Tag: r ashok

  • ಹರಿಯಾಣದಲ್ಲಿ ಬಿಜೆಪಿ ಧೂಳಿಪಟ ಆಗುತ್ತೆ ಅಂತ ವಿಪಕ್ಷಗಳು ಬೊಬ್ಬೆ ಹಾಕ್ತಿದ್ವು – ವಿಜಯೇಂದ್ರ

    ಹರಿಯಾಣದಲ್ಲಿ ಬಿಜೆಪಿ ಧೂಳಿಪಟ ಆಗುತ್ತೆ ಅಂತ ವಿಪಕ್ಷಗಳು ಬೊಬ್ಬೆ ಹಾಕ್ತಿದ್ವು – ವಿಜಯೇಂದ್ರ

    – ಮೋದಿ ಅವರ ಕೆಲಸ, ವರ್ಚಸ್ಸು ಗೆಲುವು ತರಲಿದೆ ಎಂದ ಆರ್.ಅಶೋಕ್

    ಬೆಂಗಳೂರು: ಹರಿಯಾಣದಲ್ಲಿ (Hariyana) ಬಿಜೆಪಿ (BJP) ಧೂಳಿಪಟ ಆಗುತ್ತದೆ ಎಂದು ವಿಪಕ್ಷಗಳು ಬೊಬ್ಬೆ ಹಾಕುತ್ತೀವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಹೇಳಿದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹರಿಯಾಣದಲ್ಲಿ ಬಿಜೆಪಿ ಧೂಳಿಪಟ ಆಗುತ್ತದೆ ಎಂದು ವಿಪಕ್ಷಗಳು ಬೊಬ್ಬೆ ಹಾಕುತ್ತಿದ್ದವು. ಆದರೆ ಬಿಜೆಪಿ ಸತತವಾಗಿ ಮೂರನೇ ಬಾರಿಗೆ ಅಧಿಕಾರದತ್ತ ದಾಪುಗಾಲು ಇಡುತ್ತಿದೆ. 3ನೇ ಬಾರಿ ಬಿಜೆಪಿ ಅಧಿಕಾರದತ್ತ ಬರ್ತಿದೆ ಎನ್ನುವುದು ಸಂತೋಷದ ವಿಷಯವಾಗಿದೆ ಎಂದರು.

    ಚುನಾವಣಾ ಫಲಿತಾಂಶ ವಿಚಾರವಾಗಿ ವಿಪಕ್ಷ ನಾಯಕ ಆರ್.ಅಶೋಕ್ (R Ashok) ಮಾತನಾಡಿ, ಚುನಾವಣಾ ಫಲಿತಾಂಶ ಬಿಜೆಪಿ ಪರವಾಗಿ ಬರುತ್ತಿದೆ ಎನ್ನುವದು ಮೇಲ್ನೋಟಕ್ಕೆ ಕಂಡು ಬರ್ತಿದೆ. ಇದೇ ಮುಂದುವರೆದರೆ ಬಿಜೆಪಿ ಬಹುಮತ ಶತಸಿದ್ದ. ಸಮೀಕ್ಷೆ ಫಲಿತಾಂಶಕ್ಕೆ ಅಜಗಜಾಂತರ ವ್ಯತ್ಯಾಸ ಇದೆ. ಬಿಜೆಪಿ ಎರಡೂ ರಾಜ್ಯಗಳಲ್ಲಿ ಸರ್ಕಾರ ರಚನೆ ಮಾಡಬಹುದು. ಮೋದಿ ಅವರ ಕೆಲಸ, ವರ್ಚಸ್ಸು ಈ ಗೆಲುವು ತರಲಿದೆ. ಇದೇ ಟ್ರೆಂಡ್ ಇದ್ದರೆ ಬಿಜೆಪಿ ಗೆಲ್ಲಲಿದೆ ಎಂದು ಹೇಳಿದರು.ಇದನ್ನೂ ಓದಿ: Jammu Kashmir Results | ಅಧಿಕಾರದತ್ತ ಎನ್‌ಸಿ, ಕಾಂಗ್ರೆಸ್‌ ಮೈತ್ರಿ – ಬಿಜೆಪಿಗೆ ಹಿನ್ನಡೆ

    ಜಾತಿ ಜನಗಣತಿ ವಿಚಾರ:
    ವಿಜಯೇಂದ್ರ ಮಾತನಾಡಿ, ಇದು ನನ್ನ ವೈಯಕ್ತಿಕ ಅಭಿಪ್ರಾಯ ವರದಿ ಅವೈಜ್ಞಾನಿಕವಾಗಿ ಇದೆ. ಕಾಂಗ್ರೆಸ್ (Congress) ನಾಯಕರು ಸಹ ಇದೇ ಹೇಳಿದ್ದಾರೆ. ಬಿಜೆಪಿ ಸ್ಪಷ್ಟ ನಿಲುವನ್ನು ಹೊಂದಿದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ, ಹಿಂದುಳಿದ ದಲಿತ ವರ್ಗಕ್ಕೂ ಸಾಮಾಜಿಕ ನ್ಯಾಯ ಸಿಗಬೇಕು. ಈಗ ಸಿದ್ದರಾಮಯ್ಯ ಅವರ ಕುರ್ಚಿ ಅಲ್ಲಾಡುತ್ತಿದೆ. ಅದಕ್ಕಾಗಿ ಈಗ ಜಾತಿಗಣತಿ ವಿಚಾರ ಮುನ್ನೆಲೆಗೆ ಬಂದಿದೆ. ಆದರೆ ಇದು ಅವೈಜ್ಞಾನಿಕ ಎಂದು ಶಾಮನೂರು ಹೇಳಿದ್ದಾರೆ. ಡಿಕೆಶಿ ಕೂಡ ಒಕ್ಕಲಿಗ ಸಮುದಾಯಕ್ಕೆ ಅನ್ಯಾಯ ಆಗುತ್ತದೆ ಎಂದಿದ್ದಾರೆ. ಖರ್ಗೆ ಹೇಳಿದ್ದನ್ನು ಎಲ್ಲರೂ ಗಮನಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಜಾತಿಗಣತಿ ಮಾಡೋಕೆ ಅವಕಾಶ ಇಲ್ಲ. ವರದಿ ಜಾರಿಗೆ ಯಾಕೆ ಇಷ್ಟೊಂದು ಆತುರ? ಈ ಮೊದಲು ನೀವೇ ಅಧಿಕಾರದಲ್ಲಿ ಇದ್ದಾಗ ಯಾಕೆ ಬಿಡುಗಡೆ ಮಾಡಿಲ್ಲ. ಖರ್ಚಿಯಲ್ಲಿ ಸಿದ್ದರಾಮಯ್ಯ ಜಾಸ್ತಿ ದಿನ ಇರುವುದಿಲ್ಲ. ಆದರೆ ಅವರ ಮೊಂಡುತನ ಜಾಸ್ತಿ ದಿನ ನಡೆಯಲ್ಲ. ಹೀಗಾಗಿ ಇದೊಂದು ಬ್ರಹ್ಮಾಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ ಎಂದರು.

    ಸಿಎಂ ಕುರ್ಚಿ ವಿಚಾರ:
    ಆರ್.ಅಶೋಕ್ ಮಾತನಾಡಿ, ಮುಡಾ ಹಗರಣ ಮುಚ್ಚಿ ಹಾಕಲು ಸಿದ್ದರಾಮಯ್ಯ (CM Siddaramaiah) ಇಲ್ಲಸಲ್ಲದ ಕಸರತ್ತು ನಡೆಸುತ್ತಿದ್ದಾರೆ. ಬಿಜೆಪಿಯವರನ್ನು ಟೀಕಿಸುವ ಮೊದಲು ನಿಮ್ಮ ಪಕ್ಷದಲ್ಲಿ ಏನಾಗುತ್ತಿದೆ ಎಂದು ನೋಡಿ. ನಿಮ್ಮ ಪಕ್ಷದಲ್ಲಿ ಸಿಎಂ ಆಗಲು ರನ್ನಿಂಗ್ ರೇಸ್ ನಡೆಯುತ್ತಿದೆ. ನಿತ್ಯ ಪ್ರತ್ಯೇಕ ಸಭೆಗಳನ್ನು ಮಾಡುತ್ತಿದ್ದಾರೆ. ಪರಸ್ಪರ ಸಭೆ ನಡೆಸಿ, ತಿಂಡಿ ಭಾಗ್ಯ ಮಾಡಿಕೊಂಡಿದ್ದಾರೆ. ಸಿಎಂ ಇಳಿಸಲು ಸಚಿವರು ಬ್ರೇಕ್‌ಫಾಸ್ಟ್ ಮೀಟಿಂಗ್, ಡಿನ್ನರ್ ಮೀಟಿಂಗ್‌ಗಳಲ್ಲಿ ಮುಳುಗಿದ್ದಾರೆ ಎಂದು ವ್ಯಂಗ್ಯವಾಡಿದರು.

