Tag: R Sridhar

  • ನಾನು ತಂಡದ ಜೊತೆಗಿನ ಕೊನೆಯ ಬಸ್ ಪ್ರಯಾಣವನ್ನು ಮಿಸ್ ಮಾಡಿಕೊಳ್ಳಲ್ಲ – 2019ರಲ್ಲೇ ಧೋನಿ ನಿವೃತ್ತಿ ಹೇಳಿದ್ದರು: ಆರ್.ಶ್ರೀಧರ್

    ನಾನು ತಂಡದ ಜೊತೆಗಿನ ಕೊನೆಯ ಬಸ್ ಪ್ರಯಾಣವನ್ನು ಮಿಸ್ ಮಾಡಿಕೊಳ್ಳಲ್ಲ – 2019ರಲ್ಲೇ ಧೋನಿ ನಿವೃತ್ತಿ ಹೇಳಿದ್ದರು: ಆರ್.ಶ್ರೀಧರ್

    ಮುಂಬೈ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) 2020ರ ಆಗಸ್ಟ್ 15 ರಂದು ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಹೇಳಿರುವುದು ಗೊತ್ತೇ ಇದೆ. ಆದರೆ ಧೋನಿ 2019ರಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ (Retirement) ಹೇಳಿದ್ದರು ಎಂದು ಟೀಂ ಇಂಡಿಯಾದ (Team India) ಫಿಲ್ಡಿಂಗ್ ಕೋಚ್ ಆಗಿದ್ದ ಆರ್.ಶ್ರೀಧರ್ (R.Sridhar) ಹೇಳಿದ್ದಾರೆ.

    ಕೋಚಿಂಗ್ ಬಿಯಾಂಡ್ ಮೈ ಡೇಸ್ ವಿಥ್ ದಿ ಇಂಡಿಯನ್ ಕ್ರಿಕೆಟ್ ಟೀಮ್ ಎಂಬ ಪುಸ್ತಕದಲ್ಲಿ ಈ ಇಂಟ್ರಸ್ಟಿಂಗ್ ಸಂಗತಿಯನ್ನು ಆರ್.ಶ್ರೀಧರ್ ಬಹಿರಂಗ ಪಡಿಸಿದ್ದಾರೆ. 2019ರ ಏಕದಿನ ವಿಶ್ವಕಪ್ ಸೆಮಿಫೈನಲ್ (ODI World Cup SemiFinal) ಪಂದ್ಯವನ್ನು ನ್ಯೂಜಿಲೆಂಡ್ ವಿರುದ್ಧ ಭಾರತ ಸೋತಿತ್ತು. ಅಂದು ಧೋನಿ ರನೌಟ್ ಮೂಲಕ ಕೊನೆಯಲ್ಲಿ ಔಟ್ ಆಗಿದ್ದರು. ಅಂದೇ ಧೋನಿ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದರು. ಇದನ್ನೂ ಓದಿ: ತಾಲಿಬಾನ್ ಆಡಳಿತದ ವಿರುದ್ಧ ಮುನಿಸು – ಅಫ್ಘಾನಿಸ್ತಾನ ವಿರುದ್ಧ ನಾವು ಆಡಲ್ಲ ಎಂದ ಆಸ್ಟ್ರೇಲಿಯಾ

    ಧೋನಿ, ಪಂತ್ ಜೊತೆ ತಿಂಡಿ ತಿನ್ನುತ್ತಿದ್ದರು. ಈ ವೇಳೆ ಪಂತ್, ಭಯ್ಯ ತಂಡದಲ್ಲಿರುವ ಕೆಲವರು ಇಂದೇ ಲಂಡನ್ ಬಿಟ್ಟು ತೆರಳಲು ಯೋಚಿಸುತ್ತಿದ್ದಾರೆ. ನಿಮ್ಮ ಪ್ಲಾನ್ ಏನು ಎಂದು ಕೇಳಿದ್ದಾರೆ. ಈ ವೇಳೆ ಧೋನಿ, ನಾನು ತಂಡದ ಜೊತೆ ನನ್ನ ಕೊನೆಯ ಬಸ್ ಪ್ರಯಾಣವನ್ನು ಮಿಸ್ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದರು. ಈ ಮೂಲಕ ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯ ಧೋನಿಯ ಕೊನೆಯ ಪಂದ್ಯವಾಗಿತ್ತು ಎಂಬ ಹಿಂಟ್ ನೀಡಿದ್ದರು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: 1,929 ಗಂಟೆಗಳ ಬಳಿಕ ನಿವೃತ್ತಿ ಹೊಂದಿದ್ದೇನೆ – 2 ವರ್ಷಗಳ ಹಿಂದೆ ಶಾಕಿಂಗ್ ನ್ಯೂಸ್ ಕೊಟ್ಟಿದ್ದ ಧೋನಿ

