ಮಂಡ್ಯ: ನಾಗಮಂಗಲ ಕೋಮುಗಲಭೆ (Nagamangala Violence) ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಹಾಗೂ ವಿಪಕ್ಷ ನಾಯಕ ಆರ್ ಅಶೋಕ್ (R Ashok) ವಿರುದ್ಧ ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಿಸಲಾಗಿದೆ.
ನಾಗಮಂಗಲ ಕೋಮುಗಲಭೆ ಸಂಬಂಧ ಸುಳ್ಳು ಮಾಹಿತಿ ಹಂಚಿಕೆ ಆರೋಪಡಿ ಎಫ್‌ಐಆರ್ ದಾಖಲಿಸಲಾಗಿದೆ. ನಾಗಮಂಗಲ ಘಟನೆಗೆ ಸಂಬಂಧಿಸದ ವಿಡಿಯೋ ಹಾಗೂ ಫೋಟೋ ಪೋಸ್ಟ್ ಮಾಡಿದ ಹಿನ್ನೆಲೆ ದೊಂಬಿ ಗಲಭೆಗೆ ಪ್ರಚೋದನೆ ಆರೋಪಡಿ ಎಫ್‌ಐಆರ್ ದಾಖಲಾಗಿದೆ. ಕಲ್ಲು ತೂರಿ, ಬೆಂಕಿ ಹಚ್ಚಿದವರನ್ನ ರಕ್ಷಿಸಿ, ಗಣೇಶನನ್ನು ಬಂಧಿಸಲಾಗಿದೆ ಎಂದು ಶೋಭಾ ಕರಂದ್ಲಾಜೆ ಪೋಸ್ಟ್ ಮಾಡಿದ್ದರು. ಬೆಂಗಳೂರಿನಲ್ಲಿ ನಡೆದ ಘಟನೆಯನ್ನು ನಾಗಮಂಗಲದಲ್ಲಿ ನಡೆದ ಘಟನೆ ಎಂದು ಪೋಸ್ಟ್ ಹಾಕಿದ್ದರು. ಇದನ್ನೂ ಓದಿ: ಹಿಜ್ಬುಲ್ಲಾ ಮೇಲೆ ಮತ್ತೊಂದು ಸ್ಟ್ರೈಕ್ – ಪೇಜರ್ ಆಯ್ತು ಈಗ ಏಕಕಾಲದಲ್ಲಿ ವಾಕಿಟಾಕಿಗಳು ಸ್ಫೋಟ
ಇನ್ನು ನಾಗಮಂಗಲ ಘಟನೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ ಎಂದು ಆರ್ ಅಶೋಕ್ ಪೋಸ್ಟ್ ಹಾಕಿದ್ದರು. ಬೇರೆಡೆ ನಡೆದ 2 ವಿಡಿಯೋ ಲಗತ್ತಿಸಿ ಆರ್ ಅಶೋಕ್ ಪೋಸ್ಟ್ ಮಾಡಿದ್ದರು. ಈ ಹಿನ್ನೆಲೆ ಅಶೋಕ್ ಹಾಗೂ ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಒಂದು ವಾರದೊಳಗೆ ಸಿಎಂ ಅಧಿಕೃತ ನಿವಾಸ ತ್ಯಜಿಸಲಿದ್ದಾರೆ ಕೇಜ್ರಿವಾಲ್
ಬೆಂಗಳೂರು: ಒಂದು ದೇಶ ಒಂದು ಚುನಾವಣೆಯಿಂದ (One Nation One Election) ಅನಗತ್ಯ ವೆಚ್ಚ ಉಳಿಯಲಿದೆ. ಬಹಳ ಹಿಂದೆಯೇ ಈ ತೀರ್ಮಾನ ಮಾಡಬೇಕಿತ್ತು. ಈಗಲಾದರೂ ಈ ನಿರ್ಧಾರ ಮಾಡಲಾಗಿದೆ. ಇದನ್ನು ಸ್ವಾಗತಿಸುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashok) ಹೇಳಿದ್ದಾರೆ.
ಒಂದು ದೇಶ ಒಂದು ಚುನಾವಣೆಗೆ ಕೇಂದ್ರದಿಂದ ಒಪ್ಪಿಗೆ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಂದು ದೇಶ ಒಂದು ಚುನಾವಣೆಗೆ ಕೇಂದ್ರದಿಂದ ಒಪ್ಪಿಗೆ ಸಿಕ್ಕಿದೆ. ಮುಂದಿನ ಅಧಿವೇಶನದಲ್ಲಿ ಇದರ ಮಸೂದೆ ಮಂಡನೆ ಆಗಲಿದೆ. ಕೇಂದ್ರ ಸರ್ಕಾರದ ನಡೆಯನ್ನು ಸ್ವಾಗತ ಮಾಡುತ್ತೇವೆ. ಇದರಿಂದ ಕೋಟ್ಯಂತರ ಹಣ ಉಳಿತಾಯ ಆಗಲಿದೆ ಎಂದರು. ಇದನ್ನೂ ಓದಿ: ನವೀಕರಿಸಬಹುದಾದ ಇಂಧನ ವಲಯದಲ್ಲಿ ಆಸಕ್ತಿ ಒಂದು ಆಯ್ಕೆಯಲ್ಲ, ಅನಿವಾರ್ಯ – ಜಗದೀಪ್ ಧನಕರ್
ವಿಪಕ್ಷಗಳು ಒಂದು ದೇಶ ಒಂದು ಚುನಾವಣೆ ವಿರೋಧ ಮಾಡುತ್ತಿವೆ. ವಿಪಕ್ಷಗಳಿಗೆ ಮೋದಿಯವರ ಭಯ ಇದೆ. ಮತ್ತೆ ಮೋದಿಯವರೇ ಗೆದ್ದು ಬರುತ್ತಾರೆ ಅಂತ ಭಯ. ಹೀಗಾಗಿ ವಿಪಕ್ಷಗಳು ವಿರೋಧ ಮಾಡುತ್ತಿವೆ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಒಂದು ದೇಶ ಒಂದು ಚುನಾವಣೆ ಮಸೂದೆಗೆ ಕ್ಯಾಬಿನೆಟ್ ಒಪ್ಪಿಗೆ
ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಿದ ಘಟನೆ ಹಾಗೂ ಮಂಗಳೂರಿನ ಕೋಮುಗಲಭೆ (Communal Violence) ಪ್ರಕರಣವನ್ನು ಎನ್‌ಐಎ (NIA) ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಇಷ್ಟು ಮುಸ್ಲಿಮರು ಪೆಟ್ರೋಲ್ ಬಾಂಬ್ ಎಲ್ಲಿಂದ ತಂದಿದ್ದಾರೆ? ಅದು ಮಸೀದಿಗಳಿಂದ ಬಂದಿದೆಯೇ ಎಂಬುದೂ ಸೇರಿದಂತೆ ಎಲ್ಲಾ ಸಂಗತಿಗಳನ್ನು ತನಿಖೆ ಮಾಡಬೇಕಿದೆ. ಇದಕ್ಕಾಗಿ ಈ ಎಲ್ಲಾ ಪ್ರಕರಣಗಳನ್ನು ಎನ್‌ಐಎಗೆ ವಹಿಸಬೇಕು. ನಾಗಮಂಗಲದ ಕೋಮುಗಲಭೆ (Nagamangala Violence) ಪ್ರಕರಣದಲ್ಲಿ ಮೊದಲು ಹಿಂದೂಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಇದು ಕಾಂಗ್ರೆಸ್‌ನ (Congress) ತುಷ್ಟೀಕರಣ ರಾಜಕಾರಣಕ್ಕೆ ಸಾಕ್ಷಿ. ಇದೇ ರೀತಿ ಮಂಗಳೂರಿನಲ್ಲೂ ಆಗಿದೆ. ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಓಡಾಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮುಸ್ಲಿಂ ಸಂಘಟನೆಗಳಿಗೆ ಹಾಗೂ ಭಯೋತ್ಪಾದಕರಿಗೆ ಯಾವುದೇ ಭಯವಿಲ್ಲ. ನಮ್ಮನ್ನು ಕಾಂಗ್ರೆಸ್ ಬೆಂಬಲಿಸುತ್ತದೆ ಎಂಬ ಧೈರ್ಯದಿಂದ ಅವರು ಹೀಗೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ನನ್ನ ಆಡಿಯೋ ಅಲ್ಲ, ಮುಡಾ, ನಾಗಮಂಗಲ ಗಲಭೆ ಕೇಸ್ ಡೈವರ್ಟ್ ಮಾಡಲು ಅರೆಸ್ಟ್: ಮುನಿರತ್ನ
ರಾಹುಲ್ ಗಾಂಧಿ ವಿದೇಶಕ್ಕೆ ಹೋಗಿ ದೇಶ ವಿರೋಧಿ ಶಕ್ತಿಗಳ ಜೊತೆ ಟೀ ಪಾರ್ಟಿ ಮಾಡುತ್ತಿದ್ದಾರೆ. ದೇಶ ವಿಭಜನೆ ಮಾಡಿದ ಕಾಂಗ್ರೆಸ್ ಈಗ ಮತ್ತೆ ದೇಶ ವಿರೋಧಿ ಶಕ್ತಿಗಳು ತಲೆ ಎತ್ತಲು ಸಹಕಾರ ನೀಡುತ್ತಿದೆ. ಪ್ರಗತಿಪರರ ಮುಖವಾಡ ಹಾಕಿಕೊಂಡ ಸಾಹಿತಿಗಳು ಹಾಗೂ ನಗರ ನಕ್ಸಲರು ಇದಕ್ಕೆ ಕುಮ್ಮಕ್ಕು ನೀಡಿದ್ದಾರೆ. ಇರ‍್ಯಾರೂ ಈ ಘಟನೆಗಳನ್ನು ಖಂಡಿಸುತ್ತಿಲ್ಲ. ಪ್ರತಿ ದಿನ ಹಿಂದೂಗಳ ಮೇಲೆ ಹಲ್ಲೆಗಳು ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಿಎಂ ಆವಾಸ್ ಯೋಜನೆಯಡಿ ಔರಾದ್ ಕ್ಷೇತ್ರಕ್ಕೆ 3,923 ಮನೆಗಳು ಮಂಜೂರು: ಪ್ರಭು ಚವ್ಹಾಣ್
ಮುನಿರತ್ನರನ್ನು ತಕ್ಷಣ ಬಂಧನ ಮಾಡಿದ್ದೇಕೆ?
ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಾಗ ಈ ಸರ್ಕಾರ ಯಾರನ್ನೂ ಬಂಧಿಸಿಲ್ಲ. ಆದರೆ ಶಾಸಕ ಮುನಿರತ್ನ (Muniratna) ವಿಚಾರದಲ್ಲಿ ತಕ್ಷಣ ಬಂಧಿಸಲಾಗಿದೆ. ಶಾಸಕರು ನಿಂದಿಸಿದ್ದರೆ ಕಾನೂನು ಕ್ರಮ ಕೈಗೊಳ್ಳಲಿ. ಫೋರೆನ್ಸಿಕ್ ಲ್ಯಾಬ್‌ಗೆ ಧ್ವನಿಮುದ್ರಣ ಕಳುಹಿಸದೇ ಎಲ್ಲಾ ತೀರ್ಮಾನ ಮಾಡುವುದಾದರೆ ಆ ಲ್ಯಾಬ್‌ಗಳನ್ನು ಮೊದಲು ಮುಚ್ಚಿಸಲಿ. ಶಾಸಕರ ವಿವರಣೆ ಕೂಡ ಕೇಳದೆ ಕೂಡಲೇ ಕ್ರಮ ವಹಿಸಲಾಗಿದೆ. ಕಾನೂನು ಪ್ರಕಾರ ಸರ್ಕಾರ ನಡೆದುಕೊಳ್ಳದೇ ದ್ವೇಷದ ರಾಜಕಾರಣ ಮಾಡಿದೆ ಎಂದು ದೂರಿದರು. ಇದನ್ನೂ ಓದಿ: ಮುನಿರತ್ನ ಬೈದಿದ್ದು ಇನ್ನೂ ಸಾಬೀತಾಗಿಲ್ಲ, ಇದು ಸಿಡಿ ಶಿವು ಕೆಲಸ: ರಮೇಶ್ ಜಾರಕಿಹೊಳಿ
ನಾಗಮಂಗಲದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಹಾಕಿರುವುದರ ಕುರಿತು ಬಿಜೆಪಿ (BJP) ಸತ್ಯಶೋಧನಾ ಸಮಿತಿ ಪರಿಶೀಲನೆ ಮಾಡಲಿದೆ. ಅದು ನಿಜವಾಗಿದ್ದರೆ ಬಿಜೆಪಿ ಹೋರಾಟ ಮಾಡಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ವಂದೇ ಮೆಟ್ರೋ ಈಗ ‘ನಮೋ ಭಾರತ್ ರೈಲು’ – ಚಾಲನೆ ನೀಡಿದ ಮೋದಿ
– ನಗರ ನಕ್ಸಲರು ಈ ಘಟನೆಯನ್ನೇಕೆ ಖಂಡಿಸ್ತಿಲ್ಲ ಎಂದ ವಿಪಕ್ಷ ನಾಯಕ
ಬೆಂಗಳೂರು: ರಾಜ್ಯದಲ್ಲಿ ದೇಶ ವಿರೋಧಿ ಶಕ್ತಿಗಳು ಹೆಚ್ಚಾಗುತ್ತಿವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಆತಂಕ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗಮಂಗಲದಲ್ಲಿ (Nagamangala Riot) ಸರ್ಕಾರ ಓಲೈಕೆ ರಾಜಕಾರಣ ನಡೆಸುತ್ತಿದೆ. ಮೊದಲ 25 ಜನರು ಹಿಂದೂಗಳ ಹೆಸರೇ ಇದೆ. ಇತ್ತ ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶಿಸಿದ್ದಾರೆ. ಈ ಸರ್ಕಾರ ಬಂದ ನಂತರ ಭಯವೇ ಇಲ್ಲದಂತಾಗಿದೆ. ಇದನ್ನೆಲ್ಲ ನೋಡಿದರೆ ರಾಜ್ಯದಲ್ಲಿ ದೇಶ ವಿರೋಧಿ ಶಕ್ತಿಗಳು ಹೆಚ್ಚಾಗುತ್ತಿವೆ ಎಂದಿದ್ದಾರೆ.
ಕಳೆದ 15 ತಿಂಗಳಿಂದ ರಾಜ್ಯದಲ್ಲಿ ಹಿಂದೂಗಳ ಮೇಲೆ ಹಲ್ಲೆ ನಡೆಯುತ್ತಿದೆ. ಸಿಎಂ, ಡಿಸಿಎಂ ತಮ್ಮದೇ ಗೊಂದಲಗಳಲ್ಲಿ ಸಿಕ್ಕಿಕೊಂಡಿದ್ದಾರೆ. ರಾಜ್ಯದಲ್ಲಿ ಭಯೋತ್ಪಾದಕರ ಅಟ್ಟಹಾಸ ನಡೀತಿದೆ ಎಂದು ಕಿಡಿಕಾರಿದ್ದಾರೆ.
ನಾಗಮಂಗಲ ಗಲಭೆಯಲ್ಲಿ ನಲ್ಲಿ ಹಿಂದೂಗಳ ಮೇಲೆ ಹೆಚ್ಚು ಕೇಸ್ ಹಾಕಲಾಗಿದೆ. ಗಲಭೆಯಲ್ಲಿ ಪಿಎಫ್‍ಐ ಲಿಂಕ್ ಇದ್ದವರೂ ಇದ್ದರು ಎನ್ನಲಾಗಿದೆ. ಅವರನ್ನು ಕೇರಳದಿಂದ ಕರೆಸುವ ಕೆಲಸವನ್ನು ಕಿಡಿಗೇಡಿ ಮುಸ್ಲಿಮರು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಮಂಗಳೂರಿನಲ್ಲೂ ಕೋಮುಗಲಭೆ ನಡೆಯುತ್ತಿದೆ. ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ರಾಜಾರೋಷವಾಗಿ ಘೋಷಣೆ ಕೂಗುತ್ತಾ ಹೋಗಿದ್ದಾರೆ. ಈ ಸರ್ಕಾರ ಬಂದ ಮೇಲೆ ಭಯೋತ್ಪಾದಕರಿಗೆ, ಪಿಎಫ್‍ಐನವ್ರಿಗೆ ಭಯ ಇಲ್ಲದಂತಾಗಿದೆ. ಒಂದು ಕಡೆ ರಾಹುಲ್ ವಿದೇಶಗಳಲ್ಲಿ ಭಾರತ ಬಗ್ಗೆ ಟೀಕೆ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ನಾಗಮಂಗಲ, ಮಂಗಳೂರು, ಚಿಕ್ಕಮಗಳೂರು ಘಟನೆಗಳಿಂದ ಮತ್ತೆ ಕಾಂಗ್ರೆಸ್ ವಿಭಜನೆ ಕೆಲಸಕ್ಕೆ ಮುಂದಾಗಿದೆ. ಪ್ರಗತಿಪರರು, ನಗರ ನಕ್ಸಲರು ಕಾಂಗ್ರೆಸ್‍ಗೆ ಕುಮ್ಮಕ್ಕು ಕೊಡ್ತಿದ್ದಾರೆ. ಈ ಪ್ರಗತಿಪರರು, ನಗರ ನಕ್ಸಲರು ಯಾಕೆ ಈ ಘಟನೆಗಳನ್ನು ಖಂಡಿಸ್ತಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.