    ನಿಮ್ಮ ಪಕ್ಷದಲ್ಲೇ ಒಡಕಿದೆ, ಅದನ್ನು ಸರಿ ಮಾಡದೇ ಬಿಜೆಪಿ, ಜೆಡಿಎಸ್ (JDS) ಮೇಲೆ ವಕ್ರದೃಷ್ಟಿ ಬೀರುತ್ತಿದ್ದಾರೆ. ಸಿಎಂ ಎಷ್ಟು ದಿನ ಅಧಿಕಾರದಲ್ಲಿ ಇರುತ್ತಾರೆ? ಸಿಎಂ ಇಳಿತಾರೆ ಎಂದು ನಿಮ್ಮ ಪಕ್ಷದಲ್ಲೇ ದೊಡ್ಡ ಗಾಳಿ ಸುದ್ದಿ ಹಬ್ಬಿದೆ. ಮಂತ್ರಿಗಳು ಜಿಲ್ಲಾ ಪ್ರವಾಸ ಮಾಡುತ್ತಿಲ್ಲ. ಈ ಸರ್ಕಾರ ತೊಲಗಲಿ ಎಂದು ಜನ ಕೂಡ ಬಯಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಚುನಾವಣಾ ಫಲಿತಾಂಶದಲ್ಲಿ ಹಿನ್ನಡೆ – ಆಯೋಗದ ವೆಬ್‌ಸೈಟ್‌ ದೂರಿದ ಕಾಂಗ್ರೆಸ್‌

  • ಕಾಂಗ್ರೆಸ್‌ನವರಿಂದಲೇ ವಿಪಕ್ಷಕ್ಕೆ ಮುಡಾ ದಾಖಲೆಗಳು ಸಿಗುತ್ತಿವೆ: ಅಶೋಕ್

    ಕಾಂಗ್ರೆಸ್‌ನವರಿಂದಲೇ ವಿಪಕ್ಷಕ್ಕೆ ಮುಡಾ ದಾಖಲೆಗಳು ಸಿಗುತ್ತಿವೆ: ಅಶೋಕ್

    ಚಿತ್ರದುರ್ಗ: ಕಾಂಗ್ರೆಸ್‌ನವರಿಂದಲೇ (Congress) ವಿಪಕ್ಷಕ್ಕೆ ದಾಖಲೆಗಳು ಸಿಗುತ್ತಿವೆ ಎಂದು ಪ್ರತಿ ಪಕ್ಷದ ನಾಯಕ ಆರ್ ಅಶೋಕ್ (R Ashok) ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಚಿತ್ರದುರ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಕುರ್ಚಿಗಾಗಿ ಏಳೆಂಟು ಜನ ಸಚಿವರು ಟವಲ್‌ ಹಾಕಿದ್ದು, ಸಿದ್ಧರಾಮಯ್ಯಗೆ (Siddaramaiah) ಅವರ ಪಕ್ಷದವರೇ ವಿರೋಧಿಗಳಾಗಿದ್ದಾರೆ. ಸಿಎಂ ಅವರನ್ನು ಕೆಳಗಿಳಿಸಲು ಕಾಂಗ್ರೆಸ್‌ನವರಿಂದಲೇ (Congress) ವಿಪಕ್ಷಕ್ಕೆ ದಾಖಲೆಗಳು ಸಿಗುತ್ತಿವೆ. ಆದರೆ ಸುಖಾಸುಮ್ಮನೆ ಬಿಜೆಪಿಯಿಂದ (BJP) ಸರ್ಕಾರ ಅತಂತ್ರ ಯತ್ನ ಆರೋಪ ಮಾಡುತ್ತಿದ್ದಾರೆ. ಮುಡಾ ದಾಖಲೆ ಕೊಟ್ಟವನು ಯಾರು? ತೆಗೆದುಕೊಂಡವನು ಯಾರು ಎಂದು ಹೇಳಲಿ ಎಂದು ಪ್ರಶ್ನಿಸಿದರು.

     

    ಮುಡಾ ಪ್ರಕರಣವನ್ನು ಪ್ರಶ್ನಿಸಿದ್ದಕ್ಕೆ ಕಾಂಗ್ರೆಸ್‌ನವರು ನನ್ನ ರಾಜೀನಾಮೆ ಕೇಳಿದ್ದರು. ಹೀಗಾಗಿ ನಾನು ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆಗೆ ನೀಡಲು ಸಿದ್ಧನಿದ್ದೇನೆ ಎಂದು ಹೇಳಿದ್ದೇನೆ. 24 ಗಂಟೆಯ ಗಡುವು ಮುಗಿಯಲು ಇನ್ನೂ ಸಮಯವಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದವರು ಧೈರ್ಯ ತೋರಿಸಲಿ ಎಂದು ಸವಾಲು ಎಸೆದರು. ಇದನ್ನೂ ಓದಿ: ಮಲ್ಲಿಕಾರ್ಜುನ್ ಖರ್ಗೆಯನ್ನು ಭೇಟಿಯಾದ ಸತೀಶ್ ಜಾರಕಿಹೊಳಿ

    ಹೆಚ್‌ಡಿಕೆ ಹಾಗೂ ಆರ್.ಅಶೋಕ್ ಹುಚ್ಚರಂತೆ ಮಾತನಾಡುತ್ತಾರೆ ಎಂಬ ಬೋಸರಾಜು ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಅಧಿಕಾರ ಹಣ ಇದ್ದಾಗ ಆ ರೀತಿಯ ಮಾತುಗಳನ್ನಾಡುತ್ತಾರೆ. ಆದರೆ ನಾನು ಕೆಳಮಟ್ಟಕ್ಕಿಳಿದು ಪ್ರತಿಕ್ರಿಯಿಸಲು ಹೋಗುವುದಿಲ್ಲ ಎಂದರು.

     

    14 ಜನ ಶಾಸಕರಿಗೆ ಆಪರೇಷನ್ ಕಮಲಕ್ಕೆ ಯತ್ನ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಆ ಶಾಸಕರು ಯಾರೆಂದು ಹೇಳಲಿ ಮತ್ತು ದೂರು ದಾಖಲಿಸಲಿ. ನಾವು ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಿಸಲು ಹೋಗಲ್ಲ. ಪಾಪದ ಕೊಡ ತುಂಬಿ ಅವರಾಗಿಯೇ ಬೀಳಬೇಕು. ನಾವು ಬೀಳಿಸಲ್ಲ ಎಂದು ಸ್ಪಷ್ಟಪಡಿಸಿದರು.

  • MUDA Scam | ಸಿಎಂ ತಮ್ಮ ಕಾಲಿನ ಮೇಲೆ ಹತ್ತಾರು ಕಲ್ಲು ಹಾಕಿಕೊಂಡು ಔಷಧಿ ಇಲ್ಲದಂತೆ ಮಾಡಿಕೊಂಡಿದ್ದಾರೆ – ಸೋಮಣ್ಣ

    MUDA Scam | ಸಿಎಂ ತಮ್ಮ ಕಾಲಿನ ಮೇಲೆ ಹತ್ತಾರು ಕಲ್ಲು ಹಾಕಿಕೊಂಡು ಔಷಧಿ ಇಲ್ಲದಂತೆ ಮಾಡಿಕೊಂಡಿದ್ದಾರೆ – ಸೋಮಣ್ಣ

    ಗದಗ: ಮುಡಾ ಹಗರಣದಲ್ಲಿ (MUDA Scam) ಸಿದ್ದರಾಮಯ್ಯ ಅವರು ಕಾಲಿನ ಮೇಲೆ ಒಂದು ಕಲ್ಲು ಹಾಕಿಕೊಳ್ಳುವ ಬದಲು ಹತ್ತಾರು ಕಲ್ಲು ಹಾಕಿಕೊಂಡು, ಔಷಧಿ ಇಲ್ಲದ ಹಾಗೆ ಮಾಡಿಕೊಂಡಿದ್ದಾರೆ. ಕಾನೂನು ಇದೆ, ಕಾನೂನು ಯಾವ ರೀತಿ ತೀರ್ಮಾನ ಮಾಡುತ್ತೆ ನೋಡೋಣ. ಸಿಎಂ ನಾನು ಒಟ್ಟಿಗೆ ರಾಜಕೀಯಕ್ಕೆ ಬಂದವರು. ಮುಡಾ ಪ್ರಕರಣ ಜಗತ್ ಜಾಹೀರವಾಗಿದೆ. ಅದನ್ನು ಸಿಎಂ ಅರ್ಥ ಮಾಡಿಕೊಳ್ಳುತ್ತಿಲ್ಲ. ನಾವು ಬೇರೆ ಭಾಷೆಯಲ್ಲಿ ಮಾತನಾಡಲು ಆಗೋದಿಲ್ಲ, ನಮಗೆ ಸಂಸ್ಕಾರ ಇದೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ( V Somanna) ಸಿಎಂ ವಿರುದ್ಧ ಕಿಡಿಕಾರಿದ್ದಾರೆ.

    ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿ ಟಿ ದೇವೇಗೌಡ (G T Devegowda) ಅವರು ಸಿಎಂ ಪರ ಯಾಕೆ ಮಾತನಾಡಿದರು ಎಂದು ಅವರನ್ನೇ ಕೇಳಬೇಕು, ಅವ್ರು ಸೀನಿಯರ್ ರಾಜಕಾರಣಿ. ಯಾಕೆ ಹೀಗೆ ಹೇಳ್ತಾರೆ ಅದು ಅವರಿಗೆ ಗೊತ್ತಿದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: Photo Gallery | ಮಂಗಳೂರಿನಲ್ಲಿ ಕಳೆಗಟ್ಟಿದ ದಸರಾ ಸಂಭ್ರಮ – ಶಾರದಾ ಮಾತೆಗೆ ದಿವ್ಯಾಲಂಕಾರ

    ಶಾಸನ ಸಭೆಯಲ್ಲಿ ಸೈಟ್ ವಾಪಸ್ ಕೊಡಬೇಕಾಗಿತ್ತು. ಆರ್ ಅಶೋಕ್‌ನ ( R Ashok) ಸೈಟ್ ವಿಚಾರವನ್ನು ಇಟ್ಟುಕೊಂಡಿದ್ದೀರಿ. ಈ ಪ್ರಕರಣಕ್ಕೆ ಏನು ಸಂಬಂಧ. ಅಶೋಕ್ ಆಗಲೇ ವಾಪಸ್ ನೀಡಿದ್ರು, ನೀವು ಕೂಡ ಆವಾಗಲೇ ಕೊಡಬೇಕಾಗಿತ್ತು. ಸಿಎಂ ಸ್ಥಾನ ಶಾಶ್ವತವಲ್ಲ. ವ್ಯವಸ್ಥೆಯಲ್ಲಿ ಯಾರು ದೊಡ್ಡವರಲ್ಲ. ಕಾನೂನು ಎಲ್ಲರಿಗೂ ಒಂದೇ ಎಂದು ಟಾಂಗ್ ನೀಡಿದರು. ಈ ವೇಳೆ ಬಿಜೆಪಿ (BJP) ಜಿಲ್ಲಾಧ್ಯಕ್ಷ ರಾಜು ಕುರುಡಗಿ, ಕಾಂತಿಲಾಲ ಬಣಸಾಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇದನ್ನೂ ಓದಿ: ಮಣಿಪುರದಲ್ಲಿ 2 ಗುಂಪುಗಳ ನಡುವೆ ಘರ್ಷಣೆ – ಗುಂಡಿನ ಚಕಮಕಿಯಲ್ಲಿ ಮೂವರು ಸಾವು, 20 ಮಂದಿಗೆ ಗಾಯ

  • ಹಿಂದೂಗಳನ್ನ ಟೀಕೆ ಮಾಡೋದನ್ನ ಕಾಂಗ್ರೆಸ್ ಬ್ರ‍್ಯಾಂಡ್ ಮಾಡಿಕೊಂಡಿದೆ: ಅಶೋಕ್

    ಹಿಂದೂಗಳನ್ನ ಟೀಕೆ ಮಾಡೋದನ್ನ ಕಾಂಗ್ರೆಸ್ ಬ್ರ‍್ಯಾಂಡ್ ಮಾಡಿಕೊಂಡಿದೆ: ಅಶೋಕ್

    ಬೆಂಗಳೂರು: ಕಾಂಗ್ರೆಸ್‌ನವರಿಗೆ (Congress) ಹಿಂದೂಗಳೇ (Hindu) ಟಾರ್ಗೆಟ್. ಹಿಂದೂಗಳನ್ನ ಟೀಕೆ ಮಾಡೋದನ್ನ ಕಾಂಗ್ರೆಸ್ ಬ್ರ‍್ಯಾಂಡ್ ಮಾಡಿಕೊಂಡಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ (R Ashok) ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಸಾವರ್ಕರ್ (Vinayak Damodar Savarkar) ದನದ ಮಾಂಸ ತಿನ್ನುತ್ತಿದ್ದರು ಎಂಬ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಅವರಿಗೆ ಸಾವರ್ಕರ್ ವಿಲನ್ ಆಗಿದ್ದಾರೆ. ಅದಕ್ಕೆ ಹೀಗೆಲ್ಲ ಮಾತನಾಡುತ್ತಾರೆ. ಸಾವರ್ಕರ್ ಕಾಲಾಪಾನಿ ಶಿಕ್ಷೆ ಒಳಗಾಗಿದ್ದವರು, ಸ್ವಾತಂತ್ರ‍್ಯ ಹೋರಾಟಗಾರರು. ಈಗ ಅವರು ಸತ್ತು ಸ್ವರ್ಗದಲ್ಲಿ ಇದ್ದಾರೆ. ಯಾಕೆ ಅವರ ಬಗ್ಗೆ ಅಪಾದನೆ ಮಾಡುತ್ತಿದ್ದೀರಾ ಎಂದು ಕಿಡಿಕಾರಿದರು. ಇದನ್ನೂ ಓದಿ: ನಾನು ರಾಜೀನಾಮೆ ಕೊಡ್ತೀನಿ, ಸಿದ್ದರಾಮಯ್ಯನವರೂ ನೈತಿಕತೆ ಹೊತ್ತು ರಾಜೀನಾಮೆ ನೀಡಲಿ – ಆರ್.ಅಶೋಕ್‌

    ಕಾಂಗ್ರೆಸ್ ಅವರಿಗೆ ಕೇಸರಿ ಶಾಲು ಹಾಕಬಾರದು. ನಾಮ ಹಾಕಬಾರದು. ಕುಂಕುಮ ಇಡೋದು ಆಗಲ್ಲ. ಮುಂದೆ ಹೆಣ್ಣುಮಕ್ಕಳು ಬಳೆ, ಕುಂಕುಮ ಹಾಕೋದಕ್ಕೂ ವಿರೋಧ ಮಾಡುತ್ತಾರೆ. ಕಾಂಗ್ರೆಸ್ ಅವರು ಮೊದಲು ಹಿಂದೂಗಳನ್ನು ತೆಗಳೋದು ಬಿಡಬೇಕು. ಹಿಂದೂಗಳನ್ನ ಮಾತ್ರ ಯಾಕೆ ಟೀಕೆ ಮಾಡುತ್ತೀರಾ? ಮುಸ್ಲಿಮರಿಗೆ ಒಂದು ಮಾತು ಆಡಿದ್ದೀರಾ ನೀವು? ಹಿಂದೂಗಳನ್ನು ಮಾತ್ರ ಟಾರ್ಗೆಟ್ ಯಾಕೆ ಮಾಡುತ್ತೀರಿ ಎಂದು ಹರಿಹಾಯ್ದರು. ಇದನ್ನೂ ಓದಿ: ಚಾರಣಕ್ಕೆ ಅನ್‌ಲೈನ್‌ ಟಿಕೆಟ್‌ – ಅರಣ್ಯ ವಿಹಾರ ವೆಬ್‌ಸೈಟ್‌ ಲೋಕಾರ್ಪಣೆ

