Tag: Raibagh

  • ನಾ ಡ್ರೈವರ್ ಖ್ಯಾತಿಯ ಗಾಯಕ ಮಾಳು ನಿಪನಾಳ ಗ್ಯಾಂಗ್‌ನಿಂದ ಹಲ್ಲೆ

    ನಾ ಡ್ರೈವರ್ ಖ್ಯಾತಿಯ ಗಾಯಕ ಮಾಳು ನಿಪನಾಳ ಗ್ಯಾಂಗ್‌ನಿಂದ ಹಲ್ಲೆ

    – ರ‍್ಯಾಶ್‌ ಡ್ರೈವಿಂಗ್ ಪ್ರಶ್ನಿಸಿದ್ದಕ್ಕೆ ಕುಡಿದ ಅಮಲಿನಲ್ಲಿ ಹಲ್ಲೆ ಆರೋಪ
    – ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದ ಎಸ್‌ಪಿ

    ಬೆಳಗಾವಿ: ನೋಡಿಕೊಂಡು ಕಾರು ಚಲಾಯಿಸಿ ಎಂದಿದ್ದಕ್ಕೆ ಮೂವರ ಮೇಲೆ ನಾ ಡ್ರೈವರ್ (Na Driver) ಹಾಗೂ ಹಿತ್ತಲಕ್ಕೆ ಕರಿ ಬೇಡ ಮಾವ ಖ್ಯಾತಿಯ ಜನಪದ ಗಾಯಕ ಮಾಳು ನಿಪನಾಳ (Malu Nipanal) ಹಾಗೂ ಗ್ಯಾಂಗ್ ಸೇರಿ ಹಲ್ಲೆ ಮಾಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ತಾಲೂಕಿನ ನಿಪನಾಳ ಗ್ರಾಮದ ಬಳಿ ನಡೆದಿದೆ.

    ನಿಪನಾಳ ಗ್ರಾಮದ ಬಳಿ ಬೈಕ್ ಮೇಲೆ ತೆರಳುತ್ತಿದ್ದವರ ಮೇಲೆ ಹಲ್ಲೆ ಮಾಡಿದ ಪರಿಣಾಮ ಮೂವರಿಗೆ ಗಂಭೀರ ಗಾಯಗಳಾಗಿವೆ. ರ‍್ಯಾಶ್‌ ಡ್ರೈವಿಂಗ್ ಪ್ರಶ್ನಿಸಿದ್ದಕ್ಕೆ ಗಂಭೀರವಾಗಿ ಮಲ್ಲು ನಿಪನಾಳ ಗ್ಯಾಂಗ್ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಬಂದಿದೆ. ಶೇಖರ ಹಕ್ಯಾಗೋಳ, ಅಶ್ವಿನಿ ಈರಿಗಾರ, ರೂಪಾ ಹಕ್ಯಾಗೋಳ ಎಂಬುವರ ಮೇಲೆ ಹಲ್ಲೆ ಮಾಡಿದ್ದು ಹಲ್ಲೆಯಿಂದ ಶೇಖರ ಹಕ್ಯಾಗೋಳ ತಲೆಗೆ ಗಂಭೀರ ಗಾಯವಾದರೆ ಮಹಿಳೆಯ ಕೈಗೆ ಗಂಭೀರ ಗಾಯವಾಗಿದೆ. ಇದನ್ನೂ ಓದಿ: ವಕ್ಫ್ ಆಸ್ತಿ ಉಳಿಸೋದು ಕಾಂಗ್ರೆಸ್‍ನ 6ನೇ ಗ್ಯಾರಂಟಿ: ರೇಣುಕಾಚಾರ್ಯ ಕಿಡಿ

