Tag: Raghavendra Mutt

  • ಸರ್ವಸಮರ್ಪಣೋತ್ಸವದೊಂದಿಗೆ ರಾಯರ 354 ನೇ ಆರಾಧನಾ ಮಹೋತ್ಸವಕ್ಕೆ ತೆರೆ

    ಸರ್ವಸಮರ್ಪಣೋತ್ಸವದೊಂದಿಗೆ ರಾಯರ 354 ನೇ ಆರಾಧನಾ ಮಹೋತ್ಸವಕ್ಕೆ ತೆರೆ

    ರಾಯಚೂರು: ಗುರು ರಾಯರ ಸನ್ನಿಧಿ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದಲ್ಲಿ ಏಳು ದಿನಗಳ ಕಾಲ ನಡೆದ 354 ನೇ ಆರಾಧನಾ ಮಹೋತ್ಸವಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ‌.

    ರಾತ್ರಿ ವೇಳೆ ನಡೆದ ಸರ್ವಸಮರ್ಪಣೋತ್ಸವದೊಂದಿಗೆ ರಾಯರ 354 ನೇ ಆರಾಧನಾ ಮಹೋತ್ಸವ ಹಾಗೂ ಸಪ್ತರಾತ್ರೋತ್ಸವ ಮುಕ್ತಾಯವಾಗಿದೆ.

    ಮೂಲರಾಮದೇವರ ಪೂಜೆ, ಮಹಾ ಮಂಗಳಾರತಿ, ಮಠದ ಪ್ರಾಕಾರದಲ್ಲಿ ವಾಹನೋತ್ಸವ, ರಥೋತ್ಸವ ಜೊತೆ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಎಲ್ಲಾ ಸೇವೆ ಉತ್ಸವಗಳನ್ನ ನೆರೆವೇರಿಸುವ ಮೂಲಕ ಸರ್ವಸಮರ್ಪಣೋತ್ಸವ ಆಚರಿಸಿದರು.

    ಕಟ್ಟಿಗೆ ರಥವನ್ನ ಮಠದ ಪ್ರಾಕಾರದಲ್ಲಿ ಎಳೆಯಲಾಯಿತು. ಈ ಮೂಲಕ ಆರಾಧನಾ ಮಹೊತ್ಸವ ಮುಕ್ತಾಯವಾಗಿದ್ದು, ಮಠದಲ್ಲಿ ಎಂದಿನಂತೆ ಪೂಜಾ ಕೈಂಕರ್ಯಗಳು ಮುಂದುವರೆದಿವೆ.

  • ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ – 5.46 ಕೋಟಿ ರೂ. ಕಾಣಿಕೆ ಸಂಗ್ರಹ

    ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ – 5.46 ಕೋಟಿ ರೂ. ಕಾಣಿಕೆ ಸಂಗ್ರಹ

    ರಾಯಚೂರು: ಕಲಿಯುಗ ಕಾಮಧೇನು ಮಂತ್ರಾಲಯ (Mantralaya) ಗುರುರಾಘವೇಂದ್ರ ಸ್ವಾಮಿ ಮಠದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದೆ. ಮಠದಲ್ಲಿ ಮೊದಲ ಬಾರಿಗೆ 5.46 ಕೋಟಿ ರೂ. ದಾಖಲೆಯ ಕಾಣಿಕೆ ಸಂಗ್ರಹಗೊಂಡಿದೆ.

     ಕಳೆದ 35 ದಿನಗಳಲ್ಲಿ ಒಟ್ಟು 5,46,06,555 ರೂ. ಕಾಣಿಕೆ ಸಂಗ್ರಹವಾಗಿತ್ತು. ಒಟ್ಟು ಕಾಣಿಕೆಯಲ್ಲಿ 5,30,92,555 ರೂ. ನೋಟುಗಳು. 15,14,000 ರೂ. ನಾಣ್ಯಗಳಿವೆ. 127 ಗ್ರಾಂ ಚಿನ್ನ, 1820 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ. ಇದನ್ನೂ ಓದಿ: ಆಪರೇಷನ್ ಸಿಂಧೂರಕ್ಕೆ ಜಾಗತಿಕ ಬೆಂಬಲ ಸಿಕ್ತು, ಆದ್ರೆ ಕಾಂಗ್ರೆಸ್ ಬೆಂಬಲ ಸಿಗಲಿಲ್ಲ: ಮೋದಿ ಬೇಸರ

