Tag: Radha Ramana

  • ಚಂದ್ರಕಾಂತ್, ಪವಿತ್ರಾ ಮದುವೆ ರೂಮರ್ಸ್ ಬಗ್ಗೆ ಸ್ಪಷ್ಟನೆ ನೀಡಿದ ಪುತ್ರ

    ಚಂದ್ರಕಾಂತ್, ಪವಿತ್ರಾ ಮದುವೆ ರೂಮರ್ಸ್ ಬಗ್ಗೆ ಸ್ಪಷ್ಟನೆ ನೀಡಿದ ಪುತ್ರ

    ರಾಧಾ ರಮಣ, ತ್ರಿಯನಯನಿ ಸೀರಿಯಲ್‌ ನಟಿ ಪವಿತ್ರಾ ಜಯರಾಮ್ (Pavithra Jayaram) ಕೆಲದಿನಗಳ ಹಿಂದೆ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಬಳಿಕ ಮೇ 17ರಂದು ಪವಿತ್ರಾ ಅವರ ಗೆಳೆಯ ಚಂದು ಅಲಿಯಾಸ್ ಚಂದ್ರಕಾಂತ್ (Actor Chandrakanth) ಆತ್ಮಹತ್ಯೆಗೆ ಶರಣಾದರು. ಈ ಬೆನ್ನಲ್ಲೇ ಇಬ್ಬರ ಸಂಬಂಧದ ಬಗ್ಗೆ ಮುನ್ನೆಗೆ ಬಂತು. ಇಬ್ಬರೂ ಮದುವೆಯಾಗಬೇಕು ಎಂದು ನಿರ್ಧರಿಸಿದ್ದರು ಎಂದೆಲ್ಲಾ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ವಿಚಾರವಾಗಿ ಪವಿತ್ರಾ ಪುತ್ರ (Son) ಪ್ರಜ್ವಲ್ ಪ್ರತಿಕ್ರಿಯೆ ನೀಡಿದ್ದಾರೆ.

    ಚಂದ್ರಕಾಂತ್ ಸಾವನ್ನಪ್ಪಿದ ಬಳಿಕ ಅವರ ಕುಟುಂಬಸ್ಥರು ಪವಿತ್ರಾ ಬಗ್ಗೆ ಹಲವು ವಿಚಾರಗಳ ಬಗ್ಗೆ ದೂರಿದ್ದರು. ಪ್ರವಿತ್ರಾ ಬಂದ ಮೇಲೆ ನಮ್ಮ ಸಂಸಾರ ಹಾಳಾಯ್ತು ಎಂದು ತೆಲುಗು ಮಾಧ್ಯಮಗಳಲ್ಲಿ ಕಣ್ಣೀರಿಟ್ಟಿದ್ದರು. ಈ ಬಗ್ಗೆ ಇದೇ ಮೊದಲ ಬಾರಿಗೆ ಪವಿತ್ರಾ ಜಯರಾಮ್ ಅವರ ಪುತ್ರ ಪ್ರಜ್ವಲ್ ಪ್ರತಿಕ್ರಿಯೆ ನೀಡಿದ್ದಾರೆ. ಚಿತ್ರರಂಗ ಹೇಗೆ ಅಂತ ನಿಮಗೂ ಗೊತ್ತು. ನಾನು ಇಂಡಸ್ಟ್ರಿಗೆ ಬಂದರೂ ಕೂಡ ಹಾಗೆಯೇ. ನನ್ನ ಜೊತೆ ಯಾರಾದರೂ ಇದ್ದರೆ ಮೊದಲು ಆ ರೀತಿಯ ಗಾಸಿಪ್ ಹುಟ್ಟಿಕೊಳ್ಳುತ್ತದೆ.

    ಅಮ್ಮ ಮತ್ತು ಚಂದ್ರಶೇಖರ್ ಅವರು ಎಷ್ಟು ಒಳ್ಳೆಯ ಸ್ನೇಹಿತರು ಎಂಬುದು ನಮಗೆ ಮತ್ತು ಇಂಡಸ್ಟ್ರಿಯವರಿಗೆ ಗೊತ್ತು. ಅವರ ಒಡನಾಟ ಹೇಗಿತ್ತು ಅಂತ ನಾವು ನೋಡಿದ್ದೇವೆ. ಮದುವೆ (Wedding) ಆಗುವ ಪ್ಲ್ಯಾನ್ ಇತ್ತು ಎಂಬುದನ್ನೆಲ್ಲ ನಾನು ಸಂದರ್ಶನದಲ್ಲಿ ನೋಡಿದೆ. ಆದರೆ ಅಷ್ಟೊಂದು ಮಾತುಕತೆ ಆಗಿರಲಿಲ್ಲ. ಅಷ್ಟೊಂದು ನಮಗೂ ಗೊತ್ತಿರಲಿಲ್ಲ ಎಂದು ಪ್ರಜ್ವಲ್ ಹೇಳಿದ್ದಾರೆ.

