Tag: Raghav Chadda

  • ರಾಜಸ್ಥಾನದಲ್ಲಿ ನಡೆಯಲಿದೆ ಪರಿಣಿತಿ- ರಾಘವ್ ಮದುವೆ

    ರಾಜಸ್ಥಾನದಲ್ಲಿ ನಡೆಯಲಿದೆ ಪರಿಣಿತಿ- ರಾಘವ್ ಮದುವೆ

    ಬಾಲಿವುಡ್ (Bollywood) ನಟಿ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ (Raghav Chadda) ಇತ್ತೀಚಿಗಷ್ಟೇ ಉಂಗುರ ಬದಲಿಸುವ ಮೂಲಕ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ರಾಜಸ್ಥಾನದಲ್ಲಿ ಪರಿಣಿತಿ- ರಾಘವ್ ಮದುವೆ ನಡೆಯಲಿದೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ. ಇದನ್ನೂ ಓದಿ:ಜೂನ್‌ನಲ್ಲಿ ಅಂಬಿ ಪುತ್ರನ ಅದ್ದೂರಿ ಮದುವೆ- ಆಮಂತ್ರಣ ಪತ್ರಿಕೆ ಇಲ್ಲಿದೆ

    ಬಿಟೌನ್ ‘ಲವ್ ಬರ್ಡ್ಸ್’ ರಾಘವ್ – ಪರಿಣಿತಿ ಚೋಪ್ರಾ (Parineeti Chopra) ಸಾಕಷ್ಟು ವರ್ಷಗಳ ಡೇಟಿಂಗ್ ನಂತರ ದೆಹಲಿಯಲ್ಲಿ ಆಪ್ತರ ಸಮ್ಮುಖದಲ್ಲಿ ಮೇ 13ರಂದು ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು. ಈಗ ಈ ಜೋಡಿಯ ಮದುವೆ ಯಾವಾಗ? ಎಲ್ಲಿ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.

    ಉದಯ್‌ಪುರ, ಜೈಪುರ ಸೇರಿದಂತೆ ಹಲವು ಕಡೆ ಪರಿಣಿತಿ ಜೋಡಿ ಮದುವೆ ಸ್ಥಳ ನೋಡಿದ್ದಾರೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ, ರಾಜಸ್ಥಾನದಲ್ಲಿ (Rajasthan) ಮದುವೆ ಸ್ಥಳ ನಿಗದಿಯಾಗಿದೆ ಎಂದು ಹೇಳಲಾಗುತ್ತಿದೆ. ಇದೇ ಸೆಪ್ಟೆಂಬರ್‌ನಿಂದ ನವೆಂಬರ್ ನಡುವೆ ಅದ್ದೂರಿ ಮದುವೆಯಾಗಲು ಈ ಜೋಡಿ ನಿರ್ಧಾರ ಮಾಡಿದ್ದಾರೆ.

    ಪರಿಣಿತಿ- ರಾಘವ್ ಮದುವೆಯಲ್ಲಿ ರಾಜಕೀಯ- ಬಾಲಿವುಡ್ ಗಣ್ಯರ ದಂಡೇ ಇರಲಿದೆ. ಮದುವೆಗೆ ಈಗಿಂದಲೇ ಸಿದ್ಧತೆ ಭರದಿಂದ ಸಾಗುತ್ತಿದೆ. ಸದ್ಯದಲ್ಲೇ ಈ ಬಗ್ಗೆ ಅಧಿಕೃತ ಅಪ್‌ಡೇಟ್ ಸಿಗಲಿದೆ.

  • ಇಂದಿನಿಂದ ಪಂಜಾಬ್ ಪ್ರತಿಮನೆಗೂ 300 ಯೂನಿಟ್ ಉಚಿತ ವಿದ್ಯುತ್ ಪೂರೈಕೆ: ಭಗವಂತ್ ಮಾನ್

    ಇಂದಿನಿಂದ ಪಂಜಾಬ್ ಪ್ರತಿಮನೆಗೂ 300 ಯೂನಿಟ್ ಉಚಿತ ವಿದ್ಯುತ್ ಪೂರೈಕೆ: ಭಗವಂತ್ ಮಾನ್

    ಚಂಡೀಗಢ: ಪಂಜಾಬ್‍ನಲ್ಲಿ ಜುಲೈ 1ರಿಂದ ಗೃಹ ಬಳಕೆಗಾಗಿ ತಿಂಗಳಿಗೆ 300 ಯೂನಿಟ್‍ಗಳ ಉಚಿತ ವಿದ್ಯುತ್ ಪೂರೈಸುವುದಾಗಿ ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಸರ್ಕಾರ ಘೋಷಿಸಿತ್ತು. ಅದರಂತೆ ಇಂದಿನಿಂದ ಪಂಜಾಬ್‍ನ ಪ್ರತಿ ಮನೆಗೂ 300 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ಪೂರೈಸುತ್ತಿದೆ.

    2022 ರ ಪಂಜಾಬ್ ವಿಧಾನಸಭಾ ಚುನಾವಣೆ ವೇಳೆ ಆಮ್ ಆದ್ಮಿ ಪಕ್ಷ ನೀಡಿದ ಪ್ರಮುಖ ಭರವಸೆಗಳಲ್ಲಿ ಪ್ರತಿ ಮನೆಗೆ 300 ಯೂನಿಟ್ ಉಚಿತ ವಿದ್ಯುತ್ ನೀಡುವುದು ಕೂಡ ಒಂದಾಗಿತ್ತು. ಅದರಂತೆ ಜುಲೈ 1 ರಿಂದ ಪ್ರತಿ ಮನೆಗೆ 300 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಎಎಪಿ ಸರ್ಕಾರ ಸೋಮವಾರ ಘೋಷಿಸಿತ್ತು. ಇದನ್ನೂ ಓದಿ : ಹೋಂ ವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿ ಕಿವಿಯಲ್ಲಿ ರಕ್ತ ಬರುವಂತೆ ಹೊಡೆದ – ಶಿಕ್ಷಕನ ವಿರುದ್ಧ ಪೋಷಕರ ಆಕ್ರೋಶ

    ಈ ಕುರಿತಂತೆ ಟ್ವೀಟ್ ಮಾಡಿರುವ ಭಗವಂತ ಮಾನ್ ಅವರು, ಹಿಂದಿನ ಸರ್ಕಾರಗಳು ಚುನಾವಣೆಯ ಸಮಯದಲ್ಲಿ ಭರವಸೆಗಳನ್ನು ನೀಡುತ್ತಿದ್ದವು. ಅವರು ನೀಡಿದ ಭರವಸೆಗಳನ್ನು ಈಡೇರಿಸುವಷ್ಟರಲ್ಲಿ 5 ವರ್ಷ ಕಳೆದೆ ಹೋಗುತ್ತಿತ್ತು. ಆದರೆ ನಮ್ಮ ಸರ್ಕಾರ ಪಂಜಾಬ್ ಇತಿಹಾಸದಲ್ಲಿಯೇ ಹೊಸ ಮಾದರಿಯನ್ನು ಸ್ಥಾಪಿಸಿದೆ. ನಾವು ಪಂಜಾಬ್ ಜನತೆಗೆ ನೀಡಿದ ಭರವಸೆಯನ್ನು ಇಂದು ಈಡೇರಿಸುತ್ತಿದ್ದೇವೆ. ಇಂದಿನಿಂದ ಪಂಜಾಬ್‍ನ ಪ್ರತಿ ಕುಟುಂಬಗೂ ತಿಂಗಳಿಗೆ 300 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡುತ್ತಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ : ಕೇವಲ 40ರೂ.ನಲ್ಲಿ ಧೋನಿ ಮಂಡಿ ನೋವು ಗುಣಪಡಿಸಿದ ಹಳ್ಳಿ ವೈದ್ಯ!

    ಮತ್ತೊಂದೆಡೆ ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಎಎಪಿ ನಾಯಕ ಮತ್ತು ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರು, ಇಂದು ಐತಿಹಾಸಿಕ ದಿನವಾಗಿದ್ದು, ದೆಹಲಿಯ ನಂತರ ಜನರಿಗೆ ಉಚಿತ ವಿದ್ಯುತ್ ಒದಗಿಸುತ್ತಿರುವ ಎರಡನೇ ರಾಜ್ಯ ಪಂಜಾಬ್ ಆಗಿದೆ. ಪಂಜಾಬ್ ಜನತೆಗೆ ಕೇಜ್ರಿವಾಲ್ ನೀಡಿದ ಗ್ಯಾರಂಟಿ ನಿಜವಾಗುತ್ತಿದೆ ಎಂದು ಹೇಳಿದ್ದಾರೆ.

    Live Tv

  • ಅರವಿಂದ್ ಕೇಜ್ರಿವಾಲ್, ರಾಘವ್ ಚಡ್ಡಾ ಪಂಜಾಬ್ ಲೂಟಿ ಮಾಡಲು ಬಂದಿದ್ದಾರೆ: ಚರಣ್‍ಜಿತ್ ಸಿಂಗ್ ಚನ್ನಿ

    ಅರವಿಂದ್ ಕೇಜ್ರಿವಾಲ್, ರಾಘವ್ ಚಡ್ಡಾ ಪಂಜಾಬ್ ಲೂಟಿ ಮಾಡಲು ಬಂದಿದ್ದಾರೆ: ಚರಣ್‍ಜಿತ್ ಸಿಂಗ್ ಚನ್ನಿ

    ಚಂಡೀಗಢ: ಅರವಿಂದ್ ಕೇಜ್ರಿವಾಲ್ ಮತ್ತು ಅವರ ದೆಹಲಿ ಕುಟುಂಬಸ್ಥರಾದ ರಾಘವ್ ಚಡ್ಡಾ, ಇತರ ಹೊರಗಿನವರು ಪಂಜಾಬ್ ಅನ್ನು ಲೂಟಿ ಮಾಡಲು ಬಂದಿದ್ದಾರೆ ಎಂದು ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ, ಆಮ್ ಆದ್ಮಿ ಪಕ್ಷವನ್ನು (ಎಎಪಿ) ಬ್ರಿಟಿಷ್ ರಾಜ್‍ಗೆ ಹೋಲಿಸಿದ್ದಾರೆ.

    ಬ್ರಿಟಿಷರು ಭಾರತವನ್ನು ಲೂಟಿ ಮಾಡಲು ಹೇಗೆ ಬಂದಿದ್ದರು, ಅದೇ ರೀತಿ ಕೇಜ್ರಿವಾಲ್ ಮತ್ತು ರಾಘವ್ ಚಡ್ಡಾ ಸೇರಿದಂತೆ ಇತರ ಹೊರಗಿನವರು ಪಂಜಾಬ್ ಅನ್ನು ಲೂಟಿ ಮಾಡಲು ಬಂದಿದ್ದಾರೆ. ಆದರೆ ಮೊಘಲರು ಮತ್ತು ಬ್ರಿಟಿಷರಿಗೆ ತಮ್ಮ ಸ್ಥಾನವನ್ನು ತೋರಿಸಿದಂತೆ ಪಂಜಾಬ್ ಇವರಿಗೂ ತಮ್ಮ ಸ್ಥಾನವನ್ನು ತೋರಿಸುತ್ತದೆ ಎಂದು ಚನ್ನಿ ಹೇಳಿದ್ದಾರೆ.  ಇದನ್ನೂ ಓದಿ: ಪತ್ನಿ ಬಿಟ್ಟು ಪ್ರೇಯಸಿಯನ್ನು ಮದುವೆಯಾಗಲು ಹೊರಟಿದ್ದ ಭೂಪ – ಕುಟುಂಬಸ್ಥರಿಂದಲೇ ಬಿತ್ತು ಗೂಸಾ

    ಚಮ್ಕೌರ್ ಸಾಹಿಬ್ ವಿಧಾನಸಭಾ ಕ್ಷೇತ್ರದಲ್ಲಿನ ಅಕ್ರಮ ಗಣಿಗಾರಿಕೆ ಆರೋಪದಡಿ ರೋಪರ್ ಜಿಲ್ಲಾಡಳಿತ ಮತ್ತು ಪೊಲೀಸರಿಂದ ಕ್ಲೀನ್ ಚಿಟ್ ಪಡೆದ ಬಳಿಕ ಚರಣ್‍ಜಿತ್ ಸಿಂಗ್ ಚನ್ನಿ ಅವರು ಕೇಜ್ರಿವಾಲ್ ಅವರನ್ನು ಸುಳ್ಳುಗಾರ ಎಂದು ಕರೆದಿದ್ದಾರೆ. ಕೇಜ್ರಿವಾಲ್ ನನ್ನ ವಿರುದ್ಧ ಹಲವಾರು ಆರೋಪಗಳನ್ನು ಮಾಡಲು ಪ್ರಯತ್ನಿಸಿದರು. ಆದರೆ ಆದ್ಯಾವುದು ನಿಜವಲ್ಲ. ಕೇಜ್ರಿವಾಲ್ ನನ್ನ ವಿರುದ್ಧ ತನಿಖೆಗೆ ಒತ್ತಾಯಿಸಿ ರಾಜ್ಯಪಾಲರ ಬಳಿಗೆ ಹೋಗಿದ್ದರು. ಆದರೆ ಅಂತಿಮವಾಗಿ ಸತ್ಯ ಮೇಲುಗೈ ಸಾಧಿಸಿತು. ಸುಳ್ಳಿನ ಆಧಾರದ ಮೇಲೆ ಸರ್ಕಾರ ರಚನೆಯಾಗಲ್ಲ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಸುಳ್ಳುಗಾರರ ಪಕ್ಷ: ಅಖಿಲೇಶ್ ಯಾದವ್