Tag: r ashok

  • ಬೆಂಗಳೂರಿನ ಮಾನ-ಮರ್ಯಾದೆ ಹರಾಜು ಹಾಕಿದ ಕಾಂಗ್ರೆಸ್ ಸರ್ಕಾರ: ಆರ್.ಅಶೋಕ್ ಟೀಕೆ

    ಬೆಂಗಳೂರಿನ ಮಾನ-ಮರ್ಯಾದೆ ಹರಾಜು ಹಾಕಿದ ಕಾಂಗ್ರೆಸ್ ಸರ್ಕಾರ: ಆರ್.ಅಶೋಕ್ ಟೀಕೆ

    ಬೆಂಗಳೂರು: ರಾಜ್ಯದಲ್ಲಿ ಜನರು ಕಳೆದ 5 ತಿಂಗಳುಗಳಿಂದ ಬರಗಾಲದ ನೋವನ್ನು ಅನುಭವಿಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R.Ashok) ತಿಳಿಸಿದರು.

    ಮಲ್ಲೇಶ್ವರದ ಬಾವುರಾವ್ ದೇಶಪಾಂಡೆ ಭವನದಲ್ಲಿ ಇಂದು (ಶನಿವಾರ) ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬರಗಾಲಪೀಡಿತ ಎಂದು ಘೋಷಿಸುವ ಮೊದಲು ಅಳೆದು ತೂಗಿ 3 ತಿಂಗಳು ಮುಂದೆ ಹಾಕಿದ್ದರು. ರಾಜ್ಯ ಸರ್ಕಾರದಲ್ಲಿ ಹಣ ಇಲ್ಲದ ಕಾರಣ ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬ ಮಾಡಿದರು ಎಂದು ಆಕ್ಷೇಪಿಸಿದರು. ಜನರು ಗುಳೆ ಹೋಗುತ್ತಿದ್ದಾರೆ ಎಂದರೆ ಸರ್ಕಾರ ಒಪ್ಪುತ್ತಿಲ್ಲ. ಹಾಗಿದ್ದರೆ ಮನೆಗಳಿಗೆ ಯಾಕೆ ಬೀಗ ಹಾಕಿದ್ದಾರೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮಾರ್ಚ್‌ 13ರ ಒಳಗಡೆ 100 ಹೆದ್ದಾರಿ ಯೋಜನೆ, 10 ವಂದೇ ಭಾರತ್‌ ರೈಲಿಗೆ ಚಾಲನೆ ನೀಡಲಿದ್ದಾರೆ ಮೋದಿ

    ಹಳ್ಳಿಗಳಲ್ಲಿ ಕೇವಲ ವಯಸ್ಸಾದವರು ಇದ್ದಾರೆ. ಯುವಕರು, ಮಧ್ಯ ವಯಸ್ಕರು ಹಳ್ಳಿಗಳಲ್ಲಿ ಇಲ್ಲ. ಹಾಗಿದ್ದರೆ ಅವರು ಎಲ್ಲಿದ್ದಾರೆ? ಗೋವಾ, ಮಂಗಳೂರು, ಹೈದರಾಬಾದ್ ಕಡೆ ಜನರು ಗುಳೆ ಹೋಗುತ್ತಿದ್ದಾರೆ ಎಂದು ವಿವರಿಸಿದರು.

    ಸರ್ಕಾರವು ಕುಂಭಕರ್ಣ ನಿದ್ರೆಯಲ್ಲಿದೆ. ಏನೂ ಆಗಿಲ್ಲ ಎಂಬಂತೆ ವರ್ತಿಸುತ್ತಿದೆ. ಎಲ್ಲವನ್ನೂ ಮುಚ್ಚಿಡುತ್ತಿದೆ. ಬಾಗಿಲು ಹಾಕಿದರೂ ಮುಚ್ಚಿಡುವುದು, ಪಾಕಿಸ್ತಾನ ಜಿಂದಾಬಾದ್ (Pro-Pak Slogan) ಎಂದರೂ ಮುಚ್ಚಿಡುತ್ತದೆ. ಬರಗಾಲ ಇಲ್ಲ ಎಂಬಂತೆ ಮುಚ್ಚಿಡುವ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಅಂತರರಾಷ್ಟ್ರೀಯ ಚಾನೆಲ್‍ನಲ್ಲಿ ಇದು ಸುದ್ದಿಯಾಗಿದೆ. ಹೀಗಿದ್ದರೂ ಐ.ಟಿ, ಬಿ.ಟಿಯವರು ಬೆಂಗಳೂರಿಗೆ ಹೋಗಲು ಇಷ್ಟ ಪಡುತ್ತೀರಾ ಎಂದು ಆಂಕರ್ ಕೇಳಿದ್ದನ್ನು ನಾನು ಕಣ್ಣಾರೆ ನೋಡಿದ್ದೇನೆ. ಕಿವಿಯಾರೆ ಕೇಳಿದ್ದೇನೆ. ಬೆಂಗಳೂರಿನ ಮಾನ-ಮರ್ಯಾದೆಯನ್ನು ಈ ಕಾಂಗ್ರೆಸ್ (Congress) ಸರ್ಕಾರ ಹರಾಜು ಹಾಕಿದೆ ಎಂದು ಟೀಕಿಸಿದರು. ಇದನ್ನೂ ಓದಿ: ಡಿಎಂಕೆ ಜೊತೆ ಕೈ ಜೋಡಿಸಿದ ನಟ ಕಮಲ್ ಹಾಸನ್

    ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿಗೆ ಐಟಿ ಸಿಟಿ, ಬಿ.ಟಿ. ಸಿಟಿ ಎಂಬ ಹೆಸರಿದೆ. ಬಿಸಿನೆಸ್ ವಿಷಯದಲ್ಲಿ ಬೆಂಗಳೂರಿಗೆ ಆದ್ಯತೆ ಕೊಡಲಾಗುತ್ತಿತ್ತು ಎಂದ ಅವರು, ಕಾವೇರಿ ನೀರನ್ನು ತಮಿಳುನಾಡಿಗೆ ಬಿಡದಂತೆ ನಾವು ಆಗ್ರಹಿಸಿದ್ದೆವು. ಆದರೆ, ‘ಇಂಡಿ’ ಒಕ್ಕೂಟದ ಭಾಗಿದಾರ ಪಕ್ಷವೆಂಬ ಕಾರಣಕ್ಕೆ ಸ್ಟಾಲಿನ್ ಅವರ ಕೋರಿಕೆ ಮೇರೆಗೆ ನೀರನ್ನು ಬಿಟ್ಟಿದ್ದಾರೆ. ಈಗ ಶೇ.60 ಬೋರ್‍ವೆಲ್‍ಗಳು ಬತ್ತಿ ಹೋಗಿವೆ. ಕುಡಿಯುವ ನೀರಿಗೂ ಹಾಹಾಕಾರ ಇದೆ ಎಂದು ವಿವರಿಸಿದರು.

    ಕಾವೇರಿ ನೀರನ್ನೂ ಶೇ.20ರಿಂದ ಶೇ.30ರಷ್ಟು ಕಡಿಮೆ ಮಾಡಿದ್ದಾರೆ. ಆದರೆ, ಇದರ ಕುರಿತು ಅಧಿಕಾರಿಗಳು ಬಾಯಿ ಬಿಡುತ್ತಿಲ್ಲ. ಮುಂದೆ ಮಳೆ ಬರದೆ ಇದ್ದರೆ ಸಮಸ್ಯೆ ತೀವ್ರಗೊಳ್ಳಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ. ರಾಮಮೂರ್ತಿ ಉಪಸ್ಥಿತರಿದ್ದರು. ಇದನ್ನೂ ಓದಿ: ಹಾಲಿ ಸಂಸದರಿಗೆ ಟಿಕೆಟ್ ಇಲ್ಲವೆಂದು ಮೋದಿ, ಅಮಿತ್ ಶಾ ಹೇಳಿಲ್ಲ: ಶೋಭಾ ಕರಂದ್ಲಾಜೆ