ನಾಗಮಂಗಲ ಗಲಭೆಗೆ ಬಾಂಬ್ ತಯಾರಿಕೆಗೆ ಕಚ್ಚಾ ವಸ್ತು, ಜಾಗ ಕೊಟ್ಟಿದ್ದು, ಎಲ್ಲಿ ಇದನ್ನು ತಯಾರು ಮಾಡಿದ್ರು? ಇಲ್ಲಿನ ಮಸೀದಿಗಳಲ್ಲಿ ತಯಾರಿಸಿದ್ರಾ? ಅಥವಾ ಹೊರಗಿಂದ ತಂದಿದ್ರಾ? ದೇಶದ ಭದ್ರತೆ ದೃಷ್ಟಿಯಿಂದ ಮಂಗಳೂರು, ಚಿಕ್ಕಮಗಳೂರು, ನಾಗಮಂಗಲ ಘಟನೆಗಳ ತನಿಖೆಯನ್ನು ಎನ್‍ಐಎಗೆ ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಬೆಂಗಳೂರು: ನಾಗಮಂಗಲ ಗಲಭೆ ಪ್ರಕರಣದಲ್ಲಿ ಹಿಂದೂ ಯುವಕರ ಮೇಲೆ ಕೇಸ್ ದಾಖಲಿಸಿದ್ದಕ್ಕೆ, ರಾಜ್ಯದಲ್ಲಿರೋದು ತಾಲಿಬಾನ್ ಸರ್ಕಾರ ಎಂದು ವಿಪಕ್ಷ ನಾಯಕ ಆರ್. ಅಶೋಕ್ (R. Ashok) ಕಿಡಿಕಾರಿದ್ದಾರೆ.
ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಕೋಮುಗಲಭೆ ಮತ್ತು ಘಟನೆಯ ನಂತರ ಗೃಹ ಸಚಿವರ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದ ಹೇಳಿಕೆಗಳನ್ನು ಗಮನಿಸಿ ಮಾತನಾಡಿದ್ದಾರೆ. ರಾಜ್ಯದಲ್ಲಿರುವುದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿತ್ತದೆ. ಹಿಂದೂಗಳನ್ನೇ ಗುರಿಯಾಗಿಸಿಕೊಂಡು, ಗಣೇಶ ವಿಸರ್ಜನೆಯ ಮೆರವಣಿಗೆಗೆ ಕಾದು, ಕಲ್ಲುಗಳ ರಾಶಿ, ಪೆಟ್ರೋಲ್ ಬಾಂಬು, ತಲ್ವಾರ್‌ಗಳನ್ನು ಸಂಗ್ರಹಿಸಿಟ್ಟುಕೊಂಡು ಸಂಪೂರ್ಣ ಪೂರ್ವನಿಯೋಜಿತವಾಗಿ ಈ ದುಷ್ಕೃತ್ಯ ನಡೆಸಲಾಗಿದೆ. ಸ್ಪಷ್ಟವಾಗಿ ಕಾಣುತ್ತಿದ್ದರೂ, ಇದೊಂದು ಆಕಸ್ಮಿಕ ಘಟನೆ, ಸಣ್ಣ ಘಟನೆ ಎಂದು ತಿಪ್ಪೆ ಸಾರಿಸುವಂತೆ ಮಾತನಾಡುತ್ತಿದ್ದಾರೆ. ಈ ರೀತಿ ಮಾತನಾಡಿ ಕಾಂಗ್ರೆಸ್ ಸರ್ಕಾರ, ಮುಸ್ಲಿಂ ಮತಾಂಧರನ್ನು ಓಲೈಕೆ ಮಾಡಲು, ಹಿಂದೂಗಳನ್ನು ಬಲಿಕೊಡಲೂ ಸಿದ್ಧ ಎಂದು ನಿರ್ಧಾರ ಮಾಡಿದಂತಿದೆ ಎಂದು ಕಿಡಿಕಾರಿದ್ದಾರೆ.
ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಕೋಮುಗಲಭೆ ಮತ್ತು ಘಟನೆಯ ನಂತರ ಗೃಹ ಸಚಿವರ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದ ಹೇಳಿಕೆಗಳನ್ನು ಗಮನಿಸಿದರೆ ರಾಜ್ಯದಲ್ಲಿರುವುದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿತ್ತದೆ.
ನಾಗಮಂಗಲದ ಘಟನೆಯಿಂದ ಹೀಗಾದರೆ ನಮ್ಮ ಗತಿ ಏನು ಎಂದು ಇಡೀ ಹಿಂದೂ ಸಮಾಜ ಆತಂಕಗೊಂಡಿದೆ. ರಾಜ್ಯದ ಹಿಂದೂಗಳ ಮನಸ್ಸಿನಲ್ಲಿ ಕಾಡುತ್ತಿರುವ ಈ ಪ್ರಶ್ನೆಗಳಿಗೆ ಕಾಂಗ್ರೆಸ್ ಸರ್ಕಾರ ಉತ್ತರ ಕೊಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಶೋಕ್ ಪ್ರಶ್ನೆಗಳು!?
1.ಕಳೆದ ವರ್ಷ ಅದೇ ಸ್ಥಳದಲ್ಲೇ ಗಲಭೆ ಆಗಿದ್ದರೂ ಈ ವರ್ಷ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಿಲ್ಲವೇಕೆ?
2.ಇಂತಹ ಕೃತ್ಯದ ಇತಿಹಾಸವಿದ್ದರೂ ಗುಪ್ತಚರ ವಿಭಾಗದವರು ಇದರ ಬಗ್ಗೆ ಮಾಹಿತಿ ಕೊಡಲಿಲ್ಲವೇಕೆ? ಇದು ಪೊಲೀಸ್ ಇಲಾಖೆಯ ವೈಫಲ್ಯ ಅಲ್ಲವೇ? ಅಥವಾ ಗುಪ್ತಚರ ಮಾಹಿತಿ ಇದ್ದೂ ಸಹ ನಿರ್ಲಕ್ಷ್ಯ ಮಾಡಲಾಯಿತೇ?
3.ಗಣಪತಿ ಮೆರವಣಿಗೆಗೆ ರೂಟ್ ಮ್ಯಾಪ್ ಹಾಕಿಕೊಟ್ಟು ಅನುಮತಿ ನೀಡಿದ್ದರೂ, ಪೊಲೀಸರು ಮಾರ್ಗದುದ್ದಕ್ಕೂ ಯಾಕೆ ಭದ್ರತೆ ನೀಡಲಿಲ್ಲ?
4.ಪಟ್ಟಣದಲ್ಲಿ ಇದ್ದ ಡಿಎಆರ್ ವ್ಯಾನ್ ಅನ್ನು ಮೆರವಣಿಗೆ ಆರಂಭವಾದ ಬಳಿಕ ಬೇರೆಡೆ ಕಳುಹಿಸಿದ್ದು ಏಕೆ?
5.ಬುಧವಾರ ರಾತ್ರಿ ಗಲಭೆ ಆರಂಭವಾಗಿ ಎರಡು ಗಂಟೆ ಕಳೆದರೂ ಕೇವಲ 40ಕಿಮೀ ದೂರದಲ್ಲಿರುವ ಹೆಚ್ಚಿನ ಸಿಬ್ಬಂದಿಯನ್ನು ಏಕೆ ತುರ್ತಾಗಿ ಕರೆಸಿಕೊಳ್ಳಲಿಲ್ಲ?
6.ಪೊಲೀಸರ ಅನುಮತಿ ಪಡೆದು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದವರನ್ನೇ ಎಫ್‌ಐಆರ್ನಲ್ಲಿ ಎ1 ಮಾಡಿರುವುದೇಕೆ?
7.ಎ1 ನಿಂದ ಎ23 ವರೆಗೆ ಕೇವಲ ಹಿಂದೂಗಳ ಮೇಲೆ ಎಫ್‌ಐಆರ್ ಮಾಡಿ ನಂತರ ಮುಸ್ಲಿಮರ ಹೆಸರು ಸೇರಿಸಿರುವುದು ಯಾವ ಸೀಮೆ ನ್ಯಾಯ? ಗಲಭೆಕೋರರನನ್ನು ರಕ್ಷಿಸಲು ಸರ್ಕಾರ ಮುಂದಾಗಿರುವುದು ತುಷ್ಟೀಕರಣದ ಪರಮಾವಧಿ ಅಲ್ಲವೇ?
8.ಇಷ್ಟಕ್ಕೂ ಮಸೀದಿ ಅಥವಾ ದರ್ಗಾ ಮುಂದೆ ಗಣೇಶೋತ್ಸವ ಮೆರವಣಿಗೆ ಹಾದು ಹೋಗಬಾರದು ಎನ್ನುವುದಕ್ಕೆ ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ?
9.ಪೆಟ್ರೋಲ್ ಬಾಂಬ್, ಕಲ್ಲುಗಳ ರಾಶಿ, ತಲ್ವಾರ್ ಹಾಗೂ ಮಾರಾಕಾಸ್ತ್ರಗಳನ್ನು ಮಸೀದಿಯಲ್ಲಿ ಸಂಗ್ರಹಿಸಿ ದಾಂಧಲೆ ಆರಂಭಿಸಿದ್ದನ್ನು ಗಮನಿಸಿದರೆ ಇದು ಪೂರ್ವನಿಯೋಜಿತ ಕೃತ್ಯ ಎನ್ನುವುದು ಸ್ಪಷ್ಟ ಅಲ್ಲವೇ?
10.ಗಲಭೆಯಲ್ಲಿ ಅಪಾಯಕಾರಿ ವಸ್ತುಗಳ ಬಳಕೆಯಾದರೂ, 25 ಕೋಟಿ ರೂ. ಮೊತ್ತದ ಆಸ್ತಿ-ಪಾಸ್ತಿ ನಷ್ಟ ಸಂಭವಿಸಿದ್ದರೂ, ಗೃಹ ಸಚಿವರಿಗೆ ಇದೊಂದು ಸಣ್ಣ ಘಟನೆ, ಆಕಸ್ಮಿಕ ಘಟನೆ ಅನ್ನಿಸಲು ಕಾರಣ ಏನು? ಅವರಿಗೆ ಆ ರೀತಿ ಮಾಹಿತಿ ನೀಡಿದವರು ಯಾರು? ಅಥವಾ ಈ ರೀತಿ ಹೇಳಲು ಅವರ ಮೇಲೆ ಯಾರದ್ದಾದರೂ ಒತ್ತಡವಿತ್ತೆ? ಅಥವಾ ಕಾಂಗ್ರೆಸ್ ಸರ್ಕಾರ ಯಾರನ್ನಾದರೂ ರಕ್ಷಿಸಲು ಹೊರಟಿದೆಯೇ?
11.ಇಷ್ಟೆಲ್ಲಾ ಅನಾಹುತ ಆಗಿದ್ದರೂ ಬೆಂಗಳೂರಿನಿಂದ ಕೇವಲ 130 ಕಿಮೀ ದೂರವಿರುವ ನಾಗಮಂಗಲಕ್ಕೆ ಗೃಹ ಸಚಿವರು ಇನ್ನೂ ಭೇಟಿ ನೀಡಿಲ್ಲವೇಕೆ? ಈ ರೀತಿ ತಪ್ಪು ಎಫ್‌ಐಆರ್ ದಾಖಲಿಸಲು ಕಾರಣರಾದ ಪೊಲೀಸರನ್ನು ಈ ಕೂಡಲೇ ಅಮಾನತು ಮಾಡಬೇಕು. ಎಫ್‌ಐಆರ್‌ನಲ್ಲಿ ಕೇವಲ ಹಿಂದೂಗಳನ್ನು ಟಾರ್ಗೆಟ್ ಮಾಡುವ ಈ ಹುನ್ನಾರ ಕೈಬಿಡದಿದ್ದರೆ ಬಿಜೆಪಿ ನಾಗಮಂಗಲದಲ್ಲಿ ಬೀದಿಗಿಳಿದು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದೇನೆ ಎಂದಿದ್ದಾರೆ.ಇದನ್ನೂ ಓದಿ: ಬರಲಿದೆ ವಿಜಯ್ ಸೇತುಪತಿ, ತ್ರಿಷಾ ನಟನೆಯ ’96’ ಚಿತ್ರದ ಸೀಕ್ವೆಲ್
ಬೆಂಗಳೂರು: ಭಯೋತ್ಪಾದಕರು ಬಿಜೆಪಿ (BJP) ಕಚೇರಿಯಲ್ಲಿ ಬಾಂಬ್ ಸ್ಫೋಟಿಸುವ ಸಂಚು ಮಾಡಿದ್ದು ಅತ್ಯಂತ ಖಂಡನೀಯ. ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ಕಾಂಗ್ರೆಸ್ (Congress) ಸರ್ಕಾರ ವಿಶೇಷ ಟಾಸ್ಕ್ ಫೋರ್ಸ್ ರಚಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಆಗ್ರಹಿಸಿದರು.
ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಐಟಿ, ಬಿಟಿ ರಾಜಧಾನಿ ಬೆಂಗಳೂರಿನಲ್ಲಿ ಭಯದ ವಾತಾವರಣ ಸೃಷ್ಟಿಸಿ ಆರ್ಥಿಕತೆಯನ್ನು ನಾಶ ಮಾಡಬೇಕೆಂದು ಭಯೋತ್ಪಾದಕರು ಯೋಜನೆ ರೂಪಿಸಿದ್ದರು. ಇದಕ್ಕೆ ಪೂರಕವಾಗಿ ಕಾಂಗ್ರೆಸ್‌ನ ವಿಧಾನಪರಿಷತ್ ಸದಸ್ಯರೊಬ್ಬರು, ಬಾಂಗ್ಲಾ ಮಾದರಿ ಹಲ್ಲೆ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದರು. ಬಾಂಗ್ಲಾದೇಶದಿಂದಲೂ ಹಲವರು ಆಧಾರ್ ಕಾರ್ಡ್ ಪಡೆದು ಬೆಂಗಳೂರಿಗೆ ಬರುತ್ತಿದ್ದಾರೆ. ಇದರಿಂದ ಭಯೋತ್ಪಾದನಾ ಚಟುವಟಿಕೆ ಹೆಚ್ಚುತ್ತಿದೆ. ರಾಜ್ಯ ಗೃಹ ಇಲಾಖೆ ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ವಿಶೇಷ ಟಾಸ್ಕ್ ಫೋರ್ಸ್ ರಚಿಸಬೇಕು ಎಂದರು. ಇದನ್ನೂ ಓದಿ: ನಿಯಂತ್ರಣಕ್ಕೆ ಬಾರದ ಹಿಂಸಾಚಾರ – ಮಣಿಪುರದ ಮೂರು ಜಿಲ್ಲೆಗಳಲ್ಲಿ ಕರ್ಫ್ಯೂ
ರಾಜ್ಯಕ್ಕೆ ನುಸುಳುವ ಬಾಂಗ್ಲಾ ಪ್ರಜೆಗಳನ್ನು ಕೂಡಲೇ ಪತ್ತೆ ಮಾಡಿ ಅವರನ್ನು ಹೊರಕ್ಕೆ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿದೆ. ಇಲ್ಲವಾದರೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಸ್ಥಿತಿಯೇ ರಾಜ್ಯಕ್ಕೂ ಬರಲಿದೆ. ನಮ್ಮ ರಾಜ್ಯದ ಜನರ ಬದುಕು ಭಯೋತ್ಪಾದಕರ ನಿಯಂತ್ರಣಕ್ಕೆ ಹೋಗಬಾರದು. ಸ್ಲೀಪರ್ ಸೆಲ್‌ಗಳನ್ನು ಪತ್ತೆ ಮಾಡುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಅಶೋಕ್ ಒತ್ತಾಯಿಸಿದರು. ಇದನ್ನೂ ಓದಿ: ವಯನಾಡು ದುರಂತದ ಬಳಿಕ ಸರ್ಕಾರ ಅಲರ್ಟ್- ಕಾಫಿನಾಡಲ್ಲಿ 40 ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳಿಗೆ ನೋಟಿಸ್
ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದನ್ನು ಕಾಂಗ್ರೆಸ್ ಸಚಿವರು ನಿರಾಕರಿಸಿದ್ದರು. ಪದೇ ಪದೆ ಭಯೋತ್ಪಾದಕರಿಗೆ ಪ್ರೇರಣೆಯಾಗುವ ಹೇಳಿಕೆಗಳನ್ನು ಕಾಂಗ್ರೆಸ್ ನಾಯಕರು ನೀಡಿದ್ದಾರೆ. ಇದರಿಂದಾಗಿ ಭಯೋತ್ಪಾದನೆಗೆ ಕುಮ್ಮಕ್ಕು ದೊರೆತಿದೆ. ಕರ್ನಾಟಕದಲ್ಲೇ ಭಯೋತ್ಪಾದನೆ ಮಾಡಿದರೆ ಏನೂ ತೊಂದರೆ ಇಲ್ಲ ಎಂದು ಭಯೋತ್ಪಾದಕರಿಗೆ ಅನ್ನಿಸಿದೆ. ಇದಕ್ಕಾಗಿ ಇಲ್ಲಿ ಹೆಚ್ಚು ಉಗ್ರ ಚಟುವಟಿಕೆ ನಡೆಯುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಸ್ಫೋಟಕ್ಕೆ ಉಗ್ರರ ಸಂಚು – ಮಲ್ಲೇಶ್ವರ ಬಿಜೆಪಿ ಕಚೇರಿಗೆ ಪೊಲೀಸ್ ಭದ್ರತೆ ಹೆಚ್ಚಳ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದಕರಿಗೆ ಭಯವೇ ಇಲ್ಲ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾದಾಗ, ಇದು ವ್ಯಾಪಾರ ವ್ಯಾಜ್ಯ ಎಂದು ಸಚಿವರು ಹೇಳಿದ್ದರು. ಇದರಿಂದಾಗಿಯೇ ಭಯೋತ್ಪಾದನಾ ಚಟುವಟಿಕೆ ವ್ಯವಸ್ಥಿತವಾಗಿ ನಡೆಯುತ್ತಿದೆ. ರಾಮೇಶ್ವರಂ ಕೆಫೆ ಬದಲಾಗಿ ಬಿಜೆಪಿ ಕಚೇರಿಯಲ್ಲಿ ಬಾಂಬ್ ಸ್ಫೋಟಿಸಬೇಕೆಂದು ಯೋಜನೆ ರೂಪಿಸಲಾಗಿತ್ತು. ಈ ಪ್ರಕರಣದಲ್ಲಿ ಹಿಂದೂಗಳ ಮೇಲೆ ದಾಳಿ ನಡೆಸಲು ಪ್ಲಾನ್ ಮಾಡಲಾಗಿತ್ತು ಎಂದರು.
ಬೆಂಗಳೂರು: ಈ ದೀಪಾವಳಿಯಲ್ಲಿ ಸಿಎಂಗೆ ಬಾಂಬ್, ಆಟಂ ಬಾಂಬ್, ರಾಕೆಟ್ ಬಾಂಬ್ ಯಾರ‍್ಯಾರಿಟ್ಟಿದ್ದಾರೋ ಗೊತ್ತಿಲ್ಲ. ಆದ್ರೆ ಬಾಂಬ್ ಸಿಡಿಯೋದು ಖಚಿತ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಲೇವಡಿ ಮಾಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಸಿಎಂ (CM) ಹುದ್ದೆಗೆ ನಡೆಯುತ್ತಿರುವ ಪೈಪೋಟಿ ಬಿಜೆಪಿಯವರಿಗಿಂತಲೂ ಕಾಂಗ್ರೆಸ್‌ನವರಿಗೆ ಖಚಿತವಾಗಿದೆ. ಸಿಎಂ ಬದಲಾವಣೆ ನಿಶ್ಚಿತವಾಗಿಬಿಟ್ಟಿದೆ. ಕೋರ್ಟ್‌ನಲ್ಲಿ ಇನ್ನೂ ವಿಚಾರಣೆ ನಡೆಯುತ್ತಲೇ ಇದೆ. ತೀರ್ಪಿಗೂ ಕಾಯದೇ ಸಿಎಂ ಸ್ಥಾನಕ್ಕೆ ಟವೆಲ್ ಹಾಕಿ ಕಾಂಗ್ರೆಸ್‌ನವರೇ ಕಾಯುತ್ತಿದ್ದಾರೆ ಎಂದರು.ಇದನ್ನೂ ಓದಿ: ’ವೆಟ್ಟೈಯಾನ್’ ಚಿತ್ರದ ಸಾಂಗ್ ರಿಲೀಸ್- ಮಂಜು ವಾರಿಯರ್ ಜೊತೆ ತಲೈವಾ ಸಖತ್ ಸ್ಟೆಪ್ಸ್
ಈಗ ಸಿಎಂ ಆಗಲು ಕಾಂಗ್ರೆಸ್‌ನಲ್ಲಿ ಸೀನಿಯಾರಿಟಿ ಅಭಿಯಾನ ನಡೆಯುತ್ತಿದೆ. ದೇಶಪಾಂಡೆ ನಂತರ ಸತೀಶ್ ಜಾರಕಿಹೊಳಿ ಅಭಿಯಾನ ನಡೆಸುತ್ತಿದ್ದಾರೆ. ಎಂ.ಬಿ.ಪಾಟೀಲ್ (M.B.Patil) ನಾನೇ ಸೀನಿಯರ್ ಅಂತಿದ್ದಾರೆ. ಪರಮೇಶ್ವರ್, ತಮಗೆ ಹಿಂದೆ ಅನ್ಯಾಯ ಆಗಿದೆ. ಅದನ್ನು ಸರಿಪಡಿಸಿ ಸಿಎಂ ಮಾಡಿ ಅಂತಿದ್ದಾರೆ. ಬೇರೆಯವರೆಲ್ಲ ಸಿಎಂ ಕುರ್ಚಿಗೆ ಟವೆಲ್ ಹಾಕ್ತಿದ್ರೆ ಡಿಕೆಶಿ (DKS) ಅವರು ಸ್ಟಿಕ್ಕರ್ ಅಂಟಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಸಿದ್ದರಾಮಯ್ಯನವರ (Siddaramaiah) ಪರ ಬಂಡೆಯಂತೆ ಇದ್ದೀವಿ ಅನ್ನೋರೇ ಸಿಎಂ ಆಗ್ತೀವಿ ಅಂತಿದ್ದಾರೆ. ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಬಗ್ಗೆ ದಿನದಿನಕ್ಕೆ ಮ್ಯೂಸಿಕಲ್ ಚೇರ್ ತರ ಫೈಟಿಂಗ್ ಜೋರಾಗಿದೆ. ಸಿಎಂ ಸಿದ್ದರಾಮಯ್ಯನವರು ಸಂಗೊಳ್ಳಿ ರಾಯಣ್ಣನ ಉದಾಹರಣೆ ಮೂಲಕ ಬೆನ್ನಿಗೆ ಚೂರಿ ಹಾಕಲಾಗುತ್ತಿದೆ ಎಂದು ಎರಡು ಸಲ ಹೇಳಿಕೆ ನೀಡಿದ್ದಾರೆ. ಅವರ ಪಕ್ಷದವರೇ ಅವರಿಗೆ ಮೋಸ ಮಾಡುತ್ತಿದ್ದಾರೆ. ಮುಡಾ (MUDA) ಪ್ರಕರಣದಲ್ಲಿ ನಾವ್ಯಾರೂ ಆರ್‌ಟಿಐ ಅರ್ಜಿ ಹಾಕಿಲ್ಲ. ಅವರ ಪಕ್ಷದವರೇ ಎಲ್ಲ ದಾಖಲೆಗಳನ್ನು ಹೊರಗೆ ತಂದಿದ್ದಾರೆ ಎಂದು ಟಾಂಗ್ ಕೊಟ್ಟಿದ್ದಾರೆ.ಇದನ್ನೂ ಓದಿ: ಹರಿಯಾಣದಲ್ಲಿ ಆಪ್-ಕಾಂಗ್ರೆಸ್ ಮೈತ್ರಿಗೆ ಬ್ರೇಕ್? – 20 ಎಎಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್
- ಕೆಲವು ತಿದ್ದುಪಡಿ ಮಾಡಲಿ, ವಿಳಂಬವಾದರೆ 198 ವಾರ್ಡ್‌ಗಳಿಗೆ ಚುನಾವಣೆ ನಡೆಸಲಿ
ಬೆಂಗಳೂರು: ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು (Bengaluru) ವಿಭಜನೆಯಾಗಬಾರದು ಹಾಗೂ ಈ ನಗರ ಕನ್ನಡಿಗರಿಗಾಗಿಯೇ ಇರಬೇಕು ಎಂಬ ಕಾರಣಕ್ಕೆ ರಾಜ್ಯ ಸರ್ಕಾರದ ಬೆಂಗಳೂರು ವಿಭಜನೆ ತೀರ್ಮಾನವನ್ನು ವಿರೋಧಿಸಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R.Ashok) ಹೇಳಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಬ್ಭಾಗವಾಗದೆ ಹೀಗೆಯೇ ಉಳಿಯಬೇಕು. ಇಲ್ಲಿ ಕನ್ನಡಿಗರೇ ಸಾರ್ವಭೌಮರಾಗಿದ್ದು, ಇದು ಕನ್ನಡಿಗರಿಗಾಗಿಯೇ ಉಳಿಯಬೇಕು. ಇಲ್ಲಿ ಕನ್ನಡದವರೇ ಮೇಯರ್ ಆಗಬೇಕು. ಇದಕ್ಕಾಗಿ ಬೆಂಗಳೂರು ವಿಭಜನೆಯನ್ನು ಬಿಜೆಪಿ ಮತ್ತು ಜೆಡಿಎಸ್ ವಿರೋಧಿಸುತ್ತವೆ ಎಂದು ತಿಳಿಸಿದರು.
ಬಿಬಿಎಂಪಿ ಅಡಿಯಲ್ಲಿ ಸ್ಲಂ ಬೋರ್ಡ್, ಜಲಮಂಡಳಿ, ಬಿಎಂಟಿಸಿ ಬರುವುದಿಲ್ಲ. ಇವೆಲ್ಲವೂ ಒಂದೇ ಕಡೆ ಬಂದು, ಬಿಬಿಎಂಪಿಯೇ ನಿರ್ವಹಣೆ ಮಾಡಿದರೆ ಪ್ರತ್ಯೇಕವಾಗಿ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡುವುದು ತಪ್ಪುತ್ತದೆ. ಸರ್ಕಾರಕ್ಕೆ ಖರ್ಚು ಕಡಿಮೆಯಾಗುವುದರ ಜೊತೆಗೆ, ಜನರು ಒಂದೇ ಕಡೆ ಸೇವೆಗಳನ್ನು ಪಡೆಯಬಹುದು. ಬೇರೆ ನಗರಗಳಲ್ಲೂ ಇದೇ ರೀತಿಯಿದ್ದು, ಬೆಂಗಳೂರಿಗೂ ಇಂತಹ ವ್ಯವಸ್ಥೆ ತರಬೇಕಿದೆ ಎಂದರು. ಇದನ್ನೂ ಓದಿ: ದೀಪಾವಳಿಯೊಳಗೆ ಕಾಂಗ್ರೆಸ್ ಸರ್ಕಾರ ಢಮಾರ್: ಸಿಟಿ ರವಿ
ರಾಜ್ಯ ಸರ್ಕಾರದ ಈ ವಿಧೇಯಕದಿಂದ ಕೆಳಹಂತದ ಪುರಪಿತೃಗಳಿರುವ ಸಂಸ್ಥೆಯ ಅಧಿಕಾರ ಕುಂಠಿತವಾಗುವ ಅಪಾಯವಿದೆ. ಆದ್ದರಿಂದ ಇದರಲ್ಲಿ ಬದಲಾವಣೆ ತರಬೇಕಿದೆ. ಈ ತಿದ್ದುಪಡಿ ಮಾಡಲು ಹಾಗೂ ವಾರ್ಡ್ ಹೆಚ್ಚಳಕ್ಕೆ ವಿಳಂಬವಾದರೆ ಹಿಂದಿನಂತೆ 198 ವಾರ್ಡ್‌ಗಳಿಗೆ ಚುನಾವಣೆ ನಡೆಸಬೇಕು. ಈ ಕುರಿತು ರಾಜ್ಯ ಸರ್ಕಾರಕ್ಕೆ ತಿಳಿಸಲಾಗುವುದು. ಮಂಡನೆಯಾಗಿರುವ ವಿಧೇಯಕದಿಂದ ಎಷ್ಟು ಸಮಸ್ಯೆಯಾಗಲಿದೆ ಎಂಬುದನ್ನು ಜನರಿಗೂ ತಿಳಿಸಲಾಗುವುದು ಎಂದರು.
ಇಡೀ ದೇಶಕ್ಕೆ ಒಬ್ಬ ಪ್ರಧಾನಿ, ರಾಜ್ಯಕ್ಕೆ ಒಬ್ಬರೇ ಮುಖ್ಯಮಂತ್ರಿ ಇರುವಂತೆ ಬೆಂಗಳೂರು ನಗರಕ್ಕೆ ಒಬ್ಬ ಮೇಯರ್ ಇರಲಿ. ಅವರ ಅಧಿಕಾರಾವಧಿ ಎರಡೂವರೆ ವರ್ಷ ಅಥವಾ ಐದು ವರ್ಷ ನಿಗದಿಪಡಿಸಿದರೂ ಅಡ್ಡಿಯಿಲ್ಲ ಎಂದರು.
ಕಾಂಗ್ರೆಸ್ ಸರ್ಕಾರ ತಜ್ಞರು ನೀಡಿರುವ ವರದಿಯ ಶೇಕಡಾ ಇಪ್ಪತ್ತರಿಂದ ಮುವತ್ತರಷ್ಟನ್ನು ಮಾತ್ರ ವಿಧೇಯಕದಲ್ಲಿ ಅಳವಡಿಸಿಕೊಂಡಿದೆ ಎಂಬುದನ್ನು ವಿ.ರವಿಚಂದ್ರ ಅವರು ಸ್ಪಷ್ಟಪಡಿಸಿದ್ದಾರೆ. ಜತೆಗೆ ಯಾರಾದರೂ ಕೊರ್ಟ್‌ನಲ್ಲಿ ಪ್ರಶ್ನೆ ಮಾಡಿದರೆ ಬಿದ್ದು ಹೋಗುತ್ತದೆ ಎಂದೂ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅದರಲ್ಲಿರುವ ಲೋಪಗಳನ್ನು ಸರ್ಕಾರಕ್ಕೆ ಮನವರಿಕೆ ಮಾಡುವ ಪ್ರಯತ್ನ ಮಾಡಲಾಗುವುದು. ಒಂದು ವೇಳೆ ಒಪ್ಪದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಎಲ್ಲಾ ವಿಷಯಗಳ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ. ಪ್ರಮುಖರ ಸಮಿತಿ ರಚಿಸಿ ವಿವರವಾಗಿ ವಿಧೇಯಕದ ಬಗ್ಗೆ ಅಧ್ಯಯನ ನಡೆಸಿ ಬದಲಾವಣೆ ಕುರಿತು ವರದಿ ನೀಡಲಾಗುವುದು ಎಂದು ವಿವರಿಸಿದರು.
ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರ ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದ್ದು, ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ರಾಜೀನಾಮೆ ನೀಡಿದರೆ, ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಉಂಟಾಗಿದ್ದು, ಅದಕ್ಕೆ ಪ್ರತ್ಯೇಕ ಪರಿಹಾರ ನೀಡಲು ಸರ್ಕಾರ ಮುಂದಾಗಿಲ್ಲ. ಮಳೆಯಿಂದಾಗಿ ಎಲ್ಲ ಕಡೆ ರಸ್ತೆಗಳು ಹದಗೆಟ್ಟಿವೆ. ರಸ್ತೆಗಳಲ್ಲಿ ಸುಲಲಿತವಾಗಿ ಓಡಾಡುವ ಗ್ಯಾರಂಟಿಯನ್ನು ಸರ್ಕಾರ ನೀಡಬೇಕು. ಹಗರಣಗಳಿಂದಾಗಿ ಸರ್ಕಾರ ಕೋಮಾ ಸ್ಥಿತಿಗೆ ಹೋಗಿದ್ದು, ಎಲ್ಲರೂ ಮುಖ್ಯಮಂತ್ರಿ ಕುರ್ಚಿಗೆ ಟವೆಲ್ ಹಾಕಿದ್ದಾರೆ ಎಂದರು. ಇದನ್ನೂ ಓದಿ: 231 ಸಾಕ್ಷಿ ಕೇಳಿ ಜೈಲಿನಲ್ಲಿ ದರ್ಶನ್ ಶಾಕ್!
ಬೆಂಗಳೂರಿನಲ್ಲಿ ಕಮಿಷನ್ ಆಸೆಗಾಗಿ ಗುತ್ತಿಗೆದಾರರಿಗೆ ಕೊಡಬೇಕಿರುವ 1,500 ಕೋಟಿ ರೂ. ತಡೆಹಿಡಿದಿದ್ದು, ಗುತ್ತಿಗೆದಾರರು ಪ್ರತಿಭಟನೆ ಮಾಡುತ್ತಿದ್ದಾರೆ. ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಎಲ್ಲೆಡೆ ಕಸದ ರಾಶಿ ಬಿದ್ದಿದೆ. ಇದು ಕಾಸಿಲ್ಲದ ಬ್ರ‍್ಯಾಂಡ್ ಬೆಂಗಳೂರಾಗಿದೆ ಎಂದು ದೂರಿದರು. ಇದನ್ನೂ ಓದಿ: ಹಾವೇರಿ ನಗರಸಭೆ `ಬಿಜೆಪಿ’ ತೆಕ್ಕೆಗೆ – ಬಹುಮತವಿದ್ದರೂ ಕಾಂಗ್ರೆಸ್‌ಗೆ ಭಾರೀ ಮುಖಭಂಗ
ಕೆಪಿಎಸ್‌ಸಿಯಲ್ಲಿ ಕನ್ನಡ ಭಾಷಾಂತರ ಮಾಡಲು ಕೂಡ ಯೋಗ್ಯತೆ ಇಲ್ಲ. ಸಿದ್ದರಾಮಯ್ಯನವರು ಕನ್ನಡ ಕಾವಲು ಸಮಿತಿಯ ಅಧ್ಯಕ್ಷರಾಗಿದ್ದರು. ಅಂತಹವರ ಆಡಳಿತದಲ್ಲೇ ಕನ್ನಡ ಪ್ರಶ್ನೆಪತ್ರಿಕೆಯನ್ನು ನೀಡಲು ಸಾಧ್ಯವಾಗಿಲ್ಲ. ಮುಡಾ, ವಾಲ್ಮೀಕಿ ನಿಗಮದ ಹಗರಣದ ಒತ್ತಡದಿಂದಾಗಿ ಕೆಪಿಎಸ್‌ಸಿಯಲ್ಲಿ ಪರೀಕ್ಷೆ ನಡೆಸಲು ಕೂಡ ಸಾಧ್ಯವಾಗಿಲ್ಲ. ಪರೀಕ್ಷೆ ರದ್ದು ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಆದರೆ ಕಳೆದ ಬಾರಿ ಪರೀಕ್ಷೆ ಬರೆದವರಿಗೆ ಈ ಬಾರಿ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಸರ್ಕಾರ ಈ ಜವಾಬ್ದಾರಿಯಿಂದ ನುಣುಚಿಕೊಳ್ಳಬಾರದು ಎಂದು ಅಶೋಕ್ ಆಗ್ರಹಿಸಿದರು. ಇದನ್ನೂ ಓದಿ: ಪಿಎಸ್‌ಐ ಪರೀಕ್ಷೆ ದಿನಾಂಕ ಮುಂದೂಡಿಕೆ ಇಲ್ಲ: ಕೆಇಎ
ಕಾಂಗ್ರೆಸ್ ಬಂದ ಬಳಿಕ ಅತ್ಯಾಚಾರ, ಮಹಿಳಾ ದೌರ್ಜನ್ಯ ಹೆಚ್ಚಿದೆ. ಕಾರ್ಕಳದಲ್ಲಿ (Karkala) ಹಿಂದೂ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದ ಹಿಂದಿರುವ ಮಾದಕ ದ್ರವ್ಯ ಜಾಲದ ಬಗ್ಗೆ ಕಾರ್ಕಳ ನಗರ ಪೊಲೀಸರು ನಡೆಸಿದ ತನಿಖೆಯಲ್ಲಿ ಹಲವು ಮಹತ್ವದ ವಿಚಾರಗಳು ಬಹಿರಂಗೊಂಡಿವೆ. ಇದರ ಹಿಂದೆ ದೊಡ್ಡ ಡ್ರಗ್ಸ್ ಜಾಲವೇ ಇದೆ. ಬಿಜೆಪಿ ಸರ್ಕಾರ ಇದ್ದಾಗ ವಿಶೇಷ ಅಭಿಯಾನ ನಡೆಸಿ ಡ್ರಗ್ಸ್ ನಿಯಂತ್ರಣ ಮಾಡಲಾಗಿತ್ತು. ಈ ಸರ್ಕಾರ ಡ್ರಗ್ಸ್ ದಂಧೆಕೋರರಿಗೆ ಅನುಮತಿ ನೀಡಿದೆ. ಇದರಿಂದಾಗಿ ಯುವತಿ ಮೇಲೆ ಅತ್ಯಾಚಾರವಾಗಿದೆ ಎಂದರು.
– ಅಧಿಕಾರವಿಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಬದುಕಲು ಸಾಧ್ಯವೇ ಇಲ್ಲ – ಕಾಂಗ್ರೆಸ್ ಕುಟುಂಬ ಮೊದಲು, ದೇಶ ಕೊನೆಯಲ್ಲಿ ಎಂಬ ಧ್ಯೇಯ ಹೊಂದಿದೆ
ಬೆಂಗಳೂರು: ಕಾಂಗ್ರೆಸ್ (Congress) ಎಂದರೆ ಅದು ಅಧಿಕಾರದಿಂದ, ಅಧಿಕಾರಕ್ಕೋಸ್ಕರ ಇರುವ ಪಕ್ಷ. ಅಧಿಕಾರ ಇಲ್ಲವೆಂದರೆ ಕಾಂಗ್ರೆಸ್ ಪಕ್ಷದವರು ನೀರಿನಿಂದ ಹೊರಗೆ ಬಿದ್ದ ಮೀನಿನಂತೆ ಚಡಪಡಿಸುತ್ತಾರೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y Vijayendra) ಟೀಕಿಸಿದ್ದಾರೆ.
ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅಧಿಕಾರವಿಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಬದುಕಲು ಸಾಧ್ಯವೇ ಇಲ್ಲ. ಬಿಜೆಪಿ ಮತ್ತೊಂದು ಕಡೆ ಸೇವೆಯೇ ಸಂಘಟನೆ ಎಂಬ ಶ್ರೇಷ್ಠ ಭಾವನೆಯಿಂದ ದೇಶ ಮೊದಲು, ನಂತರ ಪಕ್ಷ ಎಂಬ ಉತ್ತಮ ಸಿದ್ಧಾಂತ ಹೊಂದಿದೆ. ಕೋವಿಡ್ ದಿನಗಳಲ್ಲಿ ದೇಶದ ಇತರ ರಾಜಕೀಯ ಪಕ್ಷದವರು ಮನೆಯಲ್ಲಿ ಕೂತಿದ್ದರು. ಆದರೆ ನಮ್ಮ ಪಕ್ಷವು ದೇಶದ ಲಕ್ಷಾಂತರ ಜನರ ಸಂಕಷ್ಟಕ್ಕೆ ಸ್ಪಂದಿಸಿತ್ತು ಎಂದು ವಿವರಣೆ ನೀಡಿದರು.ಇದನ್ನೂ ಓದಿ: ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆ ಪರಿಶೀಲಿಸಿ ಸೂಕ್ತ ಕ್ರಮ: ಸಿದ್ದರಾಮಯ್ಯ
ಇದೇ ವೇಳೆ ಬಿಜೆಪಿಯ ರಾಜ್ಯ ಸಹ-ಉಸ್ತುವಾರಿ ಸುಧಾಕರ್ ರೆಡ್ಡಿ (Sudhakar Reddy) ಮಾತನಾಡಿ, ಇಲ್ಲಿ ಹಬ್ಬದ ವಾತಾವರಣ ಇದೆ. ಇದಕ್ಕಾಗಿ ವಿಜಯೇಂದ್ರ ಮತ್ತು ಅವರ ತಂಡಕ್ಕೆ ಅಭಿನಂದನೆಗಳು. ಗುರಿ ಮೀರಿ ಸಾಧನೆ ಮಾಡಿ. ನಮ್ಮದು ಸೇವೆ, ನಿಷ್ಠೆಯೊಂದಿಗೆ ದೇಶಹಿತ ಪಕ್ಷ. ಕಾಂಗ್ರೆಸ್ಸಿನದು ಕುಟುಂಬದ ಪಕ್ಷ ಎಂದರು.
