Tag: r ashok

  • ಸರ್ಕಾರದ ನಿರ್ಲಕ್ಷ್ಯದಿಂದ ಮಂಗನಕಾಯಿಲೆಗೆ ಇಬ್ಬರು ಬಲಿ: ಆರ್. ಅಶೋಕ್ ವಾಗ್ದಾಳಿ

    ಸರ್ಕಾರದ ನಿರ್ಲಕ್ಷ್ಯದಿಂದ ಮಂಗನಕಾಯಿಲೆಗೆ ಇಬ್ಬರು ಬಲಿ: ಆರ್. ಅಶೋಕ್ ವಾಗ್ದಾಳಿ

    – ಪ್ರತಿದಿನ 10-15 ಮಂದಿಯಲ್ಲಿ ರೋಗ ಲಕ್ಷಣ

    ಬೆಂಗಳೂರು: ಸರ್ಕಾರದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಮಂಗನಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್- KFD) ಇಬ್ಬರು ಬಲಿಯಾಗಿದ್ದು, ಮಲೆನಾಡು ಜಿಲ್ಲೆಗಳಲ್ಲಿ ರೋಗ ವ್ಯಾಪಕವಾಗಿ ಹರಡುತ್ತಿರುವುದರಿಂದ ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ (R Ashok) ಆರೋಪಿಸಿದ್ದಾರೆ.

    ಕಳೆದ ನವೆಂಬರ್ ತಿಂಗಳಿನಲ್ಲೇ ಮಲೆನಾಡು ಭಾಗದ ಅಲ್ಲಲ್ಲಿ ಕಾಯಿಲೆ ಕಾಣಿಸಿಕೊಂಡ ಬಗ್ಗೆ ವರದಿಯಾಗಿತ್ತು. ಮಾಧ್ಯಮಗಳಲ್ಲೂ ಈ ಕುರಿತು ಸುದ್ದಿ ಪ್ರಕಟವಾದರೂ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈಫಲ್ಯವೇ ಕಾಯಿಲೆ ವ್ಯಾಪಕವಾಗಿ ಹರಡಲು ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಮೋದಿ-ಅಮಿತ್ ಶಾಗೆ ಕಿವಿ ಕೇಳಲ್ಲ, ನಿರ್ಮಲಾ ಸೀತಾರಾಮನ್‌ಗೆ ಕಣ್ಣು ಕಿವಿ ಎರಡೂ ಇಲ್ಲ: ರಾಮಲಿಂಗಾ ರೆಡ್ಡಿ

    ರೋಗ ಹರಡುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಮತ್ತು ಎರಡು ಸಾವು ಸಂಭವಿಸಿದ ಬಳಿಕ ಸುದೀರ್ಘ ನಿದ್ದೆಯಿಂದ ಎಚ್ಚೆತ್ತ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿತು. ಆ ಬಳಿಕವಷ್ಟೇ ಹಿರಿಯ ಅಧಿಕಾರಿಗಳು ಶಿವಮೊಗ್ಗಕ್ಕೆ ಧಾವಿಸಿ ಸಭೆ ನಡೆಸುವ ಶಾಸ್ತ್ರ ಮಾಡಿದ್ದಾರೆ. ಎರಡು ತಿಂಗಳ ಮೊದಲೇ ಎಚ್ಚೆತ್ತುಕೊಂಡಿದ್ದರೆ ಅಮಾಯಕ ಜೀವಗಳನ್ನು ಉಳಿಸಿಕೊಳ್ಳಬಹುದಿತ್ತು ಎಂದು ಪತ್ರಿಕಾ ಹೇಳಿಕೆಯಲ್ಲಿ ಇಲಾಖೆ ಕಾರ್ಯವೈಖರಿಗೆ ಕಿಡಿಕಾರಿದ್ದಾರೆ. ಇದನ್ನೂ ಓದಿ: ಅಜಿತ್‌ ಪವಾರ್‌ ನೇತೃತ್ವದ NCP ನಿಜವಾದ ಪಕ್ಷ: ಚುನಾವಣಾ ಆಯೋಗ

    ಶಿವಮೊಗ್ಗ, ಉತ್ತರಕನ್ನಡ, ದಕ್ಷಿಣಕನ್ನಡ, ಚಿಕ್ಕಮಗಳೂರು ಮತ್ತು ಉಡುಪಿ ಮತ್ತು ಬೆಳಗಾವಿಯ ಕೆಲ ಪ್ರದೇಶಗಳಲ್ಲಿ ಬೇಸಿಗೆ ಸಂದರ್ಭದಲ್ಲಿ ಮಂಗನಕಾಯಿಲೆ ಕಾಣಿಸಿಕೊಳ್ಳುವುದು ವಾಡಿಕೆ. ಕಳೆದ 66 ವರ್ಷಗಳಿಂದ ಈ ರೋಗ ಕಾಡುತ್ತಿದೆ. ಇದು ಗೊತ್ತಿದ್ದರೂ ಇಲಾಖೆ ಕಾಲಹರಣ ಮಾಡಿದೆ. ಇದರಿಂದಾಗಿಯೇ ಇವತ್ತು ಆತಂಕಕಾರಿ ಪರಿಸ್ಥಿತಿ ಎದುರಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಸಮಸ್ಯೆ ಏನು ಅಂತ ಅರ್ಥವಾಗ್ತಿಲ್ಲ: ‘ನಾಯಿ ಬಿಸ್ಕೆಟ್‌’ ಟೀಕೆಗೆ ರಾಹುಲ್‌ ಗಾಂಧಿ ಕಿಡಿ

    ಈ ವರ್ಷ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಮನೆ ಕೊಪ್ಪದ ಯುವತಿ ಅನನ್ಯ (18) ಮತ್ತು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಧರೇಕೊಪ್ಪಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿಕ ಸುಬ್ಬಯ್ಯಗೌಡ (79) ಅವರು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಐವತ್ತಕ್ಕೂ ಹೆಚ್ಚು ಮಂದಿಯಲ್ಲಿ ರೋಗ ಕಾಣಿಸಿಕೊಂಡ ಬಗ್ಗೆ ವರದಿಗಳಿವೆ. ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ಭಾಗ, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು, ಶೃಂಗೇರಿ ಮತ್ತು ಕೊಪ್ಪ ಭಾಗದ ಅನೇಕ ಗ್ರಾಮಗಳಲ್ಲಿ ಒಂದೇ ದಿನಕ್ಕೆ ಹತ್ತು-ಹದಿನೈದು ಮಂದಿಯಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಂಡು ಭೀತಿ ಮೂಡಿಸಿದೆ. ಅರಣ್ಯ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಮುನ್ನೆಚ್ಚರಿಕೆ ಕ್ರಮವಾಗಿ ಯಾರೂ ಹೊರಗೆ ಹೋಗಬೇಡಿ ಅನ್ನುತ್ತಾರೆ. ಮಲೆನಾಡಿನ ಜನ ಸೌದೆ, ಸೊಪ್ಪು, ದರಗು, ದನಕರುಗಳ ಕಾರಣಕ್ಕೆ ಕಾಡುಮೇಡು ಸುತ್ತಾಡಲೇಬೇಕು,. ಇಷ್ಟಕ್ಕೂ ಕಾಫಿ, ಅಡಕೆ ತೋಟ, ಹೊಲಗದ್ದೆಗಳಿಗೆ ಕಾಲಿಡದಿರಲು ಸಾಧ್ಯವೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ದೆಹಲಿ ಪ್ರತಿಭಟನೆ ಬಗ್ಗೆ ಕಾಂಗ್ರೆಸ್ ಜಾಹೀರಾತು – ರಾಜ್ಯ ಸರ್ಕಾರದ ವಿರುದ್ಧ ರಾಜಭವನಕ್ಕೆ ಬಿಜೆಪಿ ದೂರು

    ಈ ಕೂಡಲೇ ಇಲಾಖೆ ವತಿಯಿಂದ ಆಂದೋಲನದ ಮಾದರಿಯಲ್ಲಿ ಮನೆ ಮನೆಗೆ ಲಸಿಕೆ ನೀಡಬೇಕು. ಸಂಶೋಧನಾ ಸಂಸ್ಥೆ ಮತ್ತು ಉತ್ಪಾದನಾ ಕಂಪನಿಗಳ ಜೊತೆ ಸಮಾಲೋಚನೆ ನಡೆಸಿ ರೋಗಕ್ಕೆ ಕಾರಣವಾಗಿರುವ ವೈರಸ್‌ನಲ್ಲಿ ಆಗಿರುವ ಬದಲಾವಣೆಗೆ ಅನುಗುಣವಾಗಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವ ಲಸಿಕೆ ಕಂಡು ಹಿಡಿಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ಆ ಲಸಿಕೆ ದೀರ್ಘ ಕಾಲ ಕಾರ್ಯ ನಿರ್ವಹಿಸುವಂತಿರಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಕೇಂದ್ರವನ್ನು ರಾಜ್ಯ ಸರ್ಕಾರದವರು ದೂರುವುದು ಸರಿಯಲ್ಲ, ಅಗತ್ಯವಿದ್ದಾಗಲೆಲ್ಲ ನೆರವು ನೀಡಿದೆ: ಪ್ರಜ್ವಲ್ ರೇವಣ್ಣ