  • ವಯಸ್ಸು, ಆರೋಗ್ಯ ಕಾರಣದಿಂದ ಕೆಲವರ ಬದಲಾವಣೆ ಆಗುತ್ತೆ: ಆರ್.ಅಶೋಕ್

    ವಯಸ್ಸು, ಆರೋಗ್ಯ ಕಾರಣದಿಂದ ಕೆಲವರ ಬದಲಾವಣೆ ಆಗುತ್ತೆ: ಆರ್.ಅಶೋಕ್

    ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಗೆ ಕೆಲವರನ್ನು ವಯಸ್ಸು, ಆರೋಗ್ಯ ಕಾರಣದಿಂದ ಬದಲಾವಣೆ ಮಾಡಲಾಗುತ್ತದೆ. ಬಹುತೇಕ ಚರ್ಚೆ ಒಂದು ಹಂತಕ್ಕೆ ಬಂದಿದ್ದು, ಗೊಂದಲ ಇರುವ ಕೆಲ ಕ್ಷೇತ್ರಗಳ ಬಗ್ಗೆ ಚರ್ಚೆ ಆಗಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R. Ashok) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ದಿನಗಳ ಕಾಲ ದೆಹಲಿಯಲ್ಲಿ ಸಭೆ ನಡೆಸಲಾಯ್ತು. ದೆಹಲಿಗೆ ನಮ್ಮನ್ನ ನಮ್ಮ ರಾಷ್ಟ್ರೀಯ ನಾಯಕರು ಕರೆದಿದ್ರು. ರಾಜ್ಯದ ಲೋಕಸಭಾ ಚುನಾವಣೆ ತಯಾರಿ, ಅಭ್ಯರ್ಥಿಗಳ ಪಟ್ಟಿ ಬಗ್ಗೆ ಚರ್ಚೆ ಮಾಡಿದ್ದಾರೆ. ಒಂದು ಸುತ್ತಿನ ಮಾತುಕತೆ ನಡೆದಿದೆ. ರಾಜ್ಯ ಕೋರ್ ಕಮಿಟಿ ಕಳಿಸಿದ್ದ ಪಟ್ಟಿ ಬಗ್ಗೆ ಚರ್ಚೆ ಆಗಿದೆ. ಸವಿಸ್ತಾರವಾಗಿ ಅಮಿತ್ ಶಾ, ಜೆ.ಪಿ ನಡ್ಡಾ, ಸಂತೋಷ್ ಅವರ ಜೊತೆ ಚರ್ಚೆ ಆಗಿದೆ. ಅಭ್ಯರ್ಥಿಗಳ ಮಾಹಿತಿ, ಹಿನ್ನೆಲೆ ತಗೊಂಡಿದ್ದಾರೆ ಎಂದರು.

    ಈ ಬಾರಿಯೂ ಅಚ್ಚರಿ ಮತ್ತು ಹೊಸಮುಖಗಳಿಗೆ ಟಿಕೆಟ್ (Loksabha Election 2024) ಸಿಗಬಹುದು. ಜೆಡಿಎಸ್ ಗೆ (JDS) ಯಾವುದೆಲ್ಲ ಕ್ಷೇತ್ರ ಬಿಟ್ಟು ಕೊಡಬೇಕು ಅಂತಾನೂ ಚರ್ಚೆ ಆಗಿದೆ. ಕುಮಾರಸ್ವಾಮಿ ಅವರು ಅರೋಗ್ಯ ಸರಿ ಇಲ್ಲ ಅಂತ ಹೋಗಿಲ್ಲ. ಇನ್ನೊಂದೆರಡು ಮೂರು ದಿನಗಳಲ್ಲಿ ಕುಮಾರಸ್ವಾಮಿ ದೆಹಲಿಗೆ ಹೋಬಹುದು. ಹೈಕಮಾಂಡ್ ಜೊತೆ ಚರ್ಚೆ ನಡೆಸಿ ತೀರ್ಮಾನ ಮಾಡಲಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ರಾಜ್ಯದಿಂದ ಮೂರು ಹೆಸರುಗಳನ್ನು ಕಳಿಸಿದ್ದೇವೆ. ಸಂಸದೀಯ ಮಂಡಳಿ ಸಭೆ ನಂತರ ಪಟ್ಟಿ ಪ್ರಕಟ ಆಗಲಿದೆ. ಹೈಕಮಾಂಡ್ ನವರು ಮತ್ತೆ ಕರೆದರೆ ಹೋಗ್ತೀವಿ ಎಂದು ಹೇಳಿದರು.

    ಮಂಡ್ಯದ ವಿಚಾರದಲ್ಲಿ ಏನೇ ತೀರ್ಮಾನ ಆದ್ರೂ ಬದ್ಧವಾಗಿದ್ದೇವೆ. ಮಂಡ್ಯದಲ್ಲಿ ನಮ್ಮ ಮತಗಳ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಾಗಿದೆ. ಜೆಡಿಎಸ್ ಕೂಡ ಪ್ರಬಲವಾಗಿದೆ. ಎರಡೂ ಪಕ್ಷಗಳ ಮತ ಕ್ರೋಢೀಕರಣವಾದ್ರೆ ಎನ್‍ಡಿಎ ಅಭ್ಯರ್ಥಿ ಗೆಲ್ತಾರೆ ಎಂದರು. ಇದನ್ನೂ ಓದಿ: ಹೊಸ ಮೈಶುಗರ್ ಕಾರ್ಖಾನೆ ನಿರ್ಮಾಣಕ್ಕೆ MP ಸುಮಲತಾ ತೀವ್ರ ವಿರೋಧ

    ನಮ್ಮ ನಾಯಕ ಮೋದಿಯವರು. ಕಾಂಗ್ರೆಸ್ ಕ್ಯಾಪ್ಟನ್ ಯಾರು ಅಂತಾನೇ ಅವರಿಗೆ ಗೊತ್ತಿಲ್ಲ. ಕಾಂಗ್ರೆಸ್ ಬರಗಾಲ ಬಗ್ಗೆ ಬೇಜವಾಬ್ದಾರಿತನ ತೋರುತ್ತಿದೆ. ಕೇಂದ್ರ ಬರ ಪರಿಹಾರ ಕೊಟ್ಟಿಲ್ಲ ಅಂತಾರೆ. ಈ ಕುರಿತು ಕಾಂಗ್ರೆಸ್ ನಾಯಕರಿಗೆ ನಾಚಿಕೆ ಆಗಬೇಕು. ಕೇಂದ್ರ ಯಾವಾಗ ಕೊಡಬೇಕೋ ಕೊಡುತ್ತೆ. ನೀವು ಮೊದಲು ನಿಮ್ಮ ಬದ್ಧತೆ ತೋರಿ. ರಾಜ್ಯದಿಂದಲೇ ಹಣ ಬಿಡುಗಡೆಗೊಳಿಸಿ ಪರಿಹಾರ ಕೆಲಸ ಮಾಡಿ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

    ಕೆಆರ್‍ಎಸ್ ನೀರು ತಮಿಳುನಾಡಿಗೆ (Tamilnadu) ಹರಿಸಿದ್ದರಿಂದ ಸಮಸ್ಯೆ ಆಗಿದೆ. ಕೆಆರ್ ಎಸ್ ನಿಂದ ಐದು ಟಿಎಂಸಿ (TMC) ನೀರು ಹರಿದು ಹೋಗಿದೆ. ಬೆಂಗಳೂರು, ಮಂಡ್ಯ ಭಾಗದಲ್ಲಿ ಇದರಿಂದಲೇ ನೀರಿಗೆ ಹಾಹಾಕಾರ ಆಗಿದೆ. ಬರ ಎದುರಿಸಲು ಈ ಸರ್ಕಾರ ತಯಾರಿಯನ್ನೇ ಮಾಡಿಕೊಂಡಿಲ್ಲ. ಕುಡಿಯುವ ನೀರು ಪೂರೈಕೆ ಮಾಡುವಲ್ಲಿ ಇವರು ವಿಫಲರಾಗಿದ್ದಾರೆ. ಬರೀ ಸಭೆ ಮಾಡಿದರೆ ತಿಂಡಿ ಕಾಫಿ ಆಗುತ್ತೆ ಅಷ್ಟೇ. ಫೀಲ್ಡ್‍ನಲ್ಲಿ ಏನು ಮಾಡಬೇಕೋ ಮಾಡಿ, ಸಭೆ ಮಾಡಿದರೆ ಪ್ರಯೋಜನ ಏನೂ ಇಲ್ಲ. ಈ ಸರ್ಕಾರ ಸತ್ತು ಹೋಗಿದೆ, ನೀವು ಬದುಕಿದ್ರೆ ನೀರು ಕೊಡಿ. ಗ್ಯಾರಂಟಿಗಳು ವಿಫಲ ಆಗಿವೆ. ಗ್ಯಾರಂಟಿಗಳು ಸಕ್ಸಸ್ ಆಗಿದ್ರೆ, ಜನರಿಗೆ ಮುಟ್ಟಿದ್ರೆ ಜನ ಗುಳೇ ಹೋಗ್ತಿರೋದು ಯಾಕೆ?. ಗ್ಯಾರಂಟಿಗಳಿಂದ ಗುಳೇ ನಿಲ್ಲಿಸಲು ಆಗಿಲ್ಲ ಎಂದು ಕಿಡಿಕಾರಿದರು.

