Tag: r ashok

  • ಕಾಂಗ್ರೆಸ್‌ನಿಂದ ರಾಮ ಭಕ್ತರನ್ನು ಹೆದರಿಸುವ ಕೆಲಸ: ಅಶೋಕ್ ಕಿಡಿ

    ಕಾಂಗ್ರೆಸ್‌ನಿಂದ ರಾಮ ಭಕ್ತರನ್ನು ಹೆದರಿಸುವ ಕೆಲಸ: ಅಶೋಕ್ ಕಿಡಿ

    ದಾವಣಗೆರೆ: ಅಯೋಧ್ಯೆಯಲ್ಲಿ (Ayodhya) ರಾಮಮಂದಿರ ಉದ್ಘಾಟನೆಯಾಗುತ್ತಿರುವ ಈ ಸಂದರ್ಭದಲ್ಲಿ ರಾಮ ಭಕ್ತರನ್ನು ಹೆದರಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ವಾಗ್ದಾಳಿ ನಡೆಸಿದ್ದಾರೆ.

    ಕರ ಸೇವಕನ ಬಂಧನ ಖಂಡಿಸಿ ಹುಬ್ಬಳಿಗೆ ಪ್ರತಿಭಟನೆಗೆ ತೆರಳುವ ಮುನ್ನ ದಾವಣಗೆರೆಯ (Davanagere) ಜಿಎಂಐಟಿ ಗೆಸ್ಟ್ ಹೌಸ್‍ಗೆ ಭೇಟಿಕೊಟ್ಟಿದ್ದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಇಡೀ ದೇಶ ರಾಮ ಭಕ್ತರು ಸಂತೋಷದಿಂದ ಇದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ರಾಮಭಕ್ತರನ್ನು ಬೆದರಿಸುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದ್ದು, ರಾಜ್ಯದಲ್ಲಿ ಗಲಭೆ ಸೃಷ್ಠಿಗೆ ಕಾಂಗ್ರೆಸ್ ಕಾರಣವಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಹರಿಪ್ರಸಾದ್‌ರನ್ನು ಕೂಡಲೇ ಬಂಧಿಸಬೇಕು: ಡಿವಿಎಸ್‌ ಆಗ್ರಹ

    ಕಾಂಗ್ರೆಸ್ (Congress) ಲೋಕಸಭೆಯಲ್ಲಿ ಸೋಲಿನ ಭೀತಿ ಎದುರಿಸುತ್ತಿದೆ. ಎಲ್ಲಾ ಸರ್ವೆಯಲ್ಲೂ ನರೇಂದ್ರ ಮೋದಿ ಪ್ರಧಾನಿಯಾಗುತ್ತಾರೆ ಎಂದು ತಿಳಿದು ಬಂದಿದೆ. ಅದೇ ಕಾರಣಕ್ಕೆ ಕಾಂಗ್ರೆಸ್ ಈ ರೀತಿ ನಡೆದುಕೊಳ್ಳುತ್ತಿದೆ ಎಂದಿದ್ದಾರೆ.

    ಸುಪ್ರೀಂ ಕೋರ್ಟ್‍ನಲ್ಲಿ ರಾಮ ಮಂದಿರ ವಿಚಾರಣೆಗೆ ಬಂದಾಗ ರಾಮಾಯಣವೇ ಇಲ್ಲ. ರಾಮ ಕೇವಲ ಕಲ್ಪನೆ ಎಂದು ಕಾಂಗ್ರೆಸ್ ಹೇಳಿತ್ತು. ಅಯೋಧ್ಯೆಯಲ್ಲಿ ರಾಮ ಮಂದಿರ ಇರುವುದು ಅವರಿಗೆ ಇಷ್ಟ ಇಲ್ಲ. ಅಲ್ಲಿ ಬಾಬ್ರಿ ಮಸೀದಿ ಇರಬೇಕಿತ್ತು. ಅದ್ದರಿಂದ ಹುಬ್ಬಳಿಯಲ್ಲಿ 31 ವರ್ಷದ ನಂತರ ಕರಸೇವಕರ ಮೇಲೆ ಕೇಸ್ ಹಾಕಿ ಬಂಧಿಸಿದ್ದಾರೆ. ಕರ ಸೇವಕರ ಮೇಲೆ ಹಾಕಿದ ಕೇಸ್‍ಗಳಿಗೆ ಸಾಕ್ಷಿ ಇಲ್ಲ ಎಂದು ಕೋರ್ಟ್ ಹೇಳಿದೆ ಎಂದಿದ್ದಾರೆ.

    ಸಿಎಂ ಸಿದ್ದರಾಮಯ್ಯನವರು ಬಿಜೆಪಿಗರಿಗೆ ಕಾನೂನು ಏನ್ ಗೊತ್ತಿದೆ ಎಂದು ಕೇಳಿದ್ದಾರೆ. ನಾನು ಕೂಡ ಕೇಳ್ತಿನಿ ನಿಮಗೆ ಕಾನೂನು ಗೊತ್ತಿದ್ಯಾ? ಅಲ್ಲೇ ಆಟೋ ಓಡಿಸಿಕೊಂಡಿದ್ದವನನ್ನು ತಲೆಮರೆಸಿಕೊಂಡಿದ್ದಾನೆ ಎಂದು ಹೇಳುತ್ತಿದ್ದಾರೆ. ಪೊಲೀಸ್ ಸ್ಟೇಷನ್ ಮುಂದೆ ಓಡಾಡಿಕೊಂಡಿದ್ದವನು ಪೊಲೀಸರ ಕಣ್ಣಿಗೆ ಕಾಣಲಿಲ್ವಾ? ಅವನಿಗೆ ನೋಟಿಸ್ ನೀಡಿಲ್ಲ, ನಾನು ಇವತ್ತು ಅವರ ಮನೆಗಳಿಗೆ ಭೇಟಿ ನೀಡುತ್ತೇನೆ. ಅವರ ಮೇಲಿನ ಕೇಸ್ ವಾಪಸ್ ಪಡೆದು ಆ ಅಧಿಕಾರಿಯ ಸಸ್ಪೆಂಡ್ ಮಾಡಬೇಕು ಎಂದು ಅಗ್ರಹಿಸುತ್ತೇವೆ ಎಂದಿದ್ದಾರೆ.

    1700 ಪಿಎಫ್‍ಐ ಕಾರ್ಯಕರ್ತರ ಮೇಲಿನ 175 ಕೇಸ್‍ಗಳನ್ನು ವಾಪಸ್ ಪಡೆದುಕೊಂಡಿದ್ದಾರೆ. ಕೇರಳದಲ್ಲಿ ಪಿಎಫ್‍ಐ ಕಾರ್ಯಕರ್ತರ ಮೇಲೆ 40 ಕೊಲೆ ಪ್ರಕರಣಗಳಿವೆ ಎಂದು ಕೇರಳ ಸರ್ಕಾರ ಹೇಳಿದೆ. ಅಂತವರನ್ನು ಬಿಡುಗಡೆ ಮಾಡುವ ಕೆಲಸ ಮಾಡಲಾಗಿದೆ. ರಾಮಭಕ್ತರನ್ನು ಅರೆಸ್ಟ್ ಮಾಡಿ ಪಿಎಫ್‍ಐ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿ ಎಂಬುದು ಕಾಂಗ್ರೆಸ್‍ನ ಸ್ಲೋಗನ್ ಆಗಿದೆ ಎಂದಿದ್ದಾರೆ.

