Tag: raid

  • ಯಾದಗಿರಿ | ಅಕ್ಕಿ ಅಕ್ರಮ ಮಾರಾಟ ಜಾಲ ಪತ್ತೆ – 1.17 ಕೋಟಿ ಮೌಲ್ಯದ 4,108 ಕ್ವಿಂಟಾಲ್ ಸೀಜ್

    ಯಾದಗಿರಿ | ಅಕ್ಕಿ ಅಕ್ರಮ ಮಾರಾಟ ಜಾಲ ಪತ್ತೆ – 1.17 ಕೋಟಿ ಮೌಲ್ಯದ 4,108 ಕ್ವಿಂಟಾಲ್ ಸೀಜ್

    -ನಕಲಿ ಬ್ರ್ಯಾಂಡ್‌ ಹೆಸರಿನಲ್ಲಿ ವಿದೇಶಕ್ಕೂ ರಫ್ತು ಮಾಡಿರುವ ಶಂಕೆ

    ಯಾದಗಿರಿ: ಜಿಲ್ಲೆಯ ಎರಡು ರೈಸ್ ಮಿಲ್‌ಗಳ (Rice Mill) ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಒಟ್ಟು 1.17 ಕೋಟಿ ಮೌಲ್ಯದ 4,108 ಕ್ವಿಂಟಾಲ್ ಅಕ್ಕಿ ಜಪ್ತಿ ಮಾಡಿದ್ದಾರೆ.

    ಆಹಾರ ಇಲಾಖೆ ಉಪನಿರ್ದೇಶಕ ಅನೀಲಕುಮಾರ್ ಅವರು ಗುರಮಠಕಲ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅನ್ನಭಾಗ್ಯ ಅಕ್ಕಿಯನ್ನು ಪಾಲಿಶ್‌ ಮಾಡಿಸಿ, ವಿವಿಧ ಬ್ರ್ಯಾಂಡ್‌ ಹೆಸರಿನಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ನೀಡಿದ್ದ ದೂರಿನ ಆಧಾರದ ಪೊಲೀಸರು ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದರು.

    ಆಹಾರ ಪೊರೈಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಆಹಾಯ ಇಲಾಖೆಯ ಖಚಿತ ಮಾಹಿತಿ ಮೇರೆಗೆ ಯಾದಗಿರಿ ಜಿಲ್ಲೆಯ ಗುರಮಠಕಲ್ ಪಟ್ಟಣದ ಹೊರವಲಯದ ಉದ್ಯಮಿ ನರೇಂದ್ರ ರಾಠೋಡ ಹಾಗೂ ಅವರ ಪುತ್ರ ಅಯ್ಯಪ್ಪ ರಾಠೋಡಗೆ ಸೇರಿದ ಲಕ್ಷ್ಮೀ ವೆಂಕಟೇಶ್ವರ ಹಾಗೂ ಲಕ್ಷ್ಮೀ ಬಾಲಾಜಿ ರೈಸ್ ಮಿಲ್ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಗೋದಾಮಿನಲ್ಲಿ ಸಾವಿರಾರು ಅಕ್ಕಿ ಚೀಲಗಳ ಸಂಗ್ರಹ ಪತ್ತೆಯಾಗಿದೆ. ಸತತ ಮೂರು ದಿನಗಳ ಬಳಿಕ ಲೆಕ್ಕ ಕಾರ್ಯ ಮುಕ್ತಾಯವಾಗಿದ್ದು, ಸುಮಾರು 1.17 ಕೋಟಿ ರೂ.ಗೂ ಅಧಿಕ ಮೌಲ್ಯದ 4,108 ಕ್ವಿಂಟಾಲ್ ಅಕ್ಕಿ ಜಪ್ತಿ ಮಾಡಿಕೊಂಡಿದ್ದಾರೆ.ಇದನ್ನೂ ಓದಿ:ಈದ್‌ಮಿಲಾದ್ ವೇಳೆ 15 ನಿಮಿಷ ಪೊಲೀಸರನ್ನ ಸುಮ್ಮನಿರಿಸಿ ಹಾಡು ಪ್ರಸಾರ – ಮೂವರ ವಿರುದ್ಧ ಕೇಸ್  ದಾಖಲು

    ಸದ್ಯ ರೈಸ್ ಮಿಲ್‌ಗೆ ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಿಧ ನಕಲಿ ಬ್ರ್ಯಾಂಡ್‌ನಡಿ ರೈಸ್ ಪಾಲಿಶ್‌ ಮಾಡಿ ಮಾರಾಟ ಮಾಡಿರುವುದು ತಿಳಿದುಬಂದಿದೆ. ಡೈನೆಸ್ಟಿ, ದಾರಾ ಡಬಲ್, ವೋಲ್ಗಾ ಸೇರಿದಂತೆ ವಿವಿಧ ಬ್ರ್ಯಾಂಡ್‌ ಚೀಲದಲ್ಲಿ ಮಾರಾಟ ಮಾಡಿರುವುದು ಪತ್ತೆಯಾಗಿದೆ. ಜೊತೆಗೆ ಕಡಿಮೆ ದರಕ್ಕೆ ಅಕ್ಕಿ ಖರೀದಿ ಮಾಡಿ, ದುಬಾರಿ ಬೆಲೆಗೆ ಅಕ್ಕಿ ಮಾರಾಟ ಮಾಡಿ ಅಕ್ರಮ ದಂಧೆ ನಡೆಸಿರುವುದಲ್ಲದೇ ಸಿಂಗಾಪುರ, ದುಬೈ ಸೇರಿದಂತೆ ವಿವಿಧ ದೇಶದ ಬ್ರ್ಯಾಂಡ್‌ನಲ್ಲಿ ರಫ್ತು ಮಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನೂ ಪಂಜಾಬ್, ಹರಿಯಾಣ, ತೆಲಂಗಾಣ ಸರ್ಕಾರದ ಹೆಸರಿನಲ್ಲಿಯೂ ಪಡಿತರ ಅಕ್ಕಿ ಚೀಲಗಳು ಪತ್ತೆಯಾಗಿದೆ.

