‘ನಾನು ಮತ್ತು ಗುಂಡ’ ಚಿತ್ರದ ಸೀಕ್ವೇಲ್ ನಲ್ಲಿ ನಾಯಕ ಯಾರಾಗಿರಬಹುದು ಎಂಬ ಕುತೂಹಲಕ್ಕೆ ಇದೀಗ ತೆರೆಬಿದ್ದಿದೆ. ನಟ ರಾಕೇಶ್ ಅಡಿಗ (Rakesh Adiga) ಅವರು ಈ ಭಾಗದಲ್ಲಿ ನಾಯಕನಾಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ರಘುಹಾಸನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ನಾನು ಮತ್ತು ಗುಂಡ ಚಿತ್ರದ ಮುಂದುವರೆದ ಭಾಗವಾಗಿ “ನಾನು ಮತ್ತು ಗುಂಡ -2” (Naanu Mattu Gunda 2) ತಯಾರಾಗುತ್ತಿದ್ದು, ಚಿತ್ರದಲ್ಲಿ ಬಹುತೇಕ ಹಳೆಯ ತಂಡವೇ ಕೆಲಸ ಮಾಡುತ್ತಿದೆ.
ಮೊದಲ ಭಾಗದಲ್ಲಿ ಮರಣ ಹೊಂದಿದ್ದ ಮಾಲೀಕನಿಗೆ ಇಲ್ಲಿ ಪುನರ್ಜನ್ಮವಾಗಿರುತ್ತದೆ. ಕನ್ನಡ, ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿದೆ. ಸಿನಿಮಾ ನಿರ್ದೇಶನದ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನೂ ಸಹ ರಘು ಹಾಸನ್ ಅವರೇ ಹೊತ್ತಿದ್ದಾರೆ. ಗೋವಿಂದೇಗೌಡ ಹಾಗೂ ನಾಯಿಯ ಪಾತ್ರದ ಮೂಲಕ ಚಿತ್ರಕಥೆ ಮುಂದುವರೆಯಲಿದೆ. ಸೋಷಿಯಲ್ ಕನ್ ಸರ್ನ್ ಜೊತೆಗೆ ಡಿವೈನ್ ಕಂಟೆಂಟ್ ಕೂಡ ಈ ಚಿತ್ರದಲ್ಲಿದೆ.
ಚಿತ್ರದ ಸಂಭಾಷಣೆ ಹಾಗೂ ಸಾಹಿತ್ಯವನ್ನು ರೋಹಿತ್ ರಮನ್ ರಚಿಸಿದ್ದಾರೆ. ಈ ಚಿತ್ರಕ್ಕಿದೆ. ಪೊಯೆಮ್ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾಗುತ್ತಿರುವ ನಾನು ಮತ್ತು ಗುಂಡ-೨ ಚಿತ್ರಕ್ಕೆ ಆರ್.ಪಿ.ಪಟ್ನಾಯಕ್ ಅವರ ಸಂಗೀತ, ರುತ್ವಿಕ್ ಮುರಳೀಧರ್ ಅವರ ಹಿನ್ನೆಲೆ ಸಂಗೀತ, ತನ್ವಿಕ್ ಅವರ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಅವರ ಸಂಕಲನ, ವಿ.ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ರಾಘು ಅವರ ನೃತ್ಯನಿರ್ದೇಶನವಿದೆ.
