Tag: Radha Pandit

  • ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿ Mr & Mrs ರಾಮಾಚಾರಿ -ಎಫ್‍ಬಿಯಲ್ಲಿ ಹೊಸ ಫೋಟೋ

    ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿ Mr & Mrs ರಾಮಾಚಾರಿ -ಎಫ್‍ಬಿಯಲ್ಲಿ ಹೊಸ ಫೋಟೋ

    ಬೆಂಗಳೂರು: ಸ್ಯಾಂಡಲ್ ವುಡ್ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ ಒಂದು ವರ್ಷ ಪೂರೈಸಿದ್ದು, ರಾಕಿಂಗ್ ಜೋಡಿ ಸದ್ಯ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ.

    ಕಳೆದ ವರ್ಷ ತಾಜ್ ವೆಸ್ಟ್ ಎಂಡ್ ನಲ್ಲಿ ಅದ್ಧೂರಿಯಾಗಿ ಗುರು-ಹಿರಿಯರು, ಸ್ನೇಹಿತರು ಹಾಗೂ ಹಲವಾರು ಗಣ್ಯರ ಸಮ್ಮುಖದಲ್ಲಿ ಇಬ್ಬರು ದಾಪಂತ್ಯ ಜೀವನಕ್ಕೆ ಕಾಲಿಟ್ಟಿದ್ದರು. ತೆರೆಯ ಮೇಲೆ ಹಿಟ್ ಆಗಿರುವ ಈ ಜೋಡಿ ನಿಜ ಜೀವನದಲ್ಲೂ ಅಷ್ಟೇ ಅನ್ಯೂನ್ಯವಾಗಿದ್ದಾರೆ. ಇಬ್ಬರೂ ಕೂಡ ಸಿನಿಮಾ ಕ್ಷೇತ್ರದಲ್ಲಿ ತಮ್ಮದೇ ಆದ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.

    ಮದುವೆಯಾಗಿ ಒಂದು ವರ್ಷ ಪೂರೈಸಿರುವ ಈ ರಾಂಕಿಗ್ ಜೋಡಿಗೆ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ ಬರುತ್ತಿದೆ. ರಾಧಿಕಾ ಮದುವೆ ವಾರ್ಷಿಕೋತ್ಸವದ ಸಂಭ್ರಮವನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದು, ಪ್ರತಿದಿನ ಮದುವೆಯ ತಯಾರಿ, ಮದುವೆಯ ಎಕ್ಸ್ ಕ್ಲೂಸಿವ್ ಫೋಟೋ ಮತ್ತು ಸಣ್ಣ ವಿಡಿಯೋಗಳನ್ನು ಫೇಸ್‍ಬುಕ್ ನಲ್ಲಿ ಶೇರ್ ಮಾಡಿದ್ದಾರೆ.

    ಅದೇ ರೀತಿ ಇಂದು ತಮ್ಮ ಎಫ್‍ಬಿಯಲ್ಲಿ ಮೂರು ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ವಿವಾಹ ವಾರ್ಷಿಕೋತ್ಸದ ಸಂಭ್ರಮವನ್ನು ಆಚರಣೆ ಮಾಡಲು ಈ ಜೋಡಿ ವಿದೇಶಕ್ಕೆ ಹೋಗಿದ್ದು, ಕೆಲ ದಿನಗಳು ಸುತ್ತಾಡಿಕೊಂಡು ನಂತರ ತಮ್ಮ ತಮ್ಮ ಸಿನಿಮಾಗಳ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.

    https://twitter.com/NimmaRPFC/status/939355206776635392

    https://twitter.com/YashFC/status/939354277683740673

  • ಮದುವೆಯಾದ ಬಳಿಕ ಮೊದಲ ಬಾರಿಗೆ ಬಣ್ಣ ಹಚ್ಚಲಿದ್ದಾರೆ ನಟಿ ರಾಧಿಕಾ ಪಂಡಿತ್-ಹೀರೋ ಯಾರು ಗೊತ್ತಾ?

    ಮದುವೆಯಾದ ಬಳಿಕ ಮೊದಲ ಬಾರಿಗೆ ಬಣ್ಣ ಹಚ್ಚಲಿದ್ದಾರೆ ನಟಿ ರಾಧಿಕಾ ಪಂಡಿತ್-ಹೀರೋ ಯಾರು ಗೊತ್ತಾ?

    ಬೆಂಗಳೂರು: ಸ್ಯಾಂಡಲ್ ವುಡ್ ನ ನಟಿ, ನಟ ಯಶ್‍ನ ಮುದ್ದಿನ ಮಡದಿ ರಾಧಿಕಾ ಪಂಡಿತ್ ಮದುವೆ ನಂತರ ಮೊದಲ ಬಾರಿಗೆ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

    ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ರಾಧಿಕಾ ಪಂಡಿತ್ ಜೊತೆ ರಂಗಿತರಂಗ ಖ್ಯಾತಿಯ ನಿರೂಪ್ ಭಂಡಾರಿ ನಟನಾಗಿ ಅಭಿನಯಿಸುತ್ತಿದ್ದಾರೆ. ಇಂದು ಸಿನಿಮಾ ಮುಹೂರ್ತ ನಡೆಯಲಿದ್ದು, ವಿ. ಪ್ರಿಯಾ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ.

    ತಮಿಳಿನ ಖ್ಯಾತ ನಿರ್ದೇಶಕ ಮಣಿರತ್ನಂ ಅವರ ಜೊತೆ ಸಹಾಯಕರಾಗಿ ಕೆಲಸ ಮಾಡಿರುವ ಪ್ರಿಯಾ ಈಗಾಗಲೇ ಮೂರು ತಮಿಳು ಚಿತ್ರಗಳಲ್ಲಿ ಕೆಲಸ ಮಾಡಿ ಬಂದಿದ್ದಾರೆ. ಕನ್ನಡದಲ್ಲಿ ಇದೇ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ತಾರಾ, ಸುಚೇಂದ್ರ ಪ್ರಸಾದ್ ಕೂಡ ನಟಿಸುತ್ತಿದ್ದು, ಸಿನಿಮಾದಲ್ಲಿ ಪ್ರೀತಂ ಜಯರಾಂ ಅವರ ಛಾಯಾಗ್ರಹಣ ಇರುತ್ತದೆ. ಡಿಸೆಂಬರ್ 11 ರಿಂದ ಚಿತ್ರದ ಶೂಟಿಂಗ್ ಆರಂಭವಾಗಲಿದೆ.

    ರಾಧಿಕಾ ಪಂಡಿತ್ ಅವರ ಈ ಸಿನಿಮಾ ಮಹಿಳಾ ಪ್ರಧಾನ ಚಿತ್ರವಾಗಿಲ್ಲ. ಅವರ ಪಾತ್ರಕ್ಕೆ ಎಷ್ಟು ಪ್ರಾಮುಖ್ಯತೆ ಇದೆಯೋ ಹೀರೋ ಪಾತ್ರಕ್ಕೂ ಅಷ್ಟೇ ಪ್ರಾಮುಖ್ಯತೆ ಇದೆಯಂತೆ. ಚಿತ್ರದ ಟೈಟಲ್ ಇನ್ನು ಬಹಿರಂಗ ಆಗಿಲ್ಲ. ರಾಧಿಕಾ ಪಂಡಿತ್ ಮದುವೆಯ ಸಂದರ್ಭದಲ್ಲಿ `ಸಂತು ಸ್ಟ್ರೈಟ್ ಫಾರ್ವರ್ಡ್’ ಚಿತ್ರದಲ್ಲಿ ನಟಿಸಿದ್ದರು. ಆದರೆ ಈಗ ವರ್ಷದ ಬಳಿಕ ಮತ್ತೆ ರಾಧಿಕಾ ಪಂಡಿತ್ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಕಥೆ ತುಂಬ ಇಷ್ಟ ಆಗಿದ್ದು, ರಾಧಿಕಾ ಈ ಚಿತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ.