Tag: r ashok

  • ರೈಲ್ವೆ ಯೋಜನೆಗಳಿಗೆ ಹಣ ಕೊಡದ ರಾಜ್ಯ ಸರ್ಕಾರ – ಬಿಜೆಪಿ ನಾಯಕರಿಂದ ತೀವ್ರ ಟೀಕೆ

    ರೈಲ್ವೆ ಯೋಜನೆಗಳಿಗೆ ಹಣ ಕೊಡದ ರಾಜ್ಯ ಸರ್ಕಾರ – ಬಿಜೆಪಿ ನಾಯಕರಿಂದ ತೀವ್ರ ಟೀಕೆ

    ಬೆಂಗಳೂರು: ಮೈಸೂರು (Mysuru) – ಕುಶಾಲನಗರ, ಬೆಂಗಳೂರು (Bengaluru) – ಸತ್ಯಮಂಗಲ ರೈಲು ಯೋಜನೆಗಳಿಗೆ ರಾಜ್ಯ ಸರ್ಕಾರ ಹಣಕಾಸು ಮುಗ್ಗಟ್ಟು ಕಾರಣದಿಂದ ರೆಡ್ ಸಿಗ್ನಲ್ ಕೊಟ್ಟಿದೆ. ಸರ್ಕಾರದ ನಡೆಗೆ ವಿಪಕ್ಷ ನಾಯಕರು ತೀವ್ರವಾಗಿ ಟೀಕಿಸಿದ್ದಾರೆ.

     

    ಈ ಸಂಬಂಧ ಎಕ್ಸ್‌ನಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಕಿಡಿಕಾರಿದ್ದು, ಸಿಕ್ಕಸಿಕ್ಕವರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ಕೊಟ್ಟು ಮೆರೆಸಲು ದುಡ್ಡಿದೆ, ಅತೃಪ್ತ ಶಾಸಕರಿಗೆ ಗೂಟದ ಕಾರು ಗ್ಯಾರೆಂಟಿ ನೀಡುವ ಸಮಿತಿ ರಚಿಸಲು ದುಡ್ಡಿದೆ, ಶಾಸಕರಿಗೆ, ಮಂತ್ರಿಗಳಿಗೆ ಕೋಟಿಗಟ್ಟಲೆ ಬೆಲೆಬಾಳುವ ಐಷಾರಾಮಿ ಕಾರು ಖರೀದಿ ಮಾಡಲು ದುಡ್ಡಿದೆ, ಅಲ್ಪಸಂಖ್ಯಾತರಿಗೆ 10,000 ಕೋಟಿ ರೂಪಾಯಿ ನೀಡಲು ದುಡ್ಡಿದೆ, ಹತ್ತಾರು ಕೋಟಿ ದುಂದುವೆಚ್ಚ ಮಾಡಿ ಸಾಧನಾ ಸಮಾವೇಶ ನಡೆಸಲು ದುಡ್ಡಿದೆ, ಆದರೆ ರೈಲ್ವೆ ಯೋಜನೆಗಳಿಗೆ ದುಡ್ಡಿಲ್ಲ. ಈ ಸರ್ಕಾರ ತೊಲಗುವವರೆಗೂ ಕರ್ನಾಟಕದ ಪ್ರಗತಿ ಸಾಧ್ಯವೇ ಇಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಕುರುಬ ಸಮುದಾಯದ ನಾಯಕರ ಸಭೆ; ವಿಜಯೇಂದ್ರ‌ ಪರ ಬ್ಯಾಟಿಂಗ್ – ಈಶ್ವರಪ್ಪ ಘರ್ ವಾಪ್ಸಿ ಬಗ್ಗೆ ಚರ್ಚೆ

    ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (B.Y Vijayendra) ಸಹ ಎಕ್ಸ್‌ನಲ್ಲಿ ಪೋಸ್ಟ್‌, ಹಂಚಿಕೆ ಸೂತ್ರದ ಅನ್ವಯ ರಾಜ್ಯದ ಪಾಲಿನ ವೆಚ್ಚವನ್ನು ಭರಿಸಲು ಸಾಧ್ಯವಾಗದೆ ಈ ಯೋಜನೆಗಳಿಗೆ ‌’ಹಣ ಹೊಂದಿಸಲು ಸಾಧ್ಯವಿಲ್ಲ’ ಎಂದು ರಾಜ್ಯ ಸರ್ಕಾರ ಕೈ ಚೆಲ್ಲಿದೆ. ರೈಲ್ವೆ ಯೋಜನೆಗಳನ್ನು ಹಳ್ಳ ಹಿಡಿಯುವಂತೆ ಮಾಡಿದೆ. ಕಾಂಗ್ರೆಸ್ ಆಡಳಿತ ಕರ್ನಾಟಕ ರಾಜ್ಯಕ್ಕೆ ಶಾಪವಾಗಿ ಪರಿಣಮಿಸಿದೆ. ಅಧಿಕಾರದಲ್ಲಿ ಉಳಿಯುವುದೊಂದೇ ತಮ್ಮ ಧ್ಯೇಯ ಎಂಬಂತೆ ಭಂಡತನದಿಂದ ನಡೆದುಕೊಳ್ಳುತ್ತಿರುವ, ಪ್ರತಿ ಇಲಾಖೆಯಲ್ಲೂ ಲಂಚ ಹಾಗೂ ಕಮಿಷನ್ ದಂಧೆಗೆ ಕುಮ್ಮಕ್ಕು ನೀಡುತ್ತಿರುವ, ಅಭಿವೃದ್ಧಿಯ ಹಾದಿಯಲ್ಲಿ ತುಕ್ಕು ಹಿಡಿದು ಕುಳಿತಿರುವ ಈ ಸರ್ಕಾರವನ್ನು ಕಿತ್ತೊಗೆಯದಿದ್ದರೆ ಕರ್ನಾಟಕ ಅಭಿವೃದ್ಧಿ ಆಗಲ್ಲ ಅಂತ ಕಿಡಿಕಾರಿದ್ದಾರೆ. ಇದನ್ನೂ ಓದಿ: ಗೋ ರಕ್ಷಣೆ ಮಾಡಲು ಮುಂದಾಗಿದ್ದಕ್ಕೆ ಮರಕ್ಕೆ ಕಟ್ಟಿ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ

  • ಕಾವೇರಿ ಆರತಿ ವಿಷಯಕ್ಕೆ ಕಾನೂನು ಮೂಲಕವೇ ಉತ್ತರ: ಪೂಜೆ, ಪ್ರಾರ್ಥನೆಗೆ ಯಾರೂ ಅಡ್ಡಿ ಮಾಡುವುದಿಲ್ಲ: ಡಿಕೆಶಿ

    ಕಾವೇರಿ ಆರತಿ ವಿಷಯಕ್ಕೆ ಕಾನೂನು ಮೂಲಕವೇ ಉತ್ತರ: ಪೂಜೆ, ಪ್ರಾರ್ಥನೆಗೆ ಯಾರೂ ಅಡ್ಡಿ ಮಾಡುವುದಿಲ್ಲ: ಡಿಕೆಶಿ

    – ಅಶೋಕ್ ಬಳಿ ನಾನು ಹೋಗಿ ಭವಿಷ್ಯ ಕೇಳುವೆ: ಡಿಕೆಶಿ ವ್ಯಂಗ್ಯ

    ಬೆಂಗಳೂರು: ಕಾವೇರಿ ಆರತಿಗೆ (Cauvery Aarti) ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್‌ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿಳಿಸಿದರು.

    ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಉತ್ತರಿಸಿದರು. ಕಾವೇರಿ ಆರತಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೋಟೀಸ್ ಕೊಟ್ಟಿರುವ ಬಗ್ಗೆ ಕೇಳಿದಾಗ, ಪೂಜೆ, ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ಕೆಲವರಿಗೆ ಆತಂಕ ಇದೆ. ಆದನ್ನು ಸರ್ಕಾರ ನಿವಾರಣೆ ಮಾಡಲಿದೆ. ಆರತಿ ಮಾಡಲು ಯಾರೂ ಅನುಮತಿ ಕೇಳುತ್ತಿಲ್ಲ. ಅಲ್ಲಿ ಪ್ರತಿನಿತ್ಯ ಆರತಿ ನಡೆಯುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಮನ್ ಕಿ ಬಾತ್‌ನಲ್ಲಿ ಕಲಬುರಗಿ ರೊಟ್ಟಿಗೆ ಪ್ರಧಾನಿ ಮೋದಿ ಪ್ರಶಂಸೆ

    ಇನ್ನು ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ ಬದಲಾವಣೆ ಆಗಲಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ಗೆ (R Ashok) ಡಿಕೆಶಿ ಟಾಂಗ್ ಕೊಟ್ಟಿದ್ದಾರೆ. ಅಶೋಕ್ ಅವರು ಜ್ಯೋತಿಷ್ಯ ಹೇಳಲು ಆರಂಭಿಸಿದ್ದಾರಾ? ಅವರು ಜ್ಯೋತಿಷ್ಯ ಕಲಿತಿದ್ದರೆ ನನಗೂ ಸಮಯ ಕೊಡಿಸಿ. ನಾನು ಹೋಗಿ ಭವಿಷ್ಯ ಕೇಳುತ್ತೇನೆ ಎಂದು ಛೇಡಿಸಿದರು. ಇದನ್ನೂ ಓದಿ: Tumakuru | ಟೈಯರ್ ಬ್ಲಾಸ್ಟ್ ಆಗಿ ಮನೆಗೆ ನುಗ್ಗಿದ KSRTC ಬಸ್

    ಇನ್ನು ಸುರ್ಜೆವಾಲ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ಶಾಸಕರನ್ನು ಪ್ರತ್ಯೇಕವಾಗಿ ಭೇಟಿ ಮಾಡುವರೇ ಎಂಬ ಪ್ರಶ್ನೆಗೆ, ಹೌದು, ಅವರು ಶಾಸಕರ ಜೊತೆ ಖುದ್ದಾಗಿ ಭೇಟಿ ಮಾಡಲಿದ್ದಾರೆ. ಈ ಬಗ್ಗೆ ಅವರೇ ಶಾಸಕರಿಗೆ ತಿಳಿಸಿದ್ದಾರೆ. ನಾನು ಕೂಡ ಶಾಸಕರಿಗೆ ಮಾಹಿತಿ ನೀಡುತ್ತೇನೆ ಎಂದು ಉತ್ತರಿಸಿದರು. ಇದನ್ನೂ ಓದಿ: ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟುಹಬ್ಬ ಆಚರಣೆ – ಪಂಚಾಯತ್‌ ಸದಸ್ಯ ಅರೆಸ್ಟ್‌

  • ಈ ಬಾರಿ ದಸರಾ ಸಿದ್ದರಾಮಯ್ಯ ಅಲ್ಲ ನೂತನ ಸಿಎಂ ಮಾಡ್ತಾರೆ: ಆರ್. ಅಶೋಕ್ ಭವಿಷ್ಯ

    ಈ ಬಾರಿ ದಸರಾ ಸಿದ್ದರಾಮಯ್ಯ ಅಲ್ಲ ನೂತನ ಸಿಎಂ ಮಾಡ್ತಾರೆ: ಆರ್. ಅಶೋಕ್ ಭವಿಷ್ಯ

    ಮೈಸೂರು: ಈ ಬಾರಿ ದಸರಾ ಸಿದ್ದರಾಮಯ್ಯ ಅಲ್ಲ ನೂತನ ಸಿಎಂ ಮಾಡ್ತಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ.

    ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಸೆಪ್ಟೆಂಬರ್ ತಿಂಗಳಲ್ಲಿ ಕಾಂಗ್ರೆಸ್‍ನಲ್ಲಿ ಬದಲಾವಣೆ ಆಗುವ ವದಂತಿ ಬಗ್ಗೆ ಪ್ರತಿಕ್ರಿಯಿಸಿದರು. ಈ ವೇಳೆ, ಸಿಎಂ ಬದಲಾವಣೆ ನಿಶ್ಚಿತವಾಗಿದೆ. ಶಾಸಕರು ಸಚಿವರು ಈಗ ಅದನ್ನೇ ಹೇಳುತ್ತಿದ್ದಾರೆ. ಅಧಿಕಾರ ಹಸ್ತಾಂತರ ಮೊದಲೇ ನಿಶ್ಚಯವಾಗಿದೆ. ಆದರೂ ಸಿದ್ದರಾಮಯ್ಯ, ಏನೂ ಆಗಿಲ್ಲ ಅನ್ನೋ ರೀತಿ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Mysuru Dasara | ಸೆ.22ರಿಂದ 11 ದಿನಗಳ ಕಾಲ ವಿಜೃಂಭಣೆಯ ದಸರಾ

    ಕಾಂಗ್ರೆಸ್‍ನಲ್ಲಿ ಅಧಿಕಾರದ ಕಿತ್ತಾಟ ತಾರಕಕ್ಕೆ ಏರಿದೆ. ಈ ಭ್ರಷ್ಟ ಸರ್ಕಾರ ಯಾವಾಗ ಕಿತ್ತು ಹೋಗುತ್ತದೆ ಎಂದು ಜನ ಕಾಯುತ್ತಿದ್ದಾರೆ. ಸಿದ್ದರಾಮಯ್ಯ ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

    ಕಾಂಗ್ರೆಸ್ ತುರ್ತು ಪರಿಸ್ಥಿತಿ ಬಗ್ಗೆ ತನ್ನ ನಿಲುವು ಸ್ಪಷ್ಟಪಡಿಸಬೇಕು. ತುರ್ತು ಪರಿಸ್ಥಿತಿ ಸರಿ ಎನ್ನುವುದು ಕಾಂಗ್ರೆಸ್ ಮನಸ್ಥಿತಿ ಎನ್ನುವುದಾದರೆ ಅದನ್ನ ಬಹಿರಂಗವಾಗಿ ಹೇಳಲಿ. ಮಲ್ಲಿಕಾರ್ಜುನ ಖರ್ಗೆ ಅವ್ರು ಇದು ಅಘೋಷಿತ ತುರ್ತು ಪರಿಸ್ಥಿತಿ ಎಂದು ಹೇಳಿದ್ದಾರೆ. ಯಾವುದು ಅಘೋಷಿತ ತುರ್ತು ಪರಿಸ್ಥಿತಿ ಮಲ್ಲಿಕಾರ್ಜುನ ಖರ್ಗೆಯವರೇ? ನಿಮಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕೊಟ್ಟಿಲ್ಲವಾ? ಭಾರತದ ಬಗ್ಗೆ ಅಮೇರಿಕಕ್ಕೆ ಹೋಗಿ ಮಾತನಾಡಲು ಅವಕಾಶ ಕೊಟ್ಟಿಲ್ಲವಾ? ನಿಮಗೆ ಯಾವುದಕ್ಕೆ ನಿಬರ್ಂಧ ಇದೆ ಹೇಳಿ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್‌ರಿಂದ ಈ ಬಾರಿ ದಸರಾ ಉದ್ಘಾಟನೆ?

  • ರಾಜ್ಯಾಧ್ಯಕ್ಷರ ಬದಲಿಸುವ ಪ್ರಸ್ತಾಪ ದೆಹಲಿಯಲ್ಲಿ ಕೇಳಿ ಬಂದಿಲ್ಲ: ಆರ್.ಅಶೋಕ್

    ರಾಜ್ಯಾಧ್ಯಕ್ಷರ ಬದಲಿಸುವ ಪ್ರಸ್ತಾಪ ದೆಹಲಿಯಲ್ಲಿ ಕೇಳಿ ಬಂದಿಲ್ಲ: ಆರ್.ಅಶೋಕ್

    ನವದೆಹಲಿ: ಬಿಜೆಪಿ (BJP) ರಾಜ್ಯಾಧ್ಯಕ್ಷರ ನೇಮಿಸುವ ಬಗ್ಗೆ ದೆಹಲಿಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಬೇರೆ ರಾಜ್ಯಗಳ ಅಧ್ಯಕ್ಷರ ನೇಮಕದ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಕರ್ನಾಟಕದ ಬಗ್ಗೆ ಈವರೆಗೂ ಪ್ರಸ್ತಾಪ ಕೇಳಿ ಬಂದಿಲ್ಲ. ಈ ಬಗ್ಗೆ ಚರ್ಚಿಸಲು ನಾನು ದೆಹಲಿಗೆ ಬಂದಿಲ್ಲ, ನಾನು ಆ ರೇಸ್‌ನಲ್ಲಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R Ashok) ಹೇಳಿದ್ದಾರೆ.

    ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿರುವ ಆರ್.ಅಶೋಕ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ರಾಜ್ಯಾಧ್ಯಕ್ಷ ಬದಲಾವಣೆ ಚರ್ಚೆ ಬೆನ್ನಲ್ಲೇ ಹೀಗೆ ಭೇಟಿಯಾಗಿರುವುದು ಕುತೂಹಲ ಮೂಡಿಸಿತ್ತು.ಇದನ್ನೂ ಓದಿ: ಇರಾನ್‌ನ ಪರಮಾಣು ಯೋಜನೆಗೆ 30 ಶತಕೋಟಿ ಡಾಲರ್‌ ನೆರವು ಪ್ರಸ್ತಾಪಿಸಿದ ಅಮೆರಿಕ

    ವರಿಷ್ಠರ ಭೇಟಿ ಬಳಿಕ ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯಾಧ್ಯಕ್ಷರ ಬಗ್ಗೆ ಚರ್ಚೆ ನಡೆದಿಲ್ಲ. ಆ ಬಗ್ಗೆ ಚರ್ಚಿಸಲು ನಾನು ಬಂದಿಲ್ಲ. ಪ್ರತಿ ಮೂರು ತಿಂಗಳಿಗೊಮ್ಮೆ ಬಂದು ರಾಜ್ಯದಲ್ಲಿ ನಡೆಯುವ ಬೆಳವಣಿಗೆ ಬಗ್ಗೆ ಮಾಹಿತಿ ನೀಡಲು ಸೂಚಿಸಿದ್ದರು. ಅದರಂತೆ ನಾನು ಮಾಹಿತಿ ನೀಡಲು ಬಂದಿದ್ದೇನೆ ಎಂದರು.

    ನಮ್ಮ ವರಿಷ್ಠರ ಜೊತೆಗೆ ಸುಧೀರ್ಘ ಮಾತುಕತೆ ನಡೆಸಿದ್ದೇನೆ. ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಗೊಂದಲ, ಶಾಸಕರ ಹೇಳಿಕೆಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ನಾವು ಹೋರಾಟ ಮಾಡುತ್ತಿದ್ದೇವೆ, ನಮ್ಮ ಹೋರಾಟದಿಂದ ಸಚಿವರೊಬ್ಬರು ರಾಜೀನಾಮೆ ನೀಡಿದರು. ಸಿಎಂ ಸಿದ್ದರಾಮಯ್ಯ ಸೈಟ್ ವಾಪಸ್ ನೀಡಿದರು. ಸರ್ಕಾರದ ವಿರುದ್ಧ ಹೋರಾಟ ಮಾಡಲು ನಮಗೆ ಮಾರ್ಗದರ್ಶನ ಮಾಡುತ್ತಾರೆ, ಹೋರಾಟದಲ್ಲಿ ಹಿಂದೆ ಉಳಿಯುವ ಪ್ರಶ್ನೆಯೇ ಇಲ್ಲ ಎಂದರು.

    ದೆಹಲಿಗೆ ಬಂದು ರಾಜ್ಯಾಧ್ಯಕ್ಷರ ಬಗ್ಗೆ ಚರ್ಚಿಸುವ ಅಗತ್ಯ ಇಲ್ಲ. ಬೆಂಗಳೂರಿಗೆ ಬಂದಾಗಲೇ ಅಮಿತ್ ಶಾ ಅವರ ಜೊತೆಗೆ ಸುದೀರ್ಘವಾಗಿ ಮಾತುಕತೆ ನಡೆಸಿದ್ದೇನೆ. ಕಾಂಗ್ರೆಸ್ ಸರ್ಕಾರ ನಿರ್ಗಮಿತ ಸರ್ಕಾರ, ಸರ್ಕಾರದ ವಿರುದ್ಧ ಅವರ ಶಾಸಕರೇ ಮಾತನಾಡುತ್ತಿದ್ದಾರೆ. ಶಾಸಕರು ರೆಬಲ್ ಆದರೆ, ಸರ್ಕಾರದ ಅವಧಿ ಮುಗಿತು ಎಂದರ್ಥ. ಮುಂದಿನ ಬಾರಿ ಈ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ ಎಂದು ಭವಿಷ್ಯ ನುಡಿದರು.ಇದನ್ನೂ ಓದಿ: ಮಾದಕ ಲುಕ್‌ನಲ್ಲಿ ಸಪ್ತಮಿ ಶೈನ್‌ – ಅದೆಷ್ಟು ಅಂತ ನಮ್ಮ ಎದೆಗೆ ಕೊಳ್ಳಿ ಇಡ್ತೀರಿ ಅಂದ್ರು ಪಡ್ಡೆ ಹೈಕ್ಳು

  • ಹುಲಿಗಳ ಸಾವು ಪ್ರಕರಣ | ಗಂಧದಗುಡಿಯನ್ನ ಕಸಾಯಿಖಾನೆ ಮಾಡುತ್ತಿದೆ ಕಾಂಗ್ರೆಸ್ ಸರ್ಕಾರ – ಆರ್‌. ಅಶೋಕ್‌

    ಹುಲಿಗಳ ಸಾವು ಪ್ರಕರಣ | ಗಂಧದಗುಡಿಯನ್ನ ಕಸಾಯಿಖಾನೆ ಮಾಡುತ್ತಿದೆ ಕಾಂಗ್ರೆಸ್ ಸರ್ಕಾರ – ಆರ್‌. ಅಶೋಕ್‌

    ಬೆಂಗಳೂರು: ಗಂಧದಗುಡಿಯನ್ನ ಕಸಾಯಿಖಾನೆ ಮಾಡುತ್ತಿದೆ ಕಾಂಗ್ರೆಸ್ ಸರ್ಕಾರ (Congress Government) ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ (R. Ashoka) ತೀವ್ರ ವಾಗ್ದಾಳಿ ನಡೆಸಿದ್ದಾರೆ.

    ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಜ ಸಾವಿಗೀಡಾಗಿರುವ ಬಗ್ಗೆ ದುಃಖ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ (Eshwar Khandre), ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ. ಈ ಬೆನ್ನಲ್ಲೇ ಹುಲಿಗಳ ಸಾವಿನ ಪ್ರಕರಣ ಕುರಿತು ಆರ್‌. ಅಶೋಕ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಮಹದೇಶ್ವರ ಬೆಟ್ಟದಲ್ಲಿ 4 ಹುಲಿಗಳ ಅಸಹಜ ಸಾವು – ತನಿಖೆಗೆ ಈಶ್ವರ ಖಂಡ್ರೆ ಆದೇಶ

    ಸಾಂದರ್ಭಿಕ ಚಿತ್ರ

    ಅಶೋಕ್‌ ಎಕ್ಸ್‌ನಲ್ಲಿ ಏನಿದೆ?
    ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀನ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟಿರುವ ವಿಷಯ ಅತ್ಯಂತ ಆಘಾತಕಾರಿ. ವನ್ಯಜೀವಿ ಸಂರಕ್ಷಣಾ ಕ್ಷೇತ್ರದಲ್ಲಿ ಇಡೀ ದೇಶದಲ್ಲಿ ತನ್ನದೇ ಆದ ಹೆಸರು ಮಾಡಿರುವ ಕರ್ನಾಟಕದಲ್ಲಿ ಇಂತಹ ಘಟನೆ ನಡೆದಿರುವುದು ರಾಜ್ಯಕ್ಕೆ ಕಳಂಕ ತಂದಿದೆ. ಇದನ್ನೂ ಓದಿ: ಬೀಡಾಡಿ ಬೆಕ್ಕಿಗೊಂದು ಸುಂದರ ಮನೆ – ಮಂಗಳೂರಿನ ಮಾಲ್‌ಗೆ ಬರೋರ ಕಣ್ಮಣಿಯಾದ ವೈಟ್ ಕ್ಯಾಟ್