ನಾಯಿ ಹಾಗೂ ಅದರ ಮಾಲೀಕ ಗೋವಿಂದೇಗೌಡನ ನಡುವಿನ ಅವಿನಾಭಾವ ಸಂಬಂಧದ ಕಥೆಯನ್ನು ಹೇಳುವ ‘ನಾನು ಮತ್ತು ಗುಂಡ’ (Naanu Mattu Gunda 2) ಚಿತ್ರವು ಎರಡು ವರ್ಷಗಳ ಹಿಂದೆ ತೆರೆಕಂಡು ಯಶಸ್ವಿ ಪ್ರದರ್ಶನ ಕಂಡಿತ್ತು. ಶಿವರಾಜ್ ಕೆ.ಆರ್. ಪೇಟೆ ನಾಯಕನಾಗಿ ಅಭಿನಯಿಸಿದ್ದ ಆ ಚಿತ್ರಕ್ಕೆ ರಘು ಹಾಸನ್ (Raghu Haasan) ಆಕ್ಷನ್ ಕಟ್ ಹೇಳಿದ್ದರು. ಈಗ ಅದರ ಮುಂದುವರೆದ ಭಾಗವಾಗಿ ‘ನಾನು ಮತ್ತು ಗುಂಡ-2’ ತಯಾರಾಗುತ್ತಿದ್ದು, ಚಿತ್ರದಲ್ಲಿ ಬಹುತೇಕ ಹಳೆಯ ತಂಡವೇ ಕೆಲಸ ಮಾಡುತ್ತಿದೆ. ಮೊದಲ ಭಾಗದಲ್ಲಿ ಮರಣ ಹೊಂದಿದ್ದ ಮಾಲೀಕನಿಗೆ ಇಲ್ಲಿ ಪುನರ್ಜನ್ಮವಾಗಿರುತ್ತದೆ. ಕನ್ನಡ, ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿದ್ದು, ಬುಧವಾರ ಸಂಜೆ ಈ ಚಿತ್ರದ ಟೈಟಲ್ ಟೀಸರನ್ನು (Title Teaser) ನಟ ಧ್ರುವಸರ್ಜಾ (Dhruva Sarja) ಬಿಡುಗಡೆ ಮಾಡಿದರು.
ಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕ ರಘು ಹಾಸನ್ ಮಾತನಾಡುತ್ತ ಈ ಚಿತ್ರದಲ್ಲಿ ಸಿಂಬನ ಮಗ ನಟಿಸುತ್ತಿದ್ದಾನೆ. ಸಿಂಬು ನಾಲ್ಕು ದಿನವಷ್ಟೇ ಶೂಟಿಂಗ್ ನಲ್ಲಿ ಭಾಗವಹಿಸಿ ನಿಧನ ಹೊಂದಿದ. ಈಗ ಅವನ ಮಗ ಸಿಂಬ ನಟಿಸುತ್ತಿದ್ದಾನೆ. ಗೋವಿಂದೇಗೌಡ ಹಾಗೂ ನಾಯಿಯ ಪಾತ್ರದ ಮೂಲಕ ಸಿನಿಮಾ ಮುಂದುವರೆಯಲಿದೆ. ಮೊದಲಭಾಗ ಮಾಡುವಾಗಲೇ ೨ರ ಕಥೆ ರೆಡಿ ಮಾಡಿಕೊಂಡಿದ್ದೆ. ಸೋಷಿಯಲ್ ಕನ್ ಸರ್ನ್ ಜೊತೆಗೆ ಡಿವೈನ್ ಕಂಟೆಂಟ್ ಕೂಡ ಚಿತ್ರದಲ್ಲಿದೆ. ಈಗಾಗಲೇ ಶಿವಮೊಗ್ಗ, ತೀರ್ಥಹಳ್ಳಿ, ಬಾಳೆಹೊನ್ನೂರು ಸುತ್ತಮುತ್ತ 50 ದಿನಗಳ ಶೂಟಿಂಗ್ ನಡೆಸಲಾಗಿದ್ದು, ಊಟಿ ಭಾಗದ 20 ದಿನದ ಚಿತ್ರೀಕರಣವಷ್ಟೇ ಬಾಕಿಯಿದೆ. ನಾನು ಪಾತ್ರವನ್ನು ಸದ್ಯದಲ್ಲೇ ರಿವೀಲ್ ಮಾಡುತ್ತೇವೆ.
