Tag: r ashok

  • ಈ ಸರ್ಕಾರ ಪಾಪರ್ ಸರ್ಕಾರ- ಗುಂಡಿ ಮುಚ್ಚೋಕು ಕಾಸಿಲ್ಲ: ಅಶೋಕ್ ಕಿಡಿ

    ಈ ಸರ್ಕಾರ ಪಾಪರ್ ಸರ್ಕಾರ- ಗುಂಡಿ ಮುಚ್ಚೋಕು ಕಾಸಿಲ್ಲ: ಅಶೋಕ್ ಕಿಡಿ

    ಬೆಂಗಳೂರು : ಈ ಸರ್ಕಾರ ಪಾಪರ್ ಆಗಿದ್ದು ಗುಂಡಿ ಮುಚ್ಚೋಕೆ ಸರ್ಕಾರದ ಬಳಿ ಹಣ ಇಲ್ಲ. ಈ ಸರ್ಕಾರ ಬೆಂಗಳೂರನ್ನು (Bengaluru) ಬ್ರ‍್ಯಾಂಡ್ ಬೆಂಗಳೂರು ಮಾಡುತ್ತಿಲ್ಲ. ಕಾಸು ಇಲ್ಲದ ಬ್ರ‍್ಯಾಂಡ್ ಬೆಂಗಳೂರು ಮಾಡಲು ಹೊರಟಿದ್ದಾರೆ ಎಂದು ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ (R Ashok) ಕಿಡಿಕಾರಿದ್ದಾರೆ.

    ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ (DK Shivakumar) ಅವರು ಬೇಜವಾಬ್ದಾರಿ ಹೇಳಿಕೆ ಕೊಡುತ್ತಿದ್ದಾರೆ. ಕಂಟ್ರಾಕ್ಟರ್ ಪ್ರತಿಭಟನೆ ಮಾಡುತ್ತಿದ್ದಾರೆ. ಕಮೀಷನ್ ಜಾಸ್ತಿ ಆಗಿದೆ ಅಂತಾನೋ? ಬಿಲ್ ಬಂದಿಲ್ಲ ಅಂತ ಮಾಡ್ತಿದ್ದಾರೋ ಗೊತ್ತಿಲ್ಲ. 25% ಹಣ ಅಂದರೆ ಸುಮಾರು 1500 ಕೋಟಿ ಹಣ ತಡೆದು ಹಿಡಿದಿದ್ದಾರೆ. ಬೆಂಗಳೂರಿನಲ್ಲಿ ಮಾತ್ರ ಹಣ ತಡೆ ಹಿಡಿಯಲಾಗಿದೆ. ಯಾಕೆ ಕಮೀಷನ್‌ಗಾಗಿ ತಡೆ ಹಿಡಿಯಲಾಗಿದೆಯಾ ಎಂದು ಪ್ರಶ್ನೆ ಮಾಡಿದರು.  ಇದನ್ನೂ ಓದಿ: ಇಸ್ಲಾಂಗೆ ಮತಾಂತರವಾಗುವಂತೆ ವೈದ್ಯನಿಂದ ಕಿರುಕುಳ – ಉಡುಪಿಯಲ್ಲಿ ಆರೋಪಿ ಬಂಧನ

    ಬೆಂಗಳೂರಿನಲ್ಲಿ ರಸ್ತೆ ಮೇಲೆ ಗುಂಡಿ ಬಿದ್ದಿವೆ. ಗುಂಡಿಗಳು ಇರುವುದರಿಂದ ಬಸ್ ಓಡಾಟ ಸರಿಯಾಗಿ ಆಗುತ್ತಿಲ್ಲ. ಗುಂಡಿ ಮುಚ್ಚೋಕು ಈ ಸರ್ಕಾರಕ್ಕೆ ಯೋಗ್ಯತೆ ಇಲ್ವಾ ಎಂದು ಕಿಡಿಕಾರಿದ್ದಾರೆ.

    ಲೋಕಾಯುಕ್ತರು ರಸ್ತೆ ಕಸ ನೋಡಿ ಛೀಮಾರಿ ಹಾಕಿದ್ದಾರೆ. ಗುಂಡಿ, ಕಸ ಏನು ಈ ಸರ್ಕಾರಕ್ಕೆ ಕಾಣುತ್ತಿಲ್ಲ. ಎಲ್ಲಾ ಕಡೆ ಪ್ರವಾಹ ಜಾಸ್ತಿ ಆಗಿದೆ. ಅದಕ್ಕೂ ಹಣ ಬಿಡುಗಡೆ ಮಾಡಿಲ್ಲ. ಸಿಎಂ ಎಲ್ಲೂ ಹಣ ಬಿಡುಗಡೆ ಬಗ್ಗೆ ಮಾತಾಡಿಲ್ಲ. ಯಾದಗಿರಿ, ಕಲಬುರಗಿ, ಹಲವು ಭಾಗದಲ್ಲಿ ಅನಾಹುತ ಆಗುತ್ತಿದೆ. ಸರ್ಕಾರ ಏನು ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದರು. ಇದನ್ನೂ ಓದಿ: ನಾನು ಛಲವಾದಿ, ನನ್ನ ವಿರುದ್ಧ ದೂರು ಕೊಟ್ಟರೂ ನಾನು ಹೆದರಲ್ಲ: ನಾರಾಯಣಸ್ವಾಮಿ

    ರಾಜ್ಯದ ರಸ್ತೆಗಳು ಹದಗೆಟ್ಟಿವೆ. ಸರ್ಕಾರ 5 ಗ್ಯಾರಂಟಿ ಜೊತೆಗೆ ಸುಲಲಿತವಾಗಿ ರಸ್ತೆಯಲ್ಲಿ ಓಡಾಡೋ ಗ್ಯಾರಂಟಿ ಕೊಡಬೇಕು. ಈ ಸರ್ಕಾರ ಕೋಮಾ ಸ್ಥಿತಿಗೆ ಹೋಗಿದೆ. ನಿತ್ಯ ಒಬ್ಬೊಬ್ಬರು ಸಿಎಂ ಸ್ಥಾನದ ಮೇಲೆ ಕಲರ್ ಕಲರ್ ಟವಲ್ ಹಾಕಿ ಹೋಗುತ್ತಿದ್ದಾರೆ ವ್ಯಂಗ್ಯವಾಡಿದರು. ಇದನ್ನೂ ಓದಿ: ರಾಮಕೃಷ್ಣ ಹೆಗಡೆಯಂತೆ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ: ಆರ್.ಅಶೋಕ್‌ 

    ಜಮೀರ್, ದೇಶಪಾಂಡೆ, ಪರಮೇಶ್ವರ್, ಜಾರಕಿಹೋಳಿ ಒಂದೊಂದು ರೀತಿ ಸಿಎಂ ಸ್ಥಾನದ ಮೇಲೆ ಟವಲ್ ಹಾಕುತ್ತಿದ್ದಾರೆ. ಮುಡಾ ಎಂಬ ಮ್ಯೂಸಿಕಲ್ ಚೇರ್ ನಡೆಯುತ್ತಿದೆ. ಮ್ಯೂಸಿಕ್ ನಿಂತ ಕೂಡಲೇ ಸಿಎಂ ಸ್ಥಾನದ ಮೇಲೆ ಕೂತುಕೊಳ್ಳೋಕೆ ಟವಲ್ ಹಾಕುತ್ತಿದ್ದಾರೆ. ಸಿದ್ದರಾಮಯ್ಯ (CM Siddaramaiah) ಸಿಎಂ ಸ್ಥಾನದಿಂದ ಕೆಳಗಿಳಿದರೆ ಕುಳಿತುಕೊಳ್ಳೋಣ ಎಂದು ಸಿದ್ಧರಾಗಿದ್ದಾರೆ. ಈ ಸರ್ಕಾರಕ್ಕೆ ಲಂಗು ಲಗಾಮು ಇಲ್ಲ ಎಂದು ವಾಗ್ದಾಳಿ ನಡೆಸಿದರು.

    ಅಂಗನವಾಡಿ ಕಟ್ಟಡಗಳು ಸರಿಯಿಲ್ಲ. ಅಂಗನವಾಡಿಯವರಿಗೆ ಕೊಡಲು ಸಂಬಳವಿಲ್ಲ. ಹೀಗಿದ್ದರೂ ರೀಲ್ಸ್ ಮಾಡಿ ಕಳಿಸಿ ಅಂತ ಸಚಿವರು ಹೇಳುತ್ತಿದ್ದಾರೆ ಅಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಹಾವೇರಿ ವಿವಿಯ ಕುಲಸಚಿವರಾಗಿದ್ದ ದಿನೇಶ್ ಕುಮಾರ್ ನೇಮಕಾತಿ ರದ್ದು

  • ರಾಮಕೃಷ್ಣ ಹೆಗಡೆಯಂತೆ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ: ಆರ್.ಅಶೋಕ್‌ 

    ರಾಮಕೃಷ್ಣ ಹೆಗಡೆಯಂತೆ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ: ಆರ್.ಅಶೋಕ್‌ 

    ಬೆಂಗಳೂರು:ಮುಡಾ ಕೇಸ್‌ನಲ್ಲಿ (MUDA case ) ಹಗರಣ ಆಗಿಯೇ ಇಲ್ಲ ಎದವರು ಹಿಂದಿನ ಕಮಿಷನರ್‌ರನ್ನ ಯಾಕೆ ಅಮಾನತು ಮಾಡಿದ್ರಿ? ಇದರಿಂದ ಮುಡಾದಲ್ಲಿ ಹಗರಣ ಆಗಿರುವುದು ಗೊತ್ತಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ವಿಪಕ್ಷ ನಾಯಕ ಆರ್‌.ಅಶೋಕ್‌ (R.Ashok) ವಾಗ್ದಾಳಿ ನಡೆಸಿದ್ದಾರೆ.

    ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಒಂದೇ ಒಂದೇ ವರ್ಷದಲ್ಲಿ ಅನೇಕ ಹಗರಣದಲ್ಲಿ ಸಿಕ್ಕಿ ಹಾಕಿಕೊಂಡಿದೆ. ಹೆಡ್ ಮಾಸ್ಟರ್ ಸಿದ್ದರಾಮಯ್ಯ ಹಗರಣದಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ. ಇದು ನಾಚಿಕೆಗೇಡು. ಮುಡಾದಲ್ಲಿ ದೊಡ್ಡ ಆಕ್ರಮ ಆಗಿದೆ. ಹೈಕಮಾಂಡ್ ಸಿದ್ದರಾಮಯ್ಯ ಅವರನ್ನ ಎರಡು ಬಾರಿ ಕರೆದು ವಿವರಣೆ ಕೇಳಿದೆ. ಈಗ ಮುಡಾ ಅಧಿಕಾರಿಯನ್ನ ಅಮಾನತು ಮಾಡಿದ್ದಾರೆ. ಸಿದ್ದರಾಮಯ್ಯ, ಕಾಂಗ್ರೆಸ್‌ನವರು ಏನು ತಪ್ಪಿಲ್ಲ ಎಂದಿದ್ದರು. ಹಾಗಾದರೆ ಈಗ ಯಾಕೆ ಅಧಿಕಾರಿ ಅಮಾನತು ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಕೊಡಿಸಲು ಕೋರ್ಟ್‌ನಲ್ಲಿ ಹೋರಾಟ: ಜಿ.ಪರಮೇಶ್ವರ್

    50:50 ಅನುಪಾತವೇ ಅಕ್ರಮ ಆಗಿದೆ ಅಂತ ಅಮಾನತು ಮಾಡಿದ್ದಾರೆ. ಇದಕ್ಕಿಂತ ಸಾಕ್ಷಿ ಬೇಕಾ? ಪದೇ ಪದೇ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್‌ನವರು ಮಾತಾಡ್ತಾರೆ. ತನಿಖೆಗೆ ಮಾತ್ರ ರಾಜ್ಯಪಾಲರು ಆದೇಶ ಮಾಡಿದ್ರು. ಕಾಂಗ್ರೆಸ್ ಅವರು ಏನು ತಪ್ಪೇ ಮಾಡಿಲ್ಲ ಎಂದು ಸಹ, ಆಯೋಗ ಯಾಕೆ ಮಾಡಿದ್ರಿ? ಸಿಎಂ ಮೇಲೆ ಆರೋಪ ಬಂದಿದೆ. ಅವರೇ ಆಯೋಗ ರಚನೆ ಮಾಡೋಕೆ ಅಧಿಕಾರ ಇದೆಯಾ? ಅವರ ಮೂಗಿನ ನೇರಕ್ಕೆ ಆಯೋಗ ರಚನೆ ಮಾಡೋದಾ? ಇಲ್ಲಿ ಸ್ಪಷ್ಟವಾಗಿ ಹಗರಣ ಆಗಿದೆ. ಕೋರ್ಟ್ ಕೂಡಾ ಎಲ್ಲಾ ನೋಡ್ತಿದೆ. ಜನರ ಹಣ ಉಳಿಸೋ ಕೆಲಸ ಕೋರ್ಟ್ ಮಾಡೋ ವಿಶ್ವಾಸ ನಮಗೆ ಇದೆ ಎಂದಿದ್ದಾರೆ.

    ಮಾಜಿ ಸಿಎಂ ರಾಮಕೃಷ್ಣ ಹೆಗಡೆಯವರ ‌ಮೇಲೆ ಆರೋಪ ಬಂದಾಗ ಅವರು ರಾಜೀನಾಮೆ ಕೊಟ್ಟಿದ್ದರು. ಅದೇ ರೀತಿ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ‌ಎದುರಿಸಲಿ ಎಂದು ಸವಾಲ್‌ ಹಾಕಿದ್ದಾರೆ. ಇದನ್ನೂ ಓದಿ: ಹಾವೇರಿ ವಿವಿಯ ಕುಲಸಚಿವರಾಗಿದ್ದ ದಿನೇಶ್ ಕುಮಾರ್ ನೇಮಕಾತಿ ರದ್ದು

  • ಚನ್ನಪಟ್ಟಣ ಟಿಕೆಟ್ ಫೈಟ್; ಜೆ.ಪಿ.ನಡ್ಡಾ ಭೇಟಿಯಾದ ರಾಜ್ಯ ಬಿಜೆಪಿ ನಾಯಕರು

    ಚನ್ನಪಟ್ಟಣ ಟಿಕೆಟ್ ಫೈಟ್; ಜೆ.ಪಿ.ನಡ್ಡಾ ಭೇಟಿಯಾದ ರಾಜ್ಯ ಬಿಜೆಪಿ ನಾಯಕರು

    – ಟಿಕೆಟ್ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತೆ: ಆರ್.ಅಶೋಕ್
    – ನಿಖಿಲ್ ಕುಮಾರಸ್ವಾಮಿಗೆ ಚನ್ನಪಟ್ಟಣ ಫೇವರೆಟ್ ಎಂದ ವಿಪಕ್ಷ ನಾಯಕ

    ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆಗೆ (Channapatna Bypoll) ಟಿಕೆಟ್ ಫೈಟ್ ಜೋರಾಗಿದ್ದು, ರಾಜ್ಯ ಬಿಜೆಪಿ ನಾಯಕರು ದೆಹಲಿಗೆ (New Delhi) ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (J.P.Nadda) ಅವರನ್ನು ಶನಿವಾರ ಭೇಟಿಯಾದರು.

    ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R.Ashok) ಅವರ ನೇತೃತ್ವದಲ್ಲಿ ದೆಹಲಿಗೆ ತೆರಳಿದ್ದ ಬಿಜೆಪಿ ನಾಯಕರು, ಜೆ.ಪಿ ನಡ್ಡಾ ನಿವಾಸದಲ್ಲಿ ಚುನಾವಣೆ ಕುರಿತು ಸುಮಾರು ಅರ್ಧ ಗಂಟೆ ಚರ್ಚೆ ನಡೆಸಿದರು. ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಉತ್ಸವವನ್ನು ಜನೋತ್ಸವವನ್ನಾಗಿ ಆಚರಿಸಿ: ಪ್ರಿಯಾಂಕ್‌ ಖರ್ಗೆ

    ರಾಷ್ಟ್ರೀಯ ಅಧ್ಯಕ್ಷರ ಭೇಟಿ ಬಳಿಕ ಆರ್.ಅಶೋಕ್ ಮಾತನಾಡಿ, ನಿನ್ನೆ ರಾತ್ರಿ ಚನ್ನಪಟ್ಟಣದ ವಿಚಾರ ಸುದೀರ್ಘ ಚರ್ಚೆಯಾಗಿದೆ. ಇಂದು ಬಿ.ಎಲ್.ಸಂತೋಷ್ ಮತ್ತು ಜೆ.ಪಿ ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇವೆ. ಚನ್ನಪಟ್ಟಣದ ಬಗ್ಗೆ ಹೆಚ್ಚು ಚರ್ಚೆಯಾಗಿದೆ ಎಂದು ತಿಳಿಸಿದರು.

