Tag: r ashok

  • ಮುಸ್ಲಿಮರು ಮತಾಂತರ ಬಿಟ್ಟು ಈಗ ಜಮೀನಾಂತರ ಮಾಡ್ತಿದ್ದಾರೆ: ಆರ್.ಅಶೋಕ್

    ಮುಸ್ಲಿಮರು ಮತಾಂತರ ಬಿಟ್ಟು ಈಗ ಜಮೀನಾಂತರ ಮಾಡ್ತಿದ್ದಾರೆ: ಆರ್.ಅಶೋಕ್

    – ತಲೆ ಕೆಟ್ಟವರು ವಿಧಾನಸೌಧ ವಕ್ಫ್ ಆಸ್ತಿ ಅಂತಿದ್ದಾರೆ
    – 5 ಗ್ಯಾರಂಟಿ ಅಂತಾ ಘೋಷಣೆ ಮಾಡಿದ್ರು, ಎರಡು ಗ್ಯಾರಂಟಿ ಠುಸ್ ಆಗಿದೆ

    ಬೆಂಗಳೂರು: ಮುಸ್ಲಿಮರು ಮತಾಂತರ ಬಿಟ್ಟು ಈಗ ಜಮೀನಾಂತರ ಮಾಡ್ತಿದ್ದಾರೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಕಿಡಿಕಾರಿದರು.

    ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು. ರಾಜ್ಯದ ಜನರಿಗೆ ದುಷ್ಟ ಸಂಹಾರ ಆಗಲಿ. ರೈತರ ಜಮೀನು ವಕ್ಫ್ ಬೋರ್ಡ್ ಲೂಟಿ ಮಾಡಲು ಹೊರಟಿದೆ. ಅದರಿಂದ ಮುಕ್ತಿ ಸಿಗೋ ಯೋಗ ರೈತರಿಗೆ ಬರಲಿ. ವಿಜಯಪುರ ಡಿಸಿ ಕಚೇರಿ ಮುಂದೆ ರೈತರು ಪ್ರತಿಭಟನೆ ಮಾಡ್ತಿದ್ದಾರೆ. ನಮ್ಮ ಪಕ್ಷ ರೈತರ ಪರ ಇರಲಿದೆ. ಅವರ ಪ್ರತಿಭಟನೆಗೆ ಬೆಂಬಲ ಇದೆ. ಅನ್ನದಾತನಿಗೆ ಕನ್ನ ಹಾಕೋ ಕೆಲಸ ಜಮೀರ್ ಮತ್ತು ಸಿದ್ದರಾಮಯ್ಯ ಟೀಂ ಮಾಡಿದೆ. ಕಾಂಗ್ರೆಸ್ ಅವರಿಗೆ ಮುಸ್ಲಿಂ ಭೂತ ಹಿಡಿದಿದೆ. ದೆವ್ವ ಬಿಡಿಸೋಕೆ ಹುಣಸೆ ಬರಲು ತಗೊಂಡು ಬಡಿಯೋ ವರೆಗೂ ಅವರಿಗೆ ದೆವ್ವ ಬಿಡೋದಿಲ್ಲ. ಕೋಲಾರ, ಚನ್ನಪಟ್ಟಣ, ಹುಬ್ಬಳ್ಳಿ, ಬೆಳಗಾವಿ ಎಲ್ಲಾ ಕಡೆ ನೋಟಿಸ್ ಹೋಗಿದೆ. ನುಸುಳುಕೋರರ ರೀತಿ ವಕ್ಫ್ ಬೋರ್ಡ್ ದಾಖಲೆ ತಿದ್ದುವ ಕೆಲಸ ಮಾಡ್ತಿದೆ. ಹೀಗಾಗಿ, ಇಡೀ ರಾಜ್ಯಾದ್ಯಂತ ನವೆಂಬರ್ 4 ರಂದು ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

    ಸರ್ಕಾರವೇ ರೈತರ ಭೂಮಿ ಕಬಳಿಕೆ ಮಾಡ್ತಿದೆ. ರೈತರ ಸಂಘಕ್ಕೆ ಮನವಿ ಮಾಡ್ತೀನಿ ಬೀದಿಗಿಳಿದು ಹೋರಾಟ ಮಾಡಿ. ಇಲ್ಲದೆ ಹೋದ್ರೆ ಮುಂದೆ ಕೃಷಿ ಮಾಡೋಕೆ ಭೂಮಿ ಇರೊಲ್ಲ. ತಲೆ ಕೆಟ್ಟವನು ವಿಧಾನಸೌಧ ವಕ್ಫ್ ಆಸ್ತಿ ಅಂತಿದ್ದಾರೆ. ಸಂಸತ್ ಭವನ ವಕ್ಫ್ ಆಸ್ತಿ ಅಂತಿದ್ದಾರೆ. ಮುಸ್ಲಿಮರು ಯಾವಾಗ ಭಾರತಕ್ಕೆ ಬಂದರು? ಮುಸ್ಲಿಮರು ಮತಾಂತರ ಬಿಟ್ಟು ಈಗ ಜಮೀನಾಂತರ ಮಾಡ್ತಿದ್ದಾರೆ. ಸಿದ್ದರಾಮಯ್ಯ ಮುಸ್ಲಿಮರ ಓಲೈಕೆ ಮಾಡದೇ ನಿದ್ದೆ ಬರೋದಿಲ್ಲ. ರೈತರ ಹೆಸರಿನಲ್ಲಿ ದಾಖಲಾತಿ ಆಗೋವರೆಗೂ ನಾವು ಹೋರಾಟ ಬಿಡೊಲ್ಲ. ನಾವು ಹಿಟ್ ಅಂಡ್ ರನ್ ಅಂತ ಸಿಎಂ ಹೇಳ್ತಾರೆ. ನಾವು ಮುಡಾ ಪ್ರತಿಭಟನೆ ಮಾಡಿದ್ವಿ. ನಿಮ್ಮ ಮೇಲೆ 420 ಕೇಸ್ ಬುಕ್ ಆಗಿದೆ. ಸಿಎಂ ಗೌರವ ಇದ್ದಿದ್ದರೆ ರಾಜೀನಾಮೆ ಕೊಟ್ಟ ಹೋಗಬೇಕಿತ್ತು ಎಂದು ವಾಗ್ದಾಳಿ ನಡೆಸಿದರು.

    ಬಿಜೆಪಿ ಹೋರಾಟದಿಂದ ಮುಡಾ ಕೇಸ್ ತಾರ್ಕಿಕ ಅಂತ್ಯ ಕಾಣಸಿದ್ದೇವೆ. ವಾಲ್ಮೀಕಿ ಹಗರಣದಲ್ಲೂ ಸರ್ಕಾರಿ ಅಧಿಕಾರಿ ಸಾವಿಗೆ ನ್ಯಾಯ ಒದಗಿಸಿ ಕೊಟ್ಟಿದ್ದೇವೆ. ಇದು ಬಿಜೆಪಿ ಹೋರಾಟ ಮಾಡಿ ಆಗಿರೋದು. ಬಿಜೆಪಿ ರಾಷ್ಟ್ರೀಯ ಪಾರ್ಟಿ. 17 ರಾಜ್ಯದಲ್ಲಿ ಬಿಜೆಪಿ ಅಧಿಕಾದಲ್ಲಿ ಇದ್ದೇವೆ. ನಿಮ್ಮತರ 4 ರಾಜ್ಯದಲ್ಲಿ ಅಧಿಕಾರದಲ್ಲಿ ಇಲ್ಲ. ನಾವು ಹಿಟ್ ಅಂಡ್ ರನ್ ಅಲ್ಲ. ನಾವು ಹಿಟ್ ಮಾಡಿದ ಕೂಡಲೇ ಕಾಂಗ್ರೆಸ್‌ನವರು ರನ್ ಮಾಡಿದ್ದಾರೆ. ಈ ಸರ್ಕಾರ ತುಘಲಕ್ ಸರ್ಕಾರ. 5 ಗ್ಯಾರಂಟಿ ಅಂತ ಘೋಷಣೆ ಮಾಡಿದ್ರು. ಎರಡು ಗ್ಯಾರಂಟಿ ಠುಸ್ ಆಗಿದೆ. ಡಿಸಿಎಂಗೆ ಮಹಿಳೆಯರು ಮೇಲ್, ಮೆಸೇಜ್ ಮಾಡಿದ್ದಾರೆ. ಸಿಎಂ, ರಾಮಲಿಂಗಾರೆಡ್ಡಿಗೆ ಬಿಟ್ಟು ಡಿಸಿಎಂಗೆ ಮಾಡಿದ್ದಾರೆ ಅಂತಾ. ಯೋಜನೆ ರದ್ದು ಮಾಡೋಕೆ ಇದು. ಕಳ್ಳನಿಗೆ ಪಿಳ್ಳೆನೆವ ಎಂಬಂತೆ ಯೋಜನೆ ಕ್ಯಾನ್ಸಲ್ ಮಾಡೋಕೆ ಹೊರಟಿದ್ದಾರೆ. ಸರ್ಕಾರದ ಬಳಿ ಹಣ ಇಲ್ಲ ಅಂತಾ ಗೊತ್ತಾಗ್ತಿದೆ. ಹೀಗಾಗಿ ಡಿಸಿಎಂ ಹೀಗೆ ಹೇಳ್ತಿದ್ದಾರೆ. ರೇಷನ್ ಕಾರ್ಡ್ ಕೂಡಾ ರದ್ದು ಮಾಡಲು ಹೊರಟಿದ್ದಾರೆ. ಈ ಸರ್ಕಾರ ಬಡವರ ಶಾಪಕ್ಕೆ ಗುರಿ ಆಗಿದ್ದಾರೆ. ಲೋಕಸಭೆ ಚುನಾವಣೆ ಆದ ಮೇಲೆ ಗ್ಯಾರಂಟಿ ಯೋಜನೆ ಇರೊಲ್ಲ ಅಂತ ಹೇಳಿದ್ವಿ. ಅದರಂತೆ ಈಗ ಶಕ್ತಿ ಯೋಜನೆ ಪರಿಷ್ಕರಣೆ ಅಂತಿದ್ದಾರೆ. ಸಾರಿಗೆ ಇಲಾಖೆಗೆ ಸಂಬಳ ಕೊಡಲು ಹಣ ಇಲ್ಲದ ಸ್ಥಿತಿ ಬಂದಿದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

  • ಕಾಂಗ್ರೆಸ್‌ ಸರ್ಕಾರದಿಂದ ಲ್ಯಾಂಡ್‌ ಜಿಹಾದ್‌, ಜಮೀರ್ ಒಬ್ಬ ಆಧುನಿಕ ಟಿಪ್ಪು ಸುಲ್ತಾನ್: ಆರ್.ಅಶೋಕ್

    ಕಾಂಗ್ರೆಸ್‌ ಸರ್ಕಾರದಿಂದ ಲ್ಯಾಂಡ್‌ ಜಿಹಾದ್‌, ಜಮೀರ್ ಒಬ್ಬ ಆಧುನಿಕ ಟಿಪ್ಪು ಸುಲ್ತಾನ್: ಆರ್.ಅಶೋಕ್

    – ಸಿದ್ದರಾಮಯ್ಯರಿಂದ ಮುಡಾ ನಿವೇಶನ ಲೂಟಿ
    – ಮಲ್ಲಿಕಾರ್ಜುನ ಖರ್ಗೆ ಕುಟುಂಬದಿಂದ ಸಿಎ ನಿವೇಶನ ಲೂಟಿ
    – ಈಗ ಜಮೀರ್‌ರಿಂದ ರೈತರ ಕೃಷಿ ಭೂಮಿ ಲೂಟಿ

    ಬೆಂಗಳೂರು: ಕಾಂಗ್ರೆಸ್‌ ಸರ್ಕಾರ (Congress Government) ಹಾಗೂ ವಕ್ಫ್‌ ಬೋರ್ಡ್‌ನಿಂದ (Waqf Board) ಲ್ಯಾಂಡ್ ಜಿಹಾದ್ (Land Jihad) ಆರಂಭವಾಗಿದ್ದು, ಬಡ ರೈತರ ಜಮೀನನ್ನು ಕಬಳಿಸಲು ಎಲ್ಲ ಬಗೆಯ ಪ್ರಯತ್ನ ಮಾಡಲಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಕೂಡಲೇ ಸ್ಪಷ್ಟೀಕರಣ ನೀಡಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ (R Ashok) ಆಗ್ರಹಿಸಿದ್ದಾರೆ.

