Tag: Raghav Chadha

  • ದೆಹಲಿಯಲ್ಲಿ ನಡೆಯಲಿದೆ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ ನಿಶ್ಚಿತಾರ್ಥ

    ದೆಹಲಿಯಲ್ಲಿ ನಡೆಯಲಿದೆ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ ನಿಶ್ಚಿತಾರ್ಥ

    ಬಾಲಿವುಡ್ (Bollywood)  ಬ್ಯೂಟಿ ಪರಿಣಿತಿ ಚೋಪ್ರಾ (Parineeti Chopra) ಮತ್ತು ರಾಜಕಾರಣಿ ರಾಘವ್ ಚಡ್ಡಾ (Raghav Chadha) ಲವ್ವಿ-ಡವ್ವಿ ವಿಚಾರ ಸದ್ಯದ ಹಾಟ್ ಟಾಪಿಕ್ ಆಗಿದೆ. ಪರಸ್ಪರ ಒಬ್ಬರನೊಬ್ಬರು ಪ್ರೀತಿಸುತ್ತಿರುವ ಈ ಜೋಡಿ ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ದೆಹಲಿಯಲ್ಲಿ ಈ ವಾರ ಅದ್ದೂರಿ ನಿಶ್ಚಿತಾರ್ಥ ನಡೆಯಲಿದೆ.

    ಪ್ರಿಯಾಂಕಾ ಚೋಪ್ರಾ (Priyanka Chopra) ಸಂಬಂಧಿ ನಟಿ ಪರಿಣಿತಿ ಚೋಪ್ರಾ ಕಳೆದ ಕೆಲ ದಿನಗಳಿಂದ ರಾಘವ್ ಚಡ್ಡಾ ಜೊತೆಗಿನ ಮದುವೆ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಇತ್ತೀಚಿಗೆ ಲಂಡನ್ ಮತ್ತು ಮುಂಬೈ ಏರ್‌ಪೋರ್ಟ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇಬ್ಬರ ಮದುವೆ ಬಗ್ಗೆ ಅದೆಷ್ಟೇ ಚರ್ಚೆ ನಡೆಯುತ್ತಾ ಇದ್ದರೂ ಇಬ್ಬರೂ ಸೈಲೆಂಟ್ ಆಗಿದ್ದಾರೆ.

    ಹೀಗಿರುವಾಗ ಈ ವಾರವೇ ದೆಹಲಿಯಲ್ಲಿ ರಾಜಕಾರಣಿ ರಾಘವ್ ಜೊತೆ ಪರಿಣಿತಿ ಎಂಗೇಜ್‌ಮೆಂಟ್ ಫಿಕ್ಸ್ ಆಗಿದೆ. ಅದಕ್ಕಾಗಿ ಈಗಾಗಲೇ ಪರಿಣಿತಿ ಚೋಪ್ರಾ ದೆಹಲಿಗೆ (Dehli) ತೆರಳಿದ್ದಾರೆ. ನಿಶ್ಚಿತಾರ್ಥದ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಕುಟುಂಬದ ಆಪ್ತರಷ್ಟೇ ಈವೆಂಟ್‌ನಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ:ಇಬ್ರಾಹಿಂ ಅಲಿ ಖಾನ್ ಜೊತೆಗಿನ ಡೇಟಿಂಗ್ ಸುದ್ದಿ ನಿಜಾನಾ? ಪಾಲಕ್ ತಿವಾರಿ ಸ್ಪಷ್ಟನೆ

    ಪರಿಣಿತಿ ಚೋಪ್ರಾ ಎಂಗೇಜ್‌ಮೆಂಟ್‌ಗೆ ಭಾಗಿಯಾಗಲು ಈಗಾಗಲೇ ಪ್ರಿಯಾಂಕಾ ಚೋಪ್ರಾ- ನಿಕ್ ಜೋನಸ್ ಮತ್ತು ಮೀರಾ ಚೋಪ್ರಾ ಕೂಡ ದೆಹಲಿಯಲ್ಲಿದ್ದಾರೆ. ಅಧಿಕೃತವಾಗಿ ಈ ಬಗ್ಗೆ ಹೇಳದೇ ಇದ್ದರೂ ಕೂಡ ಪರಿಣಿತಿ-ರಾಘವ್ ನಿಶ್ಚಿತಾರ್ಥದ ಸಿದ್ಧತೆ ತೆರೆಮರೆಯಲ್ಲಿ ಭರದಿಂದ ನಡೆಯುತ್ತಿದೆ. ಸದ್ಯದಲ್ಲೇ ಈ ಜೋಡಿ ಹಸೆಮಣೆ ಏರಲಿದ್ದಾರೆ.

  • ಆಪ್ ನಾಯಕನ ಜೊತೆ ನಟಿ ಪರಿಣೀತಿ ಚೋಪ್ರಾ ಡೇಟಿಂಗ್ : ವೈರಲ್ ಆದ ಫೋಟೋ

    ಆಪ್ ನಾಯಕನ ಜೊತೆ ನಟಿ ಪರಿಣೀತಿ ಚೋಪ್ರಾ ಡೇಟಿಂಗ್ : ವೈರಲ್ ಆದ ಫೋಟೋ

    ಸಾಮಾನ್ಯವಾಗಿ ಬಾಲಿವುಡ್ ನಾಯಕಿಯರು ಕ್ರಿಕೆಟ್ ಆಟಗಾರರ ಜೊತೆಗಿನ ಡೇಟಿಂಗ್ (Dating) ವಿಚಾರಕ್ಕಾಗಿ ಸುದ್ದಿಯಲ್ಲಿರುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ರಾಜಕಾರಣಿಗಳ ಜೊತೆಗಿನ ನಟಿಯರು ಕಾಣಿಸಿಕೊಳ್ಳುತ್ತಿದ್ದಾರೆ. ಮೊನ್ನೆಯಷ್ಟೇ ನಟಿ ಸ್ವರ ಭಾಸ್ಕರ್ ರಾಜಕಾರಣಿಯನ್ನು ಮದುವೆಯಾದರು. ಇದೀಗ ಪರಿಣೀತ ಚೋಪ್ರಾ (Parineeti Chopra) ಆಪ್ (Aam Aadmi Party) ನಾಯಕನ ಹಿಂದೆ ಬಿದ್ದಿದ್ದಾರೆ. ಪದೇ ಪದೇ ಹೋಟೆಲ್ ಗಳಲ್ಲಿ ಭೇಟಿ ಆಗುತ್ತಿದ್ದಾರೆ.

    ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ (Raghav Chadha) ಮತ್ತು ಪರಿಣೀತಿ ಬುಧವಾರ ಮತ್ತು ಗುರುವಾರ ಬೇರೆ ಬೇರೆ ಹೋಟೆಲ್ ಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಅಲ್ಲದೇ, ಇಬ್ಬರೂ ಒಂದೇ ಬಣ್ಣದ ಬಟ್ಟೆಗಳನ್ನು ಧರಿಸಿದ್ದು ಕೂಡ ಅನುಮಾನಕ್ಕೆ ಕಾರಣವಾಗಿದೆ. ಪದೇ ಪದೇ ಹೋಟೆಲ್ ಗಳಲ್ಲೇ ಕಾಣಿಸಿಕೊಂಡಿದ್ದರಿಂದ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರಾ ಎನ್ನುವ ವಿಚಾರ ಮುನ್ನೆಲೆಗೆ ಬಂದಿದೆ. ಇದನ್ನೂ ಓದಿ: ಹೊಸ ಫೋಟೋಶೂಟ್‌ನಲ್ಲಿ ಮಹಾಲಕ್ಷ್ಮಿಯಂತೆ ಕಂಗೊಳಿಸಿದ ನಟಿ ಅಮೂಲ್ಯ

    ಮೂಲಗಳ ಪ್ರಕಾರ ರಾಘವ್ ಚಡ್ಡಾ ಹಾಗೂ ಪರಿಣೀತಿ ಒಂದೇ ಕಾಲೇಜಿನಲ್ಲಿ ಓದಿದವರಂತೆ. ಅಲ್ಲದೇ, ಹಲವು ದಿನಗಳಿಂದಲೂ ಅವರು ಸ್ನೇಹಿತರು. ಆಗಾಗ್ಗೆ ಇಬ್ಬರೂ ಹೀಗೆ ಸಿಗುತ್ತಲೇ ಇರುತ್ತಾರಂತೆ. ಅದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎನ್ನುವವರು ಇದ್ದಾರೆ. ಜೊತೆಗೆ ಪರಿಣೀತಿ ಮತ್ತು ಚಡ್ಡಾ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಹೇಳುವವರು ಇದ್ದಾರೆ.

