. ಪ್ರಜಾಪ್ರಭುತ್ವದಲ್ಲಿ ನಾವು ತಗ್ಗಿ-ಬಗ್ಗಿ ನಡೆಯಬೇಕಿರುವುದು ಮತಭಿಕ್ಷೆ ನೀಡಿರುವ ಮತದಾರ ಪ್ರಭುಗಳಿಗೆ. ಪ್ರಜಾಪ್ರಭುತ್ವ ವ್ಯವಸ್ಥೆ ನೀಡಿರುವ ಸಂವಿಧಾನಕ್ಕೆ ಹೊರತು ಯಾವ ದೊಣ್ಣೆ ನಾಯಕನಿಗೂ ಅಲ್ಲ. ಈ ನಿಮ್ಮ ಒಣ ಪ್ರತಿಷ್ಠೆ, ಧಿಮಾಕು, ದರ್ಬಾರು ಎಲ್ಲ ಬಿಟ್ಟು ಜನರ ಸೇವೆ ಮಾಡುವ ಮನೋಭಾವನೆ ಬೆಳೆಸಿಕೊಳ್ಳಿ. ಯಾವುದೇ ಕ್ಷೇತ್ರದ ಬಗ್ಗೆ ತಾರತಮ್ಯ ಮಾಡದೆ ಸಚಿವರಾಗಿ ನಿಮ್ಮ ಕರ್ತವ್ಯ ನಿರ್ವಹಿಸಿ ಎಂದು ಆರ್.ಅಶೋಕ್ ಸಲಹೆ ನೀಡಿದ್ದಾರೆ.

    ಬೆಂಗಳೂರಿನ ವಿವಿಧ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ, ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಪ್ರತಿನಿಧಿಸುವ ಜಯನಗರ ಕ್ಷೇತ್ರಕ್ಕೆ ಮಾತ್ರ ಅನುದಾನ ನೀಡಲಿಲ್ಲ. ಇದೇ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಗಳ ತಾರಕಕ್ಕೇರಿದೆ.

  • ಅಶೋಕ್ ಕೇಳಿದ್ರೆ ಹೆಬ್ಬಾಳ್ಕರ್ ರಾಜೀನಾಮೆ ಕೊಡಿಸೋಣ – ಡಿಕೆಶಿ ವ್ಯಂಗ್ಯ

    ಅಶೋಕ್ ಕೇಳಿದ್ರೆ ಹೆಬ್ಬಾಳ್ಕರ್ ರಾಜೀನಾಮೆ ಕೊಡಿಸೋಣ – ಡಿಕೆಶಿ ವ್ಯಂಗ್ಯ

    ಬೆಂಗಳೂರು: ಸಚಿವರಾದ ತಿಮ್ಮಾಪುರ್, ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆ ಕೇಳಿದ್ದ ವಿಪಕ್ಷ ನಾಯಕ ಆರ್.ಅಶೋಕ್ (R Ashok) ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಲೇವಡಿ ಮಾಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರು ಸಚಿವರ ರಾಜೀನಾಮೆಗೆ ವಿಪಕ್ಷ ನಾಯಕರ ಆರ್.ಅಶೋಕ್ ಒತ್ತಾಯ ವಿಚಾರವಾಗಿ ಪಾಪ ಅಶೋಕ್‌ಗೆ ರಾಜೀನಾಮೆ ಕೊಡಿಸೋಣ. ಅಶೋಕ್ ಕೇಳೋದು ದೊಡ್ಡದಾ? ನಾವು ರಾಜೀನಾಮೆ ಕೊಡಿಸೋದು ದೊಡ್ಡದಾ? ಕೊಡೋಣ ಎಂದು ತಿರುಗೇಟು ಕೊಟ್ಟಿದ್ದಾರೆ.ಇದನ್ನೂ ಓದಿ:ಸಿಎಂ ಏನು ತಪ್ಪು ಮಾಡಿಲ್ಲ, ಕಾನೂನಿಗೆ ಗೌರವ ಕೊಟ್ಟು ವಿಚಾರಣೆಗೆ ಹಾಜರಾಗಿದ್ದಾರೆ: ಡಿಕೆಶಿ