    ಮಲೆ ಮಹದೇಶ್ವರ ಕಾಡು ಹುಲಿ ಸಂತತಿ (Tiger offspring) ಹೆಚ್ಚಳಕ್ಕೆ ಬೇಕಾದ ಎಲ್ಲಾ ಅಗತ್ಯ ವಾತಾವರಣವನ್ನು ಹೊಂದಿದೆ. ಆದರೆ ಅರಣ್ಯ ಇಲಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ಭ್ರಷ್ಟಾಚಾರ ನಮ್ಮ ವನ್ಯ ಸಂಪತ್ತನ್ನು ಹಾಳು ಮಾಡುತ್ತಿದೆ. ಪರಿಸ್ಥಿತಿ ಹೀಗೇ ಮುಂದುವರೆದರೆ, ಸರ್ಕಾರ ಅರಣ್ಯ ಇಲಾಖೆಯಲ್ಲಿ ಆಡಳಿತ ಬಿಗಿಗೊಳಿಸದಿದ್ದರೆ ಇಡೀ ಅರಣ್ಯವೇ ಸರ್ವನಾಶ ಆಗುವ ಅಪಾಯವಿದೆ. ಇದನ್ನೂ ಓದಿ: Ramanagara | ಅಡುಗೆ ವಿಚಾರಕ್ಕೆ ಪತಿ-ಪತ್ನಿಯ ನಡುವೆ ಗಲಾಟೆ – ಕೊಲೆಯಲ್ಲಿ ಅಂತ್ಯ

    ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶಿಸಬೇಕು, ತಪ್ಪಿತಸ್ಥರಿಗೆ ಮುಲಾಜಿಲ್ಲದೆ ಶಿಕ್ಷೆ ಆಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮ್ಯಾನೇಜರ್‌ನಿಂದಲೇ ಬ್ಯಾಂಕ್ ದರೋಡೆಗೆ ಸ್ಕೆಚ್ – 10.5 ಕೋಟಿ ಮೌಲ್ಯದ ಚಿನ್ನ ಕದ್ದಿದ್ದ ಮೂವರು ಅರೆಸ್ಟ್

  • ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಸರ್ಕಾರದ ತನಿಖೆ ಮೇಲೆ ಯಾರಿಗೂ ನಂಬಿಕೆ ಇಲ್ಲ: ಅಶೋಕ್

    ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಸರ್ಕಾರದ ತನಿಖೆ ಮೇಲೆ ಯಾರಿಗೂ ನಂಬಿಕೆ ಇಲ್ಲ: ಅಶೋಕ್

    – ಸರ್ಕಾರದ ತಪ್ಪಿಲ್ಲದಿದ್ರೆ 3 ದಿನದ ಅಧಿವೇಶನ ಕರೆಯಲಿ

    ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಲ್ಲಿ (Chinnaswamy Stampede) ಹೈಕೋರ್ಟ್ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ ಎಂದರೆ, ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ವಾಗ್ದಾಳಿ ನಡೆಸಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರ ತಪ್ಪು ಮಾಡಿಲ್ಲದಿದ್ದರೆ ಸರಿಯಾಗಿ ತನಿಖೆ ನಡೆಸಬೇಕಿತ್ತು. ಈಗ ಹೈಕೋರ್ಟ್ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ. ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದರೆ, ಕೋರ್ಟ್ ಸರ್ಕಾರವನ್ನು ನಂಬುತ್ತಿಲ್ಲ ಎಂದರ್ಥ. ಸತ್ತಿರುವ 11 ಜನರ ಕುಟುಂಬದವರನ್ನೇ ಕೇಳಿ ತನಿಖೆಗೆ ನೀಡಬಹುದಿತ್ತು. ಮೊದಲು ಜಿಲ್ಲಾಧಿಕಾರಿ, ಆ ನಂತರ ನಿವೃತ್ತ ನ್ಯಾಯಾಧೀಶರು, ಆ ಬಳಿಕ ಎಸ್‌ಐಟಿ ತನಿಖೆ ಎಂದು ಹೇಳಿದ್ದಾರೆ. ಯಾವುದರಲ್ಲೂ ಖಚಿತತೆ ಇಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಟ್ರಂಪ್‌ ಹೆಸರಿನಲ್ಲಿ ಫೋನ್‌ – ಮೊಬೈಲ್‌ ಉದ್ಯಮಕ್ಕೆ ಕಾಲಿಟ್ಟ ಟ್ರಂಪ್‌ | ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

    ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಕುಟುಂಬದವರು ಕ್ರಿಕೆಟಿಗರ ಜೊತೆಗೆ ಫೋಟೋಶೂಟ್ ಮಾಡಿಕೊಂಡಿದ್ದರಿಂದಲೇ 11 ಜನರು ಮೃತರಾಗಿದ್ದಾರೆ. ಬಿಜೆಪಿ ಎಲ್ಲಾ ಬಗೆಯ ಹೋರಾಟಗಳನ್ನು ಮಾಡಿದೆ. ಇನ್ನು ಮುಂದೆಯೂ ಹೋರಾಟ ಮಾಡಲಾಗುವುದು. ಸರ್ಕಾರವೇ ಜನರನ್ನು ವಿಧಾನಸೌಧಕ್ಕೆ ಆಹ್ವಾನಿಸಿದೆ. ಹಾಗೆ ಆಹ್ವಾನ ನೀಡದೇ ಹೋಗಿದ್ದರೆ ಈ ದುರಂತ ನಡೆಯುತ್ತಿರಲಿಲ್ಲ. ನಾವು ಪ್ರತಿಭಟನೆ ಮಾಡಿದಾಗ ನೂರಾರು ಪೊಲೀಸರು ಬಂದಿದ್ದರು. ಅದೇ ರೀತಿ 2 ಲಕ್ಷ ಜನರನ್ನು ನಿಯಂತ್ರಣ ಮಾಡಲು ಹೆಚ್ಚು ಪೊಲೀಸರನ್ನು ನಿಯೋಜಿಸಬೇಕಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ರಚಿತಾ ರಾಮ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ : ನಿರ್ದೇಶಕ ನಾಗಶೇಖರ್ ಒತ್ತಾಯ

    ಇದಕ್ಕಾಗಿಯೇ 3 ದಿನದ ಅಧಿವೇಶನ ಕರೆಯಲು ಆಗ್ರಹಿಸಿದ್ದೇನೆ. ಸರ್ಕಾರದ ತಪ್ಪಿಲ್ಲ ಎಂದಾದರೆ ಯಾರ ತಪ್ಪು ಎಂದು ಸರಿಯಾಗಿ ತಿಳಿಸಲಿ. ಅಕ್ಟೋಬರ್ ತಿಂಗಳಲ್ಲೇ ಈ ಸರ್ಕಾರದ ಕಥೆ ಮುಗಿಯಲಿದೆ. ಎಲ್ಲಾ ಶಾಸಕರು ನಾವೇ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಇನ್ನು 2028ಕ್ಕೆ ಇವರು ಅಧಿಕಾರಕ್ಕೆ ಬರಲು ಹೇಗೆ ಸಾಧ್ಯ? ಡಿ.ಕೆ ಶಿವಕುಮಾರ್ (D K Shivakumar) ಬಹಳ ಚಿಂತೆಯಲ್ಲಿದ್ದಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ:

  • ಚಿನ್ನಸ್ವಾಮಿ ಕಾಲ್ತುಳಿತ ದುರಂತ; ತುರ್ತು ಅಧಿವೇಶನ ಕರೆಯಲು ಅಶೋಕ್ ಆಗ್ರಹ

    ಚಿನ್ನಸ್ವಾಮಿ ಕಾಲ್ತುಳಿತ ದುರಂತ; ತುರ್ತು ಅಧಿವೇಶನ ಕರೆಯಲು ಅಶೋಕ್ ಆಗ್ರಹ

    – ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ಅಧಿವೇಶದಲ್ಲಿ ಚರ್ಚೆ

    ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

    ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಆರ್. ಅಶೋಕ್ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಈ ದುರ್ಘಟನೆಯು ಸಾರ್ವಜನಿಕ ಸುರಕ್ಷತೆ, ಗುಂಪು ನಿಯಂತ್ರಣ, ಕ್ರೀಡಾ ಹಾಗೂ ಇತರೇ ಕಾರ್ಯಕ್ರಮಗಳ ಆಯೋಜನೆಗೆ ಸಂಬಂಧಿಸಿದಂತೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಈ ದುರಂತ ಜನರಲ್ಲಿ ಆತಂಕ ಮತ್ತು ಕಳವಳ ಉಂಟುಮಾಡಿದೆ ಎಂದಿದ್ದಾರೆ. ಇದನ್ನೂ ಓದಿ: ಪುಣೆಯ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಕುಸಿದು ಕನಿಷ್ಠ 20 ಮಂದಿ ನೀರುಪಾಲು