  • ವಿಧಾನಸೌಧದಲ್ಲಿ ಕರ್ತವ್ಯ ಲೋಪ ಎಸಗಿದ ಪೊಲೀಸರನ್ನೂ ಸಸ್ಪೆಂಡ್‌ ಮಾಡಿ: ಅಶೋಕ್‌ ಆಗ್ರಹ

    ವಿಧಾನಸೌಧದಲ್ಲಿ ಕರ್ತವ್ಯ ಲೋಪ ಎಸಗಿದ ಪೊಲೀಸರನ್ನೂ ಸಸ್ಪೆಂಡ್‌ ಮಾಡಿ: ಅಶೋಕ್‌ ಆಗ್ರಹ

    – ಯಾರನ್ನೂ ರಕ್ಷಿಸುತ್ತಿಲ್ಲ ಅನ್ನೋದಾದ್ರೆ FSL ವರದಿ ಬಿಡುಗಡೆ ಮಾಡಲಿ: ಒತ್ತಾಯ

    ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಮೂವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಆಧರಿಸಿ ಅಶೋಕ್ ನಗರ ಪೊಲೀಸರು ದೆಹಲಿ ಮೂಲದ ಇಲ್ತಾಜ್, ಆರ್‌.ಟಿ ನಗರದ ಮುನಾವರ್ ಹಾಗೂ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಆರೋಪಿಗಳನ್ನು ಬಂಧಿಸಿದ್ದಾರೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್. ಅಶೋಕ್‌ ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದು, ಈ ಪ್ರಕರಣದಲ್ಲಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರನ್ನೂ ಶಾಮೀಲು ಮಾಡಬೇಕು. ಜೊತೆಗೆ 100 ಜನ ಬೆಂಬಲಿಗರಿಗೆ ವಿಧಾನಸೌಧದ ಒಳಗೆ ಪ್ರವೇಶ ನೀಡಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳನ್ನೂ ಅಮಾನತು ಮಾಡಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಖಾಸಗಿ ಫೋರೆನ್ಸಿಕ್ ವರದಿ ತರಿಸಿ ಬಹಿರಂಗಪಡಿಸಿದ ಬಿಜೆಪಿ ನಡೆ ದೇಶದ್ರೋಹದ ಕೆಲಸ: ಪ್ರಿಯಾಂಕ್‌ ಖರ್ಗೆ

    ಅಶೋಕ್‌ ಎಕ್ಸ್‌ ಖಾತೆಯಲ್ಲಿ ಏನಿದೆ?
    ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ವರದಿ ಬಂದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಕಡೆಗೂ ಜನಾಕ್ರೋಶಕ್ಕೆ ಮಣಿದು ಮೂರು ಆರೋಪಿಗಳನ್ನು ಬಂಧಿಸಿದೆ.

    FSL ವರದಿಯಲ್ಲಿ ಘೋಷಣೆ ಕೂಗಿದ್ದು ಧೃಢಪಟ್ಟ ನಂತರವೇ ಈ ಮೂವರು ಆರೋಪಿಗಳ ಬಂಧನವಾಗಿರುವುದು ಸ್ಪಷ್ಟಾಗಿದ್ದರೂ, ಸರ್ಕಾರ ಇನ್ನೂ FSL ವರದಿ ಬಹಿರಂಗ ಮಾಡದಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಸರ್ಕಾರ ಏನನ್ನೂ ಮುಚ್ಚಿಡುತ್ತಿಲ್ಲ, ಯಾರನ್ನೂ ರಕ್ಷಿಸುತ್ತಿಲ್ಲ ಎನ್ನುವುದಾದರೆ ವರದಿ ಬಹಿರಂಗ ಮಾಡಲು ಹಿಂಜರಿಕೆ ಏಕೆ? ಇದನ್ನೂ ಓದಿ: ಪಾಕಿಸ್ತಾನ ಪರ ಘೋಷಣೆ – ಎಫ್‍ಎಸ್‍ಎಲ್ ವರದಿ ಬಹಿರಂಗಕ್ಕೆ ಬಿಜೆಪಿ ನಿಯೋಗ ಮನವಿ

    ಸರ್ಕಾರ ಈ ಮೂವರು ಆರೋಪಿಗಳನ್ನು ಬಂಧಿಸಿದರೆ ಸಾಲದು, ಇವರ ಮೇಲೆ IPC ಯ ಸೆಕ್ಷನ್ 124A ಅಡಿ ದೇಶದ್ರೋಹ ಪ್ರಕರಣ ದಾಖಲಿಸಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರನ್ನೂ ಸಹ ಈ ಪ್ರಕರಣದಲ್ಲಿ ಶಾಮೀಲು ಮಾಡಬೇಕು. ಇದರ ಜೊತೆಗೆ 25 ಜನರಿಗೆ ಪಾಸ್ ನೀಡಿ ಸುಮಾರು ನೂರು ಜನ ಬೆಂಬಲಿಗರಿಗೆ ವಿಧಾನಸೌಧದ ಒಳಗೆ ಪ್ರವೇಶ ನೀಡಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ವಿಚಾರಣೆ ನಡೆಸಬೇಕು.

    ಈ ಇಡೀ ಪ್ರಕರಣ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ದೇಶಪ್ರೇಮಕ್ಕೆ, ರಾಷ್ಟ್ರ ನಿಷ್ಠೆಗೆ ಒಂದು ಅಗ್ನಿ ಪರೀಕ್ಷೆಯಾಗಿದ್ದು, ಕಾಂಗ್ರೆಸ್ ಸರ್ಕಾರದ ನಡೆಯನ್ನ ಬರೀ ಕರ್ನಾಟಕ ಅಲ್ಲ, ಇಡೀ ದೇಶದ ಜನತೆ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

  • ಬೆಂಗಳೂರಿಗೆ ಮೋದಿ ಕೊಡುಗೆ ಏನು ಅಂತ ಅಶೋಕ್ ಮಹಾರಾಜರು ಅಂಕಿಅಂಶ ಬಿಡುಗಡೆ ಮಾಡಲಿ: ಡಿಕೆ ಸುರೇಶ್

    ಬೆಂಗಳೂರಿಗೆ ಮೋದಿ ಕೊಡುಗೆ ಏನು ಅಂತ ಅಶೋಕ್ ಮಹಾರಾಜರು ಅಂಕಿಅಂಶ ಬಿಡುಗಡೆ ಮಾಡಲಿ: ಡಿಕೆ ಸುರೇಶ್

    ಬೆಂಗಳೂರು: ಬೆಂಗಳೂರಿಗೆ (Bengaluru) ಮೋದಿ ಸರ್ಕಾರ ಕೊಟ್ಟಿರುವ ಕೊಡುಗೆಗಳು, ಅನುದಾನವನ್ನು ಅಶೋಕ್ (R Ashok) ಮಹಾರಾಜರು ಬಿಡುಗಡೆ ಮಾಡಲಿ ಎಂದು ಸಂಸದ ಡಿಕೆ ಸುರೇಶ್ (DK Suresh) ಸವಾಲ್ ಹಾಕಿದ್ದಾರೆ.

