ಬೆಂಗಳೂರು: ದೇಶವು ಒಗ್ಗಟ್ಟಿನಲ್ಲಿರುವ ಸಂದರ್ಭದಲ್ಲಿ ಇಂದಿರಾಗಾಂಧಿಗೆ (Indira Gandhi) ಹೋಲಿಕೆ ಮಾಡುವ ಕಾಂಗ್ರೆಸ್ಸಿನವರು (Congress) ಮೊದಲು ಒಡಕು ಮಾತುಗಳನ್ನು ನಿಲ್ಲಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಖಂಡಿಸಿದ್ದಾರೆ.ಇದನ್ನೂ ಓದಿ: ಪಕ್ಷಾತೀತವಾಗಿ ಮೇ 15ರಿಂದ 23ರವರೆಗೆ ಕರ್ನಾಟಕದಲ್ಲಿ ತಿರಂಗಾ ಯಾತ್ರೆ: ಆರ್.ಅಶೋಕ್
ಬೆಂಗಳೂರಿನಲ್ಲಿ ಮಾತನಾಡಿದ ಅವರು, `ಆಪರೇಷನ್ ಸಿಂಧೂರ’ (Operation Sindoor) ಕಾರ್ಯಾಚರಣೆಗೂ ಮೊದಲು ಕಾಂಗ್ರೆಸ್‌ನವರು ಯುದ್ಧ ಬೇಡ, ಅದರ ಅವಶ್ಯಕತೆ ಇದೆಯೇ ಎಂದು ಹೇಳುತ್ತಿದ್ದರು. ಆಪರೇಷನ್ ಸಿಂಧೂರ ಪ್ರಾರಂಭವಾದ ಮೇಲೆ ಶಾಂತಿ ಸ್ಥಾಪನೆ ಮಾಡಬೇಕೆಂದು ಹೇಳಿಕೆ ನೀಡಿದ್ದರು. ಬಳಿಕ ಕದನ ವಿರಾಮ ಘೋಷಣೆಯಾದ ಮೇಲೆ ಏತಕ್ಕೆ ಯುದ್ಧ ನಿಲ್ಲಿಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ಹೇಳಿಕೆಯಲ್ಲಿನ ನಿಲುವು ಮತ್ತು ಉದ್ದೇಶ ಏನು ಎಂಬುದನ್ನು ಮೊದಲು ತಿಳಿಸಬೇಕು. ಪಾಕಿಸ್ತಾನವು ಭಯೋತ್ಪಾದನೆ ಮೂಲಕ ಭಾರತದ ಮೇಲೆ ದಾಳಿ ಮಾಡಿರುವುದಕ್ಕೆ ತಕ್ಕ ಉತ್ತರ ನೀಡುವ ಸಂದರ್ಭದಲ್ಲಿ ಸಂಸತ್ತಿನಲ್ಲಿ ಅಧಿವೇಶನ ಕರೆಯಬೇಕು, ಚರ್ಚೆಯಾಗಬೇಕು ಎಂಬ ಹೇಳಿಕೆಗಳನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.ಇದನ್ನೂ ಓದಿ: ಬೆಂಗಳೂರಿನ ಹಲವೆಡೆ ಆಲಿಕಲ್ಲು ಮಳೆ
ಬೆಂಗಳೂರು: ರಾಷ್ಟ್ರ ರಕ್ಷಣೆಗಾಗಿ ಆಪರೇಷನ್ ಸಿಂಧೂರದ (Operation Sindoor) ಜೊತೆ ನಾವಿದ್ದೇವೆ; ಭಾರತದ ಸೇನೆ ಜೊತೆ ನಾವೆಲ್ಲರೂ ಇದ್ದೇವೆ ಎಂದು ಸಂದೇಶ ನೀಡುವ ಸಲುವಾಗಿ ಮೇ 15ರ ಗುರುವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ತಿರಂಗಾ ಯಾತ್ರೆಯನ್ನು (Tiranga Yatra) ಕೈಗೊಳ್ಳಲಾಗುವುದು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ತಿಳಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಮಲ್ಲೇಶ್ವರ ಮಂತ್ರಿಮಾಲ್‌ನ ಸಂಪಿಗೆ ರಸ್ತೆಯ ಸಿರೂರು ಆಟದ ಮೈದಾನದಿಂದ ಪ್ರಾರಂಭವಾಗಿ 18ನೇ ಕ್ರಾಸ್‌ವರೆಗೂ ರಾಷ್ಟ್ರಧ್ವಜದೊಂದಿಗೆ ತಿರಂಗಾ ಯಾತ್ರೆ ಜರುಗಲಿದೆ. ಪಕ್ಷತೀತವಾಗಿ ನಡೆಯುವ ಈ ಯಾತ್ರೆಯಲ್ಲಿ ಪಕ್ಷದ ಯಾವುದೇ ಬ್ಯಾನರ್‌ಗಳು ಇರುವುದಿಲ್ಲ. ಈ ಯಾತ್ರೆಯಲ್ಲಿ ವೈದ್ಯರು, ಇಂಜಿನಿಯರ್‌ಗಳು, ವಿದ್ಯಾರ್ಥಿಗಳು, ರೈತರು, ಕಾರ್ಮಿಕರು ಎಲ್ಲರೂ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಪಾಕ್ ಮತ್ತೆ ದಾಳಿ ಮಾಡಿದ್ರೆ ಭಾರತ ನುಗ್ಗಿ ಹೊಡೆಯುತ್ತೆ: ಮೋದಿ
ಮೇ 16 ಮತ್ತು 17ರಂದು ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಮೇ 18ರಿಂದ 23ರವರೆಗೆ ತಾಲೂಕು ಕೇಂದ್ರಗಳಲ್ಲಿ ತಿರಂಗಾ ಯಾತ್ರೆಯನ್ನು ಮಾಡಲಾಗುತ್ತದೆ ಎಂದು ಹೇಳಿದರು. ಪ್ರತಿಹಳ್ಳಿಗಳಲ್ಲಿ ಮತ್ತು ತಾಲೂಕು ಕೇಂದ್ರಗಳಲ್ಲಿ ಪಕ್ಷದ ಬ್ಯಾನರ್ ಇಲ್ಲದೇ ಯಾತ್ರೆಯನ್ನು ಕೈಗೊಳ್ಳಲು ನಮ್ಮ ಕಾರ್ಯಕರ್ತರಿಗೆ ಸೂಚನೆಯನ್ನು ಕೊಡಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಅಬ್ಬಬ್ಬಾ ಈ ಮಾವಿನ ಹಣ್ಣಿನ ಕೆಜಿ ಬೆಲೆ ಬರೋಬ್ಬರಿ 2.7 ಲಕ್ಷ!