    ಸತ್ಯ ಮರೆಮಾಚಲು 3 ರೀತಿಯ ತನಿಖೆ
    ಘಟನೆಗೆ ಸಂಬಂಧಿಸಿದಂತೆ ಆಡಳಿತದಲ್ಲಿ ಆಗಿರುವ ಲೋಪಗಳು, ಘಟನೆ ನಂತರ ಸರ್ಕಾರದ ಕ್ರಮಗಳು ಅನೇಕ ಸಂಶಯಗಳನ್ನು ಹುಟ್ಟುಹಾಕಿದೆ. ಕಾಲ್ತುಳಿತಕ್ಕೆ ಕಾರಣರಾದ ಬಲಾಢ್ಯರನ್ನು ರಕ್ಷಿಸಲಾಗುತ್ತಿದೆ. ಸತ್ಯವನ್ನು ಮರೆಮಾಚಲು 3 ರೀತಿಯ ತನಿಖೆಗಳನ್ನು ಮಾಡಲಾಗುತ್ತಿದೆ. ಅಸಹಾಯಕ ಅಧಿಕಾರಿಗಳನ್ನು ಬಲಿಪಶು ಮಾಡಲಾಗಿದೆ ಎಂಬ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ನಡೆಯುತ್ತಿವೆ ಎಂದು ದೂರಿದ್ದಾರೆ. ಇದನ್ನೂ ಓದಿ: ಕಾಂತಾರ ಶೂಟಿಂಗ್‌ – ಯಾವುದೇ ಅವಘಡ ಸಂಭವಿಸಿಲ್ಲ: ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

    ಭವಿಷ್ಯದಲ್ಲಿ ಇಂತಹ ದುರ್ಘಟನೆಯನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರ ಚರ್ಚೆಯ ಅಗತ್ಯವಿದೆ. ಇದಕ್ಕಾಗಿ ಮೂರು ದಿನಗಳ ತುರ್ತು ಅಧಿವೇಶನ ಕರೆಯಬೇಕಿದೆ. ಕಾಲ್ತುಳಿತ ಘಟನೆಗೆ ಕಾರಣವಾದ ಸಂದರ್ಭಗಳ ಸಂಪೂರ್ಣ ತನಿಖೆ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಗುಂಪು ನಿಯಂತ್ರಣ ಮತ್ತು ಸುರಕ್ಷತಾ ಕ್ರಮಗಳ ಬಲವರ್ಧನೆ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಸಂತ್ರಸ್ತ ಕುಟುಂಬಗಳಿಗೆ ಪರಿಹಾರದ ವ್ಯವಸ್ಥೆ, ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಅಧಿವೇಶನದಲ್ಲಿ ಚರ್ಚಿಸಬೇಕಿದೆ ಎಂದು ಎಂದಿದ್ದಾರೆ. ಇದನ್ನೂ ಓದಿ: ನಮ್ಮ ತಂಟೆಗೆ ಬಂದ್ರೆ ಹಿಂದೆಂದೂ ನೋಡಿರದ ಮಿಲಿಟರಿ ಬಲವನ್ನು ಎದುರಿಸಬೇಕಾಗುತ್ತೆ – ಇರಾನ್‌ಗೆ ಟ್ರಂಪ್‌ ಬಿಗ್‌ ವಾರ್ನಿಂಗ್‌

    ಈ ತುರ್ತು ಅಧಿವೇಶನವು ರಾಜ್ಯ ಸರ್ಕಾರ ಬದ್ಧತೆಯನ್ನು ಜನರಿಗೆ ತೋರಿಸಲು ಮತ್ತು ದುರಂತದಿಂದ ಕಲಿತ ಪಾಠಗಳ ಆಧಾರದಲ್ಲಿ ಭವಿಷ್ಯದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸಹಾಯಕವಾಗಲಿದೆ. ಹಾಗೆಯೇ ಘಟನೆಗೆ ಕಾರಣಗಳೇನು ಎಂಬುದನ್ನು ಜನತೆಗೆ ತಿಳಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಿದೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

  • ಸಿಎಂಗೆ ಮಾನಸಿಕ ಸ್ಥಿತಿ ಸರಿ ಇಲ್ಲ: ಅಶೋಕ್

    ಸಿಎಂಗೆ ಮಾನಸಿಕ ಸ್ಥಿತಿ ಸರಿ ಇಲ್ಲ: ಅಶೋಕ್

    ಮೈಸೂರು: ಸಿಎಂಗೆ (CM Siddaramaiah) ಮಾನಸಿಕ ಸ್ಥಿತಿ ಸರಿ ಇಲ್ಲ, ಹೀಗಾಗಿ ಕಾಲ್ತುಳಿತ ಪ್ರಕರಣದಲ್ಲಿ (Chinnaswamy Stampede) ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ (R Ashok) ಕಿಡಿಕಾರಿದ್ದಾರೆ.

    ಮೋದಿ ಸರ್ಕಾರಕ್ಕೆ ಶೂನ್ಯ ಅಂಕ ಕೊಟ್ಟ ಸಿಎಂ ಕುರಿತು ಮೈಸೂರಿನಲ್ಲಿ (Mysuru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇನ್ನೂ ಆರು ತಿಂಗಳಲ್ಲಿ ಅಧಿಕಾರದಿಂದ ಹೋಗುವ ಸಿದ್ದರಾಮಯ್ಯ ಕೊಡುವ ಮಾರ್ಕ್ಸ್ ಯಾರಿಗೆ ಬೇಕು. ಸಿದ್ದರಾಮಯ್ಯ ಅವರು ಔಟ್ ಗೋಯಿಂಗ್ ವ್ಯಕ್ತಿ, ಅವರ ಮಾತಿಗೆ ಬೆಲೆ ಇಲ್ಲ ಎಂದರು. ಇದನ್ನೂ ಓದಿ: ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯೇ ಇಲ್ಲ. ಗೃಹ ಸಚಿವರು ತಮ್ಮ ಗೃಹಕ್ಕೆ ಮಾತ್ರ ಸಚಿವರಾಗಿದ್ದಾರೆ. ಕೇಂದ್ರದಲ್ಲಿ 11 ವರ್ಷದಿಂದ ಪ್ರಧಾನಿ ನಾನು ಆಗುತ್ತೇನೆ ಎಂದು ಒಬ್ಬರಾದರೂ ಹೇಳಿದ್ದರಾ? ರಾಜ್ಯದಲ್ಲಿ ಎಷ್ಟು ಜನ ಸಿಎಂ ಆಗಲು ಕಾದು ಕೂತಿದ್ದಾರೆ. ಡಿಕೆ ಮಾಟಮಂತ್ರ ಎಲ್ಲಾ ಮಾಡಿಟ್ಟುಕೊಂಡು ಸಿಎಂ ಕುರ್ಚಿಗೆ ಟವೆಲ್ ಸುತ್ತಿದ್ದಾರೆ. ಪರಮೇಶ್ವರ್, ಎಂ.ಬಿ ಪಾಟೀಲ್ ಎಲ್ಲರೂ ಸಿಎಂ ಆಗಲು ಕಾದಿದ್ದಾರೆ. ಕರ್ನಾಟಕದಲ್ಲಿ ಸಿಎಂ ಪದವಿ ಖಾಲಿ ಆಗುತ್ತಿದೆ. ರಾಜ್ಯ ಸರ್ಕಾರ ನೆಗೆದು ಬಿದ್ದು ನೆಲ್ಲಿಕಾಯಿ ಆಗಲಿ. ರಾಜ್ಯದ ಜನ ಇದನ್ನು ಕಾಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಇಂದೋರ್| ಹಣಕ್ಕಾಗಿ ಅಜ್ಜಿಯನ್ನು ಕೊಂದು ಬೆಡ್‌ನ ಬಾಕ್ಸ್‌ನಲ್ಲಿ ಬಚ್ಚಿಟ್ಟ ಮೊಮ್ಮಗ

