Tag: R Rajendra

  • ರಾಜೇಂದ್ರ ಕೊಲೆ ಸಂಚು ಪ್ರಕರಣ – ಮುಖ್ಯ ಆರೋಪಿ ಸೋಮ ಪೊಲೀಸರಿಗೆ ಶರಣು

    ರಾಜೇಂದ್ರ ಕೊಲೆ ಸಂಚು ಪ್ರಕರಣ – ಮುಖ್ಯ ಆರೋಪಿ ಸೋಮ ಪೊಲೀಸರಿಗೆ ಶರಣು

    ತುಮಕೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ (R Rajendra) ಕೊಲೆಗೆ ಸಂಚು ರೂಪಿಸಿದ ಪ್ರಕರಣದ ಪ್ರಮುಖ ಆರೋಪಿ, ರೌಡಿಶೀಟರ್ ಸೋಮ, ಎ-3 ಅಮಿತ್ ಬುಧವಾರ ಕ್ಯಾತ್ಸಂದ್ರ (Kyathasandra) ಠಾಣೆ ಪೊಲೀಸರಿಗೆ ಶರಣಾಗಿದ್ದಾರೆ.

    ಕೊಲೆ ಸಂಚಿನ ವಿಷಯ ಹೊರಬಂದ ನಂತರ ಪ್ರಮುಖ ಆರೋಪಿ ಸೋಮ ತಲೆ ಮರೆಸಿಕೊಂಡಿದ್ದ. ಪ್ರಕರಣದ ತನಿಖೆಗೆ ರಚಿಸಿದ ವಿಶೇಷ ತಂಡ ಆರೋಪಿಗಳಾದ ಭರತ್, ಯತೀಶ್, ಪುಷ್ಪಾ ಮತ್ತು ಯಶೋದ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿತ್ತು. ಇದೀಗ ಸೋಮ ಹಾಗೂ ಅಮಿತ್ ಕ್ಯಾತ್ಸಂದ್ರ ಠಾಣೆ ಪೊಲೀಸರ ಮುಂದೆ ಶರಣಾಗಿದ್ದಾರೆ. ಇದನ್ನೂ ಓದಿ: ರಷ್ಯಾದಲ್ಲಿ ಕೋವಿಡ್ ಮಾದರಿ ನಿಗೂಢ ವೈರಸ್!

    ಪ್ರಮುಖ ಆರೋಪಿ ಸೋಮನಿಗೆ 5 ಲಕ್ಷ ರೂ. ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ಮನು ಎಂಬವನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ನಿಮ್ಮ ವಕ್ಫ್‌ಗೆ ಒಬ್ಬ ಮುಸ್ಲಿಮೇತರರೂ ಬರುವುದಿಲ್ಲ – ಅಮಿತ್ ಶಾ

    ನನ್ನನ್ನು ಕೊಲೆ ಮಾಡಲು 70 ಲಕ್ಷ ಹಣಕ್ಕೆ ಸುಪಾರಿ ನೀಡಲಾಗಿದೆ. ಮುಂಗಡವಾಗಿ 5 ಲಕ್ಷ ರೂ. ಕೊಡಲಾಗಿದೆ. ಈ ಬಗ್ಗೆ ಆಡಿಯೊ ಲಭ್ಯವಾಗಿದ್ದು, ಪರಿಶೀಲಿಸಿ ತನಿಖೆ ನಡೆಸಬೇಕು ಎಂದು ಕೋರಿ ಆರ್.ರಾಜೇಂದ್ರ ಮಾರ್ಚ್ 29ರಂದು ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಸೋಮ, ಭರತ್, ಅಮಿತ್, ಗುಂಡಾ, ಯತೀಶ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದನ್ನೂ ಓದಿ: ನ್ಯಾಯಾಧೀಶರ ಮನೆಯಲ್ಲಿಯೇ 7 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ

  • Exclusive | ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ ಕೇಸ್‌ – ಆಡಿಯೋದಲ್ಲಿ ಬಯಲಾಯ್ತು ಸಂಚಿನ ರಹಸ್ಯ

    Exclusive | ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ ಕೇಸ್‌ – ಆಡಿಯೋದಲ್ಲಿ ಬಯಲಾಯ್ತು ಸಂಚಿನ ರಹಸ್ಯ

    ಬೆಂಗಳೂರು: ಸಚಿವ ಕೆ.ಎನ್‌ ರಾಜಣ್ಣ ಪುತ್ರನೂ ಆಗಿರುವ ಎಂಎಲ್‌ಸಿ ರಾಜೇಂದ್ರ (Rajendra Rajanna) ಹತ್ಯೆಗೆ ಸುಪಾರಿ ನೀಡಿದ್ದ ಪ್ರಕರಣದ ತನಿಖೆಯನ್ನು ಪೊಲೀಸರು (Tumakuru Police) ಚುರುಕುಗೊಳಿಸಿದ್ದಾರೆ. ಈ ನಡುವೆಯೇ ಸುಪಾರಿಗೆ ಸಂಚು ರೂಪಿಸಿದ್ದ ಸ್ಫೋಟಕ ಆಡಿಯೋ ʻಪಬ್ಲಿಕ್‌ ಟಿವಿʼಗೆ ಲಭ್ಯವಾಗಿದೆ.

    ರಾಜೇಂದ್ರ ರಾಜಣ್ಣ ಅವರು, ತುಮಕೂರು ಎಸ್ಪಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿ ಪೆನ್‌ಡ್ರೈವ್‌ನಲ್ಲಿ ನೀಡಿದ್ದ ಆಡಿಯೋ ಈಗ ʻಪಬ್ಲಿಕ್‌ ಟಿವಿʼಗೆ ಲಭ್ಯವಾಗಿದೆ. ಈ ಆಡಿಯೋದಲ್ಲಿ ಸುಪಾರಿ ಸಂಚಿನ ಇಂಚಿಂಚೂ ಮಾಹಿತಿ ಬಯಲಾಗಿದೆ. ತನ್ನ ಹತ್ಯೆಗೆ ಸುಪಾರಿ ನೀಡಿದ್ದ ವಿಚಾರ ರಾಜೇಂದ್ರ ರಾಜಣ್ಣ ಅವರಿಗೆ ತಿಳಿದಿದ್ದು ಸಹ ಇದೇ ಆಡಿಯೋದಿಂದ ಅನ್ನೋದು ಗೊತ್ತಾಗಿದೆ. ಇದನ್ನೂ ಓದಿ: ಸಚಿವ ರಾಜಣ್ಣ ಪುತ್ರನ ಹತ್ಯೆಗೆ ಯತ್ನ ಕೇಸ್‌ – 18 ನಿಮಿಷಗಳ ಸುಪಾರಿ ಆಡಿಯೋ FSLಗೆ

    ಇದೇ ಆಡಿಯೋ ಆಧರಿಸಿ ರಾಜೇಂದ್ರ ಅವರು ದೂರು ದಾಖಲಿಸಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಪುಷ್ಪಾ ಹಾಗೂ ರಾಕಿ ಎನ್ನುವವರ ನಡುವೆ ಸಂಭಾಷಣೆ ನಡೆದಿತ್ತು. ಈ ಆಡಿಯೋನಲ್ಲಿ ಪ್ರಕರಣದ ಎ1 ಆರೋಪಿ ಸೋಮನ ಪ್ಲ್ಯಾನ್‌ ಬಗ್ಗೆ ಪುಷ್ಪಾ ಎನ್ನುವ ಮಹಿಳೆ ಇಂಚಿಂಚೂ ಮಾಹಿತಿಯನ್ನ ಬಿಚ್ಚಿಟ್ಟಿದ್ದಾಳೆ.  ಇದನ್ನೂ ಓದಿ: ನನ್ನ ಕೊಲೆಗೆ 70 ಲಕ್ಷ ಸುಪಾರಿ ಕೊಡಲಾಗಿದೆ – ತುಮಕೂರು ಎಸ್ಪಿಗೆ ಸಚಿವ ರಾಜಣ್ಣ ಪುತ್ರ ದೂರು

    ಆರೋಪಿ ಸೋಮ ರಾಜೇಂದ್ರರನ್ನ ಹತ್ಯೆ ಮಾಡಲು ಸುಪಾರಿ ಪಡೆದಿರುವುದಾಗಿ ಪುಷ್ಪಾಳ ಬಳಿ ಹೇಳಿಕೊಂಡಿದ್ದಾನೆ. ಆ ಬಳಿಕವೇ ಪುಷ್ಪಾ ಸುಪಾರಿ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಿದ್ದಳು. ಸೋಮನ ಜೊತೆಗಿದ್ದುಕೊಂಡೇ ಕೊಲೆ ಸಂಚಿನ ಮಾಹಿತಿ ಕಲೆಹಾಕಿದ್ದಳು, ಬಳಿಕ ಈ ವಿಚಾರವನ್ನ ರಾಜೇಂದ್ರ ಅವರಿಗೆ ತಿಳಿಸಲು ಪುಷ್ಪಾ ಮುಂದಾಗಿದ್ದಾಳೆ. ರಾಜೇಂದ್ರ ಅವರಿಗೆ ವಿಷಯ ತಿಳಿಸಲು ರಾಕಿ ಎನ್ನುವ ಹುಡುಗನ್ನ ಬಳಸಿಕೊಂಡಿದ್ದಾಳೆ. ಅದಕ್ಕಾಗಿ ಕೊಲೆ ಸಂಚಿನ ಬಗ್ಗೆ ಪುಷ್ಪ ಹೇಳಿದ್ದನ್ನ ರಾಕಿ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿಕೊಂಡಿದ್ದ. ಬಳಿಕ ರಾಜೇಂದ್ರ ಅವರಿಗೆ ಈ ಆಡಿಯೋವನ್ನ ತಲುಪಸಿಲಾಗಿತ್ತು. ಆಡಿಯೋ ಕೇಳಿದ ಎಂಎಲ್‌ಸಿ ಶಾಕ್‌ ಆಗಿದರು, ಕೂಡಲೇ ಅಲರ್ಟ್ ಆದರು. ಬಳಿಕ ತುಮಕೂರು ಎಸ್ಪಿ ಬಳಿ ದೂರು ದಾಖಲಿಸಿದ್ದಾರೆ.

    ಸದ್ಯ ಆಡಿಯೋ ಪಡೆದುಕೊಂಡಿರುವ ಪೊಲೀಸರು ಅದನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದಾರೆ. ಆರೋಪಿ ಸೋಮ, ಭರತ್, ಅಮಿತ್, ಗುಂಡಾ, ಯತೀಶ್ ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ತುಮಕೂರು ಜಿಲ್ಲಾ ಕಾಂಗ್ರೆಸ್‌ನಲ್ಲಿ ಶೀತಲ ಸಮರ; ಡಾ.ರಂಗನಾಥ್-ರಾಜಣ್ಣ ಕುಟುಂಬ ನಡುವೆ ವಾರ್