    ಡಿ.ಕೆ.ಶಿವಕುಮಾರ್ ಚನ್ನಪಟ್ಟಣ ಹೇಳಿಕೆ ವಿಚಾರವಾಗಿ ಮಾತನಾಡಿ, ಚನ್ನಪಟ್ಟಣಕ್ಕೆ ಹೋಗಿ ಕಿವಿ ಮೇಲೆ ಹೂವಿಡಲು ಸಾಧ್ಯವಿಲ್ಲ. ಚನ್ನಪಟ್ಟಣ ಜನ ಜಾಣರಿದ್ದಾರೆ. ಮಂಡ್ಯ ವಿಚಾರದಲ್ಲೂ ಅದೇ ರೀತಿಯಲ್ಲಿ ಹೇಳಿದ್ರು. ಕುಮಾರಸ್ವಾಮಿ ಮೂರನೇ ಸ್ಥಾನಕ್ಕೆ ಹೋಗ್ತಾರೆ ಅಂದಿದ್ರು. ಆದರೆ ಕುಮಾರಸ್ವಾಮಿ ಕೇವಲ ಎರಡು ದಿನ ಪ್ರಚಾರಕ್ಕೆ ಹೋಗಿ ಗೆಲುವು ಸಾಧಿಸಿದ್ರು. ಕಳೆದ ಬಾರಿ ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ಗೆ ಕೇವಲ 20 ಸಾವಿರ ವೋಟ್ ಬಂದಿದೆ. ಅದ್ಹೇಗೆ ಗೆಲ್ಲುತ್ತಾರೆ, ಜನರು ಇವರ ನಾಟಕ ನೋಡಿದ್ದಾರೆ. ಡಿಕೆಶಿ ವಿಸಿಟಿಂಗ್ ಡಾಕ್ಟರ್ ಇದ್ದ ಹಾಗೆ. ಚುನಾವಣೆ ಬಂದಾಗ ಮಾತ್ರ ಹೋಗ್ತಾರೆ. ವಿಸಿಟಿಂಗ್ ಡಾಕ್ಟರ್ ಆಪರೇಷನ್ ಇದ್ದಾಗ ಮಾತ್ರ ಹೋಗ್ತಾರಲ್ಲ ಹಾಗೆ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಬೆಂಗಳೂರಿಗೆ ಹರಿಯುತ್ತಾ ಶರಾವತಿ ನೀರು? – ಕಾರ್ಯ ಸಾಧ್ಯತೆ ವರದಿ ಪಡೆಯಲು ಸರ್ಕಾರ ತಯಾರಿ

    ಎನ್‌ಡಿಎ ನಾಯಕರು ಟಿಕೆಟ್ ಬಗ್ಗೆ ನಿರ್ಧಾರ ಮಾಡ್ತಾರೆ. ನಿಖಿಲ್ ಕುಮಾರಸ್ವಾಮಿಗೆ ಚನ್ನಪಟ್ಟಣ ಫೇವರೆಟ್. ಅವರು ಜೆಡಿಎಸ್ ಯುವ ಘಟಕದ ಅದ್ಯಕ್ಷರು, ಎಲ್ಲಿ ಬೇಕಾದ್ರು ಚುನಾವಣೆಗೆ ನಿಲ್ಲಬಹುದು. 224 ಕ್ಷೇತ್ರಗಳು ಜೆಡಿಎಸ್-ಬಿಜೆಪಿ ಕ್ಷೇತ್ರಗಳು. ಇಲ್ಲಿ ಕ್ಷೇತ್ರ ಬಿಟ್ಟುಕೊಡುವ ಪ್ರಶ್ನೆ ಬರಲ್ಲ. ಟಿಕೆಟ್ ಹೈಕಮಾಂಡ್ ನಿರ್ಧಾರ ಮಾಡ್ತಾರೆ. ಚುನಾವಣೆ ಘೋಷಣೆಯಾದ ಬಳಿಕ ಅಭ್ಯರ್ಥಿ ಘೋಷಣೆ ಮಾಡ್ತಾರೆ ಎಂದು ತಿಳಿಸಿದರು.

  • ಕಾಂಗ್ರೆಸ್ ದ್ವೇಷ ರಾಜಕಾರಣ ಮಾಡುತ್ತಿದೆ, ಯತ್ನಾಳ್ ಅವರ ನ್ಯಾಯದ ಹೋರಾಟಕ್ಕೆ ನಮ್ಮ ಬೆಂಬಲ- ಆರ್.ಅಶೋಕ್

    ಕಾಂಗ್ರೆಸ್ ದ್ವೇಷ ರಾಜಕಾರಣ ಮಾಡುತ್ತಿದೆ, ಯತ್ನಾಳ್ ಅವರ ನ್ಯಾಯದ ಹೋರಾಟಕ್ಕೆ ನಮ್ಮ ಬೆಂಬಲ- ಆರ್.ಅಶೋಕ್

    -ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಜೊತೆ ಈಗ ಖರ್ಗೆ ಹಗರಣ ನಡೆದಿದೆ
    -ಪಂಚೆ ಉಟ್ಟುಕೊಂಡು ಬಂದ್ರೆ ಬೆಲೆ ಇಲ್ಲ. ಸೂಟು ಬೂಟು ಧರಿಸಿ, ಹಣದ ಸೂಟ್‌ಕೇಸ್ ಜೊತೆ ಬಂದ್ರೆ ಮಾತ್ರ ಬೆಲೆ

    ಬೆಂಗಳೂರು: ಕಲಬುರ್ಗಿ (Kalburgi) ಜಿಲ್ಲೆಯ ಸಿದ್ದಸಿರಿ ಸಕ್ಕರೆ ಕಾರ್ಖಾನೆಯ (Siddasiri Sugar Factory) ಮರು ಆರಂಭಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ (Congress) ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ನ್ಯಾಯಕ್ಕಾಗಿ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಹೇಳಿದರು.

    ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕಚೇರಿಯಲ್ಲಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಅವರೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹಿಂದುಳಿದ ಪ್ರದೇಶವಾದ ಕಲಬುರ್ಗಿಯಲ್ಲಿ ಮುಳುಗಿಹೋಗಿದ್ದ ಸಕ್ಕರೆ ಕಾರ್ಖಾನೆಯನ್ನು ಶಾಸಕ ಯತ್ನಾಳ್ ಅಭಿವೃದ್ಧಿಪಡಿಸಿದ್ದಾರೆ. ಈ ಕಾರ್ಖಾನೆಯಿಂದ ಎರಡು ಸಾವಿರ ಜನರಿಗೆ ಉದ್ಯೋಗ ದೊರೆತಿದೆ. ಸಾವಿರಾರು ರೈತರಿಗೆ ಲಾಭವಾಗುತ್ತಿದೆ ಎಂದರು.ಇದನ್ನೂ ಓದಿ: ಪ್ರಮೋದ್ ಚಿತ್ರಕ್ಕೆ ಸಾಥ್ ನೀಡಿದ ಕಿಚ್ಚ ಸುದೀಪ್

    ಇಲ್ಲಿನ ಅಧಿಕಾರಿಗಳು ಸ್ಥಳಕ್ಕೆ ಬಾರದೆ ವಿಧಾನಸೌಧದ ಕಡೆಗೆ ಮುಖ ಮಾಡಿಕೊಂಡು ಕೂತಿದ್ದಾರೆ. ಒಂದು ಕಡೆ ಮುಡಾ ಹಗರಣ (MUDA), ಮತ್ತೊಂದು ಕಡೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಇನ್ನೊಂದು ಖರ್ಗೆ ಹಗರಣ ನಡೆದಿದೆ. ಇಂತಹ ಸ್ಥಿತಿಯಲ್ಲಿ ಸ್ವಾಯತ್ತ ಸಂಸ್ಥೆಯ ಮೇಲೆ ಈ ಕೆಟ್ಟ ಸರ್ಕಾರ ಒತ್ತಡ ಹೇರಿದೆ. ಕಾಂಗ್ರೆಸ್ ದ್ವೇಷ ರಾಜಕಾರಣ ಮಾಡುತ್ತಿದೆ. ಹೈಕೋರ್ಟ್ ಆದೇಶವಿದ್ದರೂ ಕಾರ್ಖಾನೆ ಮರು ಆರಂಭಕ್ಕೆ ಅನುಮತಿ ನೀಡುತ್ತಿಲ್ಲ. ಇದರ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.