ಕಳೆದಬಾರಿ ಫಂಡಿಂಗ್ ಕೊರತೆಯಿಂದ ಹೆಚ್ಚು ಪ್ರಚಾರ ಮಾಡಲಾಗಿರಲಿಲ್ಲ, ಈಗ ಆರಂಭದಿಂದಲೇ ಪ್ರೊಮೋಷನ್ ಮಾಡುತ್ತಿದ್ದೇವೆ ಎಂದು ಹೇಳಿದರು. ನಂತರ ಧ್ರುವ ಸರ್ಜ ಮಾತನಾಡಿ ನಾನು ಮತ್ತು ಗುಂಡ ನನಗೆ ಮತ್ತು ನನ್ನ ಪತ್ನಿಗೆ ತುಂಬಾ ಇಷ್ಟವಾಗಿತ್ತು. ಅದರ ಕ್ಲೈಮ್ಯಾಕ್ಸ್ ಅದ್ಭುತವಾಗಿತ್ತು. ಈ ಟೈಟಲ್ ಟೀಸರ್ ತುಂಬಾ ಚನ್ನಾಗಿ ಬಂದಿದೆ. ಯುವ ಪ್ರತಿಭೆಗಳಿಗೆ ನಾವೆಲ್ಲ ಪ್ರೋತ್ಸಾಹ ನೀಡಬೇಕು. ಅಂತವರು ಬೆಳೆಯುತ್ತಾರೆ ಎಂದು ಹೇಳಿದರು.
ಸಂಭಾಷಣೆ ಸಾಹಿತ್ಯ ಬರೆದ ರೋಹಿತ್ ರಮನ್ ಮಾತನಾಡಿ ಮೊದಲ ಭಾಗದಲ್ಲೂ ನಾನೇ ಸಾಹಿತ್ಯ ಬರೆದಿದ್ದೆ. ನಾಯಿ ಇಟ್ಟುಕೊಂಡು ಸಿನಿಮಾ ಮಾಡೋದು ದೊಡ್ಡ ಚಾಲೆಂಜ್, ಅಂತಾದ್ರಲ್ಲಿ ರಘು ಎರಡನೇ ಭಾಗವನ್ನೂ ಮಾಡ್ತಿದ್ದಾರೆ ಎಂದರು. ಹಿನ್ನೆಲೆ ಸಂಗೀತ ನೀಡಿದ ರುತ್ವಿಕ್ ಮುರಳೀಧರ್ ಮಾತನಾಡಿ ಟೀಸರ್ ಎಲ್ಲರಿಗೂ ಇಷ್ಟವಾಗುತ್ತೆ ಎಂದರು. ಛಾಯಾಗ್ರಹಣ ನಿರ್ವಹಿಸಿದ ತನ್ವಿಕ್ ಮಾತನಾಡಿ ಹಿಂದೆ ದಿಲ್ ಮಾರ್ ಚಿತ್ರಕ್ಕೆ ಕ್ಯಾಮೆರಾ ಮಾಡಿದ್ದೆ. ತಕ್ಷಣ ಒಪ್ಪಿಕೊಂಡು ಮಾಡಿದ ಚಿತ್ರವಿದು ಎಂದರು. ಈ ಚಿತ್ರದಲ್ಲಿ ಸಿಂಬು ಜೊತೆ ಬಂಟಿ ಎಂಬ ನಾಯಿಯೂ ಅಭಿನಯಿಸಿದೆ. ಸಿಂಬು ಈಗಾಗಲೇ ಅವನು ಮತ್ತು ಶ್ರಾವಣಿ ಎಂಬ ಧಾರಾವಾಹಿಯಲ್ಲೂ ನಟಿಸುತ್ತಿದೆ.
ಪೊಯೆಮ್ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾಗುತ್ತಿರುವ ನಾನು ಮತ್ತು ಗುಂಡ-೨ ಚಿತ್ರಕ್ಕೆ ಆರ್.ಪಿ.ಪಟ್ನಾಯಕ್ ಅವರ ಸಂಗೀತ ಸಂಯೋಜನೆ, ಕೆ.ಎಂ. ಪ್ರಕಾಶ್ ಅವರ ಸಂಕಲನ, ವಿ.ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ರಾಘು ಅವರ ನೃತ್ಯನಿರ್ದೇಶನ, ನವೀನ್ ಅವರ ಸೌಂಡ್ ಡಿಸೈನ್ ಇದೆ
ಗಣೇಶ್ ನಟನೆಯ ತ್ರಿಬಲ್ ರೈಡಿಂಗ್ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನಟಿಸಿರುವ ರಚನಾ ಇಂದರ್ (Rachana Inder), ಇದೀಗ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ರಘು ಹಾಸನ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ನಾನು ಮತ್ತು ಗುಂಡ 2’ ಸಿನಿಮಾಗೆ ಇವರೇ ನಾಯಕಿ ಎನ್ನಲಾಗುತ್ತಿದೆ. ಚಿತ್ರತಂಡದಿಂದ ಅಧಿಕೃತ ಮಾಹಿತಿ ಬಾರದೇ ಇದ್ದರೂ, ಇವರೇ ನಾಯಕಿ ಎನ್ನುವುದು ಪಕ್ಕಾ ಅಂತೆ.
ಪೊಯೆಮ್ ಪಿಕ್ಚರ್ಸ್ ಲಾಂಛನದಲ್ಲಿ ಎರಡು ವರ್ಷಗಳ ಹಿಂದೆ ತೆರೆಕಂಡಿದ್ದ ‘ನಾನು ಮತ್ತು ಗುಂಡ’ (Naanu Mattu Gunda 2) ಚಲನಚಿತ್ರವು ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ನಾಯಕ ಹಾಗೂ ನಾಯಿಯೊಂದರ ನಡುವಿನ ಅವಿನಾಭಾವ ಸಂಬಂಧದ ಕಥೆಯನ್ನು ಹೇಳುವ ಆ ಚಿತ್ರದಲ್ಲಿ ನಟ ಶಿವರಾಜ್ ಕೆ.ಆರ್. ಪೇಟೆ ಮತ್ತು ನಾಯಿಯ ಅದ್ಭುತ ಅಭಿನಯವಿತ್ತು. ಆ ಚಿತ್ರದ ಯಶಸ್ಸಿನ ನಂತರ ನಿರ್ದೇಶಕ ರಘು ಹಾಸನ್ (Raghu Haasan) ಈಗ ಅದರ ಮುಂದುವರೆದ ಭಾಗವಾಗಿ ‘ನಾನು ಮತ್ತು ಗುಂಡ -2’ ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇದನ್ನೂ ಓದಿ:ಎರಡೇ ಎರಡು ದಿನ ವೇಟ್ ಮಾಡಿ ಪ್ಲೀಸ್: ನಟ ಅನಿರುದ್ಧ ಮನವಿ
ಕನ್ನಡ, ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ತೆರೆಗೆ ಬರುತ್ತಿರುವ ಈ ಚಿತ್ರದ ಮೊದಲ ಪೋಸ್ಟರ್ ಇದೀಗ ಬಿಡುಗಡೆಯಾಗಿದೆ. ಮೊದಲ ಭಾಗದಲ್ಲಿ ನಾಯಕ ಶಿವರಾಜ್ ಕೆ.ಆರ್.ಪೇಟೆ (Shivraj KR Pete) ಅವರ ಪಾತ್ರ ಮರಣ ಹೊಂದುತ್ತದೆ. ಎರಡನೇ ಭಾಗದಲ್ಲಿ ತನ್ನ ಮಾಲೀಕನನ್ನು ಕಳೆದುಕೊಂಡ ನಾಯಿ ಸಮಾಜದಲ್ಲಿ ಹೇಗೆ ಜೀವನ ನಡೆಸುತ್ತದೆ ಎಂಬುದನ್ನು ಭಾವನಾತ್ಮಕ ಕಥೆಯೊಂದಿಗೆ ಮನರಂಜನಾತ್ಮಕವಾಗಿ ಹೇಳಲಾಗುತ್ತಿದೆ.
ಈಗಾಗಲೇ ಮೈಸೂರು ನಗರದ ಸುತ್ತಮುತ್ತ ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದ್ದು, ಶೇ.50 ರಷ್ಟು ಶೂಟಿಂಗ್ ಮುಕ್ತಾಯಗೊಂಡಿದೆ. ಈ ಚಿತ್ರಕ್ಕೆ ಆರ್.ಪಿ.ಪಟ್ನಾಯಕ್ ಅವರ ಸಂಗೀತ ಸಂಯೋಜನೆ, ರುತ್ವಿಕ್ ಮುರಳೀಧರ್ ಅವರ ಹಿನ್ನೆಲೆ ಸಂಗೀತ, ಕೆ.ಎಂ. ಪ್ರಕಾಶ್ ಅವರ ಸಂಕಲನ, ತನ್ವಿಕ್ ಜಿ. ಅವರ ಛಾಯಾಗ್ರಹಣ, ರೋಹಿತ್ ರಾಮನ್ ಅವರ ಸಂಭಾಷಣೆ, ವಿ.ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯವಿದೆ.
ಪೊಯೆಮ್ ಪಿಕ್ಚರ್ಸ್ ಲಾಂಛನದಲ್ಲಿ ಎರಡು ವರ್ಷಗಳ ಹಿಂದೆ ತೆರೆಕಂಡಿದ್ದ ‘ನಾನು ಮತ್ತು ಗುಂಡ’ (Naanu Mattu Gunda 2) ಚಲನಚಿತ್ರವು ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ನಾಯಕ ಹಾಗೂ ನಾಯಿಯೊಂದರ ನಡುವಿನ ಅವಿನಾಭಾವ ಸಂಬಂಧದ ಕಥೆಯನ್ನು ಹೇಳುವ ಆ ಚಿತ್ರದಲ್ಲಿ ನಟ ಶಿವರಾಜ್ ಕೆ.ಆರ್. ಪೇಟೆ ಮತ್ತು ನಾಯಿಯ ಅದ್ಭುತ ಅಭಿನಯವಿತ್ತು. ಆ ಚಿತ್ರದ ಯಶಸ್ಸಿನ ನಂತರ ನಿರ್ದೇಶಕ ರಘು ಹಾಸನ್ (Raghu Haasan) ಈಗ ಅದರ ಮುಂದುವರೆದ ಭಾಗವಾಗಿ ‘ನಾನು ಮತ್ತು ಗುಂಡ -2’ ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.
ಕನ್ನಡ, ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ತೆರೆಗೆ ಬರುತ್ತಿರುವ ಈ ಚಿತ್ರದ ಮೊದಲ ಪೋಸ್ಟರ್ ಇದೀಗ ಬಿಡುಗಡೆಯಾಗಿದೆ. ಮೊದಲ ಭಾಗದಲ್ಲಿ ನಾಯಕ ಶಿವರಾಜ್ ಕೆ.ಆರ್.ಪೇಟೆ (Shivraj KR Pete) ಅವರ ಪಾತ್ರ ಮರಣ ಹೊಂದುತ್ತದೆ. ಎರಡನೇ ಭಾಗದಲ್ಲಿ ತನ್ನ ಮಾಲೀಕನನ್ನು ಕಳೆದುಕೊಂಡ ನಾಯಿ ಸಮಾಜದಲ್ಲಿ ಹೇಗೆ ಜೀವನ ನಡೆಸುತ್ತದೆ ಎಂಬುದನ್ನು ಭಾವನಾತ್ಮಕ ಕಥೆಯೊಂದಿಗೆ ಮನರಂಜನಾತ್ಮಕವಾಗಿ ಹೇಳಲಾಗುತ್ತಿದೆ. ಇದನ್ನೂ ಓದಿ:ಆಂಧ್ರದಲ್ಲಿ ಮದ್ಯಪ್ರಿಯರಿಗೆ ನಟ ಪವನ್ ಕಲ್ಯಾಣ್ ಬಂಪರ್ ಆಫರ್
ಈಗಾಗಲೇ ಮೈಸೂರು ನಗರದ ಸುತ್ತಮುತ್ತ ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದ್ದು, ಶೇ.50 ರಷ್ಟು ಶೂಟಿಂಗ್ ಮುಕ್ತಾಯಗೊಂಡಿದೆ. ಈ ಚಿತ್ರಕ್ಕೆ ಆರ್.ಪಿ.ಪಟ್ನಾಯಕ್ ಅವರ ಸಂಗೀತ ಸಂಯೋಜನೆ, ರುತ್ವಿಕ್ ಮುರಳೀಧರ್ ಅವರ ಹಿನ್ನೆಲೆ ಸಂಗೀತ, ಕೆ.ಎಂ. ಪ್ರಕಾಶ್ ಅವರ ಸಂಕಲನ, ತನ್ವಿಕ್ ಜಿ. ಅವರ ಛಾಯಾಗ್ರಹಣ, ರೋಹಿತ್ ರಾಮನ್ ಅವರ ಸಂಭಾಷಣೆ, ವಿ.ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯವಿದೆ.