ಬೆಂಗಳೂರು: ಸೂರಜ್ ರೇವಣ್ಣ (Suraj Revanna) ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ್ (R Ashok) ಪ್ರತಿಕ್ರಿಯಿಸಿದ್ದು, ಈಗಾಗಲೇ ಪ್ರಜ್ವಲ್ ರೇವಣ್ಣನ ವಿಚಾರದಲ್ಲಿ ತನಿಖೆ ನಡೆಯುತ್ತಿದೆ. ಸೂರಜ್ ರೇವಣ್ಣರ ವಿಚಾರದಲ್ಲೂ ನ್ಯಾಯಯುತ ತನಿಖೆ ಆಗಲಿ ಎಂದು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನಾನು ಸಹ ಮಾಧ್ಯಮದಲ್ಲಿ ಸೂರಜ್ ರೇವಣ್ಣ ಬಗ್ಗೆ ನೋಡಿದ್ದೇನೆ. ಸೂರಜ್ ರೇವಣ್ಣ ಸಹ ಆರೋಪ ಮಾಡಿದ್ದಾರೆ. ನನ್ನನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಈ ಕೇಸ್‌ನಲ್ಲಿ ಮೇಲ್ನೋಟಕ್ಕೆ ಗೊಂದಲ ಕಾಣಿಸುತ್ತಿದೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದರು. ಇದನ್ನೂ ಓದಿ: ಸೂರಜ್ ರೇವಣ್ಣ ಕೇಸ್- ದಯವಿಟ್ಟು ಇಂತಹ ವಿಷಯಗಳನ್ನ ನನ್ನ ಬಳಿ ಚರ್ಚೆ ಮಾಡ್ಬೇಡಿ: ಹೆಚ್‍ಡಿಕೆ
ನಿಷ್ಪಕ್ಷಪಾತವಾದ ತನಿಖೆ ಆಗಲಿ. ತಪ್ಪಿತಸ್ಥರು ಯಾರೇ ಇದ್ದರೂ ಕಾನೂನು ಕ್ರಮ ಆಗೇ ಆಗುತ್ತೆ. ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಒಳ್ಳೆಯದಲ್ಲ. ಎರಡೂ ಕಡೆ ದೂರು ದಾಖಲು ಆದ ಹಿನ್ನೆಲೆಯಲ್ಲಿ ಇದು ಜಟಿಲ ಕೇಸ್ ರೀತಿಯಲ್ಲಿ ಕಾಣಿಸುತ್ತಿದೆ. ಮೊದಲೇ ದೂರು ಕೊಟ್ಟಿದು ಸೂರಜ್ ರೇವಣ್ಣ. ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಸೂಕ್ತ ತನಿಖೆ ಆಗಲಿ, ಸತ್ಯಾಸತ್ಯತೆ ಹೊರ ಬರಲಿ. ಇದು ಜೆಡಿಎಸ್ ಆಂತರಿಕ ವಿಚಾರ. ಇದರ ಬಗ್ಗೆ ಅವರ ನಾಯಕರು ಮಾತನಾಡುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ದೆಹಲಿಯಲ್ಲಿ ನೀರಿನ ಬಿಕ್ಕಟ್ಟು – 2ನೇ ದಿನಕ್ಕೆ ಕಾಲಿಟ್ಟ ಸಚಿವೆ ಅತಿಶಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ
ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳ (Petrol price hike) ಮಾಡಿದ್ದಕ್ಕೆ ಬಿಜೆಪಿ (BJP) ಹಾಗೂ ಜೆಡಿಎಸ್‍ನವರು (JDS) ನಮ್ಮ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಅವರು ಪ್ರತಿಭಟನೆ ಮಾಡಬೇಕಾಗಿರುವುದು ಕೇಂದ್ರ ಸರ್ಕಾರದ ವಿರುದ್ಧ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರತಿಪಕ್ಷಗಳಿಗೆ ತಿರುಗೇಟು ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನರೇಂದ್ರ ಮೋದಿಯವರು ಗುಜರಾತ್ ಸಿಎಂ ಆಗಿದ್ದಾಗ ಬೆಲೆ ಏರಿಕೆ ಬಗ್ಗೆ ಕೇಂದ್ರದ ಮೇಲೆ ಹೇಳಿಕೆ ಕೊಟ್ಟಿದ್ದರು. ನಾನು ಪ್ರಧಾನಿ ಆದ್ಮೇಲೆ ಪೆಟ್ರೋಲ್, ಡಿಸೇಲ್ ಬೆಲೆ ಇಳಿಸ್ತೀವಿ ಎಂದಿದ್ದರು. ಅದಕ್ಕೆ ವಿರುದ್ಧವಾಗಿ ಈಗ ಕೆಲಸ ಮಾಡುತ್ತಿದ್ದಾರೆ. ನರೇಂದ್ರ ಮೋದಿ ಪ್ರಧಾನಿ ಆದಾಗ ಪೆಟ್ರೋಲ್ ಬೆಲೆ 72.26 ರೂ. ಇತ್ತು, ಜೂನ್ 2024ರಲ್ಲಿ 104 ರೂ.ಪಾಯಿ ಆಗಿತ್ತು, ಡೀಸೆಲ್ ಬೆಲೆ 57 ರೂ. ಇತ್ತು, ಈಗ 98 ರೂ.ಆಗಿದೆ. ಈಗ ಹೇಳಿ, ಬೆಲೆ ಹೆಚ್ಚು ಮಾಡಿದ್ದು ಯಾರು ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ದುರಹಂಕಾರ ಬಿಟ್ಟು ಜನಪರ ಆಡಳಿತ ನೀಡಿ- ಸಿಎಂ ವಿರುದ್ಧ ಸುನೀಲ್ ಕುಮಾರ್ ವಾಗ್ದಾಳಿ
ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಕಚ್ಚಾ ತೈಲ ಬೆಲೆ 113 ಡಾಲರ್ ಇತ್ತು, ಈಗ 82.35 ಡಾಲರ್ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆ ಆದರೆ ದೇಶದಲ್ಲೂ ಬೆಲೆ ಇಳಿಸಬೇಕು ಅಲ್ವಾ? ಈಗ ಬಿಜೆಪಿಯವರು ಯಾರ ವಿರುದ್ಧ ಪ್ರತಿಭಟಿಸಬೇಕು? ಕೇಂದ್ರ ಸರ್ಕಾರದ ಮೇಲೆ ಅಲ್ವಾ ಎಂದು ಅವರು ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರ ಜಿಎಸ್‍ಟಿ ತಂದಮೇಲೆ ಹೆಚ್ಚಿನ ತೆರಿಗೆ ವಿಧಿಸುವ ಅಧಿಕಾರ ಇಲ್ಲ. ಪೆಟ್ರೋಲ್ ಹಾಗೂ ಡಿಸೇಲ್ ಮೇಲಿನ ಸೆಸ್ ವಿಧಿಸುವ ಅಧಿಕಾರ, ಅಬಕಾರಿ ಸುಂಕ, ಸ್ಟ್ಯಾಂಪ್ ಡ್ಯೂಟಿ ವಿಧಿಸುವ ಅಧಿಕಾರ ಮಾತ್ರ ರಾಜ್ಯ ಸರ್ಕಾರಕ್ಕೆ ಇದೆ. ಉಳಿದೆಲ್ಲ ತೆರಿಗೆಯನ್ನು ಅವರೇ ವಿಧಿಸ್ತಾರೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ ಸರ್ಕಾರ ಪಾಪರ್ ಆಗಿದೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಹೇಳಿಕೆ ವಿಚಾರವಾಗಿ, ಪಾಪರ್ ಎಂದು ಘೋಷಿಸಿದ್ದು ಯಾರು? ಪಾಪರ್ ಅಂದ್ರೆ ಅರ್ಥ ಗೊತ್ತಾ ಅಶೋಕನಿಗೆ? ನಾವು ಯಾರಿಗಾದರೂ ವೇತನ ಕೊಡೋದು ನಿಲ್ಲಿಸಿದ್ದೇವಾ? ಎಂದು ಅವರು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.