    ಈ ಬಗ್ಗೆ ತನಿಖೆಯಾದರೆ ಮತ್ತಷ್ಟು ಅಕ್ಕಿ ಮಾರಾಟ ಜಾಲ ಪತ್ತೆಯಾಗುವ ಸಾಧ್ಯತೆಯಿದೆ. ಸದ್ಯ ಇಬ್ಬರು ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಪೊಲೀಸರು ಅರೆಸ್ಟ್‌ ಮಾಡಲು ಮುಂದಾಗಿದ್ದಾರೆ. ಇದನ್ನೂ ಓದಿ: ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಲು ಪ್ರಚೋದನೆ ಏನು? – ಇಲ್ಲಿದೆ ಇನ್‌ಸೈಡ್‌ ಸ್ಟೋರಿ

  • ಒಡಿಶಾ | ಅರಣ್ಯ ಅಧಿಕಾರಿ ಮನೆ ಮೇಲೆ ವಿಜಿಲೆನ್ಸ್ ದಾಳಿ – ಸಂಪತ್ತಿನ ಖಜಾನೆ ಪತ್ತೆ!

    ಒಡಿಶಾ | ಅರಣ್ಯ ಅಧಿಕಾರಿ ಮನೆ ಮೇಲೆ ವಿಜಿಲೆನ್ಸ್ ದಾಳಿ – ಸಂಪತ್ತಿನ ಖಜಾನೆ ಪತ್ತೆ!

    – 1.44 ಕೋಟಿ ನಗದು, 4 ಗೋಲ್ಡ್ ಬಿಸ್ಕೆಟ್, 16 ಚಿನ್ನದ ನಾಣ್ಯಗಳು ಪತ್ತೆ

    ಭುವನೇಶ್ವರ: ಒಡಿಶಾದ ಜೈಪುರದಲ್ಲಿ ಅರಣ್ಯ ಇಲಾಖೆಯ ಅಧಿಕಾರಿ ಮನೆ ಮೇಲೆ ವಿಜಿಲೆನ್ಸ್ ಅಧಿಕಾರಿಗಳು (Vigilance officer) ದಾಳಿ ನಡೆಸಿದ್ದು, ಸಂಪತ್ತಿನ ಖಜಾನೆಯೇ ಪತ್ತೆಯಾಗಿದೆ.ಇದನ್ನೂ ಓದಿ: ಪತಿಯನ್ನು ಪತ್ನಿ ನದಿಗೆ ತಳ್ಳಿದ್ದ ಆರೋಪ ಪ್ರಕರಣ – ಪತಿ ತಾತಪ್ಪ ಸೇರಿ 10 ಜನರ ವಿರುದ್ಧ ಪೋಕ್ಸೋ ಕೇಸ್

    ಶುಕ್ರವಾರ (ಜು.25) ಬೆಳಗಿನ ಜಾವ ವಿಜಿಲೆನ್ಸ್ ಅಧಿಕಾರಿಗಳು ಅರಣ್ಯ ಇಲಾಖೆಯ ಅಧಿಕಾರಿ ರಾಮಚಂದ್ರ ನೇಪಕ್ ಅವರ ಜೈಪುರ ನಿವಾಸ ಸೇರಿ ಆರು ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ 1.44 ಕೋಟಿ ರೂ. ನಗದು ಪತ್ತೆಯಾಗಿದ್ದು, ಹಣ ಎಣಿಕೆ ಯಂತ್ರವನ್ನು ತರೆಸಿಕೊಳ್ಳಲಾಗಿತ್ತು ಎಂದು ಮೂಲಗಳು ತಿಳಿಸಿವೆ.

    ನಗದಿನ ಜೊತೆಗೆ 4 ಚಿನ್ನದ ಬಿಸ್ಕೆಟ್ ಮತ್ತು 16 ಚಿನ್ನದ ನಾಣ್ಯಗಳು ಪತ್ತೆಯಾಗಿವೆ. ಅಧಿಕಾರಿ ವಿರುದ್ಧ ಆದಾಯ ಮೀರಿ ಅಕ್ರಮ ಆಸ್ತಿ ಹೊಂದಿರುವ ಬಗ್ಗೆ ಆರೋಪ ಕೇಳಿ ಬಂದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು. ಜೊತೆಗೆ ಅವರು ಜಮೀನಿನಲ್ಲಿ ನಿರ್ಮಿಸಲಾಗಿದ್ದ ಮನೆ, ಅವರ ಅತ್ತೆಯ ಮನೆ ಹಾಗೂ ಭುವನೇಶ್ವರದಲ್ಲಿರುವ ಅವರ ಸಹೋದರನ ಫ್ಲಾಟ್ ಮೇಲೆಯೂ ದಾಳಿ ನಡೆದಿದೆ.ಇದನ್ನೂ ಓದಿ: 2 ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ನೇಣಿಗೆ ಶರಣು

     

  • ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ – ಬೆಂಗಳೂರು ಸೇರಿ ಹಲವೆಡೆ ‘ಲೋಕಾ’ ದಾಳಿ

    ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ – ಬೆಂಗಳೂರು ಸೇರಿ ಹಲವೆಡೆ ‘ಲೋಕಾ’ ದಾಳಿ

    ಬೆಂಗಳೂರು: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುರುವಾರ ದಾಳಿ ನಡೆಸಿದೆ.

    ಆದಾಯಕ್ಕೂ ಹೆಚ್ಚು ಆಸ್ತಿ ಗಳಿಕೆ ಮಾಡಿರುವ ಆರೋಪದ ಹಿನ್ನೆಲೆ ಭ್ರಷ್ಟ ಏಳು ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳನ್ನು ದಾಳಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಅಧಿಕಾರಿಗಳಾದ ಟಿ.ವಿ.ಮುರಳಿ, ಹೆಚ್‌.ಆರ್‌.ನಟರಾಜ್‌ ಮತ್ತು ಗ್ರಾಮಾಂತರದಲ್ಲಿ ಅನಂತ್‌ಕುಮಾರ್‌ಗೆ ಸೇರಿದ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ದಾಖಲೆಗಳನ್ನು ಪರಿಶೀಲನೆ ನಡೆಸಿದೆ.

    ತುಮಕೂರು: ನಿರ್ಮಿತಿ ಕೇಂದ್ರ ಎಂಡಿ ರಾಜಶೇಖರ ಮನೆ ಮೇಲೆ ರೇಡ್‌ ಆಗಿದೆ. ತುಮಕೂರಿನ ಸಪ್ತಗಿರಿ ಬಡಾವಣೆ, ಎಸ್‌ಎಸ್ ಪುರಂನಲ್ಲಿ ಇರುವ ರಾಜಶೇಖರ ಸಹೋದರನ ಮನೆ ಮೇಲೂ ದಾಳಿ ಆಗಿದೆ. ಅಕ್ರಮ ಆಸ್ತಿ ಸಂಪಾದನೆ ಆರೋಪ ಕಾರಣಕ್ಕೆ 10 ಮಂದಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ.

    ಕಲಬುರಗಿ: ಶಹಾಪೂರ ತಹಸೀಲ್ದಾರ್‌ ಉಮಾಕಾಂತ ಹಳ್ಳೆ ಅವರ ಮನೆ ಮೇಲೂ ದಾಳಿ ಆಗಿದೆ. ಕಲಬುರಗಿಯ ಅಕ್ಕಮಹಾದೇವಿ ಬಡಾವಣೆಯಲ್ಲಿ ತಹಸೀಲ್ದಾರ್‌ ಅವರ ಮನೆ ಮತ್ತು ಕಚೇರಿ ಇದೆ. ಮನೆ ಹಾಗೂ ಕಚೇರಿಯಲ್ಲಿ ಲೋಕಾ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.

  • ಶಿಗ್ಗಾಂವಿ ಉಪಚುನಾವಣೆ: ತೆರಿಗೆ ಇಲಾಖೆಯಿಂದ ನಗದು ಸೇರಿ 5 ಲಕ್ಷ ಮೌಲ್ಯದ ವಸ್ತುಗಳು ವಶ

    ಶಿಗ್ಗಾಂವಿ ಉಪಚುನಾವಣೆ: ತೆರಿಗೆ ಇಲಾಖೆಯಿಂದ ನಗದು ಸೇರಿ 5 ಲಕ್ಷ ಮೌಲ್ಯದ ವಸ್ತುಗಳು ವಶ

    ಹಾವೇರಿ: ಜಿಲ್ಲೆಯಾದ್ಯಂತ ಜಾರಿಯಾಗಿದ್ದ ಮಾದರಿ ನೀತಿ ಸಂಹಿತೆ ಹಿನ್ನೆಲೆ ವಿವಿಧ ಕಡೆಗಳಲ್ಲಿ ತೆರಿಗೆ ಇಲಾಖೆಯಿಂದ ಭರ್ಜರಿ ದಾಳಿ ನಡೆದಿದ್ದು, ನಗದು ಸೇರಿ 5 ಲಕ್ಷ ರೂ. ಮೌಲ್ಯದ ವಸ್ತುಗಳು ವಶಪಡಿಸಿಕೊಂಡಿದ್ದಾರೆ.ಇದನ್ನೂ ಓದಿ: ಬೆಂಗಳೂರು ಪೊಲೀಸರು ಬಲೆ ಬೀಸಿದ್ದ ರಾಬರಿ ಗ್ಯಾಂಗ್‌ನ ಫಹೀಮ್ ಯುಪಿಯಲ್ಲಿ ಬಂಧನ

    ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆ ಹಾವೇರಿ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಿತ್ತು. ಈ ವೇಳೆ ವಾಣಿಜ್ಯ ತೆರಿಗೆ ಇಲಾಖೆಯಿಂದ ದಾಳಿ ನಡೆಸಿದ್ದು, 2,68,270 ರೂ. ನಗದು, 1 ಲಕ್ಷ 60 ಸಾವಿರ ರೂ. ಮೌಲ್ಯದ 8 ಕೆ.ಜಿ 240 ಗ್ರಾಂ ಗಾಂಜಾ, 55,13,926 ಲಕ್ಷ ರೂ. ಮೌಲ್ಯದ 4,686 ಲೀಟರ್‌ನಷ್ಟು ಮದ್ಯ ವಶಪಡಿಸಿಕೊಳ್ಳಲಾಗಿದೆ. ಇನ್ನೂ 3 ಲಕ್ಷ ರೂ. ಮೌಲ್ಯದ 5 ವಾಹನ ಜಪ್ತಿ ಮಾಡಲಾಗಿದ್ದು, ಒಟ್ಟು ವಾಣಿಜ್ಯ ತೆರಿಗೆ ಇಲಾಖೆಯಿಂದ 5,34,850 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಅಬಕಾರಿ ಇಲಾಖೆಯಿಂದ ಒಟ್ಟು 232 ಪ್ರಕರಣ ದಾಖಲಾಗಿದ್ದು, ಮಾದರಿ ನೀತಿ ಸಂಹಿತಿ ಉಲ್ಲಂಘನೆ ಸಂಬಂಧ 3 ಕೇಸ್ ದಾಖಲಿಸಲಾಗಿದೆ.ಇದನ್ನೂ ಓದಿ: ಏರ್ ಇಂಡಿಯಾದೊಂದಿಗೆ ವಿಸ್ತಾರ ವಿಲೀನ – ದೋಹಾದಿಂದ ಮುಂಬೈಗೆ ಮೊದಲ ವಿಮಾನ ಹಾರಾಟ

  • ಪರಪ್ಪನ ಅಗ್ರಹಾರಕ್ಕೆ ಏಕಾಏಕಿ ಸಿಸಿಬಿ ದಾಳಿ: 18 ಮೊಬೈಲ್, ಮಾದಕ ವಸ್ತು, ಹಣ ಸೀಜ್

    ಪರಪ್ಪನ ಅಗ್ರಹಾರಕ್ಕೆ ಏಕಾಏಕಿ ಸಿಸಿಬಿ ದಾಳಿ: 18 ಮೊಬೈಲ್, ಮಾದಕ ವಸ್ತು, ಹಣ ಸೀಜ್

    – ವಿಲ್ಸನ್‌ಗಾರ್ಡನ್ ನಾಗನದ್ದು ಸೇರಿದಂತೆ 18 ಮೊಬೈಲ್ ಸೀಜ್
    – ಡಿಸಿಪಿ ಸ.ರಾ ಫಾತಿಮಾ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಪೊಲೀಸರಿಂದ ದಾಳಿ

    ಬೆಂಗಳೂರು: ದರ್ಶನ್ (Actor Darshan) ರಾಜಾತಿಥ್ಯ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿಗೆ (Parappana Agrahara Jail) ಪೊಲೀಸರು ಏಕಾಏಕಿ ದಾಳಿ ನಡೆಸಿದ್ದು, ಮೊಬೈಲ್ ಸೇರಿದಂತೆ ಮಾದಕ ವಸ್ತು ಹಾಗೂ ಹಣವನ್ನು ವಶಕ್ಕೆ ಪಡೆದಿದ್ದಾರೆ.

    ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದಿದ್ದ ದರ್ಶನ್ ಹಾಗೂ ವಿಲ್ಸನ್‌ಗಾರ್ಡನ್ ನಾಗನ ಫೋಟೋ ವೈರಲ್ ಆದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಪೊಲೀಸರು ಹದ್ದಿನ ಕಣ್ಣಿದ್ದರು. ಜೊತೆಗೆ ಜೈಲಾಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದಿದ್ದವು. ಆದರೆ ಇದೀಗ ಏಕಾಏಕಿ ದಾಳಿ ನಡೆಸಿದ್ದಾರೆ.ಇದನ್ನೂ ಓದಿ: Breaking – ಸಿಎಂ ಹುದ್ದೆಗೆ ರಾಜೀನಾಮೆ ಘೋಷಿಸಿದ ಅರವಿಂದ್‌ ಕೇಜ್ರಿವಾಲ್‌!

    ಪರಪ್ಪನ ಅಗ್ರಹಾರ ಜೈಲಿನ ಮೇಲೆ ಆಗ್ನೇಯ ಪೊಲೀಸರಿಂದ ದಾಳಿ ನಡೆದಿದ್ದು, ರಾತ್ರಿ ಏಕಾಏಕಿ ಡಿಸಿಪಿ ಸರಾ ಫಾತಿಮಾ (DCP Sarah Fathima) ನೇತೃತ್ವದಲ್ಲಿ 50ಕ್ಕೂ ಹೆಚ್ಚು ಪೊಲೀಸರಿಂದ ದಾಳಿ ನಡೆಸಲಾಗಿದೆ. ಜೈಲಿನಲ್ಲಿ ಮೊಬೈಲ್ ಬಳಕೆಗೆ ಬಲವಾದ ಪುರಾವೆಗಳು ಲಭ್ಯವಾಗಿದ್ದು, ಜೈಲಾಧಿಕಾರಿಗಳ ಕಳ್ಳಾಟ ಮುಂದುವರೆದಿರುವುದು ದಾಳಿ ವೇಳೆ ಸಾಬೀತಾಗಿದೆ.

    ಕುಖ್ಯಾತ ರೌಡಿ ವಿಲ್ಸನ್‌ಗಾರ್ಡನ್ ನಾಗನ (Wilson Garden Naga) ಬ್ಯಾರಕ್ ಅಕ್ಕಪಕ್ಕದಲ್ಲಿ ಮೊಬೈಲ್‌ಗಳು ಪತ್ತೆಯಾಗಿದ್ದು, ಸುಮಾರು 17 ಆಂಡ್ರಾಯ್ಡ್ ಫೋನ್‌ಗಳು ಸಿಕ್ಕಿವೆ. ವಿಲ್ಸನ್ ಗಾರ್ಡನ್ ನಾಗನ ಮೊಬೈಲ್ ಸೇರಿದಂತೆ ಸಹಚರರ ಸುಮಾರು 18 ಮೊಬೈಲ್ ಸೀಜ್ ಮಾಡಿದ್ದಾರೆ. ಜೊತೆಗೆ ಮಾದಕ ವಸ್ತು ಹಾಗೂ ಹಣವನ್ನು ವಶಕ್ಕೆ ಪಡೆದಿದ್ದಾರೆ. ಇದನ್ನು ಕಂಡು ಖುದ್ದು ಪೊಲೀಸರೇ ಶಾಕ್ ಆಗಿದ್ದಾರೆ. ಇಷ್ಟೆಲ್ಲಾ ಇದ್ದರೂ ವಿಲ್ಸನ್‌ಗಾರ್ಡನ್ ನಾಗನನ್ನು ಬೇರೆ ಕಡೆ ಏಕೆ ವರ್ಗಾವಣೆ ಮಾಡಲಿಲ್ಲ. ಅವನ ಹಿಂದೆ ಯಾರಿದ್ದಾರೆ? ಅವನಿಗೆ ಇಲಾಖೆಯಲ್ಲಿ ಇಷ್ಟೊಂದು ಪ್ರಭಾವವಿದೇಯಾ? ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ.ಇದನ್ನೂ ಓದಿ: ಶಾಸಕ ಮುನಿರತ್ನ ಬಂಧನ ಪ್ರಕರಣ – ತಪ್ಪು ಮಾಡಿರೋದು ಸಾಮಾನ್ಯ ವ್ಯಕ್ತಿಯಲ್ಲ ಒಬ್ಬ ಮಾಜಿ ಮಂತ್ರಿ: ಡಿಕೆ ಸುರೇಶ್‌

