Tag: R.R.R.

  • ಒಂದು ಆಸ್ಕರ್ ಪ್ರಶಸ್ತಿಗೆ 80 ಕೋಟಿ ಖರ್ಚು : ಆರ್.ಆರ್.ಆರ್ ನಿರ್ಮಾಪಕ ಪ್ರತಿಕ್ರಿಯೆ

    ಒಂದು ಆಸ್ಕರ್ ಪ್ರಶಸ್ತಿಗೆ 80 ಕೋಟಿ ಖರ್ಚು : ಆರ್.ಆರ್.ಆರ್ ನಿರ್ಮಾಪಕ ಪ್ರತಿಕ್ರಿಯೆ

    ನಾಟು ನಾಟು ಹಾಡಿಗೆ ಆಸ್ಕರ್ (Oscar) ಪ್ರಶಸ್ತಿ ಬರುವುದಕ್ಕಾಗಿ ಚಿತ್ರತಂಡ ಬರೋಬ್ಬರಿ 80 ಕೋಟಿ ಖರ್ಚು ಮಾಡಿದೆ ಎಂಬ ಆರೋಪ ಆರ್.ಆರ್.ಆರ್ (R.R.R) ಚಿತ್ರತಂಡದ ಮೇಲಿದೆ. ನಿರ್ದೇಶಕ ರಾಜಮೌಳಿ (Rajamouli) ಈ ಪರಿ ಹಣವನ್ನು ನಿರ್ಮಾಪಕರಿಂದ ಖರ್ಚು ಮಾಡಿಸಿದ್ದಾರೆ ಎಂದು ಹೇಳಲಾಗುತ್ತಿತ್ತು. ಒಂದೇ ಒಂದು ಆಸ್ಕರ್ ಪ್ರಶಸ್ತಿಗಾಗಿ ಅಷ್ಟೊಂದು ಹಣ ಖರ್ಚು ಮಾಡುವ ಜರೂರತ್ತಾದರೂ ಏನಿತ್ತು ಎಂದೂ ಪ್ರಶ್ನೆ ಮಾಡಲಾಗಿತ್ತು.

    ಅದರಲ್ಲೂ ತೆಲುಗಿನ ನಿರ್ದೇಶಕರೊಬ್ಬರು ‘ಆಸ್ಕರ್ ಪ್ರಶಸ್ತಿಗಾಗಿ ರಾಜಮೌಳಿ ಮಾಡಿದ ಖರ್ಚಿನಲ್ಲಿ ನಾನು ನಾಲ್ಕು ಚಿತ್ರಗಳನ್ನು ತಯಾರಿಸುತ್ತಿದ್ದೆ’ ಎಂದು ಹೇಳುವ ಮೂಲಕ ಉರಿವ ಬೆಂಕಿಗೆ ತುಪ್ಪ ಸುರಿದಿದ್ದರು. ಈಗ ಈ ಎಲ್ಲ ಆರೋಪಗಳಿಗೆ ನಿರ್ಮಾಪಕ ದಾನಯ್ಯ (Danaiah) ಉತ್ತರಿಸಿದ್ದಾರೆ. ಅವರು ಆಸ್ಕರ್ ಸಮಾರಂಭದಲ್ಲಿ ಭಾಗಿ ಆಗದೇ ಇದ್ದರೂ, ಎದ್ದಿರುವ ಚರ್ಚೆಗೆ ಪ್ರತಿಕ್ರಿಯೆ ನೀಡಿದ್ದಾರೆ.

    ಮಾಧ್ಯಮವೊಂದರ ಜೊತೆ ಮಾತನಾಡಿರುವ ಸಿನಿಮಾದ ನಿರ್ಮಾಪಕ ದಾನಯ್ಯ, ಅಷ್ಟೊಂದು ಹಣ ಖರ್ಚು ಮಾಡಿದ್ದೇವೆ ಎನ್ನುವುದು ಸುಳ್ಳು. ಒಂದು ಪ್ರಶಸ್ತಿಗಾಗಿ 80 ಕೋಟಿ ರೂಪಾಯಿಯನ್ನು ಯಾರೂ ಖರ್ಚು ಮಾಡುವುದಿಲ್ಲ. ಅದರಿಂದ ಯಾವುದೇ ಉಪಯೋಗ ಕೂಡ ಇಲ್ಲ. ನಾನಂತೂ ಪ್ರಶಸ್ತಿಗಾಗಿ ಹಣವನ್ನು ನೀಡಿಲ್ಲ. ಉಳಿದ ವಿಚಾರ ನನಗೆ ಗೊತ್ತಿಲ್ಲ’ ಎಂದು ಹೇಳಿಕೆ ನೀಡಿದ್ದಾರೆ.

    ಆರ್.ಆರ್.ಆರ್ ಗೆಲುವಿನ ನಂತರ ರಾಜಮೌಳಿ ಮತ್ತು ದಾನಯ್ಯ ನಡುವೆ ಸಂಬಂಧ ಅಷ್ಟೊಂದು ಚೆನ್ನಾಗಿಲ್ಲ ಎಂದು ಕೇಳಿ ಬಂದಿತ್ತು. ಹಾಗಾಗಿಯೇ ರಾಜಮೌಳಿ ಭಾಗಿಯಾದ ಯಾವ ಕಾರ್ಯಕ್ರಮದಲ್ಲೂ ದಾನಯ್ಯ ಕಾಣಿಸಿಕೊಳ್ಳಲಿಲ್ಲ. ಗೋಲ್ಡನ್ ಗ್ಲೋಬ್, ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲೂ ಅವರು ಇರಲಿಲ್ಲ. ಆದರೂ, ಸಂದರ್ಶನದಲ್ಲಿ ರಾಜಮೌಳಿ ಬಗ್ಗೆ ದಾನಯ್ಯ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

