Tag: Radhika Kumarswamy

  • ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ ರಾಧಿಕಾ ಕುಮಾರಸ್ವಾಮಿ

    ಫ್ಯಾನ್ಸ್‌ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ ರಾಧಿಕಾ ಕುಮಾರಸ್ವಾಮಿ

    ಸ್ಯಾಂಡಲ್‌ವುಡ್ ನಟಿ ರಾಧಿಕಾ ಕುಮಾರಸ್ವಾಮಿ (Radhika Kumarswamy) ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ನವೆಂಬರ್ 11ರಂದು ತಮ್ಮ ಹುಟ್ಟುಹಬ್ಬವನ್ನು (Birthday) ಫ್ಯಾನ್ಸ್ ಜೊತೆ ನಟಿ ಆಚರಿಸಿಕೊಳ್ಳಲಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಬರ್ತ್‌ಡೇ ಆಚರಣೆಯಿಂದ ದೂರವಿದ್ದರು. ಈ ಬಾರಿ ಫ್ಯಾನ್ಸ್‌ಗೆ ಭೇಟಿಯಾಗಲು ಸಮಯ ಮೀಸಲಿಟ್ಟಿದ್ದಾರೆ.

    ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಶೇರ್ ಮಾಡುವ ಮೂಲಕ ನಟಿ ಫ್ಯಾನ್ಸ್‌ಗೆ ಆಹ್ವಾನ ನೀಡಿದ್ದಾರೆ. ನಮಸ್ಕಾರ, ಹಲವು ವರ್ಷಗಳಿಂದ ಅಭಿಮಾನಿಗಳನ್ನ ಭೇಟಿ ಮಾಡೋಕೆ ಆಗಿರಲಿಲ್ಲ. ನ.11ರಂದು ಶನಿವಾರ ನನ್ನ ಮನೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತೇನೆ. ಅಂದು ನಿಮಗೆ ಸಿಗುತ್ತೇನೆ ಎಂದಿದ್ದಾರೆ ರಾಧಿಕಾ ಕುಮಾರಸ್ವಾಮಿ.

    ಇದರ ಜೊತೆಗೆ ಭೇಟಿಯಾಗೋಕೆ ವಿಳಾಸ ಕೂಡ ನೀಡಿದ್ದಾರೆ. ವಿಳಾಸ ಈ ಕೆಳಗಿನಂತಿದೆ. 10/11 ಎರಡನೇ ಮುಖ್ಯ ರಸ್ತೆ, ಎರಡನೇ ಕ್ರಾಸ್ ಆರ್‌ಎಂವಿ ಎರಡನೇ ಸ್ಟೇಜ್, ಮೂರನೇ ಬ್ಲಾಕ್ ನ್ಯೂ ಬೆಲ್ ರೋಡ್, ಡಾಲರ್ಸ್ ಕಾಲೋನಿ ಬೆಂಗಳೂರು ಎಂದು ಮಾಹಿತಿ ನೀಡಿದ್ದಾರೆ.

  • ರಾಧಿಕಾ ಕುಮಾರಸ್ವಾಮಿ ಜೊತೆ ‘ಲಚ್ಚಿ’ ಫೋಟೋ- ಕಿರುತೆರೆಗೆ ಮರಳಿದ್ರಾ ನಟಿ?

    ರಾಧಿಕಾ ಕುಮಾರಸ್ವಾಮಿ ಜೊತೆ ‘ಲಚ್ಚಿ’ ಫೋಟೋ- ಕಿರುತೆರೆಗೆ ಮರಳಿದ್ರಾ ನಟಿ?

    ಳು ಭಾಷೆಯಲ್ಲಿ ಸಿದ್ಧವಾಗುತ್ತಿರುವ ‘ಅಜಾಗ್ರತ’ ಚಿತ್ರಕ್ಕೆ ನಟಿ ರಾಧಿಕಾ ಕುಮಾರಸ್ವಾಮಿ (Radhika Kumarswamy) ನಾಯಕಿಯಾಗಿದ್ದು, ರಾಧಿಕಾ ಸಹೋದರ ಈ ಚಿತ್ರವನ್ನ ನಿರ್ಮಾಣ ಮಾಡ್ತಿದ್ದಾರೆ. ಈ ನಡುವೆ ನಟಿ ರಾಧಿಕಾ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ನಟಿ ಶುಭಸುದ್ದಿ ನೀಡಿದ್ದಾರೆ.

    ಬಾಲಿವುಡ್ ಖ್ಯಾತ ನಟ ಶ್ರೇಯಸ್ ತಲ್ಪಾಡೆ (Shreyas Talpade) ಅವರಿಗೆ ನಾಯಕಿಯಾಗಿ ರಾಧಿಕಾ ಅವರು ಕಾಣಿಸಿಕೊಳ್ತಿದ್ದಾರೆ. ಸದ್ಯ ಈ ಚಿತ್ರದ ಶೂಟಿಂಗ್‌ನಲ್ಲಿ ನಟಿ ಬ್ಯುಸಿಯಾಗಿದ್ದಾರೆ. ‘ದಮಯಂತಿ’ ಚಿತ್ರದ ಬಳಿಕ ನಟಿ ಬ್ರೇಕ್ ತೆಗೆದುಕೊಂಡಿದ್ದರು. ಈಗ ‘ಭೈರಾದೇವಿ’ ಸಿನಿಮಾಗಾಗಿ ಫ್ಯಾನ್ಸ್ ಎದುರು ನೋಡ್ತಿದ್ದಾರೆ.

    ಇದೀಗ ‘ನಮ್ಮ ಲಚ್ಚಿ’ (Namma Lacchi) ಸೀರಿಯಲ್ ಖ್ಯಾತಿಯ ಲಚ್ಚಿ ಮತ್ತು ರಿಯಾ ಇಬ್ಬರು, ರಾಧಿಕಾ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ. ಈ ಕುರಿತ ಫೋಟೋವನ್ನ ಬಾಲನಟಿ ಲಚ್ಚಿ ಅಲಿಯಾಸ್ ಸಾಂಘವಿ ತಮ್ಮ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

    ಈ ಹಿಂದೆ ಡ್ಯಾನ್ಸಿಂಗ್ ಶೋವೊಂದರಲ್ಲಿ ನಟಿ ಜಡ್ಜ್ ಆಗಿ ಕಾರ್ಯ ನಿರ್ವಹಿಸಿದ್ದರು. ಈಗ ಸದ್ದಿಲ್ಲದೇ ಲಚ್ಚಿ ಸೀರಿಯಲ್‌ಗೆ ಸಾಥ್ ನೀಡಿದ್ರಾ.? ಅತಿಥಿಯಾಗಿ ಎಂಟ್ರಿ ಕೊಟ್ರಾ ಎಂಬ ಕುತೂಹಲ ಮೂಡಿದೆ. ಅಷ್ಟಕ್ಕೂ ಈ ಸುದ್ದಿ ನಿಜಾನಾ.? ಎಂಬುದನ್ನ ಮುಂದಿನ ದಿನಗಳವರೆಗೂ ಕಾದುನೋಡಬೇಕಿದೆ. ಇದನ್ನೂ ಓದಿ:ಚಿತ್ರ ನಿರ್ಮಾಣಕ್ಕೆ ಮುಂದಾದ ಬಾಲಿವುಡ್ ನಟಿ ಕೃತಿ ಸನೋನ್

    ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸುತ್ತಿರುವ ʼಅಜಾಗ್ರತ’ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ನೆರವೇರಿದೆ. ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಎ.ಎಂ.ರತ್ನಂ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರೆ, ಹೆಸರಾಂತ ವಿತರಕ ಟ್ಯಾಗೋರ್ ಮಧು ಕ್ಯಾಮೆರಾ ಚಾಲನೆ ಮಾಡಿದ್ದರು. ಚಿತ್ರರಂಗದ ವಿವಿಧ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದ್ದರು.

  • ಹತ್ತು ವರ್ಷಗಳ ನಂತರ ತೆಲುಗಿಗೆ ಡಬ್ ಆಯಿತು ಯಶ್ ನಟನೆಯ ಲಕ್ಕಿ ಸಿನಿಮಾ

    ಹತ್ತು ವರ್ಷಗಳ ನಂತರ ತೆಲುಗಿಗೆ ಡಬ್ ಆಯಿತು ಯಶ್ ನಟನೆಯ ಲಕ್ಕಿ ಸಿನಿಮಾ

    ಶ್ ವೃತ್ತಿ ಜೀವನದಲ್ಲಿ ತುಂಬಾ ಸ್ಟೈಲೀಶ್ ಆಗಿ ಕಾಣಿಸಿಕೊಂಡಿರುವ ಸಿನಿಮಾ ಯಾವುದು ಎಂದು ಕೇಳಿದರೆ, ಥಟ್ಟನೆ ನೆನಪಾಗುವ ಚಿತ್ರವೇ ಲಕ್ಕಿ. ರಮ್ಯಾ ಮತ್ತು ಯಶ್ ಕಾಂಬಿನೇಷನ್ ನಲ್ಲಿ ಮೂಡಿ ಬಂದ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದು ಡಾ.ಸೂರಿ. ನಿರ್ಮಾಪಕರು ರಾಧಿಕಾ ಕುಮಾರಸ್ವಾಮಿ. ಈ ಸಿನಿಮಾದಲ್ಲಿ ಯಶ್ ಸಖತ್ ಸ್ಟೈಲೀಶ್ ಆಗಿ ಕಂಡಿದ್ದಾರೆ. ಇದನ್ನೂ ಓದಿ: ಕಾಶ್ಮೀರ ಟಿವಿ ಸ್ಟಾರ್ ನಟಿ ಹತ್ಯೆ ಮಾಡಿದ ಭಯೋತ್ಪಾದಕರು

    ರಮ್ಯಾ ಮತ್ತು ಯಶ್ ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದು, ಪ್ರೇಮಕಥೆಯನ್ನು ಹಾಸ್ಯಮಯವಾಗಿ ಹೇಳುವ ಪಯತ್ನ ಮಾಡಲಾಗಿತ್ತು. ಯಶ್ ಈ ಸಿನಿಮಾದಲ್ಲಿ ಹಲವು ವೇಷಗಳನ್ನು ಹಾಕಿದ್ದಾರೆ ಮತ್ತು ನಾಯಕಿಯನ್ನು ತನ್ನತ್ತ ಸೆಳೆಯಲು ಹಲವು ತಂತ್ರಗಳನ್ನೂ ರೂಪಿಸುತ್ತಾರೆ. ಇಂತಹ ಸಿನಿಮಾ ಕನ್ನಡದಲ್ಲಿ ರಿಲೀಸ್ ಆಗಿ ಹತ್ತು ವರ್ಷಗಳೇ ಕಳೆದಿವೆ.

    ಇದೀಗ ಲಕ್ಕಿ ತೆಲುಗಿನಲ್ಲಿ ಡಬ್ ಆಗಿ ರಿಲೀಸ್ ಆಗಲು ಸಿದ್ಧತೆ ನಡೆಸಲಾಗುತ್ತಿದೆ. ಈಗಾಗಲೇ ತೆಲುಗಿನಲ್ಲಿ ಡಬ್ ಮಾಡಿ, ಸೆನ್ಸಾರ್ ಕೂಡ ಮಾಡಿಸಲಾಗಿದೆ. ರಿಲೀಸ್ ದಿನಾಂಕ ಮಾತ್ರ ಇನ್ನೂ ಅನೌನ್ಸ್ ಆಗಿಲ್ಲ. ಕೆಜಿಎಫ್ 2 ಸಿನಿಮಾ ಯಶಸ್ವಿ ಬೆನ್ನೆಲ್ಲೆ ಯಶ್ ನಟನೆಯ ಚಿತ್ರಕ್ಕೆ ಬೇಡಿಕೆ ಬಂದಿದೆ. ಇವರ ನಟನೆಯ ಅನೇಕ ಚಿತ್ರಗಳನ್ನು ಡಬ್ ಮಾಡಲು ಬೇರೆ ಬೇರೆ ಭಾಷೆಯ ನಿರ್ಮಾಪಕರು ತುದಿಗಾಲಲ್ಲಿ ನಿಂತಿದ್ದಾರಂತೆ. ಇದನ್ನೂ ಓದಿ: ಸಿನಿಮಾಗಾಗಿ ಕಂಬಳದ ಕೋಣ ಓಡಿಸಿದ ರಿಯಲ್ ಹೀರೋ ಶ್ರೀನಿವಾಸ್ ಗೌಡ

    ಲಕ್ಕಿ ಸಿನಿಮಾ ವಿಶೇಷವಾಗಿದೆ. ನಾಯಕ ನಾಯಕಿಯ ಪ್ರೇಮಕಥೆಯಲ್ಲಿ ನಾಯಿಗೂ ವಿಶೇಷ ಸ್ಥಾನವನ್ನು ಕಲ್ಪಿಸಲಾಗಿದೆ. ಅಲ್ಲದೇ, ಯಶ್ ಗೆಳೆಯನಾಗಿ ಶರಣ್ ನಟಿಸಿದ್ದಾರೆ. ಸಾಧು ಕೋಕಿಲಾ ಕೂಡ ವಿಭಿನ್ನ ಬಗೆಯ ಪಾತ್ರವನ್ನು ಮಾಡಿದ್ದಾರೆ.