    ಕುಡಿದ ಅಮಲಿನಲ್ಲಿ 10 ಜನ ಸೇರಿ ಮಹಿಳೆ ಎನ್ನುವದನ್ನ ಲೆಕ್ಕಿಸದೇ ಹಲ್ಲೆ ಮಾಡಿದ್ದಾರೆ ಎಂದು ಸಂತ್ರಸ್ತರು ದೂರಿದ್ದಾರೆ. ಗಾಯಾಳುಗಳು ಚಿಕ್ಕೋಡಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆಗೊಳಗಾದವರು ಚಿಕ್ಕೋಡಿ ತಾಲೂಕಿನ ಕೇರೂರು ಗ್ರಾಮದವರಾಗಿದ್ದು ಕೇರೂರು ಗ್ರಾಮದಿಂದ ಕಲ್ಲೋಳಿ ದೇವಸ್ಥಾನಕ್ಕೆ ಹೋಗುವಾಗ ನಿಪನಾಳ ಗ್ರಾಮದ ಬಳಿ ಘಟನೆ ನಡೆದಿದೆ. ಇದನ್ನೂ ಓದಿ: ನಾಲ್ವರಿದ್ದ ಬೈಕ್‌ಗೆ ಕಾರು ಡಿಕ್ಕಿ – ಇಬ್ಬರು ಸ್ಥಳದಲ್ಲಿಯೇ ಸಾವು, ಇಬ್ಬರು ಗಂಭೀರ

    ತನ್ನೂರಿನಲ್ಲೇ ಮಾಳು ಈ ರೀತಿ ಗೂಂಡಾವರ್ತನೆ ತೋರಿದ್ದನ್ನು ಸ್ಥಳೀಯರು ನೋಡಿದ್ದಾರೆ. ಹಲ್ಲೆ ಮಾಡಿ ಅಲ್ಲಿಂದ ಮಾಳು ಪರಾರಿಯಾದರೆ ಸ್ಥಳೀಯರು ಗಾಯಾಳುಗಳಿಗೆ ಕೂಡಲೇ ರಾಯಬಾಗ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ಮೂವರು ಚಿಕ್ಕೋಡಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ಬಂದು ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಸದ್ಯ ಗಾಯಾಳುಗಳಿಂದ ಮಾಹಿತಿ ಪಡೆಯುತ್ತಿರುವ ಪೊಲೀಸರು ಮಾಳು ವಿರುದ್ಧ ಕೇಸ್ ದಾಖಲಿಸಿಕೊಳ್ಳುತ್ತಿದ್ದಾರೆ. ಈ ರೀತಿ ಹಲ್ಲೆ ಮಾಡಿದ ಗಾಯಕ ಮಾಳು ಎಸ್ಕೇಪ್ ಆಗಿದ್ದಾರೆ ಎಂಬ ಮಾಹಿತಿ ಇದೆ. ಘಟನೆ ಕುರಿತು ಮಾಹಿತಿ ಪಡೆದಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬೆಳಗಾವಿ ಎಸ್‌ಪಿ ಡಾ.ಭೀಮಾಶಂಕರ್ ಗುಳೇದ್‌ ಹೇಳಿದ್ದಾರೆ. ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

     

  • ಖಾಸಗಿ ವೀಡಿಯೋ ಬಹಿರಂಗ ಭೀತಿ – ಸ್ನೇಹಿತನನ್ನು ಕೊಲೆಗೈದ ಪಾತಕಿ

    ಖಾಸಗಿ ವೀಡಿಯೋ ಬಹಿರಂಗ ಭೀತಿ – ಸ್ನೇಹಿತನನ್ನು ಕೊಲೆಗೈದ ಪಾತಕಿ

    ಚಿಕ್ಕೋಡಿ: ಖಾಸಗಿ ವೀಡಿಯೋ ವಿಚಾರ ಬಹಿರಂಗವಾಗುವ ಭೀತಿಯಲ್ಲಿ ಸ್ನೇಹಿತನನ್ನು ಚಾಕುವಿನಿಂದ ಇರಿದು ಕೊಲೆಗೈದ ಘಟನೆ ರಾಯಬಾಗದ (Raibagh) ಹಾರೂಗೇರಿ ಪಟ್ಟಣದ ಹೊರವಲಯದ ಬಡಬ್ಯಾಕೂಡ್‍ನಲ್ಲಿ ನಡೆದಿದೆ.