ಭಾರತದ ತಾಯಂದಿರ ಸಿಂಧೂರ ಅಳಿಸಿದರೆ ಏನು ಆಗುತ್ತದೆ ಎಂಬುದನ್ನು ನಮ್ಮ ಸೇನೆಯು ಇಡೀ ವಿಶ್ವಕ್ಕೆ ತೋರಿಸಿಕೊಟ್ಟಿದೆ ಮತ್ತು ಪಾಕಿಸ್ತಾನಕ್ಕೆ ಬುದ್ಧಿ ಕಲಿಸಿದ್ದಾರೆ. ಸುಮಾರು 100ಕ್ಕೂ ಹೆಚ್ಚು ಭಯೋತ್ಪಾದಕರು ಹತರಾಗಿದ್ದಾರೆ. ಪಾಕಿಸ್ತಾನದ ಉಗ್ರರ ಸ್ಥಳಗಳನ್ನು ಈಗಾಗಲೇ ಧ್ವಂಸಗೊಳಿಸಲಾಗಿದೆ. ಪಾಕಿಸ್ತಾನವು ಕೊನೆಗೆ ಈ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಅಂಗಲಾಚುವ ಸ್ಥಿತಿಗೆ ನಮ್ಮ ಸೈನಿಕರು ತಂದಿದ್ದಾರೆ. ಭಾರತ ಎಂದೂ ಉಗ್ರವಾದವನ್ನು ಸಹಿಸಲ್ಲ ಎಂಬ ಸಂದೇಶವನ್ನು ಇಡೀ ಪ್ರಪಂಚಕ್ಕೆ ನೀಡಿರುತ್ತಾರೆ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: ಹ್ಯಾಂಗರ್ಸ್ ನಾಶ, ರನ್‌ವೇಗಳಿಗೆ ಹಾನಿ – ಪಾಕ್ ದುಸ್ಥಿತಿ ಉಪಗ್ರಹ ಚಿತ್ರಗಳಲ್ಲಿ ಬಹಿರಂಗ
ಸಿಂಧೂ ನದಿ ನೀರಿನ ವಿಚಾರವಾಗಿ ಈ ಹಿಂದೆ 90% ನೀರು ಪಾಕಿಸ್ತಾನಕ್ಕೆ 10% ಮಾತ್ರ ಭಾರತಕ್ಕೆ ಎಂಬ ಒಪ್ಪಂದವನ್ನು ಪ್ರಧಾನ ಮೋದಿ ಜೀಯವರು ರದ್ದುಪಡಿಸಿರುವುದು ಒಂದು ಸಾಧನೆಯಾಗಿದೆ. ನ್ಯೂಕ್ಲಿಯರ್ ಬಾಂಬ್ ಬೆದರಿಕೆಗೆ ನಾವು ಹೆದರುವುದಿಲ್ಲ ಎಂಬ ಸಂದೇಶವನ್ನು ನಮ್ಮ ಪ್ರಧಾನಿಯವರು ಪಾಕಿಸ್ತಾನಕ್ಕೆ ನೀಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕೆಂಪೇಗೌಡ ಏರ್‌ಪೋರ್ಟ್‌ನಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ – 15 ಮಂದಿಗೆ ಗಾಯ
ನಮ್ಮ ಸೈನಿಕರು ದಾಳಿ ಮಾಡಿರುವುದಕ್ಕೆ ಸಾಕ್ಷಿ ಇದೆಯೇ ಎಂದು ಪ್ರಶ್ನಿಸುತ್ತಿದ್ದರು. ಅಲ್ಲಿನ ಸೈನಿಕರು ಮತ್ತು ಭಯೋತ್ಪಾದಕರು ಎಷ್ಟು ಜನ ಹತರಾಗಿದ್ದಾರೆ ಎಂದು ಪಾಕಿಸ್ತಾನವು ಈಗಾಗಲೇ ಒಪ್ಪಿಕೊಂಡಿದೆ. ನಮ್ಮ ಸೇನಾ ಅಧಿಕಾರಿಗಳೇ ಪತ್ರಿಕಾಗೋಷ್ಠಿ ನೀಡಿ, ಪಾಕಿಸ್ತಾನದ ಮೇಲೆ ದಾಳಿ ಮಾಡಿರುವುದಕ್ಕೆ ಸಾಕ್ಷಿ ಸಮೇತ ಉತ್ತರ ನೀಡಿದ್ದಾರೆ. ಆದರೂ ಪಾಕಿಸ್ತಾನ ಜಿಂದಾಬಾದ್ ಎನ್ನುವವರಿಗೆ ನಂಬಲು ಆಗುತಿಲ್ಲ ಮತ್ತು ಭಾರತದ ಕಾರ್ಯಾಚರಣೆಯನ್ನು ಸಹಿಸಲು ಆಗುತ್ತಿಲ್ಲ ಎಂದರು. ಇದನ್ನೂ ಓದಿ: ‘ಆಪರೇಷನ್ ಸಿಂಧೂರ’ಗೆ ಪಾಕ್ ವಾಯುಪಡೆ ಮುಖ್ಯ ತಂತ್ರಜ್ಞ ಸೇರಿ 11 ಸೈನಿಕರು ಸಾವು
ಇಂದು ನಮ್ಮ ಸೈನಿಕರು ಕಾಶ್ಮೀರ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ನಮ್ಮದು ಎಂದು ತೋರಿಸಿಕೊಟ್ಟಿದ್ದಾರೆ. ಅಲ್ಲದೆ ನಮ್ಮ ಪ್ರಧಾನ ಮೋದಿ ಜೀರವರು ಸಹ ಹೇಳಿದ್ದಾರೆ. ಪಾಕಿಸ್ತಾನ ಅಕ್ರಮಿತ ಕಾಶ್ಮೀರವನ್ನು ನಾವು ವಾಪಸ್ ಪಡೆಯುತ್ತೇವೆ ಹಾಗೂ ಸಿಂಧೂ ನದಿಯ ಯಾವುದೇ ಒಪ್ಪಂದವನ್ನು ಮಾಡುವುದಿಲ್ಲ. ಪಾಕಿಸ್ತಾನದ ಭಯೋತ್ಪಾದಕರಿಗೆ ಮತ್ತು ಪಾಕಿಸ್ತಾನಕ್ಕೆ ಬುದ್ಧಿ ಕಲಿಸಿರುವ ನಮ್ಮ ಸೈನಿಕರಿಗೆ ಗೌರವ ನೀಡುವ ಸಲುವಾಗಿ ಈ ತಿರಂಗಾ ಯಾತ್ರೆಯನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಲಂಚ ಪಡೆಯುತ್ತಿದ್ದಾಗ ಲೋಕಾ ರೇಡ್ – ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಡಿಓ
ಮಂಗಳೂರು/ಬೆಂಗಳೂರು: ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಕಾಂಗ್ರೆಸ್ (Congress) ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದ್ದರಿಂದ ಇದನ್ನು ಎನ್‌ಐಎಗೆ (NIA) ವಹಿಸಲು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ತಿಳಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯ ಬಗ್ಗೆ ವಿವರಣೆ ನೀಡಿ, ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುಪಾರಿ ನೀಡಿರುವ ಪ್ರಕರಣ. ಕೊಲೆಯಾಗಿದ್ದ ಮುಸ್ಲಿಂ ಹುಡುಗನ ಕುಟುಂಬಕ್ಕೆ ಕಾಂಗ್ರೆಸ್ 25 ಲಕ್ಷ ರೂ. ಪರಿಹಾರ ನೀಡಿದ್ದು, ಆ ಹಣವನ್ನು ಬಳಸಿಯೇ ಸುಪಾರಿ ನೀಡಲಾಗಿದೆ. ಸ್ಪೀಕರ್ ಯು.ಟಿ.ಖಾದರ್ ಅವರು, ಆ ಕುಟುಂಬದವರು ಒಳ್ಳೆಯವರು ಎಂದು ಹೇಳಿದ್ದಾರೆ. ಆ ಮನೆಯವರೇ ಸುಪಾರಿ ನೀಡಿದ್ದಾರೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ. ಸ್ಪೀಕರ್ ಆಗಿ ಕೊಲೆ ಪ್ರಕರಣದ ಬಗ್ಗೆ ಮಾತನಾಡುವ ಅಗತ್ಯವೇನಿದೆ? ಯಾವುದೇ ಸ್ಪೀಕರ್ ಕೊಲೆ ಬಗ್ಗೆ ಮಾತನಾಡಿದ ಇತಿಹಾಸವೇ ಇಲ್ಲ ಎಂದರು.