ಇನ್ನೂ ಕೇಂದ್ರದ ವಿಶೇಷ ಅನುದಾನದ ವಿಚಾರವಾಗಿ, 5,495 ಕೋಟಿ ರೂ. ತೆರಿಗೆ ಪಾಲು ಕಡಿಮೆಯಾಗಿದೆ. ವಿಶೇಷ ಅನುದಾನ ಘೋಷಣೆ ಮಾಡಿ ರಾಜ್ಯಕ್ಕೆ ಹಣ ಕೊಡಲಿಲ್ಲ. ನಿರ್ಮಲಾ ಸೀತಾರಾಮನ್ ಈ ಬಗ್ಗೆ ಏನು ಕ್ರಮ ತೆಗೆದುಕೊಂಡಿಲ್ಲ. ಭದ್ರಾ ಮೇಲ್ದಂಡೆ, ಬೆಂಗಳೂರು ಪೆರಿಫಿರಲ್ ರಿಂಗ್ ರೋಡ್‍ಗಳ ಯೋಜನೆಗೆ ವಿಶೇಷ ಅನುದಾನ ನೀಡಿಲ್ಲ. ಇವರು ಯಾರ ಬಗ್ಗೆ ಪ್ರತಿಭಟನೆ ಮಾಡಬೇಕು ಎಂದು ಅವರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಸ್ಪೀಕರ್ ಹುದ್ದೆ ಬಿಜೆಪಿಗೆ, ಡೆಪ್ಯೂಟಿ ಸ್ಪೀಕರ್ ಹುದ್ದೆ ಎನ್‌ಡಿಎ ಮಿತ್ರ ಪಕ್ಷಕ್ಕೆ?
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸೋತ ಸೇಡನ್ನು ತೀರಿಸಿಕೊಳ್ಳಲು ಕಾಂಗ್ರೆಸ್ (Congress) ಸರ್ಕಾರ ತೈಲ ದರವನ್ನು ಏರಿಕೆ ಮಾಡಿದೆ. ಈ ಮೂಲಕ ಜನರ ತಲೆ ಮೇಲೆ ಚಪ್ಪಡಿ ಕಲ್ಲು ಹಾಕಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R.Ashok) ಆಕ್ರೋಶ ಹೊರಹಾಕಿದರು.
ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಎಲ್ಲ ಬಗೆಯ ಬೆಲೆ ಏರಿಕೆಯ ಭಾಗ್ಯಗಳನ್ನು ನೀಡಿದೆ. ಹಾಲಿನ ದರ, ಆಲ್ಕೋಹಾಲ್ ದರ, ಸ್ಟಾಂಪ್ ಡ್ಯೂಟಿ, ಮಾರ್ಗಸೂಚಿ ದರ, ವಿದ್ಯುತ್ ದರ ಹಾಗೂ ಈಗ ತೈಲ ಬೆಲೆ ಏರಿಕೆ ಮಾಡಲಾಗಿದೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಒಂದು ರೂಪಾಯಿ ಬೆಲೆ ಏರಿಕೆಯಾದಾಗ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಸ್ಕೂಟರ್ ಶವಯಾತ್ರೆ ಮಾಡಿದ್ದರು. 15 ಬಾರಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರಿಗೆ ಯೋಗ್ಯತೆ ಇಲ್ಲ. ಜನರ ಮೇಲೆ ಸೇಡು ತೀರಿಸಿಕೊಳ್ಳಲು ದರ ಏರಿಸಿದ್ದಾರೆ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಉತ್ತರ ಭಾರತಕ್ಕೆ ಹೋಲಿಸಿದ್ರೆ ದಕ್ಷಿಣ ಭಾರತದಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೆ
ಗ್ಯಾರಂಟಿಗಾಗಿ 55,000 ಕೋಟಿ ರೂ. ಮೀಸಲಿಟ್ಟಿರುವುದರಿಂದ ಹಣ ಕೊರತೆಯಾಗಿ ಸಂಬಳ ಕೊಡಲು ದುಡ್ಡಿಲ್ಲ. ಆದ್ದರಿಂದ ಜನರ ಮೇಲೆ 3-4 ಸಾವಿರ ಕೋಟಿ ರೂ. ಹೊರೆ ಹಾಕಿ ತೈಲ ದರ ಏರಿಸಲಾಗಿದೆ. ಇದರಿಂದ ಸಹಜವಾಗಿ ತರಕಾರಿ, ಹಾಲು, ಹಣ್ಣು, ಕೊನೆಗೆ ಟೀ ಕಾಫಿಗೂ ದರ ಏರಲಿದೆ. ನಾಳೆಯಿಂದಲೇ ಆಟೋ ರಿಕ್ಷಾದವರು, ಗೂಡ್ಸ್ ಗಾಡಿಗಳು ದರ ಏರಿಕೆ ಮಾಡುತ್ತಾರೆ ಎಂದರು.
ನ್ಯಾಯವಾಗಿ ಮಾಡುವುದಿದ್ದರೆ ಬಜೆಟ್‌ನಲ್ಲಿ ಸರ್ಕಾರ ತೈಲ ದರ ಏರಿಸಬೇಕಿತ್ತು. ಆದರೆ ಚುನಾವಣೆಯಲ್ಲಿ ಸೋತಿದ್ದರಿಂದ ನಂತರ ಕಳ್ಳ ದಾರಿಯಿಂದ ದರ ಏರಿಸಿ ಜನರ ಮೇಲೆ ಸೇಡು ತೀರಿಸಿಕೊಂಡಿದ್ದಾರೆ. ಸಂಸತ್ತಿನಲ್ಲಿ 100 ಸೀಟು ಪಡೆಯಲಾಗದ ಕಾಂಗ್ರೆಸ್ ಪೆಟ್ರೋಲ್ ದರವನ್ನು 100 ರೂಪಾಯಿಗೂ ಹೆಚ್ಚು ಮಾಡಿದೆ. ರಾಹುಲ್ ಗಾಂಧಿ ಹೇಳಿದಂತೆ ಟಕಾಟಕ್ ಎಂದು ತೈಲ ದರ ಏರಿಸಿದ್ದಾರೆ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ನಿಮ್ಮ ಭಾಗ್ಯ ಕೊಡದಿದ್ರೂ ಪರವಾಗಿಲ್ಲ, ಬೆಲೆ ಏರಿಕೆ ದೌರ್ಭಾಗ್ಯ ಮಾತ್ರ ಬೇಡ: ವಿಜಯೇಂದ್ರ
ಜನರು ಮತ ನೀಡಿಲ್ಲ ಎಂಬ ಕಾರಣಕ್ಕೆ ಸರ್ಕಾರ ದರ ಏರಿಸಿದೆ. ಹಿಂದೆ ಬಿಜೆಪಿ ಸರ್ಕಾರ 7 ರೂ. ಕಡಿಮೆ ಮಾಡಿತ್ತು. ಕಾಂಗ್ರೆಸ್‌ಗೆ ಮಾನವಿದ್ದರೆ ದರ ಏರಿಕೆ ವಾಪಸ್ ಪಡೆಯಲಿ ಎಂದು ಆಗ್ರಹಿಸಿದರು.
ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (B.S Yediyurappa) ಅವರ ವಿರುದ್ಧ ಕಾಂಗ್ರೆಸ್ (Congress) ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಅಶೋಕ್ (R.Ashok) ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್‍ವೈ ವಿರುದ್ಧ ದ್ವೇಷದ ರಾಜಕಾರಣ ಮಾಡ್ತಿದ್ದಾರೆ. ಕೋರ್ಟ್ ಈ ವಿಚಾರವಾಗಿ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಚುನಾವಣೆ ಆದ ಕೂಡಲೇ ನೋಟಿಸ್ ಕೊಟ್ಟಿದ್ದಾರೆ. ಇದು ಪಕ್ಕಾ ದ್ವೇಷದ ರಾಜಕಾರಣ. ಇದಕ್ಕೆ ಪೂರಕವಾಗಿ, ನಮ್ಮನ್ನ ಕೋರ್ಟ್‍ಗೆ ಕರೆಸಿದ್ರಿ ಎಂದು ಡಿ.ಕೆ ಶಿವಕುಮಾರ್ (D.K Shivakumar) ಮಾತಾಡಿದ್ದಾರೆ. ಇಂತಹ ದ್ವೇಷದ ರಾಜಕಾರಣ ಸರಿಯಲ್ಲ ಎಂದು ಅವರು ಕಿಡಿಕಾರಿದ್ದಾರೆ.
ತಮಿಳುನಾಡಿನಲ್ಲಿ ಇಂತಹ ದ್ವೇಷದ ರಾಜಕೀಯ ಇತ್ತು. ಈಗ ಕರ್ನಾಟಕಕ್ಕೂ ಇದು ಬಂದಿದೆ. ಪರಮೇಶ್ವರ್ (G.Parameshwar) ಕೂಡಾ ಬಿಎಸ್‍ವೈ ವಿರುದ್ಧ ದೂರು ಕೊಟ್ಟ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಹೇಳಿದ್ದರು. ಚುನಾವಣೆ ಆದ ಮೇಲೆ ಇವರು ನೊಟೀಸ್ ಕೊಟ್ಟು ದ್ವೇಷದ ರಾಜಕೀಯ ಮಾಡ್ತಿದ್ದಾರೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ದರ್ಶನ್‌ಗೆ ಹೆಣ್ಣು-ಹೆಂಡದ ನಶೆ ಹೆಚ್ಚಾಗಿತ್ತು, ಸಂಸ್ಕಾರ ಇರಲಿಲ್ಲ: ಮೊದಲ ಗುರು ಅಡ್ಡಂಡ ಕಾರ್ಯಪ್ಪ
ಸಿಎಂ ಬಿಟ್ಟರೆ ಗೃಹಮಂತ್ರಿ ನಂತರದ ಸ್ಥಾನದಲ್ಲಿ ಇರೋದು, ಅವರೇ ಆಕೆ ಮಾನಸಿಕ ಅಸ್ವಸ್ಥೆ ಎಂಬ ಸರ್ಟಿಫಿಕೇಟ್ ಕೊಟ್ಟಿದ್ದರು. ಈಗ ಯಾಕೆ ಉಲ್ಟಾ ಹೊಡೆಯುತ್ತಿದ್ದಾರೆ? ಅವತ್ತು ಹೇಳುವಾಗ ಜ್ಞಾನ ಇರಲಿಲ್ಲವಾ? ಇದೇ ಇವತ್ತು ಚರ್ಚೆ ಆಗ್ತಿರೋದು. 4 ತಿಂಗಳು ಯಾಕೆ ಕಾಯ್ತಾ ಇದ್ರಿ? ಯಡಿಯೂರಪ್ಪ ಇಲ್ಲೇ ಇದ್ದರೂ ಯಾಕೆ ವಿಚಾರಣೆ ಮಾಡಿಲ್ಲ? ವಾಯ್ಸ್ ಸ್ಯಾಂಪಲ್ ಕೊಟ್ಟು ಬಂದರು. ಎಲ್ಲಿ ತಪ್ಪಿಸಿಕೊಂಡು ಹೋಗಿರಲಿಲ್ಲ. ಈಗ ಯಾಕೆ ಬಂಧನ ಮಾಡೋಕೆ ವಾರೆಂಟ್ ಹೊರಡಿಸಿದ್ದೀರಿ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ನಮ್ಮ ಮೇಲೆ 40% ಆರೋಪ ಮಾಡಿದ್ದ, ನೀವು ಅದನ್ನ ಸಾಬೀತು ಮಾಡಿ. ಅದನ್ನು ಸಾಬೀತು ಮಾಡಬೇಕು ಎಂದು ನಾವು ಕೋರ್ಟ್ ಹೋಗಿರೋದು. ಯತ್ನಾಳ್ 2500 ಕೋಟಿ ಆರೋಪ ಮಾಡಿದ್ರೆ ಅವರಿಗೆ ನೋಟಿಸ್ ಕೊಟ್ಟು ಕರೆಸಿ. ಅವರು ಆ ರೀತಿ ಹೇಳಿದ್ರೋ ಇಲ್ಲವೋ ಗೊತ್ತಾಗುತ್ತದೆ ಎಂದು ಕಾಂಗ್ರೆಸ್ಗೆ ತಿರುಗೇಟು ಕೊಟ್ಟಿದ್ದಾರೆ. ಇದನ್ನೂ ಓದಿ: ಶಾಸಕ ಸ್ಥಾನಕ್ಕೆ ಬೊಮ್ಮಾಯಿ ರಾಜೀನಾಮೆ
ಬೆಂಗಳೂರು: ಚಿತ್ರನಟ ದರ್ಶನ್ (Actor Darshan) ಪೊಲೀಸರಿಗೆ ದೂರು ನೀಡಿ ರೇಣುಕಾಸ್ವಾಮಿಗೆ (Renukaswamy) ತಿಳಿ ಹೇಳಿಸಬಹುದಿತ್ತು. ಅದು ಬಿಟ್ಟು ಕಾನೂನು ಕೈಗೆ ತೆಗೆದುಕೊಂಡು ಕೊಂದಿದ್ದರೆ ಅದು ದೊಡ್ಡ ತಪ್ಪು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಹೇಳಿದ್ದಾರೆ.
ರಾಜ್ಯದಲ್ಲಿ ಅಪರಾಧ ಚಟುವಟಿಕೆ ಹೆಚ್ಚಿದೆ. ಚನ್ನಗಿರಿಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲಾಗಿದೆ. ಪೊಲೀಸರಿಗೆ ಕಪಾಳ ಮೋಕ್ಷವಾಗಿದೆ. ಕಾನೂನು ಪೊಲೀಸರ ಹಿಡಿತದಲ್ಲೇ ಇಲ್ಲ. ಆದ್ದರಿಂದ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿ ಮುಚ್ಚುಮರೆ ಮಾಡುತ್ತಿದ್ದಾರೆ. ನಾವು ಕರ್ನಾಟಕದಲ್ಲಿದ್ದೇವೆಯೇ ಹೊರತು ಜಮ್ಮು ಮತ್ತು ಕಾಶ್ಮೀರದಲ್ಲಿಲ್ಲ. ಇದನ್ನು ಟಿವಿ ಮಾಧ್ಯಮಗಳು ಚಿತ್ರೀಕರಣ ಮಾಡದಂತೆ ಕ್ರಮ ವಹಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪೋಕ್ಸೋ ಕೇಸ್: ಬಿಎಸ್‌ವೈ ವಿರುದ್ಧ ಅರೆಸ್ಟ್ ವಾರಂಟ್ ಜಾರಿ – ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ!
ಚಲನಚಿತ್ರ ವಾಣಿಜ್ಯ ಮಂಡಳಿಯವರು ಕೂಡ ಈ ಕುರಿತು ನಿರ್ಧಾರ ತೆಗೆದುಕೊಳ್ಳಬೇಕು. ತನಿಖೆ ಸರಿಯಾಗಿ ನಡೆದು ಸತ್ಯಾಂಶ ಹೊರಬರಲಿ. ಈ ಪ್ರಕರಣದಲ್ಲಿ ಮೃತನಾದ ವ್ಯಕ್ತಿ ಯಾವುದೇ ಅಪರಾಧಿ ಹಿನ್ನೆಲೆ ಹೊಂದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಎಷ್ಟೋ ಸಂದೇಶಗಳು ಬರುತ್ತವೆ. ಅದಕ್ಕಾಗಿ ಕೊಲೆ ಮಾಡಲು ಹೋಗಬಾರದು. ಇಂತಹ ಕ್ಷುಲ್ಲಕ ವಿಚಾರಕ್ಕೆ ಕೊಲೆ ಮಾಡಿರುವುದು ಇಡೀ ಚಿತ್ರೋದ್ಯಮಕ್ಕೆ ಕಳಂಕವಾಗಿದೆ. ಸರ್ಕಾರ ಮಾನವೀಯತೆ ದೃಷ್ಟಿಯಿಂದ ಮೃತ ವ್ಯಕ್ತಿಯ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಸಹೋದರಿಗಾಗಿ ಆರ್ಡರ್ ಮಾಡಿದ್ದ ಐಸ್‍ಕ್ರೀಮ್‍ನಲ್ಲಿತ್ತು ಮನುಷ್ಯನ ಕೈಬೆರಳು – ಮುಂದೇನಾಯ್ತು?
– ಗೂಂಡಾಗಳ ಕೈಗೆ ರಾಜ್ಯ ನೀಡಿದ ಕಾಂಗ್ರೆಸ್ ಸರ್ಕಾರ ಎಂದು ವಾಗ್ದಾಳಿ
ಮಂಗಳೂರು: ಕರ್ನಾಟಕದಲ್ಲಿ (Karnataka) ಭಾರತ್ ಮಾತಾ ಕೀ ಜೈ, ಜೈ ಶ್ರೀರಾಮ್ ಎಂದು ಘೋಷಣೆ ಕೂಗೋದೇ ತಪ್ಪಾಗಿದೆ. ಕಾಂಗ್ರೆಸ್ (Congress) ಸರ್ಕಾರ ಗೂಂಡಾಗಳ ಕೈಗೆ ರಾಜ್ಯವನ್ನು ಕೊಟ್ಟಿದ್ದು, ಇಂತಹ ಘೋಷಣೆ ಕೂಗಿದರೆ ಚೂರಿ ಹಾಕುತ್ತಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ಆಕ್ರೋಶ ವ್ಯಕ್ತಪಡಿಸಿದರು.
ಉಳ್ಳಾಲದ ಬೋಳಿಯಾರಿನಲ್ಲಿ (Boliyar Case) `ಭಾರತ್ ಮಾತಾಕಿ ಜೈ’ ಎಂದು ಕೂಗಿದ ನಂತರ ಚಾಕು ಇರಿತಕ್ಕೊಳಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ (BJP) ಕಾರ್ಯಕರ್ತನನ್ನು ಆರ್.ಅಶೋಕ್ ಭೇಟಿ ಮಾಡಿ ಧೈರ್ಯ ಹೇಳಿದರು. ಇದನ್ನೂ ಓದಿ: ಒಡಿಶಾದ ಮೊದಲ ಬಿಜೆಪಿ ಸಿಎಂ ಆಗಿ ಮೋಹನ್ ಚರಣ್ ಪ್ರಮಾಣವಚನ ಸ್ವೀಕಾರ
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಘಟನೆಗಳು ನಡೆಯದಂತೆ ಬಿಜೆಪಿ ಎಚ್ಚರ ವಹಿಸಲಿದೆ. ಕಾರ್ಯಕರ್ತರ ಜೊತೆಗೆ ನಾವೆಲ್ಲರೂ ಸದಾ ನಿಲ್ಲುತ್ತೇವೆ. ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಮರ್ಪಕವಾಗಿ ಮಾಡಬೇಕು. ಹಾಗೆಯೇ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದರು. ಇದನ್ನೂ ಓದಿ: ಪೋಕ್ಸೋ ಕೇಸ್ – ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ CID ನೋಟಿಸ್!
ಭಾರತ್ ಮಾತಾ ಕೀ ಜೈ ಎಂಬ ಘೋಷಣೆ ಕೂಗಿದ್ದಕ್ಕೇ ಬಿಜೆಪಿ ಕಾರ್ಯಕರ್ತರಾದ ಹರೀಶ್ ಮತ್ತು ನಂದಕುಮಾರ್ ಅವರಿಗೆ ಚೂರಿ ಇರಿಯಲಾಗಿದೆ. ಈ ತಾಲಿಬಾನ್ ಸರ್ಕಾರದಿಂದ ಪಾಕಿಸ್ತಾನಕ್ಕೆ ಜೈಕಾರದ ಘೋಷಣೆ ಕೇಳಿಬರುತ್ತಿದೆ. ಈ ಘಟನೆಯನ್ನು ಸದನದಲ್ಲೂ ಪ್ರಶ್ನಿಸಿ ಹೋರಾಟ ಮಾಡುತ್ತೇವೆ. ಸ್ಪೀಕರ್ ಮತ್ತು ಆರೋಗ್ಯ ಸಚಿವರು ಆಸ್ಪತ್ರೆ ಕಾರ್ಯಕ್ರಮಕ್ಕೆ ಬಂದಿದ್ದರೂ ಗಾಯಾಳುಗಳನ್ನು ನೋಡಿ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ ಎಂದು ದೂರಿದರು. ಇದನ್ನೂ ಓದಿ: ಪೆಮಾ ಖಂಡು ಸತತ 3ನೇ ಅವಧಿಗೆ ಅರುಣಾಚಲ ಪ್ರದೇಶ ಸಿಎಂ
ಈ ಘಟನೆ ನಡೆದ ನಂತರ ಪಾಕಿಸ್ತಾನದ (Pakistan) ಕುರಿತು ಹೇಳಿದ್ದಾರೆಂದು ಆರೋಪಿಸಿ ಅಮಾಯಕ ಹಿಂದೂ ಕಾರ್ಯಕರ್ತರ ವಿರುದ್ಧ ಮತ್ತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಒಂದು ವೇಳೆ ಹಾಗಿದ್ದಲ್ಲಿ ಅದರ ಕುರಿತಾದ ವೀಡಿಯೋ ಅಥವಾ ಪುರಾವೆ ಬಿಡುಗಡೆ ಮಾಡಲಿ. ಭಾರತ್ ಮಾತಾ ಕೀ ಜೈ ಎನ್ನುವುದು ಬಿಟ್ಟರೆ ಬೇರಾವುದೇ ಘೋಷಣೆ ಕೂಗಿಲ್ಲ. ಇನ್ನೊಂದು ಪ್ರಕರಣ ದಾಖಲಿಸಿ ಮುಖ್ಯವಾದ ಪ್ರಕರಣವನ್ನು ಮುಚ್ಚಿಹಾಕುವ ಕೆಲಸವನ್ನು ಜಿಲ್ಲಾಡಳಿತ ಮಾಡುತ್ತಿದೆ. ಹಿಂದೂ ಕಾರ್ಯಕರ್ತರ ಮೇಲೆ ದಾಖಲಿಸಿದ ಪ್ರಕರಣವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಕೇಸ್: 3ನೇ ಪ್ರಕರಣದಲ್ಲೂ ನಿರೀಕ್ಷಣಾ ಜಾಮೀನು ಅರ್ಜಿ ವಜಾ!
ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ:
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 20% ಹಣ ನುಂಗಿದ ಸಚಿವರ ರಾಜೀನಾಮೆ ಪಡೆಯಲಾಗಿದೆ. ಆದರೆ 80% ಹಣ ನುಂಗಿದ ಸಿಎಂ ಸಿದ್ದರಾಮಯ್ಯ (Siddaramaiah) ಕೂಡ ರಾಜೀನಾಮೆ ನೀಡಬೇಕು. ಇದಕ್ಕಾಗಿ ಸದನದಲ್ಲಿ ಆಗ್ರಹ ಮಾಡುತ್ತೇವೆ. ತೆಲಂಗಾಣದಲ್ಲೂ ಕಾಂಗ್ರೆಸ್ ಸರ್ಕಾರವಿದ್ದು, ಅಲ್ಲಿಗೂ ನಿಗಮದ ಹಣ ಸಂದಾಯವಾಗಿದೆ. ಆದ್ದರಿಂದ ಇದು ದೊಡ್ಡ ಭ್ರಷ್ಟಾಚಾರದ ಪ್ರಕರಣ ಎಂದು ಒತ್ತಿ ಹೇಳಿದರು. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ; ಮತ್ತೋರ್ವ ಆರೋಪಿ ಬಂಧನ
ನಾನು ಯಾಕೆ ಆ ಸರ್ಕಾರು ಮನೆ ತಗೊಂಡೆ ಅಂದರೆ ಹಳೆ ನೆನಪಿಗಾಗಿ ತಗೊಂಡೆ. ಹಿಂದೆ ಬಂಗಾರಪ್ಪ ನವರು ಆ ಮನೆಯಲ್ಲಿ ಇದ್ದರು. ನಾನು ವಿದ್ಯಾರ್ಥಿ ಮುಖಂಡನಾಗಿದ್ದಾಗ ಆ ಮರದ ಕೆಳಗೆ ಹೋಗಿ ಕೂರ್ತಿದ್ದೆ. ಆ ನೆನಪಿಗಾಗಿ ನಾನು ಆ ಮನೆ ತಗೊಂಡಿದ್ದೇನೆ. ಈವಾಗ್ಲೂ ನನ್ನನ್ನು ಅಶೋಕ್ ಕೇಳಲಿ, ಮನೆ ಬೇಕಿದ್ರೆ ಬಿಟ್ಟು ಕೊಡ್ತೀನಿ ಅಂದ್ರು.
ಆ ಮನೆಗೆ ಹೋದ್ರೆ ಸಿಎಂ ಆಗ್ತಾರೆಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಅವರಿಗೆ ಒಳ್ಳೆಯದಾಗಲಿ.ಹಿಂದೆ ನನ್ನ ಕ್ಷೇತ್ರಕ್ಕೆ ಬಂದು ಸೋತಿದ್ದರು. ಈಗ ನಾನಿರುವ ಮನೆಗೆ ಬರಲಿ, ಬಿಡ್ತೀನಿ ಎಂದು ವ್ಯಂಗ್ಯವಾಡಿದ್ರು.
– ಕಸಕ್ಕೂ ತೆರಿಗೆ ಹಾಕಲು ಸಿದ್ಧತೆ ಮಾಡಿಕೊಂಡಿದ್ದಾರೆಂದು ಆಕ್ರೋಶ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Development Corporation) ನಡೆದ ಬಹುಕೋಟಿ ಹಗರಣದ ಹಿಂದೆ ಕೇವಲ ಬಿ.ನಾಗೇಂದ್ರ (B Nagendra) ಇಲ್ಲ. ಇದರ ಹಿಂದೆ ದೊಡ್ಡ ನಾಯಕರೇ ಇದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (Siddaramaiah) ಗೊತ್ತಿದ್ದೇ ಈ ಹಗರಣ ನಡೆದಿದೆ. ಇದರ ಜೊತೆ ಇನ್ನಷ್ಟು ಸಚಿವರೂ ಸೇರಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಕೂಡ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashok) ಒತ್ತಾಯಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ ಆರ್ಥಿಕತೆಯ ಬಗ್ಗೆ ಗೊತ್ತಿದೆಯೇ? ಇಲಾಖೆಯ ಮೇಲೆ ಇವರಿಗೆ ಹಿಡಿತವಿಲ್ಲವೇ? ಈ ಹಣ ಹೈದರಾಬಾದ್‌ಗೆ ಹೋಗಿದ್ದು ತಿಳಿದರೂ ಬೇರೆಯವರ ವಿರುದ್ಧ ಕಠಿಣ ಕ್ರಮ ವಹಿಸಿಲ್ಲ. ದಲಿತರ ಹಣವನ್ನು ವಾಪಸ್ ಮಾಡದಿದ್ದರೆ ಜನರ ಶಾಪ ತಟ್ಟಲಿದೆ. ಈ ಅಕ್ರಮದಲ್ಲಿ ಮುಖ್ಯಮಂತ್ರಿಯೇ ಮೊದಲ ಆರೋಪಿಯಾಗಿದ್ದು, ಬಿಜೆಪಿಯ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕಸ್ಟಡಿ ಅವಧಿ ಅಂತ್ಯ – ಪರಪ್ಪನ ಅಗ್ರಹಾರ ಜೈಲಿಗೆ ಪ್ರಜ್ವಲ್ ಶಿಫ್ಟ್!
ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳಿಂದ (Guarantee Scheme) ಕಾಂಗ್ರೆಸ್‌ಗೆ ಮತ ಬಂದಿಲ್ಲ. ಸರ್ಕಾರ ಪಾಪರ್ ಆಗಿ ಅಭಿವೃದ್ಧಿ ಶೂನ್ಯವಾಗಿರುವುದರಿಂದಲೇ ಕಾಂಗ್ರೆಸ್ ಸೋತಿದೆ. ಸರ್ಕಾರ ಮತಕ್ಕಾಗಿ ಗ್ಯಾರಂಟಿ ಜಾರಿ ಮಾಡಿದ್ದರಿಂದ ಈಗ ಸಾಲ ಮಾಡಿ ಸಂಬಳ ಕೊಡುವ ಪರಿಸ್ಥಿತಿ ಬಂದಿದೆ. ಗ್ಯಾರಂಟಿಗಳಿಂದ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗಿಲ್ಲ. ಶಾಸಕರು ಅನುದಾನ ಯಾವಾಗ ಕೊಡುತ್ತೀರಿ ಎಂದು ಪ್ರಶ್ನಿಸುತ್ತಿದ್ದಾರೆ. ಪಾಪರ್ ಆಗಿರುವ ಸರ್ಕಾರ ಎಲ್ಲಾ ಕಡೆ ಬಿಲ್ ಪಾವತಿ ಬಾಕಿ ಇರಿಸಿಕೊಂಡಿದೆ. ಬಿಜೆಪಿ ಸರ್ಕಾರವಿದ್ದಾಗ ಶಾಸಕರು ಶಾಲೆ, ಆಸ್ಪತ್ರೆ, ನೀರಾವರಿ ಯೋಜನೆ ತಂದರು. ಕಾಂಗ್ರೆಸ್‌ನ ಶಾಸಕರು ಏನೂ ತಂದಿಲ್ಲವೆಂದು ಜನರೇ ಹೀಯಾಳಿಸುತ್ತಿದ್ದಾರೆ. ಅಭಿವೃದ್ಧಿ ಇಲ್ಲದೆ ಜನರು, ಶಾಸಕರು ಹಾಗೂ ಸಚಿವರ ಮಾತಿಗೆ ವಿರುದ್ಧವಾಗಿ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ ಎಂದರು. ಇದನ್ನೂ ಓದಿ: ಐವರು ಕೇಂದ್ರ ಸಚಿವರು ರಾಜ್ಯದ ಸಮಸ್ಯೆಗಳನ್ನು ಬಗೆಹರಿಸುವ ವಿಶ್ವಾಸವಿದೆ: ಪರಮೇಶ್ವರ್
ಕಾಂಗ್ರೆಸ್ ಸರ್ಕಾರ ದಲಿತರ ಹಣ ಲೂಟಿ ಹೊಡೆದು, ಶೂನ್ಯ ಸಾಧನೆ ಮಾಡಿ, ಜನರ ಪಾಲಿಗೆ ಸತ್ತುಹೋಗಿದೆ. ಒಬ್ಬ ಸಚಿವರೂ ಮಳೆ ಹಾನಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸಚಿವರಿರುವ ಕಡೆ ಹಿನ್ನೆಡೆಯಾಗಿದ್ದು, ಸ್ಥಾನ ಕಳೆದುಕೊಳ್ಳುವ ಆತಂಕವಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಕನಕಪುರದಲ್ಲಿ ಹೀನಾಯವಾಗಿ ಸೋತಿದ್ದಾರೆ. ರಾಜ್ಯದಲ್ಲಿ ಸರ್ಕಾರವಿದ್ದು, ಏಕೆ ಸೋತಿದ್ದೀರಿ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ದಲಿತರ 187 ಕೋಟಿ ರೂ. ಲೂಟಿ ಮಾಡಿದ್ದರಿಂದಲೇ ಇವರು ಸೋತಿದ್ದಾರೆ ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ತಿಳಿದುಬಂದಿದೆ. ಲೋಕಸಭೆ ಚುನಾವಣೆಯ ಫಲಿತಾಂಶದಿಂದ ಸರ್ಕಾರ ಮೂಲೆ ಸೇರಿದೆ ಎಂದು ಹೇಳಿದರು. ಇದನ್ನೂ ಓದಿ: ಬೈಕ್‌ಗೆ ಲಾರಿ ಡಿಕ್ಕಿ – ಪತಿಯೊಂದಿಗೆ ದೇವರ ದರ್ಶನ ಮುಗಿಸಿ ಬರುತ್ತಿದ್ದ ಪತ್ನಿ ಸಾವು!
ಕಸಕ್ಕೂ ತೆರಿಗೆ:
ಈಗಾಗಲೇ ತೆರಿಗೆ ಭಾರದಿಂದ ಜನರು ಸುಸ್ತಾಗಿದ್ದಾರೆ. ಕಸಕ್ಕೂ ತೆರಿಗೆ ಹಾಕುವುದನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ. ಮುಂದೆ ಹಾಲು, ಆಲ್ಕೋ ಹಾಲ್, ಬಸ್ ಟಿಕೆಟ್ ದರವನ್ನೂ ಹೆಚ್ಚಿಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಸಿಎಂ ಸಿದ್ದರಾಮಯ್ಯ ಇನ್ನಷ್ಟು ಹೊಸ ತೆರಿಗೆಗಳನ್ನು ವಿಧಿಸಲಿದ್ದಾರೆ. ಇದರ ವಿರುದ್ಧವೂ ಬಿಜೆಪಿ ಪ್ರತಿಭಟಿಸಲಿದೆ. ಅಲ್ಪಸಂಖ್ಯಾತರು ಏನು ಮಾಡಿದರೂ ನಡೆಯುತ್ತದೆ ಎಂಬ ನಂಬಿಕೆ ಬಂದಿದೆ. ಹಿಂದೂಗಳ ಮೇಲೆ ಹಲ್ಲೆಗಳು ಹೆಚ್ಚಾಗುತ್ತಿದೆ ಹಾಗೂ ಮಾಫಿಯಾ ರೌಡಿಗಳಿಗೆ ಭಯ ಕಡಿಮೆಯಾಗಿದೆ. ಗೃಹ ಇಲಾಖೆ ದಿಕ್ಕು ದೆಸೆಯಿಲ್ಲದಂತೆ ನಡೆಯುತ್ತಿದೆ. ಜನರು ತಮ್ಮನ್ನು ತಾವೇ ರಕ್ಷಣೆ ಮಾಡಿಕೊಳ್ಳುವ ಸ್ಥಿತಿ ಬಂದಿದೆ ಎಂದರು. ಇದನ್ನೂ ಓದಿ: ಯಾತ್ರಾರ್ಥಿಗಳಿದ್ದ ಬಸ್ ಮೇಲೆ ದಾಳಿ – ಹೊಣೆ ಹೊತ್ತ ಪಾಕ್ ಉಗ್ರ ಸಂಘಟನೆ
ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಯನ್ನು ಸ್ವಾಗತಿಸುತ್ತೇನೆ. ನಮ್ಮದು ಎರಡು ಅಜೆಂಡಾ. ಒಂದು ಮತ್ತೆ ನರೇಂದ್ರ ಮೋದಿ, ಮತ್ತೊಂದು 400 ಗಡಿ ದಾಟುವುದು ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಹೇಳಿದ್ದಾರೆ.
ಚುನಾವಣೋತ್ತರ ಸಮೀಕ್ಷೆ (Exit Polls) ಕುರಿತು ಮಾತನಾಡಿದ ಅವರು, ಸಮೀಕ್ಷೆಯು ಖುಷಿ ತಂದಿದೆ. ನಮ್ಮದು ಎರಡು ಅಜೆಂಡಾ. ಒಂದು ಮತ್ತೆ ನರೇಂದ್ರ ಮೋದಿ, ಮತ್ತೊಂದು 400 ದಾಟೋದು. ಒಂದಂತು ಆಗಿದೆ. ಇನ್ನೊಂದು ರಿಯಲ್ ಪೋಲ್ ರಿಸಲ್ಟ್‌ನಲ್ಲಿ ರೀಚ್ ಆಗುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Exit Polls | ಮೋದಿ ಹ್ಯಾಟ್ರಿಕ್ – 350ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎನ್‌ಡಿಎ
ಒಟ್ಟಾರೆ ಇಂದಿನ ಎಕ್ಸಿಟ್ ಪೋಲ್ ರಿಸಲ್ಟ್‌ನಿಂದ ಕಾರ್ಯಕರ್ತರಲ್ಲೂ ಖುಷಿ ಇರಲಿದೆ. ಕಳೆದ ವಿಧಾನಸಭೆ ಸೋತಿದ್ದೆವು. ಈ ರಿಸಲ್ಟ್ ಕರ್ನಾಟಕದ ಕಾರ್ಯಕರ್ತರಿಗೆ ಬೂಸ್ಟ್ ಕೊಡಲಿದೆ. ಅದೇ ರೀತಿ ಕಾಂಗ್ರೆಸ್ ಅವನತಿ ಶತಸಿದ್ಧ ಎಂದು ತಿಳಿಸಿದ್ದಾರೆ.
ಕಳೆದ ಬಾರಿ ಕೆಲ ಸರ್ವೇಯಲ್ಲಿ 250 ಸ್ಥಾನ ಕೊಟ್ಟಿದ್ದರು. 272 ಬರಲ್ಲ ಅಂದಿದ್ದರು. ಆದರೆ 303 ಕ್ಕೆ ಹೋಗಿದ್ದೆವು. ಈ ಬಾರಿ 300 ಸ್ಥಾನ ಕೊಟ್ಟಿದ್ದಾರೆ. ನೋಡೋಣ, ಎನ್‌ಡಿಎ 400 ರೀಚ್ ಆಗೋದು ಸ್ಪಷ್ಟ ಅಭಿಪ್ರಾಯ ಇದೆ. ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ತೀವಿ ಅಂತ ಹೇಳಿದ್ರು. ಸಿದ್ದರಾಮಯ್ಯ ಅವರು 18-20 ಎಂದು ಹೇಳಿದ್ದರು. ಎಕ್ಸಿಟ್ ಪೋಲ್‌ನಲ್ಲಿ ಐದಾರು ಸ್ಥಾನ ಬರ್ತಾ ಇದೆ. ಕಾಂಗ್ರೆಸ್ ಭಾವನೆ ಫೇಲ್ಯುರ್ ಆಗಿದೆ. ಕಾಂಗ್ರೆಸ್‌ಗೆ ಇದೇ ರಿಸಲ್ಟ್ ಬಂದರೆ ಭಾರಿ ಹಿನ್ನಡೆ ಆಗಲಿದೆ ಎಂದು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: Exit Polls: ಕರ್ನಾಟಕದಲ್ಲಿ 20 ರ ಗಡಿ ದಾಟಿದ ಬಿಜೆಪಿ – ಕಾಂಗ್ರೆಸ್‌ಗೆ ಎಷ್ಟು?
ಕರ್ನಾಟಕ ಕಾಂಗ್ರೆಸ್ ಕಾರ್ಯಕರ್ತರು ನೋವಿನಿಂದ ಮನೆಗೆ ಹೋಗೋ ಪರಿಸ್ಥಿತಿ. ಕಾಂಗ್ರೆಸ್ ಎಂಎಲ್ಎಗಳು ಬೇರೆ ದಾರಿ ಹುಡುಕಿಕೊಳ್ಳುತ್ತಾರೆ. ರಾಜ್ಯದಲ್ಲಿ ಹಿನ್ನಡೆ ಪ್ರಶ್ನೆ ಇಲ್ಲ. ಕಳೆದ ಬಾರಿಯ ಕಾಂಗ್ರೆಸ್ ಮೈತ್ರಿ ಜನ ಒಪ್ಪಲಿಲ್ಲ. ದೇವೇಗೌಡರ ಸೋಲಿಸಲು ಕಾಂಗ್ರೆಸ್ ಕಾರ್ಯಕರ್ತರೇ ಪ್ರಯತ್ನ ಮಾಡಿದ್ರು. ಅದೇ ರೀತಿ ಜೆಡಿಎಸ್ ಮಾಡಿತು. ಹಾಗಾಗಿ ಕಾಂಗ್ರೆಸ್‌ಗೆ ಹಿನ್ನಡೆ ಆಯ್ತು. ಇಲ್ಲದಿದ್ದರೆ ಕಳೆದ ಬಾರಿ ಕಾಂಗ್ರೆಸ್ 5-6 ಸೀಟು ಗೆಲ್ಲುತ್ತಿದ್ದರು. ಒಬ್ಬರೆ ಇದ್ದರೆ ಇದು ಸಾಧ್ಯ ಆಗೋದು ಎಂದು ಕಾಂಗ್ರೆಸ್ಗೆ ತಿರುಗೇಟು ನೀಡಿದರು.
ಚುನಾವಣೆಗೂ ಮುನ್ನವೇ ನಾವು 23-24 ಗೆಲ್ಲೋದಾಗಿ ಹೇಳಿದ್ದೆವು. ಸಮೀಕ್ಷೆ ಕೂಡ ಹತ್ತಿರ ಹೇಳುತ್ತಿದೆ. ಫಲಿತಾಂಶ ದಿನವು ಕಾಂಗ್ರೆಸ್‌ಗೆ ಇದೇ ರಿಸಲ್ಟ್ ಇರಲಿದೆ. ಹಾಸನ ಗೆಲ್ಲೋದಾಗಿ ಮಾಹಿತಿ ಇದೆ. ದಕ್ಷಿಣ ಭಾರತದಲ್ಲಿ ಈ ಬಾರಿ ಉತ್ತಮ ಪರ್ಫಾರ್ಮೆನ್ಸ್ ಇದೆ. ಆಂಧ್ರದಲ್ಲಿ ಕಾಂಗ್ರೆಸ್ 0, ನಾವು 18 ಗೆಲ್ಲೋದಾಗಿ ಮಾಹಿತಿ ಇದೆ. ತೆಲಂಗಾಣ ಕಳೆದ ಬಾರಿ 4, ಈ ಬಾರಿ ಎಂಟಕ್ಕೆ ಏರಿಕೆ ಆಗುತ್ತಿದೆ. ತಮಿಳುನಾಡು, ಕೇರಳ ಖಾತೆ ಓಪನ್ ಆಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಸ್ವಲ್ಪ ಕಡಿಮೆಯಾದರೂ ಒಟ್ಟಾರೆ ದಕ್ಷಿಣ ಭಾರತದಲ್ಲಿ ಉತ್ತಮ ರಿಸಲ್ಟ್ ಬರಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Exit Polls | ಕೇರಳದಲ್ಲೂ ಖಾತೆ ತೆರೆಯಲಿದೆ ಬಿಜೆಪಿ
ರಾಮನಗರ: ಹಬ್ಬಗಳ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲೇ ಅಧಿಕಾರಿಗಳ ಸಮವಸ್ತ್ರದ ಬದಲು ಬಿಜೆಪಿಯ ಕೇಸರಿ ಸಮವಸ್ತ್ರ ಹಾಕಿಸಿದ್ದನ್ನ ಅಶೋಕ್ ಮರೆತುಬಿಟ್ಟಿದ್ದಾರಾ? ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಪ್ರಶ್ನಿಸಿದ್ದಾರೆ.
ಹಬ್ಬಗಳ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲೇ ಅಧಿಕಾರಿಗಳ ಸಮವಸ್ತ್ರದ ಬದಲಿಗೆ ಬಿಜೆಪಿಯ ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ? ಉಡುಪಿ, ಬಳ್ಳಾರಿಯಲ್ಲಿ ಪೊಲೀಸರಿಗೆ ಬಿಜೆಪಿಯ ಕೇಸರಿ ಸಮವಸ್ತ್ರ (Saffron Uniform) ಹಾಕಿಸಿದ್ರಿ. ನೀವು ನಮ್ಮ ಬಗ್ಗೆ ಮಾತಮಾಡ್ತಿರಾ? ಎಂದು ಪ್ರಶ್ನಿಸಿದ್ದಾರೆ.
ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಜೂನ್ 6ರ ವರೆಗೆ ಗಡುವು ನೀಡಿರುವ ವಿಚಾರ ಕುರಿತು ಮಾತನಾಡಿ, ಅವರು ಅಲ್ಲಿಯವರೆಗೂ ಕಾಯುವುದೇಕೆ? ಈಗಿನಿಂದಲೇ ಹೋರಾಟ ಮಾಡಲಿ. ಯಾಕೆ ಒಳ್ಳೆ ಮುಹೂರ್ತ ನೋಡಿ ಹೋರಾಟ ಮಾಡ್ತಾರಾ? ಅವರು ಯಾವ ವಿಚಾರಕ್ಕೆ ಬಾಯಿ ಬಿಡಬೇಕೋ ಅದರ ಬಗ್ಗೆ ಬಾಯಿ ಬಿಡದೇ ಸುಮ್ಮನೆ ಮಾತನಾಡ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ತಳಿಪರಂಬ ರಾಜರಾಜೇಶ್ವರ ದೇವಸ್ಥಾನದ ಬಳಿ ಶತ್ರು ಭೈರವಿ ಯಾಗ ನಡೆದಿಲ್ಲ – ಡಿಕೆಶಿ ಆರೋಪ ಸುಳ್ಳು ಎಂದ ಆಡಳಿತ ಮಂಡಳಿ
ಇನ್ನೂ ವಾಲ್ಮೀಕಿ ನಿಗಮದ ಅಭಿವೃದ್ಧಿ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ನೈತಿಕ ಹೊಣೆಹೊತ್ತು ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕು ಎಂಬ ಈಶ್ವರಪ್ಪ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಈ ಬಗ್ಗೆ ನಾನು ಮತ್ತು ಸಿಎಂ ಪರಿಶೀಲನೆ ಮಾಡ್ತಿದ್ದೇವೆ. ಪ್ರಕರಣದ ತನಿಖೆಯಲ್ಲಿ ವಾಸ್ತವಾಂಶ ನೋಡಿ ಆಮೇಲೆ ಈ ಬಗ್ಗೆ ತೀರ್ಮಾನ ಮಾಡ್ತೇವೆ. ನಾವು ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಡಿಕೆಶಿ ತಿಳಿಸಿದರು. ಇದನ್ನೂ ಓದಿ: ಅಮೆರಿಕದಲ್ಲಿ ನಡೆದ ಸ್ಪೆಲ್ಲಿಂಗ್ ಬೀ ಸ್ಪರ್ಧೆಯಲ್ಲಿ 12 ವರ್ಷದ ಭಾರತೀಯ-ಅಮೆರಿಕನ್ ವಿಜೇತ