    ಇಡೀ ರಾಜ್ಯದಲ್ಲಿ ಅಯೋಧ್ಯೆ ಅಭಿಯಾನದ ಬಗ್ಗೆ ಭಯಬಿದ್ದು, ಹಿಂದೂಕಾರ್ಯಕರ್ತರು ಮನೆ ಸೇರಿಕೊಳ್ಳಬೇಕು ಎಂದು ಸರ್ಕಾರ ಭಯ ಹುಟ್ಟಿಸುತ್ತಿದೆ. ಹಿಂದೂ ಕಾರ್ಯಕರ್ತರು ಹೆದರುವ ಅವಶ್ಯಕತೆ ಇಲ್ಲ, ನಾವು ನಿಮ್ಮ ಜೊತೆ ಇದ್ದೇವೆ. ತಮ್ಮ ನಾಯಕಿಯನ್ನು ಮೆಚ್ಚಿಸಲು ಸಿದ್ದರಾಮಯ್ಯ ಹಿಂದೂ ಕಾರ್ಯಕರ್ತರನ್ನು ಹೆದರಿಸುವ ತಂತ್ರ ಮಾಡುತ್ತಿದ್ದಾರೆ. ದೇಶದೆಲ್ಲೆಡೆ ರಾಮ ಮಂದಿರದ ಮಂತ್ರಾಕ್ಷತೆ ನೀಡುತ್ತಿದ್ದಾರೆ. ನಾನು ನಮ್ಮ ರಾಜ್ಯದಲ್ಲಿ ಟಿಪ್ಪು ಅಡಳಿತ ನಡೆಸುತ್ತಿದ್ದೇವೆ ನೋಡಿ ಎಂದು ಹೇಳಲು ಸಿಎಂ ಹೊರಟಿದ್ದಾರೆ. ಟಿಪ್ಪು ಒಬ್ಬ ಹೇಡಿ, ಯುದ್ಧ ಮಾಡಲಾಗದೆ ಮಕ್ಳಳನ್ನು ಅಡವಿಟ್ಟವ, ಅಂತವನನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಹೇಳಿಕೊಂಡವರು ಇವರು ಎಂದು ಆಕ್ರೋಶ ಹೊರ ಹಾಕಿದ್ದಾರೆ.

    ಮಂತ್ರಾಕ್ಷತೆ ತೆಗೆದುಕೊಂಡವರು ಧೈರ್ಯವಾಗಿ ಪೂಜೆ ಮಾಡಿ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಜನ ಉತ್ತರ ಕೊಡುತ್ತಾರೆ. ಕಾಂಗ್ರೆಸ್‍ನ ಈ ನಡೆಯನ್ನು ಖಂಡಿಸಿ ರಾಜ್ಯದಲ್ಲಿ ಪ್ರತಿಭಟನೆ ಮಾಡುತ್ತಿದ್ದು, ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದ್ರೂ ಆಗಬಹುದು: ಬಿ.ಕೆ.ಹರಿಪ್ರಸಾದ್‌

  • ಸೋಮಣ್ಣ ಬಿಜೆಪಿ ಬಿಡಲ್ಲ, ಯತ್ನಾಳ್ ಬಗ್ಗೆ ಹೈಕಮಾಂಡ್ ನೋಡಿಕೊಳ್ಳುತ್ತೆ: ಅಶೋಕ್

    ಸೋಮಣ್ಣ ಬಿಜೆಪಿ ಬಿಡಲ್ಲ, ಯತ್ನಾಳ್ ಬಗ್ಗೆ ಹೈಕಮಾಂಡ್ ನೋಡಿಕೊಳ್ಳುತ್ತೆ: ಅಶೋಕ್

    ಬೆಂಗಳೂರು: ಮಾಜಿ ಸಚಿವ ವಿ.ಸೋಮಣ್ಣ (V Somanna) ಬಿಜೆಪಿ ಬಿಡಲ್ಲ. ಸೋಮಣ್ಣ ಅವರ ಜೊತೆ ದೂರವಾಣಿ ಜೊತೆ ಮಾತುಕತೆ ನಡೆಸಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R Ashok) ಹೇಳಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನವರಿ 4 ರಂದು ಸೋಮಣ್ಣ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ. ಅವತ್ತು ಎಲ್ಲವೂ ದಿ ಎಂಡ್ ಆಗಲಿದೆ. ಅಲ್ಲದೇ ಯತ್ನಾಳ್ (Basangouda Patil Yatnal) ಅಸಮಾಧಾನ ವಿಚಾರವನ್ನು ಹೈಕಮಾಂಡ್ ಅವರು ನೋಡಿಕೊಳ್ಳುತ್ತಾರೆ ಎಂದರು. ಇದನ್ನೂ ಓದಿ: ಅಂದು ಹೋರಾಡಿದ್ದಕ್ಕೆ ಈಗ ರಾಮಭಕ್ತರನ್ನು ಬಂಧಿಸ್ತಿದ್ದಾರೆ, ನನ್ನನ್ನೂ ಬಂಧಿಸ್ತಾರಾ? – ಆರ್.ಅಶೋಕ್ ಕಿಡಿ

    ಲೋಕಸಭೆ ಬಳಿಕ ಸಾಕಷ್ಟು ಬದಲಾವಣೆ ಆಗುತ್ತೆ. ಶಿಂಧೆ, ಪವಾರ್ ಇದ್ದಾರೆ. ಸರ್ಕಾರ ಇರಲ್ಲ ಎಂದು ಕುಮಾರಸ್ವಾಮಿ ಸಹ ಹೇಳಿದ್ದಾರೆ. ಅವರಿಗೂ ಹಲವು ಸಂಪರ್ಕ ಇದೆ. ಯಾರೋ ಜ್ಯೋತಿಷಿ ಸಹ ಈ ಸರ್ಕಾರ ಉಳಿಯಲ್ಲ, ಅಲ್ಲೋಲ ಕಲ್ಲೋಲ ಎಂದಿದ್ದಾರೆ. ಸರ್ಕಾರ ಎರಡು ಭಾಗ ಆಗುತ್ತೆ ಎಂದಿದ್ದಾರೆ. ಆದರೆ ನಾನು ಜ್ಯೋತಿಷ್ಯ ನಂಬಲ್ಲ. ಆದರೆ ನನಗೂ ಮಾಹಿತಿ ಇದೆ. ನಾನು ಎಲ್ಲಿ ಯಾವಾಗ ಹೇಳಬೇಕೋ ಆಗ ಹೇಳುವೆ. ಡಿಕೆಶಿ ಅವರೇ ಸುಳಿವು ಕೊಟ್ಟಿದ್ದಾರೆ ಎಂದು ಮಾರ್ಮಿಕವಾಗಿ ನುಡಿದರು. ಇದನ್ನೂ ಓದಿ: 2024ನೇ ವರ್ಷ ರಾಜ್ಯಕ್ಕೆ ಆಶಾದಾಯಕವಾಗಲಿದೆ – ಸಿದ್ದರಾಮಯ್ಯ

  • ಅಂದು ಹೋರಾಡಿದ್ದಕ್ಕೆ ಈಗ ರಾಮಭಕ್ತರನ್ನು ಬಂಧಿಸ್ತಿದ್ದಾರೆ, ನನ್ನನ್ನೂ ಬಂಧಿಸ್ತಾರಾ? – ಆರ್.ಅಶೋಕ್ ಕಿಡಿ

    ಅಂದು ಹೋರಾಡಿದ್ದಕ್ಕೆ ಈಗ ರಾಮಭಕ್ತರನ್ನು ಬಂಧಿಸ್ತಿದ್ದಾರೆ, ನನ್ನನ್ನೂ ಬಂಧಿಸ್ತಾರಾ? – ಆರ್.ಅಶೋಕ್ ಕಿಡಿ

    ಬೆಂಗಳೂರು: ಹುಬ್ಬಳ್ಳಿಯಲ್ಲಿ (Hubballi) ಇಬ್ಬರನ್ನು ಹಳೇ ಕೇಸ್‌ಗೆ ಈಗ ಬಂಧಿಸಿದ್ದಾರೆ. 30 ವರ್ಷದ ಪ್ರಕರಣಕ್ಕೆ ಮರುಜೀವ ಕೊಡುತ್ತಿದ್ದಾರೆ. ಕಾಂಗ್ರೆಸ್ (Congress) ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R Ashok) ಕಿಡಿಕಾರಿದ್ದಾರೆ.

    ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 30 ವರ್ಷಗಳ ಬಳಿಕ ಹುಬ್ಬಳ್ಳಿಯಲ್ಲಿ ರಾಮಜನ್ಮ ಭೂಮಿ ಕಾರ್ಯಕರ್ತರನ್ನು ಜೈಲಿಗಟ್ಟಿದ್ದಾರೆ. ರಾಮಭಕ್ತರ ಮೇಲೆ ಕೇಸ್ ಹಾಕಿದ್ದಾರೆ. ಆಗ ಕಲ್ಲು ತೂರಾಟ ಮಾಡಿದ್ದಾರೆ ಎಂದು ಈಗ ಕೇಸ್ ರೀ ಓಪನ್ ಮಾಡಿ ಬಂಧಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: 2024ನೇ ವರ್ಷ ರಾಜ್ಯಕ್ಕೆ ಆಶಾದಾಯಕವಾಗಲಿದೆ – ಸಿದ್ದರಾಮಯ್ಯ

    ರಾಮಮಂದಿರ ನಿರ್ಮಾಣ ಚರಿತ್ರೆಯಲ್ಲಿ ದಾಖಲಾಗುವ ಐತಿಹಾಸಿಕ ಕ್ಷಣ. ನಾವು ಕರಸೇವೆ ಮಾಡಿದ್ದೇವೆ, ಹಲವರು ಪ್ರಾಣ ತ್ಯಾಗ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಈಗ ಕರಸೇವಕರನ್ನು ಭಯಭೀತಗೊಳಿಸಲು ಹೊರಟಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಅಯೋಧ್ಯೆಯಲ್ಲಿರೋದು ಬಿಜೆಪಿ ರಾಮ, ನಮ್ಮ ರಾಮ ಸಿದ್ದರಾಮಯ್ಯ: ಹೆಚ್‌. ಆಂಜನೇಯ

    ದ್ವೇಷದ ರಾಜಕಾರಣಕ್ಕೆ ಸರ್ಕಾರ ಪ್ರತಿಫಲ ಅನುಭವಿಸುತ್ತದೆ. ಯಡಿಯೂರಪ್ಪ (BS Yediyurappa) ಅವರು ಕೂಡ ರಾಮಜನ್ಮ ಭೂಮಿ ಹೋರಾಟಕ್ಕೆ ಹೋಗಿದ್ದರು. ನಾನು ರಾಮಜನ್ಮ ಭೂಮಿ ಹೋರಾಟದಲ್ಲಿ ಭಾಗವಹಿಸಿದ್ದೆ. ನನ್ನನ್ನು ಬಂಧಿಸುತ್ತೀರಾ ಎಂದು ಸವಾಲು ಹಾಕಿದರು. ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂಗಳ ಕಗ್ಗೊಲೆಗಳು ಆಗಿದ್ದವು. ಈಗ ರಾಮಭಕ್ತರ ಬಂಧನ ಸರ್ಕಾರದ ಟಿಪ್ಪು ಸಂಸ್ಕೃತಿಯನ್ನು ತೋರಿಸುತ್ತೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪ್ರತಾಪ್ ಸಿಂಹ, ಅವರ ಸಹೋದರ ಹೆದರುವ ಅಗತ್ಯವಿಲ್ಲ, ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ: ವಿಜಯೇಂದ್ರ

  • ಸಿದ್ದರಾಮಯ್ಯ, ಕಾಂಗ್ರೆಸ್‌ನವರ ರಕ್ತದ ಕಣಕಣದಲ್ಲೂ ಹಿಂದೂ ವಿರೋಧಿ ಭಾವನೆ: ಆರ್ ಅಶೋಕ್

    ಸಿದ್ದರಾಮಯ್ಯ, ಕಾಂಗ್ರೆಸ್‌ನವರ ರಕ್ತದ ಕಣಕಣದಲ್ಲೂ ಹಿಂದೂ ವಿರೋಧಿ ಭಾವನೆ: ಆರ್ ಅಶೋಕ್

    ಚಿಕ್ಕಬಳ್ಳಾಪುರ: ಸಿದ್ದರಾಮಯ್ಯ (Siddaramaiah) ಹಾಗೂ ಕಾಂಗ್ರೆಸ್‌ನವರ (Congress) ರಕ್ತದ ಕಣ ಕಣದಲ್ಲೂ ಹಿಂದೂ ವಿರೋಧಿ ಭಾವನೆ ಇದೆ ಎಂದು ಚಿಕ್ಕಬಳ್ಳಾಪುರದಲ್ಲಿ (Chikkaballapura) ವಿರೋಧ ಪಕ್ಷದ ನಾಯಕ ಆರ್ ಅಶೋಕ್ (R Ashok) ಹೇಳಿದರು.

    ವೀರಾಂಜನೇಯ ಸ್ವಾಮಿ ಕಡಲೆಕಾಯಿ ಪರಿಷೆ ಜಾತ್ರೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ರಾಮ ಈ ದೇಶದ ಆದರ್ಶ ಪುರುಷ. ರಾಮಮಂದಿರ ಆಗಬೇಕು, ರಾಮರಾಜ್ಯ ಆಗಬೇಕು ಎಂಬುದು ನಮ್ಮ ಗುರಿ. ಆದರೆ ಸಿದ್ದರಾಮಯ್ಯ ಮುಸ್ಲಿಮರಿಗೆ 11 ಸಾವಿರ ಕೋಟಿ ಖರ್ಚು ಮಾಡುತ್ತಿದ್ದಾರೆ. ಟಿಪ್ಪು ಜಯಂತಿ ಮಾಡಿದ್ರೂ, ಶಾದಿ ಭಾಗ್ಯ ತಂದರು. ಸಿದ್ದರಾಮಯ್ಯ ಹಿಂದೂ ವಿರೋಧಿ. ಅದಕ್ಕಾಗಿಯೇ ಇದೆಲ್ಲಾ ಮಾಡಿದ್ದಾರೆ. ಹಿಂದೂ ವಿರೋಧಿ ಭಾವನೆ ಕಾಂಗ್ರೆಸ್‌ನ ರಕ್ತದಲ್ಲಿದೆ. ರಕ್ತದ ಕಣಕಣದಲ್ಲೂ ಹಿಂದೂ ವಿರೋಧಿ ಭಾವನೆ ಇದೆ ಎಂದು ಹರಿಹಾಯ್ದರು. ಇದನ್ನೂ ಓದಿ: ನಾನು ನ್ಯಾಯದ ದಾರಿಯಲ್ಲಿದ್ದೇನೆ, ಸತ್ಯಕ್ಕೆ ಜಯ ಸಿಕ್ಕಿದೆ: ವಿಕ್ರಂ ಸಿಂಹ

    ಕಾಂಗ್ರೆಸ್‌ನವರಿಂದ ಹೆಚ್ಚಿಗೆ ಏನೂ ಬಯಸಲ್ಲ. ಹೆಸರಿಗೆ ರಾಮ ಎನ್ನುತ್ತಾರೆ. ಆದರೆ ಒಳಗೆ ಒಂದು ಹೊರಗೆ ಒಂದು ಮಾಡುತ್ತಾರೆ. ರಾಮ ಅನ್ನೋದು ಅವರ ಜನ್ಮದಲ್ಲೇ ಬರಲ್ಲ. ಅವರು ಟಿಪ್ಪು ಸಂಸ್ಕೃತಿಯವರು. ರಾಮಜಪ ಮಾಡಿದ ಕಾರಣಕ್ಕೆ ನಾವು ರಾಮಮಂದಿರ ಕಟ್ಟುತ್ತಿದ್ದೇವೆ. ಕಾಂಗ್ರೆಸ್‌ನವರು ರಾಮಮಂದಿರದ ಬಗ್ಗೆ ಮಾತನಾಡಿಲ್ಲ, ಹೋರಾಟ ಮಾಡಿಲ್ಲ. ಹೋರಾಟ ಮಾಡಿದಾಗ ನಮ್ಮ ಮೇಲೆ ಗುಂಡು ಹಾರಿಸಿದವರು, ಜೈಲಿಗೆ ಹಾಕಿಸಿದವರು ಕಾಂಗ್ರೆಸ್‌ನವರು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹೆಚ್‌ಡಿಕೆ ಬಗ್ಗೆ ಮಾತನಾಡದೆ ಇರುವುದೇ ಒಳ್ಳೆಯದು: ಜಿ.ಪರಮೇಶ್ವರ್‌ ಟಾಂಗ್‌

  • ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರಿಗೆ ಕಾಣಿಕೆ ಮೇಲೆ ಕಾಣಿಕೆ ಕೊಡ್ತಿದೆ: ಅಶೋಕ್ ವಾಗ್ದಾಳಿ

    ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರಿಗೆ ಕಾಣಿಕೆ ಮೇಲೆ ಕಾಣಿಕೆ ಕೊಡ್ತಿದೆ: ಅಶೋಕ್ ವಾಗ್ದಾಳಿ

    ಬೆಂಗಳೂರು: ಕರ್ನಾಟಕದಲ್ಲಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ (Conhgress) ಸರ್ಕಾರ ಅಲ್ಪಸಂಖ್ಯಾತರಿಗೆ ಕಾಣಿಕೆ ಮೇಲೆ ಕಾಣಿಕೆ ಕೊಡುತ್ತಿದೆ. ಬರಗಾಲದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ, ಅವರಿಗೆ ಮಾತ್ರ ಪರಿಹಾರ ನೀಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R. Ashok) ವಾಗ್ದಾಳಿ ನಡೆಸಿದ್ದಾರೆ.

    ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಷ್ಟೆಲ್ಲಾ ಆದರೂ ಸಹ ಸಿದ್ದರಾಮಯ್ಯ ಅವರು ಕಣ್ಣು ಕಾಣದ ರೀತಿ ಅಲ್ಪಸಂಖ್ಯಾತರಿಗೆ ಬಂಪರ್ ಮೇಲೆ ಬಂಪರ್ ಕೊಡುಗೆ ನೀಡುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಅಭಿವೃದ್ಧಿಗೆ ಸಿಗೋದೇ 5000 ಕೋಟಿ ರೂ. ಅದರಲ್ಲಿ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1 ಸಾವಿರ ಕೋಟಿ ರೂ. ಕೊಟ್ಟಿದ್ದಾರೆ. ಹಿಂದೂಗಳು ಹಾಗೂ ದಲಿತರೇನು ಮಾಡಬೇಕು? ಪಾರ್ಲಿಮೆಂಟ್ ಚುನಾವಣೆಗೆ ಓಲೈಕೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಅಯೋಧ್ಯೆಗೆ ಹೋಗಲು ನನಗೆ ಆಹ್ವಾನದ ಅಗತ್ಯವಿಲ್ಲ: ಉದ್ಧವ್‌ ಠಾಕ್ರೆ ಹೀಗಂದಿದ್ಯಾಕೆ..?

    ಟಿಪ್ಪು ಸಂಸ್ಕೃತಿ ಹೇರುವ ಕೆಲಸ ಸಿಎಂ ಮಾಡುತ್ತಿದ್ದಾರೆ. ಒಂದೇ ಒಂದು ಅಭಿವೃದ್ಧಿಗೆ ಕಲ್ಲು ಹಾಕಿಲ್ಲ ಎಂದು ಕಾಂಗ್ರೆಸ್‍ನ ಬಿ.ಆರ್ ಪಾಟೀಲ್ ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಮಾತ್ರ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಹಿಂದೂಗಳು ವಾಸ ಮಾಡುವ ಜಾಗದಲ್ಲಿ ಅಭಿವೃದ್ಧಿ ಯಾಕಿಲ್ಲ ಎಂದು ಪ್ರಶ್ನಿಸಿದ್ದಾರೆ.

    ಪಿಎಫ್‍ಐ ಮೇಲಿನ ಕೇಸ್ ವಾಪಸ್ ಪಡೆದ್ರು, ಕೆ.ಜಿ ಹಳ್ಳಿ, ಡಿಜೆ ಹಳ್ಳಿ ಘಟನೆಯ ಕೇಸ್ ವಾಪಸ್ ಪಡೆಯುವಂತೆ ಮೈಸೂರು ಶಾಸಕ ಪತ್ರ ಬರೆದು ವಾಪಸ್ ಪಡೆಯಲು ಶಿಫಾರಸ್ಸು ಮಾಡುತ್ತಾರೆ. ಕುಕ್ಕರ್ ಬಾಂಬ್ ಬ್ಲಾಸ್ಟ್ ಮಾಡಿದವರನ್ನು ನಮ್ಮ ಬ್ರದರ್ಸ್ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದರು. ಈ ನಡುವೆ ಸಿದ್ದರಾಮಯ್ಯ ಪ್ರಮಾಣವಚನ ಪಡೆಯುವಾಗ ಎಲ್ಲಾ ಧರ್ಮ ಸಮಾನವಾಗಿ ಕಾಣುತ್ತೇನೆ ಎಂದಿದ್ದರು. ಈಗ ಅವರು ಓಲೈಕೆ ಮಾಡುತ್ತಿದ್ದಾರೆ ಎಂದು ಕುಟುಕಿದ್ದಾರೆ.

    ಪ್ರತಿ ರೈತರಿಗೆ 35 ಸಾವಿರ ರೂ. ಬರ ಪರಿಹಾರ ಕೊಡಬೇಕು. ಬೆಳಗಾವಿ ಅಧಿವೇಶನದಲ್ಲಿ ಎರಡು ಸಾವಿರ ಘೋಷಣೆ ಮಾಡಿದ್ರೂ, ಒಂದು ವಾರದಲ್ಲಿ ಎರಡು ಸಾವಿರ ಕೊಡುತ್ತೇನೆ ಎಂದಿದ್ದರು. ಅಧಿವೇಶನ ಮುಗಿದು ಇಷ್ಟು ದಿನ ಆಯ್ತು, ಇನ್ನೂ ಕೊಟ್ಟಿಲ್ಲ. ಅಲ್ಪಸಂಖ್ಯಾತರಿಗೆ 1 ಸಾವಿರ ಕೋಟಿ ರೂ. ಕೊಟ್ಟಿದ್ದಾರೆ. ಇವರು ಓಲೈಕೆ ಮಾಡುತ್ತಿದ್ದಾರೆ. ಹಿಂದೆ ಟಿಪ್ಪು, ಹಿಂದೂ-ಮುಸ್ಲಿಮರನ್ನು ಹೇಗೆ ಪ್ರತ್ಯೇಕ ಮಾಡಿದ್ದನೋ, ಅದೇ ರೀತಿ ಈಗ ಮಾಡಲಾಗುತ್ತಿದೆ. ಹಿಂದೂ ಕಾಲೋನಿ ಹಾಗೂ ಮುಸ್ಲಿಂ ಕಾಲೋನಿ ಎಂದು ತಾರತಮ್ಯ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಜ.22ರಂದು ಅಯೋಧ್ಯೆಗೆ ಬರುವ ಮನಸ್ಸು ಮಾಡ್ಬೇಡಿ – ರಾಮ ಭಕ್ತರಿಗೆ ಮೋದಿ ವಿನಂತಿ

  • ಕಾಂಗ್ರೆಸ್‍ನ ಮೊದಲ ಅಧ್ಯಕ್ಷರೇ ಬ್ರಿಟಿಷರು, ಹಾಗಾದ್ರೆ ಕಾಂಗ್ರೆಸ್ಸಿಗರು ಬ್ರಿಟಿಷರ ಬೂಟು ನೆಕ್ಕಿದ್ರಾ? – ಆರ್.ಅಶೋಕ್ ಕೌಂಟರ್

    ಕಾಂಗ್ರೆಸ್‍ನ ಮೊದಲ ಅಧ್ಯಕ್ಷರೇ ಬ್ರಿಟಿಷರು, ಹಾಗಾದ್ರೆ ಕಾಂಗ್ರೆಸ್ಸಿಗರು ಬ್ರಿಟಿಷರ ಬೂಟು ನೆಕ್ಕಿದ್ರಾ? – ಆರ್.ಅಶೋಕ್ ಕೌಂಟರ್

    ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಯೋಜನೆಗಳಿಗೆ ಅಡಿಗಲ್ಲು ಹಾಕುವ ಬದಲು ಕನ್ನಡಿಗರ ತಲೆಯ ಮೇಲೆ ಕಲ್ಲು ಹಾಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿಂದೂ-ಮುಸ್ಲಿಮರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ (R.Ashok) ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಳು ಕೋಟಿ ಕನ್ನಡಿಗರ ತಲೆ ಮೇಲೆ ಕಲ್ಲು ಹಾಕಿರುವ ಸರ್ಕಾರ, ಅಭಿವೃದ್ಧಿ ಕಾಮಗಾರಿಗೆ ಒಂದು ಅಡಿಗಲ್ಲನ್ನೂ ಹಾಕಿಲ್ಲ. ಜನರು ಸರ್ಕಾರದ ಬಗ್ಗೆ ಛೀ, ಥೂ ಎಂದು ಮಾತನಾಡುತ್ತಿದ್ದಾರೆ. ಸರ್ಕಾರ ಹಿಂದೂ-ಮುಸ್ಲಿಮರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯನವರು ಜಾತಿ, ಧರ್ಮಗಳ ನಡುವೆ ಬೆಂಕಿ ಹಚ್ಚುವ ವೀರ ಎಂದು ಟೀಕಿಸಿದ್ದಾರೆ.ಇದನ್ನೂ ಓದಿ: 2024ರ ಲೋಕಸಭಾ ಚುನಾವಣೆಗೆ ಮಾಡಲು ಸಾಕಷ್ಟು ಕೆಲಗಳಿವೆ: ಕುಸ್ತಿ ಫೆಡರೇಷನ್‌ನಿಂದ ಬ್ರಿಜ್‌ ಭೂಷಣ್‌ ‘ಸನ್ಯಾಸತ್ವ’

    ಬರ ಪರಿಹಾರಕ್ಕೆ ಇದೇ ವಾರದಲ್ಲಿ 2 ಸಾವಿರ ರೂ. ಬಿಡುಗಡೆ ಮಾಡಲಾಗುವುದು ಎಂದು ಸರ್ಕಾರ ಹೇಳಿದೆ. ಆದರೆ ಈವರೆಗೆ ಹಣ ಸಿಕ್ಕಿಲ್ಲ. ಶಾಲೆಯ ಶೌಚಾಲಯ ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ. 15-20 ಸಾವಿರ ರೂ.ಗೆ ಯಾರೂ ಬರದೆ ಶಾಲಾ ಮಕ್ಕಳ ಕೈಯಲ್ಲಿ ಶೌಚಾಲಯ ಸ್ವಚ್ಛಗೊಳಿಸಲಾಗುತ್ತಿದೆ. ಇತ್ತೀಚೆಗೆ ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ದೌರ್ಜನ್ಯ ಮಾಡಲಾಗಿದೆ. ಈ ವಿಚಾರಗಳಿಂದ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದ್ದಾರೆ.

    ಕಾಂಗ್ರೆಸ್ (Congress) ನಾಯಕ ಬಿ.ಕೆ.ಹರಿಪ್ರಸಾದ್  (B.K Hariprasad) ಹತಾಶರಾಗಿದ್ದು, ಅವರ ಹೇಳಿಕೆ ಕಾಂಗ್ರೆಸ್‍ನ ಮನಸ್ಥಿತಿಯನ್ನು ಎತ್ತಿ ತೋರುತ್ತದೆ. ಸಮೀಕ್ಷೆಗಳ ಪ್ರಕಾರ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಲಿದ್ದಾರೆ. ಇತ್ತೀಚೆಗೆ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿ ಸೆಮಿಫೈನಲ್ ಗೆದ್ದಿದೆ. ಇದರಿಂದ ಕಾಂಗ್ರೆಸ್ ಫೈನಲ್‍ಗೆ ಬರುವ ಅವಕಾಶ ಕಳೆದುಕೊಂಡಿದೆ. ಅಲ್ಲದೇ ರಾಹುಲ್ ಗಾಂಧಿಯ ಬದಲು ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಮಾಡಿ ಎಂದು ಒಕ್ಕೂಟದ ಸದಸ್ಯರು ಹೇಳುತ್ತಿದ್ದಾರೆ. ಇವೆಲ್ಲ ಬೆಳವಣಿಗೆಯಿಂದ ಕಾಂಗ್ರೆಸ್ಸಿಗರು ಹತಾಶರಾಗಿದ್ದು, ಬೇರೆ ವಿಷಯಗಳ ಬಗ್ಗೆ ಮಾತನಾಡಲು ಆರಂಭಿಸಿದ್ದಾರೆ. ಕಾಂಗ್ರೆಸ್‍ನ್ನು ಸ್ಥಾಪನೆ ಮಾಡಿದ್ದೇ ಬ್ರಿಟಿಷರು. ಅಂದ ಮೇಲೆ ಕಾಂಗ್ರೆಸ್ಸಿಗರು ಅವರ ಬೂಟು ನೆಕ್ಕಿದ್ದಾರಾ ಎಂದು ಪ್ರಶ್ನೆ ಮಾಡಿದ್ದಾರೆ.

    ಬ್ರಿಟಿಷರಿಂದ ಪಳಗಿದ ಕಾಂಗ್ರೆಸ್ಸಿಗರು ಅವರ ಕೈ ಕೆಳಗೆ ಕೆಲಸ ಮಾಡಿದ್ದರು. ಬಿಜೆಪಿಗೆ (BJP) ಬ್ರಿಟಿಷರು ಎಂದೂ ಅಧ್ಯಕ್ಷರಾಗಿ ಆಯ್ಕೆಯಾಗಿರಲಿಲ್ಲ. ಯುದ್ಧ ಬಿಟ್ಟು ಓಡಿ ಬಂದು ಮಕ್ಕಳನ್ನು ಅಡಮಾನ ಇಟ್ಟ ಪಾಪಿ ಟಿಪ್ಪು ಸುಲ್ತಾನನನ್ನು ಕಾಂಗ್ರೆಸ್‍ನವರು ಬೆಂಬಲಿಸುತ್ತಾರೆ. ಭಗತ್‍ಸಿಂಗ್, ಕಿತ್ತೂರು ರಾಣಿ ಚೆನ್ನಮ್ಮ, ಸುಭಾಷ್ ಚಂದ್ರ ಬೋಸ್ ರಕ್ತ ಹರಿಸಿ ಹೋರಾಟ ಮಾಡಿದ್ದರು. ಕನ್ನಡವನ್ನು ಕೊಂದವನು, ಹಿಂದೂಗಳನ್ನು ಕೊಲ್ಲಲು ಕತ್ತಿ ಹಿಡಿದವನಾದ ಟಿಪ್ಪುವನ್ನು ಕಾಂಗ್ರೆಸ್‍ನವರು ಬೆಂಬಲಿಸುತ್ತಾರೆ. ಟಿಪ್ಪು ಯುದ್ಧ ಮಾಡಿ ಗೆಲ್ಲದೆ, ಮೈಸೂರು ಅರಸರನ್ನು ಜೈಲಿಗೆ ಕಳುಹಿಸಿ ಹೇಡಿತನದಿಂದ ಗೆದ್ದವನು. ಇಂತಹ ಮತಾಂಧನನ್ನು ಹೀರೋ ಮಾಡಲು ಹೋಗಬಾರದು ಎಂದು ಅವರು ಕಾಂಗ್ರೆಸ್‍ಗೆ ತಿವಿದಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಎಲ್ಲಾ ಸ್ಥಾನಗಳನ್ನು ಗೆಲ್ಲುವುದು ನಮ್ಮ ಗುರಿ. ಅದಕ್ಕಾಗಿ ಸಮರ್ಥರಾದವರನ್ನು ಆಯ್ಕೆ ಮಾಡಲಾಗುತ್ತದೆ. ಜೆಡಿಎಸ್ ಕೂಡ ಈಗ ಪಕ್ಷದ ಜೊತೆಗಿದ್ದು, ಮಂಡ್ಯ, ಹಾಸನ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಪಕ್ಷ ದುರ್ಬಲವಾಗಿರುವ ಕಡೆಗಳಲ್ಲಿ ಪಕ್ಷಕ್ಕೆ ಬಲ ಬರಲಿದೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆ ಇದೆ ಎಂದಿದ್ದಾರೆ. ಇದನ್ನೂ ಓದಿ: ಅಲ್ಲಾ ಹು ಅಕ್ಬರ್ ಎನ್ನಬೇಕಾಗಿರುವುದು ಮನೆ, ಮಸೀದಿಯಲ್ಲಿ.. ಸಮಾಜದಲ್ಲಲ್ಲ: ಕಲ್ಲಡ್ಕ ಪ್ರಭಾಕರ್ ಭಟ್

  • ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಪ್ರಕರಣ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್.ಅಶೋಕ್ ವಾಗ್ದಾಳಿ

    ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಪ್ರಕರಣ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್.ಅಶೋಕ್ ವಾಗ್ದಾಳಿ

    ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಅಸ್ತಿತ್ವದಲ್ಲಿ ಇದೆಯೋ, ಇಲ್ಲವೋ ಎಂಬ ಅನುಮಾನ ಮೂಡುತ್ತಿದೆ. ಆಡಳಿತ ಯಂತ್ರ ಸಂಪೂರ್ಣ ನಿಷ್ಕ್ರಿಯಗೊಂಡಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್  (R. Ashok) ವಾಗ್ದಾಳಿ ನಡೆಸಿದ್ದಾರೆ.