    ಮುಸ್ಲಿಮರು ಒಂದೇ ದೇವರು ಅಂತಾರೆ. ನಾವು ಮುಕ್ಕೋಟಿ ದೇವರನ್ನು ಪೂಜೆ ಮಾಡುತ್ತೇವೆ. ಬೆಳೆಯನ್ನು ನಾವು ಪೂಜೆ ಮಾಡುತ್ತೇವೆ. ನಮ್ಮ ಧರ್ಮ ಯಾಕೆ ಅವಹೇಳನ ಮಾಡುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ನಾನು ಬಳ್ಳಾರಿ ಹೋಗೋವಾಗ ಪಾದಯಾತ್ರೆ ಮಾಡಿ ಸಿಎಂ ಆದವರು ಮನ:ಶಾಂತಿ ಕಳೆದುಕೊಂಡಿದ್ದಾರೆ: ಜನಾರ್ದನ ರೆಡ್ಡಿ

  • ನಾನು ರಾಜೀನಾಮೆ ಕೊಡ್ತೀನಿ, ಸಿದ್ದರಾಮಯ್ಯನವರೂ ನೈತಿಕತೆ ಹೊತ್ತು ರಾಜೀನಾಮೆ ನೀಡಲಿ – ಆರ್.ಅಶೋಕ್‌

    ನಾನು ರಾಜೀನಾಮೆ ಕೊಡ್ತೀನಿ, ಸಿದ್ದರಾಮಯ್ಯನವರೂ ನೈತಿಕತೆ ಹೊತ್ತು ರಾಜೀನಾಮೆ ನೀಡಲಿ – ಆರ್.ಅಶೋಕ್‌

    ಬೆಂಗಳೂರು: 4 ಜನರು ಹೇಳಿದಂತೆ ಸಚಿವರಿಗೆ ಗೌರವ ಕೊಟ್ಟು ನಾನು ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡ್ತೀನಿ. ಅದೇ ನೈತಿಕತೆಯಲ್ಲಿ ಸಿದ್ದರಾಮಯ್ಯ (Siddaramaiah) ರಾಜೀನಾಮೆಯನ್ನ 4 ಜ‌ನ ಮಂತ್ರಿಗಳು ಪಡೆಯಲಿ. ಅಥವಾ ಪರಮೇಶ್ವರ್ (G Parameshwara) ಬಿಟ್ಟು ಉಳಿದ 3 ಜನ ಸಚಿವರು ರಾಜೀನಾಮೆ ಕೊಟ್ಟು ಸಿದ್ದರಾಮಯ್ಯ ಮೇಲಿನ ಪ್ರೀತಿ ಅನಾವರಣ ಮಾಡಲಿ ಅಂತ ವಿಪಕ್ಷ ನಾಯಕ ಆರ್.ಅಶೋಕ್ (R Ashoka) 4 ಜನ ಸಚಿವರಿಗೆ ಸವಾಲ್ ಹಾಕಿದ್ದಾರೆ.

    ನಿನ್ನೆ ಅಶೋಕ್ ವಿರುದ್ಧ ಭೂ ಅಕ್ರಮದ ಬಗ್ಗೆ ಪ್ರಸ್ತಾಪ ಮಾಡಿದ್ದ 4 ಜನ ಸಚಿವರಿಗೆ ತಿರುಗೇಟು ಕೊಟ್ಟ ಅಶೋಕ್, ಸಚಿವರಿಗೆ ನಾನು ಕೊಟ್ಟಿರೋ ಸವಾಲನ್ನ 24 ಗಂಟೆ ಒಳಗೆ ಸ್ವೀಕಾರ ಮಾಡಲಿ ಅಂತ ಸವಾಲ್ ಹಾಕಿದ್ರು. ಲೊಟ್ಟೆಗೊಲ್ಲಹಳ್ಳಿ ಭೂಮಿಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯ ಮತ್ತು ಹೈಕೋರ್ಟ್‌ನಲ್ಲಿ (Highcourt) ನನ್ನ ಪರ ತೀರ್ಪು ಕೊಟ್ಟಿದೆ. ಸಿದ್ದರಾಮಯ್ಯ ರೀತಿ ತನಿಖೆಗೆ ಆದೇಶ ಮಾಡಿಲ್ಲ. ಹೀಗಿದ್ರೂ ದ್ವೇಷದ ರಾಜಕೀಯಕ್ಕಾಗಿ ನನ್ನ ಮೇಲೆ ಆರೋಪ ಮಾಡೋದು ಸರಿಯಲ್ಲ ಎಂದಿದ್ದಾರೆ. ಇದನ್ನೂ ಓದಿ: ನಾನು ಬಳ್ಳಾರಿ ಹೋಗೋವಾಗ ಪಾದಯಾತ್ರೆ ಮಾಡಿ ಸಿಎಂ ಆದವರು ಮನ:ಶಾಂತಿ ಕಳೆದುಕೊಂಡಿದ್ದಾರೆ: ಜನಾರ್ದನ ರೆಡ್ಡಿ

    ಅದು ಬಿಡಿಎ ಜಾಗ ಅಲ್ಲ. ಬಿಡಿಎ ಈ ಸಂಬಂಧ ನನಗೆ NOC ಕೊಟ್ಟಿದೆ. ಮಾಲೀಕರ ರಾಮಸ್ವಾಮಿಗೆ ಅವರ ತಂದೆಯಿಂದ ಜಮೀನು ಬಂದಿದೆ. ನಿಯಮದ ಪ್ರಕಾರವೇ ನಾನು ಹಣ ಬಿಟ್ಟು ರಿಜಿಸ್ಟರ್ ಮಾಡಿಕೊಂಡಿದ್ದೇನೆ‌. ಇದರಲ್ಲಿ ಯಾವುದೇ ಅಕ್ರಮ ಆಗಿಲ್ಲ. 2 ಕೋರ್ಟ್ ನನ್ನ ಪರ ತೀರ್ಪು ಕೊಟ್ಟಿದೆ. ಅಲ್ಲದೇ 2010 ರಲ್ಲಿ ಅಂದಿನ ರಾಜ್ಯಪಾಲರು ಹಂಸರಾಜ್ ಭಾರದ್ವಾಜ್‌ ಅವರ ಮುಂದೆ ನನ್ನ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ಮನವಿ ಮಾಡಿದ್ರು. ಆದರೆ ಕಾಂಗ್ರೆಸ್ ನಿಂದ ನೇಮಕವಾದ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಲಿಲ್ಲ ಅಂತ ಸಚಿವರಿಗೆ ತಿರುಗೇಟು ‌ನೀಡಿದ್ರು. ಇದನ್ನೂ ಓದಿ: 1 ವರ್ಷ ದೇವಿಯ ಆಶೀರ್ವಾದ ಸಿಗಲಿ ಎನ್ನುತ್ತಾ ಅಧಿಕಾರ ಹಂಚಿಕೆಯ ಸುಳಿವು ನೀಡಿದ್ರಾ? – ಕುತೂಹಲ ಮೂಡಿಸಿದ ಸಿಎಂ ಮಾತು

    ನನ್ನ ಕೇಸ್ ಬೇರೆ ಸಿದ್ದರಾಮಯ್ಯ ಕೇಸ್ ಬೇರೆ. ಆದರೂ ನಾನು ಸಚಿವರ ಮಾತಿಗೆ ಒಪ್ಪಿ ನೈತಿಕತೆ ಹೊತ್ತು ರಾಜೀನಾಮೆ ಕೊಡುತ್ತೇನೆ. ಇದರಂತೆ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಸಚಿವರು ಪಡೆಯಬೇಕು. ಇಲ್ಲದೇ ಹೋದರೆ ಸಿಎಂ ಪರವಾಗಿ 3 ಜನ ಸಚಿವರಾದ್ರು ರಾಜೀನಾಮೆ ಕೊಡಲಿ ಅಂತ ಸವಾಲ್ ಹಾಕಿದ್ರು‌. ಇದನ್ನೂ ಓದಿ: ಕೆಂದ್ರದಿಂದ ತರೋದನ್ನು ರಾಜ್ಯಕ್ಕೆ ತನ್ನಿ, ರಾಜೀನಾಮೆ ಕೇಳುತ್ತಾ ಕೂತರೆ ಹೇಗೆ – ಹೆಚ್‌ಡಿಕೆ ವಿರುದ್ಧವೇ ಜಿಟಿಡಿ ಕಿಡಿ

  • ಆರ್‌.ಅಶೋಕ್‌ ವಿರುದ್ಧ ಸಚಿವ ಪರಮೇಶ್ವರ್‌ ನೂರಾರು ಕೋಟಿ ಭೂ ಹಗರಣ ಬಾಂಬ್‌

    ಆರ್‌.ಅಶೋಕ್‌ ವಿರುದ್ಧ ಸಚಿವ ಪರಮೇಶ್ವರ್‌ ನೂರಾರು ಕೋಟಿ ಭೂ ಹಗರಣ ಬಾಂಬ್‌

    – ಲೊಟ್ಟೆಗೊಳ್ಳಹಳ್ಳಿಯಲ್ಲಿ ಬಹುಕೋಟಿ ಭೂಹಗರಣ ಪ್ರಸ್ತಾಪ

    ಬೆಂಗಳೂರು: ವಿಪಕ್ಷ ನಾಯಕ ಆರ್‌. ಅಶೋಕ್‌ (R Ashoka) ವಿರುದ್ಧ ಗೃಹ ಸಚಿವ ಡಾ.ಜಿ ಪರಮೇಶ್ವರ್‌ (G Parameshwar) ಅವರು, ನೂರಾರು ಕೋಟಿ ಭೂಹಗರಣದ (Land Scam) ಬಾಂಬ್‌ ಸಿಡಿಸಿದ್ದಾರೆ.

    ಗೃಹ ಸಚಿವ ಡಾ.ಜಿ ಪರಮೇಶ್ವರ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್, ಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರ ಸಮ್ಮುಖದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ವೇಳೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ದಾಖಲೆ ಬಿಡುಗಡೆ ಮಾಡಿದರು. ಇದನ್ನೂ ಓದಿ: ICC Test Ranking | ಅಶ್ವಿನ್‌ ಹಿಂದಿಕ್ಕಿ ನಂ.1 ಪಟ್ಟಕ್ಕೇರಿದ ಬುಮ್ರಾ – ಬ್ಯಾಟಿಂಗ್‌ನಲ್ಲಿ ಯಶಸ್ವಿ, ಕೊಹ್ಲಿ ಶೈನ್‌

    ಕಳೆದ ಕೆಲ ದಿನಗಳಿಂದ ಮುಡಾ ಬಗ್ಗೆ ಚರ್ಚೆಯಾಗ್ತಿದೆ. ಮುಖ್ಯಮಂತ್ರಿಗಳ ಪತ್ನಿ ಮುಡಾಗೆ ನಿವೇಶನಗಳನ್ನ ವಾಪಸ್ ಮಾಡಿದ್ದಾರೆ. ಆದರೂ ಬಿಜೆಪಿಯ ಮುಖಂಡರು ವಾಪಸ್ ಕೊಟ್ಟಿರೋದೆ ಸರಿಯಿಲ್ಲ. ತಪ್ಪನ್ನ ಒಪ್ಪಿಕೊಂಡಂತಾಯ್ತು ಅಂತಾ ಬೇರೆ ಬೇರೆ ಅರ್ಥದಲ್ಲಿ ಮಾತಾಡ್ತಿದ್ದಾರೆ. ಆದ್ರೆ ವಿಪಕ್ಷ ನಾಯಕ ಆರ್‌. ಅಶೋಕ್‌ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಮಾಡಿರೋದೆ ತಪ್ಪು. ಸರ್ಕಾರದ ಜಾಗ ಕಬಳಿಸಿ ಒಪ್ಪಿಕೊಂಡಾಯ್ತು ಅಂತಾ ಅವರದೇ ಭಾಷೆಯಲ್ಲಿ ಮಾತಾಡಿದ್ದಾರೆ. ಅವರ ಅವಧಿಯಲ್ಲಾದ ಹಗರಣದ ಬಗ್ಗೆ ರಾಜ್ಯದ ಜನ್ರ ಮುಂದಿಡೋಕೆ ಬಂದಿದ್ದೀವಿ ಎಂದು ಹೇಳಿದರು. ಇದನ್ನೂ ಓದಿ: 200ನೇ ವಿಜಯೋತ್ಸವ ಆಚರಣೆ – ಕಿತ್ತೂರು ಉತ್ಸವ ಜ್ಯೋತಿಗೆ ಸಿಎಂ ಚಾಲನೆ

    ಲೊಟ್ಟೆಗೊಲ್ಲಹಳ್ಳಿಯಲ್ಲಿ ನೂರಾರು ಕೋಟಿ ಜಮೀನಿನ ಹಗರಣವಾಗಿದೆ. ದಾಖಲಾತಿ ಸಮೇತ ಮಂಡಿಸೊ ಕೆಲಸ ಮಾಡ್ತಿದ್ದೇವೆ. ಲೊಟ್ಟೆಗಲ್ಲಹಳ್ಳಿ ಸರ್ವೆ ನಂ 11 , ಎಫ್-1 ರಲ್ಲಿ ಬಿಡಿಎ 24-02-77 ಪ್ರಾಥಮಿಕ ಅಧಿಸೂಚನೆ ಹೊರಡಿಸುತ್ತೆ. 31-08-78 ರಲ್ಲಿ ಮತ್ತೊಂದು ಫೈನಲ್ ನೋಟಿಫಿಕೇಷನ್ ಆಗುತ್ತೆ. 26-02-2003 ರಲ್ಲಿ ಹಾಗೂ 2007 ರಲ್ಲಿ ಈ ಜಮೀನನ್ನ ಮೂಲ ಮಾಲೀಕತ್ವ ಯಾರದಿತ್ತು? ಬಿಡಿಎ ಅಧಿಸೂಚನೆ ಹೊರಡಿಸುವ ಮೊದಲು ರಾಮಸ್ವಾಮಿ ಅನ್ನೋರ ಮಾಲೀಕತ್ವದಲ್ಲಿರುತ್ತೆ. 1978 ರಿಂದ 2003ರ ವರಗೆ ಬಿಡಿಎ ಸ್ವಾಧೀನದಲ್ಲಿ ಜಮೀನು ಇತ್ತು. ಆರ್.ಅಶೋಕ್, 2007ರಲ್ಲಿ ಶುದ್ಧಕ್ರಯಕ್ಕೆ ಖರೀದಿ ಮಾಡಿದರು. ರಾಮಸ್ವಾಮಿಯಿಂದ 32 ಕುಂಟೆ ಖರೀದಿ ಮಾಡಿದರು. ಆದ್ರೆ ರಾಮಸ್ವಾಮಿ ಮಾಲೀಕನೆ ಅಲ್ಲ, ಆ ಭೂಮಿ ಬಿಡಿಎ ಸ್ವಾಧೀನದಲ್ಲಿರುತ್ತೆ ಎಂದು ಆರೋಪ ಮಾಡಿದ್ದಾರೆ.