    ಬೆಂಗಳೂರನ್ನು ಬಾಂಬ್ ಬೆಂಗಳೂರು ಮಾಡಬೇಡಿ ಎಂಬ ವಿಪಕ್ಷ ನಾಯಕ ಅಶೋಕ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ವಿರೋಧ ಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ದೇಶಭಕ್ತಿ ಹೆಸರು ಹೇಳಿಕೊಂಡು ಬೆಂಗಳೂರಿನ ಭದ್ರತೆ ಹಾಳು ಮಾಡಲು ಕೆಲಸ ಮಾಡುತ್ತಿವೆ. ಬಿಜೆಪಿ (BJP) ಅವರಿಂದ ಬೆಂಗಳೂರಿಗೆ ಇರುವ ಕೀರ್ತಿ ಹಾಳು ಮಾಡುವ ಕೆಲಸ ಆಗುತ್ತಿದೆ. ಯಾರೇ ಬಾಂಬ್ ಹಾಕಿದ್ರೂ ಸರ್ಕಾರ ಅವರ ವಿರುದ್ಧ ಕ್ರಮ ತೆಗೆದುಕೊಂಡಿದೆ. ಅಶೋಕ್ ಅವರು ಬಾಂಬ್ ಬೆಂಗಳೂರು ಅಂದಿದ್ದು ಸರಿನಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಬೇರೆ ರಾಜ್ಯಗಳಲ್ಲಿ ಬಿಜೆಪಿ ಎಷ್ಟೆಷ್ಟು ಇನ್ವೆಸ್ಟ್‌ಮೆಂಟ್ ಮಾಡಿದೆ ಎಂಬುದನ್ನು ಬಹಿರಂಗ ಪಡಿಸಲಿ – ಸ್ವಪಕ್ಷಕ್ಕೆ ಹೆಬ್ಬಾರ್ ಸವಾಲು

    ಬೆಂಗಳೂರನ್ನು ಗಾರ್ಬೇಜ್ ಸಿಟಿ ಮಾಡಿದ್ದು ಬಿಜೆಪಿ. 40% ಮಾಡಿದ್ದು ಇದೇ ಬಿಜೆಪಿ. ಹಸಿರು ಬೆಂಗಳೂರು ಹಾಳು ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ. ಈಗ ಇಂತಹ ಕೇವಲ ಮಾತುಗಳನ್ನಾಡೋದು ಬಿಟ್ಟು ಅಭಿವೃದ್ಧಿ ಬಗ್ಗೆ ಮಾತಾಡಿ. ವಿಪಕ್ಷ ನಾಯಕ ಅಶೋಕ್ ಕೇಂದ್ರ ಬಿಜೆಪಿ 10 ವರ್ಷಗಳಲ್ಲಿ ಬೆಂಗಳೂರಿಗೆ ಎಷ್ಟು ಅನುದಾನ ಕೊಟ್ಟಿದೆ ಅದರ ಮಾಹಿತಿ ಮೊದಲು ಬಿಡುಗಡೆ ಮಾಡಿ. ಆಮೇಲೆ ಅಶೋಕ್ ಮಾತಿಗೆ ಉತ್ತರ ಕೊಡುತ್ತೇನೆ ಎಂದರು. ಇದನ್ನೂ ಓದಿ: ರಾಜ್ಯ ಸರ್ಕಾರ ರಾಜೀನಾಮೆ ಕೊಟ್ಟರೆ ಮಾತ್ರ ಜನತೆಗೆ ಶಾಂತಿ, ನೆಮ್ಮದಿಯ ಭರವಸೆ: ಆರ್.ಅಶೋಕ್

    ಭದ್ರತೆ, ಸಾರ್ವಜನಿಕರ ರಕ್ಷಣೆ ನಮಗೂ ಮುಖ್ಯನೇ. ಈ ಕೇಸ್ ಅನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಕೇಂದ್ರದ ಜವಾಬ್ದಾರಿಯೂ ಇದರಲ್ಲಿ ಇದೆ. ಎರಡೂ ಸರ್ಕಾರಗಳು ಒಟ್ಟಾಗಿ ಈ ಪ್ರಕರಣದಲ್ಲಿ ಕೆಲಸ ಮಾಡುತ್ತಿವೆ. ಬೆಂಗಳೂರಿಗೆ 10 ವರ್ಷಗಳಲ್ಲಿ ಮೋದಿ ಸರ್ಕಾರ ಏನು ಅನುದಾನ ಕೊಟ್ಟಿದೆ ಎಂದು ಅಶೋಕ್ ಮಹಾರಾಜರು ಬಿಡುಗಡೆ ಮಾಡಬೇಕು. ಬೆಂಗಳೂರಿಗೆ ಕೇಂದ್ರ ಸರ್ಕಾರ ಎಷ್ಟು ಅನುದಾನ ಕೊಟ್ಟಿದೆ ಎಂದು ವಿತ್ತ ಸಚಿವೆ ಬಳಿ ಆದರೂ ಮಾಹಿತಿ ಪಡೆಯಲಿ. ಪ್ರಧಾನಿ ಕಚೇರಿಯಿಂದಾದರೂ ಮಾಹಿತಿ ತಿಳಿದುಕೊಂಡು ಹೇಳಲಿ. ಆಮೇಲೆ ಉಳಿದಿದ್ದಕ್ಕೆ ನಾನು ಉತ್ತರ ಕೊಡುತ್ತೇನೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಪಾಕ್‌ ಪರ ಘೋಷಣೆ – FSL ವರದಿ ಇನ್ನೂ ಬಂದಿಲ್ಲ, ಬಂದ ನಂತರ ಕ್ರಮ : ಪರಮೇಶ್ವರ್‌

  • ಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಮಾಡಬೇಡಿ: ಅಶೋಕ್‌ ಕಿಡಿ

    ಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಮಾಡಬೇಡಿ: ಅಶೋಕ್‌ ಕಿಡಿ

    – ಬಿಸಿನೆಸ್ ದ್ವೇಷ ಅಂತ ಕಥೆ ಕಟ್ಟುತ್ತಿದೆ

    ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು (Brand Bengaluru) ಮಾಡದಿದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು (Bomb Bengaluru) ಎಂಬ ಕಳಂಕ ತರಬೇಡಿ ಎಂದು ವಿಧಾನ ಸಭೆಯ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ (R Ashok) ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು ರಾಮೇಶ್ವರಂ ಕೆಫೆಯಲ್ಲಿ (Rameshwaram Cafe Blast) ನಡೆದ ಬಾಂಬ್ ಸ್ಫೋಟ ಜನಸಾಮಾನ್ಯರ ಎದೆ ನಡುಗಿಸಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ದಿನೇ ದಿನೇ ಕುಸಿಯುತ್ತಿರುವ ಕಾನೂನು ಸುವ್ಯವಸ್ಥೆಗೆ ಮತ್ತೊಂದು ನಿದರ್ಶನವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

     

    ಪೋಸ್ಟ್‌ನಲ್ಲಿ ಏನಿದೆ?
    ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ಪದೇ ಪದೇ ಅನುಸರಿಸುತ್ತಿರುವ ತುಷ್ಟೀಕರಣ, ಓಲೈಕೆ ರಾಜಕಾರಣದ ಫಲವಾಗಿ ಇಂದು ಭಯೋತ್ಪಾದಕರಿಗೆ, ದೇಶದ್ರೋಹಿಗಳಿಗೆ, ಸಮಾಜ ಘಾತುಕ ಶಕ್ತಿಗಳಿಗೆ ರೆಕ್ಕೆ ಪುಕ್ಕ ಬಂದು ಕಾನೂನಿನ ಭಯ ಇಲ್ಲದಂತಾಗಿದ್ದು ಪೊಲೀಸರ ನೈತಿಕ ಸ್ಥೈರ್ಯಕ್ಕೆ, ಗುಪ್ತಚರ ಇಲಾಖೆಯ ಕಾರ್ಯದಕ್ಷತೆಗೆ ಧಕ್ಕೆ ತಂದಿದೆ.

