Tag: r dhruvanarayana

  • ಕಡಿಮೆ ಅಂತರದ ಗೆಲುವು-ಸೋಲು ಕಂಡ ‘ಧೃವ’ ತಾರೆ! ಹ್ಯಾಟ್ರಿಕ್ ಮಿಸ್ ಮಾಡಿಕೊಂಡಿದ್ದ ಧೃವನಾರಾಯಣ್

    ಕಡಿಮೆ ಅಂತರದ ಗೆಲುವು-ಸೋಲು ಕಂಡ ‘ಧೃವ’ ತಾರೆ! ಹ್ಯಾಟ್ರಿಕ್ ಮಿಸ್ ಮಾಡಿಕೊಂಡಿದ್ದ ಧೃವನಾರಾಯಣ್

    ಮೈಸೂರು: ಮೈಸೂರು ಭಾಗದ ಜನರ ಮನಸ್ಸಿನಲ್ಲಿ ಧೃವತಾರೆ ಆಗಿರುವ ದಿವಂಗತ ಆರ್.ಧೃವನಾರಾಯಣ್ (R.Dhruvanarayana) ಸೋಲು ಮತ್ತು ಗೆಲುವು ಎರಡಲ್ಲೂ ದಾಖಲೆ ಬರೆದಿದ್ದಾರೆ.

    ಈಗ ರದ್ದಾಗಿರುವ ಸಂತೇಮರಹಳ್ಳಿ ಕ್ಷೇತ್ರದಿಂದ ಆರ್.ಧ್ರುವನಾರಾಯಣ 2004 ರಲ್ಲಿ ಮಾಜಿ ರಾಜ್ಯಪಾಲ ಬಿ.ರಾಚಯ್ಯ ಅವರ ಪುತ್ರ ಎ.ಆರ್.ಕೃಷ್ಣಮೂರ್ತಿ ವಿರುದ್ಧ ಕೇವಲ ಒಂದೇ ಒಂದು ಮತದ ಅಂತರದಿಂದ ಗೆದ್ದು ದಾಖಲೆ ಮಾಡಿದ್ದರು. ಅಲ್ಲಿಂದ ಅವರು ರಾಜಕಾರಣದಲ್ಲಿ ಹಿಂದಿರುಗಿ ನೋಡಿರಲಿಲ್ಲ. ಇದನ್ನೂ ಓದಿ: ಸಿದ್ದರಾಮಯ್ಯ ಇದ್ದರು ಒಮ್ಮೆಯೂ ಗೆದ್ದಿಲ್ಲ ಜನತಾ ಪರಿವಾರ – ಜನತಾ ಪರಿವಾರದ ಸೋಲಿನ ಚರಿತ್ರೆ

    2008 ರಲ್ಲಿ ಕೊಳ್ಳೇಗಾಲದಿಂದ ಶಾಸಕರಾಗಿದ್ದರು. 2009 ಹಾಗೂ 2014 ರಲ್ಲಿ ಚಾಮರಾಜನಗರದಿಂದ ಸಂಸದರಾಗಿದ್ದರು. ಆದರೆ 2019 ರಲ್ಲಿ ಧ್ರುವನಾರಾಯಣ್, ಶ್ರೀನಿವಾಸಪ್ರಸಾದ್ ಎದುರು ಇಡೀ ದೇಶದಲ್ಲಿಯೇ ಅತ್ಯಂತ ಕಡಿಮೆ ಅಂತರ ಅಂದರೆ 1,817 ಮತಗಳ ಅಂತರದಿಂದ ಸೋತಿದ್ದಾರೆ. ಈ ಮೂಲಕ ಹ್ಯಾಟ್ರಿಕ್ ಗೆಲುವಿನಿಂದ ತಪ್ಪಿಸಿಕೊಂಡಿದ್ದಾರೆ.