    ಬೆಂಗಳೂರು ಅಥವಾ ಶಿವಮೊಗ್ಗ ನಗರದಲ್ಲಿ ಕುಳಿತು ಸಭೆಗಳನ್ನು ನಡೆಸಿದರೆ ಪ್ರಯೋಜನ ಆಗುವುದಿಲ್ಲ. ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ಫೀಲ್ಡಿಗಿಳಿದು ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಲೆನಾಡು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ನಮ್ಮ ಹಕ್ಕು ಕೇಳಲು ದೆಹಲಿಯಲ್ಲಿ ಪ್ರತಿಭಟನೆ: ಸತೀಶ್ ಜಾರಕಿಹೊಳಿ

    ರೋಗದ ಕಾಲಾವಧಿ 3 ರಿಂದ 8 ದಿನ ಆಗಿರುತ್ತದೆ. ಹೀಗಾಗಿ ರೋಗದ ಲಕ್ಷಣಗಳಾದ ವಾಕರಿಕೆ, ವಾಂತಿ, ಸ್ನಾಯು ಬಿಗಿತ, ಮಾನಸಿಕ ಅಸ್ವಸ್ಥತೆ, ನಡುಕ, ದೃಷ್ಟಿ ಮಂದವಾಗುವುದು ಹಾಗೂ ತೀವ್ರ ತಲೆನೋವು ಪೈಕಿ ಯಾವುದೇ ಲಕ್ಷಣ ಕಾಣಿಸುತ್ತಿದ್ದಂತೆ ಅವರನ್ನು ತಾಲೂಕು ಅಥವಾ ಜಿಲ್ಲಾಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವ ಕೆಲಸ ಆಗಬೇಕು. ಅದಕ್ಕೆ ಮುಂಚೆ ಕಾಡಿನಂಚಿನ ಗ್ರಾಮಗಳಲ್ಲಿ ಅರಿವು ಮೂಡಿಸುವುದು, ಲಸಿಕೆ ಹಾಕುವುದು ಮತ್ತು ರೋಗ ತಪಾಸಣೆ ಮಾಡುವ ಕೆಲಸ ಆಗಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಯಡಿಯೂರಪ್ಪರಿಂದ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆಗೆ ಚಾಲನೆ

    ಒಂದು ವೇಳೆ ಸಿಬ್ಬಂದಿ ಕೊರತೆ ಇದ್ದರೆ ಮೆಡಿಕಲ್ ಕಾಲೇಜು ಆಡಳಿತ ಮಂಡಳಿಗಳ ಜೊತೆ ಮಾತುಕತೆ ನಡೆಸಿ ಸ್ನಾತಕೋತ್ತರ ವೈದ್ಯ ವಿಭಾಗದ ವಿದ್ಯಾರ್ಥಿಗಳನ್ನು ಈ ಕೆಲಸಕ್ಕೆ ಬಳಸಿಕೊಳ್ಳಬೇಕು ಎಂದರು. ಬೆಂಗಳೂರಿನ ಆರೋಗ್ಯ ಭವನದಲ್ಲಿ ಠಿಕಾಣಿ ಹೂಡಿರುವ ಹಿರಿಯ ಅಧಿಕಾರಿಗಳನ್ನು ತಕ್ಷಣ ನೋಡಲ್ ಅಧಿಕಾರಿಗಳಾಗಿ ಮೂರು ಜಿಲ್ಲೆಗಳಿಗೆ ನೇಮಕ ಮಾಡಿ ಮೇಲುಸ್ತುವಾರಿ ನೋಡಿಕೊಳ್ಳಲು ಸೂಚನೆ ನೀಡಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಆಭ್ಯರ್ಥಿಯಾಗಿ ಸ್ಪರ್ಧಿಸಲು ವಿಶ್ವನಾಥ್ ಸಿದ್ಧತೆ

    ಪರಿಹಾರ ಕೊಡಿ:
    ಈಗಾಗಲೇ ಕೆಎಫ್‌ಡಿಗೆ ಇಬ್ಬರು ಅಮಾಯಕರು ಬಲಿಯಾಗಿದ್ದಾರೆ. ಇದಕ್ಕೆ ಇಲಾಖೆಯ ನಿರ್ಲಕ್ಷ್ಯ ಕಾರಣ. ಹೀಗಾಗಿ ಸಾವಿನ ನೈತಿಕ ಹೊಣೆ ಹೊತ್ತು ಮೃತರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ಪರಿಹಾರ ನೀಡಬೇಕು. ಆ ಕುಟುಂಬದ ಒಬ್ಬ ವ್ಯಕ್ತಿಗೆ ಸರ್ಕಾರದ ಉದ್ಯೋಗ ನೀಡಬೇಕು ಮತ್ತು ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು. ಇದನ್ನೂ ಓದಿ: ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪದ ನಾಗರಿಕ ಸಂಹಿತೆ ಮಸೂದೆ ಮಂಡನೆ

  • ಕೇಂದ್ರದಿಂದ ರಾಜ್ಯಕ್ಕೆ ನೀಡಿದ 20 ವರ್ಷದ ಅನುದಾನದ ಬಗ್ಗೆ ಶ್ವೇತಪತ್ರ ಹೊರಡಿಸಲಿ: ಆರ್.ಅಶೋಕ್

    ಕೇಂದ್ರದಿಂದ ರಾಜ್ಯಕ್ಕೆ ನೀಡಿದ 20 ವರ್ಷದ ಅನುದಾನದ ಬಗ್ಗೆ ಶ್ವೇತಪತ್ರ ಹೊರಡಿಸಲಿ: ಆರ್.ಅಶೋಕ್

    ಬೆಂಗಳೂರು: ಕೇಂದ್ರದಿಂದ ಅನುದಾನ ಬಂದಿಲ್ಲ ಎಂದು ಕಾಂಗ್ರೆಸ್ (Congress) ನಾಯಕರು ದೆಹಲಿ ಚಲೋಗೆ ಮುಂದಾಗಿದ್ದಾರೆ. ಹಾಗಾದರೆ ಕಳೆದ 20 ವರ್ಷದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಬಂದ ಅನುದಾನದ ಬಗ್ಗೆ ರಾಜ್ಯ ಸರ್ಕಾರ ಶ್ವೇತಪತ್ರ (White Paper) ಹೊರಡಿಸಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ಹೇಳಿದ್ದಾರೆ.

    ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, 2004ರಿಂದ 2014ರವರೆಗೆ ಕರ್ನಾಟಕಕ್ಕೆ ಎಷ್ಟು ಹಣ ಬಂದಿದೆ. ಯುಪಿಎ ಸರ್ಕಾರದಲ್ಲಿ ಎಷ್ಟು ಹಣ ಬಂದಿದೆ ಎಂಬುದನ್ನು ಶ್ವೇತಪತ್ರ ಹೊರಡಿಸಿ. ಈಗ ಮೋದಿ ಅವರ ಅವಧಿಯಲ್ಲಿ 2014ರಿಂದ 2024 ರವರೆಗೆ ಎಷ್ಟು ಹಣ ಬಂದಿದೆ ಎಂಬುದನ್ನು ಶ್ವೇತಪತ್ರ ಹೊರಡಿಸಿ. ನಮಗಿಂತಲೂ ದೆಹಲಿ, ಮುಂಬೈ ಜಾಸ್ತಿ ತೆರಿಗೆ ಕಟ್ಟುತ್ತಾರೆ. 50 ವರ್ಷಗಳ ಹಿಂದೆ ಕೊಡಗು ಪ್ರತ್ಯೇಕ ರಾಜ್ಯ ಆಗಬೇಕು ಎಂಬ ಕೂಗು ಎದ್ದಿತ್ತು. ನೀರು ಕೊಡುತ್ತೇವೆ. ಕಾಫಿ ಬೆಳೆಯುತ್ತಿದ್ದೇವೆ, ನಾವೇ ಹೆಚ್ಚು ತೆರಿಗೆ ಕೊಡುತ್ತೇವೆ. ನಮಗೆ ಒಂದು ರಸ್ತೆ ಹಾಕೋಕೆ ಆಗಲ್ಲ ಅಂದ್ರೆ ನಮಗೆ ಪ್ರತ್ಯೇಕ ರಾಜ್ಯ ಕೊಡಿ ಎಂದು ಕೇಳಿದರು. ಕೊಡಲು ಆಗುತ್ತಾ? ನೀವೇ ಹೇಳಿದ್ರಿ ತೆರಿಗೆ ಕಟ್ಟುವುದರ ಮೇಲೆ ಕೊಡಲು ಬರಲ್ಲ. ಎಲ್ಲಿ ಅಭಿವೃದ್ಧಿ ಆಗಿಲ್ಲವೋ ಅಲ್ಲಿಗೆ ದುಡ್ಡು ಕೊಡುವುದು ಎಂದು ಹೇಳಿದ್ದೀರಿ. ಈಗ ದೇಶಕ್ಕೆ ಬಂದರೆ ನಿಮ್ಮ ನಿಲುವು ಬದಲು ಎಂದು ಕಿಡಿಕಾರಿದರು. ಇದನ್ನೂ ಓದಿ: ಸಿದ್ದರಾಮಯ್ಯ ಹೃದಯದಲ್ಲಿ ಟಿಪ್ಪು ಇದ್ದಾನೆ, ಅದಕ್ಕೆ ನಾಮ ಇಟ್ಟುಕೊಳ್ಳಲ್ಲ: ಆರ್.ಅಶೋಕ್

    ಒಂದು ತಾಯಿ ತಮ್ಮ ಮಕ್ಕಳಿಗೆ ಊಟ ಹಾಕೋದು ಅವರ ದುಡಿಮೆ ಮೇಲೆ ಅಲ್ಲ. ದುಡಿಯುವ ಮಗನಿಗೂ ದುಡಿಯದಿರುವ ಮಗನಿಗೂ ಒಂದೇ ರೀತಿಯಲ್ಲಿ ಊಟ ಹಾಕುತ್ತಾಳೆ. ದೇಶದಲ್ಲಿ ಕೇಂದ್ರ ಸರ್ಕಾರ ಅಂದರೆ ತಾಯಿ ಇದ್ದಂತೆ. ತಾಯಿ ಮಕ್ಕಳನ್ನು ಅಸಮಾನವಾಗಿ ನೋಡಲ್ಲ. ಸಿದ್ದರಾಮಯ್ಯ ಅವರೇ ಸ್ವಲ್ಪ ಕಾಮನ್‌ಸೆನ್ಸ್ ಇಟ್ಕೊಂಡು ಮಾತನಾಡಿ. ಬರೀ ವ್ಯಾಕರಣ ಹೇಳಿ ದಾರಿ ತಪ್ಪಿಸಬೇಡಿ. ದೇಶದ್ರೋಹದ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಮಾಡಲು ಈ ರೀತಿ ಕೇಂದ್ರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಸಂಸತ್‌ನಲ್ಲಿ ಸೈಲೆಂಟ್, ಹೊರಗಡೆ ವೈಲೆಂಟ್. ವಾಟ್ ಈಸ್ ಯುವರ್ ಪ್ರಾಬ್ಲಮ್? ಒಂಬತ್ತು ವರ್ಷಗಳ ಕಾಲ ಮೌನವಾಗಿದ್ದು ಈಗ ಮಾತನಾಡುತ್ತಿದ್ದೀರಾ ನಾಚಿಕೆ ಆಗಲ್ವಾ ಎಂದು ಹರಿಹಾಯ್ದರು. ಇದನ್ನೂ ಓದಿ: ಸಿದ್ದರಾಮಯ್ಯ-ಡಿ.ಕೆ.ಸುರೇಶ್ ಪಾಕಿಸ್ತಾನ, ಬಾಂಗ್ಲಾದೇಶದಲ್ಲಿ ನೆಲೆಸುತ್ತಾರಾ?: ಯಶ್‌ಪಾಲ್ ಸುವರ್ಣ

  • ಸಿದ್ದರಾಮಯ್ಯ ಹೃದಯದಲ್ಲಿ ಟಿಪ್ಪು ಇದ್ದಾನೆ, ಅದಕ್ಕೆ ನಾಮ ಇಟ್ಟುಕೊಳ್ಳಲ್ಲ: ಆರ್.ಅಶೋಕ್

    ಸಿದ್ದರಾಮಯ್ಯ ಹೃದಯದಲ್ಲಿ ಟಿಪ್ಪು ಇದ್ದಾನೆ, ಅದಕ್ಕೆ ನಾಮ ಇಟ್ಟುಕೊಳ್ಳಲ್ಲ: ಆರ್.ಅಶೋಕ್

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೃದಯದಲ್ಲಿ ಟಿಪ್ಪು ಇದ್ದಾನೆ. ಅದಕ್ಕೆ ಅವರು ನಾಮ ಇಟ್ಟುಕೊಳ್ಳಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಹೇಳಿದ್ದಾರೆ.

    ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಂಕುಮ ಹಾಕಲು ಸಿದ್ದರಾಮಯ್ಯ ಹಿಂದೇಟು ಹಾಕ್ತಾರೆ. ಸಿದ್ದರಾಮಯ್ಯಗೆ ಟಿಪ್ಪು ಮೈತುಂಬ ತುಂಬಿಕೊಂಡಿದ್ದಾನೆ. ಟೋಪಿಯನ್ನು ಬೇಡ ಎಂದರೂ ಹಾಕಿಕೊಳ್ಳುತ್ತಾರೆ. ಕುಂಕುಮ ಹಾಕಿಕೊಳ್ಳಲು ಹಿಂದೇಟು ಹಾಕುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ನಿರ್ವಹಿಸಲಾಗದೆ ಕೇಂದ್ರದ ಅನುದಾನ ಬಂದಿಲ್ಲ ಅಂತಿದ್ದಾರೆ ಕಾಂಗ್ರೆಸ್‌ನವ್ರು: ಜೋಶಿ ಆರೋಪ

    ಸಿದ್ದರಾಮಯ್ಯ ಹೆಸರಿನಲ್ಲಿ ರಾಮ ಇದ್ದಾನೆ. ಆದರೆ ಕೇಸರಿ ಪೇಟ ಕಿತ್ತು ಬಿಸಾಕ್ತಾರೆ. ಸಿದ್ದರಾಮಯ್ಯ ಹೃದಯದ ತುಂಬಾ ಟಿಪ್ಪು ಇದ್ದಾನೆ. ಅವರು ನಾಮ ಇಡದಿದ್ರೆ, ಏನೂ ತೊಂದರೆ ಇಲ್ಲ. ಮೊದಲು ಹೃದಯದಲ್ಲಿ ರಾಮನ ಇಟ್ಕೊಳ್ಳಿ. ನಂತರ ಹಣ ಬಿಡುಗಡೆ ಮಾಡಿ. ಮೇಕೆದಾಟು ಯೋಜನೆ ಜಾರಿಯ ಬಗ್ಗೆ ತಮಿಳುನಾಡಿನ ಬ್ರದರ್ಸ್ ಜೊತೆಗೆ ಕಾಂಗ್ರೆಸ್ (Congress) ನಾಯಕರು ಮಾತನಾಡಲಿ ಎಂದಿದ್ದಾರೆ. ಇದನ್ನೂ ಓದಿ: ದೇವೇಗೌಡರಿಗೆ ನಾನೇ ಕೇಸರಿ ಶಾಲು ಹಾಕಿ ಸ್ವಾಗತಿಸುತ್ತೇನೆ: ಯಶ್‌ಪಾಲ್ ಸುವರ್ಣ

  • ಕುಮಾರಸ್ವಾಮಿ-ಅಶೋಕ್‌ರಿಂದ ಮಂಡ್ಯದಲ್ಲಿ ಬೆಂಕಿ ಹಚ್ಚಲು ಸಾಧ್ಯವಿಲ್ಲ: ಚೆಲುವರಾಯಸ್ವಾಮಿ

    ಕುಮಾರಸ್ವಾಮಿ-ಅಶೋಕ್‌ರಿಂದ ಮಂಡ್ಯದಲ್ಲಿ ಬೆಂಕಿ ಹಚ್ಚಲು ಸಾಧ್ಯವಿಲ್ಲ: ಚೆಲುವರಾಯಸ್ವಾಮಿ

    – ಸುಮಲತಾ ಬಿಜೆಪಿಯಿಂದ ಟಿಕೆಟ್‌ ಪಡೆಯೋಕೆ ಪರವಾಗಿ ಮಾತಾಡ್ತಿದ್ದಾರೆ ಎಂದ ಸಚಿವ

    ಬೆಂಗಳೂರು: ಬಿಜೆಪಿ-ಜೆಡಿಎಸ್‌ನವರು ಮಂಡ್ಯಕ್ಕೆ ಬೆಂಕಿ ಹಚ್ಚೋ ಪ್ರಯತ್ನ ಮಾಡ್ತಿದ್ದಾರೆ. ಆದರೆ ಮಂಡ್ಯದಲ್ಲಿ ಬೆಂಕಿ ಹಚ್ಚೋಕೆ ಸಾಧ್ಯವಿಲ್ಲ ಅಂತ ಸಚಿವ ಚೆಲುವರಾಯಸ್ವಾಮಿ (Chaluvaraya Swamy) ತಿರುಗೇಟು ನೀಡಿದ್ದಾರೆ.