    ಜೂನ್ ತಿಂಗಳಲ್ಲಿ ಒಟ್ಟು 5 ಕೋಟಿ 28 ಲಕ್ಷ 39,538 ರೂ. ಕಾಣಿಕೆ ಸಂಗ್ರಹವಾಗಿತ್ತು. ಈ ಬಾರಿ ಆ ದಾಖಲೆಯನ್ನು ಮುರಿದು ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ಕರ ಸೇವಕರು, ಮಠದ ಭಕ್ತರು, ಮಠದ ಸಿಬ್ಬಂದಿ ಹುಂಡಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು. ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿರುವುದಾಗಿ ರಾಯರ ಮಠದ ಆಡಳಿತ ಮಂಡಳಿ ತಿಳಿಸಿದೆ.

  • ಮಂತ್ರಾಲಯದಲ್ಲಿ ಗುರುಪೂರ್ಣಿಮೆ ಸಂಭ್ರಮ – ಅದ್ದೂರಿಯಾಗಿ ನಡೆದ ಮೃತ್ತಿಕಾ ಸಂಗ್ರಹ ಮಹೋತ್ಸವ

    ಮಂತ್ರಾಲಯದಲ್ಲಿ ಗುರುಪೂರ್ಣಿಮೆ ಸಂಭ್ರಮ – ಅದ್ದೂರಿಯಾಗಿ ನಡೆದ ಮೃತ್ತಿಕಾ ಸಂಗ್ರಹ ಮಹೋತ್ಸವ

    ರಾಯಚೂರು: ಗುರುಪೂರ್ಣಿಮೆ ಹಿನ್ನೆಲೆ ರಾಯರ ಸನ್ನಿಧಿ ಮಂತ್ರಾಲಯ (Mantralaya) ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಮೃತ್ತಿಕಾ ಸಂಗ್ರಹ ಮಹೋತ್ಸವ ಅದ್ದೂರಿಯಾಗಿ ಆಚರಿಸಲಾಯಿತು.

    ಮೆರವಣಿಗೆ ಮೂಲಕ ತುಳಸಿ ವನಕ್ಕೆ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಭೇಟಿ ನೀಡಿ ವಿಶೇಷ ಪೂಜೆಗಳನ್ನ ಸಲ್ಲಿಸಿ ಮೃತ್ತಿಕಾ ಸಂಗ್ರಹಿಸಿದರು. ಬಳಿಕ ಸುವರ್ಣ ಪಲ್ಲಕ್ಕಿಯಲ್ಲಿ ಮೃತ್ತಿಕಾವನ್ನು ಮೆರವಣಿಗೆ ಮೂಲಕ ತಂದು ರಾಯರ ವೃಂದಾವನದ ಮುಂದೆ ಇಟ್ಟು ವಿಶೇಷ ಪೂಜೆ ಸಲ್ಲಿಸಲಾಯಿತು. ಇದನ್ನೂ ಓದಿ: ಸಿಎಂ ಬದಲಾವಣೆ – ನನಗೆ ಡ್ರಾಮಾ ಕಂಪನಿ ಓಪನ್ ಮಾಡೋಕೆ ಇಷ್ಟವಿಲ್ಲ ಎಂದ ಪರಮೇಶ್ವರ್

    ಗುರುವಾರವೇ ಗುರುಪೂರ್ಣಿಮೆ ಬಂದಿರುವ ಹಿನ್ನೆಲೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು. ರಾಯರ ದರ್ಶನಕ್ಕೆ ಕರ್ನಾಟಕ, ಆಂಧ್ರ, ತೆಲಂಗಾಣ, ತಮಿಳುನಾಡು ಸೇರಿ ದೇಶದ ವಿವಿಧ ಭಾಗಗಳಿಂದ ಭಕ್ತ ಸಾಗರವೇ ಹರಿದು ಬಂದಿತ್ತು. ಇದನ್ನೂ ಓದಿ: ಡಿಕೆಶಿ ಪರ ಕೆಲ ಶಾಸಕರ ಬೆಂಬಲ ಮಾತ್ರ ಇದೆ, 5 ವರ್ಷವೂ ನಾನೇ ಸಿಎಂ – ಡೆಲ್ಲಿಯಲ್ಲಿ ಸಿಎಂ ಗೂಗ್ಲಿ