ಕಾಂಗ್ರೆಸ್ ಸರ್ಕಾರ ಇಂತಹವರ ವಿಚಾರದಲ್ಲಿ ಮೃದು ಧೋರಣೆ ತಾಳಿದೆ. ಈ ಪ್ರಕರಣದ ತನಿಖೆಯಲ್ಲಿ ನಮಗೆ ವಿಶ್ವಾಸವಿಲ್ಲ. ಪಾಕಿಸ್ತಾನ ಜಿಂದಾಬಾದ್ ಘೋಷಣೆಗೆ, ಭಯೋತ್ಪಾದನೆ ಚಟುವಟಿಕೆಗೆ ಪ್ರೇರಣೆ ಕೊಡುವವರ ಸಂಪರ್ಕ ಇವರಿಗಿದೆ. ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕವಿದೆ. ಪಾಕಿಸ್ತಾನ ಜಿಂದಾಬಾದ್ ಎಂದು ಹೇಳುವವರಿಗೆ ಆಪರೇಶನ್ ಸಿಂಧೂರದAತೆಯೇ ಶಾಸ್ತಿ ಆಗಬೇಕಿದೆ. ಇದಕ್ಕೆ ಅಂತ್ಯ ಕಾಣಿಸಬೇಕಿದೆ. ಇದಕ್ಕಾಗಿ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕು ಎಂದು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ತಿಳಿಸಿದರು.ಇದನ್ನೂ ಓದಿ: IPL 2025 ಟೂರ್ನಿ 1 ವಾರ ಸ್ಥಗಿತ – ಶೀಘ್ರವೇ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ
– ಸಿದ್ದರಾಮಯ್ಯ ಮೊದಲ ಅವಧಿಯಲ್ಲಿ 56 ಹಿಂದೂ ಕಾರ್ಯಕರ್ತರ ಕೊಲೆಯಾಗಿದೆ ಎಂದ ವಿಪಕ್ಷ ನಾಯಕ
ಬೆಂಗಳೂರು: ನೇಹಾ ಹತ್ಯೆಯಾದಾಗ, ಲವ್ ಜಿಹಾದ್ ಆದಾಗ ಕಠಿಣ ಕ್ರಮ ತೆಗೆದುಕೊಳ್ಳಬೇಕಿತ್ತು. ಆಗ ಕ್ರಮ ಕೈಗೊಳ್ಳದ ಹಿನ್ನೆಲೆ ಈ ಥರ ಕೊಲೆಗಳಾಗುತ್ತಿವೆ ಎಂದು ವಿಪಕ್ಷ ನಾಯಕ ಆರ್.ಆಶೋಕ್ (R Ashok) ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಕುರಿತು ಮಾತನಾಡಿದ ಅವರು, ಇಡೀ ಮಂಗಳೂರು ಸುಹಾಸ್ ಶೆಟ್ಟಿ ಹತ್ಯೆಯಿಂದ ಬೆಚ್ಚಿಬಿದ್ದಿದೆ. ಇಂದು ಮಂಗಳೂರು ಬಂದ್‌ಗೂ ಕರೆ ಕೊಡಲಾಗಿದೆ. ಈಥರದ ಘಟನೆಗಳು ಹಿಂದೆ ಕಾಂಗ್ರೆಸ್ ಇದ್ದಾಗಲೂ ಆಗಿವೆ. ಸಿದ್ದರಾಮಯ್ಯ ಮೊದಲ ಅವಧಿಯಲ್ಲಿ 56 ಹಿಂದೂ ಕಾರ್ಯಕರ್ತರ ಕೊಲೆ ಆಗಿದೆ. ಕಾಂಗ್ರೆಸ್ ಬಂದಾಗೆಲ್ಲ ಪಾಕ್ ಜಿಂದಾಬಾದ್ ಕೂಗುವರು, ಪಾಕ್ ಬಾವುಟ ಪ್ರದರ್ಶನ ಮಾಡುವವರು ಹೆಚ್ಚಾಗಿದ್ದಾರೆ. ಸುಹಾಸ್ ಹತ್ಯೆಗೂ ಪಾಕಿಸ್ತಾನ ಜಿಂದಾಬಾದ್ ಕಾರಣ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: ಸುಹಾಸ್ ಹತ್ಯೆ ಮಾಡಿದವರಿಗೆ ಕಠಿಣ ಕ್ರಮ ಆಗಲಿದೆ: ಪರಮೇಶ್ವರ್
ಪಾಕಿಸ್ತಾನ ಜಿಂದಾಬಾದ್ ಕೂಗುವವರ ವಿರುದ್ಧ ಕ್ರಮ ಕೈಗೊಳುತ್ತಿಲ್ಲ. ದೇಶದ್ರೋಹಿಗಳ ವಿರುದ್ಧ ಗುಂಡು ಹೊಡೆದು ಸಾಯಿಸುವ ಕಾನೂನು ಬರಬೇಕು. ಸುಹಾಸ್ ಕೊಲೆ ಹಿಂದೂ ಕಾರ್ಯಕರ್ತರಿಗೆ ಬಹಳ ನೋವುಂಟು ಮಾಡಿದೆ. ಇನ್ನೆಷ್ಟು ಹಿಂದೂಗಳ ಹತ್ಯೆ ಆಗಬೇಕು? ಸುಹಾಸ್ ಶೆಟ್ಟಿ ಚಲನವಲನ ಬಗ್ಗೆ ಹತ್ಯೆಕೋರರಿಗೆ ಹೇಳಿದವರು ಯಾರು? ಇದರಲ್ಲಿ ಪೊಲೀಸ್ ಇಲಾಖೆ ಕೈವಾಡ ಇದೆಯಾ ಅಂತಲೂ ತನಿಖೆ ನಡೆಯಬೇಕು. ಸಿದ್ದರಾಮಯ್ಯ ಸರ್ಕಾರ ಬಂದ ಕಾನೂನು ಸುವ್ಯವಸ್ಥೆ ತೀರ ಹದಗೆಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸುಹಾಸ್ ಶೆಟ್ಟಿ ಬಳಿ ಯಾವುದೇ ಆಯುಧ ಇಲ್ಲ ಎಂದು ಗೊತ್ತಾಗಿ ದಾಳಿ ನಡೆದಿದೆ. ಈ ಮಾಹಿತಿ ಹತ್ಯೆಕೋರರಿಗೆ ಕೊಟ್ಟವರ್ಯಾರು? ಈ ಮಾಹಿತಿ ಪಡೆದೇ ಬರ್ಬರವಾಗಿ ಕೊಲೆ ಮಾಡಿದ್ದಾರೆ. ನೇಹಾ ಹತ್ಯೆ ಆದಾಗ, ಲವ್ ಜಿಹಾದ್ ಆದಾಗ ಕಠಿಣ ಕ್ರಮ ತೆಗೆದುಕೊಳ್ಳಬೇಕಿತ್ತು. ಆಗ ಕ್ರಮ ಕೈಗೊಳ್ಳದ ಹಿನ್ನೆಲೆ ಈ ಥರ ಕೊಲೆಗಳಾಗುತ್ತಿವೆ. ನಾನು, ವಿಜಯೇಂದ್ರ ಮಂಗಳೂರಿಗೆ ಹೊರಟಿದ್ದೀವಿ, ಪ್ರತಿಭಟನೆಯಲ್ಲಿ ನಾವೂ ಭಾಗವಹಿಸುತ್ತೇವೆ. ಸಿದ್ದರಾಮಯ್ಯ ಸಿಎಂ ಆದ ನಂತರ ಅವರ ನಡೆ ನುಡಿಯೇ ಬದಲಾಗಿದೆ. ಹಿಂದೂ ಕಾರ್ಯಕರ್ತರ ಕೊಲೆ, ಪಹಲ್ಗಾಮ್, ಹಸು ಕೆಚ್ಚಲು ಕೊಯ್ದ ಪ್ರಕರಣ ಆದಾಗೆಲ್ಲ ಸಿದ್ದರಾಮಯ್ಯ ಸಬೂಬು ಕೊಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ಬೆಂಕಿ ಸುರಿಯುವ ಕೆಲಸ ಮಾಡಬಾರದೆಂಬ ದಿನೇಶ್ ಗುಂಡೂರಾವ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪಾಕಿಸ್ತಾನ ನಮ್ಮನ್ನು ಬೈದರೂ ಏನೂ ಅನಿಸುವುದಿಲ್ಲ, ಪಾಕ್ ಪರ ಘೋಷಣೆ ಕೂಗಿದರೂ ಅವರಿಗೆ ಏನೂ ಅನಿಸುವುದಿಲ್ಲ. ಎಮ್ಮೆ ಚರ್ಮದವರು ಅವರು. ಇಡೀ ಪೊಲೀಸ್ ಇಲಾಖೆಯೇ ಕಾಂಗ್ರೆಸ್ ಪಾರ್ಟಿ ಥರ ಆಗಿದೆ. ಪೊಲೀಸರ ಕುಮ್ಮಕ್ಕಿನಿಂದಲೇ ಈಥರದ ಘಟನೆಗಳಾಗುತ್ತಿವೆ, ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದರು.ಇದನ್ನೂ ಓದಿ: ಕನ್ನಡಿಗರಲ್ಲಿ ಕ್ಷಮೆಯಾಚಿಸಿ: ಸೋನು ನಿಗಮ್ ವಿವಾದಾತ್ಮಕ ಹೇಳಿಕೆಗೆ ಕನ್ನಡ ನಿರ್ಮಾಪಕನ ಆಕ್ರೋಶ
ಬೆಂಗಳೂರು: ಪಾಕಿಸ್ತಾನ (Pakistan) ಮಾಧ್ಯಮಗಳಲ್ಲೂ ಸಿಎಂ ಸಿದ್ದರಾಮಯ್ಯ (CM Siddaramaiah) ಈಗ ಫೇಮಸ್ ಆಗಿದ್ದಾರೆ. ಭಾರತ ಯುದ್ಧ ಮಾಡಬಾರದು ಎಂದಿದ್ದ ಸಿಎಂ ಅವರ ಹೇಳಿಕೆಯನ್ನು ಪಾಕ್ ಮಾಧ್ಯಮಗಳು ಪ್ರಸಾರ ಮಾಡಿವೆ.