    ಕಾಂಗ್ರೆಸ್ ಸರ್ಕಾರ ಬಂದ ನಂತರ ಇಡೀ ಕರ್ನಾಟಕ ಒಂದೇ ಸಮುದಾಯಕ್ಕೆ ಸೇರಿದ್ದು ಎಂಬಂತೆ ಆಡುತ್ತಿದೆ. ಕಾಂಗ್ರೆಸ್‌ನ ತುಷ್ಟೀಕರಣದಿಂದಾಗಿ ಹಿಂದೂಗಳ ಮೇಲೆ ಹಲ್ಲೆಯಾಗಿದೆ. ಗಣೇಶ ವಿಸರ್ಜನೆ ಮಾಡಲು ಅವಕಾಶವಿಲ್ಲ. ಹಿಂದೂಗಳು ಜೈ ಶ್ರೀರಾಮ್ ಎನ್ನುವಂತಿಲ್ಲ. ಹಿಂದೂಗಳಿಗೆ ಭದ್ರತೆ ಇಲ್ಲ. ಈಗ ವಿಜಯಪುರ ಜಿಲ್ಲೆಯ ಹೊನವಾಡ ಗ್ರಾಮದಲ್ಲಿ ಸುಮಾರು 12 ಸಾವಿರ ಎಕರೆ ಹಾಗೂ ಇಡೀ ಜಿಲ್ಲೆಯಲ್ಲಿ ಒಟ್ಟಾರೆಯಾಗಿ 15 ಸಾವಿರ ಎಕರೆ ಭೂಮಿ ಕಬಳಿಸಲು ವಕ್ಫ್ ಬೋರ್ಡ್ ಯೋಜನೆ ರೂಪಿಸಿದೆ. ಇದಕ್ಕಾಗಿ ಕಂದಾಯ ಇಲಾಖೆಯಿಂದ 139 ರೈತರಿಗೆ ತಿಳಿವಳಿಕೆ ನೋಟಿಸ್ ನೀಡಲಾಗಿದೆ. ಇದು ಸ್ಪಷ್ಟವಾಗಿ ಸರ್ಕಾರದಿಂದಲೇ ನಡೆಯುತ್ತಿರುವ ಲ್ಯಾಂಡ್ ಜಿಹಾದ್ ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರಾಜ್ಯದಲ್ಲಿ ಬಾಂಬ್ ಸ್ಪೋಟವಾಗಿದೆ. ಪಾಕಿಸ್ತಾನಕ್ಕೆ ಜೈಕಾರ ಹಾಕಲಾಗಿದೆ. ಲವ್ ಜಿಹಾದ್‌ನಿಂದ ಹಿಂದೂ ಯುವತಿಯರು ಸಾಯುತ್ತಿದ್ದಾರೆ. ಈಗ ಲ್ಯಾಂಡ್ ಜಿಹಾದ್ ಆರಂಭವಾಗಿದೆ. ಕಳೆದ ತಿಂಗಳು ಜಿಲ್ಲೆಗೆ ಬಂದಿದ್ದ ಸಚಿವ ಜಮೀರ್ ಅಹ್ಮದ್‌, ಗೆಜೆಟ್ ಆಗಿರುವ ಆಸ್ತಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲು ಮೌಖಿಕ ಆದೇಶ ಮಾಡಿದ್ದಾರೆ. ಈ ಮೂಲಕ ಸರ್ಕಾರದಿಂದಲೇ ಅಧಿಕೃತವಾಗಿ ಒತ್ತುವರಿ ನಡೆಯುತ್ತಿದೆ. ಈ ಹಿಂದೆ ಟಿಪ್ಪು ಸುಲ್ತಾನ್, ಔರಂಗಜೇಬನಂತಹ ಕೋಮು ಮತಾಂಧರು ಹಿಂದೂಗಳ ಭೂಮಿ, ಉದ್ಯೋಗ, ಬದುಕು ಕಿತ್ತುಕೊಂಡು ಮತಾಂತರ ಮಾಡಿದ್ದರು. ಈಗ ರೈತರ ಭೂಮಿ ಕಿತ್ತುಕೊಳ್ಳಲಾಗುತ್ತಿದೆ ಎಂದು ಅಶೋಕ್ ದೂರಿದ್ದಾರೆ.

    ಆಧುನಿಕ ಟಿಪ್ಪು ಸುಲ್ತಾನ್
    ಸಚಿವ ಜಮೀರ್ ಅಹ್ಮದ್‌, ಆಧುನಿಕ ಟಿಪ್ಪು ಸುಲ್ತಾನ್ ಆಗಲು ಹೊರಟಿದ್ದಾರೆ. ಈ ರೀತಿಯಾದರೂ ಭೂಮಿ ಕಸಿದು, ಸಿಎಂ‌ ಆಗುವ ಯೋಜನೆ ರೂಪಿಸಲಾಗಿದೆ. ಒಂದು ಕಡೆ ಸಿಎಂ ಸಿದ್ದರಾಮಯ್ಯ ಮುಡಾ ನಿವೇಶನ ಲೂಟಿ ಮಾಡುತ್ತಾರೆ. ಮತ್ತೊಂದು ಕಡೆ ಮಲ್ಲಿಕಾರ್ಜುನ ಖರ್ಗೆ ಕುಟುಂಬ ಸಿಎ ನಿವೇಶನ ಲೂಟಿ ಮಾಡುತ್ತದೆ. ಈಗ ಜಮೀರ್ ಅಹಮದ್ ಕೂಡ ಈ ಪಟ್ಟಿಗೆ ಸೇರಿ ಭೂಮಿ ಕೊಳ್ಳೆ ಹೊಡೆದು ವಕ್ಫ್‌ಗೆ ಸೇರಿಸಲು ತಂತ್ರ ಮಾಡಿದ್ದಾರೆ. ವಕ್ಫ್ ಆಸ್ತಿ ಹೆಸರಿನಲ್ಲಿ ಲ್ಯಾಂಡ್ ಜಿಹಾದ್ ಮಾಡಲು ಹೊರಟಿರುವ ಕಾಂಗ್ರೆಸ್‌ ಸರ್ಕಾರದ ದೌರ್ಜನ್ಯ ವಿರೋಧಿಸಿ ವಿಜಯಪುರದ ರೈತರು ಈ ವರ್ಷ ದೀಪಾವಳಿ ಆಚರಿಸದಿರಲು ನಿರ್ಧರಿಸಿದ್ದಾರೆ. ಅನ್ನ ನೀಡುವ ರೈತರ ಭೂಮಿಗೆ ಕನ್ನ ಹಾಕಿ, ರೈತರ ಮನೆ ದೀಪ ಕಸಿದುಕೊಂಡ ಕಾಂಗ್ರೆಸ್ ಸರ್ಕಾರಕ್ಕೆ ಅನ್ನದಾತರ ಶಾಪ ತಟ್ಟದೇ ಇರದು ಎಂದು ಅಶೋಕ್ ಅವರು ಎಚ್ಚರಿಕೆ ನೀಡಿದ್ದಾರೆ.

     

    ಕೇಂದ್ರದಲ್ಲಿ ಚರ್ಚಿಸಲಿ
    ಕೇಂದ್ರದ ಉದ್ದೇಶಿತ ವಕ್ಫ್ ಕಾಯ್ದೆ ತಿದ್ದುಪಡಿ ಪ್ರಸ್ತಾವಕ್ಕೆ ರಾಜ್ಯ ವಕ್ಫ್ ಬೋರ್ಡ್ ವಿರೋಧ ವ್ಯಕ್ತಪಡಿಸಿದೆ. ವಕ್ಫ್ ಬೋರ್ಡ್ ಆಡಳಿತ ಮಂಡಳಿ ಸಭೆಯಲ್ಲಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿರ್ಣಯ ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರ ಜಂಟಿ ಸಂಸದೀಯ ಸಮಿತಿ ರಚಿಸಿ, ಎಲ್ಲ ವಕ್ಫ್ ಬೋರ್ಡ್‌ಗಳಿಂದ ಮಾಹಿತಿ ಕೇಳಿದೆ. ಆದರೆ ಕರ್ನಾಟಕದ ವಕ್ಫ್ ಬೋರ್ಡ್ ಇದನ್ನು ವಿರೋಧಿಸಿದೆ. ನಾವು ಮಾಹಿತಿ ಕೊಡಲ್ಲ, ನಮ್ಮದು ಸ್ವಾಯತ್ತ ಸಂಸ್ಥೆಗಳಿಂದ ಎಂದು ಸಚಿವ ಜಮೀರ್ ಅಹಮದ್ ಹೇಳಿದ್ದಾರೆ. ಹಳೆಯ ಎಲ್ಲ ನಿಯಮ, ಕಾನೂನುಗಳಿಗೆ ಮೋದಿ ಸರ್ಕಾರ ಬದಲಾವಣೆ ತರಲಿದೆ. ಇದಕ್ಕೂ ಮುನ್ನ ಆದಷ್ಟು ಕರ್ನಾಟಕದ ಭೂಮಿ‌ ಕಬಳಿಸಬೇಕು ಎಂಬುದು ಇವರ ಉದ್ದೇಶ ಎಂದು ಆರ್‌.ಅಶೋಕ್‌ ಆಕ್ರೋಶ ಹೊರಹಾಕಿದ್ದಾರೆ.

    ಕಾಂಗ್ರೆಸ್ ಸರ್ಕಾರ ಭೂಮಿ ಕಬಳಿಕೆ ಮಾಡಿಕೊಡುವ ಬದಲು, ಕೇಂದ್ರ ಸರ್ಕಾರದ ಜಂಟಿ ಸಲಹಾ ಸಮಿತಿ ಜೊತೆ ಚರ್ಚೆ ಮಾಡಲಿ. ಅದು ಬಿಟ್ಟು ಸ್ವತಂತ್ರವಾಗಿ ಕ್ರಮ ಕೈಗೊಳ್ಳುವ ಅಧಿಕಾರ ಯಾರಿಗೂ ಇಲ್ಲ. ವಿಜಯಪುರ ಜಿಲ್ಲೆಯಲ್ಲಿ ದೇವಸ್ಥಾನ, ಗುಡಿಗಳು ಕೂಡ ಇದೆ. ಅವೆಲ್ಲಕ್ಕೂ ಎಷ್ಟು ನೋಟಿಸ್ ನೀಡಲಾಗಿದೆ ಎಂದು ಸರ್ಕಾರ ತಿಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

    ಸಿಎಂ ಬಾಯಿ ಬಿಡಲಿ
    ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಈ ಕುರಿತು ಸ್ಪಷ್ಟನೆ ನೀಡಬೇಕು. ಇದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇತ್ತೇ ಎಂದು ತಿಳಿಸಬೇಕು. ಈಗ ರೈತರು ಕಂಗಾಲಾಗಿದ್ದಾರೆ. ಹಿಂದೂಗಳಿಗೆ ಭಯ ಶುರುವಾಗಿದೆ. ಈ ಸಮಯದಲ್ಲಿ ಸರ್ಕಾರ ಜವಾಬ್ದಾರಿಯುತವಾಗಿ ನಡೆದುಕೊಂಡು ಜನರಿಗೆ ಸೂಕ್ತ ಮಾಹಿತಿ ಹಾಗೂ ಸ್ಪಷ್ಟೀಕರಣ ‌ನೀಡಬೇಕು ಎಂದು ಆರ್‌.ಅಶೋಕ್‌ ಒತ್ತಾಯಿಸಿದ್ದಾರೆ.

     

  • ಯೋಗೇಶ್ವರ್ ಬಿಜೆಪಿಯ ಕಟ್ಟಾಳು ಏನಾಗಿರಲಿಲ್ಲ: ಆರ್ ಅಶೋಕ್

    ಯೋಗೇಶ್ವರ್ ಬಿಜೆಪಿಯ ಕಟ್ಟಾಳು ಏನಾಗಿರಲಿಲ್ಲ: ಆರ್ ಅಶೋಕ್

    – ಕಾಂಗ್ರೆಸ್‌ನಲ್ಲಿ ಸಿಪಿವೈ ಬೆಳೆಯಲು ಡಿಕೆಶಿ ಬಿಡಲ್ಲ

    ಬೆಂಗಳೂರು: ಕಾಂಗ್ರೆಸ್ (Congress) ಬದಲು ಜೆಡಿಎಸ್‌ನಿಂದಲೇ (JDS) ಯೋಗೇಶ್ವರ್ ನಿಲ್ಲಬಹುದಿತ್ತು. ಎನ್‌ಡಿಎಗೆ ಅನುಕೂಲ ಆಗುತ್ತಿತ್ತು. ಸಿಪಿವೈ (CP Yogeshwar) ಈಗ ಪಕ್ಷ ದ್ರೋಹ ಮಾಡಿ ಹೋಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashok) ಕಿಡಿಕಾರಿದ್ದಾರೆ.

    ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯೋಗೇಶ್ವರ್ ಬಿಜೆಪಿಯ ಕಟ್ಟಾಳು ಏನಾಗಿರಲಿಲ್ಲ. ಬಿಜೆಪಿಯ ಸಿದ್ಧಾಂತದಿಂದ ಬಂದವರಲ್ಲ. ಸೈಕಲ್ ಪಾರ್ಟಿ, ಪಕ್ಷೇತರ, ಬೇರೆ ಬೇರೆ ಪಕ್ಷದಿಂದ ಬಂದವರು. ನಾವೂ ಕೂಡ ಅವರನ್ನು ಉಳಿಸಿಕೊಳ್ಳುವ ಪ್ರಯತ್ನ ಗಂಭೀರವಾಗಿ ಮಾಡಿದ್ದೆವು, ಹೈಕಮಾಂಡ್ ಜೊತೆ ಚರ್ಚೆ ಮಾಡಿದ್ದೆವು. ಅವರು ಐದು ಕಡೆಯಿಂದ ಬಿ ಫಾರಂ ತಂದಿದ್ದರು ಎಂದು ಸುದ್ದಿ ಇದೆ. ನಮ್ಮ ಮಾತು ಕೇಳದೆ ಕಾಂಗ್ರೆಸ್ ಸೇರಿದ್ದಾರೆ ಎಂದರು. ಇದನ್ನೂ ಓದಿ: ಡಿಕೆಶಿ ನೇತೃತ್ವದಲ್ಲಿ ರಾಜಕೀಯ ಜೀವನ ಆರಂಭಿಸಿದ್ದೆ, ಮರಳಿ ಮನೆಗೆ ಬಂದಿದ್ದೇನೆ: ಸಿಪಿ ಯೋಗೇಶ್ವರ್‌

    ನಾವೆಲ್ಲರೂ ಇದು ಜೆಡಿಎಸ್ ಟಿಕೆಟ್, ಹೆಚ್‌ಡಿಕೆ ಅವರೇ ತೀರ್ಮಾನ ಮಾಡಬೇಕು ಅಂತನೇ ಹೇಳಿಕೊಂಡು ಬಂದಿದ್ದೆವು. ಹೆಚ್‌ಡಿಕೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಜೆಡಿಎಸ್ ಚಿನ್ಹೆಯಡಿ ಸ್ಪರ್ಧೆಗೆ ಆಫರ್ ಕೊಟ್ಟರು. ಯಾವ ಚಿನ್ಹೆ ಆದರೇನು ಇಲ್ಲಿದ್ದರೆ ಎನ್‌ಡಿಎಯಿಂದನೇ ಸ್ಪರ್ಧೆ ಮಾಡುತ್ತಿದ್ದರು. ಸಿಪಿವೈ ನಮ್ಮಲ್ಲಿ ಸೀನಿಯರ್ ಲೀಡರ್ ಆಗಿದ್ದರು. ಈಗ ಕಾಂಗ್ರೆಸ್‌ನಲ್ಲಿ ಲಾಸ್ಟ್ ಬೆಂಚ್ ಆಗುತ್ತಾರೆ. ಅವರನ್ನು ಅಲ್ಲಿ ಬೆಳೆಯಲು ಡಿಕೆಶಿ ಬಿಡಲ್ಲ. ಕಾಂಗ್ರೆಸ್ ಸೇರಿ ಸಿಪಿವೈ ತಮ್ಮ ಭವಿಷ್ಯ ಹಾಳು ಮಾಡಿಕೊಂಡರು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಒಡಿಶಾ ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೆ 1 ಮುಟ್ಟಿನ ರಜೆ ಘೋಷಣೆ

    ಮಂಗಳವಾರವೇ ಸಿಪಿವೈ ಕಾಂಗ್ರೆಸ್ ಸೇರುತ್ತಾರೆ ಎಂದು ನಮಗೆಲ್ಲ ಸುಳಿವಿತ್ತು. ಇದರ ಬಗ್ಗೆ ಜೋಷಿಗೆ ಹೆಚ್‌ಡಿಕೆ ಹೇಳಿದ್ದರು. ಆದರೂ ಅವರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಿದೆವು. ಯೋಗೇಶ್ವರ್ ಕಾಂಗ್ರೆಸ್‌ನಲ್ಲಿ ಒಬ್ಬ ಲೀಡರ್ ಆಗಿ ಬೆಳೆಯಲು ಆಗಲ್ಲ. ಅವರು ತಮ್ಮ ಕಾಲಿನ ಮೇಲೆ ತಾವೇ ಕಲ್ಲು ಹಾಕಿಕೊಂಡಿದ್ದಾರೆ ಎಂದು ನುಡಿದರು. ಇದನ್ನೂ ಓದಿ: ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ರಾಯಗಢ ಜಲಪಾತದ ಬಳಿ ಶೂಟಿಂಗ್ ಅಭ್ಯಾಸ ನಡೆಸಿದ್ದ ಹಂತಕರು

    ಚನ್ನಪಟ್ಟಣದಲ್ಲಿ ನಾವೇ ಗೆಲ್ಲುತ್ತೇವೆ. ಅವರು ಹೋದರು ಅಂತ ನಮಗೇನೂ ನಷ್ಟ ಆಗಲ್ಲ. ಅವರು ಇಲ್ಲದಿದ್ದಾಗಲೂ ನಾವು ಗೆದ್ದಿದ್ದೇವೆ. ಅವರು ಅವರ ಮಾತೃಪಕ್ಷಕ್ಕೆ ಹೋಗಿದ್ದಾರೆ. ಬಿಜೆಪಿಗೆ ನೋ ಲಾಸ್, ನೋ ಗೇನ್. ಮಂಗಳವಾರ ಕುಮಾರಸ್ವಾಮಿ ಅಭ್ಯರ್ಥಿ ಘೋಷಣೆ ಮಾಡದಿರುವ ಹಿಂದೆ ಇದೇ ಕಾರಣ ಇದ್ದಿರಬೇಕು. ಸಿಪಿವೈ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿ ಇದ್ದರು ಎಂದು ಹೆಚ್‌ಡಿಕೆ ಹೇಳಿದ್ದರು. ಅವರಿಗೆ ಟಿಕೆಟ್ ಕೊಟ್ಟಿದ್ದರೆ ನಮಗೂ ಕಷ್ಟ ಅಂತ ಕುಮಾರಸ್ವಾಮಿ ಹೇಳಿದ್ದರು. ಹಾಗಾಗಿ ಘೋಷಣೆ ಮಾಡಿಲ್ಲವೇನೋ ಎಂದು ಹೇಳಿದರು. ಇದನ್ನೂ ಓದಿ: ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು, ಇದು ಸಾಧ್ಯತೆಯ ಕಲೆ: ಡಿಕೆ ಶಿವಕುಮಾರ್‌

    ಈಗ ಜೆಡಿಎಸ್‌ನವರು ಯಾರಿಗೇ ಟಿಕೆಟ್ ಕೊಟ್ಟರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಗೆಲ್ಲಿಸುತ್ತೇವೆ. ಜೆಡಿಎಸ್ ಅಭ್ಯರ್ಥಿ ಯಾರೇ ಆದರೂ ಮುಕ್ತ ಮನಸ್ಸಿನಿಂದ ಕೆಲಸ ಮಾಡಿ ಗೆಲ್ಲಿಸುತ್ತೇವೆ. ಯೋಗೇಶ್ವರ್ ಚನ್ನಪಟ್ಟಣಕ್ಕೆ ಮಾತ್ರ ಸೀಮಿತ. ನಮ್ಮಲ್ಲಿ ಇನ್ನೂ ಪ್ರಬಲ ಒಕ್ಕಲಿಗ ನಾಯಕರಿದ್ದಾರೆ. ಇವರ ಸೇರ್ಪಡೆ ಹಳೇ ಮೈಸೂರು ಭಾಗದ ಮೇಲೆ ಆಗಲ್ಲ. ಶೆಟ್ಟರ್ ಹೀಗೆ ಕಾಂಗ್ರೆಸ್ ಅಂತ ಹೋಗಿ ವಾಪಸ್ ಬಂದಿದ್ದಾರೆ. ಈಗ ಸಿಪಿವೈ ಹೋಗಿದ್ದಾರೆ, ಮುಂದೇನಾಗುತ್ತೆ ಅಂತ ನೀವೇ ನೋಡುತ್ತಿರಿ ಎಂದು ಹರಿಹಾಯ್ದರು. ಇದನ್ನೂ ಓದಿ: ಆಪರೇಷನ್ ಆಲೌಟ್ ಜೆಡಿಎಸ್ – ಸಿಎಂ ಮುಂದೆ ಡಿಕೆಶಿ ಶಪಥ

    ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರ ಉರುಳಿದಾಗ ಒಬ್ಬರಿಂದ ಬಿಜೆಪಿ ಸರ್ಕಾರ ಬರಲಿಲ್ಲ. ಆಗ ಯಾರ‍್ಯಾರು ಬಿಜೆಪಿಗೆ ಬಂದ್ರು, ಯಾರು ಕರೆತಂದ್ರು ಅಂತ ಜಗತ್ತಿಗೇ ಗೊತ್ತು. ನಾನೂ ಅವರನ್ನು ಕರೆತಂದೆ. ಯಡಿಯೂರಪ್ಪ, ವಿಜಯೇಂದ್ರ ಸಹ ಕರೆತಂದಿದ್ದಾರೆ. ಯೋಗೇಶ್ವರ್ ಒಬ್ಬರೇ ಕಾರಣರಲ್ಲ. ಪಕ್ಷ ಬಿಟ್ಟು ಪಕ್ಷ ಹೋಗುತ್ತಾರೆ ಅಂದರೆ ಅವರಿಗೆ ನಿಷ್ಠೆ ಇಲ್ಲ ಎಂದರ್ಥ. ಕಾಂಗ್ರೆಸ್‌ನಲ್ಲಿ ಯೋಗೇಶ್ವರ್‌ಗೆ ಖಂಡಿತ ಭ್ರಮನಿರಸನ ಆಗುತ್ತೆ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ಕೋಲಾರ | ಎಂಜಿನಿಯರಿಂಗ್ ಬಿಟ್ಟು ವ್ಯವಸಾಯದಲ್ಲಿ ತೊಡಗಿದ್ದ ರೈತನ 9 ಎಕರೆ ಬೆಳೆ ನಾಶ

  • ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌, ಎರಡು ದಿನದಲ್ಲಿ ತೀರ್ಮಾನವಾಗಲಿದೆ: ಆರ್‌. ಅಶೋಕ್‌

    ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌, ಎರಡು ದಿನದಲ್ಲಿ ತೀರ್ಮಾನವಾಗಲಿದೆ: ಆರ್‌. ಅಶೋಕ್‌

    – ಯೋಗೇಶ್ವರ್ ದುಡುಕಲ್ಲ ಎಂಬ ವಿಶ್ವಾಸವಿದೆ

    ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ (Channapatna Bypoll) ಎನ್‌ಡಿಎ (NDA) ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಇದು ಜೆಡಿಎಸ್‌ನ (JDS) ಕ್ಷೇತ್ರವೇ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖ ಎಂದು ಪ್ರತಿಪಕ್ಷದ ನಾಯಕ ಆರ್‌.ಅಶೋಕ್ (R.Ashok) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಪಿ.ಯೋಗೇಶ್ವರ್‌ ಅವರ ಮನವೊಲಿಸಲು ನಾನು ಕೂಡ ಯತ್ನಿಸಿದ್ದೆ. ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ಸಂಬಂಧ ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಯೋಗೇಶ್ವರ್‌ ಅವರಿಗೆ ಟಿಕೆಟ್‌ ನೀಡಬೇಕೆಂದು ಹಿರಿಯ ನಾಯಕರಿಗೆ ಮನವಿ ಮಾಡಿದ್ದೇವೆ. ಈ ಹಿಂದೆ ಕ್ಷೇತ್ರದಲ್ಲಿ ಕುಮಾರಸ್ವಾಮಿ ಶಾಸಕರಾಗಿದ್ದರು. ಹೀಗಾಗಿ ಅವರ ತೀರ್ಮಾನ ಪ್ರಮುಖವಾಗಿರುತ್ತದೆ. ಯೋಗೇಶ್ವರ್‌ ಅವರು ದುಡುಕುತ್ತಾರೆ ಅಥವಾ ತಪ್ಪು ತೀರ್ಮಾನ ಕೈಗೊಳ್ಳುತ್ತಾರೆಂದು ನನಗೆ ಅನ್ನಿಸುತ್ತಿಲ್ಲ ಎಂದಿದ್ದಾರೆ.

    ನಿಖಿಲ್‌ ಕುಮಾರಸ್ವಾಮಿಯವರು ಈಗಾಗಲೇ ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ದಾರೆ. ಸೀಟು ಅವರದ್ದೇ ಆಗಿರುವುದರಿಂದ ಹಾಗೂ ಎನ್‌ಡಿಎ ಭಾಗ ಆಗಿರುವುದರಿಂದ ಜೆಡಿಎಸ್‌ನವರ ಸಲಹೆ ಪ್ರಮುಖವಾಗಿರುತ್ತದೆ. ಎರಡು ದಿನದಲ್ಲಿ ಎಲ್ಲವೂ ತೀರ್ಮಾನವಾಗಲಿದೆ ಎಂದು ತಿಳಿಸಿದ್ದಾರೆ.

    ಡಿ.ಕೆ.ಶಿವಕುಮಾರ್‌ ಅವರ ಸಹೋದರ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಯಾರನ್ನೋ ಕರೆದುಕೊಂಡು ಬರುತ್ತೇನೆ ಎಂದು ಹೇಳಬಹುದು. ಆದರೆ ಅಂತಿಮವಾಗಿ ಎಲ್ಲವನ್ನೂ ಜನರು ತೀರ್ಮಾನಿಸುತ್ತಾರೆ. ಕಾಂಗ್ರೆಸ್‌ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ರೈತರಿಗೆ ಪರಿಹಾರ ನೀಡಿಲ್ಲ. ಪ್ರವಾಹ ಹಾನಿ ನಿವರ್ಹಣೆ ಮಾಡಿಲ್ಲ. ಜನರು ಸರ್ಕಾರದ ವಿರುದ್ಧವಾಗಿ ನಿಂತಿದ್ದಾರೆ. ಅದರ ಉಪಯೋಗವನ್ನು ನಾವು ಪಡೆಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  • ಇಡಿ ದಾಳಿಗೆ ರಾಜಕೀಯ ಕಾರಣವಲ್ಲ, ಮುಡಾದಲ್ಲಿ 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದಿದ್ದೇ ಕಾಂಗ್ರೆಸ್‌ನವರು: ಅಶೋಕ್

    ಇಡಿ ದಾಳಿಗೆ ರಾಜಕೀಯ ಕಾರಣವಲ್ಲ, ಮುಡಾದಲ್ಲಿ 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದಿದ್ದೇ ಕಾಂಗ್ರೆಸ್‌ನವರು: ಅಶೋಕ್

    ಬೆಂಗಳೂರು: ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ. 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು (Congress) ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಹೇಳಿದರು.

    ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಮುಡಾದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಸಿಎಂ ಅವರದ್ದೂ ಸೇರಿದಂತೆ ಸುಮಾರು 1,200 ಕ್ಕೂ ಅಧಿಕ ನಿವೇಶನಗಳ ಹಗರಣ ನಡೆದಿದೆ ಎಂಬ ದೂರು ಬಂದಿದ್ದು, ಅದಕ್ಕಾಗಿ ದಾಳಿ ಮಾಡಲಾಗಿದೆ. 3-4 ಸಾವಿರ ಕೋಟಿ ರೂ. ಹಗರಣ ನಡೆದಿದೆ ಎಂದು ಮುಡಾ ಅಧ್ಯಕ್ಷರಾಗಿದ್ದ ಕಾಂಗ್ರೆಸ್‌ನವರೇ ಆದ ಮರಿಗೌಡ ಪತ್ರದಲ್ಲಿ ತಿಳಿಸಿದ್ದರು. ಅದಾದ ಬಳಿಕ ಸ್ನೇಹಮಯಿ ಕೃಷ್ಣ ಇಡಿಗೆ ದೂರು ನೀಡಿದ್ದಾರೆ. ಇದರಲ್ಲಿ ರಾಜಕೀಯದ ಪ್ರಶ್ನೆ ಉದ್ಭವವೇ ಆಗುವುದಿಲ್ಲ. ಇದರಲ್ಲಿ ಬಿಜೆಪಿ ಅಥವಾ ಕೇಂದ್ರ ಸರ್ಕಾರದ ಪಾತ್ರವೇ ಇಲ್ಲ ಎಂದರು. ಇದನ್ನೂ ಓದಿ: Russia – Ukraine War | ರಷ್ಯಾ ಪರ 12,000 ಸೈನಿಕರನ್ನು ಕಳುಹಿಸಿದ ಉತ್ತರ ಕೊರಿಯಾ

    ಇದನ್ನು ರಾಜಕೀಯವಾಗಿ ನೋಡಬಾರದು. ನಿವೇಶನಗಳು ವಾಪಸ್ ಸಿಕ್ಕರೆ ಹಾಗೂ ಹಣ ಸಿಕ್ಕರೆ ರಾಜ್ಯ ಸರ್ಕಾರಕ್ಕೆ ಲಾಭವಾಗುತ್ತದೆ. ಸರ್ಕಾರದಲ್ಲಿ ಖಜಾನೆ ಖಾಲಿಯಾಗಿ ಸಂಬಳ ಕೊಡಲಾಗದ ಪರಿಸ್ಥಿತಿ ಇದೆ. ಇಂತಹ ಸ್ಥಿತಿಯಲ್ಲಿ ಖಜಾನೆಗೆ ಹಣ ಬಂದರೆ ಒಳ್ಳೆಯದು. ಇದನ್ನು ಕಾಂಗ್ರೆಸ್‌ನವರು ಸ್ವಾಗತಿಸಬೇಕು. ಇದನ್ನು ರಾಜಕಾರಣ ಎನ್ನಲು ಬಿಜೆಪಿ ನಾಯಕರೇನೂ ದೂರು ನೀಡಿಲ್ಲ ಎಂದು ಅಶೋಕ್ ಹೇಳಿದರು. ಇದನ್ನೂ ಓದಿ: ಅಮಿತ್ ಶಾ ಮಾತು ಕೇಳಿದ್ದೇ ತಪ್ಪಾಯ್ತಾ? – ಈಶ್ವರಪ್ಪ ಬೇಸರ

    ಅಕ್ರಮ ಹಣ ವರ್ಗಾವಣೆಯಾಗಿಲ್ಲ ಎಂದಾದರೆ 3-4 ಸಾವಿರ ಕೋಟಿ ರೂ. ಹಣದ ಅಕ್ರಮ ನಡೆದಿರುವುದು ಹೇಗೆ? ನಿವೇಶನ ಮಂಜೂರಾಗಿದೆ ಎಂದ ಮೇಲೆ ಅದರ ಹಣ ಯಾರಿಗಾದರೂ ಸಿಕ್ಕೇ ಸಿಕ್ಕಿರುತ್ತದೆ. ಅದಕ್ಕೆ ನಗದಿನಲ್ಲಿ ಹಣ ನೀಡಲಾಗಿರುತ್ತದೆ. ಅಂತಹ ನಗದು ಕಪ್ಪು ಹಣವೇ ಆಗಿರುತ್ತದೆ. ಇಡಿ ಬಗ್ಗೆ ಪ್ರಶ್ನೆ ಮಾಡುವವರು ಕೋರ್ಟ್‌ನಲ್ಲಿ ಪ್ರಶ್ನೆ ಮಾಡಬಹುದಿತ್ತು. ಸಿಎಂ ಸಿದ್ದರಾಮಯ್ಯನವರು ಕೋರ್ಟ್‌ಗೆ ಹೋಗಲೇ ಇಲ್ಲ. ಇಡಿಗೆ ಅಧಿಕಾರ ಇಲ್ಲವೆಂದಾದರೆ ಎಸ್‌ಐಟಿ ಮಾಡಲು ಸರ್ಕಾರಕ್ಕೆ ಅಧಿಕಾರವಿದೆಯೇ ಎಂದು ಪ್ರಶ್ನಿಸಬೇಕಾಗುತ್ತದೆ. ಮುಂದಿನ ಹೋರಾಟದ ಕುರಿತು ಪಕ್ಷದ ಮಟ್ಟದಲ್ಲಿ ಚರ್ಚಿಸಲಾಗುವುದು. ಇಡಿ ದಾಳಿಯ ನಂತರ ದಾಖಲೆಗಳು ಸಿಕ್ಕ ಬಳಿ ಪರಿಶೀಲಿಸಿ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಬೆಣ್ಣೆ ಹಳ್ಳ ನೀರಿಗೆ ಸಿಲುಕಿದ ಮೂವರು, 150 ಕುರಿಗಳು- ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಣೆ

  • ಅತಿ ಬುದ್ಧಿವಂತಿಕೆ ಪ್ರದರ್ಶಿಸಿ ಸಿಎಂ ಕುರ್ಚಿಗೆ ಕೃಷ್ಣ ಭೈರೇಗೌಡ ಟವಲ್ ಹಾಕುತ್ತಿದ್ದಾರೆ: ಅಶೋಕ್ ವ್ಯಂಗ್ಯ

    ಅತಿ ಬುದ್ಧಿವಂತಿಕೆ ಪ್ರದರ್ಶಿಸಿ ಸಿಎಂ ಕುರ್ಚಿಗೆ ಕೃಷ್ಣ ಭೈರೇಗೌಡ ಟವಲ್ ಹಾಕುತ್ತಿದ್ದಾರೆ: ಅಶೋಕ್ ವ್ಯಂಗ್ಯ

    – ಬೆಂಗಳೂರಿನ ಜನತೆ ನಮ್ಮ ತೆರಿಗೆ ನಮ್ಮ ಹಕ್ಕು ಎಂದರೆ ಏನು ಮಾಡುತ್ತೀರಿ?

    ಬೆಂಗಳೂರು: ಅತಿ ಬುದ್ಧಿವಂತಿಕೆ ಪ್ರದರ್ಶನ ಮಾಡುವ ಮೂಲಕ ಹೈಕಮಾಂಡ್ ಗಮನ ಸೆಳೆದು ಮುಖ್ಯಮಂತ್ರಿ ಕುರ್ಚಿಗೆ ನನ್ನದೂ ಒಂದು ಇರಲಿ ಅಂತ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಟವಲ್ ಹಾಕುತ್ತಿದ್ದಾರೆ. ರೈತರ (Farmers) ಬಗ್ಗೆ ಕೀಳರಿಮೆ ಇರುವ ಕೃಷ್ಣ ಭೈರೇಗೌಡರು ಐದು ವರ್ಷಗಳ ಕಾಲ ಕೃಷಿ ಸಚಿವರಾಗಿದ್ದು ಈ ರಾಜ್ಯದ ದೌರ್ಭಾಗ್ಯ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ (R Ashok) ಟೀಕಿಸಿದ್ದಾರೆ.

    ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ತಮ್ಮ ಬಗ್ಗೆ ಆಡಿದ ಮಾತಿನ ಬಗ್ಗೆ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಪ್ರತಿಕ್ರಿಯಿಸಿದರು.

    ನನ್ನನ್ನು ನಿಂದಿಸುವ ಭರದಲ್ಲಿ ಕಡಲೆಕಾಯಿ ಬೆಳೆಯುವ ಸಾಮಾನ್ಯ ರೈತನಿಗೆ ಇರುವಷ್ಟು ‘ಕನಿಷ್ಠ ಜ್ಞಾನ’ ಎಂದು ರೈತರನ್ನು ಕೃಷ್ಣ ಭೈರೇಗೌಡರು ಹೀಯಾಳಿಸಿದ್ದಾರೆ. ಎಲ್ಲರಿಗೂ ಅವರಂತೆ ವಿದೇಶಕ್ಕೆ ಹೋಗಿ ವಿದ್ಯಾಭ್ಯಾಸ ಮಾಡಿಕೊಂಡು ಬರುವಷ್ಟು ಅನುಕೂಲ ಇರುವುದಿಲ್ಲ. ರಾಜಕಾರಣದಲ್ಲಿ ಕುಟುಂಬದ ಹಿನ್ನೆಲೆ ಇಲ್ಲದಂತಹ ನಮ್ಮಂತಹ ಸಾಮಾನ್ಯರೂ ಇದ್ದೀವಿ. ರೈತರ ಬಗ್ಗೆ ಇಂತಹ ಕೀಳರಿಮೆ ಇರುವ ತಮ್ಮಂತಹವರು ಐದು ವರ್ಷಗಳ ಕಾಲ ರಾಜ್ಯದ ಕೃಷಿ ಸಚಿವರಾಗಿದ್ದೀರಲ್ಲ, ಅದೇ ನಮ್ಮ ರಾಜ್ಯದ ದೌರ್ಭಾಗ್ಯ ಎಂದು ಅಶೋಕ್ ಹೇಳಿದ್ದಾರೆ.

    ಜಿಎಸ್‌ಟಿ (GST) ಸಭೆಯಲ್ಲಿ ತೆರಿಗೆ ಹಂಚಿಕೆ ಬಗ್ಗೆ ಅಧಿಕೃತವಾಗಿ ಚರ್ಚೆ ನಡೆಯುವುದಿಲ್ಲ ಎಂಬ ಅರಿವು ನನಗೂ ಇದೆ. ಆದರೆ ಜಿಎಸ್‌ಟಿ ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವರು, ರಾಜ್ಯಗಳ ಹಣಕಾಸು ಸಚಿವರು ಅಥವಾ ಇನ್ಯಾರಾದರೂ ಪ್ರತಿನಿಧಿ ಸಚಿವರು ಬಂದಿರುತ್ತಾರೆ ಅಲ್ಲವೇ? ಇಂತಹ ವೇದಿಕೆಯಲ್ಲಿ ಅನೌಪಚಾರಿಕವಾಗಿ ತೆರಿಗೆ ಹಂಚಿಕೆ ಬಗ್ಗೆ ಚರ್ಚಿಸಿ ಒಂದು ಒಮ್ಮತ ಸೃಷ್ಟಿಸುವ ಪ್ರಯತ್ನ ಮಾಡಬಹುದಿತ್ತಲ್ಲವೇ? ನನ್ನ ಮಾತಿನ ಅರ್ಥ ಇದಾಗಿತ್ತು ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಚುನಾವಣಾ ರಾಜಕೀಯಕ್ಕೆ ಪ್ರಿಯಾಂಕಾ ಎಂಟ್ರಿ-ವಯನಾಡಿನಿಂದ ಕಣಕ್ಕೆ

    ಕೇರಳದಲ್ಲಿ ಇತ್ತೀಚೆಗೆ ಐದು ಬಿಜೆಪಿಯೇತರ ಸರ್ಕಾರಗಳ ಪ್ರತಿನಿಧಿಗಳು ಒಟ್ಟಿಗೆ ಸೇರಿ ಸಭೆ ಮಾಡಿದ್ದರು. ಅದು ತೆರಿಗೆ ಹಂಚಿಕೆ ಬಗ್ಗೆ ಚರ್ಚಿಸುವ ವೇದಿಕೆಯೇ? ವೇದಿಕೆಗಳ ಮೇಲೆ ರಾಜಕೀಯ ಭಾಷಣ ಮಾಡಿ ಕೇಂದ್ರ ಸಚಿವರಿಗೆ ಬಹಿರಂಗ ಚರ್ಚೆಗೆ ಬರಲು ಸವಾಲು ಹಾಕುತ್ತೀರಲ್ಲ, ತೆರಿಗೆ ಹಂಚಿಕೆ ಬಗ್ಗೆ ಚರ್ಚಿಸಲು ಅದು ವೇದಿಕೆಯೇ? ದೆಹಲಿ ಚಲೋ ಅಂತ ಬೀದಿನಾಟಕ ಮಾಡಿ, ಜಂತರ್ ಮಂತರ್‌ನಲ್ಲಿ ಫೋಟೋ ಶೂಟ್ ಮಾಡಿಸಿಕೊಂಡರಲ್ಲ, ತೆರಿಗೆ ಹಂಚಿಕೆ ಬಗ್ಗೆ ಚರ್ಚೆ ಮಾಡಲು ಅದು ವೇದಿಕೆಯೇ? ಚುನಾವಣೆ ಬಂದರೆ ಸಾಕು, ಸರ್ಕಾರಕ್ಕೆ ಒಂಚೂರು ಮುಜುಗರ ಆದರೆ ಸಾಕು, ಜನರ ಗಮನ ಬೇರೆಡೆ ಸೆಳೆಯಲು ‘ನನ್ನ ತೆರಿಗೆ ನನ್ನ ಹಕ್ಕು’ ಅಂತ ನಾಟಕ ಶುರು ಮಾಡುತ್ತೀರಲ್ಲ, ಸಾಮಾಜಿಕ ಜಾಲತಾಣಗಳು ತೆರಿಗೆ ಹಂಚಿಕೆ ಬಗ್ಗೆ ಚರ್ಚೆ ಮಾಡಲು ವೇದಿಕೆಯೇ? ಈ ತಂತ್ರಗಾರಿಕೆ, ಟೂಲ್ ಕಿಟ್ ರಾಜಕಾರಣ ಜನಸಾಮಾನ್ಯರಿಗೆ ಅರ್ಥ ಆಗೋದಿಲ್ಲ ಅಂತ ಎಣಿಸಿದ್ದೀರಾ? ಎಂದು ಅವರು ಪ್ರಶ್ನಿಸಿದ್ದಾರೆ.

    ರಾಜ್ಯದ ಹಿತಾಸಕ್ತಿ ಕಾಪಾಡಬೇಕು, ರಾಜ್ಯದ ಬೊಕ್ಕಸಕ್ಕೆ ನಾಲ್ಕು ಕಾಸು ಹೆಚ್ಚು ಬರಬೇಕು ಎನ್ನುವ ಉದ್ದೇಶ ತಮಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಕಿಂಚಿತ್ತಾದರೂ ಇದ್ದಿದ್ದರೆ, ತಾವು ಮತ್ತು ತಮ್ಮ ಕಾಂಗ್ರೆಸ್ ಸರ್ಕಾರ, ಕೇಂದ್ರ ಸರ್ಕಾರದ ಜೊತೆ ವ್ಯವಹರಿಸುವ ರೀತಿಯೇ ಬೇರೆ ಇರುತ್ತಿತ್ತು. ಆದರೆ ಸತ್ಯ ಏನೆಂದರೆ, ನಿಮಗೆ ಅದ್ಯಾವ ಸದುದ್ದೇಶವೂ ಇಲ್ಲ. ತಮಗೆ ಬೇಕಾಗಿರುವುದೆಲ್ಲವೂ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಗೊಬೆ ಕೂರಿಸುವುದು ಮಾತ್ರ. ಆ ಮೂಲಕ ತಮ್ಮ ಸರ್ಕಾರದ ವೈಫಲ್ಯಗಳನ್ನು, ಭ್ರಷ್ಟಾಚಾರವನ್ನು, ತಪ್ಪುಗಳನ್ನು ಮುಚ್ಚಿಕೊಳ್ಳುವುದು, ಜನರ ಗಮನ ಬೇರೆಡೆ ಸೆಳೆಯುವುದು, ಬಿಜೆಪಿ ವಿರುದ್ಧ ಒಂದು ಕಟ್ಟುಕಥೆ ಸೃಷ್ಟಿಸುವುದು ಇವರ ಉದ್ದೇಶ ಎಂದು ಅವರು ದೂರಿದ್ದಾರೆ.