     

    ಇದೇ ಕ್ಷೇತ್ರದಲ್ಲಿ ಎ.ಸಿದ್ದರಾಜು 1996, 1998 ರಲ್ಲಿ ಗೆದ್ದು, 1999 ರಲ್ಲಿ ಸೋಲುವ ಮೂಲಕ ಹ್ಯಾಟ್ರಿಕ್‌ನಿಂದ ತಪ್ಪಿಸಿಕೊಂಡಿದ್ದರು. ಈ ಕ್ಷೇತ್ರದಲ್ಲಿ ಎಸ್.ಎಂ.ಸಿದ್ದಯ್ಯ ಮೊದಲ ಹ್ಯಾಟ್ರಿಕ್, ವಿ. ಶ್ರೀನಿವಾಸಪ್ರಸಾದ್ ನಂತರ ಹ್ಯಾಟ್ರಿಕ್ ಗೆಲವು ದಾಖಲಿಸಿದವರು. ಶ್ರೀನಿವಾಸಪ್ರಸಾದ್ ಹಾಗೂ ಎಸ್.ಎಂ. ಸಿದ್ದಯ್ಯ (ದ್ವಿಸದಸ್ಯ ಕ್ಷೇತ್ರ ಮೈಸೂರು ಸೇರಿ) ಅವರು ಸತತ ನಾಲ್ಕು ಗೆಲುವು ದಾಖಲಿಸಿದವರು. ಇದನ್ನೂ ಓದಿ: ಇಲ್ಲಿ ಎಲ್ಲಾ ಜಾತಿಗೂ ಗೆಲುವು! ಎಲ್ಲಾ ಜಾತಿಗೂ ಸೋಲು!

  • ಧ್ರುವನಾರಾಯಣ ಪತ್ನಿ ವೀಣಾ ನಿಧನ

    ಧ್ರುವನಾರಾಯಣ ಪತ್ನಿ ವೀಣಾ ನಿಧನ

    ಮೈಸೂರು: ಮಾಜಿ ಸಂಸದ ದಿವಂಗತ ಆರ್ ಧ್ರುವನಾರಾಯಣ (R Dhruvanarayana) ಅವರ ಪತ್ನಿ ವೀಣಾ (Veena) ಶುಕ್ರವಾರ ನಿಧನರಾಗಿದ್ದಾರೆ.

    ಕ್ಯಾನ್ಸರ್ (Cancer) ಖಾಯಿಲೆಯಿಂದ ಬಳಲುತ್ತಿದ್ದ ಧ್ರುವನಾರಾಯಣ ಅವರ ಪತ್ನಿ ವೀಣಾ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

    ಕಳೆದ ತಿಂಗಳಷ್ಟೇ ಕೆಪಿಸಿಸಿ ಕಾರ್ಯಧ್ಯಕ್ಷ ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಕಳೆದ 2 ವರ್ಷಗಳಿಂದ ಧ್ರುವನಾರಾಯಣ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಈ ಬಾರಿ ನಂಜನಗೂಡಿನಿಂದ ಸ್ಪರ್ಧಿಸಲು ಸಿದ್ಧತೆ ಮಾಡಿಕೊಂಡಿದ್ದರು. ಇವರು 2 ಬಾರಿ ಶಾಸಕರಾಗಿ 1 ಬಾರಿ ಸಂಸದರಾಗಿದ್ದರು. ಇದನ್ನೂ ಓದಿ: ವರುಣಾಗೆ ಬಿ.ವೈ ವಿಜಯೇಂದ್ರ ಹೆಸರು ಶಿಫಾರಸ್ಸಿಲ್ಲ!

  • ನನ್ನ ತಂದೆ ಯಾವತ್ತೂ ರಾಜಕೀಯ ಪಾಠ ಹೇಳಿಕೊಡಲಿಲ್ಲ – ಸಾರ್ವಜನಿಕ ವೇದಿಕೆಯಲ್ಲಿ ದರ್ಶನ್ ಧ್ರುವನಾರಾಯಣ ಮೊದಲ ಭಾಷಣ

    ನನ್ನ ತಂದೆ ಯಾವತ್ತೂ ರಾಜಕೀಯ ಪಾಠ ಹೇಳಿಕೊಡಲಿಲ್ಲ – ಸಾರ್ವಜನಿಕ ವೇದಿಕೆಯಲ್ಲಿ ದರ್ಶನ್ ಧ್ರುವನಾರಾಯಣ ಮೊದಲ ಭಾಷಣ

    ಮೈಸೂರು: ಮಾಜಿ ಸಂಸದ ದಿವಂಗತ ಆರ್. ಧ್ರುವನಾರಾಯಣ ಅವರ ಪುತ್ರ ದರ್ಶನ್ ಧ್ರುವನಾರಾಯಣ (Darshan Dhruvanarayana) ಇದೇ ಮೊದಲಬಾರಿಗೆ ಸಾರ್ವಜನಿಕ ವೇದಿಕೆಯಲ್ಲಿ ಮಾತನಾಡಿದ್ದಾರೆ.

    ಹೆಚ್.ಡಿ ಕೋಟೆ ತಾಲ್ಲೂಕು ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಕೆಪಿಸಿಸಿ (KPCC) ಕಾರ್ಯಾಧ್ಯಕ್ಷ ದಿವಂಗತ ಆರ್.ಧ್ರುವನಾರಾಯಣ (R Dhruvanarayana) ಅವರ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ಧನ್ಯವಾದ, ಮನೆ ಖಾಲಿ ಮಾಡುವೆ – ಲೋಕಸಭೆಯ ವಸತಿ ಸಮಿತಿ ಪತ್ರಕ್ಕೆ ರಾಗಾ ಉತ್ತರ

    `ನಮ್ಮ ತಂದೆ ನಮ್ಮೊಂದಿಗೆ ದೈಹಿಕವಾಗಿ ಇಲ್ಲ. ಆದರೆ ಮಾನಸಿಕವಾಗಿ ಇದ್ದಾರೆ. ನಮ್ಮ ತಂದೆಯವರ ಅಂತಿಮ ಕಾರ್ಯಕ್ಕೆ ರಾಜ್ಯಾದ್ಯಂತ ಜನ ಬಂದಿದ್ದರು. ಕುಟುಂಬಕ್ಕೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು. ಸಿದ್ದರಾಮಯ್ಯ, ಜಾರಕಿಹೊಳಿ ಸೇರಿದಂತೆ ಎಲ್ಲರಿಗೂ ನಾನು ಧನ್ಯವಾದ, ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ದರ್ಶನ್‌ ಭಾವುಕರಾಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯಾವುದೇ ಕ್ರಮ ಕೈಗೊಂಡಿಲ್ಲ, ಈಗ ಬಿಜೆಪಿ ಮೇಲೆ ಗೂಬೆ ಕೂರಿಸ್ತಿದೆ: ಆರಗ ಜ್ಞಾನೇಂದ್ರ

    ನನ್ನ ತಂದೆ ನನಗೆ ಯಾವತ್ತೂ ರಾಜಕೀಯ ಪಾಠ ಹೇಳಿಕೊಡಲಿಲ್ಲ. ಅವರ ಜನಸೇವೆಯನ್ನ ನೋಡಿ ಬೆಳೆದವನು ನಾನು. ನಮ್ಮ ಇಡೀ ಕುಟುಂಬ ಜನಸೇವೆ ಮಾಡುತ್ತಾ ಬಂದಿದೆ. ಇನ್ನಷ್ಟು ಪ್ರಾಮಾಣಿಕ ಪ್ರಯತ್ನ ಮಾಡಲು ಆಶೀರ್ವಾದ ನಮ್ಮ ಕುಟುಂಬದ ಮೇಲೆ ಇರಲಿ. ನನ್ನ ತಂದೆಯ ಮೇಲೆ ಇಟ್ಟಂತೆ ನನ್ನ ಮೇಲೆ ನಂಬಿಕೆ ಇಡಿ. ಉಳಿಸಿಕೊಂಡು ಹೋಗುತ್ತೇನೆ ಎಂದು ಮನವಿ ಮಾಡಿದ್ದಾರೆ.

    ನುಡಿ ನಮನ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah), ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಶಾಸಕ ಅನಿಲ್ ಚಿಕ್ಕಮಾದು, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜೆ ವಿಜಯಕುಮಾರ್ ಮೊದಲಾದವರು ಪಾಲ್ಗೊಂಡಿದ್ದರು.

