Tag: Railway Accident

  • ಒಡಿಶಾ ರೈಲ್ವೆ ದುರಂತ – ಅನಾಥರಾದ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಂಡ ಅದಾನಿ ಗ್ರೂಪ್

    ಒಡಿಶಾ ರೈಲ್ವೆ ದುರಂತ – ಅನಾಥರಾದ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಂಡ ಅದಾನಿ ಗ್ರೂಪ್


    ನವದೆಹಲಿ: ಒಡಿಶಾದಲ್ಲಿ ನಡೆದ ಭೀಕರ ರೈಲ್ವೆ ಅಪಘಾತದ (Odisha Train Tragedy) ಬಳಿಕ ಕೈಗಾರಿಕೋದ್ಯಮಿ ಗೌತಮ್ ಅದಾನಿ (Gautam Adani) ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 270ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ರೈಲ್ವೆ ದುರಂತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ಅದಾನಿ ಗ್ರೂಪ್ (Adani Group) ವಹಿಸಿಕೊಳ್ಳುತ್ತದೆ ಎಂದು ಗೌತಮ್ ಅದಾನಿ ಭಾನುವಾರ ಘೋಷಿಸಿದ್ದಾರೆ.

    ಒಡಿಶಾ ರೈಲು ಅಪಘಾತದಿಂದ ನಾವೆಲ್ಲರೂ ತೀವ್ರವಾಗಿ ಆಘಾತಕ್ಕೊಳಗಾಗಿದ್ದೇವೆ. ಈ ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಅಮಾಯಕ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ಅದಾನಿ ಸಮೂಹ ವಹಿಸಿಕೊಳ್ಳಲು ನಾವು ನಿರ್ಧರಿಸಿದ್ದೇವೆ. ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ಶಕ್ತಿಯನ್ನು ಒದಗಿಸುವುದು ಮತ್ತು ಮಕ್ಕಳಿಗೆ ಉತ್ತಮ ಭವಿಷ್ಯವನ್ನು ಒದಗಿಸುವುದು ನಮ್ಮೆಲ್ಲರ ಜಂಟಿ ಜವಾಬ್ದಾರಿಯಾಗಿದೆ ಎಂದು ಬಿಲಿಯನೇರ್ ಗೌತಮ್ ಅದಾನಿ ತಿಳಿಸಿದ್ದಾರೆ.

    ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಇಲ್ಲಿಯವರೆಗೆ 275 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ 88 ಶವಗಳನ್ನು ಗುರುತಿಸಲಾಗಿದೆ. ಉಳಿದ ಮೃತದೇಹಗಳ ಪೈಕಿ 170 ಶವಗಳನ್ನು ಭುವನೇಶ್ವರದ ಶವಾಗಾರ ಹಾಗೂ ಇತರ ಆಸ್ಪತ್ರೆಗಳಾದ ಏಮ್ಸ್, ಕ್ಯಾಪಿಟಲ್, ಎಸ್‌ಯುಎಂ, ಕೆಐಎಂ ಹಾಗೂ ಎಎಂಆರ್‌ಐ ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಒಂದು ವೇಳೆ ಕವಚ್‌ ಅಳವಡಿಸಿದ್ದರೂ ಈ ದುರಂತವನ್ನು ತಪ್ಪಿಸಲು ಆಗುತ್ತಿರಲಿಲ್ಲ- ಅಪಘಾತಕ್ಕೆ ಕಾರಣ ತಿಳಿಸಿದ ರೈಲ್ವೇ

    ಒಟ್ಟಾರೆಯಾಗಿ 1,175 ಗಾಯಾಳುಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಭಾನುವಾರ ಬೆಳಗಿನ ಜಾವದವರೆಗೆ 793 ಗಾಯಾಳುಗಳನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಇಂಟರ್‌ಲಾಕ್ ಸಿಸ್ಟಮ್ ಸಮಸ್ಯೆಯಿಂದ ರೈಲು ಅಪಘಾತ ಸಂಭವಿಸಿದೆ – ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