ಕಾಂಗ್ರೆಸ್, ಕುಟುಂಬ ಮೊದಲು, ದೇಶ ಕೊನೆಯಲ್ಲಿ ಎಂಬ ಧ್ಯೇಯ ಹೊಂದಿದೆ. ಕಾಂಗ್ರೆಸ್ ಪಕ್ಷವನ್ನು ವಿದೇಶಿಯರು ಸ್ಥಾಪಿಸಿದರೆ, ನಮ್ಮದು ಭಾರತೀಯರೇ ಸ್ಥಾಪಿಸಿದ ಪಕ್ಷ. ಕಾಂಗ್ರೆಸ್‌ನದು ಬೆಲೆ ಏರಿಸುವ, ಬೇಜವಾಬ್ದಾರಿ, ಹಗರಣಗಳ ಸರ್ಕಾರವಾಗಿದೆ. ಖರ್ಗೆ, ಸಿದ್ದರಾಮಯ್ಯರು ಭ್ರಷ್ಟರು. ಮುಖ್ಯಮಂತ್ರಿಯವರಿಗೆ ಆ ಹುದ್ದೆಯಲ್ಲಿ ಮುಂದುವರೆಯುವ ಹಕ್ಕಿಲ್ಲ. ಅವರು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R Ashok) ಮಾತನಾಡಿ, ಕಾಂಗ್ರೆಸ್ ಪಕ್ಷವು ಸದಸ್ಯತ್ವ ಆಧಾರದಲ್ಲಿ ಪಕ್ಷ ಬೆಳೆಸುವುದಿಲ್ಲ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರ ಕುಟುಂಬ ಇದೆಯೇ ಎಂಬುದು ಅವರಿಗೆ ಮಹತ್ವದ್ದು. ಒಂದೊಮ್ಮೆ ರಾಹುಲ್ ಗಾಂಧಿ (Rahul Gandhi) ಅವರಿಗೆ ಬೇಸರವಾಗಿ ಇಟಲಿಗೆ ಹೋದರೆ ಆ ಪಕ್ಷ ಇರುವುದಿಲ್ಲ. ಅದು ಲೀಡರ್‌ಗಳ ಪಕ್ಷ. ನಮ್ಮದು ಕಾರ್ಯಕರ್ತರ ಪಕ್ಷ ಎಂದು ತಿಳಿಸಿದರು.ಇದನ್ನೂ ಓದಿ: ಕಳಸಾ-ಬಂಡೂರಿ ಕಾಮಗಾರಿ ಪ್ರಾರಂಭಕ್ಕೆ ಕೇಂದ್ರದ ಮೇಲೆ ಒತ್ತಡ ಹಾಕಲು ಸಭೆ ಕರೆಯಿರಿ- ಸಿಎಂಗೆ ಕೋನರೆಡ್ಡಿ ಒತ್ತಾಯ
ಸದಸ್ಯತ್ವವನ್ನು ವಿಸ್ತೃತವಾಗಿ ಮಾಡಬೇಕಿದೆ. ಅದಕ್ಕಾಗಿ ಬೀದಿಗೆ ಇಳಿಯಬೇಕು. ಕಾಂಗ್ರೆಸ್ ಪಕ್ಷವು ಹೆಸರಿಗೆ ಬೇಕಾಗಿ ಹಣ ತಾವೇ ನೀಡಿ ಸದಸ್ಯರನ್ನು ಮಾಡುತ್ತದೆ. ಇಲ್ಲಿ ಹಾಗಿಲ್ಲ. ನಾವು ಸದಸ್ಯತ್ವಕ್ಕೆ ಶುಲ್ಕ ಇಟ್ಟಿಲ್ಲ. ಸಕ್ರಿಯ ಸದಸ್ಯರು 100 ರೂ. ಕೊಡಬೇಕಿದೆ. ಬಿಜೆಪಿಯ ಜೀವ ಕಾರ್ಯಕರ್ತರು ಮತ್ತು ಸದಸ್ಯರಲ್ಲಿದೆ ಎಂದರು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy)ಮಾತನಾಡಿ, ಸದಸ್ಯತ್ವ ನೋಂದಣಿ ಕಾರ್ಯವು ಹಬ್ಬದ ಮಾದರಿಯಲ್ಲಿ ನಡೆಯಲಿ. ರಾಜ್ಯದಲ್ಲಿ ನಾವು ಯಾವುದೇ ಸಂದರ್ಭದಲ್ಲೂ ಚುನಾವಣೆ ಎದುರಿಸುವ ಸ್ಥಿತಿ ಬರಬಹುದು. ಆದ್ದರಿಂದ ಪಕ್ಷವನ್ನು ಬಲಪಡಿಸಲು ಶ್ರಮಿಸೋಣ ಎಂದು ಅಭಿಪ್ರಾಯಪಟ್ಟರು.
ಬಿಜೆಪಿ ತಳಮುಖವಾಗಿ ಮೇಲಕ್ಕೆ ಬೆಳೆದ ಪಕ್ಷ. ಇದರ ಶಕ್ತಿ ನಾಯಕರಲ್ಲ. ಬಿಜೆಪಿ ಶಕ್ತಿ ಕಾರ್ಯಕರ್ತರ ರೂಪದಲ್ಲಿದೆ. ಸಮಾಜದ ಅನೇಕಾನೇಕ ಪ್ರಕೋಷ್ಠಗಳಲ್ಲಿ ಕೆಲಸ ಮಾಡುವವರೇ ಕಾರ್ಯಕರ್ತರು. 1980ರಲ್ಲಿ 1% ರಷ್ಟು ಮತ ಪಡೆದರೆ ಖುಷಿ ಪಡುವ ಪಕ್ಷ ನಮ್ಮದಾಗಿತ್ತು. ಇದೀಗ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲೇ ಅತಿ ಹೆಚ್ಚು ಸದಸ್ಯರನ್ನು ಹೊಂದಿದ ಪಕ್ಷ ಬಿಜೆಪಿ. ಹಿಂದೆ ದೇಶದಲ್ಲಿ 18 ಕೋಟಿ ಸದಸ್ಯರಿದ್ದು, ರಾಜ್ಯದಲ್ಲಿ 1.04 ಕೋಟಿ ಸದಸ್ಯರಿದ್ದರು. ವಿಜಯೇಂದ್ರ ಅವರು ಅಧ್ಯಕ್ಷರಾದ ಬಳಿಕ ನವಚೈತನ್ಯ ನಮ್ಮ ಪಕ್ಷಕ್ಕೆ ಲಭಿಸಿದೆ. ನಮ್ಮ ಶಕ್ತಿ ಈಗ ಏರುಮುಖವಾಗುತ್ತಿದೆ. ಕಾಂಗ್ರೆಸ್ ಪಕ್ಷದ ಆಡಳಿತವುಳ್ಳ ರಾಜ್ಯಗಳು ಇಳಿಮುಖವಾಗುತ್ತಿದೆ ಎಂದರು.
ಸAಸದರಾದ ಗೋವಿಂದ ಕಾರಜೋಳ, ಪಿ.ಸಿ.ಮೋಹನ್, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್ ಕುಮಾರ್, ಪ್ರೀತಂ ಗೌಡ, ಶಾಸಕರಾದ ಗೋಪಾಲಯ್ಯ, ರಾಮಮೂರ್ತಿ, ಎಸ್‌ಆರ್ ವಿಶ್ವನಾಥ್, ಮುನಿರತ್ನ, ಪ್ರಕೋಷ್ಠಗಳ ಸಂಯೋಜಕ ದತ್ತಾತ್ರಿ, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಕೋರ್ ಕಮಿಟಿ ಸದಸ್ಯರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.ಇದನ್ನೂ ಓದಿ: ಪ್ರೀತಿಸಲು ಕೋರ್ಟ್ ಅನುಮತಿ ಬೇಡ: ಮದುವೆ ಲೈಫ್ ಬಗ್ಗೆ ಮಾತನಾಡಿದ ರಿಯಾ ಚಕ್ರವರ್ತಿ
ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಸದಸ್ಯತ್ವ ಅಭಿಯಾನದ ಸಂಚಾಲಕ ನಂದೀಶ್ ರೆಡ್ಡಿ ಸ್ವಾಗತಿಸಿದರು. ಒಂದೇ ದಿನದಲ್ಲಿ 50.31 ಲಕ್ಷ ಜನರಿಗೂ ಹೆಚ್ಚು ಜನರು ಸದಸ್ಯರಾಗಿದ್ದಾರೆ. ಈಗ ಕರ್ನಾಟಕ ರಾಜ್ಯದಲ್ಲಿ 5 ಲಕ್ಷಕ್ಕೂ ಹೆಚ್ಚು ಸದಸ್ಯರ ನೋಂದಣಿ ಆಗಿದೆ ಎಂದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಕಾರ್ಯಕ್ರಮ ನಿರ್ವಹಿಸಿದರು.