  • Special- ‘ಆಸ್ಕರ್’ ಬೆನ್ನಲ್ಲೇ ಮತ್ತೆ 50 ಲಕ್ಷ ಜನ ‘ನಾಟು ನಾಟು’ ವೀಡಿಯೋ ನೋಡಿದ್ರು

    Special- ‘ಆಸ್ಕರ್’ ಬೆನ್ನಲ್ಲೇ ಮತ್ತೆ 50 ಲಕ್ಷ ಜನ ‘ನಾಟು ನಾಟು’ ವೀಡಿಯೋ ನೋಡಿದ್ರು

    ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದ ‘ಆರ್.ಆರ್.ಆರ್’ (R.R.R) ಸಿನಿಮಾದ ‘ನಾಟು ನಾಟು’ (Natu Natu) ಹಾಡಿಗೆ ಆಸ್ಕರ್ (Oscar) ಪ್ರಶಸ್ತಿ ಘೋಷಣೆ ಆಗುತ್ತಿದ್ದಂತೆಯೇ ಈ ಹಾಡನ್ನು ನೋಡಿದವರ ಸಂಖ್ಯೆ 50 ಲಕ್ಷ ದಾಟಿದೆ. ಕೇವಲ ಭಾರತದಲ್ಲಿ ಮಾತ್ರವಲ್ಲ, ವಿದೇಶಿಗರು ಕೂಡ ಈ ಹಾಡನ್ನು ಹುಡುಕಿ ವೀಕ್ಷಿಸಿದ್ದಾರೆ. ಕಳೆದ ನಲವತ್ತೆಂಟು ಗಂಟೆಯಲ್ಲಿ 55 ಲಕ್ಷಕ್ಕೂ ಹೆಚ್ಚು ಜನರು ಈ ಹಾಡನ್ನು ವೀಕ್ಷಿಸಿದ್ದರೆ, 24 ಗಂಟೆಯಲ್ಲಿ 35 ಲಕ್ಷಕ್ಕೂ ಹೆಚ್ಚು ಜನರು ಈ ಹಾಡನ್ನು ಕಣ್ತುಂಬಿಕೊಂಡಿದ್ದಾರೆ.

    ನಿನ್ನೆ ಬೆಳಗ್ಗೆ (ಮಾರ್ಚ್ 13) ಲಹರಿ ಚಾನೆಲ್ (Lahari Music) ನಲ್ಲಿ 125 ಮಿಲಿಯನ್ ವೀಕ್ಷಣೆ ಇತ್ತು. ಈಗಿನವರೆಗೆ 128 ಮಿಲಿಯನ್ ಆಗಿದೆ. ಈ ಕುರಿತು ಮಾಹಿತಿಯನ್ನು ಹಂಚಿಕೊಂಡ ಲಹರಿ ಸಂಸ್ಥೆಯ ವೇಲು, ‘ನಾಟು ನಾಟು ಹಾಡು ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿದೆ. ಟಿ ಸೀರಿಸ್ ಮತ್ತು ಲಹರಿ ಮ್ಯೂಸಿಕ್ ಎರಡರಲ್ಲೂ ಹಾಡನ್ನು ವೀಕ್ಷಿಸಬಹುದಾಗಿದೆ. ಅತೀ ಹೆಚ್ಚು ತೆಲುಗಿನಲ್ಲೇ ಈ ಹಾಡನ್ನು ನೋಡಿದ್ದಾರೆ. ಗ್ಲೋಡನ್ ಗ್ಲೋಬ್ ಪ್ರಶಸ್ತಿ ಬಂದಾಗಲೂ ಹೆಚ್ಚಿನ ಸಂಖ್ಯೆಯಲ್ಲಿ ಈ ಹಾಡನ್ನು ವೀಕ್ಷಿಸಿದ್ದರು. ಆಸ್ಕರ್ ಬಂದ ನಂತರವೂ ನೋಡಿದ್ದಾರೆ’ ಎನ್ನುತ್ತಾರೆ. ಇದನ್ನೂ ಓದಿ: ಪುನೀತ್ ಜನ್ಮ ದಿನದಂದು ಓಟಿಟಿಯಲ್ಲಿ ‘ಗಂಧದ ಗುಡಿ’

    ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಪಡೆಯುವ ಮೂಲಕ ಜಗತ್ತಿನಾದ್ಯಂತ ಸುದ್ದಿ ಮಾಡಿದೆ. ಸೋಷಿಯಲ್ ಮೀಡಿಯಾದಲ್ಲೂ ಅದು ಟ್ರೆಂಡ್ ಸೃಷ್ಟಿಸಿದೆ. ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದ ಆರ್.ಆರ್.ಆರ್ ಸಿನಿಮಾದ ಗೀತೆ ಇದಾಗಿದ್ದು,  ಎಂ.ಎಂ.ಕೀರವಾಣಿ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿದೆ. ಜ್ಯೂನಿಯರ್ ಎನ್.ಟಿ.ಆರ್ ಹಾಗೂ ರಾಮ್ ಚರಣ್ ಈ ಹಾಡಿಗೆ ಸಖತ್ ಸ್ಟೆಪ್ ಹಾಕಿದ್ದರೆ, ಈ ಹಾಡಿನ ಮ್ಯೂಸಿಕ್ ಹಕ್ಕನ್ನು ಕನ್ನಡದ ಹೆಮ್ಮೆಯ ಲಹರಿ ಸಂಸ್ಥೆ ಪಡೆದುಕೊಂಡಿದೆ.

    ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಹಾಡು ರಿಲೀಸ್ ಆಗಿದ್ದು, ಮೂಲ ಚಿತ್ರಸಾಹಿತ್ಯವನ್ನು ಚಂದ್ರಬೋಸ್ ಬರೆದಿದ್ದಾರೆ. ಕಲಾಭೈರವ ಹಾಗೂ ಸಿಪ್ಲಿಗಂಜ ಹಾಡಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಹಾಡು ಮೂಡಿ ಬಂದಿದೆ. ಇಂತಹ ಹಾಡಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯು ಸಂದಿದೆ. ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದ ಆರ್.ಆರ್.ಆರ್ ಚಿತ್ರದ ಈ ಹಾಡು ಆಸ್ಕರ್ ತರುವ ಭರವಸೆಯನ್ನೂ ಮೂಡಿಸಿತ್ತು. ಆಸ್ಕರ್ ವೇದಿಕೆಯ ಮೇಲೆ ಈ ಹಾಡನ್ನು ಗಾಯಕರಾದ ಸಿಪ್ಲಿಗಂಜ ಹಾಗೂ ಕಾಲಭೈರವ ಹಾಡಿದ್ದರು. ಅಮೆರಿಕಾದ ನಟ, ಡಾನ್ಸರ್ ಲಾರೆನ್ ಗೋತ್ಲಿಬ್ ನೃತ್ಯ ಮಾಡಿದ್ದರು.

  • ಆಸ್ಕರ್ ಪ್ರಶಸ್ತಿ ಪ್ರದಾನಕ್ಕೆ ಕ್ಷಣಗಣನೆ : ಭಾರತದ ಯಾವ ಚಿತ್ರಕ್ಕೆ ಸಿಗತ್ತೆ ಆಸ್ಕರ್?

    ಆಸ್ಕರ್ ಪ್ರಶಸ್ತಿ ಪ್ರದಾನಕ್ಕೆ ಕ್ಷಣಗಣನೆ : ಭಾರತದ ಯಾವ ಚಿತ್ರಕ್ಕೆ ಸಿಗತ್ತೆ ಆಸ್ಕರ್?

    ಪ್ರತಿಷ್ಠಿತ ಆಸ್ಕರ್ (Oscars) ಪ್ರಶಸ್ತಿ ಪ್ರದಾನ ಸಮಾರಂಭ ಕ್ಷಣಗಣನೆ ಶುರುವಾಗಿದೆ. ಅಮೆರಿಕಾದ ಕಾಲಮಾನ ಪ್ರಕಾರ ಇಂದು ರಾತ್ರಿಯಿಂದಲೇ ಕಾರ್ಯಕ್ರಮ ಶುರುವಾಗಲಿದೆ. (ಭಾರತೀಯ ಕಾಲಮಾನ ಪ್ರಕಾರ ನಾಳೆ ಬೆಳಗ್ಗೆ 6.30) ಅಮೆರಿಕಾದ ಲಾಸ್ ಏಂಜಲೀಸ್‍ ( Los Angeles)  ಡಾಲ್ಬಿ ಥಿಯೇಟರ್ ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಗತ್ತಿನ ಹೆಸರಾಂತ ಕಲಾವಿದರು ಹಾಗೂ ತಂತ್ರಜ್ಞರು ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮವನ್ನು ನೋಡುವುದಕ್ಕಾಗಿಯೇ ಜಗತ್ತಿನ ಮೂಲೆ ಮೂಲೆಗಳಿಂದ ಸಿನಿಮಾ ಪ್ರೇಮಿಗಳು ಆಗಮಿಸುತ್ತಾರೆ.

    ಈ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾರತೀಯರು ಹೆಮ್ಮೆ ಪಡುವಂತಹ ಅನೇಕ ಸಂಗತಿಗಳು ನಡೆಯಲಿವೆ. ಇದೇ ಮೊದಲ ಬಾರಿಗೆ ಪ್ರತಿಷ್ಠಿತ ಈ ವೇದಿಕೆಯಲ್ಲಿ ಆರ್.ಆರ್.ಆರ್ ಸಿನಿಮಾದ ನಾಟು ನಾಟು ಹಾಡಿಗೆ ಜ್ಯೂನಿಯರ್ ಎನ್.ಟಿ.ಆರ್ ಹಾಗೂ ರಾಮ್ ಚರಣ್ ಹೆಜ್ಜೆ ಹಾಕಲಿದ್ದಾರೆ. ಈಗಾಗಲೇ ಇಬ್ಬರೂ ಕಲಾವಿದರು ಅಮೆರಿಕಾದಲ್ಲೇ ಬೀಡು ಬಿಟ್ಟಿದ್ದಾರೆ. ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ರಾಮ್ ಚರಣ್ (Ram Charan) ಬಂದಿದ್ದು, ಅಭಿಮಾನಿಗಳು ಮುಗಿಬಿದ್ದು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಇದೀಗ ಓದಿ: ಹೊಸ ಫೋಟೋಶೂಟ್‌ನಲ್ಲಿ ಮಿಂಚಿದ `ಕಾಂತಾರ’ ಶಿವನ ಹುಡುಗಿ

    ಅಲ್ಲದೇ, ಆರ್.ಆರ್.ಆರ್ ಸಿನಿಮಾದ ನಾಟು ನಾಟು ಗೀತೆಯೂ ಕೂಡ ಆಸ್ಕರ್ ರೇಸ್ ನಲ್ಲಿದೆ. ಹೀಗಾಗಿ ನಿರ್ದೇಶಕ ರಾಜಮೌಳಿ ಸೇರಿದಂತೆ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದೆ. ಭಾರತದಿಂದ ಒಂದು ಸಿನಿಮಾ ಮತ್ತು ಎರಡು ಡಾಕ್ಯುಮೆಂಟರಿಗಳು ಪ್ರಶಸ್ತಿಯ ಕಣದಲ್ಲಿದೆ. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ಈ ಕಾರ್ಯಕ್ರಮದ ನಿರೂಪಣೆ ಮಾಡಲಿದ್ದಾರೆ.