  • ಅಮೃತಸರ ದುರಂತಕ್ಕೆ ರೈಲ್ವೇ ಇಲಾಖೆಯೇ ಹೊಣೆ: ಖರ್ಗೆ

    ಅಮೃತಸರ ದುರಂತಕ್ಕೆ ರೈಲ್ವೇ ಇಲಾಖೆಯೇ ಹೊಣೆ: ಖರ್ಗೆ

    ಕಲಬುರಗಿ: ಅಮೃತಸರನಲ್ಲಿ ನಡೆದ ರೈಲ್ವೇ ದುರಂತಕ್ಕೆ ರೈಲ್ವೇ ಇಲಾಖೆ ಹಾಗೂ ರೈಲ್ವೇ ಪೊಲೀಸರ ನಿರ್ಲಕ್ಷತನ ಕಾರಣ ಎಂದು ಲೋಕಸಭಾ ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಜೆ ಆರೋಪಿಸಿದ್ದಾರೆ. ಅಲ್ಲದೇ ಸೂಕ್ತ ತನಿಖೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಮೃತಸರದಲ್ಲಿ ಸಂಭವಿಸಿದ ರೈಲು ದುರಂತ ದೊಡ್ಡ ಶಾಕ್ ನೀಡಿದೆ. ರೈಲ್ವೇ ಹಳಿ ಸಮೀಪ, ನಿಲ್ದಾಣ ಬಳಿ ಸಾರ್ವಜನಿಕ ಕಾರ್ಯಕ್ರಮ ಮಾಡುವಾಗ ಎಚ್ಚರಿಕೆ ವಹಿಸಬೇಕಿತ್ತು. ದುರಂತಕ್ಕೆ ರೈಲ್ವೇ ಇಲಾಖೆ ಹಾಗೂ ರೈಲ್ವೇ ಪೊಲೀಸರ ನಿರ್ಲಕ್ಷತನ ಕಾರಣವಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ ಎಂದು ಲೋಕಸಭಾ ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಜೆ ಆರೋಪಿಸಿದ್ದಾರೆ.

    ಇದೇ ವೇಳೆ ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರವಾಗಿ ಸಚಿವ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ಬೇಸರ ವ್ಯಕ್ತಪಡಿಸಿರುವ ಖರ್ಗೆ ಅವರು, ಧರ್ಮದ ಕುರಿತು ನಿರ್ಣಯ ಮಾಡುವ ಸರ್ಕಾರದಲ್ಲಿ ನಾನು ಇರರಲಿಲ್ಲ, ಆ ಕುರಿತು ನನಗೆ ಹೆಚ್ಚಿನ ಮಾಹಿತಿ ಗೊತ್ತಿಲ್ಲ. ರಾಜಕೀಯದಲ್ಲಿ ಧಾರ್ಮಿಕ ವಿಚಾರ ಮಾತಾಡಲು ನಾನು ಹೋಗಲಾರೆ. ಆದರೆ ಚುನಾವಣೆಗೆ ಹೋಗುವಾಗ ವೇಳೆ ಈ ಮಾತುಗಳು ಅಗತ್ಯವಿಲ್ಲ. ಜನರ ಬಳಿ ಪಕ್ಷದ ಪ್ರಣಾಳಿಕೆ ಮೇಲೆ ನಾವು ಮತ ಕೇಳುತ್ತೇವೆ. ಧರ್ಮದ ಬಗ್ಗೆ ಬೇಕಾದರೆ ಧಾರ್ಮಿಕ ಸಂವಾದಕ್ಕೆ ಕರೆಯಲಿ ಅಸಮಾಧಾನ ವ್ಯಕ್ತಪಡಿಸಿದರು. ಇದನ್ನು ಓದಿ: ಸರಾ ದುರಂತ: ನೋಡ ನೋಡುತ್ತಲೇ 50 ಮಂದಿ ರೈಲಿಗೆ ಬಲಿ!

    ಉಳಿದಂತೆ ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರವಾಗಿ ಉತ್ತರಿಸಿದ ಅವರು, ಸುಪ್ರೀಂಕೋರ್ಟ್ ಹೇಳಿದ ಪ್ರಕಾರ ನಾವೆಲ್ಲರೂ ನಡೆದುಕೊಳ್ಳಬೇಕು. ನಮ್ಮ ಹಕ್ಕು ಮೊಟಕುಗೊಂಡಾಗ ನಾವು ನ್ಯಾಯಾಲಯ ಮೊರೆ ಹೋಗುತ್ತೇವೆ. ಈ ದೇಶದ ಸಂವಿಧಾನ ಶ್ರೇಷ್ಠ, ಸಂವಿಧಾನ ಹೇಳಿದ ಹಾಗೇ ನಾವು ನಡೆದುಕೊಳ್ಳಬೇಕು. ಈ ವಿಚಾರವಾಗಿ ನಾನು ರಾಜಕೀಯ ಮಾಡಲ್ಲ. ಯಾವುದು ಸಮಾಜಕ್ಕೆ ಒಳ್ಳೆಯದಾಗಲ್ಲವೋ ಅದನ್ನು ತಿರಸ್ಕಾರ ಮಾಡುವುದನ್ನು ಕಲಿಯಬೇಕು ಎಂದರು.

  • ರೈಲು ಡಿಕ್ಕಿ ಹೊಡೆದು ನರಳಾಡುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ ರೈಲ್ವೇ ಪೊಲೀಸ್ರು

    ರೈಲು ಡಿಕ್ಕಿ ಹೊಡೆದು ನರಳಾಡುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ ರೈಲ್ವೇ ಪೊಲೀಸ್ರು

    ಮಂಡ್ಯ: ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ರೈಲು ಡಿಕ್ಕಿ ಹೊಡೆದ ಪರಿಣಾಮ ಕಾಲು ಮುರಿದು ರೈಲ್ವೆ ಹಳಿ ಬಳಿ ನರಳಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ.

    ಏಪ್ರಿಲ್ 11 ರಂದು ಸಂಜೆ ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ರೈಲಿಗೆ ಸಿಲುಕಿ ಆಂಧ್ರ ಮೂಲದ ಕಿಶೋರ್ ಎಂಬವರ ಎಡಗಾಲು ಮುರಿದು ಹೋಗಿತ್ತು. ಈ ವೇಳೆ ಕಿಶೋರ್ ನೋವಿಗೆ ನರಳಾಡಿದ್ದಾರೆ. ಜೊತೆಗೆ ಸಹಾಯಕ್ಕೆಂದು ಕೆಲ ನಿಮಿಷ ಅಂಗಲಾಚಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ವ್ಯಕ್ತಿಯನ್ನು ರಕ್ಷಣೆ ಮಾಡಲು ಮುಂದಾಗಿಲ್ಲ.

    ಇದನ್ನೂ ಓದಿ:  ಅಪಘಾತದಲ್ಲಿ ಎರಡೂ ಕಾಲುಗಳು ಕಟ್ ಆದ್ರೂ ಆಸ್ಪತ್ರೆಗೆ ಸೇರಿಸದೇ ವಿಡಿಯೋ ಮಾಡಿದ್ರು!

    ಇದನ್ನೂ ಓದಿ:  ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿದ್ರೂ ಯುವಕನಿಗೆ ಯಾರೂ ಸಹಾಯ ಮಾಡಲಿಲ್ಲ!

    ಸ್ಥಳಕ್ಕೆ ಬಂದ ರೈಲ್ವೆ ಪೊಲೀಸ್ರು ಗಾಯಗೊಂಡಿದ್ದ ಕಿಶೋರ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೊದಲು ಮದ್ದೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ನಂತ್ರ ಹೆಚ್ಚಿನ ಚಿಕಿತ್ಸೆಗೆಂದು ಕಿಶೋರ್ ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

    ಇದನ್ನೂ ಓದಿ:  ಮರೆಯಾಯ್ತು ಮಾನವೀಯತೆ- 12ರ ಬಾಲಕ ಜೀವನ್ಮರಣ ಹೋರಾಡ್ತಿದ್ರೂ ಸಹಾಯಕ್ಕೆ ಬರ್ಲಿಲ್ಲ ಜನ

    https://www.youtube.com/watch?v=dw8llWNIdO0