    ಜವಾಬ್ದಾರಿಯುತ ಸ್ಥಾನದಲ್ಲಿರುವವರು ಮನೆಹಾಳು ಕೆಲಸ ಮಾಡಬಾರದು. ಇವತ್ತು ನೀವು “ನಮ್ಮ ತೆರಿಗೆ ನಮ್ಮ ಹಕ್ಕು” ಎನ್ನುತ್ತೀರಿ. ನಾಳೆ ಬೆಂಗಳೂರಿನ ಜನತೆ ನಮ್ಮ ತೆರಿಗೆ ನಮ್ಮ ಹಕ್ಕು ಎನ್ನುತ್ತಾರೆ. ಮುಂದೊಂದು ದಿನ ಮಹದೇವಪುರದ ಜನ ನಮ್ಮ ತೆರಿಗೆ ನಮ್ಮ ಹಕ್ಕು ಎನ್ನುತ್ತಾರೆ. ಹೀಗೆ ಮುಂದುವರಿದರೆ ಪ್ರತಿಯೊಂದು ಧರ್ಮ, ಜಾತಿಯವರು ನಮ್ಮ ತೆರಿಗೆ ನಮ್ಮ ಹಕ್ಕು ಎನ್ನುತ್ತಾರೆ. ಹೀಗಾದರೆ ಇದಕ್ಕೆ ಕೊನೆ ಎಲ್ಲಿ ಎಂದು ಆರ್‌.ಅಶೋಕ್‌ ಪ್ರಶ್ನಿಸಿದ್ದಾರೆ.

    ಇದೆಲ್ಲಾ ತಮಗೆ ಗೊತ್ತಿಲ್ಲ ಎಂದೇನಿಲ್ಲ. ಬಹುಶಃ ಅತಿ ಬುದ್ಧಿವಂತಿಕೆ ಪ್ರದರ್ಶನ ಮಾಡುವ ಮೂಲಕ ಹೈಕಮಾಂಡ್ ಗಮನ ಸೆಳೆದು ಮುಖ್ಯಮಂತ್ರಿ ಕುರ್ಚಿಗೆ ನನ್ನದೂ ಒಂದು ಇರಲಿ ಅಂತ ಟವಲ್ ಹಾಕುತ್ತಿರಬಹುದು. ದುರಾಡಳಿತದಿಂದ ಬೇಸತ್ತಿರುವ ಕರ್ನಾಟಕಕ್ಕೆ ನಿಮ್ಮಂತಹ ಸುಶಿಕ್ಷಿತ, ಸಭ್ಯ, ಬುದ್ಧಿವಂತ ನಾಯಕರು ಮುಖ್ಯಮಂತ್ರಿ ಆದರೆ ಒಳ್ಳೆಯದೇ! ಆದರೆ ನಿಮ್ಮ ಕಾಂಗ್ರೆಸ್ ಹೈಕಮಾಂಡ್‌ಗೆ ಬೇಕಾಗಿರುವುದು ‘ಸಂಪನ್ಮೂಲ’ ಒದಗಿಸುವ ಮಹಾನಾಯಕರೇ ಹೊರತು ನಿಮ್ಮಂತಹ ಸಂಪನ್ಮೂಲ ವ್ಯಕ್ತಿಗಳಲ್ಲ. ಒಟ್ಟಿನಲ್ಲಿ ನಿಮಗೆ ಶುಭವಾಗಲಿ ಎಂದು ಆರ್‌.ಅಶೋಕ್‌ ವ್ಯಂಗ್ಯವಾಡಿದ್ದಾರೆ.

     

  • ಮುಸ್ಲಿಮರ ಋಣ ತೀರಿಸಲು ಕಾಂಗ್ರೆಸ್ ಮುಂದಾಗಿದೆ: ಹುಬ್ಬಳ್ಳಿ ಕೇಸ್ ವಾಪಸ್‌ಗೆ ಅಶೋಕ್ ಕಿಡಿ

    ಮುಸ್ಲಿಮರ ಋಣ ತೀರಿಸಲು ಕಾಂಗ್ರೆಸ್ ಮುಂದಾಗಿದೆ: ಹುಬ್ಬಳ್ಳಿ ಕೇಸ್ ವಾಪಸ್‌ಗೆ ಅಶೋಕ್ ಕಿಡಿ

    ಬೆಂಗಳೂರು: ಮುಸ್ಲಿಮರ ಋಣ ತೀರಿಸುವ ಕೆಲಸಕ್ಕೆ ಕಾಂಗ್ರೆಸ್ (Congress) ಮುಂದಾಗಿದೆ. ಹೀಗಾಗಿ ಮತಬ್ಯಾಂಕ್, ಹಗರಣಗಳನ್ನು ಮರೆಮಾಚಲು ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R Ashok) ಆಕ್ರೋಶ ವ್ಯಕ್ತಪಡಿಸಿದರು.

    ನಗರದ ಫ್ರೀಡಂ ಪಾರ್ಕ್‌ನಲ್ಲಿ (Freedom Park) ರಾಜ್ಯ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಬಳಿಕ ಬಿಜೆಪಿ ಶಾಸಕರು, ಮುಖಂಡರೊಂದಿಗೆ ರಾಜಭವನಕ್ಕೆ ತೆರಳಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರನ್ನು ಭೇಟಿ ಮಾಡಿ ದೂರು ನೀಡಿದರು.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ್ರೋಹಿ ಚಟುವಟಿಕೆ, ಪೊಲೀಸರ ಮೇಲೆ ಹಲ್ಲೆ ಮಾಡಿದ ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಮುಚ್ಚಿಹಾಕಿದೆ. ರೈತ ಹೋರಾಟ, ಕನ್ನಡ ಹೋರಾಟಗಳಿಗೆ ಇದನ್ನು ಹೋಲಿಸಬಾರದು. ಕುರ್ಚಿ ಅಲುಗಾಡುತ್ತಿರುವ ಸಮಯದಲ್ಲಿ ಮುಸ್ಲಿಮರು ನನ್ನ ಪರವಾಗಿದ್ದಾರೆ ಹಾಗೂ ಕಾಂಗ್ರೆಸ್‌ಗೆ ಮುಸ್ಲಿಮರ ವೋಟು ಬೇಕೆಂದು ಹೀಗೆ ಮಾಡಲಾಗಿದೆ. ಜೊತೆಗೆ ರೈತರ ವಿರುದ್ಧದ ಪ್ರಕರಣ ವಾಪಸ್ ಪಡೆಯಲು ಸಿ.ಟಿ.ರವಿ ಮನವಿ ಮಾಡಿದ್ದರೂ ಅದಕ್ಕೆ ಸರ್ಕಾರ ಸ್ಪಂದಿಸಿಲ್ಲ ಎಂದು ದೂರಿದರು.ಇದನ್ನೂ ಓದಿ:ಹಕ್ಕಿಯಂತೆ ಹಾರಬಹುದು, ಆಕಾಶದಿಂದ ನಂದಿಬೆಟ್ಟ ನೋಡಬಹುದು – ನಂದಿಗಿರಿಧಾಮದಲ್ಲಿ ಪ್ಯಾರಾಗ್ಲೈಡಿಂಗ್‌ ಆಕರ್ಷಣೆ

    ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ ಮಾಡಿದಾಗಲೂ ಇದೇ ರೀತಿ ಮಾಡಿದ್ದಾರೆ. ಇರ‍್ಯಾರೂ ಸ್ವಾತಂತ್ರ‍್ಯ ಹೋರಾಟಗಾರರಲ್ಲ. ಮುಡಾ, ವಾಲ್ಮೀಕಿ ನಿಗಮದ ಹಗರಣದಿಂದ ತಪ್ಪಿಸಿಕೊಳ್ಳಲು ಈ ತಂತ್ರ ಮಾಡಿರಬಹುದು. ಆದರೆ ಬಿಜೆಪಿಯಿಂದ ಈ ಎರಡೂ ಹಗರಣಗಳ ವಿರುದ್ಧ ಹೋರಾಟ ಮುಂದುವರಿಯಲಿದೆ. ಇದರ ಜೊತೆಗೆ ಕೇಂದ್ರ ಸರ್ಕಾರ ಅನುದಾನ ತಾರತಮ್ಯ ಮಾಡಿದೆ ಎಂಬ ಸುಳ್ಳು ಹಬ್ಬಿಸುತ್ತಿದ್ದಾರೆ. ಮೆಟ್ರೊ, ಜಲಜೀವನ್ ಮಿಷನ್, ಉಪನಗರ ರೈಲು ಮೊದಲಾದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಹೆಚ್ಚು ಅನುದಾನ ನೀಡಿದ್ದಾರೆ. ಅಷ್ಟು ಆರೋಪ ಮಾಡುವುದಾದರೆ ಶ್ವೇತಪತ್ರ ಬಿಡುಗಡೆಗೊಳಿಸಿ ಎಷ್ಟು ಅನುದಾನ ನೀಡಲಾಗಿದೆ ತಿಳಿಸಲಿ ಎಂದು ಸವಾಲೊಡ್ಡಿದರು.

    224 ಶಾಸಕರಿಗೆ ಎಷ್ಟು ಅನುದಾನ ನೀಡಲಾಗಿದೆ? ಎಂದು ರಾಜ್ಯ ಸರ್ಕಾರ ಪಟ್ಟಿ ನೀಡಲಿ. ಪ್ರತಿ ಜಿಲ್ಲೆಗೆ ತೆರಿಗೆಗೆ ಅನುಗುಣವಾಗಿ ಅನುದಾನ ಬಿಡುಗಡೆ ಮಾಡಲಿ. ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿ ಹೆಚ್ಚಿದ್ದು, ವಾಹನಗಳ ಸರಾಸರಿ ವೇಗ 17 ಕಿ.ಮೀ.ನಿಂದ 12 ಕಿ.ಮೀ.ಗೆ ಇಳಿದಿದೆ. ರಾಜ್ಯದ ಜನರಿಗೆ ಕಾಂಗ್ರೆಸ್ ಎಷ್ಟು ತಾರತಮ್ಯ ಮಾಡಿದೆ ತಿಳಿಸಲಿ ಎಂದು ಕಿಡಿಕಾರಿದರು.

    ಯಾರು ಯಾವಾಗ ಜೈಲಿಗೆ ಹೋಗುತ್ತಾರೆ? ಯಾವಾಗ ಮರಳಿ ಚುನಾವಣೆ ಬರಲಿದೆ? ಎಂದು ಸಿದ್ದರಾಮಯ್ಯನವರಿಗೆ ಗೊತ್ತಿಲ್ಲ. ಅದಕ್ಕಾಗಿ ಮತ ಕ್ರೋಢೀಕರಣಕ್ಕೆ ಮುಂದಾಗಿದ್ದಾರೆ. ಈ ಸರ್ಕಾರ ಉಳಿಯುವುದಿಲ್ಲ ಎಂದು ಅವರಿಗೂ ಗೊತ್ತಿದೆ. ಅವರ ಶಾಸಕರೇ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಇನ್ನೂ ಮಾನ ಮರ್ಯಾದೆ ಇದ್ದಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.ಇದನ್ನೂ ಓದಿ: Mumbai | ಲಘು ಮೋಟರ್ ವಾಹನಗಳಿಗೆ ಟೋಲ್ ಫ್ರೀ ಪ್ರವೇಶ: ಸಿಎಂ ಶಿಂಧೆ

    ಮುಸ್ಲಿಮರ ಋಣ ತೀರಿಸುವ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಿದೆ. ಒಂದು ಕಡೆ ಸಿದ್ದರಾಮಯ್ಯ ಸೈಟು ವಾಪಸ್ ಕೊಟ್ಟರೆ, ಮತ್ತೊಂದೆಡೆ ಮಲ್ಲಿಕಾರ್ಜುನ ಖರ್ಗೆ ಸೈಟು ವಾಪಸ್ ನೀಡಿದ್ದಾರೆ. ಇನ್ನೊಂದೆಡೆ ಸರ್ಕಾರ ಪ್ರಕರಣ ವಾಪಸ್ ಪಡೆದಿದೆ. ಹಿಂದೂಗಳನ್ನು ಟಾರ್ಗೆಟ್ ಮಾಡುವ ಜೊತೆಗೆ ಕ್ರಿಮಿನಲ್‌ಗಳ ಪ್ರಕರಣ ವಾಪಸ್ ಪಡೆದಿದ್ದಾರೆ. ಕನ್ನಡ ಹೋರಾಟಗಾರ ನಾರಾಯಣಗೌಡರನ್ನು ಜೈಲಿಗೆ ಹಾಕಿದ್ದರು. ಆದರೆ ಭಯೋತ್ಪಾದಕರಿಗೆ ಮಾತ್ರ ಪರೋಕ್ಷವಾಗಿ ಬೆಂಬಲ ನೀಡಲಾಗುತ್ತಿದೆ. ಡಿಜೆ ಹಳ್ಳಿ ಗಲಭೆಯಲ್ಲಿ ಭಾಗಿಯಾದವರು ಕಾಂಗ್ರೆಸ್‌ನ ಪದಾಧಿಕಾರಿಗಳಾಗಿದ್ದಾರೆ. ರಾಮೇಶ್ವರಂ ಕೆಫೆಯ ಬಾಂಬ್ ಸ್ಪೋಟ ಪ್ರಕರಣವನ್ನು ಮುಚ್ಚಿಹಾಕುವ ಕೆಲಸ ಮಾಡಿದ್ದಾರೆ ಎಂದು ದೂರಿದರು.

    ಈ ಸರ್ಕಾರ ಟಿಪ್ಪು ಆಡಳಿತ ನೀಡುತ್ತಿದೆ. ಸಿದ್ದರಾಮಯ್ಯನವರು ಟಿಪ್ಪುವನ್ನೇ ಮನೆ ದೇವರಾಗಿ ಮಾಡಿಕೊಂಡಿದ್ದಾರೆ. ಎಂದಿಗೂ ಕುಂಕುಮ ಇಡದ ಸಿದ್ದರಾಮಯ್ಯ ಈಗ ದೇವಸ್ಥಾನಕ್ಕೆ ಹೋಗಿ ಬೊಟ್ಟು ಇಡುತ್ತಿದ್ದಾರೆ. ಕುರ್ಚಿಯಿಂದ ಕೆಳಕ್ಕಿಳಿಯುವುದು ಖಾತರಿಯಾಗಿರುವುದರಿಂದ ದೇವರ ಮೊರೆ ಹೋಗಿದ್ದಾರೆ. ಹಿಂದೂಗಳು ಈಗ ಎಚ್ಚೆತ್ತುಕೊಳ್ಳಬೇಕಿದೆ. ಇಲ್ಲವಾದರೆ ಮುಸಲ್ಮಾನರೇ ಕಾಂಗ್ರೆಸ್‌ಗೆ ಬಿಗ್‌ಬಾಸ್ ಆಗಿ, ಅವರು ಹೇಳಿದಂತೆಯೇ ಸರ್ಕಾರ ನಡೆದುಕೊಳ್ಳಲಿದೆ ಎಂದು ತಿಳಿಸಿದರು.

    ರಾಜ್ಯಪಾಲರಿಗೆ ಮನವಿ
    ಪ್ರಕರಣ ಹಿಂಪಡೆದ ಕುರಿತು ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಪತ್ರ ಸಲ್ಲಿಸಲಾಗಿದೆ. ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಬಗ್ಗೆ ಸರ್ಕಾರದ ಬಳಿ ಸ್ಪಷ್ಟನೆ ಕೇಳಲಾಗುವುದು ಎಂದು ರಾಜ್ಯಪಾಲರು ತಿಳಿಸಿದ್ದಾರೆ. ಸರ್ಕಾರದ ಈ ಕ್ರಮದ ವಿರುದ್ಧ ಹುಬ್ಬಳ್ಳಿಯಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.ಇದನ್ನೂ ಓದಿ: 2 ವರ್ಷಗಳ ಹಿಂದೆ ಘೋಷಿಸಿದ್ದ ಎಥೆನಾಲ್ ಘಟಕ ಇನ್ನೂ ಆರಂಭವಾಗಿಲ್ಲ: ಸುಮಲತಾ ಆಪ್ತ ಬೇಸರ

  • ಅಶೋಕ್ ಲಾಜಿಕ್ ಪ್ರಕಾರ ಸಿ.ಟಿ ರವಿ ಭಯೋತ್ಪಾದಕರಾ? – ಪ್ರಿಯಾಂಕ್ ಖರ್ಗೆ ತಿರುಗೇಟು

    ಅಶೋಕ್ ಲಾಜಿಕ್ ಪ್ರಕಾರ ಸಿ.ಟಿ ರವಿ ಭಯೋತ್ಪಾದಕರಾ? – ಪ್ರಿಯಾಂಕ್ ಖರ್ಗೆ ತಿರುಗೇಟು

    ಬೆಂಗಳೂರು: ಆರ್.ಅಶೋಕ್ ಅವರ ಲಾಜಿಕ್ ಪ್ರಕಾರ ಸಿ.ಟಿ ರವಿ (C T Ravi) ಭಯೋತ್ಪಾದಕರಾ? ವಿ.ಸೋಮಣ್ಣ ಟೆರರಿಸ್ಟಾ? ಸುಮ್ಮನೆ ಮಾತಾಡ್ಬಾರ್ದು, ವಿರೋಧ ಪಕ್ಷದ ನಾಯಕರ ಮಾತಿಗೆ ತೂಕ ಇರಬೇಕು ಎಂದು ಪ್ರಿಯಾಂಕ್ ಖರ್ಗೆ (Priyank Kharge) ತಿರುಗೇಟು ನೀಡಿದ್ದಾರೆ.

    ಈ ಬಗ್ಗೆ ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಅಶೋಕ್ ಲಾಜಿಕ್ ಇಲ್ಲದೆ ಸುಮ್ಮನೆ ಮಾತನಾಡಬಾರದು, ವಿರೋಧ ಪಕ್ಷದ ನಾಯಕರ ಮಾತಿಗೆ ತೂಕ ಇರಬೇಕು. ನಾವು ಟೆರರಿಸ್ಟಿನಿಂದ ಹೇಗೆ ಸಲಹೆ ತಗೋತಿವಿ? ಬಲವಾದ ಮೂಲ ಇದ್ರೆ ಅಮಿತ್ ಶಾಗೆ ದೂರು ಕೊಡಲಿ. 10 ವರ್ಷದಿಂದ ಅವರದೇ ಸರ್ಕಾರ ಇತ್ತಲ್ವಾ? ಭಯೋತ್ಪಾದನೆ ನಿರ್ಮೂಲನೆಗೆ ಏನು ಮಾಡಿದ್ದಾರೆ ಬೆಂಗಳೂರಿಗೆ ಪಾಕಿಸ್ತಾನಿಗಳು ಹೇಗೆ ಬರ್ತಾರೆ? ಇಸ್ಲಾಂ ಅಹಮದಾಬಾದ್‌ನಿಂದ್ ಏರ್ ಡ್ರಾಫ್ಟ್ ಆಗ್ತಿದ್ದಾರಾ? ನಮಗೆ ಇಲ್ಲಿ ಪಾಠ ಮಾಡ್ತಿರಾ. ಕೆಲಸಕ್ಕೆ ಬಾರದೇ ಇರುವ ವಿದೇಶಾಂಗ ಸಚಿವ ಜೈಶಂಕರ್ ಜೊತೆಗೆ ಮಾತಾಡಿ. ಹೆಂಗ್ರಿ ಭಾರತಕ್ಕೆ ಬಂದ್ರು ಇವರು? ನಮ್ಮ ಮೇಲೆ ಆರೋಪ ಮಾಡ್ತೀರಾ ಅಲ್ವಾ ಅದಕ್ಕೆ ದಾಖಲೆ ಕೊಡಿ ಎಂದು ಸವಾಲ್ ಹಾಕಿದ್ದಾರೆ. ಇದನ್ನೂ ಓದಿ: Secunderabad| ಮುತ್ಯಾಲಮ್ಮ ದೇವಸ್ಥಾನದ ವಿಗ್ರಹ ಧ್ವಂಸ – ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

    ಕ್ಯಾಬಿನೆಟ್‌ನಲ್ಲಿ ಕೇಸ್ ವಾಪಸ್ ಪಡೆದ ಹಿನ್ನೆಲೆ, ಸರ್ಕಾರದ ಸಚಿವರು ಭಯೋತ್ಪಾದಕರು ಎಂಬ ಬಿಜೆಪಿ ನಾಯಕರ ಆರೋಪ ವಿಚಾರವಾಗಿ ಮಾತನಾಡಿ, 60 ಪ್ರಕರಣದಲ್ಲಿ 43 ಪ್ರಕರಣವನ್ನು ಕ್ಯಾಬಿನೆಟ್ ಉಪಸಮಿತಿಯ ನಿರ್ಧಾರದ ಮೇಲೆ ಕೇಸ್ ಪಡೆದಿದ್ದೇವೆ. ಎಲ್ಲವೂ ಕೂಲಂಕುಷವಾಗಿ ಚರ್ಚೆ ಮಾಡಿ ತೀರ್ಮಾನ ಮಾಡಿ ವಾಪಸ್ ಪಡೆದಿದ್ದೇವೆ. ಇದರಲ್ಲಿ ತಪ್ಪೇನಿದೆ? ವಿ.ಸೋಮಣ್ಣ ಅವರದು ನಾಲ್ಕೈದು ಕೇಸ್ ವಾಪಸ್ ಪಡೆದಿದ್ದೇವೆ. ಸಿ.ಟಿ ರವಿ ಹಾಗೂ ಸುಕುಮಾರ್ ಶೆಟ್ಟಿ ಅವರ ಕೇಸ್, ಮೈಸೂರು ಮಹಿಳಾ ಮೋರ್ಚಾ ಕೇಸ್ ವಾಪಸ್ ಪಡೆದಿದ್ದೇವೆ. ಇವರೆಲ್ಲರೂ ದೇಶದ್ರೋಹಿಗಳಾ? ಇವರೆಲ್ಲರೂ ಭಯೋತ್ಪಾದನೆ ನಡೆಸುತ್ತಾರಾ? ಏನಾದರೂ ಲಾಜಿಕ್ ಇರಬೇಕಲ್ವಾ? ಬಿಜೆಪಿಗೆ ಯಾವುದೇ ವಿಷಯ ಸಿಗುತ್ತಿಲ್ಲ. ಸುಮ್ಮನೆ ಹಿಟ್ ಅಂಡ್ ರನ್ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.

    ಅವರ ಒಳಜಗಳ ಮುಚ್ಚಿ ಹಾಕಲು ಈ ರೀತಿಯಾಗಿ ಮಾತಾಡುತ್ತಾರೆ. ಹಿಂದಿನ ಸರ್ಕಾರದಲ್ಲಿ ಯಾರೆಲ್ಲ ಎಷ್ಟು ಕೇಸ್ ವಾಪಸ್ ಪಡೆದಿದ್ದಾರೆ ಪಟ್ಟಿ ಮಾಡ್ಲಿ. ಯಡಿಯೂರಪ್ಪ ಸರ್ಕಾರ 100ಕ್ಕಿಂತ ಹೆಚ್ಚು ಕೇಸ್ ಪಡೆದಿದ್ದಾರೆ. ಈಗ ಬಿಜೆಪಿ ಮಾಡಿದ್ದು ಎಷ್ಟು ಪ್ರತಿಭಟನೆ ಆಯ್ತು? ರಾಜ್ಯ ಸರ್ಕಾರ ಹಾಗೂ ಗೃಹ ಇಲಾಖೆಗೆ ಶಕ್ತಿ ಇದೆ. ಗೃಹ ಇಲಾಖೆ ಹಾಕಿದರು ಅವರೇ ತೆಗೀತಾರೆ ಬಿಜೆಪಿಗೆ ಕಾನೂನು ಗೊತ್ತಿಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ 5ವರ್ಷ ಸಿಎಂ ಎನ್ನುವವರೆಲ್ಲ ಸಿಎಂ ಆಕಾಂಕ್ಷಿಗಳೇ ಆಗಿದ್ದಾರೆ: ಬಿವೈವಿ

    ಛಲವಾದಿ ನಾರಾಯಣಸ್ವಾಮಿ ವಿರುದ್ಧ ಪ್ರತಿಕ್ರಿಯಿಸಿ, ಶೆಡ್ ನಾರಾಯಣಸ್ವಾಮಿ ಅಂತಾ ನಾನು ಹೇಳಿಲ್ಲ. ಹಿರಿಯರು, ಕಿರಿಯರು ಅನ್ನೋದನ್ನ ನಾನು ರಾಜಕೀಯದಲ್ಲಿ ನೋಡಿದ್ದೇನೆ. ಚುನಾವಣೆಯಲ್ಲಿ ನಿಂತು ಬಂದಿದ್ದೇನೆ. ನಾರಾಯಣಸ್ವಾಮಿ ಎಷ್ಟು ಸಲ ಚುನಾವಣೆಯಲ್ಲಿ ನಿಂತು ಬಂದಿದ್ದಾರೆ? ಅವರು ಖರ್ಗೆ ಅವರ ಬಗ್ಗೆ ಮಾತಾಡಿದ್ರೆ ಮಾಸ್ಟರ್ ಸ್ಟ್ರೋಕ್. ಅವರೆಲ್ಲ ಮಾತಾಡಬಹುದು. ಪ್ರಿಯಾಂಕ್ ಖರ್ಗೆ ಮಾತಾಡಬಾರದಾ? ಲೀಗಲ್ ಆಗಿ ಸೈಟ್ ವಾಪಸ್ ನೀಡಿದರೂ ಕಷ್ಟ. ಇವರ ಬಿರಿಯಾನಿ ಅಂಗಡಿ ಏನಾಯ್ತು? 10 ವರ್ಷದಿಂದ ಹಾಗೆ ಇಟ್ಕೊಂಡ್ರಲ್ವಾ. ಏನು ಮಾಡಿದ್ರು? ನನಗೆ ಪಾಠ ಮಾಡುವ ಅವಶ್ಯಕತೆ ಇಲ್ಲ. ವೈಯಕ್ತಿಕ ಟೀಕೆ ಬಿಟ್ಟು, ಲಾಜಿಕಲ್ ಮಾತಾಡಬೇಡಿ. ಬಿಜೆಪಿಯವರ ಹತ್ತಿರ ಪಾಠ ಕಲಿಯುವ ಅವಶ್ಯಕತೆ ಇಲ್ಲ. ನಮ್ಮ ಪಾರ್ಟಿಯವರು ಹೇಳಿದಂತೆ ಕೇಳುತ್ತೇವೆ. ಕೆಣಕೋದು ನಿಲ್ಲಿಸಿ ಎಂದು ಗುಡುಗಿದರು. ಇದನ್ನೂ ಓದಿ: ದುರ್ಗಾದೇವಿ ಮೂರ್ತಿ ವಿರ್ಸಜನೆ| ಮಸೀದಿ ಎದುರು ಹಾಡು ಹಾಕಿದ್ದಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ

    ಖರ್ಗೆ ಸಿಎಂ ಆಗಲು ಟ್ರೈ ಮಾಡ್ತಾರೆ, ಹೀಗಾಗಿ ಸೈಟ್ ವಾಪಸ್ ಮಾಡ್ತಾರೆ ಎಂಬ ಬಿಜೆಪಿ ಆರೋಪ ವಿಚಾರವಾಗಿ ಮಾತನಾಡಿ, ಮೊದಲು ರಾಜ್ಯಪಾಲರ (Governer) ಭೇಟಿಗೆ ಹೋದಾಗ ಮೇಲ್ಮನೆ ಸದಸ್ಯರ ಬಗ್ಗೆ ದೂರು ಕೊಟ್ಟಿದ್ದೇವೆ. ಅದರ ಬಗ್ಗೆ ಚರ್ಚೆ ಮಾಡೋಕೆ ಹೇಳಿ. ಅದರ ಬಗ್ಗೆ ಬಿಜೆಪಿ ನಾಯಕರು ರಾಜ್ಯಪಾಲರ ಹತ್ತಿರ ಉತ್ತರ ತಗೊಂಡು ಬನ್ನಿ. ಪದೇ ಪದೇ ರಾಜ್ಯಪಾಲರ ಮುಂದೆ ಹೋಗಿ ಕೈ ಕಟ್ಕೊಂಡು ನಿಲ್ಲುತ್ತಾರೆ. ಪಾಪ ಅನ್ನಿಸುತ್ತದೆ. ಮೊದಲು ಹೋಗಿ ಸೈಟ್ ಲೀಗಲ್ ಆಗಿ ತೆಗೆದುಕೊಂಡಿಲ್ಲ ಅಂದಿದ್ದರು. ಈಗ ಏನ್ ಹೇಳ್ತಾರೆ. ಈ ವಿಚಾರದಲ್ಲಿ ಬಿಜೆಪಿಯವರು ಎಷ್ಟಾದ್ರೂ ಕೂಗಾಡಲಿ. ಬಟ್ಟೆ ಹರ್ಕೊಳ್ಳಲಿ. ನಾನು ತಲೆ ಕೆಡಿಸಿಕೊಳ್ಳಲ್ಲ. ರಾಜ್ಯಪಾಲರ ಹತ್ತಿರ ಯಾಕೆ ಹೋಗ್ತೀರಾ? ಪ್ರಧಾನಿ ಹಾಗೂ ರಾಷ್ಟ್ರಪತಿ ಹತ್ತಿರ ಹೋಗಿ ದೂರು ಕೊಡಲಿ. ನಿಜವಾಗಿಯೂ ಕುತೂಹಲ ಇದೆ. ಇವರು ಹೇಗೆ ಅಕ್ರಮ ಅಂತ ಸಾಭೀತು ಮಾಡ್ತಾರೆ ನೋಡೋಣ ಎಂದರು. ಇದನ್ನೂ ಓದಿ: Uttar Pradesh | ದುರ್ಗಾದೇವಿ ಮೂರ್ತಿ ವಿರ್ಸಜನೆ ವೇಳೆ ಕೋಮು ಸಂಘರ್ಷ – ಲಾಠಿ ಚಾರ್ಜ್, 30 ಮಂದಿ ಬಂಧನ

  • ಒಳಮೀಸಲಾತಿಗೆ ಕಾಂಗ್ರೆಸ್ ಮಾತ್ರ ಮೀನಾಮೇಷ ಎಣಿಸುತ್ತಿದೆ – ಆರ್.ಅಶೋಕ್

    ಒಳಮೀಸಲಾತಿಗೆ ಕಾಂಗ್ರೆಸ್ ಮಾತ್ರ ಮೀನಾಮೇಷ ಎಣಿಸುತ್ತಿದೆ – ಆರ್.ಅಶೋಕ್

    ಬೆಂಗಳೂರು: ಒಳಮೀಸಲಾತಿಗೆ ಕಾಂಗ್ರೆಸ್ (Congress) ಮಾತ್ರ ಮೀನಾಮೇಷ ಎಣಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ಕಿಡಿಕಾರಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳಮೀಸಲಾತಿಯ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿರುವುದನ್ನು ಸುಪ್ರೀಂ ಕೋರ್ಟ್ (Supreme Court) ಎತ್ತಿ ಹಿಡಿದಿದೆ. ಆದರೂ ಕಾಂಗ್ರೆಸ್ ಮಾತ್ರ ಮೀನಾಮೇಷ ಎಣಿಸುತ್ತಿದೆ. ಒಳ ಮೀಸಲಾತಿಗೆ ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಸಹಮತವಿದೆ. ತೆಲಂಗಾಣಕ್ಕೆ ಬಂದಾಗ ಒಳ ಮೀಸಲಾತಿಗೆ ಮೋದಿ ಅನುಮೋದನೆ ನೀಡಿದ್ದರು. ಹಿಂದೆ ಬಿಜೆಪಿ ಸರ್ಕಾರ ಕೂಡ ಈ ಕುರಿತು ಪ್ರಯತ್ನ ಮಾಡಿತ್ತು. ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು, ಒಳಮೀಸಲಾತಿ ಬಗ್ಗೆ ದೊಡ್ಡದಾಗಿ ಮಾತನಾಡುತ್ತಾರೆ. ಜಾತಿಗಣತಿಯ ಬಗ್ಗೆ ಶಂಖ ಊದುತ್ತಿರುತ್ತಾರೆ. ಒಳಮೀಸಲಾತಿಗೆ ಕಾಂಗ್ರೆಸ್ ಮಾತ್ರ ಇನ್ನೂ ಮೀನಾಮೇಷ ಎಣಿಸುತ್ತಿದೆ ಎಂದು ದೂರಿದರು.ಇದನ್ನೂ ಓದಿ: ಕೆರೆ ತುಂಬಿಸುವ ಯೋಜನೆ ರದ್ದು ಮಾಡಿಸಿದ್ದಕ್ಕೆ ಆಕ್ರೋಶ – ಶಿವಲಿಂಗೇಗೌಡಗೆ ಗ್ರಾಮಸ್ಥರಿಂದ ಘೇರಾವ್

    ರಾಜ್ಯದಲ್ಲಿ ಈಗ ಬರೀ ಎಸ್‌ಐಟಿ ಕಂಡುಬರುತ್ತಿದೆ. ಒಳಮೀಸಲಾತಿ ಮತ್ತು ಜಾತಿಗಣತಿ ವಿಚಾರದಲ್ಲೂ ಕಾಂಗ್ರೆಸ್ ಸರ್ಕಾರ ಎಸ್‌ಐಟಿ ರಚಿಸಿದರೆ ಅಚ್ಚರಿ ಇಲ್ಲ. ಇಲ್ಲಿ ಒಬ್ಬೊಬ್ಬರಿಗೆ ಒಂದೊಂದು ಕಾನೂನು ಅನ್ವಯವಾಗುತ್ತಿದ್ದು, ಎಸ್‌ಐಟಿಯ ಮೇಲೆ ಅನುಮಾನ ಹೆಚ್ಚಾಗಿ ಅದನ್ನೇ ತನಿಖೆ ಮಾಡುವ ಸ್ಥಿತಿ ಬಂದಿದೆ. ಎಸ್‌ಐಟಿ ಪ್ರಕಾರ, ಶಾಸಕ ಮುನಿರತ್ನ ಅವರಿಗೆ ಒಂದು ಕಾನೂನು, ವಿನಯ್ ಕುಲಕರ್ಣಿ ಅವರಿಗೆ ಒಂದು ಕಾನೂನು ಎಂಬಂತಾಗಿದೆ. ಎಸ್‌ಐಟಿಗಳ ನಿಜಬಣ್ಣ ಬಯಲು ಮಾಡಲು ಡಬಲ್ ಎಸ್‌ಐಟಿ ಎಂಬ ಘಟಕ ಸ್ಥಾಪಿಸಬೇಕಿದೆ ಎಂದು ವ್ಯಂಗ್ಯವಾಡಿದರು.

    ಕಾಂಗ್ರೆಸ್ ನ್ಯಾಯಾಲಯದ ಸರ್ಟಿಫಿಕೇಟ್ ಬೇಡ:
    ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕಾಂಗ್ರೆಸ್ ನಾಯಕರು ಚೆನ್ನಾಗಿ ಹಣ ನುಂಗಿದ್ದಾರೆ. ಇದರ ವಿರುದ್ಧ ಬಿಜೆಪಿ ಸಮರ್ಥವಾಗಿ ಪ್ರತಿಭಟನೆ ಮಾಡಿದೆ. ಬಿ.ಎಸ್.ಯಡಿಯೂರಪ್ಪನವರ (BS Yadiyurappa) ಪ್ರಕರಣಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಆದರೆ ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಗೆ ಯಾವುದೇ ತಡೆ ಇಲ್ಲ. ಈ ದೇಶದಲ್ಲಿ ನ್ಯಾಯಾಂಗವೇ ಉನ್ನತವಾದುದು. ಕಾಂಗ್ರೆಸ್ ನ್ಯಾಯಾಲಯದ ಸರ್ಟಿಫಿಕೇಟ್ ಬಿಜೆಪಿಗೆ ಬೇಕಿಲ್ಲ ಎಂದರು.

    ಸಂವಿಧಾನದ ಪ್ರಕಾರ ಸ್ಥಾಪನೆಯಾದ ನ್ಯಾಯಾಲಯದಲ್ಲಿ ಬಿಜೆಪಿಗೆ (BJP)   ಕ್ಲೀನ್‌ಚಿಟ್ ದೊರೆಯುತ್ತದೆ. ಆದರೆ ಕಾಂಗ್ರೆಸ್ ತನ್ನನ್ನು ತಾನೇ ನ್ಯಾಯಾಲಯ ಎಂದುಕೊಂಡಿದ್ದು, ಅಂತಹ ವ್ಯವಸ್ಥೆಯ ಅಗತ್ಯ ಯಾರಿಗೂ ಇಲ್ಲ. ದೇಶವನ್ನು ಸುಮಾರು ಅರವತ್ತು ವರ್ಷಗಳ ಕಾಲ ಕಾಂಗ್ರೆಸ್ ಲೂಟಿ ಮಾಡಿದ್ದು, ಅವರಿಗೆ ಯಾವುದೇ ನೈತಿಕತೆ ಇಲ್ಲ. ಅವರ ಕ್ಲೀನ್‌ಚಿಟ್ ಯಾರಿಗೂ ಬೇಕಿಲ್ಲ ಎಂದರು.ಇದನ್ನೂ ಓದಿ: ತಿಂಗಳಿಗೂ ಮೊದಲೇ ಸ್ಕೆಚ್‌, ಶೂಟರ್‌ಗಳಿಗೆ ತಲಾ 50,000 ಕಾಂಟ್ರ್ಯಾಕ್ಟ್‌ – ಸಿದ್ದಿಕಿ ಹಂತಕರ ಪ್ಲ್ಯಾನ್‌ ರೋಚಕ

  • ಜಾತಿಗಣತಿ ವರದಿ ಅನುಷ್ಠಾನ ಮಾಡ್ತೀವಿ- ಎಕ್ಸ್‌ನಲ್ಲಿ ಸಿಎಂ ಪುನರುಚ್ಚಾರ

    ಜಾತಿಗಣತಿ ವರದಿ ಅನುಷ್ಠಾನ ಮಾಡ್ತೀವಿ- ಎಕ್ಸ್‌ನಲ್ಲಿ ಸಿಎಂ ಪುನರುಚ್ಚಾರ

    ಬೆಂಗಳೂರು: ಜಾತಿಗಣತಿ ವರದಿ ಅನುಷ್ಠಾನ ಮಾಡೋದಾಗಿ ಸಿಎಂ ಸಿದ್ದರಾಮಯ್ಯ ಪುನರುಚ್ಚಾರ ಮಾಡಿದ್ದಾರೆ. ಜಾತಿಗಣತಿ ಸಂಬಂಧ ವಿಪಕ್ಷ ನಾಯಕ ಅಶೋಕ್ ಹೇಳಿಕೆಗೆ ತಮ್ಮ ಎಕ್ಸ್ ಖಾತೆಯಲ್ಲಿ ಸಿಎಂ (CM Siddaramaiah) ತಿರುಗೇಟು ನೀಡಿದ್ದಾರೆ.

    ಸಿಎಂ ಟ್ವೀಟ್ ಏನು?
    ಜಾತಿ ಜನಗಣತಿ ಬಗ್ಗೆ ಬಿಜೆಪಿಗೆ (BJP) ಯಾವ ತಕರಾರು-ವಿರೋಧ ಇಲ್ಲ. ಅದರ ಅನುಷ್ಠಾನಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂಬ ವಿರೋಧಪಕ್ಷದ ನಾಯಕರಾದ ಅಶೋಕ್ ಅವರ ಹೇಳಿಕೆಯನ್ನು ಓದಿ ಮನಸ್ಸು ನಿರಾಳವಾಯಿತು. ಅಶೋಕ್ ಅವರೇ, ನಮ್ಮ ಪಕ್ಷದೊಳಗಿನ ತಕರಾರುಗಳ ಬಗ್ಗೆ ತಲೆಕೆಡಿಸಿಕೊಳ್ಳಲು ಹೋಗಬೇಡಿ. ಅವುಗಳನ್ನು ನಾವು ಬಗೆಹರಿಸಿಕೊಳ್ಳುತ್ತೇವೆ. ಇದನ್ನೂ ಓದಿ: Jammu Kashmir Election Results| ಉಗ್ರರಿಂದ ಹತ್ಯೆಯಾಗಿದ್ದ ವ್ಯಕ್ತಿಯ ಮಗಳಿಗೆ ಒಲಿದ ಜಯ

    ನೀವು ನುಡಿದಂತೆ ನಡೆದರೆ ಜಾತಿ ಜನಗಣತಿ ಜಾರಿಯಾಗಿ ನೀವೇ ಹೇಳಿಕೊಂಡಿರುವ ನಿಮ್ಮ ಪಕ್ಷದ ಕನಸಿನ ʻಅಂತ್ಯೋದಯʼ ಸಾಕಾರಗೊಳ್ಳುತ್ತದೆ ಎಂಬ ವಿಶ್ವಾಸ ನನಗಿದೆ. ನೀವು ಮಾತ್ರ ಕೊಟ್ಟ ಮಾತಿಗೆ ತಪ್ಪಿ ನಡೆಯಬಾರದು ಅಷ್ಟೆ. 2018ರಲ್ಲಿ ಸಮೀಕ್ಷೆ ಪೂರ್ಣಗೊಂಡಿದ್ದರೂ ಅಂಕಿ ಅಂಶಗಳ ಪರಿಶೀಲನಾ ಕಾರ್ಯ ಪೂರ್ಣಗೊಳ್ಳದೆ ಇದ್ದ ಕಾರಣ ಆ ಅವಧಿಯಲ್ಲಿ ಕಾಂತರಾಜ್ ಆಯೋಗದ ವರದಿಯನ್ನು ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಇದಕ್ಕೆ ಬೇರೆ ಯಾವ ಕಾರಣಗಳು ಇರಲಿಲ್ಲ.

    ಈಗ ವರದಿ ಬಿಡುಗಡೆಗೆ ಸಿದ್ಧವಾಗಿದೆ. ಅದನ್ನು ಅಂಗೀಕರಿಸಲು ನಮ್ಮ ಪಕ್ಷ ಮತ್ತು ಸರ್ಕಾರ ಕೂಡಾ ಬದ್ಧವಾಗಿದೆ. ಅಶೋಕ್ (R Ashok) ಅವರೇ, ನಮ್ಮ ಪಕ್ಷದ ಎಲ್ಲ ನಾಯಕರು ತಾತ್ವಿಕವಾಗಿ ಜಾತಿಗಣತಿಯನ್ನು ಒಪ್ಪಿಕೊಂಡಿದ್ದಾರೆ. ಯಾರ ವಿರೋಧವೂ ಇಲ್ಲ. ವಿರೋಧ ಪಕ್ಷಗಳ ಸುಳ್ಳು ಪ್ರಚಾರದಿಂದಾಗಿ ಕೆಲವರಲ್ಲಿ ನಿರಾಧಾರವಾದ ಸಂಶಯಗಳು ಹುಟ್ಟಿಕೊಂಡಿವೆ. ಇನ್ನು ಕೆಲವರಲ್ಲಿ ತಪ್ಪು ಅಭಿಪ್ರಾಯಗಳಿಂದಾಗಿ ಗೊಂದಲಗಳಿವೆ. ಮಠಾಧೀಶರು ಸೇರಿದಂತೆ ಎಲ್ಲರ ಅನುಮಾನ, ಸಂಶಯಗಳನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಂಡು ಜಾತಿಗಣತಿ ವರದಿಯನ್ನು ಜಾರಿಗೆ ತರುವ ನಿರ್ಧಾರವನ್ನು ಶೀಘ್ರವಾಗಿ ಕೈಗೊಳ್ಳಲಾಗುವುದು. ಇದನ್ನೂ ಓದಿ: ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ – ಖಾತೆ ತೆರೆದ ಎಎಪಿ; ಬಿಜೆಪಿ ಅಭ್ಯರ್ಥಿ ವಿರುದ್ಧ ಮಲಿಕ್‌ ಜಯಭೇರಿ

    ಕಾಂತರಾಜ್ ಆಯೋಗ ನಡೆಸಿದ್ದ ಜಾತಿಗಣತಿಯ ವರದಿ ಇಲ್ಲಿಯವರೆಗೆ ಬಿಡುಗಡೆಯಾಗಿಲ್ಲ. ನಾನು ಕೂಡಾ ಅದನ್ನು ಓದಿಲ್ಲ. ಹೀಗಿರುವಾಗ ಅಶೋಕ್ ಅವರು ವರದಿ ಬಿಡುಗಡೆಯಾಗುವ ಮೊದಲೇ ಅದು ವೈಜ್ಞಾನಿಕವಾಗಿ ನಡೆದಿಲ್ಲ. ಅದರಲ್ಲಿ ತಪ್ಪುಗಳಿವೆ ಎಂದು ಆರೋಪಿಸುತ್ತಿದ್ದಾರೆ. ವರದಿ ಅವರಲ್ಲಿದೆಯೇ? ಯಾವ ಆಧಾರದಲ್ಲಿ ಅವರು ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎನ್ನುವುದನ್ನು ಅವರೇ ಸ್ಪಷ್ಟಪಡಿಸಬೇಕು.

    ಈಗ ಏಕಾಏಕಿಯಾಗಿ ವರದಿಯನ್ನು ಬಿಡುಗಡೆಗೊಳಿಸುವ ನಿರ್ಧಾರ ಯಾಕೆ ಎಂದು ಅಶೋಕ್ ಕೇಳುತ್ತಿದ್ದಾರೆ. ಇದೇನು ದಿಢೀರ್ ನಿರ್ಧಾರ ಅಲ್ಲ. ನಮ್ಮ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದ ಇದರ ಬಗ್ಗೆ ಸಮಾಲೋಚನೆ ನಡೆಸುತ್ತಾ ಬಂದಿದ್ದೇವೆ. ನಾವು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಉಳ್ಳವರು. ಯಾವುದೇ ಚರ್ಚೆ-ಸಂವಾದ ಇಲ್ಲದೆ ದಿಡೀರ್ ನಿರ್ಧಾರ ಕೈಗೊಳ್ಳುವ ಸರ್ವಾಧಿಕಾರಿ ಧೋರಣೆ ನಮ್ಮದ್ದಲ್ಲ. ಸಾರ್ವಜನಿಕ ತೀರ್ಮಾನಗಳನ್ನು ಸಹಮತ ಮೂಡಿಸುವ ಮೂಲಕ ಕೈಗೊಳ್ಳಬೇಕೆಂಬ ಅಭಿಪ್ರಾಯ ನಮ್ಮದಾಗಿದೆ. ಇದರಿಂದಾಗಿ ಸ್ವಲ್ಪ ವಿಳಂಬವಾಗಿದೆ ಅಷ್ಟೆ.

    ಜಾತಿಗಣತಿಯನ್ನು ರಾಜಕೀಯ ದಾಳವಾಗಿ ಬಳಸುವುದು ದಲಿತರು ಮತ್ತು ಹಿಂದುಳಿದವರಿಗೆ ಮಾಡುವ ಅವಮಾನವಲ್ಲವೇ ಎಂದು ಅಶೋಕ್ ಅವರು ಅಮಾಯಕರಂತೆ ಪ್ರಶ್ನಿಸಿದ್ದಾರೆ. ಸನ್ಮಾನ್ಯ ಅಶೋಕ್ ಅವರೇ, ನಾನು ಮತ್ತೆ ಮತ್ತೆ ಹೇಳುತ್ತಿದ್ದೇನೆ. ಇದು ಕೇವಲ ಜಾತಿ ಜನಗಣತಿ ಅಲ್ಲ. ಇದು ಸರ್ವರ ಒಳಿತಿಗಾಗಿ ನಡೆಸಲಾದ ರಾಜ್ಯದ ಏಳು ಕೋಟಿ ಜನತೆಯ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ. ಇದನ್ನು ಇಲ್ಲಿಯವರೆಗೆ ದಲಿತರಾಗಲಿ, ಹಿಂದುಳಿದ ಜಾತಿಯವರಾಗಲಿ ವಿರೋಧಿಸಿಲ್ಲ. ಹೀಗಿರುವಾಗ ಅವರಿಗೆ ಅವಮಾನವಾಗಿದೆ ಎಂದು ಹೇಗೆ ಹೇಳುತ್ತೀರಿ? ಇದನ್ನೂ ಓದಿ: ಹರಿಯಾಣದಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ, ಜನರ ತೀರ್ಪನ್ನು ಒಪ್ಪಿಕೊಳ್ತೀವಿ: ಡಿಸಿಎಂ ಡಿ.ಕೆ.ಶಿವಕುಮಾರ್

    ಜಾತಿ ಜನಗಣತಿ ವಿರುದ್ಧ ತಳ ಸಮುದಾಯಗಳನ್ನು ಎತ್ತಿಕಟ್ಟುವ ಉದ್ದೇಶ ನಿಮ್ಮದಾಗಿದ್ದರೆ ನಿಮಗೆ ನಿರಾಶೆ ಖಚಿತ. ಜಾತಿಗಣತಿ ನನ್ನ ಕನಸಿನ ಕೂಸು ಎಂದು ಹೇಳಲು ಯಾವ ಹಿಂಜರಿಕೆಯೂ ಇಲ್ಲ. 1992ರಲ್ಲಿ ಸುಪ್ರೀಂ ಕೋರ್ಟ್ (Supreme Court) ಮಂಡಲ ವರದಿಗೆ ಸಂಬಂಧಿಸಿದಂತೆ ನೀಡಿದ್ದ ಆದೇಶದಲ್ಲಿ ರಾಜ್ಯದಲ್ಲಿ ಶಾಶ್ವತ ಹಿಂದುಳಿದ ಆಯೋಗವನ್ನು ರಚಿಸಿ, ಕಾಲಕಾಲಕ್ಕೆ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಬೇಕು ಎಂದು ಸೂಚಿಸಿತ್ತು. ಇದರಂತೆ 1995ರಲ್ಲಿ ನಾನು ಹಣಕಾಸು ಸಚಿವನಾಗಿದ್ದಾಗ ರಾಜ್ಯದಲ್ಲಿ ಶಾಶ್ವತ ಹಿಂದುಳಿದ ಜಾತಿಗಳ ಆಯೋಗವನ್ನು ರಚಿಸಿದ್ದೆ. 2014ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಸಮಸ್ತ ಜನತೆಯ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಲು ಆದೇಶ ನೀಡಿದ್ದೆ. ಇದು ದೇಶದಲ್ಲಿಯೇ ಪ್ರಥಮ ಪ್ರಯತ್ನ ಎಂದು ಹೇಳಲು ನನಗೆ ಹೆಮ್ಮೆಯಿದೆ. ಇದನ್ನೂ ಓದಿ: Haryana Results| ಕಾಂಗ್ರೆಸ್‌ ಸೋತಿದ್ದು ಹೇಗೆ? – ಇಲ್ಲಿದೆ 6 ಕಾರಣಗಳು

    ಜಾತಿಗಣತಿ ಬಗ್ಗೆ ನನ್ನ ಬದ್ಧತೆಯನ್ನು ಪ್ರಶ್ನಿಸುತ್ತಿರುವ ಅಶೋಕ್ ಅವರು, ತಮ್ಮ ಪಕ್ಷ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲಿಯೂ ಜಾತಿಗಣತಿ ನಡೆಸುವ ಧೈರ್ಯವನ್ನು ಯಾಕೆ ಮಾಡಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಬೇಕು. ಕಳೆದ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಜಾತಿಗಣತಿ ನಡೆಸುವುದನ್ನು ನಮ್ಮ ಪಕ್ಷ ಪ್ರಣಾಳಿಕೆಯಲ್ಲಿ ಸೇರಿಸಿದೆ. ನಮ್ಮ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಮತ್ತೆ ಮತ್ತೆ ಅದನ್ನು ಒತ್ತಿ ಒತ್ತಿ ಹೇಳುತ್ತಿದ್ದಾರೆ. ಬಿಜೆಪಿ ಪಕ್ಷಕ್ಕೆ ಜಾತಿಗಣತಿ ಬಗ್ಗೆ ತಕರಾರು ಇಲ್ಲದೆ ಇದ್ದರೆ ಪಕ್ಷದ ನಾಯಕರು ಯಾಕೆ ಇದಕ್ಕೆ ಸಹಮತ ವ್ಯಕ್ತಪಡಿಸದೆ ಅವರನ್ನು ಟೀಕಿಸುತ್ತಿದ್ದಾರೆ. ಮೀಸಲಾತಿ ಬಗ್ಗೆಯಾಗಲಿ, ಒಟ್ಟು ಸಾಮಾಜಿಕ ನ್ಯಾಯದ ಬಗ್ಗೆಯಾಗಲಿ ಭಾರತೀಯ ಜನತಾ ಪಕ್ಷ ಮತ್ತು ಆರ್‌ಎಸ್‌ಎಸ್ ನಿಲುವು ಏನು ಎನ್ನುವುದನ್ನು ದೇಶದ ಜನತೆ ಅರ್ಥಮಾಡಿಕೊಂಡಿದ್ದಾರೆ. ನೀವು ಯಾವ ವೇಷ ಧರಿಸಿ ಬಣ್ಣ ಬಳಿದುಕೊಂಡು ಮಾತನಾಡಿದರೂ ನಿಮ್ಮ ಆಂತರ್ಯದ ಅಭಿಪ್ರಾಯ ಏನೆಂಬುದು ಜನರಿಗೆ ತಿಳಿದಿದೆ. ಇದನ್ನೂ ಓದಿ: ಬಿಎಂಟಿಸಿ ಬಸ್‌ಗೆ ಬೈಕ್‌ ಡಿಕ್ಕಿ – ಮಹಿಳೆ ಸ್ಥಳದಲ್ಲೇ ಸಾವು

    ಜಾತಿಗಣತಿ ಬಗ್ಗೆ ತಕರಾರು ಇಲ್ಲ ಎಂದು ಹೇಳುತ್ತಿರುವ ಅಶೋಕ್ ಅವರೇ, ನೀವು ಇದೇ ಮಾತನ್ನು ಪ್ರಧಾನಿ ಮೋದಿ ಅವರಿಗೆ ಹೇಳಿ. ರಾಷ್ಟ್ರಮಟ್ಟದಲ್ಲಿ ಜನಗಣತಿಯ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವಂತೆ ಒತ್ತಡ ಹೇರಿ. ನಿಮ್ಮ ಬದ್ಧತೆ ಮತ್ತು ಸತ್ಯಸಂಧತೆಯನ್ನು ಸಾಬೀತುಪಡಿಸಿ. ಇಲ್ಲದೆ ಇದ್ದರೆ ನೀವು ಕೂಡಾ ಇತ್ತೀಚೆಗೆ ನಿಮ್ಮ ಮೇಲೆ ಬಂದಿರುವ ಆರೋಪಗಳಿಂದ ತಪ್ಪಿಸಿಕೊಳ್ಳಲು ವಿನಾಕಾರಣ ಜಾತಿ ಜನಗಣತಿಯ ವಿವಾದವನ್ನು ಪ್ರಸ್ತಾಪಿಸುತ್ತಿದ್ದೀರಿ ಎಂದು ಆರೋಪಿಸಬೇಕಾಗುತ್ತದೆ ಎಂದು ವಿಪಕ್ಷ ನಾಯಕ ಅಶೋಕ್‌ಗೆ ಸಿಎಂ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಕಟೀಲು ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದ ನಟ ಶ್ರೀಮುರಳಿ