Tag: R R Nagar

  • ಕರ್ನಾಟಕಕ್ಕೆ ಧನ್ಯವಾದಗಳು – ಕನ್ನಡದಲ್ಲಿಯೇ ಅಮಿತ್ ಶಾ ಟ್ವೀಟ್

    ಕರ್ನಾಟಕಕ್ಕೆ ಧನ್ಯವಾದಗಳು – ಕನ್ನಡದಲ್ಲಿಯೇ ಅಮಿತ್ ಶಾ ಟ್ವೀಟ್

    ನವದೆಹಲಿ: ಉಪ ಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನ ಗೆಲ್ಲಿಸಿದ ಕರ್ನಾಟಕದ ಮತದಾರರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡದಲ್ಲಿಯೇ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದಾರೆ.

    ಅಮಿತ್ ಶಾ ಟ್ವೀಟ್: ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದಗಳು. ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಡಿ ರಾಜ್ಯವು ಅಭಿವೃದ್ಧಿ ಸಾಧಿಸಲಿದೆ ಎಂದು ತಿಳಿಸಿದ್ದಾರೆ.

    ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಯಾಗಿ ಚುನಾವಣೆ ಕಣದಲ್ಲಿದ್ದ ಮುನಿರತ್ನ 1,25,990 ಮತ ಪಡೆಯುವ ಮೂಲಕ ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ. ಸಮೀಪದ ಪ್ರತಿ ಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್. 67,877 ಮತ ಪಡೆದಿದ್ದಾರೆ. ಇನ್ನು ಶಿರಾ ಕ್ಷೇತ್ರದಲ್ಲಿ ಬಿಜೆಪಿಯ ರಾಜೇಶ್ ಗೌಡ 76,564 ಮತ ಪಡೆದು ಐತಿಹಾಸಿಕ ದಾಖಲೆ ಬರೆದಿದ್ದಾರೆ.

  • ಆರ್.ಆರ್.ನಗರ ಸೋಲಿಗೆ ಕಾರಣ ತಿಳಿಸಿದ ಸಿದ್ದರಾಮಯ್ಯ

    ಆರ್.ಆರ್.ನಗರ ಸೋಲಿಗೆ ಕಾರಣ ತಿಳಿಸಿದ ಸಿದ್ದರಾಮಯ್ಯ

    ಬೆಂಗಳೂರು: ಅಭ್ಯರ್ಥಿಯ ಆಯ್ಕೆಯ ವಿಳಂಬವಾಗಿದ್ದರಿಂದ ಆರ್.ಆರ್.ನಗರದ ಸೋಲಿಗೆ ಕಾರಣ ಇರಬಹುದು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎರಡೂ ಸೋಲುಗಳು ಕುರಿತು ಸಾಲು ಸಾಲು ಟ್ವೀಟ್ ಮೂಲಕ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದಾರೆ.

    ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಸೋಲನ್ನು ನಾವು ವಿನೀತರಾಗಿ ಒಪ್ಪಿಕೊಂಡಿದ್ದೇವೆ. ಆದರೆ ಇದು ಪ್ರಜಾಪ್ರಭುತ್ವದ ಸೋಲು. ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು ಎನ್ನುವುದು ವಿಷಾದದ ಸಂಗತಿ. ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರರೂಢ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ. ಆಡಳಿತ ಪಕ್ಷದ ಶಾಸಕರಿದ್ದರೆ ತಮ್ಮ ಕ್ಷೇತ್ರಕ್ಕೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ಜನರಲ್ಲಿರುತ್ತದೆ. ಇದೇ ಫಲಿತಾಂಶ ಸಾಮಾನ್ಯ ಚುನಾವಣೆಯಲ್ಲಿ ನಿರೀಕ್ಷಿಸಲಾಗದು. ಇದನ್ನೂ ಓದಿ: ಮತದಾರರ ತೀರ್ಪಿಗೆ ತಲೆ ಬಾಗುತ್ತೇವೆ, ಕಾರ್ಯಕರ್ತರು ಧೃತಿಗೆಡಬಾರದು: ಡಿ.ಕೆ.ಸುರೇಶ್

    ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವನ್ನು ಸ್ವೀಕರಿಸಲೇಬೇಕು. ನಾವೂ ಒಪ್ಪಿಕೊಂಡಿದ್ದೇವೆ. ಇದರಿಂದ ಪಕ್ಷದ ಕಾರ್ಯಕರ್ತರು ಕಂಗೆಡಬೇಕಾಗಿಲ್ಲ. ಇದರಿಂದ ಯಾವ ಪಕ್ಷವೂ ಬಲಶಾಲಿಯಾಗುವುದಿಲ್ಲ, ಯಾವ ಪಕ್ಷವೂ ಬಲಹೀನವಾಗುವುದಿಲ್ಲ. ಇದು ಸಮಗ್ರ ರಾಜ್ಯದ ಜನಾಭಿಪ್ರಾಯ ಅಲ್ಲ, ಇದು ಎರಡು ಸ್ಥಾನಗಳಿಗೆ ನಡೆದ ಚುನಾವಣೆ ಮಾತ್ರ. ನಾನು ಮುಖ್ಯಮಂತ್ರಿಯಾಗಿದ್ದಾಗ ಜನರಿಗೆ ಒಳ್ಳೆಯದಾಗಲಿ, ನಮ್ಮ ಶಾಸಕನೂ ರಾಜಕೀಯವಾಗಿ ಜನಪ್ರಿಯನಾಗಲಿ ಎಂದು ಆರ್.ಆರ್.ನಗರಕ್ಕೆ ಸುಮಾರು ರೂ.2000 ಕೋಟಿ ಕಾಮಗಾರಿಯನ್ನು ಮಂಜೂರು ಮಾಡಿದ್ದೆ. ಅದರ ಫಲ ನಮ್ಮ ಪಕ್ಷಕ್ಕೆ ಸಿಗಲಿಲ್ಲ, ಅವರಿಗೆ ಸಿಕ್ಕಿದೆ. ಇದನ್ನೂ ಓದಿ: ಚುನಾವಣೆ ಗೆಲುವಿಗೆ ಬಂಡೆ ಅಡ್ಡಿಬರಲೇ ಇಲ್ಲ- ಡಿಕೆಶಿ ಕುಟುಕಿದ ಕೋಟ

    ಮುನಿರತ್ನ ಅವರು ಪಕ್ಷಾಂತರ ಮಾಡಿದ ದಿನದಿಂದ ಚುನಾವಣಾ ತಯಾರಿ ಪ್ರಾರಂಭಿಸಿದ್ದರು. ನಾವು ನಮ್ಮ ಅಭ್ಯರ್ಥಿಯ ಆಯ್ಕೆಯನ್ನು ಸ್ವಲ್ಪ ತಡವಾಗಿ ಮಾಡಿದೆವು, ಇದರಿಂದಾಗಿ ಪ್ರಚಾರ ವಿಳಂಬವಾಗಿ ಪ್ರಾರಂಭಿಸಬೇಕಾಯಿತು. ಸೋಲಿಗೆ ಇದೂ ಒಂದು ಕಾರಣ ಇರಬಹುದು ಎಂದಿದ್ದಾರೆ. ಇದನ್ನೂ ಓದಿ: ಇದು ಬಿಎಸ್‍ವೈ ಸರ್ಕಾರದ ಜನಪರ ಕಾರ್ಯಗಳಿಗೆ ಜನ ನೀಡಿದ ಬೆಂಬಲ – ಸುಧಾಕರ್ ಬಣ್ಣನೆ

    ಶಿರಾದಲ್ಲಿ ಟಿ.ಬಿ.ಜಯಚಂದ್ರ ಜನತೆಯ ಬದುಕು ಉಳಿಸುವ ನದಿನೀರು ಹರಿಸಿದ್ದರು. ಬಿಜೆಪಿಯವರು ಬಂದು ಅಕ್ರಮವಾಗಿ ಸಂಪಾದಿಸಿದ್ದ ಹಣದ ಹೊಳೆ ಹರಿಸಿದ್ದರು. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾದ ಬೆಳವಣಿಗೆ. ಜನರ ಸೇವೆ ಮಾಡಿದವರನ್ನು ಜನ ಪ್ರಾಮಾಣಿಕವಾಗಿ ಗುರುತಿಸಿ ಹರಸಬೇಕು ಎಂದು ಬೇಸರದ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಲೀಡರ್, ವರ್ಕರ್ ಪ್ರಾಬ್ಲಂ ಇಲ್ಲ, ವಿ ಹ್ಯಾವ್ ಫೇಲ್ : ಡಿಕೆಶಿ

    ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಹೀನಾಯವಾಗಿ ಸೋತಿರುವುದರಿಂದ ಆ ಪಕ್ಷದ ಮತಗಳು ಬಿಜೆಪಿ ಬುಟ್ಟಿಗೆ ಬಿದ್ದು ಅವರ ಗೆಲುವಿಗೆ ನೆರವಾಯಿತು. ಮುಖ್ಯವಾಗಿ ಶಿರಾದಲ್ಲಿ ಜೆಡಿಎಸ್ ತನ್ನ ಮತಗಳನ್ನಾದರೂ ಉಳಿಸಿಕೊಂಡಿದ್ದರೆ ಖಂಡಿತ ಬಿಜೆಪಿ ಇಷ್ಟು ಸುಲಭದಲ್ಲಿ ಗೆಲ್ಲುತ್ತಿರಲಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆರ್‌ಆರ್‌ನಗರ ಕುರುಕ್ಷೇತ್ರ ಗೆದ್ದ ಮುನಿರತ್ನ – ಗೆಲುವಿಗೆ ಕಾರಣವಾಗಿದ್ದು ಏನು?

  • ನಮ್ಮ ಭವಿಷ್ಯ, ಕ್ಷೇತ್ರದ ಅಭಿವೃದ್ಧಿಗಾಗಿ ಮತ ಚಲಾಯಿಸಿ: ಪ್ರೇಮ್

    ನಮ್ಮ ಭವಿಷ್ಯ, ಕ್ಷೇತ್ರದ ಅಭಿವೃದ್ಧಿಗಾಗಿ ಮತ ಚಲಾಯಿಸಿ: ಪ್ರೇಮ್

    ಬೆಂಗಳೂರು: ಏನೇ ಕೊರೊನಾ ಇದ್ದರೂ ನಮ್ಮ ಭವಿಷ್ಯಕ್ಕಾಗಿ ವೋಟ್ ಮಾಡಲೇಬೇಕು. ಕೊರೊನಾ ಜೊತೆ ಬದುಕೋದನ್ನ ಜನರು ಅಭ್ಯಾಸ ಮಾಡಿಕೊಂಡಿದ್ದಾರೆ. ಕೊರೊನಾ ಬಳಿಕ ಜನರ ಬದುಕು ಸಾಮಾನ್ಯ ಪರಿ ಸ್ಥಿತಿಗೆ ಮರಳುತ್ತಿದೆ ಎಂದು ಹೇಳಿದರು.

    ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಕೊಟ್ಟಿಗೆಪಾಳ್ಯ ವಾರ್ಡ್ ನಲ್ಲಿ ನಟ ಪ್ರೇಮ ಕುಟುಂಬ ಸಮೇತರಾಗಿ ಆಗಮಿಸಿ ಮತ ಚಲಾಯಿಸಿದರು. ಮತ ಚಲಾಯಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಪ್ರೇಮ್, ಮತದಾನ ನಮ್ಮ ಹಕ್ಕು ಮತ್ತು ಎಲ್ಲರ ಭವಿಷ್ಯವನ್ನ ನಿರ್ಧಾರ ಮಾಡುತ್ತದೆ. ಹಾಗಾಗಿ ಚುನಾವಣೆಯಲ್ಲಿ ಎಲ್ಲರೂ ವೋಟ್ ಮಾಡಬೇಕು. ನಾನು ಸಹ ಕುಟುಂಬದ ಜೊತೆ ಬಂದು ಮತ ಚಲಾಯಿಸಿದ್ದೇನೆ. ಚುನಾವಣೆ ಆಯೋಗ ಮತಗಟ್ಟೆಯಲ್ಲಿ ಕೊರೊನಾ ಮುನ್ನೆಚ್ಚರಿಕೆಗಳನ್ನು ತೆಗದುಕೊಂಡಿದೆ. ಆರಕ್ಷಕ ಮತ್ತು ಚುನಾವಣಾಧಿಕಾರಿಗಳಿಗೆ ಧನ್ಯವಾದ ಹೇಳುತ್ತೇನೆ. ತುಂಬಾ ಶಿಸ್ತುಬದ್ಧವಾಗಿ ಕೊರೊನಾ ನಿಯಮಗಳನ್ನ ಪಾಲಿಸುವಂತೆ ನೋಡಿಕೊಳ್ಳುತ್ತಿದ್ದಾರೆ ಎಂದರು.

    ಕೊರೊನಾ ಕ್ಯಾನ್ಸರ್ ಗಿಂತ ದೊಡ್ಡ ರೋಗವೇನು ಅಲ್ಲ. ಭಯದಿಂದ ಮನೆಯಲ್ಲಿ ಕುಳಿತುಕೊಳ್ಳದೇ ಮತಗಟ್ಟೆಗೆ ಬಂದು ಮತ ಚಲಾಯಿಸಿ. ವೋಟ್ ಮಾಡದಿದ್ರೆ ನಮ್ಮ ಭವಿಷ್ಯದ ಮೇಲೆ ನಾವೇ ಕಲ್ಲು ಹಾಕಿಕೊಂಡಂತೆ ಆಗುತ್ತೆ. ನಮ್ಮ ಕ್ಷೇತ್ರಗಳ ಅಭಿವೃದ್ಧಿಗಾಗಿ ಮತ ಹಾಕಲೇಬೇಕು ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.

  • ಆರ್.ಆರ್.ನಗರ, ಶಿರಾ ಉಪ ಕದನಗಳಿಗೆ ಇವತ್ತು ಮತದಾನ

    ಆರ್.ಆರ್.ನಗರ, ಶಿರಾ ಉಪ ಕದನಗಳಿಗೆ ಇವತ್ತು ಮತದಾನ

    ಬೆಂಗಳೂರು: ಪ್ರತಿಷ್ಠೆಯ, ಜಿದ್ದಾಜಿದ್ದಿನ ಕ್ಷೇತ್ರ ಎನಿಸಿಕೊಂಡಿರುವ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣಾ ಮತದಾನ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಎರಡೂ ಕ್ಷೇತ್ರಗಳಲ್ಲಿ ಮತದಾನ ಶುರು ಆಗಿದೆ. ಕೊರೊನಾ ಹೊತ್ತಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಮೊದಲ ವಿಧಾನಸಭಾ ಉಪ ಚುನಾವಣೆ ಇದಾಗಿದೆ. ಕೊರೊನಾಗೆ ಆತಂಕಗೊಳ್ಳದೇ ಮತಗಟ್ಟೆಗೆ ಬಂದು ನಿಮ್ಮ ಹಕ್ಕು ಚಲಾಯಿಸಿ ಎಂದು ಚುನಾವಣಾ ಆಯೋಗ ಮನವಿ ಮಾಡಿದೆ.

    ಆರ್.ಆರ್.ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಮತ್ತು ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ನಡುವೆ ಸ್ಪರ್ಧೆ ಇದೆ. ಇನ್ನು ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್‍ಗೌಡ, ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಟಿ.ಬಿ.ಜಯಚಂದ್ರ, ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ನಡುವೆ ನೇರ ಸ್ಪರ್ಧೆ ಇದೆ.

    ಶಿರಾ ಕ್ಷೇತ್ರದಲ್ಲಿ 17 ಅಭ್ಯರ್ಥಿಗಳು ಕಣದಲ್ಲಿದ್ದು, 330 ಮತಗಟ್ಟೆಗಳಿವೆ. ಪುರುಷ ಮತದಾರರು 1 ಲಕ್ಷದ 10 ಸಾವಿರದ 281 ಮಂದಿ ಇದ್ದರೆ, ಮಹಿಳಾ ಮತದಾರರು 1 ಲಕ್ಷದ 5 ಸಾವಿರದ 434 ಮಂದಿ ಇದ್ದು, ಒಟ್ಟು ಮತದಾರರು 2 ಲಕ್ಷದ 15 ಸಾವಿರದ 725 ಮಂದಿ ಇದ್ದಾರೆ. ಆರ್ ಆರ್ ನಗರದಲ್ಲಿ 4 ಲಕ್ಷದ 62 ಸಾವಿರ ಮಂದಿ ಮತದಾರರಿದ್ದಾರೆ.

    ಕೊರೊನಾ ಕಾರಣದಿಂದ ಪ್ರಜಾಪ್ರಭುತ್ವದ ಅಮೂಲ್ಯ ಹಕ್ಕಾದ ಮತದಾನದ ಹಕ್ಕಿನಿಂದ ಯಾರೂ ವಂಚಿತರಾಗಬಾರದು. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಸೋಂಕಿತರು, ಐಸೋಲೇಷನ್‍ನಲ್ಲಿರೋರು, ಕ್ವಾರಂಟೈನ್‍ನಲ್ಲಿರೋರಿಗೆ ಮತದಾನಕ್ಕೆ ವ್ಯವಸ್ಥೆ ಕಲ್ಪಿಸಿದೆ. ಆರ್ ಆರ್ ನಗರ ಕ್ಷೇತ್ರದಲ್ಲಿ ಬಿಬಿಎಂಪಿ ಮಾಹಿತಿ ಪ್ರಕಾರ 148 ಮಂದಿ ಕೊರೋನಾ ಸೋಂಕಿತರಿಗೆ ಇವತ್ತಿನ ಉಪಚುನಾವಣೆಯಲ್ಲಿ ಮತದಾನದ ಹಕ್ಕಿದೆ. ಕೊರೊನಾ ಸೋಂಕಿತರು ಸಂಜೆ 5 ಗಂಟೆ ನಂತರ ಮತದಾನ ಮಾಡಬಹುದಾಗಿದೆ.