  • ಧ್ರುವನಾರಾಯಣ್ ನೆನೆದು ಕಣ್ಣೀರಿಟ್ಟ ಪ್ರತಾಪ್ ಸಿಂಹ

    ಧ್ರುವನಾರಾಯಣ್ ನೆನೆದು ಕಣ್ಣೀರಿಟ್ಟ ಪ್ರತಾಪ್ ಸಿಂಹ

    ಮೈಸೂರು: ಸಂಸದ ಪ್ರತಾಪ್ ಸಿಂಹ (Pratap Simha) ಸೇರಿದಂತೆ ಹಲವು ಗಣ್ಯರು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ (R Dhruvanarayana) ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

    ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಧ್ರುವನಾರಾಯಣ್ ಅವರನ್ನ ನೆನೆದು ಭಾವುಕರಾದರು. ಬಿಕ್ಕಳಿಸಿ ಬಿಕ್ಕಳಿಸಿ ಕಣ್ಣೀರಿಟ್ಟರು. ಇದನ್ನೂ ಓದಿ: ಮಹಿಳೆಯರ ಮನ ಗೆಲ್ಲಲು ಹೊರಟ ಬಿಜೆಪಿ – ಕಮಲ್ ಮಿತ್ರ ಹೆಸರಿನಲ್ಲಿ ಹೊಸ ಅಭಿಯಾನ

    `ಧ್ರುವನಾರಾಯಣ್ ಸಾಹೇಬ್ರ ನಿಧನ ಸುದ್ದಿ ಕೇಳಿ ಮನಸ್ಸಿಗೆ ಆಘಾತವಾಯಿತು. ಪಕ್ಷ, ರಾಜಕಾರಣ ಬೇರೆ ಇರಬಹುದು. ಆದರೆ ಅವರ ವ್ಯಕ್ತಿತ್ವ ಎಲ್ಲರ ಮನಸ್ಸನ್ನು ಗೆಲ್ಲುವಂತಹದ್ದು. ನಾನು ಮೊದಲ ಬಾರಿ ಸಂಸದನಾಗಿ ಆಯ್ಕೆಯಾದಾಗ ಅನುಭವವಿರಲಿಲ್ಲ. ಹೇಗೆ ಸಭೆ ಮಾಡಬೇಕು? ದಿಶಾ (DISHA) ಮೀಟಿಂಗ್, ಫೈಲ್ ಫಾಲೋ ಅಪ್ ಹೇಗೆ ಮಾಡಬೇಕು? ಯೋಜನೆಗಳನ್ನ ಯಾವ ರೀತಿ ತರಬೇಕೆಂದು ನನಗೆ ಮಾರ್ಗದರ್ಶನ ನೀಡಿದ್ದರು ಎಂದು ನೆನಪಿಸಿಕೊಂಡರು. ಇದನ್ನೂ ಓದಿ: Infosys ಅಧ್ಯಕ್ಷ ಸ್ಥಾನಕ್ಕೆ ಮೋಹಿತ್ ಜೋಶಿ ರಾಜೀನಾಮೆ

    dhruva narayan dk shivakumar

    ಇತ್ತೀಚೆಗೆ ಸಿಕ್ಕಾಗ ಪ್ರತಾಪ್ ಒಳ್ಳೆಯ ಕೆಲಸ ಮಾಡ್ತಿದ್ದೀಯಾ ಎಂದು ಬೆನ್ನು ತಟ್ಟಿದ್ದರು. ಚಾಮರಾಜನಗರದಂತಹ ಹಿಂದುಳಿದ ಜಿಲ್ಲೆಯ ಅಭಿವೃದ್ಧಿಗೆ ಧ್ರುವನಾರಾಯಣ್ ಅವರ ಕೊಡುಗೆ ಅಪಾರವಾಗಿದೆ. ಗುಂಡ್ಲುಪೇಟೆ-ಕೇರಳಕ್ಕೆ ಹೋಗುವ ರಸ್ತೆ ಧ್ರುವನಾರಾಯಣ್ ಅವರ ಕೊಡುಗೆ. ಅವರು ಸದಾ ಜನರ ಬಗ್ಗೆಯೇ ಯೋಚಿಸುತ್ತಿದ್ದರು. ಈ ದುರಂತ ಅಂತ್ಯ ತುಂಬಲಾರದ ನಷ್ಟ. ನಾವು ಒಳ್ಳೆಯ ವ್ಯಕ್ತಿಯನ್ನ ಕಳೆದುಕೊಂಡಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಆ ಭಗವಂತ ನೀಡಲಿ ಎಂದು ಸಂತಾಪ ಸೂಚಿಸಿದರು.