    2009ರ ಅಕ್ಟೋಬರ್‌ 1ಕ್ಕೆ ಡಿನೋಟಿಫೈ ಮಾಡಿಕೊಡಿ ಅಂತಾ ರಾಮಸ್ವಾಮಿಯಿಂದ ಸರ್ಕಾರಕ್ಕೆ ಅರ್ಜಿ ಸಲ್ಲಿಸುತ್ತಾರೆ. ಅಶೋಕ್ ಹಾಗೂ ರಾಮಸ್ವಾಮಿ ಮಾಲೀಕರೇ ಅಲ್ಲ. ಆದ್ರೂ ಅರ್ಜಿ ಸಲ್ಲಿಸ್ತಾರೆ, ಅಂದಿನ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಕೂಡಲೇ ಮಂಡಿಸಿ ಅಂತ ಷರಾ ಬರೀತಾರೆ. ಎರಡೇ ತಿಂಗಳಲ್ಲೇ ಅಂದಿನ ಮುಖ್ಯಮಂತ್ರಿಗಳು ಡಿನೋಟಿಫಿಕೇಷನ್ ಮಾಡಿಕೊಡ್ತಾರೆ. ಆ ನಂತ್ರ ನಿವೃತ್ತ ವಿಂಗ್ ಕಮಾಂಡರ್ ಜಿವಿ ಅತ್ರಿ ಲೋಕಾಯುಕ್ತಕ್ಕೆ ಅರ್ಜಿ ಹಾಕುತ್ತಾರೆ. ವಿಚಾರ ಕೋರ್ಟ್‌ಗೆ ಹೋಗುತ್ತೆ. ಆಗ ಅಶೋಕ್ ವಾಪಸ್ ಕೊಡುವ ತೀರ್ಮಾನ ತಗೊತಾರೆ. 26-08 -2011 ರಂದು ರಿಜಿಸ್ಟರ್ ಗಿಫ್ಟ್ ಮೂಲಕ ಬಿಡಿಎಗೆ ಭೂಮಿ ಹಿಂತಿರುಗಿಸುತ್ತಾರೆ. ಓನರ್‌ಶಿಪ್‌ ಇಲ್ಲದೇ ಅಶೋಕ್ ಗಿಫ್ಟ್ ಬಿಡಿಎಗೆ ನೀಡಿದ್ದಾರೆ ಎಂದು ಹಳೆಯ ಪ್ರಕರಣವೊಂದನ್ನ ಬಯಲು ಮಾಡಿದರು.

    ಆ ನಂತರ ಅತ್ರಿಯವರು ಹೈಕೋರ್ಟ್ ಅರ್ಜಿ ಹಾಕ್ತಾರೆ, ಕ್ರಿಮಿನಲ್ ಕೇಸ್ ಹಾಕಬೇಕು ಅನ್ನೋದು ಬೇಕಾಗಿಲ್ಲ, ಅಂತಾ ಹೈಕೋರ್ಟ್‌ನಿಂದ ತೀರ್ಪು ಬರುತ್ತೆ. ವಾಪಸ್ ಕೊಟ್ಟಿಬಿಟ್ಟರಲ್ಲ ಕೇಸ್ ಬೇಕಾಗಿಲ್ಲ ಅಂತಾ ಜಡ್ಜ್ ಮೆಂಟ್ ಬರುತ್ತೆ. ಈಗ ಸಿಎಂ ಪತ್ನಿ ಸೈಟು ವಾಪಸ್‌ ಮಾಡಿದಾಗ ಮಾತನಾಡುವವರು ಹಿಂದೆ ಮಾಡಿದ್ದೇನು? ಇದು ಎಷ್ಟರಮಟ್ಟಿಗೆ ನ್ಯಾಯ? ಕಬಳಿಸಿರೋದು, ಕಳ್ಳತನ ಮಾಡಿರೋದು ಅಂತಾ ಹೇಳಿದ್ರಿ, ನಾವು ನಿಮಗೆ ಅವರದ್ದೇ ಭಾಷೆಯಲ್ಲಿ ಹೇಳ್ಬೇಕಾಗುತ್ತೆ ಎಂದು ಸಚಿವ ಪರಮೇಶ್ವರ್ ಬಾಂಬ್‌ ಸಿಡಿಸಿದರು. ಇದನ್ನೂ ಓದಿ: ‘ಪ್ರೇಮಲು’ ಬ್ಯೂಟಿಗೆ ಜಾಕ್‌ಪಾಟ್- ‘ದಳಪತಿ 69’ ಸಿನಿಮಾದಲ್ಲಿ ಮಮಿತಾ ಬೈಜು

  • ಸೈಟ್‌ ವಾಪಸ್‌ ನೀಡಲು ಮುಂದಾಗಿದ್ದು, ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ: ಆರ್‌.ಅಶೋಕ್‌

    ಸೈಟ್‌ ವಾಪಸ್‌ ನೀಡಲು ಮುಂದಾಗಿದ್ದು, ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ: ಆರ್‌.ಅಶೋಕ್‌

    – ಸಿಎಂ ಸಿದ್ದರಾಮಯ್ಯ ಪತ್ನಿ ಪತ್ರದ ಬಗ್ಗೆ ಬಿಜೆಪಿ ನಾಯಕರ ಪ್ರತಿಕ್ರಿಯೆ

    ಬೆಂಗಳೂರು: ಮಹತ್ವದ ಬೆಳವಣಿಗೆಯೊಂದಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಪತ್ನಿ ಮುಡಾ ನಿವೇಶನಗಳನ್ನು ವಾಪಸ್‌ ನೀಡಲು ಮುಂದಾಗಿರುವ ಬಗ್ಗೆ ವಿಪಕ್ಷ ನಾಯಕ ಆರ್‌.ಅಶೋಕ್‌ (R.Ashok) ಪ್ರತಿಕ್ರಿಯೆ ನೀಡಿದ್ದಾರೆ. ಈ ನಿರ್ಧಾರವು ಸಂವಿಧಾನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ಜಯ ಎಂದು ಬಣ್ಣಿಸಿದ್ದಾರೆ.

    ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ನಿರ್ಧಾರ ಕುರಿತು ಆರ್‌.ಅಶೋಕ್‌ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದು, ಸಿಎಂ ಸಿದ್ದರಾಮಯ್ಯನವರು ತಮ್ಮ ಪತ್ನಿ ಹೆಸರಿನಲ್ಲಿ ಅಕ್ರಮವಾಗಿ ಪಡೆದಿದ್ದ ಸೈಟುಗಳನ್ನು ವಾಪಸ್ ನೀಡುವ ‘ದೊಡ್ದ’ ಮನಸ್ಸು ಮಾಡಿರುವುದು‌ ಸಂವಿಧಾನವನ್ನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುಡಾ ಸೈಟ್‌ ವಾಪಸ್‌ಗೆ ಸಿಎಂ ಪತ್ನಿ ನಿರ್ಧಾರ – ಕಾನೂನು ಹೋರಾಟದ ಪರಿಣಾಮ ಏನು?

    ರಾಜ್ಯಪಾಲರ ನಿರ್ಧಾರವನ್ನ ಎತ್ತಿ ಹಿಡಿದ ನ್ಯಾಯಾಂಗಕ್ಕೆ ಸಿಕ್ಕ ದೊಡ್ಡ ಜಯ. ಜಗ್ಗಲ್ಲ, ಬಗ್ಗಲ್ಲ ಎಂದು ಅಧಿಕಾರದ ಮದದಿಂದ ಮೆರೆಯುತ್ತಿದ್ದವರ ವಿರುದ್ಧ ಬಾಬಾಸಾಹೇಬ್ ಅಂಬೇಡ್ಕರರ ಸಂವಿಧಾನಕ್ಕೆ ಸಿಕ್ಕ ದೊಡ್ಡ ಜಯ ಎಂದು ಬಿಜೆಪಿ ನಾಯಕ ಆರ್‌.ಅಶೋಕ್‌ ಅವರು ಅಭಿಪ್ರಾಯಪಟ್ಟಿದ್ದಾರೆ.

    ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ, ಇ.ಡಿ ಎಫ್‌ಐಆರ್‌ ಬೆನ್ನಲ್ಲೇ ಮಹತ್ವದ ಬೆಳವಣಿಗೆಯೊಂದು ನಡೆದಿದೆ. 14 ನಿವೇಶನ ಹಿಂದಿರುಗಿಸಲು ಸಿಎಂ ಸಿದ್ದರಾಮಯ್ಯ ಪತ್ನಿ ಮುಂದಾಗಿದ್ದಾರೆ. ಈ ಸಂಬಂಧ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ನಿವೇಶನ, ಆಸ್ತಿ, ಸಂಪತ್ತು ನನ್ನ ಪತಿ ಘನತೆ, ಮರ್ಯಾದೆಗಿಂತ ದೊಡ್ಡದಲ್ಲ: ಸಿಎಂ ಪತ್ನಿ

  • ಎಫ್‌ಐಆರ್ ಆದ ತಕ್ಷಣ ಸಿಎಂ ರಾಜೀನಾಮೆ ಕೊಡಬೇಕು – ಆರ್.ಅಶೋಕ್

    ಎಫ್‌ಐಆರ್ ಆದ ತಕ್ಷಣ ಸಿಎಂ ರಾಜೀನಾಮೆ ಕೊಡಬೇಕು – ಆರ್.ಅಶೋಕ್

    ಬೆಂಗಳೂರು: ಎಫ್‌ಐಆರ್ (FIR) ಆದ ತಕ್ಷಣ ಸಿಎಂ (CM Siddaramaiah) ರಾಜೀನಾಮೆ ಕೊಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ಆಗ್ರಹಿಸಿದ್ದಾರೆ.

    ಮುಡಾ ಹಗರಣ ಸಂಬಂಧ ಜನಪ್ರತಿನಿಧಿಗಳ ಕೋರ್ಟ್ ತೀರ್ಪಿನ ಬೆನ್ನಲ್ಲೇ ಜಯನಗರದ (Jayanagar) ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಮಹತ್ತರ ತಿರುವಿನ ದಿನವಾಗಿದೆ. ರಾಜ್ಯದ ಆಡಳಿತ ನಡೆಸುವ ಮುಖ್ಯಮಂತ್ರಿ ಮೇಲೆ ಆಪಾದನೆ ಬಂದು ಹೈಕೋರ್ಟ್ ಆದೇಶ ಆಗಿದೆ. ಜನ ಪ್ರತಿನಿಧಿಗಳ ಕೋರ್ಟ್ ಎಫ್‌ಐಆರ್ ಆಗಲಿ ಎಂದು ಹೇಳಿದೆ ಎಂದರು.ಇದನ್ನೂ ಓದಿ: ಸಿದ್ದರಾಮಯ್ಯನವರು ಕೂಡಲೇ ಮುಡಾ ಪ್ರಕರಣವನ್ನ ಸಿಬಿಐಗೆ ವಹಿಸಬೇಕು: ವಿಜಯೇಂದ್ರ ಆಗ್ರಹ

    ನಮ್ಮ ಮೇಲೆ ಆಪಾದನೆ ಇಲ್ಲ. ಇದು ಬಿಜೆಪಿ ಪ್ರೇರಿತ ಎಂದು ರಾಜಕೀಯ ದಾಳ ಹೂಡಿದ್ದರು. ರಾಜಭವನ ಅನುಮತಿ ಕೊಟ್ಟ ತಕ್ಷಣ ರಾಜಭವನ ಕಡೆ ಕಾಂಗ್ರೆಸ್ ಅವರು ತಿರುಗಿಬಿಟ್ಟರು. ರಾಜಭವನವನ್ನು ಬಾಂಗ್ಲಾದೇಶದ ಮಾದರಿಯಲ್ಲಿ ಸ್ಫೋಟಿಸುತ್ತೀವಿ ಎಂದು ಕಾಂಗ್ರೆಸ್ ಅವರು ವಿಜೃಂಭಣೆ ಮಾಡಿದ್ದರು. ಈಗ ತನಿಖೆಗೆ ಸೂಕ್ತ ಎಂದು ಆದೇಶ ಆಗಿದೆ ಎಂದು ಹೇಳಿದರು.

    ಒರಿಜಿನಲ್ ಕೇಸ್ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಇತ್ತು. ಈಗ ಜನಪ್ರತಿನಿಧಿಗಳ ನ್ಯಾಯಾಲಯ ಸ್ಟೇಟ್‌ಮೆಂಟ್ ಕೊಟ್ಟಿದೆ. ಗರ್ವನರ್ ಹೇಳಿದ್ದರಲ್ಲಿ ಸತ್ಯಾಂಶ ಕಾಣುತ್ತಿದೆ ಎಂದು ಕೋರ್ಟ್ ಹೇಳಿದೆ. ಸಿದ್ದರಾಮಯ್ಯ ಅವರು ಇನ್ನೂ ಯಾವುದಕ್ಕೇ ಕಾಯುತ್ತಿದ್ದಾರೆ. ಬಿಜೆಪಿ ಕೇಸ್ ಹಾಕಿಲ್ಲ. ಕೇಸ್ ಹಾಕಿರುವುದು ಆರ್‌ಟಿಐ ಕಾರ್ಯಕರ್ತರು. ಬಿಜೆಪಿಯದ್ದು ಸೇಡಿನ ರಾಜಕಾರಣ. ಗರ್ವನರ್ ಅವರು ಬಿಜೆಪಿ ಕೇಂದ್ರ ಎಂದಿದ್ದರು. ಈಗ ಎರಡೂ ನ್ಯಾಯಾಲಯ ಹೇಳಿದೆ ಏನು ಹೇಳ್ತೀರಾ ಎಂದು ಪ್ರಶ್ನಿಸಿದರು.

    ಇದೇ ವೇಳೆ ಪರಮೇಶ್ವರ್ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಲೋಕಾಯುಕ್ತ ಪೊಲೀಸ್ ಕರ್ನಾಟಕ ಪೊಲೀಸ್ ಅಂಡರ್‌ನಲ್ಲೇ ಬರುತ್ತದೆ. ಪರಮೇಶ್ವರ್ ಅವರು ಲೋಕಾಯುಕ್ತ ಸ್ವಾತಂತ್ರ‍್ಯ ಸಂಸ್ಥೆ ಎಂದು ಹೇಳಿದ್ದಾರೆ. ಆದರೆ ಪೊಲೀಸರು ಯಾರು? ನಾವು ಸಿಬಿಐಗೆ ವಹಿಸಿ ಎಂದು ಆಗ್ರಹ ಮಾಡುತ್ತೇವೆ ಎಂದರು.ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಕೇಳೋ ವಿಪಕ್ಷಗಳಿಗೆ ನೈತಿಕತೆ ಇಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

  • ಸಿದ್ದರಾಮಯ್ಯಗೆ ಗಣೇಶನ ಶಾಪ ತಟ್ಟಿದೆ: ಆರ್.ಅಶೋಕ್

    ಸಿದ್ದರಾಮಯ್ಯಗೆ ಗಣೇಶನ ಶಾಪ ತಟ್ಟಿದೆ: ಆರ್.ಅಶೋಕ್

    -ಸಿಎಂ ರಾಜೀನಾಮೆ ಕೊಡ್ತಾರೆ ಎಂಬ ವಿಶ್ವಾಸವಿದೆ

    ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಗಣೇಶನ ಶಾಪ ತಟ್ಟಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್  (R Ashok) ಹೇಳಿದ್ದಾರೆ.

    ನಗರದಲ್ಲಿ `ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಅರ್ಜಿಯನ್ನು ಹೈಕೋರ್ಟ್ ಎತ್ತಿಹಿಡಿದ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ಹಲವೆಡೆ ಗಣೇಶ ಮೆರವಣಿಗೆ ಮಾಡೋಕೆ ಅವಕಾಶ ಕೊಡಲಿಲ್ಲ. ಹಿಂದೂಗಳಿಗೆ ಕಿರುಕುಳ ಕೊಟ್ಟಿದ್ದಾರೆ. ಹಿಂದೂಗಳ ಶಾಪದಿಂದ ಸಿಎಂಗೆ ಈ ರೀತಿ ಆಗಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: MUDA Scam| ರಾಜಭವನದ ದುರ್ಬಳಕೆಯಾಗಿದೆ, ನಾನು ಯಾವುದೇ ತನಿಖೆಗೆ ಹಿಂಜರಿಯಲ್ಲ – ಸಿಎಂ ಮೊದಲ ಪ್ರತಿಕ್ರಿಯೆ

    ಮಾಜಿ ಸಚಿವ ನಾಗೇಂದ್ರ ರಾಜೀನಾಮೆ ಮೊದಲನೇ ಜಯವಾದರೆ, ಸಿಎಂ ವಿರುದ್ಧದ ತೀರ್ಪು ಎರಡನೇ ಜಯವಾಗಿದೆ. ಕಾಂಗ್ರೆಸ್‍ನವರು ರಾಜಭವನದ ಮೇಲೆ ಇಲ್ಲ ಸಲ್ಲದ ಅಪಾದನೆ ಮಾಡಿದ್ದರು. ಗವರ್ನರ್ ವಿರುದ್ಧ ಅವಹೇಳನಕಾರಿ ಮಾತಾಡಿದ್ದರು. ಈಗ ಕಾಂಗ್ರೆಸ್ ರಾಜ್ಯದ ಜನರ ಮುಂದೆ ಕ್ಷಮೆ ಕೇಳಬೇಕು. ಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