    ಕೆರಗೋಡು ಹನುಮಧ್ವಜ ವಿವಾದ (Hanuman Flag Controversy) ಘಟನೆ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾವು ಹಿಂದೂ ವಿರೋಧಿ ಅಲ್ಲ, ಯಾವುದೇ ಧ್ವಜದ ವಿರೋಧಿಗಳೂ ಅಲ್ಲ. ಪಂಚಾಯತಿಯಲ್ಲಿ ರಾಷ್ಟ್ರ ಧ್ವಜ, ನಾಡ ಧ್ವಜಕ್ಕೆ ಅನುಮತಿ ಕೊಟ್ಟಿದ್ದರು, ಆದ್ರೆ ಬೇರೆ ಧ್ವಜ ಹಾರಿಸಿದ್ದಾರೆ. ಪಂಚಾಯತಿಯಲ್ಲಿ ನಿರ್ಣಯವನ್ನ ವಜಾ ಮಾಡಿದ್ದಾರೆ. ಜ.26ರಂದು ರಾಷ್ಟ್ರಧ್ವಜ ಹಾರಿಸಿ ಸಂಜೆ ಇಳಿಸಿದ್ದಾರೆ. ಮಂಡ್ಯದಲ್ಲಿ ಅನೇಕ ಜನರು ಶಾಂತಿ ಹಾಳುಮಾಡೋಕೆ ಬರೋದು ಬೇಡ, ಮಂಡ್ಯದ ನೆಮ್ಮದಿ ಹಾಳು ಮಾಡಬೇಡಿ ಅಂತ ಕೇಳಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಗ್ರಾಮದ ಮುಖಂಡರೊಂದಿಗೆ ಮಾತುಕತೆ ನಡೆಸಲು ಸಿದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.

    ಬಿಜೆಪಿ-ಜೆಡಿಎಸ್ ಅವರು ಜನರನ್ನ ಪ್ರವೋಕ್ ಮಾಡ್ತಿದ್ದಾರೆ. ಕುಮಾರಸ್ವಾಮಿ (HD Kumaraswamy) ಮತ್ತು ಅಶೋಕ್ (R Ashok) ತೀಟೆ ಮಾಡೋಕೆ ಹೋಗ್ತಿದ್ದಾರೆ. ಮಂಡ್ಯದಲ್ಲಿ ಇದು ನಡೆಯಲ್ಲ. ಬಂದ್ ಬೇಡ ಅಂತ ಜನರೇ ಮನವಿ ಮಾಡಿದ್ದಾರೆ. ಮಂಡ್ಯಕ್ಕೆ ಬೆಂಕಿ ಹಚ್ಚೋಕೆ ಯಾರಿಂದಲೂ ಸಾಧ್ಯವಿಲ್ಲ ಅಂತ ಕುಮಾರಸ್ವಾಮಿ, ಅಶೋಕ್ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಕೆರಗೋಡು ಹನುಮ ಧ್ವಜ ತೆರವಿಗೆ ಆಕ್ರೋಶ- ಮಂಡ್ಯದಲ್ಲಿ ಕಲ್ಲು ತೂರಾಟ, ಲಾಠಿಚಾರ್ಜ್

    ತಾಲೂಕು ಪಂಚಾಯ್ತಿ ಇಒ, ದಾಖಲಾತಿ ತೆಗೆದುಕೊಂಡು ಹೋಗಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ. ಗೊಂದಲಗಳು ಆದಾಗ EO ದಾಖಲಾತಿ ತೆಗೆದುಕೊಂಡು ಹೋಗಿದ್ದಾರೆ. ಅವರು ತಮ್ಮ ಕಚೇರಿಗೇ ದಾಖಲಾತಿ ಪುಸ್ತಕ ತೆಗೆದುಕೊಂಡು ಹೋಗಿದ್ದಾರೆ, ಮನೆಗೆ ತೆಗೆದುಕೊಂಡು ಹೋಗಿಲ್ಲ ಎಂದು ಸಿಟ್ಟಾಗಿ ಹಾರಿಕೆ ಉತ್ತರ ನೀಡಿದ್ದಾರೆ. ಇದನ್ನೂ ಓದಿ: ಜಾತಿ, ಧರ್ಮಗಳ ನಡುವೆ ಕಿತ್ತಾಟ ನಡೆಯುವಂತಹ ವಾತಾವರಣ ಸೃಷ್ಟಿಸಿರೋದು ಬೇಸರ: ಸುಮಲತಾ

    ಕೆರಗೋಡು ಘಟನೆ ಒಬ್ಬ ವ್ಯಕ್ತಿಯ ಪ್ರತಿಷ್ಠೆಗೆ ಆಗ್ತಿದೆ ಎಂಬ ಸಂಸದೆ ಸುಮಲತಾರ ಹೇಳಿಕೆ ವಿಚಾರಕ್ಕೆ ‌ಪ್ರತಿಕ್ರಿಯಿಸಿ, ಸುಮಲತಾ ಅವರು ಮಂಡ್ಯ ಜನರಿಗೆ ಸಲಹೆ ಮಾಡೋದು ಬೇಡ. ಬಿಜೆಪಿಯಿಂದ ಟಿಕೆಟ್ ಪಡೆಯೋಕೆ ಬಿಜೆಪಿ ಪರವಾಗಿ ಮಾತಾಡ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಕೆರಗೋಡಿನಲ್ಲಿ ತಾರಕಕ್ಕೇರಿದ ಹನುಮ ಧ್ವಜ ಸಂಘರ್ಷ- ಫೆ.9ಕ್ಕೆ ಮಂಡ್ಯ ಬಂದ್‍ಗೆ ಕರೆ

    ದೇವೇಗೌಡರಿಂದ ಬೆಳೆದು ದೇವೇಗೌಡರ ವಿರುದ್ಧ ಮಾತಾಡೋದು ಸರಿಯಲ್ಲ ಎಂಬ ಪುಟ್ಟರಾಜು ಹೇಳಿಕೆಗೆ ಉತ್ತರಿಸಿದ ಸಚಿವರು, ನನ್ನ ಇತಿಹಾಸವನ್ನ ಅವನು ಓದೋಕೆ ಹೇಳಿ ಮೊದಲು. ನಾನು ಹೇಗೆ ಬಂದೆ ಅಂತ ಅವನು ತಿಳಿದುಕೊಳ್ಳಲಿ. ಮಂಡ್ಯಕ್ಕೆ ದೇವೇಗೌಡರ ಕೊಡುಗೆ ಏನು? ದೇವೇಗೌಡರಿಗೆ ಮಂಡ್ಯದ ಕೊಡುಗೆ ಏನು? ಅಂತ ತಿಳಿದುಕೊಳ್ಳಲಿ ಎಂದು ಪುಟ್ಟರಾಜು ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

  • ಡಾ.ಮಂಜುನಾಥ್‌ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಿ: ಸಿಎಂಗೆ ಆರ್‌.ಅಶೋಕ್‌ ಮನವಿ

    ಡಾ.ಮಂಜುನಾಥ್‌ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಿ: ಸಿಎಂಗೆ ಆರ್‌.ಅಶೋಕ್‌ ಮನವಿ

    ಬೆಂಗಳೂರು: ಬಡವರ ಪಾಲಿನ ಆಶಾಕಿರಣ ಡಾ.ಸಿ.ಎನ್.ಮಂಜುನಾಥ್‌ (CN Manjunath) ಅವರಿಗೆ ಕರ್ನಾಟಕ ರತ್ನ (Karnataka Ratna) ಪ್ರಶಸ್ತಿ ಘೋಷಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ವಿಪಕ್ಷ ನಾಯಕ ಆರ್‌.ಅಶೋಕ್‌ (R Ashok) ಮನವಿ ಮಾಡಿದ್ದಾರೆ.

    ಜಯದೇವ ಆಸ್ಪತ್ರೆ (Jayadeva Hospital) ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಮಂಜುನಾಥ್‌ ಅವರು ಇಂದು (ಬುಧವಾರ) ನಿವೃತ್ತರಾಗಲಿದ್ದಾರೆ. ಅವರ ಸಾಧನೆ ಸ್ಮರಿಸಿರುವ ಆರ್‌.ಅಶೋಕ್‌ ಸೋಷಿಯಲ್‌ ಮೀಡಿಯಾದ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದಾರೆ.

     

    ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ 16 ವರ್ಷಗಳ ಕಾಲ ಸೇವೆ ಸಲ್ಲಿಸಿ ಇಂದು ನಿವೃತ್ತರಾಗುತ್ತಿರುವ ನಾಡಿನ ಪ್ರಖ್ಯಾತ ವೈದ್ಯರಾದ ಡಾ.ಸಿ.ಎನ್.ಮಂಜುನಾಥ್ ಅವರ ನಿವೃತ್ತಿ ಜೀವನ ಸುಖಕರವಾಗಿರಲೆಂದು ಮನಸಾರೆ ಶುಭ ಹಾರೈಸುತ್ತೇನೆ ಎಂದಿದ್ದಾರೆ.