    ಶಾಸಕ ಯತ್ನಾಳ್ ಅವರು ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ನಾವೆಲ್ಲರೂ ಅವರ ಹೋರಾಟಕ್ಕೆ ಬೆಂಬಲ ನೀಡುತ್ತಿದ್ದೇವೆ. ಇದು ಸ್ವಾಯತ್ತ ಸಂಸ್ಥೆಯಾಗಿದ್ದರೂ, ಇಲ್ಲಿ ಸ್ವಾತಂತ್ರ‍್ಯ ಕಾಣುತ್ತಿಲ್ಲ. ಅಧಿಕಾರಿಗಳು ಪ್ರತಿಯೊಂದಕ್ಕೂ ಸಚಿವರ ಕಡೆ ನೋಡುವ ಅಭ್ಯಾಸ ಬೆಳೆಸಿಕೊಂಡಿದ್ದಾರೆ ಎಂದು ದೂರಿದರು.ಇದನ್ನೂ ಓದಿ: Video | ಆ.31ಕ್ಕೆ ಪವಿತ್ರಾಗೌಡ ಬೇಲ್‌ ಭವಿಷ್ಯ – ಅಲ್ಲಿವರೆಗೂ ಜೈಲೇ ಗತಿ

    ಮಾಲಿನ್ಯ ನಿಯಂತ್ರಣ ಮಂಡಳಿ ಎಂದರೆ ಮಾಲಿನ್ಯವನ್ನು ನಿಯಂತ್ರಿಸುವ ಸಂಸ್ಥೆ. ಆದರೆ ಇಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ಕೊನೆಯೇ ಇಲ್ಲ. ಇಲ್ಲಿಗೆ ಪಂಚೆ ಉಟ್ಟುಕೊಂಡು ಬಂದರೆ ಬೆಲೆ ಇಲ್ಲ. ಸೂಟು ಬೂಟು ಧರಿಸಿ, ಹಣದ ಸೂಟ್‌ಕೇಸ್ ತೆಗೆದುಕೊಂಡು ಬಂದರೆ ಮಾತ್ರ ಬೆಲೆ. ಇದು ಕಾರ್ಪೊರೇಟ್ ಕಂಪನಿಯಂತಾಗಿದೆ. ಅಧಿಕಾರಿಗಳಿಗೆ ಮೇಲಿನಿಂದ ಕರೆ ಬಂದಿದ್ದು, ಯತ್ನಾಳ್ ಅವರಿಗೆ ತೊಂದರೆ ಕೊಡಲು ಸೂಚಿಸಲಾಗಿದೆ. ಮಂಡಳಿಯ ಅಧ್ಯಕ್ಷರು ಸ್ಥಳಕ್ಕೆ ಬಾರದೆ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಹೈಕೋರ್ಟ್ ಆದೇಶವನ್ನು ಜಾರಿ ಮಾಡುವುದಿಲ್ಲ ಎಂದು ಲಿಖಿತವಾಗಿ ಕೊಡಲಿ ಎಂದು ಆಗ್ರಹಿಸಿದರು.

  • ಹಣ ನೀಡಲು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ತಿಳಿಸಿ; ಇಲ್ಲವಾದ್ರೆ ಇದು ಹಿಟ್&ರನ್ ಆಗುತ್ತೆ: ಆರ್.ಅಶೋಕ್

    ಹಣ ನೀಡಲು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ತಿಳಿಸಿ; ಇಲ್ಲವಾದ್ರೆ ಇದು ಹಿಟ್&ರನ್ ಆಗುತ್ತೆ: ಆರ್.ಅಶೋಕ್

    -ಉಡುಪಿಯಲ್ಲಿ ನಡೆದಿರೋದು ಲವ್‌ ಜಿಹಾದ್‌ ಲಿಂಕ್‌ ಇರುವ ಅತ್ಯಾಚಾರ ಪ್ರಕರಣ

    ಬೆಂಗಳೂರು: ಕಾಂಗ್ರೆಸ್ (Congress) ಶಾಸಕರಿಗೆ ಹಣ ನೀಡುತ್ತೇವೆಂದು ಮುಂದೆ ಬಂದ ಬಿಜೆಪಿ (BJP) ನಾಯಕರು ಯಾರೆಂದು ಸರಿಯಾಗಿ ತಿಳಿಸಲಿ. ಇಲ್ಲವಾದರೆ ಇದು ಹಿಟ್ ಆಂಡ್ ರನ್ ಆಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R.AShok) ಹೇಳಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮುಳುಗಿರುವುದರಿಂದ ಸರ್ಕಾರ ಉಳಿಸಿಕೊಳ್ಳಲು ಶಾಸಕರಿಗೆ ಬೇರೆ ದಾರಿ ಇಲ್ಲ. ಇದಕ್ಕಾಗಿ ಬಿಜೆಪಿ ವಿರುದ್ಧ ಆಪಾದನೆ ಮಾಡಲಾಗಿದೆ. ಜನರ ಮನಸ್ಸನ್ನು ಬೇರೆಡೆ ಸೆಳೆಯುವ ಕುತಂತ್ರ ಇದು. ಸರ್ಕಾರ ಬೀಳಿಸಲು ಬಿಜೆಪಿ ಯಾವುದೇ ಪ್ರಯತ್ನ ಮಾಡುತ್ತಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಅವರ ಪಕ್ಷದವರೇ ಸರ್ಕಾರ ಬೀಳಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ.

    ಕಾಂಗ್ರೆಸ್ ಶಾಸಕರ ಬಳಿ ಬಂದು ಮಾತಾಡಿದ ಬಿಜೆಪಿ ನಾಯಕರು ಯಾರು ಎಂದು ಕಾಂಗ್ರೆಸ್ ನಾಯಕರು ಸ್ಪಷ್ಟವಾಗಿ ತಿಳಿಸಲಿ. ಗ್ಯಾರಂಟಿಗಳನ್ನು ತೆಗೆದುಹಾಕಬೇಕೆಂದು ಶಾಸಕರೇ ಒತ್ತಾಯಿಸುತ್ತಿದ್ದಾರೆ. ಸರ್ಕಾರದಲ್ಲಿ ಹಣವಿಲ್ಲದೆ, ಮದ್ಯದ ತೆರಿಗೆಯನ್ನು ಮೂರನೇ ಬಾರಿಗೆ ಏರಿಕೆ ಮಾಡಲು ಪ್ರಯತ್ನ ಶುರುವಾಗಿದೆ. ನೀರಿನ ದರ ಹಾಗೂ ಬಸ್ ಟಿಕೆಟ್ ದರ ಹೆಚ್ಚಿಸಲು ಸರ್ಕಾರ ಮುಂದಾಗಿದೆ. ಪೆಟ್ರೋಲ್, ಮಾರ್ಗಸೂಚಿ ದರ ಹೆಚ್ಚಾಗಿದೆ. ಉಸಿರಾಡುವ ಗಾಳಿಗೂ ತೆರಿಗೆ ಹಾಕಿದರೆ ಇನ್ನು ಯಾವುದೂ ಬಾಕಿ ಉಳಿಯುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

    ಗ್ಯಾರಂಟಿಗೆ ಹಣ ಮೀಸಲಿಡದೆ ಸರ್ಕಾರ ದಿವಾಳಿಯಾಗಿದೆ. ಇಂತಹ ಸ್ಥಿತಿಯಲ್ಲೂ ಕಾಂಗ್ರೆಸ್ ನಾಯಕರು ಏಣಿ ಹತ್ತಿಸಿದ ಮತದಾರರ ಬಗ್ಗೆ ಬಹಳ ಕೀಳಾಗಿ ಮಾತಾಡುತ್ತಿದ್ದಾರೆ. ಮುಂದೆ ಅಧಿಕಾರಕ್ಕೆ ಬರಲ್ಲ ಎಂಬುದು ಖಚಿತವಾಗಿರುವುದರಿಂದ ಆದಷ್ಟು ಲೂಟಿ ಮಾಡಲು ನೋಡುತ್ತಿದ್ದಾರೆ. ಈ ಅವಧಿಯಲ್ಲೇ ಡಾ.ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲು ತಂತ್ರ ಮಾಡುತ್ತಿದ್ದಾರೆ. ಶಾಸಕರಿಗೆ ಹಣ ಕೊಡಲು ಬಂದವರು ಯಾರೆಂದು ಸರಿಯಾಗಿ ತಿಳಿಸಲಿ. ಇಲ್ಲವಾದರೆ ಇದು ಹಿಟ್ ಆಂಡ್ ರನ್ ಆಗುತ್ತದೆ ಎಂದು ಕಾಂಗ್ರೆಸ್ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ.