    ರಾಜ್ಯದ ಜನತೆಗೆ ಕಾಂಗ್ರೆಸ್ ಒಳ್ಳೆದು ಮಾಡುತ್ತೆ ಎಂಬ ನಂಬಿಕೆ ಇತ್ತು. ಈಗ ಆ ನಂಬಿಕೆ ಹೋಗಿದೆ. ಭ್ರಷ್ಟಾಚಾರದ ಕಾಂಗ್ರೆಸ್, ಭ್ರಷ್ಟಾಚಾರದ ಸರ್ಕಾರ ಎಂದು ಜನರಿಗೆ ಗೊತ್ತಾಗಿದೆ. ನಾವು ರಾಜೀನಾಮೆ ಕೇಳೊದು ಒಂದು ಕಡೆ ಆದರೆ, ಕಾಂಗ್ರೆಸ್‍ನವರೇ ಸಿದ್ದರಾಮಯ್ಯ ಅವರನ್ನ ಇಳಿಸೊಕೆ ಗುಂಡಿ ತೋಡಿದ್ದಾರೆ. ಈಗಾಗಲೇ ಏಳೆಂಟು ಜನ ಸಿಎಂ ಆಗೋಕೆ ಸೂಟ್ ಹೊಲಿಸಿಕೊಂಡು ತಯಾರಾಗಿದ್ದಾರೆ ಎಂದರು.

    ಸಿದ್ದರಾಮಯ್ಯ ರಾಮಕೃಷ್ಣ ಹೆಗಡೆಯವರ ಶಿಷ್ಯ ಎಂದು ಹೇಳ್ತಾರೆ. ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ರಾಜೀನಾಮೆ ಕೊಡಲಿ. ನೈತಿಕತೆ, ಸಮಾಜವಾದ ಸಿದ್ಧಾಂತ ಸಿದ್ದರಾಮಯ್ಯರಲ್ಲಿ ಇದೆ. ಅವರು ರಾಜೀನಾಮೆ ಕೊಡ್ತಾರೆ ಎನ್ನುವ ವಿಶ್ವಾಸ ನಮ್ಮಲ್ಲಿದೆ. ರಾಜೀನಾಮೆ ಕೊಡದೇ ಇದ್ರೆ ಹೋರಾಟ ಶುರು ಮಾಡುತ್ತೇವೆ. ಹೋರಾಟ ಮಾಡಿಯೇ ರಾಜೀನಾಮೆ ಪಡೆಯುತ್ತೆವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಪ್ರಾಸಿಕ್ಯೂಷನ್‌ ಆದೇಶ ಎತ್ತಿ ಹಿಡಿದ ಹೈಕೋರ್ಟ್‌; ಸುಪ್ರೀಂ ಕೋರ್ಟ್‌ಗೆ ಹೋಗಲು ತಯಾರಿದ್ದೇವೆ – ಪ್ರಿಯಾಂಕ್‌ ಖರ್ಗೆ

  • ದ್ವೇಷದಿಂದ ನನ್ನ ಮೇಲೆ ಎಫ್‌ಐಆರ್ ಮಾಡಿದ್ದಾರೆ: ಆರ್ ಆಶೋಕ್

    ದ್ವೇಷದಿಂದ ನನ್ನ ಮೇಲೆ ಎಫ್‌ಐಆರ್ ಮಾಡಿದ್ದಾರೆ: ಆರ್ ಆಶೋಕ್

    ಚಿಕ್ಕಚಿಕ್ಕಬಳ್ಳಾಪುರ: ನಾಗಮಂಗಲದ (Nagamangala Violence) ಪ್ರಕರಣದ ಕುರಿತು ನಾನು ಒಂದು ಟ್ವೀಟ್ ಮಾಡಿದ್ದೆ. ಅದನ್ನೇ ದ್ವೇಷವಾಗಿ ತೆಗೆದುಕೊಂಡು ನನ್ನ ಹಾಗೂ ಶೋಭಾ ಕರಂದ್ಲಾಜೆ (Shobha Karandlaje) ಮೇಲೆ ಎಫ್‌ಐಆರ್ ಮಾಡಿದ್ದಾರೆ ಎಂದು ರಾಜ್ಯ ಸರ್ಕಾರದ ನಡೆಯನ್ನು ವಿಪಕ್ಷ ನಾಯಕ ಆರ್ ಅಶೋಕ್ (R Ashok) ಖಂಡಿಸಿದರು.

    ಈ ಕುರಿತು ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸಿರುವ ಅವರು, ಕೇರಳದಿಂದ ಬಂದು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದರು. ಅದೇ ರೀತಿ ನಾಗಮಂಗದಲ್ಲಿ ಘೋಷಣೆ ಕೂಗಿದ್ದರು. ವಿಧಾನಸೌಧದಲ್ಲಿ ಕೂಗಿರುವುದನ್ನು ಆ ರೀತಿ ಕೂಗೇ ಇಲ್ಲ ಎಂದು ಕಾಂಗ್ರೆಸ್ ನಾಯಕರು ಸುಳ್ಳು ಹೇಳಿದರು. ಹಾಗಾದರೆ ನಿಮ್ಮ ಮೇಲೆ ಯಾಕೆ ಕೇಸ್ ಹಾಕಿಲ್ಲ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಜಮ್ಮು & ಕಾಶ್ಮೀರದಲ್ಲಿ ಮತ್ತೊಂದು ಪೀಳಿಗೆಯನ್ನು ನಾಶ ಮಾಡಲು ಬಿಡುವುದಿಲ್ಲ: ಮೋದಿ ಪ್ರತಿಜ್ಞೆ

    ನನ್ನ ಮೇಲೆ ಈಗ ಸುಮೋಟೋ ಕೇಸ್ ಹಾಕಿಕೊಂಡಿದ್ದಾರೆ. ಪೊಲೀಸರೇ ದೂರು ಕೊಟ್ಟು ಹಾಕಿಕೊಂಡಿದ್ದಾರೆ. ಸಾರ್ವಜನಿಕರು ಯಾರೂ ಕೂಡ ದೂರು ಕೊಟ್ಟಿಲ್ಲ. ಮುಂದೆ ನಮ್ಮ ಸರ್ಕಾರ ಬರುತ್ತದೆ. ಆಗ ಏನು ಅಂತ ಗೊತ್ತಾಗುತ್ತದೆ. ಪೊಲೀಸ್ ಇಲಾಖೆ ಕಾಂಗ್ರೆಸ್ (Congress) ಸರ್ಕಾರದ ಕಪಿ ಮುಷ್ಟಿಯಲ್ಲಿ ಸಿಲುಕಿಕೊಂಡಿದೆ ಎಂದರು. ಇದನ್ನೂ ಓದಿ: ಶನಿವಾರ ದೆಹಲಿ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣ ವಚನ

    ವಿರೋಧ ಪಕ್ಷವನ್ನು ಬಗ್ಗಿ ಬಡಿಯಬೇಕು ಎಂದು ಯತ್ನಾಳ್, ಶೋಭಾ, ಹಾಗೂ ನನ್ನ ಮೇಲೆ ಕೇಸ್ ಹಾಕಿಸುವ ಮೂಲಕ ಸರ್ಕಾರ ಈ ರೀತಿ ಮಾಡುತ್ತಿದೆ. ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಹೇರಿದೆ, ದ್ವೇಷದ ರಾಜಕಾರಣ ಮಾಡುತ್ತಿದೆ. ರಾಜ್ಯಪಾಲರ ಮೇಲೂ ಸೇಡು ತೀರಿಸಿಕೊಳ್ಳುತ್ತಿದೆ. ರಾಜ್ಯಪಾಲರು, ವಿರೋಧ ಪಕ್ಷದ ನಾಯಕರು, ಹಾಗೂ ಕೇಂದ್ರ ಸಚಿವರ ಬಗ್ಗೆಯೂ ಈ ಸರ್ಕಾರಕ್ಕೆ ಗೌರವ ಇಲ್ಲ ಎಂದರು ಎಂದು ಆರೋಪಿಸಿದರು. ಇದನ್ನೂ ಓದಿ: ಕೋಲಾರಕ್ಕೆ 376 ಕೋಟಿ ರೂ. ಅನುದಾನ, ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಸಿದ್ಧವಿದೆ: ಬೈರತಿ ಸುರೇಶ್