Tag: Raavan

  • ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ ಕಂಗನಾ ರಣಾವತ್

    ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ ಕಂಗನಾ ರಣಾವತ್

    ಬಾಲಿವುಡ್ ನಟಿ ಕಂಗನಾ ರಣಾವತ್ ದಾಖಲೆಯೊಂದನ್ನು ಬರೆಯಲಿದ್ದಾರೆ. ಅವರು ಆ ಐತಿಹಾಸಿಕ ಕ್ಷಣಕ್ಕೂ ಸಾಕ್ಷಿಯಾಗಲಿದ್ದಾರೆ. ಐವತ್ತು ವರ್ಷಗಳಿಂದ ಆಗದೇ ಇರುವಂತಹ ಕೆಲಸವೊಂದು ಕಂಗನಾ ಮೂಲಕ ಆಗುತ್ತಿರುವುದು ಸಹಜವಾಗಿಯೇ ಅಭಿಮಾನಿಗಳಿಗೆ ಸಂಭ್ರಮ ತಂದಿದೆ.

    ದೆಹಲಿಯ (Delhi) ಕೆಂಪು ಕೋಟೆಯಲ್ಲಿ ಸತತವಾಗಿ 50 ವರ್ಷಗಳಿಂದಲೇ ನಡೆದುಕೊಂಡು ಬಂಧಿರುವಂತಹ ರಾವಣನ (Raavan) ಪ್ರತಿಕೃತಿ ದಹನವನ್ನು ಈ ಬಾರಿ ಕಂಗನಾ ರಣಾವತ್ ನಡೆಸಿಕೊಡಲಿದ್ದಾರೆ. ಈವರೆಗೂ ಮಹಿಳೆಯೊಬ್ಬರು ಈ ಕೆಲಸವನ್ನು ಮಾಡಿರಲಿಲ್ಲ ಎನ್ನುವುದು ವಿಶೇಷ. ಲವ್ ಕುಶ ರಾಮಲೀಲಾ ಸಮತಿಯ ಅಧ್ಯಕ್ಷ ಅರ್ಜುನ್ ಸಿಂಗ್ ಈ ಮಾಹಿತಿಯನ್ನು ತಿಳಿಸಿದ್ದಾರೆ.

    ಇದೇ ವಾರದಲ್ಲಿ ಕಂಗನಾ ಸಿನಿಮಾ ರಿಲೀಸ್

    ಚಂದ್ರಮುಖಿ 2 ಸಿನಿಮಾ ರಿಲೀಸ್ ಬೆನ್ನಲ್ಲೇ ಮತ್ತೊಂದು ಸಿನಿಮಾದ ಹೊಸ ಅಪ್ ಡೇಟ್ ನೀಡಿದ್ದಾರೆ ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut). ತುಂಬಾ ನಿರೀಕ್ಷೆ ಮೂಡಿಸಿದ್ದ ಚಂದ್ರಮುಖಿ 2 ಸಿನಿಮಾ ಬಗ್ಗೆ ಅಷ್ಟೇನೂ ಹೇಳಿಕೊಳ್ಳುವಂತಹ ರೆಸ್ಪಾನ್ಸ್ ಸಿಕ್ಕಿಲ್ಲ. ಹಾಗಾಗಿ ಅವರ ಹೊಸ ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ.

    ಈಗಾಗಲೇ ತೇಜಸ್ (Tejas) ಹೆಸರಿನಲ್ಲಿ ಸಿನಿಮಾ ಮಾಡಿದ್ದಾರೆ ಕಂಗನಾ ರಣಾವತ್. ಈ ಸಿನಿಮಾದ ರಿಲೀಸ್ ಡೇಟ್ ಬಹಿರಂಗವಾಗಿದ್ದು, ಇದೇ ಅಕ್ಟೋಬರ್ 27ರಂದು ವಿಶ್ವದಾದ್ಯಂತ ಈ ಚಿತ್ರವನ್ನು ಬಿಡುಗಡೆ (Release) ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಒಂದು ಪೋಸ್ಟ್ ಅನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ.