    ಆರ್‌ಸಿಬಿ ಕಾಲ್ತುಳಿತ ಪ್ರಕರಣ ಸಂಬಂಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರ ಪ್ರಕರಣ ಮುಚ್ಚಿ ಹಾಕಲು ಮುಂದಾಗಿತ್ತು. ಘಟನೆಯಲ್ಲಿ ಮಾನವ ಹಕ್ಕು ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದೇನೆ. ಖುದ್ದು ರಾಷ್ಟ್ರೀಯ ಮಾನವ ಆಯೋಗದ ಸದಸ್ಯರು ರಾಜ್ಯಕ್ಕೆ ಬರಬೇಕು. ಖುದ್ದು ಅವರೇ ಮಾನವ ಹಕ್ಕುಗಳು ಉಲ್ಲಂಘನೆಯಾಗಿರುವ ಪರಿಶೀಲನೆ ನಡೆಸಬೇಕು. ರಾಜ್ಯ ಸರ್ಕಾರ ಅಧಿಕಾರಿಗಳದ್ದೇ ತಪ್ಪು ಎಂದು ಬಿಂಬಿಸಲು ಹೊರಟಿದೆ. ನ್ಯಾಯಾಲಯಕ್ಕೆ ಅದನ್ನೇ ಹೇಳಲು ಹೊರಟಿದೆ. ಈ ಎಲ್ಲಾ ಕಾರಣಗಳಿಂದ ಪತ್ರ ಬರೆದಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಪಂಜಾಬ್ | ಸೋಷಿಯಲ್ ಮೀಡಿಯಾ ಸ್ಟಾರ್ ಕಾರಿನೊಳಗೆ ಶವವಾಗಿ ಪತ್ತೆ – ಕೊಲೆ ಶಂಕೆ

  • ಸಿಎಂ, ಡಿಸಿಎಂ ತಿಕ್ಕಾಟ ಇಲ್ಲದಿದ್ದರೆ ವಿದ್ಯಾರ್ಥಿಗಳು ಸಾಯುತ್ತಿರಲಿಲ್ಲ: ಅಶೋಕ್‌

    ಸಿಎಂ, ಡಿಸಿಎಂ ತಿಕ್ಕಾಟ ಇಲ್ಲದಿದ್ದರೆ ವಿದ್ಯಾರ್ಥಿಗಳು ಸಾಯುತ್ತಿರಲಿಲ್ಲ: ಅಶೋಕ್‌

    – ಸಂತ್ರಸ್ತ ಕುಟುಂಬಕ್ಕೆ ನಮ್ಮ 1 ತಿಂಗಳ ಸಂಬಳ
    – ವೇದಿಕೆಯಲ್ಲಿ 200 ಮಂದಿ, ಸರ್ಕಾರದಿಂದಲೇ ಕಾನೂನು ಉಲ್ಲಂಘನೆ

    ಬೆಂಗಳೂರು: ಕಾಲ್ತುಳಿತದ (Chinnaswamy Stampede) ಘಟನೆಗೆ ಮುನ್ನ ಪೊಲೀಸರು ನೀಡಿದ ಸೂಚನೆಗಳನ್ನು ಕಾಂಗ್ರೆಸ್ ಸರ್ಕಾರ (Congress Government) ಉಲ್ಲಂಘಿಸಿದೆ. ಈ ಮೂಲಕ ಸರ್ಕಾರವೇ ಕಾನೂನು ಮೀರಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರ ಶಕ್ತಿಗಳ ತಿಕ್ಕಾಟ ‌ಇಲ್ಲದಿದ್ದರೆ ವಿದ್ಯಾರ್ಥಿಗಳು ಸಾಯುತ್ತಿರಲಿಲ್ಲ. ಅವರ ಕುಟುಂಬದವರಿಗೆ ಸಾಂತ್ವನ ಹೇಳಬೇಕಿದ್ದವರು ಕಪ್‌ಗೆ ಮುತ್ತಿಡುತ್ತಿದ್ದರು. ಮಧ್ಯಾಹ್ನವೇ ಮೊದಲ ಸಾವಾದಾಗ ಪೊಲೀಸರು ಮಾಹಿತಿ ನೀಡಿದ್ದರು. ಕಾರ್ಯಕ್ರಮ ಆರಂಭವಾದಾಗಲೇ 8 ಮಕ್ಕಳು ಸತ್ತಿದ್ದರು. ಆ ನಂತರವೂ ಕಾರ್ಯಕ್ರಮ ಮಾಡುತ್ತಾರೆಂದರೆ ಇವರೆಲ್ಲರೂ ಕಟುಕ, ಕಲ್ಲಿನ ಹೃದಯದವರು ಎಂದು ದೂರಿದರು.

    ಕಾನೂನನ್ನು ಪೊಲೀಸ್ ಅಧಿಕಾರಿಗಳು ಜಾರಿ ಮಾಡುತ್ತಾರೆ. ಜೂನ್‌ 4 ರಂದು ವಿಧಾನಸೌಧದ ಪೊಲೀಸರು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಆತುರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಹಾಗೂ ಸಿಬ್ಬಂದಿ ಕೊರತೆ ಇರುವುದರಿಂದ ಬಂದೋಬಸ್ತ್ ಕರ್ತವ್ಯಕ್ಕೆ ತೊಂದರೆಯಾಗಲಿದೆ ಎಂದು ಪತ್ರದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್ ಆಗ ಕಾನೂನು ಪುಸ್ತಕ ತೋರಿಸಿದ್ದರು. ಈಗ ಸರ್ಕಾರವೇ ಕಾನೂನು ಉಲ್ಲಂಘಿಸಿದೆ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ | ಕತ್ತು, ಬೆನ್ನು ತುಳ್ಕೊಂಡು ಹೋಗ್ತಿದ್ರು, ಉಸಿರಾಡೋಕೂ ಆಗ್ತಿರಲಿಲ್ಲ – ಗಾಯಾಳು ಪ್ರಶಾಂತ್

     

    ಇಲಾಖೆಯ ಸಿಬ್ಬಂದಿ ಹಾಗೂ ಕುಟುಂಬದವರು ಬರಬಾರದು ಎಂದು ಕೂಡ ಪೊಲೀಸರು ಸೂಚಿಸಿದ್ದರು. ಆದರೆ ಅಲ್ಲಿ ಎಲ್ಲರ ಕುಟುಂಬದವರು ಇದ್ದರು. ಸಿಸಿಟಿವಿ ಕ್ಯಾಮೆರಾ ಬೇಕೆಂದು ಹೇಳಿದ್ದರೂ ಅದನ್ನು ಪಾಲಿಸಿಲ್ಲ. ಡ್ರೋನ್ ಗೆ ಅವಕಾಶ ಇಲ್ಲ ಎಂದು ಹೇಳಲಾಗಿದೆ. ಈ ಎಲ್ಲ ಸೂಚನೆಗಳನ್ನು ಸರ್ಕಾರ ಹರಿದು ಬಿಸಾಡಿದೆ. ವೇದಿಕೆಯಲ್ಲಿ 20-30 ಜನರು ಮಾತ್ರ ಇರಬೇಕು ಎಂಬ ಸೂಚನೆಯನ್ನು ಸಂಪೂರ್ಣ ಉಲ್ಲಂಘಿಸಿದ್ದು, 11 ಆಟಗಾರರು ಸೇರಿದಂತೆ ಒಟ್ಟು 200 ಜನರು ವೇದಿಕೆಯಲ್ಲಿದ್ದರು. ಇದು ಸರ್ಕಾರಿ ಕಾರ್ಯಕ್ರಮ ಎಂದು ಆದೇಶ ಪತ್ರದಲ್ಲಿದ್ದರೂ, ಸಿಎಂ ಸಿದ್ದರಾಮಯ್ಯ ಸರ್ಕಾರಿ ಕಾರ್ಯಕ್ರಮ ಅಲ್ಲ ಎಂದಿದ್ದಾರೆ ಎಂದು ದೂರಿದರು. ಇದನ್ನೂ ಓದಿ: ಗೋವಿಂದರಾಜ್‌ ಎಸಗಿದ ತಪ್ಪನ್ನು ಜನರ ಮುಂದೆ ಹೇಳಿ – ಗಾಢ ಮೌನಕ್ಕೆ ಜಾರಿದ್ದು ಯಾಕೆ: ಸಿಎಂಗೆ ಸುನಿಲ್‌ ಕುಮಾರ್‌ ಪ್ರಶ್ನೆ

    ಇಷ್ಟೆಲ್ಲ ಕಾನೂನು ಉಲ್ಲಂಘನೆ ಮಾಡಿದ್ದರೂ, ಕೊನೆಗೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ರಸ್ತೆಯಲ್ಲಿ ನಿಂತು ಟ್ರಾಫಿಕ್‌ ನಿಯಂತ್ರಿಸುತ್ತಿದ್ದ ಪೊಲೀಸರ ವಿರುದ್ಧ ಕ್ರಮ ವಹಿಸಲಾಗಿದೆ. ಠಾಣೆ ಪೊಲೀಸರನ್ನು ಕೂಡ ಅಮಾನತು ಮಾಡಿದ್ದಾರೆ ಎಂದರು.