    ಅಕ್ಬರ್ ಜಮಾದಾರ್ (21) ಕೊಲೆಯಾದ ದುರ್ದೈವಿ. ಬಸ್ತವಾಡ ಹೊರವಲಯ ಅರಣ್ಯ ಪ್ರದೇಶದಲ್ಲಿ ಯುವಕನನ್ನು ಕೊಲೆ ಮಾಡಲಾಗಿದೆ. ಬಡಬ್ಯಾಕೂಡ್‍ನ ಮಹಾಂತೇಶ ಪೂಜಾರ್ (23) ಕೊಲೆಗೈದ ಆರೋಪಿಯಾಗಿದ್ದಾನೆ. ಕೊಲೆಯಾದ ಅಕ್ಬರ್ ಹಾಗೂ ಹಂತಕ ಮಹಾಂತೇಶ ಇಬ್ಬರೂ ಸ್ನೇಹಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಆಸ್ಪತ್ರೆಗೆ ತೆರಳುವ ನಾಟಕವಾಡಿ ಸೇನೆಗೆ ಸಿಕ್ಕಿಬಿದ್ದ ಉಗ್ರರು

    ಆರೋಪಿ ಮಹಾಂತೇಶ್ ಯುವತಿಯೊಬ್ಬಳ ಜೊತೆಗಿನ ಖಾಸಗಿ ವೀಡಿಯೋವನ್ನು ತನ್ನದೇ ಮೊಬೈಲ್‍ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದ. ಹಣಕಾಸಿನ ವೈಷಮ್ಯದ ವಿಚಾರಕ್ಕೆ ಆ ಮೊಬೈಲ್‍ನ್ನು ಅಕ್ಬರ್ ಕಸಿದುಕೊಂಡಿದ್ದ. ಆದರೆ ವೀಡಿಯೋ ಎಲ್ಲಿ ಬಹಿರಂಗವಾಗುತ್ತದೆಯೋ ಎಂದು ಮಹಾಂತೇಶ್ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಗ್ರಾಮಸ್ಥರ ಮಾಹಿತಿ ಮೇರೆಗೆ ಆರೋಪಿ ಮಹಾಂತೇಶನನ್ನು ಹಾರೂಗೇರಿ ಪೊಲೀಸರು (Police) ಬಂಧಿಸಿದ್ದಾರೆ.

    ಮೃತ ಅಕ್ಬರ್ ಹಾಗೂ ಹಂತಕ ಮಹಾಂತೇಶ ಇಬ್ಬರೂ ಎಮ್ಮೆ ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದರು. ಈ ಹಿಂದೆ ಇಬ್ಬರ ವಿರುದ್ಧವೂ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಒಂದು ವರ್ಷದಿಂದ ಇಬ್ಬರ ಮಧ್ಯೆ ಹಣಕಾಸು ವ್ಯವಹಾರದಲ್ಲಿ ಇಬ್ಬರ ನಡುವೆ ವೈಷಮ್ಯ ಮೂಡಿತ್ತು. ಈ ವಿಚಾರವಾಗಿ ಸಮೀಪದ ಅರಣ್ಯಕ್ಕೆ ಕರೆದೊಯ್ದು ಮದ್ಯಪಾನ ಮಾಡಿಸಿ ಹರಿತವಾದ ಆಯುಧರಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ತನಿಖೆ ವೇಳೆ ತಿಳಿದು ಬಂದಿದೆ. ಪೊಲೀಸರು ಮೊಬೈಲ್ ಜಪ್ತಿ ಮಾಡಿದ್ದು, ಎಫ್‍ಎಸ್‍ಎಲ್‍ಗೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮನೆ ಮುಂದೆಯೇ ಗಾಂಜಾ ಬೆಳೆದು ಪೊಲೀಸರ ಅತಿಥಿಯಾದ ಮಹಿಳೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಲು-ಬಾಯಿ ಜ್ವರದಿಂದ ಸಾವನ್ನಪ್ಪಿದ ಹಸುಗಳು- ರೆಸಾರ್ಟ್ ನಲ್ಲಿ ಕುಳಿತ್ರು ಕಷ್ಟ ಕೇಳಬೇಕಾದ ಶಾಸಕರು !

    ಕಾಲು-ಬಾಯಿ ಜ್ವರದಿಂದ ಸಾವನ್ನಪ್ಪಿದ ಹಸುಗಳು- ರೆಸಾರ್ಟ್ ನಲ್ಲಿ ಕುಳಿತ್ರು ಕಷ್ಟ ಕೇಳಬೇಕಾದ ಶಾಸಕರು !

    ಬೆಳಗಾವಿ/ಚಿಕ್ಕೋಡಿ: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮುಗುಳಿ ಗ್ರಾಮಸ್ಥರು ಕುಡಿಯಲು ನೀರು ಕೇಳಿದ್ರೆ ಮಜ್ಜಿಗೆ ಕೊಡುತ್ತಾರೆ. ಕಾರಣ ಗ್ರಾಮದ ಪ್ರತಿಯೊಬ್ಬರು ಹೈನುಗಾರಿಕೆಯನ್ನು ಉದ್ಯೋಗ ಮಾಡಿಕೊಂಡಿದ್ದಾರೆ. ಆದ್ರೆ ಕಳೆದ ಕೆಲ ದಿನಗಳಿಂದ ಜೀವನಾಧಾರವಾದ ಹಸುಗಳು ಕಾಲು, ಬಾಯಿ ಬೇನೆಯಿಂದ ಸಾವನ್ನಪ್ಪುತ್ತಿವೆ. ನಮ್ಮ ಕಷ್ಟ ಕೇಳಬೇಕಾದ ಶಾಸಕರು ಗುರುಗ್ರಾಮದ ರೆಸಾರ್ಟ್ ನಲ್ಲಿ ಕುಳಿತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಮುಗುಳಿ ಗ್ರಾಮದಲ್ಲಿ ಸರಿ ಸುಮಾರು 3 ಸಾವಿರಕ್ಕೂ ಅಧಿಕ ಹಸುಗಳಿವೆ. ಇಲ್ಲಿನ ರೈತರ ಮೂಲ ಉದ್ಯೋಗವೆಂದರೆ ಅದು ಹೈನುಗಾರಿಕೆಯಾಗಿದ್ದು, ಅದನ್ನೆ ಉಸಿರಾಗಿಸಿಕೊಂಡು ಇಲ್ಲಿನ ರೈತರು ಬದುಕುತ್ತಿದ್ದಾರೆ. ಆದರೆ ಕಳೆದ ಎರಡು ತಿಂಗಳ ಅವಧಿಯಲ್ಲಿ ಈ ಹಸುಗಳಿಗೆ ಕಾಲು ಬೇನೆ ಮತ್ತು ಬಾಯಿ ಬೇನೆ ಬಂದು ಸುಮಾರು 15 ಕ್ಕೂ ಹೆಚ್ಚು ಹಸುಗಳು ಅಸುನೀಗಿವೆ. ಹೀಗಾಗಿ ಇಲ್ಲಿನ ರೈತರಿಗೆ ಹಸುಗಳನ್ನ ಕಾಪಾಡಿಕೊಳ್ಳುವುದು ದೊಡ್ಡ ಚಿಂತೆಯಾಗಿದೆ. ನಮ್ಮ ಕಷ್ಟವನ್ನ ರಾಯಬಾಗ ಕ್ಷೇತ್ರದ ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ಅವರಿಗೆ ಮನವಿ ಸಲ್ಲಿಸಿದ್ದರು ಯಾವುದೇ ಪ್ರಯೋಜನವಾಗಿಲ್ಲ ಎಂದು ರೈತ ಗಣಪತಿ ಬಡಿಗೇರ್ ಹೇಳುತ್ತಾರೆ.