    ಬಡರೋಗಿಗಳ ಪಾಲಿನ ಆಶಾಕಿರಣವಾಗಿ “ಟ್ರೀಟ್ಮೆಂಟ್ ಫಸ್ಟ್, ಪೇಮೆಂಟ್ ನೆಕ್ಸ್ಟ್” ಎಂಬ ಪರಿಕಲ್ಪನೆಯನ್ನಿಟ್ಟುಕೊಂಡು ಸಾವಿರಾರು ಬಡ ರೋಗಿಗಳಿಗೆ ಚಿಕಿತ್ಸೆ ಕೊಟ್ಟ ಡಾ.ಮಂಜುನಾಥ್ ಅವರು ಬಡವರ ಪಾಲಿನ ಧನ್ವಂತರಿ ಅಂದರೆ ಅತಿಶಯೋಕ್ತಿಯಲ್ಲ ಎಂದು ಹೇಳಿದ್ದಾರೆ.

    ಸರ್ಕಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುವ ಕಾಲದಲ್ಲಿ ಯಾವುದೇ ಖಾಸಗಿ ಕಾರ್ಪೊರೇಟ್ ಆಸ್ಪತ್ರೆಗೆ ಕಡಿಮೆ ಇಲ್ಲದಂತೆ ಬಡವರಿಗೆ ಕೈಗೆಟಕುವ ದರದಲ್ಲಿ ಉತ್ಕೃಷ್ಟ ಆರೋಗ್ಯ ಸೇವೆ ನೀಡುವ ಮಟ್ಟಕ್ಕೆ ಒಂದು ಸರ್ಕಾರಿ ಸಂಸ್ಥೆಯನ್ನು ಕಟ್ಟಿಬೆಳೆಸಿದ ಅನನ್ಯ ಸಾಧನೆ ಮಾಡಿದ ಡಾ.ಸಿ.ಎನ್.ಮಂಜುನಾಥ್ ಅವರು ಕರ್ನಾಟಕದ ಹೆಮ್ಮೆಯ ಸುಪುತ್ರ. ಡಾ.ಸಿ.ಎನ್.ಮಂಜುನಾಥ್ ಅವರ ಸಾಧನೆಯನ್ನು ಗುರುತಿಸಿ, ಗೌರವಿಸಲು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

  • ಹನುಮಧ್ವಜ ಇಳಿಸಿದಂತೆಯೇ ನಿಮ್ಮನ್ನು ಹಿಂದೂಗಳು ಕುರ್ಚಿಯಿಂದ ಇಳಿಸುವ ದಿನ ದೂರವಿಲ್ಲ: ಸಿಎಂಗೆ ಆರ್.ಅಶೋಕ್ ಠಕ್ಕರ್

    ಹನುಮಧ್ವಜ ಇಳಿಸಿದಂತೆಯೇ ನಿಮ್ಮನ್ನು ಹಿಂದೂಗಳು ಕುರ್ಚಿಯಿಂದ ಇಳಿಸುವ ದಿನ ದೂರವಿಲ್ಲ: ಸಿಎಂಗೆ ಆರ್.ಅಶೋಕ್ ಠಕ್ಕರ್

    ಬೆಂಗಳೂರು: ಕೆರಗೋಡಿನಲ್ಲಿ ಧ್ವಜಸ್ತಂಭದಿಂದ ಹನುಮಧ್ವಜ ಇಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ವಿಧಾನಸಭಾ ವಿಪಕ್ಷ ನಾಯಕ ಆರ್‌.ಅಶೋಕ್‌ (R.Ashok) ಠಕ್ಕರ್‌ ಕೊಟ್ಟಿದ್ದಾರೆ.

    ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಆರ್‌.ಅಶೋಕ್‌, ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ (Hanuma Flag) ಇಳಿಸಿದ ಮೇಲೆ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿರುವ ಕಾಂಗ್ರೆಸ್ ಸರ್ಕಾರ ಈಗ ದಿಢೀರನೆ ರಾಷ್ಟ್ರ ಧ್ವಜದ ಮೇಲೆ ಎಲ್ಲಿಲ್ಲದ ಭಕ್ತಿ ಉಕ್ಕಿ ಹರಿಯುತ್ತಿದೆ. 2011ರಲ್ಲಿ ಗಣರಾಜ್ಯೋತ್ಸವದ ದಿನದಂದು ಜಮ್ಮು-ಕಾಶ್ಮೀರದ ಶ್ರೀನಗರದ ಲಾಲ್ ಚೌಕ್‌ನಲ್ಲಿ ರಾಷ್ಟ್ರಧ್ವಜ ಹಾರಿಸಲು ಬಿಜೆಪಿ ಏಕ್ತಾ ಯಾತ್ರೆ ಕೈಗೊಂಡಿದ್ದಾಗ ರಾಷ್ಟ್ರಧ್ವಜ ಹಾರಿಸಲು ಬಿಡದೆ ಬಿಜೆಪಿ ನಾಯಕರನ್ನು ಬಂದಿಸಿದ್ದು ಇದೇ ಕಾಂಗ್ರೆಸ್ ಪಕ್ಷದ ಸರ್ಕಾರ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಹನುಮಧ್ವಜ ತೆರವು ಖಂಡಿಸಿ ಪ್ರತಿಭಟಿಸಿದ್ದ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

    ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಾಡುವುದನ್ನೂ ತಡೆದಿದ್ದು ಕೂಡ ಇದೇ ಕಾಂಗ್ರೆಸ್ ಪಕ್ಷ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ 75 ವರ್ಷಗಳ ನಂತರ ರಾಷ್ಟ್ರಧ್ವಜ ಹಾರಿಸಲು ಅವಕಾಶ ನೀಡಿದ್ದು ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಾನು ಕಂದಾಯ ಸಚಿವನಾಗಿದ್ದಾಗ. ಕೇಸರಿ, ಕುಂಕುಮ ಕಂಡರೆ ನನಗೆ ಭಯ ಅಂತ ಮುಚ್ಚುಮರೆಯಿಲ್ಲದೆ ಹೇಳಿಕೊಂಡಿರುವ ತಮಗೆ ಹನುಮಧ್ವಜದ ಮೇಲಿನ ನಿಮ್ಮ ದ್ವೇಷವನ್ನ ಮರೆಮಾಚಲು ರಾಷ್ಟ್ರಧ್ವಜದ ಮುಖವಾಡ ಹಾಕಿಕೊಳ್ಳುವ ಅಗತ್ಯ ಏನಿದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದ್ದಾರೆ.

    ನಮ್ಮ ರಾಷ್ಟ್ರಧ್ವಜದಲ್ಲೇ ಕೇಸರಿ ಬಣ್ಣವಿದೆ. ಕೇಸರಿ ಬಣ್ಣ ಹಿಂದೂ ಧರ್ಮದ ಸಾಧು-ಸಂತರು, ಸನ್ಯಾಸಿಗಳು, ಮಠಾಧಿಪತಿಗಳು ಧರಿಸುವ ಬಣ್ಣ. ಹಿಂದೂಗಳ ಪರಮ ಪವಿತ್ರ ಲಾಂಛನ ಕೇಸರಿ ಬಣ್ಣ. ತ್ಯಾಗದ ಸಂಕೇತವಾದ ಕೇಸರಿ ಬಣ್ಣ ಶಾಶ್ವತವೆ ಹೊರತು ತಮ್ಮ ಅಧಿಕಾರವಲ್ಲ. ತಾವು ಹನುಮ ಧ್ವಜವನ್ನು ಇಳಿಸಿದ ರೀತಿಯಲ್ಲೇ ಹಿಂದೂಗಳು ತಮ್ಮನ್ನು ಕುರ್ಚಿಯಿಂದ ಇಳಿಸುವ ದಿನ ಬಹಳ ದೂರವಿಲ್ಲ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಮಾಜಿ ಪ್ರಧಾನಿಯೊಬ್ಬರ ಮಗ ಜಿಲ್ಲೆಗೆ ಬಂದು ಶಾಂತಿ ಕದಡುವ ನಿರ್ಧಾರ ಮಾಡಿರೋದು ಸರಿಯಲ್ಲ: ಚಲುವರಾಯಸ್ವಾಮಿ

  • ಆಂಜನೇಯನ ತಂಟೆಗೆ ಬರ್ಬೇಡಿ, ಹುಷಾರ್- ಸಿಎಂಗೆ ಆರ್ ಅಶೋಕ್ ಎಚ್ಚರಿಕೆ

    ಆಂಜನೇಯನ ತಂಟೆಗೆ ಬರ್ಬೇಡಿ, ಹುಷಾರ್- ಸಿಎಂಗೆ ಆರ್ ಅಶೋಕ್ ಎಚ್ಚರಿಕೆ

    ಬೆಂಗಳೂರು: ಸಿಎಂ ಸಿದ್ದರಾಮಯ್ಯ (siddaramaiah) ಅವರೇ ಮಂಡ್ಯದ (Mandya) ಕೆರಗೋಡು ಹನುಮಧ್ವಜ ತಂಟೆಗೆ ಬರಬೇಡಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಅವರು ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ನಗರದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಂಡ್ಯದ ಕೆರಗೋಡು ಹುನಮಧ್ವಜ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಆಂಜನೇಯನಿಗೆ ಬೆಂಕಿ ಹಚ್ಚಿದ ರಾವಣನ ಕಥೆ ಏನಾಯ್ತು ಲಂಕಾ ದಹನವಾಯ್ತು. ಅದೇ ರೀತಿ ಸಿದ್ದರಾಮಯ್ಯನವರೇ ಹನುಮನ ತಂಟೆಗೆ ಬರಬೇಡಿ, ಸುಟ್ಟು ಹೋಗ್ತೀರಾ ಹುಷಾರ್ ಎಂದು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಹನುಮಧ್ವಜ ತೆರವು ಖಂಡಿಸಿ ಪ್ರತಿಭಟಿಸಿದ್ದ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

    ಹನುಮನ ತಂಟೆಗೆ ಬರಬೇಡಿ. ಹನುಮನ ಬಾಲಕ್ಕೆ ಬೆಂಕಿ ಇಟ್ಟರೆ ನಿಮ್ಮ ಸರ್ಕಾರನೇ ಉಳಿಯಲ್ಲ. ಅಂತ ರಾವಣನೇ ಉಳಿಯಲಿಲ್ಲ, ನೀವು ಯಾವ ಲೆಕ್ಕ ಎಮದು ಪ್ರಶ್ನಿಸುವ ಮೂಲಕ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಶಾಲಾ ವಿದ್ಯಾರ್ಥಿನಿಯರಿಂದ ಟಾಯ್ಲೆಟ್ ಕ್ಲೀನಿಂಗ್ – ಮುಖ್ಯಶಿಕ್ಷಕಿ ಅಮಾನತು

    ಸಿದ್ದರಾಮಯ್ಯ ಎದೆಯಲ್ಲಿ ಟಿಪ್ಪು ಸುಲ್ತಾನ್ ಇದ್ದಾರೆ. ಆದರೆ ಬಾಯಲ್ಲಿ ಮಾತ್ರ ರಾಮ ಅಂತೀರಾ. ಹೃದಯದಿಂದ ರಾಮ ಅನ್ನಬೇಕು. ಎದೆ ಸೀಳಿದರೆ ಟಿಪ್ಪು ಸುಲ್ತಾನ್ ಕಾಣಿಸುತ್ತಾನೆ. ಮೂರು ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದ್ದಾರೆ ಹಾಗಾಗಿ ಅವರು ಪ್ರಚಾರ ಮಾಡಲಿ ಎಂದು ವ್ಯಂಗ್ಯವಾಡಿದ್ದಾರೆ.  ಇದನ್ನೂ ಓದಿ: ಜನವರಿ ತಿಂಗಳ ಹುಂಡಿ ಎಣಿಕೆ- ರಾಯರ ಮಠದಲ್ಲಿ 4 ಕೋಟಿ 15 ಲಕ್ಷ ರೂ. ಸಂಗ್ರಹ

  • ಹನುಮಧ್ವಜ ಸಂಘರ್ಷ; ಭುಗಿಲೆದ್ದ ಆಕ್ರೋಶ – ಮೈಸೂರು ಬ್ಯಾಂಕ್ ವೃತ್ತದಲ್ಲಿ ಭಾರೀ ಹೈಡ್ರಾಮಾ

    ಹನುಮಧ್ವಜ ಸಂಘರ್ಷ; ಭುಗಿಲೆದ್ದ ಆಕ್ರೋಶ – ಮೈಸೂರು ಬ್ಯಾಂಕ್ ವೃತ್ತದಲ್ಲಿ ಭಾರೀ ಹೈಡ್ರಾಮಾ

    – ನೋಟಿಸ್ ನೀಡಿದರೂ ಪ್ರತಿಭಟನೆಗೆ ಮುಂದಾದ ಬಿಜೆಪಿಗರು
    – ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ

    ಬೆಂಗಳೂರು: ಮಂಡ್ಯದ (Mandya) ಕೆರಗೋಡಿನಲ್ಲಿ (Keragodu) ಹನುಮ ಧ್ವಜ ತೆರವುಗೊಳಿಸಿದ ಪ್ರಕರಣ ಖಂಡಿಸಿ ಇಂದು (ಸೋಮವಾರ) ರಾಜ್ಯಾದ್ಯಂತ ಬಿಜೆಪಿಯಿಂದ (BJP) ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನೆಲೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲೂ (Mysuru Bank Circle) ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆ ವೇಳೆ ಭಾರೀ ಹೈಡ್ರಾಮಾ ಕಂಡುಬಂದಿತು. ಇದನ್ನೂ ಓದಿ: ಇನ್ನೊಂದೇ ವಾರದಲ್ಲಿ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ -‌ ಬಿಜೆಪಿ ಸಚಿವರ ಗ್ಯಾರಂಟಿ

    ರಾಷ್ಟ್ರಧ್ವಜಕ್ಕೆ ಸರ್ಕಾರದಿಂದ ಅಪಮಾನ ಹಾಗೂ ಹನುಮ ಧ್ವಜ ತೆರವುಗೊಳಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದು, ಐವರು ಇನ್ಸ್ಪೆಕ್ಟರ್‌ಗಳ ನೇತೃತ್ವದಲ್ಲಿ ಬಿಗಿ ಭದ್ರತೆ ಆಯೋಜಿಸಲಾಗಿದೆ. ಪ್ರತಿಭಟನೆಗೆ ಅವಕಾಶ ನಿರಾಕರಿಸಿ ನೊಟೀಸ್ ಜಾರಿ ಮಾಡಲಾಗಿದೆ. ಆದರೂ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಶಾಸಕರು ಪ್ರತಿಭಟನೆಗೆ ಧುಮುಕಿದ್ದಾರೆ. ಇದನ್ನೂ ಓದಿ: ಶೋಷಿತರ ಸಮಾವೇಶದಲ್ಲಿ ಕ್ಷಿಂಟಾಲ್‌ಗಟ್ಟಲೇ ಚಿಕನ್ ಬಿರಿಯಾನಿ ನೆಲದ ಪಾಲು

    ಬ್ಯಾರಿಕೇಡ್ ಮತ್ತು ಪೊಲೀಸ್ ದಿಗ್ಬಂಧನದ ನಡುವೆ ಪ್ರತಿಭಟನೆ ಮಾಡಲಾಗಿದೆ. ಈ ವೇಳೆ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಲ್ಲದೇ ಜೈ ಶ್ರೀರಾಮ್ ಘೋಷಣೆ ಮೊಳಗಿಸುತ್ತಾ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತಳ್ಳಾಟ, ನೂಕಾಟವೂ ನಡೆದಿದ್ದು, ನಂತರ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಡ್ರೋನ್‌ ದಾಳಿಗೆ ಅಮೆರಿಕದ ಮೂವರು ಸೈನಿಕರು ಬಲಿ – ತಕ್ಕ ಉತ್ತರ ಕೊಡುತ್ತೇವೆ: ಬೈಡನ್‌ ಎಚ್ಚರಿಕೆ

    ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಅಶೋಕ್ ಆಗಮಿಸುವ ಮೊದಲೇ ಪ್ರತಿಭಟನೆ ಮುಗಿದುಹೋಗಿದೆ. ಅಶೋಕ್ ಆಗಮನದ ಮೊದಲೇ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿರುವ ಪ್ರಸಂಗವೂ ನಡೆದಿದೆ. ಇದನ್ನೂ ಓದಿ: ಗಣರಾಜ್ಯೋತ್ಸವ ನೃತ್ಯದಲ್ಲಿ ಕಮಲದ ಹೂವನ್ನು ಎದ್ದು ಕಾಣುವಂತೆ ತೋರಿಸಿದ್ದರು – ಶಿವಲಿಂಗೇಗೌಡ

    ಇನ್ನು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಸಿ.ಕೆ ರಾಮಮೂರ್ತಿ, ಕೆರಗೋಡಿನಲ್ಲಿ ಹನುಮ ಧ್ವಜಕ್ಕೆ ಅಪಮಾನ ಆಗಿದೆ. ಅದಕ್ಕಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಶಾಸಕ ರವಿ ಗಣಿಗರು ಪೊಲೀಸರನ್ನು ಬಿಟ್ಟು ಲಾಠಿ ಚಾರ್ಜ್ ಮಾಡಿಸಿದ್ದಾರೆ. ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಪ್ರತಿಭಟನೆ ಮಾಡುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರದಿಂದ ಹಿಂದೂಗಳಿಗೆ ರಕ್ಷಣೆ ಇಲ್ಲ. ಹೋರಾಟ ಮಾಡುವವರ ಮೇಲೆ ಎಫ್‌ಐಆರ್ ಹಾಕುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಬಾಂಗ್ಲಾದೇಶದ ಮುಖ್ಯಮಂತ್ರಿನಾ? ಪಾಕಿಸ್ತಾನದ ಮುಖ್ಯಮಂತ್ರಿನಾ? ಡಿಸಿ ಕಚೇರಿಗೆ ಮನವಿ ಕೊಡಲು ಪೊಲೀಸರು ಬಿಡುತ್ತಿಲ್ಲ. ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಮಂಡ್ಯ ಶಾಸಕ ರವಿ ಗಣಿಗರನ್ನು ಜೈಲಿಗೆ ಹಾಕಿ, ನಮ್ಮನ್ನಲ್ಲ. ನಾವೇ ರವಿ ಗಣಿಗ ವಿರುದ್ಧ ದೂರು ಕೊಡುತ್ತೇವೆ. ಎಫ್‌ಐಆರ್ ಹಾಕಲಿ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಹನುಮಧ್ವಜ ಸಂಘರ್ಷ; ರಾಜ್ಯಾದ್ಯಂತ ಹೋರಾಟದ ಕಿಚ್ಚು – ಮಂಡ್ಯದಲ್ಲಿಂದು ಹೆಚ್‌ಡಿಕೆ, ರೆಡ್ಡಿ ಪಾದಯಾತ್ರೆ

  • ದೇವರನ್ನು ಗೊಂಬೆ ಎನ್ನುವ ಕಾಂಗ್ರೆಸ್ ಪಕ್ಷದ ಅವನತಿಗೆ ಈ ಹೇಳಿಕೆಯೇ ಅಡಿಗಲ್ಲು: ಆರ್.ಅಶೋಕ್

    ದೇವರನ್ನು ಗೊಂಬೆ ಎನ್ನುವ ಕಾಂಗ್ರೆಸ್ ಪಕ್ಷದ ಅವನತಿಗೆ ಈ ಹೇಳಿಕೆಯೇ ಅಡಿಗಲ್ಲು: ಆರ್.ಅಶೋಕ್

    ಬೆಂಗಳೂರು: ದೇವರನ್ನು ಆಟಿಕೆ ಎನ್ನುವ ಮೂಲಕ ಕಾಂಗ್ರೆಸ್ ಪಕ್ಷ ಬಾಲಿಶತನ ತೋರಿದೆ. ಮಾತಿನಲ್ಲಿ ಹಿಡಿತವಿಲ್ಲದೆ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದು ಕಾಂಗ್ರೆಸ್‌ನ (Congress) ಅವನತಿಗೆ ಅಡಿಗಲ್ಲಾಗಲಿದೆ. ಇದು ಮಾರಣಾಂತಿಕ ಕಲ್ಲಾಗಲಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಎಚ್ಚರಿಕೆ ನೀಡಿದ್ದಾರೆ.

    ಸಚಿವ ಕೆ.ಎನ್.ರಾಜಣ್ಣ (KN Rajanna) ಹೇಳಿಕೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನವರಿಗೆ ರಾಮ, ಸೀತೆ ಎಲ್ಲರೂ ಟೂರಿಂಗ್ ಟಾಕೀಸ್ ಬೊಂಬೆಗಳಂತೆಯೇ ಕಾಣುತ್ತಾರೆ. ಹಿಂದೆ ಇವರೇ ರಾಮನನ್ನು ಕಾಲ್ಪನಿಕ ವ್ಯಕ್ತಿ, ಜನ್ಮ ಪ್ರಮಾಣ ಪತ್ರ ಇಲ್ಲ ಎಂದಿದ್ದರು. ಗುಜರಾತ್‌ನ ಸೋಮನಾಥ ದೇವಾಲಯ ಪುನರುಜ್ಜೀವನಗೊಂಡಾಗ ಅದಕ್ಕೆ ಪ್ರಧಾನಿ ನೆಹರು ಹೋಗಲಿಲ್ಲ. ಮುಸ್ಲಿಮರನ್ನು ವೋಟ್ ಬ್ಯಾಂಕ್ ಮಾಡಿಕೊಂಡು, ಹಿಂದೂಗಳನ್ನು ಎರಡನೇ ದರ್ಜೆಯ ಪ್ರಜೆಗಳನ್ನಾಗಿಸುವ ಗುಣ ಕಾಂಗ್ರೆಸ್‌ನ ರಕ್ತದಲ್ಲೇ ಇದೆ. ವಕೀಲರಾಗಿರುವ ಸಿಎಂ ಸಿದ್ದರಾಮಯ್ಯ ಅವರೇ ಸುಪ್ರಿಂ ಕೋರ್ಟ್ ತೀರ್ಪಿಗೆ ಬೆಲೆ ಕೊಡುವುದಿಲ್ಲ ಎನ್ನುತ್ತಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ತೆಲಂಗಾಣದಲ್ಲಿ 12,400 ಕೋಟಿ ಹೂಡಿಕೆ: ಅದಾನಿ ಗ್ರೂಪ್‌ ಘೋಷಣೆ

    ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿಮಾನ ನಿಲ್ದಾಣದ ಕಾರ್ಯಕ್ರಮದಲ್ಲಿ ಆರಾಮವಾಗಿ ಗೊರಕೆ ಹೊಡೆಯುತ್ತಿದ್ದರು. ಸಿದ್ದರಾಮಯ್ಯ ನಿದ್ರೆ ಮಾಡುವ ವ್ಯಂಗ್ಯಚಿತ್ರಗಳು ಹರಿದಾಡುತ್ತಿವೆ. ಆದರೆ ಪ್ರಧಾನಿ ಎಲ್ಲೂ ನಿದ್ರೆ ಮಾಡುವುದಿಲ್ಲ. ಮುಖ್ಯಮಂತ್ರಿ ಬರ ಪ್ರದೇಶಗಳಿಗೆ ಹೋಗಿ ಕೆಲಸ ಮಾಡಿಲ್ಲ. ಸಿಎಂ ಸಿದ್ದರಾಮಯ್ಯ ತಾವು ನಿದ್ರೆ ಮಾಡುವ ಚಿತ್ರವನ್ನು ಫ್ರೇಮ್ ಮಾಡಿಕೊಂಡು ಮನೆ ಮುಂದೆ ಹಾಕಿಕೊಳ್ಳಲಿ. ಇವರ ಹೆಸರೇ ನಿದ್ದೆರಾಮಯ್ಯ ಎಂದು ಬ್ರ‍್ಯಾಂಡ್ ಆಗಿದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಮೂರ್ಖರಿಗೆ ಜನರು ಚಪ್ಪಾಳೆ ತಟ್ಟಬಾರದು- ಅನಂತ್ ಕುಮಾರ್ ವಿರುದ್ಧ ಸಿಎಂ ಕಿಡಿ

    ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಮಣಿಸಬೇಕಿದೆ. ಕಳೆದ ಏಳು ತಿಂಗಳಲ್ಲಿ ಕೊಲೆ, ಸುಲಿಗೆ ಹೆಚ್ಚಿದ್ದು, ಅಪರಾಧಿಗಳಿಗೆ ಪ್ರೀತಿ ತೋರಿಸಲಾಗುತ್ತಿದೆ. ಡಿ.ಕೆ.ಶಿವಕುಮಾರ್ (DK Shivakumar) ಅವರೇ ಕುಕ್ಕರ್ ಬಾಂಬ್ ಸ್ಫೋಟ ಮಾಡಿದವರನ್ನು ಬ್ರದರ್ ಎಂದು ಹೇಳಿಕೊಳ್ಳುತ್ತಾರೆ. ಕೆಜಿ ಹಳ್ಳಿ, ಡಿಜೆ ಹಳ್ಳಿ ಪ್ರಕರಣ ವಾಪಸ್‌ನಂತಹ ಘಟನೆ ನಡೆಯುತ್ತಿದೆ. ಕಾಂಗ್ರೆಸ್‌ನ ಮೃದು ಧೋರಣೆಯಿಂದ ಅಪರಾಧಿಗಳು ಎದ್ದು ಕುಳಿತಿದ್ದಾರೆ. ಹಾನಗಲ್‌ನ ಅತ್ಯಾಚಾರ ಪ್ರಕರಣದಲ್ಲೂ ಕಠಿಣ ಕ್ರಮ ವಹಿಸಿಲ್ಲ. ಕಾನೂನು ಸುವ್ಯವಸ್ಥೆಯ ನಿರ್ವಹಣೆಯಲ್ಲಿ ಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಜ.18ರಂದು ಚಿಕ್ಕಬಳ್ಳಾಪುರದಲ್ಲಿ T20I ಲೀಗ್ – ಕಣದಲ್ಲಿ ಅಬ್ಬರಿಸಲಿದ್ದಾರೆ ಸಚಿನ್, ಯುವಿ, ಜಯಸೂರ್ಯ

    ಒಂದು ಕಡೆ ಡಿ.ಕೆ.ಶಿವಕುಮಾರ್, ಮತ್ತೊಂದು ಕಡೆ ಜಿ.ಪರಮೇಶ್ವರ್, ಇನ್ನೊಂದೆಡೆ ಸತೀಶ್ ಜಾರಕಿಹೊಳಿಗೆ ಜೈ ಎನ್ನುವ ಗ್ಯಾಂಗ್ ಇದೆ. ಅಭಿವೃದ್ಧಿಯ ಕಾರ್ಯ ಇಲ್ಲದೆ ಜನರು ರೊಚ್ಚಿಗೆದ್ದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಮಗ ಶಾಸಕರೂ ಅಲ್ಲ. ಅವರು ತಂದೆಯ ಬಗ್ಗೆ ಕುರುಡು ಪ್ರೇಮ ತೋರಿಸಬೇಕಿಲ್ಲ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಹುಬ್ಬಳ್ಳಿ-ಪುಣೆ-ಹುಬ್ಬಳ್ಳಿ: ವಾರದಲ್ಲಿ 4 ಬಾರಿ ವಿಮಾನ ಸಂಚಾರ ಆರಂಭ – ಜೋಶಿ ಮಾಹಿತಿ

    ಸರ್ಕಾರದ ಖಜಾನೆ ಖಾಲಿಯಾಗಿದ್ದು, ಎಲ್ಲಾ ಯೋಜನೆ ಮುಂದೂಡಲಾಗುತ್ತಿದೆ. ನೌಕರರ ವೇತನ ಹೆಚ್ಚಳ ಕೂಡ ಮಾಡಿಲ್ಲ. ಸರ್ಕಾರ ದಿವಾಳಿಯಾಗಿ ಜನರು ಇನ್ನಷ್ಟು ಕಷ್ಟ ಪಡಬೇಕಾಗುತ್ತದೆ. ಯುಪಿಎ ಸರ್ಕಾರವಿದ್ದಾಗ ಪರಿಹಾರ ಸಿಗಲು ಬಹಳ ತಡವಾಗಿದ್ದು, ಆಗ ಮಾತ್ರ ಕಾಂಗ್ರೆಸ್ ನಾಯಕರು ಸುಮ್ಮನಿದ್ದರು. ಈಗ ಕೇಂದ್ರದ ಮೇಲೆ ದೂರು ಹೇಳುತ್ತಿದ್ದಾರೆ. ಹಿಂದಿನ ಯುಪಿಎಗೆ ಹೋಲಿಸಿದರೆ ಮೋದಿ ಸರ್ಕಾರ ಶೇ.243 ರಷ್ಟು ಹೆಚ್ಚು ಪರಿಹಾರ ನೀಡಿದೆ ಎಂದರು. ಇದನ್ನೂ ಓದಿ: ಕೇರಳದ ಶ್ರೀಕೃಷ್ಣ ದೇವಾಲಯದಲ್ಲಿ ಪ್ರಧಾನಿ ಮೋದಿ ಪ್ರಾರ್ಥನೆ

    ವರಿಷ್ಠರೊಂದಿಗೆ ಚರ್ಚೆ:
    ರಾಜ್ಯದಲ್ಲಿ 28 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಕುರಿತು ನೀಲಿನಕ್ಷೆ ತಯಾರಾಗಿದೆ. ಹಿರಿಯ ನಾಯಕರು ಇದಕ್ಕೆ ಅಗತ್ಯ ಕ್ರಮಗಳನ್ನು ವಹಿಸಿದ್ದಾರೆ. ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಈ ಕುರಿತು ಚರ್ಚಿಸಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಮುದ್ದಹನುಮೇಗೌಡ ಕಾಂಗ್ರೆಸ್ ‌ಸೇರ್ಪಡೆ ದಿನಾಂಕ ಹೈಕಮಾಂಡ್ ತೀರ್ಮಾನ ಮಾಡುತ್ತೆ: ಸಚಿವ ಪರಮೇಶ್ವರ್

     

  • ಕರಸೇವಕರ ಮೇಲೆ ಪ್ರಕರಣಗಳು ಬಾಕಿ ಇವೆ ಎಂದ ಸಿಎಂನ್ನು ಶ್ರೀರಾಮ ಕ್ಷಮಿಸಲ್ಲ: ಅಶೋಕ್ ಕಿಡಿ

    ಕರಸೇವಕರ ಮೇಲೆ ಪ್ರಕರಣಗಳು ಬಾಕಿ ಇವೆ ಎಂದ ಸಿಎಂನ್ನು ಶ್ರೀರಾಮ ಕ್ಷಮಿಸಲ್ಲ: ಅಶೋಕ್ ಕಿಡಿ

    – ರಾಜೀನಾಮೆ ಕೊಟ್ಟು, ಸಮರ್ಥ ಮುಖ್ಯಮಂತ್ರಿಗೆ ದಾರಿ ಮಾಡಿಕೊಡುವಂತೆ ಒತ್ತಾಯ

    ಬೆಂಗಳೂರು: ಕರಸೇವಕ ಶ್ರೀಕಾಂತ್ ಪೂಜಾರಿ ಅವರ ಮೇಲೆ 16 ಪ್ರಕರಣಗಳು ಬಾಕಿ ಇದೆ ಎಂದು ಹಸಿ ಸುಳ್ಳು ಹೇಳಿದಿರಲ್ಲ ಸಿಎಂ ಸಿದ್ದರಾಮಯ್ಯ (Siddaramaiah) ಅವರೇ, ಆ ಪ್ರಭು ಶ್ರೀರಾಮನು ನಿಮ್ಮನ್ನ ಎಂದಿಗೂ ಕ್ಷಮಿಸಲಾರ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಆರ್.ಅಶೋಕ್ (R.Ashok) ಟ್ವೀಟ್‍ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.

    ಶ್ರೀಕಾಂತ್ ಅವರ ಮೇಲೆ ಇದ್ದ 16 ಪ್ರಕರಣಗಳಲ್ಲಿ 15 ಪ್ರಕರಣಗಳು ಈಗಾಗಲೇ ತಾರ್ಕಿಕ ಅಂತ್ಯಕಂಡಿವೆ. ಬಾಕಿ ಇರುವ ಒಂದು ಪ್ರಕರಣ ಸಹ 1992ರಲ್ಲಿ ಅವರು ನಾಪತ್ತೆಯಾಗಿದ್ದರು ಎಂಬ ಕಾರಣಕ್ಕೆ ದಾಖಲಾಗಿತ್ತು. ಇದನ್ನೂ ಓದಿ: ರಾಜ್ಯದ ಜನತೆಗೆ ಕರೆಂಟ್ ಶಾಕ್ – ವಿದ್ಯುತ್ ದರ ಏರಿಕೆಗೆ ಕೆಇಆರ್‌ಸಿ ಚಿಂತನೆ

    ಈಗ ಉಳಿದಿರುವುದು ಎರಡು ಸಾಧ್ಯತೆಗಳು ಮಾತ್ರ, ಒಂದು ತಮಗೆ ಆಡಳಿತದ ಮೇಲೆ ಸಂಪೂರ್ಣ ನಿಯಂತ್ರಣ ಕೈತಪ್ಪಿ, ಕಾಣದ ಕೈಗಳು ತಮ್ಮನ್ನು ದಿಕ್ಕು ತಪ್ಪಿಸುತ್ತಿವೆ. ಎರಡನೆಯದಾಗಿ ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರನ್ನು ಕೆಣಕಲು ಉದ್ದೇಶಪೂರ್ವಕವಾಗಿ ಈ ಪ್ರಕರಣಕ್ಕೆ ಮರುಜೀವ ನೀಡಿದ್ದೀರಿ. ಇವೆರಡರಲ್ಲಿ ಯಾವುದು ಸತ್ಯವಾದರೂ ತಾವು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದ್ದೀರಿ ಎಂದು ಅವರು ಕಿಡಿಕಾರಿದ್ದಾರೆ.

    ಈ ಕೂಡಲೇ ತಮ್ಮ ತಪ್ಪನ್ನು ಒಪ್ಪಿಕೊಂಡು ಶ್ರೀಕಾಂತ್ ಪೂಜಾರಿ ಅವರನ್ನು ಬಿಡುಗಡೆ ಮಾಡಬೇಕು. ರಾಜ್ಯದ ಜನರಲ್ಲಿ ಕ್ಷಮೆ ಕೇಳಿ ರಾಜೀನಾಮೆ ನೀಡಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಒಬ್ಬ ಸಮರ್ಥ ಮುಖ್ಯಮಂತ್ರಿಗೆ ದಾರಿ ಮಾಡಿಕೊಡಿ ಎಂದು ಅವರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ರಾಮ ಮಂದಿರ ರಕ್ಷಣೆಗೆ ಉಡುಪಿಯ ಟೆಲಿಸ್ಕೋಪ್!