    ಇಂದಿನ ಬಾಂಬ್ ಬ್ಲಾಸ್ಟ್ (Bomb Blast) ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ, ತನಿಖೆಯನ್ನ ಎನ್‌ಐಎಗೆ ಒಪ್ಪಿಸಬೇಕು. ಕಾಂಗ್ರೆಸ್ ಸರ್ಕಾರ ಇನ್ನು ಮುಂದಾದರೂ ಕರ್ನಾಟಕದ ಜನತೆಗೆ, ಬೆಂಗಳೂರಿಗೆ ಶಾಂತಿ ಸುರಕ್ಷತೆಯ ಗ್ಯಾರೆಂಟಿ ನೀಡುವತ್ತ ಗಮನಹರಿಸಬೇಕು. ಇದನ್ನೂ ಓದಿ: ರವೆ ಇಡ್ಲಿ ತಿಂದು ಬಾಂಬ್‌ ಇಟ್ಟ ಬಾಂಬರ್‌ – ಡಿಕೆಶಿ

     

    ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಕೂಡ ಕಾಂಗ್ರೆಸ್‌ ಸರ್ಕಾರ ತನ್ನ ಉಡಾಫೆ, ನಿರ್ಲಕ್ಷ್ಯ ಧೋರಣೆ ಮುಂದುವರೆಸಿದ್ದು ತನಿಖೆ ಮುಗಿಯುವ ಮುನ್ನವೇ ಇದು ಸಿಲಿಂಡರ್ ಬ್ಲಾಸ್ಟ್, ಬಿಸಿನೆಸ್ ದ್ವೇಷದಿಂದ ಮಾಡಿರುವುದು ಎಂದು ಕಥೆ ಕಟ್ಟುತ್ತಿದೆ. ಇದನ್ನೂ ಓದಿ: ಐದನೇ ಬಾರಿಗೆ ಬೆಂಗಳೂರಿನಲ್ಲಿ ಬಾಂಬ್‌ ಸ್ಟೋಟ: ಹಿಂದೆ ಎಲ್ಲೆಲ್ಲಿ ಸಂಭವಿಸಿತ್ತು?

    ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂತ ಘೋಷಣೆ ಕೂಗಿದ ಪ್ರಕರಣದಲ್ಲೂ ಸಹ ಎಫ್‌ಎಸ್‌ಎಲ್‌ ವರದಿ ಬರುವ ಮುನ್ನವೇ ಪಾಕಿಸ್ತಾನ್ ಜಿಂದಾಬಾದ್ ಎಂದು ಯಾರೂ ಕೂಗಿಯೇ ಇಲ್ಲ, ವಿಡಿಯೋ ತಿರುಚಲಾಗಿದೆ, ಮಾಧ್ಯಮಗಳು ಸುಳ್ಳು ಹೇಳುತ್ತಿವೆ ಎಂದು ಕಥೆ ಕಟ್ಟಿದ್ದ ಕಾಂಗ್ರೆಸ್ ನಾಯಕರು ಇಂತಹ ದೇಶದ್ರೋಹಿ ಘಟನೆ ನಡೆದಾಗಲೆಲ್ಲಾ ಯಾರನ್ನು ರಕ್ಷಿಸಲು ಪ್ರಯತ್ನಿಸುತ್ತದೆ? ತಪ್ಪಿತಸ್ಥರನ್ನು ಹಿಡಿಯದಂತೆ ಯಾವ ಒತ್ತಡ ಕಾಂಗ್ರೆಸ್ ಸರ್ಕಾರವನ್ನು ತಡೆಯುತ್ತಿದೆ? ಕನ್ನಡಿಗರ ಈ ಪ್ರಶ್ನೆಗಳಿಗೆ, ಅನುಮಾನಗಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಉತ್ತರ ನೀಡಬೇಕು.

     

  • ಇವರು ಪಕ್ಷಕ್ಕೆ ರಾಜೀನಾಮೆ ಕೊಟ್ಟು ಮತ ಹಾಕಬಹುದಿತ್ತು: ಸೋಮಶೇಖರ್ ವಿರುದ್ಧ ಅಶೋಕ್ ಕಿಡಿ

    ಇವರು ಪಕ್ಷಕ್ಕೆ ರಾಜೀನಾಮೆ ಕೊಟ್ಟು ಮತ ಹಾಕಬಹುದಿತ್ತು: ಸೋಮಶೇಖರ್ ವಿರುದ್ಧ ಅಶೋಕ್ ಕಿಡಿ

    ಬೆಂಗಳೂರು: ಜಗದೀಶ್ ಶೆಟ್ಟರ್ ರಾಜೀನಾಮೆ ಕೊಟ್ಟು ಬಿಜೆಪಿಗೆ ವಾಪಸ್ಸಾದ್ರು. ಇವರು ಪಕ್ಷಕ್ಕೆ ರಾಜೀನಾಮೆ ಕೊಟ್ಟು, ಮತ ಹಾಕಬಹುದಿತ್ತು ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಅಸಮಾಧಾನ ಹೊರಹಾಕಿದರು.

    ರಾಜ್ಯಸಭಾ ಚುನಾವಣೆಯಲ್ಲಿ (Rajya Sabha Election) ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕರ ವಿರುದ್ಧ ಕಿಡಿಕಾರಿದ ಆರ್.ಅಶೋಕ್, ನಮ್ಮ ಮತದಾನ 47 ಬಿಜೆಪಿ ಅಭ್ಯರ್ಥಿಗೆ ವೋಟ್ ಹಾಕಲು ವಿಪ್ ಕೊಟ್ಟಿದ್ದೆವು. ಎಸ್.ಟಿ.ಸೋಮಶೇಖರ್ (S.T.Somashekar), ಶಿವರಾಮ್ ಹೆಬ್ಬಾರ್‌ಗೂ ವಿಪ್ ಕಳಿಸಿದ್ದೆವು. ಕಳೆದ ವಾರದಿಂದ ಸೋಮಶೇಖರ್, ಹೆಬ್ಬಾರ್ ಮಾತಾಡಿದ್ರು. ಹೆಬ್ಬಾರ್ ಕೊನೆ ಕ್ಷಣದವರೆಗೂ ಮಾತಾಡಿದ್ರು. ನಾವು ಪಕ್ಷಕ್ಕೆ ಮೋಸ ಮಾಡಲ್ಲ ಅಂದ್ರು. ತಾಯಿಗೆ ಮೋಸ ಮಾಡಲ್ಲ ಅಂದಿದ್ರು ಎಂದು ನೆನಪಿಸಿಕೊಂಡರು. ಇದನ್ನೂ ಓದಿ: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಶಾಕ್‌ – ಕಾಂಗ್ರೆಸ್‌ ಪರ ಎಸ್‌.ಟಿ.ಸೋಮಶೇಖರ್‌ ಮತ

    ಸೋಮಶೇಖರ್ ಅಡ್ಡ ಮತದಾನ ಮಾಡಿದ್ದಾರೆ ಅಂತಾ ಗೊತ್ತಾಗಿದೆ. ಈ ರೀತಿ ಪದೇ ಪದೆ ಮೋಸ ಮಾಡೋದನ್ನ ಜನ ಸಹಿಸಲ್ಲ. ಸೋಮಶೇಖರ್ ಮಂತ್ರಿ ಮಾಡಿ, ಮೈಸೂರು ಇನ್ ಚಾರ್ಜ್ ಮಾಡಿದ್ದೆವು. ಅಭಿವೃದ್ಧಿಗೆ ಹಣ ಅಂತಾರೆ. ಹಿಂದೆ ಎಷ್ಟು ಬಾರಿ ಹಣ ಕೊಟ್ಟಿಲ್ಲ ಎಂದು ಪ್ರಶ್ನಿಸಿದರು.

    ಸೋಮಶೇಖರ್ ನಡೆ ರಾಜಕೀಯ ಆತ್ಮಹತ್ಯೆ. ನಮ್ಮ ವಿವೇಕ್ ರೆಡ್ಡಿ ಅವರ ಜೊತೆ ಚರ್ಚೆ ಮಾಡಿದ್ದೇವೆ. ಅವರು ಏನೆಲ್ಲಾ ಮಾಡಬಹುದು ಅನ್ನೋದು ತಿಳಿಸಿದ್ದಾರೆ. ಸೋಮಶೇಖರ್ ಅವರೇ ನಿನ್ನೆ ಕರೆ ಮಾಡಿದ್ರು. ದ್ರೋಹ ಬಗೆಯಲ್ಲ ಅಂತ ಹೇಳಿದ್ರು. ಸೋಮಶೇಖರ್, ಡಿಕೆಶಿ ಹಾಗೂ ಸಿದ್ದರಾಮಯ್ಯ ಜೊತೆಗೆ ಓಡಾಡುವಾಗಲೇ ಗುಮಾನಿ ಇತ್ತು. ಜನ ಅವರನ್ನ ಕ್ಷಮಿಸಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಜೆಡಿಎಸ್‍ನವರಿಗೆ ಆತ್ಮನೇ ಇಲ್ಲ, ಆತ್ಮಸಾಕ್ಷಿ ಮತ ಎಲ್ಲಿ ಬರುತ್ತೆ?: ಸಿಎಂ

    ಪಕ್ಷದಿಂದ ಕೈಬಿಡುವ ವಿಚಾರವಾಗಿ ಮಾತನಾಡಿ, ಜಗದೀಶ್ ಶೆಟ್ಟರ್ ರಾಜೀನಾಮೆ ಕೊಟ್ಟು ಬಿಜೆಪಿಗೆ ಬಂದ್ರು. ಇವರು ಪಕ್ಷಕ್ಕೆ ರಾಜೀನಾಮೆ ಕೊಟ್ಟು, ಮತ ಹಾಕಬಹುದಿತ್ತು. ಕಾನೂನು ತಜ್ಞರ ಜೊತೆ ಚರ್ಚಿಸಿ ನಿರ್ಧಾರ ಮಾಡ್ತೀವಿ. ಬಿಜೆಪಿ ಗೆಲ್ಲಲಿದೆ ಎಂದರು.

    ಸ್ಪರ್ಧೆ ಆಗಬೇಕು ಅನ್ನೋ ದೃಷ್ಟಿಯಿಂದ ಸ್ಪರ್ಧೆ ಆಗಿದೆ. ಚುನಾವಣೆ ಅಂದ ಮೇಲೆ ಸೋಲು, ಗೆಲುವು ಇದ್ದೇ ಇದೆ. ಇದು ಬಿಜೆಪಿ, ಜೆಡಿಎಸ್ ಸೋಲು ಅಂತ ಅಲ್ಲ ಎಂದು ಹೇಳಿದರು. ಇದನ್ನೂ ಓದಿ: ಸೋಮಶೇಖರ್ ವಿರುದ್ಧ ಸ್ಪೀಕರ್‌ಗೆ ದೂರು: ದೊಡ್ಡನಗೌಡ ಪಾಟೀಲ್

  • ಸಿಎಂ ಬಂಗಲೆಗೆ ನವಕೋಟಿ ಸಿಂಗಾರ, ರೈತರ ಬರ ಪರಿಹಾರಕ್ಕೆ 2 ಸಾವಿರ: ಅಶೋಕ್ ಕಿಡಿ

    ಸಿಎಂ ಬಂಗಲೆಗೆ ನವಕೋಟಿ ಸಿಂಗಾರ, ರೈತರ ಬರ ಪರಿಹಾರಕ್ಕೆ 2 ಸಾವಿರ: ಅಶೋಕ್ ಕಿಡಿ

    ಬೆಂಗಳೂರು: ಸಿಎಂ ನಿವಾಸ ಕಾವೇರಿ ನವೀಕರಣಕ್ಕೆ 9 ಕೋಟಿ ವೆಚ್ಚ ಮಾಡಿದ್ದು, ರೈತರಿಗೆ ಬರ ಪರಿಹಾರಕ್ಕೆ (Droght Relief) ಬರೀ 2 ಸಾವಿರ ಕೊಟ್ಟಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ಟೀಕಿಸಿದ್ದಾರೆ.

    ಈ ಕುರಿತು ತಮ್ಮ ಎಕ್ಸ್ (X) ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸಿಎಂ ಬಂಗಲೆಗೆ (Bungalow) ನವಕೋಟಿ ಸಿಂಗಾರ ಮಾಡಿದ್ದಾರೆ. ರೈತರಿಗೆ (Farmers) ಬರ ಪರಿಹಾರ ನೀಡಲು ಹಣವಿಲ್ಲ ಎಂದು ಕೈಚೆಲ್ಲಿ ಕೂತಿರುವ ಸಿಎಂ ಸಿದ್ದರಾಮಯ್ಯನವರು (Siddaramaiah) ತಮ್ಮ ಬಂಗಲೆ ನವೀಕರಣಕ್ಕೆ ಕನ್ನಡಿಗರ ತೆರಿಗೆ ಹಣದಲ್ಲಿ 9 ಕೋಟಿ ರೂ. ಉಡೀಸ್ ಮಾಡಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಅಸ್ಸಾಂನಲ್ಲಿ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ ರದ್ದು

    ಬಾಯಿ ಬಿಟ್ಟರೆ ಸಮಾಜವಾದ, ಸಾಮಾಜಿಕ ನ್ಯಾಯ ಎಂದು ಬುರುಡೆ ಬಿಡುವ ಮಜಾವಾದಿ ಸಿದ್ದರಾಮಯ್ಯನವರೇ ರಾಜ್ಯದ ಜನತೆ ಭೀಕರ ಬರ, ಸಾಲದ ಹೊರೆ, ಅಭಿವೃದ್ಧಿ ಶೂನ್ಯತೆಯಿಂದ ಸೊರಗುತ್ತಿರುವ ಪರಿಸ್ಥಿತಿಯಲ್ಲಿ ಇಂತಹ ಶೋಕಿ ಬೇಕಿತ್ತಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸಿದ್ದರಾಮುಲ್ಲ ಖಾನ್ ಎನ್ನುತ್ತಾ ಸರ್ಕಾರದ ವಿರುದ್ಧ ರೊಚ್ಚಿಗೆದ್ದ ಸಂಸದ ಅನಂತ್ ಕುಮಾರ್ ಹೆಗಡೆ

  • ಲೋಕಸಭೆಗೆ ಬೆಂಗಳೂರು ಗ್ರಾಮಾಂತರದಿಂದ ಡಾ.ಮಂಜುನಾಥ್‌ ಸ್ಪರ್ಧೆ? – ಆರ್‌.ಅಶೋಕ್‌ ಹೇಳಿದ್ದೇನು?

    ಲೋಕಸಭೆಗೆ ಬೆಂಗಳೂರು ಗ್ರಾಮಾಂತರದಿಂದ ಡಾ.ಮಂಜುನಾಥ್‌ ಸ್ಪರ್ಧೆ? – ಆರ್‌.ಅಶೋಕ್‌ ಹೇಳಿದ್ದೇನು?

    ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಡಾ.ಮಂಜುನಾಥ್ (Dr.Manjunath) ಬಿಜೆಪಿ ಅಭ್ಯರ್ಥಿಯಾಗುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ (R.Ashok) ಸ್ಪಷ್ಟಪಡಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾತಾಡಿದ ಆರ್.ಅಶೋಕ್, ಬಹಳ ದಿನಗಳಿಂದ ಡಾ.ಮಂಜುನಾಥ್ ಹೆಸರು ಓಡಾಡ್ತಿದೆ. ಮಂಜುನಾಥ್‌ ಅವರಿಗೆ ನಮ್ಮಿಂದ ಟಿಕೆಟ್ ಕೊಡಬೇಕು ಅನ್ನುವ ಬಗ್ಗೆ ನಮ್ಮ ಪಕ್ಷದಲ್ಲಿ ಇನ್ನೂ ಚರ್ಚೆಗೆ ಬಂದಿಲ್ಲ. ಸೀಟು ಹೊಂದಾಣಿಕೆ ಸೂತ್ರ ಇನ್ನೂ ಆಗಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಸತಿ ಶಾಲೆಗಳಲ್ಲಿ CBSE ಪಠ್ಯಕ್ರಮ ಜಾರಿ: ಮಹದೇವಪ್ಪ

    ಡಾ.ಮಂಜುನಾಥ್ ಇನ್ನೂ ಯಾವ ಪಕ್ಷಕ್ಕೂ ಸೇರಿದವರಲ್ಲ. ಅವರು ಜೆಡಿಎಸ್‌ಗೆ ಸೇರ್ತಾರೋ ಬಿಜೆಪಿಗೆ ಸೇರ್ತಾರೋ ಅಂತ ನೋಡಬೇಕು. ಅವರಿಗೆ ಟಿಕೆಟ್ ಕೊಡುವ ಬಗ್ಗೆ ಹೈಕಮಾಂಡ್ ನಿರ್ಣಯ ಮಾಡಲಿದೆ. ನಮ್ಮ ಕೇಂದ್ರದ ನಾಯಕರು ಎಲ್ಲ ಕಡೆ ಎರಡು ಸರ್ವೆ ಮಾಡಿದ್ದಾರೆ. ಅದರಲ್ಲಿ ಯಾರ ಹೆಸರು ಬರುತ್ತೋ ನೋಡಬೇಕು ಎಂದು ಹೇಳಿದ್ದಾರೆ.

    ಇದೇ ವಿಚಾರವಾಗಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ಡಾ.ಮಂಜುನಾಥ್ ಒಳ್ಳೆಯ ಮನುಷ್ಯ. ಅಂಥವರು ರಾಜಕೀಯಕ್ಕೆ ಬಂದರೆ ಒಳ್ಳೆಯದೇ ಆಗುತ್ತೆ. ಅವರ ರಾಜಕೀಯ ಪ್ರವೇಶವನ್ನು ನಾನು ಸ್ವಾಗತಿಸುತ್ತೇನೆ. ಆದ್ರೆ ಯಾವ ಪಕ್ಷದಿಂದ ಅನ್ನೋದು ಅವರಿಗೆ ಬಿಟ್ಟಿದ್ದು. ಆದ್ರೆ ನಮ್ಮ ಪಕ್ಷದಲ್ಲಿ ಅಭ್ಯರ್ಥಿ ಯಾರನ್ನ ಮಾಡ್ತಾರೆ ಅಂತಾ ಗೊತ್ತಿಲ್ಲ. ನಮ್ಮ ಪಕ್ಷದ ವೇದಿಕೆಯಲ್ಲಿ ಇದರ ಬಗ್ಗೆ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯದ ಮುಖ್ಯಮಂತ್ರಿ ಅಮ್ಮಾ.. ತಾಯಿ.. ಅಂತ ಬೇಡುವ ಸ್ಥಿತಿ ಉದ್ಭವಿಸಿದೆ: ಹೆಚ್‌ಡಿಕೆ ಲೇವಡಿ

  • ಕುಡುಕರು ನಮ್ಮ ಎಣ್ಣೆ ನಮ್ಮ ಹಕ್ಕು ಅಂತಿದ್ದಾರೆ: ಆರ್.‌ ಅಶೋಕ್‌

    ಕುಡುಕರು ನಮ್ಮ ಎಣ್ಣೆ ನಮ್ಮ ಹಕ್ಕು ಅಂತಿದ್ದಾರೆ: ಆರ್.‌ ಅಶೋಕ್‌

    ಬೆಂಗಳೂರು: ಕುಡುಕರು ನಮ್ಮ ಎಣ್ಣೆ ನಮ್ಮ ಹಕ್ಕು ಅಂತಿದ್ದಾರೆ ಎಂದು ಹೇಳುವ ಮೂಲಕ ವಿರೋಧಪಕ್ಷದ ನಾಯಕ ಆರ್.‌ ಅಶೋಕ್‌ (R Ashok) ಟಾಂಗ್‌ ನೀಡಿದ್ದಾರೆ.

    ವಿಧಾನಸಭೆಯಲ್ಲಿ (Vidhanasabha) ಇಂದು ಬಜೆಟ್‌ (Budget) ಮೇಲಿನ ಚರ್ಚೆಯ ವೇಳೆ ಮಾತನಾಡುತ್ತಾ, ಮದ್ಯದ ಮೇಲಿನ ದರ ಏರಿಕೆಗೆ ಮದ್ಯಪ್ರಿಯರು ಸಿಟ್ಟಾಗಿದ್ದಾರೆ. ಕುಡುಕರು ಪ್ರತಿಭಟನೆ ಮಾಡಿದ್ದೇ ನಾನು ನೋಡಿರಲಿಲ್ಲ. ಆದರೆ ಕುಡುಕರು ಕೂಡ ಪ್ರತಿಭಟನೆ ಮಾಡುವ ಪರಿಸ್ಥಿತಿ ಬಂದಿದೆ ಎಂದರು.

    ನಮ್ಮ ಎಣ್ಣೆ ದುಡ್ಡು ಎಲ್ಲಿ ಹೋಗ್ತಿದೆ ಎಂದು ಕೇಳುತ್ತಿದ್ದಾರೆ. ಈ ವೇಳೆ ಅದನ್ನು ಅನುಭವಿಸಿ ಕೇಳಿದರೆ ಅರ್ಥ ಆಗುತ್ತದೆ. ನೀವು ಅದನ್ನು ಅನುಭವಿಸಿರಲ್ಲ. ಆದರೆ ಯತ್ನಾಳ್ ಗೆ ಅನುಭವ ಇರಬಹುದು ಎಂದ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಹೇಳಿದರು. ಆಗ ನನಗೆ ಯಾಕಪ್ಪ ಹೇಳ್ತೀಯಾ ಎಂದು ನಕ್ಕು ಬಸನಗೌಡ ಪಾಟೀಲ್ ಯತ್ನಾಳ್ ಕುಳಿತರು. ಇದನ್ನೂ ಓದಿ: ಕಿಕ್‍ ಪ್ರಿಯರಿಗೆ ಶಾಕ್- ಅಬಕಾರಿಗೆ ಬಿಗ್‌ ಟಾರ್ಗೆಟ್‌: ಹಿಂದಿನ ಬಜೆಟ್‌ನಲ್ಲಿ ಗುರಿ ಎಷ್ಟಿತ್ತು?

    ಈ ಬಾರಿಯ ಬಜೆಟ್‌ನಲ್ಲಿ ಅಬಕಾರಿ ಇಲಾಖೆಗೆ (Excise Department) ಬರೋಬ್ಬರಿ 38,525 ಕೋಟಿ ರೂ.ಗಳ ತೆರಿಗೆ ಸಂಗ್ರಹದ ಗುರಿಯನ್ನು ನೀಡಲಾಗಿದೆ. ಸಿದ್ದರಾಮಯ್ಯ ಕಳೆದ ಜುಲೈನಲ್ಲಿ ಮಂಡಿಸಿದ ಪೂರ್ಣ ಪ್ರಮಾಣದ ಬಜೆಟ್‌ನಲ್ಲಿ 36,000 ಕೋಟಿ ರೂ. ತೆರಿಗೆ ಸಂಗ್ರಹದ ಗುರಿಯನ್ನು ನೀಡಿದ್ದರು. ಈ ಬಜೆಟ್‌ಗೆ ಹೋಲಿಸಿದರೆ 2024-25ರ ಸಾಲಿನ ಹಣಕಾಸು ವರ್ಷದಲ್ಲಿ ಅಬಕಾರಿ ಇಲಾಖೆಗೆ ತೆರಿಗೆ ಸಂಗ್ರಹ ಗುರಿ 2,525 ಕೋಟಿ ರೂ. ಏರಿಕೆಯಾಗಿದೆ.

    ಬಜೆಟ್‌ನಲ್ಲಿ ಏನಿತ್ತು?: ಮದ್ಯದ ಘೋಷಿತ ಸ್ಲಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML ಹಾಗೂ ಬಿಯರ್‌ನ ಸ್ಲಾಬ್‌ಗಳನ್ನು ಪರಿಷ್ಕರಿಸಲಾಗುವುದು. ಇದನ್ನೂ ಓದಿ: ಬೆಂಗಳೂರು BIECಯಿಂದ ತುಮಕೂರಿಗೆ, ಏರ್‌ಪೋರ್ಟಿಂದ ದೇವನಹಳ್ಳಿಗೆ ಮೆಟ್ರೋ ರೈಲು!