    ಸ್ಫೋಟಕ ಮಾಹಿತಿ ನೀಡಿದ ಪುಷ್ಪಾ:
    ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ ನೀಡಿದ ವಿಚಾರದ ಬಗ್ಗೆ ಆಡಿಯೋನಲ್ಲಿ ಕೇಳಿಬಂದಿರುವ ಪುಷ್ಪಾ ಎಂಬ ಮಹಿಳೆ ಸ್ಪೋಟಕ ಮಾಹಿತಿ ಹಂಚಿಕೊಂಡಿರುವುದು ಬಯಲಾಗಿದೆ. ಕಳೆದ ನವೆಂಬರ್‌ನಲ್ಲಿ ರಾಜೇಂದ್ರ ಅವರ ಮಗಳ ಬರ್ತ್‌ಡೇ ಡೆಕೋರೇಷನ್‌ಗೆ ಜೈಪುರದ ಇಬ್ಬರು ಹುಡುಗರು ಬಂದಿದ್ದರು. ಆ ಇಬ್ಬರನ್ನೂ ಸೋಮ ಕಳುಹಿಸಿದ್ದ, ಆಗಲೇ ಹತ್ಯೆಗೆ ಯತ್ನ ನಡೆದಿತ್ತು ಅಂತ ಆಡಿಯೋನಲ್ಲಿ ಪುಷ್ಪಾ ಮಾಹಿತಿ ನೀಡಿದ್ದಾಳೆ. ಅಲ್ಲದೇ ಸೋಮನಿಗೆ 5 ಲಕ್ಷ ಹಣ ಬಂದಿರೋದು ಸತ್ಯ ಸತ್ಯ ಸತ್ಯ. ಪೊಲೀಸರು ಕರೆದುಕೊಂಡು ಹೋಗಿ ವಿಚಾರಣೆ ಮಾಡಿದ್ರೆ ಎಲ್ಲಾ ಗೊತ್ತಾಗುತ್ತೆ. ರಾಜೆಂದ್ರ ಅವ್ರ ಮುಂದೆ ನಾನೇ ಹೇಳ್ತೀನಿ, ನನ್ನ ಕರೆದುಕೊಂಡು ಹೋಗು ಅಂತ ರಾಕಿ ಎನ್ನುವವನೊಂದಿಗೆ ಪುಷ್ಪಾ ಹೇಳಿಕೊಂಡಿದ್ದಾಳೆ. ಜೊತೆಗೆ ಜೈಪುರದ ಮತ್ತೋರ್ವ ರೌಡಿಶೀಟರ್ ಪ್ರಸಿಯನ್ನೂ ಮರ್ಡರ್ ಮಾಡೋದಾಗಿ ಸೋಮ ಹೇಳಿದ್ದಾನೆ. ಅದಕ್ಕಾಗಿ ಬೆಂಗಳೂರಿನ ಕಲಾಸಿಪಾಳ್ಯದಿಂದ ಇಬ್ಬರು ತಮಿಳು ಹುಡುಗರನ್ನ ಸೋಮ ಕರೆಸಿಕೊಳ್ತಿದ್ದಾನೆ. ಜೈಲಿನಲ್ಲಿರುವ ಸ್ಟೀಫನ್ ಗುಂಡನನ್ನ ಪೆರೋಲ್ ಮೇಲೆ ಕರೆದುಕೊಂಡು ಬರಲು ಸೋಮ ಪ್ಲಾನ್ ಮಾಡಿದ್ದಾನೆ. ಅವನನ್ನ ಕರೆಸಿ ನೆಟ್‌ವರ್ಕ್ ಇಲ್ದೇ ಇರೋ ಜಾಗದಲ್ಲಿ ಇಡೋಕೆ ಮನೆ ಮಾಡ್ತಿದ್ದಾನೆ ಈ ಬಗ್ಗೆಯೂ ಆಡಿಯೋನಲ್ಲಿ ಪುಷ್ಪಾ ಎನ್ನುವ ಮಹಿಳೆ ಮಾಹಿತಿ ನೀಡಿದ್ದಾಳೆ. ಇದನ್ನೂ ಓದಿ: ಹನಿಟ್ರ್ಯಾಪ್‌ ಮಾಡಲು ಬಂದವರಿಗೆ ಕಪಾಳಕ್ಕೆ ಹೊಡೆದಿದ್ದು ನಿಜ – ವಿಷ ಕನ್ಯೆಯರ ರಹಸ್ಯ ಹೇಳಿದ ರಾಜಣ್ಣ

    ಆಡಿಯೋ ಸಂಭಾಷಣೆಯಲ್ಲಿ ರಹಸ್ಯ ಸ್ಫೋಟ

    ಪುಷ್ಪಾ: ಅಣ್ಣ ಏನಂತು..?
    ರಾಕಿ: ಏನ್ ವಿಷಯ ಹೇಳಬೇಕು.. ಎತ್ತಾ ಅಂತಾ..

    ಪುಷ್ಪಾ: ಸೋಮ ಈ ರೀತಿ ಎಲ್ಲಾ ಮಾಡ್ತಿದ್ದಾನೆ ಸಾರ್.. ಕಿವಿಗೆ ಬಿದ್ದಂತೆ.. ಆ ಹುಡುಗಿನೇ ಬಂದು ಹೇಳ್ತಾಳೆ ಸರ್.. ನಂಬಿಕೆ ಇಲ್ಲಾ ಅಂದ್ರೆ, ಅವಳ ಕಿವಿಗೆ ಬಿದ್ದಿರೋದನ್ನು ಹೇಳ್ತಾಳೆ ಸರ್ ಅನ್ನಿ.. ಸುಳ್ಳು ಪಳ್ಳು ಹೇಳಲ್ಲ… ಅವಳು ಇರೋದನ್ನು ಹೇಳ್ತಾಳೆ.. ಚಿಕ್ಕವರಿಂದ ನೋಡಿದ್ದೀವಿ ಹೇಳಿ ಅಂತಾ ಹೇಳಿ… ನಮಗೇನು ಆಗಬೇಕಿಲ್ಲ… ನಮಗೇನು ಆಸ್ತಿನೂ ಇದೆ… ಆ ವಯ್ಯಗೆ ಬಂದು ಹೇಳಿದ್ರೆ, ನಮಗೇನು ಕೊಡಲ್ಲ.. ಒಟ್ನಲ್ಲಿ ಈ ತರ ಮಾತನಾಡ್ಕೊಂಡಿರೋದು ಸತ್ಯ… ಅವನ ಮೇಲೆ ಒಂದು ಕಣ್ಣಿಡಿ ಸರ್.. ಪೊಲೀಸ್ ಅವರಿಗೆ ಹೇಳಿ.. ಅದರ ಮೇಲೆ ಅವನಿಷ್ಟ..

    ರಾಕಿ: ಅಡ್ವಾನ್ಸ್ ಬಂದಿರೋದು ನಿಜಾನಾ..?
    ಪುಷ್ಪಾ: ಹೌದು ನಮ್ಮ ಅಮ್ಮನ ಮೇಲೆ ಆಣೆ ಬಂದಿದೆ.. 5 ಲಕ್ಷ ಎಲ್ಲಿಂದ ಬಂತು ಅಂತಾ ತನಿಖೆ ಆಗಲಿ..

    ಪುಷ್ಪಾ: ಅಮಿತ್ ಮಾತ್ರ ಇರೋದು… ಎಲ್ಲಾ ಗೊತ್ತು, ಈ ನನ್ಮಂಗನ್ನ ಎತ್ತಾಕ್ಕೊಂಡು ಹೋದ್ರೆ ಎಲ್ಲಾ ಬಾಯಿ ಬಿಡ್ತಾನೆ…
    ರಾಕಿ: ಅವನು ಬಾಯಿ ಬಿಡಲ್ಲ..

    ಪುಷ್ಪಾ: ಅವನ ಜೀವ ಹೋದ್ರೂ ಅವನು ಬಾಯಿ ಬಿಡಲ್ಲ. ಅದಂತೂ ಸತ್ಯ.. ಅವನಿಗೆ ಎಲ್ಲಾ ಗೊತ್ತು… ಅವನ ಬಾಸ್‌ಗೋಸ್ಕರ ಜೈಲಿಗೋದ್ರೂ ಇದ್ದುಬಿಡ್ತಿನಿ ಅಂತಾನೆ… ಇವನನ್ನು ಎತ್ತಿ ಬಿಟ್ಟರೆ, ನಮ್ಮ ಬಾಸ್ ಜೈಪುರದಲ್ಲಿ ದೊಡ್ಡವರು ಅಂದವ್ನೆ.. ಇದನ್ನು ನಾನು ಅಣ್ಣಂಗೆ ಹೇಳೇ ಹೇಳ್ತಿನಿ… ಹಿಂಗೇ ಅಂದ ಅಣ್ಣ ಅಂತಾ ಹೇಳ್ತಿನಿ ನಾನು.. ಇವರ ಮುಂದೆ ಕರೆದುಕೊಂಡು ಹೋಗಪ್ಪಾ ನಿಂಗ್ಯಾಕೆ ನಾನು ಹೇಳೇ ಹೇಳ್ತಿನಿ…

  • ಸಚಿವ ರಾಜಣ್ಣ ಪುತ್ರನ ಹತ್ಯೆಗೆ ಯತ್ನ ಕೇಸ್‌ – 18 ನಿಮಿಷಗಳ ಸುಪಾರಿ ಆಡಿಯೋ FSLಗೆ

    ಸಚಿವ ರಾಜಣ್ಣ ಪುತ್ರನ ಹತ್ಯೆಗೆ ಯತ್ನ ಕೇಸ್‌ – 18 ನಿಮಿಷಗಳ ಸುಪಾರಿ ಆಡಿಯೋ FSLಗೆ

    ಬೆಂಗಳೂರು: ಸಚಿವ ರಾಜಣ್ಣ ಪುತ್ರ ರಾಜೇಂದ್ರ (Rajendra Rajanna) ಹತ್ಯೆಗೆ ಯತ್ನ ಪ್ರಕರಣ ತನಿಖೆಯನ್ನು ಕ್ಯಾತಸಂದ್ರ ಪೊಲೀಸರು ಚುರುಕುಗೊಳಿಸಿದ್ದಾರೆ.

    ಎಂಎಲ್‌ಸಿ ರಾಜೇಂದ್ರ ಅವರು ಆರೋಪ ಮಾಡಿದ ಹಾಗೆ 18 ನಿಮಿಷಗಳ ಆಡಿಯೋವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಡಿಯೋದಲ್ಲಿ (Audio) ಇಬ್ಬರ ಮಾತಿನ ಸಂಭಾಷಣೆ ಇದ್ದು, ಆ ಸಂಭಾಷಣೆಯ ಬಗ್ಗೆ ಒಂದಿಷ್ಟು ಸ್ಪಷ್ಟನೆ ಸಿಗಬೇಕಿದೆ. ಈಗಾಗಲೇ ರಾಜೇಂದ್ರ ಅವರು ಆರೋಪ‌ ಮಾಡಿದ ಹಾಗೇ ಸೋಮ ಮತ್ತು ಭರತ್ ಮಾತುಕತೆನಾ ಅಂತ ಪರಿಶೀಲನೆ ನಡೆಸ್ತಾ ಇದ್ದಾರೆ. ಇದರ ಜೊತೆಗೆ ಆಡಿಯೋವನ್ನ ಎಫ್‌ಎಸ್‌ಎಲ್‌ಗೆ ‌ಕಳುಹಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನನ್ನ ಕೊಲೆಗೆ 70 ಲಕ್ಷ ಸುಪಾರಿ ಕೊಡಲಾಗಿದೆ – ತುಮಕೂರು ಎಸ್ಪಿಗೆ ಸಚಿವ ರಾಜಣ್ಣ ಪುತ್ರ ದೂರು

    ಕಳೆದ ಎರಡು ದಿನಗಳ ಹಿಂದೆಯಷ್ಟೇ ಎಂಎಲ್‌ಸಿ ರಾಜೇಂದ್ರ ರಾಜಣ್ಣ ಅವರು, ತನ್ನ ಕೊಲೆಗೆ 70 ಲಕ್ಷ ರೂ.ಗೆ ಸುಪಾರಿ ಕೊಡಲಾಗಿದೆ ಎಂದು ಆರೋಪಿಸಿ ತುಮಕೂರು ಎಸ್ಪಿಗೆ ದೂರು ಸಲ್ಲಿಸಿದ್ದರು. 18 ನಿಮಿಗಳ ಆಡಿಯೋ ಸಾಕ್ಷ್ಯದ ಸಹಿತ ಎರಡು ಪುಟಗಳ ದೂರು ನೀಡಿದ್ದರು. ಇದನ್ನೂ ಓದಿ: ಹೇಮಾವತಿ ಕೆನಾಲ್ ಕದನ – ಡಿಕೆಶಿ ಸಂಬಂಧಿ ನಂಗೆ ಫೋನ್ ಮಾಡಿ ಧಮ್ಕಿ ಹಾಕಿದ್ದಾರೆ: ರಾಜೇಂದ್ರ ರಾಜಣ್ಣ

    ನನ್ನ ಕೊಲೆಗೆ 70 ಲಕ್ಷ ಸುಪಾರಿ ಕೊಡಲಾಗಿದೆ. ಅದರಲ್ಲಿ 5 ಲಕ್ಷ ಮುಂಗಡ ಪಾವತಿ ಮಾಡಿದ್ದಾರೆ. ಸೋಮ ಮತ್ತು ಭರತ್ ಅನ್ನೋರು ಇದರಲ್ಲಿದ್ದಾರೆ. ನನ್ನ ವಾಹನಕ್ಕೆ ಜಿಪಿಎಸ್ (GPS) ಅಳವಡಿಸಿ ಚಲನ ವಲನ ತಿಳಿಯಲು ಪ್ರಯತ್ನ ಪಟ್ಟಿದ್ದರು. ಹೀಗಾಗಿ ನನಗೆ ಹೆಚ್ಚಿನ ಭದ್ರತೆಗೆ ಮನವಿ ಮಾಡಿದ್ದೇನೆ. ಸುಪಾರಿ ಟೀಂ ನಲ್ಲಿ 20 ಜನ ಇದ್ದಾರೆ. 18 ನಿಮಿಷದ ಆಡಿಯೋ ಇದೆ ಎಂದು ರಾಜೇಂದ್ರ ರಾಜಣ್ಣ ಆರೋಪಿಸಿದ್ದರು. ಇದನ್ನೂ ಓದಿ: ತುಮಕೂರು ಜಿಲ್ಲಾ ಕಾಂಗ್ರೆಸ್‌ನಲ್ಲಿ ಶೀತಲ ಸಮರ; ಡಾ.ರಂಗನಾಥ್-ರಾಜಣ್ಣ ಕುಟುಂಬ ನಡುವೆ ವಾರ್

  • ನನ್ನ ಕೊಲೆಗೆ 70 ಲಕ್ಷ ಸುಪಾರಿ ಕೊಡಲಾಗಿದೆ – ತುಮಕೂರು ಎಸ್ಪಿಗೆ ಸಚಿವ ರಾಜಣ್ಣ ಪುತ್ರ ದೂರು

    ನನ್ನ ಕೊಲೆಗೆ 70 ಲಕ್ಷ ಸುಪಾರಿ ಕೊಡಲಾಗಿದೆ – ತುಮಕೂರು ಎಸ್ಪಿಗೆ ಸಚಿವ ರಾಜಣ್ಣ ಪುತ್ರ ದೂರು

    – ಆಡಿಯೋ ಸಾಕ್ಷ್ಯ ಸಹಿತ 2 ಪುಟಗಳ ದೂರು

    ತುಮಕೂರು: ತನ್ನ ಕೊಲೆಗೆ 70 ಲಕ್ಷ ರೂ.ಗೆ ಸುಪಾರಿ ಕೊಡಲಾಗಿದೆ ಎಂದು ಆರೋಪಿಸಿ ಸಚಿವ ಕೆ.ಎನ್‌ ರಾಜಣ್ಣ (KN Rajanna) ಪುತ್ರನೂ ಆಗಿರುವ ಎಂಎಲ್‌ಸಿ ರಾಜೇಂದ್ರ ರಾಜಣ್ಣ (Rajendra Rajanna) ಅವರು ತುಮಕೂರು ಎಸ್ಪಿಗೆ ದೂರು ಸಲ್ಲಿಸಿದ್ದಾರೆ.

    ಮಧ್ಯಾಹ್ನ 12 ಗಂಟೆ ಸುಮಾರಿಗೆ ತುಮಕೂರು‌ ಎಸ್ಪಿ ಕಚೇರಿಗೆ ತೆರಳಿದ ರಾಜೇಂದ್ರ ರಾಜಣ್ಣ ಅವರು ಎಸ್ಪಿ ಅಶೋಕ್‌ ಕುಮಾರ್‌ ಅವರಿಗೆ ಆಡಿಯೋ ಸಾಕ್ಷ್ಯದ ಸಹಿತ ಎರಡು ಪುಟಗಳ ದೂರು ನೀಡಿದ್ದಾರೆ. ತುಮಕೂರಿನ ಕಾತ್ಸಂದದ ರಜತಾತ್ರಿ ನಿವಾಸದಲ್ಲಿ ಕಳೆದ ನವೆಂಬರ್‌ನಲ್ಲಿ ನನ್ನ ಹತ್ಯೆಗೆ ಕೊಲೆಯತ್ನ ನಡೆದಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಇದನ್ನೂ ಓದಿ: ನನ್ನ ಹತ್ಯೆಗೆ ಸುಪಾರಿ – ಹೊಸ ಬಾಂಬ್‌ ಸಿಡಿಸಿದ ಸಚಿವ ರಾಜಣ್ಣ ಪುತ್ರ

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊಲೆಗೆ 70 ಲಕ್ಷ ಸುಪಾರಿ ಕೊಡಲಾಗಿದೆ. ಅದರಲ್ಲಿ 5 ಲಕ್ಷ ಮುಂಗಡ ಪಾವತಿ ಮಾಡಿದ್ದಾರೆ. ಸೋಮ ಮತ್ತು ಭರತ್ ಅನ್ನೋರು ಇದರಲ್ಲಿದ್ದಾರೆ. ನನ್ನ ವಾಹನಕ್ಕೆ ಜಿಪಿಎಸ್ (GPS) ಅಳವಡಿಸಿ ಚಲನ ವಲನ ತಿಳಿಯಲು ಪ್ರಯತ್ನ ಪಟ್ಟಿದ್ದರು. ಹೀಗಾಗಿ ನನಗೆ ಹೆಚ್ಚಿನ ಭದ್ರತೆಗೆ ಮನವಿ ಮಾಡಿದ್ದೇನೆ. ಸುಪಾರಿ ಟೀಂ ನಲ್ಲಿ 20 ಜನ ಇದ್ದಾರೆ. 18 ನಿಮಿಷದ ಆಡಿಯೋ ಇದೆ ಎಂದು ರಾಜೇಂದ್ರ ರಾಜಣ್ಣ ಆರೋಪಿಸಿದ್ದಾರೆ. ಇದನ್ನೂ ಓದಿ: ಹನಿಟ್ರ್ಯಾಪ್‌ ಪ್ರಕರಣ ತನಿಖೆಗೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಡಿಜಿ ಅವರ ಸಲಹೆ ಮೇರೆಗೆ ಇಂದು ಎಸ್ಪಿಗೆ ದೂರು ನೀಡಿದ್ದೇನೆ. ಹನಿಟ್ರ‍್ಯಾಪ್ ವಿಚಾರ ಎಲ್ಲೂ ಪ್ರಸ್ತಾಪ ಮಾಡಿಲ್ಲ. ನನಗೆ ಅಪರಿಚಿತರಿಂದ ಫೋನ್ ಕಾಲ್ ಮೆಸೆಜ್ ವೀಡಿಯೋ ಕಾಲ್ ಬರುತಿತ್ತು ಅಂತಾ ಅಷ್ಟೇ ಹೇಳಿದ್ದೆ. ಈಗ ನನ್ನ ಹತ್ಯೆಗೆ ಸುಪಾರಿ ಕೊಟ್ಟಿದ್ದರ ಬಗ್ಗೆ ದೂರು ನೀಡಿದ್ದೇನೆ, ಎಫ್‌ಐಆರ್‌ ಮಾಡುವಂತೆ ಕೇಳಿಕೊಂಡಿದ್ದೇನೆ. ಕ್ಯಾತಸಂದ್ರ ಠಾಣೆಯಲ್ಲಿ ಎಫ್‌ಐಆರ್ ಮಾಡುತ್ತೇನೆ ಎಂದಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹನಿಟ್ರ್ಯಾಪ್ ಪ್ರಕರಣ – ಡಿಜಿಗೆ ದೂರು ಕೊಡಲು ರಾಜಣ್ಣ ಪುತ್ರಗೆ ಸಿಎಂ ಸೂಚನೆ

    ಮಗಳ ಹುಟ್ಟು ಹಬ್ಬದ ಸಂದರ್ಭದಲ್ಲಿ ಅಂದರೆ ಕಳೆದ ನವೆಂಬರ್ ತಿಂಗಳಲ್ಲಿ ಕೊಲೆ ಸಂಚು ರೂಪಿಸಲಾಗಿತ್ತು. ನನ್ನ ಕಾರಿಗೆ ಜಿಪಿಎಸ್ ಅಳವಡಿಸಲು ಪ್ಲಾನ್ ಮಾಡಿದ್ದರು. ಇಡೀ ರಾಜ್ಯದಲ್ಲಿ ನನ್ನ ಮೇಲೆ ಯಾರಿಗೂ ದ್ವೇಷ ಇಲ್ಲ. ನಾನೇನು ರಿಯಲ್ ಎಸ್ಟೇಟ್ ಮಾಡುತ್ತಿಲ್ಲ. ಯಾಕೆ ಸುಪಾರಿ ಕೊಟ್ಟರು ಗೊತ್ತಿಲ್ಲ? ಅದನ್ನು ತನಿಖೆ ಮಾಡುವಂತೆ ಹೇಳಿದ್ದೇನೆ. ಸೋಮ ಮತ್ತು ಭರತ್ ಅನ್ನುವವರ ಹೆಸರು ಆಡಿಯೋದಲ್ಲಿ ಇದೆ. ಅವರು ಯಾರು ಅಂತಾ ಗೊತ್ತಿಲ್ಲ. ಒಬ್ಬ ಲೇಡಿ ಮತ್ತು ಹುಡುಗ 18 ನಿಮಿಷ ಆಡಿಯೋದಲ್ಲಿ ಮಾತನಾಡುತ್ತಾರೆ. ಮಗಳ ಬರ್ತ್‌ಡೇ ಹಿಂದಿನ ದಿನ ಹತ್ಯೆ ಮಾಡಬೇಕು ಎಂದು ಪ್ಲಾನ್ ಮಾಡಿದ್ದರು. ಶಾಮಿಯಾನ ಮಾಲೀಕರು ಹೆಸರು ನಾನು ಹೇಳಲ್ಲ. ಮಾಧ್ಯಮದವರಿಂದ ಅವರಿಗೆ ಕಿರಿಕಿರಿ ಆಗಬಾರದು ಎಂಬ ಕಾರಣಕ್ಕೆ ನಾನು ಅವರ ಹೆಸರು ಹೇಳಲ್ಲ ಎಂದು ಹೇಳಿದ್ದಾರೆ.