    ಚಂದು ಕುಟುಂಬದವರು ಮಾತನಾಡಿರುವುದನ್ನು ನಾನು ನೋಡಿದ್ದೇನೆ. ಅದಕ್ಕೆ ಏನ್ ಸಾಕ್ಷಿ ಬೇಕು, ಅದು ನನ್ನ ಬಳಿ ಇದೆ. ಅದರ ಬಗ್ಗೆ ನಾವೂ ಮಾತನಾಡುವುದಕ್ಕೆ ಶುರು ಮಾಡಿದರೆ, ಮನಸ್ತಾಪಗಳು ಜಾಸ್ತಿ ಆಗುತ್ತವೆ. ಈಗ ನನ್ನ ಮತ್ತು ನನ್ನ ತಂಗಿ ಭವಿಷ್ಯ ಮುಖ್ಯ. ಅವರಲ್ಲೂ ದುಃಖ ಇದೆ. ಆದರೆ ಸತ್ಯ ಏನಿದೆ, ಅದನ್ನು ಮಾತನಾಡಲಿ ಎಂದು ಪ್ರಜ್ವಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ:ವೈಯಕ್ತಿಕ ಜೀವನದಲ್ಲಿ ಏರುಪೇರಾಗಿದೆ: ನೊಂದುಕೊಂಡು ಪೋಸ್ಟ್ ಮಾಡಿದ ನಿಶ್ವಿಕಾ

    ಅವರಿಬ್ಬರು ಉತ್ತಮ ಸ್ನೇಹಿತರು. ಚಂದ್ರಕಾಂತ್ ಆತ್ಮಹತ್ಯೆ ಬಗ್ಗೆ ನ್ಯೂಸ್ ನೋಡಿದಾಗಲೇ ಗೊತ್ತಾಗಿದ್ದು. ನಾವಿಲ್ಲಿ ನಮ್ಮ ತಾಯಿಯ ಕಾರ್ಯಗಳಲ್ಲಿ ಬ್ಯುಸಿ ಇದ್ದೆವು. ಇದೇ ವೇಳೆ ಚಂದ್ರಕಾಂತ್ ಸಾವಿನ ವಿಚಾರ ಗೊತ್ತಾಗಿ, ಇನ್ನೂ ಬೇಜಾರಾಯಿತು. ಹೈದರಾಬಾದ್‌ನಲ್ಲಿ ನಮಗೆ ತುಂಬ ಹತ್ತಿರದಲ್ಲಿ ಇದ್ದವರು ಎಂದರೆ ಅದು ಚಂದ್ರಕಾಂತ್. ಅವರು ಈ ರೀತಿ ಮಾಡಿಕೊಂಡಿದ್ದು, ನಮಗೂ ತುಂಬಾ ಬೇಜಾರಾಯಿತು. ನಾವು ಹೋಗಬೇಕಿತ್ತು. ಆದರೆ ಇಲ್ಲಿ ಕಾರ್ಯಗಳು ಇದ್ದಿದ್ದರಿಂದ ನಾವು ಹೋಗುವುದಕ್ಕೆ ಸಾಧ್ಯವಾಗಲಿಲ್ಲ ಎಂದು ಪವಿತ್ರಾ ಪ್ರಜ್ವಲ್ ಮಾತನಾಡಿದ್ದಾರೆ.

  • ಒಕ್ಕಲಿಗ ಸಂಪ್ರದಾಯದಂತೆ ನೆರವೇರಿದ ಪವಿತ್ರಾ ಜಯರಾಂ ಅಂತ್ಯಕ್ರಿಯೆ

    ಒಕ್ಕಲಿಗ ಸಂಪ್ರದಾಯದಂತೆ ನೆರವೇರಿದ ಪವಿತ್ರಾ ಜಯರಾಂ ಅಂತ್ಯಕ್ರಿಯೆ

    ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಕಿರುತೆರೆ ನಟಿ ಪವಿತ್ರಾ ಜಯರಾಂ (Pavitra Jayaram) ಅಂತ್ಯಕ್ರಿಯೆ ಹುಟ್ಟುರಾದ ಮಂಡ್ಯದ ಉಮ್ಮಡಹಳ್ಳಿಯಲ್ಲಿ ಜರುಗಿದೆ. ಒಕ್ಕಲಿಗ ಸಂಪ್ರದಾಯದಂತೆ ಪವಿತ್ರಾ ಕಾರ್ಯ ನೆರವೇರಿದೆ. ಇದನ್ನೂ ಓದಿ:ಸೀರಿಯಲ್‌ ಚಿತ್ರೀಕರಣದ ವೇಳೆ ಮಾಡಿದ ತಪ್ಪು – ʻಸೀತಾರಾಮʼ ನಟಿ ವೈಷ್ಣವಿ ಗೌಡಗೆ ಟ್ರಾಫಿಕ್‌ ಫೈನ್‌!

    ಪವಿತ್ರಾರ ಅಂತ್ಯಕ್ರಿಯೆ ವೇಳೆ ಸಹನಟ ಚಂದ್ರಶೇಖರ್, ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಚಂದು ಗೌಡ ಕೂಡ ಭಾಗಿಯಾಗುವ ಮೂಲಕ ಅಂತಿಮ ದರ್ಶನ ಪಡೆದರು.