    ಪ್ರಶಸ್ತಿ ಪ್ರದಾನ ಸಮಾರಂಭಕ್ಕೂ ಮುನ್ನ ರಾಮ್ ಚರಣ್ ಅಭಿಮಾನಿಗಳ ಜೊತೆ ಬೆರೆಯುವುದಾಗಿ ಮಾತುಕೊಟ್ಟಿದ್ದರು. ಅದರಂತೆ ಅಭಿಮಾನಿಗಳ ಜೊತೆ ಒಂದಷ್ಟು ಹೊತ್ತು ಕಳೆದಿದ್ದಾರೆ. ನೆಚ್ಚಿನ ನಟನನ್ನು ಭೇಟಿ ಮಾಡಲು ಸಾವಿರಾರು ಅಭಿಮಾನಿಗಳು ನೆರೆದಿದ್ದು ವಿಶೇಷ. ಎಲ್ಲರೊಂದಿಗೂ ಖುಷಿಯಿಂದಲೇ ಫೋಟೋಗೂ ಪೋಸ್ ನೀಡಿದ್ದಾರೆ ರಾಮ್ ಚರಣ್. ಆ ಫೋಟೋಗಳು ಕೂಡ ವೈರಲ್ ಆಗಿವೆ.

  • ರಾಮ್ ಚರಣ್ ಅದೃಷ್ಟವನ್ನೇ ಬದಲಿಸಿದ ಆರ್.ಆರ್.ಆರ್ ಚಿತ್ರ

    ರಾಮ್ ಚರಣ್ ಅದೃಷ್ಟವನ್ನೇ ಬದಲಿಸಿದ ಆರ್.ಆರ್.ಆರ್ ಚಿತ್ರ

    ಲಾಸ್ ಎಂಜಲೀಸ್ ನಿಂದ ವಾರಂಗಲ್ ವರೆಗೆ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಕ್ರೇಜ್ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಎಸ್. ಎಸ್ ರಾಜಮೌಳಿ ನಿರ್ದೇಶನದ ‘ಆರ್ ಆರ್ ಆರ್’ ಚಿತ್ರದ ಅಮೋಘ ಅಭಿನಯದ ಮೂಲಕ ರಾಮ್ ಚರಣ್ ಭಾರತವನ್ನು ಜಾಗತಿಕ ಮಟ್ಟದಲ್ಲಿ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಆರ್ ಆರ್ ಆರ್ ನಂತರ ರಾಮ್ ಚರಣ್ ಕ್ರೇಜ್ ಹಾಗೂ ಅಭಿಮಾನಿ ಬಳಗ ಕೂಡ ದೊಡ್ಡದಾಗಿದ್ದು, ಅವರ ಮುಂದಿನ ಸಿನಿಮಾಗಳಿಗಾಗಿ ಎದುರು ನೋಡುತ್ತಿದ್ದಾರೆ.

    ಮೆಗಾ ಪವರ್ ಸ್ಟಾರ್ ಮುಂದಿನ ಸಿನಿಮಾ ಬಗ್ಗೆ ಎಲ್ಲರಲ್ಲೂ ಕುತೂಹಲ ಮೂಡಿದೆ. ಖ್ಯಾತ ನಿರ್ದೇಶಕ ಶಂಕರ್ ನಿರ್ದೇಶನದ ಸಿನಿಮಾದಲ್ಲಿ ರಾಮ್ ಚರಣ್ ನಟಿಸುತ್ತಿದ್ದಾರೆ. ಇಬ್ಬರ ಕಾಂಬಿನೇಶನ್ ಮೇಲೆ ಮೆಗಾ ಫ್ಯಾಮಿಲಿ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಿಗ್ ಬಜೆಟ್ ನಲ್ಲಿ ಆಕ್ಷನ್ ಎಂಟರ್ಟೈನರ್ ಸಬ್ಜೆಕ್ಟ್ ಸಿನಿಮಾ ನಿರ್ಮಾಣವಾಗುತ್ತಿದ್ದು, ಬಾಲಿವುಡ್ ಬೆಡಗಿ ಕಿಯಾರ ಅಡ್ವಾಣಿ ರಾಮ್ ಚರಣ್ ಜೊತೆ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ. ಇದೇ ವರ್ಷ ಸಿನಿಮಾ ಬಿಡುಗಡೆಯಾಗುವ ಸಾದ್ಯತೆಯೂ ಇದೆ. ಸದ್ಯದ್ಲಲೇ ಈ ಚಿತ್ರದ ಟೈಟಲ್ ಕೂಡ ರಿವೀಲ್ ಆಗಲಿದೆ. ಖ್ಯಾತ ನಿರ್ಮಾಪಕ ದಿಲ್ ರಾಜು ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ನಡಿ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ `ಹೃದಯಂ’ ಚಿತ್ರದ ನಟಿ ಕಲ್ಯಾಣಿ ಸಹೋದರ ಸಿದ್ಧಾರ್ಥ್

    ಈ ಸಿನಿಮಾ ನಂತರ ಬುಚ್ಚಿ ಬಾಬು ಸನಾ ನಿರ್ದೇಶನದಲ್ಲಿ ವೆಂಕಟ ಸತೀಶ್ ಕಿಲಾರು ನಿರ್ಮಾಣದ ಚಿತ್ರದಲ್ಲಿ ರಾಮ್ ಚರಣ್ ನಟಿಸುತ್ತಿದ್ದಾರೆ. ಜೆರ್ಸಿ ಸಿನಿಮಾ ಖ್ಯಾತಿಯ ಗೌತಮ್ ತಿನ್ನನೂರಿ ಸಿನಿಮಾಗೂ ಮೆಗಾ ಪವರ್ ಸ್ಟಾರ್ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಒಟ್ನಲ್ಲಿ, ಆರ್ ಆರ್ ಆರ್ ಬಾಕ್ಸ್ ಆಫೀಸ್ ನಲ್ಲೂ ದಾಖಲೆ ಬರೆಯೋದ್ರ ಜೊತೆಗೆ ಮೆಗಾ ಪವರ್ ಸ್ಟಾರ್ ಕೆರಿಯರ್ ಗೂ ಹೊಸ ಮೆರಗು ನೀಡಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಾಮಿನೇಷನ್ ಲಿಸ್ಟ್ ನಲ್ಲಿ ಇಲ್ಲ ‘ದಿ ಕಾಶ್ಮೀರ್ ಫೈಲ್ಸ್’ : ಬಾಯ್ಕಾಟ್ ಆಸ್ಕರ್ ಎಂದ ಫ್ಯಾನ್ಸ್