    ಮುಂದುವರಿದು.. ಹನಿಟ್ರ‍್ಯಾಪ್ ವಿಚಾರ ಸುಪಾರಿ ವಿಚಾರ ಬೇರೆ ಬೇರೆ. ಹನಿಟ್ರ‍್ಯಾಪ್ ವಿಚಾರ ಸಿಐಡಿ ತನಿಖೆ ಆರಂಭವಾಗಿದೆ. ಸಿಐಡಿ ಅಧಿಕಾರಿ ವಂಶಿಕೃಷ್ಣ ನೇತೃತ್ವದಲ್ಲಿ ನಡೀತಿದೆ. ಬೆಂಗಳೂರು ಭೂಗತ ಲೋಕದ ಕೈವಾಡ ಬಗ್ಗೆ ಗೊತ್ತಿಲ್ಲ. ನನಗೆ ಹೆಚ್ಚಿನ ಭದ್ರತೆ ಬೇಕು ಎಂದು ಕೇಳಿಕೊಂಡಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಏ.10ರ ಒಳಗಡೆ ಯತ್ನಾಳ್‌ ಉಚ್ಚಾಟನೆ ಆದೇಶ ವಾಪಸ್‌ ಪಡೀರಿ : ಜಯಮೃತ್ಯುಂಜಯ ಸ್ವಾಮೀಜಿ ಡೆಡ್‌ಲೈನ್‌

  • ನನ್ನ ಹತ್ಯೆಗೆ ಸುಪಾರಿ – ಹೊಸ ಬಾಂಬ್‌ ಸಿಡಿಸಿದ ಸಚಿವ ರಾಜಣ್ಣ ಪುತ್ರ

    ನನ್ನ ಹತ್ಯೆಗೆ ಸುಪಾರಿ – ಹೊಸ ಬಾಂಬ್‌ ಸಿಡಿಸಿದ ಸಚಿವ ರಾಜಣ್ಣ ಪುತ್ರ

    – ಹನಿಟ್ರ್ಯಾಪ್‌ ಕೇಸ್‌ಗೆ ಸ್ಫೋಟಕ ಟ್ವಿಸ್ಟ್‌ – ಡಿಜಿಪಿಗೆ ದೂರು

    ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣಕ್ಕೆ (Honeytrap Case) ಸಂಬಂಧಿಸಿದಂತೆ ಕೊನೆಗೂ ಸಚಿವ ರಾಜಣ್ಣ ಪುತ್ರ ಡಿಜಿಪಿಗೆ ದೂರು ನೀಡಿದ್ದಾರೆ. ಯಾರ ಹೆಸರು, ಫೋನ್‌ ನಂಬರ್‌ ನೀಡದೇ ದೂರು ನೀಡಿದ್ದಾರೆ. ಈ ಬೆನ್ನಲ್ಲೇ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಹನಿಟ್ರ್ಯಾಪ್‌ಗೆ ಬಂದವರು ತಮ್ಮ ಹತ್ಯೆಗೆ ಯತ್ನಿಸಿದ್ರು ಅಂತ ಎಂಎಲ್‌ಸಿ ರಾಜೇಂದ್ರ ರಾಜಣ್ಣ (Rajendra Rajanna) ಹೊಸ ಬಾಂಬ್‌ ಸಿಡಿಸಿದರು.

    ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಡಿಜಿ ಅವರನ್ನು ಭೇಟಿ ಮಾಡಿ ದೂರು ನೀಡಿದ್ದೇನೆ. ಸಚಿವರು ಕೂಡ ಗೃಹ ಸಚಿವರಿಗೆ ದೂರು ನೀಡಿದ್ದಾರೆ. ನನ್ನ ಮೇಲೆ ಹನಿಟ್ರ‍್ಯಾಪ್ ಆಗಿಲ್ಲ, ದೂರವಾಣಿ ಕರೆ ಮೂಲಕ ಯತ್ನ ನಡೆಯುತ್ತಾ ಇತ್ತು ಎಂದು ಹೇಳಿದರು. ಇದನ್ನೂ ಓದಿ: ಯತ್ನಾಳ್ ಉಚ್ಚಾಟನೆ ಮಾಡಿ ಭ್ರಷ್ಟಾಚಾರ, ಕುಟುಂಬ ರಾಜಕೀಯಕ್ಕೆ ನಮ್ಮ ಬೆಂಬಲ ಅಂತ ಬಿಜೆಪಿ ಒಪ್ಪಿಕೊಂಡಿದೆ: ಪ್ರಿಯಾಂಕ್ ಖರ್ಗೆ

    ಮುಂದುವರಿದು… ನವೆಂಬರ್ 16ರಂದು ಮಗಳ ಹುಟ್ಟುಹಬ್ಬದ ದಿನ ಶಾಮಿಯಾನ ಹಾಕೋಕೆ ಸ್ವಲ್ಪ ಜನ ಬಂದಿದ್ರು. ಆ ಸಂದರ್ಭದಲ್ಲಿ ಹತ್ಯೆ ಮಾಡಲು ಪ್ರಯತ್ನ ಮಾಡಿದ್ರು ಎಂದು ಸೋಮ, ಭರತ್ ಇಬ್ಬರ ಹೆಸರನ್ನು ಉಲ್ಲೇಖ ಮಾಡಿದರು.