     

    ಈ ಸಿನಿಮಾದಲ್ಲಿ ತೇಜಸ್ ಗಿಲ್ ಎಂಬ ಏರ್ ಪೋರ್ಸ್ ಪೈಲಟ್ ಆಗಿ ಕಂಗನಾ ರಣಾವತ್ ಕಾಣಿಸಿಕೊಂಡಿದ್ದಾರೆ. ಸರ್ವೇಶ್ ಮೇವಾರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದೆ. ಏರ್ ಪೋರ್ಸ್ ದಿನವಾದ ಅಕ್ಟೋಬರ್ 8 ರಂದು ಸಿನಿಮಾದ ಟ್ರೈಲರ್ ಕೂಡ ರಿಲೀಸ್ ಆಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾವಣನಾಗಿ ರಾಕಿಭಾಯ್: 15 ದಿನ ಕಾಲ್‍ ಶೀಟ್ ಕೊಟ್ಟ ಯಶ್?

    ರಾವಣನಾಗಿ ರಾಕಿಭಾಯ್: 15 ದಿನ ಕಾಲ್‍ ಶೀಟ್ ಕೊಟ್ಟ ಯಶ್?

    ಬಾಲಿವುಡ್ ನಲ್ಲಿ ರಾಮಾಯಣ (Ramayana) ಸಿನಿಮಾ ಆಗುತ್ತಿರುವ ವಿಚಾರ ಹಲವಾರು ತಿಂಗಳಿಂದ ಹರಿದಾಡುತ್ತಲೇ ಇದೆ. ಅದರಲ್ಲೂ ಈ ಸಿನಿಮಾದಲ್ಲಿ ರಾವಣನಾಗಿ (Raavan) ಕನ್ನಡದ ನಟ ಯಶ್ (Yash) ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ದೊಡ್ಡ ಸುದ್ದಿ ಆಗಿತ್ತು. ಸಾಕಷ್ಟು ಬಾರಿ ಈ ವಿಚಾರ ಮುನ್ನೆಲೆಗೆ ಬಂದರೂ, ಯಶ್ ಮಾತ್ರ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ, ಈ ಸುದ್ದಿ ಹರಿದಾಡುವುದು ತಪ್ಪಿಲ್ಲ.

    ಯಶ್ ಏನೂ ಹೇಳದೇ ಇದ್ದರೂ, ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಮಧು ಮಾಂಟೇನ್ ಅವರು ಯಶ್ ಈ ಸಿನಿಮಾದಲ್ಲಿ ಇರಲಿದ್ದಾರೆ ಎಂದು ಈ ಹಿಂದೆಯೇ ಹೇಳಿದ್ದರು. ಅವರೊಂದಿಗೆ ಮಾತುಕತೆ ನಡೆಯುತ್ತಿದೆ ಎಂದೂ ಮಾತನಾಡಿದ್ದರು. ಅದು ಈಗ ನಿಜವಾದಂತೆ ಕಾಣುತ್ತಿದೆ. ಈಗಾಗಲೇ ಯಶ್ ಲುಕ್ ಟೆಸ್ಟ್ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಸಿಗುತ್ತಿದೆ. ಈ ಸಿನಿಮಾಗಾಗಿ ಅವರು 15 ದಿನಗಳ ಕಾಲ ಕಾಲ್ ಶೀಟ್ ಕೂಡ ನೀಡಿದ್ದಾರೆ ಎನ್ನುವುದು ತಾಜಾ ಮಾಹಿತಿ.

    ನಿತಿಶ್ ತಿವಾರಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಸತತ ಮೂರ್ನಾಲ್ಕು ವರ್ಷಗಳಿಂದ ಈ ಚಿತ್ರಕ್ಕಾಗಿ ತಿವಾರಿ ಕೆಲಸ ಮಾಡುತ್ತಿದ್ದಾರೆ. ಮಾರ್ಚ್ 2024ರಲ್ಲಿ ಈ ಸಿನಿಮಾ ಸೆಟ್ಟೇರಬಹುದು ಎಂದು ಅಂದಾಜಿಸಲಾಗಿದೆ. ರಾವಣನಾಗಿ ಯಶ್ ನಟಿಸಿದರೆ, ಶ್ರೀರಾಮನ ಪಾತ್ರವನ್ನು ರಣಬೀರ್ ಕಪೂರ್  (Ranbir Kapoor) ನಿರ್ವಹಿಸಲಿದ್ದಾರೆ. ಸೀತೆ ಪಾತ್ರವು ಸಾಯಿ ಪಲ್ಲವಿ (Sai Pallavi)ಅವರ ಪಾಲಾಗಿದೆ.

     

    ಸದ್ಯ ಯಶ್ ಹೊಸ ಸಿನಿಮಾದ ಕೆಲಸದಲ್ಲಿ ಬ್ಯೂಸಿಯಾಗಿದ್ದಾರೆ. ಅಲ್ಲದೇ ದೇಶ ವಿದೇಶ ಸುತ್ತುತ್ತಿದ್ದಾರೆ. ಸದ್ಯದಲ್ಲೇ ಹೊಸ ಸಿನಿಮಾ ಘೋಷಣೆ ಆಗುವ ಸಾಧ್ಯತೆ ಇದೆ. ರಾಮಾಯಣ ಸಿನಿಮಾ ಶುರುವಾಗುವ ಹೊತ್ತಿಗೆ ಹೊಸ ಸಿನಿಮಾದ ಬಹುತೇಕ ಕೆಲಸ ಮುಗಿಯುವ ಸಾಧ್ಯತೆ ಇದ್ದು, ಅದಕ್ಕಾಗಿ ಈ ಸಿನಿಮಾವನ್ನು ಯಶ್ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯಶ್ ವಿಷಯದಲ್ಲಿ ಬಾಲಿವುಡ್ ಸುಳ್ಳು ಹೇಳಿತಾ?

    ಯಶ್ ವಿಷಯದಲ್ಲಿ ಬಾಲಿವುಡ್ ಸುಳ್ಳು ಹೇಳಿತಾ?

    ‘ನಾನು ಇರುವ ಕಡೆಯೇ ಎಲ್ಲರನ್ನೂ ಕರೆಯಿಸಿಕೊಂಡಿದ್ದೇನೆ. ನಾನೂ ಎಲ್ಲಿಗೂ ಹೋಗುವುದಿಲ್ಲ’ ಎಂದು ಹೇಳುವ ಮೂಲಕ ಚರ್ಚೆಗೆ ಕಾರಣರಾಗಿದ್ದಾರೆ ರಾಕಿಂಗ್ ಸ್ಟಾರ್ ಯಶ್ (Yash). ಹಲವು ದಿನಗಳಿಂದ ಯಶ್ ಬಾಲಿವುಡ್ (Bollywood) ಗೆ ಹೋಗುತ್ತಾರೆ ಎನ್ನುವ ಸುದ್ದಿಯಿತ್ತು. ರಾಮಯಣ ಇಟ್ಟುಕೊಂಡು ಬಾಲಿವುಡ್ ನಲ್ಲಿ ಸಿನಿಮಾವಾಗುತ್ತಿದ್ದು, ಅದರಲ್ಲಿ ಯಶ್ ರಾವಣನ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗಿತ್ತು.

    ಬಿಟೌನ್ ನಲ್ಲಿ ಈ ಸುದ್ದಿಗೆ ಭಾರೀ ಬೇಡಿಕೆ ಬಂದಿತ್ತು. ಯಶ್ ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರೆಂದು ಹಾಗೂ ಅವರು ರಾವಣನ ಪಾತ್ರ ಮಾಡಲಿದ್ದಾರೆ ಎನ್ನುವ ಕಾರಣಕ್ಕಾಗಿ ಬಾಲಿವುಡ್ ನ ಅನೇಕರು ಮಾತನಾಡಿದರು. ಅದರಲ್ಲೂ ಕಂಗನಾ ರಣಾವತ್ (Kangana Ranaut), ಯಶ್ ಅವರು ರಾವಣನ (Raavan) ಪಾತ್ರ ಮಾಡುವುದು ಬೇಡ. ಅವರು ರಾಮನಾಗಲಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡರು.

    ಯಶ್ ಅವರು ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಹಾಗಾಗಿ ಬಾಲಿವುಡ್ ಗೆ ಹೋಗುವುದು ನಿಜ ಇರಬಹುದು ಎಂದೇ ನಂಬಲಾಗಿತ್ತು. ಇವತ್ತು ಯಶ್ ಆ ಕುರಿತು ಮಾತನಾಡಿದ್ದಾರೆ. ಬಾಲಿವುಡ್ ಹಬ್ಬಿಸುವ ಸುಳ್ಳು ಸುದ್ದಿಗಳಿಗೆ ಬಲವಾದ ಏಟನ್ನೇ ಕೊಟ್ಟಿದ್ದಾರೆ.

    ಮನೆ ದೇವರು ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನಕ್ಕೆ ಆಗಮಿಸಿದ್ದ ಯಶ್, ಮಾಧ್ಯಮಗಳ ಜೊತೆ ಮಾತನಾಡಿದರು. ಈ ಸಂದರ್ಭದಲ್ಲಿ ಬಾಲಿವುಡ್ ಗೆ ಹೋಗುವ ವಿಚಾರ ಕೂಡ ಬಂತು. ಅದಕ್ಕೆ ಪ್ರತಿಕ್ರಿಯೆ ನೀಡಿ ‘ನಾನು ಇರುವ ಕಡೆ ಎಲ್ಲರನ್ನೂ ಕರೆಸಿಕೊಂಡಿದ್ದೇನೆ. ನಾನು ಎಲ್ಲೂ ಹೋಗುವುದಿಲ್ಲ. ಡೋಂಟ್ ವರಿ’ ಎಂದರು ಯಶ್.

    ರಾಕಿಂಗ್ ಸ್ಟಾರ್ ಯಶ್ ಮತ್ತು ನಟಿ ರಾಧಿಕಾ ಪಂಡಿತ್ ಕುಟುಂಬ ಸಮೇತ ಇಂದು ನಂಜನಗೂಡಿಗೆ ಆಗಮಿಸಿ, ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಕ್ಕಳು ಹಾಗೂ ಅತ್ತೆ ಮಾವ ಸಮೇತ ದೇವಸ್ಥಾನಕ್ಕೆ ಆಗಮಿಸಿದ್ದ ಯಶ್ ಕೆಲ ಹೊತ್ತು ದೇವಸ್ಥಾನದಲ್ಲೇ ಇದ್ದು ನಂಜುಂಡೇಶ್ವರನ ದರ್ಶನ ಪಡೆದರು.

    ಸಿನಿಮಾ ಕೆಲಸಗಳ ಮಧ್ಯೆಯೇ ಬಿಡುವು ಮಾಡಿಕೊಂಡು ಫ್ಯಾಮಿಲಿಗೆ ಟೈಮ್ ಕೊಟ್ಟಿದ್ದಾರೆ ಯಶ್. ಕಳೆದ ಮೂರು ದಿನಗಳಿಂದ ಅವರು ಮೈಸೂರು ಭಾಗದಲ್ಲಿ ಪ್ರವಾಸದಲ್ಲಿದ್ದರು. ನಾಗರ ಹೊಳೆ, ಬಂಡೀಪುರ ಅರಣ್ಯದಲ್ಲಿ ಸಫಾರಿ ನಡುವೆ ಶ್ರೀಕಂಠೇಶ್ವರ ದೇವರಿಗೆ ಪೂಜೆ ನೆರವೇರಿಸಿದ್ದಾರೆ.

    ಮೈಸೂರು ಯಶ್ ಅವರ ಹುಟ್ಟೂರು. ಅಲ್ಲದೇ, ಮೈಸೂರಿಗೆ ಹೋದಾಗೆಲ್ಲ ಯಶ್ ಹೀಗೆ ಪ್ರವಾಸ ಮಾಡುತ್ತಲೇ ಇರುತ್ತಾರೆ. ಇಷ್ಟದ ಸ್ಥಳಗಳಿಗೆ ಈ ಬಾರಿ ಹೆಂಡತಿ ಮತ್ತು ಹೆಂಡತಿ ಕುಟುಂಬವನ್ನು ಅವರು ಕರೆದುಕೊಂಡು ಹೋಗಿದ್ದಾರೆ. ಈ ಬಾರಿ ಮಕ್ಕಳಿಗೂ ತಮ್ಮ ಹುಟ್ಟೂರು ತೋರಿಸಿದ್ದಾರೆ ರಾಕಿಂಗ್ ಸ್ಟಾರ್.