ಪಾಕ್ ಮಾಧ್ಯಮಗಳಲ್ಲಿ ಸಿದ್ದರಾಮಯ್ಯನವರ ಹೇಳಿಕೆ ಪ್ರಸಾರವಾದ ಬೆನ್ನಲ್ಲೇ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ (R Ashok) ಎಕ್ಸ್‌ನಲ್ಲಿ ಕಿಡಿಕಾರಿದ್ದಾರೆ.
ತಮ್ಮ ಬಾಲಿಶ, ಅಸಂಬದ್ಧ ಹೇಳಿಕೆಗಳಿಂದ ಈಗ ರಾತ್ರೋರಾತ್ರಿ ಪಾಕಿಸ್ತಾನದಲ್ಲಿ ವರ್ಲ್ಡ್ ಫೇಮಸ್ ಆಗಿಬಿಟ್ಟಿದ್ದೀರಿ. ತಮಗೆ ಅಭಿನಂದನೆಗಳು. ಮುಂದೆಂದಾದರೂ ತಾವು ಪಾಕಿಸ್ತಾನಕ್ಕೆ ಭೇಟಿ ಕೊಟ್ಟರೆ ತಮಗೆ ರಾಜಾತಿಥ್ಯ ಗ್ಯಾರೆಂಟಿ. ಪಾಕಿಸ್ತಾನದ ಪರ ವಕಾಲತ್ತು ವಹಿಸಿದ ಮಹಾನ್ ಶಾಂತಿದೂತ ಎಂದು… pic.twitter.com/OjcCkrEMtb
ಪೋಸ್ಟ್‌ನಲ್ಲಿ ಏನಿದೆ?
ಪಾಕಿಸ್ತಾನ ರತ್ನ ಸಿಎಂ ಸಿದ್ದರಾಮಯ್ಯನವರೇ, ತಮ್ಮ ಬಾಲಿಶ, ಅಸಂಬದ್ಧ ಹೇಳಿಕೆಗಳಿಂದ ಈಗ ರಾತ್ರೋರಾತ್ರಿ ಪಾಕಿಸ್ತಾನದಲ್ಲಿ ವರ್ಲ್ಡ್ ಫೇಮಸ್ ಆಗಿಬಿಟ್ಟಿದ್ದೀರಿ. ತಮಗೆ ಅಭಿನಂದನೆಗಳು. ಮುಂದೆಂದಾದರೂ ತಾವು ಪಾಕಿಸ್ತಾನಕ್ಕೆ ಭೇಟಿ ಕೊಟ್ಟರೆ ತಮಗೆ ರಾಜಾತಿಥ್ಯ ಗ್ಯಾರೆಂಟಿ. ಇದನ್ನೂ ಓದಿ: ಕಾಶ್ಮೀರದಲ್ಲಿ ಐಇಡಿ ಸ್ಫೋಟಿಸಿ ಮತ್ತೊಬ್ಬ ಉಗ್ರನ ಮನೆ ಉಡೀಸ್!
ಪಾಕಿಸ್ತಾನದ ಪರ ವಕಾಲತ್ತು ವಹಿಸಿದ ಮಹಾನ್ ಶಾಂತಿದೂತ ಎಂದು ಪಾಕಿಸ್ತಾನ ಸರ್ಕಾರ ತಮಗೆ ಅಲ್ಲಿನ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ನಿಶಾನ್-ಎ-ಪಾಕಿಸ್ತಾನ ಪ್ರಶಸ್ತಿ ಕೊಟ್ಟು ಸನ್ಮಾನ ಮಾಡಿದರೂ ಅಚ್ಚರಿಯಿಲ್ಲ.
ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿ ಎದುರಿಸುತ್ತಿರುವಾಗ, ಗಡಿಯಲ್ಲಿ ಯುದ್ಧದ ಕಾರ್ಮೋಡ ಕವಿದಿರುವಾಗ ಈ ರೀತಿ ಶತ್ರುರಾಷ್ಟ್ರದ ಕೈಗೊಂಬೆಯಂತೆ ವರ್ತಿಸುತ್ತದ್ದೀರಲ್ಲ, ನಿಮ್ಮಂತಹವರು ಸಾರ್ವಜನಿಕ ಬದುಕಿನಲ್ಲಿ ಇರುವುದೇ ನಮ್ಮ ದೇಶದ ಅತ್ಯಂತ ದೊಡ್ಡ ದುರಂತ.
ಬೆಂಗಳೂರು: ಸಿದ್ಧಾಂತವೇ ಇಲ್ಲದ ಸಿದ್ದರಾಮಯ್ಯ (CM Siddaramaiah) ಇಂದು ನಮ್ಮ ಮುಂದೆ ಇದ್ದಾರೆ, ದೇಶಕ್ಕೆ ಏನಾದರೂ ಪರವಾಗಿಲ್ಲ, ಮತ ಬಿದ್ದರೆ ಸಾಕು ಎಂಬ ಮನಸ್ಥಿತಿಗೆ ಸಿಎಂ ಬಂದಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಆಶೋಕ್ (R Ashok) ಕಿಡಿಕಾರಿದ್ದಾರೆ.
ವಿಧಾನಸಭೆಯಲ್ಲಿ ಪಹಲ್ಗಾಮ್ (Pahalgam) ಉಗ್ರರ ದಾಳಿ ಪ್ರಕರಣದಲ್ಲಿ ಯುದ್ಧದ ಅನಿವಾರ್ಯತೆ ಇಲ್ಲವೆಂಬ ಸಿಎಂ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಮಾನಸಿಕ ಸ್ಥಿತಿ ಪೂರ್ತಿ ಮುಸ್ಲಿಮರ ಮತದ ಬಗ್ಗೆಯೇ ಯೋಚಿಸುವ ರೀತಿ ಆಗಿರುವುದು ದುರದೃಷ್ಟಕರ. ಹಾಗಾದರೆ ಸತ್ತಿರುವವರ ಪ್ರಾಣಕ್ಕೆ ಬೆಲೆಯೇ ಇಲ್ಲವೇ? ಹಮಾಸ್ ಉಗ್ರರು ಬಂದು ತರಬೇತಿ ನೀಡಿ ಕಳುಹಿಸಿದ್ದರು ಎಂಬುದು ಮಾಹಿತಿಗಳ ಮೂಲಕ ಹೊಂದಾಣಿಕೆ ಆಗುತ್ತಿದೆ. ಅದನ್ನು ಸಿದ್ದರಾಮಯ್ಯ ಅವರು ಮಾತ್ರ ಕ್ಷಮಿಸಬಹುದಷ್ಟೇ. ದೇಶಕ್ಕೆ ಏನು ಆದರೂ ಪರವಾಗಿಲ್ಲ, ತಮಗೆ ಮತ ಬಿದ್ದರೆ ಸಾಕು ಎಂಬ ಮನಸ್ಥಿತಿಗೆ ಬಂದಿದ್ದಾರೆ. ಸಿದ್ಧಾಂತವೇ ಇಲ್ಲದ ಸಿದ್ದರಾಮಯ್ಯ ಇಂದು ನಮ್ಮ ಮುಂದೆ ಇದ್ದಾರೆ ಎಂದು ಕಿಡಿಕಾರಿದರು.ಇದನ್ನೂ ಓದಿ: ಪ್ರಧಾನ ಮಂತ್ರಿಗಳ ಈ ಆಟಿಟ್ಯೂಡ್ ಸರಿಯಿಲ್ಲ: ಮಲ್ಲಿಕಾರ್ಜುನ ಖರ್ಗೆ ಕಿಡಿ
ನಿಮ್ಮ ಮನೆಯಲ್ಲಿ ಈ ರೀತಿ ಉಗ್ರರು ಬಂದು ಹೊಡೆದು ಹಾಕಿರುತ್ತಿದ್ದರೆ ಈ ರೀತಿ ಹೇಳುತ್ತಿದ್ದರಾ? ಹಾಗಾದರೆ ಸತ್ತವರ ಮನೆ ಬಾಗಿಲಿಗೆ ಹಾರ ಹಾಕಲು ಯಾಕೆ ಹೋಗಿದ್ರಿ? ಇಲ್ಲಿ ಬಂದು ಸತ್ತವರು ಸತ್ತರು ಎನ್ನುವುದು ನಾಚಿಕೆಗೇಡಿನ ಸಂಗತಿ. ಮಲ್ಲಿಕಾರ್ಜುನ ಖರ್ಗೆ ಎಲ್ಲರೂ ಒಟ್ಟಾಗಿ ಹೋರಾಡೋಣ ಎಂದಿದ್ದಾರೆ. ಇಲ್ಲಿ ಸಿದ್ದರಾಮಯ್ಯ ಮನೆ ಮುರಿಯುವ ಮಾತಾಡಿದ್ದಾರೆ. ಯಾವುದೇ ಪಾಕಿಸ್ತಾನಿ ಭಾರತದಲ್ಲಿ ಇರಬಾರದು ಎಂದು ಕೇಂದ್ರ ಸರ್ಕಾರ ಸೂಚನೆ ಕೊಟ್ಟಿದೆ. ಭಟ್ಕಳದಲ್ಲಿ 10ಕ್ಕಿಂತ ಹೆಚ್ಚು ಪಾಕಿಸ್ತಾನದವರು ಇದ್ದಾರೆ. ಆದರೆ ಪಾಕಿಸ್ತಾನದಲ್ಲಿ ಈಗಾಗಲೇ ಭಾರತೀಯರನ್ನು ಹೊರ ಹಾಕಿದ್ದಾರೆ. ಇದರ ಬಗ್ಗೆ ಸಿದ್ದರಾಮಯ್ಯ ಯಾಕೆ ಮಾತನಾಡುತ್ತಿಲ್ಲ. ಕೂಡಲೇ ಭಟ್ಕಳದಲ್ಲಿರುವ ಪಾಕಿಸ್ತಾನದವರನ್ನು ಒದ್ದು ಹೊರ ಹಾಕಬೇಕು. ಮೀರ್ ಸಾಧಿಕ್‌ನಂತವರು ನಮ್ಮಲ್ಲೇ ಇದ್ದಾರೆ ಎಂದು ಆರೋಪಿಸಿದರು.
ಕಾಶ್ಮೀರದಲ್ಲಿ ಇರುವುದು ಐಎನ್‌ಡಿಐ ಮೈತ್ರಿ ಸರ್ಕಾರ, ಯಾವುದೇ ಸೆಕ್ಯುರಿಟಿ ಬಗ್ಗೆ ಅಲ್ಲಿನ ರಾಜ್ಯ ಸರ್ಕಾರ ಕೊಡುವ ಸಲಹೆ ಮೇರೆಗೆ ಆಗುತ್ತದೆ. ರಾಮೇಶ್ವರಂ ಕೆಫೆ, ಕುಕ್ಕರ್ ಬಾಂಬ್ ಸ್ಫೋಟ ಆದಾಗ ಏನು ಮಣ್ಣು ತಿನ್ನುತ್ತಿದ್ರಾ? ದೇಶದ ಪ್ರಶ್ನೆ ಬಂದಾಗ ಎಲ್ಲರೂ ಒಂದೇ ವಾಯ್ಸ್‌ನಲ್ಲಿ ಮಾತಾಡಬೇಕು. ಆದರೆ ಸಿದ್ದರಾಮಯ್ಯ ವೋಟ್ ವಾಯ್ಸ್‌ನಲ್ಲಿ ಮಾತಾಡುತ್ತಾರೆ. ಕಲಬುರ್ಗಿಯ ರಸ್ತೆಯಲ್ಲಿ ಪಾಕಿಸ್ತಾನದ ಧ್ವಜ ಹಾಕಿದ್ದರೆ ಮುಸ್ಲಿಂ ಮಹಿಳೆಯರು ಅದಕ್ಕೆ ಗೌರವ ತೋರಿಸಿದ್ದಾರೆ. ದೇಶದ ಒಳಗೆ ಇರುವ ದೇಶ ದ್ರೋಹಿಗಳನ್ನು ಮಟ್ಟ ಹಾಕಬೇಕು. ಸಿದ್ದರಾಮಯ್ಯ ಹೇಳಿಕೆ ಮೃತಪಟ್ಟವರಿಗೆ ಅವಮಾನವಾಗುವಂತಹದ್ದು, ಕೂಡಲೇ ಸಿದ್ದರಾಮಯ್ಯ ಜನರ ಮುಂದೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಕೇಂದ್ರ ಗುಪ್ತಚರ ವ್ಯವಸ್ಥೆ ವೈಫಲ್ಯ ಎಂಬ ಸಚಿವ ಸಂತೋಷ್ ಲಾಡ್ ಹೇಳಿಕೆ ವಿಚಾರವಾಗಿ ಮಾತನಾಡಿ, ಸಂತೋಷ್ ಲಾಡ್ (Santosh Lad) ಇನ್ನಷ್ಟು ಮೆಚ್ಯೂರ್ ಆಗಬೇಕು. ಸೈನ್ಯದ ಬಗ್ಗೆಯೇ ಅನುಮಾನ ಪಡುತ್ತಾರಲ್ಲಾ? ಸೈನಿಕರು ಅಲ್ಲಿ ಪ್ರಾಣದ ಹಂಗು ತೊರೆದು ಇರುವುದರಿಂದ ಇಲ್ಲಿ ಸಂತೋಷ್ ಲಾಡ್ ಆರಾಮಾಗಿ ಮಜಾ ಹೊಡೆದುಕೊಂಡು ಇದ್ದಾರೆ. ಇದೇ ರೀತಿ ಪಕ್ಷಗಳು ಪಾಕಿಸ್ತಾನದಲ್ಲೂ (Pakistan) ಮಾಡುತ್ತಿದ್ದಾರಾ? ದೇಶಕ್ಕೆ ಸಂಕಷ್ಟ ಬಂದಾಗ ಹೇಗೆ ನಡೆದುಕೊಳ್ಳಬೇಕು ಎಂದು ಕಾಂಗ್ರೆಸ್ ಕಲಿಯಬೇಕು. ಸಿದ್ದರಾಮಯ್ಯ, ಸಂತೋಷ್ ಲಾಡ್, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ ಇವರೆಲ್ಲರ ಹೇಳಿಕೆಗೆ ಜನ ಪಾಠ ಕಲಿಸಿಯೇ ಕಲಿಸುತ್ತಾರೆ ಎಂದರು.ಇದನ್ನೂ ಓದಿ: ನಡು ರಸ್ತೆಯಲ್ಲೇ ಕಾರು ಚಾಲಕನಿಗೆ ಹಿಗ್ಗಾಮುಗ್ಗ ಥಳಿಸಿ ಮಹಿಳೆಯ ದರ್ಪ
ಬೆಂಗಳೂರು: ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್ ಸೆಲ್‌ಗಳನ್ನು ಮಟ್ಟ ಹಾಕಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಹೇಳಿದ್ದಾರೆ.