    ಯಶವಂತಪುರ (Yeswanthpur) ವಿಧಾನಸಭೆ ಕ್ಷೇತ್ರದ ಅಂದ್ರಹಳ್ಳಿಯ ಸರ್ಕಾರಿ ಶಾಲೆಯಲ್ಲಿ (Andrahalli School) ಮಕ್ಕಳಿಂದಲೇ ಶೌಚಾಲಯ ಶುಚಿಗೊಳಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ಕೆಲ ದಿನಗಳ ಹಿಂದಷ್ಟೇ ಕೋಲಾರ ಜಿಲ್ಲೆಯ ಮಾಲೂರಿನ ಮೂರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪರಿಶಿಷ್ಟ ಜಾತಿ ವರ್ಗದ ಮಕ್ಕಳ ಕೈಯಲ್ಲಿ ಶೌಚ ಗುಂಡಿ ಸ್ವಚ್ಛಗೊಳಿಸಿದ ಪ್ರಕರಣ ನಡೆದು ಕೋಲಾಹಲವಾಗಿದೆ. ಆ ನೆನಪು ಮಾಸುವ ಮೊದಲೇ ವಿಧಾನಸೌಧದ ಕೂಗಳತೆಯ ದೂರದಲ್ಲಿರುವ ರಾಜಧಾನಿಯಲ್ಲೇ ಮತ್ತದೇ ಘಟನೆ ಮರುಕಳಿಸಿದೆ. ಇದು ದುರದೃಷ್ಟಕರ ಸಂಗತಿ ಎಂದು ಅವರು ವಿಷಾಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಹಿಜಬ್‌ ನಿಷೇಧ ವಾಪಸ್‌: ಸಿಎಂ ಸಿದ್ದರಾಮಯ್ಯ ಘೋಷಣೆ

    ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿಗೆ ಕಾನೂನಿನ ಅರಿವೇ ಇಲ್ಲದಂತೆ ವರ್ತಿಸುತ್ತಿದ್ದಾರೆ. ಇಲಾಖೆ ಮುಖ್ಯಸ್ಥರು ಸರಿ ಇದ್ದರೆ ಇಡೀ ಇಲಾಖೆಯ ವ್ಯವಸ್ಥೆ ಸರಿ ಇರುತ್ತದೆ. ಈಗಾಗಲೇ ಒಂದು ಘಟನೆ ನಡೆದಿರುವ ಬೆನ್ನಲ್ಲೇ ಮತ್ತೆ ಮಕ್ಕಳ ಕೈನಲ್ಲೇ ಶೌಚಾಲಯ ಸ್ವಚ್ಛಗೊಳಿಸಲಾಗುತ್ತಿದೆ ಎಂದರೆ ಏನರ್ಥ? ಈ ಸರ್ಕಾರ ಜನತೆಯ ಪಾಲಿಗೆ ಸತ್ತಂತಿದೆ. ಆದ್ದರಿಂದಲೇ ಇಂಥ ಪ್ರಕರಣ ಮರುಕಳಿಸುತ್ತಿವೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

    ಶಾಲೆ ಮತ್ತು ಹಾಸ್ಟೆಲ್‍ಗಳಲ್ಲಿ ಸ್ವಚ್ಛತೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳಿದ್ದರೂ ಅದನ್ನು ಸರಿಯಾಗಿ ಪಾಲಿಸುತ್ತಿಲ್ಲ. ಮೇಲಿನ ಹಂತದಲ್ಲಿರುವ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ ಪರಿಶೀಲಿಸುವ ಕೆಲಸ ಮಾಡುತ್ತಿದ್ದರೆ ಇಂತಹ ಅನಾಹುತಗಳು ಆಗುವುದಿಲ್ಲ. ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲಿಸುವ ಪರಿಪಾಠವನ್ನು ಇಲಾಖೆಯ ಸಚಿವರ ಆದಿಯಾಗಿ ಎಲ್ಲಾ ಹಿರಿಯ ಅಧಿಕಾರಿಗಳು ಪಾಲಿಸಬೇಕು. ಆಗ ಮಾತ್ರ ವ್ಯವಸ್ಥೆಯ ಲೋಪಗಳನ್ನು ಪತ್ತೆ ಹಚ್ಚಿ ಸರಿಪಡಿಸಲು ಸಾಧ್ಯವಿದೆ. ಸಚಿವರುಗಳೇ ತಮಗೂ ಅದಕ್ಕೂ ಸಂಬಂಧವಿಲ್ಲ ಎಂಬಂತಿದ್ದರೆ ಪರಿಸ್ಥಿತಿ ಸುಧಾರಣೆ ಆಗುವುದು ಯಾವಾಗ ಎಂದು ಅವರು ಪ್ರಶ್ನಿಸಿದ್ದಾರೆ.

    ಇದಕ್ಕೂ ಮೊದಲು, ಮಕ್ಕಳಿಂದ ಸ್ವಚ್ಛಗೊಳಿಸಲಾದ ಶೌಚಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮುಖ್ಯಶಿಕ್ಷಕಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸ್ಥಳೀಯ ಮುಖಂಡರು ಮತ್ತು ಶಾಲಾಭಿವೃದ್ಧಿ ಸಮಿತಿಯ ಸದಸ್ಯರ ಜೊತೆ ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಂಡರು. ಮಕ್ಕಳ ಬಳಿಯೂ ಸಂವಾದ ನಡೆಸಿ ಘಟನೆಗೆ ಕಾರಣಗಳನ್ನು ಕೇಳಿ ತಿಳಿದುಕೊಂಡರು. ಶಾಲೆಗೆ ನೀಡುವ ಅನುದಾನದಲ್ಲಿ ಸ್ವಚ್ಛತೆಗೆ ಪ್ರತ್ಯೇಕ ಹಣ ನೀಡಿದ್ದರೂ, ಮುಖ್ಯಶಿಕ್ಷಕರು ಅದನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುತ್ತಿಲ್ಲ ಎಂದು ಸ್ಥಳದಲ್ಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆರೋಪಿಸಿದ ಪ್ರಸಂಗವೂ ನಡೆಯಿತು.

    ಈ ವೇಳೆ ಮಾತನಾಡಿದ ಮಕ್ಕಳು, ಚಿಕ್ಕಿ ಕೊಟ್ಟು ಶೌಚಾಲಯ ಸ್ವಚ್ಛಗೊಳಿಸಲು ಮುಖ್ಯಶಿಕ್ಷಕರು ಸೂಚನೆ ನೀಡುತ್ತಾರೆ ಎಂದು ತಿಳಿಸಿದರು. ಶಾಲೆಯಲ್ಲಿ ನೀರಿನ ಸಮಸ್ಯೆ ಕೂಡ ಇದೆ. ಹೊರಗಿನಿಂದ ತರಿಸಲಾಗುತ್ತದೆ. ಹಿಂದಿನಿಂದಲೂ ಮಕ್ಕಳ ಕೈನಲ್ಲೇ ಶೌಚಾಲಯವನ್ನು ಸ್ವಚ್ಛ ಮಾಡಿಸಲಾಗುತ್ತಿದ್ದು, ಅದಕ್ಕೆ ಪ್ರತ್ಯೇಕ ಸಿಬ್ಬಂದಿ ಇಲ್ಲ ಎಂಬ ಅಂಶವನ್ನೂ ಮಕ್ಕಳು ಈ ವೇಳೆ ತಿಳಿಸಿದರು. ಶಾಲೆಯ ಹೊರಭಾಗದಲ್ಲಿ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದ ಪೋಷಕರು ಮತ್ತು ಸ್ಥಳೀಯ ಗ್ರಾಮಸ್ಥರ ಅಹವಾಲುಗಳನ್ನು ಅವರು ಕೇಳಿದರು. ಇದನ್ನೂ ಓದಿ: ಬಿಜೆಪಿಗರು ಜಮೀರ್ ವಿಮಾನದ ಬಗ್ಗೆ ಮಾತಾಡೋ ಬದಲು ಪ್ರಧಾನಿಗಳಿಂದ ಬರ ಪರಿಹಾರ ಕೊಡಿಸಲಿ: ರಾಮಲಿಂಗಾರೆಡ್ಡಿ

  • ಸಿಎಂ, ಸಚಿವರು ಜೆಟ್‍ನಲ್ಲಿ, ಮಕ್ಕಳು ಜೆಸಿಬಿಯಲ್ಲಿ ಪ್ರಯಾಣ.. ಇದೇನಾ ನಿಮ್ಮ ಸಮಾಜವಾದ?: ಅಶೋಕ್ ಕಿಡಿ

    ಸಿಎಂ, ಸಚಿವರು ಜೆಟ್‍ನಲ್ಲಿ, ಮಕ್ಕಳು ಜೆಸಿಬಿಯಲ್ಲಿ ಪ್ರಯಾಣ.. ಇದೇನಾ ನಿಮ್ಮ ಸಮಾಜವಾದ?: ಅಶೋಕ್ ಕಿಡಿ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan), ಕೃಷ್ಣಬೈರೇಗೌಡ ಐಷಾರಾಮಿ ಜೆಟ್‍ನಲ್ಲಿ ಪ್ರಯಾಣ ಮಾಡುತ್ತಾರೆ. ಇತ್ತ ಮಕ್ಕಳು ಜೆಸಿಬಿಯಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದೇನಾ ನಿಮ್ಮ ಸಮಾಜವಾದ..?, ಈ ರೀತಿಯ ದೌಲತ್ತು ಸಿಎಂ, ಸಚಿವರಿಗೆ ಬೇಕಿತ್ತಾ ಎಂದು ವಿಪಕ್ಷ ನಾಯಕ ಆರ್. ಅಶೋಕ್ (R Ashok) ಕಿಡಿಕಾರಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಜಮೀರ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ಜೆಟ್ ವಿಮಾನ ಪ್ರಯಾಣದ ವೀಡಿಯೋ ಕುರಿತು ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಬರದ ಸಂಕಷ್ಟಕ್ಕೆ ರೈತರು ಆತ್ಮಹತ್ಯೆ ದಾರಿ ತುಳಿಯುತ್ತಿದ್ದಾರೆ. 60 ಲಕ್ಷಕ್ಕೂ ಹೆಚ್ಚು ರೈತರ ಜಮೀನಿನಲ್ಲಿ ಬೆಳೆ ನಷ್ಟ ಆಗಿದೆ. ರೈತರು ಬೇರೆ ರಾಜ್ಯಗಳಿಗೆ ಗುಳೇ ಹೋಗುವ ಪರಿಸ್ಥಿತಿ ಇದೆ. ಮತ್ತೊಂದು ಕಡೆ ಜೆಸಿಬಿಯಲ್ಲಿ (JCB) ಶಾಲೆ ಮಕ್ಕಳು ಶಾಲೆಗೆ ಹೋಗ್ತಿದ್ದಾರೆ. ಇತ್ತ ಸಿಎಂ, ಸಚಿವರು ಖಾಸಗಿ ಜೆಟ್ ನಲ್ಲಿ ಪ್ರಯಾಣ ಮಾಡಿದ್ದಾರೆ. ಬರದ ಛಾಯೆ ಸಂದರ್ಭದಲ್ಲಿ ಐಷಾರಾಮಿ ವಿಮಾನ ಪ್ರಯಾಣ ಬಗ್ಗೆ ಖುಷಿಯಾಗಿದೆ ಅಂತ ಜಮೀರ್ ವಿಡಿಯೋ ಹಂಚಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.   

    ಸಿಎಂ ಹಾಗೂ ಸಚಿವರು ಜೆಟ್ ನಲ್ಲಿ ಪ್ರಯಾಣ, ಮಕ್ಕಳು ಜೆಸಿಬಿಯಲ್ಲಿ ಪ್ರಯಾಣ.. ಇದೇನಾ ನಿಮ್ಮ ಸಮಾಜವಾದ?, ಈ ರೀತಿಯ ದೌಲತ್ತು ಸಿಎಂ, ಸಚಿವರಿಗೆ ಬೇಕಿತ್ತಾ ಎಂದು ಪ್ರಶ್ನಿಸುತ್ತಾ ಅಶೋಕ್ ಅವರು ಎರಡು ಫೋಟೋಗಳನ್ನು ಬಿಡುಗಡೆಗೊಳಿಸಿದರು. ಇದನ್ನೂ ಓದಿ: ಜನರ ದುಡ್ಡು ಆಕಾಶದಲ್ಲಿ ಜಾತ್ರೆ- ಸಿಎಂ, ಜಮೀರ್ ಐಷಾರಾಮಿ ವಿಮಾನ ಪ್ರಯಾಣಕ್ಕೆ ವಿಜಯೇಂದ್ರ ಟೀಕೆ

    https://twitter.com/BZZameerAhmedK/status/1737727391450173574

    ಏನಿದು ಘಟನೆ..?: ದೆಹಲಿಯಿಂದ ಬೆಂಗಳೂರಿಗೆ ನಮ್ಮ ಹೆಮ್ಮೆಯ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ಸಂತಸದ ಕ್ಷಣಗಳು ಎಂದು ವೀಡಿಯೋವೊಂದನ್ನು ಜಮೀರ್ ಅಹ್ಮದ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೋ ಇದೀಗ ಭಾರೀ ವೈರಲ್ ಆಗುತ್ತಿದ್ದು, ವೀಡಿಯೋ ಶೇರ್ ಮಾಡಿಕೊಂಡು ಬಿಜೆಪಿ ನಾಯಕರು ಭಾರೀ ಟೀಕೆ ವ್ಯಕ್ತಪಡಿಸುತ್ತಿದ್ದಾರೆ.

  • ನೂರಕ್ಕೆ ನೂರರಷ್ಟು ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ: ಆರ್. ಅಶೋಕ್

    ನೂರಕ್ಕೆ ನೂರರಷ್ಟು ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ: ಆರ್. ಅಶೋಕ್

    ಬೆಂಗಳೂರು: ಉಚಿತ ಯೋಜನೆಗಳಿಗೆ ಹಣ ಕೊಡಲು ಆಗುತ್ತಿಲ್ಲ. ಈ ಸರ್ಕಾರ 100ಕ್ಕೆ ನೂರರಷ್ಟು ದಿವಾಳಿಯಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R Ashok) ಕಿಡಿಕಾರಿದರು.

    ವಿಧಾನಸೌಧದಲ್ಲಿ (Vidhanasoudha) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿಗಳನ್ನು ನಡೆಸಿದ್ದಾರೆ. ನಾವು ಪರಿಹಾರ ಕೊಟ್ಟಿದ್ದೆವು, ಅಷ್ಟೇ ಪರಿಹಾರ ಇವರು ಕೊಡಬೇಕಿತ್ತು. ಯಾವ ಗ್ಯಾರಂಟಿ ಸರಿಯಾಗಿ ಈಡೇರಿಸಿಲ್ಲ. ಈ ಸರ್ಕಾರ ಆರ್ಥಿಕವಾಗಿ ಸಂಪೂರ್ಣ ದಿವಾಳಿಯಾಗಿದೆ ಎಂದು ಗರಂ ಆದರು.

    ರಾಜ್ಯದಲ್ಲಿ ಭೀಕರ ಬರಗಾಲ ಇದೆ. ಬರ ಪರಿಹಾರ ಎರಡು ಸಾವಿರ ಕೊಡ್ತೀವಿ ಅಂತಾರೆ. ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಗಾದೆ ಮಾತಿನಂತೆ ಆಗಿದೆ. ರೈತರಿಗೆ ಬರ ಪರಿಹಾರ ಕೊಡುವಲ್ಲೂ ವಿಫಲವಾಗಿದೆ. ಪಿಎಂ ಮೋದಿ (Narendra Modi) ಭೇಟಿಗೆ ಅವಕಾಶ ಕೊಟ್ಟಿದ್ದಾರೆ, ಅಮಿತ್ ಶಾ (Amitshah) ಭೇಟಿ ಸಹ ಆಗಿದೆ. ಕೂಡಲೇ ರಾಜ್ಯ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿ. ನಮ್ಮಲ್ಲಿ ಹಸಿರು ಬರ ಇದೆ, ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ಒಂದೇ ಸಲ ಬಿಡುಗಡೆ ಮಾಡುವುದು. ಕರ್ನಾಟಕಕ್ಕೆ ಮೊದಲು ಬಿಡುಗಡೆ ಮಾಡಲ್ಲ. ನಿಮ್ಮ ಪಾಲಿನ ಹಣ ಬಿಡುಗಡೆ ಮಾಡಿ ಎಂದು ಅಶೋಕ್ ಒತ್ತಾಯಿಸಿದರು. ಇದನ್ನೂ ಓದಿ: ಇನ್ಮುಂದೆ KSRTC, BMTC ಬಸ್‌ಗಳಲ್ಲಿ ಮಾಸ್ಕ್ ಕಡ್ಡಾಯ: ರಾಮಲಿಂಗಾ ರೆಡ್ಡಿ

    ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆ ಜಾಸ್ತಿ ಆಗುತ್ತಿದೆ. ರಾಜ್ಯದಲ್ಲಿ ಎನ್‍ಐಎ ತಂಡ ಬಳ್ಳಾರಿ ಸೇರಿದಂತೆ ಹಲವು ಕಡೆ ಶೋಧ ಮಾಡಿದೆ. ಪಿಎಫ್‍ಐ ಸಂಘಟನೆಯನ್ನ ಸರ್ಕಾರ ನಿಷೇಧ ಮಾಡಿದೆ. ಸಿದ್ದರಾಮಯ್ಯ ಈ ಹಿಂದೆ ಸಿಎಂ ಆಗಿದ್ದಾಗ ಇವರ ಮೇಲೆ ಕೇಸ್ ವಾಪಸ್ ಪಡೆದಿದ್ರು. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಮತ್ತೆ ಈ ಚಟುವಟಿಕೆಗಳು ಶುರುವಾಗಿವೆ. ಐಸಿಸ್ ಸೇರಿದಂತೆ ಉಗ್ರ ಸಂಘಟನೆಗಳಿಗೆ ಸಪೆÇೀರ್ಟ್ ಮಾಡೋರು ಬೆಳೆಯುತ್ತಿದ್ದಾರೆ ಎಂದು ತಿಳಿಸಿದರು.

    ರಾಜ್ಯದಲ್ಲಿ ಮಹಿಳಾ ವಿವಸ್ತ್ರ ಮಾಡಿದ ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ವಿರೋಧ ಪಕ್ಷಗಳು ಭೇಟಿ ಬಳಿಕ ಪರಿಹಾರ ಘೋಷಣೆ ಮಾಡಿದರು. ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ವಿದ್ಯಾರ್ಥಿಗಳನ್ನು ಶಾಲೆಯ ಗುಂಡಿ ಕ್ಲೀನ್ ಮಾಡಲು ಇಳಿಸಿದ್ದು ಸರಿಯಲ್ಲ. ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಆಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಅಶೋಕ್ ಕಿಡಿಕಾರಿದರು.

  • ಮಕ್ಕಳನ್ನು ಮಲದ ಗುಂಡಿಗೆ ಇಳಿಸಿದ ಪ್ರಕರಣ – ಶಾಲೆಗೆ ಕೇಂದ್ರ ಸಚಿವ ನಾರಾಯಣಸ್ವಾಮಿ, ಆರ್‌.ಅಶೋಕ್‌ ಭೇಟಿ

    ಮಕ್ಕಳನ್ನು ಮಲದ ಗುಂಡಿಗೆ ಇಳಿಸಿದ ಪ್ರಕರಣ – ಶಾಲೆಗೆ ಕೇಂದ್ರ ಸಚಿವ ನಾರಾಯಣಸ್ವಾಮಿ, ಆರ್‌.ಅಶೋಕ್‌ ಭೇಟಿ

    – ರಾಜ್ಯ ಸರ್ಕಾರದ ಕಮಿಷನ್‌ ದಂಧೆಯ ಒಂದು ಭಾಗವೇ ಈ ಘಟನೆ: ವಿಪಕ್ಷ ನಾಯಕ

    ಕೋಲಾರ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳಿಗೆ ಕಿರುಕುಳ ನೀಡಿ, ಮಕ್ಕಳಿಂದ ಮಲದ ಗುಂಡಿ ಕ್ಲೀನ್ (Septic Tank​) ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಕೇಂದ್ರ ಸಚಿವ ಎ.ನಾರಾಯಣಸ್ವಾಮಿ (A.Narayanaswmy), ಸಂಸದ ಮುನಿಸ್ವಾಮಿ (Muniswamy), ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್‌ (Byrathi Suresh), ಶಾಸಕ ಕೆ.ವೈ.ನಂಜೇಗೌಡ, ವಿಪಕ್ಷ ನಾಯಕ ಆರ್.ಅಶೋಕ್‌ (R.Ashok) ಅವರು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಕೋಲಾರದಲ್ಲಿ ವಸತಿ ಶಾಲೆ ಕರ್ಮಕಾಂಡ – ನಾಲ್ವರ ವಿರುದ್ಧ FIR, ಪ್ರಾಂಶುಪಾಲೆ ಸೇರಿ ಇಬ್ಬರು ಅರೆಸ್ಟ್

    ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಮಾತನಾಡಿ, ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವ ವಿಷಯವೇ ಇಲ್ಲ. ಈಗಾಗಲೇ ನಾಲ್ಕು ಜನರ ಮೇಲೆ ಎಫ್​ಐಆರ್​ ಮಾಡಲಾಗಿದೆ. ಇಬ್ಬರನ್ನು ಬಂಧಿಸಿದ್ದು, ಉಳಿದವರನ್ನು ಬಂಧಿಸುತ್ತೇವೆ. ಇದು ಹಣ ಹಂಚಿಕೊಳ್ಳುವ ವಿಚಾರಕ್ಕೆ ನಡೆದಿರುವ ಗಲಾಟೆ. ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ಎರಡು ಗುಂಪುಗಳಾಗಿದ್ದು, ಅದಾದ ನಂತರ ಇಷ್ಟೆಲ್ಲಾ ಘಟನೆ ನಡೆದಿದೆ. ಒಂದು ತಿಂಗಳ ಹಿಂದಷ್ಟೇ ವಸತಿ ಶಾಲೆಯ ನಿರ್ವಹಣೆಗೆಂದು 25 ಸಾವಿರ ರೂ. ಹಣ ಬಿಡುಗಡೆ ಮಾಡಲಾಗಿತ್ತು. ಆ ಹಣವನ್ನು ಹಂಚಿಕೊಳ್ಳುವ ವಿಚಾರದಲ್ಲೂ ಗಲಾಟೆ ಮಾಡಿಕೊಂಡಿದ್ದಾರೆ. ದುಡ್ಡು ಕೊಟ್ಟು ಕ್ಲೀನ್​ ಮಾಡಿಸೋದೇಕೆ ಅಂತಾ ಮಕ್ಕಳ ಕೈಯಿಂದ ಕ್ಲೀನ್​ ಮಾಡಿಸಿದ್ದಾರೆ. ಇಲ್ಲೂ ಹಣ ಹೊಡೆಯುವ ಕಮಿಷನ್​ ದಂಧೆ, ಮಕ್ಕಳಿಂದ ಇಂಥ ಹೇಯ ಕೃತ್ಯ ಮಾಡಿಸಿರುವವರ ವಿರುದ್ದ ನಾವು ತೆಗೆದುಕೊಳ್ಳುವ ಕ್ರಮ ಇಡೀ ರಾಜ್ಯಕ್ಕೆ ಮಾದರಿಯಾಗುತ್ತದೆ ಎಂದು ತಿಳಿಸಿದರು.

    ವಿಪಕ್ಷ ನಾಯಕ ಆರ್​.ಅಶೋಕ್​ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್, ಛಲವಾಧಿ ನಾರಾಯಣಸ್ವಾಮಿ, ಭಾರತಿಶೆಟ್ಟಿ ಹಾಗೂ ತೇಜಸ್ವಿನಿ ರಮೇಶ್​ ಸೇರಿದಂತೆ ಬಿಜೆಪಿ ನಾಯಕರು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಆರ್‌.ಅಶೋಕ್‌, ರಾಜ್ಯ ಸರ್ಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿ ಈ ಘಟನೆ. ರಾಜ್ಯ ಸರ್ಕಾರದಲ್ಲಿ ಕಮಿಷನ್​ ದಂಧೆ ನಡೆಯುತ್ತಿದೆ ಎಂದು ನಾವು ಮೊದಲಿನಿಂದಲೂ ಹೇಳಿಕೊಂಡು ಬರುತ್ತಿದ್ದೇವೆ. ಕಮಿಷನ್​ ದಂಧೆಯ ಒಂದು ಭಾಗವೇ ಈ ಘಟನೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛತೆ – ಕೋಲಾರದ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಅಮಾನವೀಯ ಘಟನೆ

    ಘಟನೆ ಏನು?
    ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛತೆ​ ಮಾಡಿಸಿರುವ ವೀಡಿಯೋ ವೈರಲ್‌ ಆಗಿತ್ತು. ಈ ಹಿನ್ನೆಲೆ ಸಮಾಜ ಕಲ್ಯಾಣ ಸಚಿವರು, ಶಾಲೆಯ ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕರಾದ ಮುನಿಯಪ್ಪ, ಅಭಿಷೇಕ್​ ಹಾಗೂ ವಾರ್ಡನ್​ ಮಂಜುನಾಥ್ ಅವರನ್ನು ಅಮಾನತು ಮಾಡಲು ಸೂಚಿಸಿದ್ದರು. ಅಲ್ಲದೇ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲಾಗಿತ್ತು. ನಂತರ ಪ್ರಾಂಶುಪಾಲೆ ಭಾರತಮ್ಮ ಮತ್ತು ಮುನಿಯಪ್ಪರನ್ನು ಬಂಧಿಸಲಾಗಿದೆ. ಉಳಿದವರು ತಲೆಮರೆಸಿಕೊಂಡಿದ್ದು, ಅವರಿಗಾಗಿ ಮಾಸ್ತಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.