  • ನಕಲಿ ವೈದ್ಯರಿಗೆ ಶಾಕ್ ನೀಡಿದ ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳು

    ನಕಲಿ ವೈದ್ಯರಿಗೆ ಶಾಕ್ ನೀಡಿದ ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳು

    ಬೀದರ್: ಗಡಿ ಜಿಲ್ಲೆ ಬೀದರ್‌ನಲ್ಲಿ (Bidar) ನಕಲಿ ವೈದ್ಯರ (Fake Doctor) ಹಾವಳಿ ಹಿನ್ನೆಲೆಯಲ್ಲಿ ಇಂದು (ಬುಧವಾರ) ಕಮಲನಗರ ತಾಲೂಕಿನ ಒಟ್ಟು 6 ನಕಲಿ ಕ್ಲಿನಿಕ್‌ಗಳ (Clinic) ಮೇಲೆ ದಿಢೀರ್ ದಾಳಿ (Raid) ಮಾಡಿ ವೈದ್ಯಾಧಿಕಾರಿಗಳು ನಕಲಿ ವೈದ್ಯರಿಗೆ ಶಾಕ್ ನೀಡಿದ್ದಾರೆ.

    ನಕಲಿ ಕ್ಲಿನಿಕ್‌ಗಳಾದ ಡಾ. ಬಿಹಾರಿ ಕ್ಲಿನಿಕ್, ಲಕ್ಷ್ಮೀ ಕ್ಲಿನಿಕ್ ಸೇರಿದಂತೆ ಒಟ್ಟು 6 ಕ್ಲಿನಿಕ್‌ಗಳ ಮೇಲೆ ತಾಲೂಕಿನ ಆರೋಗ್ಯಾಧಿಕಾರಿ ಡಾ. ಗಾಯತ್ರಿ ವಿಜಯಕುಮಾರ್ ಮತ್ತು ತಂಡದಿಂದ ದಾಳಿ ಮಾಡಲಾಗಿದೆ. ಇದನ್ನೂ ಓದಿ: ಡಾಲಿ ‘ಲಿಡ್ಕರ್’ಗೆ ರಾಯಭಾರಿ: ಸಿಎಂ ಅಧಿಕೃತ ಘೋಷಣೆ

    ದಾಳಿ ಮಾಡಿ ನಕಲಿ ವೈದ್ಯರ ಮೇಲೆ ಪ್ರಕರಣ ದಾಖಲಿಸಿದ ಜಿಲ್ಲಾ ಆರೋಗ್ಯಾಧಿಕಾರಿಗಳು ಲಕ್ಷಾಂತರ ಮೌಲ್ಯದ ಔಷಧಿಗಳನ್ನು ಜಪ್ತಿ ಮಾಡಿದ್ದಾರೆ. ಜೊತೆಗೆ ಯಾವುದೇ ಪರವಾನಿಗೆ ಇಲ್ಲದ ಕಮಲನಗರ ಗ್ರಾಮೀಣ ಭಾಗದ 2 ಕ್ಲಿನಿಕ್ ಹಾಗೂ ಪಟ್ಟಣದಲ್ಲಿ 4 ನಕಲಿ ಕ್ಲಿನಿಕ್‌ಗಳಿಗೆ ಬೀಗ ಹಾಕಲಾಗಿದೆ.

    ಸಾರ್ವಜನಿಕರು ನಕಲಿ ವೈದ್ಯರ ಹತ್ತಿರ ಚಿಕಿತ್ಸೆ ಪಡೆಯದೆ ನೊಂದಾಯಿತ ವೈದ್ಯರ ಬಳಿ ಚಿಕಿತ್ಸೆ ಪಡೆಯಬೇಕು ಎಂದು ಟಿಎಚ್‌ಒ ಮನವಿ ಮಾಡಿದ್ದಾರೆ. ಇದನ್ನೂ ಓದಿ: ‘ಮಿಚಾಂಗ್’‌ ಎಫೆಕ್ಟ್‌; 5,060 ಕೋಟಿ ಪರಿಹಾರ ನೀಡಿ – ಪ್ರಧಾನಿಗೆ ತ.ನಾಡು ಸಿಎಂ ಪತ್ರ

  • ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

    ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

    ಬೆಂಗಳೂರು: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ (Lokayukta Raid) ನಡೆಸಿದೆ. ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಲಾಗಿದೆ.

    13 ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದರಲ್ಲಿ ಬೆಂಗಳೂರಿನಲ್ಲಿ 3 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಯಿಂದ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ. ಇದನ್ನೂ ಓದಿ: Cyclone Michaung ರೌದ್ರಾವತಾರಕ್ಕೆ ಚೆನ್ನೈನಲ್ಲಿ ಐವರು ಬಲಿ; ಶಾಲಾ-ಕಾಲೇಜುಗಳಿಗೆ ರಜೆ

    ಬೆಂಗಳೂರಿನಲ್ಲಿ 3 ಕಡೆಯಾದರೆ, ಕಲಬುರಗಿ, ಬೀದರ್, ಬಳ್ಳಾರಿ, ಕೊಪ್ಪಳ, ಚಿಕ್ಕಬಳ್ಳಾಪುರ, ಮೈಸೂರು, ಕೋಲಾರ, ಧಾರವಾಡದಲ್ಲಿಯೂ ದಾಳಿ ನಡೆಸಲಾಗಿದೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಸಂಬಂಧ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಿಮ್ಗೂ ದೇಶದ ಸಂಪತ್ತಿನಲ್ಲಿ ಪಾಲು ಸಿಗಬೇಕು, ಅನ್ಯಾಯ ಆಗೋಕೆ ಬಿಡಲ್ಲ – ಮುಸ್ಲಿಂ ಸಮಾವೇಶದಲ್ಲಿ ಸಿಎಂ ಅಭಯ

  • ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್ – ರಾಜ್ಯದ 90 ಕಡೆ ಏಕಕಾಲದಲ್ಲಿ ದಾಳಿ

    ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್ – ರಾಜ್ಯದ 90 ಕಡೆ ಏಕಕಾಲದಲ್ಲಿ ದಾಳಿ

    ಬೆಂಗಳೂರು: ಭ್ರಷ್ಟರನ್ನು ಬೇಟೆಯಾಡುವ ಸಲುವಾಗಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ (Lokayukta) ಅಧಿಕಾರಿಗಳು ರಾಜ್ಯದ 90 ಕಡೆ ದಾಳಿ ನಡೆಸಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿಗಳಿಂದ ಏಕಕಾಲದಲ್ಲಿ ದಾಳಿ ನಡೆದಿದೆ.

    17 ಸರ್ಕಾರಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿತ್ತು. ದೂರಿನ ಅನ್ವಯ ಒಟ್ಟು 17 ಅಧಿಕಾರಿಗಳಿಗೆ ಸಂಬಂಧಿಸಿದಂತೆ ಒಟ್ಟು 75 ಕಡೆ ದಾಳಿ ಮಾಡಲಾಗಿದೆ. ಒಟ್ಟು 250 ಅಧಿಕಾರಿಗಳು ತಂಡದಿಂದ ದಾಳಿ ನಡೆಸಲಾಗಿದೆ. ಇದನ್ನೂ ಓದಿ: ನೆರೆಮನೆಯಾತ ಸೀರೆ ಎಳೆದಿದ್ದಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ

    ಬೆಂಗಳೂರಿನ ಕೆಆರ್‌ಪುರದಲ್ಲಿ ಆರ್‌ಟಿಓ ಅಧಿಕಾರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು (Officers) ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಯ ಮನೆ, ಕಚೇರಿ ಸೇರಿದಂತೆ ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಮೂರು ಕಡೆಗಳಲ್ಲೂ ಪರಿಶೀಲನೆ ಮುಂದುವರಿಯುತ್ತಿದೆ. ಇದನ್ನೂ ಓದಿ: ಆಂಧ್ರದಲ್ಲಿ ರೈಲು ದುರಂತ – 12 ರೈಲುಗಳ ಸಂಚಾರ ರದ್ದು

    ಚಂದ್ರಪ್ಪ ಪಾಲಿಕೆ ಎಆರ್‌ಓ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಚಂದ್ರಪ್ಪಗೆ ಸೇರಿದ ಮೂರು ಸ್ಥಳಗಳ ದಾಳಿ ನಡೆಸಲಾಗಿದೆ. ಇಬ್ಬರು ಎಸ್‌ಪಿಗಳ ನೇತೃತ್ವದಲ್ಲಿ ದಾಳಿ ನಡೆಸಿದ್ದು, ವಂಶಿ ಕೃಷ್ಣ, ಶ್ರೀನಾಥ್ ಜೋಶಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಇದನ್ನೂ ಓದಿ: ನಾಗರ ಹಾವು ಓಡಿಸಲು ಹೊಗೆ ಹಾಕಿದ ಕುಟುಂಬ- ಇಡೀ ಮನೆ ಭಸ್ಮ

    ಆರ್‌ಆರ್ ನಗರ ವಲಯ ಹೆಗ್ಗನಹಳ್ಳಿ ವಾರ್ಡ್ ಎಆರ್‌ಓ ಚಂದ್ರಪ್ಪ 30ನೇ ತಾರೀಕಿನಂದು ಲಂಚ (Bribe) ಪಡೆಯುವಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರು. ಈ ಹಿನ್ನೆಲೆ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಇದನ್ನೂ ಓದಿ: ಕೇರಳದಲ್ಲಿ ಸ್ಫೋಟ ಪ್ರಕರಣ- ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

    ಇನ್ನು ಕಾರ್ಮಿಕ ಇಲಾಖೆ ಡೆಪ್ಯೂಟಿ ಡೈರೆಕ್ಟರ್ ಶ್ರೀನಿವಾಸ್ ಮನೆ ಮೇಲೆ ಲೋಕಾ ದಾಳಿ ನಡೆಸಿದೆ. ಬೆಂಗಳೂರು ಹಾಗೂ ಕೊಳ್ಳೆಗಾಲ ಮನೆ ಮೇಲೆ ದಾಳಿ ನಡೆಸಿದ್ದು,ಲೋಕಾಯುಕ್ತ ಅಧಿಕಾರಿಗಳಿಂದ ಮನೆಯಲ್ಲಿ ದಾಖಲೆ ಪರಿಶೀಲನೆ ನಡೆಸಲಾಗಿದೆ. ಶ್ರೀನಿವಾಸ್‌ಗೆ ಸಂಬಂಧಿಸಿದ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ಇದನ್ನೂ ಓದಿ: ಬದಲಾಗುತ್ತಾ ನಮ್ಮ ಮೆಟ್ರೋ ಹೆಸರು?