ಮಲ್ಲೇಶ್ವರಂನ (Malleshwaram) ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರಿಗೆ ನೆರವು ಕೊಡುವುದು, ಬೇಲ್ ಕೊಡಿಸುವುದು, ಕಾನೂನು ಸಹಾಯ ಮಾಡುವುದು ನಡೆಯುತ್ತಿದೆ. ಇಂತಹವರನ್ನು ಕೂಡ ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟವಾಗಿ ಹೇಳಿದ್ದಾರೆ ಎಂದರು. ಇದನ್ನೂ ಓದಿ: ಮೂರೇ ದಿನದ ಅಂತರದಲ್ಲಿ ಕಾಡಾನೆ ದಾಳಿಗೆ 2 ಜೀವ ಬಲಿ – ಗ್ರಾಮಸ್ಥರಲ್ಲಿ ಆತಂಕ
ಎಲ್ಲಾ ವಲಯ ಆಯುಕ್ತರ ಕಚೇರಿಯ ಮುಂದೆ ಏ. 28ರಿಂದ 3 ದಿನಗಳ ಕಾಲ ಕಾಂಗ್ರೆಸ್ (Congress) ಸರ್ಕಾರ ಮಾಡಿದ ಬೆಲೆ ಏರಿಕೆಯ ವಿರುದ್ಧ ಹೋರಾಟ ಮಾಡಲಾಗುತ್ತದೆ. ಹಾಲು, ವಿದ್ಯುತ್ ಹಾಗೂ ಆಸ್ತಿ ತೆರಿಗೆ ಹಾಗೂ ಪಾರ್ಕಿಂಗ್ ಶುಲ್ಕದ ಬಗ್ಗೆ ಹೋರಾಟ ಮಾಡಲಾಗುವುದು. ಬೆಂಗಳೂರಿನ (Bengaluru) ಜನರ ಮೇಲೆ ಕಾಂಗ್ರೆಸ್ ಭರಪೂರ ತೆರಿಗೆಗಳನ್ನು ಹೇರಿದೆ. ಪ್ರತಿ ಮನೆಗಳಿಗೆ ಹೋಗಿ ಕರಪತ್ರ ಹಂಚಲಾಗುವುದು. ಬಿಬಿಎಂಪಿ ಚುನಾವಣೆಯನ್ನು ಸರ್ಕಾರ ಮುಂದೂಡುತ್ತಿದೆ. ಈ ಬಗ್ಗೆ ಕೂಡ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಕಸ್ತೂರಿ ರಂಗನ್ ನಿಧನಕ್ಕೆ ಬಸವರಾಜ ಬೊಮ್ಮಾಯಿ ಸಂತಾಪ
ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ಸ್ಪೀಕರ್ ಜೊತೆ ಚರ್ಚಿಸಲಾಗಿದೆ. ಈ ಅಮಾನತು ಆ ಒಂದು ಅಧಿವೇಶನಕ್ಕೆ ಮಾತ್ರ ಸೀಮಿತವಾಗಬೇಕು. ಅದನ್ನು ಬಿಟ್ಟು ಹೊರಗೆ ಭತ್ಯೆ ಕೊಡುವುದಿಲ್ಲ ಎನ್ನುವುದು ಸರಿಯಲ್ಲ. ಇದು ಅಸಂವಿಧಾನಿಕವಾದ ಕ್ರಮ ಎಂದರು.
ಕೆಎಎಸ್ ಪರೀಕ್ಷೆಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ನೀಡಿದೆ. ಅಧಿವೇಶನದಲ್ಲಿ ನಾನು ಈ ವಿಷಯ ಪ್ರಸ್ತಾಪಿಸಿದಾಗ ತೀರ್ಪು ಬಂದ ಮೇಲೆ ಮರುಪರೀಕ್ಷೆ ಬಗ್ಗೆ ಮುಕ್ತ ಮನಸ್ಸಿನಿಂದ ಪರಿಶೀಲನೆ ನಡೆಸುವುದಾಗಿ ಸಿಎಂ ಭರವಸೆ ನೀಡಿದ್ದರು. ಈಗ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಗಮನಿಸಿ ಮುಂದೆ ಅಗತ್ಯ ಬಿದ್ದರೆ ಮುಂದೆಯೂ ಹೋರಾಟ ಮಾಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಅನುಷ್ಕಾ ಶೆಟ್ಟಿ ಬ್ಯುಸಿ
ಕಾಂಗ್ರೆಸ್ ನಾಯಕರು ದೇಶದ ಯೋಧರ ಬಗ್ಗೆ ಅನುಮಾನ ವ್ಯಕ್ತಪಡಿಸಿದರೆ, ಮತ್ತೆ ಇವರಿಗೆ ಯಾರ ಮೇಲೆ ನಂಬಿಕೆ ಇದೆ? ಇಡೀ ದೇಶ ಒಂದಾಗಿ ಭಯೋತ್ಪಾದಕ ದಾಳಿಯನ್ನು ಖಂಡಿಸಬೇಕು. ಉಗ್ರರು ಹಿಂದೂ ಎಂದು ಹೇಳಿಯೇ ಹುಡುಕಿ ಕೊಂದಿದ್ದಾರೆ. ಬೇಹುಗಾರಿಕೆ ಸರಿಯಲ್ಲ, ಯೋಧರು ಸರಿಯಲ್ಲ ಎಂದು ಟೀಕೆ ಮಾಡುವುದು ಸರಿಯಿಲ್ಲ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾದಾಗ ಯಾರು ವಿಫಲರಾಗಿದ್ದರು. ಕುಕ್ಕರ್ ಬಾಂಬ್ ಸ್ಫೋಟಗೊಂಡಾಗ ಯಾರು ವಿಫಲರಾಗಿದ್ದರು. ಸಚಿವರ ವಿರುದ್ಧ ಹನಿಟ್ರ‍್ಯಾಪ್ ನಡೆಯುತ್ತಿರುವಾಗ ಯಾರು ವಿಫಲರಾಗಿದ್ದಾರೆ. ಇಂತಹ ಕಾಂಗ್ರೆಸ್ ಪಕ್ಷ ದೇಶದ ಯೋಧರ ಬಗ್ಗೆ ಮಾತಾಡುವುದು ಬೇಡ ಎಂದರು.
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ (Congress Government) ಬಂದ ಮೇಲೆ ಜನಿವಾರ, ಶಿವದಾರ, ಉಡುದಾರ ಎಲ್ಲದಕ್ಕೂ ಕತ್ತರಿ ಬೀಳುತ್ತಿದೆ. ತಾಳಿಗೆ ಭಾಗ್ಯ ಇಲ್ಲ, ಹಿಜಬ್‌ಗೆ ಬಹುಪರಾಕ್ ನಡೆಯುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ವಾಗ್ದಾಳಿ ನಡೆಸಿದರು.
ಹೈಕಮಾಂಡ್ (High Command) ಸೂಚನೆ ಮೇರೆಗೆ ನ್ಯಾಷನಲ್ ಹೆರಾಲ್ಡ್ ಪ್ರಕರಣ (National Herald Case) ಸಂಬಂಧ ವಿಧಾನಸೌಧದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿ ಅಂಬೇಡ್ಕರ್ ಸಂವಿಧಾನದ ಸರ್ಕಾರ ಇಲ್ಲ. ಧಾರವಾಡದಲ್ಲಿಯೂ ಜನಿವಾರ ಪ್ರಕರಣ ನಡೆದಿದೆ. ನಂದನ್ ಎಂಬ ವಿದ್ಯಾರ್ಥಿಗೆ ಜನಿವಾರ ಕತ್ತರಿಸಿ ಪರೀಕ್ಷೆ ಬರೆಸಿದ್ದಾರೆ. ಪರೀಕ್ಷೆ ಅಂದರೆ ಎಲ್ಲ ವಿದ್ಯಾರ್ಥಿಗಳಲ್ಲೂ ಉದ್ವೇಗ ಇರುತ್ತದೆ. ಆದರೆ ಜನಿವಾರ ತೆಗೆಯಲು ತಿಳಿಸಿ ಆ ಭಾವನೆಯನ್ನು ಘಾಸಿ ಮಾಡುತ್ತೀರಾ. ಈ ಮೊದಲು ಸಾಬರಿಗೆ ಹಿಜಬ್ ತೆಗೆದಿದ್ದಕ್ಕೆ ಬಾಯಿ ಬಾಯಿ ಬಡಿದುಕೊಂಡಿದ್ದರು. ಜನಿವಾರ ಒಂದು ದಾರ ಅಷ್ಟೇ, ಅದು ಹಿಜಬ್ ಥರ ಬಟ್ಟೆ ಅಲ್ಲ. ಜನಿವಾರದಲ್ಲಿ ಕಾಪಿ ಮಾಡೋಕ್ಕಾಗುತ್ತಾ? ಶಿವದಾರವನ್ನೂ ತೆಗೆಸಿದ್ದಾರೆ, ಕತ್ತರಿ ಹಾಕಿದ್ದಾರೆ, ಒಕ್ಕಲಿಗರ ಉಡುದಾರ ಕಟ್, ತಾಳಿಗೂ ಭಾಗ್ಯ ಇಲ್ಲ. ಇದು ಮನೆಹಾಳ ಸರ್ಕಾರ, ದುರುಳ ಕಾಂಗ್ರೆಸ್, ಹೆಣ್ಣಿನ ತಾಳಿಗೆ ಕೈ ಹಾಕಿದವರು ಸರ್ವನಾಶವಾಗುತ್ತಾರೆ, ಓಲೆಯನ್ನೂ ತೆಗೆಸಿದ್ದಾರೆ. ಕಾಂಗ್ರೆಸ್ ಸತ್ತು ಹೋಗುತ್ತದೆ ಎಂದು ತಾಳಿ, ಓಲೆ ತೆಗೆಸಿದ ಫೋಟೋ ತೋರಿಸಿ ಆರೋಪಿಸಿದರು.ಇದನ್ನೂ ಓದಿ: ಆಗೋದೆಲ್ಲಾ ಒಳ್ಳೆಯದಕ್ಕೆ ಭಗವಂತ ನಮ್ಮೊಂದಿಗೆ ಇದ್ದಾನೆ: ಕಹಿ ಘಟನೆ ನೆನೆದ ವೈಷ್ಣವಿ
ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ದಮನ ಮಾಡುತ್ತಿದೆ, ಅವಮಾನ ಮಾಡುತ್ತಿದೆ. ಸರ್ಕಾರ ಹಿಂದೂಗಳನ್ನು ಅವಮಾನ ಮಾಡಿ ವಿಕೃತ ಸಂತೋಷ ಪಡುತ್ತದೆ. ಕೇಂದ್ರದ ಮಾನವ ಹಕ್ಕು ಆಯೋಗ, ರಾಜ್ಯ ಮಾನವ ಹಕ್ಕುಗಳ ಆಯೋಗಗಳು ಕೂಡಲೇ ಸರ್ಕಾರದ ಮೇಲೆ ಕ್ರಮ ಕೈಗೊಳ್ಳಲಿ. ಹೆಣ್ಣುಮಕ್ಕಳ ತಾಳಿ, ಓಲೆ ತೆಗೆಸಿದ ಪ್ರಕರಣ ಸಂಬಂಧ ನಾನು ಕೇಂದ್ರದ ಮಹಿಳಾ ಆಯೋಗಕ್ಕೆ ಪತ್ರ ಬರೆಯುತ್ತೇನೆ ಎಂದರು.