    ನಾಮಿನೇಷನ್ ಲಿಸ್ಟ್ ನಲ್ಲಿ ಇಲ್ಲ ‘ದಿ ಕಾಶ್ಮೀರ್ ಫೈಲ್ಸ್’ : ಬಾಯ್ಕಾಟ್ ಆಸ್ಕರ್ ಎಂದ ಫ್ಯಾನ್ಸ್

    ಕ್ಯಾಲಿಫೋರ್ನಿಯಾದ ಬೆವರ್ಲಿ ಹಿಲ್ಸ್ ನಲ್ಲಿ ನಡೆದ ಆಸ್ಕರ್ ಪ್ರಶಸ್ತಿಯ ನಾಮ ನಿರ್ದೇಶನ ಘೋಷಣೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆದಿದೆ. ಭಾರತೀಯ ಕಾಲಮಾನದ ಪ್ರಕಾರ ನಿನ್ನೆ ಸಂಜೆ 7 ಗಂಟೆಯ ಹೊತ್ತಿಗೆ ಈ ಪ್ರಕ್ರಿಯೆ ನಡೆದಿದ್ದು ಭಾರತದ ಹಲವು ಸಿನಿಮಾಗಳ ನಾಮಿನೇಷನ್ ಲಿಸ್ಟ್ ನಲ್ಲಿ ಕಾಣಿಸಿಕೊಳ್ಳಲಿವೆ ಎಂದು ನಿರೀಕ್ಷಿಸಲಾಗಿತ್ತು. ಅದರಲ್ಲೂ ದಿ ಕಾಶ್ಮೀರ್ ಫೈಲ್ ನಾಮ ನಿರ್ದೇಶನ ಪಟ್ಟಿಯಲ್ಲಿ ಇರಲಿದೆ ಎಂದೇ ನಂಬಲಾಗಿತ್ತು. ನಂಬಿಕೆ ಹುಸಿಯಾಗಿದೆ.

    ಈ ಬಾರಿಯ ಆಸ್ಕರ್ ಪ್ರಶಸ್ತಿಗಾಗಿ ಕನ್ನಡದ ಸಿನಿಮಾಗಳಾದ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ, ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರಗಳು ಕೂಡ ಇದ್ದವು. ಜೊತೆಗೆ ತೆಲುಗು ಸಿನಿಮಾ ರಂಗದಿಂದ ಆರ್.ಆರ್.ಆರ್, ತಮಿಳಿನಿಂದ ಇರುವಿನ್ ನಿಲಳ್ ಹಾಗೂ ರಾಕೆಟ್ರಿ ದಿ ನಂಭಿ ಎಫೆಕ್ಟ್ ಚಿತ್ರಗಳು ಸ್ಪರ್ಧೆ ಮಾಡುತ್ತಿವೆ. ಹಿಂದಿಯಿಂದ ಗಂಗೂಬಾಯಿ ಕಾಠಿಯಾವಾಡಿ ಹಾಗೂ ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗಳಿವೆ. ಗುಜರಾತಿನಿಂದ ಛೆಲ್ಲೋ ಶೋ, ಚಿತ್ರವೊಂದನ್ನು ಕಳುಹಿಸಲಾಗಿದೆ. ಮಿ ವಸಂತ್ ರಾವ್, ದಿ ನೆಕ್ಸ್ಸಟ್ ಮಾರ್ನಿಂಗ್, ತುಜೆ ಸಾಥಿ ಕಹಿ ಸೇರಿದಂತೆ ಭಾರತದಿಂದಲೇ ಹಲವು ಚಿತ್ರಗಳು ಸ್ಪರ್ಧಾ ಕಣದಲ್ಲಿದ್ದವು. ಆದರೆ, ಈ ಸಿನಿಮಾಗಳ ಪೈಕಿ ಕೇವಲ ಮೂರು ಚಿತ್ರಗಳು ನಾಮಿನೇಷನ್ ಪಟ್ಟಿಯಲ್ಲಿವೆ.

    ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದ ಆರ್.ಆರ್.ಆರ್ ಸಿನಿಮಾದ ನಾಟು ನಾಟು ಹಾಡು ಮತ್ತು ಆಲ್ ದಟ್ ಬ್ರೀಥ್ಸ್, ದಿ ಎಲಿಫೆಂಟ್ ವಿಸ್ಪರ್ಸ್‍ ಕಿರುಚಿತ್ರಗಳು ನಾಮ ನಿರ್ದೇಶನಗೊಂಡಿವೆ. ಆದರೆ, ದಿ ಕಾಶ್ಮೀರ್ ಫೈಲ್ಸ್ ಇಲ್ಲ ಎನ್ನುವ ಕಾರಣಕ್ಕಾಗಿ ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಬಾಯ್ಕಾಟ್ ಆಸ್ಕರ್ ಹ್ಯಾಶ್ ಟ್ಯಾಗ್ ಮೂಲಕ ಬಹಿಷ್ಕರಿಸಿ ಎಂದು ಅಭಿಮಾನ ನಡೆಸಿದ್ದಾರೆ. ಇದನ್ನೂ ಓದಿ: ಕೊಡವ ಶೈಲಿಯಲ್ಲಿ ಮಿಂಚಿದ ನಟಿ ಶುಭ್ರ ಅಯ್ಯಪ್ಪ- ವಿಶಾಲ್ ಜೋಡಿ

    ಈ ಬಾರಿಯ ಪ್ರಶಸ್ತಿಗಾಗಿ ಒಟ್ಟು ಮುನ್ನೂರು ಸಿನಿಮಾಗಳನ್ನು ಆಯ್ಕೆ ಮಾಡಲಾಗಿತ್ತು.  ಮುನ್ನೂರು ಸಿನಿಮಾಗಳಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ನಾಮಿನೇಷನ್ ಗೆ ಆಯ್ಕೆಯಾದ ಸಿನಿಮಾಗಳಲ್ಲಿ ಮತ್ತೆ ಆಸ್ಕರ್ ಪ್ರಶಸ್ತಿಗಾಗಿ ಆಯ್ಕೆ ನಡೆಯುತ್ತದೆ. ಆಸ್ಕರ್ ಪ್ರಶಸ್ತಿಗೆ ಆಯ್ಕೆಯಾದ ಸಿನಿಮಾಗಳನ್ನು ಮಾರ್ಚ್ 12ರಂದು ಘೋಷಿಸಲಾಗುವುದು. ಇಂದು ಕೇವಲ ನಾಮ ನಿರ್ದೇಶನಗೊಂಡ ಸಿನಿಮಾಗಳನ್ನು ಮಾತ್ರ ಘೋಷಿಸಲಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಂಜೆ 7ಕ್ಕೆ ‘ಆಸ್ಕರ್’ ನಾಮಿನೇಷನ್ ಲಿಸ್ಟ್ ಪ್ರಕಟ: ಕನ್ನಡ ಸಿನಿಮಾಗಳಿಗೆ ಸಿಗಲಿದೆಯಾ ಅವಕಾಶ?

    ಸಂಜೆ 7ಕ್ಕೆ ‘ಆಸ್ಕರ್’ ನಾಮಿನೇಷನ್ ಲಿಸ್ಟ್ ಪ್ರಕಟ: ಕನ್ನಡ ಸಿನಿಮಾಗಳಿಗೆ ಸಿಗಲಿದೆಯಾ ಅವಕಾಶ?

    ಕ್ಯಾಲಿಫೋರ್ನಿಯಾದ ಬೆವರ್ಲಿ ಹಿಲ್ಸ್ ನಲ್ಲಿ ಇಂದು ಆಸ್ಕರ್ (Oscar) ಪ್ರಶಸ್ತಿಯ ನಾಮ ನಿರ್ದೇಶನ (Nomination) ಘೋಷಣೆ ಕಾರ್ಯಕ್ರಮ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಇಂದು ಸಂಜೆ 7 ಗಂಟೆಯ ಹೊತ್ತಿಗೆ ಈ ಪ್ರಕ್ರಿಯೆ ನಡೆಯಲಿದ್ದು, ಯಾವೆಲ್ಲ ಸಿನಿಮಾಗಳು ನಾಮಿನೇಷನ್ ಆಗಲಿವೆ ಎನ್ನುವ ಕುತೂಹಲ ಮೂಡಿದೆ. ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ, ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರಗಳು ಕೂಡ ಈ ಬಾರಿ ರೇಸ್ ನಲ್ಲಿ ಇರುವುದರಿಂದ ನಾಮ ನಿರ್ದೇಶನ ಪಟ್ಟಿಯಲ್ಲಿ ಇವುಗಳಿಗೆ ಸ್ಥಾನ ಸಿಗಲಿದೆಯಾ ಎಂದು ಕಾದು ನೋಡಬೇಕು.

    ಈ ಬಾರಿಯ ಪ್ರಶಸ್ತಿಗಾಗಿ ಒಟ್ಟು ಮುನ್ನೂರು ಸಿನಿಮಾಗಳನ್ನು ಆಯ್ಕೆ ಮಾಡಲಾಗಿದೆ. ಮುನ್ನೂರು ಸಿನಿಮಾಗಳಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆಯಲಿದೆ. ನಾಮಿನೇಷನ್ ಗೆ ಆಯ್ಕೆಯಾದ ಸಿನಿಮಾಗಳಲ್ಲಿ ಮತ್ತೆ ಆಸ್ಕರ್ ಪ್ರಶಸ್ತಿಗಾಗಿ ಆಯ್ಕೆ ನಡೆಯುತ್ತದೆ. ಆಸ್ಕರ್ ಪ್ರಶಸ್ತಿಗೆ ಆಯ್ಕೆಯಾದ ಸಿನಿಮಾಗಳನ್ನು ಮಾರ್ಚ್ 12ರಂದು ಘೋಷಿಸಲಾಗುವುದು. ಇಂದು ಕೇವಲ ನಾಮ ನಿರ್ದೇಶನಗೊಂಡ ಸಿನಿಮಾಗಳನ್ನು ಮಾತ್ರ ಘೋಷಿಸಲಾಗುತ್ತದೆ. ಇದನ್ನೂ ಓದಿ: ವಿನಯ್ ರಾಜ್‌ಕುಮಾರ್‌ಗೆ ನಾಯಕಿಯಾದ `ವಿಕ್ರಮ್’ ನಟಿ ಸ್ವಾತಿಷ್ಟ ಕೃಷ್ಣನ್

    ಕನ್ನಡದಿಂದ ಕಾಂತಾರ (Kantara)ಮತ್ತು ವಿಕ್ರಾಂತ್ ರೋಣ (Vikrant Rona) ಸ್ಪರ್ಧೆಯಲ್ಲಿ ಇದ್ದರೆ, ತೆಲುಗು ಸಿನಿಮಾ ರಂಗದಿಂದ ಆರ್.ಆರ್.ಆರ್ (RRR), ತಮಿಳಿನಿಂದ ಇರುವಿನ್ ನಿಲಳ್ ಹಾಗೂ ರಾಕೆಟ್ರಿ ದಿ ನಂಭಿ ಎಫೆಕ್ಟ್ ಚಿತ್ರಗಳು ಸ್ಪರ್ಧೆ ಮಾಡುತ್ತಿವೆ. ಹಿಂದಿಯಿಂದ ಗಂಗೂಬಾಯಿ ಕಾಠಿಯಾವಾಡಿ ಹಾಗೂ ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗಳಿವೆ. ಗುಜರಾತಿನಿಂದ ಛೆಲ್ಲೋ ಶೋ, ಚಿತ್ರವೊಂದನ್ನು ಕಳುಹಿಸಲಾಗಿದೆ. ಮಿ ವಸಂತ್ ರಾವ್, ದಿ ನೆಕ್ಸ್ಸಟ್ ಮಾರ್ನಿಂಗ್, ತುಜೆ ಸಾಥಿ ಕಹಿ ಸೇರಿದಂತೆ  ಭಾರತದಿಂದಲೇ ಹಲವು ಚಿತ್ರಗಳು ಸ್ಪರ್ಧಾ ಕಣದಲ್ಲಿ ಇವೆ. ಇವುಗಳಲ್ಲಿ ಯಾವೆಲ್ಲ ಚಿತ್ರಗಳು ನಾಮಿನೇಷನ್ ಸುತ್ತಿಗೆ ಅರ್ಹತೆ ಪಡೆಯುತ್ತವೆ ಎನ್ನುವುದು ಸಂಜೆ 7 ಗಂಟೆಯ ನಂತರ ಗೊತ್ತಾಗಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಗಾಯಕ ಅದ್ನಾನ್ ಸಾಮಿಗೆ ಸಖತ್ತಾಗಿ ತಿರುಗೇಟು ನೀಡಿದ ನಟಿ ರಮ್ಯಾ

    ಗಾಯಕ ಅದ್ನಾನ್ ಸಾಮಿಗೆ ಸಖತ್ತಾಗಿ ತಿರುಗೇಟು ನೀಡಿದ ನಟಿ ರಮ್ಯಾ

    ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ (R.R.R) ಸಿನಿಮಾದ ‘ನಾಟು ನಾಟು’ ಹಾಡಿಗೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಘೋಷಣೆ ಆಗುತ್ತಿದ್ದಂತೆಯೇ ಭಾರತಕ್ಕೆ ಭಾರತವೇ ಸಂಭ್ರಮಿಸಿತು. ಪ್ರಧಾನಿ ನರೇಂದ್ರ ಮೋದಿ ಸಮೇತ ಚಿತ್ರತಂಡಕ್ಕೆ ಶುಭಾಶಯ ಕೋರಿದರು. ಹಾಗೆಯೇ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ (Jagan Mohan Reddy) ಕೂಡ ತಮ್ಮ ರಾಜ್ಯದ ಸಿನಿಮಾವೊಂದು ಅಂಥದ್ದೊಂದು ಪ್ರಶಸ್ತಿ ಪಡೆದಾಗ ಸಹಜವಾಗಿಯೇ ಖುಷಿ ಆಗಿತ್ತು. ಹಾಗಾಗಿಯೇ ಅವರು ಅಭಿಮಾನದಿಂದ ಟ್ವೀಟ್ ಮಾಡಿದ್ದರು.

    ಜಗನ್ ಮೋಹನ್ ರೆಡ್ಡಿ ಮಾಡಿರುವ ಟ್ವೀಟ್ ನಲ್ಲಿ, ‘ರಾಜ್ಯದ ಬಾವುಟವನ್ನು ಆಕಾಶದೆತ್ತರಕ್ಕೆ ಹಾರಿಸಿದ ಆರ್.ಆರ್.ಆರ್ ಟೀಮ್‍ ಗೆ ಧನ್ಯವಾದಗಳು’ ಎಂದು ತಿಳಿಸಿದ್ದರು. ರಾಜ್ಯದ ಬಾವುಟ ಎಂದು ಟ್ವೀಟ್ ಮಾಡಿದ್ದಕ್ಕೆ ಗಾಯಕ ಅದ್ನಾನ್ ಸಾಮಿ (Adnan Sami)  ಆಕ್ಷೇಪ ವ್ಯಕ್ತಪಡಿಸಿ. ಮೊದಲು ದೇಶ, ಆಮೇಲೆ ರಾಜ್ಯ. ತೆಲುಗು ಬಾವುಟ ಎಂದು ಬರೆದು ವಿಭಜಿಸಬೇಡಿ’ ಎಂದು ಪ್ರತಿಕ್ರಿಯೆ ನೀಡಿದ್ದರು. ಇದು ಭಾರೀ ಚರ್ಚೆಗೂ ಕಾರಣವಾಗಿತ್ತು. ಪರ ವಿರೋಧದ ಪ್ರತಿಕ್ರಿಯೆ ಕೇಳಿ ಬಂತು.  ಇದನ್ನೂ ಓದಿ: ನಾನು ಆಡಿದ ಮಾತು ತಪ್ಪಾಗಿ ಅರ್ಥೈಸಿಕೊಳ್ಳಲಾಗುತ್ತಿದೆ: ವಿವಾದಗಳ ಬಗ್ಗೆ ರಶ್ಮಿಕಾ ಪ್ರತಿಕ್ರಿಯೆ

     

    ಅದ್ವಾನ್ ಸಾಮಿ ಮಾಡಿದ ಟ್ವೀಟ್ ಗೆ ಸ್ಯಾಂಡಲ್ ವುಡ್ ‍ಕ್ವೀನ್ ರಮ್ಯಾ (Ramya) ತಿರುಗೇಟು ನೀಡಿದ್ದು, ‘ನೀವು ಹೇಳಿದಂತೆ ನಾವು ಭಾರತೀಯರು ನಿಜ. ಆದರೆ, ನಾವು ತೆಲುಗು, ಕನ್ನಡಿಗರು, ತಮಿಳಿಗರು. ನಮ್ಮದೇ ಆದ ಭಾಷೆ, ಬಾವುಟ ಹೊಂದಿದ್ದೇವೆ. ನಾವೆಲ್ಲರೂ ಭಾರತೀಯರು ಜೊತೆಗೆ ವಿವಿಧ ಸಂಸ್ಕೃತಿ, ವಿವಿಧತೆಯಲ್ಲಿ ಏಕತೆಯನ್ನು ಹೊಂದಿದವರು’ ಎಂದು ಉತ್ತರಿಸಿದ್ದಾರೆ. ನಮ್ಮ ಅಸ್ಮಿತೆಯ ಬಗ್ಗೆಯೂ ಅವರು ಮಾತನಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪ್ರತಿಷ್ಠಿತ ಮೂರು ಪ್ರಶಸ್ತಿ ಬಾಚಿಕೊಂಡ ‘ಆರ್.ಆರ್.ಆರ್’ ಸಿನಿಮಾ