    ಸಚಿವ ತಿಮ್ಮಾಪುರ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾರು ಬೇಕಾದರೂ ರಾಜ್ಯಪಾಲರಿಗೆ ಪತ್ರ ಬರೆದು ತನಿಖೆ ಮಾಡಿ ಎಂದು ದೂರು ಕೊಡಬಹುದು. ಹಿಂದೆಯೂ ನೂರಾರು ದೂರುಗಳು ಬಂದಿತ್ತು. ಈಗ ಸ್ವಲ್ಪ ವಿಶೇಷವಾಗಿ ಹೊರಟಿದ್ದಾರೆ. ಇದೆಲ್ಲ ಬರೀ ರಾಜಕೀಯದ ಬಣ್ಣ ಅಷ್ಟೆ ಎಂದು ಕಿಡಿಕಾರಿದರು.

    ಬೆಳಗಾವಿಯಲ್ಲಿ ಎಸ್‌ಡಿಎ ಆತ್ಮಹತ್ಯೆ ಕೇಸ್‌ನಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Heabbalkar) ಪಿಎ ಹೆಸರು ಬರೆದಿಟ್ಟಿರುವ ವಿಚಾರವಾಗಿ ಮಾತನಾಡಿ, ಯಾರೇ ಮಾಡಿದರೂ ಪೊಲೀಸ್ ಇದ್ದಾರೆ, ಎಸ್ಪಿ ಇದ್ದಾರೆ, ಪೊಲೀಸ್ ಇಲಾಖೆ ಇದೆ. ಕಾನೂನು ಏನಿದೆ ಅದರ ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.ಇದನ್ನೂ ಓದಿ: ‘ಜೈ ಹನುಮಾನ್’ ಸಿನಿಮಾದಲ್ಲಿ ರಾಮನಾಗಿ ರಾಣಾ ದಗ್ಗುಬಾಟಿ?

  • ‘ಮಂಥ್ಲಿ ಮನಿ’ ಹೆಸರಿನಲ್ಲಿ ಮದ್ಯದಂಗಡಿಗಳಿಂದ ತಿಂಗಳಿಗೆ 15 ಕೋಟಿ ಲಂಚ – ಅಬಕಾರಿ ಇಲಾಖೆ ವಿರುದ್ಧ ಗಂಭೀರ ಆರೋಪ

    ‘ಮಂಥ್ಲಿ ಮನಿ’ ಹೆಸರಿನಲ್ಲಿ ಮದ್ಯದಂಗಡಿಗಳಿಂದ ತಿಂಗಳಿಗೆ 15 ಕೋಟಿ ಲಂಚ – ಅಬಕಾರಿ ಇಲಾಖೆ ವಿರುದ್ಧ ಗಂಭೀರ ಆರೋಪ

    – ರಾಜ್ಯಪಾಲರಿಗೆ ರಾಜ್ಯ ಮದ್ಯ ಮಾರಾಟಗಾರರ ಸಂಘದಿಂದ ಪತ್ರ
    -ಅಬಕಾರಿ ಸಚಿವ ರಾಜೀನಾಮೆಗೆ ಆರ್‌.ಅಶೋಕ್‌ ಒತ್ತಾಯ

    ಬೆಂಗಳೂರು: ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಬಕಾರಿ ಇಲಾಖೆಯು ಮದ್ಯದಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ವಿಪಕ್ಷ ನಾಯಕ ಆರ್‌.ಅಶೋಕ್‌, ಅಬಕಾರಿ ಇಲಾಖೆ ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

    ಕಾಂಗ್ರೆಸ್ ಸರ್ಕಾರದ ಲಂಚಾವತಾರದ ಮತ್ತೂಂದು ಕರಾಳ ಅಧ್ಯಾಯ ಬಹಿರಂಗಗೊಂಡಿದ್ದು, ರಾಜ್ಯ ಮದ್ಯ ಮಾರಾಟಗಾರರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ಅಬಕಾರಿ ಸಚಿವರು ‘ಮಂಥ್ಲಿ ಮನಿ’ ಹೆಸರಿನಲ್ಲಿ ಮದ್ಯದ ಅಂಗಡಿಗಳಿಂದ ಪ್ರತಿ ತಿಂಗಳಿಗೆ 15 ಕೋಟಿ ರೂಪಾಯಿಯಂತೆ ವರ್ಷಕ್ಕೆ 180 ಕೋಟಿ ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಅಬಕಾರಿ ಸಚಿವರನ್ನು ಬದಲಾಯಿಸಲು ಕೋರಿದ್ದಾರೆ.

    ವರ್ಗಾವಣೆ ದಂಧೆ, ಲೈಸೆನ್ಸ್ ಮಂಜೂರಾತಿ, ಮದ್ಯದ ಅಂಗಡಿಗಳಿಂದ ‘ಮಂಥ್ಲಿ ಮನಿ’ ಸೇರಿದಂತೆ ಅಬಕಾರಿ ಸಚಿವರು ವರ್ಷಕ್ಕೆ ಸುಮಾರು 500 ಕೋಟಿ ರೂಪಾಯಿ ಭ್ರಷ್ಟಾಚಾರ ಎಸಗುತ್ತಿದ್ದಾರೆ ಎಂದು ರಾಜ್ಯ ಮದ್ಯ ಮಾರಾಟಗಾರರ ಸಂಘ ಮಾಡಿರುವ ಆರೋಪ ಅತ್ಯಂತ ಗಂಭೀರವಾಗಿದ್ದು, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ಈ ಕೂಡಲೇ ಸಚಿವ ಸ್ಥಾನದಿಂದ ವಜಾ ಮಾಡಿ ಲೋಕಾಯುಕ್ತ ತನಿಖೆಗೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಅಗ್ರಹಿಸುತ್ತೇನೆ ಎಂದು ಆರ್‌.ಅಶೋಕ್‌ ಪೋಸ್ಟ್‌ ಹಾಕಿದ್ದಾರೆ.

  • ಮುಸ್ಲಿಮರ ಓಲೈಕೆಗಾಗಿ ಜಮೀನು ಕಬಳಿಕೆ, ಇದರ ವಿರುದ್ಧ ಬಿಜೆಪಿ ಬೃಹತ್ ಹೋರಾಟ: ಅಶೋಕ್

    ಮುಸ್ಲಿಮರ ಓಲೈಕೆಗಾಗಿ ಜಮೀನು ಕಬಳಿಕೆ, ಇದರ ವಿರುದ್ಧ ಬಿಜೆಪಿ ಬೃಹತ್ ಹೋರಾಟ: ಅಶೋಕ್

    ರಾಮನಗರ: ಈಗ ನಡೆಯುತ್ತಿರುವ ಉಪಚುನಾವಣೆ ವ್ಯಕ್ತಿಗಳ ನಡುವೆ ನಡೆಯುತ್ತಿರುವ ಚುನಾವಣೆಯಲ್ಲ. ಇದು ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ನಡೆಯುತ್ತಿರುವ ಚುನಾವಣೆ ಎಂದು ಪ್ರತಿಪಕ್ಷ ‌ನಾಯಕ ಆರ್.ಅಶೋಕ್‌ (R.Ashok) ಹೇಳಿದ್ದಾರೆ.

    ಚನ್ನಪಟ್ಟಣದಲ್ಲಿ ಚುನಾವಣಾ ಪ್ರಚಾರದಲ್ಲಿ ಅವರು ಮಾತನಾಡಿದರು. ಈ ವೇಳೆ ಚನ್ನಪಟ್ಟಣದಲ್ಲಿ ವ್ಯಕ್ತಿ ಹೆಸರಲ್ಲಿ ಚುನಾವಣೆ ನಡೆಯುತ್ತಿಲ್ಲ. ಇದು ಎನ್‌ಡಿಎ ಹಾಗೂ ಕಾಂಗ್ರೆಸ್ (Congress) ಸರ್ಕಾರದ ದುರಾಡಳಿತದ ವಿರುದ್ಧ ನಡೆಯುತ್ತಿರುವ ಚುನಾವಣೆ. ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಜನರ ಅನುಕಂಪವಿದೆ. ಅವರು ಈ ಹಿಂದೆ ಸೋತಿದ್ದರು. ಹಾಗೆಯೇ ಪ್ರಧಾನಿ ನರೇಂದ್ರ ಮೋದಿಯವರ ಸಾಧನೆಗಳನ್ನು ಜನರು ಗುರುತಿಸಲಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಲೂಟಿ ಮಾಡುತ್ತಲೇ ಇದೆ. ಅಲ್ಲದೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ದಲಿತರ ಹಣ ಕೊಳ್ಳೆ ಹೊಡೆಯಲಾಗಿದೆ ಎಂದು ದೂರಿದ್ದಾರೆ.

    ಗ್ಯಾರಂಟಿಗಳಿಂದಾಗಿ ಮಣ್ಣು ಎತ್ತಿ ಹಾಕಲು ‌ಕೂಡ ಹಣವಿಲ್ಲ ಎಂದು ಕಾಂಗ್ರೆಸ್‌ನ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 16 ತಿಂಗಳಿಂದ ರೈತರಿಗೆ ಹಾಲಿನ ಪ್ರೋತ್ಸಾಹಧನ ನೀಡಿಲ್ಲ. ವಕ್ಫ್ ಬೋರ್ಡ್ (Waqf Controversy) ಮುಸ್ಲಿಮರ ಬೋರ್ಡ್ ಆಗಿ ಬದಲಾಗಿದೆ. ದೇವಸ್ಥಾನ, ಸ್ಮಶಾನ, ಶಾಲೆ, ರೈತರ ಭೂಮಿ ಎಂದು‌ ನೋಡದೆ ಎಲ್ಲ ಜಮೀನುಗಳನ್ನು ಕಬಳಿಸಲಾಗುತ್ತಿದೆ. ಸಚಿವ ಜಮೀರ್ ಅಹ್ಮದ್ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಜಮೀನು ಬರೆಸಿಕೊಳ್ಳುತ್ತಿದ್ದಾರೆ. ಇದರ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದ್ದಾರೆ.

    ನಾನು ಕೋಲಾರ, ಶ್ರೀರಂಗಪಟ್ಟಣಕ್ಕೂ ಹೋಗಿ ಪ್ರತಿಭಟನೆ ಮಾಡುತ್ತೇನೆ. ಶಾಲೆ, ದೇವಸ್ಥಾನಗಳ ಜಮೀನಿನ ಪಹಣಿಯಲ್ಲಿ ಸರ್ಕಾರದ ಜಾಗವೆಂದು ನಮೂದಿಸುವವರೆಗೆ ಹಾಗೂ ರೈತರ ಜಾಗವನ್ನು ರೈತರಿಗೆ ನೀಡುವವರೆಗೆ ಪ್ರತಿಭಟಿಸುತ್ತೇವೆ. ಮುಸ್ಲಿಮರು ನಮಗೆ ಮತ ಹಾಕಬೇಕೆಂದು ಕಾಂಗ್ರೆಸ್ ಈ ರೀತಿ ಮಾಡುತ್ತಿದೆ. ಮುಸ್ಲಿಮರ ಓಲೈಕೆ ಮಾಡಲು ಕಾಂಗ್ರೆಸ್ ಈ ತಂತ್ರ ಮಾಡಿದೆ. ದೇಶ ಉಳಿಸಿ, ರೈತರನ್ನು ಉಳಿಸಿ ಎಂದು ಬಿಜೆಪಿ (BJP) ಹೋರಾಟ ಮಾಡುತ್ತಿದೆ. ಚನ್ನಪಟ್ಟಣದ ಜನರು ಎನ್‌ಡಿಎ ಬೆಂಬಲಿಸಿ, ಕಾಂಗ್ರೆಸ್ ಸರ್ಕಾರಕ್ಕೆ ಪಾಠ ಕಲಿಸಬೇಕು ಎಂದು ಹೇಳಿದ್ದಾರೆ.