ಇನ್ನೂ ಸೋನಿಯಾ ಗಾಂಧಿ (Sonia Gandhi) ಹಾಗೂ ರಾಹುಲ್ ಗಾಂಧಿ (Rahul Gandhi) ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ದೇಶ ಲೂಟಿ ಮಾಡುವ ಪಕ್ಷ, ಮನಮೋಹನ್ ಸಿಂಗ್ (Manmohan Singh) ಕಾಲದಲ್ಲಿ ಹಗರಣಗಳ ಸರಮಾಲೆ ನಡೆದಿತ್ತು. ಈಗ ಪತ್ರಿಕೆಯನ್ನೇ ಲೂಟಿ ಮಾಡಿದ್ದಾರೆ. ಹಿಂದೆ 1937ರಲ್ಲಿ ಶುರುವಾದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯಲ್ಲಿ ಈಗ ಲೂಟಿ ಮಾಡಿದ್ದಾರೆ. 2008ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ನಷ್ಟದ ಕಾರಣ ನೀಡಿ ಮುಚ್ಚಲಾಗಿತ್ತು. ನಂತರ ಅದರ 3,000 ಕೋಟಿ ರೂ. ಆಸ್ತಿ ಮೇಲೆ ರಾಹುಲ್, ಸೋನಿಯಾ ಗಾಂಧಿ ಕಣ್ಣು ಬಿದ್ದಿತ್ತು. ನಂತರ ಯಂಗ್ ಇಂಡಿಯನ್ ಕಂಪನಿ ಎಂಬ ಚಾರಿಟೆಬಲ್ ಕಂಪನಿ ಮಾಡಿ ಅದರ ಆಸ್ತಿ ಲೂಟಿ ಮಾಡಿದ್ದಾರೆ. 50 ಲಕ್ಷ ರೂ. ಕೊಟ್ಟು ನ್ಯಾಷನಲ್ ಹೆರಾಲ್ಡ್ನ ಎರಡು ಸಾವಿರ ಕೋಟಿ ತಗೆದುಕೊಂಡರು.ನ್ಯಾಷನಲ್ ಹೆರಾಲ್ಡ್‌ನ ಆಸ್ತಿಗಳಿಂದ ಬಂದ ನೂರಾರು ಕೋಟಿ ಬಾಡಿಗೆ ಹಣದ ಲೆಕ್ಕವೂ ಕೊಡಲಿಲ್ಲ. ಇದು ಕಾಂಗ್ರೆಸ್‌ನ ಪತ್ರಿಕೆ ಅಲ್ಲ, ಸ್ವಾತಂತ್ರ‍್ಯ ಹೋರಾಟಗಾರರು ಆರಂಭಿಸಿದ್ದ ಪತ್ರಿಕೆ ಎಂದು ಆಕ್ರೋಶ ಹೊರಹಾಕಿದರು.
ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿಯೂ ವಿನಾಯಿತಿ ಸಿಗಲಿಲ್ಲ. ಕೋರ್ಟ್ ಆದೇಶದ ಹಿನ್ನೆಲೆ ಈ ಪ್ರಕರಣದ ತನಿಖೆ ಇಡಿ ನಡೆಸುತ್ತಿದೆ. ಕಾಂಗ್ರೆಸ್‌ಗೆ ಲೂಟಿ ಮಾಡುವ ಅಧಿಕಾರ ಯಾರು ಕೊಟ್ಟರು? ಚಾರಿಟೆಬಲ್ ಟ್ರಸ್ಟ್ ಅಡಿ ಅವ್ಯವಹಾರ ನಡೆದರೆ ಸರ್ಕಾರ ಮಧ್ಯಪ್ರವೇಶ ಮಾಡೇ ಮಾಡುತ್ತದೆ. ಯಂಗ್ ಇಂಡಿಯನ್ ಎಂಬ ನಾಮದ ಕಂಪನಿ ಹೇಗೆ ನ್ಯಾಷನಲ್ ಹೆರಾಲ್ಡ್ ಆಸ್ತಿ ಖರೀದಿಸಿತು? ಇವರು ದೇಶದ ಆಸ್ತಿ ಲೂಟಿ ಮಾಡಿದ್ರೂ ಯಾರೂ ಕೇಳಬಾರದಾ? ಇಂದಿರಾ ಅಂದ್ರೆ ಇಂಡಿಯಾ, ಇಂಡಿಯಾದ ಆಸ್ತಿಯೆಲ್ಲ ಇಂದಿರಾ ಕುಟುಂಬಕ್ಕೆ ಸೇರಿದ್ದು ಎನ್ನುವ ಮನಸ್ಥಿತಿಯಲ್ಲಿ ಕಾಂಗ್ರೆಸ್‌ನವರಿದ್ದಾರೆ. ಇವತ್ತು ಈ ಪ್ರಕರಣ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ, ಅದು ಬೂಟಾಟಿಕೆಯ ಪ್ರತಿಭಟನೆ, ಅದಕ್ಕೆ ಏನೂ ಅರ್ಥ ಇಲ್ಲ. ಕಾಂಗ್ರೆಸ್‌ಗೆ ಈಗ ರಾಹುಕಾಲವಿದೆ. ರಾಹು ಬಿಡಬೇಕಾದರೆ ಇನ್ನೂ ನೂರು ವರ್ಷ ಬೇಕು. ಎಪ್ಪತ್ತು ವರ್ಷ ಆಳ್ವಿಕೆ ನಡೆಸಿ ಲೂಟಿ ಮಾಡಿದ್ದರು. ಆಗ ಅವರ ಬಳಿಯಿದ್ದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡರು. ಎಮರ್ಜೆನ್ಸಿ ತಂದು ಆ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿದ್ದು ಯಾರು? ಕಾಂಗ್ರೆಸ್‌ನವರು 70 ಸಲ ಸಂವಿಧಾನಕ್ಕೆ ತಿದ್ದುಪಡಿ ತಂದು ಕಾನೂನು ಉಲ್ಲಂಘಿಸಿದ್ದರು ಎಂದು ಆಗ್ರಹಿಸಿದರು.ಇದನ್ನೂ ಓದಿ: ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನಾಳೆ ಭಾರತಕ್ಕೆ ಭೇಟಿ – ಪ್ರಧಾನಿ ಮೋದಿಯಿಂದ ವಿಶೇಷ ಔತಣಕ್ಕೆ ಸಿದ್ಧತೆ
-ಡೂಪ್ಲಿಕೇಟ್ ಜಾತಿಗಣತಿ ವರದಿ ಕೊಟ್ಟು, ರಕ್ತ ಕಣ್ಣೀರು ಪಿಕ್ಚರ್ ತೋರಿಸಿದ್ದಾರೆ ಎಂದ ವಿಪಕ್ಷ ನಾಯಕ
ಬೆಂಗಳೂರು: ಅಸಲಿ ಜಾತಿಗಣತಿ ವರದಿ (Caste Census Report) ಸಿಎಂ ಸಿದ್ದರಾಮಯ್ಯನವರ (CM Siddaramaiah) ಮನೆಯಲ್ಲಿದೆ, ಮೂಲ ಪ್ರತಿ ಕಳೆದುಹೋಗಿರುವ ಬಗ್ಗೆ ಸರ್ಕಾರ ನ್ಯಾಯಾಂಗ ತನಿಖೆ ನಡೆಸಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಆಗ್ರಹಿಸಿದರು.ಇದನ್ನೂ ಓದಿ: ರಾಜ್ಯದ 38ನೇ ಡಿಜಿ & ಐಜಿಪಿ ಆಗಿದ್ದ ಓಂ ಪ್ರಕಾಶ್ ಹತ್ಯೆ – ಪತ್ನಿಯಿಂದಲೇ ಕೊಲೆ
ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಅಸಲಿ ವರದಿ ಸಿದ್ದರಾಮಯ್ಯನವರ ಮನೆಯಲ್ಲಿದೆ. ಡೂಪ್ಲಿಕೇಟ್ ವರದಿ ವಿಧಾನಸೌಧದಲ್ಲಿದೆ. 2021ರಲ್ಲಿ ಜಯಪ್ರಕಾಶ್ ಹೆಗ್ಡೆಯವರೇ ಜಾತಿ ಜನಗಣತಿ ಮೂಲ ವರದಿ ಕಾಣೆಯಾಗಿದೆ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದರು. ಆದರೆ ಈಗ ಕೊಟ್ಟಿರುವುದು ಯಾವುದು? ಅಸಲಿನಾ? ನಕಲಿನಾ? ಡೂಪ್ಲಿಕೇಟ್ ಜಾತಿ ಜನಗಣತಿ ವರದಿ ಕೊಟ್ಟು, ರಕ್ತ ಕಣ್ಣೀರು ಪಿಕ್ಚರ್ ತೋರಿಸಲಾಗಿದೆ. ಜಾತಿ ಜನಗಣತಿಯ ಒರಿಜಿನಲ್ ಪ್ರತಿ ಸಿದ್ದರಾಮಯ್ಯ ಮನೆಯಲ್ಲಿದೆ. ಈಗ ಮಂಡಿಸಿರೋದು ಡೂಪ್ಲಿಕೇಟ್ ವರದಿ. ಈಗ ಮೂಲ ಪ್ರತಿ ಸಿಕ್ಕಿಲ್ಲ ಎಂದು ಸರ್ಕಾರ ಅದರ ಬಗ್ಗೆ ತನಿಖೆ ಮಾಡಿಸಲಿ. ಲೋಕಾಯುಕ್ತ ಅವರಿಗೆ ಕೊಟ್ಟರೆ ಮುಚ್ಚಿ ಹಾಕುತ್ತಾರೆ. ಮೂಲ ಹಸ್ತ ಪ್ರತಿ ನಾಪತ್ತೆ ಪ್ರಕರಣ ನ್ಯಾಯಾಂಗ ತನಿಖೆಗೆ ಕೊಡಬೇಕು ಎಂದರು.
ಇದು ತಾವೇ ಕೂತು ಮಾಡಿರುವ ಸಮೀಕ್ಷೆ. ಸಮೀಕ್ಷೆ ಯರ‍್ಯಾರು ಮಾಡಿದ್ದಾರೆ ಹಾಗೂ ಯಾವ ಶಿಕ್ಷಕರು ಸಮೀಕ್ಷೆಗೆ ಹೋಗಿದ್ದರು ಎಂದು ಅವರ ಹೆಸರು ಕೊಡಲಿ ಎಂದು ಒತ್ತಾಯಿಸಿದರು. ಇನ್ನೂ ಇದು ಡೂಪ್ಲಿಕೇಟ್ ವರದಿಯಾಗಿದ್ದು, ಇದು 169 ಕೋಟಿ ರೂ. ಗುಳುಂ ಮಾಡಿರುವ ದೊಡ್ಡ ಹಗರಣವಾಗಿದೆ. ನಮ್ಮ ಸರ್ಕಾರ ಬಂದಾಗ ಈ ಹಗರಣದ ತನಿಖೆ ಮಾಡಿಸುತ್ತೇವೆ ಎಂದು ತಿಳಿಸಿದರು.ಇದನ್ನೂ ಓದಿ: ಜಾತಿಗಣತಿಯಿಂದ ಸಬ್ ಕಾ ವಿಭಜನ್, ಸಬ್ ಕಾ ಶೋಷಣ್ – ವಿಶೇಷ ಅಧಿವೇಶನ ಕರೆದು ಸರ್ಕಾರ ಚರ್ಚಿಸಲಿ: ಸುನಿಲ್ ಕುಮಾರ್
ಬೆಂಗಳೂರು: ಸಿಇಟಿ (CET) ಪರೀಕ್ಷೆಯಲ್ಲಿ ಬ್ರಾಹ್ಮಣರಿಗೆ ಜನಿವಾರಕ್ಕೆ (Janivara) ಅವಕಾಶ ನೀಡದೇ ಸರ್ಕಾರ ಅಪಮಾನ ಮಾಡಿದೆ. ಹಿಂದೂಗಳ ಬಗ್ಗೆ ಎಷ್ಟು ಕೋಪ ಇದೆ ಎಂಬುದು ಗೊತ್ತಾಗುತ್ತದೆ. ಸಿದ್ದರಾಮಯ್ಯ (Siddaramaiah) ಕೂಡಲೇ ರಾಜ್ಯದ ಜನರ ಕ್ಷಮೆ ಕೋರಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R.Ashok) ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತಾಡಿದ ಅಶೋಕ್, ಬ್ರಾಹ್ಮಣರು ಮಾತ್ರವಲ್ಲದೆ, ಮರಾಠರು, ವೈಶ್ಯ ಸಮಯದಾಯದವರು ಕೂಡ ಜನಿವಾರ ಹಾಕುತ್ತಾರೆ. ಈ ಎಲ್ಲ ಸಮುದಾಯಗಳಿಗೆ ಅಪಮಾನ ಮಾಡಲಾಗಿದೆ. ಮುಸ್ಲಿಂ ಹುಡುಗಿಯರು ಹಿಜಬ್ ಹಾಕಲು ಅವಕಾಶ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಿ, ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಪರೀಕ್ಷಾ ಸಿಬ್ಬಂದಿ ಜನಿವಾರ ತೆಗೆಯಬೇಕು ಅಂದಿದ್ದು ತಪ್ಪು, ಅಂತಹ ಯಾವುದೇ ಮಾರ್ಗಸೂಚಿ ಇಲ್ಲ: ಕೆಇಎ
ವಕ್ಫ್ ಹೆಸರಲ್ಲಿ ಜನರ ಜಮೀನುಗಳನ್ನು ನುಂಗಿ ಹಾಕಲಾಗಿದೆ. ಮಂಗಳೂರಿನಲ್ಲಿ ಸಿದ್ದರಾಮಯ್ಯ ಪ್ರಾಯೋಜಿತ ಪ್ರತಿಭಟನೆ ನಡೆದಿದೆ. ಮುಸ್ಲಿಮರಿಗೆ ಪ್ರತ್ಯೇಕ ಕಾನೂನು ನೀಡಲು ಸಾಧ್ಯವಿಲ್ಲ. ನೆಲದ ಕಾನೂನನ್ನು ಎಲ್ಲರೂ ಪಾಲಿಸಬೇಕು ಎಂದು ಅಶೋಕ್ ಹೇಳಿದರು.
ತೀರ್ಥಹಳ್ಳಿಯಲ್ಲಿ ಸಿಇಟಿ ಪರೀಕ್ಷೆ ವೇಳೆಯಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ಬಲವಂತವಾಗಿ ಜನಿವಾರ ತೆಗೆಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದರೆ, ಬೀದರ್‌ನಲ್ಲಿ ಜನಿವಾರ ತೆಗೆಯಲೊಪ್ಪದ ವಿದ್ಯಾರ್ಥಿಯನ್ನು ಪರೀಕ್ಷೆಗೆ ಹಾಜರಾಗಲು ಬಿಡದೆ ವಿದ್ಯಾರ್ಥಿಯ ಭವಿಷ್ಯವನ್ನ ಹಾಳು ಮಾಡಿದೆ. ಇದು ಹಿಂದೂ ವಿರೋಧಿ ಸರ್ಕಾರ ಎಂದು ಅಶೋಕ್ ವಾಗ್ದಾಳಿ ನಡೆಸಿದರು.