    ನನಗೆ ಇದು ಜನವರಿಯಲ್ಲಿ ಮಾಹಿತಿ ಸಿಕ್ಕಿತು. ನನ್ನ ಆಪ್ತರ ಮೂಲಕ ಆಡಿಯೋ ಸಿಕ್ಕಿತು. ಆಡಿಯೋದಲ್ಲಿ 5 ಲಕ್ಷ ಸುಪಾರಿ ನೀಡಿದ್ರು. ಮೂರು ಜನ ಹತ್ಯೆ ಮಾಡಲು ಪ್ರಯತ್ನಿಸಿದ್ದರು. ಈ ಸಂಬಂಧ ಎಸ್ಪಿಗೆ ದೂರು ನೀಡಲು ಡಿಜಿ ಹೇಳಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಯತ್ನಾಳ್ ಉಚ್ಚಾಟನೆಯನ್ನು ರಾಷ್ಟ್ರೀಯ ನಾಯಕರು ಮರುಪರಿಶೀಲಿಸಿದ್ರೆ ಪಕ್ಷಕ್ಕೆ ಲಾಭ – ಶ್ರೀರಾಮುಲು

    ರಾಜಣ್ಣ ಹನಿಟ್ರ‍್ಯಾಪ್ರಪ್ ಪ್ರಕರಣ ಸಿಐಡಿಗೆ ಹೋಗಿದೆ, ಮನೆಯ ಬಳಿ ಸಾಕ್ಷ್ಯಾಧಾರ ಕಲೆ ಹಾಕೋದಕ್ಕೆ ಪೊಲೀಸರು ಹೋಗಿದ್ದಾರೆ. ಜಯಮಹಲ್ ರಸ್ತೆಯ ಮನೆಯಲ್ಲಿ ಪರಿಶೀಲನೆ ಮಾಡ್ತಾ ಇದ್ದಾರೆ. ಮನೆ ಕೆಲಸದವರ ಹೇಳಿಕೆ ಪಡೆದಿದ್ದಾರೆ. ಈ ಪ್ರಕರಣದ ಹಿಂದಿರುವ ಮಹಾನಾಯಕ ಯಾರು ಅನ್ನೋದು ಯಾರು ಅನ್ನೋದು ಗೊತ್ತಿಲ್ಲ. ನಾನು ಯಾರ ಹೆಸರನ್ನು ಕೂಡ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ರು. ಇದನ್ನೂ ಓದಿ: ಒಳಮೀಸಲಾತಿ ಮಧ್ಯಂತರ ವರದಿ ಸಲ್ಲಿಕೆ – 104 ಪುಟಗಳ ವರದಿ ಸಿಎಂಗೆ ಹಸ್ತಾಂತರ ಮಾಡಿದ ಆಯೋಗ

  • ತುಮಕೂರು | ಮಧುಗಿರಿ ಪಟ್ಟಣ ಅಭಿವೃದ್ಧಿಗೆ ಸರ್ಕಾರದಿಂದ 25 ಕೋಟಿ‌ ಅನುದಾನ

    ತುಮಕೂರು | ಮಧುಗಿರಿ ಪಟ್ಟಣ ಅಭಿವೃದ್ಧಿಗೆ ಸರ್ಕಾರದಿಂದ 25 ಕೋಟಿ‌ ಅನುದಾನ

    ತುಮಕೂರು: ಮಧುಗಿರಿ ಪಟ್ಟಣದ ರಸ್ತೆ (Madhugiri Town Road) ಮತ್ತು ಚರಂಡಿ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ 25 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಶೀಘ್ರವೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ತಿಳಿಸಿದರು.

    ಪಟ್ಟಣದ ಪ್ರಮುಖ ರಸ್ತೆಗಳಿಗೆ ಭೇಟಿ ನೀಡಿ ಗುಣಮಟ್ಟ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ತುಮಕೂರು ಗೇಟ್‌ನಿಂದ ಶಿರಾ ರಸ್ತೆವರೆಗೆ, ಗೌರಿಬಿದನೂರು ಬೈಪಾಸ್‌ನಿಂದ ಸಿದ್ದಾಪುರ ಗೇಟ್‌ವರೆಗೆ ಡಬಲ್ ರಸ್ತೆ ಹಾಗೂ ಪಟ್ಟಣದ ಎಲ್ಲಾ ವಾರ್ಡ್‌ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ ಮಾಡಿಸಲಾಗುವುದು ಎಂದರು.

    ಪಟ್ಟಣದ ಪ್ರಮುಖ ವೃತ್ತಗಳನ್ನು ವಿನೂತನವಾಗಿ ಅಭಿವೃದ್ಧಿ ಪಡಿಸಲಾಗುವುದು. ಹೈಟೆಕ್ ತಂಗುದಾಣ ನಿರ್ಮಾಣ, ವೈಜ್ಞಾನಿಕ ಹಂಪ್‌ ಹಾಗೂ ಪ್ರಮುಖ ರಸ್ತೆಗಳಿಗೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ವಿವರಿಸಿದರು. ಇದನ್ನೂ ಓದಿ: ಇವತ್ತೇ ಚುನಾವಣೆ ನಡೆದರೆ ಕಾಂಗ್ರೆಸ್‌ಗೆ ಕೇವಲ 20 ಸೀಟು ಬರುತ್ತದೆ – ಗೋವಿಂದ ಕಾರಜೋಳ

    ರಾಜೀವ್ ಗಾಂಧಿ ಕ್ರೀಡಾಂಗಣದ ಅಭಿವೃದ್ಧಿಗೆ 5 ಕೋಟಿ ರೂ. ಮಂಜೂರಾಗಿದೆ. ಈ ಅನುದಾನ‌ದಲ್ಲಿ ಕ್ರೀಡಾಪಟುಗಳು ಮತ್ತು ಮಕ್ಕಳಿಗೆ ಅನುಕೂಲವಾಗುವಂತೆ ಕ್ರೀಡಾಂಗಣವನ್ನು ಅಭಿವೃದ್ಧಿಪಡಿಸಲಾಗುವುದು ಹೇಳಿದರು. ಇದನ್ನೂ ಓದಿ: ಶಾಸ್ತ್ರೋಕ್ತವಾಗಿ ನೆರವೇರಿದ ರೇಣುಕಾಸ್ವಾಮಿ ಪುತ್ರನ ನಾಮಕರಣ – ಹೆಸರೇನು ಗೊತ್ತಾ?