    ಪವಿತ್ರಾ ಅವರು ಬೆಂಗಳೂರಿನಿಂದ ಹೈದರಾಬಾದ್‌ಗೆ ಪ್ರಯಾಣಿಸುತ್ತಿದ್ದ ಕಾರು ನಿನ್ನೆ (ಮೇ 12) ಆಂಧ್ರ ಪ್ರದೇಶದ ಕರ್ನೂಲಿನ ಬಳಿ ಅಪಘಾತಕ್ಕೆ ಈಡಾಗಿತ್ತು. ಇದೀಗ ನಟಿಯ ಸಾವು ಕುಟುಂಬಕ್ಕೆ, ಆಪ್ತರಿಗೆ ಶಾಕ್‌ ಕೊಟ್ಟಿದೆ.

  • ಕಾರು ಅಪಘಾತದಲ್ಲಿ ಕಿರುತೆರೆ ನಟಿ ಪವಿತ್ರಾ ಜಯರಾಂ ದುರ್ಮರಣ

    ಕಾರು ಅಪಘಾತದಲ್ಲಿ ಕಿರುತೆರೆ ನಟಿ ಪವಿತ್ರಾ ಜಯರಾಂ ದುರ್ಮರಣ

    ನ್ನಡ ಕಿರುತೆರೆ ನಟಿ ಪವಿತ್ರಾ ಜಯರಾಂ (Pavitra Jayaram) ಕಾರು ಅಪಘಾತದಲ್ಲಿ ಇಂದು (ಮೇ 12) ಕೊನೆಯುಸಿರೆಳೆದಿದ್ದಾರೆ. ಭೀಕರ ರಸ್ತೆ ಅಪಘಾತದಲ್ಲಿ ನಟಿ ಸಾವನ್ನಪ್ಪಿದ್ದಾರೆ. ಈ ಸಾವಿನ ಸುದ್ದಿ ಕೇಳಿ ಅವರ ಆಪ್ತರಿಗೆ ಶಾಕ್‌ ಆಗಿದ್ದಾರೆ.

    ನಟಿ ಪವಿತ್ರಾ ಅವರು ಪ್ರಯಾಣಿಸುತ್ತಿದ್ದ ಕಾರು ಇಂದು (ಮೇ 12) ಬೆಳಿಗ್ಗೆ ಆಂಧ್ರ ಪ್ರದೇಶದ ಕರ್ನೂಲಿನ ಬಳಿ ಅಪಘಾತಕ್ಕೆ ಈಡಾಗಿದೆ. ಭೀಕರ ಅಪಘಾತದಲ್ಲಿ (Car Accident) ನಟಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಸಿಗಬೇಕಿದೆ. ಇದನ್ನೂ ಓದಿ:ಟರ್ಕಿಯಲ್ಲಿ ‘ಬಿಗ್ ಬಾಸ್’ ಖ್ಯಾತಿಯ ದೀಪಿಕಾ ದಾಸ್

    ಮೂಲತಃ ಮಂಡ್ಯದವರಾದ ಪವಿತ್ರಾ ಅವರು ರೋಬೋ ಫ್ಯಾಮಿಲಿ, ನೀಲಿ, ರಾಧಾ ರಮಣ, ಜೋಕಾಲಿ ಸೀರಿಯಲ್‌ನಲ್ಲಿ ಪವಿತ್ರಾ ನಟಿಸಿದ್ದರು. ತೆಲುಗಿನ ‘ತ್ರಿನಯನಿ’ ಸೀರಿಯಲ್‌ನಲ್ಲಿ ವಿಲನ್ ಆಗಿ ಪವಿತ್ರಾ ಪ್ರೇಕ್ಷಕರ ಗಮನ ಸೆಳೆದಿದ್ದರು.

  • ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ ಕಾವ್ಯಾ ಗೌಡ

    ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ ಕಾವ್ಯಾ ಗೌಡ

    ‘ರಾಧಾ ರಮಣ’ (Radha Ramana) ನಟಿ ಕಾವ್ಯಾ ಗೌಡ (Kavya Gowda) ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಮನೆಗೆ ಮಹಾಲಕ್ಷ್ಮಿಯ ಆಗಮನವಾಗಿದೆ. ಹೆಣ್ಣು ಮಗುವಿಗೆ (Baby Girl)  ನಟಿ ಜನ್ಮ ನೀಡಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.

    ಅಯೋಧ್ಯೆಯ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಜ.22ರಂದು ಅದ್ಧೂರಿಯಾಗಿ ನೆರವೇರಿದೆ. ಇದೇ ದಿನ ನಟಿ ಕಾವ್ಯಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದು ಕಾವ್ಯಾ ಗೌಡ ಅವರ ಕುಟುಂಬದಲ್ಲಿ ಮತ್ತಷ್ಟು ಸಂತಸ ಹೆಚ್ಚಿಸಿದೆ. ಇದನ್ನೂ ಓದಿ:ಅಯೋಧ್ಯೆಯಲ್ಲಿ ಮಿಂಚಿದ ಆಲಿಯಾ ಭಟ್ : ಸೀರೆ ಮೇಲೆ ಅಭಿಮಾನಿಗಳ ಕಣ್ಣು

    ನಮ್ಮ ಮನೆಗೆ ಮುದ್ದಾದ ರಾಜಕುಮಾರಿಯ ಆಗಮನವಾಗಿದೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದು, ನಿಮ್ಮೆಲ್ಲರ ಶುಭಹಾರೈಕೆಗೆ ಧನ್ಯವಾದಗಳು ಎಂದು ಸೋಷಿಯಲ್ ಮೀಡಿಯಾ ಮೂಲಕ ನಟಿ ತಿಳಿಸಿದ್ದಾರೆ.

    ಉದ್ಯಮಿ ಸೋಮಶೇಖರ್ ಜೊತೆ ಕಾವ್ಯಾ ಮದುವೆಯಾಗಿ 2 ವರ್ಷಗಳ ನಂತರ ನಟಿ ತಾಯಿ ಆಗಿರುವ ಸಿಹಿಸುದ್ದಿ ನೀಡಿದ್ದರು. ಇತ್ತೀಚೆಗಷ್ಟೇ ಕಾವ್ಯಾಗೆ ಅದ್ಧೂರಿಯಾಗಿ ಸೀಮಂತ ಶಾಸ್ತ್ರ ಮಾಡಲಾಗಿತ್ತು. ಕುಟುಂಬಸ್ಥರ ಸಮ್ಮುಖದಲ್ಲಿ ಈ ಕಾರ್ಯಕ್ರಮ ನೆರವೇರಿತ್ತು. ಈ ಬೆನ್ನಲ್ಲೇ ನಟಿ ಸಿಹಿಸುದ್ದಿ ನೀಡಿದ್ದಾರೆ.

  • ಹೆಣ್ಣು ಮಗುವಿಗೆ ತಾಯಿಯಾದ ‘ಬಿಗ್‌ ಬಾಸ್‌’ ಮಾಜಿ ಸ್ಪರ್ಧಿ ಆಶಿತಾ ಚಂದ್ರಪ್ಪ

    ಹೆಣ್ಣು ಮಗುವಿಗೆ ತಾಯಿಯಾದ ‘ಬಿಗ್‌ ಬಾಸ್‌’ ಮಾಜಿ ಸ್ಪರ್ಧಿ ಆಶಿತಾ ಚಂದ್ರಪ್ಪ

    ‘ಬಿಗ್ ಬಾಸ್’ (Bigg Boss Kannada) ಮಾಜಿ ಸ್ಪರ್ಧಿ ಆಶಿತಾ ಚಂದ್ರಪ್ಪ (Ashita Chandrappa) ಅವರು ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಹೆಣ್ಣು ಮಗುವಿಗೆ ತಾಯಿಯಾಗುವ ಮೂಲಕ ನಟಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ನಟಿ ಮಾಹಿತಿ ನೀಡಿದ್ದಾರೆ.

    ಕೆಲದಿನಗಳ ಹಿಂದೆ ಮೊದಲ ಮಗುವಿನ ನಿರೀಕ್ಷೆಯಲ್ಲಿರೋದಾಗಿ ಆಶಿತಾ ರಿವೀಲ್ ಮಾಡಿದ್ದರು. ಬಳಿಕ ಸೀಮಂತ ಶಾಸ್ತ್ರದ ಫೋಟೋಗಳನ್ನ ಹಂಚಿಕೊಂಡಿದ್ದರು. ಈಗ ಮನೆಗೆ, ಮಗಳ ಆಗಮನ ಆಗಿರುವ ಸಂಭ್ರಮದಲ್ಲಿದ್ದಾರೆ. ಹೆಣ್ಣು ಮಗಳು ಹುಟ್ಟಿದ್ದಾಳೆ ಎಂದು ನಟಿ ಸಂತಸ ವ್ಯಕ್ತಪಡಿಸಿದ್ದಾರೆ.

    ಕಳೆದ 2021ರ ವರ್ಷದ ಅಂತ್ಯದಲ್ಲಿ ಉದ್ಯಮಿ ರೋಹನ್ ರಾಘವೇಂದ್ರ (Rohan Raghavendra) ಜೊತೆ ದಾಂಪತ್ಯ (Wedding) ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯ ಬಳಿಕ ನಟಿ ಬಣ್ಣದ ಜಗತ್ತಿನಿಂದ ದೂರ ಉಳಿದುಕೊಂಡರು. ಇದನ್ನೂ ಓದಿ:ಮೊದಲ ಚಿತ್ರದ ಶೂಟಿಂಗ್‌ ಎಲ್ಲಿಗೆ ಬಂತು? ಅಪ್‌ಡೇಟ್‌ ಕೊಟ್ರು ಸಾನ್ಯ ಅಯ್ಯರ್

    ನಟ ವಿರಾಟ್‌ಗೆ (Viraat) ಜೋಡಿಯಾಗಿ ಜೊತೆ ಜೊತೆಯಲಿ ಸೀರಿಯಲ್‌ನಲ್ಲಿ ನಾಯಕಿಯಾಗಿ ಆಶಿತಾ ನಟಿಸಿದ್ದರು. ಬಳಿಕ ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿ ಗಮನ ಸೆಳೆದರು. ರಾಧಾ ರಮಣ (Radha Ramana) ಧಾರಾವಾಹಿಯಲ್ಲಿ ರಮಣ ತಂಗಿ ಅವನಿ ಪಾತ್ರಕ್ಕೆ ಜೀವತುಂಬಿದ್ದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮತ್ತೆ ಲವರ್‌ ಬಾಯ್‌ ಆಗಿ ಕಿರುತೆರೆಯತ್ತ ಸ್ಕಂದ ಅಶೋಕ್

    ಮತ್ತೆ ಲವರ್‌ ಬಾಯ್‌ ಆಗಿ ಕಿರುತೆರೆಯತ್ತ ಸ್ಕಂದ ಅಶೋಕ್

    ‘ರಾಧಾ ರಮಣ’ (Radha Ramana) ಖ್ಯಾತಿಯ ಸ್ಕಂದ ಅಶೋಕ್ (Skanda Ashok) ಕಿರುತೆರೆಯಲ್ಲಿ ಮತ್ತೆ ಸೆಕೆಂಡ್ ಇನಿಂಗ್ಸ್ ಶುರು ಮಾಡಿದ್ದಾರೆ. ‘ಅವನು ಮತ್ತು ಶ್ರಾವಣಿ’ ಎಂಬ ಸೀರಿಯಲ್ ಮೂಲಕ ಟಿವಿ ಪರದೆಯಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಇದನ್ನೂ ಓದಿ:ಅಪ್ಪನ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರೂಪೇಶ್ ಶೆಟ್ಟಿ

    ಬಹುಭಾಷಾ ನಟ ಸ್ಕಂದ ಅಶೋಕ್, ಸಿನಿಮಾ ಮತ್ತು ಕಿರುತೆರೆ ಎರಡರಲ್ಲೂ ಸಕ್ರಿಯರಾಗಿದ್ದಾರೆ. ಕಡೆಯದಾಗಿ ‘ಸರಸು’ (Sarasu) ಎಂಬ ಧಾರಾವಾಹಿಯಲ್ಲಿ ನಟಿಸಿದ್ದರು. ಈಗ ಅಭಿಮನ್ಯು ಆಗಿ ಕಿರುತೆರೆಗೆ ಎಂಟ್ರಿ ಕೊಡ್ತಿದ್ದಾರೆ. ಮುದ್ದಾದ ಪ್ರೇಮ ಕಥೆಯ ಜೊತೆ ಮೋಡಿ ಮಾಡಲು ಸ್ಕಂದ ಸಜ್ಜಾಗಿದ್ದಾರೆ.

    ರಾಧಾ ರಮಣ (Radha Ramana) ಎಂಬ ಸೀರಿಯಲ್‌ನಲ್ಲಿ ರಮಣ ಎಂಬ ಪಾತ್ರ ಸ್ಕಂದಗೆ ಹೆಚ್ಚಿನ ಜನಪ್ರಿಯತೆ ನೀಡಿತ್ತು. ರಾಧಾ ಮಿಸ್ ಗಂಡನಾಗಿ, ಪಕ್ಕಾ ಬ್ಯುಸಿನೆಸ್ ಮ್ಯಾನ್ ರೋಲ್‌ನಲ್ಲಿ ಜನಮನ ಸೆಳೆದಿದ್ದರು. ಈಗ ಸ್ಕಂದ ಹೊಸ ಸೀರಿಯಲ್ ‘ಅವನು ಮತ್ತು ಶ್ರಾವಣಿ’ (Avanu Matte Shravani) ಪ್ರೋಮೋ ರಿವೀಲ್ ಆಗಿದೆ. ಈ ಮೂಲಕ ಸ್ಕಂದ ಮತ್ತೆ ಮೋಡಿ ಮಾಡ್ತಿದ್ದಾರೆ.

    ಮಲಯಾಳಂನ ನೋಟ್ ಬುಕ್ (Note Book) ಎಂಬ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಚಿಕ್ಕಮಗಳೂರಿನ ಪ್ರತಿಭೆ ಸ್ಕಂದ ಪಾದಾರ್ಪಣೆ ಮಾಡಿದ್ದರು. ಚಾರುಲತಾ, ಪಾಸಿಟಿವ್, ಮಲ್ಲಿ ಮಲ್ಲಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ಸ್ಕಂದ ನಟಿಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗೃಹ ಪ್ರವೇಶದ ಸಂಭ್ರಮದಲ್ಲಿ ‘ರಾಧಾ ರಮಣ’ ನಟಿ ಕಾವ್ಯ ಗೌಡ

    ಗೃಹ ಪ್ರವೇಶದ ಸಂಭ್ರಮದಲ್ಲಿ ‘ರಾಧಾ ರಮಣ’ ನಟಿ ಕಾವ್ಯ ಗೌಡ

    ರಾಧಾ ರಮಣ (Radha Ramana), ಮೀರಾ ಮಾಧವ, ಶುಭವಿವಾಹ ಸೀರಿಯಲ್‌ಗಳ ಮೂಲಕ ಮನೆ ಮಾತಾದ ನಟಿ ಕಾವ್ಯ ಗೌಡ (Kavya Gowda) ನೂತನ ಮನೆಗೆ ಕಾಲಿಟ್ಟಿದ್ದಾರೆ. ಗೃಹ ಪ್ರವೇಶದ (House Warming) ಸಂಭ್ರಮದಲ್ಲಿದ್ದಾರೆ ನಟಿ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

    ‘ಬಕಾಸುರ’ ಚಿತ್ರ ಖ್ಯಾತಿಯ ನಟಿ ಕಾವ್ಯ ಅವರು ಉದ್ಯಮಿ ಸೋಮಶೇಖರ್ (Somashekar) ಜೊತೆ 2021ರಲ್ಲಿ ಮೇ 13ರಂದು ಹೊಸ ಬಾಳಿಗೆ ಕಾಲಿಟ್ಟಿದ್ದರು. ಗುರು ಹಿರಿಯರು ನಿಶ್ಚಯಿಸಿದ ಮದುವೆ ಇದಾಗಿದೆ. ಮದುವೆಯ ನಂತರ ನಟನೆಯಿಂದ ಬ್ರೇಕ್ ತೆಗೆದುಕೊಂಡು ಜ್ಯುವೆಲ್ಲರಿ ಡಿಸೈನರ್ ಆಗಿ ಕಾವ್ಯ ಗುರುತಿಸಿಕೊಂಡಿದ್ದಾರೆ. ಇದನ್ನೂ ಓದಿ:ತಪ್ಪೆಲ್ಲ ನನ್ನದೇ ಎಂದು ಮಾಜಿ ಪ್ರೇಯಸಿಯರ ಬಗ್ಗೆ ಮೌನ ಮುರಿದ ಸಲ್ಮಾನ್ ಖಾನ್

    ಮದುವೆಯಾಗಿ ಒಂದು ವರ್ಷವಾಗುವ ಮುಂಚೆಯೇ ಇದೀಗ ಹೊಸ ಮನೆಗೆ ಕಾವ್ಯ ಗೌಡ ದಂಪತಿ ಪಾದಾರ್ಪಣೆ ಮಾಡಿದ್ದಾರೆ. ಅದ್ದೂರಿಯಾಗಿ ಗೃಹ ಪ್ರವೇಶ ಮಾಡಿ ಮಿಂಚಿದ್ದಾರೆ. ನಟಿ ಕಾವ್ಯ ಕೂಡ ಮಸ್ತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಸವ್ಯಸಾಚಿ ಸೀರೆಯಲ್ಲಿ ನಟಿ ಕಾವ್ಯ ಮಿಂಚಿದ್ದಾರೆ.

    ಕಾವ್ಯ ದಂಪತಿ ಅವರ ಮನೆ ನೋಡುಗರ ಗಮನ ಸೆಳೆಯುತ್ತಿದೆ. ಮನೆಯಲ್ಲಿ ಎಲ್ಲಾ ಕಡೆ ಮರದ ತುಂಡಿನಿಂದ ವಿನ್ಯಾಸ ಮಾಡಿದ ಹಾಗೇ ಕಾಣುತ್ತಿದೆ. ಮನೆ ಕಟ್ಟಿಸಿದ ರೀತಿ ವಿಭಿನ್ನವಾಗಿದೆ. ನಟಿಯ ಹೊಸ ಮನೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇನ್ನೂ ನೆಚ್ಚಿನ ನಟಿಗೆ ಅಭಿಮಾನಿಗಳು ಶುಭಹಾರೈಸುತ್ತಿದ್ದಾರೆ.

  • ರಾಧಾ ಮಿಸ್ ಪಾತ್ರಕ್ಕೆ ಎಂಟ್ರಿ ಕೊಟ್ಟ ನಟಿ ಕಾವ್ಯ ಗೌಡ

    ರಾಧಾ ಮಿಸ್ ಪಾತ್ರಕ್ಕೆ ಎಂಟ್ರಿ ಕೊಟ್ಟ ನಟಿ ಕಾವ್ಯ ಗೌಡ

    ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ರಾಧಾ ರಮಣ’ ಧಾರಾವಾಹಿಗೆ ಕಿರುತೆರೆ ನಟಿ ಕಾವ್ಯ ಗೌಡ ಅವರು ರಾಧಾ ಮಿಸ್ ಆಗಿ ಎಂಟ್ರಿ ಕೊಡುತ್ತಿದ್ದಾರೆ.

    ರಾಧಾ ಪಾತ್ರಧಾರಿಯ ನಟಿ ಶ್ವೇತಾ ಪ್ರಸಾದ್ ಧಾರಾವಾಹಿಯಿಂದ ಹೊರ ನಡೆದಿದ್ದಾರೆ. ಈಗ ಅವರ ಪಾತ್ರವನ್ನು ಕಿರುತೆರೆ ನಟಿ ಕಾವ್ಯ ಗೌಡ ನಿರ್ವಹಿಸಲಿದ್ದಾರೆ. ಮುಂದಿನ ಸಂಚಿಕೆಗಳಲ್ಲಿ ಧಾರಾವಾಹಿಯಲ್ಲಿ ಶ್ವೇತಾ ಅವರ ಬದಲು ಕಾವ್ಯ ಪ್ರೇಕ್ಷಕರ ಮುಂದೆ ಬರಲಿದ್ದಾರೆ.

    ಕಾವ್ಯ ಗೌಡ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಪ್ಯಾಟೆ ಮಂದಿ ಕಾಡಿಗೆ ಬಂದ್ರು’ ರಿಯಾಲಿಟಿ ಶೋ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದರು. ನಂತರ ‘ಶುಭ ವಿವಾಹ’, ‘ಮೀರಾ ಮಾಧವ’ ಹಾಗೂ ‘ಗಾಂಧಾರಿ’ ಧಾರಾವಾಹಿಯಲ್ಲಿ ನಟಿಸಿದ್ದರು.

    ಧಾರಾವಾಹಿಗಾಗಿ ನಟಿ ಶ್ವೇತಾ ಅವರು ಒಂದು ವರ್ಷಗಳ ಕಾಲ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆದರೆ ಆ ಒಪ್ಪಂದ ಮುಗಿದು ವರ್ಷವೇ ಆಗಿತ್ತು. ಹೀಗಾಗಿ ಅವರು ಸೀರಿಯಲ್‍ನಿಂದ ಹೊರಬಂದಿದ್ದಾರೆ. ಶ್ವೇತಾ ಧಾರಾವಾಹಿ ಮಾತ್ರವಲ್ಲದೇ ಕೆಲವು ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ.

    ರಮಣ ಪಾತ್ರಧಾರಿಗೆ ಪತ್ನಿಯಾಗಿ ಶಾಂತ ಸ್ವಭಾವದ ಗೃಹಿಣಿಯಾಗಿ ನಟಿಸಿದ್ದರು. ಇದರಿಂದ ಅಪಾರ ಪ್ರೇಕ್ಷಕರು ಇವರನ್ನು ಮೆಚ್ಚಿಕೊಂಡಿದ್ದರು. ಸದ್ಯಕ್ಕೆ ನಟಿ ಶ್ವೇತಾ ಪ್ರಸಾದ್ ಅವರು ನಟನೆಯಿಂದ ಸ್ವಲ್ಪ ದಿನದವರೆಗೂ ಬ್ರೇಕ್ ತೆಗೆದುಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

  • ‘ರಾಧಾ ರಮಣ’ ಸೀರಿಯಲ್‍ನಿಂದ ಹೊರಬಂದ ರಾಧಾ ಮಿಸ್

    ‘ರಾಧಾ ರಮಣ’ ಸೀರಿಯಲ್‍ನಿಂದ ಹೊರಬಂದ ರಾಧಾ ಮಿಸ್

    ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ರಾಧಾ ರಮಣ’ ಧಾರಾವಾಹಿ ಪ್ರೇಕ್ಷಕರ ಮನಗೆದ್ದಿತ್ತು. ಆದರೆ ರಾಧಾ ಪಾತ್ರಧಾರಿಯಾಗಿ ಅಭಿನಯಿಸಿದ್ದ ಶ್ವೇತಾ ಪ್ರಸಾದ್ ಅವರು ಸೀರಿಯಲ್‍ನಿಂದ ಹೊರಬರುತ್ತಿದ್ದಾರೆ.

    ನಟಿ ಶ್ವೇತಾ ಪ್ರಸಾದ್ ಇನ್ನು ಮುಂದೆ ಈ ಧಾರಾವಾಹಿಯಲ್ಲಿ ಅಭಿನಯಿಸುತ್ತಿಲ್ಲ. ಶ್ವೇತಾ ಅವರು ಸೀರಿಯಲ್‍ನಲ್ಲಿ ರಮಣ ಪಾತ್ರಧಾರಿಗೆ ಪತ್ನಿಯಾಗಿ ಶಾಂತ ಸ್ವಭಾವದ ಗೃಹಿಣಿಯಾಗಿ ಕಾಣಿಸಿಕೊಂಡಿದ್ದರು. ಇದರಿಂದ ಅಪಾರ ಪ್ರೇಕ್ಷಕರು ಇವರನ್ನು ಮೆಚ್ಚಿಕೊಂಡಿದ್ದರು. ಆದರೆ ಇದೀಗ ಈ ಧಾರಾವಾಹಿಯಿಂದ ಶ್ವೇತಾ ಅವರು ಹೊರ ಬರುತ್ತಿದ್ದಾರೆ ಎಂದು ತಿಳಿದು ಬಂದಿದೆ.

    ಧಾರಾವಾಹಿಗಾಗಿ ನಟಿ ಶ್ವೇತಾ ಅವರು ಒಂದು ವರ್ಷಗಳ ಕಾಲ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆದರೆ ಆ ಒಪ್ಪಂದ ಮುಗಿದು ವರ್ಷವೇ ಆಗಿದೆ. ಹೀಗಾಗಿ ಇದೇ ಕಾರಣದಿಂದ ಶ್ವೇತಾ ಸೀರಿಯಲ್‍ನಿಂದ ಹೊರ ಬರುವ ನಿರ್ಧಾರ ಮಾಡಿದ್ದರಂತೆ. ಶ್ವೇತಾ ಧಾರಾವಾಹಿ ಮಾತ್ರವಲ್ಲದೇ ಕೆಲವು ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ

    ಧಾರಾವಾಹಿಯಲ್ಲಿ ಇನ್ನೂ 15 ದಿನಗಳು ಮಾತ್ರ ಶ್ವೇತಾ ಅವರು ಕಾಣಿಸಿಕೊಳ್ಳಲಿದ್ದಾರೆ. ನಂತರ ಆ ಪಾತ್ರಕ್ಕೆ ಬೇರೆ ನಟಿ ಬರುತ್ತಾರೆ ಎಂದು ತಿಳಿದು ಬಂದಿದೆ. ಸದ್ಯಕ್ಕೆ ಅವರು ನಟನೆಯಿಂದ ಸ್ವಲ್ಪ ದಿನದವರೆಗೂ ಬ್ರೇಕ್ ತೆಗೆದುಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಾರೆ ಎಂದು ತಿಳಿದು ಬಂದಿದೆ.

  • 6 ದಿನ, 6 ಜಾಗಗಳಲ್ಲಿ ನಡೆಯಲಿದೆ ರಮಣನ ಮದುವೆ!

    6 ದಿನ, 6 ಜಾಗಗಳಲ್ಲಿ ನಡೆಯಲಿದೆ ರಮಣನ ಮದುವೆ!

    ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ರಾಧಾ ರಮಣ ಧಾರಾವಾಹಿಯ ನಟ ಸ್ಕಂದ ಆಶೋಕ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

    ನಟ ಸ್ಕಂದ ಆಶೋಕ್ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದ ತನ್ನ ಪ್ರೇಯಸಿ ಶಿಖಾ ಪ್ರಸಾದ್ ಜೊತೆ ತಮ್ಮ ಪೂರ್ತಿ ಜೀವನವನ್ನು ಕಳೆಯಲು ಸಿದ್ಧರಾಗಿದ್ದಾರೆ. ಇನ್ನೂ ಇವರ ಮದುವೆ ಆರು ದಿನಗಳ ಕಾಲ ನಡಯಲಿದೆ. ಒಂದೊಂದು ಶಾಸ್ತ್ರದ ಕಾರ್ಯಕ್ರಮಗಳನ್ನು ಒಂದೊಂದು ಸ್ಥಳದಲ್ಲಿ ನಡೆಯಲು ಸಿದ್ಧತೆ ನಡೆದಿದೆ.

    ಮೇ 25ರಿಂದ ಮದುವೆ ಕಾರ್ಯಕ್ರಮಗಳು ನಡೆಯಲಿದ್ದು, ಮೇ 20ರಂದು ಬಸವನಗುಡಿಯಲ್ಲಿರುವ ಗಂಜಂ ಕಲ್ಯಾಣ ಮಂಟಪದಲ್ಲಿ ಹಳದಿ ಶಾಸ್ತ್ರ ನಡೆಯಲಿದೆ. ನಂತರ ಮೇ 28ರಂದು ತಾಜ್ ವೆಸ್ಟ್ ಎಂಡ್ ಹೋಟೆಲ್‍ನಲ್ಲಿ ಮೆಹೆಂದಿ ಶಾಸ್ತ್ರ ಆಯೋಜಿಸಲಾಗಿದೆ.

    ಮೆಹೆಂದಿ ಕಾರ್ಯಕ್ರಮ ನಡೆದ ನಂತರ ಅದೇ ದಿನ ಸಂಜೆ ಸಂಗೀತಾ ಕಾರ್ಯಕ್ರಮ ಕೂಡ ನಡೆಯಲಿದೆ. ಈ ಸಂಗೀತಾ ಕಾರ್ಯಕ್ರಮಕ್ಕೆ ಹಲವು ಸಿನಿಮಾ ಕಲಾವಿದರು ಹಾಗೂ ಕಿರುತರೆ ನಟ- ನಟಿಯರು ಪಾಲ್ಗೊಳ್ಳಲಿದ್ದಾರೆ.

     

    ಮೇ 29ರಂದು ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‍ನಲ್ಲಿ ವರಪೂಜೆ ನಡೆಯಲಿದ್ದು, ಅದರ ಜೊತೆ ಬಳೆ ಶಾಸ್ತ್ರ ಜರುಗಲಿದೆ. ಇನ್ನೂ ಈ ವರ ಪೂಜೆ ಸಮಾರಂಭಕ್ಕೆ ಸ್ಕಂದ ಆಶೋಕ್ ಹಾಗೂ ಶಿಖಾ ಪ್ರಸಾದ್ ಮನೆಯ ಹಿರಿಯರು ಭಾಗಿಯಾಗಲಿದ್ದಾರೆ.

    ಈ ಎಲ್ಲ ಶಾಸ್ತ್ರ ಮುಗಿದ ನಂತರ ಬೆಂಗಳೂರು ಅರಮನೆ ಮೈದಾನದಲ್ಲಿ ಮೇ 30 ಆರತಕ್ಷತೆ ನಡೆಯಲಿದ್ದು, ನಂತರ ಮೇ 31 ರಂದು ಅಲ್ಲೇ ಅದ್ಧೂರಿಯಾಗಿ ಮದುವೆಯಾಗಲಿದ್ದಾರೆ.