    ಬುಧವಾರ ಗುರುಗ್ರಾಮ ಹೋಟೆಲ್ ನಲ್ಲಿ ಈ ಜೋಡಿ ರಾತ್ರಿ ಊಟ ಮಾಡಿದ್ದರೆ, ಗುರುವಾರ ಮಧ್ಯಾಹ್ನ ಮುಂಬೈನ ಬಾಂದ್ರಾದ ಹೋಟೆಲ್ ನಲ್ಲಿ ಒಟ್ಟಿಗೆ ಕಾಣಿಸಿಕೊಂಡು ಅನುಮಾನಕ್ಕೆ ಕಾರಣರಾಗಿದ್ದಾರೆ. ಬೇರೆ ಬೇರೆ ನಗರಗಳಲ್ಲಿ ಈ ಜೋಡಿ ಡಿನ್ನರ್ ಮಾಡಿದ್ದಕ್ಕೆ ನಾನಾ ಕಾರಣಗಳನ್ನು ಹುಡುಕುತ್ತಿರುವುದಂತೂ ಸತ್ಯ.

  • ನಿಮ್ಮ ಮದುವೆ ಯಾವಾಗ – ರಾಘವ್ ಚಡ್ಡಾಗೆ ಪ್ರಶ್ನೆ

    ನಿಮ್ಮ ಮದುವೆ ಯಾವಾಗ – ರಾಘವ್ ಚಡ್ಡಾಗೆ ಪ್ರಶ್ನೆ

    ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಇಂದು ಚಂಡೀಗಢದಲ್ಲಿ ಡಾ. ಗುರುಪ್ರೀತ್ ಕೌರ್ ಅವರನ್ನು ವಿವಾಹವಾಗಲಿದ್ದಾರೆ. ಈ ನಡುವೆ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರು ಯಾವಾಗ ಮದುವೆಯಾಗುತ್ತಾರೆ ಎಂಬ ಚರ್ಚೆ ಭಾರೀ ಜೋರಾಗಿದೆ.

    Bhagwant Mann

    ಈ ಕುರಿತಂತೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ ರಾಘವ್ ಚಡ್ಡಾ ಅವರು, ಭಾರತದ ಸಂಪ್ರದಾಯದ ಪ್ರಕಾರ ಕುಟುಂಬದಲ್ಲಿ ಮೊದಲು ಹಿರಿಯರು ಮದುವೆಯಾಗುತ್ತಾರೆ. ಕಿರಿಯರು ಹಿರಿಯರನ್ನು ಅನುಸರಿಸುತ್ತಾರೆ ಎಂದು ಹೇಳುವ ಮೂಲಕ ಭಗವಂತ್ ಮಾನ್ ಅವರನ್ನು “ಹಿರಿಯ ಸಹೋದರ” ಎಂದು ಉಲ್ಲೇಖಿಸಿದ್ದಾರೆ.  ಇದನ್ನೂ ಓದಿ: ನಾಳೆ ಪಂಜಾಬ್ ಸಿಎಂ 2ನೇ ಮದುವೆ – ಮತ್ತೆ ಹಸೆಮಣೆ ಏರಲಿದ್ದಾರೆ ಭಗವಂತ್ ಮಾನ್

     

    ಮದುವೆಯಾಗುವುದಕ್ಕೆ ಈಗಾಗಲೇ ಆಫರ್‌ಗಳು ಬರುತ್ತಿದೆ. ಸಾಕಷ್ಟು ಮಂದಿ ಮದುವೆ ಯಾವಾಗ ಎಂದು ಕೇಳುತ್ತಿದ್ದಾರೆ. ಮದುವೆಯಾಗಲು ನಿರ್ಧರಿಸಿದ ಬಳಿಕ ಖಂಡಿತವಾಗಿಯೂ ನನ್ನ ಮದುವೆ ಯಾವಾಗ ಎಂಬುವುದನ್ನು ತಿಳಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಕಾಳಿ ವಿವಾದ ಆಯ್ತು, ಇದೀಗ ಶಿವ, ಪಾರ್ವತಿ ಪಾತ್ರಧಾರಿಗಳ ಚಿತ್ರ ಹಂಚಿಕೊಂಡ ಲೀನಾ

    ಭಗವಂತ್ ಮಾನ್ ಅವರ ಮದುವೆ ಕಾರ್ಯಕ್ರಮದ ನಿರ್ವಹಣೆಯನ್ನು ರಾಘವ್ ಚಡ್ಡಾ ಅವರು ವಹಿಸಿದ್ದು, ಈ ಕುರಿತಂತೆ ಮಾತನಾಡಿದ ಅವರು, ಇದೊಂದು ಖಾಸಗಿ ಸಮಾರಂಭವಾಗಿದ್ದು, ಬೆರಳೆಣಿಕೆಯಷ್ಟು ಪಕ್ಷದ ಸದಸ್ಯರು ಮತ್ತು ಎರಡೂ ಕುಟುಂಬಸ್ಥರ ಆಪ್ತ ವರ್ಗದವರು ಮಾತ್ರ ಭಾಗವಹಿಸಲಿದ್ದಾರೆ. ಅಲ್ಲದೇ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಕೂಡ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಮಿತ್‌ ಶಾ ಮನೆ ಕೆಡವಲು ಬುಲ್ಡೋಜರ್‌ ಬಳಸಿ: ರಾಘವ್‌ ಛಡ್ಡಾ

    ಅಮಿತ್‌ ಶಾ ಮನೆ ಕೆಡವಲು ಬುಲ್ಡೋಜರ್‌ ಬಳಸಿ: ರಾಘವ್‌ ಛಡ್ಡಾ

    ನವದೆಹಲಿ: ಕೇಂದ್ರ ಗೃಹ ಸಚಿವರೇ (ಅಮಿತ್‌ ಶಾ) ಈ ಗಲಭೆಗಳನ್ನು ರೂಪಿಸುತ್ತಿದ್ದಾರೆ. ಬುಲ್ಡೋಜರ್ ಬಳಸುವುದಾದರೆ ಗೃಹ ಸಚಿವರ ಮನೆ ನೆಲಸಮ ಮಾಡಲು ಬಳಸಿ ಎಂದು ಎಎಪಿ ಸಂಸದ ರಾಘವ್‌ ಛಡ್ಡಾ ಕಿಡಿಕಾರಿದ್ದಾರೆ.

    ಜಹಾಂಗೀರ್‌ಪುರಿಯಲ್ಲಿ ದೆಹಲಿ ಉತ್ತರ ಪಾಲಿಕೆ ನಡೆಸಿದ ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿದ ಛಡ್ಡಾ ಅವರು, ಕೇಂದ್ರ ಗೃಹ ಸಚಿವರೇ ಗಲಭೆಗಳನ್ನು ರೂಪಿಸುತ್ತಿದ್ದಾರೆ. ಅವರ ಮನೆ ಧ್ವಂಸ ಮಾಡಲು ಬುಲ್ಡೋಜರ್‌ ಬಳಸಿ. ಆಗ ಗಲಭೆಗಳು ನಿಲ್ಲುತ್ತವೆ ಎಂದು ಬಿಜೆಪಿ ನೇತೃತ್ವದ ಪಾಲಿಕೆಗೆ ಕುಟುಕಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಹೈಡ್ರಾಮಾ – ಸುಪ್ರೀಂನಿಂದ ತಡೆ ಆದೇಶ ಬಂದ ಬಳಿಕವೂ 2 ಗಂಟೆ ಘರ್ಜಿಸಿದ ಜೆಸಿಬಿ

    ಬಿಜೆಪಿಯು ಕಳೆದ ಎಂಟು ವರ್ಷಗಳಲ್ಲಿ ಬಾಂಗ್ಲಾದೇಶಿಗಳು ಮತ್ತು ರೋಹಿಂಗ್ಯಾಗಳಿಗೆ ಭಾರತದಾದ್ಯಂತ ವಿವಿಧ ಸ್ಥಳಗಳಲ್ಲಿ ಪುನರ್ವಸತಿ ಕಲ್ಪಿಸಿದೆ. ಅವರನ್ನು ಕೇವಲ ಕೋಮುಗಲಭೆ ಸೃಷ್ಟಿಸಲು ಬಳಸಲಾಗುತ್ತಿದೆ. ಮುಂದಿನ ಗಲಭೆಗಳ ಸ್ಥಳದ ಬಗ್ಗೆ ನಿಮಗೆ ತಿಳಿಯಬೇಕಾದರೆ, ಬಾಂಗ್ಲಾದೇಶಿಗಳು ಮತ್ತು ರೊಹಿಂಗ್ಯಾಗಳನ್ನು ಎಲ್ಲಿ ಸ್ಥಳಾಂತರಿಸಿದ್ದಾರೆ ಎಂಬ ಪಟ್ಟಿಯನ್ನು ಬಿಜೆಪಿಯಿಂದ ಕೇಳಿ ಎಂದು ತಿಳಿಸಿದ್ದಾರೆ.

    ಬಿಜೆಪಿಯವರು 15 ವರ್ಷಗಳ ಕಾಲ ನಗರಸಭೆಯಲ್ಲಿ ಆಡಳಿತ ನಡೆಸಿದ್ದು, ಬಿಜೆಪಿ ನಾಯಕರು ಲಂಚ ಪಡೆದು ಅಕ್ರಮ ಕಟ್ಟಡಗಳಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಇಂದು ಈ ಅಕ್ರಮ ಕಟ್ಟಡಗಳನ್ನು ಕೆಡವಲು ಹೊರಟಿದ್ದಾರೆ. ಅದಕ್ಕೆ ಅವಕಾಶ ಮಾಡಿಕೊಡಲು ಲಂಚ ಪಡೆದ ಬಿಜೆಪಿ ನಾಯಕರ ಮನೆಗಳನ್ನೂ ಕೆಡವಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ದ್ವೇಷದ ಬುಲ್ಡೋಜರ್‌ಗಳನ್ನು ಆಫ್ ಮಾಡಿ: ರಾಹುಲ್ ಗಾಂಧಿ

    ಹನುಮ ಜಯಂತಿ ವೇಳೆ ಗಲಭೆಗೆ ಕಾರಣವಾದ ಜಹಾಂಗೀರ್‌ಪುರಿಯಲ್ಲಿ ಕಟ್ಟಡಗಳ ತೆರವು ಕಾರ್ಯಾಚರಣೆಗೆ ಬಿಜೆಪಿ ನೇತೃತ್ವದ ಉತ್ತರ ದೆಹಲಿ ಪಾಲಿಕೆ ಕ್ರಮಕೈಗೊಂಡಿತ್ತು. ಬುಲ್ಡೋಜರ್‌ ಮೂಲಕ ಬುಧವಾರ ಬೆಳಗ್ಗೆ ಕಾರ್ಯಾಚರಣೆ ಆರಂಭಿಸಿತ್ತು. ಆದರೆ ಸುಪ್ರೀಂ ಕೋರ್ಟ್‌ ಕಾರ್ಯಾಚರಣೆಗೆ ತಡೆ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ವಿಚಾರಣೆ ನಡೆಸಲಿದೆ.

  • ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಂಡರೆ 25,000 ಬಹುಮಾನ: ಎಎಪಿ

    ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಂಡರೆ 25,000 ಬಹುಮಾನ: ಎಎಪಿ

    ಚಂಢೀಗಢ: ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಪಂಜಾಬ್ ಮುಖ್ಯಮಂತ್ರಿ ಚರಣ್ ಜೀತ್ ಸಿಂಗ್ ಚನ್ನಿ ಕ್ರಮ ಕೈಗೊಂಡರೆ, ಪ್ರತಿಯೊಂದು ಪ್ರಕರಣಕ್ಕೆ ಅವರಿಗೆ 25,000 ಬಹುಮಾನ ನೀಡುವುದಾಗಿ ಆಮ್ ಆದ್ಮಿ ಹೇಳಿದೆ.

    ಮರಳು ಅಕ್ರಮ ಗಣಿಗಾರಿಕೆ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಪುರಾವೆ ಕೊಟ್ಟವರಿಗೆ 25,000 ಬಹುಮಾನ ನೀಡಲಾಗುವುದು ಎಂದು ಚನ್ನಿ ಗುರುವಾರವಷ್ಟೇ ಹೇಳಿದ್ದರು. ಅವರು ಈ ಘೋಷಣೆ ಮಾಡಿದ ಮರುದಿನ ಸುದ್ದಿಗೋಷ್ಠಿ ನಡೆಸಿದ ಎಎಪಿ ವಕ್ತಾರ ರಾಘವ್ ಛಡ್ಡಾ, ಪಂಜಾಬ್ ಮುಖ್ಯಮಂತ್ರಿ ಚರಣ್ ಜೀತ್ ಸಿಂಗ್ ಚನ್ನಿ ಕ್ರಮ ಕೈಗೊಂಡರೆ, ಪ್ರತಿಯೊಂದು ಪ್ರಕರಣಕ್ಕೆ ಅವರಿಗೆ 25,000 ಬಹುಮಾನ ನೀಡುವುದಾಗಿ ಸವಾಲು ಎಸೆದಿದ್ದಾರೆ. ಮರಳು ಅಕ್ರಮ ಗಣಿಗಾರಿಕೆಯನ್ನು ತಡೆಯುವುದು ನಿಜವಾದ ಉದ್ದೇಶವಾಗಿದ್ದರೆ ಅದರ ವಿರುದ್ಧ ಕ್ರಮ ಕೈಗೊಳ್ಳಿ ಎಂದಿದ್ದಾರೆ. ಇದನ್ನೂ ಓದಿ:  ಮತಾಂತರ ನಿಷೇಧ ಕಾಯ್ದೆ ಜಾರಿ ಸರಿಯಿದೆ: ಬಿವೈ ರಾಘವೇಂದ್ರ

    ಚನ್ನಿ ಅವರ ವಿಧಾನಸಭೆ ಕ್ಷೇತ್ರವಾದ ರಾಮ್‍ಪಂತ್‍ನಲ್ಲಿಯೇ ಮರಳು ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಯಾವ ಸ್ಥಳಗಳಲ್ಲಿ ಮರಳು ಗಣಿಗಾರಿಕೆ ನಡೆಯುತ್ತಿದೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳಿಂದ ಕೇವಲ ಐದು ನಿಮಿಷಗಳಲ್ಲಿ ಮುಖ್ಯಮಂತ್ರಿ  ಅವರು ಪಡೆಯಬಹುದು. ನೀವು ನನ್ನ ಜೊತೆ ಬನ್ನಿ. ಯಾವ ಸ್ಥಳಗಳಲ್ಲಿ ಮರಳು ಗಣಿಗಾರಿಕೆ ನಡೆಯುತ್ತಿದೆ ಎಂದು ನಾನು ನಿಮಗೆ ತೋರಿಸುತ್ತೇನೆ ಎಂದು ಅವರು ಸವಾಲು ಹಾಕಿದ್ದಾರೆ.  ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸುದೀಪ್ ಕುಟುಂಬ ಸಮೇತರಾಗಿ ಭೇಟಿ

    ನಿಮ್ಮ ಕ್ಷೇತ್ರದ ಜಿಂದಾಪುರ್ ಪಿಂಡ್ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದಕ್ಕೆ ನಾನು ನಿಮಗೆ ಪುರಾವೆಗಳನ್ನು, ನಿಮ್ಮ ವಿರುದ್ಧವೇ ಮೊದಲು ಎಫ್‍ಐಆರ್ ದಾಖಲಿಸಿಕೊಳ್ಳಿ. ಮುಖ್ಯಮಂತ್ರಿಯೇ ಅಕ್ರಮ ಗಣಿಗಾರಿಕೆಯ ಅತಿದೊಡ್ಡ ಮಾಫಿಯಾ ಆದಂತಿದೆ. ಚನ್ನಿ ಅವರ ವಿಧಾನಸಭೆ ಕ್ಷೇತ್ರದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದನ್ನು ಬಹಿರಂಗಪಡಿಸಿದ್ದೇವೆ ಎಂದು  ಛಡ್ಡಾ ಹೇಳಿದ್ದರು.