Tag: Railway Board

  • ಸಕ್ಕರೆ ಕಾಯಿಲೆ ಇರುವವರಿಗೆ ಬೇರೆ ಊಟ – ಹೊಸ ಮೆನುವಿಗೆ ರೈಲ್ವೆ ಮಂಡಳಿ ಸೂಚನೆ

    ಸಕ್ಕರೆ ಕಾಯಿಲೆ ಇರುವವರಿಗೆ ಬೇರೆ ಊಟ – ಹೊಸ ಮೆನುವಿಗೆ ರೈಲ್ವೆ ಮಂಡಳಿ ಸೂಚನೆ

    ನವದೆಹಲಿ: ಆರೋಗ್ಯ ದೃಷ್ಟಿಯಿಂದ ಮಧುಮೇಹ ಹೊಂದಿರುವವರಿಗೆ ಹಾಗೂ ಶಿಶುಗಳಿಗೆ ಸೂಕ್ತವಾದ ಆಹಾರವನ್ನು ನೀಡಲು ಸ್ಥಳೀಯ ಮತ್ತು ಪ್ರಾದೇಶಿಕ ಆಹಾರ ಪದ್ಧತಿಗಳ ಮೆನುವನ್ನು ಕಸ್ಟಮೈಸ್ ಮಾಡಲು ರೈಲ್ವೆ ಮಂಡಳಿಯು (Railway Board) ಐಆರ್‌ಟಿಸಿಗೆ (IRCTC) ಅನುಮೋದನೆಯನ್ನು ನೀಡಿದೆ.

    train

    ಈ ಕ್ರಮವನ್ನು ರೈಲುಗಳಲ್ಲಿನ ಅಡುಗೆ ಸೇವೆಗಳನ್ನು ಸುಧಾರಿಸಲು ಮತ್ತು ಪ್ರಯಾಣಿಕರಿಗೆ ಹೆಚ್ಚಿನ ಆಯ್ಕೆಗಳನ್ನು ನೀಡುವ ಗುರಿಯನ್ನು ಹೊಂದಿದೆ ಎಂದು ಭಾರತೀಯ ರೈಲ್ವೆ ಮಂಡಳಿಯು ಕಳುಹಿಸಿರುವ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಭಾರತೀಯ ವರನ ಮದುವೆಗೆ ಸೀರೆಯುಟ್ಟು ಮಿಂಚಿದ ಇಬ್ಬರು ಪುರುಷ ಸ್ನೇಹಿತರು

    ರೈಲುಗಳಲ್ಲಿ ಅಡುಗೆ ಸೇವೆಯನ್ನು ಸುಧಾರಿಸುವ ಸಲುವಾಗಿ, ಪ್ರಾದೇಶಿಕ ಆಹಾರಪದ್ಧತಿಗಳು, ಸೀಸನ್‍ಗೆ ತಕ್ಕಂತೆ ಮಾಡಬಹುದಾದ ಭಕ್ಷ್ಯಗಳು, ಹಬ್ಬಗಳ ಸಮಯದಲ್ಲಿ ಹೀಗೆ ವಿವಿಧ ರೀತಿಯ ಆಹಾರ ಪದಾರ್ಥಗಳನ್ನು ಒಳಗೊಂಡಂತೆ ಮೆನುವನ್ನು ಕಸ್ಟಮೈಸ್ ಮಾಡಲು ಐಆರ್‌ಟಿಸಿಗೆ ಅನುಮತಿ ನೀಡಲು ನಿರ್ಧರಿಸಲಾಗಿದೆ. ಶುಗರ್ ಇರುವವರಿಗೆ, ಮಗುವಿಗೆ, ಆರೋಗ್ಯ ಸಮಸ್ಯೆ ಹೊಂದಿರುವ ಪ್ರಯಾಣಿಕರಿಗೆ ರಾಗಿ ಆಧಾರಿತ ಸ್ಥಳೀಯ ಉತ್ಪನ್ನಗಳನ್ನು ನೀಡುವಂತೆ ಪ್ರಕಟಿಸಲಾಗಿದೆ. ಇದನ್ನೂ ಓದಿ: ಲವ್ ಜಿಹಾದ್‌ಗೆ ಬಲಿಯಾದ್ರೆ ಇದೇ ಗತಿ – ಹೊಸ ಆಯಾಮದಲ್ಲಿ ತನಿಖೆ ನಡೆಸುವಂತೆ VHP ಮನವಿ

    Live Tv
    [brid partner=56869869 player=32851 video=960834 autoplay=true]

  • 2025ರೊಳಗೆ ದೇಶದ ಎಲ್ಲ ರೈಲುಗಳಿಗೂ ಎಲೆಕ್ಟ್ರಿಕ್‌ ಇಂಜಿನ್ – ರೈಲ್ವೆ ಇಲಾಖೆ

    2025ರೊಳಗೆ ದೇಶದ ಎಲ್ಲ ರೈಲುಗಳಿಗೂ ಎಲೆಕ್ಟ್ರಿಕ್‌ ಇಂಜಿನ್ – ರೈಲ್ವೆ ಇಲಾಖೆ

    ನವದೆಹಲಿ: 2025ರ ಒಳಗೆ ಎಲ್ಲ ಡೀಸೆಲ್ ಹಾಗೂ ಬಯೋ ಇಂಧನ ರೈಲು ಇಂಜಿನ್‌ಗಳನ್ನು (Railway Engine) ಹಿಂಪಡೆದು ಸಂಪೂರ್ಣ ಎಲೆಕ್ಟ್ರಿಕ್‌ ಇಂಜಿನ್‌ಗಳನ್ನು (Electric Engine) ಅಳವಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.

    ವಿದ್ಯುತ್ ಚಾಲಿತ ವಾಹನಗಳ (Electric Vehicles) ಮೇಲೆ ಈ ನೀತಿಯನ್ನು ಕಳೆದ ವಾರ ಜಾರಿಗೆ ತರಲಾಗಿದೆ. ಇದರೊಂದಿಗೆ ರೈಲ್ವೆಯು ಪ್ರಮುಖ ರೈಲು ನಿಲ್ದಾಣಗಳು (RailwayStations), ಕಚೇರಿ ಕಟ್ಟಡಗಳು, ಪಾರ್ಕಿಂಗ್ ಸ್ಥಳಗಳು ಇತ್ಯಾದಿ ಸ್ಥಳಗಳಲ್ಲಿ ಚಾರ್ಜಿಂಗ್ ಸ್ಟೇಷನ್‌ಗಳನ್ನು ನಿರ್ಮಿಸುವುದಾಗಿ ಹೇಳಿದೆ. ಇದನ್ನೂ ಓದಿ: ಸಿಪಿಐ(ಎಂ) ಮುಖಂಡನ ಮನೆಯಲ್ಲಿ ಬಾಂಬ್ ಪತ್ತೆ – ತಾಜ್ ಉದ್ದೀನ್ ಮಲ್ಲಿಕ್ ಅರೆಸ್ಟ್

    ಸಾಂದರ್ಭಿಕ ಚಿತ್ರ

    2023ರೊಳಗೆ ಭಾರತವನ್ನು ಸಂಪೂರ್ಣ ಎಲೆಕ್ಟ್ರಿಕ್‌ ವಾಹನಗಳ (Electric Vehicles) ದೇಶವಾಗಿ ಮಾಡಬೇಕೆಂಬ ಸರ್ಕಾರದ ಗುರಿಯ ಹಿನ್ನೆಲೆಯಲ್ಲಿ ರೈಲ್ವೆಯ ಈ ನೀತಿಗೆ ಮಹತ್ವ ಬಂದಿದೆ. ಇದನ್ನೂ ಓದಿ: ರಾಯಚೂರಿಗೆ ಬರಲಿದೆ ಏಮ್ಸ್, ಮಂತ್ರಾಲಯ ಸೇತುವೆಗೆ ಬಿಎಸ್‌ವೈ ಹೆಸರು: ಸಿಎಂ ಬೊಮ್ಮಾಯಿ

    ರೈಲ್ವೆಯಲ್ಲಿ ಸಂಪೂರ್ಣ ಎಲೆಕ್ಟ್ರಿಕ್‌ ಇಂಜಿನ್ ಅನುಷ್ಠಾನಕ್ಕೆ ಬರಲು 46 ಸಾವಿರ ಚಾರ್ಜಿಂಗ್ ಸ್ಟೇಷನ್‌ಗಳು ದೇಶಾದ್ಯಂತ ಬೇಕಾಗುತ್ತವೆ. ಸದ್ಯದ ಗುರಿ ಪ್ರಕಾರ 2023 ರೊಳಗೆ ಶೇ.20, 2024ರೊಳಗೆ ಶೇ.60 ಹಾಗೂ 2025ರ ಅಂತ್ಯದೊಳಗೆ ಶೇ.100ರಷ್ಟು ಎಲೆಕ್ಟ್ರಿಕ್‌ ಇಂಜಿನ್ ಅಳವಡಿಸುವ ಗುರಿ ಇಲಾಖೆ ಹಾಕಿಕೊಂಡಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೆಂಗ್ಳೂರಿಗರಿಗೆ ಸಿಹಿ ಸುದ್ದಿ: ಸಬ್ ಅರ್ಬನ್ ರೈಲು ಯೋಜನೆಗೆ ನೀತಿ ಆಯೋಗದಿಂದ ಗ್ರೀನ್‌ಸಿಗ್ನಲ್

    ಬೆಂಗ್ಳೂರಿಗರಿಗೆ ಸಿಹಿ ಸುದ್ದಿ: ಸಬ್ ಅರ್ಬನ್ ರೈಲು ಯೋಜನೆಗೆ ನೀತಿ ಆಯೋಗದಿಂದ ಗ್ರೀನ್‌ಸಿಗ್ನಲ್

    ಬೆಂಗಳೂರು: ಬೆಂಗಳೂರಿಗೆ ಉಪನಗರ ರೈಲು ಯೋಜನೆಗೆ ಕೇಂದ್ರ ನೀತಿ ಆಯೋಗ ಸಭೆಯಲ್ಲಿ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಮೂಲಕ ದೀಪಾವಳಿ ಬಳಿಕ ಬೆಂಗಳೂರಿಗರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಸಬ್ ಅರ್ಬನ್ ರೈಲಿಗೆ ಇದ್ದ ತೊಡಕುಗಳು ನಿವಾರಣೆಯಾಗಿವೆ. ಬೆಂಗಳೂರಿಗೆ ಸಬ್ ಅರ್ಬನ್ ರೈಲು ಎರಡು ದಶಕಗಳ ಬೇಡಿಕೆಯಾಗಿತ್ತು. ಸೋಮವಾರ ರೈಲ್ವೇ ಚೇರ್ ಮೆನ್, ರೈಲ್ವೆ ಸಚಿವ ಪಿಯೂಷ್ ಗೋಯಲ್, ಆರ್ಥಿಕ ಇಲಾಖೆ ಮುಖ್ಯಸ್ಥರು ಹಾಗೂ ನೀತಿ ಆಯೋಗದ ಮುಖ್ಯಸ್ಥರ ಜೊತೆ ಸಭೆ ನಡೆಯಿತು. ಈ ಸಭೆಯಲ್ಲಿ ಬೆಂಗಳೂರು ಸಬ್ ಅರ್ಬನ್ ರೈಲಿಗೆ ಅನುಮತಿ ಸಿಕ್ಕಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸಬ್ ಅರ್ಬನ್ ರೈಲು ಯೋಜನೆಗೆ ರಾಜ್ಯ ಸರ್ಕಾರದಿಂದ ವಿಳಂಬ – ಡಿವಿಎಸ್ ಆರೋಪ

    ಈ ಹಿಂದೆ ಇದ್ದ ಕಾನೂನು ತೊಡಕುಗಳು ನಿವಾರಣೆಯಾಗಿವೆ. ಆದಷ್ಟು ಬೇಗ ಕೇಂದ್ರ ಕ್ಯಾಬಿನೆಟ್‌ನಲ್ಲಿ ಒಪ್ಪಿಗೆ ಸಿಗಬೇಕಿದೆ. ನಮ್ಮ ರಾಜ್ಯದ ಎಲ್ಲಾ ಸಚಿವರು, ಶಾಸಕರು, ಸಂಸದರು ಪ್ರಧಾನಿಗಳಿಗೆ ಮನವರಿಕೆ ಮಾಡಿಕೊಡುವ ಕೆಲಸ ಮಾಡುತ್ತೇವೆ. ದಿವಂಗತ, ಮಾಜಿ ಸಚಿವ ಅನಂತ್‌ಕುಮಾರ್ ಸೇರಿದಂತೆ ಸಾಕಷ್ಟು ನಾಯಕರು ಸಬ್ ಅರ್ಬನ್ ರೈಲಿಗಾಗಿ ಶ್ರಮಿಸಿದ್ದಾರೆ ಎಂದು ಹೇಳಿದರು.

    ಸಿಲಿಕಾನ್ ಸಿಟಿಗೆ ಸಬ್ ಅರ್ಬನ್ ರೈಲು ಸೇವೆ ಒದಗಿಸಲು ಕೇಂದ್ರ ಸರ್ಕಾರ 2018ರ ಬಜೆಟ್‌ನಲ್ಲಿ ಘೋಷಣೆ ಮಾಡಿತ್ತು. ಅಂದಿನ ವಿತ್ತ ಸಚಿವ ಅರುಣ್ ಜೇಟ್ಲಿ ಅವರು, ಸಬ್ ಅರ್ಬನ್ ರೈಲು ಯೋಜನೆಗೆ ಒಟ್ಟು 40 ಸಾವಿರ ಕೋಟಿ ರೂ. ಮೀಸಲಿಡಲಾಗಿದ್ದು, ಅದರಲ್ಲಿ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ 17 ಸಾವಿರ ಕೋಟಿ ರೂ. ನೀಡಲಾಗುತ್ತಿದೆ ಎಂದು ಪ್ರಕಟಿಸಿದ್ದರು.

    ಸಬ್ ಅರ್ಬನ್ ರೈಲಿನಿಂದ ನಗರ ಮತ್ತು ಸುತ್ತಮುತ್ತಲಿನ ಉಪನಗರಗಳಿಗೆ ರೈಲು ಸಂಪರ್ಕ ಏರ್ಪಡಲಿದೆ. ರಾಮನಗರ-ಬೆಂಗಳೂರು, ಬೆಂಗಳೂರು-ಮಂಡ್ಯ, ಕೇಂದ್ರ ರೈಲ್ವೇ ನಿಲ್ದಾಣ-ಯಶವಂತಪುರ, ಯಶವಂತಪುರ- ತುಮಕೂರು, ಯಲಹಂಕ-ಬೈಯಪ್ಪನಹಳ್ಳಿ, ಯಲಹಂಕ-ದೊಡ್ಡಬಳ್ಳಾಪುರ, ಯಲಹಂಕ-ಚಿಕ್ಕಬಳ್ಳಾಪುರ ನಡುವೆ ಬೆಂಗಳೂರು ಸಬ್ ಅರ್ಬನ್ ರೈಲು ಸೇವೆ ಆರಂಭವಾಗಲಿದೆ.

    ನಗರದ ಜನದಟ್ಟಣೆ ಕಡಿಮೆ ಮಾಡಲು ಮತ್ತು ವಿಮಾನ ನಿಲ್ದಾಣಕ್ಕೆ ನೇರಸಂಪರ್ಕ ಕಲ್ಪಿಸುವ ಉದ್ದೇಶದಿಂದ ಬೆಂಗಳೂರಿಗೆ ಸಬ್ ಅರ್ಬನ್ ರೈಲು ಬರಬೇಕು ಎಂಬ ಪ್ರಸ್ತಾಪವನ್ನು 1996ರಿಂದಲೇ ಅನಂತ್ ಕುಮಾರ್ ಅವರು ಸರ್ಕಾರಗಳನ್ನು ಒತ್ತಾಯಿದ್ದರು. ಇದೀಗ ಅವರ ಸಿಲಿಕಾನ್ ಸಿಟಿಯ ಕನಸು ಈಡೇರಿದೆ. ಒಟ್ಟಿನಲ್ಲಿ ಲಕ್ಷಾಂತರ ಜನರಿಗೆ ಅನುಕೂಲವಾಗುವ ಈ ಯೋಜನೆಯಿಂದ ಟ್ರಾಫಿಕ್ ಜಾಮ್ ತಪ್ಪಲಿದೆ.

  • ಅಕ್ಟೋಬರ್ 2 ರಂದು ರೈಲ್ವೇ ನಿಲ್ದಾಣದಲ್ಲಿ ನಾನ್ ವೆಜ್ ಸಿಗೋದು ಡೌಟ್!

    ಅಕ್ಟೋಬರ್ 2 ರಂದು ರೈಲ್ವೇ ನಿಲ್ದಾಣದಲ್ಲಿ ನಾನ್ ವೆಜ್ ಸಿಗೋದು ಡೌಟ್!