  • ಸಿ.ಟಿ ರವಿಯನ್ನ ಲೂಟಿ ರವಿ ಅಂತ ಹೇಳ್ತಾರೆ: ಧ್ರುವನಾರಾಯಣ್

    ಸಿ.ಟಿ ರವಿಯನ್ನ ಲೂಟಿ ರವಿ ಅಂತ ಹೇಳ್ತಾರೆ: ಧ್ರುವನಾರಾಯಣ್

    ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಸಿ.ಟಿ ರವಿಯನ್ನು ಲೂಟಿ ರವಿ ಅಂತ ಹೇಳುತ್ತಾರೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಧ್ರುವನಾರಾಯಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ೪ ಬಾರಿ ಶಾಸಕರಾಗಿ, ೨ ಬಾರಿ ಮಂತ್ರಿಗಳಾದ್ರೂ ಅಭಿವೃದ್ಧಿ ಕೆಲಸ ಮಾಡಿಲ್ಲ. ಧರ್ಮ-ವ್ಯಕ್ತಿಗಳನ್ನು ಗುರಿಯಾಗಿಸಿ ಹೇಳಿಕೆ ಕೊಡೊದೇ ಅವರ ಕಾಯಕ ಸಿ.ಟಿ ರವಿ ಒಬ್ಬ ವಿಕೃತ ಮನಸ್ಸುಳ್ಳ ಮನುಷ್ಯ ಎಂದು ಸಿಡಿದರು. ಇದನ್ನೂ ಓದಿ: ಟೋಲ್ ಆದಾಯ ಮುಂದಿನ 3 ವರ್ಷಗಳಲ್ಲಿ 1.40 ಲಕ್ಷ ಕೋಟಿ ರೂ.ಗೆ ಏರಿಕೆ

    ಕಾಂಗ್ರೆಸ್ ಪಕ್ಷ ಬೆಂಕಿ ಹಚ್ಚುವ ಮನಸ್ಥಿತಿಯ ಪಕ್ಷ ಅಂತ ಸಿ.ಟಿ ರವಿಯವರ ಹೇಳಿಕೆ ಹಿನ್ನೆಲೆ ಪ್ರತಿಕ್ರಿಯೆ ನೀಡಿದ ಅವರು, ನಿಮಗೆ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಬಿಜೆಪಿ ಅಂದರೆ ಬೆಂಕಿ ಹಚ್ಚುವ ಜನರ ಪಕ್ಷ ಅಂತ ಹೇಳಬೇಕಾಗುತ್ತೆ. ಯಡಿಯೂರಪ್ಪ ಸಿಎಂ ಆಗಿ ೪ ತಿಂಗಳ ಒಳಗೆ ೪೩ ಕೇಸ್ ವಾಪಸ್ ಪಡೆದರು. ೪೩ ಕೇಸಲ್ಲಿ ಮೊದಲನೇ ಪ್ರಕರಣವೇ ಸಿಟಿ ರವಿ ಅವರದ್ದು. ಬಿಜೆಪಿ ಶಾಸಕರ ಬೆಂಕಿ, ದೌರ್ಜನ್ಯ ಕೇಸ್‌ನ್ನ ವಿತ್ ಡ್ರಾ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: MES ಗಲಭೆಗೆ ಕಾಂಗ್ರೆಸ್, ಬಿಜೆಪಿ ಕೈವಾಡ ಇಲ್ಲ, ಇದು ಪುಂಡ ಪೋಕರಿಗಳ ಕೆಲಸ: ಪ್ರಹ್ಲಾದ್ ಜೋಶಿ

    ಇದರಲ್ಲೇ ಗೊತ್ತಾಗುತ್ತೆ ಯಾರು ಕೇಸಲ್ಲಿ ಸಿಕ್ಕಿಹಾಕಿಕೊಂಡಿದ್ದರು, ಯಾರ ಕೇಸನ್ನ ವಿತ್ ಡ್ರಾ ಮಾಡಿದ್ರು ಅನ್ನೋದು? ಕೇಂದ್ರ ಗ್ರಹ ಸಚಿವ ಅಮಿತ್ ಷಾ ಎರಡು ವರ್ಷ ಜೈಲಲ್ಲಿದ್ದರು. ನಮ್ಮ ರಾಜ್ಯದಲ್ಲಿ ಸಿಎಂ, ಸಚಿವರು ಜೈಲು ಸೇರಿದ್ದರು. ನಿಮ್ಮ ಮನೆಯಲ್ಲಿಯೇ ವಾತಾವರಣ ಕೊಳೆತು ನಾರುತ್ತಿದೆ. ಕಾಂಗ್ರೆಸ್, ಡಿ.ಕೆ ಶಿವಕುಮಾರ್ ಬಗ್ಗೆ ಮಾತನಾಡುವ ನೈತಿಕತೆ ನಿಮಗಿಲ್ಲ ಎಂದು ಸಿಡಿದರು.