    ಪ್ರತಿಷ್ಠಿತ ಮೂರು ಪ್ರಶಸ್ತಿ ಬಾಚಿಕೊಂಡ ‘ಆರ್.ಆರ್.ಆರ್’ ಸಿನಿಮಾ

    ರಾಜ ಮೌಳಿ (Rajamouli ) ನಿರ್ದೇಶನದ, ಈ ವರ್ಷ ತೆರೆಕಂಡು ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿರುವ ‘ಆರ್.ಆರ್.ಆರ್’ (RRR) ಸಿನಿಮಾಗೆ ಫಿಲಡೆಲ್ಫಿಯಾ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ ಆನ್ಯುವಲ್ ಅವಾರ್ಡ್’ನಲ್ಲಿ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಮೊನ್ನೆಯಷ್ಟೇ ಈ ಸಿನಿಮಾ ನಾಮನಿರ್ದೇಶನಕ್ಕೆ ಆಯ್ಕೆಯಾಗಿದ್ದನ್ನು ಚಿತ್ರತಂಡ ಹಂಚಿಕೊಂಡಿತ್ತು. ಇದೀಗ ಮೂರು ಪ್ರಶಸ್ತಿಗಳನ್ನು ಅದು ಪಡೆದುಕೊಂಡಿದೆ. ಈ ವಿಷಯವನ್ನು ಸ್ವತಃ ಚಿತ್ರತಂಡವೇ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದೆ.

    ಫಿಲಡೆಲ್ಫಿಯಾ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ ಆನ್ಯುವಲ್ ಅವಾರ್ಡ್ ಸಂಸ್ಥೆಯು ಆರ್.ಆರ್.ಆರ್ ಸಿನಿಮಾಗೆ ಅತ್ಯುತ್ತಮ ವಿದೇಶಿ ಸಿನಿಮಾ, ಅತ್ಯುತ್ತಮ ಸಂಗೀತ ಸಂಯೋಜನೆ ಮತ್ತು ಅತ್ಯುತ್ತಮ ಛಾಯಾಗ್ರಹಣ ವಿಭಾಗದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿಗಳನ್ನು ನೀಡಿರುವ ಸಂಸ್ಥೆಗೆ ರಾಜಮೌಳಿ ಅಂಡ್ ಟೀಮ್ ಧನ್ಯವಾದಗಳನ್ನು ಅರ್ಪಿಸಿದೆ. ಇದನ್ನೂ ಓದಿ: ಭಾರತದಲ್ಲಿ 150 ಕೋಟಿಗೂ ಅಧಿಕ ಗಳಿಕೆ ಮಾಡಿದ ‘ಅವತಾರ್ 2’ ಸಿನಿಮಾ

    ಆರ್.ಆರ್.ಆರ್ ಸಿನಿಮಾ ಐದು ವಿಭಾಗಗಳಲ್ಲಿ ನಾಮಿನೇಷನ್ ಪಟ್ಟಿಯಲ್ಲಿತ್ತು. ಅದರಲ್ಲಿ ಮೂರು ಪ್ರಶಸ್ತಿಗಳನ್ನು ಅದು ಬಾಚಿದೆ. ಅಲ್ಲದೇ ಈ ಬಾರಿಯ ಆಸ್ಕರ್ ಪ್ರಶಸ್ತಿಗೂ ಆರ್.ಆರ್.ಆರ್ ಸಿನಿಮಾ ಸ್ಪರ್ಧೆಯಲ್ಲಿದೆ. ಇನ್ನೂ ಅನೇಕ ಪ್ರಶಸ್ತಿಗಳಲ್ಲಿ ಚಿತ್ರ ಸ್ಪರ್ಧೆ ಮಾಡುತ್ತಿದೆ. ಅದರಲ್ಲೂ ಆಸ್ಕರ್ ಮೇಲೆ ಕಣ್ಣಿಟ್ಟು ಚಿತ್ರತಂಡ ಕೂತಿರುವುದರಿಂದ ಆ ಪ್ರಶಸ್ತಿ ಸಿಗುತ್ತಾ ಎನ್ನುವ ಕುತೂಹಲ ಕೂಡ ಮೂಡಿದೆ.

    ಆರ್.ಆರ್.ಆರ್ ಸಿನಿಮಾ ಭಾರತೀಯ ಚಿತ್ರರಂಗವನ್ನೇ ಬೆರಗಿನಿಂದ ನೋಡುವಂತೆ ಮಾಡಿತ್ತು. ಸಾವಿರಾರು ಕೋಟಿ ರೂಪಾಯಿಗಳನ್ನು ಬಾಚಿತ್ತು. 2022ರಲ್ಲಿ ತೆರೆಗೆ ಕಂಡ ಸಿನಿಮಾಗಳ ಪೈಕಿ ಬ್ಲಾಕ್ ಬಸ್ಟರ್ ಹಿಟ್ ಚಿತ್ರ ಎಂಬ ಹೆಗ್ಗಳಿಕೆಗೂ ಇದು ಪಾತ್ರವಾಗಿದೆ. ಈ ಹೊತ್ತಿನಲ್ಲಿ ಪ್ರಶಸ್ತಿಗಳು ಬರುತ್ತಿರುವುದು ಸಹಜವಾಗಿಯೇ ಚಿತ್ರತಂಡಕ್ಕೆ ಮತ್ತು ಅಭಿಮಾನಿಗಳಿಗೆ ಸಂಭ್ರಮ ಹೆಚ್ಚಿಸಿದೆ.

    Live Tv
    [brid partner=56869869 player=32851 video=960834 autoplay=true]