    ನವದೆಹಲಿ: ರೈಲ್ವೇ ಬೋರ್ಡ್ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಅನುಮೋದಿಸಿದಲ್ಲಿ ಅಕ್ಟೋಬರ್ 2 ರಂದು ರೈಲ್ವೇ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಮಾಂಸಾಹಾರ ಸಿಗುವುದಿಲ್ಲ.

    ಮಹಾತ್ಮ ಗಾಂಧೀಜಿಯವರ 150ನೇ ಹುಟ್ಟು ಹಬ್ಬದ ವಿಶೇಷ ಸಂಭ್ರಮಾಚರಣೆ ಪ್ರಯುಕ್ತ 2018, 2019, 2020 ರ ಅಕ್ಟೋಬರ್ 2 ರಂದು ರೈಲ್ವೇ ನಿಲ್ದಾಣದಲ್ಲಿ ಸಸ್ಯಾಹಾರ ದಿನವನ್ನಾಗಿ ಆಚರಿಸಲು ಮುಂದಾಗಿದೆ. ಸಸ್ಯಾಹಾರದ ರಾಯಭಾರಿಯಾಗಿದ್ದ ಮಹಾತ್ಮ ಗಾಂಧೀಜಿಯವರ ಸ್ಮರಣಾರ್ಥ ಅಕ್ಟೋಬರ್ 2 ರಂದು ರಾಷ್ಟ್ರೀಯ ಸ್ವಚ್ಛತಾ ದಿವಸದ ಜೊತೆಗೆ ಸಸ್ಯಾಹಾರ ದಿನವನ್ನಾಗಿ ಆಚರಣೆ ಮಾಡಲು ಅನುಮತಿ ನೀಡುವಂತೆ ರೈಲ್ವೇ ಬೋರ್ಡ್ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಿದೆ.

    ಗಾಂಧೀಜಿಯರ 150ನೇ ಹುಟ್ಟು ಹಬ್ಬದ ಪ್ರಯುಕ್ತ ಕೇಂದ್ರ ಸಂಸ್ಕೃತಿ  ಇಲಾಖೆ ಹೊರತಂದಿರುವ ಲೋಗೋವನ್ನು ರೈಲ್ವೆ ಕೋಚ್ ಗಳ ಹೊರ ಭಾಗದಲ್ಲಿ ಬಾಗಿಲ ಬಳಿ ಪ್ರಯಾಣಿಕರಿಗೆ ಕಾಣುವಂತೆ ಹಾಕಲು ಇಲಾಖೆಯ ಅನುಮತಿಯನ್ನು ಕೋರಿದೆ ಎಂದು ತಿಳಿಸಿದೆ.

    ಮಾರ್ಚ್ 12 ರಂದು ದಂಡಿ ಸತ್ಯಾಗ್ರಹದ ಸ್ಮರಣಾರ್ಥ ಸಬರಮತಿಯಿಂದ ಸ್ವಚ್ಛತಾ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಾಗುವುದು. ಟಿಕೆಟ್ ಗಳ ಮೇಲೆ ಮಹಾತ್ಮ ಗಾಂಧಿಯವರ ಚಿತ್ರವಿರುತ್ತದೆ ಎಂದು ತಿಳಿಸಿದೆ.

    ಸಸ್ಯಾಹಾರ ದಿನಾಚಾರಣೆಯನ್ನು ಯಶಸ್ವಿಯಾಗಿ ಆಚರಿಸಬೇಕು. ಮಹಾತ್ಮ ಗಾಂಧೀಜಿಯವರ ಭಾವಚಿತ್ರ ಹಾಗೂ ಅವರ ಕಾರ್ಯಗಳ ಕುರಿತಾದ ವಿಡಿಯೋಗಳನ್ನು ಎಲ್ಲ ನಿಲ್ದಾಣಗಳಲ್ಲಿ ಪ್ರದರ್ಶನ ಮಾಡಲು ರೈಲ್ವೇ ಇಲಾಖೆ ಸಿದ್ಧತೆ ನಡೆಸುತ್ತಿದೆ.

    150ನೇ ಹುಟ್ಟು ಹಬ್ಬದ ವಿಶೇಷ ಸಂಭ್ರಮಾಚರಣೆಗೆ ಸಮಿತಿ ರಚನೆಯಾಗಿದ್ದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ನೇತೃತ್ವದಲ್ಲಿ ಒಂದು ತಿಂಗಳ ಹಿಂದೆ ಮೊದಲ ಸಭೆ ನಡೆದಿದೆ.