    ದಾಳಿ ವೇಳೆ ಶ್ರೀನಿವಾಸ್ ಮನೆಯಲ್ಲಿ ಕಂತೆ ಕಂತೆ ಹಣ, ಚಿನ್ನಾಭರಣ ಪತ್ತೆಯಾಗಿದೆ. ಶ್ರೀನಿವಾಸ್‌ಗೆ ಸೇರಿ ಉಪ್ಕಾರ್ ರೆಸಿಡೆನ್ಸಿ ಉಲ್ಲಾಳ್ ಮನೆಯಲ್ಲಿ ಹಣ ಹಾಗೂ ಚಿನ್ನಾಭರಣ ಪತ್ತೆಯಾಗಿದ್ದು, ಶ್ರಿನಿವಾಸ್ ಮನೆ ಸೇರಿದಂತೆ ನಗರದ 9 ಕಡೆ ದಾಳಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಅದೇ ರೀತಿ ರಾಜ್ಯದ ಅನೇಕ ಜಿಲ್ಲೆಗಳಲ್ಲೂ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಭೀಕರ ರೈಲು ದುರಂತ ಪ್ರಕರಣ- ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಐಟಿ, ಇಡಿ, ಸಿಬಿಐ ಎಲ್ಲಾ ಕೇಂದ್ರದ ವ್ಯಾಪ್ತಿಯಲ್ಲಿವೆ; ಅವರು ಆಡಿದ್ದೇ ಆಟ: ಸಂತೋಷ್ ಲಾಡ್

    ಐಟಿ, ಇಡಿ, ಸಿಬಿಐ ಎಲ್ಲಾ ಕೇಂದ್ರದ ವ್ಯಾಪ್ತಿಯಲ್ಲಿವೆ; ಅವರು ಆಡಿದ್ದೇ ಆಟ: ಸಂತೋಷ್ ಲಾಡ್

    ಧಾರವಾಡ: ಐಟಿ, ಇಡಿ, ಸಿಬಿಐ ಎಲ್ಲಾ ಕೇಂದ್ರದ ವ್ಯಾಪ್ತಿಯಲ್ಲಿವೆ. ಅವರು ಆಡಿದ್ದೇ ಆಟ ಎಂದು ಧಾರವಾಡ (Dharwad) ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ (Santosh Lad) ಹೇಳಿಕೆ ನೀಡಿದ್ದಾರೆ.

    ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ (IT Raid) ಸಿಕ್ಕ 40 ಕೋಟಿ ರೂ. ಹಣ ಕಾಂಗ್ರೆಸ್‌ಗೆ ಸೇರಿದ್ದು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಪ್ರತಿಕ್ರಿಯಿಸಿದ ಅವರು, ವಿರೋಧ ಪಕ್ಷದವರು ಸಾಮಾನ್ಯವಾಗಿ ಈ ರೀತಿಯ ಆರೋಪ ಮಾಡಿಯೇ ಮಾಡುತ್ತಾರೆ ಎಂದು ಟಾಂಗ್ ನೀಡಿದರು. ಇದನ್ನೂ ಓದಿ: ನಂಜುಂಡೇಶ್ವರನ ಸನ್ನಿಧಾನದಲ್ಲಿ ಹೆಚ್‍ಡಿಕೆ ಕುಟುಂಬದಿಂದ ಬೆಲ್ಲದ ತುಲಾಭಾರ

    ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಐಟಿ, ಇಡಿ, ಸಿಬಿಐ ಎಲ್ಲವೂ ಅವರ ಕೈಯಲ್ಲಿದೆ. ಅವರು ಆಡಿದ್ದೇ ಆಟ. ಈಗ ಎಲ್ಲವೂ ತನಿಖೆ ನಡೆಯುತ್ತಿದೆ. ತನಿಖೆ ಮುಗಿಯವವರೆಗೂ ಕಾಯೋಣ ಎಂದರು.

    ಅಬಕಾರಿ ಇಲಾಖೆ ಮದ್ಯ ವ್ಯಾಪಾರಿಗಳಿಂದ ಲಂಚ ಪಡೆಯುತ್ತಿದೆ ಎಂದು ಮದ್ಯ ವ್ಯಾಪಾರಿಗಳು ಪತ್ರ ಬರೆದಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಲಾಡ್, ಈ ವಿಚಾರ ಸಿಎಂ ಗಮನಕ್ಕೆ ಹೋಗಿದೆ. ಅವರು ಅದಕ್ಕೆ ಪರಿಹಾರ ಕಂಡು ಹಿಡಿಯುತ್ತಾರೆ ಎಂದರು. ಇದನ್ನೂ ಓದಿ: ಹೈಕಮಾಂಡ್ ನಯಾ ಪೈಸೆ ಕೇಳಿಲ್ಲ- ಬಿಜೆಪಿ ಆರೋಪಕ್ಕೆ ಸಿಎಂ ಕಿಡಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನ್ಯೂಸ್‌ಕ್ಲಿಕ್ ಆನ್‌ಲೈನ್ ಪೋರ್ಟಲ್ ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸ್ ದಾಳಿ

    ನ್ಯೂಸ್‌ಕ್ಲಿಕ್ ಆನ್‌ಲೈನ್ ಪೋರ್ಟಲ್ ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸ್ ದಾಳಿ

    ನವದೆಹಲಿ: ಚೀನಾ (China) ಜೊತೆಗೆ ಆರ್ಥಿಕ ಸಂಬಂಧ ಹೊಂದಿರುವ ಆರೋಪದ ಮೇಲೆ ನ್ಯೂಸ್‌ಕ್ಲಿಕ್ (NewsClick) ಆನ್‌ಲೈನ್ ಪೋರ್ಟಲ್‌ಗೆ (Online Portal) ಸಂಬಂಧಿಸಿದ ಪತ್ರಕರ್ತರು (Journalist) ಮತ್ತು ಉದ್ಯೋಗಿಗಳ ಮನೆಗಳ ಮೇಲೆ ಮಂಗಳವಾರ ಬೆಳಗ್ಗೆ ದೆಹಲಿ ಪೊಲೀಸರ ವಿಶೇಷ ತಂಡ ದಾಳಿ (Raid) ನಡೆಸಿದೆ. 100ಕ್ಕೂ ಹೆಚ್ಚು ಸ್ಥಳಗಳಲ್ಲಿ 500ಕ್ಕೂ ಹೆಚ್ಚು ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

    ಅಕ್ಟೋಬರ್ 2 ರಂದು ದೆಹಲಿ ಪೊಲೀಸ್ (Delhi Police) ವಿಶೇಷ ಕೋಶದ ಹಿರಿಯ ಅಧಿಕಾರಿಗಳ ಸಭೆ ನಡೆದಿದ್ದು, ಪ್ರಕರಣವನ್ನು ಮುಂದಕ್ಕೆ ಕೊಂಡೊಯ್ಯುವ ಬಗ್ಗೆ ನಿರ್ಧರಿಸಿತ್ತು. ಅಂತಯೇ ದೆಹಲಿ, ನೋಯ್ಡಾ, ಗಾಜಿಯಾಬಾದ್, ಗುರುಗ್ರಾಮ್ ಮತ್ತು ಮುಂಬೈನ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಲಾಯಿತು. ಇದನ್ನೂ ಓದಿ: ಬಾಲ್ಯ ವಿವಾಹದ ವಿರುದ್ಧ ಸಮರ – ಮತ್ತೆ 800ಕ್ಕೂ ಅಧಿಕ ಮಂದಿಯ ಬಂಧನ

    ಮೂಲಗಳ ಪ್ರಕಾರ ದಾಳಿಗೆ ಒಳಗಾದವರ ಹೆಸರುಗಳನ್ನು ಎ, ಬಿ, ಸಿ ಎಂದು ವರ್ಗಗಳಾಗಿ ವಿಂಗಡಿಸಲಾಗಿತ್ತು. ಎ ವರ್ಗಕ್ಕೆ ಸೇರಿದವರನ್ನು ಬಂಧಿಸಲಾಗಿದೆ. ಬಿ ಮತ್ತು ಸಿ ನ್ಯೂಸ್ ಪೋರ್ಟಲ್‌ನ ಪತ್ರಕರ್ತರ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್‌ಗಳಿಂದ ಡೇಟಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನ್ಯೂಸ್‌ಕ್ಲಿಕ್‌ನ ಸಂಸ್ಥಾಪಕ ಮತ್ತು ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರನ್ನು ವಿಚಾರಣೆಗಾಗಿ ದೆಹಲಿ ಪೊಲೀಸ್ ವಿಶೇಷ ಸೆಲ್ ಕಚೇರಿಗೆ ಕರೆತರಲಾಯಿತು. ಇದನ್ನೂ ಓದಿ: ಇರುವುದೊಂದೇ ಸನಾತನ ಧರ್ಮ, ಉಳಿದೆಲ್ಲವೂ ಪಂಥಗಳು: ಯೋಗಿ

    ಆಗಸ್ಟ್ 17ರಂದು ಕಟ್ಟುನಿಟ್ಟಾದ ಭಯೋತ್ಪಾದನಾ-ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ದಾಖಲಾದ ಪ್ರಕರಣವನ್ನು ಆಧರಿಸಿ ದೆಹಲಿಯ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ದೆಹಲಿ ಮತ್ತು ನೋಯ್ಡಾ ಮತ್ತು ಗಾಜಿಯಾಬಾದ್‌ನ ನೆರೆಯ ಪ್ರದೇಶಗಳಲ್ಲಿ ದೆಹಲಿ ಪೊಲೀಸರ ವಿಶೇಷ ಸೆಲ್ ದಾಳಿ ನಡೆಸಿತು. ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಆದರೆ ಕೆಲವು ಪತ್ರಕರ್ತರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬಿಹಾರ ಜಾತಿ ಸಮೀಕ್ಷೆ ವರದಿ ಬಿಡುಗಡೆ; ಜಾತಿ ಹೆಸರಲ್ಲಿ ದೇಶ ವಿಭಜಿಸುವ ಪ್ರಯತ್ನವೆಂದು ಮೋದಿ ವಾಗ್ದಾಳಿ

    ಮೂರು ವರ್ಷಗಳ ಅವಧಿಯಲ್ಲಿ ಚೀನಾದೊಂದಿಗೆ ಸಂಪರ್ಕ ಹೊಂದಿದ ಸಂಸ್ಥೆಗಳಿಂದ ನ್ಯೂಸ್ ಪೋರ್ಟಲ್ 38.05 ಕೋಟಿ ರೂ.ಗಳನ್ನು ಪಡೆದಿದೆ ಎಂದು ಇಡಿ ಈ ಹಿಂದೆ ಆರೋಪಿಸಿತ್ತು. ಹೀಗೆ ಸ್ವೀಕರಿಸಿದ ಹಣವನ್ನು ಗೌತಮ್ ನವ್ಲಾಖಾ ಮತ್ತು ಹಕ್ಕುಗಳ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಸಹಚರರು ಸೇರಿದಂತೆ ಹಲವಾರು ವಿವಾದಾತ್ಮಕ ಪತ್ರಕರ್ತರಿಗೆ ಹಂಚಲಾಗಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಭಯೋತ್ಪಾದಕರಿಗೆ ಕಾಂಗ್ರೆಸ್‌ ಮುಕ್ತ ಅವಕಾಶ ಕೊಟ್ಟಿದೆ; ಉದಯಪುರ ಟೈಲರ್‌ ಹತ್ಯೆ ಖಂಡಿಸಿದ ಮೋದಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]