    ಅತ್ಯಾಚಾರ ಪ್ರಕರಣ ಹೆಚ್ಚಳ

    ರಾಜ್ಯದಲ್ಲಿ ಲವ್ ಜಿಹಾದ್ ಲಿಂಕ್ ಇರುವ ಅತ್ಯಾಚಾರ ಪ್ರಕರಣ ಉಡುಪಿಯಲ್ಲಿ ನಡೆದಿದೆ. ಈ ಹಿಂದೆ ಹುಬ್ಬಳ್ಳಿ, ಹಾವೇರಿಯಲ್ಲಿ ನಡೆದ ಪ್ರಕರಣಗಳನ್ನು ಮುಚ್ಚಿ ಹಾಕಲಾಗಿದೆ. ಇದು ಪೂರ್ವ ನಿಯೋಜಿತವಾಗಿ ನಡೆಯುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಇದು ಹೆಚ್ಚಿದ್ದು, ಸರ್ಕಾರದ ಕುಮ್ಮಕ್ಕಿನಿಂದಲೇ  ನಡೆಯುತ್ತಿದೆ. ಕಾಂಗ್ರೆಸ್ ತಮ್ಮನ್ನು ಏನೂ ಮಾಡುವುದಿಲ್ಲ ಎಂಬ ನಂಬಿಕೆ ಇಂತಹವರಿಗೆ ಬಂದಿದೆ. ಕೇರಳದಲ್ಲಿ ಲವ್ ಜಿಹಾದ್ ಕೇಂದ್ರವೂ ಇದ್ದು, ಅಲ್ಲಿ ಯುವಕರಿಗೆ ತರಬೇತಿ ನೀಡಲಾಗುತ್ತಿದೆ. 2047 ರೊಳಗೆ ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡುತ್ತೇವೆ ಎಂಬ ಕರಪತ್ರಗಳು ಕೂಡ ಹರಿದಾಡಿವೆ ಎಂದರು.

  • ಗೃಹ ಸಚಿವರೇ ನಿಮ್ಮದು ಯಾವ ನ್ಯಾಯ? ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಏಕೆ?- ಸಾರ್ವಜನಿಕರಿಂದ ತರಾಟೆ

    ಗೃಹ ಸಚಿವರೇ ನಿಮ್ಮದು ಯಾವ ನ್ಯಾಯ? ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಏಕೆ?- ಸಾರ್ವಜನಿಕರಿಂದ ತರಾಟೆ

    – ಜೈಲಿನಲ್ಲಿ ದರ್ಶನ್‌ಗೆ ವಿವಿಐಪಿ ಟ್ರೀಟ್ಮೆಂಟ್
    – ತಾರಕಕ್ಕೇರಿದ ಸಾರ್ವಜನಿಕ ಆಕ್ರೋಶ

    ಬೆಂಗಳೂರು: ಗೃಹ ಸಚಿವರೇ (Home Minister) ನಿಮ್ಮದು ಯಾವ ನ್ಯಾಯ? ಗುಬ್ಬಿ ಮೇಲೆ ಬ್ರಹ್ಮಾಸ್ತ್ರ  ಏಕೆ? ಜೈಲಿನಲ್ಲಿ ವಿವಿಐಪಿ ಟ್ರೀಟ್ಮೆಂಟ್ ಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಹಲವು ಪ್ರಶ್ನೆಗಳು ಎದ್ದಿವೆ.

    ದೊಡ್ಡವರ ತಪ್ಪು ಇಲ್ಲವಾ? ಉನ್ನತ ಅಧಿಕಾರಿಗಳನ್ನ ಏಕೆ ಅಮಾನತು ಮಾಡಿಲ್ಲ? ಬರೀ ಕೆಳಹಂತದ ಅಧಿಕಾರಿಗಳಷ್ಟೇ ನಿಮ್ಮ ಟಾರ್ಗೆಟಾ ಎಂಬ ಸಾರ್ವಜನಿಕರ ಆಕ್ರೋಶ ಜೋರಾಗಿದೆ. ಇದನ್ನೂ ಓದಿ: ಪರಮೇಶ್ವರ್‌ಗೆ ಮುಜುಗರ: ವಿಧಾನಸೌಧದಲ್ಲಿ ಮಾಧ್ಯಮಗಳ ಮೇಲೆ ಗರಂ

    ಜೈಲಿನ ರಾಜಾತಿಥ್ಯ ವಿಚಾರದಲ್ಲಿ ಮೇಲಾಧಿಕಾರಿಗಳ ಹೊಣೆಗಾರಿಕೆ ಜವಾಬ್ದಾರಿ ಇಲ್ಲವಾ? ಜೈಲು ಸೂಪರಿಡೆಂಟ್, ಜೈಲು ಎಎಸ್‌ಪಿ ಜವಾಬ್ದಾರಿ ಏನು? ಕಾರಾಗೃಹ ಡಿಜಿಪಿ ಜವಾಬ್ದಾರಿ ಏನು? ಮೇಲಧಿಕಾರಿಗಳ ಮೇಲೆ ಕ್ರಮ ಯಾವಾಗ? ಈ ಎಲ್ಲ ಪ್ರಶ್ನೆಗಳಿಗೆ ಗೃಹ ಸಚಿವ ಪರಮೇಶ್ವರ್ (GParameshwar) ಅವರೇ ಉತ್ತರ ಕೊಡಬೇಕಿದೆ ಎಂದು ಪ್ರಶೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಇದನ್ನೂ ಓದಿ: ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್‌ಗೆ ರಾಜಾತಿಥ್ಯ ನೀಡಿದ ಪ್ರಕರಣದಲ್ಲಿ ಲೋಪ ಆಗಿರೋದು ಸತ್ಯ: ರಾಮಲಿಂಗಾರೆಡ್ಡಿ

    ಈ ನಡುವೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R Ashok) ಮಾತನಾಡಿ, ಜೈಲಿನಲ್ಲಿ ಫೋಟೋ ತೆಗೆಯೋಕೆ ಮೊಬೈಲ್ ಎಲ್ಲಿಂದ ಸಿಕ್ಕಿತ್ತು? ಪರಮೇಶ್ವರ್ ಹೇಳಿಕೆ ಕೊಟ್ಟಿದ್ದಾರೆ. ಆದರೆ ಇದೆಲ್ಲ ನುಳುಚಿಕೊಳ್ಳುವ ವಿಚಾರ ಎಂದು ಟೀಕಿಸಿದರು. ಇದನ್ನೂ ಓದಿ: ದರ್ಶನ್‌ನನ್ನು ಬೇರೆ ಜೈಲಿಗೆ ಕಳಿಸಿ: ಸಿಎಂ ತಾಕೀತು

    ಜೈಲಲ್ಲಿ ರಾಜಾರೋಷವಾಗಿ ಅಕ್ರಮ ನಡೆಯುತ್ತಿದೆ. ಜೈಲಲ್ಲಿ ನಡೆದ ಘಟನೆಯಿಂದ ಕಾನೂನು ಸುವ್ಯವಸ್ಥೆ ಸರಿಯಾಗಿಲ್ಲ. ಕಾಂಗ್ರೆಸ್ (Congress) ಸರ್ಕಾರ ಇದಕ್ಕೆ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು. ಇಷ್ಟೆಲ್ಲಾ ಅತ್ಯಾಚಾರ ಆಗುತ್ತಿದೆ, ಕೆಲ ಮಂತ್ರಿಗಳು ನಮಗೆ ಯಾವ ಖಾತೆ ಸಿಗುತ್ತೆ, ಯಾವ ಖಾತೆ ಹೋಗುತ್ತೆ ಎಂಬ ಭೀತಿಯಲ್ಲಿದ್ದಾರೆ ಎಂದು ವ್ಯಂಗ್ಯ ಮಾತುಗಳನ್ನಾಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ಕಂಡರೆ ಬಿಜೆಪಿಯವರಿಗೆ ಭಯ, ನಮ್ಮನ್ನು ಏನು ಮಾಡಲು ಸಾಧ್ಯವಿಲ್ಲ: ಪ್ರದೀಪ್ ಈಶ್ವರ್ ಕಿಡಿ

  • ದುಷ್ಮನ್ ಕಹಾ ಹೈ ಅಂದ್ರೆ, ಕಾಂಗ್ರೆಸ್ ಪಾರ್ಟಿ ತುಂಬಾ ಹೈ: ಹಿತಶತ್ರುಗಳ ಬಗ್ಗೆ ಸಿಎಂಗೆ ಆರ್‌.ಅಶೋಕ್‌ ಎಚ್ಚರಿಕೆ

    ದುಷ್ಮನ್ ಕಹಾ ಹೈ ಅಂದ್ರೆ, ಕಾಂಗ್ರೆಸ್ ಪಾರ್ಟಿ ತುಂಬಾ ಹೈ: ಹಿತಶತ್ರುಗಳ ಬಗ್ಗೆ ಸಿಎಂಗೆ ಆರ್‌.ಅಶೋಕ್‌ ಎಚ್ಚರಿಕೆ

    ಬೆಂಗಳೂರು: ದುಷ್ಮನ್‌ ಕಹಾ ಹೈ ಅಂದ್ರೆ, ಕಾಂಗ್ರೆಸ್‌ ಪಾರ್ಟಿ ತುಂಬಾ ಹೈ ಎನ್ನುವ ಮೂಲಕ ನಿಮ್ಮ ಪಕ್ಷದಲ್ಲೇ ನಿಮಗೆ ಹಿತಶತ್ರುಗಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್‌.ಅಶೋಕ್‌ (R.Ashok) ಎಚ್ಚರಿಸಿದ್ದಾರೆ.

    ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಬಗ್ಗೆ ಕೆಲವರಿಂದ ಒಳ ಲೆಕ್ಕಾಚಾರ ಇದೆ ಎಂಬರ್ಥದಲ್ಲಿ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಅಶೋಕ್‌, ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಅಂತಾ ಬಹಿರಂಗವಾಗಿ ಹೇಳಿಕೆ ಕೊಡುತ್ತಿರುವ ಬಹುತೇಕ ಕಾಂಗ್ರೆಸ್ ನಾಯಕರು ಅಂತರಂಗದಲ್ಲಿ ಬೇರೆಯದೇ ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೊನ್ನಾಳಿಯಲ್ಲಿ ಭಾರೀ ಮಳೆ – ತಾಲೂಕು ಆಸ್ಪತ್ರೆ ಒಳಗೆ ನುಗ್ಗಿದ ನೀರು

    ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಬೆನ್ನಿಗೆ ನಿಲ್ಲುತ್ತೇವೆ ಎನ್ನುತ್ತಲೇ ಬೆನ್ನಿಗೆ ಚೂರಿ ಹಾಕುವ ಹಿತಶತ್ರುಗಳು ನಿಮ್ಮ ಪಕ್ಷದಲ್ಲೇ ಬಹಳ ಮಂದಿ ಇದ್ದಾರೆ. ಇಡೀ ರಾಜ್ಯ ತಮ್ಮ ರಾಜೀನಾಮೆಗಾಗಿ ಕಾತುರದಿಂದ ಎದುರು ನೋಡುತ್ತಿದೆ. ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡಬೇಡಿ. ಆದಷ್ಟು ಬೇಗ ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

  • ನನ್ನ ರಾಜೀನಾಮೆ ಕೇಳೋ ಅಶೋಕ್ ಮೊದಲು ವಾಸ್ತವಾಂಶ ತಿಳಿಯಲಿ: ಸಿದ್ದರಾಮಯ್ಯ

    ನನ್ನ ರಾಜೀನಾಮೆ ಕೇಳೋ ಅಶೋಕ್ ಮೊದಲು ವಾಸ್ತವಾಂಶ ತಿಳಿಯಲಿ: ಸಿದ್ದರಾಮಯ್ಯ

    ಬೆಂಗಳೂರು: ಯಡಿಯೂರಪ್ಪ (Yediyurappa) ವಿರುದ್ದ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ (H. R. Bhardwaj) ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಾಗ ಯಡಿಯೂರಪ್ಪ (Yediyurappa) ರಾಜೀನಾಮೆ ಕೊಟ್ಟಿದ್ದರು. ಅದರಂತೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಅಂತ ಆಗ್ರಹ ಮಾಡಿದ್ದ ವಿಪಕ್ಷ ನಾಯಕ ಅಶೋಕ್ ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ ಮೂಲಕ ಅಶೋಕ್ (AShok) ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

    ಪೋಸ್ಟ್‌ನಲ್ಲಿ ಏನಿದೆ?
    ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾಗ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲವೇ? ಈಗ ಸಿದ್ದರಾಮಯ್ಯನವರು ಯಾಕೆ ರಾಜೀನಾಮೆ ನೀಡುತ್ತಿಲ್ಲ?ಎಂದು ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಅವರು ಮತ್ತೊಮ್ಮೆ ತಮ್ಮ ಅಜ್ಞಾನವನ್ನು ಪ್ರದರ್ಶಿಸಿದ್ದಾರೆ. ಅಶೋಕ್ ಅವರೇ, ಈ ರೀತಿ ಬೇಕಾಬಿಟ್ಟಿ ಹೇಳಿಕೆ ನೀಡುವ ಮೊದಲು ವಾಸ್ತವಾಂಶವನ್ನು ಪರಿಶೀಲಿಸಿಕೊಂಡು ಮಾತನಾಡಿ. ರಾಜ್ಯಪಾಲ ಹಂಸರಾಜ ಭಾರದ್ವಾಜ್‌ ಅವರು ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು 2011ರ ಜನವರಿ 21ರಂದು.ಅವರ ವಿರುದ್ಧ ಅರ್ಜಿದಾರರು ನೀಡಿದ್ದ 1600 ಪುಟಗಳ ಪ್ರಬಲ ದಾಖಲೆಗಳ ಸಾಕ್ಷ ಕೂಡಾ ಇತ್ತು. ಹಾಗಿದ್ದರೂ ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ. ಇದನ್ನೂ ಓದಿ: ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ಕರ್ನಾಟಕದ ರಾಜ್ಯಪಾಲರಿಗೂ ಬರಬಹುದು: ಐವನ್‌ ಡಿಸೋಜ

     

    ಆ ಕಾಲದಲ್ಲಿ ನೀವೇ ಅಲ್ಲವೇ ಯಡಿಯೂರಪ್ಪನವರು ರಾಜೀನಾಮೆ ಯಾಕೆ ನೀಡಬೇಕು ಎಂದು ಪ್ರಶ್ನಿಸಿದ್ದವರು. ಈಗ ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ? ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು 2011ರ ಆಗಸ್ಟ್ ನಾಲ್ಕರಂದು. ಅಂದು ನ್ಯಾ.ಸಂತೋಷ್ ಹೆಗ್ಡೆ (Santosh Hegde) ಅವರ ನೇತೃತ್ವದ ಲೋಕಾಯುಕ್ತವು ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರಿಗೆ ಸಲ್ಲಿಸಿದ ನಂತರ. ಅಕ್ರಮ ಗಣಿಗಾರಿಕೆಯಿಂದಾಗಿ ರಾಜ್ಯದ ಬೊಕ್ಕಸಕ್ಕೆ 16,500 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಹೇಳಿತ್ತು. ಇದನ್ನೂ ಓದಿ: ದಲಿತ ರಾಜ್ಯಪಾಲರನ್ನು ನಿಂದಿಸಿದ್ದಕ್ಕೆ ಕಾಂಗ್ರೆಸ್ ಮೇಲೆ ಅಟ್ರಾಸಿಟಿ ಕೇಸ್ ಹಾಕಬೇಕು: ಸಿಟಿ ರವಿ ಆಗ್ರಹ

    ಆಗ ನೀವೆಲ್ಲರೂ ಸೇರಿ ಯಡಿಯೂರಪ್ಪ ವಿರುದ್ಧವೇ ಏನೆಲ್ಲ ಕುತಂತ್ರ ಮಾಡಿದ್ದೀರಿ ಎನ್ನುವುದೂ ನೆನಪಾಗಬಹುದು. ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣದ ತನಿಖೆ ನಡೆಸಿದ್ದ ನ್ಯಾ.ಸಂತೋಷ್ ಹೆಗ್ಡೆ ನೇತೃತ್ವದ ಲೋಕಾಯುಕ್ತವೇ ಆರೋಪಗಳೆಲ್ಲವನ್ನು ಸಾಬೀತುಪಡಿಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್ ನಿರ್ಧಾರ ನ್ಯಾಯಯುತವಾಗಿತ್ತು ಎಂದು ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರೇ ದೃಢೀಕರಿಸಿದ್ದರಲ್ಲವೇ?