  • ಮೋದಿ, ಶಾ ದೇಶ ವಿಭಜಿಸಲು ಹೊರಟಿದ್ದಾರೆ: ಆರ್.ಧ್ರುವನಾರಾಯಣ

    ಮೋದಿ, ಶಾ ದೇಶ ವಿಭಜಿಸಲು ಹೊರಟಿದ್ದಾರೆ: ಆರ್.ಧ್ರುವನಾರಾಯಣ

    ಚಾಮರಾಜನಗರ: ದೇಶದ ಕರಾಳ ಕಾನೂನಾದ ಪೌರತ್ವ ವಿಧೇಯಕದ ವಿರುದ್ಧ ಕಾಂಗ್ರೆಸ್ ಕಾನೂನು ಹೋರಾಟ ಮಾಡಲಿದೆ ಎಂದು ಮಾಜಿ ಸಂಸದ ಆರ್ ಧ್ರುವನಾರಾಯಣ ಹೇಳಿದರು.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಾಗಲೇ ಕಾನೂನು ವಿಭಾಗ ಸಕ್ರಿಯವಾಗಿದ್ದು ಸಂವಿಧಾನದ ಆಶಯಗಳಿಗೆ ಧಕ್ಕೆ ತರುವ ಕಾನೂನನ್ನು ಯಾರೂ ಒಪ್ಪಲು ಸಾಧ್ಯವಿಲ್ಲ. ಸಿಎಎ ಮತ್ತು ಎನ್‍ಆರ್‍ಸಿ ದೇಶದ ಅಸ್ಥಿರತೆಗೆ ಕಾರಣವಾಗಲಿದ್ದು, ಆರ್ಥಿಕ ಪರಿಸ್ಥಿತಿ ಮತ್ತು ಭವಿಷ್ಯದ ಯೋಜನೆಗಳ ಮೇಲೆ ದುಷ್ಪರಿಣಾಮ ಬೀರಲಿವೆ. ರಾಜ್ಯವ್ಯಾಪಿ ಸೆಕ್ಷನ್ 144 ಜಾರಿಗೊಳಿಸಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡದೇ ಪೊಲೀಸರ ಮೂಲಕ ನಿಯಂತ್ರಣ ಹೇರುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದರು.

    ಕೆಲವರ ಕಿಡಿಗೇಡಿತನಕ್ಕೆ ಅಮಾಯಕರ ಮೇಲೆ ಏಕಾಏಕಿ ಗುಂಡು ಹಾರಿಸಿದ್ದು, ಗುಂಡು ಹಾರಿಸಿದರು ಯಾರೂ ಮೃತಪಡಲಿಲ್ಲ ಎಂಬ ಪೊಲೀಸರೊಬ್ಬರ ಮಾತು ತೀವ್ರ ಖಂಡನೀಯ. 5 ವರ್ಷ ಕಾಂಗ್ರೆಸ್ ಆಡಳಿತದಲ್ಲಿ ಒಂದೂ ಈ ರೀತಿಯ ಅವಘಡಗಳಾಗಿರಲಿಲ್ಲ. ಆದರೆ, ಬಿಜೆಪಿ ಬಂದಾಗಲೆಲ್ಲ ಗೋಲಿಬಾರಾಗಿದೆ. ಅಂದು ರೈತರಿಗೆ ಗುಂಡಿಟ್ಟಿದ್ದರು. ಇಂದು ಅಮಾಯಕರನ್ನು ಗುಂಡಿಟ್ಟು ಕೊಂದಿದ್ದಾರೆ ಎಂದು ಕಿಡಿಕಾರಿದರು.