    2019ರ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದ ನಂತರ ಕ್ರಿಕೆಟ್‍ನಿಂದ ದೂರ ಉಳಿದಿದ್ದ ಧೋನಿ, ವಿದಾಯ ಘೋಷಿಸುವ ಯಾವುದೇ ಸುಳಿವನ್ನು ನೀಡಿರಲಿಲ್ಲ. ಆದರೆ 2020 ಆಗಸ್ಟ್ 15 ರಂದು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕುವ ಮೂಲಕ ವಿದಾಯ ಸುದ್ದಿ ನೀಡಿದ್ದರು. 2022ರ ಆಗಸ್ಟ್ 15 ರಂದು ರಾತ್ರಿ 7:29 ಗಂಟೆಗೆ ಇನ್‍ಸ್ಟಾಗ್ರಾಮ್‍ನಲ್ಲಿ, ನಿಮ್ಮೆಲ್ಲರ ಪ್ರೀತಿ, ಸಹಕಾರಕ್ಕೆ ಧನ್ಯವಾದಗಳು 1,929 ಗಂಟೆಗಳ ಬಳಿಕ ನನ್ನನ್ನು ನಿವೃತ್ತಿ ಹೊಂದಿದ ಆಟಗಾರ ಎಂದು ಸ್ವೀಕರಿಸಿ ಎಂದು ಧೋನಿ ನಿವೃತ್ತಿಯ ಬಗ್ಗೆ ಘೋಷಿಸಿದ್ದರು. ಇದು ಧೋನಿ ಅಭಿಮಾನಿಗಳಲ್ಲಿ ಬೇಸರ ತರಿಸಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಟೀಂ ಇಂಡಿಯಾದ ಬ್ಯಾಟಿಂಗ್, ಫೀಲ್ಡಿಂಗ್ ಕೋಚ್‍ಗೆ 15 ಲಕ್ಷ ರೂ. ಸಂಬಳ!

    ಟೀಂ ಇಂಡಿಯಾದ ಬ್ಯಾಟಿಂಗ್, ಫೀಲ್ಡಿಂಗ್ ಕೋಚ್‍ಗೆ 15 ಲಕ್ಷ ರೂ. ಸಂಬಳ!

    ಮುಂಬೈ: ಟೀಂ ಇಂಡಿಯಾದ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರು ಮತ್ತು ಫೀಲ್ಡಿಂಗ್ ಕೋಚ್ ಆರ್ ಶ್ರೀಧರ್ ಅವರಿಗೆ ಪ್ರತಿ ತಿಂಗಳು 15 ಲಕ್ಷ ರೂ. ಸಂಬಳವನ್ನು ಬಿಸಿಸಿಐ ನಿಗದಿ ಮಾಡಿದೆ.

    ಇಲ್ಲಿಯವರೆಗೆ ಬಂಗಾರು ಮತ್ತು ಶ್ರೀಧರ್ ಅವರಿಗೆ ಪ್ರತಿ ತಿಂಗಳು 10 ಲಕ್ಷ(ಇಂಡಿಯನ್ ಪ್ರೀಮಿಯರ್ ಲೀಗ್‍ನ 2 ತಿಂಗಳು ಹೊರತು ಪಡಿಸಿ 10 ತಿಂಗಳ ಕಾಲ, ಒಂದು ವರ್ಷಕ್ಕೆ 1 ಕೋಟಿ)ರೂ. ಸಂಬಳವನ್ನು ಪಡೆಯುತ್ತಿದ್ದರು.

    ಎರಡು ವರ್ಷಗಳ ಕಾಲ ಹಿರಿಯರ ತಂಡದ ಜೊತೆ ಇದ್ದ ಇವರು ಸಂಬಳವನ್ನು ಹೆಚ್ಚಳ ಮಾಡುವಂತೆ ಈ ಹಿಂದೆಯೇ ಮನವಿ ಸಲ್ಲಿಸಿದ್ದರು. ಆದರೆ ಈಗ ಈ ಮನವಿ ಪುರಸ್ಕೃತವಾಗಿದ್ದು ಶೇ.50 ರಷ್ಟು ಸಂಬಳ ಏರಿಕೆಯಾಗಿದೆ.

    ಈ ಹಿಂದೆ ಇದ್ದ ಬಿಸಿಸಿಐ ಆಡಳಿತ ಮಂಡಳಿ ಶೇ.100 ರಷ್ಟು ಸಂಬಳ ಏರಿಕೆಯ ಪ್ರಸ್ತಾಪನ್ನು ಒಪ್ಪಿತ್ತು. ಆದರೆ ಕಳೆದ ತಿಂಗಳು ಶೇ.25ರಷ್ಟು ಸಂಬಳ ಏರಿಸಲು ಬಿಸಿಸಿಐ ನಿರ್ಧರಿಸಿತ್ತು. ಬಿಸಿಸಿಐ ಈ ನಿರ್ಧಾರಕ್ಕೆ ಸಿಬ್ಬಂದಿಯಿಂದ ವಿರೋಧ ವ್ಯಕ್ತವಾಗಿತ್ತು. ಈಗ ಕೋಚ್ ಅನಿಲ್ ಕುಂಬ್ಳೆ ಸುಪ್ರೀಂ ನೇಮಿಸಿದ್ದ ಆಡಳಿತ ಸಮಿತಿಯ ಜೊತೆ ಸಭೆ ನಡೆಸಿ ಶೇ.50ರಷ್ಟು ಸಂಬಳವನ್ನು ಏರಿಸಿದ್ದಾರೆ.

    ಬುಧವಾರ ಆಟಗಾರರ ಸಂಭಾವನೆ ಮತ್ತು ಪಂದ್ಯದ ಶುಲ್ಕವನ್ನು ಆಡಳಿತ ಮಂಡಳಿ ದುಪ್ಟಟ್ಟು ಮಾಡಿತ್ತು. 2016ರ ಅಕ್ಟೋಬರ್ 1ರಿಂದ ಪರಿಷ್ಕೃತ ಸಂಭಾವನೆ ಮತ್ತು ಶುಲ್ಕ ಜಾರಿಗೆ ಬರಲಿದೆ.

    ಎಷ್ಟಿತ್ತು? ಈಗ ಎಷ್ಟು ಆಗಿದೆ?
    `ಎ’ ದರ್ಜೆಯಲ್ಲಿರುವ ಆಟಗಾರರು ಈ ಮೊದಲು ಕೋಟಿ ರೂ. ಪಡೆಯುತ್ತಿದ್ದರೆ ಈU ಆ ಮೊತ್ತವು 2 ಕೋಟಿ ರೂ.ಗೆ ಏರಿಕೆಯಾಗಿದೆ. ಬಿ ದರ್ಜೆ ಮತ್ತು ಸಿ ದರ್ಜೆಗಳ ಆಟಗಾರರು ಕ್ರಮವಾಗಿ 50 ಲಕ್ಷ ರೂ. ಮತ್ತು 25 ಲಕ್ಷ ರೂ. ಪಡೆಯುತ್ತಿದ್ದರು. ಅವರು ಇನ್ನು ಮುಂದೆ ಕ್ರಮವಾಗಿ 1 ಕೋಟಿ ರೂ. ಮತ್ತು 50 ಲಕ್ಷ ರೂ. ಹಣವನ್ನು ಪಡೆಯಲಿದ್ದಾರೆ.

    ಟೆಸ್ಟ್ ಪಂದ್ಯದಲ್ಲಿ ಆಡುವ ಆಟಗಾರರು ಶುಲ್ಕವನ್ನು 7.50 ಲಕ್ಷದಿಂದ 15 ಲಕ್ಷಕ್ಕೆ ಹೆಚ್ಚಿಸಲಾಗಿದ್ದರೆ, ಏಕದಿನ ಮತ್ತು ಟ್ವೆಂಟಿ 20 ಪಂದ್ಯಗಳಲ್ಲಿ ಆಡುವವರ ಶುಲ್ಕವನ್ನು ಕ್ರಮವಾಗಿ 6 ಲಕ್ಷ ರೂ. ಮತ್ತು 3 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ.

    ಎ ದರ್ಜೆ:
    ವಿರಾಟ್ ಕೊಹ್ಲಿ, ಮಹೇಂದ್ರಸಿಂಗ್ ಧೋನಿ, ಆರ್. ಆಶ್ವಿನ್, ಅಜಿಂಕ್ಯ ರಹಾನೆ, ಚೇತೇಶ್ವರ್ ಪೂಜಾರ, ರವೀಂದ್ರ ಜಡೇಜ, ಮುರಳಿ ವಿಜಯ್.

    ಬಿ ದರ್ಜೆ:
    ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಉಮೇಶ್ ಯಾದವ್, ವೃದ್ಧಿಮಾನ್ ಸಹಾ, ಜಸ್‍ಪ್ರೀತ್ ಬೂಮ್ರಾ, ಯುವರಾಜ್ ಸಿಂಗ್.

    ಸಿ ದರ್ಜೆ :
    ಶಿಖರ್ ಧವನ್, ಅಂಬಟಿ ರಾಯುಡು, ಅಮಿತ್ ಮಿಶ್ರಾ, ಕೇದಾರ್ ಜಾಧವ್, ಯಜುವೇಂದ್ರ ಚಾಹಲ್, ಪಾರ್ಥಿವ್ ಪಟೇಲ್, ಜಯಂತ್ ಯಾದವ್, ಮನೀಷ್ ಪಾಂಡೆ, ಅಕ್ಷರ್ ಪಟೇಲ್, ಕರುಣ್ ನಾಯರ್, ಹಾರ್ದಿಕ್ ಪಾಂಡ್ಯ, ಆಶಿಶ್ ನೆಹ್ರಾ, ಮನದೀಪ್ ಸಿಂಗ್, ಧವಳ್ ಕುಲಕರ್ಣಿ, ಶಾರ್ದೂಲ್ ಠಾಕೂರ್, ರಿಷಭ್ ಪಂತ್.