     

     ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಒಂದಲ್ಲ ಎರಡಲ್ಲ ಹದಿನೈದು ಡಿನೋಟಿಫಿಕೇಷನ್ ಹಗರಣಗಳ ತನಿಖೆಗೆ ಅನುಮತಿ ನೀಡಿದ್ದರು. ಹೆಚ್ಚಿನ ಮಾಹಿತಿಗೆ ನ್ಯಾ.ಸಂತೋಷ್ ಹೆಗ್ಡೆ ಅವರು ನೀಡಿದ್ದ ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ತೆಗೆದು ಓದಿಕೊಳ್ಳಿ. ಇಂದು ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಪರವಾಗಿ ಕಣ್ಣೀರು ಸುರಿಸುತ್ತಿರುವ ಬಿಜೆಪಿ ನಾಯಕರಿಗೆ 2011ರಲ್ಲಿ ಆಗಿನ ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರ ಬಗ್ಗೆ ಅವಹೇಳನ ಮಾಡಿದ್ದೆಲ್ಲ ಮರೆತುಹೋದಂತಿದೆ. ನಮ್ಮ ಪಕ್ಷದ ಕಾರ್ಯಕರ್ತರು ಶಾಂತಿಯುತವಾಗಿ ನಡೆಸಿರುವ ಪ್ರತಿಭಟನೆಯನ್ನು ಪ್ರಶ್ನಿಸುತ್ತಿರುವ ಬಿಜೆಪಿ ನಾಯಕರಿಗೆ 2011ರಲ್ಲಿ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದೂ ಕೂಡಾ ಮರೆತುಹೋಗಿದೆ ಅಂತ ವಿಪಕ್ಷ ನಾಯಕ ಅಶೋಕ್ ವಿರುದ್ದ ಸಿಎಂ ಕಿಡಿಕಾರಿದ್ದಾರೆ.

  • ಸಿಎಂ ವಿರುದ್ಧದ ತನಿಖೆಗೆ ರಾಜ್ಯಪಾಲರ ಅನುಮತಿ – ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು: ಆರ್‌.ಅಶೋಕ್‌

    ಸಿಎಂ ವಿರುದ್ಧದ ತನಿಖೆಗೆ ರಾಜ್ಯಪಾಲರ ಅನುಮತಿ – ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು: ಆರ್‌.ಅಶೋಕ್‌

    ಬೆಂಗಳೂರು: ಮುಡಾ ಹಗರಣ (MUDA Case) ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ವಿರುದ್ಧದ ತನಿಖೆಗೆ (Prosecution) ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ (R.ASHOK) ಹೇಳಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ನಮ್ಮ ಉದ್ದೇಶ. ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದ ಬಗ್ಗೆ ಸ್ಪಷ್ಟನೆ ನೀಡಲು ಸಾಧ್ಯವಾಗಿಲ್ಲ. ಸದನದಲ್ಲಿ ನಿಲುವಳಿ ಸೂಚನೆಗೆ ಅವಕಾಶ ಕೊಟ್ಟು ಜನರಲ್ಲಿರುವ ಗೊಂದಲ ನಿವಾರಣೆ ಮಾಡಬೇಕಿತ್ತು. ಅದನ್ನು ಬಿಟ್ಟು ಪಲಾಯನ ಮಾಡಿದ್ದರಿಂದ ಇದರಲ್ಲಿ ಏನೋ ಇದೆ ಎಂಬ ಅನುಮಾನ ಎಲ್ಲರಿಗೂ ಸ್ಪಷ್ಟವಾಯಿತು. ಪ್ರತಿ ಹಂತದಲ್ಲೂ ಸಿದ್ದರಾಮಯ್ಯನವರ ಹಸ್ತಕ್ಷೇಪ ಕಂಡುಬಂದಿದೆ. ಡಿ ನೋಟಿಫಿಕೇಶನ್‌, ಭೂ ಪರಿವರ್ತನೆ ಈ ಎಲ್ಲ ಹಂತದಲ್ಲೂ ಅವರ ಹುದ್ದೆಯ ಪ್ರಭಾವ ಬಳಕೆಯಾಗಿದೆ. ಇಷ್ಟೆಲ್ಲ ಆಗಿರುವಾಗ ಇದು ದೊಡ್ಡ ಹಗರಣ ಎಂಬುದು ಸಾಬೀತಾಗಿದೆ ಎಂದರು.

    ಕಾಂಗ್ರೆಸ್‌ ಈಗ ದ್ವೇಷದ ರಾಜಕಾರಣ ಮಾಡಿದರೆ ಅರ್ಥವಿಲ್ಲ. ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು, ಸಿಬಿಐ ತನಿಖೆಯಾಗಬೇಕು ಹಾಗೂ ಎಲ್ಲ ನಿವೇಶನಗಳನ್ನು ವಾಪಸ್‌ ಪಡೆಯಬೇಕೆಂಬುದು ನಮ್ಮ ಬೇಡಿಕೆ. ನಿವೇಶನ ವಂಚಿತರಾದ ಜನರಿಗೆ ನ್ಯಾಯ ಸಿಗಬೇಕೆಂದು ನಮ್ಮ ಆಗ್ರಹ ಎಂದು ತಿಳಿಸಿದರು.

    ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಆಗಿನ ರಾಜ್ಯಪಾಲರು ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್‌ ಕೈವಾಡವಿತ್ತು ಎಂದರೆ ಅದನ್ನು ಒಪ್ಪುತ್ತಾರಾ? ಈಗ ನೈತಿಕತೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ತೋರಲಿ. ರಾಜ್ಯಪಾಲರು ಸರ್ಕಾರದ ಭಾಗ. ಅವರ ವಿರುದ್ಧ ಕಾಂಗ್ರೆಸ್‌ ಪ್ರತಿಭಟಿಸಿದರೆ ಅವರು ಸಂವಿಧಾನಕ್ಕೆ ತೋರುವ ಅಗೌರವ ಎಂದರು.

    ಕಾಂಗ್ರೆಸ್‌ ಅಭಿವೃದ್ಧಿ ಮಾಡದೆ ಹೈಕಮಾಂಡ್‌ಗೆ ಎಟಿಎಂ ಆಗಿ ಕೆಲಸ ಮಾಡುತ್ತಿದೆ. ತುಂಗಭದ್ರಾ ಜಲಾಶಯದ ಗೇಟ್‌ ದುರಸ್ತಿ ಮಾಡಲು ಕೂಡ ಸರ್ಕಾರದ ಬಳಿ ಹಣವಿಲ್ಲ ಎಂದು ದೂರಿದರು.‌

    ಸರ್ಕಾರ ಅಸ್ಥಿರಗೊಳಿಸುತ್ತಿಲ್ಲ
    ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿಲ್ಲ. ಕಾಂಗ್ರೆಸ್‌ ಪಕ್ಷದ ಶಾಸಕರೇ ತಿರುಗಿಬಿದ್ದರೆ ಅದಕ್ಕೆ ನಾವು ಜವಾಬ್ದಾರರಲ್ಲ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದರು.

  • ಸಂಪನ್ಮೂಲದ ಗ್ಯಾರಂಟಿ ಇಲ್ಲದೇ ತಂದ ಗ್ಯಾರಂಟಿ ಯೋಜನೆಗಳನ್ನು ಶಾಸಕರೇ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ: ಅಶೋಕ್

    ಸಂಪನ್ಮೂಲದ ಗ್ಯಾರಂಟಿ ಇಲ್ಲದೇ ತಂದ ಗ್ಯಾರಂಟಿ ಯೋಜನೆಗಳನ್ನು ಶಾಸಕರೇ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ: ಅಶೋಕ್

    ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರ ಸಂಪನ್ಮೂಲದ ಗ್ಯಾರಂಟಿ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆಗಳನ್ನು (Guarantee Scheme) ತಂದಿದೆ. ಕಾಂಗ್ರೆಸ್ ಶಾಸಕರೇ ಸರ್ಕಾರಕ್ಕೆ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಹೇಳಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷದ ಸರ್ಕಾರ ಬಂದರೂ ಸಾಲ ಮಾಡಲೇಬೇಕು. ಇಂತಹ ಸ್ಥಿತಿಯಲ್ಲಿ ಸಂಪನ್ಮೂಲದ ಗ್ಯಾರಂಟಿಯೇ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆ ತರಲಾಗಿದೆ. ಇದನ್ನು ನಿರ್ವಹಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಬೆಸ್ಕಾಂ ಹಾಗೂ ಇಲಾಖೆಗಳು ನಷ್ಟದಲ್ಲಿವೆ. ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ. ಅದಕ್ಕೂ ಮುಂಚೆ ಎಚ್ಚೆತ್ತುಕೊಳ್ಳಲಿ ಎಂದರು. ಇದನ್ನೂ ಓದಿ: ವಾಲ್ಮೀಕಿ ಹಗರಣದ ವಿರುದ್ಧ ಸರಿಯಾದ ಹೋರಾಟ ನಡೆದರೆ ಸಿಎಂ ಕುರ್ಚಿ ಅಲ್ಲಾಡುತ್ತೆ: ಪ್ರತಾಪ್ ಸಿಂಹ

    ಬೆಂಗಳೂರಿಗೆ ನಿಗದಿಯಾದ ಅನುದಾನಗಳನ್ನು ಈ ಹಿಂದೆಯೂ ವಾಪಸ್ ಪಡೆಯಲಾಗಿದೆ. ನಗರದಲ್ಲಿ ಪ್ರವಾಹದ ನಿಯಂತ್ರಣಕ್ಕಾಗಿ ಯೋಜನೆ ರೂಪಿಸಲು ಬಿಜೆಪಿ ಸರ್ಕಾರ ಅನುದಾನ ಮೀಸಲಿಟ್ಟಿತ್ತು. ಅದನ್ನು ಗ್ಯಾರಂಟಿಗೆ ನೀಡಲಾಗಿದೆ. ಪಾದಚಾರಿ ಮಾರ್ಗ, ಮೇಲ್ಸೇತುವೆ, ರಾಜಕಾಲುವೆ ಸೇರಿದಂತೆ ಎಲ್ಲಾ ಅಭಿವೃದ್ಧಿ ಯೋಜನೆಗಳ ಹಣವನ್ನು ಗ್ಯಾರಂಟಿಗೆ ವರ್ಗಾಯಿಸಲಾಗಿದೆ. ಬಿಬಿಎಂಪಿ ಅನುದಾನ ಬಿಟ್ಟು, ಬಿಜೆಪಿ ಸರ್ಕಾರ 8-9 ಸಾವಿರ ಕೋಟಿ ರೂ. ನೀಡಿತ್ತು. ಈಗ ಸರ್ಕಾರ ಪಾಪರ್ ಆಗಿದೆ ಎಂದು ಟೀಕಿಸಿದರು. ಇದನ್ನೂ ಓದಿ:  ಗ್ಯಾರಂಟಿ ಪರಿಷ್ಕರಣೆಗೆ ಕೆಲವು ಸಚಿವರಿಂದ ಹೈಕಮಾಂಡ್ ಮೇಲೆ‌ ಒತ್ತಡ

    ಜನ ಔಷಧಿ ಯೋಜನೆ ಕೇಂದ್ರ ಸರ್ಕಾರದ್ದು. ಇದರಿಂದ ಅತಿ ಕಡಿಮೆ ದರದಲ್ಲಿ ಔಷಧಿಗಳು ದೊರೆಯುತ್ತವೆ. ಕಾಂಗ್ರೆಸ್ ಸರ್ಕಾರ ಹಾಗೂ ಸಚಿವರಿಗೆ ಲಾಬಿಗಳು ತಲೆ ಸವರಿದೆ. ಆದ್ದರಿಂದ ಇಂತಹ ಕೆಲಸ ಮಾಡಲು ಹೊರಟಿದ್ದಾರೆ. ಇವರಿಗೆ ಕಮಿಶನ್ ಸಿಗಲಿದೆ ಎಂಬ ಕಾರಣಕ್ಕೆ ಜನರಿಗೆ ದ್ರೋಹ ಬಗೆಯಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ನನಗೂ ಮಗಳಿದ್ದಾಳೆ: ಕೋಲ್ಕತ್ತಾ ವೈದ್ಯೆ ಅತ್ಯಾಚಾರ, ಕೊಲೆ ವಿರುದ್ಧ ಹೋರಾಟಕ್ಕೆ ಟಿಎಂಸಿ ಸಂಸದ ಬೆಂಬಲ

    ಪಾದಯಾತ್ರೆ ಯಶಸ್ವಿ:
    ಇತ್ತೀಚಿಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಉತ್ತಮವಾಗಿ ಸಾಮೂಹಿಕ ನಾಯಕತ್ವದಲ್ಲಿ ಪಾದಯಾತ್ರೆ ನಡೆದಿದೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ನನಗೆ ಕರೆ ಮಾಡಿ, ಈ ಪಾದಯಾತ್ರೆಯಲ್ಲಿ ಎಲ್ಲರೂ ಭಾಗವಹಿಸಿ ಎಂದು ಹೇಳಿದ್ದರು. ಪಾದಯಾತ್ರೆ ಯಶಸ್ವಿಯಾಗಿರುವುದರಿಂದಲೇ ಕಾಂಗ್ರೆಸ್ ನಾಯಕರು ಭಯಕ್ಕೊಳಗಾಗಿ ಹೇಳಿಕೆಗಳನ್ನು ನೀಡಿದ್ದಾರೆ. ಸರ್ಕಾರದ ಎರಡು ಹಗರಣಗಳ ವಿರುದ್ಧ ಪಾದಯಾತ್ರೆಯ ಜೊತೆಗೆ, ಕೆಲವರು ರಾಜಭವನಕ್ಕೂ ದೂರು ಸಲ್ಲಿಸಿದ್ದಾರೆ ಎಂದರು. ಇದನ್ನೂ ಓದಿ: ಮೂರು ಗ್ಯಾರಂಟಿಗಳ ಪರಿಷ್ಕರಣೆ, ಆ.22ಕ್ಕೆ ಕ್ಯಾಬಿನೆಟ್‌ನಲ್ಲಿ ಚರ್ಚೆ: ಸಚಿವರ ಅಭಿಪ್ರಾಯ ಪಡೆಯಲು ಮುಂದಾದ ಸಿಎಂ

    ಬಿಜೆಪಿಯ ಭಿನ್ನಮತಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈ ಎಲ್ಲಾ ಬೆಳವಣಿಗೆಯನ್ನು ಕೇಂದ್ರದ ನಾಯಕರ ಗಮನಕ್ಕೆ ತರುತ್ತೇನೆ. ಈಗಾಗಲೇ ಕೇಂದ್ರದ ನಾಯಕರು ಇದನ್ನು ಗಮನಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘ ರಾಜಕೀಯ ಪಕ್ಷವಲ್ಲ. ಆದ್ದರಿಂದ ರಾಜಕೀಯದ ಸಭೆ ಮಾಡುವ ಪದ್ಧತಿ ಸಂಘದಲ್ಲಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ದರ್ಶನ್‌ & ಗ್ಯಾಂಗ್‌ಗೆ ಜೈಲೇ ಗತಿ – ಆ.28ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

    ಬಳ್ಳಾರಿ ಪಾದಯಾತ್ರೆಗೆ ಕೇಂದ್ರದ ನಾಯಕರು ಒಪ್ಪಿಗೆ ನೀಡಿದರೆ ನಾವು ಕೂಡ ಅದರಲ್ಲಿ ಭಾಗವಹಿಸುತ್ತೇವೆ. ಸಣ್ಣ ಪುಟ್ಟ ವ್ಯತ್ಯಾಸ ಇರುವುದು ನನ್ನ ಗಮನಕ್ಕೂ ಬಂದಿದೆ. ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಮೊದಲಾದವರನ್ನು ಕೇಂದ್ರದ ನಾಯಕರು ಕರೆಸಿ ಈ ಹಿಂದೆಯೂ ಚರ್ಚೆ ಮಾಡಿದ್ದಾರೆ. ಈ ಭಿನ್ನಾಭಿಪ್ರಾಯ ಬಿಟ್ಟು ಒಟ್ಟಾಗಿ ವಿರೋಧ ಪಕ್ಷವಾಗಿ ನಮ್ಮ ಕರ್ತವ್ಯ ಮಾಡುತ್ತೇವೆ. ಜನರು ಕೂಡ ನಮ್ಮಿಂದ ಅದನ್ನೇ ನಿರೀಕ್ಷೆ ಮಾಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂದೆ ಬೈಕ್‌ಗೆ ಬೆಂಕಿ ಇಟ್ಟ ಸವಾರ

    ಸಿ.ಪಿ.ಯೋಗೇಶ್ವರ್ ಅವರ ಮನೆಗೆ ಹೋಗಿ ಚರ್ಚೆ ಮಾಡಲಾಗಿದೆ. ಅವರಿಗೆ ಟಿಕೆಟ್ ನೀಡುವ ಬಗ್ಗೆ ಎನ್‌ಡಿಎ ನಿರ್ಧಾರ ಮಾಡಬೇಕಿದ್ದು, ಆ ಬಗ್ಗೆಯೂ ಮನವರಿಕೆ ಮಾಡಿಕೊಡುತ್ತೇವೆ. ಬಂಡಾಯ ಸ್ಪರ್ಧೆ ಮಾಡುವುದು ಸರಿಯಲ್ಲ. ಏಕ ಅಭ್ಯರ್ಥಿ ಸ್ಪರ್ಧಿಸುವಂತೆ ಮಾಡಲು ಎಲ್ಲಾ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಕೇಜ್ರಿವಾಲ್‌ಗೆ ಜಾಮೀನು ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್