    ಇಲಾಖೆಯ ಎಲ್ಲಾ ಸೇವೆಗಳನ್ನು ಡಿಜಿಟಲೀಕರಣಗೊಳಿಸಲಾಗುವುದು. ಇಲಾಖೆಯು ಒದಗಿಸುವ ವಿವಿಧ ಸೇವೆಗಳಿಗೆ ಸಮಯದ ಮಿತಿಯನ್ನು ನಿಗದಿಪಡಿಸಲಾಗುವುದು ಸ್ವಯಂಚಾಲಿತ ಅನುಮೋದನೆಗೂ ಅವಕಾಶ ಕಲ್ಪಿಸಲಾಗುವುದು. 2023-24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ ಅಬಕಾರಿ ತೆರಿಗೆಯಿಂದ 28,181 ಕೋಟಿ ರೂ.ಗಳು ಸ್ವೀಕೃತವಾಗಿರುತ್ತದೆ.

  • ವಸತಿ ಶಾಲೆಯಲ್ಲಿ ಘೋಷವಾಕ್ಯ ಬದಲು; ಅಧಿಕಾರಿಯ ವಿರುದ್ಧ ಕ್ರಮ ವಹಿಸಿ: ಅಶೋಕ್ ಒತ್ತಾಯ

    ವಸತಿ ಶಾಲೆಯಲ್ಲಿ ಘೋಷವಾಕ್ಯ ಬದಲು; ಅಧಿಕಾರಿಯ ವಿರುದ್ಧ ಕ್ರಮ ವಹಿಸಿ: ಅಶೋಕ್ ಒತ್ತಾಯ

    ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರದಲ್ಲಿ ಎಲ್ಲಾ ಅಧಿಕಾರ ಅಧಿಕಾರಿಗಳ ಕೈಯಲ್ಲೇ ಇದ್ದು, ಸಚಿವರು ಮನೆಯಲ್ಲಿ ಮಜಾ ಮಾಡುತ್ತಿದ್ದಾರೆ. ವಸತಿ ಶಾಲೆಯಲ್ಲಿ (Residential School) ರಾಷ್ಟ್ರಕವಿ ಕುವೆಂಪು ಅವರ ವಾಣಿಯನ್ನು ಬದಲಿಸಿದ ಅಧಿಕಾರಿಯ ವಿರುದ್ಧ ಕೂಡಲೇ ಕ್ರಮ ವಹಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದರು.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಅಧಿಕಾರಿಗಳು ಹುಚ್ಚುಚ್ಚಾಗಿ ಮನಸ್ಸಿಗೆ ಬಂದಂತೆ ಕೆಲಸ ಮಾಡುತ್ತಿದ್ದಾರೆ. ವಿಧಾನಸೌಧದ ಮುಂಭಾಗ ‘ಸರ್ಕಾರದ ಕೆಲಸ ದೇವರ ಕೆಲಸ’ ಎಂಬ ಘೋಷವಾಕ್ಯವಿದೆ. ಯಾರೋ ಕಾರ್ಯದರ್ಶಿಗಳು ಬಂದು ಅದನ್ನು ತೆಗೆದುಹಾಕಿ ಎಂದರೆ ಹೇಗಿರುತ್ತದೆ? ಶಾಲೆಯಲ್ಲಿ ಕೈ ಮುಗಿದು ಒಳಗೆ ಬನ್ನಿ ಎಂದರೆ ತಪ್ಪೇನು? ಬೇರೆ ದೇಶದ ಅಧ್ಯಕ್ಷರು ನಮ್ಮ ದೇಶಕ್ಕೆ ಬಂದರೆ ಕೈ ಮುಗಿಯುತ್ತಾರೆ. ಇದೇ ನಮ್ಮ ಸಂಸ್ಕೃತಿ ಎಂದರು. ಇದನ್ನೂ ಓದಿ: ಬಿಎಂಟಿಸಿ ನೌಕರರಿಗೆ 1 ಕೋಟಿ ರೂ. ಅಪಘಾತ ವಿಮೆ ಜಾರಿ

    ಈ ಕಾಂಗ್ರೆಸ್ ಸರ್ಕಾರಕ್ಕೆ ಕೇಡುಗಾಲ ಬಂದಿದೆ. ಯಾವುದೇ ಆದೇಶವೇ ಇಲ್ಲದೆ ಈ ಘೋಷವಾಕ್ಯವನ್ನು ಬದಲಿಸಿದ್ದಾರೆ. ಇಲ್ಲಿ ಸರ್ಕಾರ ಸತ್ತಿದೆಯೇ ಬದುಕಿದೆಯೇ ಎಂದು ಗೊತ್ತಿಲ್ಲ. ಕಳೆದ ಬಾರಿ ಇದ್ದ ಸಿದ್ದರಾಮಯ್ಯ ಈಗ ಇಲ್ಲ. ಅವರಿಗೆ ಸರ್ಕಾರದ ಮೇಲೆ ಯಾವುದೇ ಹಿಡಿತವೂ ಇಲ್ಲ. ಅವರು ಆಯವ್ಯಯವನ್ನು ಮಂಡಿಸಿದಾಗಲೇ ಅವರು ಮಂಡಿಸಿದ್ದಲ್ಲ ಎಂದು ಗೊತ್ತಾಯಿತು ಎಂದು ಕಿಡಿಕಾರಿದರು. ಇದನ್ನೂ ಓದಿ: ಕುವೆಂಪು ಘೋಷವಾಕ್ಯ ತೆಗೆದುಹಾಕಲು ಸರ್ಕಾರ ಆದೇಶಿಸಿಲ್ಲ: ಸಚಿವ ಮಹದೇವಪ್ಪ

    ಅಧಿಕಾರಿಗಳು ಸಚಿವರು, ಮುಖ್ಯಮಂತ್ರಿಗಳನ್ನು ಕೇಳದೆ ಬೇಕಾಬಿಟ್ಟಿಯಾಗಿ ಆದೇಶ ಮಾಡುತ್ತಿದ್ದಾರೆ ಎಂದರೆ, ಇಲ್ಲಿ ಯಾರಿಗೂ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂಬುದು ಸ್ಪಷ್ಟವಾಗಿದೆ. ಮಕ್ಕಳಿಗೆ ಪಾಠ ಅರ್ಥವಾಗಿಲ್ಲ ಎಂದರೆ ಶಿಕ್ಷಕರ ಬಳಿ ಪ್ರಶ್ನೆ ಮಾಡಬೇಕು. ಆದರೆ ಮಕ್ಕಳು ಧೈರ್ಯದಿಂದ ಯಾರಿಗೆ ಪ್ರಶ್ನೆ ಮಾಡಬೇಕು? ಇಲ್ಲಿ ಹಿಂದೂ, ಕ್ರೈಸ್ತ, ಮುಸಲ್ಮಾನ ಎಂದು ಎಲ್ಲೂ ಬಳಸಿಲ್ಲ. ಈ ಸರ್ಕಾರ ದಿಕ್ಕು ದೆಸೆ ಇಲ್ಲದೆ ಎಡಬಿಡಂಗಿಯಾಗಿದ್ದು, ಅಧಿಕಾರಿಗಳ ಕೈಗೆ ಅಧಿಕಾರ ನೀಡಿ ಎಲ್ಲರೂ ಮೋಜು ಮಸ್ತಿಯಲ್ಲಿ ಕಾಲ ಕಳೆಯುತ್ತಿದ್ದಾರೆ. ಈ ಒಂದು ಉದಾಹರಣೆಯಲ್ಲೇ ಸರ್ಕಾರಿ ಇಲಾಖೆಗಳು ಹೇಗೆ ಕೆಲಸ ಮಾಡುತ್ತಿದೆ ಎಂದು ತಿಳಿಯುತ್ತದೆ ಎಂದು ದೂರಿದರು. ಇದನ್ನೂ ಓದಿ: ʻಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿʼ – ಬರಹ ಬದಲಾವಣೆ ಸಮರ್ಥಿಸಿಕೊಂಡ ಲಕ್ಷ್ಮಿ ಹೆಬ್ಬಾಳ್ಕರ್‌