    ಗ್ರಾಮದ ರೈತರ ವತಿಯಿಂದ ಪಶು ಸಂಗೋಪನೆ ಇಲಾಖೆ ಅಧಿಕಾರಿಗಳಿಗೆ ಮತ್ತು ಸ್ಥಳೀಯ ಶಾಸಕರಿಗೆ ಮನವಿ ಮಾಡಿದರು ಇಲ್ಲಿಯವರೆಗೂ ಗ್ರಾಮದಲ್ಲಿ ಪಶು ಆಸ್ಪತ್ರೆ ಆಗಿಲ್ಲ. ಹೀಗಾಗಿ ಇಲ್ಲಿನ ರೈತರು ತಮ್ಮ ಹಸುಗಳನ್ನ ದೂರದ ಚಿಕ್ಕೋಡಿ ಅಥವಾ ಇಲ್ಲವೇ ಅಕ್ಕ ಪಕ್ಕದ ಹಳ್ಳಿಗಳಿಗೆ ಹೋಗಿ ಚಿಕಿತ್ಸೆ ಪಡೆಯುವ ಅಗತ್ಯ ಎದುರಾಗಿದೆ. ಈ ಬಗ್ಗೆ ಪಶುಸಂಗೋಪನೆ ಇಲಾಖೆಯ ಉಪನಿರ್ದೆಶಕರನ್ನ ಕೇಳಿದ್ರೆ ಸರ್ಕಾರಕ್ಕೆ ನಾವು ಸಹ ಪ್ರಸ್ತಾವನೆ ಕಳಿಸಿದ್ದೇವೆ ಆದರೆ ಸರ್ಕಾರ ಹೊಸ ಚಿಕಿತ್ಸಾಲಯಗಳನ್ನು ತೆರೆಯುವ ಮನಸ್ಸು ಮಾಡುತ್ತಿಲ್ಲ. ಬದಲಾಗಿ ಈಗಾಗಲೇ ಇದ್ದ ಚಿಕಿತ್ಸಾಲಯಗಳನ್ನು ಮೇಲ್ದರ್ಜೆಗೇರಿಸುವ ಪ್ರಯತ್ನ ಮಾಡುತ್ತಿದೆ ಚಿಕ್ಕೋಡಿ ಪಶುಸಂಗೋಪನಾ ಇಲಾಖೆಯ ಹಿರಿಯ ಅಧಿಕಾರಿ ಡಾ.ಸದಾಶಿವ ಉಪ್ಪಾರ ಹೇಳುತ್ತಾರೆ.

    ಅವಶ್ಯಕತೆ ಇರುವ ಜಾಗಗಳಲ್ಲಿ ಹೊಸ ಪಶು ಚಿಕಿತ್ಸಾಲಯ ತೆರೆಯೋದು ಬಿಟ್ಟು ಈಗಾಗಲೇ ಇರುವ ಪಶು ಚಿಕಿತ್ಸಾಲಯಗಳನ್ನು ಮೇಲ್ದರ್ಜೆಗೆ ಏರಿಸುವ ಸರ್ಕಾರದ ಕೆಲಸಕ್ಕೆ ಚಿಕ್ಕೋಡಿಯ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಇನ್ನಾದ್ರೂ ಸರ್ಕಾರ ಹೊಸ ಪ್ರಸ್ತಾವನೆಯನ್ನ ಸ್ವೀಕಾರ ಮಾಡಿ ಹೊಸ ಚಿಕಿತ್ಸಾಲಯಗಳನ್ನ ಪ್ರಾರಂಭಿಸುತ್ತಾ ಕಾದು ನೋಡಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಿದ ರಾಯಬಾಗ ತಹಶೀಲ್ದಾರ

    ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಿದ ರಾಯಬಾಗ ತಹಶೀಲ್ದಾರ

    ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ಕೊಡಿಸಿ ರಾಯಭಾಗ ತಹಶೀಲ್ದಾರ್ ಕೆ.ಎನ್.ರಾಜಶೇಖರ್ ಮಾನವೀಯತೆಯನ್ನು ಮೆರದಿದ್ದಾರೆ.

    ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದ ಬಳಿ ಬೈಕ್ ಮತ್ತು ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿತ್ತು. ಈ ವೇಳೆ ರಾಜಶೇಖರ್ ಅದೇ ಮಾರ್ಗದಲ್ಲಿ ಬರುತ್ತಿದ್ದರು. ಅಪಘಾತ ಕಂಡ ಕೂಡಲೇ ತಮ್ಮ ವಾಹನ ನಿಲ್ಲಿಸಿ ಸ್ಥಳೀಯ ವೈದ್ಯರನ್ನು ಕರೆಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ.

    ಚಿಕಿತ್ಸೆ ಕೊಡಿಸಿದ ಬಳಿಕ ಹೊರಡದೇ ಅಂಬುಲೆನ್ಸ್ ಬರೊವರೆಗು ಕಾಯ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಿದ ನಂತರವೇ ತೆರಳಿದ್ದಾರೆ. ತಹಶೀಲ್ದಾರ ರಾಜಶೇಖರ್ ಅವರ ಕಾರ್ಯಕ್ಕೆ ಗ್ರಾಮದ ಜನರು ಮೆಚ್ಚುಗೆಯನ್ನು ಸೂಚಿಸಿದ್ದಾರೆ.