     

    ವಿಶೇಷ ಅಧಿವೇಶನ ಕರೆಯಿರಿ
    ಸರ್ಕಾರ ಮಾಡಿದ ತಪ್ಪುಗಳ ಬಗ್ಗೆ ಜನರು ಪ್ರಶ್ನೆ ಮಾಡುತ್ತಿದ್ದಾರೆ. ಇದಕ್ಕಾಗಿ ವಿಶೇಷ ಅಧಿವೇಶನ ಕರೆದು ಚರ್ಚಿಸಬೇಕು. ಮೂರು ತನಿಖೆಗೆ ಆದೇಶಿಸಿದ್ದು, ಇದರಲ್ಲಿ ಯಾವ ತನಿಖೆ ನಿಜ ಎಂದು ಗೊತ್ತಾಗಿಲ್ಲ. ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕಿದೆ. ಈ ಕುರಿತು ನಾವೆಲ್ಲರೂ ಆಗ್ರಹಿಸುತ್ತಿದ್ದೇವೆ ಎಂದು ತಿಳಿಸಿದರು.

    ಸರ್ಕಾರ ಪಾಪರ್ ಆಗಿಲ್ಲ ಎಂದಾದರೆ 1 ಕೋಟಿ ರೂ. ಪರಿಹಾರ ನೀಡಲಿ. ನಾವೆಲ್ಲರೂ ಒಂದು ತಿಂಗಳ ಸಂಬಳವನ್ನು ಸಂತ್ರಸ್ತ ಕುಟುಂಬಕ್ಕೆ ನೀಡಲಿದ್ದೇವೆ. ಕಪ್ ಗೆಲ್ಲುವುದು ಹೊಸ ಸಂಗತಿಯಲ್ಲ. ಪ್ರತಿ ರಾಜ್ಯಗಳ ತಂಡ ಕಪ್ ಗೆದ್ದಾಗಲೂ ಈ ರೀತಿಯ ಘಟನೆ ನಡೆದಿಲ್ಲ‌. ಯಾವುದೇ ರಾಜ್ಯದಲ್ಲಿ ಮುಖ್ಯಮಂತ್ರಿಗಳು ಹೋಗಿ ಪ್ರಚಾರ ಪಡೆದಿಲ್ಲ ಎಂದರು.

  • ಕಾಲ್ತುಳಿತ ಪ್ರಕರಣ ನ್ಯಾಯಾಂಗ ತನಿಖೆಗೆ ಒಪ್ಪಿಸಿ, ಇದರಲ್ಲಿ ಸರ್ಕಾರವೇ ಅಪರಾಧಿ: ಆರ್.ಅಶೋಕ್

    ಕಾಲ್ತುಳಿತ ಪ್ರಕರಣ ನ್ಯಾಯಾಂಗ ತನಿಖೆಗೆ ಒಪ್ಪಿಸಿ, ಇದರಲ್ಲಿ ಸರ್ಕಾರವೇ ಅಪರಾಧಿ: ಆರ್.ಅಶೋಕ್

    – ಇದು ಮುಡಾ, ವಾಲ್ಮೀಕಿ ನಿಗಮದ ಹಗರಣದಂತೆಯೇ ಮುಚ್ಚಿಹೋಗಲಿದೆ

    ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy Stadium) ಸುತ್ತಮುತ್ತ ನಡೆದ ಕಾಲ್ತುಳಿತದ (Stampede Case) ಘಟನೆಯಲ್ಲಿ ಸರ್ಕಾರವೇ ಅಪರಾಧಿ. ಇದನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ನಾವು ಹೋರಾಟ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ (R.Ashok) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಕಾನೂನನ್ನು ಕಗ್ಗತ್ತಲಿನಲ್ಲಿಟ್ಟಿದ್ದಾರೆ. ಗ್ರೇಟ್‌ ಸಮಾಜವಾದಿ, ಮಜಾವಾದಿ ಸಿದ್ದರಾಮಯ್ಯನವರಿಂದ (Siddaramaiah) ಹೀಗಾಗಿದೆ. ಆರ್‌ಸಿಬಿ ತಂಡ ಐಪಿಎಲ್‌ ಗೆದ್ದಿದ್ದರೆ, ಕೆಪಿಸಿಸಿ ತಂಡ ಫೋಟೋಗೆ ಫೋಸ್‌ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಬ್ಯಾಟ್ಸ್‌ಮನ್‌ ಹಾಗೂ ಡಿ.ಕೆ.ಶಿವಕುಮಾರ್‌ ಅವರೇ ಬೌಲರ್‌ ಆಗಿದ್ದಾರೆ. ಸಿದ್ದರಾಮಯ್ಯನವರನ್ನು ಬೋಲ್ಡ್‌ ಮಾಡಬೇಕೆಂದು ಡಿ.ಕೆ.ಶಿವಕುಮಾರ್‌ ಪ್ರಯತ್ನ ಮಾಡುತ್ತಿದ್ದರೆ, ಐದು ವರ್ಷ ಸೆಂಚುರಿ ಹೊಡೆಯಬೇಕೆಂದು ಸಿಎಂ ಸಿದ್ದರಾಮಯ್ಯ ಪ್ರಯತ್ನ ಮಾಡುತ್ತಿದ್ದಾರೆ. ಇವರಿಬ್ಬರ ನಡುವೆ ರಾಜ್ಯದ ಜನರು ಹಿಟ್‌ ವಿಕೆಟ್‌ ಆಗಿದ್ದಾರೆ. 11 ಪ್ರತಿಭಾವಂತ ಯುವಜನರು ಬಲಿಯಾಗಿದ್ದಾರೆ. ಈ ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಲಾಗಿದೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ದುರ್ಘಟನೆಯಲ್ಲಿ ಪೊಲೀಸರನ್ನ ಹರಕೆಯ ಕುರಿ ಮಾಡಿದ್ದಾರೆ, ಸಿಎಂ, ಡಿಸಿಎಂ, ಪರಂ ರಾಜೀನಾಮೆ ಕೊಡ್ಬೇಕು: ವಿಜಯೇಂದ್ರ ಆಗ್ರಹ

    ವೇದಿಕೆಯಲ್ಲಿ ಕಾಂಗ್ರೆಸ್‌ ನಾಯಕರ ಕೈಯಲ್ಲೇ ಟ್ರೋಫಿ ಇತ್ತು. ವರ್ಷಾನುಗಟ್ಟಲೆ ಶ್ರಮವಹಿಸಿ ಆಟವಾಡಿದ ಆಟಗಾರರನ್ನು ಮೂಲೆಗೆ ತಳ್ಳಿದ್ದರು. ಈ ಸಂಭ್ರಮಾಚರಣೆ ಆತುರದ ತೀರ್ಮಾನವೆಂದು ಕಾಂಗ್ರೆಸ್‌ನ ಕೆಲವರು ಹೇಳುತ್ತಿದ್ದಾರೆ. ಕಾಂಗ್ರೆಸ್‌ನ ಸಮರ್ಪಣಾ ಸಮಾವೇಶ ಮಾಡುವ ಮುನ್ನ, ಬೆಂಗಳೂರಿನಲ್ಲಿ ಪ್ರವಾಹ ಬಂದರೂ ಬಹಳಷ್ಟು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಯುವಜನರಿಗೆ ಸಂಬಂಧಿಸಿದಂತೆ ಕ್ರೀಡಾ ಕಾರ್ಯಕ್ರಮ ಮಾಡುವಾಗ ಸಿದ್ಧತೆಯನ್ನೇ ಮಾಡಿಕೊಂಡಿಲ್ಲ. ಕಾಂಗ್ರೆಸ್‌ನ ಸಮಾವೇಶಕ್ಕೆ ಮಾಡಿದ್ದ ಸಿದ್ಧತೆಯ ಒಂದು ಪರ್ಸೆಂಟ್‌ನಷ್ಟು ಸಮಯವನ್ನು ಇಲ್ಲಿ ನೀಡಿದ್ದರೆ ಯುವಜನರ ಬದುಕು ಉಳಿಯುತ್ತಿತ್ತು ಎಂದರು.

    ಆಯುಕ್ತರ ಅಮಾನತು
    ಕರ್ನಾಟಕದ ಇತಿಹಾಸದಲ್ಲಿ ಮೊದಲ ಸಲ ಪೊಲೀಸ್‌ ಆಯುಕ್ತರನ್ನು ಅಮಾನತು ಮಾಡಲಾಗಿದೆ. ಜನರು ಸಾಮಾಜಿಕ ಜಾಲತಾಣದಲ್ಲಿ ಪೊಲೀಸರ ಜೊತೆಗಿದ್ದೇವೆ ಎಂದು ಹೇಳುತ್ತಿದ್ದಾರೆ. ಕಾಲ್ತುಳಿತಕ್ಕೆ ಸಿಲುಕಿ ನಿತ್ರಾಣರಾಗಿದ್ದ ಯುವಕ ಯುವತಿಯರನ್ನು ಪೊಲೀಸರು ಕೈಯಲ್ಲಿ ಎತ್ತಿಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಅಲ್ಲಿ ಯಾವುದೇ ಕಾಂಗ್ರೆಸ್‌ ಕಾರ್ಯಕರ್ತರು ಇರಲಿಲ್ಲ. ಆದರೆ ಈಗ ಪೊಲೀಸರನ್ನೇ ಅಮಾನತು ಮಾಡಲಾಗಿದೆ. ನಾವು ನ್ಯಾಯ ಸಿಗುವವರೆಗೂ ರಾಜಕಾರಣ ಮಾಡುತ್ತೇವೆ. ಯಾರನ್ನೋ ಹರಕೆಯ ಕುರಿ ಮಾಡುವುದರ ವಿರುದ್ಧ ನಾವು ರಾಜಕಾರಣ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.

     

    ಪೊಲೀಸ್‌ ಆಯುಕ್ತರಿಂದ ಅನುಮತಿ ನೀಡಲು ನಿರಾಕರಿಸಲಾಗಿತ್ತು, ಆದರೆ ಆರ್‌ಸಿಬಿ ಫ್ರಾಂಚೈಸಿಯವರು ಸಂಜೆ ಕಾರ್ಯಕ್ರಮ ಮಾಡಬೇಕೆಂದು ನಿರ್ಧರಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಬರೆಯಲಾಗಿದೆ. ಅಂದರೆ ಇದು ಅನಧಿಕೃತ ಕಾರ್ಯಕ್ರಮವಾಗಿದೆ. 144 ಸೆಕ್ಷನ್‌ ಹಾಕಿದ್ದರೆ ಕಾರ್ಯಕ್ರಮಕ್ಕೆ ಯಾರೂ ಬರುತ್ತಿರಲಿಲ್ಲ. ಇದು ಅನಧಿಕೃತ ಎಂದಮೇಲೆ ಆ ಸೆಕ್ಷನ್‌ ಹಾಕಿ ಕಾರ್ಯಕ್ರಮವನ್ನು ರದ್ದು ಮಾಡಬೇಕಿತ್ತು. ಸರ್ಕಾರಕ್ಕೆ ಮುಜುಗರವಾಗಿದ್ದರಿಂದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ. ನಾವೆಲ್ಲರೂ ಸರ್ಕಾರವೇ ಅಪರಾಧಿ, ತಪ್ಪಿತಸ್ಥರೇ ಸರ್ಕಾರದವರು ಎಂದು ಹೇಳುತ್ತಿದ್ದೇವೆ. ಪ್ರಾಂಚೈಸಿಯವರಿಗೆ ಕಾರ್ಯಕ್ರಮ ಮಾಡು ಎಂದು ಸೂಚನೆ ನೀಡಿದವರು ಯಾರು? ಕ್ರಿಕೆಟಿಗರನ್ನು ಕರೆದುಕೊಂಡು ಬಂದವರು ಯಾರು? ಎಂದು ಪ್ರಶ್ನಿಸಿದ್ದಾರೆ.

    ಎರಡು ಕಡೆ ಕಾರ್ಯಕ್ರಮ ನಡೆಸುವುದು ಬೇಡ ಎಂದು ಪೊಲೀಸರು ಹೇಳಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಘಟನೆ ನಡೆದಿಲ್ಲ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದೆ ಎಂದು ಹೇಳಿದ್ದಾರೆ. ಈ ಎರಡೂ ಸ್ಥಳಗಳು ಅಕ್ಕಪಕ್ಕದಲ್ಲೇ ಇವೆ. ಪೊಲೀಸರು ಅನುಮತಿ ನೀಡದಿದ್ದರೂ, ಕಾಂಗ್ರೆಸ್‌ ಸರ್ಕಾರ ಕಾನೂನು ಕೈಗೆ ತೆಗೆದುಕೊಂಡು ಕಾರ್ಯಕ್ರಮ ನಡೆಸಿದೆ. ಎಲ್ಲರೂ ಫೋಟೋ ಶೂಟ್‌ನಲ್ಲಿ ನಿರತರಾಗಿದ್ದರೇ ಹೊರತು, ಜನರ ಬಗ್ಗೆ ಯಾರೂ ಯೋಚಿಸಲಿಲ್ಲ ಕಿಡಿಕಾರಿದ್ದಾರೆ.

    ಸರ್ಕಾರವೇ ಅಪರಾಧಿ
    ಮೊದಲು ಜಿಲ್ಲಾಧಿಕಾರಿಯಿಂದ ತನಿಖೆ ನಡೆಯಲಿದೆ ಎಂದು ಹೇಳಿದರು. ಮತ್ತೆ ಸಿಐಡಿಯಿಂದ ತನಿಖೆ ನಡೆಯಲಿದೆ ಎಂದು ಹೇಳಿದ್ದಾರೆ. ಇದು ಕೂಡ ಮುಡಾ, ವಾಲ್ಮೀಕಿ ನಿಗಮದ ಹಗರಣದಂತೆಯೇ ಮುಚ್ಚಿಹೋಗಲಿದೆ. ಇಲ್ಲಿ ಸರ್ಕಾರವೇ ಅಪರಾಧಿಯಾಗಿರುವುದರಿಂದ, ಸರ್ಕಾರದಲ್ಲಿರುವ ಯಾರೂ ತನಿಖೆ ಮಾಡಬಾರದು. ಇದನ್ನು ನ್ಯಾಯಾಧೀಶರೇ ತನಿಖೆ ಮಾಡಬೇಕು. ಅನುಮತಿ ನೀಡಲು ಒತ್ತಡ ಹೇರಿದವರು ಯಾರು, ಕಾರ್ಯಕ್ರಮ ನಡೆಸಲು ಸೂಚನೆ ನೀಡಿದವರು ಯಾರು ಎಂಬುದು ಗೊತ್ತಾಗಬೇಕಿದೆ. ಅಲ್ಲಿಯವರೆಗೂ ಹೋರಾಟ ಮುಂದುವರಿಯಲಿದೆ ಎಂದು ಅಶೋಕ್ ತಿಳಿಸಿದರು. ಇದನ್ನೂ ಓದಿ: Chinnaswamy Stampede| ಕುಮಾರಸ್ವಾಮಿ ಸಿಡಿಸಿದ ಬಾಂಬ್‌ಗೆ ಗೋವಿಂದರಾಜ್ ತಲೆದಂಡ!