  • ಗುರು ರಾಯರ ದರ್ಶನ ಪಡೆದ ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಾಕ್

    ಗುರು ರಾಯರ ದರ್ಶನ ಪಡೆದ ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಾಕ್

    – ಅಳಿಯ, ಪುತ್ರಿಯ ಜೊತೆ ಪೂಜೆ ಸಲ್ಲಿಸಿದ ಸುಧಾಮೂರ್ತಿ

    ಬೆಂಗಳೂರು: ಬ್ರಿಟನ್ ಮಾಜಿ ಪ್ರಧಾನಿ ಹಾಗೂ ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ (Sudha Murthy) ಅವರ ಅಳಿಯ ರಿಷಿ ಸುನಾಕ್ (Rishi Sunak) ಅವರು ಬೆಂಗಳೂರಿಗೆ ಭೇಟಿ ನೀಡಿದ್ದಾರೆ.

    ಮಂಗಳವಾರ ಬೆಂಗಳೂರಿಗೆ ಪತ್ನಿ ಜೊತೆ ಆಗಮಿಸಿದ್ದ ಸುನಾಕ್ ಅವರು ಬಳಿಕ ರಾಘವೇಂದ್ರ ಮಠಕ್ಕೆ ತೆರಳಿ ಗುರು ರಾಯರ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ: ಡ್ರೈ ಪೋರ್ಟ್ ಎಂದರೇನು?  ಬಿಹಾರದಲ್ಲಿ ಅದರ ಅವಶ್ಯಕತೆ ಏನಿತ್ತು? 

    ಜಯನಗರದ ನಂಜನಗೂಡು ಶ್ರೀಗುರು ರಾಘವೇಂದ್ರ ಮಠಕ್ಕೆ ಕುಟುಂಬ ಸಮೇತ ಸುನಾಕ್ ಭೇಟಿ ಕೊಟ್ಟಿದ್ದಾರೆ. ಸುಧಾಮೂರ್ತಿ ದಂಪತಿ, ಅಳಿಯ ಋಷಿ ಸುನಾಕ್ ದಂಪತಿ ಮಠಕ್ಕೆ ಭೇಟಿ ಕೊಟ್ಟಿದ್ದಾರೆ.

    ಕಾರ್ತಿಕ ಮಾಸದ ಪ್ರಯುಕ್ತ ರಾಯರ ಸನ್ನಿಧಿಯಲ್ಲಿ ದೀಪ ಬೆಳಗಿಸಿ ವಿಶೇಷ ಪೂಜೆ ಸಲ್ಲಿಸಿದರು. ಶ್ರೀಮಠದ ಹಿರಿಯ ವ್ಯವಸ್ಥಾಪಕ ಆರ್.ಕೆ.ವಾದಿಂದ್ರಾಚಾರ್ಯ ಅವರು ರಾಯರ ಶೇಷ ವಸ್ತ್ರ, ಫಲಮಂತ್ರಾಕ್ಷತೆ ಕೊಟ್ಟು ಆಶೀರ್ವದಿಸಿದರು. ಇದನ್ನೂ ಓದಿ: MUDA Case: ಇಂದು ಮೈಸೂರು ‘ಲೋಕಾ’ ಕಚೇರಿಯಲ್ಲಿ ಸಿಎಂ ವಿಚಾರಣೆ

  • ಹೊಸ ವರ್ಷಾಚರಣೆ – ಮಂತ್ರಾಲಯ ರಾಯರ ಮಠಕ್ಕೆ ಹರಿದು ಬಂದ ಭಕ್ತಸಾಗರ

    ಹೊಸ ವರ್ಷಾಚರಣೆ – ಮಂತ್ರಾಲಯ ರಾಯರ ಮಠಕ್ಕೆ ಹರಿದು ಬಂದ ಭಕ್ತಸಾಗರ

    ರಾಯಚೂರು: ಹೊಸ ವರ್ಷಾಚರಣೆ (New Year) ಹಿನ್ನೆಲೆ ಮಂತ್ರಾಲಯದ (Mantralaya) ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ (Raghavendra Swamy Mutt) ವಿವಿಧೆಡೆಯಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರ (Devotees) ದಂಡು ಹರಿದು ಬಂದಿದೆ.

    ಶನಿವಾರದಿಂದ ಈವರೆಗೂ ಸುಮಾರು 1 ಲಕ್ಷ ಭಕ್ತರು ರಾಯರ ದರ್ಶನ ಪಡೆದಿದ್ದಾರೆ. ಭಕ್ತರ ಸಂಖ್ಯೆ ಹೆಚ್ಚಾದ ಹಿನ್ನೆಲೆ ಇಂದು ಬೆಳಗಿನ ಜಾವ ನಾಲ್ಕು ಗಂಟೆಯಿಂದಲೇ ರಾಯರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ನಾಲ್ಕು ಪ್ರತ್ಯೇಕ ಸರತಿ ಸಾಲುಗಳ ಮೂಲಕ ರಾಯರ ಮೂಲ ಬೃಂದಾವನ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಇದನ್ನೂ ಓದಿ: ಹೊಸ ವರ್ಷದ ಪಾರ್ಟಿಗೆ 193 ಕೋಟಿ ಮೌಲ್ಯದ ಎಣ್ಣೆ ಸೇಲ್

    ಹೊಸ ವರ್ಷದಂದು ರಾಯರ ಕೃಪೆಗೆ ಪಾತ್ರರಾಗಲು ಭಕ್ತರು ವಿವಿಧ ರಾಜ್ಯಗಳಿಂದ ಆಗಮಿಸಿದ್ದಾರೆ. ಕ್ಯಾಲೆಂಡರ್ ಹೊಸ ವರ್ಷವಾಗಿರುವುದರಿಂದ ಮಠದಲ್ಲಿ ಯಾವುದೇ ವಿಶೇಷ ಪೂಜೆಗಳನ್ನ ನೇರವೇರಿಸಿಲ್ಲ. ಎಂದಿನಂತೆ ಬೆಳಗ್ಗೆ ನಿತ್ಯದ ಪೂಜೆಯನ್ನು ಮಾಡಲಾಗಿದೆ. ಇದನ್ನೂ ಓದಿ: ಹೊಸ ವರ್ಷ, ಹೊಸ ದಿನ- ದೇವರ ಮೊರೆ ಹೋದ ರಾಜ್ಯದ ಜನ

  • ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯ- ಕೋಟ್ಯಂತರ ರೂ. ಸಂಗ್ರಹ

    ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯ- ಕೋಟ್ಯಂತರ ರೂ. ಸಂಗ್ರಹ

    ರಾಯಚೂರು: ಗುರುರಾಯರ ಸನ್ನಿಧಿಯಾದ ಮಂತ್ರಾಲಯ (Mantralaya) ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ (Raghavendra Mutt) ಮಾರ್ಚ್ ತಿಂಗಳಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ.

    ಕಳೆದ 27 ದಿನಗಳಲ್ಲಿ ಸಂಗ್ರಹವಾದ ಕಾಣಿಕೆಯ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಒಟ್ಟು 2 ಕೋಟಿ 11 ಲಕ್ಷ 95 ಸಾವಿರದ 988 ರೂ. ಕಾಣಿಕೆಯನ್ನು ಭಕ್ತರು ನೀಡಿದ್ದಾರೆ. ಇದರಲ್ಲಿ 2 ಕೋಟಿ 7 ಲಕ್ಷ 39 ಸಾವಿರದ 68 ರೂ. ನೋಟುಗಳಲ್ಲಿದ್ದು, 4 ಲಕ್ಷ 56 ಸಾವಿರದ 920 ರೂಪಾಯಿ ನಾಣ್ಯಗಳಿದ್ದವು. ಇನ್ನೂ 7 ಗ್ರಾಂ ಚಿನ್ನ, 571 ಗ್ರಾಂ ಬೆಳ್ಳಿಯನ್ನು ಕಾಣಿಕೆ ರೂಪದಲ್ಲಿ ನೀಡಲಾಗಿದೆ. ಇದನ್ನೂ ಓದಿ: ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ – ಜಿಲ್ಲಾ ಪ್ರವಾಸ ಮೊಟಕುಗೊಳಿಸಿ ಸಿಎಂ ಬೆಂಗಳೂರಿಗೆ ವಾಪಸ್ 

    ಮುಜರಾಯಿ ಇಲಾಖೆ ಅಧಿಕಾರಿಗಳು, ಗುರುಪಾದ ಕರಸೇವಕರು ಹಾಗೂ ನೂರಾರು ಜನ ಸಿಬ್ಬಂದಿ ಹಾಗೂ ಭಕ್ತರು ಕಾಣಿಕೆ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು ಎಂದು ಮಠದ ವ್ಯವಸ್ಥಾಪಕ ಶ್ರೀನಿವಾಸ ರಾವ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯ ವಿಧಾನಸಭೆ ಚುನಾವಣೆಗೆ ಇಂದೇ ಮುಹೂರ್ತ ಫಿಕ್ಸ್

  • ಮಂತ್ರಾಲಯದಲ್ಲಿ ತೆಪ್ಪೋತ್ಸವ – ತುಂಗಭದ್ರಾ ನದಿಯಲ್ಲಿ ಬೆಳಕಿನ ಸಂಭ್ರಮ

    ಮಂತ್ರಾಲಯದಲ್ಲಿ ತೆಪ್ಪೋತ್ಸವ – ತುಂಗಭದ್ರಾ ನದಿಯಲ್ಲಿ ಬೆಳಕಿನ ಸಂಭ್ರಮ

    ರಾಯಚೂರು: ಕಲಿಯುಗ ಕಾಮಧೇನು ಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಿ ಮಂತ್ರಾಲಯದಲ್ಲಿ (Mantralaya) ಕಾರ್ತಿಕ ಮಾಸ ಹಿನ್ನೆಲೆ ತುಂಗಾರತಿ ಸಂಭ್ರಮ ಕಳೆಗಟ್ಟಿದ್ದು, ತುಂಗಭದ್ರಾ ನದಿಯಲ್ಲಿ ಕಾರ್ತಿಕ ದೀಪೋತ್ಸವ ನೆರವೇರಿಸಲಾಯಿತು.

    ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ (Raghavendra Mutt) ದೀಪಗಳ ಉತ್ಸವವೇ ನಡೆಯಿತು. ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳು (Subudhendra Teertha Swamiji) ತುಂಗಾಪೂಜೆ ಮಾಡಿದರು. ಶ್ರೀಗಳಿಂದ ಗುರುರಾಜರಿಗೆ ಹಾಗೂ ಶ್ರೀನಿವಾಸರಾಯರಿಗೆ ತೆಪ್ಪೋತ್ಸವ ನಡೆಯಿತು. ತುಂಗಭದ್ರಾ ನದಿಯಲ್ಲಿ ದೀಪಗಳನ್ನು ತೇಲಿಬಿಟ್ಟು ಭಕ್ತರು ಸಂಭ್ರಮಿಸಿದರು. ಇದನ್ನೂ ಓದಿ: ಮಂತ್ರಾಲಯದಲ್ಲಿ ಕಾರ್ತಿಕ ಮಾಸಾಚರಣೆ – ವಿಶೇಷ ವನಭೋಜನ

    ತುಂಗಾರತಿ ಹಿನ್ನೆಲೆ ಮಠದ ಆವರಣದಲ್ಲಿ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ನವೆಂಬರ್ 8 ಮಂಗಳವಾರ ಕಾರ್ತಿಕ ಪೌರ್ಣಿಮಾ ದಿನ ನಡೆಯಬೇಕಿದ್ದ ತುಂಗಾ ಆರತಿ ಕಾರ್ಯಕ್ರಮವನ್ನು ಚಂದ್ರಗ್ರಹಣ ಇರುವುದರಿಂದ ಭಾನುವಾರ ಮಂತ್ರಾಲಯದಲ್ಲಿ ಆಚರಿಸಲಾಯಿತು. ಇದನ್ನೂ ಓದಿ: ವೀರಶೈವ, ಲಿಂಗಾಯತ ಎರಡೂ ಒಂದೇ: ಬಿದರಿ ಸ್ಪಷ್ಟನೆ

    Live Tv
    [brid partner=56869869 player=32851 video=960834 autoplay=true]

  • ಮಂತ್ರಾಲಯದಲ್ಲಿ ಕಾರ್ತಿಕ ಮಾಸಾಚರಣೆ – ವಿಶೇಷ ವನಭೋಜನ

    ಮಂತ್ರಾಲಯದಲ್ಲಿ ಕಾರ್ತಿಕ ಮಾಸಾಚರಣೆ – ವಿಶೇಷ ವನಭೋಜನ

    ರಾಯಚೂರು: ಕಲಿಯುಗ ಕಾಮಧೇನು ಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಾನ ಮಂತ್ರಾಲಯ (Mantralaya) ರಾಯರ ಮಠದಲ್ಲಿ (Raghavendra Mutt) ಕಾರ್ತಿಕ ಮಾಸದ ಆಚರಣೆ ಸಂಭ್ರಮ ಜೋರಾಗಿದೆ. ಅಭಯ ಆಂಜನೇಯ ಸ್ವಾಮಿ ಸನ್ನಿಧಾನದಲ್ಲಿ ವನ ಭೋಜನ ಅಂಗವಾಗಿ ಶ್ರೀ ಬ್ರಹ್ಮ ಕರಾರ್ಚಿತ ಮೂಲರಾಮದೇವರ ಪೂಜೆಯನ್ನು ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ (Subudhendra Teertha Swamiji) ನೆರವೇರಿಸಿದರು.

    ಸಂಸ್ಥಾನ ಪೂಜೆಯ ನಂತರ ಶ್ರೀ ಅಭಯ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವನ ಭೋಜನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು, ಶ್ರೀ ಮಠದ ಸಿಬ್ಬಂದಿ ಮತ್ತು ಮಂತ್ರಾಲಯದ ಸ್ಥಳೀಯರು ಭಾಗವಹಿಸಿ ತೀರ್ಥ ಪ್ರಸಾದವನ್ನು ಸ್ವೀಕರಿಸಿದರು. ಇದನ್ನೂ ಓದಿ: `ಕಾಂತಾರ’ ಸಿನಿಮಾ ನನ್ನದೇ: ರಿಷಬ್ ಸಿನಿಮಾ ಬಗ್ಗೆ ಯಶ್ ಪ್ರತಿಕ್ರಿಯೆ

    ನವೆಂಬರ್ 8 ಮಂಗಳವಾರ ಕಾರ್ತಿಕ ಪೌರ್ಣಿಮಾ ದಿನ ನಡೆಯಬೇಕಿದ್ದ ತುಂಗಾ ಆರತಿ ಕಾರ್ಯಕ್ರಮವನ್ನು ಚಂದ್ರಗ್ರಹಣ ಇರುವುದರಿಂದ ಇಂದು ಮಂತ್ರಾಲಯದಲ್ಲಿ ಆಚರಿಸಲಾಯಿತು. ಇಂದು ರಾತ್ರಿ ವೇಳೆ ನಡೆಯುವ ಕಾರ್ಯಕ್ರಮಕ್ಕಾಗಿ ಮಠದಲ್ಲಿ ಅಗತ್ಯ ಸಿದ್ಧತೆಗಳನ್ನು ನಡೆಸಲಾಗಿದೆ. ಇದನ್ನೂ ಓದಿ: ತಿರುಪತಿ ತಿಮ್ಮಪ್ಪ ಈಗ 10 ಟನ್ ಚಿನ್ನ, 15 ಸಾವಿರ ಕೋಟಿಯ ಒಡೆಯ

    Live Tv
    [brid partner=56869869 player=32851 video=960834 autoplay=true]